Assembly Session 2024: ಕೃಷ್ಣ ಜಲಭಾಗ್ಯ ಪರಿಹಾರ ಅಕ್ರಮ; ತನಿಖೆಗೆ ತಂಡ ರಚನೆ ಎಂದ ಶಿವಕುಮಾರ್ - Vistara News

ಕರ್ನಾಟಕ

Assembly Session 2024: ಕೃಷ್ಣ ಜಲಭಾಗ್ಯ ಪರಿಹಾರ ಅಕ್ರಮ; ತನಿಖೆಗೆ ತಂಡ ರಚನೆ ಎಂದ ಶಿವಕುಮಾರ್

Assembly Session 2024: ಕೃಷ್ಣ ಜಲಭಾಗ್ಯ ನಿಗಮದಲ್ಲಿ ಪರಿಹಾರ ಕೊಡಿಸುವ ನೆಪದಲ್ಲಿ ಅಕ್ರಮ ನಡೆದಿದ್ದು, ಇದರಲ್ಲಿ ಒಂದಷ್ಟು ಜನ ಶಾಮೀಲಾಗಿದ್ದಾರೆ. ಇಲ್ಲಿ ನಮ್ಮ ರೈತರನ್ನು ಉಳಿಸಲು ತನಿಖಾ ತಂಡ ರಚಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Assembly Session 2024 Irrigation Amendment Bill Approval to protect the farmers of the last part of the canals
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೃಷ್ಣ ಜಲಭಾಗ್ಯ ನಿಗಮದಲ್ಲಿ ಪರಿಹಾರ ಕೊಡಿಸುವ ನೆಪದಲ್ಲಿ ಅಕ್ರಮ ನಡೆದಿದ್ದು, ಇದರಲ್ಲಿ ಒಂದಷ್ಟು ಜನ ಶಾಮೀಲಾಗಿದ್ದಾರೆ. ಇಲ್ಲಿ ನಮ್ಮ ರೈತರನ್ನು ಉಳಿಸಲು ತನಿಖಾ ತಂಡ ರಚಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (Assembly Session 2024) ತಿಳಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ, ಕೃಷ್ಣ ಜಲಭಾಗ್ಯ ನಿಗಮದ ಅಡಿ ಸಮರ್ಪಕವಾದ ನೀರಾವರಿ ಕೆಲಸಗಳು ನಡೆಯುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, “ನ್ಯಾಯಲಯಗಳಲ್ಲಿ ಭೂಸ್ವಾಧೀನದ ಕುರಿತು ಪ್ರಕರಣಗಳು ನಡೆಯುತ್ತಿವೆ. ವಿಜಯಪುರ, ಬಾಗಲಕೋಟೆ, ರಾಯಚೂರು ಭಾಗದಲ್ಲಿ ನ್ಯಾಯಲಯದ ಮೂಲಕ ಎಕರೆಗೆ 74 ಲಕ್ಷ ಹಾಗೂ ಸಬ್ಅರ್ಬ್ ಭೂಮಿಗೆ 1 ಕೋಟಿ 26 ಲಕ್ಷ ಪರಿಹಾರ ಪಡೆಯುತ್ತಿದ್ದಾರೆ. ಸುಮಾರು 285 ಪ್ರಕಣಗಳಲ್ಲಿ ಈ ರೀತಿಯಾಗಿದೆ. 367 ಪ್ರಕರಣಗಳಿಗೆ ಪುನರ್ ವಸತಿ ಕಲ್ಪಿಸುವ ವಿಚಾರವಾಗಿ ಒಂದು ಎಕರೆಗೆ 5 ಕೋಟಿ 18 ಲಕ್ಷ ಪರಿಹಾರ ನೀಡಬೇಕು ಎಂದು ಕೋರ್ಟ್ ಆದೇಶ ಮಾಡಿದೆ. ಪೆರಿಫೆರಲ್ ರಿಂಗ್ ರಸ್ತೆಗೆ ಬೆಂಗಳೂರಿನಲ್ಲೇ ಇಷ್ಟು ದೊಡ್ಡ ಮೊತ್ತದ ಪರಿಹಾರ ನೀಡಲು ಆಗುತ್ತಿಲ್ಲ ಎಂದರು.

ಭೂ ಸ್ವಾಧೀನ ಪ್ರಕರಣಗಳನ್ನು ನಡೆಸುತ್ತಿರುವ ಎಲ್ಲಾ ಸರ್ಕಾರಿ ವಕೀಲರನ್ನು ಹಿಂದಕ್ಕೆ ಪಡೆಯಲಾಗುವುದು. ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗುವುದು. ಇದರ ಬಗ್ಗೆ ಕಾನೂನು ಸಚಿವರ ಬಳಿ ಚರ್ಚೆ ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಸಚಿವ ಸಂಪುಟ ಉಪಸಮಿತಿ ಮಾಡಿ ಎಕರೆಗೆ 25 ಲಕ್ಷ ಪರಿಹಾರ ನೀಡಬೇಕು ಎಂದು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈಗ ದುಪ್ಪಟ್ಟು ಪರಿಹಾರ ನೀಡಬೇಕು ಎಂದು ನ್ಯಾಯಲಯ ಹೇಳಿದೆ. ಇದಕ್ಕೆ ಎಲ್ಲಿಂದ ಹಣ ತರುವುದು? ಎಂದು ತಿಳಿಸಿದರು.

ಕೃಷ್ಣ ಜಲಭಾಗ್ಯ ನಿಗಮದ ಅಡಿ ಕೈಗೊಂಡಿರುವ ಕಾರ್ಯಕ್ರಮಗಳು ಮುಗಿಯಲು ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೆಲಸ ಮಾಡುತ್ತಿದೆ. ಈ ಯೋಜನೆಯ ಬಗ್ಗೆ ಪುನರ್ ಪರಿಶೀಲನೆ ನಡೆಸಿದಾಗ ಗಾಬರಿ ಹುಟ್ಟಿಸುವ ಸಂಗತಿಗಳು ಬೆಳಕಿಗೆ ಬಂದಿವೆ. ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಕಾಲದಲ್ಲಿ ಈ ಅಣೆಕಟ್ಟು ನಿರ್ಮಾಣದ ವೇಳೆ ಅನೇಕ ಜನರು 1-2 ಸಾವಿರ ರೂಪಾಯಿಗೆ ಜಮೀನು ಬಿಟ್ಟುಕೊಟ್ಟಿದ್ದಾರೆ. 5 ವರ್ಷದ ಹಿಂದೆಯೂ ರೈತರು ಎಕರೆಗೆ 5 ಸಾವಿರ ಪಡೆದು ಜಮೀನು ನೀಡಿದ್ದಾರೆ ಎಂದರು.

