BJP-JDS Padayatra: ಮೈಸೂರು ಚಲೋಗೆ ಸರ್ಕಾರ ಅನುಮತಿ; ನಾಳೆ ಬೆಳಗ್ಗೆ ಚಾಲನೆ, ಪಾದಯಾತ್ರೆ ಮಾರ್ಗದ ವಿವರ ಇಲ್ಲಿದೆ - Vistara News

ಕರ್ನಾಟಕ

BJP-JDS Padayatra: ಮೈಸೂರು ಚಲೋಗೆ ಸರ್ಕಾರ ಅನುಮತಿ; ನಾಳೆ ಬೆಳಗ್ಗೆ ಚಾಲನೆ, ಪಾದಯಾತ್ರೆ ಮಾರ್ಗದ ವಿವರ ಇಲ್ಲಿದೆ

BJP-JDS Padayatra: ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ಶನಿವಾರ ಬೆಳಗ್ಗೆ 9.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಚಾಲನೆ ನೀಡಲಾಗುತ್ತದೆ.

VISTARANEWS.COM


on

BJP-JDS Padayatra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. “ಭ್ರಷ್ಟ ಕಾಂಗ್ರೆಸ್ ತೊಲಗಿಸಿ” ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ (BJP-JDS Padayatra) ಶನಿವಾರ ಬೆಳಗ್ಗೆ 9.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಚಾಲನೆ ನೀಡಲಾಗುತ್ತದೆ. ಏಳು ದಿನಗಳ ಪಾದಯಾತ್ರೆ ಸಾಗುವ ಮಾರ್ಗದ ವಿವರವನ್ನು ಇಲ್ಲಿ ನೀಡಲಾಗಿದೆ.

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವರಾದ ಎಚ್‌.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಲಿದ್ದಾರೆ. ಒಟ್ಟು 124 ಕಿ.ಮೀ ಪಾದಯಾತ್ರೆ ಸಾಗಲಿದ್ದು, ಸಮಾರೋಪ ಸಮಾರಂಭ ಸೇರಿ ಒಟ್ಟು ಎಂಟು ದಿನಗಳ ಕಾರ್ಯಕ್ರಮದ ಮಾಹಿತಿ ಇಲ್ಲಿದೆ.

ಪಾದಯಾತ್ರೆ ಸಾಗುವ ವಿವರ

  • ಆ.3- ಕೆಂಗೇರಿಯಿಂದ ಹೊರಟು ಬಿಡದಿಯಲ್ಲಿ ವಾಸ್ತವ್ಯ
  • ಆ.4- ಬಿಡದಿಯಿಂದ ಹೊರಟು ಕೆಂಗಲ್‌ನಲ್ಲಿ ಹಾಲ್ಟ್
  • ಆ.5- ಕೆಂಗಲ್ ನಿಂದ ಹೊರಟು ನಿಡಘಟ್ಟದಲ್ಲಿ ವಾಸ್ತವ್ಯ
  • ಆ.6- ನಿಡಘಟ್ಟದಿಂದ ಹೊರಟು ಮಂಡ್ಯ
  • ಆ.7- ಮಂಡ್ಯದಿಂದ ಹೊರಟು ತೂಬಿನಕೆರೆಯಲ್ಲಿ ವಾಸ್ತವ್ಯ
  • ಆ.8- ತೂಬಿನ ಕೆರೆಯಿಂದ ಹೊರಟು ಶ್ರೀರಂಗಪಟ್ಟಣದಲ್ಲಿ ಹಾಲ್ಟ್
  • ಆ.9- ಶ್ರೀರಂಗಪಟ್ಟಣದಿಂದ ಹೊರಟು ಮೈಸೂರು ಹೊರವಲಯದಲ್ಲಿ ವಾಸ್ತವ್ಯ
  • ಆ.10- ಮೈಸೂರು ಹೊರವಲಯದಿಂದ ಕೇಂದ್ರ ನಾಯಕರ ಜತೆ ಪಾದಯಾತ್ರೆ ಹೊರಟು ಸಮಾರೋಪ ಸಮಾರಂಭದ ವೇದಿಕೆ ತಲುಪುವುದು.

