Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ - Vistara News

ಪ್ರಮುಖ ಸುದ್ದಿ

Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Murder in PG: ಆರೋಪಿ ಅಭಿಷೇಕ್‌ ಬಂಧನದಲ್ಲಿ ಇಟ್ಟಿದ್ದಆತನ ಪ್ರೇಯಸಿಯನ್ನು ಕೃತಿ ಕುಮಾರಿ ಬಿಡಿಸಿ ತನ್ನ ಪಿಜಿಗೆ ಕರೆತಂದಿದ್ದಳು. ಈಕೆಯ ಈ ಮಾನವೀಯ ನಡತೆಯೇ ಆಕೆಯ ಜೀವ ತೆಗೆದಿದೆ.

VISTARANEWS.COM


on

Murder in PG Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯ ಕೋರಮಂಗಲದ ಪಿಜಿಯಲ್ಲಿ ಕೊಲೆಯಾಗಿ (Murder in PG) ಹೋದ ಕೃತಿ ಕುಮಾರಿ ಮರ್ಡರ್ (Krithi Kumari Murder) ಪ್ರಕರಣದಲ್ಲಿ ಪಾತಕಿಯ ಬರ್ಬರತೆಯ ಬಗ್ಗೆ ಬೆಚ್ಚಿ ಬೀಳಿಸುವ ಇನ್ನಷ್ಟು ವಿವರಗಳು ಹೊರಬಿದ್ದಿವೆ. ಕೊಲೆಯಾಗಿ ಹೋದವಳು ಈತನ ಪ್ರೇಯಸಿಯ (lover) ಗೆಳತಿಯಾಗಿದ್ದು, ಈ ದುಷ್ಟನ ಕೈಯಿಂದ ಗೆಳತಿಯನ್ನು ಬಿಡಿಸುವ ಯತ್ನದಲ್ಲಿ ತಾನೇ ಮರ್ಡರ್‌ (Murder Case) ಆಗಿದ್ದಾಳೆ.

ಆರೋಪಿ ಅಭಿಷೇಕ್‌ ತಾನು ಪ್ರೀತಿಸಿದವಳನ್ನು ಗೃಹ ಬಂಧನದಲ್ಲಿಟ್ಟಿದ್ದ. ಆಕೆಯನ್ನು ಕಾಪಾಡಿದ ಆಕೆಯ ಗೆಳತಿಯೇ ಜೀವ ಕಳೆದುಕೊಂಡಿದ್ದಾಳೆ. ಅಭಿಷೇಕ್‌ ಯುವತಿಯೊಬ್ಬಳೊಂದಿಗೆ ಪ್ರೀತಿಯಲ್ಲಿದ್ದ. ತನ್ನ ಪ್ರೇಯಸಿಯನ್ನು ಬಲವಂತವಾಗಿ ಬಾಡಿಗೆ ರೂಮ್‌ನಲ್ಲಿ ಇರಿಸಿಕೊಂಡಿದ್ದ. ಕೊಲೆಗೂ ಮೂರು ದಿನದ ಹಿಂದೆ ಬಾಡಿಗೆ ರೂಮ್ ಮಾಡಿ, ಆಕೆಯನ್ನು ಕರೆದೊಯ್ದು ಬಲವಂತವಾಗಿ ರೂಮ್‌ನಲ್ಲಿಟ್ಟುಕೊಂಡಿದ್ದ.

ಆದರೆ ಪ್ರೇಯಸಿ ರೂಮ್‌ನಲ್ಲಿ ಇರಲಾಗದೆ ಒದ್ದಾಡಿದ್ದಳು. ರೂಮ್‌ಮೇಟ್ ಪಿಜಿಗೆ ಬರಲಿಲ್ಲ ಏಕೆಂದು ವಿಚಾರಿಸಿದಾಗ ಕೃತಿ ಕುಮಾರಿ, ಆರೋಪಿ ಆಕೆಯನ್ನು ಕೂಡಿ ಹಾಕಿದ್ದರ ಮಾಹಿತಿಯನ್ನು ಪಡೆದುಕೊಂಡಿದ್ದಳು. ನಂತರ ಸಮಯ ನೋಡಿ ಗೆಳತಿಯನ್ನು ರೂಮ್‌ನಿಂದ ಕರೆತರಲು ಪ್ಲ್ಯಾನ್ ಮಾಡಿದ್ದು, ತನ್ನ ಸ್ನೇಹಿತರೊಂದಿಗೆ ತೆರಳಿ ಗೆಳತಿಯನ್ನು ಪಿಜಿಗೆ ಕರೆತಂದಿದ್ದಳು. ಕೊಲೆ‌ ನಡೆದ ಹಿಂದಿನ ದಿನ ಗೃಹಬಂಧನದಲ್ಲಿದ್ದ ಗೆಳತಿಯನ್ನು ಕೃತಿ ಪಾರುಮಾಡಿದ್ದಳು. ಈಕೆಯ ಈ ಮಾನವೀಯ ನಡತೆಯೇ ಆಕೆಯ ಜೀವ ತೆಗೆದಿದೆ.

