LPG Price Hike: ತಿಂಗಳ ಆರಂಭದಲ್ಲೇ ಎಲ್‌ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್‌; ಬೆಂಗಳೂರಿನಲ್ಲಿ ಇಷ್ಟಾಗಿದೆ ದರ - Vistara News

ವಾಣಿಜ್ಯ

LPG Price Hike: ತಿಂಗಳ ಆರಂಭದಲ್ಲೇ ಎಲ್‌ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್‌; ಬೆಂಗಳೂರಿನಲ್ಲಿ ಇಷ್ಟಾಗಿದೆ ದರ

LPG Price Hike: ಆಗಸ್ಟ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 6.50 ರೂ. ಹೆಚ್ಚಿಸಿವೆ. ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 1,732.5 ರೂ.ಗೆ ತಲುಪಿದೆ.

VISTARANEWS.COM


on

LPG Price Hike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಆಗಸ್ಟ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 6.5 ರೂ.-8.5 ರೂ. ಹೆಚ್ಚಿಸಿವೆ (LPG Price Hike). ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 1,732.5 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1652.50 ಆಗಿದೆ. ಹಿಂದೆ 1,646 ರೂ. ರೂ. ಆಗಿತ್ತು. ಮುಂಬೈಯಲ್ಲಿಯೂ ಏರಿಕೆಯಾಗಿದ್ದು ಹೊಸ ಬೆಲೆಯನ್ನು  1,605 ರೂ.ಗೆ ನಿಗದಿಪಡಿಸಲಾಗಿದೆ. ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,764.50 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ಸತತ ಇಳಿಕೆಯ ಬಳಿಕ ಏರಿಕೆ

ಕಳೆದ ಕೆಲವು ತಿಂಗಳಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಆದರೆ ಈ ಬಾರಿ ಬೆಲೆ ಏರಿಕೆಯ ಶಾಕ್‌ ತಗುಲಿದೆ. ಜುಲೈಯಲ್ಲಿ 30 ರೂ. ಕಡಿತಗೊಂಡಿದ್ದರೆ, ಜೂನ್‌ 1ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ 69.50 ರೂ. ಕಡಿಮೆ ಆಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು.

ತೈಲ ಮಾರುಕಟ್ಟೆ ಕಂಪನಿಗಳು ಕೊನೆಯ ಬಾರಿ ಮಾರ್ಚ್ 1ರಂದು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, ಒಎಂಸಿಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ. ಇನ್ನು ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ., ಚೆನ್ನೈನಲ್ಲಿ 818.50 ರೂ. ಇದೆ. ವಿಶೇಷವೆಂದರೆ ಕಳೆದ ವರ್ಷ ಜೂನ್‌ನಲ್ಲಿ ದೆಹಲಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,103 ರೂ. ಇತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 200 ರೂ.ಗಳ ಕಡಿತವನ್ನು ಘೋಷಿಸಿ 903 ರೂ.ಗೆ ಇಳಿಸಿದವು. ಬಳಿಕ 2024ರ ಮಾರ್ಚ್‌ನಲ್ಲಿ ಬೆಲೆಯನ್ನು ಮತ್ತೂ 100 ರೂ. ಕಡಿತಗೊಳಿಸಲಾಯಿತು.

ಇದನ್ನೂ ಓದಿ: Narayana Murthy: ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ: ನಾರಾಯಣಮೂರ್ತಿ ಹೊಸ ವಾದ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಮತ್ತೆ ಶಾಕ್‌ ಕೊಟ್ಟ ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Gold Rate Today: ತಿಂಗಳ ಮೊದಲ ದಿನವೇ ಬಂಗಾರ ಗ್ರಾಹಕರಿಗೆ ಶಾಕ್‌ ಕೊಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 1) ಮತ್ತೆ ಏರಿಕೆಯಾಗಿದೆ. ಮಂಗಳವಾರ ಕುಸಿದಿದ್ದ ದರ ಬುಧವಾರ ಹೆಚ್ಚಾಗಿತ್ತು. ಇಂದು ಮತ್ತೆ ಏರುಗತಿಯಲ್ಲಿ ಸಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 50 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 54 ಹೆಚ್ಚಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ತಿಂಗಳ ಮೊದಲ ದಿನವೇ ಬಂಗಾರ ಗ್ರಾಹಕರಿಗೆ ಶಾಕ್‌ ಕೊಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 1) ಮತ್ತೆ ಏರಿಕೆಯಾಗಿದೆ (Gold Rate Today). ಮಂಗಳವಾರ ಕುಸಿದಿದ್ದ ದರ ಬುಧವಾರ ಹೆಚ್ಚಾಗಿತ್ತು. ಇಂದು ಮತ್ತೆ ಏರುಗತಿಯಲ್ಲಿ ಸಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 50 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 54 ಹೆಚ್ಚಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,450 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,036 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,600 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,500 ಮತ್ತು ₹ 6,45,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,288 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,360 ಮತ್ತು ₹ 7,03,600 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,465 ₹ 7,051
ಮುಂಬೈ₹ 6,450 ₹ 7,036
ಬೆಂಗಳೂರು₹ 6,450 ₹ 7,036
ಚೆನ್ನೈ₹ 6,430₹ 7,015

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 85.50 ಹಾಗೂ 8 ಗ್ರಾಂಗೆ ₹ 684 ಇದೆ. 10 ಗ್ರಾಂ ₹ 855 ಹಾಗೂ 1 ಕಿಲೋಗ್ರಾಂ ₹ 85,500 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು ‘K’.

