BPNL Recruitment 2024: ಭಾರತೀಯ ಪಶುಪಾಲನಾ ನಿಗಮದಲ್ಲಿದೆ 2,250 ಹುದ್ದೆ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ - Vistara News

ಉದ್ಯೋಗ

BPNL Recruitment 2024: ಭಾರತೀಯ ಪಶುಪಾಲನಾ ನಿಗಮದಲ್ಲಿದೆ 2,250 ಹುದ್ದೆ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

BPNL Recruitment 2024: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 2,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಆಗಸ್ಟ್‌ 5.

VISTARANEWS.COM


on

BPNL Recruitment 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ (Bhartiya Pashupalan Nigam Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BPNL Recruitment 2024). ಬರೋಬ್ಬರಿ 2,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಆಗಸ್ಟ್‌ 5 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಗೋ ಸಂವರ್ಧನಾ ವಿಸ್ತಾರಕ (Cow Promotion Extender)- 225 ಹುದ್ದೆ, ವಿದ್ಯಾರ್ಹತೆ: ಪದವಿ
ಕೌ ಬ್ರೀಡಿಂಗ್‌ ಅಸಿಸ್ಟಂಟ್‌ (Cow Breeding Assistant)- 675 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಗೋ ಸೇವಕ (Cow Servant)- 1,350 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ

ವಯೋಮಿತಿ

ಗೋ ಸಂವರ್ಧನಾ ವಿಸ್ತಾರಕ ಹುದ್ದೆಗೆ 25 – 45 ವರ್ಷ, ಕೌ ಬ್ರೀಡಿಂಗ್‌ ಅಸಿಸ್ಟಂಟ್‌ ಹುದ್ದೆಗೆ 21 – 40 ವರ್ಷ, ಗೋ ಸೇವಕ ಹುದ್ದೆಗೆ 18 – 40 ವರ್ಷದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಗೋ ಸಂವರ್ಧನಾ ವಿಸ್ತಾರಕ ಹುದ್ದೆಗೆ – 944 ರೂ., ಕೌ ಬ್ರೀಡಿಂಗ್‌ ಅಸಿಸ್ಟಂಟ್‌ ಹುದ್ದೆಗೆ – 826 ರೂ. ಮತ್ತು ಗೋ ಸೇವಕ ಹುದ್ದೆಗೆ – 708 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದ್ದು, ಆನ್‌ಲೈನ್‌ ಮೂಲಕ ಪಾವತಿಸಬೇಕು. ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮಾಸಿಕ ವೇತನ

ಆಯ್ಕೆಯಾದವರಿಗೆ ಗೋ ಸಂವರ್ಧನಾ ವಿಸ್ತಾರಕ ಹುದ್ದೆಗೆ – 26,000 ರೂ., ಕೌ ಬ್ರೀಡಿಂಗ್‌ ಅಸಿಸ್ಟಂಟ್‌ ಹುದ್ದೆಗೆ – 23,000 ರೂ. ಮತ್ತು ಗೋ ಸೇವಕ ಹುದ್ದೆಗೆ – 18,000 ರೂ. ಮಾಸಿಕ ವೇತನ ಲಭ್ಯ.

BPNL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://pay.bharatiyapashupalan.com/onlinerequirment)
  • ಅಗತ್ಯ ಮಾಹಿತಿಗಳನ್ನು ತುಂಬಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದೆ ಎಂದು ಖಚಿತಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನ ವೆಬ್‌ಸೈಟ್‌ ವಿಳಾಸ: bharatiyapashupalan.comಗೆ ಭೇಟಿ ನೀಡಿ ಎಂದು ಪ್ರಕಟಣೆ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

RRB Recruitment 2024: ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 7,951 ಜೂನಿಯರ್‌ ಎಂಜಿನಿಯರ್‌, ಕೆಮಿಕಲ್‌ ಸೂಪರ್‌ವೈಸರ್‌ ಹುದ್ದೆಗಳು ಇದಾಗಿದ್ದು, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಜುಲೈ 30ರಿಂದ ಅರ್ಜಿ ಸಲ್ಲಿಬೇಕಿದ್ದು, ಕೊನೆಯ ದಿನ ಆಗಸ್ಟ್‌ 29. ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

