IND vs SL 1st ODI: ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಮೊದಲ ಏಕದಿನ ಆಡಲು ಸಜ್ಜಾದ ಕೊಹ್ಲಿ, ರೋಹಿತ್​, ಬುಮ್ರಾ - Vistara News

ಕ್ರೀಡೆ

IND vs SL 1st ODI: ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಮೊದಲ ಏಕದಿನ ಆಡಲು ಸಜ್ಜಾದ ಕೊಹ್ಲಿ, ರೋಹಿತ್​, ಬುಮ್ರಾ

IND vs SL 1st ODI:ಕಳೆದ ವರ್ಷ(2023) ನವೆಂಬರ್​ 19ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಸ್​ಪ್ರೀತ್​ ಬುಮ್ರಾ(jasprit bumrah) ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ.

VISTARANEWS.COM


on

IND vs SL 1st ODI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲಂಬೊ: ಭಾರತ ಮತ್ತು ಶ್ರೀಲಂಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ(IND vs SL 1st ODI) ನಾಳೆ ನಡೆಯಲಿದೆ. ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit sharma), ವಿರಾಟ್​ ಕೊಹ್ಲಿ(virat kohli) ಸೇರಿ ಕೆಲ ಆಟಗಾರರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ.

ಕಳೆದ ವರ್ಷ(2023) ನವೆಂಬರ್​ 19ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಸ್​ಪ್ರೀತ್​ ಬುಮ್ರಾ(jasprit bumrah) ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ. ಇದೀಗ ಬರೋಬ್ಬರಿ 9 ತಿಂಗಳ ಬಳಿಕ ಏಕದಿನ ಸರಣಿಯನ್ನಾಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

ಮುಂದಿನ ವರ್ಷ ಪಾಕ್​ ಆತಿಥ್ಯದಲ್ಲಿ ನಡೆಯುವ ಏಕದಿನ ಮಾದರಿಯ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಟೂರ್ನಿಯ ನಿಟ್ಟಿನಲ್ಲಿ ಭಾರತಕ್ಕೆ ಈ ಸರಣಿ ಮಹತ್ವದ್ದಾಗಿದೆ. ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್​ ಕೊಹ್ಲಿ ಮತ್ತು ನಾಯಕ ರೋಹಿತ್​ ಅವರು 2027ರ ಏಕದಿನ ವಿಶ್ವಕಪ್​ ಆಡಬೇಕಿದ್ದರೆ ಈ ಸರಣಿಯಿಂದಲೇ ತಮ್ಮ ಸಾಮರ್ಥ್ಯ ತೋರಬೇಕಿದೆ. ನೂತನ ಕೋಚ್​ ಗಂಭೀರ್​ ಮಾರ್ಗದರ್ಶನಲ್ಲಿ ಆಡುತ್ತಿರುವ ಮೊದಲ ಏಕದಿನ ಸರಣಿ ಕೂಡ ಇದಾಗಿದೆ.

ಭಾರತ ಟಿ20 ಕ್ರಿಕೆಟ್​ ತಂಡದಿಂದ ಕೈಬಿಟ್ಟಿರುವ ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರಿಗೆ ತಂಡದಲ್ಲಿ ಭದ್ರ ಸ್ಥಾನವೊಂದನ್ನು ಗಿಟ್ಟಿಸಿಕೊಳ್ಳಲು ಈ ಸರಣಿ ಮುಖ್ಯವಾಗಿದೆ. ತೀವ್ರ ಪೈಪೋಟಿಯ ಮಧ್ಯೆಯೂ ಅವರು ಏಕದಿನ ಸರಣಿಯಲ್ಲಿ ಅವಕಾಶ ಗಿಟ್ಟಿಸಿಕೊಂಡು ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶನ ತೋದರೇ ಹೋದರೆ ಏಕದಿನ ತಂಡದಲ್ಲಿಯೂ ಅವರಿಗೆ ಬಾಗಿಲು ಬಂದ್​ ಆಗುವುದು ಖಚಿತ. ಈ ಹಿಂದೆ ಪಂತ್​ ಅನುಪಸ್ಥಿತಿಯಲ್ಲಿ ರಾಹುಲ್​ಗೆ ಕೀಪಿಂಗ್​ ಜವಾಬ್ದಾರಿ ನೀಡಿ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ಈಗ ಪಂತ್​ ತಂಡಕ್ಕೆ ಆಗಮಿಸಿದ್ದಾರೆ.

ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ಸಚಿನ್​, ಕೊಹ್ಲಿ ಜತೆ ಎಲೈಟ್​ ಪಟ್ಟಿ ಸೇರುವ ನಿರೀಕ್ಷೆಯಲ್ಲಿ ರೋಹಿತ್​

Rohit Sharma: ರೋಹಿತ್ ಏಕದಿನದಲ್ಲಿ 31, ಟೆಸ್ಟ್​ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್​ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

VISTARANEWS.COM


on

Rohit Sharma
Koo

ಕೊಲಂಬೊ: ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ. ರೋಹಿತ್​ ಈ ಸರಣಿಯಲ್ಲಿ 2 ಶತಕ ಬಾರಿಸಿದರೆ, ವಿರಾಟ್​ ಕೊಹ್ಲಿ(Virat Kohli) ಮತ್ತು ಸಚಿನ್ ತೆಂಡೂಲ್ಕರ್(Sachin Tendulkar)​ ಜತೆ ಎಲೈಟ್​ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ.

ರೋಹಿತ್​ 2 ಶತಕ ಬಾರಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 50 ಶತಕ ಪೂರ್ತಿಗೊಳಿಸಿದ ಸಾಧನೆ ಮಾಡಲಿದ್ದಾರೆ. ಈ ಸಾಧನೆ ಮಾಡಿದ ಮೂರನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್‌ ಕೊಹ್ಲಿ ಮೊದಲಿಗರು. ರೋಹಿತ್​ ಸದ್ಯ 48 ಶತಕ ಬಾರಿಸಿದ್ದಾರೆ. ಏಕದಿನದಲ್ಲಿ 31, ಟೆಸ್ಟ್​ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್​ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

ರೋಹಿತ್​ ಶರ್ಮ(Rohit sharma), ವಿರಾಟ್​ ಕೊಹ್ಲಿ(virat kohli) ಮತ್ತು ಜಸ್​ಪ್ರೀತ್​ ಬುಮ್ರಾ(jasprit bumrah) ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಕಳೆದ ವರ್ಷ(2023) ನವೆಂಬರ್​ 19ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ಈ ಮೂವರು ಕ್ರಿಕೆಟಿಗರು ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ. ಇದೀಗ ಬರೋಬ್ಬರಿ 9 ತಿಂಗಳ ಬಳಿಕ ಏಕದಿನ ಸರಣಿಯನ್ನಾಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

Continue Reading

ಕ್ರೀಡೆ

Paris Olympics: ಕಂಚಿನ ಪದಕ ಗೆದ್ದ ರೈಲ್ವೆ ಟಿಕೆಟ್ ಕಲೆಕ್ಟರ್ ಸ್ವಪ್ನಿಲ್‌ ಕುಸಾಲೆ

Paris Olympics: ಬುಧವಾರ ನಡೆದಿದ್ದ ಅರ್ಹತಾ ಸುತ್ತಿನಲ್ಲಿ ಸ್ವಪ್ನಿಲ್‌ ಕುಸಾಲೆ 7ನೇ ಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿದ್ದರು. ಭೋಪಾಲ್‌ನಲ್ಲಿ ನಡೆದಿದ್ದ ಕೊನೆಯ ಅರ್ಹತಾ ಸುತ್ತಿನಲ್ಲಿ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಅರ್ಹತೆ ಪಡೆದಿದ್ದರು.

VISTARANEWS.COM


on

Paris Olympics:
Koo

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಭಾರತ ಸ್ವಪ್ನಿಲ್‌ ಕುಸಾಲೆ ಪುರುಷರ 50 ಮೀ. ರೈಫ‌ಲ್‌ 3 ಪೊಸಿಶನ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪದಕ ಸಂಖ್ಯೆ ಮೂರಕ್ಕೇರಿದೆ. ಈ ಮೂರು ಪದಕ ಕೂಡ ಒಲಿದದ್ದು ಶೂಟಿಂಗ್​ ವಿಭಾಗದಲ್ಲಿ.​

ಗುರುವಾರ ನಡೆದ 50 ಮೀ. ರೈಫ‌ಲ್‌ 3 ಪೊಸಿಶನ್‌ ಫೈನಲ್​ ಪಂದ್ಯದಲ್ಲಿ ಸ್ವಪ್ನಿಲ್ ಅವರು 451.4 ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಸ್ವಪ್ನಿಲ್‌ ಫೈನಲ್​ ಪಂದ್ಯದ ಪ್ರೋನ್‌ನಲ್ಲಿ 156.8, ನೀಲಿಂಗ್‌ನಲ್ಲಿ 153.3 ಮತ್ತು ಸ್ಟ್ಯಾಂಡಿಂಗ್‌ನಲ್ಲಿ 195 ಅಂಕಗಳಿಸಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ್ಕಕೆ ಕೊರಳೊಡ್ಡಿದರು. 463.6 ಅಂಕ ಗಳಿಸಿದ ಚೀನಾದ ಲಿಯು ಯುಕುನ್ ಚಿನ್ನ ಮತ್ತು ಉಕ್ರೇನ್​ನ ಕುಲಿಶ್ ಸೆರ್ಹಿ(461.3) ಬೆಳ್ಳಿ ಪದಕ ಗೆದ್ದರು.

