BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ - Vistara News

ರಾಜಕೀಯ

BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

BJP Padayatra: ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯ ಬಳಿಕ ಮುಡಾ ಅಕ್ರಮ ಪ್ರಕರಣ ಯಾವ ಹಂತಕ್ಕೆ ಬರಲಿದೆ ಎಂದು ನೋಡಿಕೊಂಡು ಪಾದಯಾತ್ರೆ ನಡೆಸಲು ಬಿಜೆಪಿ ರಾಜ್ಯ ನಾಯಕರು ತೀರ್ಮಾನಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಪಾದಯಾತ್ರೆ (BJP Padayatra) ನಡೆಸಲು ನಿರ್ಧರಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ನಾಯಕರು ಒತ್ತಾಯಿಸಲಿದ್ದಾರೆ.

ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯ ಬಳಿಕ ಮುಡಾ ಅಕ್ರಮ ಪ್ರಕರಣ ಯಾವ ಹಂತಕ್ಕೆ ಬರಲಿದೆ ಎಂದು ನೋಡಿಕೊಂಡು ಪಾದಯಾತ್ರೆ ನಡೆಸಲು ಬಿಜೆಪಿ ರಾಜ್ಯ ನಾಯಕರು ತೀರ್ಮಾನಿಸಿದ್ದು, ಒಂದು ವೇಳೆ ಸಿಎಂ ರಾಜೀನಾಮೆ ಕೊಡದಿದ್ದರೆ ಪಾದಯಾತ್ರೆ ಮೂಲಕ ಮೈಸೂರಿಗೆ ತೆರಳಿ ಸಿಎಂ ರಾಜೀನಾಮೆಗೆ ಆಗ್ರಹಿಸಲಿದ್ದಾರೆ.

ಅಧಿವೇಶನ ಬಳಿಕ ಜುಲೈ 29ರಂದು 120 ಕಿ.ಮೀ. ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಅಶೋಕ್‌, ಮಾಜಿ ಸಚಿವ ಸುನೀಲ್‌ ಕುಮಾರ್‌ ಸೇರಿ ವಿವಿಧ ನಾಯಕರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲು‌ ರಾಜ್ಯ ಬಿಜೆಪಿ ನಿರ್ಧರಿಸಿದೆ.

ಇದನ್ನೂ ಓದಿ | Union Budget 2024: ಬಜೆಟ್‌ನಲ್ಲಿ ಬಿಹಾರ, ಆಂಧ್ರಪ್ರದೇಶಕ್ಕೆ ಬಂಪರ್‌ ಕೊಡುಗೆ: ಇಲ್ಲಿದೆ ನಗೆಯುಕ್ಕಿಸುವ ಮೀಮ್ಸ್‌

ಇನ್ನು ಪಾದಯಾತ್ರೆ ವೇಳೆ ಬೆಂಗಳೂರು- ಮೈಸೂರು ಹೆದ್ದಾರಿ ಮೂಲಕ ಸಾಗದೆ, ಚನ್ನಪಟ್ಟಣ, ಮಂಡ್ಯ ಒಳರಸ್ತೆಯಲ್ಲಿ ಪಾದಯಾತ್ರೆ ಮೂಲಕ ತೆರಳಿ ಜನರ ಗಮನ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡುತ್ತಿದೆ.

ಇಡಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ದ್ವೇಷ ರಾಜಕೀಯವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದ ಸಿಎಂ

Minister Lakshmi Hebbalkar has alleged that the Central Government intention is to destabilize non BJP governments in the country
Minister Lakshmi Hebbalkar has alleged that the Central Government intention is to destabilize non BJP governments in the country

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿಗಳು, ಸಚಿವರ ಹೆಸರು ಹೇಳಲು ಇಡಿ ಅಧಿಕಾರಿಗಳು ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ (Congress Protest) ಕಾಂಗ್ರೆಸ್ ಶಾಸಕರು, ಸಚಿವರು ಮಂಗಳವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದು ಕಿಡಿಕಾರಿದರು.

ಸಂಸತ್‌ನಲ್ಲಿ ಪ್ರಸ್ತಾಪ ಮಾಡಲಾಗುವುದು

ಸಂಸತ್‌ನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದು, ಇಡಿ ದುರೂಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಪಕ್ಷದ ವರಿಷ್ಠರು ಕೂಡ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿಸಿದರು.

ಕಾನೂನು ಹೋರಾಟಕೆ ಸಿದ್ಧ

ನಾವು ಕೂಡ ಕಾನೂನಿನ ಪ್ರಕಾರ ಹೋರಾಟ ಮಾಡಲು ಸಿದ್ಧರಿದ್ದೇವೆ. ಇಡಿ, ಸಿಬಿಐ ಏನು ಮಾಡುತ್ತಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಎಸ್‌ಐಟಿ ತನಿಖೆ ಮುಗಿದಿದೆ. ಸದನದಿಂದ ಹೊರಗೆ ಹೋರಾಟ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.

ಇದನ್ನೂ ಓದಿ | Lakshmi Hebbalkar: ಇ.ಡಿ ಮೂಲಕ ಸಿದ್ದರಾಮಯ್ಯ ಹೆಸರು ಕೆಡಿಸಲು ಹುನ್ನಾರ; ಹೆಬ್ಬಾಳಕರ್ ಆರೋಪ

ತಪ್ಪಿತಸ್ಥರಿಗೆ ಶಿಕ್ಷೆ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣೆ ಮಾಡುವುದಿಲ್ಲ. ನಾವು ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಘೋಷಿಸಿದ್ದಾರೆ. ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

ahoratri dharani until the guilts are punished says Opposition party Leader R Ashok
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು. ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ತಿಳಿಸಿದರು.

ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೂಟಿಯಾದ ಹಣ ಮರಳಿ ಸರ್ಕಾರದ ಖಜಾನೆಗೆ ಬರಬೇಕು. ಇದಕ್ಕಾಗಿ ಹಗಲು ರಾತ್ರಿ ಧರಣಿ ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡುತ್ತೇವೆ. ರಾತ್ರಿ ಧರಣಿ ಮಾಡುವವರಿಗೆ ಊಟ ಬೇಕಾ ಎಂದು ಸ್ಪೀಕರ್ ಕೇಳಿದ್ದಾರೆ. ಮಾತನಾಡಲು ಅವಕಾಶ ನೀಡದವರ ಊಟ, ದಲಿತರ ಹಣ ಕೊಳ್ಳೆ ಹೊಡೆದವರ ಊಟ ಬೇಡ ಎಂದು ತಿರಸ್ಕಾರ ಮಾಡಿದ್ದೇವೆ. ರಾತ್ರಿ ಪೂರ್ತಿ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಧರಣಿ ಮಾಡುತ್ತೇವೆ. ನಾಳೆ ಕೂಡ ಧರಣಿ ಮುಂದುವರಿಯಲಿದೆ. ಎರಡೂ ಹಗರಣಗಳಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಧರಣಿ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Paris Olympics: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ದೊಡ್ಡ ಹಗರಣ ನಡೆದಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬ 14 ಸೈಟು ಹಾಗೂ ಅವರ ಬೆಂಬಲಿಗರು ನೂರಾರು ಸೈಟು ಕೊಳ್ಳೆ ಹೊಡೆದಿದ್ದಾರೆ. ಮುಡಾದಲ್ಲಿ 1 ಲಕ್ಷಕ್ಕೂ ಅಧಿಕ ಚದರಡಿಯ ಹಾಗೂ 3-4 ಸಾವಿರ ಕೋಟಿ ರೂ. ಬೆಲೆಯ ಪ್ರಮುಖ ನಿವೇಶನಗಳನ್ನು ಲೂಟಿ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಕಾಯಲಿ ಎಂದು ಜನರು ಅಧಿಕಾರ ಕೊಟ್ಟರೆ ಆ ವ್ಯಕ್ತಿ ಸ್ವಜನಪಕ್ಷಪಾತದಿಂದ ನಿವೇಶನಗಳನ್ನು ತನ್ನ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಕೂಡ ಮುಖ್ಯಮಂತ್ರಿಯ ಹೆಗಲಿಗೆ ಬರುವ ಲಕ್ಷಣ ಕಂಡುಬಂದಿದೆ. ಮುಡಾದಲ್ಲಿ ದಲಿತರ ಜಮೀನು ಲೂಟಿ ಮಾಡಿದರೆ, ನಿಗಮದಲ್ಲಿ ದಲಿತರ ಹಣ ಲೂಟಿಯಾಗಿದೆ. ಜತೆಗೆ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ತಾವೇನೂ ಅಕ್ರಮ ಮಾಡಿಲ್ಲವೆಂದರೆ ಅಧಿವೇಶನದಲ್ಲಿ ಚರ್ಚಿಸಲು ಭಯ ಏಕೆ? ಇಡೀ ಕಾಂಗ್ರೆಸ್ ತಂಡ ಸದನದಲ್ಲಿ ಉತ್ತರಿಸಲು ಸಾಧ್ಯವಾಗದೆ ಓಡುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Health Tips Kannada: ನಿಂತ ಮಳೆ ನೀರಿನಿಂದ ಈ 7 ರೋಗಗಳು ಬರುತ್ತವೆ ಎನ್ನುವುದು ನಿಮಗೆ ಗೊತ್ತೆ?

ಹಗರಣದ ತನಿಖೆಗೆ ನ್ಯಾಯಮೂರ್ತಿಗಳ ನೇತೃತ್ವದ ತಂಡ ರಚಿಸಲಾಗಿದೆ. ಆದರೆ ಮುಖ್ಯಮಂತ್ರಿಯೇ ತನಿಖೆಗೆ ಆದೇಶ ಮಾಡಿದರೆ ನ್ಯಾಯ ಹೇಗೆ ಸಿಗಲಿದೆ? ಸ್ಪೀಕರ್ ಕೂಡ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಭೋವಿ ನಿಗಮದ ಹಗರಣ ಚರ್ಚಿಸಲು ಅವಕಾಶ ನೀಡುತ್ತಾರೆ, ಆದರೆ ವಾಲ್ಮೀಕಿ ನಿಗಮದ ಹಗರಣ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಸ್ಪೀಕರ್ ನಡೆ ಕೂಡ ಪ್ರಶ್ನಾರ್ಹವಾಗಿದೆ ಎಂದು ಆರೋಪಿಸಿದರು.

