Kamala Harris: ಅಮೆರಿಕ ಅಧ್ಯಕ್ಷೀಯ ಚುನಾವಣೆ; ಕಮಲಾ ಹ್ಯಾರಿಸ್‌ ಪರ ನಿಂತ ಬರಾಕ್‌ ಒಬಾಮಾ - Vistara News

ವಿದೇಶ

Kamala Harris: ಅಮೆರಿಕ ಅಧ್ಯಕ್ಷೀಯ ಚುನಾವಣೆ; ಕಮಲಾ ಹ್ಯಾರಿಸ್‌ ಪರ ನಿಂತ ಬರಾಕ್‌ ಒಬಾಮಾ

Kamala Harris: ಬರಾಕ್‌ ಒಬಾಮಾ ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿ, ಬೆಂಬಲ ಘೋಷಿಸಿದ್ದಾರೆ. ನೀವು ಅಮೆರಿಕ ಅಧ್ಯಕ್ಷರಾದರೆ ಒಳ್ಳೆಯದಾಗುತ್ತದೆ. ನಿಮಗೆ ನಮ್ಮ ಬೆಂಬಲವಿದೆ ಎಂಬುದನ್ನು ತಿಳಿಸಿದೆವು. ದೇಶವು ಮಹತ್ವದ ಘಟ್ಟದಲ್ಲಿರುವ ಇಂತಹ ಹೊತ್ತಿನಲ್ಲಿ ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಲು ನಾವು ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ ಎಂಬುದಾಗಿ ದಂಪತಿಯು ತಿಳಿಸಿದ್ದಾರೆ.

VISTARANEWS.COM


on

Kamala Harris
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ದಿನಗಣನೆ ಆರಂಭವಾಗಿದೆ. ಅದರಲ್ಲೂ, ಹಾಲಿ ಅಧ್ಯಕ್ಷ ಜೋ ಬೈಡೆನ್‌ (Joe Biden) ಅವರು ಚುನಾವಣೆ ಕಣದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಉಪಾಧ್ಯಕ್ಷೆ, ಭಾರತ ಮೂಲದ ಕಮಲಾ ಹ್ಯಾರಿಸ್‌ (Kamala Harris) ಅವರೇ ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಕಮಲಾ ಹ್ಯಾರಿಸ್‌ ಅವರಿಗೇ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ (Barack Obama) ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಬೆಂಬಲ ಸೂಚಿಸಿದ್ದಾರೆ. ಇದರೊಂದಿಗೆ ಕಮಲಾ ಹ್ಯಾರಿಸ್‌ ಅವರೇ ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗುವುದು ಬಹುತೇಕ ನಿಶ್ಚಿತವಾಗಿದೆ.

ಚುನಾವಣೆ ರೇಸ್‌ನಿಂದ ಹಿಂದೆ ಸರಿದ ಬಳಿಕ ಜೋ ಬೈಡೆನ್‌ ಅವರು ಅಧ್ಯಕ್ಷ ಸ್ಥಾನಕ್ಕೆ ಕಮಲಾ ಹ್ಯಾರಿಸ್‌ ಅವರ ಹೆಸರನ್ನು ಸೂಚಿಸಿದ್ದರು. ಆದರೆ, ಬರಾಕ್‌ ಒಬಾಮಾ ಅವರು ಕಮಲಾ ಹ್ಯಾರಿಸ್‌ ಅವರಿಗೆ ಬೆಂಬಲ ಸೂಚಿಸುತ್ತಾರೋ, ಇಲ್ಲವೋ ಎಂಬ ಗೊಂದಲ ಮನೆಮಾಡಿತ್ತು. ಈಗ ಬರಾಕ್‌ ಒಬಾಮಾ ಅವರು ಕೂಡ ಕಮಲಾ ಹ್ಯಾರಿಸ್‌ ಅವರಿಗೆ ಬೆಂಬಲ ಘೋಷಿಸಿರುವುದು ಪ್ರಮುಖ ಸಂಗತಿಯಾಗಿದೆ.

