Paris Olympics: ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿ ಮನು ಭಾಕರ್; 25 ಮೀ. ಪಿಸ್ತೂಲ್ ವಿಭಾಗದಲ್ಲಿ ಸ್ಪರ್ಧೆ - Vistara News

ಕ್ರೀಡೆ

Paris Olympics: ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿ ಮನು ಭಾಕರ್; 25 ಮೀ. ಪಿಸ್ತೂಲ್ ವಿಭಾಗದಲ್ಲಿ ಸ್ಪರ್ಧೆ

Paris Olympics: ಮನು ಭಾಕರ್(Manu Bhaker) ಅವರ ಸಾಧನೆಯ ಹಸಿವು ಇನ್ನೂ ತಣಿದಿಲ್ಲ. ಇಂದು ನಡೆಯುವ ಮಹಿಳೆಯರ 25 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್(Paris Olympics) ಶೂಟಿಂಗ್‌ನಲ್ಲಿ ಅವಳಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ತಾರಾ ಶೂಟರ್​ ಮನು ಭಾಕರ್(Manu Bhaker) ಅವರ ಸಾಧನೆಯ ಹಸಿವು ಇನ್ನೂ ತಣಿದಿಲ್ಲ. ಇಂದು ನಡೆಯುವ ಮಹಿಳೆಯರ 25 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಹ್ಯಾಟ್ರಿಕ್​ ಪದಕದ ನಿರೀಕ್ಷೆಯಲ್ಲಿದ್ದಾರೆ.

25 ಮೀಟರ್ ಪಿಸ್ತೂಲ್ ಶೂಟಿಂಗ್,​ ಮನು ಭಾಕರ್​ ಅವರ ನೆಚ್ಚಿನ ಸ್ಪರ್ಧೆಯಾಗಿದೆ. ಈ ವಿಭಾಗದಲ್ಲಿ ಈಗಾಗಲೇ ಅವರು ವಿಶ್ವ ಚಾಂಪಿಯನ್​ಶಿಪ್​ ಕೂಟದಲ್ಲಿ 1 ಚಿನ್ನ ಮತ್ತು ಬೆಳ್ಳಿ ಗೆದ್ದಿದ್ದಾರೆ. ಶಿಸ್ತುಬದ್ಧವಾಗಿ ಸಾಮರ್ಥ್ಯ ಪ್ರದರ್ಶಿಸುವ ಅವರು ಪದಕ ಗೆಲ್ಲುವ ನಿರೀಕ್ಷೆ ಮಾಡಲಾಗಿದೆ. ಗೆದ್ದರೆ ಭಾರತದ ಪರ ಐತಿಹಾಸಿಕ ಸಾಧನೆ ಮಾಡಲಿದ್ದಾರೆ.

ಬ್ಯಾಡ್ಮಿಂಡನ್​ ಸ್ಪರ್ಧೆಯಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿರುವ ಲಕ್ಷ್ಯ ಸೇನ್ ಇಂದು ಕಣಕ್ಕಿಳಿಯಲಿದ್ದಾರೆ. ಗೆದ್ದರೆ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಮೂಲಕ ಪದಕ ಸುತ್ತಿಗೇರಲಿದ್ದಾರೆ. ಏತನ್ಮಧ್ಯೆ, ಭಾರತದ ಹಾಕಿ ತಂಡ ಕೂಡ ಅಂತಿಮ ಲೀಗ್​ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ನಿನ್ನೆ(ಗುರುವಾರ) ನಡೆದಿದ್ದ ಪಂದ್ಯದಲ್ಲಿ ಬೆಲ್ಜಿಯಂ ವಿರುದ್ಧ 2-1 ಅಂತರದ ಸೋಲು ಕಂಡಿತ್ತು.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಕಣಕ್ಕೆ ಇಳಿಯಲಿರುವ ಭಾರತದ ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ಎಲ್ಲ ವಿವರ

ಇಂದಿನ ಸ್ಪರ್ಧೆಗಳ ವಿವರ

ಆರ್ಚರಿ

ಆರ್ಚರಿ ಮಿಶ್ರ ತಂಡ ಆರ್ 16 : ಭಾರತ ವಿರುದ್ಧ ಇಂಡೋನೇಷ್ಯಾ – ಮಧ್ಯಾಹ್ನ 1:19ಕ್ಕೆ
ಮಿಶ್ರ ತಂಡ ಕ್ವಾರ್ಟರ್ ಫೈನಲ್ : ಸಂಜೆ 5:45ಕ್ಕೆ
ಮಿಶ್ರ ತಂಡ ಸೆಮಿಫೈನಲ್ – ಸಂಜೆ 7:00ಕ್ಕೆ
ಮಿಶ್ರ ತಂಡ ಪದಕ ಪಂದ್ಯಗಳು – 7:54ಕ್ಕೆ

