14 Hours Work: 14 ಗಂಟೆಗಳ ಕೆಲಸ; ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್‌ 3ರಂದು ಐಟಿ ಉದ್ಯೋಗಿಗಳ ಪ್ರತಿಭಟನೆ - Vistara News

ಪ್ರಮುಖ ಸುದ್ದಿ

14 Hours Work: 14 ಗಂಟೆಗಳ ಕೆಲಸ; ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್‌ 3ರಂದು ಐಟಿ ಉದ್ಯೋಗಿಗಳ ಪ್ರತಿಭಟನೆ

14 Hours Work: ಐಟಿ ಎಂಪ್ಲಾಯೀಸ್ ಅಸೋಸಿಯೇಷನ್ ಈ ಬಗ್ಗೆ ಹೋರಾಡಲು ತೀರ್ಮಾನಿಸಿದ್ದು, ಸಾವಿರಾರು ಐಟಿ ಉದ್ಯೋಗಿಗಳು ಸೇರಿ ಆಗಸ್ಟ್‌ 3ರಂದು ಪ್ರತಿಭಟಿಸಲು ಮುಂದಾಗಿದ್ದಾರೆ.

VISTARANEWS.COM


on

14 hours work protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಲಸದ ಅವಧಿಯನ್ನು ದಿನಕ್ಕೆ 14 ಗಂಟೆಗಳಿಗೆ ವಿಸ್ತರಿಸುವ (14 Hours Work) ಸರ್ಕಾರದ ಚಿಂತನೆಯನ್ನು ಐಟಿ ಉದ್ಯೋಗಿಗಳು (IT Employees) ತೀವ್ರವಾಗಿ ವಿರೋಧಿಸಿದ್ದು, ರಾಜ್ಯ ಸರ್ಕಾರದ (Karnataka Govt) ವಿರುದ್ಧ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ. ಆಗಸ್ಟ್ 3ರಂದು ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ (Freedom park) ಪ್ರತಿಭಟನೆ (Protest) ಮುಷ್ಕರ ನಡೆಯಲಿದೆ.

ಕೆಲಸದ ಅವಧಿಯನ್ನು 14 ಗಂಟೆಗೆ ವಿಸ್ತರಣೆ ಮಾಡಲು ಕರ್ನಾಟಕ ಸಚಿವ ಸಂಪುಟ ಚಿಂತಿಸಿತ್ತು. ಈ ಬಗ್ಗೆ ಐಟಿ ಕಂಪನಿಗಳು ಮಗುಂ ಆಗಿದ್ದವು. ಇದು ಐಟಿ ಉದ್ಯೋಗಿಗಳನ್ನು ಕೆರಳಿಸಿದೆ. ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಐಟಿ ಕಂಪನಿಗಳ ವಿರುದ್ಧ ಪ್ರತಿಭಟನೆಗೆ ಇಳಿಯಲು ಐಟಿ ಉದ್ಯೋಗಿಗಳು ನಿರ್ಧರಿಸಿದ್ದಾರೆ. ಐಟಿ ಎಂಪ್ಲಾಯೀಸ್ ಅಸೋಸಿಯೇಷನ್ ಈ ಬಗ್ಗೆ ಹೋರಾಡಲು ತೀರ್ಮಾನಿಸಿದ್ದು, ಸಾವಿರಾರು ಐಟಿ ಉದ್ಯೋಗಿಗಳು ಸೇರಿ ಆಗಸ್ಟ್‌ 3ರಂದು ಪ್ರತಿಭಟಿಸಲು ಮುಂದಾಗಿದ್ದಾರೆ.

14 ಗಂಟೆ ಕೆಲಸದ ಅವಧಿ (Working hours) ವಿಸ್ತರಿಸುವ ಪ್ರಸ್ತಾವಕ್ಕೆ ಸಿಡಿದೆದ್ದಿದ್ದ ಸಾಫ್ಟ್‌ವೇರ್ ಉದ್ಯೋಗಿಗಳು (Software Employees) ಮೊನ್ನೆ ಮಡಿವಾಳ, ಬಿಟಿಎಂ ಲೇಔಟ್‌ನಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರ ನಿರ್ಧಾರ ವಾಪಸ್ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ನಂತರ ಈ ಕುರಿತು ಇಮೇಲ್‌ ಚಳುವಳಿ ಆರಂಭಿಸಿದ್ದರು.

ಈ ಬಗ್ಗೆ ಕರ್ನಾಟಕ ರಾಜ್ಯ ಐಟಿ ಮತ್ತು/ ಐಟಿಇಎಸ್ ಎಂಪ್ಲಾಯೀಸ್ ಯೂನಿಯನ್ ಅಭಿಯಾನ ಆರಂಭಿಸಿದ್ದು, ʼI oppose the Increase in Working Hoursʼ ಎಂದು ಇಮೇಲ್ ಮೂಲಕ ಸಂದೇಶ ಕಳುಹಿಸಲು ಆರಂಭಿಸಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಿಎಂ ಸಿದ್ದರಾಮಯ್ಯ ಅವರಿಗೆ ಸಹಸ್ರಾರು ಸಂಖ್ಯೆಯಲ್ಲಿ ಇಮೇಲ್ ಕಳುಹಿಸಲು ಸಾಮಾಜಿಕ ಜಾಲತಾಣ ಎಕ್ಸ್ ಹಾಗೂ ಫೇಸ್‌ಬುಕ್‌ನಲ್ಲಿ ಟ್ರೆಂಡ್ ಮಾಡಿದ್ದಾರೆ.