ಬರಾಕ್‌ ಒಬಾಮಾ ಹಾಗೂ ಅವರ ಪತ್ನಿ ಮಿಚೆಲ್‌ ಒಬಾಮಾ ಅವರು ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿ, ಬೆಂಬಲ ಘೋಷಿಸಿದ್ದಾರೆ. “ಕೆಲ ದಿನಗಳ ಹಿಂದೆ ನಾನು ಹಾಗೂ ಮಿಚೆಲ್‌ ಅವರು ಗೆಳತಿ ಕಮಲಾ ಹ್ಯಾರಿಸ್‌ ಅವರಿಗೆ ಕರೆ ಮಾಡಿದ್ದೆವು. ನೀವು ಅಮೆರಿಕ ಅಧ್ಯಕ್ಷರಾದರೆ ಒಳ್ಳೆಯದಾಗುತ್ತದೆ. ನಿಮಗೆ ನಮ್ಮ ಬೆಂಬಲವಿದೆ ಎಂಬುದನ್ನು ತಿಳಿಸಿದೆವು. ದೇಶವು ಮಹತ್ವದ ಘಟ್ಟದಲ್ಲಿರುವ ಇಂತಹ ಹೊತ್ತಿನಲ್ಲಿ ಕಮಲಾ ಹ್ಯಾರಿಸ್‌ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಲು ನಾವು ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ. ನೀವು ಕೂಡ ನಮ್ಮ ಜತೆಗೂಡಿ” ಎಂಬುದಾಗಿ ಬರಾಕ್‌ ಒಬಾಮಾ ಪೋಸ್ಟ್‌ ಮಾಡಿದ್ದಾರೆ.

ಕಮಲಾ ಹ್ಯಾರಿಸ್​ ಮೂಲತಃ ಭಾರತದವರು. ಅವರ ತಾಯಿ ಹುಟ್ಟಿದ್ದು ತಮಿಳುನಾಡಿನ ಚೆನ್ನೈನಲ್ಲಿ. ಬಳಿಕ ಯುಎಸ್​ಗೆ ತೆರಳಿ, ಅಲ್ಲಿನವರನ್ನೇ ಮದುವೆಯಾಗಿ ನೆಲೆಸಿದ್ದರು. ಯುಎಸ್​ ಉಪಾಧ್ಯಕ್ಷೆ ಸ್ಥಾನಕ್ಕೆ ಏರಿದ ಮೊದಲ ಭಾರತೀಯ ಮೂಲದ ಮಹಿಳೆ ಎಂಬ ಹೆಗ್ಗಳಿಕೆಗೂ ಕಮಲಾ ಹ್ಯಾರಿಸ್​ ಪಾತ್ರರಾಗಿದ್ದಾರೆ. ಅವರು ಯುಎಸ್​ ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದಾಗ ಚೆನ್ನೈನಲ್ಲಿರುವ ಅವರ ಪೂರ್ವಜರ ಊರಿನಲ್ಲಿ ಭರ್ಜರಿ ಸಂಭ್ರಮ ಏರ್ಪಟ್ಟಿತ್ತು. ಸಿಹಿ ವಿತರಣೆಯೂ ನಡೆದಿತ್ತು.

ಅಮೆರಿಕದ ಉಪಾಧ್ಯಕ್ಷ ಸ್ಥಾನದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾದೇವಿ ಹ್ಯಾರಿಸ್ ಅವರ ತಂದೆ ಜಮೈಕಾ ಮೂಲದವರಾದರೆ ತಾಯಿ ಭಾರತೀಯ ಮೂಲದವರು. ಉನ್ನತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಕಮಲಾ, ಪೊಲೀಸ್ ವ್ಯವಸ್ಥೆಯಲ್ಲಿ ಗಮನಾರ್ಹ ಸುಧಾರಣೆ ತಂದು ಗಮನ ಸೆಳೆದರು. ನಂತರ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ ಕಮಲಾದೇವಿ ಹ್ಯಾರಿಸ್, 2020ರಲ್ಲಿ ಅಮೆರಿಕದ ಉಪಾಧ್ಯಕ್ಷ ಚುನಾವಣೆಯಲ್ಲಿ ರಿಪಬ್ಲಿಕ್ ಪಕ್ಷದ ಮೈಕ್ ಪೆನ್ಸೆ ಅವರ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: US Presidential Election: ಚುನಾವಣಾ ಪೂರ್ಣ ಸಮೀಕ್ಷೆ ಔಟ್‌; ಕಮಲಾ ಹ್ಯಾರಿಸ್‌ಗೆ ಮುನ್ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಮೋದಿ ಎಚ್ಚರಿಕೆಗೆ ಪಾಕಿಸ್ತಾನ ಥಂಡಾ; ಗಡಿಯಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ!

Narendra Modi: ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು.

VISTARANEWS.COM


on

Narendra Modi
Koo

ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನೀಡದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್‌ ವಿಜಯ ದಿವಸದಂದೇ (Kargil Vijay Diwas 2024) ಎಚ್ಚರಿಕೆ ನೀಡಿದ ಬೆನ್ನಲ್ಲೇ ನೆರೆ ರಾಷ್ಟ್ರವು ಥಂಡಾ ಹೊಡೆದಿದೆ. ನರೇಂದ್ರ ಮೋದಿ ಅವರು ಎಚ್ಚರಿಕೆ ನೀಡಿದ ಬಳಿಕ ಪಾಕಿಸ್ತಾನ ಸೇನೆಯು ಗಲಿಬಿಲಿಗೊಂಡಿದ್ದು, ಗಡಿಯಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿದೆ.

