Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ! - Vistara News

ಕ್ರೈಂ

Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!

Actor Darshan: ಸದ್ಯ ಸುರಕ್ಷತೆಯ ಕಾರಣದ ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಸ್ಥಳಾಂತರಿಸಿರುವ ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಆರೋಪಿಗಳಾದ ರವಿಶಂಕರ್, ನಿಖಿಲ್, ಕಾರ್ತಿಕ್, ಕೇಶವ ಎಲ್ಲರೂ ಒಂದೇ ಬ್ಯಾರಕ್‌ನಲ್ಲಿದ್ದಾರೆ. ಪ್ರಕರಣದ ಹೊಣೆ ನಿನ್ನದು ನಿನ್ನದು ಎಂದು ನಾಲ್ವರೂ ಬೈದಾಡಿಕೊಂಡಿದ್ದಾರೆ.

VISTARANEWS.COM


on

Actor Darshan Lost KG In 25 Days
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಜೊತೆಗೆ ಬಂಧಿತರಾಗಿ ನಂತರ ತುಮಕೂರು ಜೈಲಿನಲ್ಲಿ (Tumkur news) ಒಂದೇ ಸೆಲ್‌ನಲ್ಲಿರುವ ಆರೋಪಿಗಳ ನಡುವೆ ಪರಸ್ಪರ ಮಾತಿನ ಚಕಮಕಿ, ಬೈಗುಳ ವಿನಿಮಯ ಹಾಗೂ ಹೊಯ್‌ಕೈ ನಡೆದಿರುವುದು ವರದಿಯಾಗಿದೆ.

ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳಲ್ಲಿ ಒಬ್ಬೊಬ್ಬನ ಕತೆಯೂ ಒಂದೊಂದು ಬಗೆಯಾಗಿದ್ದು, ತನ್ನ ಸ್ಥಿತಿಯಿಂದಾಗಿ ಹತಾಶರಾಗಿದ್ದಾರೆ. ಪ್ರಕರಣದಲ್ಲಿ ಎ1 ಆರೋಪಿ ಪವಿತ್ರ ಗೌಡ, ಎ2 ಆರೋಪಿ ದರ್ಶನ್‌ ಸೇರಿದಂತೆ ಯಾರಿಗೂ ಜಾಮೀನು ದೊರೆತಿಲ್ಲ. ಹೀಗಾಗಿ ಇನ್ನುಳಿದವರಿಗೂ ಜಾಮೀನು ಸಿಗುವ ಸಾಧ್ಯತೆ ಕ್ಷೀಣವಾಗಿದೆ.

ಸದ್ಯ ಸುರಕ್ಷತೆಯ ಕಾರಣದ ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಸ್ಥಳಾಂತರಿಸಿರುವ ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಆರೋಪಿಗಳಾದ ರವಿಶಂಕರ್, ನಿಖಿಲ್, ಕಾರ್ತಿಕ್, ಕೇಶವ ಎಲ್ಲರೂ ಒಂದೇ ಬ್ಯಾರಕ್‌ನಲ್ಲಿದ್ದಾರೆ. ಪ್ರಕರಣದ ಹೊಣೆ ನಿನ್ನದು ನಿನ್ನದು ಎಂದು ನಾಲ್ವರೂ ಬೈದಾಡಿಕೊಂಡಿದ್ದಾರೆ.

ನಿನ್ನ ಮಾತು ಕೇಳಿ ನಾನೂ ಸಿಕ್ಹಾಕಿಕೊಂಡೆ ಅಂತ ಪರಸ್ಪರ ನಿಂದಿಸಿಕೊಂಡಿದ್ದಾರೆ. ರಾಘವೇಂದ್ರನ ಮಾತು ಕೇಳಿ ನಾವು ಸಿಲುಕಿಕೊಂಡೆವು. ನಮಗೆ ಜೈಲೇ ಗಟ್ಟಿಯಾಗುತ್ತೆ. ಯಾರೂ ಸಹಾಯ ಮಾಡುವುದಿಲ್ಲ ಎಂದು ಗೋಳಾಡಿಕೊಂಡಿದ್ದಾರೆ.‌ ದರ್ಶನ್‌ಗೆ ಜಾಮೀನು ಅರ್ಜಿಯನ್ನಾದರೂ ಸಲ್ಲಿಸಲಾಗಿತ್ತು. ಆದರೆ ಇವರಿಗೆ ಜಾಮೀನು ನೀಡುವುದಕ್ಕೂ ಯಾರೂ ಮುಂದೆ ಬಂದಿಲ್ಲ. ದರ್ಶನ್‌ ಮನೆಯವರು ಹಾಗೂ ನ್ಯಾಯವಾದಿಗಳ ತಂಡದ ಕಡೆಯಿಂದಲೂ ಸಹಾಯದ ಭರವಸೆ ದೊರೆತಿಲ್ಲ ಎನ್ನಲಾಗಿದೆ.