Continue Reading

ಕರ್ನಾಟಕ

DK Shivakumar: ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ. ಶಿವಕುಮಾರ್

DK Shivakumar: ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್‌ನಲ್ಲಿ ಸರಿಯಾದ ಪ್ರಾತಿನಿಧ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ? ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್‌ನಲ್ಲಿ ಸರಿಯಾದ ಪ್ರಾತಿನಿಧ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೇಂದ್ರದ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, ಈ ವಿಚಾರದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ. ನಾನು ಯಾವುದನ್ನೂ ಆತುರದಲ್ಲಿ ಮಾಡುವುದಿಲ್ಲ. ನಾನು ವಿಧೇಯಕ ಮಂಡನೆ ಮಾಡಿದ್ದೇನೆ. ಅವರು ಅದನ್ನು ಸಂಪೂರ್ಣವಾಗಿ ಪರಾಮರ್ಶಿಸಿ ಚರ್ಚೆ ಮಾಡಲಿ. ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದ್ದು, 1.40 ಕೋಟಿ ಜನಸಂಖ್ಯೆ ಇದೆ. ಉತ್ತಮ ಆಡಳಿತದ ಅಗತ್ಯವಿದೆ. ಇಲ್ಲಿ 7 ಸಿಎಂಸಿಗಳಿವೆ. ಮೂಲಸೌಕರ್ಯ ಹಾಗೂ ಆರ್ಥಿಕ ವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡಬೇಕು. ಈ ಬಗ್ಗೆ ವಿರೋಧ ಪಕ್ಷಗಳು ಚರ್ಚೆ ಮಾಡಲಿ. ಅದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ | Assembly Session 2024: ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ಖಾತರಿ; ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಕೇಳಲು ದರ್ಶನ್‌ ಪತ್ನಿ ಬಂದಿದ್ರು: ಡಿಸಿಎಂ ಡಿಕೆಶಿ

DK Shivakumar
DK Shivakumar

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದರು. ದರ್ಶನ್, ವಿಜಯಲಕ್ಷ್ಮೀ ಪುತ್ರ ಈ ಮೊದಲು ನಮ್ಮ ಶಾಲೆಯಲ್ಲಿ ಓದುತ್ತಿದ್ದರು. ಕಾರಣಾಂತರಗಳಿಂದ ನಮ್ಮ ಶಾಲೆ ತೊರೆದು ಬೇರೆ ಶಾಲೆ ಸೇರಿದ್ದರು. ಈಗ ಮತ್ತೆ ಮರಳಿ ನಮ್ಮ ಶಾಲೆಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಲು ಬಂದಿದ್ದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

ಸದಾಶಿವನಗರದ ನಿವಾಸಕ್ಕೆ ವಿಜಯಲಕ್ಷ್ಮಿ ಅವರು ಬಂದ ಕಾರಣ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಶಾಲೆಯ ಪ್ರಾಂಶುಪಾಲರು ಪ್ರವೇಶ ಅವಕಾಶ ನಿರಾಕರಿಸಿದ್ದರಿಂದ ನನ್ನ ಬಳಿ ಸೀಟು ಕೇಳಲು ವಿಜಯಲಕ್ಷ್ಮೀ ಬಂದಿದ್ದರು. ಶಾಲೆಯ ದಾಖಲಾತಿಗೆ ಒಂದಷ್ಟು ನಿಯಮಾವಳಿಗಳಿವೆ. ನಾನು ಶಾಲೆಗೆ ಅಷ್ಟಾಗಿ ಭೇಟಿ ನೀಡುತ್ತಿಲ್ಲ. ಶಾಲೆಯ ಆಡಳಿತ ಜವಾಬ್ದಾರಿಯನ್ನು ಸಂಪೂರ್ಣವಾಗಿ ಮಕ್ಕಳಿಗೆ ವಹಿಸಿದ್ದೇನೆ. ವಿಜಯಲಕ್ಷ್ಮಿ ಅವರು ಮಗನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು ಆ ಮಗುವಿಗೆ ಒಳ್ಳೆಯದಾಗಲಿ ಎಂದು ಪ್ರಾಂಶುಪಾರನ್ನು ಭೇಟಿ ಮಾಡಲು ಹೇಳಿದ್ದೇನೆ ಎಂದರು.

ವಿಜಯಲಕ್ಷ್ಮಿ ಅವರು ನೆರವು ಕೇಳಿದರೆ ಸಹಾಯ ಮಾಡುವಿರಾ ಎಂದಾಗ, ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ನನ್ನ ಭೇಟಿ ಮಾಡಲು ಬಂದವರನ್ನು ಬೇಡ ಎಂದು ಹೇಗೆ ನಿರಾಕರಣೆ ಮಾಡಲಿ? ಅಲ್ಲದೇ ನಮ್ಮ ಶಾಲೆಯ ಪಕ್ಕದಲ್ಲೇ ಅವರ ಮನೆಯಿದೆ. ನಮ್ಮ ಲೋಕಸಭಾ ಕ್ಷೇತ್ರದಲ್ಲೇ ಅವರ ಮನೆಯಿದೆ. ನನ್ನನ್ನು ಭೇಟಿ ಮಾಡಲು ನೂರಾರು ಜನ ಬಂದಿದ್ದಾರೆ. ನೀವು (ಮಾಧ್ಯಮದವರು) ಕೂಡ ಬಂದಿದ್ದೀರಿ. ನಿಮ್ಮ ಭೇಟಿಗೆ ನಿರಾಕರಿಸಿದರೆ ಡಿ.ಕೆ. ಶಿವಕುಮಾರ್ ದುರಹಂಕಾರಿ, ಭೇಟಿ ಮಾಡದೆ ತೆರಳಿದರು ಎನ್ನುತ್ತೀರಿ. ಸಾರ್ವಜನಿಕ ಜೀವನದಲ್ಲಿ ಇದ್ದಾಗ ಸಹಾಯ ಕೇಳಿಕೊಂಡು ನನ್ನನ್ನು ಭೇಟಿ ಮಾಡಲು ಬಂದರೆ ಅವರನ್ನು ಭೇಟಿ ಮಾಡಬೇಕಾಗುತ್ತದೆ. ಅದು ನನ್ನ ಕರ್ತವ್ಯ ಕೂಡ ಎಂದು ಹೇಳಿದರು.