ಅಥ್ಲೆಟಿಕ್ಸ್

ಮಹಿಳೆಯರ 5000 ಓಟ: ಮೀಟರ್ ರೌಂಡ್ -1 – ಪಾರುಲ್ ಚೌಧರಿ, ಅಂಕಿತಾ ಧ್ಯಾನಿ – ರಾತ್ರಿ 9:40
ಪುರುಷರ ಶಾಟ್ ಪುಟ್ ಅರ್ಹತಾ ಸುತ್ತು: ತಜಿಂದರ್ ಪಾಲ್ ಸಿಂಗ್ ತೂರ್ – 11:40 PM

ಬ್ಯಾಡ್ಮಿಂಟನ್

ಪುರುಷರ ಸಿಂಗಲ್ಸ್ : ಲಕ್ಷ್ಯ ಸೇನ್​, 11 :40ಕ್ಕೆ

ಗಾಲ್ಫ್​

ಗಾಲ್ಫ್ ಪುರುಷರ ವೈಯಕ್ತಿಕ ಸುತ್ತು 2 : ಮಧ್ಯಾಹ್ನ 12:30
ಹಾಕಿ
ಭಾರತೀಯ ಪುರುಷರ ತಂಡದ ವಿರುದ್ಧ ಆಸ್ಟ್ರೇಲಿಯಾ. ಸಂಜೆ 4:45

ಜೂಡೋ

ಮಹಿಳೆಯರ 78+ ಕೆ.ಜಿ ವಿಭಾಗದ 32ನೇ ಸುತ್ತು; ತುಲಿಕಾ ಮಾನ್ ವಿರುದ್ಧ ಇಡಾಲಿಸ್ ಒರ್ಟಿಜ್

ರೋಯಿಂಗ್

ಪುರುಷರ ಸಿಂಗಲ್ಸ್ ಸ್ಕಲ್ಸ್ ಫೈನಲ್ – ಮಧ್ಯಾಹ್ನ 1:48
ಸೇಲಿಂಗ್ ಮಹಿಳಾ ಡಿಂಗಿ ರೇಸ್ (3,4) – ಮಧ್ಯಾಹ್ನ 3:45ಕ್ಕೆ
ಮಧ್ಯಾಹ್ನ ಪುರುಷರ ಡಿಂಗಿ ರೇಸ್ (3,4) – 7:05 ಸಂಜೆ ಕ್ಕೆ

ಶೂಟಿಂಗ್

ಮಹಿಳೆಯರ 25 ಮೀಟರ್ ಪಿಸ್ತೂಲ್ ಮಹಿಳಾ ಅರ್ಹತಾ ಸುತ್ತು : ಮಧ್ಯಾಹ್ನ 12:30
ಪುರುಷರ ಸ್ಕೀಟ್ ಅರ್ಹತಾ ದಿನ 1 – ಮಧ್ಯಾಹ್ನ 1:00 ಗಂಟೆಗೆ
ಮಹಿಳೆಯರ 25 ಮೀಟರ್ ಪಿಸ್ತೂಲ್, ಅರ್ಹತಾ; ಮಧ್ಯಾಹ್ನ 3:30ಕ್ಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Swapnil Kusale : ಒಲಿಂಪಿಕ್ಸ್ ಪದಕ ಹೀರೋ ಸ್ವಪ್ನಿಲ್​ಗೆ ರೈಲ್ವೆಯ ಟಿಕೆಟ್ ಕಲೆಕ್ಟರ್​ ಹುದ್ದೆಯಿಂದ ಡಬಲ್​ ಪ್ರಮೋಷನ್​!

Swapnil Kusale : ಕುಸಾಲೆ 2015 ರಿಂದ ಕೇಂದ್ರ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ಬಳಿಯ ಕಂಬಳ್ವಾಡಿ ಗ್ರಾಮದ 28 ವರ್ಷದ ಕುಸಾಸೆ 2012 ರಿಂದ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಆದರೆ ಪ್ಯಾರಿಸ್ ಕ್ರೀಡಾಕೂಟದಲ್ಲಿ ಒಲಿಂಪಿಕ್ಸ್​ನಲ್ಲಿ ಪಾದಾರ್ಪಣೆ ಮಾಡಲು ಅವರು ಇನ್ನೂ 12 ವರ್ಷ ಕಾಯಬೇಕಾಯಿತು. ಗುರುವಾರ ಅವರು ಗೆದ್ದ ನಂತರ ಡಬಲ್ ಬಡ್ತಿ ಸಿಕ್ಕಿದೆ ಎಂದು ಈಗ ದೃಢಪಡಿಸಲಾಗಿದೆ.

