LKG UKG in Anganwadis: ಬೆಂಗಳೂರಿನ ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ - Vistara News

ಕರ್ನಾಟಕ

LKG UKG in Anganwadis: ಬೆಂಗಳೂರಿನ ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

LKG UKG in Anganwadis: ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಪಟ್ಟೇಗಾರ ಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು.

VISTARANEWS.COM


on

LKG UKG in Anganwadis
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಡೀ ದೇಶದಲ್ಲೆ ಪ್ರಪ್ರಥಮ ಬಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೆಸ್ಸರಿ (L.K.G, UKG) ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೋಮವಾರ ಚಾಲನೆ ನೀಡಿದರು. ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡಿದರು.

LKG UKG in Anganwadis

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಿದ್ದು, ಇನ್ಮುಂದೆ ನಮ್ಮ ಪುಟಾಣಿಗಳು ಅಂಗನವಾಡಿ ಕೇಂದ್ರಗಳಲ್ಲೇ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯಲಿದ್ದಾರೆ. ಇಂದು ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ ಎಂದು ತಿಳಿಸಿದರು.

ಈ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತರಾದ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಕಾವೇರಿಪುರ ವಾರ್ಡ್ ನ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ | Economic Survey 2023-24: ದೇಶದ ಆರ್ಥಿಕತೆ ಸುಭದ್ರ, ಜಿಡಿಪಿ 7% ಬೆಳವಣಿಗೆ; ಆರ್ಥಿಕ ಸಮೀಕ್ಷೆ ಪ್ರಕಟ

ಸರ್ಕಾರದಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ಉಚಿತ

ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ (LKG UKG in Anganwadis) ಮೊದಲ ಭಾಗವಾಗಿ ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇತ್ತೀಚೆಗೆ ತಿಳಿಸಿದ್ದರು.

ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು. ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು.

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದು ಹೇಳಿದ್ದರು.

ಇದನ್ನೂ ಓದಿ | NEET UG 2024: ಅಧಿವೇಶನದಲ್ಲಿ ‘ನೀಟ್‌’ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ; ಪ್ರತ್ಯುತ್ತರ ಕೊಟ್ಟ ಕೇಂದ್ರ ಸಚಿವ

ಈ ಮೊದಲು ಪ್ರಾಥಮಿಕ ಶಾಲೆಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ವಿರೋಧ ವ್ಯಕ್ತಪಡಿಸಿದ್ದರು. ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಿದರೆ ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ. ಹೀಗಾಗಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಒತ್ತಾಯ ಕೇಳಿಬಂದಿತ್ತು. ಹೀಗಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ತರಗತಿಗಳನ್ನು ರಾಜ್ಯ ಸರ್ಕಾರ ಆರಂಭಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

TA Sharavana: ರಾಜ್ಯದಲ್ಲಿ ಡೆಂಗ್ಯೂ ರುದ್ರನರ್ತನ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, 108 ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್ ರದ್ದಾಗಿ ಏಳು ವರ್ಷ ಕಳೆದರೂ ಈವರೆಗೂ ಹೊಸಬರಿಗೆ ಟೆಂಡರ್ ನೀಡಲೂ ಆರೋಗ್ಯ ಇಲಾಖೆಗೆ ಸಾಧ್ಯವಾಗಿಲ್ಲ. ಇದು ತುರ್ತು ಆರೋಗ್ಯ ಸೇವೆಗಳ ಬಗೆಗಿನ ವಿಳಂಬ ಧೋರಣೆಯ ದ್ಯೋತಕ ಎಂಬ ಆರೋಪ ಕೇಳಿ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಸದನದ ಶೂನ್ಯ ವೇಳೆಯಲ್ಲಿ ಪ್ರಶ್ನಿಸಿದ್ದಾರೆ.

VISTARANEWS.COM


on

TA Sharavana questioned about the continuous variation in the service of 108 Ambulance even after 7 years there is no new tender
Koo

ಬೆಂಗಳೂರು: ರಾಜ್ಯದಲ್ಲಿ 108 ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್ ರದ್ದಾಗಿ ಏಳು ವರ್ಷ ಕಳೆದರೂ ಈವರೆಗೂ ಹೊಸಬರಿಗೆ ಟೆಂಡರ್ ನೀಡಲು ಆರೋಗ್ಯ ಇಲಾಖೆಗೆ ಸಾಧ್ಯವಾಗಿಲ್ಲ. ಇದು ತುರ್ತು ಆರೋಗ್ಯ ಸೇವೆಗಳ ಬಗೆಗಿನ ವಿಳಂಬ ಧೋರಣೆಯ ದ್ಯೋತಕ ಎಂಬ ಆರೋಪ ಕೇಳಿ ಬಂದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ. ಎ. ಶರವಣ (TA Sharavana) ಪ್ರಶ್ನಿಸಿದರು.

