Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌ - Vistara News

ಕರ್ನಾಟಕ

Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

Kannada New Song: ಮಂಜು ಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ ಸಾರುವ “ಕೋಟಿ ಕೋಟಿ ರೊಕ್ಕ ಗಳಿಸಿ” ಎಂಬ ಹಾಡು ಎಚ್.ಎಂ. ರಾಮಚಂದ್ರ (ಹೂಡಿ ಚಿನ್ನಿ) ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ಈ ಹಾಡಿನ ವಿಡಿಯೊ ಕೂಡ ಇಲ್ಲಿದೆ.

VISTARANEWS.COM


on

Koti Koti Rokka Galisi kannada song released
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯರಾಗಿರುವ ಹಾಗೂ ಭಾರತೀಯರ ಸೇವಾ ಸಮಿತಿ ಸ್ಥಾಪಕರೂ ಆಗಿರುವ ಎಚ್.ಎಂ. ರಾಮಚಂದ್ರ (ಹೂಡಿ ಚಿನ್ನಿ) ಅವರು ಈಗ ಗಾಯಕರಾಗಿದ್ದಾರೆ‌. ಮಂಜುಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ ಸಾರುವ “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಈ ಹಾಡು (Kannada New Song) ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನೆರವೇರಿತು.

ಶ್ರೀ ಮಹದೇವ ಸ್ವಾಮಿಜಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಚೇತನ್ ಅಹಿಂಸ, ನಿರ್ದೇಶಕ ಋಷಿ, ಭಾರತೀಯ ಸೇವಾ ಸಮಿತಿ ರಾಜ್ಯಾಧ್ಯಕ್ಷ ಅಮರ್ ಸೇರಿದಂತೆ ಅನೇಕ ಗಣ್ಯರು ಹಾಡು ಬಿಡುಗಡೆ ಮಾಡಿದರು.

ಈ ಹಾಡಿನಲ್ಲಿರುವ ಸಾಹಿತ್ಯಕ್ಕೂ ಹಾಗೂ ಹೂಡಿ ಚಿನ್ನಿ ಅವರ ಗುಣಕ್ಕೂ ಹೊಂದಾಣಿಕೆ ಆಗುತ್ತದೆ. ಹಾಗಾಗಿ ಈ ಹಾಡನ್ನು ಅವರಿಂದಲೇ ಹಾಡಿಸಬೇಕೆನಿಸಿತು. ಅವರು ಮೊದಲು ಒಪ್ಪಲಿಲ್ಲ. ಆನಂತರ ಅಭ್ಯಾಸ ಮಾಡಿ ಹಾಡಿದ್ದಾರೆ. ಎಂ.ಕೆ. ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡು ಕೇಳಿ ಆನಂದಿಸಿ ಎಂದರು ಹಾಡು ಬರೆದು ಸಂಗೀತ ನೀಡಿರುವ ಮಂಜುಕವಿ.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಹಾಡು ಬಿಡುಗಡೆ ಸಮಾರಂಭಕ್ಕೆ ಬಂದು ಹಾರೈಸಿದ ಎಲ್ಲಾ ಗಣ್ಯರಿಗೂ ಶರಣು ಎಂದು ಮಾತನಾಡಿದ ಹೂಡಿ ಚಿನ್ನಿ, ಮಂಜುಕವಿ ಅವರು ಬರೆದಿರುವ ಈ ಹಾಡು ಎಲ್ಲರ ಮನ ಮುಟ್ಟವಂತಿದೆ. ಈ ಗೀತೆಯನ್ನು ನೀವೇ ಹಾಡಿ ಅಂದಾಗ ನಾನು ಬೇಡ. ಬೇರೆ ಜನಪ್ರಿಯ ಗಾಯಕರು ಹಾಡಲಿ ಎಂದೆ. ಆದರೆ ಸ್ನೇಹಿತರ ಒತ್ತಾಯಕ್ಕೆ ಮಣಿದು ಅಭ್ಯಾಸ ಮಾಡಿ ಹಾಡಿದ್ದೇನೆ. ಹಾಡಿನಲ್ಲಿ ಒಳ್ಳೆಯ ಸಂದೇಶವಿದೆ. ನಮ್ಮ‌ ಈ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Infosys: ಇನ್ಫೋಸಿಸ್‌ನಿಂದ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ; ಜಿಎಸ್‌ಟಿ ನೋಟಿಸ್‌ ರವಾನೆ

Infosys: ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ. ಇದರಿಂದಾಗಿಯೇ ಇನ್ಫೋಸಿಸ್‌ಗೆ 32 ಸಾವಿರ ಕೋಟಿ ರೂ. ಜಿಎಸ್‌ಟಿ ನೋಟಿಸ್‌ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Infosys
Koo

ಬೆಂಗಳೂರು: ದೇಶದ ಎರಡನೇ ಬೃಹತ್‌ ಐಟಿ ಕಂಪನಿ (IT Company) ಎನಿಸಿರುವ, ಕರ್ನಾಟಕದ ಎನ್‌.ಆರ್.ನಾರಾಯಣ ಮೂರ್ತಿ ಸೇರಿ ಹಲವರು ಹುಟ್ಟುಹಾಕಿರುವ ಐಟಿ ದೈತ್ಯ ಇನ್ಫೋಸಿಸ್‌ ಕಂಪನಿ (Infosys) ವಿರುದ್ಧ ತೆರಿಗೆ ವಂಚನೆಯ (Tax Evasion) ಆರೋಪ ಕೇಳಿಬಂದಿದೆ. ತೆರಿಗೆ ವಂಚನೆಯ ಆರೋಪದ ಹಿನ್ನೆಲೆಯಲ್ಲಿ ಇನ್ಫೋಸಿಸ್‌ ಕಂಪನಿಗೆ ಜಿಎಸ್‌ಟಿ ಗುಪ್ತಚರ ಮಹಾ ನಿರ್ದೇಶನಾಲಯವು (DGGI) 32 ಸಾವಿರ ಕೋಟಿ ರೂಪಾಯಿ ಮೌಲ್ಯದ ಜಿಎಸ್‌ಟಿ ನೋಟಿಸ್‌ ಜಾರಿ ಮಾಡಿದೆ.

