The RajaSaab Movie: 'ದಿ ರಾಜಾಸಾಬ್'; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌! - Vistara News

ದೇಶ

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

The RajaSaab Movie: ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿನಯದ ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. . ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ. ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Rebel star Prabhas starrer The Rajasaab short glimpse released
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌, ಇದೀಗ ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್‌ ಮೂಲಕ ಮತ್ತೆ ಫ್ಯಾನ್ಸ್‌ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” (The RajaSaab Movie) ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ.

ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಬರೀ ತೆಲುಗಿನಲ್ಲಷ್ಟೇ ಅಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿಯೂ ರಾಜಾಸಾಬ್‌ ಸಿನಿಮಾ ಬಿಡುಗಡೆ ಆಗಲಿದೆ. ಹಾಗಾದರೆ, ಇದ್ಯಾವ ರೀತಿಯ ಸಿನಿಮಾ? ರೋಮ್ಯಾಂಟಿಕ್ ಹಾರರ್ ಕಾಮಿಡಿಯಲ್ಲಿ ಪ್ರಭಾಸ್‌ ಎಲ್ಲರನ್ನು ಮೋಡಿ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ಮಾರುತಿ ಈ ಸಿನಿಮಾ ಮೂಲಕ ಪ್ರಭಾಸ್‌ ಅವರನ್ನು ಇನ್ನಷ್ಟು ಸ್ಟೈಲಿಶ್ ಲುಕ್‌ನಲ್ಲಿ ತೋರಿಸಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್‌ಎಸ್ ಥಮನ್ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ರಾಮ್ ಲಕ್ಷ್ಮಣ್ ಮಾಸ್ಟರ್ಸ್ ಮತ್ತು ಕಿಂಗ್ ಸೊಲೊಮನ್ ಫೈಟ್ ಕೊರಿಯೋಗ್ರಫಿಯನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ಭರ್ಜರಿ ಆಕ್ಷನ್‌ ನಿರೀಕ್ಷಿಸಬಹುದಾಗಿದೆ. ಬಾಹುಬಲಿ ಖ್ಯಾತಿಯ ಕಮಲಾ ಕಣ್ಣನ್ ಆರ್.ಸಿ. ವಿಎಫ್‌ಎಕ್ಸ್‌ನ ಉಸ್ತುವಾರಿ ವಹಿಸಿಕೊಂಡಿದ್ದು, ದೊಡ್ಡ ಪರದೆಯ ಮೇಲೆ ದೃಶ್ಯ ಚಮತ್ಕಾರ ನೀಡಲಿದೆ.

ಮಾರುತಿ ನಿರ್ದೇಶನದ ರಾಜಾ ಸಾಬ್‌ ಸಿನಿಮಾವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ಸಾಬ್ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ‘ಪ್ರತಿ ರೋಜು ಪಂಡಗʼ, ತೆಲುಗಿನ ಹಾರರ್ ಕಾಮಿಡಿ ‘ಪ್ರೇಮ ಕಥಾ ಚಿತ್ರಂʼ ಮತ್ತು ರೊಮ್ಯಾಂಟಿಕ್ ಕಾಮಿಡಿ ‘ಮಹಾನುಭಾವುಡು’ ಸೇರಿ ಹಲವು ಸೂಪರ್‌ಹಿಟ್‌ಗಳಿಗೆ ಸಿನಿಮಾ ನಿರ್ದೇಶನ ಮಾಡಿದ ಮಾರುತಿ, ಇದೀಗ ರಾಜಾಸಾಬ್‌ ಮೂಲಕ ರೊಮ್ಯಾಂಟಿಕ್ ಹಾರರ್ ಎಂಟರ್ಟೈನರ್ ಜತೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

