ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯ ದಿನಾಂಕ 1 ತಿಂಗಳು ವಿಸ್ತರಣೆಗೆ ಮನವಿ - Vistara News

ವಾಣಿಜ್ಯ

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯ ದಿನಾಂಕ 1 ತಿಂಗಳು ವಿಸ್ತರಣೆಗೆ ಮನವಿ

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯೆ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸುವಂತೆ ಅಖಿಲ ಭಾರತ ತೆರಿಗೆ ವೃತ್ತಿಪರರ ಒಕ್ಕೂಟವು ಕೇಂದ್ರ ನೇರ ತೆರಿಗೆ ಮಂಡಳಿಗೆ ಮನವಿ ಮಾಡಿದೆ. ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

ITR Filing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಆದಾಯ ತೆರಿಗೆ ರಿಟರ್ನ್ (Income Tax Returns) ಸಲ್ಲಿಕೆಯೆ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸುವಂತೆ ಅಖಿಲ ಭಾರತ ತೆರಿಗೆ ವೃತ್ತಿಪರರ ಒಕ್ಕೂಟ (All-India Federation of Tax Practitioners-AIFTP)ವು ಕೇಂದ್ರ ನೇರ ತೆರಿಗೆ ಮಂಡಳಿ (Central Board of Direct Taxes-CBDT)ಗೆ ಮನವಿ ಮಾಡಿದೆ. ಸದ್ಯ  ದಂಡ ರಹಿತವಾಗಿ ಐಟಿಆರ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ.

ಎಐಎಫ್‌ಟಿಪಿ ರಾಷ್ಟ್ರೀಯ ಅಧ್ಯಕ್ಷ ನಾರಾಯಣ್ ಜೈನ್ ಮತ್ತು ನೇರ ತೆರಿಗೆ ಪ್ರಾತಿನಿಧ್ಯ ಸಮಿತಿ ಅಧ್ಯಕ್ಷ ಎಸ್.ಎಂ.ಸುರಾನಾ ಅವರು ಸಲ್ಲಿಸಿದ ಮನವಿಯಲ್ಲಿ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಉಲ್ಲೇಖಿಸಲಾಗಿದೆ.

ಕೇರಳ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿನ ಭೂಕುಸಿತದಿಂದ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ವಿವಿಧ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಲು ಮತ್ತು ಪರಿಶೀಲಿಸಲು ತೊಂದರೆ ಎದುರಾಗಿದೆ. ಆದಾಯ ತೆರಿಗೆ ಪೋರ್ಟಲ್ ಮತ್ತು ಸಾಫ್ಟ್‌ವೇರ್‌ನಲ್ಲಿ ನಿರಂತರ ಸಮಸ್ಯೆಗಳಿವೆ ಎಂದು ತಿಳಿಸಲಾಗಿದೆ. ಜತೆಗೆ ಬ್ಯಾಂಕುಗಳ ಮೂಲಕ ಸ್ವಯಂ ಮೌಲ್ಯಮಾಪನ ತೆರಿಗೆ ಪಾವತಿಸುವ ಮತ್ತು ಚಲನ್‌ಗಳನ್ನು ಡೌನ್‌ಲೋಡ್ ಮಾಡುವ ಪ್ರಕ್ರಿಯೆಯು‌ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಆದರೆ ಐಟಿಆರ್ ಫೈಲಿಂಗ್ ಗಡುವಿನ ವಿಸ್ತರಣೆಯ ಬಗ್ಗೆ ಹಣಕಾಸು ಸಚಿವಾಲಯ ಯಾವುದೇ ಔಪಚಾರಿಕ ಪ್ರಕಟಣೆಯನ್ನು ಇದುವರೆಗೆ ಹೊರಡಿಸಿಲ್ಲ.

ದಂಡ ಎಷ್ಟು?

ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಗಡುವು ಮುಗಿದರೂ ದಂಡ ಸಹಿತ ರಿಟರ್ನ್ ಸಲ್ಲಿಕೆಗೆ ಅವಕಾಶವಿದೆ. ತೆರಿಗೆ ಲೆಕ್ಕಪರಿಶೋಧನೆಯ ಅಗತ್ಯವಿರುವ ತೆರಿಗೆದಾರರಿಗೆ ದಂಡ ಸಹಿತ ಐಟಿಆರ್ ಫೈಲ್ ಮಾಡಲು 2024ರ ಅಕ್ಟೋಬರ್ 31ರವರೆಗೆ ಅವಕಾಶವಿದೆ. ಆರ್ಥಿಕ ವರ್ಷ 2024-25ಗಾಗಿ ಪರಿಷ್ಕೃತ ಮತ್ತು ತಡವಾದ ರಿಟರ್ನ್‌ಗಳನ್ನು ಸಲ್ಲಿಸಲು ಅಂತಿಮ ಗಡುವು 2024ರ ಡಿಸೆಂಬರ್ 31 ಆಗಿದೆ.

ತೆರಿಗೆ ಸಲ್ಲಿಸುವಿಕೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆದಾಯ ತೆರಿಗೆ ಇಲಾಖೆಯು ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ವಿವಿಧ ಐಟಿಆರ್ ಫಾರ್ಮ್‌ಗಳು ಮತ್ತು ಎಕ್ಸೆಲ್ ಮಾಹಿತಿಗಳನ್ನು ನಿರ್ಧಿಷ್ಟ ವೆಬ್‌‌ಸೈಟ್ ಮೂಲಕ ಪ್ರಕಟಿಸುತ್ತದೆ. ಆದರೂ ಹೆಚ್ಚಿನ ಸಂಬಳ ಪಡೆಯುವ ವ್ಯಕ್ತಿಗಳು ತಮ್ಮ ಫಾರ್ಮ್ 16 ಅನ್ನು ಉದ್ಯೋಗದಾತರಿಂದ ಸ್ವೀಕರಿಸಲು ಕಾಯುತ್ತಾರೆ. ಸಾಮಾನ್ಯವಾಗಿ ಇದನ್ನು ಜೂನ್ ಕೊನೆಯಲ್ಲಿ ಅಥವಾ ಜುಲೈ ಆರಂಭದಲ್ಲಿ ವಿತರಿಸಲಾಗುತ್ತದೆ.

ಇದನ್ನೂ ಓದಿ: Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

ಜುಲೈ 31ರ ಗಡುವಿನ ನಂತರ ಐಟಿಆರ್ ಸಲ್ಲಿಸುವುದರಿಂದ ದಂಡ ಪಾವತಿಸಬೇಕಾಗುತ್ತದೆ. ನಿವ್ವಳ ತೆರಿಗೆಯ ಆದಾಯವು 5 ಲಕ್ಷ ರೂ. ವರೆಗೆ ಇದ್ದರೆ ತಡವಾಗಿ ತೆರಿಗೆ ರಿಟರ್ನ್‌ಗೆ ಗರಿಷ್ಠ ದಂಡ 1,000 ರೂ ಆಗಿದೆ. 5 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವವರು 5,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯಿದೆಯ ಪ್ರಕಾರ ಒಟ್ಟು ಆದಾಯವು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಾದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಆಭರಣ ಖರೀದಿಗೆ ಗೋಲ್ಡನ್‌ ಟೈಮ್‌; ಮತ್ತೆ ಇಳಿಮುಖವಾದ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 30) ಮತ್ತೆ ಇಳಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 20 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 21 ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,320 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,895 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 30) ಮತ್ತೆ ಇಳಿಕೆಯಾಗಿದೆ (Gold Rate Today). ಬಜೆಟ್‌ ಮಂಡನೆಯ ಬಳಿಕ ಸತತವಾಗಿ ಇಳಿದಿದ್ದ ದರ ಶನಿವಾರ ಮೊದಲ ಬಾರಿ ಏರಿಕೆಯಾಗಿತ್ತು. ಭಾನುವಾರ ಅದೇ ದರವನ್ನು ಕಾಯ್ದುಕೊಂಡಿದ್ದರೆ ಸೋಮವಾರ ಏರಿಕೆಯಾಗಿತ್ತು. ಇಂದು ಮತ್ತೆ ದರ ಕಡಿಮೆಯಾಗಿದ್ದು, ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 20 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 21 ಇಳಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,320 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,895 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 50,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 63,200 ಮತ್ತು ₹ 6,32,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 55,160 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 68,950 ಮತ್ತು ₹ 6,89,500 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,335 ₹ 6,910
ಮುಂಬೈ₹ 6,320 ₹ 6,895
ಬೆಂಗಳೂರು₹ 6,320 ₹ 6,895
ಚೆನ್ನೈ₹ 6,385 ₹ 6,965