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: LPG Price Hike: ತಿಂಗಳ ಆರಂಭದಲ್ಲೇ ಎಲ್‌ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್‌; ಬೆಂಗಳೂರಿನಲ್ಲಿ ಇಷ್ಟಾಗಿದೆ ದರ

Continue Reading

ಕರ್ನಾಟಕ

Infosys: ಇನ್ಫೋಸಿಸ್‌ನಿಂದ 32 ಸಾವಿರ ಕೋಟಿ ರೂ. ತೆರಿಗೆ ವಂಚನೆ; ಜಿಎಸ್‌ಟಿ ನೋಟಿಸ್‌ ರವಾನೆ

Infosys: ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ. ಇದರಿಂದಾಗಿಯೇ ಇನ್ಫೋಸಿಸ್‌ಗೆ 32 ಸಾವಿರ ಕೋಟಿ ರೂ. ಜಿಎಸ್‌ಟಿ ನೋಟಿಸ್‌ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Infosys
Koo

ಬೆಂಗಳೂರು: ದೇಶದ ಎರಡನೇ ಬೃಹತ್‌ ಐಟಿ ಕಂಪನಿ (IT Company) ಎನಿಸಿರುವ, ಕರ್ನಾಟಕದ ಎನ್‌.ಆರ್.ನಾರಾಯಣ ಮೂರ್ತಿ ಸೇರಿ ಹಲವರು ಹುಟ್ಟುಹಾಕಿರುವ ಐಟಿ ದೈತ್ಯ ಇನ್ಫೋಸಿಸ್‌ ಕಂಪನಿ (Infosys) ವಿರುದ್ಧ ತೆರಿಗೆ ವಂಚನೆಯ (Tax Evasion) ಆರೋಪ ಕೇಳಿಬಂದಿದೆ. ತೆರಿಗೆ ವಂಚನೆಯ ಆರೋಪದ ಹಿನ್ನೆಲೆಯಲ್ಲಿ ಇನ್ಫೋಸಿಸ್‌ ಕಂಪನಿಗೆ ಜಿಎಸ್‌ಟಿ ಗುಪ್ತಚರ ಮಹಾ ನಿರ್ದೇಶನಾಲಯವು (DGGI) 32 ಸಾವಿರ ಕೋಟಿ ರೂಪಾಯಿ ಮೌಲ್ಯದ ಜಿಎಸ್‌ಟಿ ನೋಟಿಸ್‌ ಜಾರಿ ಮಾಡಿದೆ.

“ಇನ್ಫೋಸಿಸ್‌ ಕಂಪನಿಯು ಬೇರೆ ದೇಶಗಳಲ್ಲಿ ಹೊಂದಿರುವ ಬ್ರ್ಯಾಂಚ್‌ ಆಫೀಸ್‌ಗಳಿಂದ 2017-18ರಿಂದ 2021-22ರಲ್ಲಿ ಸರಬರಾಜು ಮಾಡಲಾಗಿರುವ ಸ್ವೀಕೃತಿಗಳ ಬದಲಾಗಿ ಬ್ರ್ಯಾಂಚ್‌ ಆಫೀಸ್‌ಗಳ ವೆಚ್ಚ ಎಂಬುದಾಗಿ ಉಲ್ಲೇಖಿಸಲಾಗಿದೆ. ಹಾಗಾಗಿ, ರಿವರ್ಸ್‌ ಚಾರ್ಜ್‌ ಮೆಕ್ಯಾನಿಸಂ ನಿಯಮಗಳ ಪ್ರಕಾರ ಭಾರತದಿಂದ ಹೊರಗಿರುವ ಬ್ರ್ಯಾಂಚ್‌ಗಳಿಂದ ಸರಬರಾಜು ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಇನ್ಫೋಸಿಸ್‌ ಲಿಮಿಟೆಡ್‌ ಕಂಪನಿಯು 32,403 ಕೋಟಿ ರೂ. ಐಜಿಎಸ್‌ಟಿ ಪಾವತಿಸಬೇಕು” ಎಂಬುದಾಗಿ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ‌

Narayana Murthy
Narayana Murthy

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ನಿಯಮಗಳ ಪ್ರಕಾರ, ಸರಕು ಅಥವಾ ಸೇವೆಗಳನ್ನು ಸ್ವೀಕರಿಸುವವರು ಪೂರೈಕೆದಾರರ ಬದಲಿಗೆ ತೆರಿಗೆ ಪಾವತಿಸಬೇಕು ಎಂಬುದೇ ರಿವರ್ಸ್‌ ಚಾರ್ಜ್‌ ಮೆಕ್ಯಾನಿಸಂ ಆಗಿದೆ. ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ. ಇದರಿಂದಾಗಿಯೇ ಇನ್ಫೋಸಿಸ್‌ಗೆ 32 ಸಾವಿರ ಕೋಟಿ ರೂ. ಜಿಎಸ್‌ಟಿ ನೋಟಿಸ್‌ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಯ ಸ್ಪಷ್ಟನೆ ಏನು?

ಜಿಎಸ್‌ಟಿ ನೋಟಿಸ್‌ ಕುರಿತು ಇನ್ಫೋಸಿಸ್‌ ಸ್ಪಷ್ಟನೆ ನೀಡಿದೆ. ಇನ್ಫೋಸಿಸ್‌ ಕಂಪನಿಯು ಯಾವುದೇ ಜಿಎಸ್‌ಟಿ ಪಾವತಿ ಬಾಕಿಯನ್ನು ಉಳಿಸಿಕೊಂಡಿಲ್ಲ. ಐಟಿ ಸೇವೆಗಳ ರಫ್ತಿನ ಮೇಲೆ ಜಿಎಸ್‌ಟಿ ರಿಫಂಡ್‌ ಪಡೆಯುವ ಅವಕಾಶ ಇದೆ. ಅದರಂತೆ, ಕ್ಲೇಮ್‌ ಮಾಡಲಾಗಿದೆ. ಇನ್ನು, ಕಂಪನಿಗೆ ಪ್ರಿ-ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿದ್ದು, ಈ ಕುರಿತು ಕಂಪನಿಯು ಪ್ರತಿಕ್ರಿಯೆ ನೀಡಿದೆ ಎಂಬುದಾಗಿ ಸ್ಪಷ್ಟಪಡಿಸಿದೆ.

ನಾರಾಯಣಮೂರ್ತಿ ಹೇಳಿಕೆ ಟ್ರೋಲ್

ಚೀನಾ ನಮ್ಮ ದೇಶಕ್ಕಿಂತ ಆರು ಪಟ್ಟು ಹೆಚ್ಚಿನ ಜಿಡಿಪಿ(GDP)ಯನ್ನು ಹೊಂದಿದ್ದು, ಅದರ ಉತ್ಪಾದನಾ ಸಾಮರ್ಥ್ಯವನ್ನು ಮ್ಯಾಚ್‌ ಮಾಡಲು ಭಾರತಕ್ಕೆ ಸಾಧ್ಯವಿಲ್ಲ. ಜನ ವಾದ ಮಾಡದೆ ಸುಮ್ಮನೆ ಕೆಲಸ ಮಾಡುವುದರಿಂದ ಚೀನಾ ನಮ್ಮ ದೇಶಕ್ಕಿಂತ ಮುಂದಿದೆ. ಉತ್ಪಾದನಾ ಕೇಂದ್ರವಾಗುವ ಭಾರತದ ಕನಸು ಇನ್ನು ಬಹಳ ದೂರದಲ್ಲಿದೆ ಎಂದು ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಾರಾಯಣ ಮೂರ್ತಿ ಅವರ ಹೇಳಿಕೆಯ ಕುರಿತು ಜನ ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: GST Fraud: ಜಿಎಸ್‌ಟಿ ತೆರಿಗೆ ವಂಚನೆ ಪತ್ತೆ ಹಚ್ಚಲು ಎಐ, ಅನಾಲಿಟಿಕ್ಸ್ ಟೂಲ್ಸ್ ಬಳಕೆ