ಇದನ್ನೂ ಓದಿ | Actor Darshan: ತಿರುಪತಿ ತಿಮ್ಮಪ್ಪನ `ದರ್ಶನ’ ಸಿಗಬಹುದು ಆದರೆ ʻಡಿ ಬಾಸ್‌ʼ ಭೇಟಿಗೆ ಅವಕಾಶ ಸಿಗುತ್ತಿಲ್ಲ ಎಂದ ನಟ!

ಆ ಹೆಣ್ಣುಮಗಳಿಗೆ ತನ್ನ ಮಗನ ಶಿಕ್ಷಣದ ಬಗ್ಗೆ ಕಾಳಜಿಯಿದೆ. ಎಲ್ಲಾ ಮಕ್ಕಳು ಒಂದೇ ಅಲ್ಲವೇ? ಅವರಿಗೆ ಮಗನ ಶಿಕ್ಷಣದ ಬಗ್ಗೆ ಇರುವ ಕಾಳಜಿ ನೋಡಿ ಬಹಳ ಸಂತೋಷವಾಯಿತು. ಬೇರೆ ಶಾಲೆಗೆ ಸೇರಿಸಿದರೆ ಮಾನಸಿಕವಾಗಿ ತೊಂದರೆಯಾಗಬಹುದು. ನಮ್ಮ ಶಾಲೆಗೆ ಸೇರಿಸಿದರೆ ಹತ್ತಿರದಲ್ಲೇ ಇರುವುದರಿಂದ ಹೋಗಿ ಬರಲು ಅನುಕೂಲ ಆಗುತ್ತದೆ. ಈ ಹಿಂದೆ ಪೋಷಕರ ಸಭೆಗೆ ಅವರನ್ನು ಕರೆಸಲಾಗಿತ್ತು. ಆ ವೇಳೆ ದರ್ಶನ್ ಕೂಡ ಬಂದಿದ್ದರು ಎಂದರು.

Continue Reading

ಕರ್ನಾಟಕ

DK Shivakumar: ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಕೇಳಲು ದರ್ಶನ್‌ ಪತ್ನಿ ಬಂದಿದ್ರು: ಡಿಸಿಎಂ ಡಿಕೆಶಿ

DK Shivakumar: ಬೆಂಗಳೂರಿನ ಸದಾಶಿವನಗರದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದರು. ಮಗನ ಶಾಲೆ ಪ್ರವೇಶಾತಿ ಬಗ್ಗೆ ಮಾತುಕತೆ ನಡೆಸಲು ವಿಜಯಲಕ್ಷ್ಮೀ ಅಗಮಿಸಿದ್ದರು. ಪ್ರಾಂಶುಪಾರನ್ನು ಭೇಟಿ ಮಾಡಲು ಹೇಳಿದ್ದೇನೆ. ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ನನ್ನ ಭೇಟಿ ಮಾಡಲು ಬಂದವರನ್ನು ಬೇಡ ಎಂದು ಹೇಗೆ ನಿರಾಕರಣೆ ಮಾಡಲಿ? ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದರು. ದರ್ಶನ್, ವಿಜಯಲಕ್ಷ್ಮೀ ಪುತ್ರ ಈ ಮೊದಲು ನಮ್ಮ ಶಾಲೆಯಲ್ಲಿ ಓದುತ್ತಿದ್ದರು. ಕಾರಣಾಂತರಗಳಿಂದ ನಮ್ಮ ಶಾಲೆ ತೊರೆದು ಬೇರೆ ಶಾಲೆ ಸೇರಿದ್ದರು. ಈಗ ಮತ್ತೆ ಮರಳಿ ನಮ್ಮ ಶಾಲೆಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಲು ಬಂದಿದ್ದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

ಸದಾಶಿವನಗರದ ನಿವಾಸಕ್ಕೆ ವಿಜಯಲಕ್ಷ್ಮಿ ಅವರು ಬಂದ ಕಾರಣ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಶಾಲೆಯ ಪ್ರಾಂಶುಪಾಲರು ಪ್ರವೇಶ ಅವಕಾಶ ನಿರಾಕರಿಸಿದ್ದರಿಂದ ನನ್ನ ಬಳಿ ಸೀಟು ಕೇಳಲು ವಿಜಯಲಕ್ಷ್ಮೀ ಬಂದಿದ್ದರು. ಶಾಲೆಯ ದಾಖಲಾತಿಗೆ ಒಂದಷ್ಟು ನಿಯಮಾವಳಿಗಳಿವೆ. ನಾನು ಶಾಲೆಗೆ ಅಷ್ಟಾಗಿ ಭೇಟಿ ನೀಡುತ್ತಿಲ್ಲ. ಶಾಲೆಯ ಆಡಳಿತ ಜವಾಬ್ದಾರಿಯನ್ನು ಸಂಪೂರ್ಣವಾಗಿ ಮಕ್ಕಳಿಗೆ ವಹಿಸಿದ್ದೇನೆ. ವಿಜಯಲಕ್ಷ್ಮಿ ಅವರು ಮಗನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು ಆ ಮಗುವಿಗೆ ಒಳ್ಳೆಯದಾಗಲಿ ಎಂದು ಪ್ರಾಂಶುಪಾರನ್ನು ಭೇಟಿ ಮಾಡಲು ಹೇಳಿದ್ದೇನೆ ಎಂದರು.