“ಇನ್ಫೋಸಿಸ್‌ ಕಂಪನಿಯು ಬೇರೆ ದೇಶಗಳಲ್ಲಿ ಹೊಂದಿರುವ ಬ್ರ್ಯಾಂಚ್‌ ಆಫೀಸ್‌ಗಳಿಂದ 2017-18ರಿಂದ 2021-22ರಲ್ಲಿ ಸರಬರಾಜು ಮಾಡಲಾಗಿರುವ ಸ್ವೀಕೃತಿಗಳ ಬದಲಾಗಿ ಬ್ರ್ಯಾಂಚ್‌ ಆಫೀಸ್‌ಗಳ ವೆಚ್ಚ ಎಂಬುದಾಗಿ ಉಲ್ಲೇಖಿಸಲಾಗಿದೆ. ಹಾಗಾಗಿ, ರಿವರ್ಸ್‌ ಚಾರ್ಜ್‌ ಮೆಕ್ಯಾನಿಸಂ ನಿಯಮಗಳ ಪ್ರಕಾರ ಭಾರತದಿಂದ ಹೊರಗಿರುವ ಬ್ರ್ಯಾಂಚ್‌ಗಳಿಂದ ಸರಬರಾಜು ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಇನ್ಫೋಸಿಸ್‌ ಲಿಮಿಟೆಡ್‌ ಕಂಪನಿಯು 32,403 ಕೋಟಿ ರೂ. ಐಜಿಎಸ್‌ಟಿ ಪಾವತಿಸಬೇಕು” ಎಂಬುದಾಗಿ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ‌

Narayana Murthy
Narayana Murthy

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ನಿಯಮಗಳ ಪ್ರಕಾರ, ಸರಕು ಅಥವಾ ಸೇವೆಗಳನ್ನು ಸ್ವೀಕರಿಸುವವರು ಪೂರೈಕೆದಾರರ ಬದಲಿಗೆ ತೆರಿಗೆ ಪಾವತಿಸಬೇಕು ಎಂಬುದೇ ರಿವರ್ಸ್‌ ಚಾರ್ಜ್‌ ಮೆಕ್ಯಾನಿಸಂ ಆಗಿದೆ. ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ. ಇದರಿಂದಾಗಿಯೇ ಇನ್ಫೋಸಿಸ್‌ಗೆ 32 ಸಾವಿರ ಕೋಟಿ ರೂ. ಜಿಎಸ್‌ಟಿ ನೋಟಿಸ್‌ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಯ ಸ್ಪಷ್ಟನೆ ಏನು?

ಜಿಎಸ್‌ಟಿ ನೋಟಿಸ್‌ ಕುರಿತು ಇನ್ಫೋಸಿಸ್‌ ಸ್ಪಷ್ಟನೆ ನೀಡಿದೆ. ಇನ್ಫೋಸಿಸ್‌ ಕಂಪನಿಯು ಯಾವುದೇ ಜಿಎಸ್‌ಟಿ ಪಾವತಿ ಬಾಕಿಯನ್ನು ಉಳಿಸಿಕೊಂಡಿಲ್ಲ. ಐಟಿ ಸೇವೆಗಳ ರಫ್ತಿನ ಮೇಲೆ ಜಿಎಸ್‌ಟಿ ರಿಫಂಡ್‌ ಪಡೆಯುವ ಅವಕಾಶ ಇದೆ. ಅದರಂತೆ, ಕ್ಲೇಮ್‌ ಮಾಡಲಾಗಿದೆ. ಇನ್ನು, ಕಂಪನಿಗೆ ಪ್ರಿ-ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿದ್ದು, ಈ ಕುರಿತು ಕಂಪನಿಯು ಪ್ರತಿಕ್ರಿಯೆ ನೀಡಿದೆ ಎಂಬುದಾಗಿ ಸ್ಪಷ್ಟಪಡಿಸಿದೆ.

ನಾರಾಯಣಮೂರ್ತಿ ಹೇಳಿಕೆ ಟ್ರೋಲ್

ಚೀನಾ ನಮ್ಮ ದೇಶಕ್ಕಿಂತ ಆರು ಪಟ್ಟು ಹೆಚ್ಚಿನ ಜಿಡಿಪಿ(GDP)ಯನ್ನು ಹೊಂದಿದ್ದು, ಅದರ ಉತ್ಪಾದನಾ ಸಾಮರ್ಥ್ಯವನ್ನು ಮ್ಯಾಚ್‌ ಮಾಡಲು ಭಾರತಕ್ಕೆ ಸಾಧ್ಯವಿಲ್ಲ. ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ. ಉತ್ಪಾದನಾ ಕೇಂದ್ರವಾಗುವ ಭಾರತದ ಕನಸು ಇನ್ನು ಬಹಳ ದೂರದಲ್ಲಿದೆ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಾರಾಯಣ ಮೂರ್ತಿ ಅವರ ಹೇಳಿಕೆಯ ಕುರಿತು ಜನ ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: GST Fraud: ಜಿಎಸ್‌ಟಿ ತೆರಿಗೆ ವಂಚನೆ ಪತ್ತೆ ಹಚ್ಚಲು ಎಐ, ಅನಾಲಿಟಿಕ್ಸ್ ಟೂಲ್ಸ್ ಬಳಕೆ

Continue Reading

ದೇಶ

Servicenow: ಭಾರತೀಯರು ಗ್ರಾಹಕ ಸೇವೆ ಪಡೆಯಲು ವರ್ಷದಲ್ಲಿ 15 ಶತಕೋಟಿ ಗಂಟೆ ಕಳೆಯುತ್ತಾರೆ! ಅಧ್ಯಯನ ವರದಿ

Servicenow: ಸರ್ವೀಸ್‌ನೌ ಮಾಡಿರುವ ಹೊಸ ಸಂಶೋಧನೆಯ ಪ್ರಕಾರ, ಭಾರತೀಯರು ಹೋಲ್ಡ್ ಟು ಕಸ್ಟಮರ್ ಸರ್ವೀಸ್ (ಗ್ರಾಹಕರಿಗೆ ಕಾಯಿಸುವುದು) ಕಾರಣದಿಂದ 15 ಶತಕೋಟಿ ಗಂಟೆಗಳಿಗೂ ಹೆಚ್ಚು ಸಮಯವನ್ನು ಕಳೆದಿದ್ದಾರೆ. ‘ಕಸ್ಟಮರ್ ಎಕ್ಸ್‌ಪೀರಿಯನ್ಸ್ ಇಂಟೆಲಿಜೆನ್ಸ್ ರಿಪೋರ್ಟ್ 2024’ ವರದಿಯು ಒಬ್ಬ ಗ್ರಾಹಕ ಯಾವುದೇ ದೂರು ಅಥವಾ ಸಮಸ್ಯೆಯ ಪರಿಹಾರ ಕಾರಣಕ್ಕೆ ಕಾಯುವಿಕೆಯಲ್ಲಿ ಸರಾಸರಿ ಒಂದಕ್ಕಿಂತ ಹೆಚ್ಚು ದಿನವನ್ನು (30.7 ಗಂಟೆಗಳು) ಕಳೆದಿದ್ದಾರೆ ಎಂದು ತಿಳಿಸಿದೆ. ಇದು ವಾರ್ಷಿಕವಾಗಿ $55 ಬಿಲಿಯನ್* (ಯುಎಸ್‌ಡಿ)ಯಷ್ಟು ಆರ್ಥಿಕ ನಷ್ಟಕ್ಕೆ ಸಮಾನಾಗಿದೆ ಎಂದೂ ತಿಳಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Indians spend 15 billion hours waiting for customer service time in 2023 ServiceNow information
Koo

