DK Shivakumar: ಪ್ರಧಾನಿ ಮೋದಿ ಭೇಟಿಯಾದ ಡಿಕೆಶಿ; ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಬೇಡಿಕೆ - Vistara News

ಕರ್ನಾಟಕ

DK Shivakumar: ಪ್ರಧಾನಿ ಮೋದಿ ಭೇಟಿಯಾದ ಡಿಕೆಶಿ; ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಬೇಡಿಕೆ

DK Shivakumar: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ಪಾಲಿಗೆ ಅನುದಾನವೇ ಬಂದಿಲ್ಲ. ಅದರಲ್ಲೂ ನೀರಾವರಿಗೆ ಕೊಂಚವೂ ಅನುದಾನ ಬಂದಿಲ್ಲದ ಕಾರಣ, ಪ್ರಧಾನಿಗಳ ಗಮನಕ್ಕೆ ತರುವ ಸಲುವಾಗಿ ಭೇಟಿ ಮಾಡಲಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಅತಿ ಹೆಚ್ಚು ತೆರಿಗೆ ನೀಡುವ ನಗರವಾಗಿದೆ. ಈ ನಗರಕ್ಕೆ ಬಜೆಟ್‌ನಲ್ಲಿ ಏನೂ ದೊರೆತಿಲ್ಲ. ಮಹಾರಾಷ್ಟ್ರದಂತೆ ನಮ್ಮನ್ನು ಪರಿಗಣಿಸಬೇಕು. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜೆಎನ್ ನರ್ಮ್ ಯೋಜನೆ ಅಡಿ ಎಲೆಕ್ಟ್ರಾನಿಕ್ಸ್ ಸಿಟಿ, ಹೆಬ್ಬಾಳ, ನೆಲಮಂಗಲ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು ಎಂದರು.

ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಮಾಡಲು ಸಾಧ್ಯ. ಎರಡು ಪ್ರದೇಶಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ತಿಳಿದರು. ರಾಜ್ಯ ರಾಜಧಾನಿಯಲ್ಲಿ ನೂತನವಾಗಿ ಒಂದಷ್ಟು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಆದ ಕಾರಣ ಈ ಯೋಜನೆಗಳಿಗೂ ಕೇಂದ್ರ ಸರ್ಕಾರ ನೇರವಾಗಬೇಕು ಎಂದು ಕೇಳಲಾಗಿದೆ. ಬೆಂಗಳೂರಿಗೆ ಹೊರಗಿನಿಂದ ಹೆಚ್ಚಿನ ಜನ ಬರುತ್ತಿದ್ದಾರೆ. ಜೊತೆಗೆ ನಗರದ ಮೂಲಸೌರ್ಕಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡಬೇಕಿದೆ, ಇದಕ್ಕೆ ಅನುದಾನದ ಅವಶ್ಯಕತೆಯಿದೆ ಎಂದು ಪ್ರಧಾನಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ | Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಭದ್ರಾ ಮೇಲ್ದಂಡೆ ಯೋಜನೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ

ಕಳೆದ ಬಜೆಟ್ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿತ್ತು. ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮಳೆ ವಿಚಾರ, ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಬೇಕಿತ್ತು 84 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ ಎಂದು ತಿಳಿಸಿದೆವು. ಒಂದು ಸಭೆ ನಡೆಸಿ ಮಹದಾಯಿ ಯೋಜನೆ ಸಮಸ್ಯೆ ಬಗೆಹರಿಸಬಹುದು ಎಂದು ಅವರ ಗಮನಕ್ಕೆ ತಂದೆವು. ಮೇಕೆದಾಟು ವಿಚಾರವಾಗಿ ನೀವುಗಳೇ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಉತ್ತಮ ಎಂದು ಸಲಹೆ ನೀಡಿದರು. ಈ ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ” ಎಂದು ಹೇಳಿದರು.

ಈ ಬಾರಿಯ ಬಜೆಟ್ ಅಲ್ಲಿ ಕರ್ನಾಟಕದ ಪಾಲಿಗೆ ಅನುದಾನವೇ ಬಂದಿಲ್ಲ. ಅದರಲ್ಲೂ ನೀರಾವರಿಗೆ ಕೊಂಚವೂ ಅನುದಾನ ಬಂದಿಲ್ಲದ ಕಾರಣ ಇವುಗಳನ್ನು ಪ್ರಧಾನಿಗಳ ಗಮನಕ್ಕೆ ತರುವ ಸಲುವಾಗಿ ಭೇಟಿ ಮಾಡಲಾಯಿತು” ಎಂದು ತಿಳಿಸಿದರು.