Continue Reading

ದೇಶ

Servicenow: ಭಾರತೀಯರು ಗ್ರಾಹಕ ಸೇವೆ ಪಡೆಯಲು ವರ್ಷದಲ್ಲಿ 15 ಶತಕೋಟಿ ಗಂಟೆ ಕಳೆಯುತ್ತಾರೆ! ಅಧ್ಯಯನ ವರದಿ

Servicenow: ಸರ್ವೀಸ್‌ನೌ ಮಾಡಿರುವ ಹೊಸ ಸಂಶೋಧನೆಯ ಪ್ರಕಾರ, ಭಾರತೀಯರು ಹೋಲ್ಡ್ ಟು ಕಸ್ಟಮರ್ ಸರ್ವೀಸ್ (ಗ್ರಾಹಕರಿಗೆ ಕಾಯಿಸುವುದು) ಕಾರಣದಿಂದ 15 ಶತಕೋಟಿ ಗಂಟೆಗಳಿಗೂ ಹೆಚ್ಚು ಸಮಯವನ್ನು ಕಳೆದಿದ್ದಾರೆ. ‘ಕಸ್ಟಮರ್ ಎಕ್ಸ್‌ಪೀರಿಯನ್ಸ್ ಇಂಟೆಲಿಜೆನ್ಸ್ ರಿಪೋರ್ಟ್ 2024’ ವರದಿಯು ಒಬ್ಬ ಗ್ರಾಹಕ ಯಾವುದೇ ದೂರು ಅಥವಾ ಸಮಸ್ಯೆಯ ಪರಿಹಾರ ಕಾರಣಕ್ಕೆ ಕಾಯುವಿಕೆಯಲ್ಲಿ ಸರಾಸರಿ ಒಂದಕ್ಕಿಂತ ಹೆಚ್ಚು ದಿನವನ್ನು (30.7 ಗಂಟೆಗಳು) ಕಳೆದಿದ್ದಾರೆ ಎಂದು ತಿಳಿಸಿದೆ. ಇದು ವಾರ್ಷಿಕವಾಗಿ $55 ಬಿಲಿಯನ್* (ಯುಎಸ್‌ಡಿ)ಯಷ್ಟು ಆರ್ಥಿಕ ನಷ್ಟಕ್ಕೆ ಸಮಾನಾಗಿದೆ ಎಂದೂ ತಿಳಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Indians spend 15 billion hours waiting for customer service time in 2023 ServiceNow information
Koo

ಬೆಂಗಳೂರು: ಬಿಸಿನೆಸ್ ಟ್ರಾನ್ಸ್‌ಫಾರ್ಮೇಷನ್‌ಗೆ ಇರುವ ಎಐ ಪ್ಲಾಟ್‌ಫಾರ್ಮ್ ಆಗಿರುವ ಸರ್ವೀಸ್‌ನೌ (Servicenow) ಮಾಡಿರುವ ಹೊಸ ಸಂಶೋಧನೆಯ ಪ್ರಕಾರ, ಭಾರತೀಯರು ಹೋಲ್ಡ್ ಟು ಕಸ್ಟಮರ್ ಸರ್ವೀಸ್ (ಗ್ರಾಹಕರಿಗೆ ಕಾಯಿಸುವುದು) ಕಾರಣದಿಂದ 15 ಶತಕೋಟಿ ಗಂಟೆಗಳಿಗೂ ಹೆಚ್ಚು ಸಮಯವನ್ನು ಕಳೆದಿದ್ದಾರೆ. ‘ಕಸ್ಟಮರ್ ಎಕ್ಸ್‌ಪೀರಿಯನ್ಸ್ ಇಂಟೆಲಿಜೆನ್ಸ್ ರಿಪೋರ್ಟ್ 2024’ ವರದಿಯು ಒಬ್ಬ ಗ್ರಾಹಕ ಯಾವುದೇ ದೂರು ಅಥವಾ ಸಮಸ್ಯೆಯ ಪರಿಹಾರ ಕಾರಣಕ್ಕೆ ಕಾಯುವಿಕೆಯಲ್ಲಿ ಸರಾಸರಿ ಒಂದಕ್ಕಿಂತ ಹೆಚ್ಚು ದಿನವನ್ನು (30.7 ಗಂಟೆಗಳು) ಕಳೆದಿದ್ದಾರೆ ಎಂದು ತಿಳಿಸಿದೆ. ಇದು ವಾರ್ಷಿಕವಾಗಿ $55 ಬಿಲಿಯನ್* (ಯುಎಸ್‌ಡಿ)ಯಷ್ಟು ಆರ್ಥಿಕ ನಷ್ಟಕ್ಕೆ ಸಮಾನಾಗಿದೆ ಎಂದೂ ತಿಳಿಸಲಾಗಿದೆ.