ವಿಜಯಲಕ್ಷ್ಮಿ ಅವರು ನೆರವು ಕೇಳಿದರೆ ಸಹಾಯ ಮಾಡುವಿರಾ ಎಂದಾಗ, ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ನನ್ನ ಭೇಟಿ ಮಾಡಲು ಬಂದವರನ್ನು ಬೇಡ ಎಂದು ಹೇಗೆ ನಿರಾಕರಣೆ ಮಾಡಲಿ? ಅಲ್ಲದೇ ನಮ್ಮ ಶಾಲೆಯ ಪಕ್ಕದಲ್ಲೇ ಅವರ ಮನೆಯಿದೆ. ನಮ್ಮ ಲೋಕಸಭಾ ಕ್ಷೇತ್ರದಲ್ಲೇ ಅವರ ಮನೆಯಿದೆ. ನನ್ನನ್ನು ಭೇಟಿ ಮಾಡಲು ನೂರಾರು ಜನ ಬಂದಿದ್ದಾರೆ. ನೀವು (ಮಾಧ್ಯಮದವರು) ಕೂಡ ಬಂದಿದ್ದೀರಿ. ನಿಮ್ಮ ಭೇಟಿಗೆ ನಿರಾಕರಿಸಿದರೆ ಡಿ.ಕೆ. ಶಿವಕುಮಾರ್ ದುರಹಂಕಾರಿ, ಭೇಟಿ ಮಾಡದೆ ತೆರಳಿದರು ಎನ್ನುತ್ತೀರಿ. ಸಾರ್ವಜನಿಕ ಜೀವನದಲ್ಲಿ ಇದ್ದಾಗ ಸಹಾಯ ಕೇಳಿಕೊಂಡು ನನ್ನನ್ನು ಭೇಟಿ ಮಾಡಲು ಬಂದರೆ ಅವರನ್ನು ಭೇಟಿ ಮಾಡಬೇಕಾಗುತ್ತದೆ. ಅದು ನನ್ನ ಕರ್ತವ್ಯ ಕೂಡ ಎಂದು ಹೇಳಿದರು.

ಇದನ್ನೂ ಓದಿ | Actor Darshan: ತಿರುಪತಿ ತಿಮ್ಮಪ್ಪನ `ದರ್ಶನ’ ಸಿಗಬಹುದು ಆದರೆ ʻಡಿ ಬಾಸ್‌ʼ ಭೇಟಿಗೆ ಅವಕಾಶ ಸಿಗುತ್ತಿಲ್ಲ ಎಂದ ನಟ!

ಆ ಹೆಣ್ಣುಮಗಳಿಗೆ ತನ್ನ ಮಗನ ಶಿಕ್ಷಣದ ಬಗ್ಗೆ ಕಾಳಜಿಯಿದೆ. ಎಲ್ಲಾ ಮಕ್ಕಳು ಒಂದೇ ಅಲ್ಲವೇ? ಅವರಿಗೆ ಮಗನ ಶಿಕ್ಷಣದ ಬಗ್ಗೆ ಇರುವ ಕಾಳಜಿ ನೋಡಿ ಬಹಳ ಸಂತೋಷವಾಯಿತು. ಬೇರೆ ಶಾಲೆಗೆ ಸೇರಿಸಿದರೆ ಮಾನಸಿಕವಾಗಿ ತೊಂದರೆಯಾಗಬಹುದು. ನಮ್ಮ ಶಾಲೆಗೆ ಸೇರಿಸಿದರೆ ಹತ್ತಿರದಲ್ಲೇ ಇರುವುದರಿಂದ ಹೋಗಿ ಬರಲು ಅನುಕೂಲ ಆಗುತ್ತದೆ. ಈ ಹಿಂದೆ ಪೋಷಕರ ಸಭೆಗೆ ಅವರನ್ನು ಕರೆಸಲಾಗಿತ್ತು. ಆ ವೇಳೆ ದರ್ಶನ್ ಕೂಡ ಬಂದಿದ್ದರು ಎಂದರು.

ಕಾನೂನು ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ

ನಟ ದರ್ಶನ್‌ಗೆ ಅನ್ಯಾಯ ಆಗಿದ್ದರೆ ನ್ಯಾಯ ಕೊಡಿಸಲಾಗುವುದು ಎಂದು ರಾಮನಗರದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಮಾಧ್ಯಮದವರು ಕೇಳಿದಾಗ, ನಿನ್ನೆ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ, ವಿಜಯಲಕ್ಷ್ಮೀ ಅವರು ನನ್ನನ್ನು ಭೇಟಿ ಮಾಡಲು ಬಂದಿದ್ದರು. ಎಲ್ಲೆಂದರಲ್ಲಿ ಭೇಟಿ ಮಾಡಲು ಸಾಧ್ಯವಿಲ್ಲ. ಮನೆಗೆ ಬಂದು ಭೇಟಿ ಮಾಡಿ ಎಂದು ಇಂದು ಬೆಳಗ್ಗೆ ಸಮಯಾವಕಾಶ ನೀಡಿದ್ದೆ. ಅವರು ನಿನ್ನೆ ಭೇಟಿಗೆ ಯತ್ನಿಸಿದಾಗ ಬಹುಶಃ ದರ್ಶನ್ ಪ್ರಕರಣದ ವಿಚಾರವಾಗಿ ಮಾತನಾಡಲು ಬರುತ್ತಾರೆ ಎಂದು ಭಾವಿಸಿದ್ದೆ ಎಂದರು.