VISTARANEWS.COM


on

Swapnil Kusale
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಐತಿಹಾಸಿಕ ಕಂಚಿನ ಪದಕ ಗೆದ್ದಿರುವ ಭಾರತದ ಶೂಟರ್​​ ಸ್ವಪ್ನಿಲ್ ಕುಸಾಲೆ (Swapnil Kusale ) ಅವರಿಗೆ ತಾವು ಕೆಲಸ ಮಾಡುತ್ತಿರುವ ರೈಲ್ವೆ ಇಲಾಖೆಯಲ್ಲಿ ಡಬಲ್ ಪ್ರಮೋಷನ್ ಸಿಕ್ಕಿದೆ. ಅವರು ಟಿಕೆಟ್ ಕಲೆಕ್ಟರ್​ (ಟಿಟಿಇ) ಹುದ್ದೆಯಿಂದ ಮುಂಬೈನ ಕ್ರೀಡಾ ಸೆಲ್​​ನ ವಿಶೇಷ ಕರ್ತವ್ಯ ಅಧಿಕಾರಿ (ಒಎಸ್​ಡಿ) ಆಗಿ ಬಡ್ತಿ ಪಡೆದುಕೊಂಡಿದ್ದಾರೆ. ಕುಸಾಲೆ 50 ಮೀಟರ್ ರೈಫಲ್ 3 ಪೊಸಿಷನ್ಸ್ ಸ್ಪರ್ಧೆಯಲ್ಲಿ ಐತಿಹಾಸಿಕ ಪದಕ ಗೆದ್ದು ಭಾರತಕ್ಕೆ ಮೂರನೇ ಪದಕ ಗೆದ್ದುಕೊಟ್ಟರು. ಇದು ಶೂಟಿಂಗ್​ನಲ್ಲಿ ಭಾರತಕ್ಕೆ ದೊರೆತ ಮೂರನೇ ಪದಕವಾಗಿದೆ.

ಕುಸಾಲೆ 2015 ರಿಂದ ಕೇಂದ್ರ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ಬಳಿಯ ಕಂಬಳ್ವಾಡಿ ಗ್ರಾಮದ 28 ವರ್ಷದ ಕುಸಾಸೆ 2012 ರಿಂದ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಆದರೆ ಪ್ಯಾರಿಸ್ ಕ್ರೀಡಾಕೂಟದಲ್ಲಿ ಒಲಿಂಪಿಕ್ಸ್​ನಲ್ಲಿ ಪಾದಾರ್ಪಣೆ ಮಾಡಲು ಅವರು ಇನ್ನೂ 12 ವರ್ಷ ಕಾಯಬೇಕಾಯಿತು. ಗುರುವಾರ ಅವರು ಗೆದ್ದ ನಂತರ ಡಬಲ್ ಬಡ್ತಿ ಸಿಕ್ಕಿದೆ ಎಂದು ಈಗ ದೃಢಪಡಿಸಲಾಗಿದೆ.

1 ಕೋಟಿ ಬಹುಮಾನ ಪ್ರಕಟಿಸಿದ ಶಿಂಧೆ ಸರ್ಕಾರ

ಮುಂಬಯಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(paris olympics 2024) ಗುರುವಾರ ನಡೆದಿದ್ದ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಶೂಟಿಂಗ್​ನಲ್ಲಿ ಕಂಚಿನ ಪದಕ ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್​ ಕುಸಾಲೆ(Swapnil Kusale) ಅವರ ಈ ಸಾಧನೆಯನ್ನು ಪರಿಗಣಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ(Eknath Shinde) 1 ಕೋಟಿ ಬಹುಮಾನ ಪ್ರಕಟಿಸಿದ್ದಾರೆ. ಕೊಲ್ಹಾಪುರ ಜಿಲ್ಲೆಯ ಕಂಬಲ ವಾಡಿಯವರಾದ ಸ್ವಪ್ನಿಲ್​, 2009ರಲ್ಲಿ ಮಹಾರಾಷ್ಟ್ರದ ಕ್ರೀಡಾ ಪ್ರಭೋದಿನಿ ಯೋಜನೆಯಡಿ ಕ್ರೀಡಾ ತರಬೇತಿಗೆ ಆಯ್ಕೆಯಾಗಿದ್ದರು.

ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಹಾಗೂ 3ನೇ ರೈಫಲ್​ ಶೂಟರ್​ ಎಂಬ ಇತಿಹಾಸ ಬರೆದಿದ್ದಾರೆ. ಗುರುವಾರ ನಡೆದ ಫೈನಲ್​ ಸ್ಪರ್ಧೆಯಲ್ಲಿ ಅವರು ಒಟ್ಟು 451.4 ಅಂಕ ಗಳಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. ಸ್ವಪ್ನಿಲ್​ ಕುಸಾಲೆಗೆ ಮಹರಾಷ್ಟ್ರ ಸರ್ಕಾರದ ಬಹುಮಾನ ಮೊತ್ತದ ಹೊರತಾಗಿಯೂ ಕೇಂದ್ರ ಸರ್ಕಾರದಿಂದ 30 ಲಕ್ಷ ರೂ. ಮತ್ತು ಭಾರತೀಯ ಒಲಿಂಪಿಕ್ಸ್​ ಸಂಸ್ಥೆಯಿಂದ 50 ಲಕ್ಷ ರೂ. ಬಹುಮಾನ ಸಿಗಲಿದೆ.

