Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ - Vistara News

ಕರ್ನಾಟಕ

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Valmiki Corporation Scam: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಈ ಹಿಂದಿನ ನಿರ್ದೇಶಕ ಕಲ್ಲೇಶ್. ಬಿ ನೀಡಿದ ದೂರಿನ ಮೇರೆಗೆ ಇಡಿ ಅಧಿಕಾರಿಗಳಾದ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಮೇಲೆ ಪ್ರಕರಣ ದಾಖಲಾಗಿದೆ.

VISTARANEWS.COM


on

Valmiki Corporation Scam
ಇಡಿ ಅಧಿಕಾರಿಗಳ ವಿರುದ್ಧ ದೂರು ನೀಡಿರುವ ಅಧಿಕಾರಿ ಕಲ್ಲೇಶ್‌.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ (Valmiki Corporation Scam) ಮಾಜಿ ಸಚಿವ ಬಿ.ನಾಗೇಂದ್ರ ಹೆಸರೇಳುವಂತೆ ಒತ್ತಡ, ಮಾನಸಿಕವಾಗಿ ಹಿಂಸೆ ನೀಡಿ ಕಿರುಕುಳ ನೀಡಲಾಗಿದೆ ಎಂಬ ಆರೋಪದಲ್ಲಿ ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್‌ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಈ ಹಿಂದಿನ ನಿರ್ದೇಶಕ ಕಲ್ಲೇಶ್. ಬಿ ನೀಡಿದ ದೂರಿನ ಮೇರೆಗೆ ಇಡಿ ಅಧಿಕಾರಿಗಳಾದ ಮಿತ್ತಲ್ ಹಾಗೂ ಮುರುಳಿ ಕಣ್ಣನ್ ಮೇಲೆ ಪ್ರಕರಣ ದಾಖಲಾಗಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಬಂಧನವಾಗಿರುವ ಮಾಜಿ ಸಚಿವ ನಾಗೇಂದ್ರ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹೆಸರೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ನಿಗಮದ ಈ ಹಿಂದಿನ ಎಂಡಿ ಕಲ್ಲೇಶ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಲ್ಲೇಶ್ ಅವರು ಸದ್ಯ ಮಾಜ ಕಲ್ಯಾಣ ಇಲಾಖೆಯ ಅಪಾರ ನಿರ್ದೇಶಕರಾಗಿದ್ದು, ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಹಲವರ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಕಲ್ಲೇಶ್‌ ಅವರು ದೂರು ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿ.ಎನ್.ಎಸ್.ಕಾಯ್ದೆ ಸೆಕ್ಷನ್ 351(2), 352ರಡಿ ಪ್ರಕರಣ ದಾಖಲಾಗಿದೆ. ಸೆಕ್ಷನ್ 351(2) ಜೀವ ಬೆದರಿಕೆ ಹಾಕುವುದು, 352 ಉದ್ದೇಶ ಪೂರ್ವಕವಾಗಿ ನಿಂದಿಸುವುದಕ್ಕೆ ಸಂಬಂಧಿಸಿದೆ. ದೂರುದಾರ ಕಲ್ಲೇಶ್‌ನನ್ನು ಪೊಲೀಸರು ವಿಚಾರಣೆಗೆ ಕರೆಸಲಿದ್ದು, ಈ ವೇಳೆ ಹೇಳಿಕೆ ದಾಖಲು ಮಾಡಿಕೊಳ್ಳಲಿದ್ದಾರೆ. ದೂರಿಗೆ ಸಂಬಂಧಪಟ್ಟಂತೆ ಯಾವುದಾದರೂ ಸಾಕ್ಷ್ಯಾಗಳು ಇದ್ದರೆ ಪಡೆದುಕೊಳ್ಳಲಿದ್ದು, ನಂತರ ಇಡಿ ಅಧಿಕಾರಿಗಳನ್ನು‌ ವಿಚಾರಣೆಗೆ ಕರೆಸಲಿದ್ದಾರೆ.

ಎಫ್.ಐ.ಆರ್.ನಲ್ಲಿ ಏನಿದೆ?

ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ವೇಳೆ 17 ಪ್ರಶ್ನೆಗಳನ್ನು ಕೇಳಿರುವ ಇಡಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡು, ಒತ್ತಾಯ ಪೂರ್ವಕ ಸಹಿ ಹಾಕುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಕಲ್ಲೇಶ್‌ ಉಲ್ಲೇಖಿಸಿದ್ದಾರೆ. ಅಕ್ರಮ ವರ್ಗಾವಣೆಯಲ್ಲಿ ನಿನ್ನನ್ನು ಬಂಧಿಸುತ್ತೇವೆ, ಎರಡು ವರ್ಷ ಬೇಲ್‌ ಸಿಗಲ್ಲಾ ಎಂದು ಧಮ್ಕಿ ಹಾಕಿದ್ದಾರೆ. ನೀನೊಬ್ಬ ಅಪರಾಧಿ, ನಿನ್ನನ್ನು ಹೀಗಲೇ ಅರೆಸ್ಟ್ ಮಾಡುತ್ತೇವೆ, ಇಡಿ ಬಗ್ಗೆ ನಿನಗೆ ಗೊತ್ತಿಲ್ಲಾ ಎಂದು ಮಿತ್ತಲ್‌ ಬೈದಿದ್ದಾರೆ.

