Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ - Vistara News

ಪ್ರಮುಖ ಸುದ್ದಿ

Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ

Liquor Price Karnataka: ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ.

VISTARANEWS.COM


on

Liquor Price Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆ (Beer Price) ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ (Liquor Price Karnataka) ಏರಿಕೆಯಾಗುತ್ತಿದ್ದು, ನೊರೆ ಉಕ್ಕಿಸುವ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆಯಾಗಲಿದೆ. ದರ ಕೇಳಿಯೇ ಮದ್ಯಪ್ರಿಯರ ಕಿಕ್‌ ಇಳಿಯವಂತಾಗಿದೆ.

ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ. ಬಿಯರ್ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಇತರ ದುಬಾರಿ ಹಾಟ್‌ ಮದ್ಯಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಮದ್ಯಪ್ರಿಯರು ಬಿಯರ್‌ಗೆ ತೃಪ್ತಿಪಟ್ಟುಕೊಳ್ಳೋಣ ಎಂದು ಭಾವಿಸಿದರೆ ಈಗ ಅದೂ ಸಾಧ್ಯವಿಲ್ಲದಾಗಿದೆ.

ಕಾಂಗ್ರೆಸ್ ಸರ್ಕಾರ ಬಂದಮೇಲೆ ಬಿಯರ್ ದರ ಸುಮಾರು 60 ರೂಪಾಯಿಯಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರಕಾರ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಅದರಿಂದ ದರ ಏರಿಕೆಯಾಗಿತ್ತು. ಆ ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ದವು.

ನಂತರ ಮತ್ತೆ ಸರ್ಕಾರದಿಂದ ಬಿಯರ್ ಮೇಲಿನ ಸುಂಕ‌ ಹೆಚ್ಚಳ ಮಾಡಿದ್ದ ಕಾರಣ ಕಳೆದ ಫೆಬ್ರವರಿಯಲ್ಲಿ ಬಿಯರ್ ದರ ಏರಿದೆ. ಇದೀಗ ಮತ್ತೆ ಬಿಯರ್ ದರ ಏರಿಕೆಗೆ ಕಂಪನಿಗಳು ತೀರ್ಮಾನಿಸಿವೆ. ಹೀಗಾಗಿ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 60 ರೂ. ವರೆಗೆ ಹೆಚ್ಚಳವಾದಂತಾಗಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಖಜಾನೆ ತುಂಬಿಸಿಕೊಳ್ಳಲು ಅಬಕಾರಿ ಸುಂಕವನ್ನು ಅನಿಯಮಿತವಾಗಿ ಹೆಚ್ಚಿಸುವ ದಾರಿಯನ್ನು ಸರಕಾರ ಹಿಡಿದಿದೆ ಎಂದು ಲಿಕ್ಕರ್‌ಪ್ರಿಯರು ಆರೋಪಿಸಿದ್ದಾರೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್‌ ಜೋಡಿ

Paris Olympics 2024: ಮಂಗಳವಾರ ನಡೆದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ  16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತು.

VISTARANEWS.COM


on

Paris Olympics 2024
Koo

ಪ್ಯಾರಿಸ್‌: ಪ್ಯಾರಿಸ್​ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದಿದೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಮತ್ತು ಮನು ಭಾಕರ್​ ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. 2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು ಇದೀಗ 2ನೇ ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನಿಸಿಕೊಂಡರು.

ಮಂಗಳವಾರ ನಡೆದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ  16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತು. ಸೋಮವಾರ ನಡೆದಿದ್ದ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್‌-ಸರಬ್ಜೋತ್‌ ಸಿಂಗ್‌ ಒಟ್ಟು 580 ಅಂಕ ಸಂಪಾದಿಸಿದ್ದರು. ಕೊರಿಯಾದ ಜೋಡಿ 579 ಅಂಕ ಗಳಿಸಿತ್ತು.

ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳಲ್ಲಿ ಮನು ಭಾಕರ್​ ಕೂಡ ಕಾಣಿಸಿಕೊಂಡಿದ್ದರು. ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಒಂದಲ್ಲ 2 ಪದಕ ಗೆದ್ದು ಅವರ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

ಸದ್ಯ ಭಾರತ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ 2 ಪದಕ ತನ್ನದಾಗಿಸಿಕೊಂಡಿದೆ. 2 ಪದಕ ಕೂಡ ಶೂಟಿಂಗ್​ ವಿಭಾಗದಲ್ಲಿ ಬಂದಿದೆ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಇದು ಅವರ ಪದಾರ್ಪಣ ಒಲಿಂಪಿಕ್ಸ್​ ಕೂಟವಾಗಿತ್ತು. ಆಗ ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಅಂದಿನ ನಿರಾಸೆಯನ್ನು ಈ ಬಾರಿ ಪ್ಯಾರಿಸ್​ನಲ್ಲಿ 2 ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆಯನ್ನೇ ಮಾಡಿ ತಮ್ಮ ಎಲ್ಲ ನೋವನ್ನು ಮರೆತಿದ್ದಾರೆ.

Continue Reading

ಕರ್ನಾಟಕ

Mekedatu Project: ಎಚ್‌ಡಿಕೆ ಅನುಮತಿ ಕೊಡಿಸಿದರೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

Mekedatu Project: ಮಂಡ್ಯದ ಸಂಸದ ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಅಣೆಕಟ್ಟು ನಿರ್ಮಾಣ ಕಾರ್ಯ ಆರಂಭಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Mekedatu Project
Koo

ಬೆಂಗಳೂರು: ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ (Mekedatu Project) ಅನುಮತಿ ಕೊಡಿಸಿದರೆ ಅಣೆಕಟ್ಟು ನಿರ್ಮಾಣ ಕಾರ್ಯ ಆರಂಭಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಕುಮಾರಸ್ವಾಮಿ ಮೇಕೆದಾಟು ಅನುಮತಿ ಕೊಡಿಸಬೇಕು. ಮೇಕೆದಾಟು ಯೋಜನೆ ಜಾರಿಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಬಹುದು. ವಿದ್ಯುತ್ ಅನ್ನು ಸಹ ಉತ್ಪಾದಿಸಬಹುದು. ಮಳೆಗಾಲದಲ್ಲಿ ಸಮುದ್ರ ಸೇರುವ ನೀರನ್ನು ಸಂಗ್ರಹಿಸಿಟ್ಟು, ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದಾಗ ತಮಿಳುನಾಡಿಗೂ ನೀರು ಬಿಡಬಹುದು ಎಂದು ತಿಳಿಸಿದ್ದಾರೆ.

ಮಂಡ್ಯದ ಸಂಸದ ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಅಣೆಕಟ್ಟು ನಿರ್ಮಾಣ ಕಾರ್ಯ ಆರಂಭಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡು ಜತೆ ಮಾತುಕತೆಗೆ ತಯಾರಿದ್ದೇವೆ

ಸೋಮವಾರ ಕೆಆರ್‌ಎಸ್‌ಗೆ ಬಾಗಿನ ನೀಡುವ ವೇಳೆ ಕೂಡ ಮೇಕೆದಾಟು ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದರು. ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು.

ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಅಣೆಕಟ್ಟೆ ನಿರ್ಮಿಸಲು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಬೇಕು. ಕೇಂದ್ರ ಈವರೆಗೆ ಮೇಕೆದಾಟು ಯೋಜನೆಗೆ ಮಂಜೂರಾತಿ ಕೊಟ್ಟಿಲ್ಲ. ಇದನ್ನು ಕೇಳಿದರೆ ವಿಪಕ್ಷದವರು ನಮ್ಮ ಮೇಲೆ ಮುಗಿಬೀಳುತ್ತಾರೆ. ಮೇಕೆದಾಟು ಯೋಜನೆ ನಿರ್ಮಾಣವಾದರೆ ತಮಿಳುನಾಡಿಗೆ ಹೆಚ್ಚು ಉಪಯೋಗವಾಗುತ್ತದೆ. ಆದರೆ, ಈ ವಿಚಾರದಲ್ಲಿ ತಮಿಳುನಾಡು ಮತ್ತೆ ಮತ್ತೆ ಕ್ಯಾತೆ ತೆಗೆಯುತ್ತಿದೆ. ಯೋಜನೆ ನಿರ್ಮಾಣವಾಗುತ್ತಿರುವುದು ನಮ್ಮ ರಾಜ್ಯದಲ್ಲಿ, ಹಾಗಾಗಿ ಈ ಯೋಜನೆ ನಮ್ಮ ಹಕ್ಕು ಎಂದು ಕಾರ್ಯಕ್ರಮದಲ್ಲಿ ಸಿಎಂ ಹೇಳಿದ್ದರು.