ಇದನ್ನೂ ಓದಿ: Paris Olympics: ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ

ನೀತಾ ಅಂಬಾನಿ ಮೆಚ್ಚುಗೆ

ಒಲಿಂಪಿಕ್ಸ್​ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮತ್ತು ರಾಜ್ಯಕ್ಕೆ ಕೀರ್ತಿ ತಂದ ಸ್ವಪ್ನಿಲ್​ ಕುಸಾಲೆಗೆ ರಿಲಯನ್ಸ್ ಫೌಂಡೇಶನ್ (Reliance Foundation) ಸಂಸ್ಥಾಪಕಿ ಹಾಗೂ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ(IOC) ಸದಸ್ಯೆಯಾಗಿರುವ ನೀತಾ ಅಂಬಾನಿ(Nita Ambani) ಅಭಿನಂದನೆ ಸಲ್ಲಿಸಿದ್ದಾರೆ. “ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಸ್ವಪ್ನಿಲ್ ಕುಸಾಲೆಗೆ ನನ್ನ ಅಭಿನಂದನೆಗಳು. ನಿಮ್ಮ ಈ ಸಾಧನೆಯಿಂದ ದೇಶವೇ ಹೆಮ್ಮೆಪಡುವಂತಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಪ್ರತೀಕ ಈ ಗೆಲುವು. ಮುಂದೆಯೂ ಕೂಡ ದೇಶಕ್ಕಾಗಿ ಹಲವು ಪದಕ ಗೆಲ್ಲುವಂತಾಲಿ” ಎಂದು ನೀತಾ ಅಂಬಾನಿ ಹಾರೈಸಿದ್ದಾರೆ.

Continue Reading

ಕ್ರೀಡೆ

Paris Olympics: ಆರ್ಚರಿ ಪ್ರೀ ಕ್ವಾರ್ಟರ್‌ನಲ್ಲಿ ನಾಳೆ ಭಾರತದ ದೀಪಿಕಾ ಕುಮಾರಿ-ಭಜನ್ ಕೌರ್ ಕಣಕ್ಕೆ

Paris Olympics: ಭಾರತದ ಸ್ಟಾರ್‌ ಬಿಲ್ಗಾರ್ತಿಯರಾದ ದೀಪಿಕಾ ಕುಮಾರಿ(Deepika Kumari) ಮತ್ತು 18 ವರ್ಷದ ಭಜನ್ ಕೌರ್(bhajan kaur) ನಾಳೆ ನಡೆಯುವ ಮಹಿಳಾ ಸಿಂಗಲ್ಸ್​ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಪದಕದ ಆಸೆ ಜೀವಂತವಿರಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

Paris Olympics
Koo

ಬೆಂಗಳೂರು: ಈ ಬಾರಿಯ ಒಲಿಂಪಿಕ್ಸ್​ನಲ್ಲಿ(Paris Olympics) ಪದಕ ಗೆಲ್ಲುವ ಭರವಸೆ ಮೂಡಿಸಿರುವ ಭಾರತದ ಸ್ಟಾರ್‌ ಬಿಲ್ಗಾರ್ತಿಯರಾದ ದೀಪಿಕಾ ಕುಮಾರಿ(Deepika Kumari) ಮತ್ತು 18 ವರ್ಷದ ಭಜನ್ ಕೌರ್(bhajan kaur) ನಾಳೆ ನಡೆಯುವ ಮಹಿಳಾ ಸಿಂಗಲ್ಸ್​ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಪದಕದ ಆಸೆ ಜೀವಂತವಿರಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ದೀಪಿಕಾ ಕುಮಾರಿ ಜರ್ಮನಿಯ 13 ಶ್ರೇಯಾಂಕದ ಮೈಕಲ್‌ ಕ್ರೋಪೆನ್‌ ಸವಾಲು ಎದುರಿಸಿದರೆ,  ಭಜನ್ ಕೌರ್ ಇಂಡೋನೇಷ್ಯಾದ ಡಯಾನಂದ ಚೋರುನಿಸಾ ವಿರುದ್ಧ ಸೆಣಸಾಡಲಿದ್ದಾರೆ.

ಬುಧವಾರ ನಡೆದಿದ್ದ ಎಲಿಮಿನೇಷನ್‌ ಸುತ್ತಿನ ಮೊದಲ ಪಂದ್ಯದಲ್ಲಿ ದೀಪಿಕಾ ಅವರು ಎಸ್ಟೋನಿಯಾದ ರೀನಾ ಪರ್ನಾಟ್‌ ವಿರುದ್ಧ 6-5(29-28, 26-27, 27-27, 24-27, 30-27) ಅಂತರದಿಂದ ಗೆಲುವು ಸಾಧಿಸಿ ದ್ವಿತೀಯ ಸುತ್ತಿಗೆ ಪ್ರವೇಶ ಪಡೆದಿದ್ದರು. ಈ ಸುತ್ತಿನಲ್ಲಿ ನೆದರ್ಲ್ಯಾಂಡ್ಸ್​ನ ಕ್ವಿಂಟಿ ರೋಫೆನ್ ಅವರನ್ನು 6-2 ಅಂತರದಿಂದ ಹಿಮ್ಮೆಟ್ಟಿಸಿ ಪ್ರೀ ಕ್ವಾರ್ಟರ್​ಗೆ ಪ್ರವೇಶ ಪಡೆದಿದ್ದರು.