ಈ ಕುರಿತು ಸದನದ ಶೂನ್ಯ ವೇಳೆಯಲ್ಲಿ ಪ್ರಶ್ನಿಸಿದ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು, ರಾಜ್ಯದಲ್ಲಿ ಡೆಂಗ್ಯೂ ರುದ್ರನರ್ತನ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, 108 ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್ ರದ್ದಾಗಿ ಏಳು ವರ್ಷ ಕಳೆದರೂ ಈವರೆಗೂ ಹೊಸಬರಿಗೆ ಟೆಂಡರ್ ನೀಡಲೂ ಆರೋಗ್ಯ ಇಲಾಖೆಗೆ ಸಾಧ್ಯವಾಗಿಲ್ಲ. ಇದು ತುರ್ತು ಆರೋಗ್ಯ ಸೇವೆಗಳ ಬಗೆಗಿನ ವಿಳಂಬ ಧೋರಣೆಯ ದ್ಯೋತಕ ಎಂಬ ಆರೋಪ ಕೇಳಿ ಬಂದಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಆಂಬ್ಯುಲೆನ್ಸ್ ಸೇವೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ 2023ರ ಜು.22ರಂದು ತಾಂತ್ರಿಕ ಸಲಹಾ ಸಮಿತಿ ನೇಮಿಸಲಾಗಿತ್ತು. ಈ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿ ತಿಂಗಳುಗಳೇ ಕಳೆದರೂ ಈವರೆಗೂ ಟೆಂಡರ್ ಕರೆಯಲು ಉನ್ನತ ಮಟ್ಟದ ಸಮಿತಿ ಒಪ್ಪಿಗೆ ನೀಡಿಲ್ಲ. ಹೀಗಾಗಿ ಆಂಬ್ಯುಲೆನ್ಸ್ ಸೇವೆಗೆ ಹಿಡಿದಿರುವ ಗ್ರಹಣ ಮುಂದುವರಿದಿದೆ. ರಾಜ್ಯದಲ್ಲಿ ತುರ್ತು ಅನಾರೋಗ್ಯ ಸಂದರ್ಭಗಳಲ್ಲಿ ಆರೋಗ್ಯ ಕವಚ ಆಂಬ್ಯುಲೆನ್ಸ್ ಸೇವೆ ಒದಗಿಸಲು 2007ರಲ್ಲಿ ಟೆಂಡರ್ ಪಡೆದಿದ್ದ ಜಿವಿಕೆಯ ಸಂಸ್ಥೆಯ ಗುತ್ತಿಗೆಯನ್ನು ಆಸಮರ್ಪಕ ಸೇವೆ ಹಾಗೂ ನಿಯಮ ಉಲ್ಲಂಘನೆ ಕಾರಣ ನೀಡಿ 2017ರಲ್ಲಿ ಟೆಂಡರ್ ರದ್ದುಪಡಿಸಿತ್ತು. ಜೆವಿಕೆ-ಇಎಂಆ‌ರ್ಇ ಸಂಸ್ಥೆಯು ವಿಳಂಬ ಸೇವೆ, ಜಿಪಿಎಸ್ ಆಳವಡಿಕೆ ಮಾಡದಿರುವುದು ಸಿಬ್ಬಂದಿಯ ನಿರ್ವಹಣೆ ವೈಫಲ್ಯ ಸೇರಿದಂತೆ ಟೆಂಡರ್ ಷರತ್ತುಗಳನ್ನು ಉಲ್ಲಂಘಿಸಿದೆ ಎಂಬ ಕಾರಣಕ್ಕೆ ಟೆಂಡ‌ರ್ ರದ್ದುಪಡಿಸಲಾಗಿತ್ತು ಬಳಿಕ 3 ಬಾರಿ ಟೆಂಡರ್ ಕರೆದಿದ್ದರೂ ಯಾರೊಬ್ಬರೂ ಭಾಗವಹಿಸಿರಲಿಲ್ಲ. ಹೀಗಾಗಿ 2019ರಲ್ಲಿ ಜಿವಿಕೆ ಹಾಗೂ ತುರ್ತು ಗ್ರೀನ್ ಹೆಲ್ತ್ ಜತೆ ಒಡಂಬಡಿಕೆ ಆಧಾರದ ಮೇಲೆ ಆಂಬ್ಯುಲೆನ್ಸ್ ಸೇವೆ ನೀಡಲಾಗುತ್ತಿದೆ ಆದರೆ, 7 ವರ್ಷದಿಂದ ಅಧಿಕೃತ ಟೆಂಡರ್ ಪಡೆದಿರುವ ಆಂಬ್ಯುಲೆನ್ಸ್ ಸೇವಾದಾರ ಸಂಸ್ಥೆ ಇಲ್ಲದಂತಾಗಿದೆ. ಅದ್ದರಿಂದ, ಆಂಬ್ಯುಲೆನ್ಸ್ ಸೇವೆಯಲ್ಲಿ ಸತತವಾಗಿ ವ್ಯತ್ಯಯವಾಗುತ್ತಿದೆ ಎಂದು ಅವರು ವಿವರಿಸಿದರು.

