Pranitha Subhash: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಪ್ರಣಿತಾ ಸುಭಾಷ್‌; ಬೇಬಿ ಬಂಪ್ ಫೋಟೊ ಹಂಚಿಕೊಂಡ ನಟಿ - Vistara News

ಸ್ಯಾಂಡಲ್ ವುಡ್

Pranitha Subhash: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಪ್ರಣಿತಾ ಸುಭಾಷ್‌; ಬೇಬಿ ಬಂಪ್ ಫೋಟೊ ಹಂಚಿಕೊಂಡ ನಟಿ

Pranitha Subhash: ಸ್ಯಾಂಡಲ್‌ವುಡ್‌ ಮೂಲಕ ಚಿತ್ರರಂಗ ಪ್ರವೇಶಿಸಿದ ಬಹುಭಾಷಾ ನಟಿ ಪ್ರಣಿತಾ ಸುಭಾಷ್‌ ಇದೀಗ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ʼರೌಂಡ್ 2… ಪ್ಯಾಂಟ್‌ ಇನ್ನು ಮುಂದೆ ಫಿಟ್ ಆಗೋದಿಲ್ಲʼʼ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಬರೆದು ಪ್ರಣಿತಾ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಪ್ರಣಿತಾ ಸುಭಾಷ್ 2022ರಲ್ಲಿ ಹೆಣ್ಣು ಮಗವಿಗೆ ಜನ್ಮ ನೀಡಿದ್ದರು.

VISTARANEWS.COM


on

Pranitha Subhash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಮೂಲಕ ಚಿತ್ರರಂಗ ಪ್ರವೇಶಿಸಿದ ಬಹುಭಾಷಾ ನಟಿ ಪ್ರಣಿತಾ ಸುಭಾಷ್‌ (Pranitha Subhash) ಇದೀಗ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ʼʼರೌಂಡ್ 2… ಪ್ಯಾಂಟ್‌ ಇನ್ನು ಮುಂದೆ
ಫಿಟ್ ಆಗೋದಿಲ್ಲʼʼ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಬರೆದು ಪ್ರಣಿತಾ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಜತೆಗೆ ಬೇಬಿ ಬಂಪ್ ಫೋಟೊ ಅಪ್‌ಲೋಡ್‌ ಮಾಡಿದ್ದಾರೆ.

ಪ್ರಣಿತಾ ಸುಭಾಷ್ 2022ರಲ್ಲಿ ಹೆಣ್ಣು ಮಗವಿಗೆ ಜನ್ಮ ನೀಡಿದ್ದರು. ಅದಾದ ಬಳಿಕ ಚಿತ್ರರಂಗದಿಂದ ಕೊಂಚ ಬಿಡುವು ಪಡೆದಿದ್ದರು. ಇತ್ತೀಚೆಗೆ ಮತ್ತೆ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದರು. ಇದೀಗ ಮತ್ತೊಮ್ಮೆ ಸಿಹಿ ಸುದ್ದಿ ಹಂಚಿಕೊಂಡಿದ್ದು, ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

2021ರಲ್ಲಿ ವಿವಾಹ

ಪ್ರಣಿತಾ 2021ರ ಮೇ ತಿಂಗಳಲ್ಲಿ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜು ಅವರನ್ನು ಮದುವೆಯಾಗಿದ್ದರು. 2010ರಲ್ಲಿ ದರ್ಶನ್‌ ಅಭಿನಯದ ‘ಪೊರ್ಕಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಪ್ರಣಿತಾ ಕಡಿಮೆ ಸಮಯದಲ್ಲೇ ಸ್ಟಾರ್ ನಟರಾದ ಶಿವರಾಜ್ ಕುಮಾರ್, ಗಣೇಶ್, ತೆಲುಗು ನಟ ಪವನ್ ಕಲ್ಯಾಣ್, ಸಿದ್ದಾರ್ಥ್ ಹಾಗೂ ತಮಿಳು ನಟ ಸೂರ್ಯ, ಬಾಲಿವುಡ್ ನಟ ಅಜಯ್ ದೇವಗನ್, ಮಲಯಾಳಂ ನಟ ದಿಲೀಪ್‌ ಜತೆ ನಟಿಸಿ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿದ್ದರು. ಜನಪ್ರಿಯತೆಯ ತುತ್ತ ತುದಿಯಲ್ಲಿರುವಾಗಲೇ ವೈವಾಹಿಕ ಜೋವನಕ್ಕೆ ಕಾಲಿಟ್ಟಿದ್ದರು. ಬಳಿಕ ಮಗುವಿನ ಲಾಲನೆ-ಪಾಲನೆಗಾಗಿ ಕೊಂಚ್‌ ಬ್ರೇಕ್‌ ಪಡೆದುಕೊಂಡಿದ್ದರು. ಮಗುವಾದ ಬಳಿಕವೂ ಫಿಟ್‌ ಆಗಿದ್ದ ಅವರನ್ನು ಅಭಿಮಾನಿಗಳು ಸಂತೂರ್‌ ಮಮ್ಮಿ ಎಂದೇ ಕರೆಯುತ್ತಿದ್ದರು.

ಮಾಲಿವುಡ್‌ ಚಿತ್ರದ ಮೂಲಕ ಕಂಬ್ಯಾಕ್‌

‘ಪೊರ್ಕಿ’ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಅವರು ಬಳಿಕ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿಯೂ ಅಭಿನಯಿಸಿ ಈ ವರ್ಷ ಮಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದರು. ಆ ಮೂಲಕ ಮಾಲಿವುಡ್‌ನಿಂದ ಕಂಬ್ಯಾಕ್‌ ಮಾಡಿದ್ದರು. ಮಾಲಿವುಡ್‌ನ ಜನಪ್ರಿಯ ನಾಯಕ ದಿಲೀಪ್‌ (Dileep) ಅಭಿನಯದ ʼತಂಕಮಣಿʼ (Thankamani) ಚಿತ್ರದಲ್ಲಿ ಪ್ರಣಿತಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರ 2024ರ ಮಾರ್ಚ್‌ನಲ್ಲಿ ತೆರೆಕಂಡಿತ್ತು. ಮೇಯಲ್ಲಿ ರಿಷಿ ಜತೆ ಪ್ರಣಿತಾ ಮೊದಲ ಬಾರಿ ಅಭಿನಯಿಸಿದ ʼರಾಮನ ಅವತಾರʼ ಕನ್ನಡ ಚಿತ್ರ ಬಿಡುಗಡೆಯಾಗಿತ್ತು.

