Robbery Case: ಐಟಿ ದಾಳಿ ಮಾದರಿಯಲ್ಲಿ ಬಂದು ದರೋಡೆಗೆ ಯತ್ನಿಸಿದ ಖದೀಮರು! ಲೂಟಿ ವಿಫಲಗೊಳಿಸಿದ ಲೈವ್‌ ಸೆಕ್ಯುರಿಟಿ - Vistara News

ಕ್ರೈಂ

Robbery Case: ಐಟಿ ದಾಳಿ ಮಾದರಿಯಲ್ಲಿ ಬಂದು ದರೋಡೆಗೆ ಯತ್ನಿಸಿದ ಖದೀಮರು! ಲೂಟಿ ವಿಫಲಗೊಳಿಸಿದ ಲೈವ್‌ ಸೆಕ್ಯುರಿಟಿ

Robbery Case: ಸುಮಾರು 6-8 ಜನರು ಇದ್ದ ಈ ದುಷ್ಕರ್ಮಿಗಳ ಟೀಮ್‌ನಲ್ಲಿ ಎಲ್ಲರೂ ಟಿಪ್‌ಟಾಪಾಗಿ ದಿರಿಸು ತೊಟ್ಟಿದ್ದರು. ಅವರಲ್ಲಿ ಒಬ್ಬಾತ ಪೊಲೀಸ್ ಪೇದೆಯಂತೆ ಡ್ರೆಸ್‌ ಧರಿಸಿದ್ದ. ಸಿಸಿಟಿವಿಯಲ್ಲಿ ಮುಖ ಕಾಣದಂತೆ ನೋಡಿಕೊಳ್ಳಲು ಇವರು ಯತ್ನಿಸಿದ್ದಾರೆ.

VISTARANEWS.COM


on

robbery case brahmavara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ:‌ ಐಟಿ ದಾಳಿ (IT Raid) ಮಾದರಿಯಲ್ಲಿ ತಂಡ ಕಟ್ಟಿಕೊಂಡು ಬಂದ ಅಪರಿಚಿತ ದುಷ್ಕರ್ಮಿಗಳು (Miscreants) ಮನೆ ಲೂಟಿಗೆ (Robbery Case) ಪ್ರಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಆದರೆ ಸೈನ್‌ ಇನ್‌ ಸೆಕ್ಯುರಿಟಿ (Sign In Security) ಸಂಸ್ಥೆಯ ಲೈವ್ ಸರ್ವೈಲೆನ್ಸ್‌ (Live Surveillance) ಹಾಗೂ ತಕ್ಷಣ ಅಲರ್ಟ್‌ ನೀಡಿದ ಪರಿಣಾಮ ಮನೆಯವರು ಬಾಗಿಲು ತೆಗೆಯದೇ ಇದ್ದುದರಿಂದ, ಸಂಭಾವ್ಯ ದರೋಡೆಯಿಂದ ಪಾರಾಗಿದ್ದಾರೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ಘಟನೆ ನಡೆದಿದೆ. ಕವಿತಾ ಎಂಬವರ ಮನೆಗೆ ಅಪರಿಚಿತ ದುಷ್ಕರ್ಮಿಗಳು ಎರಡು ಇನ್ನೋವಾ ಹಾಗೂ ಸ್ವಿಫ್ಟ್‌ ಕಾರುಗಳಲ್ಲಿ ಸರ್ಕಾರಿ ಅಧಿಕಾರಿಗಳಂತೆ ಆಗಮಿಸಿದ್ದಾರೆ. ಜುಲೈ 25ರ ಬೆಳಗ್ಗೆ 8.30ರ ವೇಳೆಗೆ, ಮಳೆ ಸುರಿಯುತ್ತಿದ್ದಾಗ ಹಾಗೂ ಯಾರೂ ಇಲ್ಲದ ಸಮಯ ನೋಡಿ ತಂಡ ಆಗಮಿಸಿತ್ತು. ಗೇಟ್‌ ತಳ್ಳಿ ತೆರೆಯಲು ಯತ್ನಿಸಿ, ಅದು ತೆರೆದುಕೊಳ್ಳದೆ ಇದ್ದಾಗ ಮುರಿಯಲು ನೋಡಿದ್ದಾರೆ.

ಗೇಟ್‌ ತೆರೆಯದೆ ಇದ್ದಾಗ ಇನ್ನೊಂದು ಕಡೆಯಿಂದ ಕಂಪೌಂಡ್ ಜಿಗಿದು ಆವರಣ ಪ್ರವೇಶಿಸಿ ಬಾಗಿಲು ಬಡಿದು ಮನೆಯವರನ್ನು ಕರೆದಿದ್ದಾರೆ. ಆದರೆ ಈ ಮನೆಗೆ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಲೈವ್ ಸರ್ವೈಲೆನ್ಸ್‌ ಅಳವಡಿಸಿದ್ದ ಕಾರಣ, ಸಂಸ್ಥೆಯವರು ಕೂಡಲೇ ಮನೆ ಮಾಲಕಿಗೆ ಅಲರ್ಟ್‌ ನೀಡಿದ್ದಾರೆ. ಯಾರೋ ಅಕ್ರಮವಾಗಿ ಕೌಂಪೌಂಡ್‌ ಪ್ರವೇಶಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಎಚ್ಚೆತ್ತುಕೊಂಡ ಮಾಲಕಿ ಬಾಗಿಲು ತೆರೆದಿಲ್ಲ. ಸ್ವಲ್ಪ ಹೊತ್ತು ಕಾದು ಈ ಪುಂಡರ ತಂಡ ಮರಳಿ ಹೋಗಿದೆ.