ಬುಧವಾರ ನಡೆದಿದ್ದ ಅರ್ಹತಾ ಸುತ್ತಿನಲ್ಲಿ ಸ್ವಪ್ನಿಲ್‌ ಕುಸಾಲೆ 7ನೇ ಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿದ್ದರು. ಭೋಪಾಲ್‌ನಲ್ಲಿ ನಡೆದಿದ್ದ ಕೊನೆಯ ಅರ್ಹತಾ ಸುತ್ತಿನಲ್ಲಿ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಅರ್ಹತೆ ಪಡೆದಿದ್ದರು. 2015ರ ಕುವೈತ್​ ಏಷ್ಯನ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ ಜೂನಿಯರ್‌ ವಿಭಾಗದಲ್ಲಿ ಚಿನ್ನ, 59ನೇ ಹಾಗೂ 61ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 50 ಮೀ. ರೈಫ‌ಲ್‌ 3 ಪೊಸಿಶನ್‌ನ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಶೂಟರ್​ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ.

ರೈಲ್ವೆ ಟಿಕೆಟ್ ಕಲೆಕ್ಟರ್


ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ 28 ವರ್ಷದ ಸ್ವಪ್ನಿಲ್ ಕುಶಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ. ಜತೆಗೆ ಧೋನಿಯಂತೆಯೇ ಇವರು ಕೂಡ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಧೋನಿಯವರ ಬಯೋಪಿಕ್ ಸಿನೆಮಾವನ್ನು ಪದೇ ಪದೇ ವೀಕ್ಷಿಸಿದ ಬಳಿಕ ಸ್ವಪ್ನಿಲ್ ಕೂಡ ಪೂರ್ಣಪ್ರಮಾಣದಲ್ಲಿ ಶೂಟಿಂಗ್‌ನಲ್ಲಿ ತೊಡಗಿಕೊಂಡರು. ಧೋನಿಯವರಂತೆ ಶಾಂತ ಸ್ವಾಭಾವದ ಈ ಶೂಟರ್​ ಇದೀಗ ಒಲಿಂಪಿಕ್ಸ್‌ ಪದಕವೊಂದನ್ನು ಗೆದ್ದು ಇತಿಹಾಸದ ಪುಟ ಸೇರಿದ್ದಾರೆ.

ಇದನ್ನೂ ಓದಿ Paris Olympics: ಇಂದು ಲಕ್ಷ್ಯ ಸೇನ್‌-ಪ್ರಣಯ್ ಮಧ್ಯೆ ಪ್ರೀ ಕ್ವಾರ್ಟರ್​ ಮುಖಾಮುಖಿ; ಭಾರತಕ್ಕೆ ಒಂದು ಪದಕ ನಷ್ಟ

ಫೈನಲ್​ ಪ್ರವೇಶಿಸಿದ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದ ಸ್ವಪ್ನಿಲ್, ನನ್ನ ಮತ್ತು ಧೋನಿಯವರ ಜೀವನದಲ್ಲಿ ಹಲವು ಸಾಮ್ಯತೆಗಳು ಇವೆ. ನಾನು ಅವರ ಅಪ್ಪಟ ಅಭಿಮಾನಿ. ಅವರ ಬಯೋಪಿಕ್ ನೋಡಿಯೇ ನಾನು ಶೂಟಿಂಗ್​ನಲ್ಲಿ ಏನಾದರೂ ಸಾಧನೆ ಮಾಡಬೇಕು ಎಂದು ನಿರ್ಧರಿಸಿದ್ದು. ಅವರಂತೆಯೇ ನನ್ನದೂ ಕೂಡ ಶಾಂತಚಿತ್ತದ ಸ್ವಾಭಾವ. ನಾನು ಕೂಡ ರೈಲ್ವೆ ಟಿಕೆಟ್ ಕಲೆಕ್ಟರ್ ಆಗಿದ್ದೇನೆ’ ಎಂದು ಹೇಳಿದ್ದರು.

Continue Reading

ಕ್ರೀಡೆ

Paris Olympics: ಇಂದು ಲಕ್ಷ್ಯ ಸೇನ್‌-ಪ್ರಣಯ್ ಮಧ್ಯೆ ಪ್ರೀ ಕ್ವಾರ್ಟರ್​ ಮುಖಾಮುಖಿ; ಭಾರತಕ್ಕೆ ಒಂದು ಪದಕ ನಷ್ಟ

Paris Olympics: ಲಕ್ಷ್ಯ ಸೇನ್​ ಮತ್ತು ಎಚ್.ಎಸ್.ಪ್ರಣಯ್ ಅವರು ಇದುವರೆಗೆ ಒಟ್ಟು ಏಳು ಬಾರಿ ಮುಖಾಮುಖಿಯಾಗಿದ್ದಾರೆ. ಈ ಪೈಕಿ ಸೇನ್​ 4 ಪಂದ್ಯ ಗೆದ್ದರೆ, ಪ್ರಣಯ್​ 3 ಪಂದ್ಯ ಗೆದ್ದಿದ್ದಾರೆ.