ಶಾಂತಿಯುತವಾಗಿ ಪಾದಯಾತ್ರೆ ನಡೆಸಲು ಅನುಮತಿ: ಪರಮೇಶ್ವರ್

ಬೆಂಗಳೂರು: ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಅವರು ಪಾದಯಾತ್ರೆ ನಡೆಸುತ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ಕೊಡಲು ನಾವು ನಿರ್ಧರಿಸಿದ್ದೇವೆ ಎಂಧೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಇದನ್ನೂ ಓದಿ | Rakshit Shetty: ಯಶವಂತಪುರ ಪೊಲೀಸರ ಮುಂದೆ ಹಾಜರಾದ ನಟ ರಕ್ಷಿತ್‌ ಶೆಟ್ಟಿ, ಕಾಪಿರೈಟ್‌ ಉಲ್ಲಂಘನೆ ವಿಚಾರಣೆ

ನಗರದಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದ ಕಮಿಷನರ್

ನಾಳೆ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಹಿನ್ನೆಲೆ‌ ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿ, ಎಲ್ಲಿಂದ ಯಾವ ರೀತಿ ಪಾದಯಾತ್ರೆ ಮಾಡುತ್ತಾರೋ ಅಂತ ಇನ್ನೂ ಗೊತ್ತಿಲ್ಲ. ನಗರದಲ್ಲಿ ಪ್ರತಿಭಟನೆ, ರ‍್ಯಾಲಿ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರು ಬಂದು ಇದುವರೆಗೂ ಅನುಮತಿ ಕೇಳಿಲ್ಲ. ಪ್ರತಿಭಟನೆಗೆ ಬೆಂಗಳೂರಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿ ಮುನಿಸು ಶಮನ, ಬಿಜೆಪಿ, ಜೆಡಿಎಸ್‌ ಒಗ್ಗೂಡಿ ಪಾದಯಾತ್ರೆ

ನವದೆಹಲಿ/ಬೆಂಗಳೂರು: ಮುಡಾ ಹಗರಣ ಸೇರಿ ಹಲವು ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೈಗೊಳ್ಳಲು ತೀರ್ಮಾನಿಸಿರುವ ಪಾದಯಾತ್ರೆಗೆ (BJP Padayatra) ಸಹಕಾರ ನೀಡುವುದಿಲ್ಲ ಎಂದು ಬಂಡಾಯದ ಬಾವುಟ ಹಾರಿಸಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರ ಮುನಿಸು ಈಗ ಶಮನವಾಗಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವರು ಮಾತುಕತೆ ನಡೆಸಿದ್ದು, “ಬಿಜೆಪಿ ಹಾಗೂ ಜೆಡಿಎಸ್‌ ಒಗ್ಗೂಡಿ ಶನಿವಾರದಿಂದ (ಆಗಸ್ಟ್‌ 3) ಪಾದಯಾತ್ರೆ ಆರಂಭಿಸಲಾಗುತ್ತದೆ” ಎಂದು ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