ಇದನ್ನೂ ಓದಿ | Wayanad Landslide: ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ದೇವೇಗೌಡರ ಕುಟುಂಬ ಪಡೆದಿರುವ ನಿವೇಶನಗಳ ಲೆಕ್ಕ ಕೊಡಲೇ?

ನಾನು ಮುಡಾದಿಂದ ಯಾವುದೇ ನಿವೇಶನ ಪಡೆದಿಲ್ಲ. ಮುಡಾ ನಿವೇಶನ ಸಿಗದಿರುವುದೇ ನನ್ನ ಅದೃಷ್ಟ ಎಂದುಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿರುವುದಕ್ಕೆ ಸಿಎಂ ಕಿಡಿಕಾರಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ 40 ವರ್ಷದ ಹಿಂದೆಯೇ ಮುಡಾ ಸೈಟ್ ಪಡೆದಿದ್ದಾರೆ ಎಂದು ತಿಳಿಸಿರುವ ಸಿದ್ದರಾಮಯ್ಯ ಅವರು, 40 ವರ್ಷಗಳ ಹಿಂದೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾ ಸೈಟ್ ಸಿಕ್ಕಿದೆ. ಅದರ ಸ್ವಾಧೀನ ಪತ್ರವನ್ನು ಪಡೆದುಕೊಂಡು ಈಗ ಸೈಟ್ ಕೊಟ್ಟಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ದೇವೇಗೌಡರ ಕುಟುಂಬದವರು ಪಡೆದಿರುವ ನಿವೇಶನಗಳ ಲೆಕ್ಕ ಕೊಡಲೇ ಹೇಳಿದ್ದಾರೆ.

Continue Reading

ಉದ್ಯೋಗ

SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯುಸಿ ಪಾಸಾದವರು ಅಪ್ಲೈ ಮಾಡಿ

SSC Recruitment 2024: ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17. ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆ ಇದಾಗಿದ್ದು, ಆಯ್ಕೆಯಾದವರನ್ನು ಸ್ಟಾಫ್‌ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು, ಕಚೇರಿಗಳಿಗೆ ನೇಮಕ ಮಾಡಿಕೊಳ್ಳಲಿದೆ.

VISTARANEWS.COM


on

SSC Recruitment 2024
Koo

ನವದೆಹಲಿ: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ಖಾಲಿ ಇರುವ ಸ್ಟೆನೋಗ್ರಾಫರ್ (Stenographer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆ ಇದಾಗಿದ್ದು, ಆಯ್ಕೆಯಾದವರನ್ನು ಸ್ಟಾಫ್‌ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು, ಕಚೇರಿಗಳಿಗೆ ನೇಮಕ ಮಾಡಿಕೊಳ್ಳಲಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಸಿ ಸ್ಟೆನೋಗ್ರಾಫರ್‌ ಗ್ರೂಪ್‌ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-30 ವರ್ಷದೊಳಗಿರಬೇಕು ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-27 ವರ್ಷದೊಳಗಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಆನ್‌ಲೈನ್‌ ಮೂಲಕ 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ, ಮಹಿಳಾ, ಮಾಜಿ ಸೈನಿಕ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್ ಆಧಾರಿತ ಆನ್‌ಲೈನ್‌ ಪರೀಕ್ಷೆ ಜತೆಗೆ ಸ್ಟೆನೋಗ್ರಾಫಿ ಸ್ಕಿಲ್‌ ಟೆಸ್ಟ್‌ ಇರುತ್ತದೆ. ಈ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದವರ ಮೂಲ ದಾಖಲೆಗಳ ಪರಿಶೀಲಿಸಲಾಗುತ್ತದೆ. ಕೊನೆಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ 30,000 ರೂ. – 39, 995 ರೂ. ಮಾಸಿಕ ವೇತನ ದೊರೆಯಲಿದೆ.

