Train Accident: ಮತ್ತೊಂದು ರೈಲು ದುರಂತ: ಹೌರಾ-ಮುಂಬೈ ಎಕ್ಸ್‌ಪ್ರೆಸ್‌ ಹಳಿ ತಪ್ಪಿ 6 ಮಂದಿಗೆ ಗಾಯ - Vistara News

ದೇಶ

Train Accident: ಮತ್ತೊಂದು ರೈಲು ದುರಂತ: ಹೌರಾ-ಮುಂಬೈ ಎಕ್ಸ್‌ಪ್ರೆಸ್‌ ಹಳಿ ತಪ್ಪಿ 6 ಮಂದಿಗೆ ಗಾಯ

Train Accident: ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಬಳಿ ರಾಜ್ಖರ್ಸ್ವಾನ್ ವೆಸ್ಟ್ ಔಟರ್ ಮತ್ತು ಬಾರಾಬಂಬೂ ನಡುವೆ 12810 ನಂಬರ್‌ನ ಹೌರಾ-ಮುಂಬೈ ಪ್ಯಾಸೆಂಜರ್ ರೈಲು ಇಂದು (ಜುಲೈ 30) ಮುಂಜಾನೆ 3: 43ರ ವೇಳೆಗೆ ಹಳಿ ತಪ್ಪಿದೆ. ಘಟನೆಯಲ್ಲಿ ಕನಿಷ್ಠ ಐದರಿಂದ ಆರು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ.

VISTARANEWS.COM


on

Train Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಂಚಿ: ದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದೆ (Train Accident). ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಸೆರೈಕೆಲಾ-ಖರ್ಸಾವನ್ ಜಿಲ್ಲೆಯ ರಾಜ್ಖರ್ಸ್ವಾನ್ ವೆಸ್ಟ್ ಔಟರ್ ಮತ್ತು ಬಾರಾಬಂಬೂ ನಡುವೆ 12810 ನಂಬರ್‌ನ ಹೌರಾ-ಮುಂಬೈ ಪ್ಯಾಸೆಂಜರ್ ರೈಲು (Howara-CSMT Express train) ಇಂದು (ಜುಲೈ 30) ಮುಂಜಾನೆ 3: 43ರ ವೇಳೆಗೆ ಹಳಿ ತಪ್ಪಿದೆ. ಘಟನೆಯಲ್ಲಿ ಕನಿಷ್ಠ ಐದರಿಂದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಗೊಂಡ ಎಲ್ಲ ಪ್ರಯಾಣಿಕರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರೈಲಿನ 14 ಬೋಗಿಗಳು ಹಳಿ ತಪ್ಪಿವೆ. ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಘಟನೆಯ ಬಗ್ಗೆ ಮಾತನಾಡಿದ ಭಾರತೀಯ ರೈಲ್ವೆ ಅಧಿಕಾರಿಗಳು, ಎಡಿಆರ್‌ಎಂ ಸಿಕೆಪಿ (ADRM CKP) ಮತ್ತು ಎಆರ್‌ಎಂಇ (ARME) ಸಿಬ್ಬಂದಿ ಮತ್ತು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

ಸಹಾಯವಾಣಿ ಸಂಖ್ಯೆ ಬಿಡುಗಡೆ

ಘಟನೆಯ ನಂತರ ಭಾರತೀಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ- ಟಾಟಾನಗರ: 06572290324, ಚಕ್ರಧರ್ಪುರ: 06587 238072, ರೂರ್ಕೆಲಾ: 06612501072, 06612500244, ಹೌರಾ: 9433357920, 03326382217, ರಾಂಚಿ: 0651-27-87115. ಎಚ್‌ಡಬ್ಲ್ಯುಎಚ್‌ ಸಹಾಯ ಕೇಂದ್ರ: 033-26382217, 9433357920, ಎಸ್ಎಚ್ಎಂ ಸಹಾಯ ಕೇಂದ್ರ: 6295531471, 7595074427 ಕೆಜಿಪಿ ಸಹಾಯ ಕೇಂದ್ರ: 03222-293764, ಸಿಎಸ್ಎಂಟಿ ಸಹಾಯವಾಣಿ ಸಂಖ್ಯೆ 55993, ಪಿ & ಟಿ 022-22694040, ಮುಂಬೈ: 022-22694040, ನಾಗ್ಪುರ: 7757912790.

ಇದನ್ನೂ ಓದಿ: Train Accident : ಎಕ್ಸ್​ಪ್ರೆಸ್​ ರೈಲು ಅಪಘಾತ; ನಾಲ್ವರ ಸಾವು, ಹಲವರಿಗೆ ಗಾಯ

ಎರಡು ವಾರದ ಅಂತರದಲ್ಲಿ ನಡೆಯುತ್ತಿರುವ ಎರಡನೇ ರೈಲು ಅಪಘಾತವಿದು. ಜುಲೈ 18ರಂದು ಉತ್ತರ ಪ್ರದೇಶದ ಗೊಂಡಾದಲ್ಲಿ ಚಂಡೀಗಢ-ದಿಬ್ರುಗಢ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೆ ಒಳಗಾಗಿ ನಾಲ್ಕು ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದರು. ಎಕ್ಸ್​ಪ್ರೆಸ್​​ ರೈಲಿನ ಹಲವಾರು ಬೋಗಿಗಳು ಹಳಿ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವೆ ಇರುವ ಪಿಕೌರಾ ಪ್ರದೇಶದಲ್ಲಿ ರೈಲು ಅವಘಡ ಸಂಭವಿಸಿತ್ತು.

