Peenya flyover: ಇಂದಿನಿಂದ ಪೀಣ್ಯ ಮೇಲ್ಸೇತುವೆ ಎಲ್ಲ ವಾಹನಗಳಿಗೆ ಮುಕ್ತ - Vistara News

ಪ್ರಮುಖ ಸುದ್ದಿ

Peenya flyover: ಇಂದಿನಿಂದ ಪೀಣ್ಯ ಮೇಲ್ಸೇತುವೆ ಎಲ್ಲ ವಾಹನಗಳಿಗೆ ಮುಕ್ತ

Peenya flyover: ಮೇಲ್ಸೇತುವೆ ವಿಶೇಷ ದುರಸ್ತಿ ಕಾಮಗಾರಿ ಇನ್ನೂ ಪ್ರಗತಿಯಲ್ಲಿರುವುದರಿಂದ ಪ್ರತಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರಿ ವಾಹನಗಳ ಓಡಾಟ ನಿಷೇಧಿಸಲಾಗಿದೆ. ಉಳಿದ ದಿನ ಎಲ್ಲಾ ವಾಹನಗಳು ಪ್ಲೈ ಓವರ್ ಮೇಲೆ ಓಡಾಟ ಮಾಡಬಹುದು.

VISTARANEWS.COM


on

peenya flyover
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bangalore- Tumkur Highway) ಸಂಚರಿಸುವ ವಾಹನ ಸವಾರರು ಇಂದಿನಿಂದ ನಿರಾಳ. ಇಂದಿನಿಂದ (ಜುಲೈ 29) ಪೀಣ್ಯ ಫ್ಲೈ ಓವರ್ (Peenya flyover) ಮೇಲೆ ಭಾರಿ ವಾಹನ ಸೇರಿ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಪ್ರತಿ ಶುಕ್ರವಾರ ಮಾತ್ರ ಭಾರಿ ವಾಹನಗಳ (Heavy Vehicles) ಓಡಾಟ ನಿರ್ಬಂಧಿಸಲಾಗಿದೆ.

ಮೇಲ್ಸೇತುವೆ ವಿಶೇಷ ದುರಸ್ತಿ ಕಾಮಗಾರಿ ಇನ್ನೂ ಪ್ರಗತಿಯಲ್ಲಿರುವುದರಿಂದ ಪ್ರತಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ಭಾರಿ ವಾಹನಗಳ ಓಡಾಟ ನಿಷೇಧಿಸಲಾಗಿದೆ. ಉಳಿದ ದಿನ ಎಲ್ಲಾ ವಾಹನಗಳು ಪ್ಲೈ ಓವರ್ ಮೇಲೆ ಓಡಾಟ ಮಾಡಬಹುದು. ಆದರೆ, ಭಾರಿ ವಾಹನಗಳು ಮಾತ್ರ ಮೇಲ್ಸೇತುವೆ ಎಡಪಥದಲ್ಲಿ ಗರಿಷ್ಠ 40 ಕಿ.ಮೀ ವೇಗ ಮಿತಿಯಲ್ಲಿ ಸಂಚರಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

ನಗರದ ತುಮಕೂರು ರಸ್ತೆಯಲ್ಲಿರುವ 15 ಮೀಟರ್ ಅಗಲದ, 4.2 ಕಿಮೀ ಉದ್ದದ ಮೇಲ್ಸೇತುವೆಯಲ್ಲಿ 2021ರ ಡಿಸೆಂಬರ್‌ನಿಂದ ಬಸ್‌ಗಳು ಮತ್ತು ಟ್ರಕ್‌ಗಳಂತಹ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಫ್ಲೈಓವರ್‌ನಲ್ಲಿ ಪ್ರಿಸ್ಟ್ರೆಸ್ಡ್ ಕೇಬಲ್‌ಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ರಿಪೇರಿ ಮಾಡುವ ಅಗತ್ಯವಿತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 38.5 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಕೇಬಲ್‌ಗಳ ಅಳವಡಿಕೆ ಕಾರ್ಯ ನಡೆದಿದೆ.