ಈ ವಿಚಾರ ಗೊತ್ತಾಗಿದ್ದೇ ತಡ ಕೃತಿ ಮೇಲೆ ಆರೋಪಿ ಅಭಿಷೇಕ್‌ ತೀವ್ರವಾಗಿ ಕೋಪಗೊಂಡಿದ್ದ. ತನ್ನ ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಕ್ಕೆ ಕೋಪಗೊಂಡು ಮಂಗಳವಾರ ರಾತ್ರಿ‌ 11.10ರ ಸುಮಾರಿಗೆ ಏಕಾಏಕಿ ಪಿಜಿಗೆ ಹೋಗಿದ್ದ. ಒಳ ಹೋದವನೇ ಸೀದಾ ಕೃತಿ ಕುಮಾರಿಗೆ ಚಾಕುವಿನಿಂದ ಯದ್ವಾತದ್ವಾ ಇರಿದು ಎಸ್ಕೇಪ್ ಆಗಿದ್ದಾನೆ.

ಸದ್ಯ ಹೊರ ರಾಜ್ಯಕ್ಕೆ ಆರೋಪಿ ಅಭಿಷೇಕ್‌ ಪರಾರಿಯಾಗಿರುವ ಶಂಕೆ ಇದೆ. ಮೂಲತಃ ಮಧ್ಯಪ್ರದೇಶ ಮೂಲದವನು ಆಗಿರುವ ಆರೋಪಿ ಅಭಿಷೇಕ್, ಸದ್ಯ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾನೆ. ಕೊಲೆಯಾದ ಕೃತಿ ಕುಮಾರಿ ಬಿಹಾರದಾಕೆ ಎಂದು ಗೊತ್ತಾಗಿದೆ. ಸದ್ಯ ಆರೋಪಿಯ ಸ್ನೇಹಿತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೋರಮಂಗಲ ಪೊಲೀಸರು ಆರೋಪಿಯ ಬೆನ್ನು ಬಿದ್ದಿದ್ದು, ತನಿಖೆ ಮುಂದುವರಿದಿದೆ.

ಘಟನೆ ನಡೆದದ್ದು ಹೀಗೆ

ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನು ಎರಡೇ ನಿಮಿಷದಲ್ಲಿ ಕೊಲೆಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಕತ್ತನ್ನು ಕೋಳಿ ಕತ್ತಿನಂತೆ ಕೊಯಿದಿದ್ದಾನೆ. ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.

ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್‌ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Murder In PG: ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ನೋಡ್ತಾ ಇದ್ರೂ ಸಹಾಯಕ್ಕೆ ಬಾರದ ಯುವತಿಯರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shalini Rajneesh: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ಜಾಗಕ್ಕೆ ಪತ್ನಿಯ ಆಯ್ಕೆ

Shalini Rajneesh: ರಜನೀಶ್‌ ಗೋಯಲ್‌ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಜುಲೈ 31ಕ್ಕೆ ಅವರ ಅಧಿಕಾರದ ಅವಧಿ ಮುಗಿಯಲಿದೆ. ಇನ್ನು, ಶಾಲಿನಿ ರಜನೀಶ್‌ ಅವರು ಈಗ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ.

VISTARANEWS.COM


on

shalini rajneesh
Koo

ಬೆಂಗಳೂರು: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ (Shalini Rajneesh) ಅವರನ್ನು ಕರ್ನಾಟಕ ಸರ್ಕಾರ (Chief Secretary Of Karnataka) ನೇಮಕ ಮಾಡಿದೆ. ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ (Rajneesh Goel) ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಶಾಲಿನಿ ರಜನೀಶ್‌ ಅವರು ರಜನೀಶ್‌ ಗೋಯಲ್‌ ಅವರ ಪತ್ನಿ ಎಂಬುದು ಗಮನಾರ್ಹ ಸಂಗತಿಯಾಗಿದೆ.

ರಜನೀಶ್‌ ಗೋಯಲ್‌ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಜುಲೈ 31ಕ್ಕೆ ಅವರ ಅಧಿಕಾರದ ಅವಧಿ ಮುಗಿಯಲಿದೆ. ಇನ್ನು, ಶಾಲಿನಿ ರಜನೀಶ್‌ ಅವರು ಈಗ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ. ರಜನೀಶ್‌ ಗೋಯಲ್‌ ಅವರ ನಂತರ ಜ್ಯೇಷ್ಠತೆಯ ಆಧಾರದ ಮೇಲೆ ರೇಸ್‌ನಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌ ಹಾಗೂ ಶಾಲಿನಿ ರಜನೀಶ್‌ ಅವರಿದ್ದರು. ಈಗ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರಿಗೇ ಮಣೆ ಹಾಕಿದೆ. 2027ರ ಜೂನ್‌ಗೆ ಇವರು ನಿವೃತ್ತಿ ಹೊಂದಲಿದ್ದಾರೆ.

Rajneesh Goel
Rajneesh Goel

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ. ಪಾಟೀಲ್‌ ಅವರು ಶಾಲಿನಿ ರಜನೀಶ್‌ ಅವರ ನೇಮಕದ ಕುರಿತು ಮಾಹಿತಿ ನೀಡಿದರು. “ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿ ಮುಗಿದ ಕಾರಣ ಅವರನ್ನು ಬೀಳ್ಕೊಡಲಾಗುತ್ತದೆ. ಇನ್ನು, ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನಾಗಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲಾಗಿದೆ” ಎಂಬುದಾಗಿ ಅವರು ತಿಳಿಸಿದರು.