ಸಿಸಿಟಿವಿಯಲ್ಲಿ ಅಪರಿಚಿತ ತಂಡದ ಕೃತ್ಯದ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಕುಂದಾಪುರ ವ್ಯಾಪ್ತಿಯಲ್ಲಿ ಹಲವು ಕಳ್ಳತನಗಳನ್ನು ಸೈನ್ ಇನ್ ಸೆಕ್ಯೂರಿಟಿ ವಿಫಲಗೊಳಿಸಿದೆ. ಇದು ಸಿಸಿಟಿವಿ ಅಳವಡಿಸಿರುವ ಮನೆಗೆ 24 ಗಂಟೆಯೂ ಭದ್ರತೆ ನೀಡುತ್ತದೆ. ಯಾವುದಾದ್ರೂ ಅನಪೇಕ್ಷಿತ ಬೆಳವಣಿಗೆ ಕಂಡರೆ ಅಲರ್ಟ್ ಮಾಡುತ್ತದೆ.

ಸುಮಾರು 6-8 ಜನರು ಇದ್ದ ಈ ದುಷ್ಕರ್ಮಿಗಳ ಟೀಮ್‌ನಲ್ಲಿ ಎಲ್ಲರೂ ಟಿಪ್‌ಟಾಪಾಗಿ ದಿರಿಸು ತೊಟ್ಟಿದ್ದರು. ಅವರಲ್ಲಿ ಒಬ್ಬಾತ ಪೊಲೀಸ್ ಪೇದೆಯಂತೆ ಡ್ರೆಸ್‌ ಧರಿಸಿದ್ದ. ಸಿಸಿಟಿವಿಯಲ್ಲಿ ಮುಖ ಕಾಣದಂತೆ ನೋಡಿಕೊಳ್ಳಲು ಇವರು ಯತ್ನಿಸಿದ್ದಾರೆ. ಮನೆ ಮಾಲಕಿ ಕವಿತಾ ಅವರು ಈ ಬಗ್ಗೆ ದೂರು ನೀಡಿದ್ದಾರೆ. ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಕಸದ ಲಾರಿಯ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಬಿಬಿಎಂಪಿ ಕಸದ ಲಾರಿ (BBMP Lorry) ಮತ್ತೆರಡು ಬಲಿ (Road Accident) ಪಡೆದುಕೊಂಡಿದೆ. ನಗರದ ಹೃದಯ ಭಾಗದ ಕೆಆರ್ ಸರ್ಕಲ್ (KR Circle) ಬಳಿ ಈ ದುರ್ಘಟನೆ ನಡೆದಿದೆ. ಮೃತರಿಬ್ಬರೂ ಟೆಕ್ಕಿಗಳಾಗಿದ್ದು, ಟಿಸಿಎಸ್‌ನಲ್ಲಿ (TCS) ಕೆಲಸ ಮಾಡುತ್ತಿದ್ದರು.

ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿಯಲ್ಲಿ ವಾಸ ಮಾಡುತ್ತಿದ್ದ ಯುವತಿ ಶಿಲ್ಪ, ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತವಾಗಿದೆ.

ಮೆಜೆಸ್ಟಿಕ್‌ದ ಕೆಆರ್ ಸರ್ಕಲ್ ಮಾರ್ಗವಾಗಿ ಇವರಿಬ್ಬರೂ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆಆರ್ ಸರ್ಕಲ್ ಕಡೆ ಕಸದ ಲಾರಿ ತೀವ್ರ ವೇಗದಿಂದ ಬಂದಿದೆ. ತಿರುವು ಇದ್ದ ಮಾರ್ಗದಲ್ಲಿ ಲಾರಿ ವೇಗವಾಗಿ ಬಂದ ಕಾರಣ ಕಸದ ಲಾರಿಯ ವೇಗದಿಂದ ತಪ್ಪಿಸಿಕೊಳ್ಳಲಾಗದೇ ಬೈಕ್‌ ಲಾರಿ ಕೆಳಗೆ ಸಿಲುಕಿಕೊಂಡಿದೆ.

ಮೃತರ ಮೇಲೆ ಹರಿದ ಕಸದ ಲಾರಿ ಸುಮಾರು 10 ಮೀಟರ್‌ನಷ್ಟು ದೂರ ದೇಹಗಳನ್ನು ಎಳೆದೊಯ್ದಿದೆ. ರಸ್ತೆ ಮೇಲೆ ರಕ್ತ ಚೆಲ್ಲಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಪಘಾತದ ಬಳಿಕ ಕಸದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೂಡಲೇ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗದಲ್ಲಿಯೇ ಇಬ್ಬರೂ ಮೃತ ಪಟ್ಟರು. ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಒಯ್ಯಲಾಗಿದೆ.