ಮಂಗಳವಾರ ರಾತ್ರಿ ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಸಮಾರಂಭದಲ್ಲಿ ನೆರೆದಿದ್ದ ಯುವಕರು ದರ್ಶನ್ ಮೇಲಿನ ಅಭಿಮಾನದಿಂದ ನ್ಯಾಯ ಕೊಡಿಸಿ ಎಂದು ಗಲಾಟೆ ಮಾಡುತ್ತಿದ್ದರು. ಭಾಷಣ ಮಾಡಲು ಅವಕಾಶವೇ ನೀಡುತ್ತಿರಲಿಲ್ಲ. ನಮ್ಮ ಕ್ಷೇತ್ರದ ಹುಡುಗರು, ದರ್ಶನ್ ಅಭಿಮಾನಿಗಳು ಎಂದು ಕಾಣುತ್ತದೆ. ಬಾಸ್, ಬಾಸ್ ಎಂದು ಕೂಗುತ್ತಿದ್ದರು. ನಾನು ಯಾರಪ್ಪ ಬಾಸ್ ಎಂದು ನೋಡಿದಾಗ ದರ್ಶನ್ ಫೋಟೋ ಹಿಡಿದುಕೊಂಡಿದ್ದರು. ಆಗ ಅವರ ಸಮಾಧಾನಕ್ಕೆ ನ್ಯಾಯ ಕೊಡಿಸೋಣ ಎಂದು ಹೇಳಿದೆ ಎಂದು ತಿಳಿಸಿದರು.

ನಟ ದರ್ಶನ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೊಲೀಸ್ ತನಿಖೆ ನಡೆಯುತ್ತಿದೆ. ನಾವು ಯಾವುದೇ ಕಾರಣಕ್ಕೂ ಪೊಲೀಸ್ ವಿಚಾರಣೆ, ನ್ಯಾಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಮಾಡಲೂಬಾರದು. ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ನೀಡಲು ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಒಂದೇ. ಏನೂ ಬೇಕಾದರೂ ಆಗಬಹುದು ಎಂದರು.

ಅನ್ಯಾಯವಾಗಿದ್ದರೆ ನ್ಯಾಯ ಕೊಡಿಸಲಾಗುವುದು ಎನ್ನುವ ಹೇಳಿಕೆಯ ಬಗ್ಗೆ ಮತ್ತೆ ಕೇಳಿದಾಗ, ಒಂದೊಂದು ಮಾಧ್ಯಮಗಳಲ್ಲಿ ಒಂದೊಂದು ರೀತಿಯ ವರದಿ ಬರುತ್ತಿವೆ. ಮಾಧ್ಯಮಗಳಲ್ಲಿ ಬರುವ ವರದಿಗಳನ್ನು ಸಂಪೂರ್ಣವಾಗಿ ಗಮನಿಸಿಲ್ಲ, ನೋಡಲು ಸಮಯವೂ ಇಲ್ಲ. ಮಾಧ್ಯಮಗಳ ವರದಿಯ ಆಧಾರದ ಮೇಲೆ ತೀರ್ಮಾನಕ್ಕೆ ಬರಲು ಆಗುವುದಿಲ್ಲ. ನಾನು ಈ ಪ್ರಶ್ನೆಗೆ ಉತ್ತರ ನೀಡಲು ಗೃಹ ಸಚಿವನೂ ಅಲ್ಲ ಎಂದರು.

ಕಾಂಗ್ರೆಸ್ ಯಾರನ್ನೂ ಬಳಸಿಕೊಳ್ಳುವುದಿಲ್ಲ

ಇಡಿ ವಿರುದ್ಧ ದೂರು ನೀಡಿರುವ ಅಧಿಕಾರಿ ಕಲ್ಲೇಶ್ ಅವರು ಅಮಾನತ್ತು ಆಗಿದ್ದ ಅಧಿಕಾರಿ. ಅವರನ್ನು ಬಳಸಿಕೊಂಡು ಕಾಂಗ್ರೆಸ್ ದೂರು ನೀಡಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, ಕಾಂಗ್ರೆಸ್ ಪಕ್ಷ ಯಾರನ್ನೂ ಬಳಸಿಕೊಳ್ಳುವ ಅವಶ್ಯಕತೆಯಿಲ್ಲ. ಆತ ದೂರು ಕೊಟ್ಟಿದ್ದಾನೆ. ಎಫ್‌ಐಆರ್ ದಾಖಲಾಗಿದೆ, ಅದಕ್ಕೆ ನ್ಯಾಯಾಲಯ ತಡೆ ನೀಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದುಕೊಂಡೆ ಎಂದರು.

ಇದನ್ನೂ ಓದಿ | Actor Dhanush: ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆ ಹೋದ ನಟ ಧನುಷ್

ಕಲ್ಲೇಶ್ ಅವರ ಮೇಲೆ ಭ್ರಷ್ಟಾಚಾರದ ಆರೋಪದಿಂದ ಅಮಾನತು ಮಾಡಲಾಗಿತ್ತು ಎಂದಾಗ, ಆತ ತಪ್ಪು ಮಾಡಿದ್ದರೆ ಒಳಗೆ ಹಾಕುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ನಮ್ಮದು, ನಿಮ್ಮದು, ಬೇರೆಯವರದು ಬಿಚ್ಚಿಕೊಳ್ಳಲಿ