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 84.50 ಹಾಗೂ 8 ಗ್ರಾಂಗೆ ₹ 676 ಇದೆ. 10 ಗ್ರಾಂ ₹ 845 ಹಾಗೂ 1 ಕಿಲೋಗ್ರಾಂ ₹ 84,500 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

Continue Reading

ಪ್ರಮುಖ ಸುದ್ದಿ

Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ

Liquor Price Karnataka: ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆ (Beer Price) ಮತ್ತೆ ಏರಿಕೆ ಮಾಡಲಾಗಿದೆ. ಕಳೆದ 17 ತಿಂಗಳಲ್ಲಿ ಐದನೇ ಸಲ ಬಿಯರ್ ಬೆಲೆ (Liquor Price Karnataka) ಏರಿಕೆಯಾಗುತ್ತಿದ್ದು, ನೊರೆ ಉಕ್ಕಿಸುವ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆಯಾಗಲಿದೆ. ದರ ಕೇಳಿಯೇ ಮದ್ಯಪ್ರಿಯರ ಕಿಕ್‌ ಇಳಿಯವಂತಾಗಿದೆ.

ಬಿಯರ್ ಬೆಲೆಯನ್ನು ಬಾಟಲಿಗೆ 10ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣವೊಡ್ಡಿ ಬೆಲೆ ಹೆಚ್ಚಿಸಲಾಗಿದೆ. ಬಿಯರ್ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಇತರ ದುಬಾರಿ ಹಾಟ್‌ ಮದ್ಯಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಮದ್ಯಪ್ರಿಯರು ಬಿಯರ್‌ಗೆ ತೃಪ್ತಿಪಟ್ಟುಕೊಳ್ಳೋಣ ಎಂದು ಭಾವಿಸಿದರೆ ಈಗ ಅದೂ ಸಾಧ್ಯವಿಲ್ಲದಾಗಿದೆ.

ಕಾಂಗ್ರೆಸ್ ಸರ್ಕಾರ ಬಂದಮೇಲೆ ಬಿಯರ್ ದರ ಸುಮಾರು 60 ರೂಪಾಯಿಯಷ್ಟು ಏರಿಕೆಯಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರಕಾರ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಅದರಿಂದ ದರ ಏರಿಕೆಯಾಗಿತ್ತು. ಆ ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ದವು.

ನಂತರ ಮತ್ತೆ ಸರ್ಕಾರದಿಂದ ಬಿಯರ್ ಮೇಲಿನ ಸುಂಕ‌ ಹೆಚ್ಚಳ ಮಾಡಿದ್ದ ಕಾರಣ ಕಳೆದ ಫೆಬ್ರವರಿಯಲ್ಲಿ ಬಿಯರ್ ದರ ಏರಿದೆ. ಇದೀಗ ಮತ್ತೆ ಬಿಯರ್ ದರ ಏರಿಕೆಗೆ ಕಂಪನಿಗಳು ತೀರ್ಮಾನಿಸಿವೆ. ಹೀಗಾಗಿ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 60 ರೂ. ವರೆಗೆ ಹೆಚ್ಚಳವಾದಂತಾಗಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಖಜಾನೆ ತುಂಬಿಸಿಕೊಳ್ಳಲು ಅಬಕಾರಿ ಸುಂಕವನ್ನು ಅನಿಯಮಿತವಾಗಿ ಹೆಚ್ಚಿಸುವ ದಾರಿಯನ್ನು ಸರಕಾರ ಹಿಡಿದಿದೆ ಎಂದು ಲಿಕ್ಕರ್‌ಪ್ರಿಯರು ಆರೋಪಿಸಿದ್ದಾರೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading

ದೇಶ

Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

Jio Games: ದೇಶದ ಮುಂಚೂಣಿ ಗೇಮಿಂಗ್‌ ಫ್ಲಾಟ್‌ಫಾರಂ ಆಗಿರುವ ʼಜಿಯೋಗೇಮ್ಸ್ʼ, ಜಿಯೋಗೇಮ್ಸ್‌ ಆಪ್‌ ಮತ್ತು ಜಿಯೋ ಸೆಟ್‌ಆಫ್‌ ಬಾಕ್ಸ್‌ನಲ್ಲಿ ಗೂಗಲ್‌ ಗೇಮ್‌ಸ್ನ್ಯಾಕ್ಸ್‌ ಅನ್ನು ಸಂಯೋಜಿಸುವ ಮೂಲಕ ತನ್ನ ಗೇಮಿಂಗ್‌ ಪೋರ್ಟ್‌ಫೋಲಿಯೊವನ್ನು ವಿಸ್ತರಿಸಿಕೊಂಡಿದೆ. ಇದರಿಂದಾಗಿ ಜಿಯೋಗೇಮ್ಸ್ ಬಳಕೆದಾರರು‌ Daily Sudoku, Om Nom Run, and Traffic Tom ಸೇರಿದಂತೆ ಜನಪ್ರಿಯವಾದ 8 ಗೇಮ್‌ಗಳನ್ನು ಆಡಬಹುದಾಗಿದೆ.

VISTARANEWS.COM


on

Koo

ನವದೆಹಲಿ: ದೇಶದ ಮುಂಚೂಣಿ ಗೇಮಿಂಗ್‌ ಫ್ಲಾಟ್‌ಫಾರಂ ಆಗಿರುವ ʼಜಿಯೋಗೇಮ್ಸ್ʼ, ಜಿಯೋಗೇಮ್ಸ್‌ ಆಪ್‌ ಮತ್ತು ಜಿಯೋ ಸೆಟ್‌ಆಫ್‌ ಬಾಕ್ಸ್‌ನಲ್ಲಿ ಗೂಗಲ್‌ ಗೇಮ್‌ಸ್ನ್ಯಾಕ್ಸ್‌ ಅನ್ನು ಸಂಯೋಜಿಸುವ ಮೂಲಕ ತನ್ನ ಗೇಮಿಂಗ್‌ ಪೋರ್ಟ್‌ಫೋಲಿಯೊವನ್ನು (Jio Games) ವಿಸ್ತರಿಸಿಕೊಂಡಿದೆ. ಇದರಿಂದಾಗಿ ಜಿಯೋಗೇಮ್ಸ್ ಬಳಕೆದಾರರು‌ Daily Sudoku, Om Nom Run and Traffic Tom ಸೇರಿದಂತೆ ಜನಪ್ರಿಯವಾದ 8 ಗೇಮ್‌ಗಳನ್ನು ಆಡಬಹುದಾಗಿದೆ.

Om Nom Run

ʼಗೇಮ್‌ಸ್ನ್ಯಾಕ್ಸ್‌ʼನ ಎಲ್ಲ ಗೇಮ್‌ಗಳೂ ಜಿಯೋಗೇಮ್ಸ್‌ ಬಳಕೆದಾರರಿಗೆ ಉಚಿತವಾಗಿರಲಿವೆ. ಆಂಡ್ರಾಯ್ಡ್‌ ಫೋನ್‌ ಬಳಕೆದಾರರು ಜಿಯೋಗೇಮ್ಸ್‌ ಆಪ್‌ನ ಹೋಮ್‌ಪೇಜ್‌ನಲ್ಲಿ ಈ ಗೇಮ್‌ಗಳನ್ನು ಸುಲಭವಾಗಿ ಪಡೆಯಬಹುದು. ಜಿಯೋಗೇಮ್ಸ್‌ನ ಮಿನಿ ಆಪ್‌ಗಳಾದ ಮೈಜಿಯೋ ಮತ್ತು ಜಿಯೋಟಿವಿಯಲ್ಲಿಯೂ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್‌ಗಳು ಲಭ್ಯವಿವೆ.