ದೆಹಲಿಯಲ್ಲಿ ಪ್ರಲ್ಹಾದ್‌ ಜೋಶಿ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದರು. “ಶನಿವಾರದಿಂದ ನಮ್ಮ ಪಾದಯಾತ್ರೆ ಪ್ರಾರಂಭ ಆಗಲಿದೆ. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ. ಮೂಡಾ ಹಾಗೂ ವಾಲ್ಮೀಕಿ ಹಗರಣಗಳು ಇದಕ್ಕೆ ಜ್ವಲoತ ಉದಾಹರಣೆಗಳಾಗಿವೆ. ಕಾಂಗ್ರೆಸ್‌ನವರು ಕೂಡ ಮೂಡಾ ಹಗರಣದ ಬಗ್ಗೆ ಮಾತನಾಡುತ್ತಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಒಟ್ಟಿಗೆ ಪಾದಯಾತ್ರೆ ಕೈಗೊಳ್ಳುತ್ತವೆ. ಕುಮಾರಸ್ವಾಮಿ ಅವರ ಜತೆ ಇದ್ದ ಸಣ್ಣ ಕಮ್ಯುನಿಕೇಷನ್ ಗ್ಯಾಪ್ ಸರಿ ಆಗಿದೆ. ನಾವು ಕುಮಾರಸ್ವಾಮಿ ಅವರ ಹತ್ತಿರ ಮಾತಾಡಿದ್ದೇವೆ. 7 ದಿನಗಳ ಪಾದಯಾತ್ರೆ ಪೂರ್ಣಗೊಳ್ಳಲಿದೆ” ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Woman Deliver Baby in Auto: ಆಸ್ಪತ್ರೆಗೆ ಹೋಗುವಾಗ ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Woman Deliver Baby in Auto: ಆಟೋದಲ್ಲಿ ಹೋಗುತ್ತಿದ್ದಾಗ ಗರ್ಭಿಣಿಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಮಾರ್ಗ ಮಧ್ಯದಲ್ಲಿಯೇ ಆಟೊ ನಿಲ್ಲಿಸಿದ್ದಾನೆ. ನೆರೆಹೊರೆ ಮಹಿಳೆಯರು ಹಾಗೂ ಕುಟುಂಬದ ಸದಸ್ಯರು ಆಟೋ ಸುತ್ತ ಪರದೆ ಕಟ್ಟಿ ಹೆರಿಗೆ ಮಾಡಿಸಿದ್ದಾರೆ.

VISTARANEWS.COM


on

Woman Deliver Baby in Auto
Koo

ರಾಯಚೂರು: ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ವೇಳೆ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ. ಪಟ್ಟಣದ ಸಂತೆ ಬಜಾರ್‌ ರಸ್ತೆಯ ಮನೆಯೊಂದರ ಗರ್ಭಿಣಿಗೆ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ತಕ್ಷಣ ಆಟೋ ಕರೆಸಿದ್ದರು. ಆಟೋದಲ್ಲಿ ಮಹಿಳೆಯನ್ನು ಕೂರಿಸಿಕೊಂಡು ಆಸ್ಪತ್ರೆಗೆ ಹೋಗುವ ವೇಳೆ ಹೆರಿಗೆ ನೋವು ಹೆಚ್ಚಾಗಿದ್ದು, ಈ ವೇಳೆ ಗಂಡು ಮಗುವಿಗೆ ಜನ್ಮ (Woman Deliver Baby in Auto) ನೀಡಿದ್ದಾಳೆ.

ಆಟೋದಲ್ಲಿ ಹೋಗುತ್ತಿದ್ದಾಗ ಗರ್ಭಿಣಿಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಮಾರ್ಗ ಮಧ್ಯದಲ್ಲಿಯೇ ಆಟೊ ನಿಲ್ಲಿಸಿದ್ದಾನೆ. ನೆರೆಹೊರೆ ಮಹಿಳೆಯರು ಹಾಗೂ ಕುಟುಂಬದ ಸದಸ್ಯರು ಆಟೋ ಸುತ್ತ ಪರದೆ ಕಟ್ಟಿ ಹೆರಿಗೆಗೆ ಸಹಕಾರ ನೀಡಿದ್ದಾರೆ. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಆಶಾ ಕಾರ್ಯಕರ್ತೆಯರು ಮಹಿಳೆ ಹಾಗೂ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲು ನೆರವಾಗಿದ್ದಾರೆ.

ಇದನ್ನೂ ಓದಿ | Viral Video: ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

Viral Video: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬಿದ್ದ ಕಬ್ಬಿಣದ ಗೇಟ್; ಶಾಕಿಂಗ್‌ ವಿಡಿಯೊ