ಇದನ್ನೂ ಓದಿ: Police Firing: ದರೋಡೆ, ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Physical Abuse: ತಂಗಿ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ, ಕೊಲೆ; ಕೇಸ್‌ ಮುಚ್ಚಲು ತಾಯಿಯೇ ಸಾಥ್!

Physical Abuse: ಬಾಲಕಿ ಮೇಲೆ ಸಹೋದರನೇ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 50ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕುಟುಂಬಸ್ಥರ ಹೇಳಿಕೆಯಲ್ಲಿ ವ್ಯತ್ಯಾಸವಾದ ಕಾರಣ ಕೂಲಂಕಷ ತನಿಖೆ ನಡೆಸಿದ್ದಾರೆ. ಆಗ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

VISTARANEWS.COM


on

Physical Abuse
Koo

ಭೋಪಾಲ್:‌ ಮಧ್ಯಪ್ರದೇಶದ ರೇವಾದಲ್ಲಿ (Reva Case) 9 ವರ್ಷದ ತಂಗಿಯ ಮೇಲೆ 13 ವರ್ಷದ ಅಣ್ಣನು ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣ (Physical Abuse) ದೇಶಾದ್ಯಂತ ಸುದ್ದಿಯಾಗಿದೆ. ಅಶ್ಲೀಲ ವಿಡಿಯೊ ವೀಕ್ಷಿಸಿದ ಬಳಿಕ ಆತನು ತಂಗಿಯ ಮೇಲೆ ಅತ್ಯಾಚಾರ ಎಸಗಿ, ಕತ್ತುಹಿಸುಕಿ ಕೊಲೆ ಮಾಡಿರುವ ಕೇಸ್‌ಗೆ ಈಗ ಹೊಸದೊಂದು ತಿರುವು ಸಿಕ್ಕಿದೆ. ಬಾಲಕನು ಅತ್ಯಾಚಾರ ಎಸಗಿದ ಬಳಿಕ ಬಾಲಕಿಯನ್ನು ಕತ್ತು ಹಿಸುಕುವ ವೇಳೆ ಆತನ ತಾಯಿ ಹಾಗೂ ಇಬ್ಬರು ಅಕ್ಕಂದಿರು ಕೂಡ ಇದ್ದರು. ಹತ್ಯೆಯ ಬಳಿಕ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದರು ಎಂಬ ಭೀಕರ ಮಾಹಿತಿ ಲಭ್ಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 50ಕ್ಕೂ ಹೆಚ್ಚು ಜನರು ವಿಚಾರಣೆ ನಡೆಸಿದ್ದು, ತನಿಖೆಯ ಬಳಿಕ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಏಪ್ರಿಲ್‌ 24ರಂದೇ ಪ್ರಕರಣ ನಡೆದಿದೆ. ಮೊದಲು ಬಾಲಕನು ಅಶ್ಲೀಲ ವಿಡಿಯೊ ನೋಡಿದ್ದಾನೆ. ಇದಾದ ಬಳಿಕ ಕಾಮೋದ್ರೇಕಗೊಂಡ ಆತನು 9 ವರ್ಷದ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕನ ಕೃತ್ಯವು ಆತನ ತಾಯಿ ಹಾಗೂ 17 ಮತ್ತು 18 ವರ್ಷದ ಸಹೋದರಿಯರಿಗೆ ಗೊತ್ತಿದೆ. ತಾಯಿಯ ಎದುರೇ ಬಾಲಕನು ಕತ್ತು ಹಿಸುಕಿದ್ದಾನೆ ಎಂಬುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

Crime News
Crime News

ಪೊಲೀಸರು ಹೇಳುವುದಿಷ್ಟು…

“ಬಾಲಕನು ಅಶ್ಲೀಲ ವಿಡಿಯೊ ವೀಕ್ಷಿಸಿದ ಬಳಿಕ ತಂಗಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಬಾಲಕಿಯು ತಂದೆ ಹೇಳುತ್ತೇನೆ ಎಂದು ಹೆದರಿಸಿದ್ದಾಳೆ. ಆಗ ಬಾಲಕಿಯ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲ, ಬೆದರಿಕೆಯಿಂದ ವಿಚಲಿತನಾದ ಬಾಲಕನು ಮಲಗಿದ್ದ ತಾಯಿಯನ್ನು ಎಬ್ಬಿಸಿದ್ದಾನೆ. ಆಗ ತಾಯಿಯ ಎದುರೇ ಬಾಲಕಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆಯ ಬಳಿಕ ತಾಯಿ ಹಾಗೂ ಆತನ ಇಬ್ಬರು ಸಹೋದರಿಯರು ಕೇಸ್‌ ಮುಚ್ಚಿಹಾಕಲು ಸಹಾಯ ಮಾಡಿದ್ದಾರೆ” ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಕತೆ ಕಟ್ಟಿದರು

