Murder case : ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಕಿರಾತಕ - Vistara News

ಬೆಂಗಳೂರು

Murder case : ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಕಿರಾತಕ

Murder case : ಕೌಟುಂಬಿಕ ಕಲಹದಿಂದಾಗಿ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

Murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Murder case) ಮತ್ತೊಂದು ಭೀಕರ ಹತ್ಯೆ ನಡೆದಿದೆ. ಪತಿಯಿಂದಲೇ ಪತ್ನಿಯ ಕೊಲೆಯಾಗಿದೆ. ಫಾತಿಮಾ‌ (34) ಕೊಲೆಯಾದವರು. ಪತಿ ತಬ್ರೇಜ್ ಪಾಷಾ ಆರೋಪಿಯಾಗಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಲವು ದಿನಗಳಿಂದ ಇಬ್ಬರ ಮಧ್ಯೆ ಜಗಳ‌ ಆಗಿತ್ತು. ಕೌಟುಂಬಿಕ ವಿಚಾರವಾಗಿ ಆಗಾಗ ಜಗಳ ನಡೆಯುತ್ತಲೇ ಇತ್ತು. ಅದೇ ರೀತಿ ಇಂದು ಬೆಳಗ್ಗೆ ಕೂಡ ಇಬ್ಬರ ಮಧ್ಯೆ ಜಗಳ ಶುರುವಾಗಿತ್ತು. ಶುಕ್ರವಾರ ಮನೆಗೆ ನುಗ್ಗಿದ ತಬ್ರೇಜ್‌, ಏಕಾಏಕಿ ಫಾತಿಮಾ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಬೆಳಗ್ಗೆ 8.30ರ ಸುಮಾರಿಗೆ ಪತ್ನಿ ಫಾತಿಮಾಗೆ ಚಾಕು ಇರಿದು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪರಾರಿ ಆಗಿರುವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ಹಂತಕನ ಓಡಾಟ

ಪತ್ನಿಯನ್ನು ಕೊಲ್ಲಲು ಮನೆಗೆ ಬಂದಿದ್ದ ತಬರೇಜ್‌ನಾ ಓಡಾಟವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಮಾಯಕನಂತೆ ಮನೆಗೆ ಬರುವ ತಬರೇಜ್ ಯಾರಿಗೂ ಡೌಟ್ ಬಾರದಂತೆ ರಸ್ತೆಯಲ್ಲಿ ಬೈಕ್ ಬಿಟ್ಟು ಸೈಲೆಂಟ್ ಆಗಿ ಒಳಗೆ ನುಗ್ಗಿದ್ದ. ಬಳಿಕ ಚಾಕು ತೆಗೆದು ಹತ್ಯೆ ಮಾಡಿ, ಚಾಕುವನ್ನು ಕೈನಲ್ಲಿಯೇ ಹಿಡಿದು ಹೊರ ಬಂದಿದ್ದಾನೆ. ಬಳಿಕ ಬೈಕ್ ಏರಿ ಎಸ್ಕೇಪ್ ಆಗಿದ್ದಾನೆ.

ಅಂಗವಿಕಲ ತಾಯಿ ಮುಂದೆಯೇ ಮಗಳ ಬರ್ಬರ ಹತ್ಯೆ

ಐದು ವರ್ಷಗಳ ಹಿಂದೆಯೇ ಈ ದಂಪತಿ ದೂರವಾಗಿದ್ದರು. ಆರೋಪಿ ತಬ್ರೇಜ್ ಪಾಷಾ ಕಳ್ಳತನ ಕೇಸ್, ಗಾಂಜಾ ಕೇಸ್‌ನಲ್ಲಿ ಭಾಗಿಯಾಗಿದ್ದ. ಇತ್ತ ಅಂಗವಿಕಲ ತಾಯಿಯೊಂದಿಗೆ ಇಬ್ಬರು ಮಕ್ಕಳ ಜತೆ ಫಾತಿಮಾ ವಾಸವಿದ್ದಳು. ಆದರೂ ಆಗಾಗ ಮನೆಗೆ ಬಂದು ಜಗಳ ಮಾಡುತ್ತಿದ್ದ. ಇತ್ತೀಚೆಗೆ ರಸ್ತೆಯೊಂದರ ಬಳಿ ಅಡ್ಡ ಹಾಕಿ ಜಗಳ ತೆಗೆದಿದ್ದ ತಬ್ರೇಜ್‌, ಕೊಲೆ ಮಾಡುತ್ತಿನಿ ಎಂದು ಹೇಳಿಕೊಂಡು ಓಡಾಡುತ್ತಿದ್ದ. ಹೀಗಾಗಿ ಫಾತಿಮಾ ತಾಯಿ, ತಬ್ರೇಜ್‌ ಏನಾದರೂ ಮಾಡುತ್ತಾನೆ ಎಂದೇ ಮನೆಗೆ ಸಿಸಿಟಿವಿ ಅಳವಡಿಸಿದ್ದರು. ಇಂದು ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದು ಜಗಳ ತೆಗೆದಿದ್ದ ತಬ್ರೇಜ್ ಪಾಷ, ಇಬ್ಬರು ಮಕ್ಕಳನ್ನು ಹೊರಗೆ ಕಳಿಸಿದ್ದ. ತಾಯಿಯ ಮುಂದೆಯೇ ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!

ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಹಾಡಹಗಲೆ ಯುವಕನ ಬರ್ಬರ ಹತ್ಯೆ (Murder case) ನಡೆದಿದೆ. ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಘಟನೆ ನಡೆದಿದೆ. ಅಜಿತ್ ಕುಮಾರ್‌ (25) ಕೊಲೆಯಾದವನು.

ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು, ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಲೆ ಕೇಸ್‌ನಲ್ಲಿ ಆರೋಪಿಯಾಗಿದ್ದ ಅಜಿತ್‌

ಬ್ಲಡ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಅಜಿತ್‌, 2022ರಲ್ಲಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸಂಜೆ 4:15ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ ಅಜಿತ್ ಮೇಲೆ ಏಕಾಏಕಿ ಹಂತಕರ ಗ್ಯಾಂಗ್‌ ಅಟ್ಯಾಕ್‌ ಮಾಡಿದೆ. ಮಚ್ಚು ಬೀಸಿದ ರಭಸಕ್ಕೆ ಅಜಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶೇಷಾದ್ರಿಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಜಿತ್ ಹಾಗೂ ಸೋದರ ಕಾರ್ತಿಕ್ ಇಬ್ಬರು ಗಣೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಏರಿಯಾದಲ್ಲಿ ನಾನೇ ಡಾನ್ ಎಂದು ಅಜಿತ್‌ ಮೆರೆಯುತ್ತಿದ್ದ. ಸಮಯ ಕಾದು ನೋಡಿ ಎದುರಾಳಿಗಳು ಸೇಡು ತೀರಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

Education News : ಇಂದಿನಿಂದ (ಆ.2) ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರುವಾಗಿದ್ದು, ಸೂಕ್ತ ದಾಖಲೆಗಳೊಂದಿಗೆ ಶಿಕ್ಷಕರು ಕೌನ್ಸೆಲಿಂಗ್‌ ಪ್ರಕ್ರಿಯೆಯಲ್ಲಿ (Teachers Transfer) ಭಾಗಿಯಾಗಬಹುದು.

VISTARANEWS.COM


on

By

Teacher Transfer Counselling
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಶಿಕ್ಷಕರು ಹಾಗೂ ತತ್ಸಮಾನ ವೃಂದದ 2023-24ನೇ ಸಾಲಿನ ಜಿಲ್ಲೆಯೊಳಗಿನ ಕೋರಿಕೆ, ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ (Teachers Transfer) ಶುಕ್ರವಾರದಿಂದ ಆರಂಭವಾಗಿದೆ.

2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು (Teachers Transfer) ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರಿಗೆ ವರ್ಗಾವಣೆ (Education News) ಕೌನ್ಸೆಲಿಂಗ್‌ ಶುರುವಾಗಿದೆ. ಆಗಸ್ಟ್ 02 ರಿಂದ 12ರವರೆಗೆ ಮೈಸೂರು ವಿಭಾಗದೊಳಗಿನ ಅಂತರ್ ಜಿಲ್ಲಾ ಕೋರಿಕೆ/ ಪರಸ್ಪರ ವರ್ಗಾವಣೆಯ ಕೌನ್ಸೆಲಿಂಗ್ (Teacher Transfer Counselling) ನಡೆಯಲಿದೆ.