Viral Video
Viral Video

ಪುಣೆ : ಮಕ್ಕಳನ್ನು ಮನೆಯ ಹೊರಗೆ ಆಟವಾಡಲು ಬಿಡುವಾಗ ಪೋಷಕರು ಸ್ವಲ್ಪ ಎಚ್ಚರ ವಹಿಸಬೇಕು. ಮಕ್ಕಳನ್ನು ಅವರ ಪಾಡಿಗೆ ಬಿಡಬಾರದು. ಅವರು ಮನೆಯ ಹೊರಗೆ ಆಟವಾಡುತ್ತಿದ್ದರೆ ಅವರ ಕಡೆ ಗಮನ ಕೊಡುತ್ತಿರಬೇಕು. ಇಲ್ಲವಾದರೆ ಇದರಿಂದ ದುರ್ಘಟನೆಗಳು ಸಂಭವಿಸಿ ಮಕ್ಕಳಿಗೆ ಅಪಾಯವಾಗಬಹುದು. ಅಂತಹದೊಂದು ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮೂರುವರೆ ವರ್ಷದ ಬಾಲಕಿಯ ಮೇಲೆ ಭಾರವಾದ ಕಬ್ಬಿಣದ ಗೇಟ್ ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುಣೆಯ ಪಿಂಪ್ರಿ-ಚಿಂಚ್ವಾಡಿಯ ಗಣೇಶ್ ನಗರದ ಬೋಪ್ಖೇಲ್‍ನಲ್ಲಿ ಬುಧವಾರ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ನಾಲ್ಕು ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದರು. ಕೆಲವು ಕ್ಷಣಗಳ ನಂತರ, ಹುಡುಗರಲ್ಲಿ ಒಬ್ಬ ಸೈಕಲ್ ಹೊಂದಿರುವ ಮತ್ತೊಂದು ಹುಡುಗನಿಗೆ ಮನೆಯೊಳಗೆ ಹೋಗಲು ಗೇಟ್ ಅನ್ನು ಹಿಂದಕ್ಕೆ ತಳ್ಳಿದನು. ಹುಡುಗ ಪ್ರವೇಶಿಸಿದಾಗ, ಅವನು ಅದನ್ನು ಲಾಕ್ ಮಾಡಲು ಗೇಟ್ ಅನ್ನು ಮುಂದಕ್ಕೆ ಎಳೆದಿದ್ದಾನೆ. ಇದನ್ನು ನೋಡಿದ ಇಬ್ಬರು ಹುಡುಗಿಯರು ಕಬ್ಬಿಣದ ಗೇಟ್ ಕಡೆಗೆ ಓಡಿ ಬಂದಿದ್ದಾರೆ. ಆಗ ಗೇಟ್ ಆಯತಪ್ಪಿ ಕೆಳಗೆ ಬಿದ್ದಿದೆ. ಆ ವೇಳೆ ಟೆಡ್ಡಿ ಬೇರ್ ಹಿಡಿದಿದ್ದ ಒಬ್ಬ ಹುಡುಗಿ ಸಮಯಕ್ಕೆ ಸರಿಯಾಗಿ ಅಲ್ಲಿಂದ ಜಿಗಿದರೆ, ಗೇಟ್ ಕೆಳಗೆ ಬಿದ್ದು ಇನ್ನೊಬ್ಬ ಹುಡುಗಿ ನಜ್ಜುಗುಜ್ಜಾಗಿದ್ದಾಳೆ.

ಭಯಭೀತರಾದ ಮಕ್ಕಳು ಸಹಾಯಕ್ಕಾಗಿ ಕೂಗುತ್ತಾ ಓಡಿಹೋದರು. ನಂತರ ಅಲ್ಲಿಗೆ ಬಂದ ವ್ಯಕ್ತಿಯೊಬ್ಬರು ಗೇಟ್ ಅನ್ನು ಎತ್ತಿ ಮಗುವನ್ನು ಎತ್ತಿಕೊಂಡು ಓಡಿದ್ದಾರೆ. ವರದಿಗಳ ಪ್ರಕಾರ, ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಪ್ರಾರಂಭವಾಗುವ ಮೊದಲೇ ಅವಳು ಸತ್ತಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

ಮೃತಪಟ್ಟ ಹುಡುಗಿಯನ್ನು ಗಿರಿಜಾ ಗಣೇಶ್ ಶಿಂಧೆ ಎಂದು ಗುರುತಿಸಲಾಗಿದೆ. ಕಟ್ಟಡದ ಮಾಲೀಕರು ಮತ್ತು ನಿವಾಸಿಗಳು ಗೇಟ್ ಸರಿಯಾಗಿರಲಿಲ್ಲ. ಹಾಗಾಗಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ತನಿಖೆಯ ವೇಳೆ ತಿಳಿಸಿದ್ದಾರೆ. ಈ ಘಟನೆಯು ನಿವಾಸಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಕಟ್ಟಡ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Continue Reading

Latest

Mangaluru Train Timings: ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲು; ಪ್ರಯಾಣಿಕರಿಗೆ ಏನು ಲಾಭ?