‘ಕಾರ್ತಿಕೇಯ 2’ ಮತ್ತು ‘ಧಮಾಕಾ’ ಸೇರಿ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್‌ ತೆಲುಗು ಚಿತ್ರೋದ್ಯಮದಲ್ಲಿ ಪ್ರಮುಖ ಹೆಸರು. ಇದೀಗ ಬಹುಕೋಟಿ ವೆಚ್ಚದಲ್ಲಿ ರಾಜಾ ಸಾಬ್ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಅದ್ಧೂರಿಯಾಗಿ, ಎಲ್ಲಿಯೂ ರಾಜಿ ಮಾಡಿಕೊಳ್ಳದೆ ಅದ್ಧೂರಿಯಾಗಿ ನಿರ್ಮಿಸುತ್ತಿದೆ. ಕೋಟಗಿರಿ ವೆಂಕಟೇಶ್ವರ ರಾವ್ ಈ ಚಿತ್ರಕ್ಕೆ ಸಂಕಲನ ಮಾಡಿದರೆ, ಕಾರ್ತಿಕ್ ಪಳನಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಂಗೀತವನ್ನು ಎಸ್‌ಎಸ್‌ ಥಮನ್ ಮಾಡಿದರೆ, ರಾಮ್ ಲಕ್ಷ್ಮಣ್ ಮತ್ತು ಕಿಂಗ್ ಸೊಲೊಮನ್ ಸವರ ಸಾಹಸ ಈ ಚಿತ್ರಕ್ಕಿರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆಪ್‌? ಕೇಂದ್ರ ಸರ್ಕಾರ ಹೇಳೋದೇನು?

Whatsapp Shutdown: ರಾಜ್ಯಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿದ್ದು, ವಾಟ್ಸಾಪ್ ಮತ್ತು ಅದರ ಮಾತೃ ಸಂಸ್ಥೆ ಮೆಟಾ ದೇಶದಲ್ಲಿ ತಮ್ಮ ಸೇವೆಗಳನ್ನು ಸ್ಥಗಿತಗೊಳಿಸುವ ಯಾವುದೇ ಯೋಜನೆಗಳ ಬಗ್ಗೆ ಭಾರತ ಸರ್ಕಾರಕ್ಕೆ ತಿಳಿಸಿಲ್ಲ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಬಳಕೆದಾರರ ವಿವರಗಳನ್ನು ಹಂಚಿಕೊಳ್ಳಲು ಸರ್ಕಾರದ ನಿರ್ದೇಶನದಿಂದಾಗಿ WhatsApp ಭಾರತದಲ್ಲಿ ಕಾರ್ಯಾಚರಣೆಯನ್ನು ನಿಲ್ಲಿಸಲು ಯೋಜಿಸುತ್ತಿದೆಯೇ ಎಂಬ ವಿವೇಕ್ ಟಂಖಾ ಅವರ ಪ್ರಶ್ನಿಸಿದ್ದರು.

