Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ 'ವಿದ್ಯಾಧನ', 'ಉತ್ಕರ್ಷ' ಯೋಜನೆ - Vistara News

ವಾಣಿಜ್ಯ

Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

Tata Motors: ಟಾಟಾ ಮೋಟಾರ್ಸ್ ಸಂಸ್ಥೆಯು ಪುಣೆ, ಲಕ್ನೋ, ಜಮ್‌ಶೆಡ್‌ಪುರ, ಧಾರವಾಡ, ಸನಂದ್ ಮತ್ತು ಪಂತ್ ನಗರ ಸೇರಿದಂತೆ ಭಾರತದಾದ್ಯಂತ ಇರುವ ತಮ್ಮ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ತಂತ್ರಜ್ಞರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ‘ವಿದ್ಯಾಧನ’ ಮತ್ತು ‘ಉತ್ಕರ್ಷ’ ಎಂಬ ಎರಡು ವಿಶೇಷ ಧನಸಹಾಯ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿರುವುದಾಗಿ ಇಂದು ಘೋಷಿಸಿದೆ. ಈ ಮೂಲಕ ಕಂಪನಿಯು ಮಹತ್ವಾಕಾಂಕ್ಷೆ ಮತ್ತು ಅದನ್ನು ಸಾಧಿಸುವ ಪ್ರಕ್ರಿಯೆ ಮಧ್ಯೆ ಇರುವ ಅಂತರವನ್ನು ಕಡಿಮೆಗೊಳಿಸುವ ಗುರಿಯನ್ನು ಹೊಂದಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Tata Motors launched two programs Vidyadhana and Utkarsha to facilitate higher education of technician children
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ ಪ್ರಮುಖ ಆಟೋಮೊಬೈಲ್ ತಯಾರಕ ಟಾಟಾ ಮೋಟಾರ್ಸ್ ಸಂಸ್ಥೆಯು (Tata Motors) ಪುಣೆ, ಲಕ್ನೋ, ಜಮ್‌ಶೆಡ್‌ಪುರ, ಧಾರವಾಡ, ಸನಂದ್ ಮತ್ತು ಪಂತ್ ನಗರ ಸೇರಿದಂತೆ ಭಾರತದಾದ್ಯಂತ ಇರುವ ತಮ್ಮ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ತಂತ್ರಜ್ಞರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ‘ವಿದ್ಯಾಧನ’ ಮತ್ತು ‘ಉತ್ಕರ್ಷ’ ಎಂಬ ಎರಡು ವಿಶೇಷ ಧನಸಹಾಯ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿರುವುದಾಗಿ ಇಂದು ಘೋಷಿಸಿದೆ. ಈ ಮೂಲಕ ಕಂಪನಿಯು ಮಹತ್ವಾಕಾಂಕ್ಷೆ ಮತ್ತು ಅದನ್ನು ಸಾಧಿಸುವ ಪ್ರಕ್ರಿಯೆ ಮಧ್ಯೆ ಇರುವ ಅಂತರವನ್ನು ಕಡಿಮೆಗೊಳಿಸುವ ಗುರಿಯನ್ನು ಹೊಂದಿದೆ.

ʼವಿದ್ಯಾಧನʼ ಕಾರ್ಯಕ್ರಮದ ಅಡಿಯಲ್ಲಿ 10ನೇ ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ರಿಯಾಯಿತಿ ದರದಲ್ಲಿ ಶಿಕ್ಷಣ ಸಾಲಗಳನ್ನು ಒದಗಿಸಲಾಗುತ್ತದೆ. ‘ಉತ್ಕರ್ಷ’ ಕಾರ್ಯಕ್ರಮದಲ್ಲಿ ಹುಡುಗಿಯರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ವಿಶೇಷ ಚೇತನ ಮಕ್ಕಳಿಗೆ ಹೆಚ್ಚುವರಿ ವಾರ್ಷಿಕ ವಿದ್ಯಾರ್ಥಿವೇತನ ಪ್ರಯೋಜನ ನೀಡಲಾಗುತ್ತದೆ.

