Kuldeep Yadav: ಬಾಗೇಶ್ವರ್ ಬಾಬಾ ಆಶೀರ್ವಾದ ಪಡೆದ ಕುಲ್​ದೀಪ್​ ಯಾದವ್; ವಿಡಿಯೊ ವೈರಲ್​ - Vistara News

ಕ್ರಿಕೆಟ್

Kuldeep Yadav: ಬಾಗೇಶ್ವರ್ ಬಾಬಾ ಆಶೀರ್ವಾದ ಪಡೆದ ಕುಲ್​ದೀಪ್​ ಯಾದವ್; ವಿಡಿಯೊ ವೈರಲ್​

Kuldeep Yadav: ಗುರು ಪೂರ್ಣಿಮ ದಿನದಂದು ಕುಲ್​ದೀಪ್​ ಬಾಗೇಶ್ವರ್ ಧಾಮ್​ಗೆ ಭೇಟಿ ನೀಡಿದ್ದರು. ಕುಲ್​ದೀಪ್​ ಆಶ್ರಮದಲ್ಲಿ ಕೆಲ ಕಾಲ ಧ್ಯಾನ ಮಾಡಿರುವ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Kuldeep Yadav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಧ್ಯಪ್ರದೇಶ: ಟೀಮ್​ ಇಂಡಿಯಾದ ಸ್ಟಾರ್​ ಸ್ಪಿನ್ನರ್​ ಕುಲ್​ದೀಪ್​ ಯಾದವ್​ ಅವರು ಮಧ್ಯಪ್ರದೇಶದ ಛತ್ತರ್‌ಪುರ್(Chhatarpur) ಜಿಲ್ಲೆಯ ಬಾಗೇಶ್ವರ್ ಧಾಮ್ (Bageswhar Dham) ದೇಗುಲಕ್ಕೆ ಭೇಟಿ ನೀಡಿ ಪೀಠಾಧೀಶ್ವರ ಬಾಗೇಶ್ವರ್ ಬಾಬಾ(Baba Bageshwar) ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಕುಲ್​ದೀಪ್​ ಬೌಲಿಂಗ್​ ಫಾರ್ಮ್​ ಕಳೆದುಕೊಂಡು ಹಲವು ವರ್ಷ ಭಾರತ ತಂಡದಲ್ಲಿ ಅವಕಾಶ ವಂಚಿತರಾಗಿದ್ದ ವೇಳೆ ಬಾಗೇಶ್ವರ್ ಧಾಮ್ (Bageswhar Dham) ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೋಜೆ ಸಲ್ಲಿಸಿದ್ದರು. ಈ ವೇಳೆ ಬಾಗೇಶ್ವರ್ ಬಾಬಾ ಕುಲ್​ದೀಪ್​ ಯಾದವ್ ಕೊರಳಿಗೆ ಹೂವಿನ ಹಾರ ಹಾಕುವ ಮೂಲಕ ಮತ್ತೆ ಭಾರತ ತಂಡದ ಪರ ಆಡಲಿದ್ದೀಯ ಎಂದು ಹಾರೈಸಿದ್ದರು. ಇದಾದ ಒಂದು ತಿಂಗಳ ಬಳಿಕ ಕುಲ್​ದೀಪ್​ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಏಕದಿನ ಸೇರಿ ಟಿ20 ವಿಶ್ವಕಪ್​ನಲ್ಲಿ ಪ್ರಧಾನ ಸ್ಪಿನ್ನರ್​ ಆಗಿ ಕಾಣಿಸಿಕೊಂಡಿದ್ದರು. ಅಂದಿನಿಂದ ಕುಲ್​ದೀಪ್​ ಬಾಗೇಶ್ವರ್ ಬಾಬಾ ಅವರ ಪರಮ ಭಕ್ತರಾಗಿದ್ದಾರೆ.

ಗುರು ಪೂರ್ಣಿಮ ದಿನದಂದು ಕುಲ್​ದೀಪ್​ ಬಾಗೇಶ್ವರ್ ಧಾಮ್​ಗೆ ಭೇಟಿ ನೀಡಿದ್ದರು. ಕುಲ್​ದೀಪ್​ ಆಶ್ರಮದಲ್ಲಿ ಕೆಲ ಕಾಲ ಧ್ಯಾನ ಮಾಡಿರುವ ವಿಡಿಯೊ ವೈರಲ್​ ಆಗಿದೆ. ಕೇವಲ 26 ವರ್ಷದ ಬಾಗೇಶ್ವರ್ ಬಾಬಾ ಅಲಿಯಾಸ್ ಶಾಸ್ತ್ರಿ ಅವರು ಸ್ವಯಂ ಘೋಷಿತ ದೇವಮಾನವ ಎನಿಸಿಕೊಂಡಿದ್ದಾರೆ. ಕಥಾ ಎಂಬ ಧಾರ್ಮಿಕ ಪ್ರವಚನ ನೀಡುವುದಕ್ಕಾಗಿ ಅವರು ದೇಶಾದ್ಯಂತ ಪ್ರವಾಸ ಕೈಗೊಳ್ಳುತ್ತಾರೆ. ಇತ್ತೀಚೆಗೆ, ಮಹಾರಾಷ್ಟ್ರ ಮೂಲದ ಮೂಢನಂಬಿಕೆ ವಿರೋಧಿ ಸಂಘಟನೆಯು ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ತಮಗಿರುವ ನಿಗೂಢ, ಪವಾಡ ಶಕ್ತಿಯನ್ನು ಪದರ್ಶಿಸುವಂತೆ ಸವಾಲು ಹಾಕಿದ್ದರು.