ಕಾಂಗ್ರೆಸ್ ಮತ್ತು ಬಿಜೆಪಿಯವರು ಶಾಮೀಲಾಗಿ ನಮ್ಮನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಜೈಲಿನಿಂದ ಹೊರಗಡೆ ಬಂದು ಎಲ್ಲಾ ಬಿಚ್ಚಿಡುತ್ತೇನೆ ಎನ್ನುವ ಜೆಡಿಎಸ್ ನಾಯಕ ಸೂರಜ್ ರೇವಣ್ಣ ಅವರ ಹೇಳಿಕೆಯ ಬಗ್ಗೆ ಕೇಳಿದಾಗ, ಅವರ ಹಕ್ಕನ್ನು ನಾವು ತಡೆಯಲು ಆಗುತ್ತದೆಯೇ? ನಿಮ್ಮದು, ನಮ್ಮದು, ಬೇರೆಯವರದು ಬಿಚ್ಚುವುದಿದ್ದರೇ ಬಿಚ್ಚಿಕೊಳ್ಳಲಿ ಎಂದು ತಿಳಿಸಿದರು.

Continue Reading

ದೇಶ

Parliament Session: ಸಂಸತ್‌ನಲ್ಲಿ ಬಜೆಟ್‌ ಕೋಲಾಹಲ; ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರು ವಾಕ್‌ಔಟ್‌

Parliament Session: ರಾಜ್ಯಸಭೆಯಲ್ಲಿ ಮಾತನಾಡಿದ ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge), ಸರ್ಕಾರ ಉಳಿಸಿಕೊಳ್ಳಲು ಮತ್ತು ಕೆಲವೇ ಕೆಲವು ಜನರನ್ನು ಸಂತೋಷವಾಗಿರಿಸಲು ಸರ್ಕಾರ ಬಜೆಟ್‌ ತಯಾರಿಸಿದೆ. ಕೇವಲ ಎರಡು ರಾಜ್ಯಗಳಿಗೆ ಅನುದಾನ ನೀಡಿ ಉಳಿದ ರಾಜ್ಯಗಳ ಬಗ್ಗೆ ತಾರತಮ್ಯ ತೋರಲಾಗಿದೆ. ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಇದು. ಇದನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.

VISTARANEWS.COM


on

union budget 2024
Koo

ಹೊಸದಿಲ್ಲಿ: ಕೇಂದ್ರ ಬಜೆಟ್‌ ಮಂಡನೆ(Union Budget 2024) ಆಗುತ್ತಿದ್ದಂತೆ ಈ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ(Parliament Session) ಶುರುವಾಗಿದೆ. ಇಂದು ರಾಜ್ಯಸಭೆಯಲ್ಲಿ ಬಜೆಟ್‌ ವಿಚಾರವಾಗಿ ಭಾರೀ ಕೋಲಾಹಲ ಸೃಷ್ಟಿಯಾಗಿದ್ದು, ಈ ಬಜೆಟ್‌ ಕೇವಲ ಮಿತ್ರ ಪಕ್ಷಗಳ ಓಲೈಕೆಗಾಗಿ ಮಂಡನೆ ಮಾಡಿರುವುದು ಎಂದು ಪ್ರತಿಪಕ್ಷಗಳು ಆರೋಪಿಸಿದರೆ, ಈ ಆರೋಪ ಸಂಪೂರ್ಣ ನಿರಾಧಾರ ಎಂದು ಸರ್ಕಾರ ಹೇಳಿದೆ.

ರಾಜ್ಯಸಭೆಯಲ್ಲಿ ಮಾತನಾಡಿದ ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge), ಸರ್ಕಾರ ಉಳಿಸಿಕೊಳ್ಳಲು ಮತ್ತು ಕೆಲವೇ ಕೆಲವು ಜನರನ್ನು ಸಂತೋಷವಾಗಿರಿಸಲು ಸರ್ಕಾರ ಬಜೆಟ್‌ ತಯಾರಿಸಿದೆ. ಕೇವಲ ಎರಡು ರಾಜ್ಯಗಳಿಗೆ ಅನುದಾನ ನೀಡಿ ಉಳಿದ ರಾಜ್ಯಗಳ ಬಗ್ಗೆ ತಾರತಮ್ಯ ತೋರಲಾಗಿದೆ. ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಇದು. ಇದನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.

ಬಿಜೆಪಿ ಹೊರತುಪಡಿಸಿ ಪ್ರತಿಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳನ್ನು ಕೇಂದ್ರ ಸರಕಾರ ನಿರ್ಲಕ್ಷಿಸಿದೆ. ಎಲ್ಲಾ ರಾಜ್ಯಗಳನ್ನು ಸಮತೋಲನದಲ್ಲಿ ನಡೆಸಿಕೊಂಡು ಹೋಗದೇ ಇದ್ದರೆ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಖರ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಪ್ರತಿಪಕ್ಷಗಳು ಸದನದಿಂದ ವಾಕ್‌ಔಟ್‌ ಮಾಡಿವೆ.