ಪ್ರಾಥಮಿಕ ಶಿಕ್ಷಕರಿಗೆ ಆಗಸ್ಟ್‌ 2ರಿಂದ 5ರವರೆಗೆ ಹಾಗೂ ಆಗಸ್ಟ್‌ 6ರಿಂದ 8ರವರೆಗೆ ಪ್ರೌಢ ಶಿಕ್ಷಕರ ಸಾಮಾನ್ಯ ಕೋರಿಕೆಯ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್‌ 12ರಂದು ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಕೌನ್ಸೆಲಿಂಗ್‌ ಸಂಬಂಧಿಸಿದ ವೇಳಾಪಟ್ಟಿಯನ್ವಯ ಶಿಕ್ಷಕರು ಸೂಕ್ತ ದಾಖಲೆಗಳೊಂದಿಗೆ ಆಯಾಯ ದಿನಾಂಕದಂದು ಹಾಜರಾಗಬೇಕು.

Teacher Transfer Counselling
Teacher Transfer Counselling

ಇನ್ನೂ ರಾಯಚೂರಿನಲ್ಲೂ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರ ಹಂತದ ವರ್ಗಾವಣೆಗೆ ಆಗಸ್ಟ್ 2ರಿಂದ 8ರವರೆಗೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕೌನ್ಸೆಲಿಂಗ್‌ ನಡೆಯಲಿದೆ.

ಇದನ್ನೂ ಓದಿ: KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

ನೇಮಕಾತಿ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ ಪರಿಷ್ಕೃತ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ‌ ಎಂಜಿನಿಯರ್ ಹುದ್ದೆಗಳ‌ ನೇಮಕಕ್ಕೆ ಆಗಸ್ಟ್ 11ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಜು.20ರಂದು ಪ್ರಾಧಿಕಾರ ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಗೆ ಗೈರಾದವರಿಗೆ ಈ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ.

ಬಿಎಂಟಿಸಿ (ನಾನ್ ಎಚ್ಕೆ) ಪರೀಕ್ಷೆ ಸೆ.1ರಂದು, ಪಿಎಸ್ಐ ಪರೀಕ್ಷೆ ಸೆ.22ರಂದು, ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಗೆ ಕಡ್ಡಾಯ ಕನ್ನಡ ಪರೀಕ್ಷೆ ಸೆ.29ರಂದು ನಡೆಯಲಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪ್ರಮುಖ ಪರೀಕ್ಷೆ ಅಕ್ಟೋಬರ್ 27ರಂದು ನಡೆಸಲಾಗುವುದು. ಅಭ್ಯರ್ಥಿಗಳು ಪರಿಷ್ಕೃತ ವೇಳಾ ಪಟ್ಟಿ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಮೇಲಿಂದ ಮೇಲೆ ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿ ಪಡೆಯಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kannada New Movie: ಟೀಸರ್‌ನಲ್ಲೇ ಮೋಡಿ ಮಾಡಿದ ಕನ್ನಡ ಚಿತ್ರ ʼಕಪಟಿʼ

Kannada New Movie: ಡಿ. ಪಿಕ್ಚರ್ಸ್ ಲಾಂಛನದಲ್ಲಿ ದಯಾಳ್ ಪದ್ಮನಾಭನ್ ನಿರ್ಮಿಸಿರುವ, ರವಿಕಿರಣ್ ಹಾಗೂ ಚೇತನ್ ಎಸ್‌.ಪಿ. ಅವರ ಜಂಟಿ ನಿರ್ದೇಶನದ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಕಪಟಿ” ಚಿತ್ರದ ಟೀಸರ್ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಟೀಸರ್ ಅನಾವರಣ ಮಾಡಿದರು.

VISTARANEWS.COM


on

Kapati Kannada movie Teaser released
Koo

ಬೆಂಗಳೂರು: ಡಿ. ಪಿಕ್ಚರ್ಸ್ ಲಾಂಛನದಲ್ಲಿ ದಯಾಳ್ ಪದ್ಮನಾಭನ್ ನಿರ್ಮಿಸಿರುವ, ರವಿಕಿರಣ್ ಹಾಗೂ ಚೇತನ್ ಎಸ್‌.ಪಿ. ಅವರ ಜಂಟಿ ನಿರ್ದೇಶನದ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಕಪಟಿ” ಚಿತ್ರದ ಟೀಸರ್ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಟೀಸರ್ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು (Kannada New Movie) ಮಾತನಾಡಿದರು.