ವಿದ್ಯಾಧನ ಮತ್ತು ಉತ್ಕರ್ಷ ಕಾರ್ಯಕ್ರಮ ಆರಂಭವನ್ನು ಘೋಷಿಸಿದ ಟಾಟಾ ಮೋಟಾರ್ಸ್‌ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ (ಸಿಎಚ್‌ಆರ್‌ಓ) ಸೀತಾರಾಮ್ ಕಂಡಿ ಮಾತನಾಡಿ, “ಪ್ರಗತಿ ಮತ್ತು ಅಭಿವೃದ್ಧಿ ಸಾಧಿಸಲು ಗುಣಮಟ್ಟದ ಶಿಕ್ಷಣ ಬಹಳ ಮುಖ್ಯ. ಈ ಕಾರ್ಯಕ್ರಮಗಳು ಸುಲಭವಾಗಿ ಉನ್ನತ ಶಿಕ್ಷಣ ಪಡೆಯುವಂತೆ ಮಾಡುತ್ತದೆ ಮತ್ತು ನಮ್ಮ ಮುಂದಿನ ಪೀಳಿಗೆಯ ಭವಿಷ್ಯದ ಹಾದಿಯನ್ನು ಉತ್ತಮಗೊಳಿಸುತ್ತದೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಆ.3ರಂದು ‘ಬೌದ್ಧ ಸಾಹಿತ್ಯ-ಹಲವು ನೆಲೆಗಳು’ ರಾಷ್ಟ್ರೀಯ ವಿಚಾರ ಸಂಕಿರಣ

ನಮ್ಮ ಸಂಸ್ಥೆಯಲ್ಲಿ ಕಷ್ಟಪಟ್ಟು ದುಡಿಯುವ ತಂತ್ರಜ್ಞರ ಮಕ್ಕಳು ತಮ್ಮ ಸ್ವಂತ ಕನಸುಗಳನ್ನು ಮತ್ತು ಅವರ ಹೆತ್ತವರ ಕನಸುಗಳನ್ನು ಈ ಕಾರ್ಯಕ್ರಮಗಳ ಮುಖಾಂತರ ಈಡೇರಿಸಲಿದ್ದಾರೆ. ಇನ್ನು ನಮ್ಮ ತಂತ್ರಜ್ಞರ ಮಕ್ಕಳು 10 ಮತ್ತು 12 ನೇ ತರಗತಿ ನಂತರ ತಮ್ಮ ಆಯ್ಕೆಯ ಯಾವುದೇ ವಿಷಯದಲ್ಲಿ ಅಧ್ಯಯನ ಮಾಡಲು ಮುಂದಾಗಬಹುದು. ಪೋಷಕರು ಅದಕ್ಕೆ ಅಗತ್ಯವಿರುವ ಹಣಕಾಸಿನ ಬಗ್ಗೆ ಇನ್ನು ಮುಂದೆ ಚಿಂತಿಸಬೇಕಾದ ಅಗತ್ಯ ಇರುವುದಿಲ್ಲ. ಸೂಕ್ತ ರೀತಿಯ ಕ್ವಾಲಿಫಿಕೇಷನ್ ಮತ್ತು ಕೌಶಲ್ಯಗಳನ್ನು ಹೊಂದುವುದರ ಮೂಲಕ ಯಶಸ್ವಿಯಾಗಿ ವೃತ್ತಿ ರೂಪಿಸಲು ಮತ್ತು ಜೀವನವನ್ನು ನಿರ್ಮಿಸಲು ಅವರಿಗೆ ಈ ಕಾರ್ಯಕ್ರಮಗಳು ಉತ್ತಮ ಅವಕಾಶವಾಗಿದೆ” ಎಂದು ತಿಳಿಸಿದರು.