VISTARANEWS.COM


on

RRB Recruitment 2024
Koo

ಬೆಂಗಳೂರು: ಶಿಕ್ಷಣ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ (Railway Recruitment Board) ಗುಡ್‌ನ್ಯೂಸ್‌ ನೀಡಿದೆ. ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿನಿಸಿದೆ (RRB Recruitment 2024). ಬರೋಬ್ಬರಿ 7,951 ಜೂನಿಯರ್‌ ಎಂಜಿನಿಯರ್‌, ಕೆಮಿಕಲ್‌ ಸೂಪರ್‌ವೈಸರ್‌ ಹುದ್ದೆಗಳು ಇದಾಗಿದ್ದು, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಜುಲೈ 30ರಿಂದ ಅರ್ಜಿ ಸಲ್ಲಿಬೇಕಿದ್ದು, ಕೊನೆಯ ದಿನ ಆಗಸ್ಟ್‌ 29 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕೆಮಿಲ್‌ ಮೇಲ್ವಿಚಾರಕ / ಸಂಶೋಧನೆ ಮತ್ತು ಮೆಟಲರ್ಜಿಕಲ್ ಮೇಲ್ವಿಚಾರಕ / ಸಂಶೋಧನೆ (Chemical Supervisor / Research and Metallurgical Supervisor / Research)- 17 ಹುದ್ದೆ, ವಿದ್ಯಾರ್ಹತೆ: ಕೆಮಿಕಲ್ ಟೆಕ್ನಾಲಜಿ, ಮೆಟಲರ್ಜಿ ಎಂಜಿನಿಯರಿಂಗ್‌ನಲ್ಲಿ ಪದವಿ.
ಕಿರಿಯ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಹಾಗೂ ಮೆಟಲರ್ಜಿಕಲ್ ಅಸಿಸ್ಟೆಂಟ್ (Junior Engineer, Depot Material Superintendent and Chemical & Metallurgical Assistant)- 7,934 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಇಂಜಿನಿಯರಿಂಗ್, ಬಿ.ಎಸ್‌ಸಿ, ಪದವಿ.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 36 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಯುರ್‌ & ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಮಹಿಳಾ ಅಭ್ಯರ್ಥಿಗಳು / ತೃತೀಯ ಲಿಂಗಿಗಳು / ಅಲ್ಪಸಂಖ್ಯಾತರು / ಇಬಿಸಿ ವಿಭಾಗದ ಅಭ್ಯರ್ಥಿಗಳು 250 ರೂ. ಮತ್ತು ಇತರ ವಿಭಾಗದ ಅಭ್ಯರ್ಥಿಗಳು 500 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಉದ್ಯೋಗದ ಸ್ಥಳ: ಭಾರತದಾದ್ಯಂತ.

RRB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.rrbapply.gov.in/)
  • ಹೆಸರು ನೋಂದಾಯಿಸಿ ಲಾಗಿನ್‌ ಆಗಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: indianrailways.gov.inಗೆ ಭೇಟಿ ನೀಡಿ ಅಥವಾ ಹೆಲ್ಪ್‌ಲೈನ್‌ ನಂಬರ್‌: Helpline No: 9592001188, 01725653333ಕ್ಕೆ ಕರೆ ಮಾಡಿ.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

Continue Reading

ನೌಕರರ ಕಾರ್ನರ್

KAS Recruitment 2024: ಕೆಎಎಸ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ; ಸಚಿವ ಸಂಪುಟ ಅನುಮೋದನೆ

KAS Recruitment 2024: 2017-18ನೇ ಸಾಲಿನಲ್ಲಿ ಪರೀಕ್ಷೆ ಬರೆದವರಿಗೆ ಗರಿಷ್ಠ ವಯೋಮಿತಿ ಪರಿಗಣಿಸದೆ ಈ ಬಾರಿಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಇದಕ್ಕೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

VISTARANEWS.COM


on

KAS Recruitment 2024
Koo

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ (Job News) ನೀಡಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ (KAS Recruitment 2024) ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ವಿಶೇಷ ಅವಕಾಶ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಅರ್ಜಿ ಸಲ್ಲಿಕೆಗೆ ವಿಶೇಷ ಅವಕಾಶ ನೀಡಲಾಗಿತ್ತು. ಇದೀಗ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದರಿಂದ ಗರಿಷ್ಠ ವಯೋಮಿತಿ ಮೀರಿದವರಿಗೆ ಅನುಕೂಲವಾಗಲಿದೆ.

‘ಕೆಎಎಸ್ ಹುದ್ದೆಗಳ ನೇಮಕಾತಿಗೆ ಪ್ರತಿವರ್ಷ ಅಧಿಸೂಚನೆ ಹೊರಡಿಸಬೇಕು ಎಂದು ಪಿ.ಸಿ. ಹೋಟಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ, ರಾಜ್ಯದಲ್ಲಿ 3-4 ವರ್ಷಗಳಿಗೊಮ್ಮೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಒಡಿಶಾ ಸರ್ಕಾರವು 2017ರಲ್ಲಿ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ಪರಿಗಣಿಸದೆ 2024ರ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಅದೇ ರೀತಿ ಗರಿಷ್ಠ ವಯೋಮಿತಿ ಮೀರಿದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವಂತೆ ಈ ಹಿಂದೆ ಕೆಪಿಎಸ್‌ಸಿಗೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಹೀಗಾಗಿ 2017-18ನೇ ಸಾಲಿನ ಕೆಎಎಸ್‌ ಪರೀಕ್ಷೆ ಬರೆದವರಿಗೆ ಒಂದು ಬಾರಿ ವಿಶೇಷ ಅವಕಾಶ ನೀಡಿ ಕೆಪಿಎಸ್‌ಸಿ ಆದೇಶ ಹೊರಡಿಸಿತ್ತು. ಇದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