ಬೆಂಗಳೂರು: ಬಿಸಿನೆಸ್ ಟ್ರಾನ್ಸ್‌ಫಾರ್ಮೇಷನ್‌ಗೆ ಇರುವ ಎಐ ಪ್ಲಾಟ್‌ಫಾರ್ಮ್ ಆಗಿರುವ ಸರ್ವೀಸ್‌ನೌ (Servicenow) ಮಾಡಿರುವ ಹೊಸ ಸಂಶೋಧನೆಯ ಪ್ರಕಾರ, ಭಾರತೀಯರು ಹೋಲ್ಡ್ ಟು ಕಸ್ಟಮರ್ ಸರ್ವೀಸ್ (ಗ್ರಾಹಕರಿಗೆ ಕಾಯಿಸುವುದು) ಕಾರಣದಿಂದ 15 ಶತಕೋಟಿ ಗಂಟೆಗಳಿಗೂ ಹೆಚ್ಚು ಸಮಯವನ್ನು ಕಳೆದಿದ್ದಾರೆ. ‘ಕಸ್ಟಮರ್ ಎಕ್ಸ್‌ಪೀರಿಯನ್ಸ್ ಇಂಟೆಲಿಜೆನ್ಸ್ ರಿಪೋರ್ಟ್ 2024’ ವರದಿಯು ಒಬ್ಬ ಗ್ರಾಹಕ ಯಾವುದೇ ದೂರು ಅಥವಾ ಸಮಸ್ಯೆಯ ಪರಿಹಾರ ಕಾರಣಕ್ಕೆ ಕಾಯುವಿಕೆಯಲ್ಲಿ ಸರಾಸರಿ ಒಂದಕ್ಕಿಂತ ಹೆಚ್ಚು ದಿನವನ್ನು (30.7 ಗಂಟೆಗಳು) ಕಳೆದಿದ್ದಾರೆ ಎಂದು ತಿಳಿಸಿದೆ. ಇದು ವಾರ್ಷಿಕವಾಗಿ $55 ಬಿಲಿಯನ್* (ಯುಎಸ್‌ಡಿ)ಯಷ್ಟು ಆರ್ಥಿಕ ನಷ್ಟಕ್ಕೆ ಸಮಾನಾಗಿದೆ ಎಂದೂ ತಿಳಿಸಲಾಗಿದೆ.

18 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ 4500ಕ್ಕೂ ಹೆಚ್ಚು ಭಾರತೀಯರು ಲೋನರ್ಗನ್ ಸಹಯೋಗದಲ್ಲಿ ನಡೆಸಿದ ಈ ಅಧ್ಯಯನದಲ್ಲಿ ಪಾಲ್ಗೊಂಡಿದ್ದು, ಕಳೆದ ವರ್ಷದಲ್ಲಿ ಗ್ರಾಹಕ ಸೇವಾ ಕ್ಷೇತ್ರವನ್ನು ಅರ್ಥ ಮಾಡಿಕೊಳ್ಳಲು ನೆರವಾಗಿದ್ದಾರೆ. ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮಂದಿ ತಮ್ಮ ಕಾಯುವಿಕೆ ಸಮಯವು ಹಿಂದಿನ ವರ್ಷಗಳಿಗಿಂತ ಈಗ ಇನ್ನೂ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. ನಿಧಾನ ಗತಿಯ ಸೇವೆ ಎಂದರೆ ಪ್ರತೀ ಗ್ರಾಹಕರ ಸಮಸ್ಯೆಯನ್ನು ಪರಿಹರಿಸಲು ಉದ್ಯೋಗಿಯೊಬ್ಬ ಸರಾಸರಿ 3.9 ದಿನಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದರ್ಥ. ವಿಶೇಷ ಎಂದರೆ ಪ್ರತಿಕ್ರಿಯಿಸಿದವರಲ್ಲಿ 66 ಪ್ರತಿಶತ ಮಂದಿ ತಮ್ಮ ಸಮಸ್ಯೆಯನ್ನು ಮೂರು ಕೆಲಸದ ದಿನಗಳಲ್ಲಿ ಪರಿಹರಿಸದಿದ್ದರೆ ಮತ್ತೊಂದು ಕಂಪನಿಗೆ ಹೋಗುವ ಮನಸ್ಸು ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಈ ಕುರಿತು ಸರ್ವೀಸ್‌ನೌ ಇಂಡಿಯಾ ಟೆಕ್ನಾಲಜಿ ಮತ್ತು ಬಿಸಿನೆಸ್ ಸೆಂಟರ್‌ನ ಹಿರಿಯ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಮೀತ್ ಮಾಥುರ್ ಮಾತನಾಡಿ, “ನಿಧಾನಗತಿಯ ಸೇವೆಯ ಕಾರಣದಿಂದಾಗಿ 2024ರಲ್ಲಿ ಭಾರತೀಯ ಉದ್ದಿಮೆಗಳು ತಮ್ಮ ಗ್ರಾಹಕರ ನೆಲೆಯಲ್ಲಿನ ಮೂರನೇ ಎರಡರಷ್ಟು ಭಾಗದ ಗ್ರಾಹಕರನ್ನು ಕಳೆದುಕೊಳ್ಳುವ ಅಪಾಯ ಎದುರಿಸುತ್ತಿವೆ. ತಮ್ಮ ಸಮಸ್ಯೆ ಪರಿಹರಿಸಲು ಗರಿಷ್ಠ ಮೂರು ದಿನ ಕಾಯಬಹುದು, ಅದಕ್ಕಿಂತ ಹೆಚ್ಚು ಸಮಯ ತೆಗೆದುಕೊಂಡರೆ ಬೇರೆ ಕಡೆಗೆ ಹೋಗಬೇಕಾಗುತ್ತದೆ ಎಂದು ಗ್ರಾಹಕರು ತಿಳಿಸಿದ್ದಾರೆ. ಅಷ್ಟೂ ಕೆಲಸವನ್ನು ಮಾಡಲು ಸಾಧ್ಯವಾಗದೇ ಇರುವ ಉದ್ಯಮಗಳು ಗ್ರಾಹಕರ ಬೆರಳ ತುದಿಯಲ್ಲಿ ಲಭ್ಯವಿರುವ ಎಐ ಆಧರಿತ ಸೆಲ್ಫ್- ಸರ್ವೀಸ್ ಉತ್ಪನ್ನಗಳನ್ನು ಇನ್‌ಸ್ಟಾಲ್ ಮಾಡಬೇಕು” ಎಂದು ತಿಳಿಸಿದ್ದಾರೆ.