ಸರಕಾರದ ಮೇಲೆ ಯಾರ ಒತ್ತಡ?

ಕೆಲಸದ ಅವಧಿಯ ಹೆಚ್ಚಳ ಮೂಲತಃ ಸರ್ಕಾರದ ಚಿಂತನೆಯಲ್ಲ. ಆದರೆ ಐಟಿ-ಬಿಟಿ ಉದ್ಯೋಗಿಗಳಿಗೆ 14 ಗಂಟೆ ಕೆಲಸದ ಸಮಯ ನಿಗದಿಗೆ ಸರ್ಕಾರದ ಮೇಲೆ ಕೆಲವು ಉದ್ಯಮಿಗಳು ತೀವ್ರ ಒತ್ತಡ ಹೇರುತ್ತಿದ್ದಾರೆ. ಕಾರ್ಮಿಕ ಸಚಿವರ ವಿರೋಧದ ನಡುವೆಯೂ ಮುಖ್ಯಕಾರ್ಯದರ್ಶಿ ಮೂಲಕ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಲು ಉದ್ಯಮಿಗಳು ಕಸರತ್ತು ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯಗೂ ಉದ್ಯಮಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಐಟಿ ಉದ್ಯೋಗಿಗಳು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದ ಸಚಿವ ಸಂತೋಷ್ ಲಾಡ್, ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಉದ್ಯಮಿಗಳು ವಿರೋಧಿಸಿದ್ದಾರೆ. ಆದರೆ 14 ಗಂಟೆ ಕೆಲಸದ ಸಮಯ ನಿಗದಿ ವಿಚಾರದಲ್ಲಿ ಯಾಕೆ ಮೌನ ಎಂದು ಕೆಲ ಪ್ರಭಾವಿ ಉದ್ಯಮಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಉದ್ಯಮಿಗಳ ಪರ ನಿಂತ ಕೆಲ ಸಚಿವರ ವಿರುದ್ಧವೂ ಸಂತೋಷ್ ಲಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಪುಟ ಸಹೋದ್ಯೋಗಿಗಳ ವಿರುದ್ಧವೂ ಸಚಿವ ಲಾಡ್​ ಕಿಡಿಕಾರಿದ್ದರು.

ಐಟಿ ಸಂಸ್ಥೆಗಳು ಉದ್ಯಮಿಗಳಿಂದ ಹೆಚ್ಚಿನ ಕೆಲಸ ತೆಗೆಸಲು ಹಾಗೂ ಉದ್ಯೋಗ ಕಡಿತ ಮಾಡುವ ಉದ್ದೇಶದಿಂದ ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ತಂದು ಇದನ್ನು ಮಾಡಿಸಿಕೊಳ್ಳುತ್ತಿವೆ ಎಂದು ಉದ್ಯೋಗಿಗಳು ಕಿಡಿ ಕಾರಿದ್ದಾರೆ. ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಕೆಲ ದಿನಗಳ ಹಿಂದೆ ಚಿಂತನೆ ನಡೆಸಿತ್ತು. ಜತೆಗೆ, ಬಿಪಿಓಗಳಲ್ಲಿ 12 ಗಂಟೆಗೂ ಅಧಿಕ ಕೆಲಸ ಮಾಡಲು ಅವಕಾಶ ನೀಡಬೇಕು. ಅಲ್ಲದೇ ನಿಯಮಿತವಾಗಿ ಮೂರು ತಿಂಗಳು 125 ಗಂಟೆ ಮೀರದಂತೆ ಕೆಲಸ ಇರಬೇಕು. ಐಟಿ ಉದ್ಯೋಗಿಗಳಿಗೆ 14 ಗಂಟೆ ಕೆಲಸದ ಅವಧಿ ನಿಗದಿಪಡಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: 14 Hour Workday Bill: 14 ಗಂಟೆ ಕೆಲಸ ಮಾಡಿದರೆ ಹಾರ್ಟ್‌ ಅಟ್ಯಾಕ್‌ ಗ್ಯಾರಂಟಿ? ವೈದ್ಯರು ಹೇಳೋದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