ಅಜಯ್‌ ಸೇಠ್‌ ಅವರು ಇನ್ನು 11 ತಿಂಗಳು ಮಾತ್ರ ಅಧಿಕಾರದಲ್ಲಿ ಇರುವುದರಿಂದ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಿದೆ ಎಂದು ತಿಳಿದುಬಂದಿದೆ. ಅಭಿವೃದ್ಧಿ ಆಯುಕ್ತರಾಗಿ ಶಾಲಿನಿ ರಜನೀಶ್‌ ಅವರ ಕಾರ್ಯವೈಖರಿಯು ರಾಜ್ಯ ಸರ್ಕಾರಕ್ಕೆ ಇಷ್ಟವಾಗಿದೆ. ಇದೇ ಕಾರಣಕ್ಕಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ದ್ವಿತೀಯ ದಂಪತಿ ಎಂಬ ಖ್ಯಾತಿಗೆ ಶಾಲಿನಿ ರಜನೀಶ್‌ ಹಾಗೂ ರಜನೀಶ್‌ ಗೋಯಲ್‌ ಪಾತ್ರರಾದರು. ಇದಕ್ಕೂ ಮೊದಲು ಬಿ.ಕೆ.ಭಟ್ಟಾಚಾರ್ಯ ಹಾಗೂ ತೆರೇಸಾ ಭಟ್ಟಾಚಾರ್ಯ ದಂಪತಿಯು ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿದ್ದರು.

ಇದನ್ನೂ ಓದಿ: Lokayukta: ಲೋಕಾಯುಕ್ತ ಎಡಿಜಿಪಿಯಾಗಿ ಮನೀಶ್‌ ಕರ್ಬೀಕರ್‌, ಅಗ್ನಿಶಾಮಕ ದಳ ಡಿಜಿಪಿಯಾಗಿ ಪ್ರಶಾಂತ್ ಕುಮಾರ್ ಥಾಕೂರ್‌ ನೇಮಕ

Continue Reading

ದೇಶ

Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Kargil Vijay Diwas 2024: 1999 ರ ಯುದ್ಧದ ಸಮಯದಲ್ಲಿ, ಆಗ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮೋದಿ ಅವರು ಸೈನಿಕರಿಗೆ ಅಗತ್ಯ ವಸ್ತುಗಳನ್ನು ಸಾಗಿಸುತ್ತಿದ್ದರು. ಒಮ್ಮೆ, ಅವರು ಅಗತ್ಯ ಸಾಮಗ್ರಿಗಳೊಂದಿಗೆ Mi-17 ಹೆಲಿಕಾಪ್ಟರ್ ಅನ್ನು ಹತ್ತಿ ಯುದ್ಧಭೂಮಿಯನ್ನು ತಲುಪಿದ್ದರು.

VISTARANEWS.COM


on

Kargil Vijay Diwas 2024
Koo

ಲಡಾಖ್‌: ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಇಂದಿಗೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕ(Kargil War Memorial)ಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿಯ ಹಳೆಯ ಫೊಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮೋದಿ ಆರ್ಕೈವ್‌ ಎಂಬ ಎಕ್ಸ್‌ ಖಾತೆ ʼಎ ಪಿಲಿಗ್ರಿಮೇಜ್‌ ಲೈಫ್‌ಟೈಂʼ ಎಂಬ ಶೀರ್ಷಿಕೆಯಲ್ಲಿ ಕಾರ್ಗಿಲ್‌ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಫೋಟೋ, ವಿಡಿಯೋ ಮತ್ತು ಆಡಿಯೋ ರೆಕಾರ್ಡಿಂಗ್‌ಗಳನ್ನು ಹಂಚಿಕೊಳ್ಳಲಾಗಿದೆ. 1999 ರ ಯುದ್ಧದ ಸಮಯದಲ್ಲಿ, ಆಗ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮೋದಿ ಅವರು ಸೈನಿಕರಿಗೆ ಅಗತ್ಯ ವಸ್ತುಗಳನ್ನು ಸಾಗಿಸುತ್ತಿದ್ದರು. ಒಮ್ಮೆ, ಅವರು ಅಗತ್ಯ ಸಾಮಗ್ರಿಗಳೊಂದಿಗೆ Mi-17 ಹೆಲಿಕಾಪ್ಟರ್ ಅನ್ನು ಹತ್ತಿ ಯುದ್ಧಭೂಮಿಯನ್ನು ತಲುಪಿದ್ದರು.

ಸೈನಿಕರನ್ನುದ್ದೇಶಿಸಿ ಮಾತನಾಡುವಾಗ ಸೈನಿಕರು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಲಿಷ್ಠ ನಾಯಕತ್ವದ ಮನ್ನಣೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ, ಇದು ಎಷ್ಟು ಪ್ರಬಲವಾದ ರಾಜಕೀಯ ಇಚ್ಛಾಶಕ್ತಿ ಮತ್ತು ನಾಯಕತ್ವವು ಸೈನಿಕರನ್ನು ಧೈರ್ಯಶಾಲಿಗಳಾಗಿರಲು ಮತ್ತು ದೊಡ್ಡ ತ್ಯಾಗಗಳನ್ನು ಮಾಡಲು ಪ್ರೇರೇಪಿಸುತ್ತದೆ ಎಂಬುದನ್ನು ತೋರಿಸಿದೆ. ನಂತರ ಅವರು ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಭೇಟಿಯಾದರು, ಅದು ಸೈನಿಕರ ಆತ್ಮವಿಶ್ವಾಸ ಕುಗ್ಗದಂತೆ ಕಾಪಾಡಿತು. ಅದರ ಪರಿಣಾಮವಾಗಿ ಟೈಗರ್ ಹಿಲ್ ವಿಜಯೋತ್ಸವವನ್ನು ಆಚರಿಸಿತು.