ಮೊದಲ ಬಾರಿ ಮಲಯಾಳಂ ಚಿತ್ರದಲ್ಲಿ ಕಾಣಿಸಿಕೊಂಡ ಪ್ರಣಿತಾಗೆ ಪವರ್‌ ಫುಲ್‌ ಪಾತ್ರವೇ ದೊರೆತಿತ್ತು. ಅರ್ಪಿತಾ ನಾಥ್‌ ಐಪಿಎಸ್‌ ಆಗಿ ಅವರು ತೆರೆ ಮೇಲೆ ಮಿಂಚಿದ್ದರು. 2021ರಲ್ಲಿ ತೆರೆಕಂಡ ಬಾಲಿವುಡ್‌ ʼಹಂಗಾಮ 2ʼ ಮತ್ತು ʼಭುಜ್‌: ದಿ ಪ್ರೈಡ್‌ ಆಫ್‌ ಇಂಡಿಯಾʼ ಚಿತ್ರಗಳ ಬಳಿಕ 3 ವರ್ಷ ಪ್ರಣಿತಾ ಅಭಿನಯದ ಯಾವುದೇ ಚಿತ್ರ ಬಿಡುಗಡೆಯಾಗಿರಲಿಲ್ಲ. ಬಣ್ಣದ ಲೋಕಕ್ಕೆ ಮರಳಿದ್ದ ಅವರು ಫೋಟೊ ಶೂಟ್‌, ಜಾಹೀರಾತು ಮೂಲಕ ಸಕ್ರಿಯರಾಗಿದ್ದರು. ಈ ಮಧ್ಯೆ ಅವರು ಕನ್ನಡ ಮಾಧ್ಯಮ ಶಾಲೆಗಳಿಗೆ ಸಹಾಯ ಹಸ್ತ ಚಾಚುವ ಮೂಲಕ ಸಮಾಜ ಸೇವೆಯಲ್ಲಿಯೂ ತೊಡಗಿದ್ದರು. ಕೈಯಲ್ಲಿರುವ ಸಿನಿಮಾಗಳ ಚಿತ್ರೀಕರಣಗಳನ್ನೆಲ್ಲ ಮುಗಿಸಿರುವ ಅವರು ಸದ್ಯ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Pranitha Subhash: ಹಿಂದು ಆಚರಣೆಗಳು ಕೇವಲ ಪಿತೃಪ್ರಧಾನವಲ್ಲಎಂದ ನಟಿ ಪ್ರಣಿತಾ ಸುಭಾಷ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Darshan: ನಟ ದರ್ಶನ್‌ಗೆ ಜೈಲೂಟ ಫಿಕ್ಸ್‌; ಕೋರ್ಟ್‌ ಮನೆಯೂಟದ ಅರ್ಜಿ ವಜಾಗೊಳಿಸಿದ್ದೇಕೆ?

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಇಂದೂ ನಿರಾಸೆ ಎದುರಾಗಿದೆ. ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್‌ಗೆ ಜೈಲೂಟವೇ ಫಿಕ್ಸ್‌ ಆಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಇಂದೂ ನಿರಾಸೆ ಎದುರಾಗಿದೆ. ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್‌ಗೆ ಜೈಲೂಟವೇ ಫಿಕ್ಸ್‌ ಆಗಿದೆ.

ದರ್ಶನ್ ಪರ ವಕೀಲರು ಹಾಗೂ ಸರ್ಕಾರಿ ಪರ ಎಸ್‌ಪಿಪಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ವಿಶ್ವನಾಥ ಸಿ. ಗೌಡರ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಅದರಂತೆ ತೀರ್ಪು ಪ್ರಕಟಗೊಂಡಿದೆ.

ದರ್ಶನ್ ಮನೆ ಊಟದ ಅರ್ಜಿ ವಜಾ ಆಗಲು ಕಾರಣ ಇದು

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳನ್ನಿಟ್ಟು ದರ್ಶನ್‌ ಅರ್ಜಿ ವಜಾಗೊಂಡಿದೆ.

ದರ್ಶನ್ ಪರ ವಕೀಲ ವಕೀಲರ ವಾದ ಏನಾಗಿತ್ತು?

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು.

ದರ್ಶನ್ ಒಬ್ಬ ಸೆಲೆಬ್ರಿಟಿ ಅಗಿರುವುದರಿಂದ ಪ್ರಚಾರ ಸಿಗುತ್ತದೆ. ಆಗಾಗಿಯೇ ಜೈಲು ಅಧಿಕಾರಿಗಳು ಮನೆ ಊಟಕ್ಕೆ ಅವಕಾಶ ನೀಡುತ್ತಿಲ್ಲ. ಆರೋಪ ಸಾಬೀತಾಗುವವರೆಗೂ ಮುಗ್ಧನೆಂದು ಪರಿಗಣಿಸಿ ಮನೆ ಊಟ, ಹಾಸಿಗೆ ಒದಗಿಸಬೇಕೆಂದು ಹೇಳಿದ್ದರು.

ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ಆಗಲ್ಲ

ಇದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಪ್ರತಿವಾದ ಆರಂಭಿಸಿ, ಜೈಲು ಊಟ ಜೀರ್ಣವಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಮೆಡಿಕಲ್ ರಿಪೋರ್ಟ್ ಕೋರ್ಟ್‌ಗೆ ಸಲ್ಲಿಸಿದ್ದೇವೆ. ನ್ಯಾಯಾಂಗ ಬಂಧನಕ್ಕೆ ಕಳುಹಿಸುವಾಗ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಅವರಿಗೆ ಆರ್ಥೋಪೆಡಿಕ್ ಸಮಸ್ಯೆ ಇದೆ. ಅದಕ್ಕೆ ಮೊದಲು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದನ್ನ ಮುಂದುವರಿಸಲು ಸೂಚನೆ ನೀಡಿದ್ದರು. ಈಗ ಡಯಟ್ ಪುಡ್ ಕೇಳಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಜೈಲು ಮ್ಯಾನ್ಯುವಲ್ ಪ್ರಕಾರ ಏನೇನು ನೀಡಬೇಕೋ ಅದನ್ನು ನೀಡುತ್ತಿದ್ದೇವೆ. ಜೈಲು ಕೈಪಿಡಿಯಲ್ಲಿ ಮನೆ ಊಟ ಎಂಬ ಪದವೇ ಇಲ್ಲ. ಹುಷಾರಿಲ್ಲದ ವೇಳೆ ಎಕ್ಟ್ರಾ ಡಯಟ್ 30 ದಿನ ನೀಡಬಹುದು. ವಾರದಲ್ಲಿ ಒಂದು ದಿನ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡಬಹುದು. ಜ್ವರ ಇದ್ದಾಗ ಬಿಸಿ ನೀರು ನೀಡುತ್ತಾರೆ. ಪ್ರತಿದಿನ ಬಿರಿಯಾನಿ ತಿನ್ನಬೇಕು ಅಂದ್ರೆ ನಿಯಮದಲ್ಲಿ ಅವಕಾಶ ಇಲ್ಲ ಎಂದು ತಿಳಿಸಿದ್ದರು.

ಇದನ್ನೂ ಓದಿ: Actor Darshan: ದರ್ಶನ್‌ ಆರೋಪಮುಕ್ತನಾಗಿ ಶೀಘ್ರ ಹೊರ ಬರಲಿ; ಹಿರಿಯ ನಟಿ ಗಿರಿಜಾ ಲೋಕೇಶ್ ಹಾರೈಕೆ

ಸದ್ಯ ದರ್ಶನ್ ಮೆಡಿಕಲ್ ರಿಪೋರ್ಟ್‌ನಲ್ಲಿ ಬೆಡ್ ರೆಸ್ಟ್ ಬೇಕು ಎಂದಿದೆ. ಜೈಲು ವೈದ್ಯಾಧಿಕಾರಿಗಳು ಅಗತ್ಯವಿದ್ದರೆ ವಿಶೇಷ ಆಹಾರವನ್ನು ನೀಡಬಹುದು. ಜೈಲು ನಿಯಮ 728 ರಲ್ಲಿ ಬಟ್ಟೆ, ಹಾಸಿಗೆ ನೀಡುವ ನಿಯಮವಿದೆ. ಇದು ಕೊಲೆ ಆರೋಪಿಯನ್ನು ಹೊರತು ಪಡಿಸಿ ಬೇರೆ ಕೈದಿಗಳಿಗೆ ಅನ್ವಯವಾಗುತ್ತದೆ. ದರ್ಶನ್ ನಾನು ನಿತ್ಯ ಜಿಮ್‌ನಲ್ಲಿ ಕಸರತ್ತು ಮಾಡುತ್ತಿದ್ದೆ. ಹೀಗಾಗಿ ಜೈಲಿನಲ್ಲಿ ನೀಡುವ ಊಟದ ಜೊತೆಗೆ ಎಕ್ಟ್ರಾ ಪ್ರೋಟಿನ್ ನೀಡಬೇಕೆಂದು ಮಾನವಿ ಮಾಡಿದ್ದಾರೆ. ಪ್ರತಿ ಭಾರಿ ನಾನು ಮನೆಯಲ್ಲಿ ವ್ಯಾಯಾಮ ಮಾಡ್ತಿದ್ದೆ. ಪ್ರೋಟಿನ್ ಆಹಾರ ತಿನ್ನುತ್ತಿದ್ದೆ. ಹೀಗಾಗಿ ಮನೆ ಊಟ ಬೇಕು ಎಂದಿದ್ದಾರೆ. ದರ್ಶನ್ ಬಂಧನವಾಗೋವರೆಗೂ ವ್ಯಾಯಾಮ ಮಾಡಿಕೊಂಡಿದ್ದರು, ಈಗ ಬಂಧಿಯಾಗಿದ್ದಾರೆ. ಜೈಲಿನಲ್ಲಿದ್ದಾಗಲೂ ಎಲ್ಲ ಸೌಲಭ್ಯಗಳು ಬೇಕೆಂದರೆ ಹೇಗೆ ಎಂದು ಪ್ರಶ್ನಿಸಿದ್ದರು.

Continue Reading

ಸಿನಿಮಾ

Toxic Movie: ಯಶ್‌ ಚಿತ್ರಕ್ಕೆ ಎದುರಾಯ್ತು ಕಾನೂನು ಸಂಕಷ್ಟ; ‘ಟಾಕ್ಸಿಕ್’ ವಿರುದ್ಧ ವಕೀಲ ಕೋರ್ಟ್‌ ಮೆಟ್ಟಿಲೇರಿದ್ದೇಕೆ?