ಹೌದು, ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋದಿ ಎಚ್ಚರಿಕೆ ಏನಾಗಿತ್ತು?

ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ದಿ ಬಾರದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.

ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ಗೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​ನ ರೈಲ್ವೆ ವ್ಯವಸ್ಥೆ ಮೇಲೆ ವಿಧ್ವಂಸಕ ದಾಳಿ

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 ರ (Paris Olympics 2024) ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಫ್ರಾನ್ಸ್​​ನ ಹೈಸ್ಪೀಡ್ ಟಿಜಿವಿ ರೈಲು ಜಾಲದ ಮೇಲೆ ದುಷ್ಕರ್ಮಿಗಳ ದಾಳಿ ನಡೆದಿದೆ. ಶುಕ್ರವಾರ ರೈಲಿನ ತಾಂತ್ರಿಕ ನಿರ್ವಹಣಾ ಕೇಂದ್ರಗಳಿಗೆ ಬೆಂಕಿ ಹಚ್ಚವಲಾಗಿದೆ. ದುರುದ್ದೇಶದ ಕೃತ್ಯಗಳಿಂದಾಗಿ ರೈಲು ಸಂಪರ್ಕ ಜಾಲಕ್ಕೆ ಹಾನಿಯಾಗಿದೆ. ಇದು ದೇಶದ ಜನನಿಬಿಡ ರೈಲು ಮಾರ್ಗಗಳಿಗೆ ಅಡ್ಡಿಯಾಗಿದ್ದು, ಪ್ರಯಾಣಿಕರು ಅರ್ಧ ದಾರಿಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಕ್ರೀಡಾಕೂಟಕ್ಕೆ ಮುಂಚಿತವಾಗಿ ಪ್ರಯಾಣಕ್ಕೆ ಅಡ್ಡಿಪಡಿಸಲು ಈ ದಾಳಿ ನಡೆಸಲಾಗಿದ್ದು ಇದು ಸಂಘಟಿತ ವಿಧ್ವಂಸಕ ಕೃತ್ಯ ಎಂದು ಹೇಳಲಾಗಿದೆ.

ಪ್ಯಾರಿಸ್ ಅನ್ನು ಪಶ್ಚಿಮ, ಉತ್ತರ ಮತ್ತು ಪೂರ್ವ ಪ್ರದೇಶಗಳೊಂದಿಗೆ ಸಂಪರ್ಕಿಸುವ ಮಾರ್ಗಗಳಲ್ಲಿನ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಬೆಂಕಿ ಹಚ್ಚಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಎಸ್ಎನ್​ಸಿಎಫ್ ತಿಳಿಸಿದೆ. ಇಂಗ್ಲಿಷ್ ಕಾಲುವೆಯ ಕೆಳಗಿರುವ ಲಂಡನ್ ಮತ್ತು ನೆರೆಯ ಬೆಲ್ಜಿಯಂಗೆ ಪ್ರಯಾಣದ ಮೇಲೂ ಇದು ಪರಿಣಾಮ ಬೀರಿದೆ ಎಂದು ವರದಿಗಳು ತಿಳಿಸಿವೆ.

ಅಲ್ಲಿ ರೈಲು ವಿಭಾಗ ಹಲವಾರು ರೈಲುಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಯಿತು ಮತ್ತು ರದ್ದುಗೊಳಿಸಬೇಕಾಯಿತು ಎಂದು ಹೇಳಲಾಗಿದೆ. ದುರಸ್ತಿಯ ಮೇಲ್ವಿಚಾರಣೆಗಾಗಿ ಸುರಕ್ಷತಾ ತಂಡ ಸ್ಥಳದಲ್ಲಿದೆ ಎಂದು ಹೇಳಿದ್ದಾರೆ. ವಾರಾಂತ್ಯದಲ್ಲಿ ಸಂಚಾರದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಅದು ಹೇಳಿದೆ.