ನಿಮಗೆ ಎಐ ಹೇಗೆ ಸಹಾಯ ಮಾಡಬಹುದು?

ಪ್ರತಿಕ್ರಿಯಿಸಿದವರಲ್ಲಿ ಸುಮಾರು ಮೂರನೇ ಎರಡರಷ್ಟು (62%) ಮಂದಿ ಕಳೆದ ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಸೆಲ್ಫ್ ಸರ್ವೀಸ್ ವ್ಯವಸ್ಥೆಯ ಮೂಲಕ ತಮ್ಮ ಸಮಸ್ಯೆ ಪರಿಹರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅರ್ಧದಷ್ಟು ಮಂದಿ ಅವರಿಗೆ ಚಾಟ್‌ಬೋಟ್‌ಗಳು (55%) ಮತ್ತು ಸೆಲ್ಫ್ ಹೆಲ್ಪ್ ಮಾರ್ಗದರ್ಶಿ (56%) ಮೇಲೆ ಇದ್ದ ನಂಬಿಕೆಗಳು ಈಗ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಈ ಅಧ್ಯಯನವು ಭಾರತೀಯರಲ್ಲಿ ಎಐ ಮೇಲೆ ನಂಬಿಕೆ ಹೆಚ್ಚಾಗಿರುವ ಗಮನಾರ್ಹ ವಿಚಾರವನ್ನು ಪ್ರಸ್ತುತ ಪಡಿಸುತ್ತದೆ. ವಿಶೇಷವಾಗಿ ಮೂರನೇ ಎರಡು ಭಾಗದಷ್ಟು ಮಂದಿ (66%) ಜೆನ್ ಎಐ ಉತ್ತಮ ಗ್ರಾಹಕ ಸೇವೆ ಒದಗಿಸುವ ವಿಶ್ವಾಸ ಹೊಂದಿದ್ದಾರೆ. ಸಾಂಪ್ರದಾಯಿಕ ವ್ಯಕ್ತಿ ಕೇಂದ್ರಿತ ಗ್ರಾಹಕ ಸೇವೆಗಿಂತ ಎಐ ಸೇವೆಯ ಮೇಲೆ 10% ನಂಬಿಕೆ ಹೆಚ್ಚಾಗಿದೆ. ಇವೆಲ್ಲವೂ ಜನರಲ್ಲಿ ಅದರಲ್ಲೂ ವಿಶೇಷವಾಗಿ ಯುವಜನತೆಯಲ್ಲಿ ಆದ್ಯತೆ ಬದಲಾಗಿರುವ ಬದಲಾವಣೆಯನ್ನು ತೋರಿಸುತ್ತದೆ.

ಈ ಕುರಿತಾಗಿ ಸುಮೀತ್ ಮಾಥುರ್, “ಗ್ರಾಹಕರು ಎಐನಿಂದ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದು ಈಗ ಸ್ಪಷ್ಟವಾಗಿವೆ. ಪರಿಣಾಮಕಾರಿಯಾಗಿ ಸಮಸ್ಯೆ ಪರಿಹರಿಸುವುದು, ಸುಲಭವಾಗಿ ಬಳಸಲು ಸಾಧ್ಯವಾಗುವುದು, ಶೀಘ್ರವಾಗಿ ಪ್ರತಿಕ್ರಿಯೆ ನೀಡುವುದು ಮತ್ತು ನಿಖರವಾಗಿ ಪ್ರಶ್ನೆಯನ್ನು ಗ್ರಹಿಸುವುದು ಇತ್ಯಾದಿಗಳನ್ನು ಗ್ರಾಹಕರು ಬಯಸುತ್ತಾರೆ.

ಇದನ್ನೂ ಓದಿ: Paris Olympics: ಫೈನಲ್​ ಪ್ರವೇಶಿಸಿದ ಸ್ವಪ್ನಿಲ್‌ ಕುಸಾಲೆ; 16ರ ಸುತ್ತಿಗೇರಿದ ಸಿಂಧು

ಮಾನವ-ಆಧರಿತ ಕೆಲಸದಿಂದ ಹಿಡಿದು ಎಐ ಒದಗಿಸುವ ವೈವಿಧ್ಯಮಯ ಸೌಲಭ್ಯಗಳನ್ನು ಬಳಸುವಷ್ಟರ ಮಟ್ಟಿಗೆ ಉಂಟಾಗಿರುವ ಈ ಬದಲಾವಣೆಯಿಂದ ಉದ್ಯಮ 4.0 ಯುಗದ ಆರಂಭವಾದಂತೆ ಕಾಣುತ್ತದೆ. ಗ್ರಾಹಕರ ಧಾರಣ ಶಕ್ತಿಯು ಕಡಿಮೆಯಾಗುತ್ತಿರುವ ಈ ಸವಾಲಿನ ಸಂದರ್ಭದಲ್ಲಿ ಉದ್ಯಮಗಳು ಎಐ ಅನ್ನು ಹೆಚ್ಚು ದುಡಿಸಿಕೊಳ್ಳಲು ಮತ್ತು ತಮ್ಮ ಉದ್ಯಮದ ಬೆಳವಣಿಗೆಯನ್ನು ಹೆಚ್ಚಿಸಲು, ದಕ್ಷತೆಯನ್ನು ಸುಧಾರಿಸಲು ಮತ್ತು ಸ್ಪರ್ಧಾತ್ಮಕ ಬಿಸಿನೆಸ್ ಕ್ಷೇತ್ರದಲ್ಲಿ ಉತ್ತಮ ಗ್ರಾಹಕರ ಸೇವೆ ಅನುಭವಗಳನ್ನು ನೀಡಲು ಮುಂದಾಗಲು ಇದು ಸೂಕ್ತ ಸಮಯವಾಗಿದೆ” ಎಂದು ತಿಳಿಸಿದ್ದಾರೆ.