“ಉತ್ತಮವಾಗಿ ಮಳೆ ಬಂದು ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಯುತ್ತಿರುವ ವಿಚಾರ ಕೇಂದ್ರ ಜಲಶಕ್ತಿ ಸಚಿವರ ಗಮನಕ್ಕೆ ಬಂದಿದೆ. ನಾವು ಸಹ ವಾಸ್ತವಾಂಶವನ್ನು ಸಚಿವರಿಗೆ ಅರ್ಥ ಮಾಡಿಸುತ್ತೇವೆ” ಎಂದು ತಿಳಿಸಿದರು.

ತಮಿಳುನಾಡಿಗೆ ಇತಿಹಾಸದಲ್ಲೇ ಹೆಚ್ಚಿನ ನೀರು ಬಿಡುಗಡೆ

2 ಲಕ್ಷದ 25 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಮಂಗಳವಾರದ ತನಕ ಹರಿಸಲಾಗಿದೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ನೀರನ್ನು ಹರಿಸಲಾಗಿದೆ. ಮಳೆ ಸ್ವಲ್ಪ ತಗ್ಗಿದ ಕಾರಣಕ್ಕೆ ಒಂದು ಮುಕ್ಕಾಲು ಲಕ್ಷ ಕ್ಯೂಸೆಕ್ ನೀರನ್ನು ಹರಿಸುತ್ತಿದ್ದೇವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದಲ್ಲೂ ಉತ್ತಮ ಮಳೆಯಾಗುತ್ತಿರುವ ಕಾರಣಕ್ಕೆ ಕಬಿನಿ ಹಾಗೂ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರನ್ನು ಸಂಗ್ರಹ ಮಾಡದೆ ಬಿಡಲಾಗುತ್ತಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು, ನದಿ ಹತ್ತಿರ ಹೋಗಬಾರದು. ಎಚ್ಚರಿಕೆಯಿಂದ ಇರಬೇಕು ಎಂದು ಜನರಲ್ಲಿ ಮನವಿ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ | Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

ಮುಡಾ ಪಾದಯಾತ್ರೆ; ನಾವು ತಯಾರಿ ಮಾಡಿಕೊಂಡಿದ್ದೇವೆ

ಮುಡಾ ಅಕ್ರಮ ವಿಚಾರವಾಗಿ ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ವಿಚಾರ ನನಗೆ ತಿಳಿದಿಲ್ಲ. ಇದಕ್ಕೆ ನಾವು ಏನು ಸಿದ್ಧತೆ ಮಾಡಿಕೊಳ್ಳಬೇಕೊ ಅದನ್ನು ಮಾಡಿಕೊಂಡಿದ್ದೇವೆ. ಈ ವಿಷಯದ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಮಾಡಿ ಮಾತನಾಡುತ್ತೇನೆ” ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

Karnataka Rain: 3-4 ದಿನಗಳಿಂದ ಪ್ರವಾಹಕ್ಕೆ ಬಾಳೆಹೊನ್ನೂರು ಜನರು ನಲುಗಿದ್ದು, ತೋಟಗಳು ಮುಳುಗಡೆಯಾಗಿದ್ದರಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಮಳೆ ಹೆಚ್ಚಾದರೆ ಪಟ್ಟಣದ ಹಲವು ಬಡಾವಣೆಗಳು ಜಲಾವೃತವಾಗುವ ಆತಂಕ ಎದುರಾಗಿದೆ.

VISTARANEWS.COM


on

Karnataka Rain
ಬಾಳೆಹೊನ್ನೂರು ಪಟ್ಟಣದ ಸಂತೆ ಮಾರುಕಟ್ಟೆ ಮುಳುಗಿರುವುದು.
Koo

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭದ್ರಾ ನದಿ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಸತತ ಮಳೆಯಿಂದ (Karnataka Rain) ಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣ ಮುಳುಗಡೆಯಾಗಿದೆ. ದೋಬಿ ಹಳ್ಳ ಪ್ರವಾಹಕ್ಕೆ ‌ಬಾಳೆಹೊನ್ನೂರಿನ ನದಿ ತಟದ ಸಂತೆ ಮಾರುಕಟ್ಟೆ, ಮನೆಗಳು, ಅಂಗಡಿ ಮಳಿಗೆಗಳು, ಕಾಫಿ, ಅಡಿಕೆ ತೋಟಗಳು ಮುಳುಗಡೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