ಇನ್ನು ಕನಕನಾಲ ಯೋಜನೆ ಜಾರಿಯ ಬಗ್ಗೆ ಬಸನಗೌಡ ತುರ್ವಿಹಾಳ ಅವರ ಪ್ರಸ್ತಾವನೆಗೆ ಉತ್ತರಿಸಿದ ಅವರು “ಮಸ್ಕಿ ನಾಲೆಯಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸುವ ಹಾಗೂ ಕನಕನಾಲೆಯ ಆಧುನೀಕರಣ ಯೋಜನೆಗೆ 134.56 ಕೋಟಿ ರೂ. ಮೊತ್ತದ ಡಿಪಿಆರ್‌ಗೆ ಅನುಮತಿ ನೀಡುವ ವಿಚಾರ ಸರ್ಕಾರದ ಮುಂದಿದೆ ಎಂದು ಹೇಳಿದರು.

ಇದನ್ನೂ ಓದಿ: Lakshmi Hebbalkar: ಇ.ಡಿ ಮೂಲಕ ಸಿದ್ದರಾಮಯ್ಯ ಹೆಸರು ಕೆಡಿಸಲು ಹುನ್ನಾರ; ಹೆಬ್ಬಾಳಕರ್ ಆರೋಪ

ನಾನು ಮತ್ತು ಮುಖ್ಯಮಂತ್ರಿಗಳು ಅನೇಕ ಬಾರಿ ಭೇಟಿ ನೀಡಿ ಈ ಭಾಗವನ್ನು ವೀಕ್ಷಣೆ ಮಾಡಿದ್ದೇವೆ. ಶಾಸಕರ ಕ್ಷೇತ್ರದಲ್ಲಿ 980 ಕೋಟಿ ರೂ. ಮೊತ್ತದ ನೀರಾವರಿಗೆ ಸಂಬಂಧಿಸಿದ ಕಾಮಗಾರಿ ನಡೆಸಲು ಸರ್ಕಾರ ಮುಂದಾಗಿದೆ. ಇದು ಮುಗಿದ ನಂತರ ಕೆರೆ ತುಂಬಿಸುವ ಯೋಜನೆ ಮಾಡಲಾಗುವುದು ಎಂದರು.

ಹೆಸರಘಟ್ಟ, ತಿಪ್ಪಗೊಂಡನಹಳ್ಳಿ ಕೆರೆ ಸಂರಕ್ಷಣೆಗೆ ಕ್ರಮ

ಹೆಸರಘಟ್ಟ ಕೆರೆಗೆ ಎತ್ತಿನಹೊಳೆ ನೀರು ಹರಿಸುವ ಪ್ರಮಾಣ ಕಡಿಮೆ ಮಾಡಲಾಗಿದೆ ಎನ್ನುವ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ “ಎತ್ತಿನಹೊಳೆ ವಿಚಾರವಾಗಿ ವಿಶ್ವನಾಥ್ ಅವರ ಮಾತಿನಲ್ಲಿ ಶೇ.50 ರಷ್ಟು ಸತ್ಯಾಂಶವಿದೆ. ವಿಧಾನಸಭೆ ಮಗಿದ ತಕ್ಷಣ ಬೆಂಗಳೂರಿಗೆ ನೀರು ಕೊಡುತ್ತಿದ್ದ ತಿಪ್ಪಗೊಂಡನಹಳ್ಳಿ ಹಾಗೂ ಹೆಸರಘಟ್ಟ ಕೆರೆಗೆ ಭೇಟಿ ನೀಡೋಣ. ಎರಡೂ ಕೆರೆಗಳನ್ನು ಸಂರಕ್ಷಣೆ ಮಾಡಬೇಕಿದೆ. ಬಹಳ ವರ್ಷಗಳ ಹಿಂದೆ ಹೆಸರಘಟ್ಟ ಕೆರೆಗೆ ಭೇಟಿ ನೀಡಿದ್ದೆ. ಕೆರೆ ಒತ್ತುವರಿ ಬಹಳ ಕಡಿಮೆಯಿದೆ ಎನ್ನುವ ವರದಿಯಿದೆ. ಅದನ್ನು ಸಂರಕ್ಷಣೆ ಮಾಡೋಣ ಎಂದು ಡಿಸಿಎಂ ಉತ್ತರಿಸಿದರು.

ಕಳೆದ ವರ್ಷದ ಬರಗಾಲದ ವೇಳೆ ಬೆಂಗಳೂರಿನಲ್ಲಿ ಸುಮಾರು 7 ಸಾವಿರ ಬೋರ್‌ವೆಲ್‌ಗಳು ಬತ್ತಿ ಹೋದವು. ಬೆಂಗಳೂರಿನ ಯಾವ ಕೆರೆಗಳಲ್ಲೂ ನೀರು ಇರಲಿಲ್ಲ. ಎಲ್ಲೆಲ್ಲಿ ನೀರನ್ನು ಸಂಸ್ಕರಿಸಲು ಅವಕಾಶವಿದೆಯೋ ಅಲ್ಲೆಲ್ಲಾ ನೀರನ್ನು ಸಂಸ್ಕರಿಸಿ ಕೆರೆಗೆ ಹರಿಸಲಾಗುವುದು. ಕೆರೆಯಲ್ಲಿ ನೀರಲಿಲ್ಲದಿದ್ದರೆ ಒತ್ತುವರಿ ಮಾಡಿಕೊಳ್ಳುತ್ತಾರೆ. ಜುಲೈ 27 ರ ಸಭೆಯಲ್ಲಿ ಕೆರೆ ಸಂರಕ್ಷಣೆ ಬಗ್ಗೆ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ. ಯಾರೇ ಒತ್ತುವರಿ ಮಾಡಿದ್ದರೂ ನಿರ್ದಾಕ್ಷಿಣ್ಯವಾಗಿ ತೆರವು ಮಾಡೋಣ. ನಾವೆಲ್ಲ ಒಟ್ಟಿಗೆ ಸೇರಿ ಈ ಕೆಲಸ ಮಾಡೋಣ ಎಂದರು.

ಹೆಸರಘಟ್ಟ ಕೆರೆಗೆ ನೀರು ಹರಿಸುವ ಕಾಮಗಾರಿ 2025 ರ ಅಕ್ಟೋಬರ್ ವೇಳೆಗೆ ಮುಗಿಸುವ ಗುರಿ ಹೊಂದಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಿರ್ಮಾಣ ಮಾಡಿರುವ ವಿತರಣಾ ತೊಟ್ಟಿಯಿಂದ ಕೆರೆಗೆ ನೀರು ಹರಿಸಲಾಗುವುದು ಎಂದು ತಿಳಿಸಿದರು.