BJP-JDS Padayatra: ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

VISTARANEWS.COM


on

BJP-JDS Padayatra
Koo

ಬೆಂಗಳೂರು: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ (BJP-JDS Padayatra) ನಾವು ಅನುಮತಿ ಕೊಡುವುದಿಲ್ಲ, ಬೇಕಿದ್ದರೆ ಪ್ರತಿಭಟನೆ ಮಾಡಿಕೊಳ್ಳಲಿ. ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಕ್ಷದ ವತಿಯಿಂದ ರಾಜಕೀಯ ಮಾಡುತ್ತೇವೆ. ಆದರೆ ಸರ್ಕಾರ ಉಪಯೋಗಿಸಿ ರಾಜಕೀಯ ಮಾಡಲ್ಲ. ಅವರು ರಾಜಕೀಯ ಮಾಡುತ್ತಿದ್ದಾರೆ, ನಾವೂ ರಾಜಕೀಯ ಮಾಡಬೇಕಾಗುತ್ತದೆ. ಮುಡಾ ಹಗರಣ ತನಿಖೆಗೆ ಆಯೋಗ ರಚನೆ ಮಾಡಿದ್ದೇವೆ. ವರದಿಯಲ್ಲಿ ತಪ್ಪು ಅಂತ ಬಂದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ನಿಂದ ಕೌಂಟರ್ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿ, ಆ ಬಗ್ಗೆ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಣನೀತಿ ಮಾಡುತ್ತಿದ್ದಾರೆ.

ಇದನ್ನೂ ಓದಿ | OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!ಇದನ್ನೂ ಓದಿ |

ರಾಜ್ಯದಲ್ಲಿ ಭಯದ ವಾತವರಣದ ಕಾರಣ ಬಂಡವಾಳ ಬರುತ್ತಿಲ್ಲ ಎಂಬ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅನೇಕ ಕಾರಣಗಳಿಂದ ಕಂಪನಿಗಳು, ಆಯ್ಕೆಗಳನ್ನು ಇಟ್ಟುಕೊಂಡೇ ಬರುತ್ತವೆ. ಚೆನ್ನೈ, ಕರ್ನಾಟಕ, ಮಹಾರಾಷ್ಟ್ರ ಅಂತ ಆಯ್ಕೆ ಇರುತ್ತವೆ. ಅವರಿಗೆ ಎಲ್ಲಿ ಹೆಚ್ಚು ಸೌಲಭ್ಯಗಳು ಸಿಗುತ್ತವೋ ಅದರ ಪ್ರಕಾರ ತೀರ್ಮಾನ ಮಾಡುತ್ತಾರೆ. ಇಲ್ಲಿಯವರೆಗೆ ಯಾರು ಬಂದು ಹೊರಗೆ ಹೋಗುತ್ತೇವೆ ಎಂದು ಹೇಳಿಲ್ಲ. ಸುಮ್ಮನೆ ಇಲ್ಲಸಲ್ಲದ ಆಪಾದನೆ ಮಾಡುವುದು ಸರಿಯಲ್ಲ ಎಂದರು.

ಬಜೆಟ್‌ನಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ 15 ಸಾವಿರ ಕೋಟಿ ಕೊಟ್ಟಿದ್ದಾರೆ. ಕೊಡಬೇಡಿ ಎನ್ನಲ್ಲ, ಆದರೆ ಎಲ್ಲರಿಗೂ ಸರಿ ಸಮಾನವಾಗಿ ಕೊಡಬೇಕು. ನಮ್ಮ ಪಾಲನ್ನು ನಮಗೆ ಕೊಡಿ ಅಂತ ದೆಹಲಿ, ಸುಪ್ರೀಂ ಕೋರ್ಟ್‌ವರೆಗೆ ತಲುಪಿದ್ದೇವೆ. ಕೊಟ್ಟಿದ್ದೀವಿ, ಕೊಟ್ಟಿದ್ದೀವಿ ಎನ್ನುತ್ತಾರೆ. ಏನು ಕೊಟ್ಟಿದ್ದೀವಿ ಅಂತ ಹೇಳಬೇಕಲ್ಲವೇ? ಭದ್ರಾ ಯೋಜನೆಗೆ ಹಣಕೊಡಬೇಕಿತ್ತು, ಕೊಟ್ಟಿಲ್ಲ. ಈ ರೀತಿ ಮಲತಾಯಿ ದೋರಣೆ ತೋರಿಸಿ, ಬೆಂಗಳೂರಿಗೆ ಬಂದು ಎಲ್ಲಾ ಕೊಟ್ಟಿದ್ದೀವಿ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಬೆಂಗಳೂರು ದೇಶದ ಪ್ರತಿಷ್ಠಿತ ನಗರ, ಇದನ್ನ ಪ್ರಪಂಚಕ್ಕೆ ತೋರಿಸಬೇಕಲ್ವಾ? ನೀತಿ ಆಯೋಗಕ್ಕೆ ಮಮತಾ ಹೋಗಿ ವಾಕ್ ಔಟ್ ಮಾಡಿ ಬಂದಿದ್ದಾರೆ. ನಾವು ಹೋಗಿ ವಾಕ್ ಔಟ್ ಮಾಡಬೇಕಿತ್ತಾ? ರಾಜ್ಯ-ಕೇಂದ್ರದ ನಡುವಿನ ಸಂಬಂಧ ಚೆನ್ನಾಗಿರಬೇಕು. ಅದಕ್ಕೆ ರಾಜ್ಯವನ್ನು ಚೆನ್ನಾಗಿ ನಡೆಸಿಕೊಳ್ಳಬೇಕಲ್ವಾ ಎಂದರು.