ಬಾಲಕಿಯ ಕೊಲೆಯ ಬಳಿಕ ಬಾಲಕನ ತಾಯಿ ಹಾಗೂ ಇಬ್ಬರು ಸಹೋದರಿಯರು ಕತೆ ಕಟ್ಟಿದ್ದಾರೆ. ಬಾಲಕಿಗೆ ವಿಷಕಾರಿ ಕೀಟವೊಂದು ಕಚ್ಚಿದೆ ಎಂಬುದಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ಶವ ತೆಗೆದುಕೊಂಡು ಹೋಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲು ನಿರಾಕರಿಸಿದಾಗ ಸರ್ಕಾರಿ ಆಸ್ಪತ್ರೆಗೆ ಸಾಗಣೆ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಸುಳ್ಳು ವರದಿ ನೀಡದೆ, ಬಾಲಕಿಯನ್ನು ಅತ್ಯಾಚಾರದ ಬಳಿಕ ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದಾದ ಬಳಿಕ ಪ್ರಕರಣ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಸೇರಿ ಆತನ ಕುಟುಂಬಸ್ಥರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Sexual Harassment: ರಿಕ್ಷಾದಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಚಾಲಕ

Continue Reading

Latest

Fraud Case: ಪತ್ನಿಗೆ ಮಕ್ಕಳಾಗಿಲ್ಲ ಎಂದು ಮಾವನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ!

Fraud Case: ಮದುವೆಯಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲವಾದರೂ ತನ್ನ ಪತ್ನಿಗೆ ಗರ್ಭಧರಿಸಲು ಸಾಧ್ಯವಾಗದಿದ್ದಾಗ ಆಕೆಯನ್ನು ವೈದ್ಯರ ಬಳಿಗೆ ಕರೆದೊಯ್ದ 34 ವರ್ಷದ ವ್ಯಕ್ತಿ, ಇದಕ್ಕೆ ಕಾರಣ ಪತ್ತೆ ಹಚ್ಚಿದ್ದಾನೆ. ಇದೀಗ ಆತ ಪತ್ನಿಯ ಕುಟುಂಬದವರ ವಿರುದ್ಧ ವಂಚನೆ (Fraud Case) ದಾಖಲಿಸಿದ್ದಾನೆ.

VISTARANEWS.COM


on

Fraud Case
Koo


ಅಹ್ಮದಾಬಾದ್: ಕೆಲವೊಮ್ಮೆ ದಂಪತಿಗಳಿಗೆ ಮದುವೆಯಾಗಿ ಹಲವು ವರ್ಷಗಳೇ ಕಳೆದರೂ ಮಕ್ಕಳಾಗುವುದಿಲ್ಲ. ಇದಕ್ಕೆ ವಯಸ್ಸು, ಹಾರ್ಮೋನ್ ಸಮಸ್ಯೆ, ಅಥವಾ ಸಂತಾನೋತ್ಪತ್ತಿ ಅಂಗಗಳಲ್ಲಿನ ಸಮಸ್ಯೆ ಕಾರಣವಾಗಿರುತ್ತದೆ. ಹಾಗಾಗಿ ತಮಗೆ ಮಕ್ಕಳಾಗಬೇಕೆಂದು ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಾರೆ. ಇದೀಗ ಮದುವೆಯಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲವಾದರೂ ತನ್ನ ಪತ್ನಿಗೆ ಗರ್ಭಧರಿಸಲು ಸಾಧ್ಯವಾಗದಿದ್ದಾಗ ಆಕೆಯನ್ನು ವೈದ್ಯರ ಬಳಿಗೆ ಕರೆದೊಯ್ದ 34 ವರ್ಷದ ವ್ಯಕ್ತಿ, ಇದಕ್ಕೆ ಕಾರಣ ಪತ್ತೆ ಹಚ್ಚಿದ್ದಾನೆ. ಇದೀಗ ಆತ ಪತ್ನಿಯ ಕುಟುಂಬದವರ ವಿರುದ್ಧ ವಂಚನೆ (Fraud Case) ದಾಖಲಿಸಿದ್ದಾನೆ.