ಈ ಪ್ರಕರಣದ ಬಳಿಕ ನಮ್ಮೆಲ್ಲರ ಜೀವನ ಸೆಟ್ಲ್ ಆಗುತ್ತೆ ಡೋಂಟ್ ವರಿ ಎಂದು ಇನ್ನೊಬ್ಬ ಆರೋಪಿ ರಾಘವೇಂದ್ರ ಹಣದ ಆಮಿಷ ತೋರಿಸಿದ್ದನಂತೆ. ಕೊಲೆ ಬಳಿಕ ಮೃತದೇಹ ಬಿಸಾಡಿದ್ದು, ಸ್ಟೇಷನ್‌ಗೆ ಹೋಗಿ ಸರೆಂಡರ್ ಆಗಿದ್ದು ಎಲ್ಲವನ್ನೂ ಈ ಆರೋಪಿಗಳು ರಾಘವೇಂದ್ರ ಹೇಳಿದಂತೆ ಮಾಡಿದ್ದಾರೆ. ಆದರೆ ಪೊಲೀಸರ ತನಿಖೆಯ ಬಿಗಿ ಹೆಚ್ಚಾಗುತ್ತ ಹೋದಂತೆ ಎಲ್ಲವನ್ನೂ ಹೇಳಿಬಿಟ್ಟಿದ್ದಾರೆ.

ದುಡ್ಡಿನ ಆಸೆಗೆ ತಪ್ಪು ಮಾಡಿಬಿಟ್ಟೆವು ಎಂದು ಇದೀಗ ಜೈಲು ಸಿಬ್ಬಂದಿ ಬಳಿ ಆರೋಪಿಗಳು ಅಳಲು ತೋಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಜೋರು ಮಾತುಗಳಿಂದ ನಾಲ್ವರೂ ಬೈದಾಡಿಕೊಂಡಿದ್ದು, ಜೈಲಾಧಿಕಾರಿಗಳು ನಾಲ್ವರಿಗೂ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಗಲಾಟೆ ಮಾಡಿಕೊಂಡರೆ ಕಷ್ಟ ಎಂದು ಜೈಲು ಸಿಬ್ಬಂದಿ ಹೆಚ್ಚಿನ ನಿಗಾ ಇಟ್ಟಿದ್ದಾರೆ.

ಸಾಕ್ಷಿಗಳಿಗೆ ಬೆದರಿಕೆ, ಎನ್‌ಸಿಆರ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಜೈಲಿನಲ್ಲಿದ್ದೇ ಡಿ ಗ್ಯಾಂಗ್ ಪ್ಲಾನ್ ಮಾಡಿದೆ ಎಂದು ವರದಿಯಾಗಿದ್ದು, ಪೊಲೀಸರ ಮುಂದೆ ಸಾಕ್ಷಿ ಹೇಳದಂತೆ ಹಲವರಿಗೆ ಬೆದರಿಕೆ ಒಡ್ಡಿದೆ ಎಂದು ಗೊತ್ತಾಗಿದೆ. ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ವ್ಯಕ್ತಿಗೆ ಜೈಲಿನಲ್ಲಿದ್ದುಕೊಂಡೇ ಈ ಟೀಮ್‌ ಬೆದರಿಕೆ ಹಾಕುತ್ತಿದ್ದು, ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾವ ಮಾಹಿತಿಯೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಎನ್‌ಸಿಆರ್ ದಾಖಲಿಸಿ ಸಾಕ್ಷಿಗಳಿಗೆ ಧೈರ್ಯ ತುಂಬಿದ್ದಾರೆ. ಈಗಾಗಲೇ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ಬಂಧನಕ್ಕೂ ಮುನ್ನವೇ ಗ್ಯಾಂಗ್‌ ಡಿಲೀಟ್ ಮಾಡಿಸಿತ್ತು. ಸಾಕ್ಷ್ಯನಾಶ ಮಾಡಲು ಡಿ ಗ್ಯಾಂಗ್ ಸರ್ವ ಪ್ಲಾನ್‌ಗಳನ್ನೂ ಮಾಡಿತ್ತು. ಸಾಕ್ಷಿಗಳು ಈ ಕುರಿತು ಆತಂಕದಲ್ಲಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ: Actor Darshan: ದರ್ಶನ್​ & ಗ್ಯಾಂಗ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