ತರೀಕೆರೆ, ಕಡೂರು, ಅರಸೀಕೆರೆ ಭಾಗದ 197 ಕೆರೆಗಳಿಗೆ ಭದ್ರಾ ನೀರು

ತರೀಕೆರೆ, ಕಡೂರು, ಚಿಕ್ಕಮಗಳೂರು ಹಾಗೂ ಅರಸೀಕೆರೆ ತಾಲೂಕಿನ 197 ಕೆರೆಗಳಿಗೆ ಭದ್ರಾ ನೀರನ್ನು ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಡಿ ಕಡೂರು ತಾಲೂಕಿನ ಯಾವುದೇ ಕೆರೆಗಳನ್ನು ತುಂಬಿಸುವ ಯೋಜನೆ ಸರ್ಕಾರದ ಮುಂದಿಲ್ಲ ಆದರೆ ಎರಡನೇ ಹಂತದಲ್ಲಿ ವಿಷ್ಣ ಸಮುದ್ರ ಕೆರೆ ತುಂಬಿಸುವ ಆಲೋಚನೆಯಿದೆ. ಎತ್ತಿನಹೊಳೆಯಿಂದ ಯಾವುದೇ ಕಾರಣಕ್ಕೂ ನೀರು ಹರಿಸಲು ಆಗುವುದಿಲ್ಲ ಎಂದು ಭದ್ರಾ ಮೇಲ್ದಂಡೆ ಯೋಜನೆಯ 3 ಮತ್ತು 4ನೇ ಹಂತದ ಕಾಮಗಾರಿ ಪ್ರಾರಂಭ ಮಾಡುವ ಬಗ್ಗೆ ಶಾಸಕ ಕೆ.ಎಸ್. ಆನಂದ್ ಅವರ ಪ್ರಶ್ನೆಗೆ ಡಿಸಿಎಂ ಉತ್ತರ ನೀಡಿದರು.

ಇದನ್ನೂ ಓದಿ: Viral Video: ಎರಡು ಮುಖ, ನಾಲ್ಕು ತೋಳು, ನಾಲ್ಕು ಕಾಲುಗಳ ಮಗು ಜನನ!

ಎತ್ತಿನಹೊಳೆಯಿಂದ ಏಕೆ ನೀರನ್ನು ನೀಡಲು ಆಗುವುದಿಲ್ಲ ಎನ್ನುವ ಬಗ್ಗೆ ಡಿಸಿಎಂ ಅವರು ಸದನಕ್ಕೆ ವಿವರಿಸಲಿ ಎಂದು ಶಾಸಕ ಸುನೀಲ್ ಕುಮಾರ್ ಒತ್ತಾಯಿಸಿದಾಗ “ಯಡಿಯೂರಪ್ಪ ಅವರ ಕಾಲದಲ್ಲಿ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ನೀರು ಹರಿಸಬೇಕು ಎಂದು ತೀರ್ಮಾನ ಮಾಡಲಾಯಿತು. ನಾನು ಈ ಕಾಮಗಾರಿಗಳನ್ನು ನಿಲ್ಲಿಸಿದ್ದು, ಮೊದಲು ಅಲ್ಲಿಂದ ನೀರನ್ನು ಮೇಲಕ್ಕೆ ಎತ್ತೋಣ ತುಮಕೂರಿಗೆ ನೀರು ತಲುಪಿದ ಮೇಲೆ ಮಿಕ್ಕ ಭಾಗಗಳ ಬಗ್ಗೆ ಆಲೋಚನೆ ಮಾಡೋಣ ಎಂದು ಒಂದಷ್ಟು ಭಾಗಗಳ ಕಾಮಗಾರಿ ನಿಲ್ಲಿಸಲಾಗಿದೆ. ವಿದ್ಯುತ್ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಕೇವಲ 25 ದಿನಗಳು ಮಾತ್ರ ನೀರನ್ನು ಪಂಪ್ ಮಾಡಬಹುದು ಎನ್ನುವ ಮಾಹಿತಿಯನ್ನು ಕೆಲವರು ನೀಡುತ್ತಿದ್ದಾರೆ. ಈ ಯೋಜನೆಯ ಬಗ್ಗೆ ಕರಾರುವಾಕ್ಕು ಮಾಹಿತಿ ನೀಡಲು ಮಲೆನಾಡು, ಕರಾವಳಿ ಹಾಗೂ ಬಯಲುಸೀಮೆ ಭಾಗದ ಶಾಸಕರ ಜತೆ ಸಭೆ ನಡೆಸೋಣ ಎಂದು ತಿಳಿಸಿದರು.

ಶಾಸಕ ಸುರೇಶ್ ಗೌಡ, ಜ್ಯೋತಿ ಗಣೇಶ್ ಅವರು ಎತ್ತಿನಹೊಳೆ ಯೋಜನೆ ಬಗ್ಗೆ ಚರ್ಚೆ ವಿಸ್ತರಿಸಲು ಮುಂದಾದಾಗ ಉತ್ತರಿಸಿದ ಡಿಸಿಎಂ ಅವರು “ತುಮಕೂರು ಭಾಗದ 6 ಕೆರೆಗಳನ್ನು ತುಂಬಿಸಲಾಗುವುದು. ಜುಲೈ ತಿಂಗಳ ಕೊನೆಯಲ್ಲಿ ನೀರು ಹರಿಸಲು ಒಳ್ಳೆ ಸಮಯ, ಮುಹೂರ್ತ ನೋಡುತ್ತಿದ್ದೇನೆ. ಇತ್ತೀಚೆಗೆ ನೀರು ಹರಿಸಲು ಪ್ರಾಯೋಗಿಕ ಪರೀಕ್ಷೆ ನಡೆಸಿದಾಗ ಪೈಪ್ ಒಡೆದು ಹೋಗಿದೆ. ಅದನ್ನು ದುರಸ್ತಿ ನಡೆಸಿ, ನೀರು ಹರಿಸಲಾಗುವುದು. ಆಷಾಡ ಮುಗಿದ ಮೇಲೆ ನೀರು ಬರುವುದು ಎಂದರು.