108 ಆಂಬ್ಯುಲೆನ್ಸ್ ಸೇವೆ ಕುರಿತು 2014-19 ರವರೆಗಿನ ಪ್ರಕರಣಗಳ ಬಗ್ಗೆ ಸಿಎಜಿ ವರದಿ ಸಲ್ಲಿಸಿದ್ದು ಶೇ.60ರಷ್ಟು ಎಮರ್ಜನ್ಸಿ ಪ್ರಕರಣಗಳಲ್ಲಿ 108 ಆಂಬ್ಯುಲೆನ್ಸ್ ಸೇವೆ ನಿಗದಿತ ಸಮಯಕ್ಕೆ ದೊರೆತಿಲ್ಲ. ಮತ್ತು 51 ಲಕ್ಷ ಎಮರ್ಜೆನ್ಸಿ ಪ್ರಕರಣಗಳಲ್ಲಿ 41.9 ಲಕ್ಷ ಮಾತ್ರ ಆಂಬ್ಯುಲೆನ್ಸ್ ನಿಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್ ರದ್ದುಪಡಿಸಿ ಬೇರೆ ಕಂಪನಿಗೆ ಟೆಂಡ‌ರ್ ನೀಡಲು ನಿರ್ಧರಿಸಲಾಗಿತ್ತು. ಆದರೆ ಒಡಂಬಡಿಕೆ ಆಧಾರದ ಮೇಲೆ 746 ಆಂಬ್ಯುಲೆನ್ಸ್ ನಿರ್ವಹಿಸಲು ಅವಕಾಶ ನೀಡಲಾಗಿತ್ತು.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಆದರೆ ಒಡಂಬಡಿಕೆ ಮಾಡಿಕೊಂಡಿರುವ ಸಂಸ್ಥೆಗೆ ಸರ್ಕಾರ ಕಾಲಕಾಲಕ್ಕೆ ವೇತನ ನೀಡುತ್ತಿದ್ದರೂ ಅವರು ಸಿಬ್ಬಂದಿಗೆ ನೀಡುತ್ತಿಲ್ಲ, ಗುತ್ತಿಗೆ ಜತೆಗೆ ಸರ್ಕಾರಿ ಆಸ್ಪತ್ರೆ ಬದಲಿಗೆ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಹೋಗುವುದು, ರೋಗಿಯ ಬಳಿ ಹಣ ಪಡೆಯುವುದು ಸೇರಿದಂತೆ ಹಲವು ಸಮಸ್ಯೆಗಳಿಗೆ ಈವರೆಗೆ ಪರಿಹಾರ ಕಂಡುಕೊಂಡಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಎಂಎಲ್‌ಸಿ ಟಿ.ಎ.ಶರವಣ ಆಗ್ರಹಿಸಿದರು.

Continue Reading

ಕರ್ನಾಟಕ

7th Pay Commission: 7ನೇ ವೇತನ ಆಯೋಗದ ವರದಿ ಜಾರಿಗೆ ಅಧಿಕೃತ ಆದೇಶ; ಪರಿಷ್ಕೃತ ವೇತನ ಶ್ರೇಣಿ ಪಟ್ಟಿ ಇಲ್ಲಿದೆ

7th Pay Commission: ನೌಕರರ ಬೇಡಿಕೆಯಂತೆ ರಾಜ್ಯದಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸರ್ಕಾರವು ಇತ್ತೀಚೆಗೆ ತೀರ್ಮಾನ ತೆಗೆದುಕೊಂಡಿತ್ತು. ಆಗಸ್ಟ್‌ 1ರಿಂದಲೇ 7ನೇ ವೇತನ ಆಯೋಗದ ಶಿಫಾರಸುಗಳು ಜಾರಿಗೆ ಬರಲಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.

VISTARANEWS.COM


on

7th Pay Commission
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಿಸಲು ರಚನೆ ಮಾಡಿದ್ದ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಆ.1ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಾಗಲಿದೆ ಎಂಬ ಕುರಿತ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಪ್ರಕಟ ಮಾಡಲಾಗಿದೆ.