Love case : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

Love case : ಅಂತರ್ಜಾತಿ ವಿವಾಹಕ್ಕೆ ಪೋಷಕರು ವಿರೋಧಿಸಿದ್ದಕ್ಕೆ ಮನೆ ಬಿಟ್ಟು ಹೋದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

By

Love Case
Koo

ಬಳ್ಳಾರಿ: ಅಂತರ್ಜಾತಿ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದಕ್ಕೆ ಮನನೊಂದ ಪ್ರೇಮಿಗಳು (Love case) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿ ಘಟನೆ ನಡೆದಿದೆ. ರಾಜ (23) ಹಾಗೂ ಪವಿತ್ರ (20) ಮೃತ ದುರ್ದೈವಿಗಳು.

ಮೃತರಿಬ್ಬರೂ ಸಿರುಗುಪ್ಪ ಪಟ್ಟಣದ ನಿವಾಸಿಗಳಾಗಿದ್ದು, ಸಿರುಗುಪ್ಪದ ಆದೋನಿ ರಸ್ತೆಯ ಜಮೀನೊಂದರಲ್ಲಿ ವಿಷ ಸೇವಿಸಿದ್ದಾರೆ. ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತಡ ರಾತ್ರಿ ಮನೆ ಬಿಟ್ಟು ಬಂದ ರಾಜು ಹಾಗೂ ಪವಿತ್ರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Kidnap case : ಪತಿ ಮೇಲಿನ ಸಿಟ್ಟಿಗೆ ಗೆಳೆಯನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ!

ರೈಲಿಗೆ ತಲೆ ಕೊಟ್ಟು ಅಣ್ಣ-ತಂಗಿ ಸಾವು

ರೈಲಿಗೆ ತಲೆ ಕೊಟ್ಟು ಅಣ್ಣ-ತಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ಹಳಿ ಮೃತದೇಹ ಪತ್ತೆಯಾಗಿದೆ. ಪ್ರಭು (25) ಹಾಗೂ ನವ್ಯ (23) ಮೃತ ದುರ್ದೈವಿಗಳು.

Love case
Love case

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಪ್ರೇಮನಗರ ನಿವಾಸಿಗಳಾಗಿದ್ದಾರೆ. ಇತ್ತೀಚೆಗೆ ಮೃತರ ತಾಯಿ ತೀರಿಕೊಂಡಿದ್ದರು. ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kidnap case : ಪತಿ ಮೇಲಿನ ಸಿಟ್ಟಿಗೆ ಗೆಳೆಯನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ!

Kidnap case : ಕೌಟುಂಬಿಕ ಕಲಹಕ್ಕೆ ಪತಿಯಿಂದ ದೂರಾಗಿದ್ದ ಪತ್ನಿ ಬೇರೊಂದು ಮದುವೆ ಆಗಿದ್ದಳು. ಈ ನಡುವೆ ಏಕಾಏಕಿ ಮನೆ ಬಳಿ ಆಕೆ ಸ್ವಂತ ಮಗುವನ್ನೇ ಕಿಡ್ನ್ಯಾಪ್‌ ಮಾಡಿ ಎಸ್ಕೇಪ್‌ ಆಗಿದ್ದಾಳೆ.