ಇದನ್ನೂ ಓದಿ Paris Olympics: ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ದೀಪಿಕಾ ಕುಮಾರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೊರಿಯಾದ ಆಟಗಾರ್ತಿಯ ವಿರುದ್ಧ ದೀಪಿಕಾ ಸೋಲನುಭವಿಸಿ ನಿರಾಸೆ ಎದುರಿಸಿದ್ದರು. 2012ರ ಲಂಡನ್ ಒಲಿಂಪಿಕ್ಸ್ ನಲ್ಲಿ ಮೊದಲ ಸುತ್ತಿನಲ್ಲಿ, ರಿಯೋ ಒಲಿಂಪಿಕ್ಸ್​ನಲ್ಲಿ ಪ್ರಿ ಕ್ವಾರ್ಟರ್ ಫೈನಲ್​ನಲ್ಲಿ ಮುಗ್ಗರಿಸಿದ್ದರು. ಆದರೆ, ಈ ಬಾರಿ ಪದಕ ಗೆಲ್ಲುವ ಆತ್ಮವಿಶ್ವಾಸದಲ್ಲಿದ್ದಾರೆ.

ಭಜನ್ ಕೌರ್ ಅವರು ಮಂಗಳವಾರ ನಡೆದಿದ್ದ ರೀಕರ್ವ್ ವೈಯಕ್ತಿಕ ವಿಭಾಗದದಲ್ಲಿ 18 ವರ್ಷದ ಭಜನ್ ಕೌರ್ ಮೊದಲ ಸುತ್ತಿನಲ್ಲಿ ಇಂಡೋನೇಷ್ಯಾದ ಕಮಲ್ ಸೈಫಾ ವಿರುದ್ದ 7-3 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿ, ಆ ಬಳಿಕ ನಡೆದ 2ನೇ ಸುತ್ತಿನಲ್ಲಿ ಪೋಲೆಂಡ್‌ನ ಮೈಜೊರ್ ರನ್ನು 6-0ರಲ್ಲಿ ಮಣಿಸಿ ಪ್ರಿ ಕ್ವಾರ್ಟರ್‌ಗೆ ಲಗ್ಗೆಯಿಟ್ಟಿದ್ದರು.

ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ


ಉತ್ತಮ ಫಾರ್ಮ್ ನಲ್ಲಿರುವ ಧೀರಜ್‌ ಬೊಮ್ಮದೇವರ(Dhiraj Bommadevara) ಮತ್ತು ಅಂಕಿತಾ ಭಕತ್‌(Ankita Bhakat) ಅವರು ಪ್ಯಾರಿಸ್‌ ಒಲಿಂಪಿಕ್ಸ್‌ನ(Paris Olympics) ಆರ್ಚರಿ ಕ್ರೀಡೆಯ ಮಿಶ್ರ ತಂಡದ 16ನೇ ಸುತ್ತಿನ ಪಂದ್ಯದಲ್ಲಿ ಇಂಡೋನೇಷ್ಯಾವನ್ನು 5-1 (37-36, 38-38, 38-37) ಅಂತದಿಂದ ಮಣಿಸಿ ಕ್ವಾರ್ಟರ್​​ ಫೈನಲ್ ಪ್ರವೇಶಿಸಿದೆ. ಈ ಮೂಲಕ ಆರ್ಚರಿಯಲ್ಲಿ ಒಲಿಂಪಿಕ್‌ ಪದಕ ಗೆಲ್ಲುವ ವಿಶ್ವಾಸ ಮೂಡಿಸಿದೆ.

ಚೊಚ್ಚಲ ಒಲಿಂಪಿಕ್ಸ್‌ನಲ್ಲಿ ಭಾಗವಹಿ ಸುತ್ತಿರುವ ಧೀರಜ್‌ ಮತ್ತು ಅಂಕಿತಾ ಅವರ ಅಮೋಘ ನಿರ್ವಹಣೆಯಿಂದ ಭಾರತ ಕ್ವಾರ್ಟರ್‌ಫೈನಲಿಗೆ ಪ್ರವೇಶಿಸಿದೆ. 26ರ ಹರೆಯದ ಅಂಕಿತಾ ಅಮೋಘ ಪ್ರದಶನ ತೋರುವ ಮೂಲಕ ಹಲವು ಬಾರಿ 10 ಅಂಕ್ಕೆ ಗುರಿ ಇರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕ್ವಾರ್ಟರ್‌ ಫೈನಲ್‌ ಪಂದ್ಯ ಇಂದು ಸಂಜೆ 5.40ಕ್ಕೆ ನಡೆಯಲಿದೆ.

Continue Reading

ಕ್ರೀಡೆ

Paris Olympics: ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ

Paris Olympics: 26ರ ಹರೆಯದ ಅಂಕಿತಾ ಅಮೋಘ ಪ್ರದಶನ ತೋರುವ ಮೂಲಕ ಹಲವು ಬಾರಿ 10 ಅಂಕ್ಕೆ ಗುರಿ ಇರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