ಈ ಬಗ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಆದೇಶ ಹೊರಡಿಸಿದ್ದಾರೆ. 2022ರ ನ.19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿದೆ. ವರದಿಯಲ್ಲಿನ ಶಿಫಾರಸುಗಳನ್ನು ಸರ್ಕಾರವು ಪರಿಗಣಿಸಿದ್ದು, ಅದರಂತೆ, 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳು

ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಈ ಕೆಳಕಂಡಂತೆ ವೇತನ ನಿಗದಿ

  • ದಿನಾಂಕ: 01.07.2022 ರಲ್ಲಿದ್ದಂತೆ ಮೂಲ ವೇತನ.
  • ದಿನಾಂಕ: 01.07.2022 ರಲ್ಲಿದ್ದಂತಹ ಬೆಲೆ ಸೂಚ್ಯಂಕ ಹಂತ 361.704 ಕ್ಕೆ ಸಂವಾದಿಯಾಗಿ ಲಭ್ಯವಿದ್ದ 312 ತುಟ್ಟಿ ಭತ್ಯೆ.
  • ದಿನಾಂಕ: 01.07.2022 ರಲ್ಲಿ ಲಭ್ಯವಿದ್ದ ಮೂಲ ವೇತನದ ಮೇಲೆ 27.50% ರಷ್ಟು ಫಿಟ್‌ಮೆಂಟ್ ಸೌಲಭ್ಯ.
  • ಮೇಲಿನ (ಅ), (ಅ). (ಇ) ಯನ್ನು ಒಟ್ಟುಗೂಡಿಸಿ ಲೆಕ್ಕ ಹಾಕಿದಾಗ ಬರುವ ಮೊತ್ತದ ನಂತರದ ಹಂತದಲ್ಲಿ ವೇತನವನ್ನು ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿಗದಿಪಡಿಸುವುದು.

ಆಗಸ್ಟ್ 1ರಿಂದ ಪರಿಷ್ಕೃತ ವೇತನ ಶ್ರೇಣಿಗಳ ಅನುಷ್ಠಾನ

1.ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯ ಪ್ರಸ್ತುತ ಮೊತ್ತವನ್ನು ಕ್ರಮವಾಗಿ ಮಾಸಿಕ 8,500 ರೂ. ಮತ್ತು 75,300 ರಿಂದ 13,500 ಮತ್ತು 1,20,600ಗಳಿಗೆ ಮತ್ತು ಸಂವಾದಿ ಕುಟುಂಬ ಪಿಂಚಣಿಯ ಕನಿಷ್ಠ ಮತ್ತು ಗರಿಷ್ಠ ಮಿತಿಯನ್ನು ಅನುಕ್ರಮವಾಗಿ ಮಾಸಿಕ 8,500 ಮತ್ತು 45,180 ರಿಂದ 13,500 ಮತ್ತು 80,400 ಪರಿಷ್ಕೃಸುವುದು, ಪಿಂಚಣಿ ಮತ್ತು ಕುಟುಂಬ ಪಿಂಚಣಿಗಳು ದಿನಾಂಕ: 01.07.2022 ರಿಂದ ಜಾರಿಗೆ ಬರುತ್ತವೆ. ಆದರೆ, ಪಿಂಚಣಿ ಪರಿಷ್ಕರಣೆಯ ಆರ್ಥಿಕ ಲಾಭವು ದಿನಾಂಕ: 01.08.2024 ರಿಂದ ಸಿಗಲಿದೆ. ಮರಣ ಮತ್ತು ನಿವೃತ್ತಿ ಉಪದಾನದ ಪ್ರಸ್ತುತ ಗರಿಷ್ಠ ಮಿತಿ ರೂ.20 ಲಕ್ಷಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

2.ದಿನಾಂಕ: 01.07.2022ಕ್ಕೆ ಪೂರ್ವದಲ್ಲಿ ನಿವೃತ್ತರಾದ ಅಥವಾ ಸೇವೆಯಲ್ಲಿದ್ದಾಗ ಮೃತರಾದ ಸರ್ಕಾರಿ ನೌಕರರ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಈ ಕೆಳಗಿನಂತೆ ನಿಗದಿಪಡಿಸತಕ್ಕದ್ದು:-

ಅ) ದಿನಾಂಕ: 01.07 2022 ರಂದು ಇದ್ದ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನ:
ಅ) ದಿನಾಂಕ: 01.07.2022 ರಂದು ಲಭ್ಯವಿದ್ದ 31% ರಷ್ಟು ತುಟ್ಟಿ ಭತ್ಯೆ,
ಇ) ದಿನಾಂಕ: 01.07.2022 ರಂದು ಇದ್ದ ನಿವೃತ್ತಿ ವೇತನ/ಕುಟುಂಬ ವೇತನದ ಮೇಲೆ 27.50% ರಷ್ಟು ಫಿಟ್‌ಮೆಂಟ್ ಸೌಲಭ್ಯ.

3.ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನದ ಈ ಮೇಲಿನ (ಅ) + (ಅ) + (ಇ) ರ ಒಟ್ಟಾರೆ ಮೊತ್ತವು ಮಾಸಿಕ 13,500 ಗಳ ಕನಿಷ್ಠ ಪಿಂಚಣಿಗೆ ಕಡಿಮೆ ಇಲ್ಲದಂತೆ ಮತ್ತು ನಿವೃತ್ತಿ ವೇತನವು ಗರಿಷ್ಠ ಮಾಸಿಕ 1,20,600 ರೂ. ಮಿತಿಗೆ ಹಾಗೂ ಕುಟುಂಬ ನಿವೃತ್ತಿ ವೇತನದ ಗರಿಷ್ಠ ಮೊತ್ತವು ಮಾಸಿಕ 80,400 ರೂ. ಮಿತಿಗೆ ಒಳಪಟ್ಟಿರುತ್ತದೆ. ಈ ಪರಿಷ್ಕೃತ ಪಿಂಚಣಿಯ ಆರ್ಥಿಕ ಲಾಭವು ದಿನಾಂಕ: 01.08.20224 ರಿಂದ ಪ್ರಾಪ್ತವಾಗತಕ್ಕದ್ದು.