ಜನವರಿಯಲ್ಲಿ, 240 ಪ್ರಿಸ್ಟ್ರೆಸ್ಡ್ ಕೇಬಲ್‌ಗಳಲ್ಲಿ ಲೋಡ್ ಪರೀಕ್ಷೆಗಳನ್ನು ನಡೆಸಲು ಎನ್‌ಎಚ್‌ಎಐ 60 ಗಂಟೆಗಳ ಕಾಲ ಫ್ಲೈಓವರ್ ಮುಚ್ಚಿತ್ತು. ಸಮಿತಿಯ ಲೋಡ್ ಪರೀಕ್ಷೆಯ ಫಲಿತಾಂಶಗಳು ತೃಪ್ತಿಕರವಾಗಿದೆ ಎಂದು ತಜ್ಞರ ಸಮಿತಿಯ ಮುಖ್ಯಸ್ಥ, ಐಐಎಸ್‌ಸಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಚಂದ್ರ ಕಿಶನ್ ಹೇಳಿದ್ದರು. ಮಾರ್ಚ್‌ನಲ್ಲಿ, ಎನ್‌ಎಚ್‌ಎಐ 1,243 ಪ್ರಿಸ್ಟ್ರೆಸ್ಡ್ ಕೇಬಲ್‌ಗಳನ್ನು ಬದಲಾಯಿಸಲು ಪ್ರಾರಂಭಿಸಿತ್ತು. ಸದ್ಯ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದರಿಂದ ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶಗಳಲ್ಲಿ ಒಂದಾದ ಪೀಣ್ಯದಲ್ಲಿರುವ ಮೇಲ್ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ಎನ್‌ಎಚ್‌ಎಐ ಗ್ರೀನ್ ಸಿಗ್ನಲ್ ನೀಡಿದೆ.

ಫ್ಲೈಓವರ್ ನಿರ್ಬಂಧದಿಂದ ಕಳೆದ ಮೂರು ವರ್ಷಗಳಿಂದ ಕೆಳಗಿನ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದೆ. ದಿನ ನಿತ್ಯದ ವಾಹನ ದಟ್ಟಣೆಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಎನ್‌ಎಚ್‌ಎಐ ಕಳೆದ ವರ್ಷ 38.5 ಕೋಟಿ ರೂಪಾಯಿಯಲ್ಲಿ ರಿಪೇರಿ ಕಾರ್ಯವನ್ನು ಪ್ರಾರಂಭಿಸಿತು. ಪ್ರತಿ ಸ್ಪ್ಯಾನ್‌ನಲ್ಲಿ ಎರಡು ಕೇಬಲ್‌ಗಳನ್ನು ಹೆಚ್ಚುವರಿ ಸ್ಲಾಟ್‌ಗಳಲ್ಲಿ ಸೇರಿಸಲು ಮತ್ತು ಮೇಲ್ಸೇತುವೆಯನ್ನು ಬಲಪಡಿಸಲು ಒತ್ತು ನೀಡಿತ್ತು.

ಜನವರಿಯಲ್ಲಿ, 240 ಪ್ರಿಸ್ಟ್ರೆಸ್ಡ್ ಕೇಬಲ್‌ಗಳಲ್ಲಿ ಲೋಡ್ ಪರೀಕ್ಷೆಗಳನ್ನು ನಡೆಸಲು ಎನ್‌ಎಚ್‌ಎಐ 60 ಗಂಟೆಗಳ ಕಾಲ ಫ್ಲೈಓವರ್ ಮುಚ್ಚಿತ್ತು. ಸಮಿತಿಯ ಲೋಡ್ ಪರೀಕ್ಷೆಯ ಫಲಿತಾಂಶಗಳು ತೃಪ್ತಿಕರವಾಗಿದೆ ಎಂದು ತಜ್ಞರ ಸಮಿತಿಯ ಮುಖ್ಯಸ್ಥ, ಐಐಎಸ್‌ಸಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಚಂದ್ರ ಕಿಶನ್ ಹೇಳಿದ್ದರು. ಮಾರ್ಚ್‌ನಲ್ಲಿ, ಎನ್‌ಎಚ್‌ಎಐ 1,243 ಪ್ರಿಸ್ಟ್ರೆಸ್ಡ್ ಕೇಬಲ್‌ಗಳನ್ನು ಬದಲಾಯಿಸಲು ಪ್ರಾರಂಭಿಸಿತ್ತು. 

ಇದನ್ನೂ ಓದಿ | Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

CM Siddaramaiah: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಮೀಟಿಂಗ್‌ ನಡೆಯಲಿದ್ದು, ಮೈತ್ರಿ ಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ಚರ್ಚೆ ನಡೆಸಿ ಮೈತ್ರಿ ಪಕ್ಷಗಳ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಿದ್ದಾರೆ.

VISTARANEWS.COM


on

cm siddaramaiah mallikarjun kharge dk shivakumar
Koo

ಹೊಸದಿಲ್ಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಇಬ್ಬರಿಗೆ ಕಾಂಗ್ರೆಸ್‌ ಹೈಕಮಾಂಡ್‌ (Congress high command) ಬುಲಾವ್‌ ನೀಡಿದ್ದು, ನಾಳೆ ಅವರು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ (State cabinet) ಮೇಜರ್‌ ಬದಲಾವಣೆ, ಮೈತ್ರಿ ಪಕ್ಷಗಳ ಪಾದಯಾತ್ರೆಗೆ ಸಡ್ಡು ಹೊಡೆಯುವ ಬಗ್ಗೆ ಚಿಂತನೆ ಇತ್ಯಾದಿಗಳ ಬಗ್ಗೆ ಹೈಕಮಾಂಡ್‌ ಚರ್ಚಿಸಲು ಉದ್ದೇಶಿಸಿದೆ.

ಒಂದೆಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್‌ (BJP- JDS) ಮೈತ್ರಿ ಪಕ್ಷಗಳು ರಣಕಹಳೆ ಮೊಳಗಿಸಿವೆ. ಸರ್ಕಾರದ ವಿರುದ್ಧ ವಿಧಾನಮಂಡಲ ಅಧಿವೇಶನದ (Assembly Session) ಒಳಗೆ ಮುಗಿಬಿದ್ದಿದ್ದ ವಿಪಕ್ಷಗಳು ಅಧಿವೇಶನದ ಹೊರಗೂ ಇದರ ಲಾಭ ಪಡೆಯಲು ಪ್ಲಾನ್ ಮಾಡಿವೆ. ಹೀಗಾಗಿ ಪಾದಯಾತ್ರೆ ಪಾಲಿಟಿಕ್ಸ್ ಮಾಡಲು ಮುಂದಾಗಿವೆ. ವಾಲ್ಮೀಕಿ ನಿಗಮದ ಅವ್ಯವಹಾರ (Valmiki Corporation Scam) ಪ್ರಕರಣ ಹಾಗೂ ಸಿಎಂ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣವನ್ನು (MUDA Scam) ಗಂಭೀರವಾಗಿ ಪರಿಗಣಿಸಿದ ಮೈತ್ರಿ ಪಕ್ಷಗಳು ಇತ್ತ ರಾಜ್ಯದಲ್ಲೂ ಅತ್ತ ದೆಹಲಿಯಲ್ಲೂ ಸರ್ಕಾರದ ವಿರುದ್ಧ ಹೋರಾಟ ಜೋರು ಮಾಡಿವೆ. ಮೈತ್ರಿ ಪಕ್ಷಗಳ ನಡೆಯಿಂದ ಹೈಕಮಾಂಡ್ ವಿಚಲಿತಗೊಂಡಿದೆ.

ಹೀಗಾಗಿ ಸಿಎಂ, ಡಿಸಿಎಂ ಸೇರಿದಂತೆ ಆಯ್ದ ಸಚಿವರಿಗೆ ಹೈಕಮಾಂಡ್‌ ಬುಲಾವ್ ನೀಡಿದೆ. ಇಬ್ಬರೂ ಮಂಗಳವಾರ ದಿಲ್ಲಿಗೆ ತೆರಳಿ ಬುಧವಾರ ಸಂಜೆ ವಾಪಸು ಆಗಲಿದ್ದಾರೆ. ಕೆಲ ಸಚಿವರು ಇಂದೇ ದೆಹಲಿಗೆ ದೌಡಾಯಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಮೀಟಿಂಗ್‌ ನಡೆಯಲಿದ್ದು, ಮೈತ್ರಿ ಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ಚರ್ಚೆ ನಡೆಸಿ ಮೈತ್ರಿ ಪಕ್ಷಗಳ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆ ಚುರುಕುಗೊಳಿಸುವುದು, ಮುಂದೆ ಬರುತ್ತಿರುವ ಚುನಾವಣೆಗಳಿಗೆ ಸಿದ್ಧತೆ, ಉಪಚುನಾವಣೆ ಸೇರಿದಂತೆ ಇತರೆ ಚುನಾವಣೆಗಳ ಬಗ್ಗೆ ಚರ್ಚೆ, ಸರ್ಕಾರದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುವುದು, ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಬಗ್ಗೆ ಚರ್ಚೆ ಮಾಡುವುದು, ಮಹಿಳಾ ಘಟಕದ ಅಧ್ಯಕ್ಷೆ ನೇಮಕದ ಬಗ್ಗೆ ಒಪಿನಿಯನ್ ಕಲೆಕ್ಟ್ ಮಾಡುವುದು ಹೈಕಮಾಂಡ್ ಉದ್ದೇಶವಾಗಿದೆ.

ಸಚಿವ ಸಂಪುಟ ಪುನಾರಚನೆ

ರಾಜ್ಯ ಸಚಿವ ಸಂಪುಟ, ಕೆಪಿಸಿಸಿ ಪುನಾರಚನೆ ಕುರಿತು ಪ್ರಾಥಮಿಕ ಹಂತದ ಮಾತುಕತೆಯ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಗುಸುಗುಸು ಟಾಕ್ ಶುರುವಾಗಿದೆ. ಸಚಿವ ಸಂಪುಟದಲ್ಲಿ ಒಂದಷ್ಟು ಬದಲಾವಣೆಗೆ, ಸಚಿವರ ಖಾತೆ ಅದಲು ಬದಲು ಮಾಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆಸಲಾಗುತ್ತಿದ್ದು, ಕೆಲವು ಹಿರಿಯ ಸಚಿವರಿಂದಲೂ ಖಾತೆ ಬದಲಾವಣೆಗೆ ಸಲಹೆ ಬಂದಿದೆ.