ಸರ್ವೀಸ್‌ನೌ ಇದೀಗ ಭಾರತೀಯ ಉದ್ಯಮಗಳು ಮತ್ತು ಸರ್ಕಾರಿ ಏಜೆನ್ಸಿಗಳಿಗೆ ನೌ ಅಸಿಸ್ಟ್ ಮೂಲಕ ಎಐ ಸೌಲಭ್ಯವನ್ನು ಒದಗಿಸುತ್ತಿದೆ. ಉದ್ಯೋಗಿಗಳ ಮೇಲೆ ಇರುವ ಕೆಲಸದ ಹೊರೆಯನ್ನು ಎಐ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆ ಮೂಲಕ ಉದ್ಯೋಗಿಗಳು ಹೆಚ್ಚು ಸಂಕೀರ್ಣವಾದ ಮತ್ತು ಮೌಲ್ಯವರ್ಧಿತ ಸಂವಹನಗಳ ಮೇಲೆ ಗಮನ ಕೇಂದ್ರೀಕರಿಸಲು ಅನುವು ಮಾಡಿಕೊಡುತ್ತದೆ. ಅದರ ಜತೆಗೆ ಹಳೆಯ ಗ್ರಾಹಕ ಮಾಹಿತಿಗಳನ್ನು ವಿಶ್ಲೇಷಿಸುವ ಮೂಲಕ ಎಐ, ವೈಯಕ್ತಿಕ ಆದ್ಯತೆಗಳು, ಅವಶ್ಯಕತೆಗಳು ಮತ್ತು ವರ್ತನೆಗಳನ್ನು ಮೊದಲೇ ತಿಳಿದುಕೊಳ್ಳಬಹುದಾಗಿದೆ.

ಆ ಮೂಲಕ ಗ್ರಾಹಕರ ಜತೆಗೆ ವೈಯಕ್ತೀಕರಿಸಿದ ಮಾತುಕತೆ ನಡೆಸಬಹುದಾಗಿದೆ. ಈ ಉದ್ದೇಶಿತ ವಿಧಾನದ ಮೂಲಕ ಗ್ರಾಹಕರಲ್ಲಿ ತಿಳುವಳಿಕೆ ಮತ್ತು ಮೌಲ್ಯ ಪ್ರಜ್ಞೆಯನ್ನು ಬೆಳೆಸಬಹುದಾಗಿದೆ. ಆ ಮೂಲಕ ಬ್ರಾಂಡ್ ಜತೆಗಿನ ಅವರ ಸಂಪರ್ಕವನ್ನು ಹೆಚ್ಚಿಸಿ ಅವರ ಒಟ್ಟಾರೆ ಅನುಭವವನ್ನು ಉತ್ತಮಗೊಳಿಸಬಹುದಾಗಿದೆ.

ನಿಧಾನಗತಿಯ ಸೇವೆಯೇ ಗ್ರಾಹಕ ಸೇವೆ ವಿಫಲಗೊಳ್ಳಲು ಕಾರಣ

ಈ ಅಧ್ಯಯನದ ಪ್ರಕಾರ ಹಲವು ರಚನಾತ್ಮಕ ಸಮಸ್ಯೆಗಳು ಗ್ರಾಹಕರ ಕಾಯುವ ಸಮಯ ಗಣನೀಯವಾಗಿ ಹೆಚ್ಚಲು ಕಾರಣವಾಗಿದೆ. ವಿಶೇಷವಾಗಿ 48 ಪ್ರತಿಶತ ಭಾರತೀಯರು ಅಸಮರ್ಪಕ ಆಂತರಿಕ ಸಂವಹನವೇ ಗ್ರಾಹಕ ಸೇವಾ ವಿಳಂಬಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ. 47 ಪ್ರತಿಶತ ಗ್ರಾಹಕರು ಸೇವಾ ಸಿಬ್ಬಂದಿಗೆ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯ ಕೊರತೆಯಿದೆ ಎಂದು ಹೇಳಿದ್ದಾರೆ. 44 ಪ್ರತಿಶತ ಭಾರತೀಯರು ವಿವಿಧ ಇಲಾಖೆಗಳ ನಡುವೆ ಸಹಯೋಗ ಮತ್ತು ಜವಾಬ್ದಾರಿಯ ಕೊರತೆ ಇದೆ ಎಂದು ತಿಳಿಸಿದ್ದಾರೆ. 44 ಪ್ರತಿಶತದಷ್ಟು ಜನರು ಹಳೆಯ ಸಮಸ್ಯೆಗಳ ದಾಖಲೆಗಳನ್ನು ಇಟ್ಟುಕೊಳ್ಳದೇ ಇರುವುದೇ ಸಮಸ್ಯಗೆ ಕಾರಣ ಎಂದು ಹೇಳುತ್ತಾರೆ. 41 ಪ್ರತಿಶತದಷ್ಟು ಜನರು ತಮ್ಮ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸುವಲ್ಲಿ ವಿಳಂಬವಾಗಲು ಮಾತುಕತೆ ಮೂಲಕ ಸರಿಪಡಿಸಿಕೊಳ್ಳಬಹುದಾದ ಆಂತರಿಕ ವ್ಯವಸ್ಥೆಗಳಲ್ಲಿನ ಕೆಲವು ಸಮಸ್ಯೆಗಳು ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸುತ್ತಾರೆ.