ಇದಲ್ಲದೆ, ಪಾಕಿಸ್ತಾನದ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಮೌನವನ್ನು ಮೋದಿ ಹೇಗೆ ವಿಶೇಷವಾಗಿ ಪ್ರಶ್ನಿಸಿದ್ದಾರೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯಗೊಳಿಸಲು ಪ್ರತಿಪಕ್ಷಗಳು ಹೇಗೆ ಹಿಂಜರಿಯುವುದಿಲ್ಲ ಎಂಬುದನ್ನೂ ಎಕ್ಸ್‌ನ ಪೋಸ್ಟ್‌ನಲ್ಲಿ ವಿವರಿಸಲಾಗಿದೆ.

1999 ರಲ್ಲಿ ಸಾಧನಾ ಮ್ಯಾಗಜೀನ್‌ಗೆ ಪ್ರಧಾನಿ ಮೋದಿ ನೀಡಿದ ಸಂದರ್ಶನದಲ್ಲಿ, ಅಂತಹ ನಿರ್ಣಾಯಕ ಸಮಯದಲ್ಲಿ ರಾಜಕೀಯ ಹಿತಾಸಕ್ತಿಗಳನ್ನು ಅನುಸರಿಸುವುದು ಎಷ್ಟು ದುರದೃಷ್ಟಕರ ಎಂದು ಅವರು ಸೂಚಿಸಿದರು. 1971 ರ ಯುದ್ಧದ ಸಮಯದಲ್ಲಿ ಅಟಲ್ ಜಿ ಅವರು ವಿರೋಧ ಪಕ್ಷದಲ್ಲಿದ್ದರೂ, ಇಂದಿರಾ ಗಾಂಧಿಯನ್ನು ಹೇಗೆ ಸಂಪೂರ್ಣವಾಗಿ ಬೆಂಬಲಿಸಿದರು, ನಿಜವಾದ ರಾಷ್ಟ್ರೀಯ ಏಕತೆಯನ್ನು ತೋರಿಸಿದರು ಎಂಬುದನ್ನು ಅವರು ಎಲ್ಲರಿಗೂ ನೆನಪಿಸಿದರು.

ಇದನ್ನೂ ಓದಿ: Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Continue Reading

ಕರ್ನಾಟಕ

MUDA site scandal: ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ

MUDA site scandal: ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ವಿಪಕ್ಷಗಳ ಹಲವು ನಾಯಕರು, ಮುಖಂಡರು ಮುಡಾ ಸೈಟ್‌ ಪಡೆದಿದ್ದಾರೆ. ನಾನು ಕುಮಾರಸ್ವಾಮಿ ಅವರ ಕುಟುಂಬದ ಆಸ್ತಿಪಾಸ್ತಿಗಳ ಬಗ್ಗೆ ಮಾತನಾಡಲ್ಲ. ಯಾಕೆಂದರೆ ಅವುಗಳ ಸಂಖ್ಯೆ ಎಷ್ಟೋ , ಆಳವೆಷ್ಟೋ, ಉದ್ದವೆಷ್ಟೋ ತಿಳಿಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರು ಇತ್ತೀಚೆಗೆ ನನ್ನನ್ನು ಗುರಿಮಾಡಿಕೊಂಡಿದ್ದಾರೆ. ಯಾಕೆಂದರೆ ಸಿದ್ದರಾಮಯ್ಯನವರದು ಕಳಂಕರಹಿತವಾದ ವ್ಯಕ್ತಿತ್ವ ಎಂಬ ಮಾತು ಅವರ ನಿದ್ದೆಗೆಡಿಸುತ್ತಿದೆ. ಹಾಗಾಗಿ ಅವರು ಇಲ್ಲಸಲ್ಲದ ಕಿತಾಪತಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಆದರೆ, ಕುಮಾರಸ್ವಾಮಿ ಸೇರಿ ವಿಪಕ್ಷಗಳ ಹಲವು ನಾಯಕರು, ಮುಖಂಡರು ಮುಡಾ ಸೈಟ್‌ (MUDA site scandal) ಪಡೆದಿದ್ದಾರೆ. ಕುಮಾರಸ್ವಾಮಿ ಕೈಗಾರಿಕೆ ನಿರ್ಮಿಸಲು ಸೈಟ್‌ ಪಡೆದಿದ್ದರು. ಆದರೆ, ಕೈಗಾರಿಕೆ ಆರಂಭಿಸದೆ ಸಂಪೂರ್ಣವಾಗಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಇವರು ಪ್ರಶ್ನೆ ಮಾಡಿಲ್ಲ. ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು, ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿ, ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮುಡಾದಿಂದ ಪಡೆದಿರುವ ಸೈಟ್‌ಗಳ ವಿವರ ಮತ್ತು ಹೆಸರನ್ನು ಓದಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ, ಜಿ.ಟಿ.ದೇವೇಗೌಡ, ಎಚ್‌.ವಿಶ್ವನಾಥ್‌, ಸಾ.ರಾ.ಮಹೇಶ್‌, ಸಿ.ಎನ್‌.ಮಂಜೇಗೌಡ ಸೇರಿ ಹಲವು ವಿಪಕ್ಷ ನಾಯಕರು, ಮುಖಂಡರು ಸೈಟ್‌ ಪಡೆದಿರುವ ಪಟ್ಟಿಯನ್ನು ಸಿಎಂ ಬಿಡುಗಡೆ ಮಾಡಿದರು.