ಒಟ್ಟು 12 ಬೋಗಿಗಳೊಂದಿಗೆ ರೈಲು ಸಂಚರಿಸುತ್ತಿತ್ತು. ಆ ಪೈಕಿ ನಾಲ್ಕು ಬೋಗಿಗಳು ಜುಲಾಹಿ ರೈಲ್ವೆ ನಿಲ್ದಾಣದ ಕೆಲವು ಕಿಲೋಮೀಟರ್ ಮೊದಲು ಹಳಿ ತಪ್ಪಿದ್ದವು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯ ದಿನಾಂಕ 1 ತಿಂಗಳು ವಿಸ್ತರಣೆಗೆ ಮನವಿ

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯೆ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸುವಂತೆ ಅಖಿಲ ಭಾರತ ತೆರಿಗೆ ವೃತ್ತಿಪರರ ಒಕ್ಕೂಟವು ಕೇಂದ್ರ ನೇರ ತೆರಿಗೆ ಮಂಡಳಿಗೆ ಮನವಿ ಮಾಡಿದೆ. ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

ITR Filing
Koo

ನವದೆಹಲಿ: ಆದಾಯ ತೆರಿಗೆ ರಿಟರ್ನ್ (Income Tax Returns) ಸಲ್ಲಿಕೆಯೆ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸುವಂತೆ ಅಖಿಲ ಭಾರತ ತೆರಿಗೆ ವೃತ್ತಿಪರರ ಒಕ್ಕೂಟ (All-India Federation of Tax Practitioners-AIFTP)ವು ಕೇಂದ್ರ ನೇರ ತೆರಿಗೆ ಮಂಡಳಿ (Central Board of Direct Taxes-CBDT)ಗೆ ಮನವಿ ಮಾಡಿದೆ. ಸದ್ಯ  ದಂಡ ರಹಿತವಾಗಿ ಐಟಿಆರ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ.

ಎಐಎಫ್‌ಟಿಪಿ ರಾಷ್ಟ್ರೀಯ ಅಧ್ಯಕ್ಷ ನಾರಾಯಣ್ ಜೈನ್ ಮತ್ತು ನೇರ ತೆರಿಗೆ ಪ್ರಾತಿನಿಧ್ಯ ಸಮಿತಿ ಅಧ್ಯಕ್ಷ ಎಸ್.ಎಂ.ಸುರಾನಾ ಅವರು ಸಲ್ಲಿಸಿದ ಮನವಿಯಲ್ಲಿ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಉಲ್ಲೇಖಿಸಲಾಗಿದೆ.

ಕೇರಳ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿನ ಭೂಕುಸಿತದಿಂದ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ವಿವಿಧ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಲು ಮತ್ತು ಪರಿಶೀಲಿಸಲು ತೊಂದರೆ ಎದುರಾಗಿದೆ. ಆದಾಯ ತೆರಿಗೆ ಪೋರ್ಟಲ್ ಮತ್ತು ಸಾಫ್ಟ್‌ವೇರ್‌ನಲ್ಲಿ ನಿರಂತರ ಸಮಸ್ಯೆಗಳಿವೆ ಎಂದು ತಿಳಿಸಲಾಗಿದೆ. ಜತೆಗೆ ಬ್ಯಾಂಕುಗಳ ಮೂಲಕ ಸ್ವಯಂ ಮೌಲ್ಯಮಾಪನ ತೆರಿಗೆ ಪಾವತಿಸುವ ಮತ್ತು ಚಲನ್‌ಗಳನ್ನು ಡೌನ್‌ಲೋಡ್ ಮಾಡುವ ಪ್ರಕ್ರಿಯೆಯು‌ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಆದರೆ ಐಟಿಆರ್ ಫೈಲಿಂಗ್ ಗಡುವಿನ ವಿಸ್ತರಣೆಯ ಬಗ್ಗೆ ಹಣಕಾಸು ಸಚಿವಾಲಯ ಯಾವುದೇ ಔಪಚಾರಿಕ ಪ್ರಕಟಣೆಯನ್ನು ಇದುವರೆಗೆ ಹೊರಡಿಸಿಲ್ಲ.

ದಂಡ ಎಷ್ಟು?

ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಗಡುವು ಮುಗಿದರೂ ದಂಡ ಸಹಿತ ರಿಟರ್ನ್ ಸಲ್ಲಿಕೆಗೆ ಅವಕಾಶವಿದೆ. ತೆರಿಗೆ ಲೆಕ್ಕಪರಿಶೋಧನೆಯ ಅಗತ್ಯವಿರುವ ತೆರಿಗೆದಾರರಿಗೆ ದಂಡ ಸಹಿತ ಐಟಿಆರ್ ಫೈಲ್ ಮಾಡಲು 2024ರ ಅಕ್ಟೋಬರ್ 31ರವರೆಗೆ ಅವಕಾಶವಿದೆ. ಆರ್ಥಿಕ ವರ್ಷ 2024-25ಗಾಗಿ ಪರಿಷ್ಕೃತ ಮತ್ತು ತಡವಾದ ರಿಟರ್ನ್‌ಗಳನ್ನು ಸಲ್ಲಿಸಲು ಅಂತಿಮ ಗಡುವು 2024ರ ಡಿಸೆಂಬರ್ 31 ಆಗಿದೆ.

ತೆರಿಗೆ ಸಲ್ಲಿಸುವಿಕೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆದಾಯ ತೆರಿಗೆ ಇಲಾಖೆಯು ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ವಿವಿಧ ಐಟಿಆರ್ ಫಾರ್ಮ್‌ಗಳು ಮತ್ತು ಎಕ್ಸೆಲ್ ಮಾಹಿತಿಗಳನ್ನು ನಿರ್ಧಿಷ್ಟ ವೆಬ್‌‌ಸೈಟ್ ಮೂಲಕ ಪ್ರಕಟಿಸುತ್ತದೆ. ಆದರೂ ಹೆಚ್ಚಿನ ಸಂಬಳ ಪಡೆಯುವ ವ್ಯಕ್ತಿಗಳು ತಮ್ಮ ಫಾರ್ಮ್ 16 ಅನ್ನು ಉದ್ಯೋಗದಾತರಿಂದ ಸ್ವೀಕರಿಸಲು ಕಾಯುತ್ತಾರೆ. ಸಾಮಾನ್ಯವಾಗಿ ಇದನ್ನು ಜೂನ್ ಕೊನೆಯಲ್ಲಿ ಅಥವಾ ಜುಲೈ ಆರಂಭದಲ್ಲಿ ವಿತರಿಸಲಾಗುತ್ತದೆ.

ಇದನ್ನೂ ಓದಿ: Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

ಜುಲೈ 31ರ ಗಡುವಿನ ನಂತರ ಐಟಿಆರ್ ಸಲ್ಲಿಸುವುದರಿಂದ ದಂಡ ಪಾವತಿಸಬೇಕಾಗುತ್ತದೆ. ನಿವ್ವಳ ತೆರಿಗೆಯ ಆದಾಯವು 5 ಲಕ್ಷ ರೂ. ವರೆಗೆ ಇದ್ದರೆ ತಡವಾಗಿ ತೆರಿಗೆ ರಿಟರ್ನ್‌ಗೆ ಗರಿಷ್ಠ ದಂಡ 1,000 ರೂ ಆಗಿದೆ. 5 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವವರು 5,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯಿದೆಯ ಪ್ರಕಾರ ಒಟ್ಟು ಆದಾಯವು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಾದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ.

Continue Reading

ದೇಶ

Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Brutal Murder:ಶುಕ್ರವಾರ (ಜುಲೈ 26) ರಾತ್ರಿ ಮಹಿಳೆಯ ಮೃತದೇಹ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಬೀದಿ ನಾಯಿಗಳು ಅದನ್ನು ತಿನ್ನುತ್ತಿವೆ ಎಂದು ಪೊಲೀಸರಿಗೆ ಕರೆ ಬಂದಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತ ದೇಹವು ಆಕೆಯ ಎದೆ, ಸೊಂಟ, ಬೆನ್ನು ಮತ್ತು ಆಕೆಯ ಖಾಸಗಿ ಭಾಗಗಳಲ್ಲಿ ಹಲವಾರು ಇರಿತದ ಗಾಯಗಳನ್ನು ಹೊಂದಿದೆ ಎಂದು ವರದಿಯಾಗಿದೆ.

VISTARANEWS.COM


on

Brutal Murder
Koo

ಮುಂಬೈ: ಕಳೆದ ಎರಡು ದಿನಗಳಿಂದ ನಿಗೂಢವಾಗಿ ಕಾಣೆಯಾಗಿದ್ದ ಯುವತಿಯೊಬ್ಬಳ ಮೃತದೇಹ ರಕ್ತಮಡುವಿನಲ್ಲಿ ಪತ್ತೆಯಾಗಿದ್ದು, ಅದನ್ನು ಬೀದಿನಾಯಿಗಳು ತಿಂದಿರುವ ಘಟನೆ ನವೀ ಮುಂಬೈನಲ್ಲಿ ನಡೆದಿದೆ. ಮೃತ ಯುವತಿ(Brutal Murder)ಯನ್ನು 22 ವರ್ಷದ ಯಶಶ್ರೀ(Yashashree) ಎಂದು ಗುರುತಿಸಲಾಗಿದ್ದು, ಆಕೆಯ ಜನನಾಂಗ ಮತ್ತು ಎದೆಯ ಭಾಗ ಸೇರಿದಂತೆ ಖಾಸಗಿ ಭಾಗಗಳನ್ನು ಬರ್ಬರವಾಗಿ ಇರಿಯಲಾಗಿದೆ.