ಇದನ್ನೂ ಓದಿ | TA Sharavana: 108 ಆಂಬ್ಯುಲೆನ್ಸ್‌ಗೆ 7 ವರ್ಷ ಕಳೆದರೂ ಹೊಸ ಟೆಂಡರ್‌ ಇಲ್ಲ ಯಾಕೆ? ಟಿ. ಎ. ಶರವಣ ಪ್ರಶ್ನೆ

ಎಂಜಿ ರಸ್ತೆ ಶಾಖೆಗೆ ಹಣ ವರ್ಗಾವಣೆ ಮಾಡಲು ನಾಗೇಂದ್ರ ಹಾಗೂ ಹೈ ಅಥಾರಿಟಿ ಎಫ್.ಡಿ ಇಲಾಖೆಯಿಂದ ಸೂಚನೆ ಇತ್ತು ಎಂದು ಒಪ್ಪಿಕೊಳ್ಳುವಂತೆ ಒತ್ತಡ ಹೇರಲಾಗಿದೆ. ಈ ಕೂಡಲೇ ಬರೆದು ಕೊಟ್ಟು ಸಹಿ ಮಾಡಿಕೊಡುವಂತೆ ಒತ್ತಡ ಹೇರಿದ್ದಾರೆ. ಹಣ ವರ್ಗಾವಣೆಗೆ ಒತ್ತಡ ಇತ್ತು ಎಂದು ಬರೆದುಕೊಡಲು ತಿಳಿಸಿದ್ದಾರೆ. ಪದೇಪದೆ ಇದೇ ಪ್ರಶ್ನೆ ಕೇಳಿ 7 ವರ್ಷ ಜೈಲು, ಶಿಕ್ಷೆ ಕೊಡಿಸುವವರೆಗೂ ಬಿಡುವುದಿಲ್ಲ ಎಂದಿದ್ದಾರೆ. ಯಾವುದೇ ತಪ್ಪು ಮಾಡದಿದ್ದರೂ ಕಾನೂನು ಬಾಹಿರವಾಗಿ ವಿಚಾರಣೆ ಮಾಡಿ ಬೈದು ಬೆದರಿಕೆ ಹಾಕಿದ್ದಾರೆ ಎಂದು ಇಡಿ ಅಧಿಕಾರಿಗಳಾದ ಮಿತ್ತಲ್ ಮತ್ತು ಮುರುಳಿ ಕಣ್ಣನ್ ಅವರ ವಿರುದ್ದ ದೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Uttara Kannada News: ಸಂಸದ ಕಾಗೇರಿ ಬಗ್ಗೆ ಶಾಸಕ ಹೆಬ್ಬಾರ್‌ ಕೀಳುಮಟ್ಟದ ಹೇಳಿಕೆಗೆ ಬಿಜೆಪಿ ತೀವ್ರ ಖಂಡನೆ

Uttara Kannada News: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಬಗ್ಗೆ ಶಾಸಕ ಶಿವರಾಮ ಹೆಬ್ಬಾರ್‌, ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ಕೆಸೆರೆರೆಚಾಟದಲ್ಲಿ ತೊಡಗಿರುವುದನ್ನು ಯಲ್ಲಾಪುರ-ಮುಂಡಗೋಡ ಬಿಜೆಪಿ ಮಂಡಲದಿಂದ ಕಟುವಾಗಿ ಖಂಡಿಸುತ್ತೇವೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ತಿಳಿಸಿದ್ದಾರೆ.

VISTARANEWS.COM


on

BJP strongly condemns MLA Shivaram Hebbar statement about MP Vishweshwar Hegde Kageri says hariprakash konemane
Koo