3-4 ದಿನಗಳಿಂದ ಪ್ರವಾಹಕ್ಕೆ ಬಾಳೆಹೊನ್ನೂರು ಜನರು ನಲುಗಿದ್ದು, ತೋಟಗಳು ಮುಳುಗಡೆಯಾಗಿದ್ದರಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಭಾರಿ ಪ್ರಮಾಣ ನೀರಿನಿಂದ ಕಾಫಿ, ಅಡಕೆಗೆ ಕೊಳೆ ರೋಗ ಆವರಿಸುವ ಭೀತಿ ಎದುರಾಗಿದೆ. ಮತ್ತಷ್ಟು ಮಳೆ ಹೆಚ್ಚಾದರೆ ಪಟ್ಟಣದ ಹಲವು ಬಡಾವಣೆಗಳು ಜಲಾವೃತವಾಗುವ ಆತಂಕ ಎದುರಾಗಿದೆ. ಮಳೆ ಹೆಚ್ಚಾದಂತೆ ಕ್ಷಣ ಕ್ಷಣಕ್ಕೂ ಭದ್ರಾ ನೀರಿನ ಅರಿವು ಹೆಚ್ಚಾಗುತ್ತಿದೆ.

ಇದನ್ನೂ ಓದಿ | Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮಳೆ ಅಬ್ಬರಕ್ಕೆ ರಸ್ತೆ ಬದಿ ಗುಡ್ಡ ಕುಸಿತ

ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದಲ್ಲಿ ಮಳೆ ಅಬ್ಬರಕ್ಕೆ ರಸ್ತೆ ಬದಿ ಗುಡ್ಡ ಕುಸಿದಿದ್ದು, ರಸ್ತೆ ಸಂಪರ್ಕ ಸ್ಥಗಿತವಾಗೋ ಸಾಧ್ಯತೆ ಇದೆ. ಸುಮಾರು 60 ಅಡಿಯಷ್ಟು ಗುಡ್ಡದ ಮಣ್ಣು ಕುಸಿದು ಬಿದ್ದಿದ್ದು, ರಸ್ತೆ ಸಂಪರ್ಕ‌ ಬಂದ್ ಆದಲ್ಲಿ 500ಕ್ಕೂ ಹೆಚ್ಚು ಕುಟುಂಬಗಳ ಸ್ಥಿತಿ ಅತಂತ್ರವಾಗಲಿದೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡು-ಶೃಂಗೇರಿ ರಸ್ತೆಯಲ್ಲಿ 3-4 ಕಡೆ ರಸ್ತೆ ಬದಿ ಗುಡ್ಡ ಕುಸಿದಿದೆ.

ಜಲಸ್ಫೋಟದಿಂದ ರಸ್ತೆಗೆ ಬಂದು ಕೂತ ಗುಡ್ಡ

ಕಳಸದಲ್ಲಿ ಭೂಮಿಯೊಳಗೆ ಜಲಸ್ಫೋಟದಿಂದ ಗುಡ್ಡ ಜರುಗಿ ರಸ್ತೆಗೆ ಬಂದಿರುವ ಘಟನೆ ನಡೆದಿದೆ. ಇದರಿಂದ ಕಳಸ-ಬಲಿಗೆ-ಹೊರನಾಡು ಸಂಪರ್ಕ ಕಡಿತವಾಗಿದೆ.

ಭಾರಿ ಮಳೆಗೆ ಮುಳುಗಿದ ಸೇತುವೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಶಿರಸಿ ತಾಲೂಕಿನ ದೊಡ್ನಳ್ಳಿ ಭಾಗದಲ್ಲಿ ಮಳೆಗೆ ಸೇತುವೆ ಮುಳುಗಿದ್ದು, ಚಿಪಗಿ-ದೊಡ್ನಳ್ಳಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ದೊಡ್ನಳ್ಳಿ ಭಾಗದಿಂದ ಓಡಾಡುವ ಗ್ರಾಮಸ್ಥರಿಗೆ ತೊಂದರೆಯಾಗಿದೆ.