Toxic Movie: ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ‘ಟಾಕ್ಸಿಕ್‌’ ಚಿತ್ರಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಚಿತ್ರದ ವಿರುದ್ಧ ವಕೀಲ ಜಿ. ಬಾಲಾಜಿ ನಾಯ್ಡು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ, ಹಾಗಾದರೆ ಏನಿದು ವಿವಾದ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Toxic Movie
Koo

ಬೆಂಗಳೂರು: ಪ್ರಶಾಂತ್‌ ನೀಲ್‌ (Prashanth Neel) ನಿರ್ದೇಶನದ ಕೆಜಿಎಫ್‌ (KGF) ಸರಣಿ ಚಿತ್ರಗಳ ಬಳಿಕ ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಲಕ್‌ ಬದಲಾಗಿದೆ. ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಬದಲಾಗಿದ್ದಾರೆ. ಸದ್ಯ ಯಶ್‌ ‘ಟಾಕ್ಸಿಕ್‌’ ಚಿತ್ರ (Toxic Movie)ದಲ್ಲಿ ಅಭಿನಯಿಸುತ್ತಿದ್ದು, ಈಗಾಗಲೇ ಇದು ಇಡೀ ದೇಶದ ಗಮನ ಸೆಳೆದಿದೆ. ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಮೂಡಿದೆ. ಈ ಮಧ್ಯೆ ಚಿತ್ರತಂಡಕ್ಕೆ ಕಾನೂನು ಸಂಕಷ್ಟವೊಂದು ಎದುರಾಗಿದೆ. ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಸಿನಿಮಾ ಸೆಟ್ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಹೈಕೋರ್ಟ್‌ (Karnataka High Court)ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದಾರೆ.

ಈ ಸಂಬಂಧ ಇದೀಗ ಚಿತ್ರ ನಿರ್ಮಿಸುತ್ತಿರುವ ಕೆವಿಎನ್ ಫಿಲ್ಮ್ ನಿರ್ಮಾಣ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ನೀಡಿದೆ. ಜತೆಗೆ ಸರ್ಕಾರ ಮತ್ತು ಎಚ್ಎಂಟಿ ಕಂಪನಿಗೂ ನೋಟಿಸ್ ಜಾರಿ ಮಾಡಲಾಗಿದೆ. ಪೀಣ್ಯ ಪ್ಲಾಂಟೇಷನ್ ಜಮೀನಿನ 20.07 ಎಕರೆಯಲ್ಲಿ ಸಿನಿಮಾ ಸೆಟ್ ಹಾಕಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಅರಣ್ಯ ಭೂಮಿಯಲ್ಲಿ ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಾಣ ಮಾಡಲಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಲಾಗಿದೆ. ಸದ್ಯ ನೋಟಿಸ್ ಜಾರಿಗೆ ಆದೇಶಿಸಿ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ. ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್ ಪೀಠ ವಿಚಾರಣೆಯನ್ನು ಆ. 19ಕ್ಕೆ ಮುಂದೂಡಿದೆ.

ಏನಿದು ವಿವಾದ?

ಎಚ್ಎಂಟಿ ಸಂಸ್ಥೆ ಈ ಭೂಮಿಯನ್ನು ಕೆನರಾ ಬ್ಯಾಂಕ್‌ಗೆ ಮಾರಾಟ ಮಾಡಿತ್ತು. ಇದನ್ನು ಕೆನರಾ ಬ್ಯಾಂಕ್ ಕೆವಿಎನ್ ಸಿನಿಮಾ ನಿರ್ಮಾಣ ಸಂಸ್ಥೆಗೆ ನೀಡಿದೆ. ಇದು ಅರಣ್ಯ ಭೂಮಿ. ಇಲ್ಲಿ ಅನಧಿಕೃತವಾಗಿ ಸೆಟ್‌ ಹಾಕಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಸದ್ಯ ಕೋರ್ಟ್‌ನ ಮುಂದಿನ ನಡೆ ಬಗ್ಗೆ ಕುತೂಹಲ ಮೂಡಿದೆ.

ಕುತೂಹಲ ಕೆರಳಿಸಿದ ಟಾಕ್ಸಿಕ್‌

2022ರಲ್ಲಿ ‘ಕೆಜಿಎಫ್‌ 2’ (KGF 2ತೆರೆಕಂಡಿತ್ತು. ಅದಾಗಿ ಎರಡೂವರೆ ವರ್ಷ ಕಳೆದರೂ ಯಶ್‌ ಅಭಿನಯದ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ. ಹೀಗಾಗಿ ಅಭಿಮಾನಿಗಳು ʼಟಾಕ್ಸಿಕ್‌ʼ ಚಿತ್ರಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಅದಕ್ಕೆ ತಕ್ಕಂತೆ ಚಿತ್ರತಂಡವು ಇದುವರೆಗೆ ಯಾವ ಗುಟ್ಟನ್ನೂ ಬಿಟ್ಟುಕೊಡದೆ ಕುತೂಹಲವನ್ನು ಕಾಯ್ದುಕೊಂಡು ಬಂದಿದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದು, ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾಗುತ್ತಿದೆ. ಈ ಯಶ್‌ (Yash) ಚಿತ್ರ ಡ್ರಗ್‌ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿವೆ. 2025ರಲ್ಲಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.

ಇದನ್ನೂ ಓದಿ: Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್? 

ನಾಯಕಿ ಯಾರು?

ಸದ್ಯ ಯಶ್‌ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ಬಿಟ್ಟರೆ ತಾರಾಗಣದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಎನ್ನುವುದನ್ನು ಚಿತ್ರತಂಡ ರಿವೀಲ್‌ ಮಾಡಿಲ್ಲ. ಈ ಬಹು ನಿರೀಕ್ಷಿತ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆ ಎನ್ನುವ ಕುತೂಹಲ ಸಿನಿಪ್ರಿಯರಲ್ಲಿ ಮನೆ ಮಾಡಿದೆ. ಮೂಲದ ಪ್ರಕಾರ ಕಾಲಿವುಡ್‌ ಸೂಪರ್‌ ಸ್ಟಾರ್‌ ನಯನತಾರಾ ಇದೇ ಮೊದಲ ಬಾರಿಗೆ ಯಶ್‌ ಜತೆಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗಿದ್ದು, ಅಧಿಕೃತ ಘೋಷಣೆ ಇನ್ನಷ್ಟೇ ಹೊರ ಬರಬೇಕಿದೆ.