4.ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಸಂಬಂಧಿತ ಭತ್ಯೆಗಳಾದ ಮನೆ ಬಾಡಿಗೆ ಭತ್ಯೆ. ನಗರ ಪರಿಹಾರ ಭತ್ಯೆ, ವೈದ್ಯಕೀಯ ಭತ್ಯೆಗಳ ಪರಿಷ್ಕರಣೆಯ ಶಿಫಾರಸ್ಸು ಮತ್ತು ಪರಿಷ್ಕೃತ ವೇತನ ಹಾಗೂ ಪರಿಷ್ಕೃತ ಪಿಂಚಣಿಯಲ್ಲಿ ತುಟ್ಟಿ ಭತ್ಯೆ ಲೆಕ್ಕಾಚಾರ ಮಾಡಲು ಶಿಫಾರಸ್ಸು ಮಾಡಲಾದ ಪರಿಷ್ಕೃತ ಸೂತ್ರಕ್ಕೆ ಸಂಬಂಧಿಸಿದ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಪ್ರಭಾರ ಭತ್ಯೆ ಮಂಜೂರಾತಿಯ ಪ್ರಸ್ತುತ ದರಗಳು ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಮುಂದುವರೆಯುತ್ತದೆ.

5.ನೌಕರರ ಸಾಮೂಹಿಕ ವಿಮಾ ಯೋಜನೆಗೆ ನೌಕರರ ವಂತಿಗೆ ಹೆಚ್ಚಳದ ಪರಿಷ್ಕರಣೆಯ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ.

6.ಅನ್ವಯಿಸುವ ಬದಲಾವಣೆಯೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲು ಸರ್ಕಾರವು ಹರ್ಷಿಸುತ್ತದೆ.

7.ಮುಂದುವರೆದು, ಈ ಮೇಲಿನಂತೆ ವೇತನ ಶ್ರೇಣಿಗಳ ಪರಿಷ್ಕರಣೆಯ ಕಾರಣದಿಂದಾಗಿ ಉಂಟಾಗುವ ವೇತನ ಮತ್ತು ಭತ್ಯೆಗಳ ಹೆಚ್ಚಳವನ್ನು ದಿನಾಂಕ: 01.08.2024ರಿಂದ ನಗದಾಗಿ ಪಾವತಿ ಮಾಡತಕ್ಕದ್ದು, ದಿನಾಂಕ: 01.07.2022 ರಿಂದ 31.07.2024ರ ಅವಧಿಯಲ್ಲಿ ಸೇವೆಯಿಂದ ನಿವೃತ್ತರಾದ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅಥವಾ ಸೇವೆಯಲ್ಲಿರುವುದು ನಮಾಪ್ತಿಗೊಂಡ ಸರ್ಕಾರಿ ನೌಕರರ ಪ್ರಕರಣಗಳಲ್ಲಿ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿಗದಿಪಡಿಸಲಾದ ಕಾಲ್ಪನಿಕ ವೇತನವನ್ನು ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ನಿವೃತ್ತಿ ವೇತನವನ್ನು ಲೆಕ್ಕ ಹಾಕುವ ಉದ್ದೇಶಗಳಿಗಾಗಿ ಪರಿಗಣಿಸತಕ್ಕದ್ದು. ಆದರೆ, ಸದರಿ ಕಾಲ್ಪನಿಕ ಪುನರ್ ನಿಗದಿಯ ಆರ್ಥಿಕ ಲಾಭವು ನಿವೃತ್ತಿ ಹೊಂದಿದ ಸರ್ಕಾರಿ ನೌಕರನಿಗೆ ಅಥವಾ ಮರಣ ಹೊಂದಿದ ಸರ್ಕಾರಿ ನೌಕರನ ಫಲಾನುಭವಿಗೆ ಸಂದರ್ಭಾನುಸಾರ ದಿನಾಂಕ: 01.08.2024 ರಿಂದ ಪ್ರಾಪ್ತವಾಗತಕ್ಕದ್ದು.