ಸೇತುವೆ ಬಳಿ ಸಂಗ್ರಹಗೊಂಡಿದ್ದ ಮರದ ತುಂಡುಗಳನ್ನು ಸ್ಥಳೀಯರು ತೆರವುಗೊಳಿಸಿದ್ದಾರೆ. ಮಳೆಯಿಂದಾಗಿ ದೊಡ್ನಳ್ಳಿ ಪಂಚಾಯತ್ ವ್ಯಾಪ್ತಿಯ ಕೆಳಗಿನ ಎಸಳೆ ಗ್ರಾಮದಲ್ಲಿ ಜಮೀನು ಜಲಾವೃತವಾಗಿದ್ದು, 50 ಎಕರೆಗೂ ಅಧಿಕ ನಾಟಿ ಮಾಡಿದ ಗದ್ದೆ, ಕಬ್ಬಿನ ತೋಟಕ್ಕೆ ನೀರು ನುಗ್ಗಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ, ಭದ್ರಾ ನದಿಗಳು

ಶಿವಮೊಗ್ಗ: ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ತುಂಗಾ, ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಗಾ, ಭದ್ರಾ ಸಂಗಮ ಕ್ಷೇತ್ರದವಾದ ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕೂಡಲಿ ದೇವಸ್ಥಾನದ ಬಳಿ ಸ್ನಾನಘಟ್ಟ ಮುಳುಗಡೆಯಾಗಿದೆ.

ಭದ್ರಾವತಿ ಬಳಿ 30 ಮನೆಗಳು ಸಂಪೂರ್ಣ ಜಲಾವೃತ

ಭದ್ರಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆ ಭದ್ರಾವತಿ ತಾಲೂಕಿನ ಕವಲುಗುಂದಿ ಗ್ರಾಮದಲ್ಲಿ 30 ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಭದ್ರಾವತಿ ನಗರದ ಕಾಳಜಿ ಕೇಂದ್ರಕ್ಕೆ 30 ಕುಟುಂಬಗಳನ್ನು ಶಿಫ್ಟ್‌ ಮಾಡಲಾಗಿದೆ. ತಡಸ ಧಡಮ್ಘಟ್ಟ ರಸ್ತೆ ಸಂಪರ್ಕ ಬಂದ್ ಅಗಿದ್ದು, ಹತ್ತಾರು ಹಳ್ಳಿಗಳ ಸಂಪರ್ಕ ಸ್ಥಗಿತಗೊಂಡಿದೆ.

ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ

ದಾವಣಗೆರೆ: ಮಲೆನಾಡಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ತುಂಗಾ ಹಾಗೂ ಭದ್ರ ಎರಡು ಜಲಾಶಯಗಳಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಹಳ್ಳಿಗಳ ರಸ್ತೆ ಸಂಪರ್ಕ ಕಡಿತವಾಗಿದೆ.

ಪುಣ್ಯಕ್ಷೇತ್ರ ಉಕ್ಕಡಗಾತ್ರಿ ತುಮ್ಮಿನಕಟ್ಟೆ, ಪತೇಪುರ್ ರಸ್ತೆ ಸಂಪರ್ಕ ಕಡಿತವಾಗಿದ್ದು, ತುಂಗಾಭದ್ರ ನದಿ ಪ್ರವಾಹದಿಂದ ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಸೇತುವೆ ಮುಳುಗಡೆಯಿಂದ ಸುಮಾರು 10 ಕಿ.ಮೀ ಸುತ್ತಿಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಸೇತುವೆ ಮುಳುಗಡೆಯಿಂದ ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ನದಿ ಪ್ರವಾಹದಿಂದ ತರಕಾರಿ ಬೆಳೆ, ಭತ್ತದ ಗದ್ದೆ, ಅಡಿಕೆ ತೆಂಗಿನ ತೋಟಗಳು ಜಲಾವೃತವಾಗಿವೆ. ಇದರಿಂದ ರೈತರು ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ.

ಇದನ್ನೂ ಓದಿ | Wayanad Landslide: ಭೂಕುಸಿತದ ಬಗ್ಗೆ ಒಂದು ವಾರ ಮೊದಲೇ ನೀಡಲಾಗಿತ್ತಾ ಎಚ್ಚರಿಕೆ? ಕೇಂದ್ರದ ಸೂಚನೆ ನಿರ್ಲಕ್ಷಿಸಿತ್ತಾ ಕೇರಳ ಸರ್ಕಾರ?