ಪಾರದರ್ಶಕತೆ, ವೇಗ ಮತ್ತು ಸಹಾನುಭೂತಿ ಮುಖ್ಯ

60 ಪ್ರತಿಶತದಷ್ಟು ಭಾರತೀಯರು ಗ್ರಾಹಕ ಸೇವಾ ತಂಡಗಳು ಸಮಸ್ಯೆಗೆ ಪರಿಹಾರ ಒದಗಿಸುವ ವೇಗವನ್ನು ಹೆಚ್ಚುಗೊಳಿಸಲು ಬಯಸುತ್ತಾರೆ. ಅರ್ಧದಷ್ಟು ಜನರು ಗ್ರಾಹಕರನ್ನು ಹೋಲ್ಡ್‌ನಲ್ಲಿ ಇರಿಸಿಕೊಳ್ಳುವ ಸಮಯವನ್ನು ಕಡಿಮೆ ಮಾಡಲು ಬಯಸುತ್ತಾರೆ. ಸರಿಸುಮಾರು ಅರ್ಧದಷ್ಟು (48 ಪ್ರತಿಶತ) ಜನರು ಉತ್ತಮ ಗ್ರಾಹಕ ಸೇವಾ ಸೌಲಭ್ಯವನ್ನು ಬಯಸುತ್ತಾರೆ. ಸುಮಾರು 5ರಲ್ಲಿ 2 ಭಾರತೀಯರು (40 ಪ್ರತಿಶತ) ಪ್ರತಿಕ್ರಿಯೆ ನೀಡುವ ಸಮಯವನ್ನು ತೀವ್ರಗೊಳಿಸಬೇಕು ಅಥವಾ ಕಡಿಮೆಗೊಳಿಸಬೇಕು ಎಂದು ಬಯಸುತ್ತಾರೆ. ಈ ನಿಟ್ಟಿನಲ್ಲಿ 40 ಪ್ರತಿಶತ ಮಂದಿ ಸ್ವ-ಸಹಾಯ ಮಾರ್ಗದರ್ಶಿಗಳು (ಸೆಲ್ಫ್ ಹೆಲ್ಪ್ ಗೈಡ್) ಮತ್ತು ಸಂಪನ್ಮೂಲಗಳ ಬಳಕೆಯನ್ನು ಸುಧಾರಿಸಬೇಕು ಎಂದು ತಿಳಿಸಿದ್ದಾರೆ. 39 ಪ್ರತಿಶತ ಮಂದಿ ಚಾಟ್ ಬಾಟ್‌ಗಳ ಬಳಕೆಯನ್ನು ಹೆಚ್ಚುಗೊಳಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಈ ಬಗ್ಗೆ ಸುಮೀತ್ ಮಾಥುರ್ ಮಾತನಾಡಿ, “ಭಾರತೀಯ ಉದ್ಯಮಗಳ ಬಳಿಗೆ ಈಗ ಎರಡು ಆಯ್ಕೆಗಳಿವೆ. ಒಂದು ಹಳೆಯ ಪದ್ಧತಿಗಳನ್ನು ಬಳಸಿ ತಮ್ಮ ಗ್ರಾಹಕರ ವಿಶ್ವಾಸವನ್ನು ಕಳೆದುಕೊಳ್ಳುವುದು ಅಥವಾ ಇನ್ನೊಂದು ಗ್ರಾಹಕರು ಬಯಸುವುದನ್ನು ನೀಡುವಂತಹ ವಿಧಾನವನ್ನು ವಿನ್ಯಾಸಗೊಳಿಸಿ, ಅವರು ಬಯಸಿದ್ದು ನೀಡುವಂತೆ ಮರುಯೋಚನೆ ಮಾಡುವುದು. ಈ ಅಧ್ಯಯನದಿಂದ ಗ್ರಾಹಕರು ಎಐ ಆಧರಿತ ಚಾಟ್‌ಬಾಟ್‌ಗಳು ಅಥವಾ ಸ್ವಯಂ-ಸಹಾಯ ಮಾರ್ಗದರ್ಶಿಗಳನ್ನು ಬಳಸಲು ಸಿದ್ಧರಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಮತ್ತು ಗ್ರಾಹಕ ಸೇವಾ ಪ್ರತಿನಿಧಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಉದ್ಯಮಗಳು ಎಐ ಅನ್ನು ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

Continue Reading

ಉತ್ತರ ಕನ್ನಡ

Uttara Kannada News: ಕ್ಷೇತ್ರದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕರಿಂದ ಡಿಸಿಗೆ ಮನವಿ

Uttara Kannada News: ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಡಿಸಿ ಲಕ್ಷ್ಮೀಪ್ರಿಯಾ ಕೆ. ಅವರಿಗೆ ಮನವಿ ಸಲ್ಲಿಸಿದ ಮಾಜಿ ಶಾಸಕಿ ರೂಪಾಲಿ ಎಸ್‌.ನಾಯ್ಕ, ಪ್ರವಾಹದಿಂದ ಹಾನಿಯಾದ ಮನೆಗಳಿಗೆ ಹೆಚ್ಚಿನ ಪರಿಹಾರ ಹಾಗೂ ಮನೆ ಹಾನಿ ಪ್ರಕರಣದಲ್ಲಿ ಗಂಗಾವಳಿ ತೀರದ ನಿವಾಸಿಗಳಿಗೆ ನಿವೇಶನ ನೀಡಿ, ಮನೆ ನಿರ್ಮಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.

VISTARANEWS.COM


on

Former MLA Rupali Nayka appeals to DC to resolve various issues under Karwara Ankola Assembly Constituency
Koo

ಕಾರವಾರ: ಪ್ರವಾಹದಿಂದ ಹಾನಿಯಾದ ಮನೆಗಳಿಗೆ ಹೆಚ್ಚಿನ ಪರಿಹಾರ ಹಾಗೂ ಮನೆ ಹಾನಿ ಪ್ರಕರಣದಲ್ಲಿ ಗಂಗಾವಳಿ ತೀರದ ನಿವಾಸಿಗಳಿಗೆ ನಿವೇಶನ ನೀಡಿ ಮನೆ ನಿರ್ಮಿಸಲು ಮುಂದಾಗಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್‌. ನಾಯ್ಕ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಅವರಿಗೆ (Uttara Kannada News) ಮನವಿ ಸಲ್ಲಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಅವರು ಮನವಿ ಮಾಡಿದರು.