ಇದನ್ನೂ ಓದಿ Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

ಕಥಾ ವಿಡಿಯೋ ವೈರಲ್

ಬಾಗೇಶ್ವರ್ ಬಾಬಾ ನಡೆಸುವ ಕಥಾ ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. ಹೀಗೆ ವೈರಲ್ ಆದ ವಿಡಿಯೋವೊಂದರಲ್ಲಿ ಜನರ ಮಧ್ಯೆದಿಂದ ಪತ್ರಕರ್ತರೊಬ್ಬರನ್ನು ಬಾಬಾ ಕರೆಯುತ್ತಾರೆ. ಬಳಿಕ, ಅವರ ಕುಟುಂಬದ ಸದಸ್ಯರ ಮಾಹಿತಿಯನ್ನು ಹಂಚಿಕೊಳ್ಳುತ್ತಾರೆ. ಬಾಬಾಗೆ, ತಮ್ಮ ಕುಟುಂಬದ ಸಂಪೂರ್ಣ ಮಾಹಿತಿ ತಿಳಿದಿರುವುದು ಅಸಾಧಾರಣ ಕಾರ್ಯವೆಂದು ಆ ಪತ್ರಕರ್ತರು ಘೋಷಿಸುತ್ತಾರೆ. ಆದರೆ, ಈ ಪತ್ರಕರ್ತನ ಬಗ್ಗೆ ಬಾಬಾ ಹೇಳಿದ ಮಾಹಿತಿ ಎಲ್ಲವೂ ಸೋಷಿಯಲ್ ಮೀಡಿಯಾಗಳಲ್ಲಿದೆ ಎಂದು ಜನರು ಹೇಳಿಕೊಂಡಿದ್ದಾರೆ.

ಬಿಜೆಪಿ ನಾಯಕರ ಬೆಂಬಲ

ಬಾಗೇಶ್ವರ್ ಬಾಬಾ ಅವರಿಗೆ ಬಿಜೆಪಿಯ ಅನೇಕ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಪಕ್ಷದ ಹಿರಿಯ ನಾಯಕ ಕೈಲಾಶ್ ವಿಜಯವರ್ಗೀಯ ಅವರು ಬಹಿರಂವಾಗಿಯೇ ಬಾಬಾ ಅವರನ್ನು ಬೆಂಬಲಿಸಿದ್ದಾರೆ. ದ್ವೇಷ ಭಾಷಣದಿಂದಲೇ ಕುಖ್ಯಾತಿ ಗಳಿಸಿರುವ ಬಿಜೆಪಿಯ ಮತ್ತೊಬ್ಬ ನಾಯಕ ಕಪಿಲ್ ಮಿಶ್ರಾ ಅವರು, ಶಾಸ್ತ್ರಿ ಪರವಾಗಿ ದಿಲ್ಲಿಯಲ್ಲಿ ರ್ಯಾಲಿಯನ್ನು ನಡೆಸಿದ್ದಾರೆ. ಬಾಬಾ ಅವರು ಲವ್ ಜಿಹಾದ್ ವಿರುದ್ಧ ಮಾತನಾಡಿದ್ದಕ್ಕಾಗಿ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಯಾರು ಬಾಬಾ

ಬಾಗೇಶ್ವರ್ ಬಾಬಾ ಅವರು ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿರುವ ಬಾಗೇಶ್ವರ್ ಧಾಮ್ ಕ್ಷೇತ್ರದ ಧಾರ್ಮಿಕ ಮುಖಂಡರಾಗಿದ್ದಾರೆ. ಇವರ ಪೂರ್ತಿ ಹೆಸರು ಧೀರೇಂದ್ರ ಕೃಷ್ಣ ಶಾಸ್ತ್ರಿ. ಇವರು ಬಾಗೇಶ್ವರ ಬಾಬಾ ಎಂದೇ ಖ್ಯಾತರಾಗಿದ್ದಾರೆ. ಅವರ ಬೋಧಿಸುವ ಕಥಾಗಳು ಲಕ್ಷಾಂತರ ಭಕ್ತರನ್ನು ಸೆಳೆಯುತ್ತಿವೆ. ಜತೆಗೆ, ಪವಾಡಗಳನ್ನು ಮಾಡುತ್ತಿದ್ದಾರೆ. ಇದರಿಂದ ಸಾಕಷ್ಟು ಜನರು ಆಕರ್ಷಿತರಾಗುತ್ತಿದ್ದಾರೆ. ಆದರೆ, ಪವಾಡಗಳ ಮೂಲಕ ಇವರು ಜನರಲ್ಲಿ ಮೂಢನಂಬಿಕೆಗಳನ್ನು ಬಿತ್ತುತ್ತಿದ್ದಾರೆಂಬ ಆರೋಪವೂ ಕೇಳಿ ಬಂದಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರಮುಖ ಬೇಡಿಕೆ ಮುಂದಿಟ್ಟ ಫ್ರಾಂಚೈಸಿಗಳು