VISTARANEWS.COM


on

By

kidnap case
Koo

ಬೆಂಗಳೂರು: ಬೆಂಗಳೂರಿನಲ್ಲಿ ತಾಯಿಯಿಂದಲೇ ಮಗುವಿನ (Kidnap case) ಅಪಹರಣವಾಗಿದೆ. ಮಗುವನ್ನು ಕಿಡ್ನ್ಯಾಪ್ ಮಾಡಿ ಎಸ್ಕೇಪ್‌ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕೆಆರ್‌ ಪುರಂನ ಕ್ಯಾಸ ಗ್ರ್ಯಾಂಡ್ ರಾಯ್ಸಿ ಅಪಾರ್ಟ್ ಮೆಂಟ್ ಮುಂಭಾಗ ಬೆಳಗ್ಗೆ 8.30 ರ ಸುಮಾರಿಗೆ ಘಟನೆ ನಡೆದಿದೆ.

ಮಗುವಿನ ತಾಯಿ ಅನುಪಮ ಮತ್ತು ಆತನ ಸ್ನೇಹಿತನಿಂದ ಈ ಕೃತ್ಯ ನಡೆದಿದೆ. ಪತಿ ಸಿದ್ದಾರ್ಥ ಮತ್ತು ಪತ್ನಿ ಅನುಪಮ ನಡುವೆ ಕೌಟುಂಬಿಕ ಕಲಹವಿತ್ತು. ಹೀಗಾಗಿ ಈ ಇಬ್ಬರು ದೂರವಾಗಿದ್ದರು. ದೂರಾದ ಬಳಿಕ ಪತ್ನಿ ಅನುಪಮ ಬೇರೊಬ್ಬ ವ್ಯಕ್ತಿ ಜತೆಗೆ ಮದುವೆ ಆಗಿದ್ದರು.

ಈ ಹಿನ್ನೆಲೆಯಲ್ಲಿ ಕೋರ್ಟ್ ಮಗುವನ್ನು ಪತಿ ಸಿದ್ದಾರ್ಥ್‌ ವಶಕ್ಕೆ ಒಪ್ಪಿಸಿತ್ತು. ಆದರೆ ಇಂದು ಶುಕ್ರವಾರ ಅಪಾರ್ಟ್‌ಮೆಂಟ್ ಮುಂಭಾಗ ಸ್ಕೂಲ್‌ಗೆ ಹೋಗಲು ನಿಂತಿದ್ದಾಗ ಅನುಪಮ, ಸ್ನೇಹಿತ ಜತೆ ಸೇರಿ ಮಗುವನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಸದ್ಯ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಗುವನ್ನು ಕಿಡ್ನ್ಯಾಪ್‌ ಮಾಡುವ ದೃಶ್ಯವು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Murder case : ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಕಿರಾತಕ

ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಮತಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವಳು. ಬೆಂಗಳೂರಿನ ಬಾಗಲಗುಂಟೆ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಘಟನೆ ನಡೆದಿದೆ. ಡೆತ್ ನೋಟ್ ಬರೆದಿಟ್ಟಿರುವ ಮಮತಾ, ನನ್ನ ಬಗ್ಗೆ ಕೆಟ್ಟದ್ದಾಗಿ ಏನಾದರೂ ಬಂದರೆ ನೀವೆ ಹೊಣೆ ಎಂದು ಉಲ್ಲೇಖಸಿದ್ದಾಳೆ. ಇಬ್ಬರು ಯುವಕರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Murder case : ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಕಿರಾತಕ

Murder case : ಕೌಟುಂಬಿಕ ಕಲಹದಿಂದಾಗಿ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