ಲೋಕಸಭೆ ಫಲಿತಾಂಶ ಗಮನದಲ್ಲಿರಿಸಿಕೊಂಡು ಬದಲಾವಣೆ ಮಾಡುವ ಬಗ್ಗೆ ಅಭಿಪ್ರಾಯ ಪಡೆಯಲಾಗಿದೆ. 6-7 ಸಚಿವರ ಖಾತೆಗಳ ಅದಲು ಬದಲು ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ‌ ನಡೆದಿದೆ. ಈ ಬಗ್ಗೆ ಸಿಎಂ, ಡಿಸಿಎಂ ದೆಹಲಿ ಭೇಟಿ ಬಳಿಕವೇ ಸ್ಪಷ್ಟನೆ ಸಿಗಲಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕೂಗೂ ಕೆಲವರಿಂದ ಕೇಳಿ ಬಂದಿದೆ. ಕೆಪಿಸಿಸಿ ನೂತನ ಅಧ್ಯಕ್ಷರಾಗಬೇಕು ಎಂದು ಹಲವು ಮುಖಂಡರು ಈಗಾಗಲೇ ಪ್ರಭಾವ ಬಳಸುತ್ತಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕೆಲವು ಸಚಿವರ ಸ್ವಕ್ಷೇತ್ರಗಳಲ್ಲಿ ಲೀಡ್ ಕಡಿಮೆ ಆಗಿದೆ. ಲೀಡ್ ಕಡಿಮೆ ಕೊಟ್ಟ ಸಚಿವರ ತಲೆದಂಡಕ್ಕೆ ಸಚಿವ ಸ್ಥಾನ ಆಕಾಂಕ್ಷಿಗಳಿಂದ ಒತ್ತಡವಿದೆ. ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿಲ್ಲ ಎಂಬ ಅಭಿಪ್ರಾಯ ಮೂಡಿದ್ದು, ಅಂತಹ ಸಚಿವರಿಂದ ಸರ್ಕಾರದ ಇಮೇಜ್ ಹೆಚ್ಚಾಗಿಲ್ಲ. ಜೊತೆಗೆ ಪಕ್ಷಕ್ಕೂ ಯಾವುದೇ ಲಾಭವಿಲ್ಲ. ಹಾಗಾಗಿ ಕೆಲ ಸಚಿವರನ್ನು ಕೈ ಬಿಡಬೇಕು ಎಂದು ಶಾಸಕರು ಒತ್ತಾಯ‌ ಮಾಡಿದ್ದರು.

ಇದನ್ನೂ ಓದಿ: HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Continue Reading

ದೇಶ

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

Arvind Kejriwal: ದೆಹಲಿ ಅಬಕಾರಿ ನೀತಿ ಜಾರಿ ವೇಳೆ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧದ ತನಿಖೆ ಪೂರ್ಣಗೊಳಿಸಿದ್ದು, ದೆಹಲಿ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಇದರಿಂದ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮತ್ತಷ್ಟು ಸಂಕಷ್ಟ ಉಂಟಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ತಿಹಾರ ಜೈಲುಪಾಲಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ಅಬಕಾರಿ ನೀತಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎಂಬ ಆರೋಪದ ಕುರಿತು ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದ ಭಾಗವಾಗಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಕೇಜ್ರಿವಾಲ್‌ ಅವರು ಪ್ರಮುಖ ಆರೋಪಿಯಾಗಿದ್ದು, ಹಣಕಾಸು ಅವ್ಯವಹಾರದ ಕುರಿತು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಅರವಿಂದ್‌ ಕೇಜ್ರಿವಾಲ್‌ ಅವರ ವಿರುದ್ಧ ಸಿಬಿಐ ತನಿಖೆ ಅಂತ್ಯವಾದಂತಾಗಿದೆ. ಚಾರ್ಜ್‌ಶೀಟ್‌ ಆಧಾರದ ಮೇಲೆ ಕೋರ್ಟ್‌ ಮುಂದಿನ ತೀರ್ಪು ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.

ಅರವಿಂದ್‌ ಕೇಜ್ರಿವಾಲ್‌ ಅವರನ್ನು ಆಗಸ್ಟ್‌ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ರೋಸ್‌ ಅವೆನ್ಯೂ ಕೋರ್ಟ್‌ ತಿಳಿಸಿದೆ. ಅಷ್ಟೇ ಅಲ್ಲ, ಜು.31ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೇಜ್ರಿವಾಲ್‌ ಅವರನ್ನು ಹಾಜರುಪಡಿಸುವಂತೆ ತಿಹಾರ್‌ ಜೈಲಿನ ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ. 

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು.

ಇದನ್ನೂ ಓದಿ: Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Continue Reading

ಕ್ರೀಡೆ

Paris Olympics 2024: ಪ್ಯಾರಿಸ್‌ ಒಲಿಂಪಿಕ್ಸ್;‌ ಇಂದು ಭಾರತೀಯರ ಅಥ್ಲೀಟ್‌ಗಳ ಕಾದಾಟ ಏನೇನು? ಪದಕ ನಿಶ್ಚಿತ?