ಈ ಘಟನೆ ಅಹಮದಾಬಾದ್‍ನಲ್ಲಿ ನಡೆದಿದ್ದು, ಸೋನೋಗ್ರಫಿ ಮಾಡಿದ ವೈದ್ಯರು, ಆ ದಂಪತಿ ನೈಸರ್ಗಿಕವಾಗಿ ಗರ್ಭಧರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಆಕೆಯ ವಯಸ್ಸು 40 ದಾಟಿದ್ದರಿಂದ ಮಕ್ಕಳಾಗುವ ಸಾಧ್ಯತೆ ಇಲ್ಲ ಎಂದಿದ್ದಾರೆ. ಈ ವಿಚಾರ ತಿಳಿದು ಕೋಪಗೊಂಡ ವ್ಯಕ್ತಿ ವೆಜಲ್ಪುರ ಪೊಲೀಸರನ್ನು ಸಂಪರ್ಕಿಸಿ ತನ್ನ ಪತ್ನಿ, ಆಕೆಯ ತಂದೆ ಮತ್ತು ಸಂಬಂಧಿಕರು ಸೇರಿದಂತೆ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ನಂಬಿಕೆ ದ್ರೋಹ, ಫೋರ್ಜರಿ, ವಂಚನೆ, ಕ್ರಿಮಿನಲ್ ಪಿತೂರಿ ಮತ್ತು ಬೆದರಿಕೆಗೆ ಸಂಬಂಧಿಸಿದ ಐಪಿಸಿಯ ಅನೇಕ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಮದುವೆ ನಿಶ್ಚಯವಾಗುವ ಮೊದಲು ಆಕೆಯ ಬಯೋಡೇಟಾದಲ್ಲಿ ಆಕೆಯ ಜನ್ಮ ದಿನಾಂಕವನ್ನು ಮೇ 18, 1991 ಎಂದು ತೋರಿಸಲಾಗಿತ್ತು. ಇದರಿಂದಾಗಿ ಅವಳು ತನಗಿಂತ 18 ತಿಂಗಳು ಚಿಕ್ಕವಳಾಗಿದ್ದಾಳೆ ಎಂದು ತಿಳಿದ ವ್ಯಕ್ತಿ ಆಕೆಯ ಕುಟುಂಬವನ್ನು ಭೇಟಿಯಾದ ನಂತರ ಜೂನ್ 19, 2023ರಂದು ಮದುವೆಯಾಗಿದ್ದರು. ಮದುವೆಯ ದಿನದಂದು, ಅವರು ಅವಳ ಶಾಲಾ ಪ್ರಮಾಣಪತ್ರ ಮತ್ತು ಪಾಸ್‍ಪೋರ್ಟ್‌ ಪ್ರತಿಗಳನ್ನು ಸಲ್ಲಿಸಿದ್ದರು. ಮದುವೆ ರಿಜಿಸ್ಟರ್‌ನಲ್ಲಿ ಆಕೆಯ ಜನ್ಮ ದಿನಾಂಕವನ್ನು ಮೇ 18, 1991ಎಂದು ನಮೂದಿಸಿದ್ದರು. ಆದರೆ ಅವಳು ಗರ್ಭಧರಿಸಲು ಸಾಧ್ಯವಾಗದಿದ್ದಾಗ ವ್ಯಕ್ತಿಯ ತಾಯಿ ಮತ್ತು ಸಹೋದರಿ ತಪಾಸಣೆಗಾಗಿ ಜುಹಾಪುರದ ವೈದ್ಯರ ಬಳಿಗೆ ಕರೆದೊಯ್ದರು. ನಂತರ, ಸೆಪ್ಟೆಂಬರ್ 2023ರಲ್ಲಿ ಅವರು ಪಾಲ್ಡಿಯ ಸ್ತ್ರೀರೋಗತಜ್ಞರನ್ನು ಸಂಪರ್ಕಿಸಿದರು.

ಇದನ್ನೂ ಓದಿ: ಬೀದಿ ನಾಯಿ ದಾಳಿಯಿಂದ ಮಗುವನ್ನು ರಕ್ಷಿಸಿದ ಸಾಕು ನಾಯಿ! ಅಪರೂಪದ ವಿಡಿಯೊ

ವೈದ್ಯರ ಪ್ರಕಾರ, ಸೋನೋಗ್ರಫಿ ವರದಿಯಲ್ಲಿ ಅವರ ಹೆಂಡತಿಗೆ 40ರಿಂದ 42 ವರ್ಷ ವಯಸ್ಸಾಗಿರುವುದಾಗಿ ತಿಳಿಸಲಾಗಿದೆ. ಹಾಗಾಗಿ ಅವಳು ಸ್ವಾಭಾವಿಕವಾಗಿ ಗರ್ಭ ಧರಿಸಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಆತ ಆಕೆಯ ಮನೆಯವರನ್ನು ಭೇಟಿ ಮಾಡಿ ವಿಚಾರಿಸಿದಾಗ ಆಕೆಯ ಸಹೋದರರು ಅಧಿಕೃತ ದಾಖಲೆಗಳಲ್ಲಿ ಆಕೆಯ ಜನ್ಮ ದಿನಾಂಕವನ್ನು ತಿರುಚಿದ್ದು ಕಂಡು ಬಂತು. ಅದನ್ನು ಮೇ 18, 1985ರಿಂದ ಮೇ 18, 1991ಕ್ಕೆ ಬದಲಾಯಿಸಲಾಗಿತ್ತು ಎಂಬುದು ತಿಳಿದು ಬಂತು. ಹಾಗಾಗಿ ಆತ ಆಕೆಯ ಕುಟುಂಬದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Continue Reading

ದೇಶ

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಪ್ರಕರಣ; 7 ಮಂದಿಯ ಬಂಧನ

Rajendra Nagar Tragedy: ಶನಿವಾರ ಭೀಕರ ಮಳೆಗೆ ದೆಹಲಿಯ ರಾಜೇಂದ್ರ ನಗರದಲ್ಲಿರುವ ರಾವ್ಸ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಸಿದಂತೆ ಇದುವರೆಗೆ ಒಟ್ಟು 7 ಮಂದಿಯನ್ನು ಬಂಧಿಸಲಾಗಿದೆ. ರಾವ್ಸ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ ಕಟ್ಟಡದ ಮಾಲೀಕ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಕಟ್ಟಡದ ಗೇಟ್‌ ಧ್ವಂಸ ಮಾಡಲು ಯತ್ನಿಸಿದವರೂ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Rajendra Nagar Tragedy
Koo