Mangaluru Train Timings ಮಂಗಳೂರಿನಿಂದ ಬೆಂಗಳೂರಿನ ಯಶವಂತಪುರಕ್ಕೆ ಸಂಚರಿಸುತ್ತಿದ್ದ ನಂ.16576 ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಸಾರ್ವಜನಿಕರು ಬಹುದಿನಗಳಿಂದ ಮನವಿ ಮಾಡುತ್ತಿದ್ದರು. ಇದೀಗ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ ನಂ.16576 ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾಯಿಸಿ ನವೆಂಬರ್ 1ರಿಂದ ಅದು ಜಾರಿಗೆ ಬರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದೆ.

VISTARANEWS.COM


on

Mangaluru Train Timings
Koo


ಬೆಂಗಳೂರು: ವಾರದಲ್ಲಿ ಮೂರು ದಿನ ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಾತ್ರ ಮಂಗಳೂರಿನಿಂದ ಬೆಂಗಳೂರಿನ ಯಶವಂತಪುರಕ್ಕೆ ಸಂಚರಿಸುತ್ತಿದ್ದ ನಂ.16576 ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಸಾರ್ವಜನಿಕರು ಬಹುದಿನಗಳಿಂದ ಮನವಿ ಮಾಡುತ್ತಿದ್ದರು. ಇದೀಗ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ ನಂ.16576 ಎಕ್ಸ್ ಪ್ರೆಸ್ ರೈಲಿನ (Mangaluru Train Timings) ವೇಳಾಪಟ್ಟಿಯನ್ನು ಬದಲಾಯಿಸಿದೆ. ನವೆಂಬರ್ 1ರಿಂದ ಅದು ಜಾರಿಗೆ ಬರಲಿದೆ. ಈ ಮೂಲಕ ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದೆ. ರೈಲ್ವೆ ಸಹಾಯಕ ಸಚಿವ ವಿ ಸೋಮಣ್ಣ ಅವರು ಎಕ್ಸ್‌ ಮೂಲಕ ಈ ಮಾಹಿತಿ ನೀಡಿದ್ದಾರೆ.

ಈಗಿನ ರೈಲ್ವೆ ವೇಳಾಪಟ್ಟಿಯ ಪ್ರಕಾರ, ಈ ರೈಲು ಬೆಳಗ್ಗೆ 11:30ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 8:45ರ ಸುಮಾರಿಗೆ ಯಶವಂತಪುರ ರೈಲು ನಿಲ್ದಾಣವನ್ನು ತಲುಪುತಿತ್ತು. ಇನ್ನು ಮುಂದಿನ ದಿನಗಳಲ್ಲಿ ಈ ರೈಲು ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ತಲುಪಲಿದೆ. ಈ ವರ್ಷದ ನವೆಂಬರ್ 1ರಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಹಾಗಾಗಿ ಇದುವರೆಗೆ ಬೆಳಗ್ಗೆ ತಡವಾಗಿ ಹೊರಟು, ರಾತ್ರಿ ಬೆಂಗಳೂರಿಗೆ ತಲುಪುತ್ತಿದ್ದ ಈ ರೈಲು, ಇನ್ನುಮುಂದೆ ಬೆಳಗ್ಗೆ ಬೇಗ ಹೊರಟು ಸಂಜೆಯ ವೇಳೆಗೆ ಬೆಂಗಳೂರು ತಲುಪಲಿದೆ. ಇದರಿಂದ ಪ್ರಯಾಣಿಕರು ರಾತ್ರಿಯೊಳಗೆ ತಮ್ಮ ಮನೆಗೆ ಸೇರಬಹುದು.

