Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಬಜೆಟ್‌ ದಿನ ಕುಸಿದಿದ್ದ ಚಿನ್ನದ ದರ - Vistara News

ಚಿನ್ನದ ದರ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಬಜೆಟ್‌ ದಿನ ಕುಸಿದಿದ್ದ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 24) ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,495 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,086 ಇದೆ.

VISTARANEWS.COM


on

Gold Rate Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 24) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,495 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,928 ಇದೆ.

22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,960 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,950 ಮತ್ತು ₹ 6,49,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 55,424 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 69,280 ಮತ್ತು ₹ 6,92,800 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,510 ₹ 7,101
ಮುಂಬೈ₹ 6,495 ₹ 7,086
ಬೆಂಗಳೂರು₹ 6,495₹ 6,928
ಚೆನ್ನೈ₹ 6,490 ₹ 7,080

ಬೆಳ್ಳಿ ಧಾರಣೆ

ಬೆಳ್ಳಿ ಒಂದು ಗ್ರಾಂಗೆ ₹ 88.75 ಹಾಗೂ 8 ಗ್ರಾಂಗೆ ₹ 710 ಇದೆ. 10 ಗ್ರಾಂ ₹ 887.5 ಹಾಗೂ 1 ಕಿಲೋಗ್ರಾಂ ₹ 88,750 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: Budget Analysis 2024: ಅನ್ನದಾತ, ಗರೀಬ, ಮಹಿಳಾ ಮತ್ತು ಯುವಜನತೆಯ ಅಭಿವೃದ್ಧಿಯನ್ನು ಕೇಂದ್ರೀಕರಿಸಿದ ಬಜೆಟ್

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ. ಸದ್ಯ ಬಜೆಟ್‌ನಲ್ಲಿ ಚಿನ್ನದ ಮೇಲಿನ ತೆರಿಗೆ ಕಡಿಮೆ ಮಾಡಲಾಗಿದ್ದು, ಬೆಲೆ ಇಳಿಕೆಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದಿನ ದರ ಚೆಕ್‌ ಮಾಡಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 23) ಕೂಡ ಇಳಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 27 ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 23) ಕೂಡ ಇಳಿಕೆಯಾಗಿದೆ (Gold Rate Today). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 27 ಕಡಿಮೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,960 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,450 ಮತ್ತು ₹ 6,74,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,864 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,580 ಮತ್ತು ₹ 7,35,800 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,760 ₹ 7,373
ಮುಂಬೈ₹ 6,745 ₹ 7,358
ಬೆಂಗಳೂರು₹ 6,745 ₹ 7,358
ಚೆನ್ನೈ₹ 6,810 ₹ 7,429

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿಯೂ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91 ಹಾಗೂ 8 ಗ್ರಾಂಗೆ ₹ 728 ಇದೆ. 10 ಗ್ರಾಂಗೆ ₹ 910 ಹಾಗೂ 1 ಕಿಲೋಗ್ರಾಂಗೆ ₹ 91,000 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Union Budget 2024 Live: ಕಸ್ಟಮ್ಸ್‌ ತೆರಿಗೆ ಇಳಿಸಿದ ಕೇಂದ್ರ; ವೈದ್ಯಕೀಯ ಉಪಕರಣಗಳಿಗೆ ಕಸ್ಟಮ್ಸ್‌ ಸುಂಕದಿಂದ ವಿನಾಯಿತಿ

Continue Reading

ಚಿನ್ನದ ದರ

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು ಇಳಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 12 ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,770 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,385 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 22) ಇಳಿಕೆಯಾಗಿದೆ (Gold Rate Today). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 12 ಕಡಿಮೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,770 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,385 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,160 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,700 ಮತ್ತು ₹ 6,77,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,080 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,850 ಮತ್ತು ₹ 7,38,500 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,785 ₹ 7,400
ಮುಂಬೈ₹ 6,770 ₹ 7,385
ಬೆಂಗಳೂರು₹ 6,770₹ 7,385
ಚೆನ್ನೈ₹ 6,825 ₹ 7,445

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿಯೂ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.55 ಹಾಗೂ 8 ಗ್ರಾಂಗೆ ₹ 732.40 ಇದೆ. 10 ಗ್ರಾಂಗೆ ₹ 915.50 ಹಾಗೂ 1 ಕಿಲೋಗ್ರಾಂಗೆ ₹ 91,550 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Central Budget 2024: ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

Continue Reading

ಚಿನ್ನದ ದರ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ತಿಳಿದುಕೊಳ್ಳಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 21) ಯಥಾಸ್ಥಿತಿ ಕಾಯ್ದುಕೊಂಡಿದೆ. ಶನಿವಾರ ಚಿನ್ನದ ಬೆಲೆ ಇಳಿಮುಖವಾಗಿ ಗ್ರಾಹಕರು ಕೊಂಚ ನಿರಾಳವಾಗಿದ್ದರು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,780 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,397 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 21) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಶನಿವಾರ ಚಿನ್ನದ ಬೆಲೆ ಇಳಿಮುಖವಾಗಿ ಗ್ರಾಹಕರು ಕೊಂಚ ನಿರಾಳವಾಗಿದ್ದರು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,780 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,397 ಇದೆ.