ಶುಕ್ರವಾರ (ಜುಲೈ 26) ರಾತ್ರಿ ಮಹಿಳೆಯ ಮೃತದೇಹ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಬೀದಿ ನಾಯಿಗಳು ಅದನ್ನು ತಿನ್ನುತ್ತಿವೆ ಎಂದು ಪೊಲೀಸರಿಗೆ ಕರೆ ಬಂದಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತ ದೇಹವು ಆಕೆಯ ಎದೆ, ಸೊಂಟ, ಬೆನ್ನು ಮತ್ತು ಆಕೆಯ ಖಾಸಗಿ ಭಾಗಗಳಲ್ಲಿ ಹಲವಾರು ಇರಿತದ ಗಾಯಗಳನ್ನು ಹೊಂದಿದೆ ಎಂದು ವರದಿಯಾಗಿದೆ. ಆಕೆಯ ಮೂಳೆಗಳು ಮುರಿದಿವೆ ಎಂದು ಪೊಲೀಸರು ಹೇಳಿದ್ದಾರೆ.

ಯಶಶ್ರಿ ಶಿಂಧೆ ಮೃತ ದೇಹವು ನವಿ ಮುಂಬೈನ ಉರಾನ್ ತಾಲೂಕಿನಲ್ಲಿ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಶಕ್ಕೆ ಪಡೆದಿದ್ದಾರೆ. ದಾವೂದ್ ಶೇಖ್ ಎಂಬಾತ ಆಕೆಯನ್ನು ಕೊಂದಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

ಕರ್ನಾಟಕ ಮೂಲದವನು ಈ ದಾವೂದ್‌

ಪೊಲೀಸರ ಪ್ರಕಾರ, ದಾವೂದ್ 2019 ರಲ್ಲಿ ಅಪ್ರಾಪ್ತ ವಯಸ್ಸಿನವನಾಗಿದ್ದಾಗ ಯಶಶ್ರೀಗೆ ಕಿರುಕುಳ ನೀಡಿದ ಆರೋಪದ ಮೇಲೆ ಈ ಹಿಂದೆ ಬಂಧಿಸಲಾಗಿತ್ತು. ಜೈಲಿನಿಂದ ಹೊರಬಂದ ನಂತರ ಅವನು ಕರ್ನಾಟಕದ ತನ್ನ ಊರಿಗೆ ಹೋಗಿದ್ದನು. ಆದಾಗ್ಯೂ, ಕರೆ ದಾಖಲೆಗಳು ಆರೋಪಿಯೊಂದಿಗೆ ಹಲವಾರು ಗಂಟೆಗಳ ಕಾಲ ಮಾತನಾಡುತ್ತಿದ್ದಳು ಎಂದು ಸೂಚಿಸಿದೆ. ಇನ್ನು ಕೃತ್ಯದ ಸಂದರ್ಭದಲ್ಲಿ ದಾವೂದ್‌ ಆ ಸ್ಥಳದಲ್ಲಿ ಇದ್ದ ಎಂಬುದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ. ಇನ್ನು ದಾವೂದ್ ಬಂಧನಕ್ಕೆ ಕರ್ನಾಟಕಕ್ಕೆ ಪೊಲೀಸ್ ತಂಡಗಳನ್ನು ಕಳುಹಿಸಲಾಗಿದೆ. ಮತ್ತು ಈ ಆರೋಪಿಯ ಬಂಧನದ ನಂತರವೇ ಈ ಕೊಲೆಯ ಹಿಂದಿನ ಕಾರಣ ಸ್ಪಷ್ಟವಾಗಲಿದೆ.

ಇದಕ್ಕೂ ಮೊದಲು ಜುಲೈ 25 ರಂದು (ಗುರುವಾರ) ಯಶಶ್ರಿ ಶಿಂಧೆ ನಾಪತ್ತೆಯ ಬಗ್ಗೆ ಮೂಲತಃ ಆಕೆಯ ಪೋಷಕರು ಪ್ರಕರಣವನ್ನು ದಾಖಲಿಸಿದ್ದರು. ಆದರೆ, ಎರಡು ದಿನಗಳ ಬಳಿಕ ಶನಿವಾರ ಆಕೆಯ ಶವ ಅತ್ಯಂತ ಭೀಕರ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ದೇಹದ ಮೇಲೆ ಹಲವಾರು ಗಾಯದ ಗುರುತುಗಳು ವರದಿಯಾಗಿವೆ. ಆಕೆಯ ಭುಜದ ಮಾಂಸವನ್ನೂ ತಿಂದು ಹಾಕಿದ್ದ ಬೀದಿನಾಯಿಗಳು ಆಕೆಯ ಮುಖವನ್ನೂ ವಿರೂಪಗೊಳಿಸಿವೆ. ಅವಳ ಬಟ್ಟೆ ಮತ್ತು ಆಕೆಯ ಮೈಮೇಲಿದ್ದ ಟ್ಯಾಟೂ ಸಹಾಯದಿಂದ ಆಕೆಯ ಗುರುತು ಪತ್ತೆ ಹಚ್ಚಲಾಯಿತು.