“ಅಟ್ಲಾಂಟಿಕ್, ಉತ್ತರ ಮತ್ತು ಪೂರ್ವ ಹೈಸ್ಪೀಡ್ ಮಾರ್ಗಗಳಲ್ಲಿ ಹಲವೆಡೆ ಬೆಂಕಿ ಹಚ್ಚಲಾಗಿದೆ. ನಮ್ಮ ರೈಲ್ವೆ ವ್ಯವಸ್ಥೆಗಳನ್ನು ಹಾನಿಗೊಳಿಸಲು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ ಎಂದು ಸ್ಥಳೀಯ ಆಡಳಿತ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Nissan SUV X-TRAIL : ನಿಸ್ಸಾನ್ ನ ಹೊಚ್ಚ ಹೊಸ 4 ಜನರೇಷನ್ ಪ್ರೀಮಿಯಂ ಅರ್ಬನ್ ಎಸ್‌ಯುವಿ ಎಕ್ಸ್-ಟ್ರಯಲ್ ಬಿಡುಗಡೆ

ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ನಡೆದ ದಾಳಿಗಳನ್ನು ಸರ್ಕಾರಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ, ಈ ಘಟನೆಗಳಿಂದ ಕ್ರೀಡಾಕೂಟಗಳ ತಾಣಕ್ಕೆ ಯಾವುದೇ ಸಂಪರ್ಕ ಕಡಿತಗೊಂಡಿಲ್ಲ.

ಸಾರಿಗೆ ಸಚಿವ ಪ್ಯಾಟ್ರಿಸ್ ವೆರ್ಗ್ರೀಟ್ ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ “ಕ್ರಿಮಿನಲ್ ಘಟನೆಗಳನ್ನು ಖಂಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ರೈಲ್ವೆ ಸಂಚಾರವನ್ನು ಪುನಃಸ್ಥಾಪಿಸಲು ಎಸ್ ಎನ್ ಸಿಎಫ್ ಕೆಲಸ ಮಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.ದುರಸ್ತಿ ಕಾರ್ಯಗಳು ನಡೆಯುತ್ತಿದೆ. ರೈಲುಗಳನ್ನು ತಮ್ಮ ನಿರ್ಗಮನ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಆದಾಗ್ಯೂ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಪ್ರಯಾಣಿಕರಿಗೆ ಕೋಲಾಗಿದೆ.

ಇಷ್ಟು ದೊಡ್ಡ ಪ್ರಮಾಣದ ದಾಳಿಯು “ಟಿಜಿವಿ ನೆಟ್ವರ್ಕ್ ಅನ್ನು ನಿಷ್ಕ್ರಿಯಗೊಳಿಸುವ” ಗುರಿ ಹೊಂದಿತ್ತು ರೈಲ್ವೆ ಕಂಪನಿ ಹೇಳಿದೆ. ಸುಮಾರು 800,000 ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ ಎಂದು ಅದು ಹೇಳಿದೆ.

ವಿಧ್ವಂಸಕ ಕೃತ್ಯದಿಂದ ಲಂಡನ್ ಮತ್ತು ಪ್ಯಾರಿಸ್ ನಡುವಿನ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ.

Continue Reading

ವಿದೇಶ

9/11 Attack: ನ್ಯೂಯಾರ್ಕ್‌ ಅವಳಿ ಗೋಪುರಗಳ ಮೇಲೆ ಉಗ್ರ ದಾಳಿಯ ಹೊಸ ವಿಡಿಯೋ ವೈರಲ್‌

9/11 Attack: ಕೀ ಸುಗಿಮೋಟೊ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಅಪ್‌ಲೋಡ್‌ ಮಾಡಿದ್ದು, ಬೇರೆ ಆಂಗಲ್‌ನಲ್ಲಿ ಈ ದಾಳಿಯ ದೃಶ್ಯವನ್ನು ರೆಕಾರ್ಡ್‌ ಮಾಡಲಾಗಿದೆ. ಈ ಆಯಾಮದಲ್ಲಿ ಇದುವರೆಗೆ ದಾಳಿಯ ವಿಡಿಯೋ ಕಂಡುಬಂದಿಲ್ಲ. ಈ ಗೋಪುರ ಕುಸಿತದ ದೃಶ್ಯವನ್ನು ದಕ್ಷಿಣ ಅಥವಾ ಪೂರ್ವದಿಂದ ಚಿತ್ರೀಕರಿಸಿಲ್ಲ. ಈ ಹಿಂದಿನ ಎಲ್ಲಾ ದೃಶ್ಯಗಳನ್ನು ದಕ್ಷಿಣ ಅಥವಾ ಪೂರ್ವದಿಂದಲೇ ಚಿತ್ರೀಕರಿಸಲಾಗಿತ್ತು.