2017-18ನೇ ಸಾಲಿನಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಅನುಕೂಲವಾಗಲು ಅರ್ಜಿ ಸಲ್ಲಿಕೆ ಅವಧಿ ಮುಗಿದರೂ ಕೂಡ ಜುಲೈ 6ರಿಂದ ಜುಲೈ 21ರವರೆಗೆ ಕೆಎಎಸ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು ವಿಶೇಷ ಅವಕಾಶ ನೀಡಿತ್ತು.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Ramanagara as Bengaluru South District) ಎಂದು ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ (cabinet meeting) ಒಪ್ಪಿಗೆ ನೀಡಿದೆ. ರಾಮನಗರ ಜಿಲ್ಲೆಯ ಹೆಸರು (Bengaluru South District) ಮಾತ್ರ ಬದಲಾವಣೆಯಾಗಲಿದೆ, ಜಿಲ್ಲಾ ಕೇಂದ್ರ (ರಾಮನಗರ) ಸೇರಿ ಉಳಿದ ಎಲ್ಲವೂ ಹಾಗೆ ಉಳಿಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ದೃಷ್ಟಿಯಿಂದ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಉಳಿದ ಎಲ್ಲವೂ ಹಾಗೇ ಉಳಿಯಲಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಜೊತೆಗೆ ಬ್ರ್ಯಾಂಡ್ ಬೆಂಗಳೂರು ದೃಷ್ಟಿಯಿಂದ ಹೀಗೆ ಮಾಡಲಾಗಿದೆ ಎಂದು ತಿಳಿಸಿದರು.

ರಾಮನಗರದವರೂ ಬ್ರ್ಯಾಂಡ್ ಬೆಂಗಳೂರಿಗೆ ಬರಬೇಕು ಎನ್ನುತ್ತಾರೆ. ಜನರ ಅಭಿಪ್ರಾಯ, ಶಾಸಕರ ಅಭಿಪ್ರಾಯ , ಕೆಲ ನಾಯಕರ ಅಭಿಪ್ರಾಯ ತೆಗೆದುಕೊಂಡು ತೀರ್ಮಾನ ಮಾಡಿದ್ದೇವೆ. ನೋಟಿಫೈ ಮಾಡಬೇಕು, ಆಮೇಲೆ ಹೆಸರು ಬದಲಾವಣೆ ಪ್ರಕ್ರಿಯೆ ಶುರುವಾಗುತ್ತೆ. ಇದಕ್ಕೆ ಒಂದು ಸಮಿತಿಯನ್ನು ಮಾಡಲಾಗುತ್ತದೆ ಎಂದು ರಾಮನಗರ ಹೆಸರು ಬದಲಾವಣೆಗೆ ಸಚಿವ ಎಚ್.ಕೆ ಪಾಟೀಲ್ ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ| Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  • 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ (ಕೆಎಎಸ್‌) ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ವಿಶೇಷ ಅವಕಾಶ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ.
  • KIADBಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್ ಗೆ ಹಂಚಿಕೆ ಮಾಡಲು ಕ್ಯಾಬಿನೆಟ್ ತೀರ್ಮಾನ. ಈ ಹಂಚಿಕೆ ಜೊತೆಗೆ ಶೇ.75 ರಿಯಾಯಿತಿ ನೀಡಲು ತೀರ್ಮಾನ.
  • ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0.- “ಉತ್ಕೃಷ್ಟತಾ ಕೇಂದ್ರವನ್ನು ” 16 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.00 ಕೋಟಿಗಳು ಮತ್ತು” OPEX-ರೂ. 9.00 ಕೋಟಿಗಳು) ಸ್ಥಾಪನೆಗೆ ಅನುಮೋದನೆ.
  • ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ‌ ಸಂಬಂಧಿಸಿದಂತೆ “ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024”ಕ್ಕೆ ಅನುಮೋದನೆ.
  • ಪ್ರೌಢಶಾಲಾ ಶಿಕ್ಷಕರಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆಯಲು 55% ನಿಂದ 50% ಅಂಕಕ್ಕೆ ಇಳಿಸಿ ಪರಿಷ್ಕರಣೆ.
  • ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ ಅಡಿ ಸ್ಥಾಪನೆಗೆ ಅನುಮೋದನೆ
  • ಕೆ ಆರ್ ಎಸ್ ಬೃಂದಾವನ ಉದ್ಯಾನವನವನ್ನು ಮೇಲ್ದರ್ಜೆಗೆ ಏರಿಸಲು ಕ್ಯಾಬಿನೆಟ್ ಅನುಮೋದನೆ. 2633 ಕೋಟಿ ರೂ. ದಲ್ಲಿ ಪಿಪಿಪಿ ಮಾಡೆಲ್‌ನಲ್ಲಿ ಮೇಲ್ದರ್ಜೆಗೆ ಏರಿಸಲು ಅನುಮೋದನೆ. ಟೆಂಡರ್ ಮೂಲಕ ಅನುಷ್ಠಾನ
Continue Reading