ಇದನ್ನೂ ಓದಿ: Actor Darshan: 80 ವರ್ಷಗಳ ಹಿಂದೆ ನಡೆದಿತ್ತು ದರ್ಶನ್‌ ಮಾದರಿ ಕ್ರೈಂ! ಜೈಲು ಪಾಲಾಗಿದ್ದರು ತಮಿಳು ಸೂಪರ್ ಸ್ಟಾರ್!

Continue Reading

ದೇಶ

Train Accident: ಹೌರಾ-ಮುಂಬೈ ಮೇಲ್​ ಎಕ್ಸ್​ಪ್ರೆಸ್​​ ರೈಲು ಹಳಿ ತಪ್ಪಿ ದುರಂತ; ಸಾವಿನ ಸಂಖ್ಯೆ 2ಕ್ಕೆ ಏರಿಕೆ

Train Accident: ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಸೆರೈಕೆಲಾ-ಖರ್ಸಾವನ್ ಜಿಲ್ಲೆಯ ರಾಜ್ಖರ್ಸ್ವಾನ್ ವೆಸ್ಟ್ ಔಟರ್ ಮತ್ತು ಬಾರಾಬಂಬೂ ನಡುವೆ ಇಂದು ಮುಂಜಾನೆ ಸಂಭವಿಸಿದ ರೈಲು ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹೌರಾ-ಮುಂಬೈ ಮೇಲ್​ ಎಕ್ಸ್​ಪ್ರೆಸ್​​ ರೈಲು ಹಳಿ ತಪ್ಪಿ ಈ ದುರಂತ ಸಂಭವಿಸಿದೆ.

VISTARANEWS.COM


on

Train Accident
Koo

ರಾಂಚಿ: ದೇಶದಲ್ಲಿ ರೈಲು ಅಪಘಾತಗಳ ಸಂಖ್ಯೆ ಹೆಚ್ಚಾಗತೊಡಗಿದ್ದು, ಮಂಗಳವಾರ ಜಾರ್ಖಂಡ್‌ನಲ್ಲಿ ನಡೆದ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದುರಂತದಲ್ಲಿ ಕನಿಷ್ಠ 20 ಮಂದಿಗೆ ಗಾಯಗಳಾಗಿವೆ. ಜಾರ್ಖಂಡ್‌ನ ಚರಧರ್‌ಪುರ ವಿಭಾಗದ ಸೆರೈಕೆಲಾ-ಖರ್ಸಾವನ್ ಜಿಲ್ಲೆಯ ರಾಜ್ಖರ್ಸ್ವಾನ್ ವೆಸ್ಟ್ ಔಟರ್ ಮತ್ತು ಬಾರಾಬಂಬೂ ನಡುವೆ ಇಂದು ಮುಂಜಾನೆ 12810 ನಂಬರ್‌ನ ಹೌರಾ-ಮುಂಬೈ ಮೇಲ್​ ಎಕ್ಸ್​ಪ್ರೆಸ್​​ ರೈಲು (Howrah-Mumbai Mail train) ಹಳಿ ತಪ್ಪಿ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು, ರಕ್ಷಣಾ ತಂಡಗಳು ಧಾವಿಸಿದ್ದು ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ (Train Accident).

ರೈಲಿನ ನಾಲ್ಕು ಸಾಮಾನ್ಯ ಬೋಗಿಗಳನ್ನು ಹೊರತುಪಡಿಸಿ ಉಳಿದೆಲ್ಲ 18 ಬೋಗಿಗಳು ಹಳಿ ತಪ್ಪಿವೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಸೆರೈಕೆಲಾ-ಖಾರ್ಸಾವನ್ ಜಿಲ್ಲಾಧಿಕಾರಿ ರವಿಶಂಕರ್ ಶುಕ್ಲಾ ಸೇರಿದಂತೆ ಅನೇಕ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಾಥಮಿಕ ವರದಿಯ ಪ್ರಕಾರ ಎದುರುಗಡೆಯಿಂದ ಬರುತ್ತಿದ್ದ ಗೂಡ್ಸ್ ರೈಲು ಹಳಿತಪ್ಪಿದ್ದು, ಇದಕ್ಕೆ ಹೌರಾ-ಮುಂಬೈ ಮೇಲ್​ ಎಕ್ಸ್​ಪ್ರೆಸ್​​ ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಹೌರಾ ಮೇಲ್ ಪಶ್ಚಿಮ ಬಂಗಾಳದ ಹೌರಾದಿಂದ ಮುಂಬೈಗೆ ಪ್ರಯಾಣಿಸುತ್ತಿತ್ತು.

”ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಗ್ಯಾಸ್ ಕಟ್ಟರ್‌ ಸಹಾಯದಿಂದ ಬೋಗಿಯನ್ನು ಕತ್ತರಿಸಿದ ನಂತರ ಅವರ ಶವಗಳನ್ನು ಹೊರ ತೆಗೆಯಲಾಗಿಗಿದೆ. ಸುಮಾರು 15-20 ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ 4-5 ಮಂದಿಯ ಸ್ಥಿತಿ ಗಂಭೀರವಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ʼʼಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎದುರು ಬದಿಯಿಂದ ಬರುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ ಕಾರಣ ಈ ಪ್ಯಾಸೆಂಜರ್ ರೈಲು ಅದಕ್ಕೆ ಡಿಕ್ಕಿ ಹೊಡೆದಿದೆ” ಎಂದು ಮೂಲಗಳು ತಿಳಿಸಿವೆ.