Paris Olympics 2024: ಮನು ಭಾಕರ್‌ ಅವರು ಕಂಚಿನ ಪದಕ ಗೆದ್ದ ಬಳಿಕ ಭಾರತದ ಅಥ್ಲೀಟ್‌ಗಳ ವಿಶ್ವಾಸ ಹೆಚ್ಚಾಗಿದೆ. ಸೋಮವಾರ ಕೂಡ ಭಾರತಕ್ಕೆ ಪದಕ ಗೆಲ್ಲುವ ಸಾಧ್ಯತೆಗಳಿವೆ. 10 ಎಂ ಏರ್‌ ರೈಫಲ್‌ ಇವೆಂಟ್‌ಗಳಲ್ಲಿ ರಮಿತಾ ಜಿಂದಾಲ್‌ ಹಾಗೂ ಅರ್ಜುನ್‌ ಬಬುತಾ ಅವರು ಭಾರತಕ್ಕೆ ದ್ವಿತೀಯ ಹಾಗೂ ತೃತೀಯ ಮೆಡಲ್‌ಗಳನ್ನು ತಂದು ಕೊಡುವ ನಿರೀಕ್ಷೆ ಇದೆ.

VISTARANEWS.COM


on

Paris Olympics 2024
Koo

ಪ್ಯಾರಿಸ್:‌ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ (Paris Olympics 2024) ಭಾರತದ ಮನು ಭಾಕರ್‌ ಅವರು ಕಂಚಿನ ಪದಕ ಗೆದ್ದಿದ್ದು, ಭಾರತೀಯ ಅಥ್ಲೀಟ್‌ಗಳ (Indian Athletes) ವಿಶ್ವಾಸ ಹೆಚ್ಚಾಗಿದೆ. ಇನ್ನು, ಸೋಮವಾರ (ಜುಲೈ 29) ಕೂಡ ಭಾರತೀಯ ಅಥ್ಲೀಟ್‌ಗಳು ಪದಕಕ್ಕಾಗಿ ಸೆಣಸಾಟ ನಡೆಸುತ್ತಿದ್ದಾರೆ. ಹಾಗಾದರೆ, ಸೋಮವಾರ ಭಾರತದ ಅಥ್ಲೀಟ್‌ಗಳು ಯಾವೆಲ್ಲ ಕ್ರೀಡೆಯಲ್ಲಿ ಪಾಲ್ಗೊಳ್ಳಲಿದ್ದಾರೆ? ಭಾರತೀಯ ಕಾಲಮಾನ ಯಾವುದು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಒಲಿಂಪಿಕ್ಸ್‌ನಲ್ಲಿ ಇಂದು ಭಾರತೀಯರು