VISTARANEWS.COM


on

Koo

ಪ್ಯಾರಿಸ್​: ಒಲಿಂಪಿಕ್ಸ್ ಕೂಟದ(Paris Olympics) ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ‘ಆಲ್‌ ಇಂಡಿಯನ್‌’ ಹೋರಾಟವೊಂದಕ್ಕೆ ಅಣಿಯಾಗಿದೆ. ಇಂದು(ಗುರುವಾರ) ನಡೆಯುವ ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ಲಕ್ಷ್ಯ ಸೇನ್‌(Lakshya Sen) ಮತ್ತು ಎಚ್.ಎಸ್.ಪ್ರಣಯ್(HS Prannoy) ಮುಖಾಮುಖಿಯಾಗಲಿದ್ದಾರೆ. ಉಭಯ ಆಟಗಾರರ ಮುಖಾಮುಖಿಯಾದ ಕಾರಣ ಪುರುಷರ ಬ್ಯಾಡ್ಮಿಂಟನ್​ನಲ್ಲಿ ಭಾರತಕ್ಕೆ ಒಂದು ಪದಕ ನಿರೀಕ್ಷೆ ಹುಸಿಯಾಗಿದೆ.

ಬುಧವಾರ ತಡರಾತ್ರಿ ನಡೆದಿದ್ದ ಗ್ರೂಪ್​ ‘ಕೆ’ ವಿಭಾಗದ ಅಂತಿಮ ಲೀಗ್​ ಪಂದ್ಯದಲ್ಲಿ ಪ್ರಣಯ್​ ಅವರು ವಿಯೆಟ್ನಾಂನ ಡ್ಯೂಕ್ ಫತ್ ಲೇ ಅವರನ್ನು ಮೂರು ಸೆಟ್​ಗಳ ತೀವ್ರ ಹೋರಾಟದಲ್ಲಿ 16-21, 21-11,21-12 ಅಂತರದಿಂದ ಮಣಿಸಿ 16ರ ಹಂತಕ್ಕೆ ಮುನ್ನಡೆದಿದ್ದರು. ಇದಕ್ಕೂ ಮುನ್ನ ನಡೆದಿದ್ದ ಪಂದ್ಯದಲ್ಲಿ ಲಕ್ಷ್ಯ ಸೇನ್ ಅವರು ಜೋನಾಥನ್ ಕ್ರಿಸ್ಟಿ ವಿರುದ್ಧ ಗೆದ್ದು ಪ್ರೀ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು.

ಮುಖಾಮುಖಿ


ಲಕ್ಷ್ಯ ಸೇನ್​ ಮತ್ತು ಎಚ್.ಎಸ್.ಪ್ರಣಯ್ ಅವರು ಇದುವರೆಗೆ ಒಟ್ಟು ಏಳು ಬಾರಿ ಮುಖಾಮುಖಿಯಾಗಿದ್ದಾರೆ. ಈ ಪೈಕಿ ಸೇನ್​ 4 ಪಂದ್ಯ ಗೆದ್ದರೆ, ಪ್ರಣಯ್​ 3 ಪಂದ್ಯ ಗೆದ್ದಿದ್ದಾರೆ. ಕಳೆದ ವರ್ಷ(2023) ಜನವರಿಯಲ್ಲಿ ನಡೆದಿದ್ದ ಇಂಡಿಯಾ ಓಪನ್‌ನಲ್ಲಿ ಉಭಯ ಆಟಗಾರರು ಕೊನೆಯ ಬಾರಿಗೆ ಎದುರಾಗಿದ್ದರು. ಈ ಪಂದ್ಯದಲ್ಲಿ ಲಕ್ಷ್ಯ 21-14, 21-15 ನೇರ ಗೇಮ್​ಗಳ ಅಂತರದಿಂದ ಗೆದ್ದು ಬೀಗಿದ್ದರು.

ಭಾರತದ ತಾರಾ ಪುರುಷರ ಡಬಲ್ಸ್‌ ಜೋಡಿ ಸಾತ್ವಿಕ್‌ ಸಾಯಿರಾಜ್‌ ಹಾಗೂ ಚಿರಾಗ್‌ ಶೆಟ್ಟಿ ಕೂಡ ಇಂದು ನಡೆಯುವ ಡಬಲ್ಸ್​ ವಿಭಾಗದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮಲೇಷ್ಯಾದ ಆರನ್ ಚಿಯಾ ಮತ್ತು ಸೊಹ್ ವೂಯಿ ಯಿಕ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಗೆದ್ದರೆ ಐತಿಹಾಸಿಕ ಪದಕವೊಂದು ಖಾತ್ರಿಯಾಗಲಿದೆ.