ಗೋಮಾಳ ಸೇರಿ 200 ಎಕರೆ ಗುಳುಂ

ನಾನು ಕುಮಾರಸ್ವಾಮಿ ಅವರ ಕುಟುಂಬದ ಆಸ್ತಿಪಾಸ್ತಿಗಳ ಬಗ್ಗೆ ಮಾತನಾಡಲ್ಲ. ನನಗೆ ಏನು ಇಲ್ಲಿರುವ ಯಾರಿಗೂ ಸಾಧ್ಯವಿಲ್ಲ. ಯಾಕೆಂದರೆ ಅವುಗಳ ಸಂಖ್ಯೆ ಎಷ್ಟೋ , ಆಳವೆಷ್ಟೋ, ಉದ್ದವೆಷ್ಟೋ ತಿಳಿಯದು ಎಂದ ಸಿಎಂ, ಹಿಟ್ಲರ್‌ವಾದಿಗಳ ಜತೆಗೆ ಫ್ಯೂಡಲ್‌ವಾದಿಗಳು ಸೇರಿಕೊಂಡಿದ್ದಾರೆ. ಇಬ್ಬರೂ ಸೇರಿ ಟಾರ್ಗೆಟ್ ಮಾಡಿಕೊಂಡು ಓಡಾಡುತ್ತಿದ್ದಾರೆ. ನನ್ನ ಜೀವಿತಾವಧಿಯಲ್ಲಿ ಇಂಥ ಹಲವಾರು ಪಿತೂರಿಗಳನ್ನು ಎದುರಿಸಿದ್ದೇನೆ ಎಂದು ತಿಳಿಸಿದರು.

ಬೆಂಗಳೂರಿಗೆ ಹೊಂದಿಕೊಂಡಂತೆ ಬಿಡದಿಯ ಬಳಿ ಇರುವ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16 ಮತ್ತು 17ರಲ್ಲಿ ಒಟ್ಟು 110.32 ಎಕರೆ ಸರ್ಕಾರಿ ಗೋಮಾಳ ಸೇರಿ 200 ಎಕರೆ ಜಮೀನನ್ನು ಎಚ್. ಡಿ ಕುಮಾರಸ್ವಾಮಿ ಮತ್ತವರ ಕುಟುಂಬದವರು ಹಾಗೂ ಮದ್ದೂರು ಶಾಸಕರಾದ ಡಿ.ಸಿ. ತಮ್ಮಣ್ಣ ಮತ್ತವರ ಕುಟುಂಬದವರು ನಿಯಮಗಳನ್ನು ಉಲ್ಲಂಘಿಸಿ ಭೂ ಕಬಳಿಸಿರುವುದಾಗಿ ಆರೋಪಿಸಿದ ಸಿಎಂ, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ 200 ಎಕರೆ ಸರ್ಕಾರಿ ಜಮೀನನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಪ್ರಸ್ತಾವನೆಯನ್ನು ಸಲ್ಲಿಸಲು ಕೋರಿ ದಿನಾಂಕ 20214ರ ಆ. 25ರಂದು ಜಿಲ್ಲಾಧಿಕಾರಿಗಳಿಗೆ ಅಂದಿನ ಎಸಿ ಸಿದ್ದಪ್ಪ ಪತ್ರ ಬರೆದಿದ್ದರು.

ಇದನ್ನೂ ಓದಿ | MUDA Scam: ಮುಡಾ ಜಮೀನಿನ ಸಂಪೂರ್ಣ ದಾಖಲೆಗಳನ್ನು ತೆರೆದಿಟ್ಟ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿವರ

ಇದಕ್ಕೂ ಮೊದಲು ಎಸಿ ಸಿದ್ದಪ್ಪ ಅವರು 2011ರಲ್ಲಿ ಜಿ. ಮಾದೇಗೌಡ ಅವರು ಲೋಕಾಯುಕ್ತದಲ್ಲಿ ದಾಖಲಿಸಿದ್ದ ದೂರು ಪ್ರಕರಣದಲ್ಲಿ ವಿಚಾರಣೆ ನಡೆಸಿ ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದರು. ಅವರ ಪ್ರಕಾರ, ಈ 200 ಎಕರೆ ಭೂಮಿಯಲ್ಲಿ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, ಕರ್ನಾಟಕ ಭೂ ಸುಧಾರಣಾ ಕಾಯ್ದೆಯ 79 ಎ ಮತ್ತು ಬಿ ಹಾಗೂ 66, ಪಿಟಿಸಿಎಲ್ ಕಾಯ್ದೆ, ಮುದ್ರಾಂಕ ಪಾವತಿಸದೆ ಮೋಸ ಮಾಡಿರುವುದು, ಸರ್ಕಾರಿ ಜಮೀನುಗಳನ್ನು ಕಬಳಿಸಲಾಗಿದೆ ಹಾಗೂ ಕಂದಾಯ ಇಲಾಖೆಯ ಮಾಹಿತಿಗಳ ಪ್ರಕಾರ ಕೇತಗಾನಹಳ್ಳಿಯ ಸ. ನಂ 60 ಮತ್ತು 62 ರಲ್ಲಿ ವ್ಯಾಪಕವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ದ್ರೋಹ ಮಾಡಿರುವುದು ಕಂಡುಬರುತ್ತಿದೆ ಎಂದು ತಿಳಿಸಿದ್ದರು.