Traffic Tom
Traffic Tom

ಗೂಗಲ್‌ನ ʼಗೇಮ್‌ಸ್ನ್ಯಾಕ್ಸ್‌ ಗೇಮ್‌ʼ ಗಳು ಕಡಿಮೆ ಗಾತ್ರದ್ದಾಗಿರುವ ಜತೆಗೆ ಬೇಗನೆ ತೆರೆದುಕೊಳ್ಳುತ್ತವೆ. ಕಡಿಮೆ ಮೆಮೊರಿ ಇರುವ ಸಾಧನಗಳಲ್ಲಿ, ವಿವಿಧ ನೆಟ್‌ವರ್ಕ್‌ ಸ್ಥಿತಿಯಲ್ಲಿಯೂ HTML5 ನ ಈ ಗೇಮ್‌ಗಳನ್ನು ಆಡಬಹುದಾಗಿದೆ.

ಇದನ್ನೂ ಓದಿ: Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

ಭಾರತದಲ್ಲಿ ಲಕ್ಷಗಟ್ಟಲೆ ಬಳಕೆದಾರರ ಗೇಮಿಂಗ್‌ ಅನುಭವವನ್ನು ಸುಧಾರಿಸುವುದು ಈ ಸಹಭಾಗಿತ್ವದ ಉದ್ದೇಶವಾಗಿದೆ ಎಂದು ಕಂಪನಿಯು ತಿಳಿಸಿದೆ. ಇದರಿಂದಾಗಿ ಸಾಮಾನ್ಯವಾದ ಗೇಮ್‌ಗಳನ್ನು ಗ್ರಾಹಕರು ಸುಲಭವಾಗಿ ಆಡಬಹುದು ಎಂದು ತಿಳಿಸಿದೆ.

Continue Reading

ಮನಿ-ಗೈಡ್

Mahila Samman Savings Certificate: ಮಹಿಳಾ ಸಮ್ಮಾನ್‌‌ನಲ್ಲಿ ಹೂಡಿಕೆಯಿಂದ ಏನು ಲಾಭ?

2023ರ ಬಜೆಟ್ ನಲ್ಲಿ ಘೋಷಿಸಿರುವ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ (Mahila Samman Savings Certificate) ಮಹಿಳಾ ಹೂಡಿಕೆದಾರರಿಗೆ ಭಾರತ ಸರ್ಕಾರವು ನೀಡುವ ಸಣ್ಣ ಉಳಿತಾಯ ಪ್ರಮಾಣ ಪತ್ರವಾಗಿದೆ. ಕಡಿಮೆ ಸಮಯದಲ್ಲಿ ಮಹಿಳೆಯರಿಗೆ ಉತ್ತಮ ಆದಾಯವನ್ನು ನೀಡಲು ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯನ್ನು ಸರ್ಕಾರವು 2025 ರವರೆಗೆ ಮುಂದುವರಿಸಲಿದೆ. ಈ ಯೋಜನೆಯ ಪ್ರಯೋಜನಗಳ ವಿವರ ಇಲ್ಲಿದೆ.

VISTARANEWS.COM


on

By

Mahila Samman Savings Certificate
Koo

ಮಹಿಳಾ ಹೂಡಿಕೆದಾರರನ್ನು ಆಕರ್ಷಿಸಲು ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ಪ್ರಕಟಿಸುತ್ತಲೇ ಇರುತ್ತದೆ. ಇದರಲ್ಲಿ 2023ರ ಬಜೆಟ್ ನಲ್ಲಿ (Budget 2023) ಘೋಷಿಸಿರುವ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ (Mahila Samman Savings Certificate:) ಕೂಡ ಒಂದಾಗಿದೆ. ಇದು ಮಹಿಳಾ ಹೂಡಿಕೆದಾರರಿಗೆ ಭಾರತ ಸರ್ಕಾರವು ನೀಡುವ ಸಣ್ಣ ಉಳಿತಾಯ ಪ್ರಮಾಣ (small savings certificate) ಪತ್ರವಾಗಿದೆ.