ವಿದ್ಯಾಧನ

‘ವಿದ್ಯಾಧನ’ ಎಂಬುದು ಶಿಕ್ಷಣ ಸಾಲ ಕಾರ್ಯಕ್ರಮವಾಗಿದ್ದು, ಅದು ಮುಂದಿನ ಪೀಳಿಗೆಗೆ ಉನ್ನತ ಶಿಕ್ಷಣ ಪಡೆದು ತಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಅರಿತುಕೊಳ್ಳಲು ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಅರ್ಹ ತಂತ್ರಜ್ಞರು ದೇಶೀಯ ಶಿಕ್ಷಣದ ಶುಲ್ಕದ 95% ವರೆಗೆ ಅಥವಾ ಅಂತಾರಾಷ್ಟ್ರೀಯ ಶಿಕ್ಷಣ ಶುಲ್ಕದ 85% ವರೆಗೆ ಕಟ್ಟುವ ಸಲುವಾಗಿ 7.5 ಲಕ್ಷ ರೂ.ವರೆಗೆ ಸಾಲವನ್ನು ಪಡೆಯಬಹುದು. ಈ ಶಿಕ್ಷಣ ಸಾಲಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಹಯೋಗದಿಂದ ಒದಗಿಸಲಾಗುತ್ತದೆ ಮತ್ತು ಟಾಟಾ ಮೋಟಾರ್ಸ್ ಎಸ್‌ಬಿಐ ವಿಧಿಸುತ್ತಿರುವ ಬಡ್ಡಿದರದ ಮೇಲೆ ರಿಯಾಯಿತಿಗಳನ್ನು ನೀಡುತ್ತದೆ. ಹುಡುಗರಿಗೆ 50% ಕಡಿಮೆ ಬಡ್ಡಿದರ ಮತ್ತು ಹುಡುಗಿಯರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ವಿಶೇಷ ಚೇತನ ಮಕ್ಕಳು 70% ಬಡ್ಡಿ ರಿಯಾಯಿತಿ ಪಡೆಯಲು ಅರ್ಹರಾಗಿರುತ್ತಾರೆ. ಈ ಪ್ರಯೋಜನ ಪಡೆಯಲು ವಿದ್ಯಾರ್ಥಿಯು ಕನಿಷ್ಠ 2 ವರ್ಷಗಳ ಅವಧಿಯುಳ್ಳ ಫುಲ್ ಟೈಮ್ ಪದವಿ ಕೋರ್ಸಿಗೆ ಅಥವಾ ಸ್ನಾತಕೋತ್ತರ ಕೋರ್ಸ್‌ಗೆ ದಾಖಲಾಗಿರಬೇಕು ಮತ್ತು ಆ ಸಂಸ್ಥೆಗಳು ಭಾರತ ಅಥವಾ ವಿದೇಶದಲ್ಲಿರುವ ಮಾನ್ಯತೆ ಪಡೆದ ಎಐಸಿಟಿಇ- ಸಮಾನ ಸಂಸ್ಥೆಗಳು ಅಥವಾ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಜತೆ ಸಂಯೋಜಿತಗೊಂಡಿರಬೇಕು.

ಇದನ್ನೂ ಓದಿ: Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

ಉತ್ಕರ್ಷ ವಿದ್ಯಾರ್ಥಿವೇತನ

‘ಉತ್ಕರ್ಷʼ ಕಾರ್ಯಕ್ರಮವು 10ನೇ ಅಥವಾ 12ನೇ ತರಗತಿಯನ್ನು ಪೂರ್ಣಗೊಳಿಸಿದ ಹುಡುಗಿಯರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ವಿಶೇಷ ಚೇತನ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಪ್ರತೀ ವರ್ಷ ರೂ.25,000/- ವಿದ್ಯಾರ್ಥಿವೇತನ ಒದಗಿಸುವ ಕಾರ್ಯಕ್ರಮವಾಗಿದೆ. ಇದಕ್ಕೆ ಅರ್ಹತೆ ಪಡೆಯಲು ಅರ್ಜಿದಾರರು ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು ಮತ್ತು ಭಾರತ ಅಥವಾ ವಿದೇಶದಲ್ಲಿರುವ ಮಾನ್ಯತೆ ಪಡೆದ ಎಐಸಿಟಿಇ- ಸಮಾನ ಸಂಸ್ಥೆಗಳು ಅಥವಾ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ದಾಖಲಾತಿ ಪಡೆದುಕೊಂಡಿರಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

LPG Price: ಎಲ್‌ಪಿಜಿ ಸಿಲಿಂಡರ್‌ ಬೆಲೆ ಇನ್ನು ಕೇವಲ 450 ರೂ.; ಉಳಿದ ಹಣ ಸರ್ಕಾರದಿಂದಲೇ ಪಾವತಿ!

LPG Price: ಅಡುಗೆ ಅನಿಲ ಸಿಲಿಂಡರ್‌ ಬೆಲೆ ಇಳಿಕೆ ಕುರಿತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರೇ ಮಾಹಿತಿ ನೀಡಿದ್ದಾರೆ. ಲಾಡ್ಲಿ ಬೆಹನಾ ಯೋಜನೆಗೆ ನೋಂದಣಿ ಮಾಡಿಕೊಂಡಿರುವ 40 ಲಕ್ಷ ಮಹಿಳೆಯರಿಗೆ ಇನ್ನು 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ನೀಡಲಾಗುತ್ತದೆ. ಉಳಿದ ಹಣವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

Madhya Pradesh Government Slashes LPG Prices For Ladli Sisters, Cylinders To Be Available At Rs 450
Koo

ಭೋಪಾಲ್‌: ಮಧ್ಯಪ್ರದೇಶದಲ್ಲಿ (Madhya Pradesh) ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ನೀಡಿದ್ದ ಭರವಸೆಯನ್ನು ಅಧಿಕಾರಕ್ಕೆ ಬಂದಮೇಲೆ ಉಳಿಸಿಕೊಂಡಿದೆ. ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು (LPG Price) 450 ರೂ.ಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಮೋಹನ್‌ ಯಾದವ್‌ (Mohan Yadav) ಅವರು ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಮಧ್ಯಪ್ರದೇಶದ 40 ಲಕ್ಷ ಮಹಿಳೆಯರು ಇನ್ನು 450 ರೂ.ಗೆ 14.2 ಕೆ.ಜಿಯ ಸಿಲಿಂಡರ್‌ ಖರೀದಿಸಬಹುದಾಗಿದೆ.