VISTARANEWS.COM


on

WhatsApp Shut down
Koo

ನವದೆಹಲಿ: ಕೇಂದ್ರ ಸರ್ಕಾರದ(Union Government) ಹೊಸ ಐಟಿ ನಿಯಮ(IT Rules)ಗಳಿಂದಾಗಿ ದೇಶಾದ್ಯಂತ ವಾಟ್ಸ್‌ಆಪ್‌(Whatsapp Shutdown) ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿಸಲಿದೆ ಎಂಬ ವದಂತಿ ಎಲ್ಲೆಡೆ ಕೇಳಿ ಬರುತ್ತಿದೆ. ಇದೀಗ ಈ ವಿಚಾರ ಸಂಸತ್‌ನಲ್ಲೂ ಪ್ರತಿಧ್ವನಿಸಿದ್ದು, ಈ ಬಗ್ಗೆ ಪ್ರತಿಪಕ್ಷಗಳ ಪ್ರಶ್ನೆಗೆ ಸರ್ಕಾರ ಸ್ಪಷ್ಟನೆ ನೀಡಿದೆ. ಬಳಕೆದಾರರ ವಿವರಗಳನ್ನು ಹಂಚಿಕೊಳ್ಳಲು ಸರ್ಕಾರದ ನಿರ್ದೇಶನದಿಂದಾಗಿ WhatsApp ಭಾರತದಲ್ಲಿ ಕಾರ್ಯಾಚರಣೆಯನ್ನು ನಿಲ್ಲಿಸಲು ಯೋಜಿಸುತ್ತಿದೆಯೇ ಎಂದು ಕಾಂಗ್ರೆಸ್ ಸದಸ್ಯ ವಿವೇಕ್ ಟಂಖಾ ಅವರ ಪ್ರಶ್ನೆಗೆ ಲಿಖಿತ ರೂಪದಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಉತ್ತರಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿದ್ದು, ವಾಟ್ಸಾಪ್ ಮತ್ತು ಅದರ ಮಾತೃ ಸಂಸ್ಥೆ ಮೆಟಾ ದೇಶದಲ್ಲಿ ತಮ್ಮ ಸೇವೆಗಳನ್ನು ಸ್ಥಗಿತಗೊಳಿಸುವ ಯಾವುದೇ ಯೋಜನೆಗಳ ಬಗ್ಗೆ ಭಾರತ ಸರ್ಕಾರಕ್ಕೆ ತಿಳಿಸಿಲ್ಲ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಬಳಕೆದಾರರ ವಿವರಗಳನ್ನು ಹಂಚಿಕೊಳ್ಳಲು ಸರ್ಕಾರದ ನಿರ್ದೇಶನದಿಂದಾಗಿ WhatsApp ಭಾರತದಲ್ಲಿ ಕಾರ್ಯಾಚರಣೆಯನ್ನು ನಿಲ್ಲಿಸಲು ಯೋಜಿಸುತ್ತಿದೆಯೇ ಎಂಬ ವಿವೇಕ್ ಟಂಖಾ ಅವರ ಪ್ರಶ್ನಿಸಿದ್ದರು.

ಕಂಪನಿಯು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಮುರಿಯಬಹುದು ಎಂದು ಹೇಳಿದ ಹೊಸ ಐಟಿ ನಿಯಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ WhatsApp ನಿಂದ ಹಿಂದಿನ ಹೇಳಿಕೆಗಳ ನಂತರ ಈ ಪ್ರಶ್ನೆ ಬಂದಿದೆ. ಈ ವರ್ಷದ ಆರಂಭದಲ್ಲಿ, WhatsApp ಸಂದೇಶಗಳ ಮೇಲೆ ಎನ್‌ಕ್ರಿಪ್ಶನ್ ಅನ್ನು ಮುರಿಯಲು ಒತ್ತಾಯಿಸಿದರೆ ಭಾರತದಲ್ಲಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವುದಾಗಿ ದೆಹಲಿ ಹೈಕೋರ್ಟ್‌ಗೆ ತಿಳಿಸಿತು. ಎನ್‌ಕ್ರಿಪ್ಶನ್ ಬ್ರೇಕಿಂಗ್ ಬಳಕೆದಾರರ ಗೌಪ್ಯತೆಗೆ ಧಕ್ಕೆ ತರುತ್ತದೆ, ನಂಬಿಕೆಗೆ ಧಕ್ಕೆ ತರುತ್ತದೆ ಮತ್ತು ಲಕ್ಷಾಂತರ ಸಂದೇಶಗಳನ್ನು ದೀರ್ಘಾವಧಿಯವರೆಗೆ ಸಂಗ್ರಹಿಸುವ ಅವಶ್ಯಕತೆಯಿದೆ ಎಂದು WhatsApp ಪರ ವಕೀಲ ತೇಜಸ್ ಕರಿಯಾ ಹೇಳಿದ್ದಾರೆ. ವಾಟ್ಸಾಪ್ ಮತ್ತು ಮೆಟಾ ತಿದ್ದುಪಡಿ ಮಾಡಿದ ಐಟಿ ನಿಯಮಗಳಿಗೆ ಸವಾಲು ಹಾಕಿವೆ ಮತ್ತು ಅವು ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು ಹೇಳಿವೆ.