18 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ 4500ಕ್ಕೂ ಹೆಚ್ಚು ಭಾರತೀಯರು ಲೋನರ್ಗನ್ ಸಹಯೋಗದಲ್ಲಿ ನಡೆಸಿದ ಈ ಅಧ್ಯಯನದಲ್ಲಿ ಪಾಲ್ಗೊಂಡಿದ್ದು, ಕಳೆದ ವರ್ಷದಲ್ಲಿ ಗ್ರಾಹಕ ಸೇವಾ ಕ್ಷೇತ್ರವನ್ನು ಅರ್ಥ ಮಾಡಿಕೊಳ್ಳಲು ನೆರವಾಗಿದ್ದಾರೆ. ಸಮೀಕ್ಷೆಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮಂದಿ ತಮ್ಮ ಕಾಯುವಿಕೆ ಸಮಯವು ಹಿಂದಿನ ವರ್ಷಗಳಿಗಿಂತ ಈಗ ಇನ್ನೂ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. ನಿಧಾನ ಗತಿಯ ಸೇವೆ ಎಂದರೆ ಪ್ರತೀ ಗ್ರಾಹಕರ ಸಮಸ್ಯೆಯನ್ನು ಪರಿಹರಿಸಲು ಉದ್ಯೋಗಿಯೊಬ್ಬ ಸರಾಸರಿ 3.9 ದಿನಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದರ್ಥ. ವಿಶೇಷ ಎಂದರೆ ಪ್ರತಿಕ್ರಿಯಿಸಿದವರಲ್ಲಿ 66 ಪ್ರತಿಶತ ಮಂದಿ ತಮ್ಮ ಸಮಸ್ಯೆಯನ್ನು ಮೂರು ಕೆಲಸದ ದಿನಗಳಲ್ಲಿ ಪರಿಹರಿಸದಿದ್ದರೆ ಮತ್ತೊಂದು ಕಂಪನಿಗೆ ಹೋಗುವ ಮನಸ್ಸು ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಈ ಕುರಿತು ಸರ್ವೀಸ್‌ನೌ ಇಂಡಿಯಾ ಟೆಕ್ನಾಲಜಿ ಮತ್ತು ಬಿಸಿನೆಸ್ ಸೆಂಟರ್‌ನ ಹಿರಿಯ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಮೀತ್ ಮಾಥುರ್ ಮಾತನಾಡಿ, “ನಿಧಾನಗತಿಯ ಸೇವೆಯ ಕಾರಣದಿಂದಾಗಿ 2024ರಲ್ಲಿ ಭಾರತೀಯ ಉದ್ದಿಮೆಗಳು ತಮ್ಮ ಗ್ರಾಹಕರ ನೆಲೆಯಲ್ಲಿನ ಮೂರನೇ ಎರಡರಷ್ಟು ಭಾಗದ ಗ್ರಾಹಕರನ್ನು ಕಳೆದುಕೊಳ್ಳುವ ಅಪಾಯ ಎದುರಿಸುತ್ತಿವೆ. ತಮ್ಮ ಸಮಸ್ಯೆ ಪರಿಹರಿಸಲು ಗರಿಷ್ಠ ಮೂರು ದಿನ ಕಾಯಬಹುದು, ಅದಕ್ಕಿಂತ ಹೆಚ್ಚು ಸಮಯ ತೆಗೆದುಕೊಂಡರೆ ಬೇರೆ ಕಡೆಗೆ ಹೋಗಬೇಕಾಗುತ್ತದೆ ಎಂದು ಗ್ರಾಹಕರು ತಿಳಿಸಿದ್ದಾರೆ. ಅಷ್ಟೂ ಕೆಲಸವನ್ನು ಮಾಡಲು ಸಾಧ್ಯವಾಗದೇ ಇರುವ ಉದ್ಯಮಗಳು ಗ್ರಾಹಕರ ಬೆರಳ ತುದಿಯಲ್ಲಿ ಲಭ್ಯವಿರುವ ಎಐ ಆಧರಿತ ಸೆಲ್ಫ್- ಸರ್ವೀಸ್ ಉತ್ಪನ್ನಗಳನ್ನು ಇನ್‌ಸ್ಟಾಲ್ ಮಾಡಬೇಕು” ಎಂದು ತಿಳಿಸಿದ್ದಾರೆ.

ನಿಮಗೆ ಎಐ ಹೇಗೆ ಸಹಾಯ ಮಾಡಬಹುದು?

ಪ್ರತಿಕ್ರಿಯಿಸಿದವರಲ್ಲಿ ಸುಮಾರು ಮೂರನೇ ಎರಡರಷ್ಟು (62%) ಮಂದಿ ಕಳೆದ ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಸೆಲ್ಫ್ ಸರ್ವೀಸ್ ವ್ಯವಸ್ಥೆಯ ಮೂಲಕ ತಮ್ಮ ಸಮಸ್ಯೆ ಪರಿಹರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅರ್ಧದಷ್ಟು ಮಂದಿ ಅವರಿಗೆ ಚಾಟ್‌ಬೋಟ್‌ಗಳು (55%) ಮತ್ತು ಸೆಲ್ಫ್ ಹೆಲ್ಪ್ ಮಾರ್ಗದರ್ಶಿ (56%) ಮೇಲೆ ಇದ್ದ ನಂಬಿಕೆಗಳು ಈಗ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಈ ಅಧ್ಯಯನವು ಭಾರತೀಯರಲ್ಲಿ ಎಐ ಮೇಲೆ ನಂಬಿಕೆ ಹೆಚ್ಚಾಗಿರುವ ಗಮನಾರ್ಹ ವಿಚಾರವನ್ನು ಪ್ರಸ್ತುತ ಪಡಿಸುತ್ತದೆ. ವಿಶೇಷವಾಗಿ ಮೂರನೇ ಎರಡು ಭಾಗದಷ್ಟು ಮಂದಿ (66%) ಜೆನ್ ಎಐ ಉತ್ತಮ ಗ್ರಾಹಕ ಸೇವೆ ಒದಗಿಸುವ ವಿಶ್ವಾಸ ಹೊಂದಿದ್ದಾರೆ. ಸಾಂಪ್ರದಾಯಿಕ ವ್ಯಕ್ತಿ ಕೇಂದ್ರಿತ ಗ್ರಾಹಕ ಸೇವೆಗಿಂತ ಎಐ ಸೇವೆಯ ಮೇಲೆ 10% ನಂಬಿಕೆ ಹೆಚ್ಚಾಗಿದೆ. ಇವೆಲ್ಲವೂ ಜನರಲ್ಲಿ ಅದರಲ್ಲೂ ವಿಶೇಷವಾಗಿ ಯುವಜನತೆಯಲ್ಲಿ ಆದ್ಯತೆ ಬದಲಾಗಿರುವ ಬದಲಾವಣೆಯನ್ನು ತೋರಿಸುತ್ತದೆ.

ಈ ಕುರಿತಾಗಿ ಸುಮೀತ್ ಮಾಥುರ್, “ಗ್ರಾಹಕರು ಎಐನಿಂದ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದು ಈಗ ಸ್ಪಷ್ಟವಾಗಿವೆ. ಪರಿಣಾಮಕಾರಿಯಾಗಿ ಸಮಸ್ಯೆ ಪರಿಹರಿಸುವುದು, ಸುಲಭವಾಗಿ ಬಳಸಲು ಸಾಧ್ಯವಾಗುವುದು, ಶೀಘ್ರವಾಗಿ ಪ್ರತಿಕ್ರಿಯೆ ನೀಡುವುದು ಮತ್ತು ನಿಖರವಾಗಿ ಪ್ರಶ್ನೆಯನ್ನು ಗ್ರಹಿಸುವುದು ಇತ್ಯಾದಿಗಳನ್ನು ಗ್ರಾಹಕರು ಬಯಸುತ್ತಾರೆ.