ಇದರಲ್ಲಿ ಹೂಡಿಕೆ ಮಾಡುವ ಮೂಲಕ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಆರ್ಥಿಕವಾಗಿ ಸಬಲರಾಗಬಹುದು ಎಂದು ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕಡಿಮೆ ಸಮಯದಲ್ಲಿ ಮಹಿಳೆಯರಿಗೆ ಉತ್ತಮ ಆದಾಯವನ್ನು ನೀಡಲು ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯನ್ನು ಸರ್ಕಾರವು 2025ರವರೆಗೆ ಮುಂದುವರಿಸಲಿದೆ.

2024ರಲ್ಲಿ ವಿಸ್ತರಿಸಲಾಗಿದೆಯೇ?

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರದ ಕುರಿತು 2024ರ ಬಜೆಟ್‌ನಲ್ಲಿ ಯಾವುದೇ ಪ್ರಕಟಣೆಯನ್ನು ಮಾಡಲಾಗಿಲ್ಲ. ಪ್ರಸ್ತುತ, ಬಡ್ಡಿ ದರ ಮತ್ತು ಹೂಡಿಕೆಯ ಸಮಯದ ಮಿತಿ ಮೊದಲಿನಂತೆಯೇ ಇರುತ್ತದೆ. ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವು ಏಪ್ರಿಲ್ 2023 ರಿಂದ ಮಾರ್ಚ್ 2025 ರವರೆಗೆ 2 ವರ್ಷಗಳವರೆಗೆ ಲಭ್ಯವಿರುವ ಒಂದು ಬಾರಿಯ ಯೋಜನೆಯಾಗಿದೆ. ಇದರ ಖಾತೆಯನ್ನು ಯಾವುದೇ ಪೋಸ್ಟ್ ಆಫೀಸ್‌ನಲ್ಲಿ ತೆರೆಯಬಹುದು. ಆದರೆ, ಕೆಲವು ಬ್ಯಾಂಕ್‌ಗಳು ತಮ್ಮೊಂದಿಗೆ ಈ ಖಾತೆ ತೆರೆಯುವ ಸೌಲಭ್ಯವನ್ನೂ ಒದಗಿಸುತ್ತಿವೆ.

Mahila Samman Savings Certificate
Mahila Samman Savings Certificate


ಯಾರು ತೆರೆಯಬಹುದು?

ಈ ಯೋಜನೆಯ ಅಡಿಯಲ್ಲಿ ಯಾವುದೇ ವಯಸ್ಸಿನ ಭಾರತೀಯ ಮಹಿಳೆ ಖಾತೆಯನ್ನು ತೆರೆಯಬಹುದು. ಪುರುಷ ಪೋಷಕರು ತಮ್ಮ ಅಪ್ರಾಪ್ತ ಮಗಳಿಗೆ ಈ ಖಾತೆಯನ್ನು ತೆರೆಯಬಹುದು. ಈ ಯೋಜನೆಯು ಅಪ್ರಾಪ್ತ ಬಾಲಕಿಯರಿಗೆ ಹಣಕಾಸಿನ ಉತ್ಪನ್ನಗಳಲ್ಲಿ ಹೂಡಿಕೆ ಮಾಡಲು ಅವಕಾಶವನ್ನು ಒದಗಿಸುತ್ತದೆ.

ಬಡ್ಡಿ ಎಷ್ಟಿದೆ?

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರವು ವಾರ್ಷಿಕವಾಗಿ ಶೇ. 7.5ರ ಬಡ್ಡಿಯನ್ನು ನೀಡುತ್ತದೆ. ಇದನ್ನು ಪ್ರತಿ ತ್ರೈಮಾಸಿಕದಲ್ಲಿ ಖಾತೆಗೆ ಸೇರಿಸಲಾಗುತ್ತದೆ. ಆದರೆ ಬಡ್ಡಿ ಮತ್ತು ಅಸಲು ಮುಕ್ತಾಯದ ಮೇಲೆ ಮಾತ್ರ ಲಭ್ಯವಿರುತ್ತದೆ. ಈ ಯೋಜನೆಯ ಮುಕ್ತಾಯ ಅವಧಿಯು 2 ವರ್ಷಗಳು. ನೀವು 2 ವರ್ಷಗಳವರೆಗೆ ಈ ಯೋಜನೆಯಲ್ಲಿ 2 ಲಕ್ಷವನ್ನು ಹೂಡಿಕೆ ಮಾಡಿದರೆ ಮುಕ್ತಾಯದ ವೇಳೆಗೆ 2.32 ಲಕ್ಷ ರೂ. ವನ್ನು ಪಡೆಯಬಹುದು.