ಇನ್ನು 2011ರ ಮಾರ್ಚ್‌ 17ರಂದು ಮೈಸೂರು ಮುಡಾದಲ್ಲಿ 60000 ಅಡಿ ಭೂಮಿ ಹಂಚಿಕೆಯ ಕುರಿತು ವಿಧಾನಪರಿಷತ್‌ನಲ್ಲಿ ಯಡಿಯೂರಪ್ಪನವರು ದಾಖಲೆಗಳನ್ನು ಅಂದಿನ ಸಭಾಪತಿಗಳಿಗೆ ನೀಡಿರುವುದು ದಾಖಲಾಗಿದೆ. ಯಡಿಯೂರಪ್ಪನವರು ನೇರವಾಗಿ ಎಚ್‌.ಡಿ. ದೇವೇಗೌಡರು ನಿಯಮಗಳನ್ನು ಗಾಳಿಗೆ ತೂರಿ 48 ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ಹಂಚಿಕೆ ಮಾಡಿರುವ ದಾಖಲೆ ಒದಗಿಸಿದ್ದರು ಎಂದು ಸಿಎಂ ತಿಳಿಸಿದರು.

ಎಚ್. ಡಿ ಕುಮಾರಸ್ವಾಮಿಯವರಿಗೆ 1984 ನ.7ರಂದು 75*280 ಅಡಿ ಒಟ್ಟು 21,000 ಅಡಿಗಳ ಕೈಗಾರಿಕಾ ನಿವೇಶನ ಮೈಸೂರಿನ ಸಿಐಟಿಬಿಯಿಂದ ಮಂಜೂರಾಗಿದೆ. ಚದರ ಗಜಕ್ಕೆ 16 ರೂಪಾಯಿಯಂತೆ 37,334 ರೂಪಾಯಿಗಳಿಗೆ ಅಭಿವೃದ್ಧಿಪಡಿಸಿದ ಕೈಗಾರಿಕಾ ನಿವೇಶನವನ್ನು ಇಂಡಸ್ಟ್ರಿಯಲ್ ಸಬರ್ಬನ್ 3ನೇ ಹಂತದಲ್ಲಿ ಮಂಜೂರು ಮಾಡಿದ್ದರು. ಮಂಜೂರಾತಿ ಪತ್ರದಲ್ಲಿ ಎರಡು ವರ್ಷದೊಳಗೆ ಅಲ್ಲಿ ಕೈಗಾರಿಕೆ ಪ್ರಾರಂಭಿಸಬೇಕು ಎಂದು ಷರತ್ತು ವಿಧಿಸಿದ್ದರು. 1985 ರಲ್ಲಿ ಸ್ವಾಧೀನ ಪತ್ರ ಕೊಟ್ಟಿದ್ದಾರೆ. ಆದರೂ ಕುಮಾರಸ್ವಾಮಿ ಕೈಗಾರಿಕೆ ನಿರ್ಮಿಸಿಲ್ಲ. ಇಂಡಸ್ಟ್ರಿಯಲ್ ನಿವೇಶನ ಬೇರೆ ಯಾರಿಗಾದರೂ ಕೊಟ್ಟಿದ್ದರೆ ಅಲ್ಲಿ ಕೈಗಾರಿಕೆ ಸ್ಥಾಪನೆಯಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿದ್ದವು. ಸರ್ಕಾರಕ್ಕೆ ಆದಾಯವೂ ಬರುತ್ತಿತ್ತು. ಕುಮಾರಸ್ವಾಮಿ ಅದನ್ನು ಸಂಪೂರ್ಣ ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ | BJP Protest: ಸಂಸತ್ ಬಳಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ; ವಾಲ್ಮೀಕಿ ನಿಗಮ ಅಕ್ರಮ, ಮುಡಾ ಹಗರಣ ಸಿಬಿಐ ತನಿಖೆಗೆ ನೀಡಲು ಆಗ್ರಹ

ದಿನಾಂಕ 18-2-2017 ರಲ್ಲಿ ಮುಡಾ ಆಯುಕ್ತರಿಗೆ ಬದಲಿ ನಿವೇಶನ ಕೊಡುವಂತೆ ಕುಮಾರಸ್ವಾಮಿ ಮನವಿ ಕೊಟ್ಟಿದ್ದಾರೆ. ಅವರಿಗೆ ಬದಲಿ ನಿವೇಶನ ಕೊಡಲು 7-1-2023 ರಂದು ಮುಡಾ ನಿರ್ಣಯ ಮಾಡಿದೆ. ಅದೇ ಜಾಗದಲ್ಲಿ ಅಕ್ರಮವಾಗಿದ್ದ ಇನ್ನೊಬ್ಬರು ವ್ಯಕ್ತಿ ಕೋರ್ಟಿಗೆ ಹೋಗಿ ತಡೆಯಾಜ್ಞೆ ತಂದಿರುವುದರಿಂದ ಇದು ನಿಂತಿದೆ. ಇಷ್ಟೆಲ್ಲ ಅಕ್ರಮ ಮಾಡಿ ಕುಮಾರಸ್ವಾಮಿ ವೇದಾಂತ ಮಾತಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Continue Reading