ಯಲ್ಲಾಪುರ: ತಾಂತ್ರಿಕವಾಗಿ ನಮ್ಮ ಪಕ್ಷದ ಶಾಸಕರಾದ ಶಿವರಾಮ ಹೆಬ್ಬಾರ್‌, ನಮ್ಮ ಸಂಸದರಾದ ಸಜ್ಜನ ರಾಜಕಾರಣಿ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಬಗ್ಗೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿರುವುದನ್ನು ಯಲ್ಲಾಪುರ-ಮುಂಡಗೋಡ ಬಿಜೆಪಿ ಮಂಡಲದಿಂದ ಕಟುವಾಗಿ ಖಂಡಿಸುತ್ತೇವೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್‌ ಕೋಣೆಮನೆ (Uttara Kannada News) ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಿಂದ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಅದಕ್ಕಾಗಿ ಅನುದಾನ ತರುವಲ್ಲಿ ಜಿಲ್ಲೆಯ ಮಂತ್ರಿ, ಸಂಸದರನ್ನು ಒಟ್ಟಿಗೆ ಸೇರಿಸಿಕೊಂಡು ಜನರಿಗೆ ಸ್ಪಂದಿಸಬೇಕಾಗಿದ್ದ ಮಾಜಿ ಮಂತ್ರಿಗಳು ಹಾಗೂ ಹಾಲಿ ಶಾಸಕರು ತತ್ವನಿಷ್ಠೆಯ ರಾಜಕಾರಣಿಯಾದ ಕಾಗೇರಿ ಅವರ ಮೇಲೆ ಯಾವುದೇ ಕಾರಣವಿಲ್ಲದೆ ವರ್ಚಸ್ಸಿಗೆ ಧಕ್ಕೆ ತರುವ ಹಾಗೆ ಅಹಂಕಾರದ ಪರಕಾಷ್ಠೆಯ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ‌ ಎಂದರು.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಕಾಗೇರಿ ಅವರು ಇದೀಗ ಸಂಸದರಾಗಿದ್ದರೂ ಕೂಡ, ರಾಜಕೀಯಕ್ಕೆ ನಿನ್ನೆ ಮೊನ್ನೆ ಬಂದವರಲ್ಲ. 30 ವರ್ಷಗಳಿಂದ ಜನಪ್ರಿಯ ಶಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಂತಹವರ ಮೇಲೆ ಶಾಸಕರು ಹೀಗೆ ಇಲ್ಲಸಲ್ಲದ ಮಾತುಗಳನ್ನಾಡುವುದನ್ನು ಮುಂದುವರಿಸಿದರೆ ನಾವು ಜನರ ಮುಂದೆ ಸತ್ಯಾಸತ್ಯತೆ ಬಿಚ್ಚಿಡುತ್ತೇವೆ. ಹೆಬ್ಬಾರರನ್ನು ನಮ್ಮ ಪಕ್ಷದ ಶಾಸಕರೆಂದೇ ಭಾವಿಸಿದ್ದೇವೆ. ಆದರೆ ಅವರು ಯಾವ ಪಕ್ಷದಲ್ಲಿದ್ದಾರೆ ಎಂಬುದನ್ನು ಅವರೇ ತಿಳಿಸಲಿ. ಚುನಾವಣೆ ಎದುರಿಸಿ ಯಾವ ಪಕ್ಷ ಅಥವಾ ತಮ್ಮ ವೈಯಕ್ತಿಕ ಸಾಮರ್ಥ್ಯ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್.ಟಿ. ಪಾಟೀಲ ಮಾತನಾಡಿ, ಶಾಸಕ ಶಿವರಾಮ ಹೆಬ್ಬಾರ್‌ ಅವರನ್ನು ಬಿಜೆಪಿ ಪಕ್ಷಕ್ಕೆ ನಾವೇನು ಕರೆದಿರಲಿಲ್ಲ. ಅವರಿಗೆ ಮಂತ್ರಿಯಾಗುವ ಹಂಬಲದಿಂದ, ವೈಯಕ್ತಿಕ ಹಿತಾಸಕ್ತಿಗಾಗಿ ಬಂದಿದ್ದರೇ ಹೊರತು ಬೇರೆ ಉದ್ದೇಶದಿಂದಲ್ಲ. ಒಳ್ಳೆಯ ಉದ್ದೇಶವಿದ್ದರೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ ಅವರು, ಮೋದಿಯವರ ಹಾಗೂ ಪಕ್ಷದ ಮೇಲಿದ್ದ ಗೌರವವನ್ನು ಉಳಿಸಬೇಕಾಗಿತ್ತು. ಹಾಗೆ ಮಾಡದೇ ಸೋಗಲಾಡಿತನದಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಹೆಬ್ಬಾರ್ ಅವರು ರಾಜೀನಾಮೆ ಕೊಟ್ಟು ಪುನಃ ಚುನಾವಣೆ ಎದುರಿಸಲಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: Raghu Dixit : ಪ್ಯಾರಿಸ್​ ಒಲಿಂಪಿಕ್ಸ್​ಗೆ ಕನ್ನಡ ಹಾಡುಗಳ ಮೆರುಗು ; ರಘು ದೀಕ್ಷಿತ್ ತಂಡದಿಂದ ವಿಶೇಷ ಕಾರ್ಯಕ್ರಮ

ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಮೇಶ ಭಾಗ್ವತ್, ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮುಂಡಗೋಡ ಮಂಡಲಾಧ್ಯಕ್ಷ ಮಂಜುನಾಥ ಪಾಟೀಲ, ತಾಪಂ ಮಾಜಿ ಸದಸ್ಯ ಸುಬ್ಬಣ್ಣ ಬೋಳ್ಮನೆ, ಪ್ರಮುಖರಾದ ಗಣಪತಿ ಬೋಳುಗುಡ್ಡೆ ಇದ್ದರು.