IPL 2025: ಪ್ರತಿ ತಂಡ 3-4 ಆಟಗಾರರನ್ನು ಮಾತ್ರ ರಿಟೇನ್​ ಮಾಡಿಕೊಳ್ಳಲು ಮಾತ್ರ ಅವಕಾಶ ಲಭಿಸಲಿದೆ ಎಂದು ಹೇಳಲಾಗಿತ್ತು. ಇದೀಗ ಎಲ್ಲ ಫ್ರಾಂಚೈಸಿಗಳು 8 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಅನುಮತಿ ನೀಡುವಂತೆ ಬಿಸಿಸಿಐ ಮತ್ತು ಐಪಿಎಲ್​ ಆಡಳಿತ ಮಂಡಳಿಗೆ ಬೇಡಿಕೆ ಇರಿಸಿದೆ ಎನ್ನಲಾಗಿದೆ.

VISTARANEWS.COM


on

IPL 2025
Koo

ಮುಂಬಯಿ: ಮುಂದಿನ ವರ್ಷದ ಐಪಿಎಲ್(IPL 2025)​ 18ನೇ ಆವೃತ್ತಿಗೆ ಮುನ್ನ ಆಟಗಾರರ ಮೆಗಾ ಹರಾಜು(IPL 2025 Mega Auction) ಪ್ರಕ್ರಿಯೆ ನಡೆಯಲಿದೆ ಎಂದು ಈಗಾಗಲೇ ಐಪಿಎಲ್​ ಮುಖ್ಯಸ್ಥ ಅರುಣ್​ ಧುಮಾಲ್(Arun Dhumal) ಖಚಿತಪಡಿಸಿದ್ದಾರೆ. ಹಲವು ಸ್ಟಾರ್​ ಆಟಗಾರರು ಕೂಡ ಈ ಬಾರಿ ಹರಾಜಿಗೆ ತಮ್ಮನ್ನು ಬಿಟ್ಟುಕೊಡಬೇಕೆಂದು ಮೂಲ ತಂಡಗಳಿಗೆ ಮನವಿಯನ್ನೂ ಕೂಡ ಮಾಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಫ್ರಾಂಚೈಸಿಗಳು ಬಿಸಿಸಿಐ(BCCI)ಗೆ ಕೆಲ ವಿಶೇಷ ಬೇಡಿಕೆಗಳನ್ನು ಇರಿಸಿದೆ ಎಂದು ವರದಿಯಾಗಿದೆ.

ಪ್ರತಿ ತಂಡ 3-4 ಆಟಗಾರರನ್ನು ಮಾತ್ರ ರಿಟೇನ್​ ಮಾಡಿಕೊಳ್ಳಲು ಮಾತ್ರ ಅವಕಾಶ ಲಭಿಸಲಿದೆ ಎಂದು ಹೇಳಲಾಗಿತ್ತು. ಇದೀಗ ಎಲ್ಲ ಫ್ರಾಂಚೈಸಿಗಳು 8 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಅನುಮತಿ ನೀಡುವಂತೆ ಬಿಸಿಸಿಐ ಮತ್ತು ಐಪಿಎಲ್​ ಆಡಳಿತ ಮಂಡಳಿಗೆ ಬೇಡಿಕೆ ಇರಿಸಿದೆ ಎನ್ನಲಾಗಿದೆ.

ಇದು ಮಾತ್ರವಲ್ಲದೆ ಮೆಗಾ ಹರಾಜಿನಲ್ಲಿ ಮತ್ತೊಮ್ಮೆ RTM(ರೈಟ್ ಟು ಮ್ಯಾಚ್ ಕಾರ್ಡ್ ಬಳಕೆ) ಕಾರ್ಡ್ ಬಳಸುವ ಬಗ್ಗೆಯೂ ಫ್ರಾಂಚೈಸಿ ಡಿಮ್ಯಾಂಡ್ ಮಾಡಲಿದೆ. 2018ರ ಮೆಗಾ ಹರಾಜಿನಲ್ಲಿ RTMಗೆ ಅವಕಾಶವಿತ್ತು. ಆದರೆ 2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಇದನ್ನು ಕೈಬಿಡಲಾಗಿತ್ತು, ಇದೀಗ ಮತ್ತೆ ಈ ನಿಯವನ್ನು ಜಾರಿಗೆ ತರಲು ಫ್ರಾಂಚೈಸಿಗಳು ಒಳವು ತೋರಿದೆ ಎನ್ನಲಾಗಿದೆ.

ಏನಿದು ಆರ್​ಟಿಎಂ ಕಾರ್ಡ್​?


ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

5 ವರ್ಷಗಳಿಗೊಮ್ಮೆ ಮೆಗಾ ಹರಾಜು?

ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ. ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ. ಈ ತಿಂಗಳಾಂತ್ಯದಲ್ಲಿ ಐಪಿಎಲ್ ಮಾಲೀಕರೊಂದಿಗೆ ಬಿಸಿಸಿಐ ಸಭೆ ನಡೆಸಿ ಮೆಗಾ ಹರಾಜಿನ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ IPL 2025: ಆರ್​ಸಿಬಿ ಸೇರಲಿದ್ದಾರೆ ಹಿಟ್​ಮ್ಯಾನ್​ ರೋಹಿತ್​ ಶರ್ಮ!