ನವದೆಹಲಿ: ಭೀಕರ ಮಳೆಗೆ ದೆಹಲಿ (Delhi Floods) ತತ್ತರಿಸಿದ್ದು, ಶನಿವಾರ ರಾಜೇಂದ್ರ ನಗರದಲ್ಲಿರುವ ರಾವ್ಸ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ (Rau’s IAS Coaching Institute)ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಸಿದಂತೆ ಇದುವರೆಗೆ ಒಟ್ಟು 7 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ (Rajendra Nagar Tragedy).

ರಾವ್ಸ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ ಕಟ್ಟಡದ ಮಾಲೀಕ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಕಟ್ಟಡದ ಗೇಟ್‌ ಧ್ವಂಸ ಮಾಡಲು ಯತ್ನಿಸಿದವರೂ ಇದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಪೊಲೀಸರು ಭಾನುವಾರ ಐಎಎಸ್ ಕೋಚಿಂಗ್ ಸೆಂಟರ್‌ನ ಮಾಲೀಕ ಮತ್ತು ಸಂಯೋಜಕರನ್ನು ಬಂಧಿಸಿದ್ದರು. ಉಳಿದವರನ್ನು ಇಂದು ವಶಕ್ಕೆ ಪಡೆಯಲಾಗಿದೆ. ʼʼಈ ಘಟನೆಯಲ್ಲಿ ಯಾರೇ ತಪ್ಪು ಮಾಡಿದರೂ ಸುಮ್ಮನೆ ಬಿಡುವುದಿಲ್ಲ. ಘಟನೆಗೆ ಕಾರಣರಾದವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಮತ್ತು ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ” ಎಂದು ಡಿಸಿಪಿ ಎಂ. ಹರ್ಷವರ್ಧನ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.

“ನೆಲಮಾಳಿಗೆಯಲ್ಲಿರುವ ಗ್ರಂಥಾಲಯವು ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಬಯೋಮೆಟ್ರಿಕ್ ಸಕ್ರಿಯಗೊಳಿಸಿದ್ದ ಕಾರಣ ವಿದ್ಯಾರ್ಥಿಗಳಿಗೆ ತಕ್ಷಣ ಹೊರ ಬರಲು ಸಾಧ್ಯವಾಗಲಿಲ್ಲ. ಅಲ್ಲದೆ ಪ್ರವೇಶ ಮತ್ತು ನಿರ್ಗಮನಕ್ಕೆ ಒಂದೇ ದ್ವಾರ ಇರುವುದು ಕೂಡ ದುರಂತಕ್ಕೆ ಕಾರಣವಾಗಿದೆ. ಹೀಗಾಗಿ ಸುರಕ್ಷತಾ ಕ್ರಮಗಳನ್ನು ಖಚಿತಪಡಿಸಿಕೊಳ್ಳುವಲ್ಲಿ ಸಂಸ್ಥೆಯ ಮಾಲೀಕರು ವಿಫಲರಾಗಿದ್ದಾರೆ” ಎಂದು ಮುನ್ಸಿಪಾಲ್‌ ಕಾರ್ಪೋರೇಷನ್‌ ಆಫ್‌ ದಿಲ್ಲಿ (MCD)ಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ. ಘಟನೆ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಈಗಾಗಲೇ 13 ಅಕ್ರಮ ತರಬೇತಿ ಕೇಂದ್ರಗಳಿಗೆ ಬೀಗ ಹಾಕಲಾಗಿದೆ.

ಘಟನೆ ವಿವರ

ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರಾಜೇಂದ್ರ ನಗರದಲ್ಲಿ ಭಾರಿ ಪ್ರವಾಹದ ಸ್ಥಿತಿ ಉಂಟಾಗಿತ್ತು. ಇದರಿಂದಾಗಿ ಇಲ್ಲಿನ ರಾವ್ಸ್‌ ಐಎಎಸ್‌ ಸ್ಟಡಿ ಸರ್ಕಲ್‌ನ ನೆಲಮಹಡಿಗೆ ನೀರು ನುಗ್ಗಿ ಐಎಎಎಸ್‌ ಆಕಾಂಕ್ಷಿಗಳಾದ ತೆಲಂಗಾಣ, ಉತ್ತರ ಪ್ರದೇಶ ಮತ್ತು ಕೇರಳ ಮೂಲದ ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡೆಲ್ವಿನ್ (28) ಮೃತಪಟ್ಟಿದ್ದರು.