ಉದ್ಯೋಗ

IBPS: ರಾಷ್ಟ್ರೀಕೃತ ಬ್ಯಾಂಕ್‌ಗಳ 6,128 ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

IBPS: ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ'(CRP ಗುಮಾಸ್ತರು–XIV) ನಡೆಸುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) 6,128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಜುಲೈ 21 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಿ ಜುಲೈ 28ರ ತನಕ ಅವಕಾಶ ನೀಡಲಾಗಿದೆ.

VISTARANEWS.COM


on

IBPS
Koo

– ಆರ್‌.ಕೆ.ಬಾಲಚಂದ್ರ
ಲೇಖಕರು, ಬ್ಯಾಂಕಿಂಗ್‌ ಮತ್ತು ವ್ಯಕ್ತಿತ್ವ ವಿಕಸನ , ಸಾಫ್ಟ್‌ ಸ್ಕಿಲ್‌ ತರಬೇತುದಾರರು, ವೃತ್ತಿ ಮಾರ್ಗದರ್ಶಕರು

ಬ್ಯಾಂಕ್‌ಗಳಲ್ಲಿ ಗುಮಾಸ್ತ (ಕ್ಲರ್ಕ್‌) ಹುದ್ದೆಗೆ ಸೇರಬೇಕು ಎಂಬ ಕನಸು ಹೊತ್ತವರಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ'(CRP ಗುಮಾಸ್ತರು–XIV)ನಡೆಸುತ್ತಿದ್ದು, ಅಧಿಸೂಚನೆ ಹೊರಡಿಸಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 6,128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ಜುಲೈ 21 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಜುಲೈ 28ರ ತನಕ ಅವಕಾಶವಿದೆ (Job Alert).

ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು ಪೂರ್ವಭಾವಿ ಪರೀಕ್ಷೆ, ಹಾಗೂ ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಅಕ್ಟೋಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ನಮ್ಮ ರಾಜ್ಯದವರಿಗೆ ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.  ರಾಜ್ಯದ 457 ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 75, ಪರಿಶಿಷ್ಟ ಪಂಗಡಕ್ಕೆ 39, ಹಿಂದುಳಿದ ವರ್ಗದವರಿಗೆ 108, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 44 ಹಾಗೂ ಸಾಮಾನ್ಯ ವರ್ಗದವರಿಗೆ 191 ಹುದ್ದೆಗಳನ್ನು ಮೀಸಲಿಡಲಾಗಿದೆ.

ರಾಜ್ಯದ ಯಾವ ಬ್ಯಾಂಕ್, ಎಷ್ಟು ಹುದ್ದೆ?

ರಾಜ್ಯದ ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆಗಳು?
ಕ್ರಮಸಂಖ್ಯೆಬ್ಯಾಂಕ್‌ನ ಹೆಸರುಹುದ್ದೆಗಳು
1ಬ್ಯಾಂಕ್ ಆಫ್ ಇಂಡಿಯಾ    5
2ಕೆನರಾ ಬ್ಯಾಂಕ್364
3ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ  49
4ಇಂಡಿಯನ್ ಓವರ್ಸೀಸ್ ಬ್ಯಾಂಕ್  14
5ಪಂಜಾಬ್ ನ್ಯಾಷನಲ್ ಬ್ಯಾಂಕ್  15
6ಪಂಜಾಬ್ ಆ್ಯಂಡ್ ಸಿಂಥ್ ಬ್ಯಾಂಕ್  10
ಒಟ್ಟು457

ಜುಲೈ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಜುಲೈ 28, 2024 ಕೊನೆ ದಿನ (IBPS).

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಬಳಸಬೇಕಾದ ಲಿಂಕ್: www.ibps.in ಅಥವಾ https://ibpsonline.ibps.in/crpcl14jun24/

ಶೈಕ್ಷಣಿಕ ಅರ್ಹತೆ: (21.07.2024 ಕ್ಕೆ ಅನ್ವಯಿಸುವಂತೆ)

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನೂ ಹೊಂದಿರಬೇಕು (ಕಂಪ್ಯೂಟರ್ ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (InformationTechnology) ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು. ಪದವಿ ಪೂರ್ಣ ಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 28 ವರ್ಷಗಳು. (01.07.2024 ಕ್ಕೆ ಅನ್ವಯಿಸುವಂತೆ). ಅಂದರೆ ಅಭ್ಯರ್ಥಿಗಳು 1996 ರ ಜುಲೈ 2 ಮತ್ತು 2004 ರ ಜುಲೈ 1 ರ ನಡುವೆ ಜನಿಸಿರಬೇಕು.ಸರ್ಕಾರದ ನಿಯಮದಂತೆ ಎಸ್ ಸಿ/ ಎಸ್ ಟಿ ಅಭ್ಯ ರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: GST ಒಳಗೊಂಡಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹850. ಎಸ್ ಸಿ/ಎಸ್ ಟಿ/ಅಂಗವಿಕಲ ಅಭ್ಯರ್ಥಿಗಳು/ಮಾಜಿ ಯೋಧರಿಗೆ ₹175.ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.