ಕೊಪ್ಪಳದಲ್ಲಿ ಪ್ರವಾಹ ಭೀತಿ

ಕೊಪ್ಪಳ: ನೀರಿನ ಪ್ರಮಾಣ ಮತ್ತೆ ಏರಿಕೆಯಾದ ಹಿನ್ನೆಲೆ ತುಂಗಭದ್ರಾ ಜಲಾಶಯದಿಂದ ನದಿಗೆ 1.39 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಮತ್ತೆ ಚಿಕ್ಕಜಂತಕಲ್ ಸೇತುವೆ ಮುಳುಗಿದ್ದು, ವಿರುಪಾಪುರಗಡ್ಡೆ, ನವವೃಂದಾವನ ಗಡ್ಡೆಗೆ ಸಂಪರ್ಕ ಕಡಿತಗೊಂಡಿದೆ.

ಆನೆಗೊಂದಿಯ ಬಳಿಯ ಶ್ರೀಕೃಷ್ಣದೇವರಾಯ ಸಮಾಧಿ, ಬೆನ್ನೂರು ಹೊಳೆಬಸವೇಶ್ವರ ದೇವಸ್ಥಾನ ಜಲಾವೃತವಾಗಿದ್ದು, ನೀರಿನ ಪ್ರಮಾಣ ಹೆಚ್ಚಾದರೆ ಕೃಷಿ ಭೂಮಿಗೆ ನೀರು ನುಗ್ಗುವ ಸಾಧ್ಯತೆ ಇದೆ.

Continue Reading

ಕರ್ನಾಟಕ

Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

Kannada New Song: ಮಂಜು ಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ ಸಾರುವ “ಕೋಟಿ ಕೋಟಿ ರೊಕ್ಕ ಗಳಿಸಿ” ಎಂಬ ಹಾಡು ಎಚ್.ಎಂ. ರಾಮಚಂದ್ರ (ಹೂಡಿ ಚಿನ್ನಿ) ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ಈ ಹಾಡಿನ ವಿಡಿಯೊ ಕೂಡ ಇಲ್ಲಿದೆ.

VISTARANEWS.COM


on

Koti Koti Rokka Galisi kannada song released
Koo

ಬೆಂಗಳೂರು: ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯರಾಗಿರುವ ಹಾಗೂ ಭಾರತೀಯರ ಸೇವಾ ಸಮಿತಿ ಸ್ಥಾಪಕರೂ ಆಗಿರುವ ಎಚ್.ಎಂ. ರಾಮಚಂದ್ರ (ಹೂಡಿ ಚಿನ್ನಿ) ಅವರು ಈಗ ಗಾಯಕರಾಗಿದ್ದಾರೆ‌. ಮಂಜುಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ ಸಾರುವ “ಕೋಟಿ ಕೋಟಿ ರೊಕ್ಕ ಗಳಿಸಿ” ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಈ ಹಾಡು (Kannada New Song) ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನೆರವೇರಿತು.

ಶ್ರೀ ಮಹದೇವ ಸ್ವಾಮಿಜಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಚೇತನ್ ಅಹಿಂಸ, ನಿರ್ದೇಶಕ ಋಷಿ, ಭಾರತೀಯ ಸೇವಾ ಸಮಿತಿ ರಾಜ್ಯಾಧ್ಯಕ್ಷ ಅಮರ್ ಸೇರಿದಂತೆ ಅನೇಕ ಗಣ್ಯರು ಹಾಡು ಬಿಡುಗಡೆ ಮಾಡಿದರು.

ಈ ಹಾಡಿನಲ್ಲಿರುವ ಸಾಹಿತ್ಯಕ್ಕೂ ಹಾಗೂ ಹೂಡಿ ಚಿನ್ನಿ ಅವರ ಗುಣಕ್ಕೂ ಹೊಂದಾಣಿಕೆ ಆಗುತ್ತದೆ. ಹಾಗಾಗಿ ಈ ಹಾಡನ್ನು ಅವರಿಂದಲೇ ಹಾಡಿಸಬೇಕೆನಿಸಿತು. ಅವರು ಮೊದಲು ಒಪ್ಪಲಿಲ್ಲ. ಆನಂತರ ಅಭ್ಯಾಸ ಮಾಡಿ ಹಾಡಿದ್ದಾರೆ. ಎಂ.ಕೆ. ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡು ಕೇಳಿ ಆನಂದಿಸಿ ಎಂದರು ಹಾಡು ಬರೆದು ಸಂಗೀತ ನೀಡಿರುವ ಮಂಜುಕವಿ.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಹಾಡು ಬಿಡುಗಡೆ ಸಮಾರಂಭಕ್ಕೆ ಬಂದು ಹಾರೈಸಿದ ಎಲ್ಲಾ ಗಣ್ಯರಿಗೂ ಶರಣು ಎಂದು ಮಾತನಾಡಿದ ಹೂಡಿ ಚಿನ್ನಿ, ಮಂಜುಕವಿ ಅವರು ಬರೆದಿರುವ ಈ ಹಾಡು ಎಲ್ಲರ ಮನ ಮುಟ್ಟವಂತಿದೆ. ಈ ಗೀತೆಯನ್ನು ನೀವೇ ಹಾಡಿ ಅಂದಾಗ ನಾನು ಬೇಡ. ಬೇರೆ ಜನಪ್ರಿಯ ಗಾಯಕರು ಹಾಡಲಿ ಎಂದೆ. ಆದರೆ ಸ್ನೇಹಿತರ ಒತ್ತಾಯಕ್ಕೆ ಮಣಿದು ಅಭ್ಯಾಸ ಮಾಡಿ ಹಾಡಿದ್ದೇನೆ. ಹಾಡಿನಲ್ಲಿ ಒಳ್ಳೆಯ ಸಂದೇಶವಿದೆ. ನಮ್ಮ‌ ಈ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದು ತಿಳಿಸಿದರು.