VISTARANEWS.COM


on

Paris Olympics
Koo

ಪ್ಯಾರಿಸ್​​: ಉತ್ತಮ ಫಾರ್ಮ್ ನಲ್ಲಿರುವ ಧೀರಜ್‌ ಬೊಮ್ಮದೇವರ(Dhiraj Bommadevara) ಮತ್ತು ಅಂಕಿತಾ ಭಕತ್‌(Ankita Bhakat) ಅವರು ಪ್ಯಾರಿಸ್‌ ಒಲಿಂಪಿಕ್ಸ್‌ನ(Paris Olympics) ಆರ್ಚರಿ ಕ್ರೀಡೆಯ ಮಿಶ್ರ ತಂಡದ 16ನೇ ಸುತ್ತಿನ ಪಂದ್ಯದಲ್ಲಿ ಇಂಡೋನೇಷ್ಯಾವನ್ನು 5-1 (37-36, 38-38, 38-37) ಅಂತದಿಂದ ಮಣಿಸಿ ಕ್ವಾರ್ಟರ್​​ ಫೈನಲ್ ಪ್ರವೇಶಿಸಿದೆ. ಈ ಮೂಲಕ ಆರ್ಚರಿಯಲ್ಲಿ ಒಲಿಂಪಿಕ್‌ ಪದಕ ಗೆಲ್ಲುವ ವಿಶ್ವಾಸ ಮೂಡಿಸಿದೆ.

ಚೊಚ್ಚಲ ಒಲಿಂಪಿಕ್ಸ್‌ನಲ್ಲಿ ಭಾಗವಹಿ ಸುತ್ತಿರುವ ಧೀರಜ್‌ ಮತ್ತು ಅಂಕಿತಾ ಅವರ ಅಮೋಘ ನಿರ್ವಹಣೆಯಿಂದ ಭಾರತ ಕ್ವಾರ್ಟರ್‌ಫೈನಲಿಗೆ ಪ್ರವೇಶಿಸಿದೆ. 26ರ ಹರೆಯದ ಅಂಕಿತಾ ಅಮೋಘ ಪ್ರದಶನ ತೋರುವ ಮೂಲಕ ಹಲವು ಬಾರಿ 10 ಅಂಕ್ಕೆ ಗುರಿ ಇರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕ್ವಾರ್ಟರ್‌ ಫೈನಲ್‌ ಪಂದ್ಯ ಇಂದು ಸಂಜೆ 5.40ಕ್ಕೆ ನಡೆಯಲಿದೆ.

ಬ್ಯಾಡ್ಮಿಂಡನ್​ ಸ್ಪರ್ಧೆಯಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿರುವ ಲಕ್ಷ್ಯ ಸೇನ್ ಇಂದು ಕಣಕ್ಕಿಳಿಯಲಿದ್ದಾರೆ. ಗೆದ್ದರೆ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಮೂಲಕ ಪದಕ ಸುತ್ತಿಗೇರಲಿದ್ದಾರೆ. ಏತನ್ಮಧ್ಯೆ, ಭಾರತದ ಹಾಕಿ ತಂಡ ಕೂಡ ಅಂತಿಮ ಲೀಗ್​ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ನಿನ್ನೆ(ಗುರುವಾರ) ನಡೆದಿದ್ದ ಪಂದ್ಯದಲ್ಲಿ ಬೆಲ್ಜಿಯಂ ವಿರುದ್ಧ 2-1 ಅಂತರದ ಸೋಲು ಕಂಡಿತ್ತು.

ಇದನ್ನೂ ಓದಿ Paris Olympics: ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿ ಮನು ಭಾಕರ್; 25 ಮೀ. ಪಿಸ್ತೂಲ್ ವಿಭಾಗದಲ್ಲಿ ಸ್ಪರ್ಧೆ

ಪ್ರಸಕ್ತ ಸಾಗುತ್ತಿರುವ ಪ್ಯಾರಿಸ್​ ಒಲಿಂಪಿಕ್ಸ್(Paris Olympic)​ ಕ್ರೀಡಾಕೂಟದಲ್ಲಿ ಭಾರತ ಇದುವರೆಗೂ 3 ಪದಕಗಳನ್ನು ಗೆದ್ದು ಪದಕಪಟ್ಟಿಯಲ್ಲಿ ಸದ್ಯ 44ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಕೆಲವು ಸ್ಪರ್ಧೆಗಳಲ್ಲಿ ಭಾರತೀಯ ಕ್ರೀಡಾಳುಗಳು ತಮ್ಮ ವಿಭಾಗದ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ಪದಕ ಭರವಸೆ ಮೂಡಿಸಿದ್ದಾರೆ. ಇದರ ಬೆನ್ನಲ್ಲೇ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ ಕಾರು ಬಹುಮಾನ ನೀಡಲಾಗುವುದು ಎಂದು ಜೆಎಸ್​ಡಬ್ಲ್ಯು ಎಂಜಿ ಇಂಡಿಯಾದ ಚೇರ್ಮನ್​ ಸಜ್ಜನ್​ ಜಿಂದಾಲ್(JSW Chairman Sajjan Jindal)​ ಘೋಷಣೆ ಮಾಡಿದ್ದಾರೆ. ಹೊಸದಾಗಿ ಮಾರುಕಟ್ಟೆಗೆ ಬರುತ್ತಿರುವ ಎಂಜಿ ವಿಂಡ್ಸರ್(MG Windsor)​ ಕಾರನ್ನು ಬಹುಮಾನವಾಗಿ ನೀಡುವುದಾಗಿ ​ಸಜ್ಜನ್​ ಜಿಂದಾಲ್ ಹೇಳಿದ್ದಾರೆ. ಈ ಕಾರಿನ ಮೌಲ್ಯ ಸುಮಾರು 25 ಲಕ್ಷ ರೂ. ಆಗಿದೆ.