ಬೆಂಗಳೂರಿನಲ್ಲಿ ನಾಯಿ ಮಾಂಸ ದಂಧೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಆಗಿದೆ. ಇದಾದ ಮೇಲೆ ಆರೋಗ್ಯ ಇಲಾಖೆಯವರು, ಪೊಲೀಸರು ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ವರದಿಯಲ್ಲಿ ಮೇಕೆ ಮಾಂಸ ಎಂದು ಬಂದಿದೆ. ಸುಳ್ಳು ಆರೋಪ ಮಾಡಿದ್ದ ಪುನೀತ್ ಕೆರೆಹಳ್ಳಿ ಮತ್ತು ತಂಡದ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಕ್ರಮ ಆಗಿದೆ. ಹೊರ ರಾಜ್ಯದಿಂದ ಮಾಂಸ ತಂದು ಮಾರೋದು ಹೊಸದಲ್ಲ, ಜನರಿಗೆ ಗೊಂದಲ ಬೇಡ, ಬಂದಿದ್ದು ಮೇಕೆ ಮಾಂಸ ಎಂದು ಸ್ಪಷ್ಟನೆ ನೀಡಿದರು.

Continue Reading

ದೇಶ

Physical Abuse: ತಂಗಿ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ, ಕೊಲೆ; ಕೇಸ್‌ ಮುಚ್ಚಲು ತಾಯಿಯೇ ಸಾಥ್!

Physical Abuse: ಬಾಲಕಿ ಮೇಲೆ ಸಹೋದರನೇ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 50ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕುಟುಂಬಸ್ಥರ ಹೇಳಿಕೆಯಲ್ಲಿ ವ್ಯತ್ಯಾಸವಾದ ಕಾರಣ ಕೂಲಂಕಷ ತನಿಖೆ ನಡೆಸಿದ್ದಾರೆ. ಆಗ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

VISTARANEWS.COM


on

Physical Abuse
Koo

ಭೋಪಾಲ್:‌ ಮಧ್ಯಪ್ರದೇಶದ ರೇವಾದಲ್ಲಿ (Reva Case) 9 ವರ್ಷದ ತಂಗಿಯ ಮೇಲೆ 13 ವರ್ಷದ ಅಣ್ಣನು ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣ (Physical Abuse) ದೇಶಾದ್ಯಂತ ಸುದ್ದಿಯಾಗಿದೆ. ಅಶ್ಲೀಲ ವಿಡಿಯೊ ವೀಕ್ಷಿಸಿದ ಬಳಿಕ ಆತನು ತಂಗಿಯ ಮೇಲೆ ಅತ್ಯಾಚಾರ ಎಸಗಿ, ಕತ್ತುಹಿಸುಕಿ ಕೊಲೆ ಮಾಡಿರುವ ಕೇಸ್‌ಗೆ ಈಗ ಹೊಸದೊಂದು ತಿರುವು ಸಿಕ್ಕಿದೆ. ಬಾಲಕನು ಅತ್ಯಾಚಾರ ಎಸಗಿದ ಬಳಿಕ ಬಾಲಕಿಯನ್ನು ಕತ್ತು ಹಿಸುಕುವ ವೇಳೆ ಆತನ ತಾಯಿ ಹಾಗೂ ಇಬ್ಬರು ಅಕ್ಕಂದಿರು ಕೂಡ ಇದ್ದರು. ಹತ್ಯೆಯ ಬಳಿಕ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದರು ಎಂಬ ಭೀಕರ ಮಾಹಿತಿ ಲಭ್ಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 50ಕ್ಕೂ ಹೆಚ್ಚು ಜನರು ವಿಚಾರಣೆ ನಡೆಸಿದ್ದು, ತನಿಖೆಯ ಬಳಿಕ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಏಪ್ರಿಲ್‌ 24ರಂದೇ ಪ್ರಕರಣ ನಡೆದಿದೆ. ಮೊದಲು ಬಾಲಕನು ಅಶ್ಲೀಲ ವಿಡಿಯೊ ನೋಡಿದ್ದಾನೆ. ಇದಾದ ಬಳಿಕ ಕಾಮೋದ್ರೇಕಗೊಂಡ ಆತನು 9 ವರ್ಷದ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕನ ಕೃತ್ಯವು ಆತನ ತಾಯಿ ಹಾಗೂ 17 ಮತ್ತು 18 ವರ್ಷದ ಸಹೋದರಿಯರಿಗೆ ಗೊತ್ತಿದೆ. ತಾಯಿಯ ಎದುರೇ ಬಾಲಕನು ಕತ್ತು ಹಿಸುಕಿದ್ದಾನೆ ಎಂಬುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

Crime News
Crime News

ಪೊಲೀಸರು ಹೇಳುವುದಿಷ್ಟು…

“ಬಾಲಕನು ಅಶ್ಲೀಲ ವಿಡಿಯೊ ವೀಕ್ಷಿಸಿದ ಬಳಿಕ ತಂಗಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಬಾಲಕಿಯು ತಂದೆ ಹೇಳುತ್ತೇನೆ ಎಂದು ಹೆದರಿಸಿದ್ದಾಳೆ. ಆಗ ಬಾಲಕಿಯ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲ, ಬೆದರಿಕೆಯಿಂದ ವಿಚಲಿತನಾದ ಬಾಲಕನು ಮಲಗಿದ್ದ ತಾಯಿಯನ್ನು ಎಬ್ಬಿಸಿದ್ದಾನೆ. ಆಗ ತಾಯಿಯ ಎದುರೇ ಬಾಲಕಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ತಾಯಿ ಹಾಗೂ ಆತನ ಇಬ್ಬರು ಸಹೋದರಿಯರು ಕೇಸ್‌ ಮುಚ್ಚಿಹಾಕಲು ಸಹಾಯ ಮಾಡಿದ್ದಾರೆ” ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಕತೆ ಕಟ್ಟಿದರು