ಇದನ್ನೂ ಓದಿ Paris Olympics: ನೇರಳೆ ಟ್ರ್ಯಾಕ್​ನಲ್ಲಿ ಕಮಾಲ್​ ಮಾಡಲು ಸಜ್ಜಾದ ಅಥ್ಲೀಟ್​ಗಳು

ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಗೆಲುವು


ಭಾರತದ ಬಾಕ್ಸರ್‌ ನಿಶಾಂತ್‌ ದೇವ್‌(Nishant Dev) ಅವರು ಪ್ಯಾರಿಸ್‌ ಒಲಿಂಪಿಕ್ಸ್​ನಲ್ಲಿ(Paris Olympics Boxing) ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದಾರೆ. ಇನ್ನೊಂದು ಗೆಲುವು ಸಾಧಿಸಿದರೆ ಪದಕವೊಂದು ಖಾತ್ರಿಯಾಗಲಿದೆ. ಬುಧವಾರ ತಡರಾತ್ರಿ ನಡೆದ ಪ್ರೀ-ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಜೋಸ್ ಗೇಬ್ರಿಯಲ್ ರೊಡ್ರಿಗಸ್ ಟೆನೊರಿಯೊ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟರು. ಮುಂದಿನ ಪಂದ್ಯದಲ್ಲಿ ನಿಶಾಂತ್‌, ಮೊಜಾಂಬಿಕ್‌ನ ಟಿ ಮುಕ್ಸಾಂಗಾ ಮತ್ತು ಮೆಕ್ಸಿಕೊದ ಎಂಎ ವರ್ಡೆ ಅಲ್ವಾರೆಜ್ ನಡುವಣ ವಿಜೇತರನ್ನು ಎದುರಿಸಲಿದೆ.

ತೀವ್ರ ಪೈಪೋಟಿಯಿಂದ ಸಾಗಿದ ಈ ಪಂದ್ಯದಲ್ಲು ಉಭಯ ಬಾಕ್ಸರ್​ಗಳು ಬಲಿಷ್ಠ ಪಂಚ್​ಗಳ ಮೂಲಕ ಗೆಲುವಿಗಾಗಿ ಹೋರಾಟ ನಡೆಸಿದರು. ಕೊನೆಗೂ ನಿಶಾಂತ್​ ದೇವ್​ 7ನೇ ಶ್ರೇಯಾಂಕದ ಆಟಗಾರರನ್ನು ಕೇವಲ 1(3-2) ಅಂಕದ ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದರು. ಸದ್ಯ ಬಾಕ್ಸಿಂಗ್​ನಲ್ಲಿ ಭಾರತ 2 ಪದಕ ನಿರೀಕ್ಷೆ ಮಾಡಿದೆ. ಇದಕ್ಕೂ ಮುನ್ನ ನಡೆದಿದ್ದ 75 ಕೆ.ಜಿ ಮಹಿಳಾ ವಿಭಾಗದ 16ರ ಸುತ್ತಿನ ಬಾಕ್ಸಿಂಗ್​ ಹೋರಾಟದಲ್ಲಿ ಟೋಕಿಯೋ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌(Lovlina Borgohain) ಅವರು ನಾರ್ವೆಯ ಸನ್ನಿವಾ ಹೊಫ್‌ಸ್ತಾಡ್‌ ಅವರನ್ನು 5-0 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಲವ್ಲೀನಾ ಅವರು ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಚೀನಾದ ಲಿ ಕಿಯಾನ್ ಅವರನ್ನು ಎದುರಿಸಲಿದ್ದಾರೆ.

Continue Reading

ಕ್ರೀಡೆ

Paris Olympics: ನೇರಳೆ ಟ್ರ್ಯಾಕ್​ನಲ್ಲಿ ಕಮಾಲ್​ ಮಾಡಲು ಸಜ್ಜಾದ ಅಥ್ಲೀಟ್​ಗಳು

Paris Olympics: ​1976ರಿಂದಲೂ ಇಟಲಿಯ ಮೊಂಡೊ ಸಂಸ್ಥೆಯು ಒಲಿಂಪಿಕ್ಸ್‌ಗೆ ಟ್ರ್ಯಾಕ್‌ ಅಳವಡಿಕೆ ಕಾರ್ಯ ಮಾಡುತ್ತಿದ್ದು, ನೇರಳೆ ಬಣ್ಣದ ಟ್ರ್ಯಾಕ್‌ ಅನ್ನು ಆಧುನಿಕ ತಂತ್ರಜ್ಞಾನ ಬಳಸಿ ತಯಾರಿಸಿದೆ. ಈ ಟ್ರ್ಯಾಕ್​ನಲ್ಲಿ ವಿಶ್ವ ಹಾಗೂ ಒಲಿಂಪಿಕ್ಸ್‌ ದಾಖಲೆಗಳು ನಿರ್ಮಾಣಗೊಳ್ಳಲಿವೆ ಎಂದು ಮೊಂಡೊ ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