ಇದು ನಮ್ಮ ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹನ್ನೆರಡನೇ ಚಿತ್ರ. ಹನ್ನೆರಡು ಚಿತ್ರಗಳಲ್ಲಿ ಹತ್ತು ಕನ್ನಡ ಹಾಗೂ ಎರಡು ತಮಿಳು ಚಿತ್ರಗಳು. ಹನ್ನೊಂದು ಚಿತ್ರಗಳನ್ನು ನಾನೇ ನಿರ್ಮಿಸಿ, ನಿರ್ದೇಶನವನ್ನೂ ಮಾಡಿದ್ದೇನೆ. ಆದರೆ ಈ ಚಿತ್ರವನ್ನು ನಾನು ನಿರ್ಮಾಣ ಮಾತ್ರ ಮಾಡಿದ್ದೇನೆ. ರವಿಕಿರಣ್ ಹಾಗೂ ಚೇತನ್ ಎಸ್‌.ಪಿ. ನಿರ್ದೇಶನ ಮಾಡಿದ್ದಾರೆ. ಇವರು ಹಿಂದೆ “ಕೋಮ” ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಇವರು ಬಂದು ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. “ಡಾರ್ಕ್ ನೆಟ್” ಕಥಾಹಂದರವನ್ನು ಈ ಚಿತ್ರ ಹೊಂದಿದೆ.

ಕನ್ನಡದಲ್ಲಿ “ಗುಲ್ಟು” ಚಿತ್ರದ ನಂತರ ಈ ಜಾನರ್‌ನ ಚಿತ್ರ ಬಂದಿರಲಿಲ್ಲ. ಇನ್ನು ಕಂಟೆಂಟ್ ಓರಿಯಂಟೆಡ್ ಚಿತ್ರಗಳಿಂದ ಯಾವತ್ತು ಯಾರಿಗೂ ನಷ್ಟವಾಗಲ್ಲ ಎಂದು ನಂಬಿರುವವನು ನಾನು. ಆದರೆ ಸ್ವಲ್ಪ ತಾಳ್ಮೆ ಇರಬೇಕು ಅಷ್ಟೇ. ಅದಕ್ಕೆ ಉದಾಹರಣೆ ನನ್ನ ಚಿತ್ರಗಳು. “ಕಪಟಿ” ಚಿತ್ರವನ್ನು ಇತ್ತೀಚೆಗೆ ಸ್ನೇಹಿತರ ಜತೆ ನೋಡಿದೆ. ಚೆನ್ನಾಗಿ ಬಂದಿದೆ‌. ಚಿತ್ರ ಆಗಸ್ಟ್ 23 ರಂದು ಬಿಡುಗಡೆಯಾಗಲಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ದಯಾಳ್ ಪದ್ಮನಾಭನ್.

ಸುಮಾರು ಏಳು ವರ್ಷಗಳ (ಕೋಮ ಚಿತ್ರದ) ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು. ಕನ್ನಡದಲ್ಲಿ ತೀರ ವಿರಳ ಎನ್ನಬಹುದಾದ ಕಥಾಹಂದರ ಹೊಂದಿರುವ ಚಿತ್ರವಿದು. ಈ ಕಥೆಯನ್ನು ದಯಾಳ್ ಅವರ ಬಳಿ ಹೇಳಿದ ತಕ್ಷಣ ಒಪ್ಪಿ ನಿರ್ಮಾಣಕ್ಕೆ ಮುಂದಾದರು. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದು ನಿರ್ದೇಶಕದ್ವಯರಾದ ರವಿಕಿರಣ್ ಹಾಗೂ ಚೇತನ್ S P ತಿಳಿಸಿದರು.

ನಾನು ಚಿತ್ರರಂಗವನ್ನು ಬಿಟ್ಟು ಉಡುಪಿಯಲ್ಲಿ ನೆಲೆಸಿದ್ದೆ. ನಿರ್ದೇಶಕರು ಹೇಳಿದ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು ಬಹು ದಿನಗಳ ನಂತರ ಮತ್ತೇ ನಟಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ ಎಂದರು “ಜಟ್ಟ” ಚಿತ್ರದ ಖ್ಯಾತಿಯ ಸುಕೃತ ವಾಗ್ಲೆ.