Murder case
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Murder case) ಮತ್ತೊಂದು ಭೀಕರ ಹತ್ಯೆ ನಡೆದಿದೆ. ಪತಿಯಿಂದಲೇ ಪತ್ನಿಯ ಕೊಲೆಯಾಗಿದೆ. ಫಾತಿಮಾ‌ (34) ಕೊಲೆಯಾದವರು. ಪತಿ ತಬ್ರೇಜ್ ಪಾಷಾ ಆರೋಪಿಯಾಗಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಲವು ದಿನಗಳಿಂದ ಇಬ್ಬರ ಮಧ್ಯೆ ಜಗಳ‌ ಆಗಿತ್ತು. ಕೌಟುಂಬಿಕ ವಿಚಾರವಾಗಿ ಆಗಾಗ ಜಗಳ ನಡೆಯುತ್ತಲೇ ಇತ್ತು. ಅದೇ ರೀತಿ ಇಂದು ಬೆಳಗ್ಗೆ ಕೂಡ ಇಬ್ಬರ ಮಧ್ಯೆ ಜಗಳ ಶುರುವಾಗಿತ್ತು. ಶುಕ್ರವಾರ ಮನೆಗೆ ನುಗ್ಗಿದ ತಬ್ರೇಜ್‌, ಏಕಾಏಕಿ ಫಾತಿಮಾ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಬೆಳಗ್ಗೆ 8.30ರ ಸುಮಾರಿಗೆ ಪತ್ನಿ ಫಾತಿಮಾಗೆ ಚಾಕು ಇರಿದು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪರಾರಿ ಆಗಿರುವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ಹಂತಕನ ಓಡಾಟ

ಪತ್ನಿಯನ್ನು ಕೊಲ್ಲಲು ಮನೆಗೆ ಬಂದಿದ್ದ ತಬರೇಜ್‌ನಾ ಓಡಾಟವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಮಾಯಕನಂತೆ ಮನೆಗೆ ಬರುವ ತಬರೇಜ್ ಯಾರಿಗೂ ಡೌಟ್ ಬಾರದಂತೆ ರಸ್ತೆಯಲ್ಲಿ ಬೈಕ್ ಬಿಟ್ಟು ಸೈಲೆಂಟ್ ಆಗಿ ಒಳಗೆ ನುಗ್ಗಿದ್ದ. ಬಳಿಕ ಚಾಕು ತೆಗೆದು ಹತ್ಯೆ ಮಾಡಿ, ಚಾಕುವನ್ನು ಕೈನಲ್ಲಿಯೇ ಹಿಡಿದು ಹೊರ ಬಂದಿದ್ದಾನೆ. ಬಳಿಕ ಬೈಕ್ ಏರಿ ಎಸ್ಕೇಪ್ ಆಗಿದ್ದಾನೆ.

ಅಂಗವಿಕಲ ತಾಯಿ ಮುಂದೆಯೇ ಮಗಳ ಬರ್ಬರ ಹತ್ಯೆ

ಐದು ವರ್ಷಗಳ ಹಿಂದೆಯೇ ಈ ದಂಪತಿ ದೂರವಾಗಿದ್ದರು. ಆರೋಪಿ ತಬ್ರೇಜ್ ಪಾಷಾ ಕಳ್ಳತನ ಕೇಸ್, ಗಾಂಜಾ ಕೇಸ್‌ನಲ್ಲಿ ಭಾಗಿಯಾಗಿದ್ದ. ಇತ್ತ ಅಂಗವಿಕಲ ತಾಯಿಯೊಂದಿಗೆ ಇಬ್ಬರು ಮಕ್ಕಳ ಜತೆ ಫಾತಿಮಾ ವಾಸವಿದ್ದಳು. ಆದರೂ ಆಗಾಗ ಮನೆಗೆ ಬಂದು ಜಗಳ ಮಾಡುತ್ತಿದ್ದ. ಇತ್ತೀಚೆಗೆ ರಸ್ತೆಯೊಂದರ ಬಳಿ ಅಡ್ಡ ಹಾಕಿ ಜಗಳ ತೆಗೆದಿದ್ದ ತಬ್ರೇಜ್‌, ಕೊಲೆ ಮಾಡುತ್ತಿನಿ ಎಂದು ಹೇಳಿಕೊಂಡು ಓಡಾಡುತ್ತಿದ್ದ. ಹೀಗಾಗಿ ಫಾತಿಮಾ ತಾಯಿ, ತಬ್ರೇಜ್‌ ಏನಾದರೂ ಮಾಡುತ್ತಾನೆ ಎಂದೇ ಮನೆಗೆ ಸಿಸಿಟಿವಿ ಅಳವಡಿಸಿದ್ದರು. ಇಂದು ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದು ಜಗಳ ತೆಗೆದಿದ್ದ ತಬ್ರೇಜ್ ಪಾಷ, ಇಬ್ಬರು ಮಕ್ಕಳನ್ನು ಹೊರಗೆ ಕಳಿಸಿದ್ದ. ತಾಯಿಯ ಮುಂದೆಯೇ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!

ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಹಾಡಹಗಲೆ ಯುವಕನ ಬರ್ಬರ ಹತ್ಯೆ (Murder case) ನಡೆದಿದೆ. ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಘಟನೆ ನಡೆದಿದೆ. ಅಜಿತ್ ಕುಮಾರ್‌ (25) ಕೊಲೆಯಾದವನು.

ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು, ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಲೆ ಕೇಸ್‌ನಲ್ಲಿ ಆರೋಪಿಯಾಗಿದ್ದ ಅಜಿತ್‌

ಬ್ಲಡ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಅಜಿತ್‌, 2022ರಲ್ಲಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸಂಜೆ 4:15ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ ಅಜಿತ್ ಮೇಲೆ ಏಕಾಏಕಿ ಹಂತಕರ ಗ್ಯಾಂಗ್‌ ಅಟ್ಯಾಕ್‌ ಮಾಡಿದೆ. ಮಚ್ಚು ಬೀಸಿದ ರಭಸಕ್ಕೆ ಅಜಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶೇಷಾದ್ರಿಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಜಿತ್ ಹಾಗೂ ಸೋದರ ಕಾರ್ತಿಕ್ ಇಬ್ಬರು ಗಣೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಏರಿಯಾದಲ್ಲಿ ನಾನೇ ಡಾನ್ ಎಂದು ಅಜಿತ್‌ ಮೆರೆಯುತ್ತಿದ್ದ. ಸಮಯ ಕಾದು ನೋಡಿ ಎದುರಾಳಿಗಳು ಸೇಡು ತೀರಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case: ಗಂಡನ ಕೈಕಾಲು ಕಟ್ಟಿಹಾಕಿ ಕೊಲ್ಲಿಸಿದಳು ಸುಂದರಿ ಹೆಂಡತಿ!

Murder Case: ಕಳೆದ ಹಲವು ತಿಂಗಳ ಹಿಂದೆ ರಂಜಿತಾ ಗಂಡನ ಜೊತೆಗೆ ಜಗಳವಾಡಿ ಮಗುವನ್ನು ಜೊತೆಗೆ ಕರೆದುಕೊಂಡು ತವರು ಮನೆ ಸೇರಿದ್ದಳು. ನಿನ್ನೆ ರಾತ್ರಿ ಗಂಡ ಈಶ್ವರ್‌ ಮಗುವನ್ನು ನೋಡಲು ಆಕೆಯ ಮನೆಗೆ ಬಂದಿದ್ದ. ಆ ಸಂದರ್ಭದಲ್ಲಿ ರಂಜಿತಾ ಹಾಗೂ ಆಕೆಯ ಮನೆಯವರು ಗಲಾಟೆ ತೆಗೆದು ಈಶ್ವರ್‌ನ ಕೈಕಾಲು ಕಟ್ಟಿಹಾಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

VISTARANEWS.COM


on

murder case wife killed husband
ಆರೋಪಿ ರಂಜಿತಾ
Koo

ಕಲಬುರಗಿ: ಪತ್ನಿಯೊಬ್ಬಳು ತನ್ನ ಗಂಡನನ್ನೇ ಕೈಕಾಲು ಕಟ್ಟಿಹಾಕಿ ಕೊಂದುಹಾಕಿದ (wife killed husband) ಪ್ರಕರಣ ಕಲಬುರಗಿಯಲ್ಲಿ (Kalaburagi news) ನಡೆದಿದೆ. ಹೆಂಡತಿ ಹಾಗೂ ಮಗುವನ್ನು ನೋಡಲು ಮಾವನ ಮನೆಗೆ ಬಂದಿದ್ದ ಪತಿ ಬರ್ಬರವಾಗಿ (Murder Case) ಕೊಲೆಯಾಗಿದ್ದಾನೆ.