ಹಲವು ರೈಲುಗಳು ರದ್ದು

ಈ ಅಪಘಾತದಿಂದಾಗಿ ಹಲವು ರೈಲುಗಳು ರದ್ದಾಗಿವೆ, ಕೆಲವು ರೈಲುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಖರಗ್ಪುರ-ಧನ್ಬಾದ್ ಎಕ್ಸ್‌ಪ್ರೆಸ್‌, ಹೌರಾ-ಬಾರ್ಬಿಲ್ ಎಕ್ಸ್‌ಪ್ರೆಸ್‌, ಅಸನ್ಸೋಲ್-ಟಾಟಾ ಎಕ್ಸ್‌ಪ್ರೆಸ್‌, ಇಸ್ಪತ್ ಎಕ್ಸ್‌ಪ್ರೆಸ್‌, ಖರಗ್ಪುರ-ಜಾರ್ಗ್ರಾಮ್-ಧನ್ಬಾದ್ ಎಕ್ಸ್‌ಪ್ರೆಸ್‌, ಹೌರಾ-ಬಾರ್ಬಿಲ್ ಜನಶತಾಬ್ದಿ ಎಕ್ಸ್‌ಪ್ರೆಸ್‌ ಮತ್ತು ಶಾಲಿಮಾರ್-ಎಲ್ಟಿಟಿ ಎಕ್ಸ್‌ಪ್ರೆಸ್‌ ರೈಲುಗಳನ್ನು ರದ್ದುಪಡಿಸಲಾಗಿದೆ. ಹೌರಾ-ಸಿಎಸ್ಎಂಟಿ ಡುರಾಂಟೊ ಎಕ್ಸ್‌ಪ್ರೆಸ್‌, ಹೌರಾ-ಪುಣೆ ಎಕ್ಸ್‌ಪ್ರೆಸ್‌ ಮತ್ತು ಪುರಿ-ರಿಷಿಕೇಶ್ ಎಕ್ಸ್‌ಪ್ರೆಸ್‌ ರೈಲುಗಳು ಬೇರೆ ಮಾರ್ಗದಲ್ಲಿ ಸಂಚರಿಸಲಿವೆ.

ಇದನ್ನೂ ಓದಿ: Andhra train accident: 13 ಜನರ ಬಲಿ ಪಡೆದ ಆಂಧ್ರ ರೈಲು ಅಪಘಾತದ‌ ಮೂಲ ಕಾರಣ ಬಹಿರಂಗ

ತಿಂಗಳ ಅಂತರದಲ್ಲಿ 3ನೇ ಅಪಘಾತ

ಇದು ಜೂನ್‌ ನಂತರ ದೇಶದಲ್ಲಿ ನಡೆಯುತ್ತಿರುವ ಮೂರನೇ ರೈಲು ಅಪಘಾತ. ಜುಲೈ 18ರಂದು ಉತ್ತರ ಪ್ರದೇಶದ ಗೊಂಡಾದಲ್ಲಿ ಚಂಡೀಗಢ-ದಿಬ್ರುಘರ್ ಎಕ್ಸ್‌ಪ್ರೆಸ್‌ ಬೋಗಿಗಳು ಹಳಿ ತಪ್ಪಿದ ಪರಿಣಾಮ ಇಬ್ಬರು ಸಾವನ್ನಪ್ಪಿ 20 ಜನರು ಗಾಯಗೊಂಡಿದ್ದರು. ಇನ್ನು ಕಳೆದ ತಿಂಗಳು ಪಶ್ಚಿಮ ಬಂಗಾಳದಲ್ಲಿ ಕಾಂಚನ್ ಜಂಗಾ ಎಕ್ಸ್‌ಪ್ರೆಸ್ ಅಪಘಾತಕ್ಕೀಡಾಗಿ ಹತ್ತು ಮಂದಿ ಸಾವನ್ನಪ್ಪಿದ್ದರು. ಕಳೆದ ವರ್ಷ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 288 ಜನರು ಮೃತಪಟ್ಟಿದ್ದರು.

Continue Reading

ರಾಜಕೀಯ

Parliament Session: ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜು; Live ಇಲ್ಲಿ ವೀಕ್ಷಿಸಿ

Parliament Session: ಸಂಸತ್‌ನಲ್ಲಿ ಈ ಬಾರಿ ಪ್ರತಿಪಕ್ಷಗಳ ಬಲ ಹೆಚ್ಚಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿವೆ. ಸಂಸತ್‌ನ ಬಜೆಟ್‌ ಅಧಿವೇಶನ ಕಾವೇರಿದ ಚರ್ಚೆಗೆ ಸಾಕ್ಷಿಯಾಗುತ್ತಿದ್ದು ಇಂದು ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲ ನಡೆಯುವ ನಿರೀಕ್ಷೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣ ಉಭಯ ಸದನಗಳಲ್ಲಿ ಇಂದು ಕೂಡ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. ಹೀಗಾಗಿ ಕುತೂಹಲ ಕೆರಳಿಸಿರುವ ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ವೀಕ್ಷಿಸಿ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನ ಬಜೆಟ್‌ ಅಧಿವೇಶನ (Parliament Session) ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಭಾರಿ ಚರ್ಚೆಗೆ ಸಾಕ್ಷಿಯಾಗುತ್ತಿದೆ. ಇಂದು ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲ ನಡೆಯುವ ನಿರೀಕ್ಷೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣ ಉಭಯ ಸದನಗಳಲ್ಲಿ ಇಂದು ಕೂಡ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.

ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಕಲಾಪಗಳು ಪುನರಾರಂಭಗೊಳ್ಳಲಿದ್ದು, ಉಭಯ ಸದನಗಳು 2024-25ರ ಬಜೆಟ್ ಮೇಲಿನ ಚರ್ಚೆಗಳನ್ನು ಮುಂದುವರಿಸಲಿವೆ. ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಆದೇಶವನ್ನು ತೆಗೆದುಹಾಕುವಂತೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಸೋಮವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇದಕ್ಕೆ ಉತ್ತರಿಸಿದ್ದ ಸ್ಪೀಕರ್‌ ಅವರು ಸಂಸತ್ತಿನ ಕಾರ್ಯವಿಧಾನದ ನಿಯಮಗಳ ಬಗ್ಗೆ ರಾಹುಲ್‌ ಗಾಂಧಿಗೆ ನೆನಪಿಸಿದ್ದರು. ಅಂತಹ ವಿಷಯಗಳನ್ನು ಸದನದಲ್ಲಿ ಚರ್ಚಿಸುವ ಬದಲು ಖಾಸಗಿಯಾಗಿ ಚರ್ಚಿಸಬೇಕೆಂದು ಸಲಹೆ ನೀಡಿದ್ದರು. ಬಳಿಕ ರಾಹುಲ್ ಗಾಂಧಿ ಅವರು ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ’ಬ್ರಿಯಾನ್, ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮತ್ತು ಶಿವಸೇನೆ-ಯುಬಿಟಿ ಸಂಸದೆ ಪ್ರಿಯಾಂಕಾ ಚತುರ್ವೇದಿ ಮತ್ತಿತತ ಪ್ರತಿಪಕ್ಷದ ನಾಯಕರೊಂದಿಗೆ ಮಾಧ್ಯಮ ಸಿಬ್ಬಂದಿಯನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ನಂತರ ಓಂ ಬಿರ್ಲಾ ಅವರು ಪತ್ರಕರ್ತರ ಗುಂಪನ್ನು ಭೇಟಿಯಾಗಿ, ಅವರ ಕುಂದುಕೊರತೆಗಳನ್ನು ಪರಿಹರಿಸಲಾಗುವುದು ಮತ್ತು ಅವರ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಉತ್ತಮ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದರು.

ಲೋಕಸಭೆಯಲ್ಲಿ ಅಬ್ಬರಿಸಿದ ರಾಹುಲ್‌ ಗಾಂಧಿ

ಇನ್ನು ಸೋಮವಾರ ಬಜೆಟ್‌ ಮೇಲಿನ ಚರ್ಚೆ ವೇಳೆ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದರಲ್ಲೂ, ಮಹಾಭಾರತದ ಚಕ್ರವ್ಯೂಹವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ ಅವರು ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದರು. “ಮಹಾಭಾರತದ ಚಕ್ರವ್ಯೂಹದಂತೆ  ಈಗಲೂ ಒಂದು ಚಕ್ರವ್ಯೂಹ ರಚಿಸಲಾಗಿದೆ. ದೇಶದ ಜನರು ಆ ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ 6 ಮಂದಿಯು ಈ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಹೇಳಿದ್ದರು.

“ಚಕ್ರವ್ಯೂಹದಲ್ಲಿ ತುಂಬ ಜನ ಇರುತ್ತಾರೆ. ಆದರೆ, ಚಕ್ರವ್ಯೂಹದ ಮಧ್ಯದಲ್ಲಿ 6 ಜನ ಇರುತ್ತಾರೆ ಹಾಗೂ ಅವರು ಇಡೀ ಚಕ್ರವ್ಯೂಹವನ್ನು ನಿಯಂತ್ರಿಸುತ್ತಾರೆ. ಆಧುನಿಕ ಕಾಲದ ಚಕ್ರವ್ಯೂಹವನ್ನು ಕೂಡ ಆರು ಜನ ನಿಯಂತ್ರಿಸುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಮೋಹನ್‌ ಭಾಗವತ್‌, ಅಜಿತ್‌ ದೋವಲ್‌, ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿಯೇ ಈಗ ಕಮಲದ ಆಕಾರದ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು.