ಪ್ರಮುಖಪಾತ್ರದಲ್ಲಿ ನಟಿಸಿರುವ ದೇವ್ ದೇವಯ್ಯ ಹಾಗೂ ಸಾತ್ವಿಕ್ ಕೃಷ್ಣನ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿ, ಅವಕಾಶ ನೀಡಿದ ನಿರ್ಮಾಪಕ ದಯಾಳ್ ಅವರಿಗೆ ಧನ್ಯವಾದ ಹೇಳಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಜೋಹನ್ ಮಾತನಾಡಿದರು.

ಇದನ್ನೂ ಓದಿ: KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

Continue Reading

ಕರ್ನಾಟಕ

CM Siddaramaiah: ರಾಜಭವನದ ದುರ್ಬಳಕೆ ಮಾಡಿ ಚುನಾಯಿತ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಪ್ರಯತ್ನ: ಸಿಎಂ ಕಿಡಿ

CM Siddaramaiah: ಕೆ. ಜೆ.ಅಬ್ರಹಾಂ ಒಬ್ಬ ಬ್ಲ್ಯಾಕ್ ಮೇಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾನೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

CM Siddaramaiah
Koo

ಮೈಸೂರು: ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ರಾಜಭವನದ ದುರ್ಬಳಕೆ ಮಾಡಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೋಕಾಸ್ ನೋಟಿಸ್‌ ಕೊಟ್ಟಿರುವುದು ಕಾನೂನುಬಾಹಿರವಾಗಿದೆ, ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಕಿಡಿಕಾರಿದರು.

ನೋಟಿಸ್‌ ಹಿಂಪಡೆಯಲು ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರ

ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿರುವ ಸಂದರ್ಭದಲ್ಲಿ ಏನು ಬೆಳವಣಿಗಳಾಗಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನೆನ್ನೆ ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟಿಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟಿಸನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.

ಇದನ್ನೂ ಓದಿ | BBMP Property Tax: ಆಸ್ತಿ ತೆರಿಗೆ ಒನ್‌ ಟೈಮ್‌ ಸೆಟ್ಲ್‌ಮೆಂಟ್‌ಗೆ ಮತ್ತೆ 1 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಿದ ಬಿಬಿಎಂಪಿ

ಯಾವುದೇ ಅಪರಾಧ ಮಾಡಿಲ್ಲ

ಕೆ. ಜೆ.ಅಬ್ರಹಾಂ ಒಬ್ಬ ಬ್ಲ್ಯಾಕ್ ಮೇಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾನೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ. ಜುಲೈ 26ರಂದು ಬೆಳಗ್ಗೆ 11.30 ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟಿಸ್‌ ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಏನೂ ನೋಡದೇ ಆತುರವಾಗಿ ಕೆಲಸ ಮಾಡಿದ್ದಾರೆ. ಅಂದೇ ನೋಟಿಸ್‌ ನೀಡಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2 ಗಂಟೆಗೆ ನೋಟಿಸನ್ನು ಆತುರವಾಗಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕಳೆದ ಸರ್ಕಾರದ ಸಚಿವರ ಮೇಲಿನ ದೂರಿನ ಬಗ್ಗೆ ಕ್ರಮ ಏಕಿಲ್ಲ

ಶಶಿಕಲಾ ಜೊಲ್ಲೆ , ಮುರುಗೇಶ್ ನಿರಾಣಿ , ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಏನೂ ಇಲ್ಲದೆ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು.

ಯಾವುದನ್ನೂ ಪರಿಗಣಿಸದೆ ಆತುರವಾಗಿ ನೋಟಿಸ್‌

ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿ ಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ. ಮುಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ. ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ. ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ ಎಂದರು.

ವರಿಷ್ಠರಿಗೆ ಮನವರಿಕೆ‌

ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಡಲಾಗಿದೆ. ಅವರಿಗೆ ವಸ್ತುಸ್ಥಿತಿ ಅರ್ಥವಾಗಿದೆ ಎಂದರು.

ಆರ್.ಅಶೋಕ್ ಹೆದರಿರಬೇಕು

ರಾಜ್ಯಪಾಲರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹೆದರಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು. ಕಾನೂನಿನ ರೀತ್ಯಾ ಅವರು ನೋಟಿಸ್ ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ ಎಂದರು.