  • ಮಧ್ಯಾಹ್ನ 12: ಬ್ಯಾಡ್ಮಿಂಟನ್- ಪುರುಷರ ಡಬಲ್ಸ್‌ ಗ್ರೂಪ್‌ ಸ್ಟೇಜ್-‌ ಸಾತ್ವಿಕ್‌ರಾಜ್‌ ರಂಕಿರೆಡ್ಡಿ/ ಚಿರಾಗ್‌ ಶೆಟ್ಟಿ vs ಮಾರ್ಕ್‌ ಲ್ಯಾಮ್‌ಫಸ್‌. ಮಾರ್ವಿನ್‌ ಸೀಡೆಲ್‌ (ಜರ್ಮನಿ)
  • 12.45- 10 ಎಂ ಏರ್‌ ಪಿಸ್ತೂಲ್‌ ಮಿಕ್ಸ್ಡ್‌ ಟೀಮ್‌ ಕ್ವಾಲಿಫಿಕೇಶನ್-‌ ಇಂಡಿಯಾ 1 (ಮನು ಭಾಕರ್/ ಸರಬ್ಜೋತ್‌ ಸಿಂಗ್);‌ ಇಂಡಿಯಾ 2 (ರಿದಮ್‌ ಸಂಗ್ವಾನ್/ ಅರ್ಜುನ್‌ ಸಿಂಗ್‌ ಚೀಮಾ)
  • 12.50- ಬ್ಯಾಡ್ಮಿಂಟನ್-‌ ಮಹಿಳೆಯರ ಡಬಲ್ಸ್‌ ಗ್ರೂಪ್‌ ಸ್ಟೇಜ್‌೦ ತನಿಶಾ ಕ್ರಾಸ್ಟೋ/ಅಶ್ವಿನಿ ಪೊನ್ನಪ್ಪ vs ನಾಮಿ ಮತ್ಸುಯಾಮಾ/ಚಿಹಾರು ಶಿಡಾ (ಜಪಾನ್)‌
  • ಮಧ್ಯಾಹ್ನ 1- ಶೂಟಿಂಗ್-‌ ಟ್ರ್ಯಾಪ್‌ ಮೆನ್ಸ್‌ ಕ್ವಾಲಿಫಿಕೇಶನ್‌ ಡೇ 1- ಪೃಥ್ವಿರಾಜ್‌ ತೊಂಡೈಮನ್‌
  • ಮಧ್ಯಾಹ್ನ 1- ಶೂಟಿಂಗ್-‌ 10 ಎಂ ಏರ್‌ ರೈಫಲ್‌ ವುಮೆನ್ಸ್‌ ಫೈನಲ್‌೦ ರಮಿತಾ ಜಿಂದಾಲ್‌
  • 3.30: ಶೂಟಿಂಗ್‌- 10 ಎಂ ಏರ್‌ ರೈಫಲ್‌ ಮೆನ್ಸ್‌ ಫೈನಲ್-‌ ಅರ್ಜುನ್‌ ಬಬುತಾ
  • ಸಂಜೆ 4.15- ಹಾಕಿ- ಮೆನ್ಸ್‌ ಪೂಲ್‌ ಬಿ- ಇಂಡಿಯಾ vs ಅರ್ಜೆಂಟೀನಾ
  • 5.30- ಬ್ಯಾಡ್ಮಿಂಟನ್-‌ ಮೆನ್ಸ್‌ ಸಿಂಗಲ್ಸ್‌ ಗ್ರೂಪ್‌ ಸ್ಟೇಜ್-‌ ಲಕ್ಷ್ಯಾ ಸೇನ್‌ vs ಜೂಲಿಯನ್‌ ಕರಾಗಿ (ಜರ್ಮನಿ)
  • 6.31- ಅರ್ಚರಿ- ಮೆನ್ಸ್‌ ಟೀಮ್‌ ಕ್ವಾರ್ಟರ್‌ ಫೈನಲ್‌ (ಧೀರಜ್‌ ಬೊಮ್ಮದೇವರ/ಪ್ರವೀಣ್‌ ಜಾಧವ್/ತರುಣ್‌ದೀಪ್‌ ರಾಯ್)
  • 8.18- ಅರ್ಚರಿ- ಮೆನ್ಸ್‌ ಟೀಮ್‌ ಬ್ರಾಂಜ್‌ ಮೆಡಲ್‌ ಮ್ಯಾಚನ್‌ (ಧಿರಜ್‌ ಬೊಮ್ಮದೇವರ/ಪ್ರವೀಣ್ ಜಾಧವ್/ತರುಣ್‌ದೀಪ್‌ ರಾಯ್
  • 8.41- ಅರ್ಚರಿ೦ ಮೆನ್ಸ್‌ ಟೀಮ್‌ ಗೋಲ್ಡ್‌ ಮೆಡಲ್‌ ಮ್ಯಾಚ್‌ (ಧೀರಜ್‌ ಬೊಮ್ಮದೇವರ/ಪ್ರವೀಣ್‌ ಜಾಧವ್/ತರುಣ್‌ದೀಪ್‌ ರಾಯ್)‌
  • 11.30- ಟೇಬಲ್‌ ಟೆನಿಸ್-‌ ವುಮೆನ್ಸ್‌ ಸಿಂಗಲ್ಸ್‌ ರೌಂಡ್‌ ಆಫ್‌ 32- ಶ್ರೀಜಾ ಅಕುಲಾ vs ಜಿಯಾನ್‌ ಜೆಂಗ್‌ (ಸಿಂಗಾಪುರ)
ರಮಿತಾ ಜಿಂದಾಲ್

ಯಾರಿಗೆಲ್ಲ ಪದಕ ಗೆಲ್ಲುವ ಅವಕಾಶ?

ಮನು ಭಾಕರ್‌ ಅವರು ಕಂಚಿನ ಪದಕ ಗೆದ್ದ ಬಳಿಕ ಭಾರತದ ಅಥ್ಲೀಟ್‌ಗಳ ವಿಶ್ವಾಸ ಹೆಚ್ಚಾಗಿದೆ. ಸೋಮವಾರ ಕೂಡ ಭಾರತಕ್ಕೆ ಪದಕ ಗೆಲ್ಲುವ ಸಾಧ್ಯತೆಗಳಿವೆ. 10 ಎಂ ಏರ್‌ ರೈಫಲ್‌ ಇವೆಂಟ್‌ಗಳಲ್ಲಿ ರಮಿತಾ ಜಿಂದಾಲ್‌ ಹಾಗೂ ಅರ್ಜುನ್‌ ಬಬುತಾ ಅವರು ಭಾರತಕ್ಕೆ ದ್ವಿತೀಯ ಹಾಗೂ ತೃತೀಯ ಮೆಡಲ್‌ಗಳನ್ನು ತಂದು ಕೊಡುವ ನಿರೀಕ್ಷೆ ಇದೆ.