ಇದನ್ನೂ ಓದಿ: Paris Olympics: ಫೈನಲ್​ ಪ್ರವೇಶಿಸಿದ ಸ್ವಪ್ನಿಲ್‌ ಕುಸಾಲೆ; 16ರ ಸುತ್ತಿಗೇರಿದ ಸಿಂಧು

ಮಾನವ-ಆಧರಿತ ಕೆಲಸದಿಂದ ಹಿಡಿದು ಎಐ ಒದಗಿಸುವ ವೈವಿಧ್ಯಮಯ ಸೌಲಭ್ಯಗಳನ್ನು ಬಳಸುವಷ್ಟರ ಮಟ್ಟಿಗೆ ಉಂಟಾಗಿರುವ ಈ ಬದಲಾವಣೆಯಿಂದ ಉದ್ಯಮ 4.0 ಯುಗದ ಆರಂಭವಾದಂತೆ ಕಾಣುತ್ತದೆ. ಗ್ರಾಹಕರ ಧಾರಣ ಶಕ್ತಿಯು ಕಡಿಮೆಯಾಗುತ್ತಿರುವ ಈ ಸವಾಲಿನ ಸಂದರ್ಭದಲ್ಲಿ ಉದ್ಯಮಗಳು ಎಐ ಅನ್ನು ಹೆಚ್ಚು ದುಡಿಸಿಕೊಳ್ಳಲು ಮತ್ತು ತಮ್ಮ ಉದ್ಯಮದ ಬೆಳವಣಿಗೆಯನ್ನು ಹೆಚ್ಚಿಸಲು, ದಕ್ಷತೆಯನ್ನು ಸುಧಾರಿಸಲು ಮತ್ತು ಸ್ಪರ್ಧಾತ್ಮಕ ಬಿಸಿನೆಸ್ ಕ್ಷೇತ್ರದಲ್ಲಿ ಉತ್ತಮ ಗ್ರಾಹಕರ ಸೇವೆ ಅನುಭವಗಳನ್ನು ನೀಡಲು ಮುಂದಾಗಲು ಇದು ಸೂಕ್ತ ಸಮಯವಾಗಿದೆ” ಎಂದು ತಿಳಿಸಿದ್ದಾರೆ.

ಸರ್ವೀಸ್‌ನೌ ಇದೀಗ ಭಾರತೀಯ ಉದ್ಯಮಗಳು ಮತ್ತು ಸರ್ಕಾರಿ ಏಜೆನ್ಸಿಗಳಿಗೆ ನೌ ಅಸಿಸ್ಟ್ ಮೂಲಕ ಎಐ ಸೌಲಭ್ಯವನ್ನು ಒದಗಿಸುತ್ತಿದೆ. ಉದ್ಯೋಗಿಗಳ ಮೇಲೆ ಇರುವ ಕೆಲಸದ ಹೊರೆಯನ್ನು ಎಐ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆ ಮೂಲಕ ಉದ್ಯೋಗಿಗಳು ಹೆಚ್ಚು ಸಂಕೀರ್ಣವಾದ ಮತ್ತು ಮೌಲ್ಯವರ್ಧಿತ ಸಂವಹನಗಳ ಮೇಲೆ ಗಮನ ಕೇಂದ್ರೀಕರಿಸಲು ಅನುವು ಮಾಡಿಕೊಡುತ್ತದೆ. ಅದರ ಜತೆಗೆ ಹಳೆಯ ಗ್ರಾಹಕ ಮಾಹಿತಿಗಳನ್ನು ವಿಶ್ಲೇಷಿಸುವ ಮೂಲಕ ಎಐ, ವೈಯಕ್ತಿಕ ಆದ್ಯತೆಗಳು, ಅವಶ್ಯಕತೆಗಳು ಮತ್ತು ವರ್ತನೆಗಳನ್ನು ಮೊದಲೇ ತಿಳಿದುಕೊಳ್ಳಬಹುದಾಗಿದೆ.

ಆ ಮೂಲಕ ಗ್ರಾಹಕರ ಜತೆಗೆ ವೈಯಕ್ತೀಕರಿಸಿದ ಮಾತುಕತೆ ನಡೆಸಬಹುದಾಗಿದೆ. ಈ ಉದ್ದೇಶಿತ ವಿಧಾನದ ಮೂಲಕ ಗ್ರಾಹಕರಲ್ಲಿ ತಿಳುವಳಿಕೆ ಮತ್ತು ಮೌಲ್ಯ ಪ್ರಜ್ಞೆಯನ್ನು ಬೆಳೆಸಬಹುದಾಗಿದೆ. ಆ ಮೂಲಕ ಬ್ರಾಂಡ್ ಜತೆಗಿನ ಅವರ ಸಂಪರ್ಕವನ್ನು ಹೆಚ್ಚಿಸಿ ಅವರ ಒಟ್ಟಾರೆ ಅನುಭವವನ್ನು ಉತ್ತಮಗೊಳಿಸಬಹುದಾಗಿದೆ.