ಅಡುಗೆ ಅನಿಲ ಸಿಲಿಂಡರ್‌ ಬೆಲೆ ಇಳಿಕೆ ಕುರಿತು ಮೋಹನ್‌ ಯಾದವ್‌ ಅವರೇ ಮಾಹಿತಿ ನೀಡಿದ್ದಾರೆ. “ಲಾಡ್ಲಿ ಬೆಹನಾ ಯೋಜನೆಗೆ ನೋಂದಣಿ ಮಾಡಿಕೊಂಡಿರುವ 40 ಲಕ್ಷ ಮಹಿಳೆಯರಿಗೆ ಇನ್ನು 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ನೀಡಲಾಗುತ್ತದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ (PMUY) ಹಾಗೂ ಪಿಎಂಯುವೈ ಯೋಜನೆ ಅಲ್ಲದೆಯೂ ಲಾಡ್ಲಿ ಬೆಹನಾ ಯೋಜನೆ ಅಡಿಯಲ್ಲಿ 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ಖರೀದಿಸಬಹುದಾಗಿದೆ. ಸಾವನ್‌ ಹಾಗೂ ರಕ್ಷಾ ಬಂಧನದ ಪವಿತ್ರ ಹಬ್ಬಗಳ ಹೊತ್ತಿನಲ್ಲೇ ರಾಜ್ಯ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ” ಎಂದು ಮೋಹನ್‌ ಯಾದವ್‌ ತಿಳಿಸಿದ್ದಾರೆ.

“ನಮ್ಮ ಸರ್ಕಾರವು ಜನ ಕಲ್ಯಾಣ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂಬುದಾಗಿ ಇದಕ್ಕೂ ಮೊದಲು ಹೇಳಿದ್ದೆ. ಈಗಲೂ ಇದನ್ನೇ ಹೇಳುತ್ತಿದ್ದೇನೆ. ಮುಂದಿನ ದಿನಗಳಲ್ಲೂ ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆಗಳಿಗೆ ಹೆಚ್ಚು ಆದ್ಯತೆ ನೀಡುತ್ತಿವೆ. ಹಾಗೆಯೇ, ರಾಜ್ಯದ ಅಭಿವೃದ್ಧಿ, ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೂ ಪ್ರಾಮುಖ್ಯತೆ ಕೊಡುತ್ತೇವೆ” ಎಂದು ತಿಳಿಸಿದರು.

ಮೋಹನ್‌ ಯಾದವ್‌ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಕೈಲಾಶ್‌ ವಿಜಯವರ್ಗೀಯ ಅವರು ಮುಖ್ಯಮಂತ್ರಿ ಲಾಡ್ಲಿ ಬೆಹನಾ (ಮಹಿಳೆಯರಿಗೆ ಹಣಕಾಸು ನೆರವು ನೀಡುವ ದಿಸೆಯಲ್ಲಿ 2023ರಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆ) ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 450 ರೂ.ಗೆ ಅಡುಗೆ ಅನಿಲ ನೀಡುವ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿತು.

ರಾಜ್ಯ ಸರ್ಕಾರದ ನಿರ್ಧಾರದ ಕುರಿತು ಕೈಲಾಶ್‌ ವಿಜಯವರ್ಗೀಯ ಮಾಹಿತಿ ನೀಡಿದರು. “ರಾಜ್ಯದಲ್ಲಿ ಈಗ ಒಂದು ಎಲ್‌ಪಿಜಿ ಸಿಲಿಂಡರ್‌ ಬೆಲೆ 848 ರೂ. ಇದೆ. ಲಾಡ್ಲಿ ಬೆಹನಾ ಯೋಜನೆಯ ಫಲಾನುಭವಿಗಳು 450 ರೂ. ಪಾವತಿಸಿದರೆ ಸಾಕು, ಅಡುಗೆ ಅನಿಲ ಸಿಲಿಂಡರ್‌ ಸಿಗುತ್ತದೆ. ಉಳಿದ 398 ರೂಪಾಯಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದಕ್ಕಾಗಿ 160 ಕೋಟಿ ರೂ. ವಿನಿಯೋಗಿಸಲಾಗಿದೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Continue Reading