ದೇಶ

Sundar Pichai: ಗೂಗಲ್‌ ಸಿಇಒ ಸುಂದರ್‌ ಪಿಚೈಗೆ ಗೌರವ ಡಾಕ್ಟರೇಟ್‌ ಪ್ರದಾನ-ಫೋಟೋ ವೈರಲ್‌

Sundar Pichai:ಇನ್ನು ಈ ವಿಚಾರವನ್ನು ಸುಂದರ್‌ ಪಿಚೈ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ಕಳೆದ ವಾರ ನನ್ನ ಅಲ್ಮಾ ಮೇಟರ್ ಐಐಟಿ ಖರಗ್‌ಪುರದಿಂದ ಗೌರವ ಡಾಕ್ಟರೇಟ್ ಸ್ವೀಕರಿಸಲು ನಾನು ಕೃತಜ್ಞನಾಗಿದ್ದೇನೆ. ನನ್ನ ಪೋಷಕರು ಯಾವಾಗಲೂ ನನ್ನ ಡಾಕ್ಟರೇಟ್ ಪಡೆಯಬೇಕೆಂದು ಆಶಿಸುತ್ತಿದ್ದರು, ಈ ಗೌರವ ಸ್ವೀಕರಿಸುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ ಎಂದಿದ್ದಾರೆ.

VISTARANEWS.COM


on

Sundar Pichai
Koo

ಹೊಸದಿಲ್ಲಿ: ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಗೂಗಲ್‌ ಸಿಇಒ(Google CEO) ಸುಂದರ್‌ ಪಿಚೈ(Sundar Pichai) ಮತ್ತು ಅವರ ಪತ್ನಿಗೆ ಅಂಜಲಿ ಪಿಚೈ ಅವರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಾಗಿದೆ. ಖರಗ್‌ಪುರ ಐಐಟಿ(IIT Kharagpur) ಈ ಗೌರವ ಡಾಕ್ಟರೇಟ್‌ ಪ್ರದಾನ ಮಾಡಿದೆ.

ಇನ್ನು ಈ ವಿಚಾರವನ್ನು ಸುಂದರ್‌ ಪಿಚೈ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ಕಳೆದ ವಾರ ನನ್ನ ಅಲ್ಮಾ ಮೇಟರ್ ಐಐಟಿ ಖರಗ್‌ಪುರದಿಂದ ಗೌರವ ಡಾಕ್ಟರೇಟ್ ಸ್ವೀಕರಿಸಲು ನಾನು ಕೃತಜ್ಞನಾಗಿದ್ದೇನೆ. ನನ್ನ ಪೋಷಕರು ಯಾವಾಗಲೂ ನನ್ನ ಡಾಕ್ಟರೇಟ್ ಪಡೆಯಬೇಕೆಂದು ಆಶಿಸುತ್ತಿದ್ದರು, ಈ ಗೌರವ ಸ್ವೀಕರಿಸುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ ಎಂದಿದ್ದಾರೆ.

IIT ಯಲ್ಲಿನ ಶಿಕ್ಷಣ ಮತ್ತು ತಂತ್ರಜ್ಞಾನದ ಅಧ್ಯಯನ ನನ್ನನ್ನು Googleನಂತಹ ಅತಿದೊಡ್ಡ ಸಂಸ್ಥೆಯ ಅತಿ ದೊಡ್ಡ ಹುದ್ದೆಯನ್ನು ಅಲಂಕರಿಸುವಂತೆ ಮಾಡಿತು. ಹಾಗೂ ಹೆಚ್ಚಿನ ಜನರು ತಂತ್ರಜ್ಞಾನವನ್ನು ಪ್ರವೇಶಿಸಲು ಸಹಾಯ ಮಾಡಿತು. ತಂತ್ರಜ್ಞಾನದಲ್ಲಿ ಐಐಟಿಯ ಪಾತ್ರವು AI ಕ್ರಾಂತಿಯೊಂದಿಗೆ ಮಾತ್ರ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ ಮತ್ತು ನಾನಿ ಅಲ್ಲಿ ಕಳೆದ ಕೆಲವು ಸಮಯಕ್ಕಾಗಿ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ ಎಂದು ಅವರು ಹೇಳಿದರು.

ಅವರು ಗೌರವ ಪದವಿ ಸ್ವೀಕರಿಸುತ್ತಿರುವ ಎರಡು ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ. ಸುಂದರ್ ಪಿಚೈ ಅವರಿಗೆ ಡಾಕ್ಟರ್ ಆಫ್ ಸೈನ್ಸ್ (ಆನರಿಸ್ ಕಾಸಾ) ಪ್ರಶಸ್ತಿಯನ್ನು ನೀಡಲಾಯಿತು. ಅವರ ಪತ್ನಿ ಅಂಜಲಿ ಪಿಚೈ ಅವರಿಗೆ ಪ್ರತಿಷ್ಠಿತ ಹಳೆಯ ವಿದ್ಯಾರ್ಥಿ ಪ್ರಶಸ್ತಿಯನ್ನು ನೀಡಲಾಯಿತು. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಸಮಾರಂಭದಲ್ಲಿ ಅವರು ತಮ್ಮ ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಪಿಚೈ ಪೋಸ್ಟ್‌ಗೆ ನೆಟ್ಟಿಗರ ಪ್ರತಿಕ್ರಿಯೆ