ಎಲೆಕ್ಟ್ರಿಕಲ್ ಎಂಜಿನಿಯರ್‌ಗಳ ನೇಮಕಾತಿಗೆ ಕ್ರಮ

ಏತ ನೀರಾವರಿ ಯೋಜನೆಯಲ್ಲಿ ಅಳವಡಿಸಿರುವ ಬೃಹತ್ ಪಂಪ್‌ಗಳ ನಿರ್ವಹಣೆಗೆ ಎಲೆಕ್ಟ್ರಿಕಲ್ ಎಂಜಿನಿಯರ್‌ಗಳ ಲಭ್ಯತೆ ಬಗ್ಗೆ ಶಾಸಕ ಎ.ಮಂಜು ಅವರು ಗಮನ ಸೆಳೆದಾಗ “ಏತ ನೀರಾವರಿ ಯೋಜನೆಗಳ ಮುಖ್ಯ ಸ್ಥಾವರಗಳ ನಿರ್ವಹಣೆಗಾಗಿ ಇಂಧನ ಇಲಾಖೆಯಿಂದ 3 ಮಂದಿ ವಿದ್ಯುತ್ ಎಂಜಿನಿಯರ್‌ಗಳನ್ನು ಎರವಲು ಸೇವೆ ಮೇಲೆ ಪಡೆಯಲಾಗಿದೆ. ಮಿಕ್ಕಂತೆ ಅಗತ್ಯಕ್ಕೆ ಅನುಗುಣವಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಇಲಾಖೆಯಿಂದಲೇ ವಿದ್ಯುತ್ ಎಂಜಿನಿಯರ್‌ಗಳನ್ನು ನೇಮಕಾತಿ ಮಾಡಿಕೊಳ್ಳಲು ನಿಯಮ ತರಲಾಗುವುದು ಎಂದರು.

ಹಿಡಕಲ್ ಜಲಾಶಯದ ಜಿಎಲ್‌ಬಿಸಿ ಕಾಲುವೆಯಿಂದ ತಾಲೂಕುವಾರು ನೀರಿನ ಹಂಚಿಕೆಯಾಗಿಲ್ಲ ಎಂದು ಮಹೇಂದ್ರ ಕಲ್ಲಪ್ಪ ತಮ್ಮಣ್ಣ ಅವರು ಪ್ರಸ್ತಾಪಿಸಿದಾಗ “ನೀರು ಹಂಚಿಕೆ ತಾರತಮ್ಯ ಉಂಟಾಗಿದ್ದರೆ ಸಮಸ್ಯೆ ಬಗೆಹರಿಸಲಾಗುವುದು. ಜುಲೈ 25 ರಂದು ಅಧಿಕಾರಿಗಳ ಸಭೆಯಲ್ಲಿ ಇದರ ಬಗ್ಗೆ ಗಮನ ಹರಿಸಲಾಗುವುದು. ಇದಕ್ಕಾಗಿ ವಿಶೇಷ ಸಭೆ ಕರೆದು ನಿಮ್ಮ ಅಹವಾಲು ಆಲಿಸಲಾಗುವುದು ಎಂದರು.

ಬೆಂಗಳೂರಿನ ಮೇಲೆ ಒತ್ತಡ ತಗ್ಗಿಸಲು ಉಪನಗರಗಳ ಅಭಿವೃದ್ಧಿ ಮಾಡಬೇಕು

ಬೆಂಗಳೂರು ಹೊರ ವಲಯದಲ್ಲಿ ಉಪನಗರಗಳನ್ನು ಅಭಿವೃದ್ಧಿ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವ ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ “2006 ರಲ್ಲಿಯೇ ರಾಮನಗರ, ಬಿಡದಿ, ಸಾತನೂರು, ಸೋಲೂರು ಸೇರಿದಂತೆ ಒಂದಷ್ಟು ಭಾಗಗಳಲ್ಲಿ ಉಪನಗರಗಳನ್ನು ಮಾಡಲು ಯೋಜನೆ ರೂಪಿಸಲಾಗಿತ್ತು. ನಂತರ ಯಾವುದೇ ಸರ್ಕಾರಗಳು ಹೆಚ್ಚಾಗಿ ಗಮನ ಹರಿಸಲಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಬೆಂಗಳೂರಿಗೆ ಬರುವ ಜನರನ್ನು ತಡೆಯಬೇಕು ಎಂದರೆ ಉಪನಗರಗಳನ್ನು ಅಭಿವೃದ್ದಿ ಪಡಿಸಬೇಕು. ಬೆಂಗಳೂರಿನಲ್ಲಿ ಬಾಡಿಗೆ, ಜೀವನ ನಿರ್ವಹಣಾ ವೆಚ್ಚ ಹೆಚ್ಚಾಗಿದೆ. ಇದನ್ನು ತಡೆಯಬೇಕು. ಮೊದಲು 110 ಹಳ್ಳಿಗಳ ಅಭಿವೃದ್ದಿ ಬಗ್ಗೆ ಬೆಂಗಳೂರು ಶಾಸಕರ ಸಲಹೆ ಪಡೆಯಬೇಕಾಗಿದೆ. ನಂತರ ಉಪನಗರಗಳ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಹೇಳಿದರು.

ಸಂವಿಧಾನದ ಬಗ್ಗೆ ಕಾಳಜಿ ಹೊಂದಿರುವ ಅಶೋಕ್‌ಗೆ ಅಭಿನಂದನೆ

ವಿಧಾನಸಭೆಯ ಅಭಿನಂದನೆ ಸೂಚನಾ ನಿರ್ಣಯದ ಮೇಲೆ, ನೂತನವಾಗಿ ಅಳವಡಿಸಿರುವ ಸಂವಿಧಾನ ಪ್ರಸ್ತಾವನೆ ಫಲಕದ ಬಗ್ಗೆ ನಡೆದ ಚರ್ಚೆ ವೇಳೆ, “ಸಂವಿಧಾನವನ್ನು ಅನುಸರಿಸಬೇಕು ಎನ್ನುವ ಕಾಳಜಿ ಆರ್.ಅಶೋಕ್ ಅವರಿಗೆ ಬಂದಿರುವುದರಿಂದ ಅವರಿಗೆ ವಿಶೇಷ ಅಭಿನಂದನೆಗಳು. ಬಿಜೆಪಿಗರು ಸಂವಿಧಾನ ರಕ್ಷಣೆ ಮಾಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಕಾಲೆಳೆದರು.

ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿಕೆ ಮಾಡಿ ಸಂವಿಧಾನ ಮುಗಿಸಿಬಿಟ್ಟಿದೆ ಎಂದು ಆರ್.ಅಶೋಕ್ ಹೇಳಿದಾಗ, ತಿರುಗೇಟು ನೀಡಿದ ಡಿ.ಕೆ. ಶಿವಕುಮಾರ್, “ತುರ್ತು ಪರಿಸ್ಥಿತಿ ನಂತರವು ಇಂದಿರಾಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಅವರ ಸರ್ಕಾರ ಅಧಿಕಾರಕ್ಕೆ ಬಂದಿದೆ” ಎಂದರು.