ಕಲಬುರಗಿ ನಗರದ ಆರ್.ಜಿ ನಗರದಲ್ಲಿ ಈ ಘಟನೆ ನಡೆದಿದೆ. ಈಶ್ವರ್‌ (26) ಕೊಲೆಯಾದ ಪತಿ. ಈಶ್ವರ್ ಕಲಬುರಗಿ ನಗರದ ಕನಕನಗರದ ನಿವಾಸಿಯಾಗಿದ್ದು, ನಗರದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ ಹಿಂದೆ ರಂಜಿತಾ ಎಂಬಾಕೆಯ ಜೊತೆಗೆ ಈಶ್ವರ್‌ಗೆ ವಿವಾಹವಾಗಿತ್ತು. ಇವರಿಗೆ ಒಂದು ಮಗುವಿತ್ತು. ಇಬ್ಬರ ನಡುವೆ ಸಂಸಾರಿಕ ಕಲಹವಿತ್ತು.

ಕಳೆದ ಹಲವು ತಿಂಗಳ ಹಿಂದೆ ರಂಜಿತಾ ಗಂಡನ ಜೊತೆಗೆ ಜಗಳವಾಡಿ ಮಗುವನ್ನು ಜೊತೆಗೆ ಕರೆದುಕೊಂಡು ತವರು ಮನೆ ಸೇರಿದ್ದಳು. ನಿನ್ನೆ ರಾತ್ರಿ ಗಂಡ ಈಶ್ವರ್‌ ಮಗುವನ್ನು ನೋಡಲು ಆಕೆಯ ಮನೆಗೆ ಬಂದಿದ್ದ. ಆ ಸಂದರ್ಭದಲ್ಲಿ ರಂಜಿತಾ ಹಾಗೂ ಆಕೆಯ ಮನೆಯವರು ಗಲಾಟೆ ತೆಗೆದು ಈಶ್ವರ್‌ನ ಕೈಕಾಲು ಕಟ್ಟಿಹಾಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಆರ್.ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಸಾಂಸಾರಿಕ ಬಿಕ್ಕಟ್ಟಿನ ಕಾರಣದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ವಿವಾಹೇತರ ಸಂಬಂಧ ಇತ್ಯಾದಿ ಕಾರಣಗಳ ಸಾಧ್ಯತೆಯನ್ನೂ ಪೊಲೀಸರು ಶೋಧಿಸುತ್ತಿದ್ದಾರೆ. ಕೊಲೆಯಾದಾತ ಹಾಗೂ ಆರೋಪಿಗಳ ಮೊಬೈಲ್‌ ಕಾಲ್‌ ಡೀಟೇಲ್ಸ್‌ ತೆಗೆದುಕೊಂಡು ಪೊಲೀಸರು ಶೋಧಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್‌ ಕೊಲೆ

ಬೆಂಗಳೂರು: ಹಾಡಹಗಲೆ ಯುವಕನ ಬರ್ಬರ ಹತ್ಯೆ (Murder case) ನಡೆದಿದೆ. ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಘಟನೆ ನಡೆದಿದೆ. ಅಜಿತ್ ಕುಮಾರ್‌ (25) ಕೊಲೆಯಾದವನು.

ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು, ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಲೆ ಕೇಸ್‌ನಲ್ಲಿ ಆರೋಪಿಯಾಗಿದ್ದ ಅಜಿತ್‌