SSC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login)
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್‌ ಸೆಲ್‌ ಭದ್ರತೆಗೆ 7 ಜನ ಸಿಬ್ಬಂದಿ ನಿಯೋಜನೆ! ಕಾರಣ ಇದು

Actor Darshan: ದರ್ಶನ್‌ ಸೆಲ್‌ಗೆ ಹೊಸ ಸಿಬ್ಬಂದಿಗಳ ನೇಮಕ ಮಾಡಲಾಗಿದೆ. ಹೊರಗಿನವರು ಯಾರಾದರೂ ಭೇಟಿಗೆ ಬಂದರೆ ಜೊತೆಗೆ ಜೈಲಿನ ಸಿಬ್ಬಂದಿ ಇರುತ್ತಾರೆ. ಇಬ್ಬರು ಸಿಬ್ಬಂದಿಯ ಭದ್ರತೆಯಲ್ಲಿ ದರ್ಶನ್‌ ಕರೆತರಲಾಗುತ್ತದೆ. ಹೊರಗಿನಿಂದ ಬಂದವರ ಭೇಟಿ ಬಳಿಕ ಮತ್ತೆ ಭದ್ರತೆಯಲ್ಲೇ ವಾಪಸ್ಸಾಗುತ್ತಾನೆ.‌

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿರುವ ನಟ ದರ್ಶನ್ (Actor Darshan) ಸೆಲ್‌ಗೆ ಜೈಲಾಧಿಕಾರಿಗಳು ಭದ್ರತೆ ಹೆಚ್ಚಿಸಿದ್ದಾರೆ. ದರ್ಶನ್ ಕೊಠಡಿಗೆ ಹೊಸದಾಗಿ ಏಳು ಜನ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಹಳೆಯ ಸಿಬ್ಬಂದಿಯನ್ನು ಬದಲಾಯಿಸಲಾಗಿದೆ.

ಈ ಹಿಂದೆ ಸಿದ್ದಾರೂಢ ಎಂಬ ಕೈದಿ ಹೊರ ಬಂದ ಬಳಿಕ ಒಂದಷ್ಟು ಜೈಲು ವಿಚಾರಗಳನ್ನು ಹಂಚಿಕೊಂಡಿದ್ದ. ತಾನು ದರ್ಶನ್‌ ಭೇಟಿ ಮಾಡಿದ್ದೆ ಎಂದು ಹೇಳಿಕೊಂಡಿದ್ದ. ಹೀಗಾಗಿ ಇಂಥ ಘಟನೆ ಮರುಕಳಿಸದಂತೆ ದರ್ಶನ್ ಕೊಠಡಿಯ ಹೊರ ಭಾಗದಲ್ಲಿ ಸಿಬ್ಬಂದಿ ಭದ್ರತೆಗೆ ನಿಯೋಜನೆಗೊಳಿಸಲಾಗಿದೆ. ಇದೀಗ ಬೇರೆ ಯಾವ ಕೈದಿಯೂ ಭೇಟಿ ಆಗದಂತೆ ಕಟ್ಟೆಚ್ಚರ ವಹಿಸಲಾಗಿದೆ.

ದರ್ಶನ್‌ ಸೆಲ್‌ಗೆ ಹೊಸ ಸಿಬ್ಬಂದಿಗಳ ನೇಮಕ ಮಾಡಲಾಗಿದೆ. ಹೊರಗಿನವರು ಯಾರಾದರೂ ಭೇಟಿಗೆ ಬಂದರೆ ಜೊತೆಗೆ ಜೈಲಿನ ಸಿಬ್ಬಂದಿ ಇರುತ್ತಾರೆ. ಇಬ್ಬರು ಸಿಬ್ಬಂದಿಯ ಭದ್ರತೆಯಲ್ಲಿ ದರ್ಶನ್‌ ಕರೆತರಲಾಗುತ್ತದೆ. ಹೊರಗಿನಿಂದ ಬಂದವರ ಭೇಟಿ ಬಳಿಕ ಮತ್ತೆ ಭದ್ರತೆಯಲ್ಲೇ ವಾಪಸ್ಸಾಗುತ್ತಾನೆ.‌