ಇದನ್ನೂ ಓದಿ: Lakshmi Hebbalkar: ನಕಲಿ ಪರಶುರಾಮ ಪ್ರತಿಮೆ ಸ್ಥಾಪನೆ; ಎಸ್ಐಟಿ ತನಿಖೆಗೆ ಹೆಬ್ಬಾಳಕರ್ ಒತ್ತಾಯ

ವಿಧಾನಸಭೆಯಲ್ಲಿ ಸಂವಿಧಾನ ಪೀಠಿಕೆ ಅಳವಡಿಸಿರುವ ಸ್ಪೀಕರ್ ಅವರಿಗೆ ಅಭಿನಂದನೆಗಳು. ಎಲ್ಲರೂ ಸಂವಿಧಾನ ರಕ್ಷಣೆ ಮಾಡಬೇಕು. ಆ ಕಾರಣಕ್ಕೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಸಮಾಜ ಕಲ್ಯಾಣ ಸಚಿವರು ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ ಮಾಡಿದರು. ಪೀಠಿಕೆ ಓದಿಯೇ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ತೆಗೆದುಕೊಂಡೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP Protest: ಸದನದಲ್ಲಿ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಅಲ್ಲೇ ಭಜನೆ, ಊಟ, ನಿದ್ದೆ; ಫೋಟೊ, ವಿಡಿಯೊ ಇಲ್ಲಿವೆ

BJP Protest: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಶಾಸಕರಾದ ಸುರೇಶ್‌ ಕುಮಾರ್‌, ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿ ಹಲವು ನಾಯಕರು ಅಹೋರಾತ್ರಿ ಧರಣಿ ನಡೆಸಿದರು. ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಧರಣಿ ನಿಲ್ಲುವುದಿಲ್ಲ ಎಂದು ಆರ್.‌ಅಶೋಕ್‌ ತಿಳಿಸಿದ್ದಾರೆ. ಹಾಗಾಗಿ, ಧರಣಿ ಮುಂದುವರಿಯುವ ಸಾಧ್ಯತೆ ಇದೆ.

VISTARANEWS.COM


on

BJP Protest
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ (MUDA Scam) ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ (BJP Protest) ಆರಂಭಿಸಿದ್ದಾರೆ. ಸದನದ ಬಾವಿಯೊಳಗೇ ಹಾಡು, ಭಜನೆಯ ಮಾಡಿದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು, ಸ್ವಂತ ಖರ್ಚಿನಲ್ಲಿಯೇ ಊಟ ತರಿಸಿಕೊಂಡು ಊಟ ಮಾಡಿದರು. ಬಳಿಕ ಸೋಫಾ, ನೆಲದ ಮೇಲೆ ಮಲಗಿದರು.

ಸ್ವಂತ ಖರ್ಚಿನಲ್ಲೇ ಊಟ ತರಿಸಿಕೊಂಡ ನಾಯಕರು

ವಿಧಾನಸೌಧದಲ್ಲಿ ಸ್ಪೀಕರ್‌ ಊಟೋಪಚಾರವನ್ನು ತಿರಸ್ಕರಿಸಿದ ಪ್ರತಿಪಕ್ಷ ನಾಯಕರು, ಸ್ವಂತ ಖರ್ಚಿನಲ್ಲೇ ವಿಧಾನಸೌಧಕ್ಕೆ ಊಟ ತರಿಸಿಕೊಂಡು ಊಟ ಮಾಡಿದರು. ಭ್ರಷ್ಟಾಚಾರದ ಹಣದಲ್ಲಿ ನಾವು ಊಟ ಮಾಡುವುದಿಲ್ಲ ಎಂದು ಅವರು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಶಾಸಕರಾದ ಸುರೇಶ್‌ ಕುಮಾರ್‌, ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿ ಹಲವು ನಾಯಕರು ಅಹೋರಾತ್ರಿ ಧರಣಿ ನಡೆಸಿದರು. ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಧರಣಿ ನಿಲ್ಲುವುದಿಲ್ಲ ಎಂದು ಆರ್.‌ಅಶೋಕ್‌ ತಿಳಿಸಿದ್ದಾರೆ.

ಒಳಗೆ ಬಿಡದ ಮಾರ್ಶಲ್‌ಗಳು

ಧರಣಿಗೂ ಮೊದಲು ಶಾಸಕರನ್ನ ಹೊರಗೆ ಬಿಟ್ಟು ಮಾರ್ಶಲ್‌ಗಳು ಬಾಗಿಲು ಹಾಕಿಕೊಂಡರು. ವಿಧಾನಸೌಧದ ಪೂರ್ವದ ಬಾಗಿಲನ್ನು ಮಾರ್ಶಲ್‌ಗಳು ಬಂದ್ ಮಾಡಿದ್ದರು. ಬಾಗಿಲು ತೆಗೆಯುವವರೆಗೂ ಶಾಸಕರು ಕಾದು ನಿಂತರು. ಬಾಗಿಲಲ್ಲೇ ಜೆಡಿಎಲ್‌ಪಿ ನಾಯಕ ಸುರೇಶ್ ಬಾಬು, ಬಿಜೆಪಿ ಉಪನಾಯಕ ಅರವಿಂದ್ ಬೆಲ್ಲದ್ ಸೇರಿದಂತೆ ಹಲವು ಶಾಸಕರು ನಿಂತರು. ಸ್ಥಳಕ್ಕೆ ಬಂದ ಡಿಸಿಪಿ, ಬಾಗಿಲು ತೆಗೆಸಿ ಒಳಗೆ ಬಿಡಿಸಿದರು. ಇದೇ ವೇಳೆ, ಆರ್‌.ಅಶೋಕ್‌ ಅವರು ಪೊಲೀಸರ ಜತೆ ವಾಗ್ವಾದ ನಡೆಸಿದರು.

ವಿಧಾನಸೌಧದಲ್ಲೇ ಭಜನೆ, ಹಾಡು

ರಾಜ್ಯಸಭೆಯಲ್ಲೂ ಹಗರಣದ ಪ್ರಸ್ತಾಪ

ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು ರಾಜ್ಯಸಭೆಯಲ್ಲೂ ಪ್ರಸ್ತಾಪಿಸಿದರು. “ನಿಗಮದಲ್ಲಿ ಒಂದು ವರ್ಷದಿಂದ ಫಲಾನುಭವಿಗಳ ಆಯ್ಕೆ ನಡೆದಿಲ್ಲ. ಹಾಸ್ಟೆಲ್ ಗಳಲ್ಲಿ ಮೂಲಭೂತ ಸೌಕರ್ಯ ನೀಡಿಲ್ಲ. ವಾಲ್ಮೀಕಿ‌ ಸಮುದಾಯದ ರೈತರ ಜಮೀನಿಗೆ ಕೊಳವೆ ಬಾವಿ ಕೊರೆದಿಲ್ಲ. ನಿಗಮದ ಹಣವನ್ನು ಸಂಪೂರ್ಣ ಲೂಟಿ ಮಾಡಲಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಸಚಿವರು ರಾಜೀನಾಮೆ ನೀಡಿದ್ದಾರೆ. ದಲಿತರ ಉದ್ದಾರ ಮಾಡುತ್ತೇವೆ ಎಂದು ಹೇಳುವವರೇ ದಲಿತರ ಹಣ ಲೂಟಿ ಮಾಡಿದ್ದಾರೆ. ಹಗರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು” ಎಂದು ಹೇಳಿದರು.