ಪರಿಷ್ಕೃತ ವೇತನ ಶ್ರೇಣಿಗಳ ಹಂಚಿಕೆ ಮತ್ತು ಅದರಲ್ಲಿ ವೇತನ ಹಾಗೂ ನಿವೃತ್ತಿ ವೇತನವನ್ನು ಕ್ರಮಬದ್ಧಗೊಳಿಸುವ ಕುರಿತು, ಸರ್ಕಾರದಿಂದ ವಿವರವಾದ ನಿಯಮ ಮತ್ತು ಆದೇಶಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | 7th Pay Commission: ವೇತನ ಹೆಚ್ಚಿಸಿದ್ದಕ್ಕೆ ನೌಕರರಿಂದ ಅಭಿನಂದನೆ; ಸರ್ಕಾರದ ನಿಲುವುಗಳಿಗೆ ತಕ್ಕಂತೆ ಕೆಲಸ ಮಾಡಿ ಎಂದ ಸಿಎಂ

Continue Reading

ಮಳೆ

Karnataka Rain : ಆಲದ ಮರ ಬಿದ್ದು ಆಟೋ ಜಖಂ, ಚಾಲಕ ಪಾರು; ನಾಳೆಗೂ ಗಾಳಿ-ಮಳೆ ಎಚ್ಚರ

Karnataka Rain : ಕಾರ್ಕಳದಲ್ಲಿ ಭಾರಿ ಮಳೆ ಗಾಳಿಗೆ ಆಲದ ಮರವೊಂದು ಉರುಳಿ ಬಿದ್ದಿದ್ದು, ಆಟೋ ಜಖಂಗೊಂಡಿದೆ. ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮುಂದಿನ 24 ಗಂಟೆಯಲ್ಲಿ ಗಾಳಿ ಜತೆಗೆ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

karnataka Rain
Koo

ಉಡುಪಿ/ಬೆಂಗಳೂರು: ಉಡುಪಿಯ ಕಾರ್ಕಳದಲ್ಲಿ ಸುರಿದ ಭಾರಿ ಗಾಳಿ- ಮಳೆಗೆ (Karnataka weather Forecast) ಮರವೊಂದು ಉರುಳಿದೆ. ತಾಲೂಕಿನಾದ್ಯಂತ ಹಲವಾರು ಕಡೆಗಳಲ್ಲಿ ಮರಗಳು (Rain News) ಧರೆಗುರುಳಿವೆ. ಕಾರ್ಕಳ ಬಸ್ ನಿಲ್ದಾಣದ ಬಳಿ ಆಲದ ಮರ ಬಿದ್ದು ರಿಕ್ಷಾ ಜಖಂಗೊಂಡಿದೆ. ಬೃಹತ್ ಗಾತ್ರದ ಮರ ಬೀಳುವಾಗಲೇ ರಿಕ್ಷಾ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ.

ಮರ ಬಿದ್ದ ಪರಿಣಾಮ ವಿದ್ಯುತ್ ಕಂಬವು ದ್ವಿಚಕ್ರ ವಾಹನದ ಮೇಲೆ ಬಿದ್ದು ಅಪ್ಪಚ್ಚಿಯಾಗಿದೆ. ಹಲವು ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ವಿದ್ಯುತ್ ತಂತಿಗಳು ರಸ್ತೆ ತುಂಬೆಲ್ಲ ಇದ್ದವು. ಮರ ಜತೆಗೆ ವಿದ್ಯುತ್ ಕಂಬಗಳು ಬಿದ್ದು ಸಂಚಾರಕ್ಕೆ ಸಮಸ್ಯೆಯುಂಟು ಮಾಡಿತು.

ಮಳೆ ಬಂದರೆ ಮೆಸ್ಕಾಂ ಸಿಬ್ಬಂದಿಗಳ ಪರದಾಟ

ಮಳೆ ಹೆಚ್ಚಾದರೆ ಸಾಕು ಮೆಸ್ಕಾಂ ಸಿಬ್ಬಂದಿಗೆ ಪರದಾಟ ತಪ್ಪಿದಲ್ಲ. ವಿದ್ಯುತ್ ಲೈನ್ ಮೇಲೆ ಬಿದ್ದ ಮರ ತೆರವು ಮಾಡಲು ಮೆಸ್ಕಾಂ ಎಂಜಿನಿಯರ್‌ ಕತ್ತಿಯಿಂದಲೇ ಮರ ಕಡಿದರು. ವೆಂಕಮ್ಮ ತಳವಾರ ಎಂಬುವವರು ಕಟ್ಟಿಂಗ್ ಮಿಷನ್ ಇಲ್ಲದ ಕಾರಣ ಕತ್ತಿಯಿಂದಲೇ ಮರ ತೆರವು ಮಾಡಬೇಕಾಯಿತು. ಚಿಕ್ಕಮಗಳೂರಿನ ಮಲ್ಲಂದೂರು ಸಮೀಪದ ಗಾಳಿ ಪೇಟೆ -ಹೊಸಳ್ಳಿ ಪೇಟೆ ರಸ್ತೆಯಲ್ಲಿ ಘಟನೆ ನಡೆದಿದೆ.