VISTARANEWS.COM


on

Koo

ಪ್ಯಾರಿಸ್​: ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಅತ್ಯಂತ ಖ್ಯಾತಿ ಗಳಿಸಿರುವ(Paris Olympics) ಅಥ್ಲೆಟಿಕ್ಸ್​ ಸ್ಪರ್ಧೆಗಳು(paris olympic athletics) ಇಂದಿನಿಂದ ಆರಂಭಗೊಳ್ಳಲಿದೆ. ಉಳಿದೆಲ್ಲ ಸ್ಪರ್ಧೆಗಳಿಗಿಂತ ಅಥ್ಲೆಟಿಕ್ಸ್​ನಲ್ಲಿ ಗರಿಷ್ಠ 48 ಪದಕ ಸ್ಪರ್ಧೆ ನಡೆಯಲಿದೆ. ಈ ಪೈಕಿ ತಲಾ 23 ಪುರುಷರ ಮತ್ತು ಮಹಿಳಾ ಸ್ಪರ್ಧೆಯಾಗಿದೆ. 2 ಮಿಶ್ರ ವಿಭಾಗದ ಸ್ಪರ್ಧೆಯಾಗಿದೆ. ಈ ಬಾರಿ ಸಂಪ್ರದಾಯಿಕ ಇಟ್ಟಿಗೆ-ಕೆಂಪು ಬಣ್ಣದ ಟ್ರ್ಯಾಕ್‌ ಬದಲಾಗಿ ವಿನೂತ ಶೈಲಿಯ ನೇರಳೆ ಬಣ್ಣದ(purple track) ಸಿಂಥೆಟಿಕ್‌ ಟ್ರ್ಯಾಕ್​ನಲ್ಲಿ ಅಥ್ಲೀಟ್​ಗಳು ಕಣಕ್ಕಿಳಿಯಲಿದ್ದಾರೆ.

ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಲ್ಯಾವೆಂಡರ್​ ಬಣ್ಣದ ಟ್ರ್ಯಾಕ್​ನಲ್ಲಿ(purple track) ಸ್ಪರ್ಧಿಸಲಿದ್ದಾರೆ. ಭಾರತದ ಜಾವೆಲಿನ್​ ಥ್ರೋ ತಾರೆ ನೀರಜ್​ ಚೋಪ್ರಾ ಅವರ ಎಸೆತದ ಶೈಲಿಗೂ ಈ ಟ್ರ್ಯಾಕ್​ ನೆರವಾಗಲಿದೆ ಎಂದು ಹೇಳಲಾಗಿದೆ. ಜತೆಗೆ ಈ ಟ್ರ್ಯಾಕ್​ನಲ್ಲಿ ಹಲವು ದಾಖಲೆಗಳು ನಿರ್ಮಾಣಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ನೇರಳ ಬಣ್ಣ ಬಳಕೆಗೆ ಕಾರಣವೇನು?

ಪ್ಯಾರಿಸ್​ ಒಲಿಂಪಿಕ್ಸ್​ನ ಅಥ್ಲೆಟಿಕ್ಸ್​ ಟ್ರ್ಯಾಕ್​ಗೆ ನೇರಳೆ ಬಣ್ಣ ಬಳಸಲು ಕೂಡ ಒಂದು ಪ್ರಮುಖ ಕಾರಣವಿದೆ. ಅದೇನೆಂದರೆ, ಈ ಸಲದ ಒಲಿಂಪಿಕ್ಸ್​ ಗೇಮ್ಸ್​ ನೀಲಿ, ಹಸಿರು ಮತ್ತು ನೇರಳ ಬಣ್ಣದ ಥೀಮ್​ ಒಳಗೊಂಡಿದೆ. ಕ್ರೀಡಾಕೂಟದ ಎಲ್ಲ ತಾಣಗಳಲ್ಲಿ ಇದೇ ಬಣ್ಣಗಳು ಎದ್ದು ಕಾಣಲಿವೆ. ಇದೇ ನಿಟ್ಟಿನಲ್ಲಿ ಅಥ್ಲೆಟಿಕ್ಸ್​ ಟ್ರ್ಯಾಕ್​ಗೂ ದೃಶ್ಯ ಆಕರ್ಷಣೆಯ ನೇರಳ ಬಣ್ಣವನ್ನು ನೀಡಲಾಗಿದೆ. ಜತೆಗೆ ಮನೋವೈಜ್ಞಾನಿಕ ಕಾರಣವೂ ಇದೆ. ನೇರಳೆ ಬಣ್ಣವನ್ನು ಧೈರ್ಯಶಾಲಿ, ಶಕ್ತಿಯುತ ಮತ್ತು ಸೃಜನಾತ್ಮಕತೆಯ ಪ್ರತಿಕ ಎನ್ನಲಾಗಿದೆ.