ಇದನ್ನೂ ಓದಿ: Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಅವಾಂತರ; ದುರಂತದಿಂದ ಪಾರಾದವರ Video ಇಲ್ಲಿದೆ

ಬೇಸ್‌ಮೆಂಟ್‌ನಲ್ಲಿ ಸಂಸ್ಥೆಯ ಲೈಬ್ರರಿ ಇದ್ದು, ಇಲ್ಲಿ ಸುಮಾರು 150-180 ವಿದ್ಯಾರ್ಥಿಗಳು ಕೂರಲು ವ್ಯವಸ್ಥೆ ಮಾಡಲಾಗಿದೆ. ಲೈಬ್ರರಿಯಲ್ಲಿ ಕುಳಿತು ಓದುತ್ತಿರುವಾಗ ಚರಂಡಿ ಮೋರಿಯ ತಡೆಗೋಡೆ ಒಡೆದು ಮಳೆ ನೀರು ನುಗ್ಗಿದ ಹಿನ್ನಲೆಯಲ್ಲಿ ದುರ್ಘಟನೆ ಸಂಭವಿಸಿದೆ. ಇದೀಗ ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದೆ. ಮುನ್ಸಿಪಾಲ್‌ ಕಾರ್ಪೋರೇಷನ್‌ ಆಫ್‌ ದಿಲ್ಲಿಯನ್ನು ನಿಯಂತ್ರಿಸುವ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರದ ಮೇಲೆ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. “ಇದು ಸರ್ಕಾರ ಮತ್ತು ಪುರಸಭೆಯ ವೈಫಲ್ಯ. ಇದು ಈ ದೇಶದ ಅತ್ಯಂತ ಸಂವೇದನಾರಹಿತ ಸರ್ಕಾರ. ಇದು ವಿದ್ಯಾರ್ಥಿಗಳ ಸಾವಲ್ಲ, ಕೊಲೆ” ಎಂದು ಆರೋಪಿಸಿದೆ. ಜತೆಗೆ ವಿದ್ಯಾರ್ಥಿಗಳು ಆಹೋರಾತ್ರಿ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Continue Reading

ಬಾಗಲಕೋಟೆ

Drowned In River : ಆಟವಾಡುವಾಗ ಕೃಷ್ಣಾ ನದಿ ಹಿನ್ನೀರಿಗೆ ಬಿದ್ದ ಬಾಲಕಿ ಸಾವು; ಅಂಗಾಂಗ ದಾನ ಮಾಡಿ 6 ಜೀವ ಉಳಿಸಿದ ಬಾಲೆ

Drowned In River : ಆಟವಾಡುತ್ತಾ ಕೃಷ್ಣಾ ನದಿ ಹಿನ್ನೀರಿ ಬಳಿ ಹೋದ ಬಾಲಕಿ ನೀರುಪಾಲಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Drowned in river
Koo

ಬಾಗಲಕೋಟೆ: ಆಟವಾಡಲು ಹೋದ ಬಾಲಕಿಯೊಬ್ಬಳು ಕೃಷ್ಣಾ ನದಿ (Drowned In River) ಪಾಲಾಗಿದ್ದಾಳೆ. ಕೃಷ್ಣಾ ನದಿ ಹಿನ್ನೀರಿನಲ್ಲಿ ಮುಳುಗಿ ಬಾಲಕಿ ಮೃತಪಟ್ಟಿದ್ದಾಳೆ. ಬಾಗಲಕೋಟೆಯ ಜಮಖಂಡಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಘಟನೆ ನಡೆದಿದೆ.

ಸಮೃದ್ಧಿ ಉರ್ಫ್ ಬಂದವ್ವ ತಿಮ್ಮಪ್ಪನವರ (5) ಮೃತ ದುರ್ದೈವಿ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿನ್ನೆ ಭಾನುವಾರ ಸಂಜೆ ಘಟನೆ ನಡೆದಿದೆ.

ತಹಶೀಲ್ದಾರ ಸದಾಶಿವ ಮುಕ್ಕೋಜಿ, ಜಮಖಂಡಿ ಗ್ರಾಮೀಣ ಠಾಣೆಯ ಪಿಎಸ್‌ಐ ಎಚ್.ಎಮ್ ಹೊಸಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿ ಕೃಷ್ಣಾ ನದಿ ಹಿನ್ನೀರಿನ ಕಡೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾ ನದಿಯ ಹಿನ್ನೀರಿನಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

Drowned in river
Drowned in river

ಅಗ್ನಿಶಾಮಕ ದಳ, ಪೊಲೀಸ್‌ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಕಾರ್ಯಾಚರಣೆ ನಡೆಸಿ ಹಿನ್ನೀರಿನಿಂದ ಬಾಲಕಿ ಶವ ಹೊರತೆಗೆದಿದ್ದಾರೆ.