Continue Reading

ಕರ್ನಾಟಕ

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Kannada New Movie: ʼಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ರಿಲೀಸ್‌ ಆಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿʼ ಎಂಬ ಮೆಲೋಡಿ ಹಾಡನ್ನು ಚಿತ್ರತಂಡ ಇತ್ತೀಚೆಗೆ ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

VISTARANEWS.COM


on

Ibbani Thabbida Ileyali movie Helu Gelati song released
Koo

ಬೆಂಗಳೂರು: ವಿಹಾನ್, ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿರುವ ʼಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ರಿಲೀಸ್‌ ಆಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿʼ ಎಂಬ ಮೆಲೋಡಿ ಹಾಡನ್ನು ಚಿತ್ರತಂಡ ಇತ್ತೀಚೆಗೆ ಬಿಡುಗಡೆ ಮಾಡಿದ್ದು, ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರತಂಡ (Kannada New Movie) ತಿಳಿಸಿದೆ.

ಈ ಹಿಂದೆ ಬಿಡುಗಡೆ ಮಾಡಿದ್ದ ಈ ಸಿನಿಮಾದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಚರಣ್‌ರಾಜ್ ಈ ಗೀತೆಗೆ ಧನಿಗೂಡಿಸಿರುವುದು ವಿಶೇಷ.

ನಾಗಾರ್ಜುನ ಶರ್ಮಾ ಸಾಹಿತ್ಯವಿರುವ ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ಟ್ರೆಂಡ್ ಹುಟ್ಟುಹಾಕಿರುವ ಈ ಗೀತೆಗೆ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನವಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ.

ಕಿರಿಕ್ ಪಾರ್ಟಿ ಹಾಗೂ ಅವನ್ನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾಸಂಗಮ ಚಿತ್ರದ ನಿರ್ದೇಶಕರಲ್ಲೊಬ್ಬರಾಗಿದ್ದರು. ಇದೀಗ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪರವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ, ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ತೆಲುಗಿನ ಸೂಪರ್‌ಹಿಟ್ ‘ಗೀತಾಂಜಲಿʼ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ನಟನೆಗೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ಮೊದಲಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.‌

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ಮಗ್ನವಾಗಿದ್ದು, ವಿಎಫ್‌ಎಕ್ಸ್ ಕೆಲಸ ಪಿನಾಕ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ ಈ ಚಿತ್ರಕ್ಕಿದೆ.