ಇದನ್ನೂ ಓದಿ Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್‌ ನಿಶಾಂತ್‌ ದೇವ್‌; ಟಿಟಿಯಲ್ಲಿ ಶ್ರೀಜಾ ಅಕುಲಾ ಪರಾಭವ

​1976ರಿಂದಲೂ ಇಟಲಿಯ ಮೊಂಡೊ ಸಂಸ್ಥೆಯು ಒಲಿಂಪಿಕ್ಸ್‌ಗೆ ಟ್ರ್ಯಾಕ್‌ ಅಳವಡಿಕೆ ಕಾರ್ಯ ಮಾಡುತ್ತಿದ್ದು, ನೇರಳೆ ಬಣ್ಣದ ಟ್ರ್ಯಾಕ್‌ ಅನ್ನು ಆಧುನಿಕ ತಂತ್ರಜ್ಞಾನ ಬಳಸಿ ತಯಾರಿಸಿದೆ. ಈ ಟ್ರ್ಯಾಕ್​ನಲ್ಲಿ ವಿಶ್ವ ಹಾಗೂ ಒಲಿಂಪಿಕ್ಸ್‌ ದಾಖಲೆಗಳು ನಿರ್ಮಾಣಗೊಳ್ಳಲಿವೆ ಎಂದು ಮೊಂಡೊ ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

2016ರಲ್ಲಿ ನೀಲಿ ಟ್ರ್ಯಾಕ್​ ಬಳಕೆ


ಸಾಮಾನ್ಯವಾಗಿ ಒಲಿಂಪಿಕ್ಸ್​ ಅಥ್ಲೆಟಿಕ್ಸ್​ ಸ್ಪರ್ಧೆಗಳು ಹೆಚ್ಚಾಗಿ ಇಟ್ಟಿಗೆ ಬಣ್ಣದ ಟ್ರ್ಯಾಕ್​ನಲ್ಲಿ ನಡೆಯುತ್ತಿತ್ತು. ಆದರೆ, ಇಂಥದ್ದೇ ರ್ನಿದಿಷ್ಟ ಬಣ್ಣದ ಟ್ರ್ಯಾಕ್​ನಲ್ಲಿ ಅಥ್ಲೆಟಿಕ್ಸ್​ ಸ್ಪರ್ಧೆ ನಡೆಸಬೇಕೆಂಬ ನಿಯಮವಿಲ್ಲ. 2016ರ ರಿಯೋ ಒಲಿಂಪಿಕ್ಸ್​ ವೇಳೆ ಮೊದಲ ಬಾರಿಗೆ ಇಟ್ಟಿಗೆ ಬಣ್ಣದ ಸಿಂಥೆಟಿಕ್​ ಟ್ರ್ಯಾಕ್​ ಬದಲು ನೀಲಿ ಟ್ರ್ಯಾಕ್​ ಮೇಲೆ ಅಥ್ಲೆಟಿಕ್ಸ್​ ಸ್ಪರ್ಧೆ ನಡೆದಿತ್ತು. ಈ ಬಾರಿ ನೇರಳೆ ಬಣ್ಣದ ಟ್ರ್ಯಾಕ್​ನಲ್ಲಿ ಅಥ್ಲೆಟಿಕ್ಸ್​ ಸ್ಪರ್ಧೆ ನಡೆಯಲಿದೆ. ಈ ವಿನೂತನ ತಂತ್ರಜ್ಞಾನದ ಹೊಸ ಟ್ರ್ಯಾಕ್​ಗಳು ಅಥ್ಲೀಟ್​ಗಳಿಗೆ ಅತ್ಯಂತ ವೇಗವಾಗಿ ಓಡಲು ನೆರವಾಗಲಿದೆ ಎಂದು ಮೊಂಡೋ ಕಂಪನಿ ತಿಳಿಸಿದೆ. ನೇರಳೆ ಬಣ್ಣದ ಅಥ್ಲೆಟಿಕ್ಸ್​ ಟ್ರ್ಯಾಕ್​ನಲ್ಲಿ ಲೇನ್​ಗಳ ಸಂಖ್ಯೆಯನ್ನು 8ರಿಂದ 9ಕ್ಕೆ ಏರಿಸಲಾಗಿದೆ. ಕ್ರೀಡಾಂಗಣದಲ್ಲಿ ಒಟ್ಟಾರೆ 17,000 ಚದರ ಮೀಟರ್​ ವಿಸ್ತೀರ್ಣದಲ್ಲಿ ಈ ನೇರಳೆ ಬಣ್ಣ ವ್ಯಾಪಿಸಿದೆ.