ಈ ಬಗ್ಗೆ ರೈಲ್ವೆ ಇಲಾಖೆಯ ಸಹಾಯಕ ಸಚಿವ ವಿ.ಸೋಮಣ್ಣ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. “ಮಂಗಳೂರು ಜಂಕ್ಷನ್ – ಯಶವಂತಪುರಕ್ಕೆ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಕಾರ್ಯಾಚರಿಸುವ ರೈಲಿನ ಸಮಯ ಬದಲಾಯಿಸುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ. ಈ ರೈಲು ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ತಲುಪಲಿದೆʼʼ ಎಂದಿದ್ದಾರೆ.

ಇದನ್ನೂ ಓದಿ: ಅಮೆಜಾನ್‌ನಲ್ಲಿ 55,000 ರೂ. ಮೊಬೈಲ್ ಫೋನ್ ಆರ್ಡರ್ ಮಾಡಿದವನಿಗೆ ಸಿಕ್ಕಿದ್ದು ಟೀ ಕಪ್!

ಸಾರ್ವಜನಿಕರು ಈ ರೈಲಿನ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ವಿ. ಸೋಮಣ್ಣ ತಮ್ಮ ಸೋಶಿಯಲ್ ಮೀಡಿಯಾದ ಪೇಜ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ “ಸಮಯ ಬದಲಾವಣೆ ಮಾಡಲು ರೈಲ್ವೇ ಸಚಿವರನ್ನು ಒತ್ತಾಯಿಸಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ ಈಗ ಆದೇಶ ಹೊರಡಿಸಿರುವುದು ಕಂಡು ಖುಷಿಯಾಗಿದೆʼʼ ಎಂದು ತಿಳಿಸಿದ್ದಾರೆ.

Continue Reading

ಮಳೆ

Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

Karnataka Rain : ಹಾಸನ, ಹಾವೇರಿ, ಕಾರವಾರದಲ್ಲಿ ಗಾಳಿ- ಮಳೆಗೆ ಮನೆಗಳು ಕುಸಿದು ಬಿದ್ದಿದೆ. ಮಂಗಳೂರಿನಲ್ಲಿ ಭೂಮಿ ಕುಸಿದಿದ್ದು ಜಾನುವಾರುಗಳು ಮೃತಪಟ್ಟಿವೆ.

VISTARANEWS.COM


on

By

karnataka Rain
Koo

ಹಾವೇರಿ/ಹಾಸನ: ಭಾರಿ ಮಳೆ, ಗಾಳಿಗೆ (karnataka Rain) ವಾಸದ ಮನೆಯೊಂದು ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಆರು ಮಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಹಾಸನದ‌ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಮುನಿರ್ ಪಾಷ ಎಂಬುವವರಿಗೆ ಸೇರಿದ ಮನೆಯು ಕುಸಿದಿದೆ. ಮನೆಯ ಒಂದು ಭಾಗ ಕುಸಿಯುತ್ತಿರುವಾಗಲೇ ಆರು ಮಂದಿ ಹೊರಗೆ ಓಡಿ ಬಂದಿದ್ದಾರೆ. ಮನೆಯಲ್ಲಿದ್ದ ವಸ್ತುಗಳು ಮಣ್ಣು ಪಾಲಾಗಿದೆ.

ಕುಸಿದು ಬಿದ್ದ ಮಣ್ಣಿನ ಗೋಡೆ

ಉತ್ತರಕನ್ನಡದ ಕಾರವಾರ ಶಿರವಾಡದ ಬಂಗಾರಪ್ಪನಗರದಲ್ಲಿ ಸುಪ್ರಿಯಾ ವಡ್ಡರ್ ಎಂಬುವವರ ಮನೆಯ ಹಿಂಬದಿ ಗೋಡೆ ಕುಸಿದಿದೆ. ಮಳೆಯಿಂದಾಗಿ ನೆನೆದು ಮಣ್ಣಿನಗೋಡೆ ಕುಸಿದಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಲ್ಲಿ ಭೂ ಕುಸಿದು ಜಾನುವಾರುಗಳು ಸಾವು

ಭೂ ಕುಸಿತಗೊಂಡು ಮೂರು ಮನೆಗಳಿಗೆ ಹಾನಿಯಾಗಿದ್ದು, ನಾಲ್ಕು ಜಾನುವಾರುಗಳು ಮೃತಪಟ್ಟಿವೆ. ದಕ್ಷಿಣ ಕನ್ನಡದ ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿನ ಗಂಗಯ್ಯ ಗೌಡ, ಮಹಾಬಲ ಗೌಡ ಅವರ ಮನೆಗಳಿಗೆ ಹಾನಿಯಾಗಿದೆ. ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನಗಳ ಮೇಲೆ ಮಣ್ಣು ಬಿದ್ದ ಪರಿಣಾಮ ಜಾನುವಾರುಗಳು ಮೃತಪಟ್ಟಿವೆ.

ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿತ

ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿದು ಬಿದ್ದಿದೆ. 15ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದ ವಾಚ್ ಟವರ್ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕುಸಿದಿದೆ.

ಹಾವೇರಿಯಲ್ಲಿ ಬಾಲಕನ ಮೇಲೆ ಕುಸಿದ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರಂತರ ಮಳೆಗೆ ಶಾಲೆಯ ಚಾವಣಿ ಕುಸಿದು ಬಾಲಕನಿಗೆ ಗಾಯವಾಗಿದೆ. ಹಾವೇರಿಯ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. 25 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 5 ನೇ ತರಗತಿಯಲ್ಲಿ ಓದುತ್ತಿದ್ದ ವಿನಾಯಕ್ ಮೋರೆ ಗಾಯಗೊಂಡವನು. ಬಾಲಕನ ಕಾಲಿನ ಮೇಲೆ ಚಾವಣಿ ಕಂಬ ಬಿದ್ದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಗ್ರಾಮದಲ್ಲೂ ಮನೆ ಕುಸಿದಿದೆ. ಕುಮಾರ ಮಳೆಪ್ಪನವರ ಮನೆಯು ಕುಸಿದು ಬಿದ್ದಿದೆ. ಬೆಳಗಿನ ಜಾವದಲ್ಲಿ ಮಣ್ಣು ಕುಸಿದಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪಾರಾಗಿದ್ದಾರೆ.

ಇದನ್ನೂ ಓದಿ: Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಸತತ ಮೂರನೇ ಬಾರಿಗೆ ನೆರೆ ಹಾವಳಿಯಿಂದಾಗಿ ಬೈಂದೂರು ತಾಲೂಕಿನ ನಾವುಂದ ಕುದ್ರು ವಿನಲ್ಲಿ ವಾಸವಾಗಿರುವ ಏಳು ಮನೆಗಳಿಗೆ ಜಲದಿಗ್ಬಂದನ ಹಾಕಲಾಗಿದೆ. ದೋಣಿಯ ಮೂಲಕವೇ ದೈನಂದಿನ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮನೆ ಮುಂಭಾಗವೇ ಭೂಮಿ ಛಿದ್ರ

ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಭಾರಿ ಮಳೆಗೆ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕೊಪ್ಪ ತಾಲೂಕಿನ ಬಸರಿ ಕಟ್ಟೆ ಚೆನ್ನಕಲ್ಲು ಗ್ರಾಮದಲ್ಲಿ ನಾಗರಾಜ್ ಎಂಬುವವರ ಮನೆ ಮುಂದೆ ಭೂಮಿ ಛಿದ್ರ ಛಿದ್ರಗೊಂಡಿದೆ. 300 ಅಡಿಯಷ್ಟು ದೂರಕ್ಕೆ ಭೂಮಿ ಜಾರಿ ಹೋಗಿದೆ. ಭೂಮಿ ಕುಸಿತದ ರಭಸಕ್ಕೆ ಮನೆಯ ಅಡಿಪಾಯ, ಗೋಡೆಗಳಲ್ಲಿ ಬಿರುಕು ಉಂಟಾಗಿದೆ. ಮಳೆ ಹೆಚ್ಚಾದಂತೆ ಮನೆಯ ಮುಂಭಾಗ ಮತ್ತಷ್ಟು ಧರೆ ಕುಸಿತ ಉಂಟಾಗುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ 4-5 ಎಕರೆ, ಅಡಿಕೆ ತೋಟವು ನಾಶವಾಗಿದೆ.