ಶುಲ್ಕ ಪಾವತಿ: ನೋಂದಣಿ ನಂತರ ಅಭ್ಯ ರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್  ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯ ರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗ ವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non cremy layer) ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರ ವನ್ನು ಹೊಂದಿರಬೇಕು.

ಪರೀಕ್ಷಾ ಪ್ರಕ್ರಿಯೆ: ಇದೇ ಆಗಸ್ಟ್ ನಲ್ಲಿ ಪೂರ್ವ ಭಾವಿ ಪರೀಕ್ಷೆ, ಅಕ್ಟೋಬರ್ ನಲ್ಲಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಎರಡೂ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?: ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ,ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ,ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು,ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು

ಪೂರ್ವಭಾವಿ ಪರೀಕ್ಷೆಗೆ ತರಬೇತಿ

ಐಬಿಪಿಎಸ್‌ನ ಎಲ್ಲ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ 2024 ರ ಅಗಸ್ಟ್ 12 ರಿಂದ  17 ರವರೆಗೆ ತರಬೇತಿಗೆಂದು ದಿನಾಂಕ ನಿಗದಿ ಮಾಡಲಾಗಿದೆ. ಪರಿಶಿಷ್ಟರು, ಅಂಗವಿಕಲರು, ಹಿಂದುಳಿದವರರು ಹಾಗೂ ಅಲ್ಪಸಂಖ್ಯಾತ, ಮಾಜಿ ಸೈನಿಕರಿಗೆ ಈ ಸೌಲಭ್ಯ ಒದಗಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಗಳು ಪರೀಕ್ಷಾ ಪೂರ್ವ ತರಬೇತಿ ಬಯಸಿದಲ್ಲಿ ಅಂಥವರು ಆನ್‌ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅರ್ಜಿಯಲ್ಲಿ ನಮೂದಿಸಬೇಕು (IBPS).

ರಾಜ್ಯದಲ್ಲಿ 4 ಪೂರ್ವಭಾವಿ ಪರೀಕ್ಷಾ ತರಬೇತಿ ಕೇಂದ್ರಗಳು

ರಾಜ್ಯದ ಬೆಂಗಳೂರು, ಮೈಸೂರು ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಈ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್‌ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಈ ದಿನಗಳು ನೆನಪಿರಲಿ

  • ಪೂರ್ವಭಾವಿ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ: ಆಗಸ್ಟ್ 2024
  • ಪೂರ್ವಭಾವಿ ಆನ್‌ಲೈನ್ ಪರೀಕ್ಷೆ: ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ: ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ: ಸೆಪ್ಟೆಂಬರ್/ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಆಯೋಜನೆ: ಅಕ್ಟೋಬರ್, 2024
  • ಪ್ರಾತಿನಿಧಿಕ ಹುದ್ದೆ ಹಂಚಿಕೆ: ಏಪ್ರಿಲ್ 2025
  • ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 28.07.2024

ಅರ್ಜಿ ಸಲ್ಲಿಸುವಾಗ

ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯತೆಯ ಆದೇಶವನ್ನು ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್‌ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು. ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ/ಜಿಲ್ಲೆಗಳಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ. ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್/ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾಗುವುದಿಲ್ಲ. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯ ರ್ಥಿಯ ಉಮೇದುವಾರಿಕೆಯನ್ನ ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಪರೀಕ್ಷೆಗಳ ಸ್ವರೂಪ ಹೀಗಿದೆ:

ಪೂರ್ವ ಭಾವಿ ಪರೀಕ್ಷೆ:

ಕ್ರಮ ಸಂಖ್ಯೆಪರೀಕ್ಷೆಗಳ  ಹೆಸರು  ಪರೀಕ್ಷೆಯ ಮಾಧ್ಯಮಪ್ರಶ್ನೆಗಳುಗರಿಷ್ಠ ಅಂಕಗಳುಪ್ರತಿಪರೀಕ್ಷೆಗೆ ಪ್ರತ್ಯೇಕವಾಗಿನಿಗದಿಪಡಿಸಲಾದ ಸಮಯ
1ಆಂಗ್ಲಭಾಷೆಇಂಗ್ಲಿಷ್303020 ನಿಮಿಷಗಳು
2ಸಂಖ್ಯಾತ್ಮಕಸಾಮರ್ಥ್ಯ(Numerical Ability)  ಕನ್ನಡಕೊಂಕಣಿಇಂಗ್ಲಿಷ್ಮತ್ತುಹಿಂದಿ –ಇವುಗಳಲ್ಲಿ ಯಾವುದಾದರೊಂದುಭಾಷೆಯಆಯ್ಕೆ  353520 ನಿಮಿಷಗಳು
3ತಾರ್ಕಿಕಸಾಮರ್ಥ್ಯ353520 ನಿಮಿಷಗಳು
 ಒಟ್ಟು 10010060 ನಿಮಿಷಗಳು