ಇನ್ನು ಸುಂದರ್‌ ಪಿಚೈ ಅವರ ಪೋಸ್ಟ್‌ ಅನೇಕ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅಭಿನಂದನೆ ಸಲ್ಲಿಸಿದ್ದಾರೆ. ಐಐಟಿಯ ವಿದ್ಯಾರ್ಥಿ ಎಂದಿಗೂ ಐಐಟಿಯ ವಿದ್ಯಾರ್ಥಿಯೇ ಆಗಿರುತ್ತಾನೆ. ಸುಂದರ್‌ ಪಿಚೈ ಬರೀ ಹೆಸರಲ್ಲ ಅದೊಂದು ಅದ್ಭುತ ಎಂದು ಒಬ್ಬ ಬರೆದುಕೊಂಡಿದ್ದಾನೆ. ಪಿಚೈ ಒಬ್ಬ ಅದ್ಬುತ ವ್ಯಕ್ತಿ ಅಭಿನಂದನೆಗಳು ಎಂದು ಮತ್ತೊಬ್ಬ ನೆಟ್ಟಿಗ ಬರೆದುಕೊಂಡಿದ್ದಾನೆ.

ಸುಂದರ್ ಪಿಚೈ ಅವರಿಗೆ ಗೌರವ ಪದವಿ ನೀಡಿದ್ದು ಏಕೆ?

ಡಿಜಿಟಲ್ ರೂಪಾಂತರ, ಕೈಗೆಟುಕುವ ತಂತ್ರಜ್ಞಾನ ಮತ್ತು ಹೊಸ ಆವಿಷ್ಕಾರಗಳಿಗೆ ಅವರ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಸುಂದರ್‌ ಪಿಚೈ ಅವರಿಗೆ ಈ ಗೌರವ ಪ್ರದಾನ ಮಾಡಲಾಯಿತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಐಐಟಿ-ಖರಗ್‌ಪುರದ 69 ನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು. ಅಂದು ಪಿಚೈ ಅವರು ಗೈರು ಹಾಜರಾಗಿದ್ದ ಕಾರಣ ಜುಲೈ 23 ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: Kargil Vijay Diwas 2024: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಕ್ಷಣವೂ ಯೋಚಿಸದ ಈ ವೀರ ಯೋಧರಿಗೊಂದು ಸಲಾಮ್

Continue Reading
Advertisement
shalini rajneesh
ಕರ್ನಾಟಕ12 mins ago

Shalini Rajneesh: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ಜಾಗಕ್ಕೆ ಪತ್ನಿಯ ಆಯ್ಕೆ

Rohit Sharma
ಕ್ರೀಡೆ13 mins ago

Rohit Sharma: ವಿಮಾನ ನಿಲ್ದಾಣದಿಂದ ಲ್ಯಾಂಬೋರ್ಗಿನಿ ಕಾರು ಚಲಾಯಿಸಿಕೊಂಡು ಹೋದ ರೋಹಿತ್​; ವಿಡಿಯೊ ವೈರಲ್​

Karnataka rain
ಮಳೆ16 mins ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

Hamsalekha NadaBrahma' has no meaning, Shankar Shanubhag sparks against Hansalekha
ಸ್ಯಾಂಡಲ್ ವುಡ್20 mins ago

Hamsalekha: ʻನಾದಬ್ರಹ್ಮʼ ಎಂಬ ಪದಕ್ಕೆ ಅರ್ಥವೇ ಇಲ್ಲ,ಹಸಿ ಸುಳ್ಳು ಹೇಳುವ ವ್ಯಕ್ತಿ ಎಂದು ಹಂಸಲೇಖ ವಿರುದ್ಧ ಶಂಕರ್ ಶಾನುಭಾಗ್ ಕಿಡಿ!

Kargil Vijay Diwas 2024
ದೇಶ27 mins ago

Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

ಕರ್ನಾಟಕ38 mins ago

MUDA site scandal: ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ

Jio announced 30 Percent discount on Freedom Offer for Air Fiber new customers
ವಾಣಿಜ್ಯ43 mins ago

Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

Viral Video
Latest48 mins ago

Viral Video: ಸಿಂಧೂರ ಹಚ್ಚುವಾಗ ಕುಸಿದುಬಿದ್ದ ವಧು; ಎದ್ದೂಬಿದ್ದು ಓಡಿದ ವರ!

Ragging Case
Latest59 mins ago

Ragging Case: ಜೂನಿಯರ್ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ಸೀನಿಯರ್‌ಗಳು! ತಲ್ಲಣ ಮೂಡಿಸುವ ವಿಡಿಯೊ

Namratha Gowda new look photos got viral
ಸ್ಯಾಂಡಲ್ ವುಡ್1 hour ago

Namratha Gowda: ಕಪ್ಪು ಬಣ್ಣದ ಲಾಂಗ್ ಗೌನ್‌ನಲ್ಲಿ ಹಾಟ್‌ ಆಗಿ ಕಂಡ ನಮ್ರತಾ ಗೌಡ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ16 mins ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ23 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

ಟ್ರೆಂಡಿಂಗ್‌