ನಿಧಾನಗತಿಯ ಸೇವೆಯೇ ಗ್ರಾಹಕ ಸೇವೆ ವಿಫಲಗೊಳ್ಳಲು ಕಾರಣ

ಈ ಅಧ್ಯಯನದ ಪ್ರಕಾರ ಹಲವು ರಚನಾತ್ಮಕ ಸಮಸ್ಯೆಗಳು ಗ್ರಾಹಕರ ಕಾಯುವ ಸಮಯ ಗಣನೀಯವಾಗಿ ಹೆಚ್ಚಲು ಕಾರಣವಾಗಿದೆ. ವಿಶೇಷವಾಗಿ 48 ಪ್ರತಿಶತ ಭಾರತೀಯರು ಅಸಮರ್ಪಕ ಆಂತರಿಕ ಸಂವಹನವೇ ಗ್ರಾಹಕ ಸೇವಾ ವಿಳಂಬಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ. 47 ಪ್ರತಿಶತ ಗ್ರಾಹಕರು ಸೇವಾ ಸಿಬ್ಬಂದಿಗೆ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯ ಕೊರತೆಯಿದೆ ಎಂದು ಹೇಳಿದ್ದಾರೆ. 44 ಪ್ರತಿಶತ ಭಾರತೀಯರು ವಿವಿಧ ಇಲಾಖೆಗಳ ನಡುವೆ ಸಹಯೋಗ ಮತ್ತು ಜವಾಬ್ದಾರಿಯ ಕೊರತೆ ಇದೆ ಎಂದು ತಿಳಿಸಿದ್ದಾರೆ. 44 ಪ್ರತಿಶತದಷ್ಟು ಜನರು ಹಳೆಯ ಸಮಸ್ಯೆಗಳ ದಾಖಲೆಗಳನ್ನು ಇಟ್ಟುಕೊಳ್ಳದೇ ಇರುವುದೇ ಸಮಸ್ಯಗೆ ಕಾರಣ ಎಂದು ಹೇಳುತ್ತಾರೆ. 41 ಪ್ರತಿಶತದಷ್ಟು ಜನರು ತಮ್ಮ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸುವಲ್ಲಿ ವಿಳಂಬವಾಗಲು ಮಾತುಕತೆ ಮೂಲಕ ಸರಿಪಡಿಸಿಕೊಳ್ಳಬಹುದಾದ ಆಂತರಿಕ ವ್ಯವಸ್ಥೆಗಳಲ್ಲಿನ ಕೆಲವು ಸಮಸ್ಯೆಗಳು ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸುತ್ತಾರೆ.

ಪಾರದರ್ಶಕತೆ, ವೇಗ ಮತ್ತು ಸಹಾನುಭೂತಿ ಮುಖ್ಯ

60 ಪ್ರತಿಶತದಷ್ಟು ಭಾರತೀಯರು ಗ್ರಾಹಕ ಸೇವಾ ತಂಡಗಳು ಸಮಸ್ಯೆಗೆ ಪರಿಹಾರ ಒದಗಿಸುವ ವೇಗವನ್ನು ಹೆಚ್ಚುಗೊಳಿಸಲು ಬಯಸುತ್ತಾರೆ. ಅರ್ಧದಷ್ಟು ಜನರು ಗ್ರಾಹಕರನ್ನು ಹೋಲ್ಡ್‌ನಲ್ಲಿ ಇರಿಸಿಕೊಳ್ಳುವ ಸಮಯವನ್ನು ಕಡಿಮೆ ಮಾಡಲು ಬಯಸುತ್ತಾರೆ. ಸರಿಸುಮಾರು ಅರ್ಧದಷ್ಟು (48 ಪ್ರತಿಶತ) ಜನರು ಉತ್ತಮ ಗ್ರಾಹಕ ಸೇವಾ ಸೌಲಭ್ಯವನ್ನು ಬಯಸುತ್ತಾರೆ. ಸುಮಾರು 5ರಲ್ಲಿ 2 ಭಾರತೀಯರು (40 ಪ್ರತಿಶತ) ಪ್ರತಿಕ್ರಿಯೆ ನೀಡುವ ಸಮಯವನ್ನು ತೀವ್ರಗೊಳಿಸಬೇಕು ಅಥವಾ ಕಡಿಮೆಗೊಳಿಸಬೇಕು ಎಂದು ಬಯಸುತ್ತಾರೆ. ಈ ನಿಟ್ಟಿನಲ್ಲಿ 40 ಪ್ರತಿಶತ ಮಂದಿ ಸ್ವ-ಸಹಾಯ ಮಾರ್ಗದರ್ಶಿಗಳು (ಸೆಲ್ಫ್ ಹೆಲ್ಪ್ ಗೈಡ್) ಮತ್ತು ಸಂಪನ್ಮೂಲಗಳ ಬಳಕೆಯನ್ನು ಸುಧಾರಿಸಬೇಕು ಎಂದು ತಿಳಿಸಿದ್ದಾರೆ. 39 ಪ್ರತಿಶತ ಮಂದಿ ಚಾಟ್ ಬಾಟ್‌ಗಳ ಬಳಕೆಯನ್ನು ಹೆಚ್ಚುಗೊಳಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಈ ಬಗ್ಗೆ ಸುಮೀತ್ ಮಾಥುರ್ ಮಾತನಾಡಿ, “ಭಾರತೀಯ ಉದ್ಯಮಗಳ ಬಳಿಗೆ ಈಗ ಎರಡು ಆಯ್ಕೆಗಳಿವೆ. ಒಂದು ಹಳೆಯ ಪದ್ಧತಿಗಳನ್ನು ಬಳಸಿ ತಮ್ಮ ಗ್ರಾಹಕರ ವಿಶ್ವಾಸವನ್ನು ಕಳೆದುಕೊಳ್ಳುವುದು ಅಥವಾ ಇನ್ನೊಂದು ಗ್ರಾಹಕರು ಬಯಸುವುದನ್ನು ನೀಡುವಂತಹ ವಿಧಾನವನ್ನು ವಿನ್ಯಾಸಗೊಳಿಸಿ, ಅವರು ಬಯಸಿದ್ದು ನೀಡುವಂತೆ ಮರುಯೋಚನೆ ಮಾಡುವುದು. ಈ ಅಧ್ಯಯನದಿಂದ ಗ್ರಾಹಕರು ಎಐ ಆಧರಿತ ಚಾಟ್‌ಬಾಟ್‌ಗಳು ಅಥವಾ ಸ್ವಯಂ-ಸಹಾಯ ಮಾರ್ಗದರ್ಶಿಗಳನ್ನು ಬಳಸಲು ಸಿದ್ಧರಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಮತ್ತು ಗ್ರಾಹಕ ಸೇವಾ ಪ್ರತಿನಿಧಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಉದ್ಯಮಗಳು ಎಐ ಅನ್ನು ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

Continue Reading

ದೇಶ

New Rules: ಕ್ರೆಡಿಟ್‌ ಕಾರ್ಡ್‌ನಿಂದ ಎಲ್‌ಪಿಜಿ ದರ; ಇಂದಿನಿಂದ ಯಾವೆಲ್ಲ ನಿಯಮ, ದರ ಬದಲು?