ದೇಶ

Nirmala Sitharaman: ಕಾಂಗ್ರೆಸ್‌ ಅವಧಿ ಬಜೆಟ್‌ನಲ್ಲಿ 26 ರಾಜ್ಯಗಳ ಹೆಸರೇ ಇರಲಿಲ್ಲ; ನಿರ್ಮಲಾ ಸೀತಾರಾಮನ್‌ ಟಾಂಗ್

Nirmala Sitharaman: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಲ್ಲ ಎಂಬುದಾಗಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಬಜೆಟ್‌ ಭಾಷಣದಲ್ಲಿ ರಾಜ್ಯಗಳ ಹೆಸರು ಇಲ್ಲ ಎಂದ ಮಾತ್ರಕ್ಕೆ ಆ ರಾಜ್ಯಕ್ಕೆ ಅನುದಾನ ಹೋಗುವುದಿಲ್ಲ ಎಂಬ ಅರ್ಥವಲ್ಲ ಎಂದಿದ್ದಾರೆ.

VISTARANEWS.COM


on

Nirmala Sitharaman
Koo

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಕೆಲ ದಿನಗಳ ಹಿಂದೆ ಮಂಡಿಸಿದ ಬಜೆಟ್‌ನಲ್ಲಿ (Union Budget 2024) ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಕೊಟ್ಟಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ನಾಯಕರು ಆರೋಪಿಸುತ್ತಿದ್ದಾರೆ. ಜನರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಕ್ಷಿಣ ಭಾರತದ ಹಲವು ರಾಜ್ಯಗಳು ಟೀಕಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಸಂಸತ್‌ನಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದು, “ಕಾಂಗ್ರೆಸ್‌ ನೇತೃತ್ವದ ಯುಪಿಎ ಅವಧಿಯ ಬಜೆಟ್‌ನಲ್ಲೂ 26 ರಾಜ್ಯಗಳ ಹೆಸರು ಇರಲಿಲ್ಲ. ಹಾಗಂತ, ಆ ರಾಜ್ಯಗಳಿಗೆ ಅನುದಾನ ನೀಡಿಲ್ಲ ಎಂದು ಅರ್ಥವೇ” ಎಂಬುದಾಗಿ ಪ್ರಶ್ನಿಸಿದ್ದಾರೆ.

“ಬಜೆಟ್‌ ಭಾಷಣದಲ್ಲಿ ಕೆಲ ರಾಜ್ಯಗಳ ಹೆಸರು ಇಲ್ಲದ ಕಾರಣ, ಕೇಂದ್ರ ಸರ್ಕಾರವು ಆ ರಾಜ್ಯಗಳಿಗೆ ಅನುದಾನವನ್ನೇ ಕೊಟ್ಟಿಲ್ಲ ಎಂಬ ರೀತಿ ಪ್ರತಿಪಕ್ಷಗಳು ಬಿಂಬಿಸುತ್ತಿಲ್ಲ. ಆದರೆ, ನಾನು 2004-05ರಿಂದಲೂ ಮಂಡಿಸಿದ ಬಜೆಟ್‌ ಪ್ರತಿಗಳನ್ನು ಗಮನಿಸಿದ್ದೇನೆ. 2004-05ರ ಬಜೆಟ್‌ನಲ್ಲಿ ಅಂದರೆ ಯುಪಿಎ ಅವಧಿಯಲ್ಲಿ ಪ್ರಸ್ತುತಪಡಿಸಿದ ಬಜೆಟ್‌ ಭಾಷಣದಲ್ಲಿ 17 ರಾಜ್ಯಗಳ ಹೆಸರು ಇರಲಿಲ್ಲ. 2006-07ರಲ್ಲಿ 16, 2009ರಲ್ಲಿ 26 ರಾಜ್ಯಗಳ ಹೆಸರುಗಳೇ ಇರಲಿಲ್ಲ. ಹಾಗಂತ, ಈ ರಾಜ್ಯಗಳಿಗೆ ಹಣವೇ ನೀಡಲಿಲ್ಲವೇ” ಎಂಬುದಾಗಿ ಬಜೆಟ್‌ ಕುರಿತ ಚರ್ಚೆಯ ವೇಳೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿಪಕ್ಷಗಳನ್ನು ಪ್ರಶ್ನಿಸಿದ್ದಾರೆ.