ಈ ಬಾರಿ ಪ್ಯಾರಿಸ್​ಗೆ ಕಳುಹಿಸಿದ 117 ಕ್ರೀಡಾಪಟುಗಳ ಪಟ್ಟಿಯಲ್ಲಿ ಅಥ್ಲೆಟಿಕ್ಸ್​ ದೊಡ್ಡ ತಂಡವಾಗಿದೆ. ಒಟ್ಟು 29 ಸ್ಪರ್ಧಿಗಳು ಭಾರತವನ್ನು ಈ ವಿಭಾಗದಿಂದ ಪ್ರತಿನಿಧಿಸಲಿದ್ದಾರೆ. ಇವರಿಂದ ಹಲವು ಪದಕಗಳನ್ನು ಕೂಡ ಈ ಬಾರಿ ನಿರೀಕ್ಷೆ ಮಾಡಲಾಗಿದೆ. 18 ಪುರುಷರು ಹಾಗೂ 11 ಮಹಿಳೆಯರು ಸೇರಿದ್ದಾರೆ. ಇಂದು ನಡೆಯುವ ಪುರುಷರ ಮತ್ತು ಮಹಿಳೆಯರ 20 ಕಿಮೀ ಓಟದ ನಡಿಗೆ ಸ್ಪರ್ಧೆಯಲ್ಲಿ ಐತಿಹಾಸಿಕ ಪದಕವೊಂದನ್ನು ನಿರೀಕ್ಷೆ ಮಾಡಲಾಗಿದೆ. ಅಕ್ಷದೀಪ್ ಸಿಂಗ್, ವಿಕಾಶ್ ಸಿಂಗ್ ,ಪರಮ್ಜೀತ್ ಸಿಂಗ್ ಬಿಷ್ತ್ ಪುರುಷರ ವಿಭಾಗದಲ್ಲಿ ಕಣಕ್ಕಿಳಿದರೆ, ಮಹಿಳಾ ವಿಭಾಗದಲ್ಲಿ ಏಕೈಕ ಓಟಗಾರ್ತಿ ಪ್ರಿಯಾಂಕಾ ಗೋಸ್ವಾಮಿ(priyanka goswami) ಸ್ಪರ್ಧಿಸಲಿದ್ದಾರೆ.

Continue Reading
Advertisement
Krishna Janmabhoomi
ದೇಶ40 seconds ago

Mathura Krishna Janmabhoomi: ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ; ಮುಸ್ಲಿಂ ಪರ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Darshan Judicial Custody extended till 14th August
ಸ್ಯಾಂಡಲ್ ವುಡ್3 mins ago

Actor Darshan: ದರ್ಶನ್​ & ಗ್ಯಾಂಗ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ!

Kannada Serials TRP TOP 5 bhagyalakshmi puttakkana makkalu number 1
ಕಿರುತೆರೆ24 mins ago

Kannada Serials TRP: ಟಾಪ್‌ 5ನಲ್ಲಿ ‘ಭಾಗ್ಯಲಕ್ಷ್ಮೀ’; ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Mohammed Deif
ವಿದೇಶ29 mins ago

Mohammed Deif: ಹಮಾಸ್‌ ಉಗ್ರರಿಗಿಲ್ಲ ಉಳಿಗಾಲ; ಹಮಾಸ್‌ ಮಿಲಿಟರಿ ಚೀಫ್‌ನನ್ನೂ ಕೊಂದ ಇಸ್ರೇಲ್‌!

Rohit Sharma
ಕ್ರೀಡೆ31 mins ago

Rohit Sharma: ಸಚಿನ್​, ಕೊಹ್ಲಿ ಜತೆ ಎಲೈಟ್​ ಪಟ್ಟಿ ಸೇರುವ ನಿರೀಕ್ಷೆಯಲ್ಲಿ ರೋಹಿತ್​

Road Accident
ಬೆಂಗಳೂರು33 mins ago

Road Accident : ಬೆಂಗಳೂರಲ್ಲಿ ಮಳೆಗೆ ಬೈಕ್‌ ಸವಾರ ಬಲಿ; ಕಂಟ್ರೋಲ್‌ ತಪ್ಪಿ ಬಿದ್ದವನ ಮೇಲೆ ಹರಿದ ವಾಹನಗಳು!

Dead Body in Ganga River
Latest45 mins ago

Viral Video: ಹಾವು ಕಚ್ಚಿದ ಮಹಿಳೆಯನ್ನು ಗಂಗಾ ನದಿಯಲ್ಲಿ ತೇಲಿ ಬಿಟ್ಟರು! ಆಕೆ ಬದುಕಿ ಬರುತ್ತಾಳೆ ಎಂದರು!

Madhubala Embodies Pannaga A Pillar of Strength in 'Kannappa'
ಕಾಲಿವುಡ್51 mins ago

Kannappa Movie: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರದಿಂದ ಹೊರಬಿತ್ತು ಮಧುಬಾಲ ಫಸ್ಟ್‌ ಲುಕ್‌ !

19744 Crore rupees Reserve for Green Hydrogen Mission says Minister Pralhad Joshi Information
ದೇಶ53 mins ago

Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

Viral Video
ವೈರಲ್ ನ್ಯೂಸ್54 mins ago

Viral Video: ಬಟ್ಟೆ ಹರಿದುಕೊಂಡು ಪುರುಷನ ಮೇಲೆ ಮುಗಿಬಿದ್ದ ಮಹಿಳೆ! ಅಬ್ಬಾ, ಎಂಥ ಜಗಳಗಂಟಿ ಎಂದ ನೆಟ್ಟಿಗರು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