ಭಾರತದ ಸಾರ್ವಭೌಮತೆ, ಸಮಗ್ರತೆ, ರಕ್ಷಣೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ರಕ್ಷಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 69A ಅಡಿಯಲ್ಲಿ ಸರ್ಕಾರವು ನಿರ್ದೇಶನಗಳನ್ನು ನೀಡುತ್ತದೆ ಎಂದು ಅಶ್ವಿನಿ ವೈಷ್ಣವ್ ಸಂಸತ್ತಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ವಿವರಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ WhatsApp ಅಥವಾ Meta ಅಂತಹ ಯಾವುದೇ ನಿರ್ಧಾರಗಳ ಬಗ್ಗೆ ಸರ್ಕಾರಕ್ಕೆ ತಿಳಿಸಿಲ್ಲ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಒಂದು ವೇಳೆ ವಾಟ್ಸಾಪ್ ಭಾರತದಲ್ಲಿ ಸ್ಥಗಿತಗೊಂಡಲ್ಲಿ ಕಂಪನಿ ಮತ್ತು ಅದರ 400 ಮಿಲಿಯನ್‌ಗಿಂತಲೂ ಹೆಚ್ಚು ಜನರ ಬಳಕೆದಾರರ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಬಹುದು ಎನ್ನಲಾಗಿದೆ.

ಇದನ್ನೂ ಓದಿ:Bengaluru News: ಎಐ ತಂತ್ರಜ್ಞಾನ ಬಳಕೆಯಿಂದ ಸಮಾಜದ ಸಮಸ್ಯೆಗಳಿಗೆ ಪರಿಹಾರ: ಅಶೋಕ್ ಚತುರ್ವೇದುಲಾ

Continue Reading

ಮಳೆ

Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Wayanad Landslide: ದೇವರನಾಡು ಕೇರಳ ಮತ್ತೊಮ್ಮೆ ಭಾರಿ ಮಳೆಯ ಹೊಡೆತಕ್ಕೆ ಸಿಲುಕಿ ನಲುಗಿದೆ. ಅದರಲ್ಲಿಯೂ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಮೃತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ.

VISTARANEWS.COM


on

Koo

ವಯನಾಡ್‌: ದೇವರನಾಡು ಕೇರಳ (Kerala) ಮತ್ತೊಮ್ಮೆ ಭಾರಿ ಮಳೆಯ ಹೊಡೆತಕ್ಕೆ ಸಿಲುಕಿ ನಲುಗಿದೆ. ಅದರಲ್ಲಿಯೂ ವಯನಾಡಿನಲ್ಲಿ ಭೀಕರ ಭೂಕುಸಿತ (Wayanad Landslide) ಸಂಭವಿಸಿದ್ದು, ಮೃತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ (Meppadi) ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ. ಇದೀಗ ಎಲ್ಲಿ ನೋಡಿದರೂ ಮಣ್ಣಿನ ರಾಶಿಯೇ ಕಂಡು ಬಂದಿದ್ದು, ರಸ್ತೆ, ಸೇತುವೆ, ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ.

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಸಿಬ್ಬಂದಿ, ಸರ್ಕಾರಿ ಸಂಸ್ಥೆ ಸಿಬ್ಬಂದಿ ಸೇರಿದಂತೆ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು 43 ಭಾರತೀಯ ಸೇನಾ ಸಿಬ್ಬಂದಿಯ ತಂಡವನ್ನು ಸಹ ಸಜ್ಜುಗೊಳಿಸಲಾಗಿದೆ. ಇದೇ ವೇಳೆ ಸೇತುವೆ ಕುಸಿದಿರುವುದು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಈವರೆಗೆ ಗುಡ್ಡಗಾಡು ಪ್ರದೇಶಗಳಿಂದ 250 ಜನರನ್ನು ರಕ್ಷಿಸಲಾಗಿದೆ.