ಈ ನಡುವೆ. ಮನೆಯೂಟಕ್ಕಾಗಿ ದರ್ಶನ್‌ ಸಲ್ಲಿಸಿದ್ದ ಅರ್ಜಿಯನ್ನೂ ವಾಪಸ್‌ ಪಡೆಯಲಾಗಿದೆ. ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (‌Actor Darshan) ಪರ ವಕೀಲರು ವಾಪಸ್‌ ಪಡೆದಿದ್ದಾರೆ. ತಾಂತ್ರಿಕ ಕಾರಣದಿಂದ ನಟ ದರ್ಶನ್‌ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಚಾರ್ಜ್‌ಶೀಟ್‌ ಸಲ್ಲಿಕೆಗೆ ಸಿದ್ಧತೆ

ರೇಣುಕಾಸ್ವಾಮಿ ಕೊಲೆ ಸಂಬಂಧ ನಟ ದರ್ಶನ್ ಹಾಗೂ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಹುತೇಕ ಆಗಸ್ಟ್‌ನಲ್ಲಿ ಚಾರ್ಜ್‌ಶೀಟ್ ಮಾಡಲು ಮುಂದಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಕ್ರೋಢೀಕರಣದಲ್ಲಿ ಪೊಲೀಸರು ತೊಡಗಿದ್ದಾರೆ. ಆರೋಪಿಗಳ ಹೇಳಿಕೆಗಳು, ಸಾಕ್ಷಿಗಳ ಹೇಳಿಕೆಗಳು, 164 ಹೇಳಿಕೆ ಪ್ರತಿಗಳು, ಮಹಜರು ಕಾಪಿಗಳು, ಸಿಡಿಆರ್ ರಿಪೋರ್ಟ್, ಆರ್‌ಟಿಓ ರಿಪೋರ್ಟ್‌ಗಳು, ಮೆಡಿಕಲ್ ರಿಪೋರ್ಟ್ಸ್ ಸೇರಿದಂತೆ ಹಲವು ದಾಖಲೆಗಳು ಅಡಕವಾಗಬೇಕಿವೆ.

ಹಲವಾರು ದಾಖಲೆಗಳು ಇನ್ನೂ ಪೊಲೀಸರ ಕೈ ಸೇರಬೇಕಿವೆ. ಸಿಸಿಟಿವಿ ಫೂಟೇಜ್ ರಿಪೋರ್ಟ್, ಬಟ್ಟೆಗಳ ರಿಪೋರ್ಟ್, ಸ್ಥಳದಲ್ಲಿ ಸಂಗ್ರಹಿಸಿದ ಸ್ಯಾಂಪಲ್‌ಗಳ ರಿಪೋರ್ಟ್, ಮರಣೋತ್ತರ ಪರೀಕ್ಷೆಯಲ್ಲಿ ಸಂಗ್ರಹಿಸಿದ ಸ್ಯಾಂಪಲ್ ರಿಪೋರ್ಟ್ಸ್, ಮೊಬೈಲ್ ರಿಟ್ರೀವ್ ರಿಪೋರ್ಟ್, ಎಫ್ಎಸ್ಎಲ್‌ಗೆ ರವಾನಿಸಿದ ಸ್ಯಾಂಪಲ್ ರಿಪೋರ್ಟ್ಸ್‌ಗೆ ಪೊಲೀಸರು ಕಾದಿದ್ದಾರೆ. ವರದಿಗಳು ಬಂದ ನಂತರ ಪರಿಶೀಲನೆ ನಡೆಸಿ ಚಾರ್ಜ್‌ಶೀಟ್ ತಯಾರಿಸಲಿದ್ದಾರೆ.

ರಿಪೋರ್ಟ್‌ಗಳನ್ನು ಆದಷ್ಟು ಬೇಗ ನೀಡುವಂತೆ ಎಫ್ಎಸ್ಎಲ್ ಹಾಗೂ ಸಿಐಡಿ ಟೆಕ್ನಿಕಲ್ ಸೆಲ್‌ಗೆ ಪೊಲೀಸರು ಮನವಿ ಮಾಡಿದ್ದಾರೆ. ಇನ್ನೂ ಕೆಲವು ವರದಿಗಳು ಹೈದರಾಬಾದ್ ಎಫ್ಎಸ್ಎಲ್‌ನಿಂದ ಬರಬೇಕಿದೆ. ಸುಮಾರು 66ಕ್ಕೂ ಹೆಚ್ಚು ಸ್ಯಾಂಪಲ್‌ಗಳನ್ನು ಎಫ್ಎಸ್ಎಲ್‌ಗೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ಹಲವಾರು ಪ್ರತ್ಯಕ್ಷ ಪರೋಕ್ಷ ಸಾಕ್ಷಿಗಳ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.