ಕನ್ನಡದಲ್ಲಿ ಪರೀಕ್ಷೆ

ಕರ್ನಾಟಕದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜೊತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆ ನಮೂದಿಸಬೇಕು.(ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ ಎಂಬುದನ್ನು ಮರೆಯದಿರಿ)

ಹೇಗೆ ಭಿನ್ನವಾಗಿವೆ?

ಸಂಖ್ಯಾ ಸಾಮರ್ಥ್ಯ ಪರೀಕ್ಷೆಯು ಒಂದು ಮೂಲಭೂತ ಕೌಶಲ. ಇದರ ಮೂಲಕ ಸಂಖ್ಯೆಗಳ ವಿಷಯದಲ್ಲಿ ಅಭ್ಯರ್ಥಿಗಿರುವ ವೇಗ ಹಾಗೂ ನಿಖರತೆಯನ್ನು ಪರೀಕ್ಷಿಸಲಾಗುತ್ತದೆ. ಸಂಖ್ಯಾ ಸಾಮರ್ಥ್ಯ ಪರೀಕ್ಷೆಯಲ್ಲಿ, ಲೆಕ್ಕಾಚಾರದ ಸಾಮರ್ಥ್ಯ ಮತ್ತು ನಿಖರತೆಯನ್ನು ಸರಳ ಸಂಖ್ಯೆಯ ಪ್ರಶ್ನೆಗಳ ಮೂಲಕ ಪರೀಕ್ಷಿಸಲಾಗುತ್ತದೆ.

ಕ್ಲಿಷ್ಟತೆಯ ಮಟ್ಟ

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಅಭ್ಯರ್ಥಿಗಳು ಐಬಿಪಿಎಸ್ ನಿರ್ಧರಿಸಿದಂತೆ ಮೂರು ಪರೀಕ್ಷೆಗಳಲ್ಲಿಯೂ ಕಟ್-ಆಫ್ ಅಂಕಗಳನ್ನು ಪಡೆಯುವದರ ಮೂಲಕ ಅರ್ಹತೆ ಪಡೆಯಬೇಕು. ಪ್ರತಿ ವರ್ಗದಲ್ಲಿ ಸಾಕಷ್ಟು ಸಂಖ್ಯೆಯ ಅಭ್ಯರ್ಥಿಗಳು ಐಬಿಪಿಎಸ್ ಪರೀಕ್ಷೆಯಲ್ಲಿ ಭಾಗವಹಿಸುವುದರಿಂದ ಕೇವಲ ಪಾಸಾದರೆ ಸಾಕಾಗುವುದಿಲ್ಲ. ಅವಶ್ಯಕತೆಗಳಿಗೆ ತಕ್ಕಂತೆ ಆನ್‌ಲೈನ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಮಾತ್ರ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

ಮುಖ್ಯಪರೀಕ್ಷೆ

ಕ್ರಮ ಸಂಖ್ಯೆಪರೀಕ್ಷೆಗಳ  ಹೆಸರು (ಅನುಕ್ರಮದಿಂದ ಅಲ್ಲ)ಪರೀಕ್ಷೆ ಮಧ್ಯಮ  ಪ್ರಶ್ನೆಗಳುಗರಿಷ್ಠ ಅಂಕಗಳುಪ್ರತಿಪರೀಕ್ಷೆಗೆ ಪ್ರತ್ಯೇಕವಾಗಿನಿಗದಿಪಡಿಸಲಾದ ಸಮಯ
1ಆಂಗ್ಲಭಾಷೆಆಂಗ್ಲ404035 ನಿಮಿಷಗಳು
2ಸಾಮಾನ್ಯ/ಹಣಕಾಸುಅರಿವು  ಕನ್ನಡಕೊಂಕಣಿಇಂಗ್ಲಿಷ್ಮತ್ತುಹಿಂದಿ –ಇವುಗಳಲ್ಲಿ ಯಾವುದಾದರೊಂದುಭಾಷೆಯಆಯ್ಕೆ505035 ನಿಮಿಷಗಳು
3ತಾರ್ಕಿಕಸಾಮರ್ಥ್ಯ& ಕಂಪ್ಯೂಟರ್ಆಪ್ಟಿಟ್ಯೂಡ್506045 ನಿಮಿಷಗಳು
4ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್505045 ನಿಮಿಷಗಳು
 ಒಟ್ಟು 190200160 ನಿಮಿಷಗಳು