22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,240 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,800 ಮತ್ತು ₹ 6,78,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,176 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,970 ಮತ್ತು ₹ 73,970 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,795 ₹ 7,412
ಮುಂಬೈ₹ 6,780 ₹ 7,397
ಬೆಂಗಳೂರು₹ 6,780₹ 7,397
ಚೆನ್ನೈ₹ 6,835₹ 7,457

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿಯೂ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.65 ಹಾಗೂ 8 ಗ್ರಾಂಗೆ ₹ 733.20 ಇದೆ. 10 ಗ್ರಾಂಗೆ ₹ 916.50 ಹಾಗೂ 1 ಕಿಲೋಗ್ರಾಂಗೆ ₹ 91,650 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Honor 200 Series : ಒಂದೇ ದಿನ 2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಹಾನರ್

Continue Reading

ವಾಣಿಜ್ಯ

Gold Rate Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಸ್ವರ್ಣ ಪ್ರಿಯರಿಗೆ ಶುಭ ಸುದ್ದಿ

Gold Rate Today:ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,780 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,397 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,240 ಇದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು ಮತ್ತೆ ಇಳಿಕೆಯಾಗಿದೆ (Gold Rate Today). ಚಿನ್ನದ ಬೆಲೆ ಇಳಿಮುಖವಾಗಿ ಗ್ರಾಹಕರು ಕೊಂಚ ನಿರಾಳವಾಗಿದ್ದಾರೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 38ಗಳಷ್ಟು ಕಡಿಮೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,780 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,397 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,240 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,800 ಮತ್ತು ₹ 6,78,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,176 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,970 ಮತ್ತು ₹ 73,970 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,830₹ 7,457
ಮುಂಬೈ₹ 6,780₹ 7,397
ಬೆಂಗಳೂರು₹ 6,780₹ 7,397
ಚೆನ್ನೈ₹ 6,835₹ 7,457

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿತೈ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.65 ಹಾಗೂ 8 ಗ್ರಾಂಗೆ ₹ 733.20 ಇದೆ. 10 ಗ್ರಾಂಗೆ ₹ 916.50 ಹಾಗೂ 1 ಕಿಲೋಗ್ರಾಂಗೆ ₹ 91,650 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ.

ಇದನ್ನೂ ಓದಿ:Union Budget 2024: ಬಜೆಟ್‌ಗೂ ಮೊದಲು, ನಂತರ ಹೂಡಿಕೆ ಮಾಡುವುದು ಲಾಭವೇ? ತಜ್ಞರು ಹೇಳೋದಿಷ್ಟು

Continue Reading
Advertisement
King Chopper
ದೇಶ16 mins ago

Sea King Chopper: ಸಾವಿನ ದವಡೆಯಲ್ಲಿದ್ದ ಚೀನಾ ನಾವಿಕನನ್ನು ರಕ್ಷಿಸಿದ ಭಾರತೀಯ ನೌಕಾಪಡೆ; ಮಾನವೀಯತೆಗೆ ಮೆಚ್ಚುಗೆ

ahoratri dharani until the guilts are punished says Opposition party Leader R Ashok
ಕರ್ನಾಟಕ18 mins ago

R Ashok: ಹಗರಣಕೋರರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ; ಆರ್. ಅಶೋಕ್‌ ಘೋಷಣೆ

Traffic Restrictions
ಬೆಂಗಳೂರು30 mins ago

Traffic Restrictions: ವೈಟ್ ಟಾಪಿಂಗ್ ಕಾಮಗಾರಿ; ನಾಳೆಯಿಂದ ರಾಜಾಜಿನಗರದ ಈ ಮಾರ್ಗದಲ್ಲಿ ಸಂಚಾರ ನಿಷೇಧ

Mohammed Shami
ಕ್ರೀಡೆ32 mins ago

Mohammed Shami: 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೊಹಮ್ಮದ್ ಶಮಿ; ತಡೆದು ನಿಲ್ಲಿಸಿದ್ದು ಯಾರು?

KP Poorchandra Tejaswi samagra kruthi Jagattu 14 samputagalu Lokarpane On July 29 in Bengaluru
ಬೆಂಗಳೂರು33 mins ago

Book Release: ಜು.29ರಂದು ಬೆಂಗಳೂರಿನಲ್ಲಿ 14 ಸಂಪುಟಗಳ ಪೂರ್ಣಚಂದ್ರ ತೇಜಸ್ವಿ ಕೃತಿ ಲೋಕಾರ್ಪಣೆ

Asteria Aerospace has introduced a SkyDeck platform that helps in various fields including agriculture
ದೇಶ37 mins ago

SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

Health Tips Kannada
ಆರೋಗ್ಯ1 hour ago

Health Tips Kannada: ನಿಂತ ಮಳೆ ನೀರಿನಿಂದ ಈ 7 ರೋಗಗಳು ಬರುತ್ತವೆ ಎನ್ನುವುದು ನಿಮಗೆ ಗೊತ್ತೆ?

Dog attack
ದೇಶ1 hour ago

Dog Attack: ವಕೀಲನ ಮೇಲೆ ಶ್ವಾನ ದಾಳಿ; ಖಾಸಗಿ ಅಂಗಕ್ಕೆ ಕಚ್ಚಿದ ಪಿಟ್‌ ಬುಲ್‌

Paris Olympics
ಕ್ರೀಡೆ1 hour ago

Paris Olympics: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು

Supreme Court
ದೇಶ2 hours ago

Supreme Court: ರೈತರು, ಸರ್ಕಾರದ ಮಧ್ಯೆ ‘ತಟಸ್ಥ ಅಂಪೈರ್’‌ ಬೇಕು; ಸುಪ್ರೀಂ ಕೋರ್ಟ್‌ ಮಹತ್ವದ ಸಲಹೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