Continue Reading

ಕರ್ನಾಟಕ

Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Muda Scam: ಮುಡಾ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಇತ್ತೀಚೆಗೆ 400 ಪುಟ ದಾಖಲೆ ಸಹಿತ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ 25 ಪುಟಗಳ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳನ್ನು ಸಲ್ಲಿಸಿದ್ದಾರೆ.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಬದಲಿ ನಿವೇಶನಗಳ ಹಂಚಿಕೆ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಮತ್ತಷ್ಟು ದಾಖಲೆಗಳನ್ನು ಸಹಿತ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬಸ್ಥರು ಹಾಗೂ ಕೆಲ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕಚೇರಿಗೆ ದೂರುದಾರರು ಒದಗಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಇತ್ತೀಚೆಗೆ 400 ಪುಟ ದಾಖಲೆ ಸಹಿತ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದ 25 ಪುಟಗಳ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಪತ್ರದಲ್ಲ ಏನಿದೆ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಾನೂನುಬಾಹಿರವಾಗಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವ ಮೂಲಕ ಸರ್ಕಾರಕ್ಕೆ 60 ಕೋಟಿ ರೂಪಾಯಿಗಳನ್ನು ವಂಚನೆ ಮಾಡಿರುವ ʼಬದಲಿ ನಿವೇಶನಗಳ ಹಂಚಿಕೆ” ಹಗರಣಕ್ಕೆ ಸಂಬಂಧಿಸಿದಂತೆ ಸುಮಾರು 400 ಪುಟಗಳ ಸಂಪೂರ್ಣ ದಾಖಲೆಗಳ ಸಹಿತ ಜುಲೈ 20ರಂದು ಸಿಎಂ ಸಿದ್ದರಾಮಯ್ಯ ಮತ್ತವರ ಕುಟುಂಬಸ್ಥರು ಹಾಗೂ ಕೆಲವು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ದೂರು ನೀಡಲಾಗಿದೆ.

ಅದೇ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳು ಈಗ ನಮಗೆ ದೊರೆತಿದ್ದು, ಅವುಗಳನ್ನು ಈ ಪತ್ರದೊಂದಿಗೆ ಲಗತ್ತಿಸಲಾಗಿದೆ. 1997-98 ರ ಅವಧಿಯಲ್ಲಿ L&T ಸಂಸ್ಥೆಯ ಮೂಲಕ ಮುಡಾ ಸಂಪೂರ್ಣ ಅಭಿವೃದ್ಧಿ ಡಾಂಬರೀಕರಣಗೊಂಡ ರಸ್ತೆಗಳು, ಪಾದಚಾರಿ ಮಾರ್ಗಗಳು, ಚರಂಡಿಗಳು, ಕುಡಿಯುವ ನೀರಿನ ಪಡಿಸಿ ಕೊಳವೆಗಳು, ಒಳಚರಂಡಿ ಕೊಳವೆಗಳು ಮತ್ತು ಬೀದಿ ದೀಪಗಳನ್ನು ಒಳಗೊಂಡ ‘ದೇವನೂರು 3ನೇ ಹಂತದ ಬಡಾವಣೆಯಲ್ಲಿನ ನಿವೇಶನಗಳನ್ನು ಅರ್ಜಿದಾರರಿಗೆ ಹಂಚಿಕೆ ಮಾಡಲಾಗಿತ್ತು. ಮೂರ್ನಾಲ್ಕು ವರ್ಷಗಳಲ್ಲಿಯೇ ಆ ಬಡಾವಣೆಯಲ್ಲಿ ಹತ್ತಾರು ಕಟ್ಟಡಗಳು ತಲೆ ಎತ್ತಿದ್ದವು. ಆದರೆ, ಆದಾಗಲೇ ಅಭಿವೃದ್ಧಿಗೊಂಡಿದ್ದ ಬಡಾವಣೆಯಲ್ಲಿ 3.16 ಎಕರೆ ವಿಸ್ತೀರ್ಣದ ಪ್ರದೇಶವನ್ನು “ಭೂ ಪರಿವರ್ತನೆ” ಮಾಡಿ ಕೊಡುವಂತೆ 2004ರ ಡಿ.1ರಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ, ಅಂದಿನ ಜಿಲ್ಲಾಧಿಕಾರಿಗಳು, ತಹಶೀಲ್ದಾರರ ವರದಿಯನ್ನಾಧರಿಸಿ 2005ರ ಜೂನ್‌ 17ರಂದು ಖುದ್ದು ಸ್ಥಳ ಪರಿಶೀಲನೆ ಮಾಡಿ “ಮೈಸೂರು ತಾಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವಸತಿ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆ ಮಾಡಲು ಅನುಮತಿ ನೀಡಲಾಗಿದೆ’ ಎಂದು “ಸ್ಥಳ ತನಿಖಾ ಟಿಪ್ಪಣಿ”ಯಲ್ಲಿ ಲಿಖಿತವಾಗಿ ತಿಳಿಸಿದ್ದರು.