ಮಂಗಳವಾರ ಮುಂಜಾನೆ 2ರಿಂದ4 ಗಂಟೆಯ ನಡುವೆ ಸಂಭವಿಸಿದ ಭೂಕುಸಿತದಿಂದ ಮುಂಡಕೈ ಮತ್ತು ಚೂರಲ್‌ಮಾಲಾ ಪ್ರದೇಶದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಕುಸಿದ ಸೇತುವೆ, ಕೊಚ್ಚಿ ಹೋದ ರಸ್ತೆ ಮುಂಡಕೈಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಚೂರಲ್‌ಮಾಲಾದಲ್ಲಿ ಒಟ್ಟು 250 ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದಾರೆ.

ಸಂಪರ್ಕ ಕಡಿತ

ಮುಂಡಕೈ, ಚೂರಲ್‌ಮಾಲಾ, ಅಟ್ಟಮಾಲಾ ಮತ್ತು ನೂಲ್ಪುಳ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ  ಭೂಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ. ಪರಿಸ್ಥಿತಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.

ವಯನಾಡ್‌ ಮಾಜಿ ಸಂಸದ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ. ವಯನಾಡಿನ ಮೆಪ್ಪಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ನಾನು ತೀವ್ರ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಸಿಲುಕಿಕೊಂಡವರನ್ನು ಶೀಘ್ರದಲ್ಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ನಾನು ಕೇಂದ್ರ ಸಚಿವರೊಂದಿಗೆ ಮಾತನಾಡಿ ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ವಯನಾಡ್‌ನಲ್ಲಿ ರಕ್ಷಣಾ ಕಾರ್ಯಾಚರಣೆಗೆ ಎಲ್ಲ ಏಜೆನ್ಸಿಗಳು ಕೈಜೋಡಿಸಿವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ರಾಜ್ಯ ಸಚಿವರು ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ), ಫೈರ್‌ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್)ಗಳ ಜತೆಗೆ ಸೇನೆ ರಕ್ಷಣಾ ಕಾರ್ಯಪ್ರವೃತ್ತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Kerala Landslide: ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

Continue Reading

ಕರ್ನಾಟಕ

Wayanad Landslide: ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

Wayanad Landslide: ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು. ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಕೇಂದ್ರ ಸಚಿವರು ಟ್ವೀಟ್‌ ಮಾಡಿದ್ದಾರೆ.

VISTARANEWS.COM


on

HD Kumaraswamy
Koo

ಬೆಂಗಳೂರು: ಕೇರಳದ (Kerala Landslide) ವೈನಾಡಿನಲ್ಲಿ ಸಂಭವಿಸಿದ ಭಾರಿ ಭೂಕುಸಿತ (Wayanad Landslide) ಹಾಗೂ ಜೀವಹಾನಿಯ ಕುರಿತು ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು, ದುರಂತ ಸಾವುಗಳಿಗಾಗಿ ಶೋಕ ವ್ಯಕ್ತಪಡಿಸಿದ್ದಾರೆ.

ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ (Wayanad Landslide) ಅನೇಕರು ದಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಗೌರವಾನ್ವಿತ ಪ್ರಧಾನಿ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಸಿಎಂ ಜತೆ ಮಾತನಾಡಿ ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ. ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು. ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಕೇಂದ್ರ ಸಚಿವರು ಟ್ವೀಟ್‌ ಮಾಡಿದ್ದಾರೆ.