ಕುಮಾರಸ್ವಾಮಿ ಸ್ವಇಚ್ಛೆಯಿಂದ ಪಾದಯಾತ್ರೆ ಮಾಡುತ್ತಿಲ್ಲ

ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ಅಭ್ಯಂತರವಿಲ್ಲ ಎಂದ ಮುಖ್ಯಮಂತ್ರಿಗಳು, ಕೇಂದ್ರ ಸಚಿವ ಹಾಗೂ ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದರು. ಮಳೆ ಹೆಚ್ಚಾಗಿದೆ, ಜಲಾಶಯಗಳು ತುಂಬಿ ಪ್ರವಾಹ ಬಂದಿದೆ, ಅದರ ಕಡೆಗೆ ಗಮನ ನೀಡಬೇಕೆಂದು ಹೇಳಿದರು. ಈಗ ಅದು ಮರೆತುಹೋಯಿತೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಅಂದರೆ ಅವರ ಸ್ವ ಇಚ್ಛೆಯಿಂದ ಮಾಡುತ್ತಿಲ್ಲ ಎಂದಾಯಿತು ಎಂದರು.

ಮಳೆಯಿಂದಾದ ಹಾನಿಯ ಬಗ್ಗೆ ವರದಿ

ಮಳೆಯಿಂದ ಮನೆ ಬಿದ್ದಿರುವುದು, ರಸ್ತೆ ಹಾಳಾಗಿರುವುದು, ಸೇತುವೆಗಳು, ವಿದ್ಯುತ್ ಕಂಬಗಳು ಬಿದ್ದಿರುವುದ್ದರ ಬಗ್ಗೆ ವರದಿ ತರಿಸುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹಾನಿಗೊಳಗಾದ ಮನೆಗಳ ನಿರ್ಮಾಣ

ಮನೆಗಳನ್ನು ಕಟ್ಟಿಕೊಡುವುದು ಹಾಗೂ ಪರಿಹಾರ ಕೊಡುತ್ತೇವೆ ಎಂದು ಕಂದಾಯ ಸಚಿವರು ಹೇಳಿರುವುದು ಗೊಂದಲ ಮೂಡಿಸಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಎಷ್ಟು ಕೊಡಬೇಕೋ ಅಷ್ಟು ಪರಿಹಾರ ನೀಡಿ ಮನೆಯನ್ನೂ ಕಟ್ಟಿಕೊಡಲಾಗುವುದು ಎಂದರು.

ಇದನ್ನೂ ಓದಿ | Viral Video: ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

ನಾಳೆ ಬೆಳಗ್ಗೆ ನಂಜನಗೂಡಿಗೆ ತೆರಳುತ್ತಿದ್ದು, ಇಂದು ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಅನಾಹುತಗಳನ್ನು ಪರಿಶೀಲಿಸಲಾಗುವುದು. ಪ್ರವಾಹ ಬಂದಿರುವ ಸ್ಥಳಗಳಿಗೆ ಎಲ್ಲಾ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಜನರನ್ನು ಭೇಟಿ ಮಾಡುತ್ತಿದ್ದಾರೆ ಎಂದರು.

Continue Reading

ಬಾಗಲಕೋಟೆ

Road Accident : ಜವರಾಯನ ಅಟ್ಟಹಾಸಕ್ಕೆ ಮಸಣ ಸೇರಿದ ಕಾಲೇಜು ವಿದ್ಯಾರ್ಥಿ

Road Accident : ಕೋಲಾರದಲ್ಲಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್‌ ರನ್‌ ಮಾಡಿ ಬೈಕ್‌ ಸವಾರ ಎಸ್ಕೇಪ್‌ ಆಗಿದ್ದಾನೆ.