ಇತ್ತೀಚೆಗೆ ಭಾರಿ ಮಳೆಯಿಂದ ಚೆಂಡಿಯಾ, ತೋಡೂರು, ಅಮದಳ್ಳಿ, ಅರಗಾ ಮತ್ತಿತರ ಕಡೆಗಳಲ್ಲಿ ಮನೆಗಳು ಜಲಾವೃತವಾಗುತ್ತಿವೆ. ಜನತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ನೌಕಾನೆಲೆಯ ನಿರ್ಮಾಣ ಕಾಮಗಾರಿಗಳಿಂದ ನೀರು ಸರಾಗವಾಗಿ ಸಮುದ್ರಕ್ಕೆ ಹರಿದು ಹೋಗದೇ, ಗುಡ್ಡ ಬೆಟ್ಟಗಳಿಂದ ಹರಿದು ಬರುವ ನೀರು ಮನೆಗಳಿಗೆ ನುಗ್ಗುತ್ತಿದೆ. ಆ ಪ್ರದೇಶದ ಜನತೆಯ ಬದುಕು ಅಸಹನೀಯವಾಗಿದೆ.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಅಂಕೋಲಾ ತಾಲೂಕಿನ ಹಾರವಾಡ ಗೌಡಕೇರಿ, ಬೊಬ್ರುವಾಡದ ನದಿಭಾಗ್ ವ್ಯಾಪ್ತಿಯಲ್ಲಿ ಮಳೆನೀರು ನುಗ್ಗುತ್ತಿದ್ದು, ಅಲ್ಲಿನ ಜನತೆ ಪ್ರತಿವರ್ಷ ಇದೇ ಬವಣೆಯನ್ನು ಅನುಭವಿಸುತ್ತಿದ್ದಾರೆ. ನೌಕಾನೆಲೆ ಹಾಗೂ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಗುಡ್ಡ ಬೆಟ್ಟಗಳಿಂದ ಹರಿದುಬರುವ ನೀರು ಸರಾಗವಾಗಿ ಸಮುದ್ರಕ್ಕೆ ಹರಿದುಹೋಗುವಂತೆ ಶಾಶ್ವತ ಕ್ರಮ ಕೈಗೊಂಡು ಪ್ರತಿ ವರ್ಷ ಪ್ರವಾಹದ ಬವಣೆಯಿಂದ ಜನರನ್ನು ಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಿಂದ ಪರ್ಯಾಯ ಮಾರ್ಗವಾಗಿ ಬಳಕೆಯಾಗುತ್ತಿರುವ ಅಗಸೂರು-ಶಿರಗುಂಜಿ-ಕೋಡ್ಸಣಿ ಮಾರ್ಗ ಹಾಗೂ ಹಿಲ್ಲೂರು-ಮಾದನಗೇರಿ ರಸ್ತೆಗಳನ್ನು ದುರಸ್ಥಿ ಮಾಡಬೇಕು. ಬೃಹತ್ ವಾಹನಗಳ ಓಡಾಟದಿಂದ ಈ ರಸ್ತೆಗಳು ಹದಗೆಟ್ಟಿವೆ. ದೊಡ್ಡ ದೊಡ್ಡ ಹೊಂಡಗಳು ಬಿದ್ದು, ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗುತ್ತಿದೆ. ಬೃಹತ್ ವಾಹನಗಳ ಓಡಾಟದಿಂದಲೇ ರಸ್ತೆ ಸಂಪೂರ್ಣ ಹಾಳಾಗಿವೆ. ಆದ ಕಾರಣ ಅಂಕೋಲಾ ತಾಲೂಕಿನ ಕೊಡ್ಸಣಿ ರಸ್ತೆ ಹಾಗೂ ಗೋಕರ್ಣ ವಡ್ಡಿ ರಸ್ತೆ, ಮಂಜಗುಣಿ ರಸ್ತೆಗಳನ್ನು ಪ್ರಕೃತಿ ವಿಕೋಪದಿಂದ ಹಾನಿಯಾದ ರಸ್ತೆ ಎಂದು ಪರಿಗಣಿಸಿ ಸರ್ವಋತು ರಸ್ತೆಯನ್ನಾಗಿ ಮಾಡಲು ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.

ಇದನ್ನೂ ಓದಿ: MB Patil: ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ; ಸಚಿವ ಎಂ‌.ಬಿ. ಪಾಟೀಲ

ಪರಿಹಾರವನ್ನು ಹೆಚ್ಚಿಸಿ

ಪ್ರವಾಹದಿಂದ ನೀರು ನುಗ್ಗಿದ ಮನೆಗಳಿಗೆ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 10 ಸಾವಿರ ಪರಿಹಾರ ನೀಡಲಾಗುತ್ತಿತ್ತು. ಈಗ ರಾಜ್ಯ ಸರ್ಕಾರ 5 ಸಾವಿರ ನೀಡುತ್ತಿದೆ. ಇದನ್ನು 10 ಸಾವಿರಕ್ಕೆ ಏರಿಸಬೇಕು. ಉಳುವರೆಯಲ್ಲಿ ಮನೆ ಹಾನಿಯಾಗಿದೆ, ಸಾವು ಸಂಭವಿಸಿದೆ. ಮನೆ ಕಳೆದುಕೊಂಡವರಿಗೆ ನಿವೇಶನ ಗುರುತಿಸಿ ಮನೆ ನಿರ್ಮಿಸಿ ಕೊಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Continue Reading

ಮಳೆ

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ನೆರೆ ಹಾನಿ ಪ್ರದೇಶಕ್ಕೆ ಛಲವಾದಿ ನಾರಾಯಣಸ್ವಾಮಿ ಭೇಟಿ

Yadgiri News: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮದಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಹಾನಿಯಾದ ಪ್ರದೇಶಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಹಾನಿ ಪ್ರದೇಶ ವೀಕ್ಷಣೆ ಮಾಡಿದರು.

VISTARANEWS.COM


on

Kolluru bridge inundation by Krishna river flood Chalavadi Narayanaswamy visits the flood damaged area
Koo

ಯಾದಗಿರಿ: ಕೃಷ್ಣಾ ನದಿ ಪ್ರವಾಹದಿಂದ ಹಾನಿಯಾದ ಪ್ರದೇಶಕ್ಕೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಹಾನಿ ಪ್ರದೇಶ ವೀಕ್ಷಣೆ (Yadgiri News) ಮಾಡಿದರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮದ ಕೃಷ್ಣಾ ನದಿ ಪ್ರವಾಹದಿಂದ ಜಲಾವೃತವಾದ ಕೊಳ್ಳುರು ಸೇತುವೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ವೇಳೆ ಕೃಷ್ಣಾ ನದಿ ಪ್ರವಾಹದಿಂದ ಸೇತುವೆ ಮುಳುಗಡೆಯಾಗಿ ಜನರು ಎದುರಿಸುವ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು, ಪ್ರವಾಹದಿಂದ ಎದುರಿಸುವ ಸಮಸ್ಯೆಗಳ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಅವರಲ್ಲಿ ನೋವು ತೊಡಿಕೊಂಡರು.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಕೃಷ್ಣಾ ನದಿ ಪ್ರವಾಹದಿಂದ ಪ್ರತಿ ವರ್ಷ ಸೇತುವೆ ಮುಳುಗಡೆಯಿಂದ ರಾಯಚೂರುಗೆ ತೆರಳಲು ಸಮಸ್ಯೆ ಆಗಲಿದೆ‌. ಸೇತುವೆ ಎತ್ತರವಾಗಿ ನಿರ್ಮಾಣ ಮಾಡಲು ಸಾಕಷ್ಟು ಬಾರಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರು ನಮ್ಮ ಬೇಡಿಕೆ ಈಡೇರಿಲ್ಲ.

ಪ್ರತಿ ವರ್ಷ ಪ್ರವಾಹ ಬಂದಾಗ ಸೇತುವೆ ಮುಳುಗಡೆಯಾದ ನಂತರ ಎಲ್ಲರೂ ಪಿಕ್‌ನಿಕ್‌ನಂತೆ ಬಂದು ಭೇಟಿ ನೀಡಿ ಹೋಗುತ್ತಾರೆ. ಈ ಸೇತುವೆ ಎತ್ತರವಾಗಿ ನಿರ್ಮಾಣ ಮಾಡಬೇಕು. ಅದೇ ರೀತಿ ಪ್ರವಾಹದಿಂದ ಬೆಳೆ ಹಾನಿಯಾಗುತ್ತಿದೆ, ಸರ್ಕಾರ ಸೂಕ್ತ ಪರಿಹಾರ ಕಲ್ಪಿಸುವ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಡಿಸಿ ಅವರೊಂದಿಗೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾಹಿತಿ ಪಡೆದರು. ಸೇತುವೆ ಎತ್ತರ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುತ್ತದೆ ಎಂದು ಡಿಸಿ ತಿಳಿಸಿದರು.