Continue Reading

ಕರ್ನಾಟಕ

Chaluvadi Narayanaswamy : ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್​​ನ ಪ್ರತಿಪಕ್ಷದ ನಾಯಕ

Chaluvadi Narayanaswamy : ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ರಾಘವೇಂದ್ರ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಕೆ.ವಿ ಮಲ್ಲೇಶ್​ ಬಾನು ಅವರಿಗೆ ಟಿಕೆಟ್​ ನೀಡಿ ಅವರು ಗೆದ್ದಿದ್ದರು. ಹೀಗಾಗಿ ಅಲ್ಲಿನ ಸಂಸದರಾಗಿದ್ದ ನಾರಾಯಣ ಸ್ವಾಮಿ ಅವರನ್ನು ವಿಧಾನಪರಿಷತ್​ಗೆ ಬಿಜೆಪಿ ಆಯ್ಕೆ ಮಾಡಿತ್ತು. ಇದೀಗ ಅವರಿಗೆ ನಾಯಕನ ಸ್ಥಾನ ನೀಡಿದೆ.

VISTARANEWS.COM


on

Chaluvadi Narayanaswamy
Koo

ಬೆಂಗಳೂರು: ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ (Chaluvadi Narayanaswamy) ಅವನ್ನು ಪ್ರತಿಪಕ್ಷಗಳ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ರಾಘವೇಂದ್ರ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.

ಬಿವೈ ವಿಜಯೇಂದ್ರ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಠರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹ 187 ಕೋಟಿ ಗುಳುಂ , ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣೀ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

ಇದನ್ನೂ ಓದಿ: NEET: ನೀಟ್‌ ಪರೀಕ್ಷೆಗೆ ವಿರೋಧ, ಬೆಂಗಳೂರು ವಿಭಜನೆಗೆ ಅಸ್ತು; ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಮಾನ್ಯ ಛಲವಾದಿ ನಾರಾಯಣ ಸ್ವಾಮಿಯವರನ್ನು ಆತ್ಮೀಯವಾಗಿ ಅಭಿನಂದಿಸಿ ಅವರನ್ನು ಆಯ್ಕೆಮಾಡಿದ ಪಕ್ಷದ ವರಿಷ್ಠ ಮಂಡಳಿಗೆ ಕೃತಜ್ಞತೆ ಸಲ್ಲಿಸುವೆ ಎಂದು ವಿಜಯೇಂದ್ರ ಅವರು ಬರೆದುಕೊಂಡಿದ್ದಾರೆ.

Continue Reading

ಕರ್ನಾಟಕ

NEET: ನೀಟ್‌ ಪರೀಕ್ಷೆಗೆ ವಿರೋಧ, ಬೆಂಗಳೂರು ವಿಭಜನೆಗೆ ಅಸ್ತು; ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

NEET: ದಿ ಗ್ರೇಟರ್ ಬೆಂಗಳೂರು ಗೌವರ್ನೆನ್ಸ್ ಬಿಲ್ – 2024ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ವಿವಿಧ ಹಂತದಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡಲಾಗುತ್ತದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಸಿಟಿ ಕಾರ್ಪೊರೇಷನ್‌ಗಳು ಬರಲಿವೆ.‌ ರಾಜ್ಯ ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು, ಬಿಬಿಎಂಪಿ ವಿಂಗಡಣೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

NEET
Koo

ಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (NEET) ರದ್ದುಗೊಳಿಸಬೇಕು ಎಂದು ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಆಗ್ರಹ ಕೇಳಿಬರುತ್ತಿದೆ. ಅದರಲ್ಲೂ, ನೀಟ್‌ ಯುಜಿ ಪರೀಕ್ಷೆಯ (NEET UG 2024) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸುದ್ದಿಯಾದ ಬಳಿಕ ಆಗ್ರಹ ಹೆಚ್ಚಾಗಿದೆ. ಇದರ ಬೆನ್ನಲ್ಲೇ, ಕರ್ನಾಟಕದಲ್ಲೂ ನೀಟ್‌ ಪರೀಕ್ಷೆ ಸೇರಿ ಕೇಂದ್ರ ಸರ್ಕಾರದ ಮೂರು ತೀರ್ಮಾನಗಳನ್ನು ವಿರೋಧಿಸುವ ಕುರಿತು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದರ ಜತೆಗೆ, ಬಿಬಿಎಂಪಿ ವಿಭಜನೆಗೂ ಸಂಪುಟ ಸಭೆ ಅಸ್ತು ಎಂದಿದೆ.

ಬೆಂಗಳೂರು ವಿಭಜನೆಗೆ ಸಮ್ಮತಿ

ಬಿಬಿಎಂಪಿಯನ್ನು ವಿಭಜಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಬೆಂಗಳೂರನ್ನು ಐದು ವಿಭಾಗಗಳಾಗಿ ವಿಂಗಡಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವ ಸಲಹೆಗೆ ಅನುಮೋದನೆ ನೀಡಲಾಗಿದೆ. ಮಂಗಳವಾರವೇ ವಿಧೇಯಕ ಮಂಡನೆ ಮಾಡುವ ಸಾಧ್ಯತೆ ಇದೆ.