ಏನಿದು ಆರ್​ಟಿಎಂ ಕಾರ್ಡ್​?


ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

ಇಂಪ್ಯಾಕ್ಟ್​ ನಿಯಮ ಕೈಬಿಡುವ ಸಾಧ್ಯತೆ!


ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ. ಧೋನಿ ಅವರು ಇಂಪ್ಯಾಕ್ಟ್​ ನಿಯಮ ಇಲ್ಲವಾದರೆ ಮುಂದಿನ ಆವೃತ್ತಿ ಆಡುವುದು ಅನುಮಾನ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಹೇಳಿದ್ದರು. ಒಂದೊಮ್ಮೆ ಈ ನಿಯಮ ಕೈಬಿಟ್ಟರೆ ಆಗ ಧೋನಿ ಆಡುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡುವುದು ಸಹಜ.

Continue Reading

ಕ್ರೀಡೆ

Hardik Pandya: ವಿಚ್ಛೇದನ ನೀಡಿ ಒಂದು ವಾರ ಕಳೆಯುವ ಮುನ್ನವೇ ಮಾಜಿ ಪತ್ನಿಯ ಪೋಸ್ಟ್​ಗೆ ಲೈಕ್ಸ್​, ಕಮೆಂಟ್​ ಮಾಡಿದ ಹಾರ್ದಿಕ್​ ಪಾಂಡ್ಯ

Hardik Pandya:

VISTARANEWS.COM


on

Hardik Pandya
Koo

ಮುಂಬಯಿ: ಕಳೆದ ವಾರವಷ್ಟೇ ಕ್ರಿಕೆಟಿಗ ಹಾರ್ದಿಕ್​ ಪಾಂಡ್ಯ(Hardik Pandya) ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡುವ ಮೂಲಕ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದರು. ಇದೀಗ ಈ ಘಟನೆ ಸಂಭವಿಸಿ ಒಂದು ವಾರ ವಾರ ಕಳೆಯುವ ಮುನ್ನವೇ ಪಾಂಡ್ಯ ತಮ್ಮ ಮಾಜಿ ಪತ್ನಿಯ ಇನ್​ಸ್ಟಾಗ್ರಾಮ್​ ಪೋಸ್ಟ್​ಗೆ ಲೈಕ್​ ಮತ್ತು ಕಮೆಂಟ್​ ಮಾಡಿದ್ದಾರೆ. ಪಾಂಡ್ಯ ಎಮೊಜಿ ಮೂಲಕ ಪ್ರತಿಕ್ರಿಯಿಸಿದ ಪೋಸ್ಟ್​ನ ಫೋಟೋ ವೈರಲ್​ ಆಗಿದೆ.

ನತಾಶಾ ಸ್ಟಾಂಕೋವಿಕ್ ತಮ್ಮ ಮಗನೊಂದಿಗೆ ಲಂಡನ್​ನಲ್ಲಿರುವ ಡೈನೋಸಾರ್‌ ಮಾದರಿಯ ವಿಲಕ್ಷಣ ಹಕ್ಕಿಯ ಪಳಯುಳಿಕೆ ಇರುವಂತಹ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದ ಹಲವು ಫೋಟೊಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗೆ ಹಾರ್ದಿಕ್​ ಪಾಂಡ್ಯ ಸೂಪರ್​ ಮತ್ತು ಲವ್​ ಎಮೊಜಿಯ ಮೂಲಕ ಪ್ರತಿಕ್ರಿಯಿಸಿದ್ದಾರೆ. ಇದನ್ನು ನೆಟ್ಟಿಗರು ಸ್ಕ್ರೀನ್​ ಶಾರ್ಟ್​ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಮಾಡಿದ್ದಾರೆ. ಇಷ್ಟು ಆತ್ಮೀಯವಾಗಿರುವ ನೀವು ಯಾಕೆ ವಿಚ್ಛೇದನ ಪಡೆದು ಮಗನಿಂದ ತಂದೆ ತಾಯಿಯ ಪ್ರೀತಿಯನ್ನು ಕಸಿದುಕೊಂಡಿದ್ದೀರಾ? ಎಂದು ಕೆಲವರು ಕಮೆಂಟ್ ಮೂಲಕ ಪ್ರಶ್ನೆ​ ಮಾಡಿದ್ದಾರೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ Hardik Pandya: ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡಿದವರಿಗೆ ಸಿಕ್ಸ್​ ಪ್ಯಾಕ್​ ಮೂಲಕ ತಿರುಗೇಟು ಕೊಟ್ಟ ಹಾರ್ದಿಕ್​ ಪಾಂಡ್ಯ

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ವಿಚ್ಛೇದನ ಪಡೆದರೂ ಕೂಡ ಇಬ್ಬರೂ ಪುತ್ರ ಅಗಸ್ತ್ಯನನ್ನು(Agastya) ಸಹ-ಪೋಷಕರಾಗಿ ನೋಡಿಕೊಳ್ಳುತ್ತೇವೆ. ಅವನಿಗೆ ಯಾವುದೇ ಕಾರಣಕ್ಕೂ ಯಾವ ಕೊರತೆಯೂ ಆಗದಂತೆ ನಾವಿಬ್ಬರೂ ಸಮನಾಗಿ ಅವನ ಜವಾಬ್ದಾರಿ ಹಂಚಿಕೊಳ್ಳಲಿದ್ದೇವೆ ಎಂದು ಈಗಾಗಲೇ ಪಾಂಡ್ಯ ಮತ್ತು ನತಾಶ ಜಂಟಿ ಹೇಳಿಯಲ್ಲಿ ಖಚಿತಪಡಿಸಿದ್ದಾರೆ.