ಮುಂದಿನ 24 ಗಂಟೆಯಲ್ಲಿ ಮಳೆ ಎಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಾಳಿ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಇನ್ನೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲೂ ಮಳೆಯಾರ್ಭಟ ಮುಂದುವರಿಯಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು 30-40ಕಿ.ಮೀ ತಲುಪುವ ಸಾಧ್ಯತೆ ಇದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Rowdy Reels : 500 ರೂ. ಕೊಟ್ಟರೆ ರೌಡಿಗಳ ರೀಲ್ಸ್‌ ಅಪ್ಲೋಡ್‌; ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ

ಮೈಸೂರು: ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದು (Karnataka Rain) ಬಿದ್ದಿದೆ. ಚಿತ್ರಮಂದಿರ ಪಕ್ಕದಲ್ಲೇ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ತಬರೀಸ್ ಮತ್ತು ಅರ್ಮಾನ್ ಎಂಬುವವರು ಗಂಭೀರವಾಗಿ ಗಾಯಗೊಂಡವರು. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಗೋಡೆ ಕೆಳಗೆ ಬಿದ್ದ ಪರಿಣಾಮ ಬಟ್ಟೆ ಅಂಗಡಿಯ ಸ್ಟಾಲ್‌ಗಳು ನೆಲಕಚ್ಚಿವೆ. ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಹೆದ್ದಾರಿಗೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಶಿರಸಿ-ಹೊಸನಗರ ರಾಜ್ಯ ಹೆದ್ದಾರಿಗೆ ಬೃಹತ್ ಮರವೊಂದು ಬಿದ್ದಿದೆ. ಶಿರಸಿ ತಾಲೂಕಿನ ಗುಡ್ನಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಶಿರಸಿ-ಬನವಾಸಿ ರಸ್ತೆ ಸಂಚಾರ ಬಂದ್ ಆಗಿದ್ದು, ಮರ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅರಣ್ಯ, ಲೋಕೋಪಯೋಗಿ ಇಲಾಖೆ, ಹೆಸ್ಕಾಂ, ಪೊಲೀಸ್ ಇಲಾಖೆಯಿಂದ ತೆರವು ಕಾರ್ಯಾಚರಣೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Banavasi News: ಬನವಾಸಿಯ ಸರ್ಕಾರಿ ಮಾದರಿ ಶಾಲೆಯಲ್ಲಿ ಕಿಡಿಗೇಡಿಗಳಿಂದ ಕಲಿಕಾ ಸಾಮಗ್ರಿ ಹಾನಿ

Banavasi News: ಶಾಲಾ ಕೊಠಡಿಗಳ ಬೀಗ ಒಡೆದು ಪೀಠೋಪಕರಣ ಹಾಗೂ ಇತರೆ ಕಲಿಕಾ ಸಾಮಾಗ್ರಿಗಳನ್ನು ಯಾರೋ ಕಿಡಿಗೇಡಿಗಳು ಹಾನಿಯುಂಟು ಮಾಡಿರುವ ಘಟನೆ ಬನವಾಸಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ.

VISTARANEWS.COM


on

Damage to furniture learning material by miscreants in government model school
Koo

ಬನವಾಸಿ: ಶಾಲಾ ಕೊಠಡಿಗಳ ಬೀಗ ಒಡೆದು ಪೀಠೋಪಕರಣ ಹಾಗೂ ಇತರೆ ಕಲಿಕಾ ಸಾಮಾಗ್ರಿಗಳನ್ನು ಯಾರೋ ಕಿಡಿಗೇಡಿಗಳು ಹಾನಿಯುಂಟು ಮಾಡಿರುವ ಘಟನೆ ಬನವಾಸಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ (Banavasi News) ಜರುಗಿದೆ.

ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಬೀಗ ಹೊಡೆದು ಶಾಲಾ ಪೀಠೋಪಕರಣ ಹಾಗೂ ಇನ್ನಿತರ ವಸ್ತುಗಳನ್ನು ಧ್ವಂಸ ಮಾಡಿ ಶಾಲಾ ಅಭಿವೃದ್ಧಿಗಾಗಿ ಸಂಗ್ರಹಿಸಿದ್ದ ಅಲ್ಪ ಮೊತ್ತವನ್ನು ಕಳವು ಮಾಡಿದ್ದಾರೆ ಎಂದು ಪ್ರಭಾರಿ ಮುಖ್ಯೋಪಾಧ್ಯಾಯ ನರಸಿಂಹ ಹರಿಕಾಂತ್ರ, ಬನವಾಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