BBMP Scam

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷರಾಗಿರುತ್ತಾರೆ. 5-10 ಕಾರ್ಪೊರೇಷನ್‌ಗಳು ಇರಲಿದ್ದು, ಒಂದೊಂದು ಕಾರ್ಪೊರೇಷನ್‌ಗೆ ಒಬ್ಬ ಆಯುಕ್ತ ಇರಲಿದ್ದಾರೆ. ಜಲಮಂಡಳಿ, ಬಿಡಿಎ, ಬೆಸ್ಕಾಂ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬರಲಿವೆ. ಪೂರ್ವ, ಪಶ್ಚಿಮ, ದಕ್ಷಿಣ, ಉತ್ತರ, ಕೇಂದ್ರ ಸೇರಿದಂತೆ ಇನ್ನಷ್ಟು ಬಿಬಿಎಂಪಿ ಆಗಿ ವಿಂಗಡಣೆ ಮಾಡಲಾಗುತ್ತದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯು ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ರಾಮನಗರ, ಕನಕಪುರ, ಆನೆಕಲ್, ಬೆಂಗಳೂರು ಗ್ರಾಮಾಂತರ ಪ್ರದೇಶದವರೆಗೆ ಇರಲಿದೆ.

ಏನಿದು ಬಿಲ್?

ದಿ ಗ್ರೇಟರ್ ಬೆಂಗಳೂರು ಗೌವರ್ನೆನ್ಸ್ ಬಿಲ್ – 2024ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ವಿವಿಧ ಹಂತದಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡಲಾಗುತ್ತದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಸಿಟಿ ಕಾರ್ಪೊರೇಷನ್‌ಗಳು ಬರಲಿವೆ.‌ ಈ ವರದಿ ಪ್ರಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆಗೆ ಪ್ರಸ್ತಾಪ ಮಾಡಲಾಗಿದೆ. ಈ GBAಗೆ ಯೋಜನೆ ಮತ್ತು ಹಣಕಾಸು ಅಧಿಕಾರ ನಿರ್ವಹಣೆಯ ಅಧಿಕಾರ ಇರಲಿದೆ.

ಇದು ಸುಮಾರು‌ 1,400 ಚದರ ಕಿ.ಲೋ ಮೀಟರ್ GBA ವ್ಯಾಪ್ತಿಗೆ ಬರಲಿದೆ. 1 ರಿಂದ 10 ಕಾರ್ಪೊರೇಷನ್ ಗಳು GBA ವ್ಯಾಪ್ತಿಗೆ ಬರಲಿದೆ. 1-10 ಕಾರ್ಪೊರೇಷನ್ ಗಳು 950 ಚದರ ಕಿ.ಲೋ ಮೀಟರ್ ವ್ಯಾಪ್ತಿ ಹೊಂದಲಿದೆ. ಸದ್ಯ 708 ಚದರ ಕಿ.ಲೋ ಮೀಟರ್ ಬಿಬಿಎಂಪಿ ರದ್ದಾಗುತ್ತದೆ. ಈ ಕರಡು ಮಸೂದೆ ಸುಮಾರು 400 ವಾರ್ಡ್ ಗಳ ರಚನೆಗೆ ಪ್ರಸ್ತಾಪಿಸಿದೆ. ಈ ಕರಡು ಮಸೂದೆಯಂತೆ ಬಿಡಿಎ ಅದರ ಯೋಜನೆ ರೂಪಿಸುವ ಅಧಿಕಾರ ಕಳೆದುಕೊಳ್ಳಲಿದೆ. ಆದರೆ ಬೃಹತ್ ಮೂಲಸೌಕರ್ಯ ಯೋಜನೆಗಳ ಕಾಮಗಾರಿಯನ್ನ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ನೀಟ್‌ ಸೇರಿ 3 ತೀರ್ಮಾನಗಳಿಗೆ ವಿರೋಧ

ಕೇಂದ್ರ ಸರ್ಕಾರದ ನೀಟ್‌ ಪರೀಕ್ಷೆ, ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆ ಹಾಗೂ ಒಂದು ದೇಶ, ಒಂದು ಎಲೆಕ್ಷನ್‌ ತೀರ್ಮಾನಗಳನ್ನು ವಿರೋಧಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಷ್ಟೇ ಅಲ್ಲ, ತಮಿಳುನಾಡಿನಲ್ಲಿ ನೀಟ್‌ ಪರೀಕ್ಷೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ಮಂಗಳವಾರವೇ (ಜುಲೈ 23) ಈ ಕುರಿತು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: NEET UG 2024: ನೀಟ್‌ ಪ್ರಶ್ನೆಪತ್ರಿಕೆ ಟ್ರಂಕ್‌ ಕದ್ದ ಮತ್ತೊಬ್ಬ ಕಿಂಗ್‌ಪಿನ್‌ ಸೇರಿ ಮೂವರನ್ನು ಬಂಧಿಸಿದ ಸಿಬಿಐ!