ಇದನ್ನೂ ಓದಿ: Manu Bhaker : ಭಾರತಕ್ಕೆ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಪದಕ ತಂದುಕೊಟ್ಟ ಮನು ಭಾಕರ್ ಯಾರು? ಅವರ ಹಿನ್ನೆಲೆಯೇನು?

Continue Reading

Latest

Viral Video: ಬೀದಿ ನಾಯಿ ದಾಳಿಯಿಂದ ಮಗುವನ್ನು ರಕ್ಷಿಸಿದ ಸಾಕು ನಾಯಿ! ಅಪರೂಪದ ವಿಡಿಯೊ

Viral Video: ಬೀದಿಯಲ್ಲಿ ಆಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿದ್ದಾಗ ಆ ಮನೆಯ ಸಾಕು ನಾಯಿ ಬೀದಿ ನಾಯಿಯ ಮೇಲೆ ದಾಳಿ ಮಾಡಿ ಮಗುವನ್ನು ರಕ್ಷಿಸಿದೆ. ಹೃದಯವನ್ನೇ ನಡುಗಿಸುವಂತಹ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪುಟ್ಟ ಕಂದನನ್ನು ಬೀದಿ ನಾಯಿಯ ದಾಳಿಯಿಂದ ರಕ್ಷಿಸಿದ ಸಾಕು ನಾಯಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral Video
Koo


ನಿಯತ್ತಿಗೆ ಉತ್ತಮ ಉದಾಹರಣೆ ನಾಯಿ ಎನ್ನುವುದನ್ನು ಎಲ್ಲರೂ ಒಪ್ಪುತ್ತಾರೆ. ಯಾಕೆಂದರೆ ಈ ಕಾಲದಲ್ಲಿ ನಾಯಿಗಿರುವ ನಿಯತ್ತು ಮನುಷ್ಯನಿಗೂ ಕೂಡ ಇಲ್ಲ. ನಾಯಿ ಅನ್ನ ಹಾಕಿ ಸಾಕಿದ ಮಾಲೀಕನ ಮನೆ ಕಾಯುವುದರ ಜೊತೆಗೆ ಅವು ಮಾಲೀಕ ಹಾಗೂ ಅವರ ಕುಟುಂಬದ ರಕ್ಷಣೆ ಕೂಡ ಮಾಡುತ್ತದೆ. ಇದೀಗ ನಾಯಿ ನಿಯತ್ತಿಗೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದ್ದು, ಅದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾ ಸಖತ್ ವೈರಲ್ (Viral Video) ಆಗಿದೆ.

ಬೀದಿಯಲ್ಲಿ ಆಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿದ್ದಾಗ ಆ ಮನೆಯ ಸಾಕು ನಾಯಿ ಬೀದಿ ನಾಯಿಯ ಮೇಲೆ ದಾಳಿ ಮಾಡಿ ಮಗುವನ್ನು ರಕ್ಷಿಸಿದೆ. ಹೃದಯವನ್ನೇ ನಡುಗಿಸುವಂತಹ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಡಿಯೊದಲ್ಲಿ ಇಬ್ಬರು ಮಹಿಳೆಯರು ತಮ್ಮ ಮೂವರು ಮಕ್ಕಳ ಜೊತೆ ಮಾತನಾಡುತ್ತಾ ಬೀದಿಯ ಬದಿಯಲ್ಲಿ ಕುಳಿತಿದ್ದರು. ಅವರ ಪಕ್ಕದಲ್ಲಿ ಅವರ ಸಾಕು ನಾಯಿ ಕೂಡ ಕುಳಿತಿದೆ. ಆಗ ಅದರಲ್ಲಿ ಒಂದು ಮಗು ಪುಟ್ಟ ಹೆಜ್ಜೆ ಇಡುತ್ತಾ ರಸ್ತೆಗೆ ಓಡಿದೆ. ಆಗ ಬೀದಿಯಲ್ಲಿ ಬರುತ್ತಿದ್ದ ನಾಯಿ ಒಂದೇ ಸಮನೆ ಮಗುವಿನ ಮೇಲೆ ಎರಗಿ ದಾಳಿ ನಡೆಸಿ ಮಗುವನ್ನು ಕೆಳಗುರುಳಿಸಿದೆ. ಆಗ ಅಲ್ಲಿದ್ದವರೆಲ್ಲಾ ಮಗುವನ್ನು ಕಾಪಾಡಲು ಓಡಿ ಬರುತ್ತಿರುವಾಗ ಅಲ್ಲಿ ಕುಳಿತಿದ್ದ ಸಾಕು ನಾಯಿ ಬೀದಿ ನಾಯಿಯ ಮೇಲೆ ಪ್ರತಿದಾಳಿ ನಡೆಸಿ ಮಗುವನ್ನು ರಕ್ಷಿಸಿದೆ. ಇದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅನಂತ್ ಅಂಬಾನಿ ಅರಿಶಿನ ಶಾಸ್ತ್ರದ ವಿಡಿಯೋ ವೈರಲ್; ಕುಣಿದು ಕುಪ್ಪಳಿಸಿದ ಹಾರ್ದಿಕ್ ,ರಣವೀರ್ ಸಿಂಗ್!