ಇದನ್ನೂ ಓದಿ: Karnataka Assembly Session: ಮೂಡಾ ಹಗರಣದ ಚರ್ಚೆಗೆ ವಿಧಾನಸಭೆಯಲ್ಲಿ ಬಿಜೆಪಿ ಆಗ್ರಹ; Live ಇಲ್ಲಿ ನೋಡಿ

Continue Reading

ಕ್ರೈಂ

ಆನೇಕಲ್‌ನಲ್ಲಿ ಪುರಸಭೆ ಸದಸ್ಯನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ

Anekal: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆನೇಕಲ್‌ ಪುರಸಭೆಯ 22ನೇ ವಾರ್ಡ್‌ ಸದಸ್ಯರಾಗಿರುವ ರವಿ ಅವರ ಮೇಲೆ ವೈಷ್ಯಮ್ಯ ಇತ್ತು. ಇದೇ ಕಾರಣಕ್ಕಾಗಿ ಏಕಾಏಕಿ ದಾಳಿ ನಡೆಸಿ, ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Anekal
Koo

ಆನೇಕಲ್:‌ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ (Anekal) ಪಟ್ಟಣದಲ್ಲಿ ಪುರಸಭೆ ಸದಸ್ಯರೊಬ್ಬರನ್ನು (Municipality Member) ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಆನೇಕಲ್‌ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ ಪುರಸಭೆ ಸದಸ್ಯ ರವಿ ಅಲಿಯಾ ಸ್ಕ್ರ್ಯಾಪ್‌ ರವಿ ಎಂಬುವರನ್ನು ಬುಧವಾರ (ಜುಲೈ 24) ರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆನೇಕಲ್‌ ಪುರಸಭೆಯ 22ನೇ ವಾರ್ಡ್‌ ಸದಸ್ಯರಾಗಿರುವ ರವಿ ಅವರ ಮೇಲೆ ವೈಷ್ಯಮ್ಯ ಇತ್ತು. ಇದೇ ಕಾರಣಕ್ಕಾಗಿ ಏಕಾಏಕಿ ದಾಳಿ ನಡೆಸಿ, ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ದಾಳಿ ಮಾಡಿದವರು ಯಾರು, ಅವರಿಗೆ ಯಾವ ಸೇಡು ಇತ್ತು ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಪುರಸಭೆ ಸದಸ್ಯ ರವಿ.

ರವಿ ಅವರ ಶವವನ್ನು ಆನೇಕಲ್‌ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರು ಹಾಗೂ ಆಪ್ತರು ಜಮಾಯಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು, ಕೊಲೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್‌ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಶೂಟೌಟ್;‌ ಸಾವಿನ ಸಂಖ್ಯೆ 2

ಚಿಕ್ಕಬಳ್ಳಾಪುರದಲ್ಲಿ ಬುಧವಾರ ಬೆಳಗ್ಗೆ ನಡೆದ ಶೂಟೌಟ್ (Shootout) ಪ್ರಕರಣದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಹಂಪಸಂದ್ರ ಗ್ರಾಮದಲ್ಲಿ ಬಶೀರ್ ಅಹ್ಮದ್ (66) ಪಿಸ್ತೂಲಿನಿಂದ ಗುಂಡು ಹಾರಿಸಿದ ಬಳಿಕ ಮಚ್ಚಿನಿಂದ ದಾಳಿ ನಡೆಸಿದ್ದ. ಗುಂಡೇಟು ತಗುಲಿ ನಜೀರ್ ಅಹ್ಮದ್ (46) ಸ್ಥಳದಲ್ಲೇ ಅಸುನೀಗಿದ್ದರೆ, ಮಚ್ಚಿನ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಅವರ ತಂದೆ ಮಹಬೂಬ್ ಸಾಬ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ಇದನ್ನೂ ಓದಿ: Murder Case: ಲೇಡಿಸ್‌ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌; ಪ್ರಿಯತಮನೇ ಕೊಲೆಗಾರ

Continue Reading

ಕರ್ನಾಟಕ

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

R Ashok: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಘೋಷಿಸಿದ್ದಾರೆ. ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

ahoratri dharani until the guilts are punished says Opposition party Leader R Ashok
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು. ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ತಿಳಿಸಿದರು.

ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೂಟಿಯಾದ ಹಣ ಮರಳಿ ಸರ್ಕಾರದ ಖಜಾನೆಗೆ ಬರಬೇಕು. ಇದಕ್ಕಾಗಿ ಹಗಲು ರಾತ್ರಿ ಧರಣಿ ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡುತ್ತೇವೆ. ರಾತ್ರಿ ಧರಣಿ ಮಾಡುವವರಿಗೆ ಊಟ ಬೇಕಾ ಎಂದು ಸ್ಪೀಕರ್ ಕೇಳಿದ್ದಾರೆ. ಮಾತನಾಡಲು ಅವಕಾಶ ನೀಡದವರ ಊಟ, ದಲಿತರ ಹಣ ಕೊಳ್ಳೆ ಹೊಡೆದವರ ಊಟ ಬೇಡ ಎಂದು ತಿರಸ್ಕಾರ ಮಾಡಿದ್ದೇವೆ. ರಾತ್ರಿ ಪೂರ್ತಿ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಧರಣಿ ಮಾಡುತ್ತೇವೆ. ನಾಳೆ ಕೂಡ ಧರಣಿ ಮುಂದುವರಿಯಲಿದೆ. ಎರಡೂ ಹಗರಣಗಳಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಧರಣಿ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Paris Olympics: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ದೊಡ್ಡ ಹಗರಣ ನಡೆದಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬ 14 ಸೈಟು ಹಾಗೂ ಅವರ ಬೆಂಬಲಿಗರು ನೂರಾರು ಸೈಟು ಕೊಳ್ಳೆ ಹೊಡೆದಿದ್ದಾರೆ. ಮುಡಾದಲ್ಲಿ 1 ಲಕ್ಷಕ್ಕೂ ಅಧಿಕ ಚದರಡಿಯ ಹಾಗೂ 3-4 ಸಾವಿರ ಕೋಟಿ ರೂ. ಬೆಲೆಯ ಪ್ರಮುಖ ನಿವೇಶನಗಳನ್ನು ಲೂಟಿ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಕಾಯಲಿ ಎಂದು ಜನರು ಅಧಿಕಾರ ಕೊಟ್ಟರೆ ಆ ವ್ಯಕ್ತಿ ಸ್ವಜನಪಕ್ಷಪಾತದಿಂದ ನಿವೇಶನಗಳನ್ನು ತನ್ನ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಕೂಡ ಮುಖ್ಯಮಂತ್ರಿಯ ಹೆಗಲಿಗೆ ಬರುವ ಲಕ್ಷಣ ಕಂಡುಬಂದಿದೆ. ಮುಡಾದಲ್ಲಿ ದಲಿತರ ಜಮೀನು ಲೂಟಿ ಮಾಡಿದರೆ, ನಿಗಮದಲ್ಲಿ ದಲಿತರ ಹಣ ಲೂಟಿಯಾಗಿದೆ. ಜತೆಗೆ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ವರ್ಗಾಯಿಸಲಾಗಿದೆ. ತಾವೇನೂ ಅಕ್ರಮ ಮಾಡಿಲ್ಲವೆಂದರೆ ಅಧಿವೇಶನದಲ್ಲಿ ಚರ್ಚಿಸಲು ಭಯ ಏಕೆ? ಇಡೀ ಕಾಂಗ್ರೆಸ್ ತಂಡ ಸದನದಲ್ಲಿ ಉತ್ತರಿಸಲು ಸಾಧ್ಯವಾಗದೆ ಓಡುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Health Tips Kannada: ನಿಂತ ಮಳೆ ನೀರಿನಿಂದ ಈ 7 ರೋಗಗಳು ಬರುತ್ತವೆ ಎನ್ನುವುದು ನಿಮಗೆ ಗೊತ್ತೆ?