ಬಾಲಕಿಯ ಕೊಲೆಯ ಬಳಿಕ ಬಾಲಕನ ತಾಯಿ ಹಾಗೂ ಇಬ್ಬರು ಸಹೋದರಿಯರು ಕತೆ ಕಟ್ಟಿದ್ದಾರೆ. ಬಾಲಕಿಗೆ ವಿಷಕಾರಿ ಕೀಟವೊಂದು ಕಚ್ಚಿದೆ ಎಂಬುದಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ಶವ ತೆಗೆದುಕೊಂಡು ಹೋಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲು ನಿರಾಕರಿಸಿದಾಗ ಸರ್ಕಾರಿ ಆಸ್ಪತ್ರೆಗೆ ಸಾಗಣೆ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಸುಳ್ಳು ವರದಿ ನೀಡದೆ, ಬಾಲಕಿಯನ್ನು ಅತ್ಯಾಚಾರದ ಬಳಿಕ ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದಾದ ಬಳಿಕ ಪ್ರಕರಣ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಸೇರಿ ಆತನ ಕುಟುಂಬಸ್ಥರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Sexual Harassment: ರಿಕ್ಷಾದಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಚಾಲಕ

Continue Reading

ದೇಶ

OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!

OBC Reservation: ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಲು ಬಿಹಾರ ವಿಧಾನಸಭೆ 2023ರ ನವೆಂಬರ್‌ನಲ್ಲಿ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತು. ಇದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿಗಳು ಸಲ್ಲಿಕೆಯಾಗಿದ್ದವು.

VISTARANEWS.COM


on

OBC Reservation
Koo

ಪಟನಾ/ನವದೆಹಲಿ: ಬಿಹಾರದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳ ಮೀಸಲಾತಿ (OBC Reservation) ಪ್ರಮಾಣವನ್ನು ಶೇ.50ರಿಂದ ಶೇ.65ಕ್ಕೆ ಏರಿಕೆ ಮಾಡುವ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ಅವರ ಕನಸಿಗೆ ಸುಪ್ರೀಂ ಕೋರ್ಟ್‌ ತಣ್ಣೀರೆರಚಿದೆ. ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ಪಟನಾ ಹೈಕೋರ್ಟ್‌ ಕೆಲ ದಿನಗಳ ಹಿಂದೆ ನೀಡಿದ್ದ ತಡೆಯಾಜ್ಞೆಯ ಆದೇಶವನ್ನು ಸುಪ್ರೀಂ ಕೋರ್ಟ್‌ (Supreme Court) ಎತ್ತಿಹಿಡಿದಿದೆ. ಇದರೊಂದಿಗೆ ನಿತೀಶ್‌ ಕುಮಾರ್‌ ಅವರಿಗೆ ಭಾರಿ ಮುಖಭಂಗವಾಗಿದೆ.

ಪಟನಾ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಹಾರ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸಲು ತೀರ್ಮಾನಿಸಿದೆ. ಮೀಸಲಾತಿ ಹೆಚ್ಚಿಸುವ ರಾಜ್ಯ ಸರ್ಕಾರದ ತೀರ್ಮಾನ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಜೂನ್‌ 20ರಂದು ವಿಚಾರಣೆ ನಡೆಸಿದ್ದ ಪಟನಾ ಹೈಕೋರ್ಟ್‌, “ಮೀಸಲಾತಿ ಹೆಚ್ಚಿಸುವ ತೀರ್ಮಾನವು ಕಾನೂನಿನಲ್ಲಿ ಕೆಟ್ಟ ಪದ್ಧತಿಯಾಗಿದ್ದು, ಸಮಾನತೆ ಷರತ್ತಿನ ವಿರುದ್ಧವಾಗಿದೆ” ಎಂದು ಹೇಳಿ, ಮೀಸಲಾತಿಗೆ ತಡೆಯಾಜ್ಞೆ ನೀಡಿತ್ತು.

ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಲು ಬಿಹಾರ ವಿಧಾನಸಭೆ 2023ರ ನವೆಂಬರ್‌ನಲ್ಲಿ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತು. ಪರಿಷ್ಕೃತ ಮೀಸಲಾತಿ ಕೋಟಾದಲ್ಲಿ ಎಸ್‌ಸಿ ವರ್ಗಕ್ಕೆ ಶೇ. 20, ಎಸ್‌ಟಿ ವರ್ಗಕ್ಕೆ ಶೇ. 2, ಒಬಿಸಿ ವರ್ಗಕ್ಕೆ ಶೇ.18 ಮತ್ತು ಇಬಿಸಿ ವರ್ಗಕ್ಕೆ ಶೇ. 25ರಷ್ಟು ಮೀಸಲಾತಿ ನೀಡಲಾಗಿದೆ.