New Rules: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ನಿಗದಿಪಡಿಸಲಾಗುತ್ತದೆ. ಸರ್ಕಾರ ಕಳೆದ ತಿಂಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಬಾರಿಯೂ ಸಿಲಿಂಡರ್ ಬೆಲೆಯನ್ನು ಸರ್ಕಾರ ಕಡಿಮೆ ಮಾಡುತ್ತದೆ ಎಂದು ಊಹಿಸಲಾಗಿದೆ. ಹಾಗಾದರೆ, ಎಲ್‌ಪಿಜಿ ದರ ಸೇರಿ ಆಗಸ್ಟ್‌ 1ರಿಂದ ಏನೆಲ್ಲ ನಿಯಮಗಳು ಬದಲಾಗಲಿವೆ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

VISTARANEWS.COM


on

New Rules
Koo

ನವದೆಹಲಿ: ಆ.1ರಿಂದ ಕೆಲವು ಹೊಸ ನಿಯಮಗಳು (New Rules) ಜಾರಿಗೆ ಬರಲಿವೆ. ಹೊಸ ತಿಂಗಳು ಬಂದಾಗಲೆಲ್ಲ ಕೆಲವು ಹೊಸ ನಿಯಮಗಳು ಜಾರಿಗೆ ಬರುತ್ತವೆ. ಪ್ರತಿ ತಿಂಗಳು ಯಾವುದಾದರೂ ಹಣಕಾಸು ನಿಯಮಗಳು ಬದಲಾಗುತ್ತಿರುತ್ತವೆ. ಅವು ನೇರವಾಗಿ ಜನಸಾಮಾನ್ಯರ ಮೇಲೆ ಪರಿಣಾಮ ಬೀರುತ್ತವೆ. ಆಗಸ್ಟ್‌ 1ರಿಂದ ದೇಶದ ಅತಿದೊಡ್ಡ ಖಾಸಗಿ ವಲಯದ ಸಾಲದಾತ ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳನ್ನು ಮಾರ್ಪಡಿಸುತ್ತದೆ ಮತ್ತು ಗೂಗಲ್ ಭಾರತದಲ್ಲಿ ಗೂಗಲ್ ನಕ್ಷೆ(Google Map)ಗಳ ಶುಲ್ಕವನ್ನು ಸಹ ಬದಲಾಯಿಸುತ್ತದೆ. ಈ ಹೊಸ ನಿಯಮಗಳು 1 ಆಗಸ್ಟ್ 2024 ರಂದು ಜಾರಿಗೆ ಬರುತ್ತವೆ. ನಾಳೆಯಿಂದ ಜಾರಿಗೆ ಬರಲಿರುವ ಹೊಸ ನಿಯಮಗಳ ಕುರಿತ ಮಾಹಿತಿ ಇಲ್ಲಿದೆ.

ಎಲ್‌ಪಿಜಿ ದರ

ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ನಿಗದಿಪಡಿಸಲಾಗುತ್ತದೆ. ಸರ್ಕಾರ ಕಳೆದ ತಿಂಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಬಾರಿಯೂ ಸಿಲಿಂಡರ್ ಬೆಲೆಯನ್ನು ಸರ್ಕಾರ ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತಿದೆ. ಸಿಲಿಂಡರ್‌ ದರದಲ್ಲಿ ಗಣನೀಯ ಬದಲಾವಣೆಯಾಗುವ ಸಾಧ್ಯತೆ ಇದೆ.

LPG Price Cut
FASTag new rule

ಗೂಗಲ್‌ ಮ್ಯಾಪ್‌ ಶುಲ್ಕ ಏರಿಕೆ

Google Maps ಭಾರತದಲ್ಲಿನ ತನ್ನ ನಿಯಮಗಳಿಗೆ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ, ಇದು ಆಗಸ್ಟ್ 1, 2024 ರಿಂದ ದೇಶಾದ್ಯಂತ ಅನ್ವಯಿಸುತ್ತದೆ. ಕಂಪನಿಯು ಭಾರತದಲ್ಲಿ ತನ್ನ ಸೇವೆಗಳ ಶುಲ್ಕವನ್ನು 70% ವರೆಗೆ ಕಡಿಮೆ ಮಾಡಿದೆ. ಹೆಚ್ಚುವರಿಯಾಗಿ, ಗೂಗಲ್ ನಕ್ಷೆಗಳು ಈಗ ತನ್ನ ಸೇವೆಗಳಿಗೆ ಡಾಲರ್‌ಗಳಿಗಿಂತ ಭಾರತೀಯ ರೂಪಾಯಿಗಳಲ್ಲಿ ಶುಲ್ಕ ವಿಧಿಸುತ್ತವೆ. ಆದಾಗ್ಯೂ, ಈ ಬದಲಾವಣೆಯು ಸಾಮಾನ್ಯ ಬಳಕೆದಾರರ ಮೇಲೆ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸದ ಕಾರಣ ಅವರ ಮೇಲೆ ಪರಿಣಾಮ ಬೀರುವುದಿಲ್ಲ.

HDFC ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಯಮ

ಬಾಡಿಗೆ ಪಾವತಿಸಲು CRED, Cheq, MobiKwik, ಫ್ರೀಚಾರ್ಜ್ ಮತ್ತು ಇತರ ರೀತಿಯ ಸೇವೆಗಳನ್ನು ಬಳಸುವ ಗ್ರಾಹಕರಿಗೆ ವಹಿವಾಟಿನ ಮೊತ್ತದ 1% ಶುಲ್ಕ ವಿಧಿಸಲಾಗುತ್ತದೆ, ಇದನ್ನು ಪ್ರತಿ ವಹಿವಾಟಿಗೆ 3,000 ರೂ.ಗಳಿಗೆ ನಿರ್ಬಂಧಿಸಲಾಗುತ್ತದೆ. ಹಾಗೆಯೇ, ಪೆಟ್ರೋಲ್‌ ಬಂಕ್‌ಗಳಲ್ಲಿ 5 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತದ ಪೆಟ್ರೋಲ್‌ ಹಾಗೂ ಡೀಸೆಲ್‌ಅನ್ನು ಒಂದೇ ಸಲಕ್ಕೆ ಹಾಕಿಸಿದರೆ ಶೇ.1ರಷ್ಟು ಚಾರ್ಜ್‌ ವಿಧಿಸಲಾಗುತ್ತದೆ.