“ಸಂಸತ್‌ನ ಎಲ್ಲ ಸದಸ್ಯರಿಗೂ ನಾನು ಒಂದು ಮನವಿ ಮಾಡುತ್ತೇನೆ. ಬಜೆಟ್‌ ಭಾಷಣದಲ್ಲಿ ಯಾವುದಾದರೂ ರಾಜ್ಯಗಳ ಹೆಸರು ಇಲ್ಲ ಎಂದರೆ, ಆ ರಾಜ್ಯಗಳಿಗೆ ಹಣ ನೀಡುವುದಿಲ್ಲ ಎಂದು ಅರ್ಥವಲ್ಲ. ಸುಳ್ಳು ಹಾಗೂ ಜನರ ದಾರಿ ತಪ್ಪಿಸುವ ರೀತಿ ಅಭಿಯಾನ ಆರಂಭಿಸಲಾಗುತ್ತಿದೆ. ಒಂದು ರಾಜ್ಯದ ಹೆಸರನ್ನು ಬಜೆಟ್‌ ಭಾಷಣದಲ್ಲಿ ಪ್ರಸ್ತಾಪಿಸಿಲ್ಲ ಎಂದ ಮಾತ್ರಕ್ಕೆ, ಆ ರಾಜ್ಯಕ್ಕೆ ಅನುದಾನವನ್ನೇ ನೀಡಿಲ್ಲ ಎಂಬ ರೀತಿ ಹೇಳುತ್ತಿರುವುದು ನೋವು ತಂದಿದೆ” ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಲ್ಲ ಎಂಬುದಾಗಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸ್ಪಷ್ಟನೆ ನೀಡಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರ ಪ್ರಕಾರ ಹಿಂದಿನ ಯುಪಿಎ ಸರ್ಕಾರ (2004-2014) ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನ ರೂ.60,779 ಕೋಟಿ. ಎನ್‌ಡಿಎ ಸರ್ಕಾರ (2014-2024) ಹತ್ತು ವರ್ಷಗಳ ಅವಧಿಯಲ್ಲಿ ನೀಡಿದ್ದ ಹಣ ರೂ.2,36,955 ಕೋಟಿ ಎಂದು ಸಚಿವೆ ಹೇಳಿದ್ದಾರೆ. ಆದರೆ ಹತ್ತು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಎಷ್ಟು ಪಟ್ಟು ಹೆಚ್ಚಾಗಿದೆ ಎನ್ನುವುದನ್ನು ಅವರು ಮರೆತಿದ್ದಾರೆ. ಇದು ಅವರ ಅಜ್ಞಾನವೋ, ಇಲ್ಲವೇ ಜನತೆಯ ದಾರಿ ತಪ್ಪಿಸುವ ಹುನ್ನಾರವೋ? ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು.

ಇದನ್ನೂ ಓದಿ: HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

Continue Reading

ಚಿನ್ನದ ದರ

Gold Rate Today: ಆಭರಣ ಖರೀದಿಗೆ ಗೋಲ್ಡನ್‌ ಟೈಮ್‌; ಮತ್ತೆ ಇಳಿಮುಖವಾದ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 30) ಮತ್ತೆ ಇಳಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 20 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 21 ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,320 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,895 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 30) ಮತ್ತೆ ಇಳಿಕೆಯಾಗಿದೆ (Gold Rate Today). ಬಜೆಟ್‌ ಮಂಡನೆಯ ಬಳಿಕ ಸತತವಾಗಿ ಇಳಿದಿದ್ದ ದರ ಶನಿವಾರ ಮೊದಲ ಬಾರಿ ಏರಿಕೆಯಾಗಿತ್ತು. ಭಾನುವಾರ ಅದೇ ದರವನ್ನು ಕಾಯ್ದುಕೊಂಡಿದ್ದರೆ ಸೋಮವಾರ ಏರಿಕೆಯಾಗಿತ್ತು. ಇಂದು ಮತ್ತೆ ದರ ಕಡಿಮೆಯಾಗಿದ್ದು, ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 20 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 21 ಇಳಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,320 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,895 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 50,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 63,200 ಮತ್ತು ₹ 6,32,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 55,160 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 68,950 ಮತ್ತು ₹ 6,89,500 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,335 ₹ 6,910
ಮುಂಬೈ₹ 6,320 ₹ 6,895
ಬೆಂಗಳೂರು₹ 6,320 ₹ 6,895
ಚೆನ್ನೈ₹ 6,385 ₹ 6,965

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 84.50 ಹಾಗೂ 8 ಗ್ರಾಂಗೆ ₹ 676 ಇದೆ. 10 ಗ್ರಾಂ ₹ 845 ಹಾಗೂ 1 ಕಿಲೋಗ್ರಾಂ ₹ 84,500 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