ಅಗ್ನಿಪಥ್‌ ಯೋಜನೆಗೆ ವಿರೋಧ

ಇದರ ಜತೆಗೆ ರಾಹುಲ್‌ ಗಾಂಧಿ ಅಗ್ನಿಪಥ್‌ ಯೋಜನೆ ಬಗ್ಗೆಯೂ ಪ್ರಸ್ತಾವಿಸಿ ವಿರೋಧ ವ್ಯಕ್ತಪಡಿಸಿದ್ದರು. ʼʼಸೇನೆಯ ಸೈನಿಕರನ್ನು ಅಗ್ನಿವೀರ್ ಹೆಸರಿನ ಚಕ್ರವ್ಯೂಹದಲ್ಲಿ ಸಿಲುಕಿಸಲಾಯ್ತು. ಈ ಬಜೆಟ್‌ನಲ್ಲಿ ಅಗ್ನಿವೀರರ ಪಿಂಚಣಿಗಾಗಿ ಒಂದು ರೂಪಾಯಿಯನ್ನು ತೆಗೆದಿರಿಸಿಲ್ಲ. ನಿಮ್ಮನ್ನು ದೇಶಭಕ್ತರೆಂದು ಕರೆದುಕೊಳ್ಳುವ ನೀವು ಅಗ್ನಿವೀರರ ಪಿಂಚಣಿಗಾಗಿ ಅನುದಾನ ಘೋಷಣೆ ಮಾಡಿಲ್ಲ. ನಿಮ್ಮ ಚಕ್ರವ್ಯೂಹದಿಂದ ಹೊರಬರಲು ರೈತರು ಎಂಎಸ್‌ಪಿ ಲೀಗಲ್ ಗ್ಯಾರಂಟಿಯನ್ನು ಕೇಳಿದ್ದರು. ಆದ್ರೆ ನೀವು ರೈತರ ಜತೆ ಮಾತನಾಡಲು ಸಿದ್ಧವಿಲ್ಲʼʼ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರು, ʼʼಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅಗ್ನಿಪಥ್ ಯೋಜನೆಯ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆʼʼ ಎಂದು ಹೇಳಿದ್ದರು. ಜತೆಗೆ ಯೋಜನೆ ಬಗ್ಗೆ ಚರ್ಚೆಗೆ ಸಿದ್ದ ಎಂದು ಸವಾಲು ಸ್ವೀಕರಿಸಿದ್ದರು. ಹೀಗಾಗಿ ಇಂದು ಕೂಡ ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

Continue Reading
Advertisement
Kerala Cyclist Reaches Paris
ಕ್ರೀಡೆ17 mins ago

Kerala Cyclist Reaches Paris: ನೀರಜ್​ ಚೋಪ್ರಾಗೆ ಬೆಂಬಲ ಸೂಚಿಸಲು ಬರೋಬ್ಬರಿ 22 ಸಾವಿರ ಕಿ.ಮೀ ಸೈಕಲ್​ ತುಳಿದು ಪ್ಯಾರಿಸ್​ ತಲುಪಿದ ಕೇರಳದ ಅಭಿಮಾನಿ

Gold Rate Today
ಚಿನ್ನದ ದರ17 mins ago

Gold Rate Today: ಆಭರಣ ಖರೀದಿಗೆ ಗೋಲ್ಡನ್‌ ಟೈಮ್‌; ಮತ್ತೆ ಇಳಿಮುಖವಾದ ಚಿನ್ನದ ದರ

murder case
ತುಮಕೂರು43 mins ago

Murder Case : ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

ITR Filing
ವಾಣಿಜ್ಯ48 mins ago

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯ ದಿನಾಂಕ 1 ತಿಂಗಳು ವಿಸ್ತರಣೆಗೆ ಮನವಿ

Brutal Murder
ದೇಶ54 mins ago

Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Actor Darshan
ಪ್ರಮುಖ ಸುದ್ದಿ1 hour ago

Actor Darshan: ದರ್ಶನ್‌ ಸೆಲ್‌ ಭದ್ರತೆಗೆ 7 ಜನ ಸಿಬ್ಬಂದಿ ನಿಯೋಜನೆ! ಕಾರಣ ಇದು

Train Accident
ದೇಶ1 hour ago

Train Accident: ಹೌರಾ-ಮುಂಬೈ ಮೇಲ್​ ಎಕ್ಸ್​ಪ್ರೆಸ್​​ ರೈಲು ಹಳಿ ತಪ್ಪಿ ದುರಂತ; ಸಾವಿನ ಸಂಖ್ಯೆ 2ಕ್ಕೆ ಏರಿಕೆ

Manu Bhaker
ಕ್ರೀಡೆ1 hour ago

Manu Bhaker: ವಯಲಿನ್‌ ಮೂಲಕ ರಾಷ್ಟ್ರಗೀತೆ ನುಡಿಸಿದ ಮನು ಭಾಕರ್; ವಿಡಿಯೊ ವೈರಲ್​

SL vs IND 3rd T20I
ಕ್ರೀಡೆ2 hours ago

SL vs IND 3rd T20I: ಇಂದು ಅಂತಿಮ ಟಿ20; ವೈಟ್‌ವಾಶ್‌ ಭೀತಿಯಿಂದ ಪಾರಾದೀತೇ ಶ್ರೀಲಂಕಾ?

Liquor Price Karnataka
ಪ್ರಮುಖ ಸುದ್ದಿ2 hours ago

Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ19 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ22 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