ಇದನ್ನೂ ಓದಿ: Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಹೂಡಿಕೆ ಮಿತಿ

ಈ ಯೋಜನೆಯಲ್ಲಿ ಕನಿಷ್ಠ 1,000 ರೂ. ಗಳನ್ನು 2 ವರ್ಷಗಳವರೆಗೆ ಹೂಡಿಕೆ ಮಾಡಬಹುದು. ಗರಿಷ್ಠ ಹೂಡಿಕೆ ಮಿತಿ ಪ್ರತಿ ಖಾತೆಗೆ 2 ಲಕ್ಷ ರೂ. 1000 ರೂ. ಗಿಂತ ಹೆಚ್ಚಿನ ಮೊತ್ತವನ್ನು 100 ರ ಗುಣಕಗಳಲ್ಲಿ ಮಾತ್ರ ಠೇವಣಿ ಮಾಡಬಹುದು. ಖಾತೆಯನ್ನು ತೆರೆದ 1 ವರ್ಷದ ಅನಂತರ ಒಟ್ಟು ಠೇವಣಿ ಮೊತ್ತದ ಶೇ. 40ರಷ್ಟನ್ನು ಹಿಂಪಡೆಯಬಹುದು.

Continue Reading
Advertisement
Viral Video
Latest2 mins ago

Viral Video: ಕುದಿಯುತ್ತಿರುವ ಹಾಲಿನ ಮಡಿಕೆಯೊಳಗೆ ಮಗುವನ್ನು ಮುಳುಗಿಸಿದ ಅರ್ಚಕ! ಗಾಬರಿಗೊಳಿಸುವ ವಿಡಿಯೊ

Jaya Bachchan
ದೇಶ11 mins ago

Parliament Session: ಪತಿ ಅಮಿತಾಬ್‌ ಹೆಸರು ಜಯಾ ಬಚ್ಚನ್‌ಗೆ ಅಲರ್ಜಿ! ಸಂಸತ್‌ನಲ್ಲಿ ಆ ಹೆಸರು ಹೇಳಬೇಡಿ ಎಂದ ನಟಿ!

3 private hospitals in Yallapur have been locked for not following the necessary rules under the KPME Act
ಉತ್ತರ ಕನ್ನಡ18 mins ago

Uttara Kannada News: ನಿಯಮ ಪಾಲಿಸದ ಯಲ್ಲಾಪುರದ 3 ಖಾಸಗಿ ಆಸ್ಪತ್ರೆಗಳಿಗೆ ಬೀಗ

Viral Video
Latest21 mins ago

Viral Video: ಸಾಕ್ಸ್‌ನೊಳಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ; ಸಿಕ್ಕಿಬಿದ್ದ ಪಾಕ್‌ ಗಗನಸಖಿ!

MUDA scam
ಕರ್ನಾಟಕ42 mins ago

MUDA scam: ಸಮಾಜವಾದಿ ಮುಖವಾಡ, ಅಹಿಂದ ಅಲಂಕಾರ, ಸತ್ಯವಂತನ ಸಿಂಗಾರ ಕಳಚಿಬಿದ್ದಿದೆ: ಸಿಎಂ ವಿರುದ್ಧ ಎಚ್‌ಡಿಕೆ ಕಿಡಿ

Shiradi Landslide
ಬೆಂಗಳೂರು53 mins ago

Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

Manu Bhaker
ಕ್ರೀಡೆ54 mins ago

Manu Bhaker: ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್

WhatsApp Shut down
ದೇಶ1 hour ago

Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆ್ಯಪ್‌? ಕೇಂದ್ರ ಸರ್ಕಾರ ಹೇಳೋದೇನು?

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

ಮಳೆ1 hour ago

Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ21 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ22 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