ಬ್ಲಡ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಅಜಿತ್‌, 2022ರಲ್ಲಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸಂಜೆ 4:15ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ ಅಜಿತ್ ಮೇಲೆ ಏಕಾಏಕಿ ಹಂತಕರ ಗ್ಯಾಂಗ್‌ ಅಟ್ಯಾಕ್‌ ಮಾಡಿದೆ. ಮಚ್ಚು ಬೀಸಿದ ರಭಸಕ್ಕೆ ಅಜಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶೇಷಾದ್ರಿಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಜಿತ್ ಹಾಗೂ ಸೋದರ ಕಾರ್ತಿಕ್ ಇಬ್ಬರು ಗಣೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಏರಿಯಾದಲ್ಲಿ ನಾನೇ ಡಾನ್ ಎಂದು ಅಜಿತ್‌ ಮೆರೆಯುತ್ತಿದ್ದ. ಸಮಯ ಕಾದು ನೋಡಿ ಎದುರಾಳಿಗಳು ಸೇಡು ತೀರಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಬೆಂಗಳೂರಲ್ಲಿ ಮಳೆಗೆ ಬೈಕ್‌ ಸವಾರ ಬಲಿ; ಕಂಟ್ರೋಲ್‌ ತಪ್ಪಿ ಬಿದ್ದವನ ಮೇಲೆ ಹರಿದ ವಾಹನಗಳು!

Continue Reading
Advertisement
Model Monsoon Fashion
ಲೈಫ್‌ಸ್ಟೈಲ್15 mins ago

Model Monsoon Fashion: ಮಾನ್ಸೂನ್‌ ಫ್ಯಾಷನ್‌ನಲ್ಲಿ ಮಾಡೆಲ್‌ ಸನ್ನಿಧಿಯ ಸಿಂಪಲ್‌ ಲುಕ್ಸ್!

Ismail Haniyeh Killing
ವಿದೇಶ24 mins ago

Ismail Haniyh Killing: ಇಸ್ಮಾಯಿಲ್‌ ಹನಿಯೆಹ್‌ ಹತ್ಯೆಗೆ ನಡೆದಿತ್ತಾ ಮಾಸ್ಟರ್‌ ಪ್ಲ್ಯಾನ್? ತಿಂಗಳ ಹಿಂದೆಯೇ ಗೆಸ್ಟ್‌ಹೌಸ್‌ನಲ್ಲಿ‌ ಇಡಲಾಗಿತ್ತಾ ಬಾಂಬ್‌?

Paris Olympics
ಕ್ರೀಡೆ28 mins ago

Paris Olympics: ಆರ್ಚರಿ ಪ್ರೀ ಕ್ವಾರ್ಟರ್‌ನಲ್ಲಿ ನಾಳೆ ಭಾರತದ ದೀಪಿಕಾ ಕುಮಾರಿ-ಭಜನ್ ಕೌರ್ ಕಣಕ್ಕೆ

BBMP Property Tax
ಪ್ರಮುಖ ಸುದ್ದಿ1 hour ago

BBMP Property Tax: ಆಸ್ತಿ ತೆರಿಗೆ ಒನ್‌ ಟೈಮ್‌ ಸೆಟ್ಲ್‌ಮೆಂಟ್‌ಗೆ ಮತ್ತೆ 1 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಿದ ಬಿಬಿಎಂಪಿ

Love Case
ಬಳ್ಳಾರಿ2 hours ago

Love case : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

thawar chand gehlot siddaramaiah Governor versus state
ಪ್ರಮುಖ ಸುದ್ದಿ2 hours ago

Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

Viral Video
Latest2 hours ago

Viral Video: ಥೋ! ಈ ಮುದುಕರಿಗೆ ಈ ವಯಸ್ಸಲ್ಲಿ ಏನೆಲ್ಲ ಚಪಲ ನೋಡಿ! ಹಿಂದೆಂದೂ ಕಂಡಿರದಂಥ ವಿಡಿಯೊ!

Paris Olympics
ಕ್ರೀಡೆ2 hours ago

Paris Olympics: ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ

intel layoffs
ವಿದೇಶ2 hours ago

Intel Layoffs: ಆರ್ಥಿಕ ಬಿಕ್ಕಟ್ಟು- ಇಂಟೆಲ್‌ ಕಂಪನಿಯಿಂದ 18,000 ಉದ್ಯೋಗಿಗಳು ವಜಾ

Sexual Abuse
Latest2 hours ago

Sexual Abuse: ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಮಗು ಜನನ! ಆಘಾತಗೊಂಡು ಅಲ್ಲೇ ಕೂತಿದ್ದ ಬಾಲಕಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