ಬಿಹಾರದಲ್ಲಿರುವ ಒಟ್ಟು 13.07 ಕೋಟಿ ಜನಸಂಖ್ಯೆಯಲ್ಲಿ ಶೇ.63ರಷ್ಟು ಜನ ಇತರೆ ಹಿಂದುಳಿದ ವರ್ಗಗಳು (OBC) ಹಾಗೂ ಅತ್ಯಂತ ಹಿಂದುಳಿದ ವರ್ಗಗಳ ಉಪ ಪಂಗಡಗಳ ಜನರೇ ಇರುವ ಕಾರಣ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ತೀರ್ಮಾನಿಸಲಾಗಿತ್ತು. ಆದಾಗ್ಯೂ, ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ, ಯಾವುದೇ ರಾಜ್ಯದ ಮೀಸಲಾತಿ ಪ್ರಮಾಣವು ಶೇ.50ಕ್ಕಿಂತ ಜಾಸ್ತಿ ಇರಬಾರದು. ಹಾಗಾಗಿ, ನ್ಯಾಯಾಲಯವು ಪಟನಾ ಹೈಕೋರ್ಟ್‌ ತೀರ್ಪನ್ನು ಎತ್ತಿಹಿಡಿದಿದೆ ಎಂದು ತಿಳಿದುಬಂದಿದೆ.

ಜಾತಿಗಣತಿಯ ಪ್ರಮುಖ ಅಂಶಗಳು

ಬಿಹಾರದಲ್ಲಿ ನಡೆಸಿದ ಜಾತಿಗಣತಿ ವರದಿ ಪ್ರಕಾರ, ಅತ್ಯಂತ ಹಿಂದುಳಿದ ಜಾತಿಯ ಜನ (extremely backward caste – EBC) 36.01%, ಹಿಂದುಳಿದ ಸಮುದಾಯ (Other Backward Caste – OBC) 27.12% ಮತ್ತು ಸಾಮಾನ್ಯ ವರ್ಗ 15.52% ಇದ್ದಾರೆ. ಪರಿಶಿಷ್ಟ ಜಾತಿಯವರು 19.65% ಮತ್ತು ಪರಿಶಿಷ್ಟ ಪಂಗಡದವರು 1.68% ಇದ್ದಾರೆ. OBCಗಳಲ್ಲಿ ಯಾದವರು 14.26%ರಷ್ಟಿದ್ದರೆ, ಕುಶ್ವಾಹಾ ಮತ್ತು ಕುರ್ಮಿಗಳು ಕ್ರಮವಾಗಿ 4.27% ಮತ್ತು 2.87% ಜನಸಂಖ್ಯೆಯನ್ನು ಹೊಂದಿದ್ದಾರೆ. ಭೂಮಿಹಾರ್‌ಗಳು 2.86 ಪ್ರತಿಶತ, ಬ್ರಾಹ್ಮಣರು 3.66 ಪ್ರತಿಶತ, ಮುಸಾಹರ್‌ಗಳು 3 ಪ್ರತಿಶತ ಇದ್ದಾರೆ.

ಇದನ್ನೂ ಓದಿ: Union Budget 2024: ಪ್ರಧಾನಿ ಮೋದಿ ಕುರ್ಚಿ ಉಳಿಸೋಕೆ ಆಂಧ್ರ, ಬಿಹಾರಕ್ಕೆ ವಿಶೇಷ ಅನುದಾನ: ಸಿಎಂ ಕಿಡಿ

Continue Reading

ಪ್ರಮುಖ ಸುದ್ದಿ

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

CM Siddaramaiah: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಮೀಟಿಂಗ್‌ ನಡೆಯಲಿದ್ದು, ಮೈತ್ರಿ ಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ಚರ್ಚೆ ನಡೆಸಿ ಮೈತ್ರಿ ಪಕ್ಷಗಳ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಿದ್ದಾರೆ.

VISTARANEWS.COM


on

cm siddaramaiah mallikarjun kharge dk shivakumar
Koo

ಹೊಸದಿಲ್ಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಇಬ್ಬರಿಗೆ ಕಾಂಗ್ರೆಸ್‌ ಹೈಕಮಾಂಡ್‌ (Congress high command) ಬುಲಾವ್‌ ನೀಡಿದ್ದು, ನಾಳೆ ಅವರು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ (State cabinet) ಮೇಜರ್‌ ಬದಲಾವಣೆ, ಮೈತ್ರಿ ಪಕ್ಷಗಳ ಪಾದಯಾತ್ರೆಗೆ ಸಡ್ಡು ಹೊಡೆಯುವ ಬಗ್ಗೆ ಚಿಂತನೆ ಇತ್ಯಾದಿಗಳ ಬಗ್ಗೆ ಹೈಕಮಾಂಡ್‌ ಚರ್ಚಿಸಲು ಉದ್ದೇಶಿಸಿದೆ.

ಒಂದೆಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್‌ (BJP- JDS) ಮೈತ್ರಿ ಪಕ್ಷಗಳು ರಣಕಹಳೆ ಮೊಳಗಿಸಿವೆ. ಸರ್ಕಾರದ ವಿರುದ್ಧ ವಿಧಾನಮಂಡಲ ಅಧಿವೇಶನದ (Assembly Session) ಒಳಗೆ ಮುಗಿಬಿದ್ದಿದ್ದ ವಿಪಕ್ಷಗಳು ಅಧಿವೇಶನದ ಹೊರಗೂ ಇದರ ಲಾಭ ಪಡೆಯಲು ಪ್ಲಾನ್ ಮಾಡಿವೆ. ಹೀಗಾಗಿ ಪಾದಯಾತ್ರೆ ಪಾಲಿಟಿಕ್ಸ್ ಮಾಡಲು ಮುಂದಾಗಿವೆ. ವಾಲ್ಮೀಕಿ ನಿಗಮದ ಅವ್ಯವಹಾರ (Valmiki Corporation Scam) ಪ್ರಕರಣ ಹಾಗೂ ಸಿಎಂ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣವನ್ನು (MUDA Scam) ಗಂಭೀರವಾಗಿ ಪರಿಗಣಿಸಿದ ಮೈತ್ರಿ ಪಕ್ಷಗಳು ಇತ್ತ ರಾಜ್ಯದಲ್ಲೂ ಅತ್ತ ದೆಹಲಿಯಲ್ಲೂ ಸರ್ಕಾರದ ವಿರುದ್ಧ ಹೋರಾಟ ಜೋರು ಮಾಡಿವೆ. ಮೈತ್ರಿ ಪಕ್ಷಗಳ ನಡೆಯಿಂದ ಹೈಕಮಾಂಡ್ ವಿಚಲಿತಗೊಂಡಿದೆ.

ಹೀಗಾಗಿ ಸಿಎಂ, ಡಿಸಿಎಂ ಸೇರಿದಂತೆ ಆಯ್ದ ಸಚಿವರಿಗೆ ಹೈಕಮಾಂಡ್‌ ಬುಲಾವ್ ನೀಡಿದೆ. ಇಬ್ಬರೂ ಮಂಗಳವಾರ ದಿಲ್ಲಿಗೆ ತೆರಳಿ ಬುಧವಾರ ಸಂಜೆ ವಾಪಸು ಆಗಲಿದ್ದಾರೆ. ಕೆಲ ಸಚಿವರು ಇಂದೇ ದೆಹಲಿಗೆ ದೌಡಾಯಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಮೀಟಿಂಗ್‌ ನಡೆಯಲಿದ್ದು, ಮೈತ್ರಿ ಪಕ್ಷಗಳು ಮಾಡುತ್ತಿರುವ ಆರೋಪದ ಬಗ್ಗೆ ಚರ್ಚೆ ನಡೆಸಿ ಮೈತ್ರಿ ಪಕ್ಷಗಳ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆ ಚುರುಕುಗೊಳಿಸುವುದು, ಮುಂದೆ ಬರುತ್ತಿರುವ ಚುನಾವಣೆಗಳಿಗೆ ಸಿದ್ಧತೆ, ಉಪಚುನಾವಣೆ ಸೇರಿದಂತೆ ಇತರೆ ಚುನಾವಣೆಗಳ ಬಗ್ಗೆ ಚರ್ಚೆ, ಸರ್ಕಾರದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುವುದು, ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಬಗ್ಗೆ ಚರ್ಚೆ ಮಾಡುವುದು, ಮಹಿಳಾ ಘಟಕದ ಅಧ್ಯಕ್ಷೆ ನೇಮಕದ ಬಗ್ಗೆ ಒಪಿನಿಯನ್ ಕಲೆಕ್ಟ್ ಮಾಡುವುದು ಹೈಕಮಾಂಡ್ ಉದ್ದೇಶವಾಗಿದೆ.

ಸಚಿವ ಸಂಪುಟ ಪುನಾರಚನೆ

ರಾಜ್ಯ ಸಚಿವ ಸಂಪುಟ, ಕೆಪಿಸಿಸಿ ಪುನಾರಚನೆ ಕುರಿತು ಪ್ರಾಥಮಿಕ ಹಂತದ ಮಾತುಕತೆಯ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಗುಸುಗುಸು ಟಾಕ್ ಶುರುವಾಗಿದೆ. ಸಚಿವ ಸಂಪುಟದಲ್ಲಿ ಒಂದಷ್ಟು ಬದಲಾವಣೆಗೆ, ಸಚಿವರ ಖಾತೆ ಅದಲು ಬದಲು ಮಾಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆಸಲಾಗುತ್ತಿದ್ದು, ಕೆಲವು ಹಿರಿಯ ಸಚಿವರಿಂದಲೂ ಖಾತೆ ಬದಲಾವಣೆಗೆ ಸಲಹೆ ಬಂದಿದೆ.