FASTag new rule

ಯುಟಿಲಿಟಿ ಶುಲ್ಕ

ಯುಟಿಲಿಟಿ ಮತ್ತು ಬಾಡಿಗೆ ವಹಿವಾಟುಗಳ ಮೇಲೆ ಆಗಸ್ಟ್ 1, 2024 ರಿಂದ ಜಾರಿಗೆ ಬರುವಂತೆ ಈ ಕೆಳಗಿನ ಶುಲ್ಕಗಳನ್ನು ವಿಧಿಸಲು ನಿರ್ಧರಿಸಲಾಗಿದೆ: ಇದು ₹ 50,000 ಕ್ಕಿಂತ ಹೆಚ್ಚಿನ ಯುಟಿಲಿಟಿ ಪಾವತಿಗಳ ಮೇಲೆ 1% ಅನ್ನು ವಿಧಿಸುತ್ತದೆ, ಗರಿಷ್ಠ ₹ 3,000 ಕ್ಕೆ ಒಳಪಟ್ಟಿರುತ್ತದೆ. ವಿಮೆ ಮತ್ತು ನೇರ ಶಾಲಾ/ಕಾಲೇಜು ಪಾವತಿಗಳು ಈ ವ್ಯಾಪ್ತಿಯಿಂದ ಹೊರಗಿದೆ. ಬ್ಯಾಂಕ್ ವಿಳಂಬ ಪಾವತಿ ಶುಲ್ಕಗಳು ಮತ್ತು ಸುಲಭ-EMI ಶುಲ್ಕಗಳನ್ನು ಕೂಡ ಹೆಚ್ಚಿಸುತ್ತದೆ.

ಫಾಸ್ಟ್‌ಟ್ಯಾಗ್‌ ಕೆವೈಸಿ ನಿಯಮ ಬದಲು

ಆಗಸ್ಟ್‌ 1ರಿಂದ ಫಾಸ್ಟ್‌ಟ್ಯಾಗ್‌ ಕೆವೈಸಿ (Know Your Customer) ನಿಯಮಗಳನ್ನು ಬದಲಾಯಿಸಲಾಗುತ್ತದೆ. ಹೊಸ ನಿಯಮಗಳು ನಾಳೆಯಿಂದ ಜಾರಿಗೆ ಬರಲಿದೆ. 2024ರ ಅಕ್ಟೋಬರ್‌ 31ರೊಳಗೆ ಹೊಸ ನಿಯಮಗಳ ಅನ್ವಯ ವಾಹನಗಳ ಚಾಲಕರು ಅಥವಾ ಮಾಲೀಕರು ಹೊಸ ಕೆವೈಸಿ ಮಾಡಿಸಬೇಕಿದೆ.

FASTag new rule
FASTag new rule

ಐಟಿಆರ್‌ ವಿಳಂಬಕ್ಕೆ ದಂಡ

ಆಗಸ್ಟ್‌ 1ರಿಂದ ಐಟಿಆರ್ ಸಲ್ಲಿಸುವವರು ದಂಡ ಪಾವತಿಸಬೇಕಾಗುತ್ತದೆ. ನಿವ್ವಳ ತೆರಿಗೆಯ ಆದಾಯವು 5 ಲಕ್ಷ ರೂ. ವರೆಗೆ ಇದ್ದರೆ ತಡವಾಗಿ ತೆರಿಗೆ ರಿಟರ್ನ್‌ಗೆ ಗರಿಷ್ಠ ದಂಡ 1,000 ರೂ ಆಗಿದೆ. 5 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವವರು 5,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯಿದೆಯ ಪ್ರಕಾರ ಒಟ್ಟು ಆದಾಯವು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಾದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ.

ಇದನ್ನೂ ಓದಿ: ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

Continue Reading
Advertisement
ಕ್ರೀಡೆ10 mins ago

Paris Olympics: ಇಂದು ಲಕ್ಷ್ಯ ಸೇನ್‌-ಪ್ರಣಯ್ ಮಧ್ಯೆ ಪ್ರೀ ಕ್ವಾರ್ಟರ್​ ಮುಖಾಮುಖಿ; ಭಾರತಕ್ಕೆ ಒಂದು ಪದಕ ನಷ್ಟ

police firing gadag
ಕ್ರೈಂ20 mins ago

Police Firing: ದರೋಡೆ ಎಸಗಿದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು, ಬಂಧನ

Pushpa 2 Allu Arjun climax leaked Fans urge producers to take action
ಟಾಲಿವುಡ್23 mins ago

Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

Supreme Court Sc St Quota
ದೇಶ40 mins ago

Supreme Court SC ST Quota: ಪರಿಶಿಷ್ಟ ಜಾತಿ- ಪಂಗಡ ಒಳಮೀಸಲಾತಿ ಕಾನೂನುಬದ್ಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Gold Rate Today
ಚಿನ್ನದ ದರ1 hour ago

Gold Rate Today: ಮತ್ತೆ ಶಾಕ್‌ ಕೊಟ್ಟ ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Road Accident
ಚಿಕ್ಕಬಳ್ಳಾಪುರ1 hour ago

Road Accident : ಲಾರಿ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಪ್ರಾಣಬಿಟ್ಟ ಬೈಕ್‌ ಸವಾರರು

IND vs SL 1st ODI
ಕ್ರೀಡೆ1 hour ago

IND vs SL 1st ODI: ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಮೊದಲ ಏಕದಿನ ಆಡಲು ಸಜ್ಜಾದ ಕೊಹ್ಲಿ, ರೋಹಿತ್​, ಬುಮ್ರಾ

Heavy Rain
ದೇಶ2 hours ago

Heavy Rain: ನೋಡ ನೋಡುತ್ತಿದ್ದಂತೆ ನದಿಯಲ್ಲಿ ಕೊಚ್ಚಿ ಹೋಯ್ತು ಬಹುಮಹಡಿ ಕಟ್ಟಡ; ಭೀಕರ ದೃಶ್ಯ ಇಲ್ಲಿದೆ

India Couture Week 2024 Vicky Kaushal Rashmika Mandanna turn showstoppers
ಬಾಲಿವುಡ್2 hours ago

India Couture Week 2024: ಕೌಚರ್ ವೀಕ್ ಗ್ರ್ಯಾಂಡ್ ಫಿನಾಲೆಯಲ್ಲಿ ಮಿಂಚಿದ ರಶ್ಮಿಕಾ- ವಿಕ್ಕಿ ಕೌಶಲ್!

Self Harming
ಬೆಂಗಳೂರು2 hours ago

Self Harming : ವಯಸ್ಸಲ್ಲದ ವಯಸ್ಸಲ್ಲಿ ಲವ್; 15ನೇ ವರ್ಷಕ್ಕೆ ಮದುವೆ ಆದವಳು 17ನೇ ವರ್ಷಕ್ಕೆ ಆತ್ಮಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