ಈ ದೃಶ್ಯ ಅಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ನಡೆದ ಸ್ಥಳ ಮತ್ತು ಸಮಯದ ಬಗ್ಗೆ ಮಾಹಿತಿ ಇಲ್ಲ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಕಾಮೆಂಟ್ ಮಾಡಿದ್ದಾರೆ. ಪುಟ್ಟ ಕಂದನನ್ನು ಬೀದಿ ನಾಯಿಯ ದಾಳಿಯಿಂದ ರಕ್ಷಿಸಿದ ಸಾಕು ನಾಯಿಗೆ ಜನರು ಚಪ್ಪಾಳೆ ಹಾಗೂ ಹಾರ್ಟ್ ಎಮೋಜಿಯೊಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಯಿಗಳಿಗೆ ತುಂಬಾ ನಿಯತ್ತಿದೆ ಎಂದು ಒಬ್ಬರು ಕಾಮೆಂಟ್ ಮಾಡಿದರೆ, ಮತ್ತೊಬ್ಬರು ಅದಕ್ಕಾಗಿಯೇ ನಾಯಿಗಳನ್ನು ತುಂಬಾ ಪ್ರೀತಿಸುತ್ತಾರೆ ಎಂದು ಬರೆದಿದ್ದಾರೆ. ಹಾಗೇ ಇನ್ನೊಬ್ಬರು ನಾಯಿಯಿಂದ ಮಗುವನ್ನು ಕಾಪಾಡಿದ್ದಕ್ಕೆ ದೇವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading
Advertisement
cm siddaramaiah mallikarjun kharge dk shivakumar
ಪ್ರಮುಖ ಸುದ್ದಿ9 mins ago

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

Carrie Fisher Iconic Golden Bikini Rs 1.46 Crore
ಸಿನಿಮಾ13 mins ago

Carrie Fisher: ಹಾಲಿವುಡ್‌ ಖ್ಯಾತ ನಟಿ ಧರಿಸಿದ ಬಿಕಿನಿ ಬರೋಬ್ಬರಿ 1.46 ಕೋಟಿ ರೂಪಾಯಿಗೆ ಹರಾಜು!

Drowned in river
ಬಾಗಲಕೋಟೆ15 mins ago

Drowned In River : ಆಟವಾಡುವಾಗ ಕೃಷ್ಣಾ ನದಿ ಹಿನ್ನೀರಿಗೆ ಬಿದ್ದ ಬಾಲಕಿ ಸಾವು; ಅಂಗಾಂಗ ದಾನ ಮಾಡಿ 6 ಜೀವ ಉಳಿಸಿದ ಬಾಲೆ

Gold Rate Today
ಚಿನ್ನದ ದರ41 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Arvind Kejriwal
ದೇಶ49 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

Dhruva Sarja``KD'' Sanjay Dutt First Look Out of
ಸ್ಯಾಂಡಲ್ ವುಡ್50 mins ago

Dhruva Sarja: ʻಕೆಡಿʼ ಚಿತ್ರದಿಂದ ಹೊರ ಬಿತ್ತು ಸಂಜಯ್ ದತ್ ಫಸ್ಟ್ ಲುಕ್; ಫ್ಯಾನ್ಸ್‌ ಫಿದಾ!

Actor Darshan case Vinod Raj said that he did not go to negotiations Renukaswamy family
ಕ್ರೈಂ1 hour ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಸಂಧಾನಕ್ಕೆ ಹೋಗಿದ್ದಲ್ಲ ಎಂದ ವಿನೋದ್‌ ರಾಜ್‌ !

Road Accident
ಕಲಬುರಗಿ1 hour ago

Road Accident : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಚೆಲ್ಲಾಪಿಲ್ಲಿಯಾಗಿ ಬಿದ್ದ ಇಬ್ಬರು ಸಾವು

Paris Olympics 2024
ಕ್ರೀಡೆ1 hour ago

Paris Olympics 2024: ಪ್ಯಾರಿಸ್‌ ಒಲಿಂಪಿಕ್ಸ್;‌ ಇಂದು ಭಾರತೀಯರ ಅಥ್ಲೀಟ್‌ಗಳ ಕಾದಾಟ ಏನೇನು? ಪದಕ ನಿಶ್ಚಿತ?

Stock Market
ವಾಣಿಜ್ಯ1 hour ago

Stock Market: ಭರ್ಜರಿಯಾಗಿಯೇ ಕಂಬ್ಯಾಕ್‌ ಮಾಡಿದ ಷೇರುಪೇಟೆ; ಸಾರ್ವಕಾಲಿಕ ಗರಿಷ್ಠ ಅಂಕಕ್ಕೆ ತಲುಪಿದ ಸೆನ್ಸೆಕ್ಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ18 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ20 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ22 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ23 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