ಜಿಲ್ಲೆಯಾದ್ಯಾಂತ ನಿರಂತರ ಮಳೆಯಾಗುತ್ತಿರುವ ಕಾರಣ ಶಾಲಾ ಕಾಲೇಜುಗಳಿಗೆ ಕಳೆದ ಐದು ದಿನಗಳಿಂದ ರಜೆ ನೀಡಲಾಗಿತ್ತು. ಈ ಸಮಯದಲ್ಲಿ ಯಾರೋ ಕಿಡಿಗೇಡಿಗಳು ಶಾಲಾ ಕೊಠಡಿ ಹಾಗೂ ಮುಖ್ಯೋಪಾಧ್ಯಾಯರ ಕೊಠಡಿಯ ಕೀಲಿ ಹೊಡೆದು ಅಲ್ಲಿನ ಪೀಠೋಪಕರಣ ಹಾಗೂ ಶಾಲಾ ಕಲಿಕಾ ಸಾಮಾಗ್ರಿಗಳನ್ನು ಹಾನಿಮಾಡಿದ್ದಾರೆ. ಅಲ್ಲದೇ ಶಾಲೆಯ ಕಪ್ಪು ಹಲಗೆಯ ಮೇಲೆ ಅಶ್ಲೀಲ ಚಿತ್ರಗಳನ್ನು ಬಿಡಿಸಿ, ಶಾಲಾ ಆವರಣದಲ್ಲಿ ಮಲಮೂತ್ರ ಮಾಡಿ ವಿಕೃತಿ ತೋರಿದ್ದಾರೆ. ಸೋಮವಾರ ಎಂದಿನಂತೆ ಶಾಲೆಗೆ ಆಗಮಿಸಿದ ಶಿಕ್ಷಕರು ಈ ಎಲ್ಲ ಕೃತ್ಯಗಳನ್ನು ಕಂಡು ಬೆಚ್ಚಿ ಬಿದ್ದು, ಬನವಾಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Karnataka Rain : ನಿರಂತರ ಮಳೆಗೆ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ; ನಾಲ್ವರು ಗಂಭೀರ

ಬನವಾಸಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್11 mins ago

Viral Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

TA Sharavana questioned about the continuous variation in the service of 108 Ambulance even after 7 years there is no new tender
ಬೆಂಗಳೂರು15 mins ago

TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

INS Brahmaputra
ದೇಶ33 mins ago

INS Brahmaputra: ನೌಕಾಪಡೆಯ ಐಎನ್‌ಎಸ್‌ ಯುದ್ಧನೌಕೆಯಲ್ಲಿ ಭೀಕರ ಅಗ್ನಿ ದುರಂತ; ನಾವಿಕ ನಾಪತ್ತೆ

Chamari Athapaththu
ಕ್ರೀಡೆ38 mins ago

Chamari Athapaththu : ಏಷ್ಯಾ ಕಪ್​ನಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ಬರೆದ ಲಂಕಾದ ಮಹಿಳಾ ಕ್ರಿಕೆಟರ್​​

Monsoon fashion
ಫ್ಯಾಷನ್51 mins ago

Monsoon fashion: ಶರ್ಟ್ ಸ್ಟೈಲ್‌ ಜಾಕೆಟ್ಸ್; ಇವು ಯುವಕರ ಮಳೆಗಾಲದ ಫ್ಯಾಷನ್‌ ಟ್ರೆಂಡ್‌

Raghu Dixit
ಕ್ರೀಡೆ1 hour ago

Raghu Dixit : ಪ್ಯಾರಿಸ್​ ಒಲಿಂಪಿಕ್ಸ್​ಗೆ ಕನ್ನಡ ಹಾಡುಗಳ ಮೆರುಗು ; ರಘು ದೀಕ್ಷಿತ್ ತಂಡದಿಂದ ವಿಶೇಷ ಕಾರ್ಯಕ್ರಮ

Union Budget 2024
ದೇಶ1 hour ago

Union Budget 2024: ನಾಳೆ ಕೇಂದ್ರ ಬಜೆಟ್;‌ ಎಷ್ಟು ಗಂಟೆಗೆ ಮಂಡನೆ? ಲೈವ್‌ ವೀಕ್ಷಣೆ ಎಲ್ಲಿ? ಇಲ್ಲಿದೆ ಮಾಹಿತಿ

7th Pay Commission
ಕರ್ನಾಟಕ1 hour ago

7th Pay Commission: 7ನೇ ವೇತನ ಆಯೋಗದ ವರದಿ ಜಾರಿಗೆ ಅಧಿಕೃತ ಆದೇಶ; ಪರಿಷ್ಕೃತ ವೇತನ ಶ್ರೇಣಿ ಪಟ್ಟಿ ಇಲ್ಲಿದೆ

Viral Video
ವೈರಲ್ ನ್ಯೂಸ್2 hours ago

Viral Video: ಹುಟ್ಟುವಾಗಲೇ 32 ಹಲ್ಲುಗಳೊಂದಿಗೆ ಜನಿಸಿದ ಮಗು! ಹೀಗೇಕಾಯಿತು?

karnataka Rain
ಮಳೆ2 hours ago

Karnataka Rain : ಆಲದ ಮರ ಬಿದ್ದು ಆಟೋ ಜಖಂ, ಚಾಲಕ ಪಾರು; ನಾಳೆಗೂ ಗಾಳಿ-ಮಳೆ ಎಚ್ಚರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