ಅನನ್ಯ ಪಾಂಡೆ ಹಿಂದೆ ಬಿದ್ದ ಪಾಂಡ್ಯ?


ವರದಿಗಳ ಪ್ರಕಾರ ಹಾರ್ದಿಕ್​ ಪಾಂಡ್ಯ ಬಾಲಿವುಡ್ ನಟಿ ಅನನ್ಯ ಪಾಂಡೆ(Ananya Panday) ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಂಡ್ಯ ಇನ್‌ಸ್ಟಾಗ್ರಾಂನಲ್ಲಿ ಅನನ್ಯ ಪಾಂಡೆ ಅವರನ್ನು ದೀಢಿರ್​ ಆಗಿ ಫಾಲೋ ಮಾಡಲಾರಂಭಿಸಿದ್ದು. ಅತ್ತ ಅನನ್ಯ ಪಾಂಡೆ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲಾರಂಭಿಸಿದ್ದಾರೆ. ಈ ವಿಚಾರ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಹೊಸ ಸಂಚಲನ ಹುಟ್ಟುಹಾಕಿದ್ದು ಪಾಂಡ್ಯ ಸದ್ಯದಲ್ಲೇ ಅನನ್ಯ ಪಾಂಡೆ ಜತೆ ಹಸೆಮಣೆ ಏರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

Continue Reading

ಕ್ರೀಡೆ

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

Mohammed Shami: ಶಮಿ ಅವರು ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ.

VISTARANEWS.COM


on

Mohammed Shami
Koo

ನವದೆಹಲಿ: ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ(Mohammed Shami) ಅವರು ಕೌಟುಂಬಿಕ ಕಲಹ, ವೈಯಕ್ತಿಕ ಕಾರಣ ಹಾಗೂ ಖಿನ್ನತೆಯಿಂದ ಮೂರು ಸಲ ಆತ್ಮಹತ್ಯೆಗೆ ಯತ್ನಿಸಿದ್ದೆ ಎಂಬ ವಿಚಾರವನ್ನು ಸ್ವತಃ ತವಾಗಿಯೇ ಹೇಳಿಕೊಂಡಿದ್ದರು. ಆದರೆ, ಇದೀಗ ಶಮಿ 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ ವಿಚಾರವನ್ನು ಅವರ ಗೆಳೆಯ ಬಹಿರಂಗಪಡಿಸಿದ್ದಾರೆ. ಈ ವಿಚಾರ ಕೇಳಿ ಶಮಿ ಅಭಿಮಾನಿಗಳು ಒಂದು ಕ್ಷಣ ಆತಂಕಗೊಂಡಿದ್ದಾರೆ.

ಶಮಿ ಅವರ ಸ್ನೇಹಿತ ಉಮೇಶ್ ಕುಮಾರ್ ಅವರು ಶುಭಂಕರ್ ಮಿಶ್ರಾ ನಡೆಸಿಕೊಡುವ ಪಾಡ್‌ಕಾಸ್ಟ್‌ನಲ್ಲಿ ಮಾತನಾಡುವ ವೇಳೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. “ಎರಡು ವರ್ಷಗಳ ಹಿಂದಿನ ಸಂಗತಿ ಇದಾಗಿದ್ದು, ಬೆಳಿಗ್ಗೆ ಸುಮಾರು 4 ಗಂಟೆ ಇರಬಹುದು. ನಾನು ನೀರು ಕುಡಿಯಲು ಎದ್ದು ಅಡುಗೆ ಮನೆಯ ಕಡೆಗೆ ಹೋಗುತ್ತಿದ್ದೆ, ಈ ವೇಳೆ ಶಮಿ ಬಾಲ್ಕನಿಯಲ್ಲಿ ನಿಂತಿದ್ದರು. ಚಿಂತೆಯಲ್ಲಿ ಇದ್ದ ಹಾಗೆ ಕಾಣಿಸುತ್ತಿತ್ತು. ನಾವು 19ನೇ ಮಹಡಿಯಲ್ಲಿ ವಾಸಿಸುತ್ತಿದ್ದೆವು. ನೀರು ಕುಡಿಯಲು ಹೋಗುತ್ತಿದ್ದ ನಾನು ನೇರವಾಗಿ ಶಮಿ ಬಳಿ ಓಡಿ ಬಂದೆ. ನಾನು ಬರುವುದು ಕೊಂಚ ತಡವಾಗಿದ್ದರೂ ಕೂಡ ಶಮಿ ಇಂದು ಜೀವಂತವಾಗಿರುತ್ತಿರಲಿಲ್ಲ. ಅವರು ಅಂದು ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ದೇವರ ದಯೆಯಿಂದ ಆ ದಿನ ರಾತ್ರಿ ದೊಡ್ಡ ಅನಾಹುತವೊಂದು ತಪ್ಪಿತು” ಎಂದು ಹೇಳುವ ಮೂಲಕ ಶಮಿ ಆತ್ಮಹತ್ಯೆಗೆ ಮುಂದಾಗಿದ್ದ ಶಾಕಿಂಗ್​ ವಿಚಾರವನ್ನು ಅವರ ಸ್ನೇಹಿತ ತೆರೆದಿಟ್ಟರು.