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ, ಪ್ರಶ್ನೆ ಅರ್ಥಮಾಡಿಕೊಳ್ಳುವುದರ ಜೊತೆಗೆ ಅದನ್ನ ಬಿಡಿಸಲು ಜ್ಞಾನದ ಮೂಲವನ್ನು (Basic concept) ಅನ್ವಯಿಸುವುದು ಮುಖ್ಯ ಉದ್ದೇಶವಾಗಿದೆ. ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಬೀಜಗಣಿತ ಮತ್ತು ಅಭಿವ್ಯಕ್ತಿಗಳನ್ನು ಒಳಗೊಂಡಿರುವ ಪ್ರಶ್ನೆಗಳನ್ನು ಹೊಂದಿದೆ. ಇದರಲ್ಲಿ ಪ್ರಶ್ನೆಗಳನ್ನು ಬಿಡಿಸಲು ಅಭ್ಯರ್ಥಿಗಳು ತರ್ಕ ಮತ್ತು ಜ್ಞಾನವನ್ನು ಅನ್ವಯಿಸುವ ಅಗತ್ಯವಿದೆ.

ಇದನ್ನೂ ಓದಿ: Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

ಕ್ಲಿಷ್ಟತೆಯ ಮಟ್ಟ

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಋಣಾತ್ಮಕ ಮೌಲ್ಯಮಾಪನ ಇದೆ

ಪೂರ್ವ ಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಎರಡೂ ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಾಗಿದ್ದು ಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.

ಪ್ರತಿ ಅಭ್ಯರ್ಥಿಯು ಆನ್‌ಲೈನ್ ಮುಖ್ಯ ಪರೀಕ್ಷೆಯ ಪ್ರತಿ ಪರೀಕ್ಷೆಯಲ್ಲಿ ಕನಿಷ್ಠ ಸ್ಕೋರ್ ಪಡೆಯಬೇಕಾಗುತ್ತದೆ. ಹಾಗೂ ಒಟ್ಟಾರೆ ಕನಿಷ್ಟ ಅಂಕ  ಕೂಡ ಪಡೆಯಬೇಕಾದ ಅನಿವಾರ್ಯತೆ ಇದೆ. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ. ಅದರ ವಿವರಗಳನ್ನು ಅಧಿಕೃತ ಐಬಿಪಿಎಸ್ ವೆಬ್‌ಸೈಟ್‌ನಲ್ಲಿ ನಂತರ ಲಭ್ಯವಾಗುವಂತೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ ಅರ್ಹತಾ ಸ್ವರೂಪದ್ದಾಗಿದ್ದು, ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನಷ್ಟೇ ಮೆರಿಟ್ ಪಟ್ಟಿಗೆ ಪರಿಗಣಿಸಲಾಗುತ್ತದೆ.ಮುಖ್ಯ ಪರೀಕ್ಷೆಯ 200 ಅಂಕಗಳನ್ನು ನೂರಕ್ಕೆ ಇಳಿಸಿ ಮೆರಿಟ್ ಪಟ್ಟಿ ರಚಿಸಲಾಗುತ್ತದೆ. ಈ ಕಾರಣಕ್ಕಾಗಿ ಹೆಚ್ಚಿನ ಅಂಕಗಳಿಸುವತ್ತ ಅಭ್ಯರ್ಥಿಗಳು ಗಮನ ನೀಡಬೇಕಾಗುತ್ತದೆ.ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು.

ಇನ್ನೊಂದಿಷ್ಟು ಮಾಹಿತಿ…

ಲಿಖಿತ ದೃಢೀಕರಣ:

ಅರ್ಜಿ ಸಲ್ಲಿಕೆಯ ವೇಳೆ ಕೈಬರಹದ ಘೋಷಣೆಯ ಪಠ್ಯ ಈ ರೀತಿಯಲ್ಲಿ ಬರೆದು ಅಪ್‌ಲೋಡ್‌ ಮಾಡಬೇಕು:

(ಅಭ್ಯ ರ್ಥಿಯ ಹೆಸರು),. …….. ಆದ ನಾನು ಈ ಮೂಲಕ ಅರ್ಜಿಯಲ್ಲಿ ಸಲ್ಲಿಸಿದ ಎಲ್ಲಾ ಮಾಹಿತಿಯು ಸರಿಯಾಗಿದೆ ಮತ್ತು ನಿಜ ಮಾನ್ಯವಾಗಿದೆ ಎಂದು ಘೋಷಿಸುತ್ತೇನೆ. ಅಗತ್ಯವಿದ್ದಾಗ ನಾನು ಪೂರಕ ದಾಖಲೆಗಳನ್ನು ಪ್ರಸ್ತುತಪಡಿಸುತ್ತೇನೆ. ಲಿಖಿತ ಘೋಷಣೆಯು ಇಂಗ್ಲಿಷ್ ನಲ್ಲಿ ಮಾತ್ರ ಇರಬೇಕು. ಕ್ಯಾಪಿಟಲ್ ಲೆಟರ್ಸ್‌ನಲ್ಲಿ ಇರಬಾರದು. ಕ್ಯಾಪಿಟಲ್ ಲೆಟರ್ ಗಳಲ್ಲಿ ಹಾಕಿದ ಸಹಿಯನ್ನು ಸ್ವೀಕರಿಸಲಾಗುವುದಿಲ್ಲ. ಎಡ ಹೆಬ್ಬೆರಳಿನ ಗುರುತು ಸರಿಯಾಗಿ ಸ್ಕ್ಯಾನ್ ಮಾಡಬೇಕು ಮತ್ತು ಮಸುಕಾಗಿರಬಾರದು. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಸಂದರ್ಶನವಿಲ್ಲ