Continue Reading

ವಾಣಿಜ್ಯ

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯ ದಿನಾಂಕ 1 ತಿಂಗಳು ವಿಸ್ತರಣೆಗೆ ಮನವಿ

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯೆ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸುವಂತೆ ಅಖಿಲ ಭಾರತ ತೆರಿಗೆ ವೃತ್ತಿಪರರ ಒಕ್ಕೂಟವು ಕೇಂದ್ರ ನೇರ ತೆರಿಗೆ ಮಂಡಳಿಗೆ ಮನವಿ ಮಾಡಿದೆ. ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

ITR Filing
Koo

ನವದೆಹಲಿ: ಆದಾಯ ತೆರಿಗೆ ರಿಟರ್ನ್ (Income Tax Returns) ಸಲ್ಲಿಕೆಯೆ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸುವಂತೆ ಅಖಿಲ ಭಾರತ ತೆರಿಗೆ ವೃತ್ತಿಪರರ ಒಕ್ಕೂಟ (All-India Federation of Tax Practitioners-AIFTP)ವು ಕೇಂದ್ರ ನೇರ ತೆರಿಗೆ ಮಂಡಳಿ (Central Board of Direct Taxes-CBDT)ಗೆ ಮನವಿ ಮಾಡಿದೆ. ಸದ್ಯ  ದಂಡ ರಹಿತವಾಗಿ ಐಟಿಆರ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನ.

ಎಐಎಫ್‌ಟಿಪಿ ರಾಷ್ಟ್ರೀಯ ಅಧ್ಯಕ್ಷ ನಾರಾಯಣ್ ಜೈನ್ ಮತ್ತು ನೇರ ತೆರಿಗೆ ಪ್ರಾತಿನಿಧ್ಯ ಸಮಿತಿ ಅಧ್ಯಕ್ಷ ಎಸ್.ಎಂ.ಸುರಾನಾ ಅವರು ಸಲ್ಲಿಸಿದ ಮನವಿಯಲ್ಲಿ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಉಲ್ಲೇಖಿಸಲಾಗಿದೆ.

ಕೇರಳ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿನ ಭೂಕುಸಿತದಿಂದ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ವಿವಿಧ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಲು ಮತ್ತು ಪರಿಶೀಲಿಸಲು ತೊಂದರೆ ಎದುರಾಗಿದೆ. ಆದಾಯ ತೆರಿಗೆ ಪೋರ್ಟಲ್ ಮತ್ತು ಸಾಫ್ಟ್‌ವೇರ್‌ನಲ್ಲಿ ನಿರಂತರ ಸಮಸ್ಯೆಗಳಿವೆ ಎಂದು ತಿಳಿಸಲಾಗಿದೆ. ಜತೆಗೆ ಬ್ಯಾಂಕುಗಳ ಮೂಲಕ ಸ್ವಯಂ ಮೌಲ್ಯಮಾಪನ ತೆರಿಗೆ ಪಾವತಿಸುವ ಮತ್ತು ಚಲನ್‌ಗಳನ್ನು ಡೌನ್‌ಲೋಡ್ ಮಾಡುವ ಪ್ರಕ್ರಿಯೆಯು‌ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಆದರೆ ಐಟಿಆರ್ ಫೈಲಿಂಗ್ ಗಡುವಿನ ವಿಸ್ತರಣೆಯ ಬಗ್ಗೆ ಹಣಕಾಸು ಸಚಿವಾಲಯ ಯಾವುದೇ ಔಪಚಾರಿಕ ಪ್ರಕಟಣೆಯನ್ನು ಇದುವರೆಗೆ ಹೊರಡಿಸಿಲ್ಲ.

ದಂಡ ಎಷ್ಟು?

ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಗಡುವು ಮುಗಿದರೂ ದಂಡ ಸಹಿತ ರಿಟರ್ನ್ ಸಲ್ಲಿಕೆಗೆ ಅವಕಾಶವಿದೆ. ತೆರಿಗೆ ಲೆಕ್ಕಪರಿಶೋಧನೆಯ ಅಗತ್ಯವಿರುವ ತೆರಿಗೆದಾರರಿಗೆ ದಂಡ ಸಹಿತ ಐಟಿಆರ್ ಫೈಲ್ ಮಾಡಲು 2024ರ ಅಕ್ಟೋಬರ್ 31ರವರೆಗೆ ಅವಕಾಶವಿದೆ. ಆರ್ಥಿಕ ವರ್ಷ 2024-25ಗಾಗಿ ಪರಿಷ್ಕೃತ ಮತ್ತು ತಡವಾದ ರಿಟರ್ನ್‌ಗಳನ್ನು ಸಲ್ಲಿಸಲು ಅಂತಿಮ ಗಡುವು 2024ರ ಡಿಸೆಂಬರ್ 31 ಆಗಿದೆ.