ಇದನ್ನೂ ಓದಿ: Road Accident : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಚೆಲ್ಲಾಪಿಲ್ಲಿಯಾಗಿ ಬಿದ್ದ ಇಬ್ಬರು ಸಾವು

ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಮರೆದ ಪೋಷಕರು

ಮಗಳ ಸಾವಿನ ನೋವಿನಲ್ಲೂ ಪೋಷಕರು ಸಾರ್ಥಕತೆ ಮರೆದಿದ್ದಾರೆ. ಜು.23 ರಂದು ಸ್ಕೂಲ್ ಮುಗಿಸಿ ವಾಪಸ್ ಬರುವಾಗ ತುಮಕೂರಿನ ತಿಪಟೂರಿನಲ್ಲಿ ಅಪಘಾತ ಸಂಭವಿಸಿತ್ತು. ಚಂದನಾ ತುಮಕೂರು ಜಿಲ್ಲೆಯ ತಿಪಟೂರಿನ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದಳು. ತಿಪಟೂರು ನಗರದ ಹಳೇಪಾಳ್ಯದ ನಿವಾಸಿ ಚಂದನಾ (12) ರಸ್ತೆ ದಾಟುವಾಗ ಲಾರಿಯೊಂದು ಡಿಕ್ಕಿ ಹೊಡೆದಿತ್ತು.

ಅಪಘಾತದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಅಪಘಾತದಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಳು. ಆದರೆ ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಮಗಳ ಅಗಲಿಕೆಯ ನೋವಿನಲ್ಲೂ ಚಂದನಾ ಪೋಷಕರು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಪೋಷಕರ ನಿರ್ಧಾರಕ್ಕೆ ಆಸ್ಪತ್ರೆ ಸಿಬ್ಬಂದಿ ಗೌರವ ಸಲ್ಲಿಸಿದ್ದು, ಚಂದನಾಳ ಅಂಗಾಂಗಗಳನ್ನು ಮೈಸೂರು ಹಾಗೂ ಬೆಂಗಳೂರಿನ 6 ಮಕ್ಕಳಿಗೆ ಜೋಡಣೆ ಮಾಡಿದ್ದಾರೆ. ಸೋಮವಾರ ಸಂಜೆ ಚಂದನಾಳ ಅಂತ್ಯಸಂಸ್ಕಾರವನ್ನು ತಿಪಟೂರಿನ ಹಳೆಪಾಳ್ಯದಲ್ಲಿ ನೆರವೇರಿಸಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Paris Olympics 2024
ಪ್ರಮುಖ ಸುದ್ದಿ53 mins ago

Paris Olympics 2024: ಮತ್ತೊಂದು ಕಂಚಿನ ಪದಕದ ಸನಿಹ ಮನು ಭಾಕರ್, ನಾಳೆ ಇತಿಹಾಸ ಸೃಷ್ಟಿ?

Business Ideas
Latest1 hour ago

Business Ideas: 20 ದೇಶಗಳಿಗೆ ಮಣ್ಣಿನ ಪಾತ್ರೆಗಳ ರಫ್ತು; ವರ್ಷಕ್ಕೆ 5 ಕೋಟಿ ರೂ. ಗಳಿಸುತ್ತಿದೆ ಈ ಕುಟುಂಬ!

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ
ಕರ್ನಾಟಕ1 hour ago

KRS Dam: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ; ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ

signal free corridor
ಪ್ರಮುಖ ಸುದ್ದಿ1 hour ago

Signal-Free Corridor: ಬೆಂಗಳೂರಿನಲ್ಲಿ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

karnataka rain
ಮಳೆ1 hour ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tharun Sudhir and Sonal modeled by eco-friendly invitations
ಸ್ಯಾಂಡಲ್ ವುಡ್1 hour ago

Tharun Sudhir: ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ಸೋನಾಲ್ ಮತ್ತು ತರುಣ್!

Ranbir Kapoor
ದೇಶ1 hour ago

Ranbir Kapoor: ಮೋದಿಯದ್ದು ‘ಆಯಸ್ಕಾಂತದಂಥ ವ್ಯಕ್ತಿತ್ವ’ ಎಂದ ರಣಬೀರ್‌ ಕಪೂರ್;‌ ಕನ್ನಡಿಗನಿಗೆ ನಟ ಹೇಳಿದ ಕತೆ ಏನು?

Viral News
ವೈರಲ್ ನ್ಯೂಸ್2 hours ago

Viral News: ಮನೆಯೊಳಗೆ ವಿಚಿತ್ರ ವಾಸನೆ, ಇಡೀ ಕುಟುಂಬ ಅಸ್ವಸ್ಥ; ರಹಸ್ಯ ಕೆಮೆರಾದಲ್ಲಿತ್ತು ಶಾಕಿಂಗ್‌ ದೃಶ್ಯ!

Actor Dhanush Shares FIRST Post After Speech
ಕಾಲಿವುಡ್2 hours ago

Actor Dhanush: ಮನೆ ಬಗ್ಗೆ ಮಾತಾಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬೆನ್ನಲ್ಲೇ ಹೊಸ ಪೋಸ್ಟ್‌ ಹಂಚಿಕೊಂಡ ನಟ ಧನುಷ್‌!

Curry Leaves
ಆರೋಗ್ಯ2 hours ago

Curry Leaves: ಇದರ ಮಹತ್ವ ತಿಳಿದರೆ ನೀವು ಇನ್ನೆಂದೂ ಕರಿ ಬೇವಿನ ಎಲೆಯನ್ನು ಪಕ್ಕಕ್ಕೆ ಎತ್ತಿಡುವುದಿಲ್ಲ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ1 hour ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ21 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ23 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

ಟ್ರೆಂಡಿಂಗ್‌