“ಶಮಿಯನ್ನು ಅಂದು ನಾನು ಆತ್ಮಹತ್ಯೆಗೆ ಯತ್ನಿಸಿದ್ದ ಬಗ್ಗೆ ಪ್ರಶ್ನೆ ಮಾಡಿದೆ. ಇದಕ್ಕೆ ಉತ್ತರಿಸಿದ್ದ ಶಮಿ, ಪಾಕಿಸ್ತಾನದ ಜತೆ ಮ್ಯಾಚ್‌ ಫಿಕ್ಸಿಂಗ್ ಆರೋಪ ಕೇಳಿ ಬಂದಿರುವುದು ಸಹಿಸಿಕೊಳ್ಳು ಸಾಧ್ಯವಾಗದೆ ನಾನು ಈ ರಿತಿ ಮಾಡಲು ಮುಂದಾದೆ ಎಂದು ಹೇಳಿದ್ದಾಗಿ ಅವರ ಗೆಳೆಯ ಹೇಳಿದ್ದಾರೆ. ವಿಚ್ಛೇದಿತ ಪತ್ನಿ ಹಸಿನ್ ಜಹಾನ್‌ ಅವರು ಶಮಿ ವಿರುದ್ಧ ಮ್ಯಾಚ್‌ ಫಿಕ್ಸಿಂಗ್ ಆರೋಪ ಮಾಡಿದ್ದರು. ಈಗಲೂ ಕೂಡ ಶಮಿ ಅವರ ವೈವಾಹಿಕ ಬದುಕು ಆಗಾಗ ಅನಪೇಕ್ಷಿತ ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ.

ಇದನ್ನೂ ಓದಿ Mohammed Shami : ರೋಹಿತ್​ ಶರ್ಮಾಗೆ ನನ್ನ ಬೌಲಿಂಗ್​ ಎಂದರೆ ಭಯ; ಮೊಹಮ್ಮದ್ ಶಮಿ

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ತಂಡದ ನಾಯಕ ರೋಹಿತ್​ ಶರ್ಮ ಜತೆಗಿನ ಇನ್‌ಸ್ಟಾಗ್ರಾಮ್‌ ಚಾಟ್​ನಲ್ಲಿ ಶಮಿ ತಾನು ಖಿನ್ನತೆಗೆ ಒಳಗಾಗಿ ಮೂರು ಸಲ ಸಾಯಲು ಮುಂದಾಗಿದ್ದೆ ಎಂದು ಹೇಳಿಕೊಂಡಿದ್ದರು.

ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಾಣುತ್ತಿರುವ ಶಮಿ  ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

Continue Reading

ಕ್ರೀಡೆ

IPL 2025: ಆರ್​ಸಿಬಿ ಸೇರಲಿದ್ದಾರೆ ಹಿಟ್​ಮ್ಯಾನ್​ ರೋಹಿತ್​ ಶರ್ಮ!

IPL 2025: ರೋಹಿತ್​ ಆರ್​ಸಿಬಿ ಸೇರುತ್ತಾರೆ ಎನ್ನುವ ಸುದ್ದಿ ಕೇಳಿದ್ದೇ ತಡ ಅಭಿಮಾನಿಗಳು ಆರ್​ಸಿಬಿ ಜೆರ್ಸಿಯಲ್ಲಿ ರೋಹಿತ್​ ಅವರ ಫೋಟೊವನ್ನು ಎಡಿಟ್​ ಮಾಡಿ ಎಲ್ಲಡೆ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಅಭಿಮಾನಿಗಳ ಈ ಮಾತು ನಿಜವಾದರೂ ಅಚ್ಚರಿಯಿಲ್ಲ. ಆದರೆ ರೋಹಿತ್​ ಹಾಗೂ ಆರ್​ಸಿಬಿ ಫ್ರಾಂಚೈಸಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