2005ಕ್ಕೂ ಏಳೆಂಟು ವರ್ಷಗಳ ಹಿಂದೆಯೇ ಸಂಪೂರ್ಣ ಅಭಿವದ್ಧಿ ಪಡಿಸಲಾಗಿದ್ದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ವ್ಯವಸಾಯದ ಜಮೀನು ಇರಲು ಹೇಗೆ ಸಾಧ್ಯ. 2004-2006 ರ ಅವಧಿಯಲ್ಲಿ ಧರ್ಮಸಿಂಗ್‌ ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಆಗಿದ್ದ ಸಿದ್ಧರಾಮಯ್ಯನವರ ರಾಜಕೀಯ ಪ್ರಭಾವಕ್ಕೆ ಮತ್ತು ಒತ್ತಡಗಳಿಗೆ ಒಳಗಾಗಿದ್ದ ಆಗಿನ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ಈ ರೀತಿಯ ಹಾಸ್ಯಾಸ್ಪದ ಮತ್ತು ಕಾನೂನು ಬಾಹಿರವಾದ ಭೂ ಪರಿವರ್ತನೆ ಕಾರ್ಯಕ್ಕೆ ಅನುಮೋದನೆ ನೀಡಿರುವುದು ಅತ್ಯಂತ ಸ್ಪಷ್ಟವಾಗಿರುತ್ತದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

ಇದೇ ಜಮೀನಿಗೆ ಸಂಬಂಧಿಸಿ ದಂತೆ, ದೇವನೂರು 03ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು ಭೂಸ್ವಾಧೀನಪಡಿಸಿಕೊಂಡಿದ್ದ ಅಷ್ಟೂ ಜಮೀನುಗಳ ಮಾಲೀಕರುಗಳಿಗೆ ಮೂಡಾದ ಆಯುಕ್ತರು, ಭೂಸ್ವಾಧೀನ ಅಧಿಕಾರಿ ಮತ್ತು ಮುಖ್ಯ ಲೆಕ್ಕಾಧಿಕಾರಿಗಳು ಮೈಸೂರಿನ ಪ್ರಧಾನ ಸಿವಿಲ್‌ ನ್ಯಾಯಾಲಯ ದಲ್ಲಿ ಒಟ್ಟು 1,50,59,642.70 ಗಳಷ್ಟು ಸಂಪೂರ್ಣ ಪರಿಹಾರ ಧನವನ್ನು ಠೇವಣಿ ಇಟ್ಟಿರುತ್ತಾರೆ. ಪ್ರಸ್ತುತ ತನಿಖಾ ಹಂತದಲ್ಲಿರುವ ಮೂಡಾದ ಈ ಬದಲಿ ನಿವೇಶನಗಳ ಹಗರಣದ ತನಿಖೆಗೆ, ಈ ಪತ್ರದೊಂದಿಗೆ ಲಗತ್ತಿಸಿರುವ 25 ಪುಟಗಳ ಎರಡು ದಾಖಲೆಗಳು ಅತ್ಯಂತ ಪ್ರಮುಖ ದಾಖಲೆಗಳಾಗುತ್ತವೆ ಎಂಬುದನ್ನು ಮಾನ್ಯ ಲೋಕಾಯುಕ್ತರ ಗಮನಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading
Advertisement
Israel v/s Hamas
ವಿದೇಶ1 min ago

Israel v/s Hamas: ಇಸ್ರೇಲ್‌‌ ಮುಂದಿನ ಟಾರ್ಗೆಟ್ ಯಾರು? ಇಲ್ಲಿದೆ ಹಮಾಸ್ ‘ಉಗ್ರ’ ನಾಯಕರ ಹಿಟ್‌ ಲಿಸ್ಟ್!

Wayanad Landslide
ದೇಶ33 mins ago

Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

Sexual Abuse
Latest1 hour ago

Sexual Abuse: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

Karnataka Rain
ಕರ್ನಾಟಕ1 hour ago

Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

FASTag new rule
ತಂತ್ರಜ್ಞಾನ1 hour ago

FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

Koti Koti Rokka Galisi kannada song released
ಕರ್ನಾಟಕ1 hour ago

Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

Paris Olympics Archery
ಕ್ರೀಡೆ2 hours ago

Paris Olympics Archery: ಪ್ರೀ-ಕ್ವಾರ್ಟರ್‌ ಫೈನಲ್​ಗೇರಿದ ದೀಪಿಕಾ ಕುಮಾರಿ

ITR Filing
ವಾಣಿಜ್ಯ2 hours ago

ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

Gunfire On School
Latest2 hours ago

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Ibbani Thabbida Ileyali movie Helu Gelati song released
ಕರ್ನಾಟಕ2 hours ago

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