VISTARANEWS.COM


on

By

Road Accident
Koo

ಕೋಲಾರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ (Road Accident) ಸಂಭವಿಸಿದೆ. ಜವರಾಯನ ಅಟ್ಟಹಾಸಕ್ಕೆ ವಿದ್ಯಾರ್ಥಿ ಮಸಣ ಸೇರಿದ್ದಾನೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ತಮಟಂಪಲ್ಲಿ ಗ್ರಾಮದ ಭಾರ್ಗವ್ ರೆಡ್ಡಿ (18) ಮೃತ ದುರ್ದೈವಿ. ಭಾರ್ಗವ್‌ ಚಿಂತಾಮಣಿ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಬಸ್ ಮಿಸ್ ಆದ ಕಾರಣ ದ್ವಿಚಕ್ರ ವಾಹನದಲ್ಲಿ ಅಡ್ಡಗಲ್ ಗ್ರಾಮಕ್ಕೆ ಬರುತ್ತಿದ್ದ. ಈ ವೇಳೆ ಬಸ್‌ವೊಂದು ಬೈಕ್‌ಗೆ ಗುದ್ದಿದೆ. ಪರಿಣಾಮ ಕೆಳಗೆ ಬಿದ್ದ ಭಾರ್ಗವ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.

ಮಗನ ಮೃತ ದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Love case : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

ಹಿಟ್‌ ಆ್ಯಂಡ್‌ ರನ್‌ ಮಾಡಿ ಎಸ್ಕೇಪ್‌ ಆದ ಬೈಕ್‌ ಸವಾರ

ಬೆಂಗಳೂರು: ಮಕ್ಕಳನ್ನು ರಸ್ತೆಯಲ್ಲಿ ಆಟವಾಡಲು ಬಿಡುವ ಪೋಷಕರೇ ಎಚ್ಚರವಾಗಿರಿ. ಯಾಕೆಂದರೆ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಟ್‌ ಆ್ಯಂಡ್‌ ರನ್‌ ಮಾಡಿ ಎಸ್ಕೇಪ್‌ ಆಗಿದ್ದಾನೆ. ಸೈಕಲ್ ತುಳಿಯುತ್ತಾ ಆಟವಾಡುತ್ತಿದ್ದ ಬಾಲಕನಿಗೆ ಗುದ್ದಿ ಕಾಲ್ಕಿತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಬನಶಂಕರಿ 6ನೇ ಹಂತದಲ್ಲಿ ಈ ಅಪಘಾತ ನಡೆದಿದೆ. ನಂಬರ್ ಪ್ಲೇಟ್‌ ಇಲ್ಲದ ಆರ್‌ಎಕ್ಸ್ ಬೈಕ್‌ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯ ಮುಂಭಾಗದ ರಸ್ತೆಯಲ್ಲಿ ಸೈಕಲ್ ತುಳಿಯುತ್ತಿದ್ದ ಬಾಲಕನಿಗೆ ವೇಗವಾಗಿ ಬಂದು ಗುದ್ದಿದ್ದಾನೆ.

ಬಾಲಕ ರಸ್ತೆಯಲ್ಲೇ ಬಿದ್ದು ಅಳುತ್ತಿದ್ದರು ಬೈಕ್‌ ಸವಾರ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕಳೆದ ಆಗಸ್ಟ್ 1ರ ರಾತ್ರಿ 8 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಆರೋಪಿಗಾಗಿ ದಕ್ಷಿಣ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕುರಿಗಳ‌ ಮೇಲೆ ಹರಿದ ಲಾರಿ, ಸ್ಥಳದಲ್ಲೇ 33 ಕುರಿಗಳ ಮಾರಣ

ಲಾರಿಯೊಂದು ಹರಿದ ಪರಿಣಾಮ ಸ್ಥಳದಲ್ಲೇ 33 ಕುರಿಗಳು ಮೃತಪಟ್ಟಿವೆ. ಬಾಗಲಕೋಟೆಯ ಕಡಪಟ್ಟಿ ಫಾರ್ಮ್ ಹೌಸ್ ಬಳಿ ನಸುಕಿನ ವೇಳೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಳಕಲ್ಲನ ಎನ್‌ಹೆಚ್ 50 ರಲ್ಲಿರುವ ಕಡಪಟ್ಟಿ ಫಾರ್ಮ್ ಹೌಸ್‌ನಿಂದ ಹುನಗುಂದದಿಂದ ಹನುಮಸಾಗರ ಕಡೆ ಹೊರಟಿದ್ದಾಗ ಅಪಘಾತ ನಡೆದಿದೆ. ಹುನಗುಂದದಿಂದ ಕುಷ್ಟಗಿ ಕಡೆ ಹೊರಟಿದ್ದ ಲಾರಿಯು ಹಿಂದಿನಿಂದ ವೇಗವಾಗಿ ಬಂದು ಕುರಿಗಳ ಹರಿದಿದೆ. ಕುರಿಗಾಹಿ ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನುಜ್ಜುಗುಜ್ಜಾದ 33 ಕುರಿಗಳು, 30ಕ್ಕೂ ಹೆಚ್ಚು ಕುರಿಗಳಿಗೆ ಗಾಯವಾಗಿದೆ.