ಹಗರಣದ ತನಿಖೆಗೆ ನ್ಯಾಯಮೂರ್ತಿಗಳ ನೇತೃತ್ವದ ತಂಡ ರಚಿಸಲಾಗಿದೆ. ಆದರೆ ಮುಖ್ಯಮಂತ್ರಿಯೇ ತನಿಖೆಗೆ ಆದೇಶ ಮಾಡಿದರೆ ನ್ಯಾಯ ಹೇಗೆ ಸಿಗಲಿದೆ? ಸ್ಪೀಕರ್ ಕೂಡ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಭೋವಿ ನಿಗಮದ ಹಗರಣ ಚರ್ಚಿಸಲು ಅವಕಾಶ ನೀಡುತ್ತಾರೆ, ಆದರೆ ವಾಲ್ಮೀಕಿ ನಿಗಮದ ಹಗರಣ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಸ್ಪೀಕರ್ ನಡೆ ಕೂಡ ಪ್ರಶ್ನಾರ್ಹವಾಗಿದೆ ಎಂದು ಆರೋಪಿಸಿದರು.

Continue Reading

ಬೆಂಗಳೂರು

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Traffic Restrictions: ವೈಟ್ ಟಾಪಿಂಗ್ ಕಾಮಗಾರಿ ಮುಕ್ತಾಯವಾಗುವವರೆಗೂ ರಾಜಾಜಿನಗರ 1ನೇ ಬ್ಲಾಕ್‌ನಿಂದ ಡಾ.ರಾಜ್ ಕುಮಾರ್ ರಸ್ತೆಯ 10ನೇ ಕ್ರಾಸ್‌ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಾಮಗಾರಿ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

VISTARANEWS.COM


on

Traffic Restrictions
Koo

ಬೆಂಗಳೂರು: ಜುಲೈ 25ರಿಂದ ರಾಜಾಜಿನಗರ ಬಳಿ ವೈಟ್ ಟಾಪಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ರಾಜಾಜಿನಗರ 1ನೇ ಬ್ಲಾಕ್‌ನಿಂದ ಡಾ.ರಾಜ್ ಕುಮಾರ್ ರಸ್ತೆಯ 10ನೇ ಕ್ರಾಸ್‌ವರೆಗೆ ವಾಹನಗಳ ಸಂಚಾಕ್ಕೆ ನಿರ್ಬಂಧ (Traffic Restrictions) ವಿಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ತಿಳಿಸಿದೆ.

ವೈಟ್ ಟಾಪಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಕಾಮಗಾರಿ ಮುಕ್ತಾಯವಾಗುವವರೆಗೂ ರಾಜಾಜಿನಗರ 1ನೇ ಬ್ಲಾಕ್‌ನಿಂದ ಡಾ.ರಾಜ್ ಕುಮಾರ್ ರಸ್ತೆಯ 10ನೇ ಕ್ರಾಸ್‌ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸಂಚಾರ ಮಾರ್ಗ ಬದಲಾವಣೆ