Continue Reading

ಕ್ರೀಡೆ

MS Dhoni: ನೆಚ್ಚಿನ ಆಟಗಾರನನ್ನು ಹೆಸರಿಸಿದ ಧೋನಿ; ಕೊಹ್ಲಿ, ರೋಹಿತ್​ ಅಲ್ಲ, ಮತ್ಯಾರು?

MS Dhoni: ಒಂದೊಮ್ಮೆ 4ಕ್ಕಿಂತ ಅಧಿಕ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಿದರೆ ಧೋನಿ ಚೆನ್ನೈ ತಂಡದ ಪರ ಇನ್ನೊಂದು ಐಪಿಎಲ್​ ಆಡಲಿದ್ದಾರೆ ಎಂದು ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ.

VISTARANEWS.COM


on

MS Dhoni
Koo

ರಾಂಚಿ: ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ತಮ್ಮ ನೆಚ್ಚಿನ ಕ್ರಿಕೆಟಿಗನ ಹೆಸರನ್ನು(Dhoni Picks His Favourite Cricketer) ಬಹಿರಂಗಪಡಿಸಿದ್ದಾರೆ. ಇದುವರೆಗೂ ಅಭಿಮಾನಿಗಳು ಧೋನಿಯ ನೆಚ್ಚಿನ ಕ್ರಿಕೆಟಿಗ ವಿರಾಟ್​ ಕೊಹ್ಲಿ ಅಥವಾ ರೋಹಿತ್​ ಶರ್ಮ ಎಂದು ಭಾವಿಸಿದ್ದರು. ಆದರೆ, ಧೋನಿ ಅವರ ಸದ್ಯದ ಫೇವರಿಟ್​ ಕ್ರಿಕೆಟಿಗನೆಂದರೆ ಅದು ಜಸ್​ಪ್ರೀತ್​ ಬುಮ್ರಾ (Jasprit Bumrah). ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಧೋನಿ ಈ ವಿಚಾರವನ್ನು ರಿವೀಲ್​ ಮಾಡಿದ್ದಾರೆ.

ಪ್ರಸ್ತುತ ಕ್ರಿಕೆಟ್​ನಲ್ಲಿ ನಿಮ್ಮ ನೆಚ್ಚಿನ​ ಆಟಗಾರ ಯಾರು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಧೋನಿ, “ಸದ್ಯ ಫೇವರಿಟ್ ಆಟಗಾರ ವೇಗಿ ಜಸ್​ಪ್ರೀತ್​ ಬುಮ್ರಾ. ಭಾರತ ತಂಡವು ಉತ್ತಮ ಪ್ರದರ್ಶನ ನೀಡುತ್ತಿರುವಾಗ ನಾನು ಬ್ಯಾಟರ್ ನನ್ನು ಆಯ್ಕೆ ಮಾಡುವುದಿಲ್ಲ. ಅವರು ರನ್ ಗಳಿಸುತ್ತಲೇ ಇರುತ್ತಾರೆ. ನಾನು ಬೌಲರ್​ ಬುಮ್ರಾ ಅವರನ್ನು ಆಯ್ಕೆ ಮಾಡುತ್ತೇನೆ” ಎಂದು ಹೇಳುವ ಮೂಲಕ ತಮ್ಮ ನೆಚ್ಚಿನ ಆಟಗಾರ ಬುಮ್ರಾ ಎನ್ನುವುದನ್ನು ತಿಳಿಸಿದ್ದಾರೆ.

ಮುಂದಿನ ಐಪಿಎಲ್​ ಆಡಲಿದ್ದಾರಾ ಧೋನಿ?


ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಇದೀಗ ಅವರು ಮುಂದಿನ ಐಪಿಎಲ್ ಆಡುತ್ತಾರಾ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರೀ ಚರ್ಚೆಯಾಗುತ್ತಿದೆ.

ಇದನ್ನೂ ಓದಿ MS Dhoni : ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿಯಮವನ್ನೇ ಬದಲಾಯಿಸಲು ಕೋರಿದ ಚೆನ್ನೈ ಸೂಪರ್ ಕಿಂಗ್ಸ್​