VISTARANEWS.COM


on

IPL 2025: Rohit Sharma To Captain RCB In IPL 2025?
Koo

ಮುಂಬಯಿ: 18ನೇ ಆವೃತ್ತಿಯ ಐಪಿಎಲ್(IPL 2025)​ ಕುರಿತಾಗಿ ಪ್ರತಿ ದಿನ ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ಸುದ್ದಿಗಳು ಭಾರೀ ಚರ್ಚೆಯಾಗುತ್ತಿದೆ. ಇದೀಗ ಮುಂಬೈ ಇಂಡಿಯನ್ಸ್​ ತಂಡದ ಮಾಜಿ ನಾಯಕ ರೋಹಿತ್​ ಶರ್ಮ(Rohit Sharma) ಅವರು ಆರ್​ಸಿಬಿ(RCB) ಸೇರಲಿದ್ದಾರೆ(rohit sharma join rcb team) ಎಂದು ವರದಿಯಾಗಿದೆ. ಇದೇ ವರ್ಷದ ಡಿಸೆಂಬರ್​ನಲ್ಲಿ ಆಟಗಾರರ ಮೆಗಾ ಹರಾಜು ಕೂಡ ನಡೆಯಲಿದ್ದು ಹಲವು ಸ್ಟಾರ್​ ಆಟಗಾರರು ತಮ್ಮ ಮೂಲ ತಂಡ ತೊರೆದು ಬೇರೆ ತಂಡದ ಪರ ಆಡಲು ಬಯಸಿರುವುದಾಗಿ ತಿಳಿದುಬಂದಿದೆ.

ಕಳೆದ 17ನೇ ಆವೃತ್ತಿಯಲ್ಲಿ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರನ್ನು ದಿಢೀರ್​ ಆಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕನನ್ನಾಗಿ ನೇಮಿಸಿ, 5 ಬಾರಿ ಕಪ್​ ಗೆಲ್ಲಿಸಿದ ರೋಹಿತ್​ ಅವರನ್ನು ನಾಯಕನ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದು ರೋಹಿತ್‌ ಅಭಿಮಾನಿಗಳು ಸೇರಿ ತಂಡದ ಸಹ ಆಟಗಾರರಿಗೂ ತೀವ್ರ ನೋವುಂಟು ಮಾಡಿತ್ತು. ಇದೇ ವಿಚಾರವಾಗಿ ಮುಂಬೈ ಫ್ರಾಂಚೈಸಿ ವಿರುದ್ಧ ತಮ್ಮದೇ ಅಭಿಮಾನಿಗಳು ಆಕ್ರೋಶ ಕೂಡ ವ್ಯಕ್ತಪಡಿಸಿದ್ದರು. ಅದಾಗಲೇ ರೋಹಿತ್​ ಮುಂಬೈ ತಂಡ ತೊರೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು, ಆದರೂ ರೋಹಿತ್​ ತಂಡದ ಪರ ಆಡಿದ್ದರು. ಆದರೆ ಈ ಬಾರಿ ಮಾತ್ರ ಮುಂಬೈ ಪರ ಆಡದಿರಲು ರೋಹಿತ್​ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ರೋಹಿತ್ ಶರ್ಮಗೆ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್‌ ಪ್ರಾಂಚೈಸಿಯಿಂದ ನಾಯಕತ್ವದ ಆಫರ್‌ಗಳು ಬಂದಿದೆ ಎನ್ನಲಾಗಿದೆ. ಆದರೆ, ರೋಹಿತ್​ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುವ ಆಸಕ್ತಿ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರೋಹಿತ್​ ಆರ್​ಸಿಬಿ ಸೇರುತ್ತಾರೆ ಎನ್ನುವ ಸುದ್ದಿ ಕೇಳಿದ್ದೇ ತಡ ಅಭಿಮಾನಿಗಳು ಆರ್​ಸಿಬಿ ಜೆರ್ಸಿಯಲ್ಲಿ ರೋಹಿತ್​ ಅವರ ಫೋಟೊವನ್ನು ಎಡಿಟ್​ ಮಾಡಿ ಎಲ್ಲಡೆ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಅಭಿಮಾನಿಗಳ ಈ ಮಾತು ನಿಜವಾದರೂ ಅಚ್ಚರಿಯಿಲ್ಲ. ಆದರೆ ರೋಹಿತ್​ ಹಾಗೂ ಆರ್​ಸಿಬಿ ಫ್ರಾಂಚೈಸಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇದನ್ನೂ ಓದಿ Mumbai Indians : ಮುಂದಿನ ಐಪಿಎಲ್​ಗೆ ಮುಂಬೈ ತೊರೆಯಲಿದ್ದಾರೆ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್​

ರೋಹಿತ್‌ ಶರ್ಮ ಅವರನ್ನು ನಾಯಕತ್ವ ಸ್ಥಾನದಿಂದ ಕೈಬಿಟ್ಟು ಪಾಂಡ್ಯ ಅವರಿಗೆ ಪಟ್ಟ ಕಟ್ಟಿದ ಕೆಲವೇ ಕ್ಷಣದಲ್ಲಿ ಮಂಬೈ ಇಂಡಿಯನ್ಸ್‌ ಫ್ರಾಂಚೈಸಿಯು ಟ್ವಿಟರ್‌ನಲ್ಲಿ (ಎಕ್ಸ್‌) ನಾಲ್ಕು ಲಕ್ಷಕ್ಕೂ ಹೆಚ್ಚು ಫಾಲೋವರ್ಗಳನ್ನು ಕಳೆದುಕೊಂಡಿತ್ತು. ಒಂದೊಮ್ಮೆ ರೋಹಿತ್ ಈ ಬಾರಿ​ ಮುಂಬೈ ತಂಡ ತೊರೆದರೆ ಮತ್ತಷ್ಟು ಫಾಲೋವರ್ಗಳ ಸಂಖ್ಯೆ ಕುಸಿತ ಕಾಣುವುದು ನಿಶ್ಚಿತ.