VISTARANEWS.COM


on

9/11 attack
Koo

ವಾಷಿಂಗ್ಟನ್‌: ಅಮೆರಿಕದ ನ್ಯೂಯಾರ್ಕ್‌ನ ವರ್ಲ್ಡ್‌ ಟ್ರೇಡ್‌ ಸೆಂಟರ್(World trade center) ಅವಳಿ ಗೋಪುರ ಗುರಿಯಾಗಿಸಿ ಸೆ.11, 20011(9/11 Attack) ರಂದು ನಡೆದ ಉಗ್ರರ ದಾಳಿಯ ಹೊಸ ವಿಡಿಯೋವೊಂದು ಬರೋಬ್ಬರಿ 23 ವರ್ಷಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗುತ್ತಿದೆ.

ಕೀ ಸುಗಿಮೋಟೊ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಅಪ್‌ಲೋಡ್‌ ಮಾಡಿದ್ದು, ಬೇರೆ ಆಂಗಲ್‌ನಲ್ಲಿ ಈ ದಾಳಿಯ ದೃಶ್ಯವನ್ನು ರೆಕಾರ್ಡ್‌ ಮಾಡಲಾಗಿದೆ. ಈ ಆಯಾಮದಲ್ಲಿ ಇದುವರೆಗೆ ದಾಳಿಯ ವಿಡಿಯೋ ಕಂಡುಬಂದಿಲ್ಲ. ಈ ಗೋಪುರ ಕುಸಿತದ ದೃಶ್ಯವನ್ನು ದಕ್ಷಿಣ ಅಥವಾ ಪೂರ್ವದಿಂದ ಚಿತ್ರೀಕರಿಸಿಲ್ಲ. ಈ ಹಿಂದಿನ ಎಲ್ಲಾ ದೃಶ್ಯಗಳನ್ನು ದಕ್ಷಿಣ ಅಥವಾ ಪೂರ್ವದಿಂದಲೇ ಚಿತ್ರೀಕರಿಸಲಾಗಿತ್ತು.

ಬಿಡುಗಡೆಯು ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಚರ್ಚೆಗಳು ಮತ್ತು ಊಹಾಪೋಹಗಳನ್ನು ಹುಟ್ಟುಹಾಕಿದೆ ಇನ್ನು ಈ ವಿಡಿಯೋ ತುಣುಕನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ ಮತ್ತು ವಿವಿಧ ವೇದಿಕೆಗಳಲ್ಲಿ ಚರ್ಚಿಸಲಾಗಿದೆ, 9/11 ಘಟನೆಗಳ ಸುತ್ತಲಿನ ಆಸಕ್ತಿ ಮತ್ತು ಚರ್ಚೆಯನ್ನು ಎತ್ತಿ ತೋರಿಸುತ್ತದೆ.

ಘಟನೆ ಹಿನ್ನೆಲೆ ಏನು?

ಅಲ್‌ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ ವಿಮಾನದ ಮೂಲಕ ವಿಶ್ವದ ದೊಡ್ಡಣ್ಣ ಅಮೆರಿಕದ ಮೇಲೆ ದಾಳಿ ನಡೆಸಿ ಇಂದಿಗೆ 20 ವರ್ಷ ಸಂದಿದೆ. ಸೆಪ್ಟೆಂಬರ್ 11, 2001ರಂದು ನ್ಯೂಯಾರ್ಕ್‌ನ ವರ್ಲ್ಡ್‌ ಟ್ರೇಡ್‌ ಸೆಂಟರ್ ಅವಳಿ ಗೋಪುರಕ್ಕೆ ವಿಮಾನದ ಮೂಲಕ ದಾಳಿ ನಡೆಸಿ ಅಮೆರಿಕಗೆ ಅಲ್‌ಕೈದಾ ಉಗ್ರ ಸಂಘಟನೆ ಶಾಕ್‌ ಕೊಟ್ಟಿತ್ತು. ಈ ಭೀಕರ ಉಗ್ರ ದಾಳಿಯಲ್ಲಿ 2977 ಅಮಾಯಕರು ಮೃತರಾಗಿದ್ದರು. ಈ ಕರಾಳ ಘಟನೆ ನಡೆದು 20 ವರ್ಷವಾಗಿದೆ. ಅಮೆರಿಕ ಈ ದಿನವನ್ನು ಅಮೆರಿಕದ ಕರಾಳ ದಿನ ಎಂದು ಕರೆದಿತ್ತು.

ಅಲ್‌ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ ಅಧಿನಾಯಕ ಒಸಾಮಾ ಬಿನ್ ಲಾಡೆನ್ ನೇತೃತ್ವದಲ್ಲಿ ಅಮೆರಿಕದ ಮೇಲೆ ಉಗ್ರ ದಾಳಿ ನಡೆಸಿತ್ತು. ನ್ಯೂಯಾರ್ಕ್‌ನ ವರ್ಲ್ಡ್‌ ಟ್ರೇಡ್‌ ಸೆಂಟರ್ ಅವಳಿ ಗೋಪುರದ ಮೇಲೆ ವಿಮಾನ ದಾಳಿ ನಡೆದಿತ್ತು. ಸೆಪ್ಟೆಂಬರ್ 11, 2001 ಈ ಘಟನೆ ನಡೆದಿದ್ದು ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು.