Continue Reading

ಕರ್ನಾಟಕ

Kannada New Movie: ಯುವ ನಿರ್ಮಾಪಕಿಗೆ ಸಾಥ್ ಕೊಟ್ಟ ಅಶ್ವಿನಿ ಪುನೀತ್‌ ರಾಜ್‌ಕುಮಾರ್; ‘ಕುಬುಸ’ ಚಿತ್ರದ ಟ್ರೈಲರ್ ಬಿಡುಗಡೆ

Kannada New Movie: ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ‘ಕುಬುಸ’ ಚಿತ್ರದ ಟ್ರೈಲರ್ ಅನಾವರಣ ಮಾಡಿ ತಂಡಕ್ಕೆ ಶುಭ ಕೋರಿದ್ದಾರೆ. ಈ ವೇಳೆ‌ ಮಾತನಾಡಿದ ಅವರು, ಒಬ್ಬ ಮಹಿಳೆ ನಿರ್ಮಾಪಕರಾಗಿ ಉತ್ತಮ ಚಲನಚಿತ್ರವನ್ನು ಕಷ್ಟಪಟ್ಟು ನಿರ್ಮಿಸಿದ್ದಾರೆ. ನಾನು ಯಾವತ್ತಿಗೂ ಕಲಾವಿದರಿಗೆ ಬೆಂಬಲವಾಗಿ ಇರುತ್ತೇನೆ ಎಂದರು. ಈ ಚಲನಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

VISTARANEWS.COM


on

Kubusa Kannada movie trailer release
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಚಿತ್ರಗಳು ಬರುತ್ತಿವೆ. ಕೆಲವು ಸಿನಿಮಾಗಳು ಟೈಟಲ್‌ನಿಂದ ಗಮನ ಸೆಳೆಯೋಕೆ ಶುರುಮಾಡಿವೆ. ಸಿನಿಮಾ ಕಂಟೆಂಟ್ ಕೂಡ ಗಮನ ಸೆಳೆಯುತ್ತವೆ. ಇಂತಹ ಸಿನಿಮಾಗಳಲ್ಲಿ ‘ಕುಬುಸ ‘ ಕೂಡ ಒಂದು (Kannada New Movie). ಬೆಂಗಳೂರಿನ ವಸಂತನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ‘ಕುಬುಸ’ ಚಿತ್ರದ ಟ್ರೈಲರ್ ಅನಾವರಣ ಮಾಡಿ, ಇಡೀ ತಂಡಕ್ಕೆ ಶುಭ ಕೋರಿದ್ದಾರೆ.

ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ವೇದಿಕೆಯ ಮೇಲೆ ಕೇಂದ್ರ ಬಿಂದುವಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಾತಾ ಡಾ. ಮಂಜಮ್ಮ ಜೋಗತಿ, ಹೊಸಪೇಟೆಯ ತಾಯಮ್ಮ ಶಕ್ತಿ ಸಂಘದ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್, ಸಮಾಜ ಸೇವಕ ಸಿದ್ದಾರ್ಥ್ ಸಿಂಗ್ ಪಾಲ್ಗೊಂಡಿದ್ದರು.

ಈ ವೇಳೆ‌ ಮಾತನಾಡಿದ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್, ಒಬ್ಬ ಮಹಿಳೆ ನಿರ್ಮಾಪಕರಾಗಿ ಉತ್ತಮ ಚಲನಚಿತ್ರವನ್ನು ಕಷ್ಟಪಟ್ಟು ನಿರ್ಮಿಸಿದ್ದಾರೆ. ನಾನು ಯಾವತ್ತಿಗೂ ಕಲಾವಿದರಿಗೆ ಬೆಂಬಲವಾಗಿ ಇರುತ್ತೇನೆ ಎಂದು ತಿಳಿಸಿದ ಅವರು, ಈ ಚಲನಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ಇದನ್ನೂ ಓದಿ: SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

ಕಾರ್ಯಕ್ರಮದಲ್ಲಿ ಹೋಂ ಆಫ್ ಹೋಪ್ ಸಂಸ್ಥಾಪಕ ಆಟೋರಾಜ್, ಡ್ಯಾನ್ಸ್ ಹರಿಪ್ರಸಾದ್, ಕೃಷ್ಣ ರಿತ್ತಿ, ಯೂಸುಫ್, ಇಮ್ತಿಯಾಜ್, ರಾಜು ಉಪ್ಪರ್, ನಂದೀಶ, ಇತರರು ಉಪಸ್ಥಿತರಿದ್ದರು.

ಟ್ರೈಲರ್ ರಿಲೀಸ್ ಬಳಿಕ ಚಿತ್ರದ ನಾಯಕ ನಟರಾಜ್ ಎಸ್. ಭಟ್ ಮಾತನಾಡಿ, ಇಂತಹ ಚಲನಚಿತ್ರ ನಿರ್ಮಾಣ ಮಾಡಲು ವಿ. ಶೋಭಾ ಆದಿ ನಾರಾಯಣ ಅವರಂತಹ ಒಳ್ಳೆಯ ವ್ಯಕ್ತಿ ಮತ್ತೆ ಸಿಗುವುದಿಲ್ಲ. ಈ ರೀತಿ ಚಿತ್ರಗಳು ಗೆಲ್ಲಬೇಕು ಈ ಸಿನಿಮಾ ಗೆದ್ದಾಗ ನಿರ್ಮಾಪಕರು ಮತ್ತೆ ಸಿನಿಮಾ ಮಾಡಲು ಮುಂದಾಗುತ್ತಾರೆ. ಇಡೀ ತಂಡ ಈ ಚಿತ್ರಕ್ಕಾಗಿ ಬಹಳಷ್ಟು ಕೆಲಸ ಮಾಡಿದ್ದಾರೆ .ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ ನಿಮ್ಮ ಸಹಕಾರ ಕುಬುಸ ಸಿನಿಮಾ ಮೇಲೆ ಇರಲಿ ಎಂದರು.