17 ಆವೃತ್ತಿಗಳಿಂದ ಈ ಸಲ ಕಪ್​ ನಮ್ದೇ ಎಂದು ಹೇಳಿಕೊಂಡು ಬಂದರೂ ಒಮ್ಮೆಯೂ ಕಪ್​ ಗೆಲ್ಲುವಲ್ಲಿ ಯಶಸ್ವಿಯಾಗದ ಆರ್​ಸಿಬಿಗೆ ರೋಹಿತ್​ ಬಂದು ಕಪ್​ ಗೆಲ್ಲಿಸಬೇಕು ಎನ್ನುವುದು ಆರ್​ಸಿಬಿ ಅಭಿಮಾನಿಗಳ ಬಯಕೆಯಾಗಿದೆ. ರೋಹಿತ್​ ಗರಿಷ್ಠ 5 ಐಪಿಎಲ್ ಕಪ್​ ಗೆದ್ದ ನಾಯಕನಾಗಿದ್ದಾರೆ. ರೋಹಿತ್​ ಮಾತ್ರವಲ್ಲದೆ ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಕೂಡ ಮುಂಬೈ ತಂಡ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಬುಮ್ರಾ ತಮ್ಮ ತವರಾದ ಗುಜರಾತ್​ ಟೈಟಾನ್ಸ್​​ ತಂಡದ ಪರ ಆಡಲಿದ್ದಾರೆ ಎನ್ನಲಾಗಿದೆ.

Continue Reading
Advertisement
IPL 2025
ಕ್ರೀಡೆ2 mins ago

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರಮುಖ ಬೇಡಿಕೆ ಮುಂದಿಟ್ಟ ಫ್ರಾಂಚೈಸಿಗಳು

karnataka weather Forecast
ಮಳೆ11 mins ago

Karnataka Weather : ಭಾರಿ ಮಳೆ ಎಚ್ಚರಿಕೆ; ನಾಳೆ ಹಾಸನದ ಈ ಶಾಲೆಗಳಿಗೆ ರಜೆ ಘೋಷಣೆ

NEET UG 2024
ದೇಶ15 mins ago

NEET UG 2024: ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ ಆಗಿಲ್ಲ, ಹಳೇ ಲಿಂಕ್‌ ಹಂಚಿಕೆ ಎಂದ ಕೇಂದ್ರ; ಮತ್ತೊಂದು ಪ್ರಮಾದ?

Prime Minister 15 Point Programme District Level Meeting at Yadgiri
ಯಾದಗಿರಿ16 mins ago

Yadgiri News: ಜಿಲ್ಲಾ ಮಟ್ಟದಲ್ಲಿ ಪ್ರಗತಿಗೆ ಪ್ರಧಾನಿಯ 15 ಅಂಶಗಳ ಕಾರ್ಯಕ್ರಮ

Sara Ali Khan
Latest27 mins ago

Sara Ali Khan: ವಿಮಾನದಲ್ಲಿ ಸಾರಾ ಅಲಿ ಖಾನ್‌ ಮೇಲೆ ಜ್ಯೂಸ್‌ ಚೆಲ್ಲಿದ ಗಗನಸಖಿ! ಮುಂದೇನಾಯ್ತು? ವಿಡಿಯೊ ನೋಡಿ

Parliament Session
ದೇಶ31 mins ago

Parliament Session: ʼತಾಕತ್ತಿದ್ದರೆ ಬಾʼ- ಸಂಸತ್‌ನಲ್ಲಿ ಸಂಸದರ ಪಂಥಾಹ್ವಾನ; ಭಾರೀ ಕೋಲಾಹಲ

Samsung Galaxy Z Fold6 Z Flip6 Smartphones Good Customer Response
ವಾಣಿಜ್ಯ34 mins ago

Samsung Galaxy: ಎಐ ಆಧರಿತ ಗ್ಯಾಲಕ್ಸಿ ಝಡ್ ಫೋಲ್ಡ್ 6, ಝಡ್ ಫ್ಲಿಪ್6 ಹೇಗಿದೆ? ದರ ಎಷ್ಟು?

ಕ್ರೀಡೆ37 mins ago

Paris Olympics 2024: 2ನೇ ಸುತ್ತಿನಲ್ಲಿ ಜೊಕೊ-ನಡಾಲ್ ಮುಖಾಮುಖಿ ಸಾಧ್ಯತೆ

Assembly session
ಕರ್ನಾಟಕ41 mins ago

Assembly session: ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ನಾಳೆ ಮುಗಿಯಬೇಕಿದ್ದ ಕಲಾಪ ಇಂದೇ ಮೊಟಕು!

Viral Video
Latest55 mins ago

Viral Video: ತಲೆಯಿಂದ ಡಿಚ್ಚಿ ಹೊಡೆದು ಬೋಟ್‌ಅನ್ನೇ ಪಲ್ಟಿ ಮಾಡಿದ ತಿಮಿಂಗಿಲ! ಮೈನವಿರೇಳಿಸುವ ವಿಡಿಯೊ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್5 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ5 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ6 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ1 day ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