ಈ ಭೀಕರ ಭಯೋತ್ಪಾದಕ ದಾಳಿ ನಡೆದು ಎರಡು ದಶಕಗಳ ನಂತರ, ವಿಶ್ವ ವ್ಯಾಪಾರ ಕೇಂದ್ರದ ಮೇಲಿನ 9/11 ದಾಳಿಯಲ್ಲಿ ಸಾವನ್ನಪ್ಪಿದ ಇಬ್ಬರು ವ್ಯಕ್ತಿಗಳನ್ನು ಇದೀಗ ಗುರುತಿಸಲಾಗಿದೆ. ದಾಳಿಗಳಲ್ಲಿ ಮೃತಪಟ್ಟವರನ್ನು ಗುರುತಿಸಿ ಅವರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಲೇ ಇವೆ. ಇದೀಗ ದಾಳಿ ನಡೆದು 22ನೇ ವರ್ಷ ತುಂಬುವ ಮೊದಲು ಓರ್ವ ಪುರುಷ ಮತ್ತು ಓರ್ವ ಮಹಿಳೆಯ ಅವಶೇಷಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರ ಕುಟುಂಬಗಳ ಕೋರಿಕೆಯ ಮೇರೆಗೆ ಅಧಿಕಾರಿಗಳು ಅವರ ಹೆಸರುಗಳನ್ನು ಬಹಿರಂಗ ಪಡಿಸಿಲ್ಲ.

ಇದನ್ನೂ ಓದಿ: Kargil Vijay Diwas 2024: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಕ್ಷಣವೂ ಯೋಚಿಸದ ಈ ವೀರ ಯೋಧರಿಗೊಂದು ಸಲಾಮ್

Continue Reading

ವಿದೇಶ

Rihanna: ಮಿನಿ ಸ್ಕರ್ಟ್‌ ತೊಟ್ಟು, ಬ್ರಾ, ಅಂಡರ್‌ವೇರ್‌ ತೋರಿಸುತ್ತ ಓಡಾಡಿದ ಪಾಪ್‌ ಗಾಯಕಿ ರಿಹಾನಾ; Video ಇಲ್ಲಿದೆ

Rihanna: ಒಳ ಉಡುಪುಗಳನ್ನು ತೋರಿಸುತ್ತ, ರಸ್ತೆ ಮೇಲೆ ಓಡಾಡಿದ ವಿಡಿಯೊವನ್ನು ರಿಹಾನಾ ಅವರೇ ಹಂಚಿಕೊಂಡಿದ್ದಾರೆ. ಅವರ ವಿಡಿಯೊಗೆ ಸಾವಿರಾರು ಜನ ಪ್ರತಿಕ್ರಿಯಿಸಿದ್ದು, ಒಂದಷ್ಟು ಜನ ಹೊಗಳಿದ್ದರೆ, ಇನ್ನೊಂದಿಷ್ಟು ಜನ ಟೀಕಿಸಿದ್ದಾರೆ. ಇದಕ್ಕೂ ಮೊದಲು ಕೂಡ ರಿಹಾನಾ ಅವರ ಉಡುಪು, ಸಾರ್ವಜನಿಕ ವರ್ತನೆಗಳ ಬಗ್ಗೆ ಚರ್ಚೆಯಾಗಿತ್ತು.

VISTARANEWS.COM


on

Rihanna
Koo

ಬ್ರಿಡ್ಜ್‌ಟೌನ್‌: ಬಾರ್ಬಡಾಸ್‌ನ ಪಾಪ್‌ ಗಾಯಕಿ (Pop Singer), ಜಾಗತಿಕ ಖ್ಯಾತಿಯ ರಿಹಾನಾ (Rihanna) ಅವರಿಗೆ ಬಾರ್ಬಡಾಸ್‌ ಮಾತ್ರವಲ್ಲ ಜಗತ್ತಿನಾದ್ಯಂತ ಅಭಿಮಾನಿಗಳಿದ್ದಾರೆ. ಅವರ ಮ್ಯೂಸಿಕ್‌ ಶೋಗೆ ಜನ ಕಾಯುತ್ತಿರುತ್ತಾರೆ. ಇನ್ನು, ರಿಹಾನಾ ಅವರೂ ಅಷ್ಟೇ, ಗಾಯನದ ಜತೆಗೆ ವಿಚಿತ್ರ ನೃತ್ಯ, ಉಡುಪುಗಳಿಂದಲೂ ಖ್ಯಾತಿ ಗಳಿಸಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ರಿಹಾನಾ ಅವರು ಸಾರ್ವಜನಿಕವಾಗಿಯೇ ಬ್ರಾ ಹಾಗೂ ಅಂಡರ್‌ವೇರ್‌ ತೋರಿಸುತ್ತ ಓಡಾಡಿದ್ದು, ಈಗ ವಿಡಿಯೊ (Viral Video) ಭಾರಿ ವೈರಲ್‌ ಆಗಿದೆ.