ವಯನಾಡ್‌ ಭೂಕುಸಿತದಲ್ಲಿ 40 ದಾಟಿದ ಸಾವಿನ ಸಂಖ್ಯೆ

ವಯನಾಡ್‌: ದೇವರನಾಡು ಕೇರಳ (Kerala) ದಲ್ಲಿ ಭಾರೀ ಮಳೆಗೆ ಭೂಕುಸಿತಕ್ಕೆ (Kerala Landslide) ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆ ಆಗಿದ್ದು, ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಫೈರ್‌ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ಸಜ್ಜುಗೊಳಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.

ಇನ್ನು ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಮಲಪ್ಪುರಂ ಜಿಲ್ಲೆಯ ನೀಲಂಬುರ್‌ ಪ್ರದೇಶದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಚಾಲಿಯಾರ್‌ ನದಿಯಲ್ಲಿ ಅನೇಕರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಮುಂದಕ್ಕೈ ಪ್ರದೇಶದಲ್ಲಿ ಅನೇಕ ಮನೆಗಳು. ಅಂಗಡಿಗಳು ಮತ್ತು ವಾಹನಗಳು ಜಲಾವೃತಗೊಂಡಿವೆ.

ಪ್ರಧಾನಿ ಮೋದಿ ಕಳವಳ

ಪ್ರಧಾನಮಂತ್ರಿ ನರೇಂದ್ರ ಮೋದಿ  ಭೂಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ. ಪರಿಸ್ಥಿತಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದರು. ಏತನ್ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ ಮತ್ತು “ಇನ್ನೂ ಅವಶೇಷಡಿಯಲ್ಲಿ ಸಿಲುಕಿರುವವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಕರೆತರಲಾಗುವುದು ಎಂದು ನಾನು ಭಾವಿಸುತ್ತೇನೆ. ಪರಿಹಾರ ಕಾರ್ಯಗಳಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ನಾವು ನೀಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Kerala Landslide: ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

Continue Reading

ದೇಶ

Nawab Malik:‌ ದಾವೂದ್‌ ಇಬ್ರಾಹಿಂ ಜೊತೆ ನಂಟು ಆರೋಪ ಹೊಂದಿರುವ NCP ನಾಯಕ ನವಾಬ್‌ ಮಲಿಕ್‌ಗೆ ಜಾಮೀನು

Nawab Malik: ನವಾಬ್‌ ಮಲಿಕ್‌ ಅವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಚಿಕಿತ್ಸೆಯ ಅಗತ್ಯವಿದೆ. ಜಾಮೀನು ಸಿಕ್ಕರೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ ಎಂದು ಮಲಿಕ್ ಪರ ವಕೀಲರು ವಾದ ಮಂಡಿಸಿದರು. ಬಾಂಬೆ ಹೈಕೋರ್ಟ್‌ನಲ್ಲಿ ಸಾಮಾನ್ಯ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವವರೆಗೆ ಮಲ್ಲಿಕ್‌ಗೆ ವೈದ್ಯಕೀಯ ಜಾಮೀನು ಮಾನ್ಯವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

VISTARANEWS.COM


on

Nawab Malik
Koo

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್(Nawab Malik) ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್(Supreme Court) ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಇದ್ದ ನ್ಯಾಯಪೀಠ ಮಲಿಕ್‌ ಅವರಿಗೆ ಜಾಮೀನು ಮಂಜೂರು ಮಾಡಿದೆ.

ನವಾಬ್‌ ಮಲಿಕ್‌ ಅವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಚಿಕಿತ್ಸೆಯ ಅಗತ್ಯವಿದೆ. ಜಾಮೀನು ಸಿಕ್ಕರೆ ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುತ್ತದೆ ಎಂದು ಮಲಿಕ್ ಪರ ವಕೀಲರು ವಾದ ಮಂಡಿಸಿದರು. ಬಾಂಬೆ ಹೈಕೋರ್ಟ್‌ನಲ್ಲಿ ಸಾಮಾನ್ಯ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವವರೆಗೆ ಮಲ್ಲಿಕ್‌ಗೆ ವೈದ್ಯಕೀಯ ಜಾಮೀನು ಮಾನ್ಯವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಜಾಮೀನು ಮಂಜೂರಾತಿಗೆ ವಿರೋಧ ವ್ಯಕ್ತಪಡಿಸಿಲ್ಲ ಮತ್ತು ಮಧ್ಯಂತರ ವೈದ್ಯಕೀಯ ಜಾಮೀನನ್ನು ಕಾಯಂಗೊಳಿಸಬಹುದು ಎಂದರು.