ರಾಯಣ್ಣ ಮಲ್ಲಪ್ಪ ಕೊಡೆಕಲ್ಲ (30) ಕುರಿಗಾಹಿ ಮಾಲಿಕ ಗಾಯಗೊಂಡಿದ್ದಾನೆ. ರಾಯಣ್ಣ ಮೂಲತಃ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಬೂದಿಹಾಳ ಗ್ರಾಮದ ನಿವಾಸಿಯಾಗಿದ್ದಾನೆ. ಹರಿಯಾಣ ಪಾಸಿಂಗ್ ಇದ್ದು, ರಾಜಸ್ಥಾನ ಮೂಲದ ಅತ್ತಾರಖಾನ್ (25) ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಳಕಲ್ಲ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rajeev Chandrasekhar
ದೇಶ3 mins ago

Rajeev Chandrasekhar: 10 ವರ್ಷಗಳಲ್ಲಿ 80 ಕೋಟಿ ಮಂದಿ ಬಡತನದಿಂದ ಹೊರಗೆ; ವಿಶ್ವಸಂಸ್ಥೆಯಲ್ಲೇ ಮೋದಿ ಆಡಳಿತಕ್ಕೆ ಪ್ರಶಂಸೆ

Teacher Transfer Counselling
ಬೆಂಗಳೂರು10 mins ago

Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

Kapati Kannada movie Teaser released
ಕರ್ನಾಟಕ23 mins ago

Kannada New Movie: ಟೀಸರ್‌ನಲ್ಲೇ ಮೋಡಿ ಮಾಡಿದ ಕನ್ನಡ ಚಿತ್ರ ʼಕಪಟಿʼ

Viral News
ವೈರಲ್ ನ್ಯೂಸ್29 mins ago

Viral News: ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ಗೆ ಕ್ರೀಡಾ ಸಚಿವೆ ಕಿಸ್‌ ಕೊಟ್ಟಿದ್ದು ಸಂಸ್ಕೃತಿಯ ಭಾಗ; ಸಮರ್ಥಿಸಿಕೊಂಡ ನೆಟ್ಟಿಗರು

IND vs SL ODI
ಪ್ರಮುಖ ಸುದ್ದಿ35 mins ago

IND vs SL ODI : ಲಂಕಾ ವಿರುದ್ಧ ಪಂದ್ಯದ ವೇಳೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೈದಾನಕ್ಕೆ ಇಳಿದ ರೋಹಿತ್​ ಪಡೆ

Election Bond
ದೇಶ36 mins ago

Election Bond: ಚುನಾವಣಾ ಬಾಂಡ್‌ ಹಗರಣದ ಬಗ್ಗೆ SIT ತನಿಖೆಗೆ ಆಗ್ರಹ; ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌

CM Siddaramaiah
ಕರ್ನಾಟಕ53 mins ago

CM Siddaramaiah: ರಾಜಭವನದ ದುರ್ಬಳಕೆ ಮಾಡಿ ಚುನಾಯಿತ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಪ್ರಯತ್ನ: ಸಿಎಂ ಕಿಡಿ

Nita Ambani Beauty Secrets
ಆರೋಗ್ಯ56 mins ago

Nita Ambani Beauty Secrets: ನೀತಾ ಅಂಬಾನಿ ನಿತ್ಯವೂ ಕುಡಿಯುವ ಆರೋಗ್ಯಕರ ಮ್ಯಾಜಿಕ್‌ ಡ್ರಿಂಕ್‌ ಯಾವುದು ಗೊತ್ತೇ? ನಾವೂ ಕುಡಿಯಬಹುದು!

Viral Video
Latest58 mins ago

Viral Video: ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

Road Accident
ಬಾಗಲಕೋಟೆ1 hour ago

Road Accident : ಜವರಾಯನ ಅಟ್ಟಹಾಸಕ್ಕೆ ಮಸಣ ಸೇರಿದ ಕಾಲೇಜು ವಿದ್ಯಾರ್ಥಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