Continue Reading

ಕರ್ನಾಟಕ

DK Shivakumar: ರೈತನಿಗೆ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿ ಇತರೆಡೆ ಶೀಘ್ರ ವಸ್ತ್ರ ಸಂಹಿತೆ ಜಾರಿ ಎಂದ ಡಿಕೆಶಿ

DK Shivakumar: ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: “ಮಾಲ್ ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು. ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯದಂತೆ ನಿಯಮಾವಳಿ ರೂಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

ವಿಧಾನಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, “ಮಾಲ್‌ಗೆ ಪಂಚೆ ಧರಿಸಿ ಬಂದ ರೈತನನ್ನು ತಡೆದ ವಿಚಾರವಾಗಿ ಶುಕ್ರವಾರ (ಜುಲೈ 19) ವಿಧಾನಸಭೆಯಲ್ಲಿ ಪ್ರಸ್ತಾವನೆ ಮೇಲೆ ಚರ್ಚೆ ನಡೆಸಲಾಗಿತ್ತು. ಈ ವಿಚಾರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿಕೆ ನೀಡಿದ್ದರು. ನಾನು ಶುಕ್ರವಾರ ಗೈರಾಗಿದ್ದ ಕಾರಣ ಈಗ ನನ್ನ ಹೇಳಿಕೆ ನೀಡುತ್ತಿದ್ದೇನೆ” ಎಂದು ಹೇಳಿದರು.

“ಜಿ.ಟಿ ಮಾಲ್‌ಗೆ ಪಂಚೆ ಉಟ್ಟುಕೊಂಡು ಬಂದ ರೈತನಿಗೆ ಪ್ರವೇಶ ನೀಡದೆ ಇದ್ದ ಕಾರಣ ಮಾಲ್ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಯಿತು ಹಾಗೂ ತೆರಿಗೆ ಬಾಕಿ ಇದ್ದ ಕಾರಣ ಬೀಗ ಹಾಕಲಾಯಿತು. ಅವರು ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಈಗ ಚೆಕ್ ಮುಖಾಂತರ ಬಾಕಿ ತೆರಿಗೆ ಪಾವತಿ ಮಾಡಿದ್ದಾರೆ” ಎಂದರು.

ಇದನ್ನೂ ಓದಿ | Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

“ಕೆಲವು ಕ್ಲಬ್ ಗಳಲ್ಲಿ ಪಂಚೆ ಹಾಕಿದ್ದರೆ, ಶೂ ಹಾಕದೆ ಇದ್ದರೆ ಒಳಗೆ ಬಿಡುವುದಿಲ್ಲ. ಇದರ ಬಗ್ಗೆಯೂ ಗಮನ ಹರಿಸಿ” ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಮನವಿ ಮಾಡಿದರು.

ತಮಿಳುನಾಡಿಗೆ 30 ಟಿಎಂಸಿ ನೀರು ಹರಿಸಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ/ಬೆಂಗಳೂರು: “ಬಿಳಿಗುಂಡ್ಲುವಿನಲ್ಲಿ ದಾಖಲಾದಂತೆ ಇದುವರೆಗು ತಮಿಳುನಾಡಿಗೆ 30 ಟಿಎಂಸಿ ನೀರನ್ನು ಹರಿಸಲಾಗಿದೆ. 10 ಟಿಎಂಸಿ ನೀರನ್ನು ಹರಿಸಿದರೆ ಸಾಮಾನ್ಯ ವರ್ಷದಲ್ಲಿ 40 ಟಿಎಂಸಿ ನೀರು ಹರಿಸಿದಂತಾಗುತ್ತದೆ. ನಿತ್ಯ 51 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ಜಲಾನಯನ ಪ್ರದೇಶದಿಂದ ಹರಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಆರ್‌ಎಸ್ ಅಣೆಕಟ್ಟು ವೀಕ್ಷಣೆ ನಂತರ ಅಣೆಕಟ್ಟೆ ಬಳಿ ಮತ್ತು ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಡಿಸಿಎಂ ಅವರು, “ಕಾವೇರಿ ಜಲಾನಯನ ಪ್ರದೇಶಗಳಲ್ಲಿ 1,657 ಕೆರೆಗಳಿವೆ. ಮುಂಜಾಗ್ರತ ಕ್ರಮವಾಗಿ ಎಲ್ಲಾ ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ಸಚಿವರ ನೇತೃತ್ವದಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. 5.90 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ, 27 ಲಕ್ಷ ಟನ್ ರಸಗೊಬ್ಬರ ಸಂಗ್ರಹ, 30 ಲಕ್ಷ ರೈತರಿಗೆ ಸಹಕಾರಿ ಸಂಘಗಳಿಂದ ತಲಾ 25 ಸಾವಿರ ಕೋಟಿ ರೂ. ಸಾಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