ನಿರ್ದೇಶಕ ರಘುರಾಮ ಚರಣ್ ಮಾತನಾಡಿ, ಪುಟ್ಟ ಕನಸು ದೊಡ್ಡದಾಗುತ್ತಾ ಬಂತು, ಅದು ಈಗ ಸಿನಿಮಾ ರೂಪತಾಳಿದೆ. ಇದು ಯಾವ ಜಾನರ್ ಎಂದು ಹೇಳಲು ಆಗುವುದಿಲ್ಲ. ಕಥೆ ಬರೆಯುವಾಗ ಏನು ವಿಜ್ವಲ್ ಬಂತು ಅದನ್ನು ಶೂಟ್ ಮಾಡಿದ್ದೇವೆ. 1960ರ ಕಾಲಘಟ್ಟದಲ್ಲಿ ಬರುವ ಕಥೆ ಇದು. ಸಿನಿಮಾದಲ್ಲಿ ನಾಲ್ಕು ಹಾಡುಗಳಿವೆ ಎಂದು ಮಾಹಿತಿ ನೀಡಿದರು.

ವಿ. ಶೋಭಾ ಆದಿನಾರಾಯಣ ಮಾತನಾಡಿ, ಕುಬುಸ ಚಲನಚಿತ್ರ ಹಳ್ಳಿ ಸೊಗಡಿನ ಚಿತ್ರಕಥೆಯಾಗಿದ್ದು ಈ ಚಿತ್ರದಲ್ಲಿ ನನಗೆ ತುಂಬಾ ಅನುಭವವಾಗಿದ್ದು, ಜನರ ಮನಸ್ಸಿನಲ್ಲಿ ಉಳಿಯುವಂತಹ ಸಿನಿಮಾಗಳನ್ನು ಮುಂದಿನ ದಿನಗಳಲ್ಲಿ ನಿರ್ಮಾಣ ಮಾಡುತ್ತೇನೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ಇದೇ ತಿಂಗಳು ಜುಲೈ 26ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಪ್ರೇಕ್ಷಕರು ಸಿನಿಮಾ ನೋಡಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಜನಪ್ರಿಯ ಲೇಖಕ ಕುಂ.ವೀರಭದ್ರಪ್ಪ ಅವರ ಕಥೆ ಆಧಾರಿಸಿದ ಸಿನಿಮಾ ‘ಕುಬುಸ’ ಸಿನಿಮಾದ ಮೂಲ ಕತೆಯಲ್ಲಿ ಬಳ್ಳಾರಿಯ ಭಾಷಾ ಸೊಗಡನ್ನು ಕಾಣಬಹುದು. ಇದು ಮ್ಯೂಸಿಕಲ್ ಸಿನಿಮಾ ಕೂಡ ಆಗಿದ್ದು ,ಸನ್ನಿವೇಶಕ್ಕೆ ತಕ್ಕ ಹಾಗೆ ನಾಲ್ಕು ಹಾಡುಗಳಿವೆ . ಪ್ರದೀಪ್ ಚಂದ್ರ ಅವರ ಸಂಗೀತ ಸಂಯೋಜನೆ ಚಿತ್ರಕಿದ್ದು, ಅರ್ಜುನ್ ಕಿಟ್ಟು ಸಂಕಲನ, ಚೇತನ್ ಶರ್ಮ ಎ. ಕ್ಯಾಮರಾ, ಶಿವಮೂರ್ತಿ ದೋಣಿಮಲೆ ಸಹ ನಿರ್ದೇಶನ ಚಿತ್ರಕ್ಕಿದೆ. ಕುಬುಸ ಸಿನಿಮಾ ವಿ. ಶೋಭಾ ಆದಿನಾರಾಯಣ ಅವರ ಚೊಚ್ಚಲ ನಿರ್ಮಾಣದ ಚಲನಚಿತ್ರವಾಗಿದೆ. ವಿ. ಶೋಭಾ ಸಿನಿಮಾಸ್ ಬ್ಯಾನರ್ ನಡಿ ಕುಬುಸ ಚಿತ್ರವನ್ನು ನಿರ್ಮಿಸಿದ್ದಾರೆ.

Continue Reading

ಕರ್ನಾಟಕ

Back Benchers Movie: ಬ್ಯಾಕ್ ಬೆಂಚರ್ಸ್‌ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ!

Back Benchers Movie: “ಬ್ಯಾಕ್ ಬೆಂಚರ್ಸ್” ಚಿತ್ರ ಬಿಡುಗಡೆಗೊಂಡು ವಾರ ಕಳೆಯುವ ಮುನ್ನವೇ, ರಾಜ್ಯದ ನಾನಾ ಭಾಗಗಳಲ್ಲಿ ಭರ್ಜರಿ ಓಪನಿಂಗ್ ಸಿಗಲಾರಂಭಿಸಿದೆ. ಹೊಸತನವನ್ನೇ ಆತ್ಮವಾಗಿಸಿಕೊಂಡಂತಿರುವ ಈ ಕಾಲೇಜು ಕೇಂದ್ರಿತ ಕಥೆಗೆ ನೋಡುಗರೆಲ್ಲ ಫಿದಾ ಆಗಿದ್ದಾರೆ. ಬಾಯಿಂದ ಬಾಯಿಗೆ ಹಬ್ಬಿಕೊಳ್ಳುತ್ತಿರುವ ಸದಭಿಪ್ರಾಯಗಳೇ ಸಿನಿಮಾ ಮಂದಿರಗಳು ಭರ್ತಿಯಾಗುವಂಥಾ ಕಮಾಲ್ ಮಾಡುತ್ತಿವೆ. ಬ್ಯಾಕ್ ಬೆಂಚರ್ಸ್‍ಗೆ ಆರಂಭದಿಂದ ಸಿಗುತ್ತಿರುವ ಪ್ರತಿಕ್ರಿಯೆ, ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂದಣಿ ಹೆಚ್ಚಾಗುತ್ತಿರುವ ರೀತಿ ಕಂಡು ವಿತರಕರಿಗೆ ಸಂತಸವಾಗಿದೆ.