ಹೌದು, ಮಿನಿ ಸ್ಕರ್ಟ್‌ ಹಾಗೂ ದೊಗಳೆ ಅಂಗಿ ಧರಿಸಿದ ರಿಹಾನಾ, ರಸ್ತೆ ಮೇಲೆ ಓಡಾಡಿದ್ದಾರೆ. ಇದರ ಮಧ್ಯೆ ಅವರು ಧರಿಸಿದ್ದ ಬ್ರಾ ಹಾಗೂ ಪ್ಯಾಂಟೀಸ್‌ಅನ್ನು ತೋರಿಸಿದ್ದಾರೆ. ಈ ವಿಡಿಯೊವನ್ನು ಅವರು ಹಂಚಿಕೊಳ್ಳುವ ಜತೆಗೆ, “ಮುಂದಿನ ಬೇಸಿಗೆಯವರೆಗೆ ನಾನು ಸಿಕ್ಸ್‌ ಪ್ಯಾಕ್‌ ಮಾಡಲು ಆಗುವುದಿಲ್ಲ. ಅಲ್ಲಿಯವರೆಗೆ, ನನ್ನ ಶೂ ಹಾಗೂ ಪ್ಯಾಂಟೀಸ್‌ ಮ್ಯಾಚಿಂಗ್‌ ಇರುವ ರೀತಿ ನೋಡಿಕೊಳ್ಳುತ್ತೇನೆ” ಎಂಬುದಾಗಿ ಒಕ್ಕಣೆ ಬರೆದುಕೊಂಡಿದ್ದಾರೆ. ಇದಕ್ಕೆ ಸಾವಿರಾರು ಜನ ಪ್ರತಿಕ್ರಿಯಿಸಿದ್ದು, ಒಂದಷ್ಟು ಜನ ಹೊಗಳಿದ್ದರೆ, ಇನ್ನೊಂದಿಷ್ಟು ಜನ ಟೀಕಿಸಿದ್ದಾರೆ. ಇದಕ್ಕೂ ಮೊದಲು ಕೂಡ ರಿಹಾನಾ ಅವರ ಉಡುಪು, ಸಾರ್ವಜನಿಕ ವರ್ತನೆಗಳ ಬಗ್ಗೆ ಚರ್ಚೆಯಾಗಿತ್ತು.

ಕೆಲ ತಿಂಗಳ ಹಿಂದೆ ಮುಕೇಶ್‌ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ಪ್ರಿ ವೆಡ್ಡಿಂಗ್‌ ಸಮಾರಂಭದಲ್ಲಿ ಪಾಪ್‌ ಐಕಾನ್‌ ರಿಹಾನಾ ಸ್ಟೇಜ್‌ ಶೋ ನೀಡುವಾಗ ಇದ್ದಕ್ಕಿಂದ್ದಂತೆ, ಪರ್ಫಮಾನ್ಸ್ ಮಧ್ಯೆ ಆಕೆ ಧರಿಸಿದ್ದ ಫ್ಲೊರಸೆಂಟ್‌ ಗ್ರೀನ್ ಶೇಡ್‌ನ ತೆಳುವಾದ ಡಿಸೈನರ್‌ವೇರ್‌ ಕೈಗಳ ಕೆಳಗೆ ಹರಿದು ಹೋಗಿತ್ತು. ತಕ್ಷಣಕ್ಕೆ ಆಕೆಗೆ ಇದು ಗೊತ್ತಾಗದಿದ್ದರೂ, ಆಕೆಯ ಬಹುತೇಕ ಫೋಟೋಗಳಲ್ಲಿ ಇದು ದಾಖಲಾಗಿ ಉಳಿದು ಹೋಯಿತು. ಈ ಫೋಟೊಗಳು ವೈರಲ್‌ ಆಗಿದ್ದವು.