ಲೋಕಸಭೆ ಫಲಿತಾಂಶ ಗಮನದಲ್ಲಿರಿಸಿಕೊಂಡು ಬದಲಾವಣೆ ಮಾಡುವ ಬಗ್ಗೆ ಅಭಿಪ್ರಾಯ ಪಡೆಯಲಾಗಿದೆ. 6-7 ಸಚಿವರ ಖಾತೆಗಳ ಅದಲು ಬದಲು ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ‌ ನಡೆದಿದೆ. ಈ ಬಗ್ಗೆ ಸಿಎಂ, ಡಿಸಿಎಂ ದೆಹಲಿ ಭೇಟಿ ಬಳಿಕವೇ ಸ್ಪಷ್ಟನೆ ಸಿಗಲಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕೂಗೂ ಕೆಲವರಿಂದ ಕೇಳಿ ಬಂದಿದೆ. ಕೆಪಿಸಿಸಿ ನೂತನ ಅಧ್ಯಕ್ಷರಾಗಬೇಕು ಎಂದು ಹಲವು ಮುಖಂಡರು ಈಗಾಗಲೇ ಪ್ರಭಾವ ಬಳಸುತ್ತಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕೆಲವು ಸಚಿವರ ಸ್ವಕ್ಷೇತ್ರಗಳಲ್ಲಿ ಲೀಡ್ ಕಡಿಮೆ ಆಗಿದೆ. ಲೀಡ್ ಕಡಿಮೆ ಕೊಟ್ಟ ಸಚಿವರ ತಲೆದಂಡಕ್ಕೆ ಸಚಿವ ಸ್ಥಾನ ಆಕಾಂಕ್ಷಿಗಳಿಂದ ಒತ್ತಡವಿದೆ. ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿಲ್ಲ ಎಂಬ ಅಭಿಪ್ರಾಯ ಮೂಡಿದ್ದು, ಅಂತಹ ಸಚಿವರಿಂದ ಸರ್ಕಾರದ ಇಮೇಜ್ ಹೆಚ್ಚಾಗಿಲ್ಲ. ಜೊತೆಗೆ ಪಕ್ಷಕ್ಕೂ ಯಾವುದೇ ಲಾಭವಿಲ್ಲ. ಹಾಗಾಗಿ ಕೆಲ ಸಚಿವರನ್ನು ಕೈ ಬಿಡಬೇಕು ಎಂದು ಶಾಸಕರು ಒತ್ತಾಯ‌ ಮಾಡಿದ್ದರು.

ಇದನ್ನೂ ಓದಿ: HD Kumaraswamy: ರಾಜ್ಯದಲ್ಲಿ ನಾಳೆ ಚುನಾವಣೆ ನಡೆದ್ರೂ ಕಾಂಗ್ರೆಸ್‌ ಮನೆಗೆ; ಭವಿಷ್ಯ ನುಡಿದ ಕುಮಾರಸ್ವಾಮಿ

Continue Reading
Advertisement
BJP-JDS Padayatra
ಕರ್ನಾಟಕ2 mins ago

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

Physical Abuse
ದೇಶ6 mins ago

Physical Abuse: ತಂಗಿ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ, ಕೊಲೆ; ಕೇಸ್‌ ಮುಚ್ಚಲು ತಾಯಿಯೇ ಸಾಥ್!

train service
ಹಾಸನ7 mins ago

Train services: ಎಡಕುಮೇರಿಯಲ್ಲಿ ಭೂಕುಸಿತ; ಆಗಸ್ಟ್‌ 4ರವರೆಗೆ 14 ರೈಲುಗಳ ಸಂಚಾರ ರದ್ದು

International Tiger Day 2024
ಪರಿಸರ8 mins ago

International Tiger Day 2024: 150 ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಶೇ. 95ರಷ್ಟು ಕುಸಿತ!

puncture mafia viral video
ವೈರಲ್ ನ್ಯೂಸ್11 mins ago

Viral video: ರಸ್ತೆಯಿಂದ ರಾಶಿಗಟ್ಟಲೆ ಮೊಳೆ ಹೆಕ್ಕಿ ತೆಗೆದ ಟ್ರಾಫಿಕ್‌ ಪೊಲೀಸರು; ಪಂಕ್ಚರ್‌ ಮಾಫಿಯಾ ಸಕ್ರಿಯ?

Fraud Case
Latest20 mins ago

Fraud Case: ಪತ್ನಿಗೆ ಮಕ್ಕಳಾಗಿಲ್ಲ ಎಂದು ಮಾವನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ!

Shraddha Srinath Love tattoo on chest What does that mean
ಸ್ಯಾಂಡಲ್ ವುಡ್21 mins ago

Shraddha Srinath: ಶ್ರದ್ಧಾ ಶ್ರೀನಾಥ್‌ ಎದೆ ಮೇಲೆ ʻLove’ ಟ್ಯಾಟೂ ; ಏನಿದರ ಅರ್ಥ?

OBC Reservation
ದೇಶ45 mins ago

OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!

Rajendra Nagar Tragedy
ದೇಶ46 mins ago

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಪ್ರಕರಣ; 7 ಮಂದಿಯ ಬಂಧನ

cm siddaramaiah mallikarjun kharge dk shivakumar
ಪ್ರಮುಖ ಸುದ್ದಿ58 mins ago

CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ19 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ21 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ23 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