ತೆರಿಗೆ ಸಲ್ಲಿಸುವಿಕೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಆದಾಯ ತೆರಿಗೆ ಇಲಾಖೆಯು ಪ್ರತಿ ಹಣಕಾಸು ವರ್ಷದ ಆರಂಭದಲ್ಲಿ ವಿವಿಧ ಐಟಿಆರ್ ಫಾರ್ಮ್‌ಗಳು ಮತ್ತು ಎಕ್ಸೆಲ್ ಮಾಹಿತಿಗಳನ್ನು ನಿರ್ಧಿಷ್ಟ ವೆಬ್‌‌ಸೈಟ್ ಮೂಲಕ ಪ್ರಕಟಿಸುತ್ತದೆ. ಆದರೂ ಹೆಚ್ಚಿನ ಸಂಬಳ ಪಡೆಯುವ ವ್ಯಕ್ತಿಗಳು ತಮ್ಮ ಫಾರ್ಮ್ 16 ಅನ್ನು ಉದ್ಯೋಗದಾತರಿಂದ ಸ್ವೀಕರಿಸಲು ಕಾಯುತ್ತಾರೆ. ಸಾಮಾನ್ಯವಾಗಿ ಇದನ್ನು ಜೂನ್ ಕೊನೆಯಲ್ಲಿ ಅಥವಾ ಜುಲೈ ಆರಂಭದಲ್ಲಿ ವಿತರಿಸಲಾಗುತ್ತದೆ.

ಇದನ್ನೂ ಓದಿ: Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

ಜುಲೈ 31ರ ಗಡುವಿನ ನಂತರ ಐಟಿಆರ್ ಸಲ್ಲಿಸುವುದರಿಂದ ದಂಡ ಪಾವತಿಸಬೇಕಾಗುತ್ತದೆ. ನಿವ್ವಳ ತೆರಿಗೆಯ ಆದಾಯವು 5 ಲಕ್ಷ ರೂ. ವರೆಗೆ ಇದ್ದರೆ ತಡವಾಗಿ ತೆರಿಗೆ ರಿಟರ್ನ್‌ಗೆ ಗರಿಷ್ಠ ದಂಡ 1,000 ರೂ ಆಗಿದೆ. 5 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವವರು 5,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯಿದೆಯ ಪ್ರಕಾರ ಒಟ್ಟು ಆದಾಯವು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಾದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ.

Continue Reading
Advertisement
Anurag Thakur
ದೇಶ30 mins ago

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

ICC T20 ranking
ಪ್ರಮುಖ ಸುದ್ದಿ43 mins ago

ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

Asian Cricket Council
ಪ್ರಮುಖ ಸುದ್ದಿ1 hour ago

Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

Viral video
ವೈರಲ್ ನ್ಯೂಸ್1 hour ago

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

Ranbir Kapoor
ಸಿನಿಮಾ1 hour ago

Ranbir Kapoor: ಮುದ್ದಿನ ಮಡದಿ ಅಲಿಯಾ ಕುರಿತ ಸೀಕ್ರೆಟ್ ಮಾಹಿತಿ ಹಂಚಿಕೊಂಡ ರಣಬೀರ್!

Minister Ramalinga Reddy drives for state level inter school Olympics sports in Bengaluru
ಬೆಂಗಳೂರು1 hour ago

Bengaluru News: ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

Decision to release water from Malaprabha Reservoir says minister Lakshmi Hebbalkar
ಕರ್ನಾಟಕ2 hours ago

Lakshmi Hebbalkar: ಸುರಕ್ಷತೆ ದೃಷ್ಟಿಯಿಂದ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ನಿರ್ಧಾರ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಆರ್ಚರಿಯಲ್ಲಿ ಕ್ವಾರ್ಟರ್​ ಫೈನಲ್​ಗೇರಿದ 18 ವರ್ಷದ ಭಜನ್ ಕೌರ್​

Wayanad Landslide
EXPLAINER2 hours ago

Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Union Minister Pralhad Joshi reaction about rahul gandhi statement
ದೇಶ2 hours ago

Pralhad Joshi: ಕಾಂಗ್ರೆಸ್‌ ಹಗರಣ, ಭ್ರಷ್ಟಾಚಾರದ ವಿರುದ್ಧ ಚಕ್ರವ್ಯೂಹ ರಚಿಸಲಾಗಿದೆ; ಪ್ರಲ್ಹಾದ್ ಜೋಶಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ11 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