ಇನ್ನು ಪ್ರತಿಪಕ್ಷಗಳ ಆರೋಪಕ್ಕೆ ಉತ್ತರಿಸಿದ ಸಚಿವೆ ನಿರ್ಮಲಾ ಸೀತಾರಾಮನ್‌, ಇದು ಸಂಪೂರ್ಣವಾಗಿ ನಿರಾಧಾರವಾದ ಆರೋಪ. ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳನ್ನು ಸಮವಾಗಿ ಕಾಣುತ್ತದೆ. ಭಾಷಣದಲ್ಲಿ ಏನಾಗುತ್ತದೆ, ನಾವು ಪ್ರತಿ ರಾಜ್ಯಕ್ಕೂ ಅವಕಾಶವನ್ನು ಹೆಸರಿಸುವುದಿಲ್ಲ. ಕಾಂಗ್ರೆಸ್‌ ಅಧಿಕಾರದಲ್ಲಿದೆ ಎಂಬುದು ಅವರಿಗೆ ಗೊತ್ತಿರಬೇಕು. ಉದಾಹರಣೆಗೆ ಮಹಾರಾಷ್ಟ್ರವನ್ನು ಹೆಸರಿಸಲಾಗಿಲ್ಲ. ಆದರೆ ಸಂಪುಟವು ಮಹತ್ವದ ನಿರ್ಧಾರವನ್ನು ಅಂಗೀಕರಿಸಿದೆ, ಮಹಾರಾಷ್ಟ್ರವನ್ನು ಕಡೆಗಣಿಸಲಾಗಿದೆಯೇ … ₹ 75,000 ಕೋಟಿ ನೀಡಲಾಗಿದೆ ಎಂದರು.

ಭಾಷಣವು ಹೆಸರುಗಳನ್ನು ತೆಗೆದುಕೊಳ್ಳದಿದ್ದರೆ ಅದರರ್ಥ ಯೋಜನೆಗಳು ಮತ್ತು ಅನುದಾನ ಆ ರಾಜ್ಯಗಳಿಗೆ ಹೋಗುವುದಿಲ್ಲ ಎಂದರ್ಥವಲ್ಲ. ವಾಡಿಕೆಯಂತೆ ಯಾವ ರಾಜ್ಯಕ್ಕೆ ಎಷ್ಟು ಅನುದಾನ ನೀಡಬೇಕೋ ಅದು ಗಿಯೇ ಹೋಗುತ್ತದೆ. ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ಇದನ್ನು ಮುಚ್ಚಿಟ್ಟು, ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿವೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ವಾಡಿಕೆಯಂತೆ ಹೋಗುತ್ತಾರೆ, ಇಲಾಖೆವಾರು ಹಂಚಿಕೆ, ಐಟಂವಾರು ಅದನ್ನು ಉಲ್ಲೇಖಿಸುತ್ತದೆ. ಇದು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಉದ್ದೇಶಪೂರ್ವಕ ಪ್ರಯತ್ನವಾಗಿದ್ದು, ಏನನ್ನೂ ನೀಡಿಲ್ಲ ಎಂಬ ಭಾವನೆ ಮೂಡಿಸಲು,

ಈ ಬಜೆಟ್​ ಆಂಧ್ರಪ್ರದೇಶ ಹಾಗೂ ಬಿಹಾರ ಹೊರತುಪಡಿಸಿ ಬೇರೆ ರಾಜ್ಯಗಳಿಗೆ ಬಜೆಟ್‌ನಿಂದ ಯಾವುದೇ ಅನುಕೂಲ ಆಗಿಲ್ಲ ಎಂದು ಆರೋಪಿಸಿರುವ ವಿರೋಧ ಪಕ್ಷದ ಇಂಡಿಯಾ(INDIA) ಒಕ್ಕೂಟ ಇಂದು ಸಂಸತ್ತಿನ ಎದುರು ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ, ಕಾಂಗ್ರೆಸ್‌, ಟಿಎಂಸಿ, ಸಮಾಜವಾದಿ ಪಕ್ಷ, ಡಿಎಂಕೆ ಮತ್ತು ಎಡಪಕ್ಷಗಳ ನಾಯಕರು ಸಂಸತ್‌ನ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಇದನ್ನೂ ಓದಿ: Union Budget 2024: “ಮಿತ್ರಪಕ್ಷಗಳ ಓಲೈಕೆಗಾಗಿ ಬಜೆಟ್‌”- ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಕಿಡಿ, ಭಾರೀ ಪ್ರತಿಭಟನೆ

Continue Reading
Advertisement
Nitish Kumar
ದೇಶ24 mins ago

Nitish Kumar: ನೀನೂ ಹೆಣ್ಣು; ವಿಧಾನಸಭೆಯಲ್ಲೇ ಆರ್‌ಜೆಡಿ ಶಾಸಕಿಗೆ ನಿತೀಶ್‌ ಕುಮಾರ್‌ ಗದರಿದ್ದೇಕೆ?

Paris Olympics
ಕ್ರೀಡೆ39 mins ago

Paris Olympics: ಕೊಕೊ ಗಾಫ್ ಅಮೆರಿಕದ ಧ್ವಜಧಾರಿ; ಈ ಗೌರವ ಪಡೆದ ಅತಿ ಕಿರಿಯ ಕ್ರೀಡಾಪಟು

Anekal
ಕ್ರೈಂ2 hours ago

ಆನೇಕಲ್‌ನಲ್ಲಿ ಪುರಸಭೆ ಸದಸ್ಯನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ

Hardik Pandya
ಕ್ರೀಡೆ2 hours ago

Hardik Pandya: ವಿಚ್ಛೇದನ ನೀಡಿ ಒಂದು ವಾರ ಕಳೆಯುವ ಮುನ್ನವೇ ಮಾಜಿ ಪತ್ನಿಯ ಪೋಸ್ಟ್​ಗೆ ಲೈಕ್ಸ್​, ಕಮೆಂಟ್​ ಮಾಡಿದ ಹಾರ್ದಿಕ್​ ಪಾಂಡ್ಯ

King Chopper
ದೇಶ2 hours ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ2 hours ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು2 hours ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ2 hours ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು2 hours ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Asteria Aerospace has introduced a SkyDeck platform that helps in various fields including agriculture
ದೇಶ3 hours ago

SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