ನಂತರ ಯಕ್ಷಿಂತಿ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡಿ ರೈತರ ಸಮಸ್ಯೆ ಆಲಿಸಿದರು.

ಈ ವೇಳೆ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆರು ತಂಡಗಳಲ್ಲಿ ನೆರೆ ಹಾನಿ ಪ್ರದೇಶ ವೀಕ್ಷಣೆ ಮಾಡಲಾಗುತ್ತದೆ. ಅದರಂತೆ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿ ಹಾನಿ ಪರಿಶೀಲನೆ ಮಾಡಲಾಗಿದೆ. ಭೇಟಿ ನೀಡಿದ ವರದಿಯನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಾಗುತ್ತದೆ. ಕೊಳ್ಳುರು ಸೇತುವೆ ಎತ್ತರವಾಗಿ ನಿರ್ಮಾಣ ಮಾಡಿಸಲು ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತದೆ ಎಂದರು. ರಾಜ್ಯ ಸರ್ಕಾರ ಕಡಿಮೆ ಪರಿಹಾರ ಹಣ ನೀಡದೇ ಹೆಚ್ಚಿನ ಪರಿಹಾರ ನೀಡಲು ಇಚ್ಛಾಶಕ್ತಿ ತೊರಿಸಿ ಮಾನವೀಯತೆ ತೊರಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

ಈ ಸಂದರ್ಭದಲ್ಲಿ ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ, ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ, ಡಿಸಿ ಡಾ. ಸುಶೀಲಾ ಬಿ, ಎಸ್ಪಿ ಜಿ. ಸಂಗೀತಾ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಸೀಲ್ದಾರ್‌ ಉಮಾಕಾಂತ ಹಳ್ಳೆ, ಪರಶುರಾಮ ಕುರಕುಂದಿ, ವಿಲಾಸ ಪಾಟೀಲ, ಸಿದ್ದಣ್ಣಗೌಡ ಕಾಡಂನೋರ್, ಶಿವು ಕೊಂಕಲ್, ದೇವರಾಜ ನಾಯಕ, ವಿರುಪಾಕ್ಷಪ್ಪಗೌಡ ಮಾಚನೂರು, ಬಸವರಾಜ ಸೊನ್ನದ, ಬಸವರಾಜ ಅರಕೇರಿ, ವೀರುಪಾಕ್ಷಯ್ಯ ಸ್ವಾಮಿ ಸೇರಿದಂತೆ ಇತರರು ಇದ್ದರು.

Continue Reading
Advertisement
Virat Kohli
ಕ್ರೀಡೆ32 mins ago

Virat Kohli: ಗಂಭೀರ್​ ಮಾರ್ಗದರ್ಶನದಂತೆ ಅತ್ಯಂತ ಜೋಶ್​ನಿಂದ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಕೊಹ್ಲಿ; ಫೋಟೊ ವೈರಲ್​

Infosys
ಕರ್ನಾಟಕ1 hour ago

Infosys: ಇನ್ಫೋಸಿಸ್‌ನಿಂದ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ; ಜಿಎಸ್‌ಟಿ ನೋಟಿಸ್‌ ರವಾನೆ

Paris Olympics
ಕ್ರೀಡೆ1 hour ago

Paris Olympics: ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಮುಗ್ಗರಿಸಿದ ಮಣಿಕಾ ಬಾತ್ರಾ

Indians spend 15 billion hours waiting for customer service time in 2023 ServiceNow information
ದೇಶ2 hours ago

Servicenow: ಭಾರತೀಯರು ಗ್ರಾಹಕ ಸೇವೆ ಪಡೆಯಲು ವರ್ಷದಲ್ಲಿ 15 ಶತಕೋಟಿ ಗಂಟೆ ಕಳೆಯುತ್ತಾರೆ! ಅಧ್ಯಯನ ವರದಿ

Former MLA Rupali Nayka appeals to DC to resolve various issues under Karwara Ankola Assembly Constituency
ಉತ್ತರ ಕನ್ನಡ2 hours ago

Uttara Kannada News: ಕ್ಷೇತ್ರದ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕರಿಂದ ಡಿಸಿಗೆ ಮನವಿ

Kolluru bridge inundation by Krishna river flood Chalavadi Narayanaswamy visits the flood damaged area
ಮಳೆ2 hours ago

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ನೆರೆ ಹಾನಿ ಪ್ರದೇಶಕ್ಕೆ ಛಲವಾದಿ ನಾರಾಯಣಸ್ವಾಮಿ ಭೇಟಿ

Successful complex surgery at Fortis Hospital for a boy who had a hole in his intestine due to a road accident
ಕರ್ನಾಟಕ2 hours ago

Fortis Hospital: ರಸ್ತೆ ಅಪಘಾತದಿಂದ ಕರುಳಿನಲ್ಲಿ ರಂಧ್ರ; 10 ವರ್ಷದ ಬಾಲಕನಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

New Rules
ದೇಶ2 hours ago

New Rules: ಕ್ರೆಡಿಟ್‌ ಕಾರ್ಡ್‌ನಿಂದ ಎಲ್‌ಪಿಜಿ ದರ; ನಾಳೆಯಿಂದ ಯಾವೆಲ್ಲ ನಿಯಮ, ದರ ಬದಲು? ಜೇಬಿಗೆ ಹೊರೆಯೇ?

Pakistani Labours
ವಿದೇಶ2 hours ago

Pakistani Labours: ಭಿಕ್ಷಾಟನೆ, ಅಪರಾಧ ಕೃತ್ಯ; ಪಾಕಿಸ್ತಾನಿಯರನ್ನು ಒದ್ದು ಓಡಿಸುತ್ತಿರುವ ಗಲ್ಫ್‌ ರಾಷ್ಟ್ರಗಳು!

Star Monsoon gym fashion
ಫ್ಯಾಷನ್2 hours ago

Star Monsoon Gym Fashion: ನಟ ಕಾರ್ತಿಕ್‌ ಜಯರಾಮ್‌ ಮಾನ್ಸೂನ್‌ ಜಿಮ್‌ ಫ್ಯಾಷನ್‌ ಮಂತ್ರ ಹೀಗಿದೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