“ನಮ್ಮ ಸರ್ಕಾರ ರೈತರ ಬದುಕಿಗೆ ಪೂರಕವಾಗಿದೆ. ರೈತರ ಹಿತ ಕಾಯಲು ಬದ್ದತೆ ಹೊಂದಿದ್ದೇವೆ. ನಮ್ಮದು ಬೂಟಾಟಿಕೆಯ ಮಾತಲ್ಲ. ಪ್ರಚಾರಕ್ಕೆ ಮಾಡುವುದಲ್ಲ, ನಮ್ಮ ವಿಚಾರ, ಆಚಾರ ಎಲ್ಲವೂ ರೈತರ ಪರ. ಕಾವೇರಿ ನೀರು ನಿರ್ವಹಣಾ ಸಮಿತಿಯು ಜುಲೈ 11 ರಿಂದ 30 ರ ತನಕ 20 ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶ ನೀಡಿತ್ತು. ಆದರೆ ನಾವು ನೀರನ್ನು ಹರಿಸಲಿಲ್ಲ. ನಮ್ಮ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಂಡು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಿತ್ತು” ಎಂದರು.

ಕಾವೇರಿ ಆರತಿ ಆರಂಭಿಸಲು ಚಿಂತನೆ

“ವಾರಾಣಸಿಯಲ್ಲಿ ಗಂಗಾ ಆರತಿ ನಡೆಸಿದಂತೆ, ಕಾವೇರಿ ಆರತಿ ಕಾರ್ಯಕ್ರಮ ಪ್ರಾರಂಭಿಸುವ ಆಲೋಚನೆ ಇದೆ. ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗು ಅಧಿಕಾರಿಗಳು ಸೇರಿದ 20 ಜನರ ಸಮಿತಿಯನ್ನು ರಚನೆ ಮಾಡಿ, ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಹೇಗೆ ನಡೆಯುತ್ತದೆ ಎನ್ನುವ ಬಗ್ಗೆ ಅಧ್ಯಯನ ನಡೆಸಲಾಗುವುದು. ಅಲ್ಲಿಂದ ಒಂದು ತಂಡವನ್ನು ಕರೆದುಕೊಂಡು ಬಂದು ಯಾವ ಜಾಗದಲ್ಲಿ ಕಾವೇರಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು. ಒಂದು ತಿಂಗಳ ಒಳಗಾಗಿ ಈ ಕಾರ್ಯಕ್ರಮ ಮಾಡಲಾಗುವುದು. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರೇ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸುತ್ತವೆ” ಎಂದು ಹೇಳಿದರು.

ಪಿಪಿಪಿ ಮಾದರಿಯಲ್ಲಿ ಬೃಂದಾವನಕ್ಕೆ ಹೊಸ ರೂಪ

“ಕಾವೇರಿ ಬೃಂದಾವನ ಅಮ್ಯೂಸ್ ಮೆಂಟ್ ಉದ್ಯಾನಕ್ಕೆ ಹೊಸ ರೂಪ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಇದರ ಅಭಿವೃದ್ದಿ ಮಾಡಲಾಗುವುದು. ಈ ವಿಚಾರ ಇನ್ನೆರಡು ದಿನಗಳಲ್ಲಿ ಕ್ಯಾಬಿನೆಟ್ ಮುಂದೆ ಚರ್ಚೆಗೆ ಬರುತ್ತದೆ. ಈ ಯೋಜನೆಯಿಂದ ಈ ಭಾಗದ 8-10 ಸಾವಿರ ಜನರಿಗೆ ಉದ್ಯೋಗ ಲಭಿಸಲಿದೆ. ಕಳೆದ ಬಜೆಟ್ ನಲ್ಲಿ ಯೋಜನೆ ರೂಪಿಸಲಾಗಿತ್ತು. ಕಾರ್ಯರೂಪಕ್ಕೆ ಬಂದಿರಲಿಲ್ಲ. ಸುಮಾರು 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ದಿನಕ್ಕೆ ಬರುವ ನಿರೀಕ್ಷೆಯಿದೆ. ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಬೇಕು. ಪ್ರವಾಸಕ್ಕೆ ಬಂದವರು ಒಂದೆರಡು ದಿನ ಇಲ್ಲಿ ಉಳಿದುಕೊಂಡು ಹೋಗುವಂತಹ ವ್ಯವಸ್ಥೆ ಮಾಡಬೇಕು. ಬೆಂಗಳೂರಿನಿಂದ ಒಂದೂವರೆ ತಾಸಿನಲ್ಲಿ ಬರಬಹುದು. ಇಲ್ಲಿಂದ ಸುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಬಹುದು” ಎಂದು ತಿಳಿಸಿದರು.