ಈಗಾಗಲೇ ಪ್ರಕರಣ ದಾಖಲಾಗಿ ಒಂದೂವರೆ ತಿಂಗಳಿಗೂ ಅಧಿಕ ಕಾಲವಾಗಿದೆ. ಸೆಪ್ಟೆಂಬರ್ 8ರೊಳಗೆ ಚಾರ್ಜ್‌ಶೀಟ್ ಮಾಡಬೇಕು. ಆದ್ದರಿಂದ ಕೊನೆ ದಿನದವರೆಗೂ ಕಾಯದೆ ಆದಷ್ಟು ಬೇಗ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದು, ಆಗಸ್ಟ್ ಮಧ್ಯ ವಾರದಲ್ಲಿ ಸಲ್ಲಿಸಬಹುದು.

ಪಶ್ಚಿಮ ವಿಭಾಗ ಪೊಲೀಸರು ಎಸಿಪಿ ಚಂದನ್, ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ನಾಗೇಶ್ ಹಾಗೂ ತಂಡದಿಂದ ಚಾರ್ಜ್‌ಶೀಟ್‌ ತಯಾರಿ ನಡೆದಿದ್ದು, ಹಲವು ಸಿಬ್ಬಂದಿ ನಿಯೋಜಿಸಲಾಗಿದೆ. 20ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿ ಬಳಸಿಕೊಂಡು, ಪ್ರತಿ ಠಾಣೆಯ ಇನ್‌ಸ್ಪೆಪೆಕ್ಟರ್ ಹಾಗು ಪಿಎಸ್ಐಗಳಿಗೆ ಒಂದೊಂದು ಜವಾಬ್ದಾರಿ ನೀಡಲಾಗಿದೆ.

ಇದನ್ನೂ ಓದಿ: ‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

Continue Reading
Advertisement
WhatsApp Shut down
ದೇಶ3 mins ago

Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆಪ್‌? ಕೇಂದ್ರ ಸರ್ಕಾರ ಹೇಳೋದೇನು?

Karnataka Rain
ಮಳೆ4 mins ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

ಮಳೆ11 mins ago

Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Paris Olympics 2024
ಕ್ರೀಡೆ20 mins ago

Paris Olympics 2024: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್‌ ಜೋಡಿ

Mekedatu Project
ಕರ್ನಾಟಕ25 mins ago

Mekedatu Project: ಎಚ್‌ಡಿಕೆ ಅನುಮತಿ ಕೊಡಿಸಿದರೆ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

HD Kumaraswamy
ಕರ್ನಾಟಕ48 mins ago

Wayanad Landslide: ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

Bharachukki falls
ಚಾಮರಾಜನಗರ56 mins ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

Nawab Malik
ದೇಶ58 mins ago

Nawab Malik:‌ ದಾವೂದ್‌ ಇಬ್ರಾಹಿಂ ಜೊತೆ ನಂಟು ಆರೋಪ ಹೊಂದಿರುವ NCP ನಾಯಕ ನವಾಬ್‌ ಮಲಿಕ್‌ಗೆ ಜಾಮೀನು

SSC Recruitment 2024
ಉದ್ಯೋಗ1 hour ago

SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯುಸಿ ಪಾಸಾದವರು ಅಪ್ಲೈ ಮಾಡಿ

Paris Olympics 2024
ಕ್ರೀಡೆ1 hour ago

Paris Olympics 2024: ಭಾರತ-ಅರ್ಜೆಂಟೀನಾ ಹಾಕಿ ಪಂದ್ಯ ವೀಕ್ಷಿಸಿದ ರಾಹುಲ್​ ದ್ರಾವಿಡ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 mins ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ56 mins ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ20 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ21 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ24 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