​ಕೆಲ ಮೂಲಗಳ ಪ್ರಕಾರ ಡಿಸೆಂಬರ್​ನಲ್ಲಿ ನಡೆಯುವ ಆಟಗಾರರ ಮೆಗಾ ಹರಾಜಿಗೆ ಬಿಸಿಸಿಐ(BCCI) ಈ ನಿಯಯ ಜಾರಿಗೆ ತಂದರೆ ಧೋನಿ ಅವರು 18ನೇ ಆವೃತ್ತಿ ಐಪಿಎಲ್(IPL 2025)​ ಆಡುವುದು ಅನುಮಾನ ಎನ್ನಲಾಗಿದೆ. ಬಿಸಿಸಿಐ ಐಪಿಎಲ್ ಫ್ರಾಂಚೈಸಿಗಳಿಗೆ ಗರಿಷ್ಠ 4 ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ಮಾತ್ರ ನೀಡಿದ್ದಲ್ಲಿ ಧೋನಿಗೆ ಚೆನ್ನೈ(CSK) ತಂಡದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ. ಸಿಎಸ್‌ಕೆ ನಾಯಕ ಋತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶ್ರೀಲಂಕಾದ ವೇಗಿ ಮತಿಶಾ ಪತಿರಾಣ ಮತ್ತು ಶಿವಂ ದುಬೆ ಅವರನ್ನು ಉಳಿಸಿಕೊಳ್ಳುವ ಯೋಚನೆಯಲ್ಲಿದೆ ಎನ್ನಲಾಗಿದೆ. ಒಂದೊಮ್ಮೆ 4ಕ್ಕಿಂತ ಅಧಿಕ ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಿದರೆ ಧೋನಿ ಚೆನ್ನೈ ತಂಡದ ಪರ ಇನ್ನೊಂದು ಐಪಿಎಲ್​ ಆಡಲಿದ್ದಾರೆ ಎಂದು ಫ್ರಾಂಚೈಸಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಕ್ರಿಕ್‌ಬಜ್‌ ವರದಿ ಮಾಡಿದೆ.

Continue Reading
Advertisement
Swapnil Kusale
ಕ್ರೀಡೆ1 min ago

Swapnil Kusale : ಒಲಿಂಪಿಕ್ಸ್ ಪದಕ ಹೀರೋ ಸ್ವಪ್ನಿಲ್​ಗೆ ರೈಲ್ವೆಯ ಟಿಕೆಟ್ ಕಲೆಕ್ಟರ್​ ಹುದ್ದೆಯಿಂದ ಡಬಲ್​ ಪ್ರಮೋಷನ್​!

Model Monsoon Fashion
ಲೈಫ್‌ಸ್ಟೈಲ್18 mins ago

Model Monsoon Fashion: ಮಾನ್ಸೂನ್‌ ಫ್ಯಾಷನ್‌ನಲ್ಲಿ ಮಾಡೆಲ್‌ ಸನ್ನಿಧಿಯ ಸಿಂಪಲ್‌ ಲುಕ್ಸ್!

Ismail Haniyeh Killing
ವಿದೇಶ27 mins ago

Ismail Haniyh Killing: ಇಸ್ಮಾಯಿಲ್‌ ಹನಿಯೆಹ್‌ ಹತ್ಯೆಗೆ ನಡೆದಿತ್ತಾ ಮಾಸ್ಟರ್‌ ಪ್ಲ್ಯಾನ್? ತಿಂಗಳ ಹಿಂದೆಯೇ ಗೆಸ್ಟ್‌ಹೌಸ್‌ನಲ್ಲಿ‌ ಇಡಲಾಗಿತ್ತಾ ಬಾಂಬ್‌?

Paris Olympics
ಕ್ರೀಡೆ32 mins ago

Paris Olympics: ಆರ್ಚರಿ ಪ್ರೀ ಕ್ವಾರ್ಟರ್‌ನಲ್ಲಿ ನಾಳೆ ಭಾರತದ ದೀಪಿಕಾ ಕುಮಾರಿ-ಭಜನ್ ಕೌರ್ ಕಣಕ್ಕೆ

BBMP Property Tax
ಪ್ರಮುಖ ಸುದ್ದಿ1 hour ago

BBMP Property Tax: ಆಸ್ತಿ ತೆರಿಗೆ ಒನ್‌ ಟೈಮ್‌ ಸೆಟ್ಲ್‌ಮೆಂಟ್‌ಗೆ ಮತ್ತೆ 1 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಿದ ಬಿಬಿಎಂಪಿ

Love Case
ಬಳ್ಳಾರಿ2 hours ago

Love case : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

thawar chand gehlot siddaramaiah Governor versus state
ಪ್ರಮುಖ ಸುದ್ದಿ2 hours ago

Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

Viral Video
Latest2 hours ago

Viral Video: ಥೋ! ಈ ಮುದುಕರಿಗೆ ಈ ವಯಸ್ಸಲ್ಲಿ ಏನೆಲ್ಲ ಚಪಲ ನೋಡಿ! ಹಿಂದೆಂದೂ ಕಂಡಿರದಂಥ ವಿಡಿಯೊ!

Paris Olympics
ಕ್ರೀಡೆ2 hours ago

Paris Olympics: ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಕ್ವಾರ್ಟರ್​ ಫೈನಲ್​ ತಲುಪಿದ ಧೀರಜ್‌- ಅಂಕಿತಾ ಜೋಡಿ

intel layoffs
ವಿದೇಶ2 hours ago

Intel Layoffs: ಆರ್ಥಿಕ ಬಿಕ್ಕಟ್ಟು- ಇಂಟೆಲ್‌ ಕಂಪನಿಯಿಂದ 18,000 ಉದ್ಯೋಗಿಗಳು ವಜಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