ಪೂರ್ವಭಾವಿ ಪರೀಕ್ಷೆ ಯಲ್ಲಿ ಅರ್ಹತೆ ಪಡೆಯುವ ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಆಧಾರದ ಮೇಲೆ ಆಯ್ಕೆಯಾದವರಿಗೆ ತಾತ್ಕಾಲಿಕವಾಗಿ ನೇಮಕಾತಿ ಪತ್ರ ವಿತರಿಸಲಾಗುತ್ತದೆ.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

Continue Reading

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Job Alert: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16.

VISTARANEWS.COM


on

Job Alert
Koo

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌, ಮೊಬೈಲ್‌ ನಂಬರ್‌ ಬಳಸಿ ಹೆಸರು ನಮೂದಿಸಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

Continue Reading
Advertisement
Rajya Sabha
ರಾಜಕೀಯ17 mins ago

Rajya Sabha: ಸತ್ನಾಮ್‌ ಸಿಂಗ್‌ ಸಂಧು ಬಿಜೆಪಿ ಸೇರ್ಪಡೆ; ರಾಜ್ಯಸಭೆಯಲ್ಲಿ ಕೇಸರಿ ಪಕ್ಷದ ಬಲ 87ಕ್ಕೆ ಏರಿಕೆ

Paris Olympics 2024
ಪ್ರಮುಖ ಸುದ್ದಿ20 mins ago

Paris Olympics 2024 : ಕ್ರಿಕೆಟ್ ಕೆಲಸದಿಂದ ನಿರಾಳ; ಒಲಿಂಪಿಕ್ಸ್​​ವೀಕ್ಷಿಸಲು ತೆರಳಿದ ರಾಹುಲ್ ದ್ರಾವಿಡ್​

‌Actor Darshan
ಕರ್ನಾಟಕ27 mins ago

‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

Arjun Sarja Vidaamuyarchi Heats Up Character Poster
ಕಾಲಿವುಡ್37 mins ago

Arjun Sarja: ಸ್ಟೈಲಿಶ್ ಅವತಾರದಲ್ಲಿ ಅರ್ಜುನ್ ಸರ್ಜಾ: ‘ವಿಡಮುಯಾರ್ಚಿ’ಲುಕ್‌ ಔಟ್‌!

Rahul Gandhi
ದೇಶ39 mins ago

Rahul Gandhi: ಮೋದಿ ಸೇರಿ 6 ಜನರಿಂದ ಭಾರತೀಯರಿಗೆ ಚಕ್ರವ್ಯೂಹ ರಚನೆ ಎಂದ ರಾಹುಲ್‌ ಗಾಂಧಿ; 6 ಜನ ಯಾರ‍್ಯಾರು?

Areca Nut Illegal Import
ಕೃಷಿ43 mins ago

Areca Nut Illegal Import: ಭಾರತದೊಳಗೆ 3 ತಿಂಗಳಲ್ಲಿ 3009 ಟನ್‌ ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು!

ಕರ್ನಾಟಕ43 mins ago

Kannada New Movie: ಹಿರಿಯನಟ ಅಭಿಜಿತ್ ಅಭಿನಯದ ‘ಅಡವಿಕಟ್ಟೆ’ ಈ ವಾರ ತೆರೆಗೆ

Rajendra Nagara tragedy
ದೇಶ51 mins ago

Rajendra Nagar Tragedy: 3 IAS ಆಕಾಂಕ್ಷಿಗಳ ಸಾವು ಪ್ರಕರಣ; ಸ್ಥಳದಲ್ಲಿ ಬುಲ್ಡೋಜರ್‌ಗಳ ಗರ್ಜನೆ!

Money Guide
ಮನಿ-ಗೈಡ್1 hour ago

Money Guide: ಷೇರು V/S ಚಿನ್ನ: ಹೂಡಿಕೆಗೆ ಯಾವುದು ಬೆಸ್ಟ್‌? ಇಲ್ಲಿದೆ ತಜ್ಞರ ಸಲಹೆ

Actor Darshan Jail And Gave vijayalakshmi Prasada To Husband
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್ ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ3 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ23 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

ಟ್ರೆಂಡಿಂಗ್‌