VISTARANEWS.COM


on

Back benchers Kannada movie is happy to have a great opening
Koo

ಬೆಂಗಳೂರು: ನಿರ್ದೇಶಕ ರಾಜಶೇಖರ್ ಸೇರಿದಂತೆ ಒಂದಿಡೀ ಚಿತ್ರತಂಡ ಖುಷಿಯ ಮೂಡ್‌ನಲ್ಲಿದೆ. ಒಂದು ಹೊಸಬರ ತಂಡ ಕಟ್ಟಿಕೊಂಡು “ಬ್ಯಾಕ್ ಬೆಂಚರ್ಸ್” ಚಿತ್ರವನ್ನು (Back Benchers Movie) ರೂಪಿಸುವ ಸಾಹಸ ಮಾಡಿದ್ದವರು ರಾಜಶೇಖರ್. ಇದೀಗ ಈ ಚಿತ್ರ ಬಿಡುಗಡೆಗೊಂಡು ವಾರ ಕಳೆಯುವ ಮುನ್ನವೇ, ರಾಜ್ಯದ ನಾನಾ ಭಾಗಗಳಲ್ಲಿ ಭರ್ಜರಿ ಓಪನಿಂಗ್ ಸಿಗಲಾರಂಭಿಸಿದೆ.

ಹೊಸತನವನ್ನೇ ಆತ್ಮವಾಗಿಸಿಕೊಂಡಂತಿರುವ ಈ ಕಾಲೇಜು ಕೇಂದ್ರಿತ ಕಥೆಗೆ ನೋಡುಗರೆಲ್ಲ ಫಿದಾ ಆಗಿದ್ದಾರೆ. ಬಾಯಿಂದ ಬಾಯಿಗೆ ಹಬ್ಬಿಕೊಳ್ಳುತ್ತಿರುವ ಸದಭಿಪ್ರಾಯಗಳೇ ಸಿನಿಮಾ ಮಂದಿರಗಳು ಭರ್ತಿಯಾಗುವಂಥಾ ಕಮಾಲ್ ಮಾಡುತ್ತಿವೆ.

ಇದನ್ನೂ ಓದಿ: SkyDeck: ಕೃಷಿ ಮತ್ತಿತರ ಕ್ಷೇತ್ರಗಳಿಗೆ ನೆರವಾಗುವ ʼಸ್ಕೈಡೆಕ್ʼ ಪ್ಲಾಟ್‌ಫಾರ್ಮ್! ಏನಿದು?

ಅಷ್ಟಕ್ಕೂ ಆರಂಭದಲ್ಲಿ ಈ ಚಿತ್ರ 23 ಸ್ಕ್ರೀನ್‌ಗಳಲ್ಲಿ ಬಿಡುಗಡೆಗೊಂಡಿತ್ತು. ಹೆಚ್ಚಾಗಿ ಮಲ್ಟಿಪ್ಲೆಕ್ಸ್‌ಗಳಲ್ಲೇ ಈ ಚಿತ್ರ ತೆರೆಗಂಡಿತ್ತು. ಅಲ್ಲೆಲ್ಲ ದಾಖಲೆ ಮಟ್ಟದಲ್ಲಿ ಬ್ಯಾಕ್ ಬೆಂಚರ್ಸ್ ಚಿತ್ರ ಪ್ರದರ್ಶನ ಕಂಡಿದೆ. ಬ್ಯಾಕ್ ಬೆಂಚರ್ಸ್‍ಗೆ ಆರಂಭದಿಂದ ಸಿಗುತ್ತಿರುವ ಪ್ರತಿಕ್ರಿಯೆ, ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂದಣಿ ಹೆಚ್ಚಾಗುತ್ತಿರುವ ರೀತಿ ಕಂಡು ವಿತರಕರಿಗೆ ಸಂತೋಷವಾಗಿದೆ. ಅಂಥಾದ್ದೊಂದು ಸಮ್ಮೋಹಕ ಚೇತರಿಕೆ ಬ್ಯಾಕ್ ಬೆಂಚರ್ಸ್ ಕಡೆಯಿಂದ ಕಂಡು ಬರುತ್ತಿದೆ.

ಇನ್ನುಳಿದಂತೆ, ರಾಯಚೂರು, ಧಾರವಾಡ, ಶಿವಮೊಗ್ಗ, ಹುಬ್ಬಳ್ಳಿ ಮುಂತಾದೆಡೆಗಳಲ್ಲಿಯೂ ಬ್ಯಾಕ್ ಬೆಂಚರ್ಸ್ ಅಕ್ಷರಶಃ ಕಮಾಲ್ ಮಾಡಿದ್ದಾರೆ. ಈ ಭಾಗಗಳಲ್ಲಿ ಹೊಸಬರ ಚಿತ್ರಗಳು ಅದೇನೇ ಪ್ರಯತ್ನ ಪಟ್ಟರೂ ಓಪನಿಂಗ್ ಪಡೆದುಕೊಳ್ಳುತ್ತಿರಲಿಲ್ಲ. ಇಂಥಾ ವಾತಾವರಣದಲ್ಲಿ ಬ್ಯಾಕ್ ಬೆಂಚರ್ಸ್ ದಿನದಿಂದ ದಿನಕ್ಕೆ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ದಿನ ಕಳೆದಂತೆ ಶೋಗಳು ತುಂಬಿಕೊಳ್ಳುತ್ತಿವೆ. ಮೈಸೂರಿನಲ್ಲಿ ಮೊದಲ ದಿನ ಒಂದು ಶೋ ಅಷ್ಟೇ ಆಯೋಜಿಸಲಾಗಿತ್ತು. ಎರಡು ಮೂರು ದಿನ ಕಳೆಯುವಷ್ಟರಲ್ಲಿ ಅಲ್ಲಿನ ಚಿತ್ರಣವೇ ಬದಲಾಗಿ ಬಿಟ್ಟಿದೆ. ಗುರುವಾರದಂದು ಆರು ಶೋಗಳನ್ನು ನಿಗದಿಪಡಿಸಲಾಗಿದೆ. ಇದು ನಿಜಕ್ಕೂ ಕನ್ನಡ ಚಿತ್ರರಂಗದ ದೃಷ್ಟಿಯಿಂದಲೂ ಸಕಾರಾತ್ಮಕ ಬೆಳವಣಿಗೆ.