ಮೇಕೆದಾಟು ವಿಚಾರವನ್ನು ಮುಂದುವರೆಸುತ್ತೀರಾ ಎಂದು ಕೇಳಿದಾಗ “ಸದ್ಯಕ್ಕೆ ಈ ಬಗ್ಗೆ ಉತ್ತರ ನೀಡುವುದಿಲ್ಲ. ಕಾಲವೇ ಅದಕ್ಕೆ ಉತ್ತರ ಕೊಡುತ್ತದೆ. ನಾವು ಸಲ್ಲಿಸಿರುವ ದಾಖಲೆಗಳು ಈ ಯೋಜನೆಗೆ ಭದ್ರ ಅಡಿಪಾಯ ಹಾಕಿದ್ದು, ನ್ಯಾಯಾಲಯವೇ ಈ ವಿಚಾರವಾಗಿ ತೀರ್ಮಾನ ಮಾಡಲಿದೆ” ಎಂದರು.

ಬಾಗಿನ ಯಾವಾಗ ಅರ್ಪಣೆ ಮಾಡಲಾಗುತ್ತೆ ಎಂದು ಕೇಳಿದಾಗ “ಶುಭ ಮುಹೂರ್ತ, ಶುಭ ಗಳಿಗೆ ನೋಡಿ, ವಿಧಾನಸಭೆ ಮುಗಿದ ನಂತರ ದಿನಾಂಕ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.

ಇದನ್ನೂ ಓದಿ | Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

ಐಟಿ ನೌಕರರ ಕೆಲಸದ ವೇಳೆ ಹೆಚ್ಚಿಸುವ ಕುರಿತು ಕೇಳಿದಾಗ, “ನಾನು ಮತ್ತು ನೀವು ವಿರೋಧಿಸಬಹುದು. ಆದರೆ ಅಂತರರಾಷ್ಟೀಯ ಮಟ್ಟದಲ್ಲಿ ಬೇರ, ಬೇರೆ ಕೆಲಸದ ಸಮಯವಿದೆ. ಈ ಕಾರಣಕ್ಕೆ ಒಂದು ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದರು.

Continue Reading
Advertisement
News
ದೇಶ49 mins ago

‘ಐಎಎಸ್‌’ ಗಂಡನ ಬಿಟ್ಟು, ಗ್ಯಾಂಗ್‌ಸ್ಟರ್‌ ಜತೆ ಓಡಿಹೋಗಿದ್ದ ಮಹಿಳೆ ಬಾಳು ಅಂತ್ಯ; ಪತಿ ಮನೆಗೆ ವಾಪಸಾಗಿ ಆತ್ಮಹತ್ಯೆ!

Mumbai Indians
ಕ್ರಿಕೆಟ್52 mins ago

Mumbai Indians : ಮುಂದಿನ ಐಪಿಎಲ್​ಗೆ ಮುಂಬೈ ತೊರೆಯಲಿದ್ದಾರೆ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್​

Abhinav Bindra
ಕ್ರೀಡೆ1 hour ago

Abhinav Bindra : ಭಾರತದ ಶೂಟರ್ ಅಭಿನವ್ ಬಿಂದ್ರಾಗೆ ‘ಒಲಿಂಪಿಕ್​ ಆರ್ಡರ್’ ಗೌರವ​

BJP strongly condemns MLA Shivaram Hebbar statement about MP Vishweshwar Hegde Kageri says hariprakash konemane
ಕರ್ನಾಟಕ2 hours ago

Uttara Kannada News: ಸಂಸದ ಕಾಗೇರಿ ಬಗ್ಗೆ ಶಾಸಕ ಹೆಬ್ಬಾರ್‌ ಕೀಳುಮಟ್ಟದ ಹೇಳಿಕೆಗೆ ಬಿಜೆಪಿ ತೀವ್ರ ಖಂಡನೆ

Chaluvadi Narayanaswamy
ಕರ್ನಾಟಕ3 hours ago

Chaluvadi Narayanaswamy : ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್​​ನ ಪ್ರತಿಪಕ್ಷದ ನಾಯಕ

NEET
ಕರ್ನಾಟಕ3 hours ago

NEET: ನೀಟ್‌ ಪರೀಕ್ಷೆಗೆ ವಿರೋಧ, ಬೆಂಗಳೂರು ವಿಭಜನೆಗೆ ಅಸ್ತು; ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

DK Shivakumar
ಕರ್ನಾಟಕ3 hours ago

DK Shivakumar: ರೈತನಿಗೆ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿ ಇತರೆಡೆ ಶೀಘ್ರ ವಸ್ತ್ರ ಸಂಹಿತೆ ಜಾರಿ ಎಂದ ಡಿಕೆಶಿ

Veerabaswanthreddy Mudnal
ಶ್ರದ್ಧಾಂಜಲಿ4 hours ago

Veerabaswanthreddy Mudnal: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

Rahat Fateh Ali Khan
ವಿದೇಶ4 hours ago

Rahat Fateh Ali Khan: ದುಬೈನಲ್ಲಿ ಪಾಕಿಸ್ತಾನದ ಗಾಯಕನ ಬಂಧನ; ಎಸಗಿದ ಕೃತ್ಯವೇನು?

Valmiki Corporation Scam
ಕರ್ನಾಟಕ4 hours ago

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ3 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