  • ಇಸ್ಕಾನ್ ಎಂಟ್ರಿ ಕಡೆಯಿಂದ ಬರುವ ವಾಹನಗಳು ನೇರವಾಗಿ ಸ್ಟಾರ್ ಸರ್ಕಲ್ (ಮೋದಿ ಬ್ರಿಡ್ಜ್) ಎಡ ತಿರುವು ಮೂಲಕ ನವರಂಗ್ ವೃತ್ತದ ಬಳಿ ಎಡ ತಿರುವು ಪಡೆದು ಡಾ.ರಾಜ್ ಕುಮಾರ್ ರಸ್ತೆ 10ನೇ ಕ್ರಾಸ್ ಕಡೆಗೆ ಸಂಚರಿಸಬಹುದಾಗಿದೆ.
  • ಮಹಾಲಕ್ಷ್ಮಿ ಲೇಔಟ್ ಕೆಳ ಭಾಗದಿಂದ ಸಂಚರಿಸುವ ವಾಹನಗಳು ಬಲ ತಿರುವು ಪಡೆದು ಸ್ಟಾರ್ ಸರ್ಕಲ್ (ಮೋದಿ ಬ್ರಿಡ್) ಎಡ ತಿರುವು ಮೂಲಕ ನವರಂಗ್ ವೃತ್ತದ ಬಳಿ ಎಡ ತಿರುವು ಪಡೆದು ಡಾ.ರಾಜ್ ಕುಮಾರ್ ರಸ್ತೆ 10ನೇ ಕ್ರಾಸ್ ಕಡೆಗೆ ಸಂಚರಿಸಬಹುದಾಗಿದೆ.
  • ಮಹಾಲಕ್ಷ್ಮಿ ಲೇಔಟ್ ಕೆಳ ಭಾಗದಿಂದ ಸಂಚರಿಸುವ ವಾಹನಗಳು ಎಡ ತಿರುವು ಪಡೆದು ಜಿಎಸ್ಎಫ್ ವೃತ್ತದ ಮೂಲಕ ಡಾ.ರಾಜ್ ಕುಮಾರ್ ರಸ್ತೆ 10 ನೇ ಕ್ರಾಸ್ ಕಡೆಗೆ ಸಂಚರಿಸಬಹುದಾಗಿದೆ.
  • ರಾಜಾಜಿನಗರ ಮೆಟ್ರೋ ಸ್ಟೇಷನ್ ಕಡೆಯಿಂದ ಸಂಚರಿಸುವ ವಾಹನಗಳು ರಾಜಾಜಿನಗರ 1ನೇ ಬ್ಲಾಕ್ ಜಂಕ್ಷನ್‌ನಲ್ಲಿ ಯು ಟರ್ನ್ ಪಡೆದು ಸ್ಟಾರ್ ಸರ್ಕಲ್ (ಮೋದಿ ಬ್ರಿಡ್ಜ್) ಎಡ ತಿರುವು ಮೂಲಕ ನವರಂಗ್ ವೃತ್ತದ ಬಳಿ ಎಡ ತಿರುವು ಪಡೆದು ಡಾ.ರಾಜ್‌ಕುಮಾರ್ 10 ನೇ ಕ್ರಾಸ್ ಕಡೆಗೆ ಸಂಚರಿಸಬಹುದಾಗಿದೆ.
  • ರಾಜಾಜಿನಗರ ಮೆಟ್ರೋ ಸ್ಟೇಷನ್ ಕಡೆಯಿಂದ ಸಂಚರಿಸುವ ವಾಹನಗಳು ನೇರವಾಗಿ ಜಿಎಸ್‌ಎಫ್ ಮುಖಾಂತರ ಡಾ.ರಾಜ್ ಕುಮಾರ್ 10ನೇ ಕ್ರಾಸ್ ಕಡೆಗೆ ಸಂಚರಿಸಬಹುದಾಗಿದೆ. ಸುಗಮ‌ ಸಂಚಾರದ ಅಡಚಣೆಗೆ ಸಾರ್ವಜನಿಕರು ಸಹಕರಿಸಲು ಮಲ್ಲೇಶ್ವರಂ ಸಂಚಾರ ಠಾಣೆ ಪೊಲೀಸರು ಮನವಿ ಮಾಡಿದ್ದಾರೆ.

ಜು.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ನಗರದ 66/11 ಕೆ.ವಿ ಎನ್.ಜಿ.ಇ.ಎಫ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಜು.25ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಇನ್ನೂ ಓದಿ | Health Tips Kannada: ನಿಂತ ಮಳೆ ನೀರಿನಿಂದ ಈ 7 ರೋಗಗಳು ಬರುತ್ತವೆ ಎನ್ನುವುದು ನಿಮಗೆ ಗೊತ್ತೆ?

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ.ನಾರಾಯಣಪುರ, ಬಿ. ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್‌ಜಿಇಎಫ್ ಲೇಔಟ್‌ನ ಪೂರ್ವ, ಸದಾನಂದನಗರ, ಕಸ್ತೂರಿ ನಗರ, ಭುವನೇಶ್ವರಿ ನಗರ, ಹೊಯ್ಸಳ ನಗರ, ಮುನೇಶ್ವರ ನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್, ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ವರ್ತೂರು ರಸ್ತೆ, ಕೆ.ಆರ್. ರಸ್ತೆ. ಜೋಗುಪಾಳ್ಯ ಆರ್ಟಿಲರಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟವರ್ಸ್‌, ಹಲಸೂರು ರಸ್ತೆ, ಸಿ.ಎಂ.ಎಚ್ ರಸ್ತೆ, ಇಂದಿರಾನಗರ 2ನೇ ಹಂತ, ಇಂದಿರಾನಗರ 1ನೇ ಹಂತ, ಕೃಷ್ಣ ದೇವಸ್ಥಾನ ರಸ್ತೆ, ಡಿಫೆನ್ಸ್ ಕಾಲೋನಿ, 515 ಕಾಲೋನಿ, ನ್ಯೂ ಬೈಯಪ್ಪನಹಳ್ಳಿ, ಮೈಚಪಾಳ್ಯ, ಕದಿರೆ ರಸ್ತೆ, ಇಂದಿರಾನಗರ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್ ಕೃಷ್ಣ ದೇವಸ್ಥಾನ ರಸ್ತೆ, ಇಂದಿರಾನಗರ ಕ್ಲಬ್, ಕೆಇಬಿ ಕ್ವಾರ್ಟರ‍್ಸ್, ದೂಪನಹಳ್ಳಿ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 12ನೇ ಮುಖ್ಯ, 11ನೇ ಮುಖ್ಯ, ಕೆಪಿಟಿಸಿಎಲ್ ಕ್ವಾರ್ಟರ‍್ಸ್, ಇಎಸ್ಐ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

Continue Reading
Advertisement
BJP Protest
ಕರ್ನಾಟಕ4 hours ago

BJP Protest: ಸದನದಲ್ಲಿ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ: ಅಲ್ಲೇ ಭಜನೆ, ಊಟ, ನಿದ್ದೆ; ಫೋಟೊ, ವಿಡಿಯೊ ಇಲ್ಲಿವೆ

Nitish Kumar
ದೇಶ4 hours ago

Nitish Kumar: ನೀನೂ ಹೆಣ್ಣು; ವಿಧಾನಸಭೆಯಲ್ಲೇ ಆರ್‌ಜೆಡಿ ಶಾಸಕಿಗೆ ನಿತೀಶ್‌ ಕುಮಾರ್‌ ಗದರಿದ್ದೇಕೆ?

Paris Olympics
ಕ್ರೀಡೆ5 hours ago

Paris Olympics: ಕೊಕೊ ಗಾಫ್ ಅಮೆರಿಕದ ಧ್ವಜಧಾರಿ; ಈ ಗೌರವ ಪಡೆದ ಅತಿ ಕಿರಿಯ ಕ್ರೀಡಾಪಟು

Anekal
ಕ್ರೈಂ6 hours ago

ಆನೇಕಲ್‌ನಲ್ಲಿ ಪುರಸಭೆ ಸದಸ್ಯನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ

Hardik Pandya
ಕ್ರೀಡೆ6 hours ago

Hardik Pandya: ವಿಚ್ಛೇದನ ನೀಡಿ ಒಂದು ವಾರ ಕಳೆಯುವ ಮುನ್ನವೇ ಮಾಜಿ ಪತ್ನಿಯ ಪೋಸ್ಟ್​ಗೆ ಲೈಕ್ಸ್​, ಕಮೆಂಟ್​ ಮಾಡಿದ ಹಾರ್ದಿಕ್​ ಪಾಂಡ್ಯ

King Chopper
ದೇಶ6 hours ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ6 hours ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು6 hours ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ6 hours ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು6 hours ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ21 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ2 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ5 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ6 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ6 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ7 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