ಕಾಲೇಜು ಕೇಂದ್ರಿತ ಕಥೆಗಳು ಕನ್ನಡದಲ್ಲಿ ಹಿಟ್ ಆಗಿವೆ. ನಿರ್ದೇಶಕ ರಾಜಶೇಖರ್, ಕಾಲೇಜು ಬೇಸ್‌ನ ಈ ಕಥೆಯನ್ನು ಕಟ್ಟಿಕೊಟ್ಟಿರುವ ರೀತಿ, ಹೊಸಬರ ತಂಡ ಅದರಲ್ಲಿ ತಲ್ಲೀನವಾದ ಪರಿಗಳೆಲ್ಲವೂ ಪ್ರೇಕ್ಷಕರನ್ನು ಸೆಳೆದಿವೆ. ಒಂದು ಶೋಗೆ ಒಬ್ಬರು ಬಂದರೆ, ಮತ್ತೊಂದು ಶೋಗೆ ಹತ್ತದಿನೈದು ಮಂದಿಯ ಸಮೇತ ಬರಲಾರಂಭಿಸಿದ್ದಾರೆ. ಸದ್ಯದ ಮಟ್ಟಿಗೆ ಕನ್ನಡ ಸಿನಿಮಾಗಳಿಗೆ ಹೇಳಿಕೊಳ್ಳುವಂಥಹ ಪ್ರತಿಕ್ರಿಯೆ ಸಿಗುತ್ತಿಲ್ಲ. ಅಂಥಹುದರಲ್ಲಿ ಬ್ಯಾಕ್ ಬೆಂಚರ್ಸ್ ಭಾರೀ ಸಂಚಲನ ಸೃಷ್ಟಿಸುತ್ತದೆ.

ಇದನ್ನೂ ಓದಿ: Karnataka Rain News: ಮುಂದುವರಿದ ಮಳೆ ಅವಾಂತರ; ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಪಿ.ಪಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ರಮ್ಯಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಎಚ್., ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ.

Continue Reading
Advertisement
NEET UG 2024
ದೇಶ2 hours ago

NEET UG 2024: ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಿದ್ದು ಯಾವ ಕೇಂದ್ರದಿಂದ? ಸಿಬಿಐ ಸ್ಫೋಟಕ ಮಾಹಿತಿ ಬಯಲು

V Sumangala
ಕರ್ನಾಟಕ2 hours ago

V Sumangala: ಶಿಕ್ಷಣ ಇಲಾಖೆಯಲ್ಲಿ 1.62 ಕೋಟಿ ರೂ. ಅಕ್ರಮ; DSERT ನಿರ್ದೇಶಕಿ ಸುಮಂಗಲಾ ಅಮಾನತು!

Sri lanka Team
ಕ್ರೀಡೆ2 hours ago

Sri lanka Team: ಟಿ20 ಸರಣಿ ಆರಂಭಕ್ಕೂ ಮುನ್ನವೇ ಲಂಕಾಗೆ ಗಾಯದ ಬರೆ; ಇಬ್ಬರು ವೇಗಿಗಳು ಔಟ್​

HD Deve Gowda
ದೇಶ3 hours ago

HD Deve Gowda: ವ್ಹೀಲ್‌ಚೇರ್‌ನಲ್ಲೇ ತೆರಳಿ ಮೋದಿಯನ್ನು ಭೇಟಿಯಾದ ದೇವೇಗೌಡ; ಇಲ್ಲಿವೆ ಫೋಟೊಗಳು

Team India
ಕ್ರೀಡೆ4 hours ago

Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

Atal Setu
ಪ್ರಮುಖ ಸುದ್ದಿ4 hours ago

Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

Health Minister Dinesh Gundurao instructs to send a team of deputy directors to dengue hot spots
ಕರ್ನಾಟಕ4 hours ago

Dengue Fever: ಬೆಂಗಳೂರಿನಲ್ಲೇ ಶೇ.50ರಷ್ಟು ಡೆಂಗ್ಯೂ ಪ್ರಕರಣಗಳು; ಹಾಟ್‌ಸ್ಪಾಟ್‌ಗಳಿಗೆ ಅಧಿಕಾರಿಗಳ ತಂಡ

Media Connect Founder and ceo Dr Divya Rangenahalli honored at Chess Festival in bengaluru
ಬೆಂಗಳೂರು4 hours ago

Media Connect: ಚೆಸ್‌ ಹಬ್ಬದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಡಾ. ದಿವ್ಯಾ ರಂಗೇನಹಳ್ಳಿಗೆ ಸನ್ಮಾನ

1200 farmers suicides in last 15 months in Karnataka says Minister Pralhad Joshi Minister Pralhad Joshi alleges
ಕರ್ನಾಟಕ4 hours ago

Pralhad Joshi: ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ 1200 ರೈತರ ಆತ್ಮಹತ್ಯೆ!

BJP Protest
ಕರ್ನಾಟಕ5 hours ago

BJP Protest: ದಾಖಲೆ ನೀಡದೆ ಹೇಡಿಯಂತೆ ಪಲಾಯನ; ಸಿಎಂ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಆರ್‌.ಅಶೋಕ್‌ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್12 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ12 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ14 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ2 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ2 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