ದಾವೂದ್‌ ಇಬ್ರಾಹಿಂ ಜೊತೆ ಲಿಂಕ್

ಪರಾರಿಯಾದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಫೆಬ್ರವರಿ 2022 ರಲ್ಲಿ ಇಡಿ ಮಲಿಕ್ ಅವರನ್ನು ಬಂಧಿಸಿತ್ತು.‌ ಮಲಿಕ್ ಅವರು ವಿವಿಧ ಕಾಯಿಲೆಗಳಲ್ಲದೆ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಪರಿಹಾರ ಕೋರಿದ್ದರು. ಅರ್ಹತೆಯ ಮೇರೆಗೆ ಜಾಮೀನು ಸಹ ಕೋರಿದ್ದರು.

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಮತ್ತು ಭೂಗತ ದೊರೆ ಭಯೋತ್ಪಾದಕ ಇಬ್ರಾಹಿಂ ಮತ್ತು ಅವನ ಸಹಚರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಖಲಿಸಿದ ಎಫ್‌ಐಆರ್ ಆಧರಿಸಿ ಮಲಿಕ್ ವಿರುದ್ಧ ಇಡಿ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: Actor Darshan: 80 ವರ್ಷಗಳ ಹಿಂದೆ ನಡೆದಿತ್ತು ದರ್ಶನ್‌ ಮಾದರಿ ಕ್ರೈಂ! ಜೈಲು ಪಾಲಾಗಿದ್ದರು ತಮಿಳು ಸೂಪರ್ ಸ್ಟಾರ್!

Continue Reading
Advertisement
WhatsApp Shut down
ದೇಶ12 mins ago

Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆಪ್‌? ಕೇಂದ್ರ ಸರ್ಕಾರ ಹೇಳೋದೇನು?

Karnataka Rain
ಮಳೆ13 mins ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

ಮಳೆ19 mins ago

Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Paris Olympics 2024
ಕ್ರೀಡೆ28 mins ago

Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್‌ ಜೋಡಿ

Mekedatu Project
ಕರ್ನಾಟಕ34 mins ago

Mekedatu Project: ಎಚ್‌ಡಿಕೆ ಅನುಮತಿ ಕೊಡಿಸಿದರೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

HD Kumaraswamy
ಕರ್ನಾಟಕ57 mins ago

Wayanad Landslide: ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

Bharachukki falls
ಚಾಮರಾಜನಗರ1 hour ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

Nawab Malik
ದೇಶ1 hour ago

Nawab Malik:‌ ದಾವೂದ್‌ ಇಬ್ರಾಹಿಂ ಜೊತೆ ನಂಟು ಆರೋಪ ಹೊಂದಿರುವ NCP ನಾಯಕ ನವಾಬ್‌ ಮಲಿಕ್‌ಗೆ ಜಾಮೀನು

SSC Recruitment 2024
ಉದ್ಯೋಗ1 hour ago

SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯುಸಿ ಪಾಸಾದವರು ಅಪ್ಲೈ ಮಾಡಿ

Paris Olympics 2024
ಕ್ರೀಡೆ1 hour ago

Paris Olympics 2024: ಭಾರತ-ಅರ್ಜೆಂಟೀನಾ ಹಾಕಿ ಪಂದ್ಯ ವೀಕ್ಷಿಸಿದ ರಾಹುಲ್​ ದ್ರಾವಿಡ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 mins ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 hour ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ20 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ21 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