ಜಗತ್ತಿನ ಯಾವುದೇ ಮೂಲೆಯಲ್ಲಿ ರಿಹಾನಾ ಅವರ ಲೈವ್‌ ಮ್ಯೂಸಿಕ್‌ ಶೋ ನಡೆದರೆ, ಅಲ್ಲೆಲ್ಲ ಲಕ್ಷಾಂತರ ಜನ ಸೇರುತ್ತಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಅವರ ಹಾಡಿಗೆ ಕಿವಿಯಾಗುತ್ತಾರೆ. ಹಾಗಾಗಿ, ಯಾವುದೇ ಶೋಗೆ ಇಡೀ ತಂಡವನ್ನು ಕರೆದುಕೊಂಡು ಹೋಗುವ ರಿಹಾನಾ ಅವರು ಸುಮಾರು 66-74 ಕೋಟಿ ರೂ. ಚಾರ್ಜ್‌ ಮಾಡುತ್ತಾರೆ. ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕಾರ್ಯಕ್ರಮದಲ್ಲೂ ಲೈವ್‌ ಶೋಗಾಗಿ ರಿಹಾನಾ ಅವರು ಸುಮಾರು 74 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: Wardrobe Malfunction 2024: ಪಾಪ್‌ ಐಕಾನ್‌ ರಿಹಾನಾ ಡ್ರೆಸ್‌ ಎಡವಟ್ಟು! ಹೀಗಾಗದಂತೆ ಎಚ್ಚರ ವಹಿಸುವುದು ಹೇಗೆ?

Continue Reading
Advertisement
Pakistan Cricket Board
ಪ್ರಮುಖ ಸುದ್ದಿ59 mins ago

ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

assistance from Ramchandrapur Matha for Shiruru landslide victims
ಉತ್ತರ ಕನ್ನಡ1 hour ago

Uttara Kannada News: ಶಿರೂರು ಗುಡ್ಡಕುಸಿತ ಸಂತ್ರಸ್ತರಿಗೆ ರಾಮಚಂದ್ರಾಪುರ ಮಠದ ಸಹಾಯಹಸ್ತ

Inauguration of Kannada learning classes for Malayali speakers
ಕರ್ನಾಟಕ1 hour ago

Bengaluru News: ಕನ್ನಡ-ಮಲೆಯಾಳಿ ಸಾಹಿತ್ಯ ಸಮ್ಮೇಳನ ಆಯೋಜಿಸಿ: ಸ್ಪೀಕರ್‌ ಯು.ಟಿ.ಖಾದರ್‌ ಸೂಚನೆ

Viral News
ಪ್ರಮುಖ ಸುದ್ದಿ1 hour ago

Viral News: ಜೈಲಿಂದ ಹೊರಬಂದ ಖುಷಿಗೆ ರೌಡಿಯ ಬೃಹತ್ ಮೆರವಣಿಗೆ; ಮತ್ತೆ ಜೈಲಿಗೇ ಕಳುಹಿಸಿದ ಪೊಲೀಸರು!

Viral Video
Latest2 hours ago

Viral Video: ಕೈದಿಗೆ ಕೈಕೋಳ ಹಾಕಿ ತಾಜ್ ಮಹಲ್‌ ತೋರಿಸಲು ಹೋಗಿದ್ದ ಪೊಲೀಸರು! ವಿಡಿಯೊ ನೋಡಿ

Dog meat
ಕರ್ನಾಟಕ2 hours ago

Dog Meat: ಬೆಂಗಳೂರಿಗೆ ಬಂತು ಟನ್‌ಗಟ್ಟಲೇ ನಾಯಿ ಮಾಂಸ; ಅಬ್ದುಲ್ ರಜಾಕ್ ವಿರುದ್ಧ ಆರೋಪ!

Teacher Suspended
Latest2 hours ago

Teacher Suspended: ಮಹಿಳೆಯರು ಸಿಂಧೂರ, ಮಂಗಳಸೂತ್ರ ಧರಿಸಬಾರದು ಎಂದ ಶಿಕ್ಷಕಿ ಅಮಾನತು!

Rahul Gandhi
ದೇಶ2 hours ago

Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Apollo International Public School introduced Sqay samara kale as part of the syllabus
ಬೆಂಗಳೂರು2 hours ago

Bengaluru News: ಸ್ಕಾಯ್ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಿದ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ

Ayodhya Ram Mandir
ರಾಮ ಮಂದಿರ2 hours ago

Ayodhya Ram Mandir: ರಾಮಮಂದಿರಕ್ಕೆ ಬರುವ ಚಿನ್ನ, ಬೆಳ್ಳಿ ಆಭರಣಗಳ ಕಾವಲಿಗೆ ಇಬ್ಬರು ಆರ್​​ಎಸ್​ಎಸ್​​ ಕಾರ್ಯಕರ್ತರ ನೇಮಕ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ4 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ6 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ6 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ8 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ1 day ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