ಶಿರಾಡಿಘಾಟ್ ಭೂ ಕುಸಿತ; ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಟೀಂ ಭೇಟಿ

ಹಾಸನದ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಸಮೀಪದ ಗುಡ್ಡಕುಸಿತ ಸ್ಥಳಕ್ಕೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ತಿಳಿಯಲು ಸ್ಥಳ ಪರಿಶೀಲನೆ ನಡೆಸಿದ್ದರು. ಒಂದೇ ಸ್ಥಳದಲ್ಲಿ ನಿರಂತರವಾಗಿ ಭೂಮಿ ಕುಸಿಯುತ್ತಿದೆ. ಸಕಲೇಶಪುರ ತಾಲೂಕಿನ ಹಾರ್ಲೇ ಕೂಡಿಗೆ ಗ್ರಾಮದ ಸಮೀಪ ಭೂಮಿ ಕುಸಿದಿತ್ತು. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಕುಸಿತವಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Western Ghats: ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ‌, ರೆಸಾರ್ಟ್ ತೆರವಿಗೆ ಸರ್ಕಾರ ಸೂಚನೆ

Western Ghats: 2015ರಿಂದೀಚೆಗೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ತೆರವು ಮಾಡಲು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

VISTARANEWS.COM


on

Western Ghats
Koo

ಬೆಂಗಳೂರು: ಶಿರೂರು, ವಯನಾಡು ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ (Western Ghats) 2015ರಿಂದ ಈಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದೆ.

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಇದನ್ನೂ ಓದಿ | Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತವಾಗಿ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ.

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಹಾಗೂ 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Wayanad Landslide: ಕುರ್ಚಿಯಲ್ಲಿ ಕುಳಿತ.. ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆ; ಇದು ಸ್ಮಶಾನ ಸದೃಶ್ಯ ವಯನಾಡಿನ ಭೀಕರ ದೃಶ್ಯ

ಅರಣ್ಯ ಒತ್ತುವರಿ ತೆರವಿಗೆ ಕ್ರಮ

ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ರಾಜ್ಯದ ಪಶ್ಚಿಮ ಘಟ್ಟಗಳಲ್ಲಿ 2015ರ ನಂತರ ಅರಣ್ಯ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಿರ್ಮಿಸಿರುವ ಹೋಮ್ ಸ್ಟೇ , ರೆಸಾರ್ಟ್ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಕೃತಿ ವಿಕೋಪದಿಂದ ಆಗುತ್ತಿರುವ ಅನಾಹುತಗಳನ್ನು ನೋಡುತ್ತಿದ್ದೇವೆ. ಕೇರಳದಲ್ಲಿ ಆದ ಘಟನೆಯಿಂದ ನಾಲ್ಕೈದು ಹಳ್ಳಿ ನಾಪತ್ತೆಯಾಗಿ ನೂರಾರು ಜನರು ಸಾವಿಗೀಡಾಗಿದ್ದಾರೆ. ವಿಶೇಷವಾಗಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ರಸ್ತೆ ಮಾಡುತ್ತಾರೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸ್ತಾರೆ. ಇವುಗಳಿಂದ ಅನಾಹುತ ಆಗುತ್ತದೆ. ಮೊದಲು ಕೃಷಿ ಚಟುವಟಿಕೆಗಳನ್ನು ಶುರುಮಾಡಿ ನಂತರ ರೆಸಾರ್ಟ್ ಮಾಡುತ್ತಾರೆ. ಹೀಗಾಗಿ ಅನಧಿಕೃತ ಹೋಂ ಸ್ಟೇ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Woman Deliver Baby in Auto
ಕರ್ನಾಟಕ52 seconds ago

Woman Deliver Baby in Auto: ಆಸ್ಪತ್ರೆಗೆ ಹೋಗುವಾಗ ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Mangaluru Train Timings
Latest15 mins ago

Mangaluru Train Timings: ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲು; ಪ್ರಯಾಣಿಕರಿಗೆ ಏನು ಲಾಭ?

BSNL 5G Service
ಪ್ರಮುಖ ಸುದ್ದಿ23 mins ago

BSNL 5G Service : ಬಿಎಸ್​ಎನ್​​ಎಲ್​ 5ಜಿ ಸಿಮ್​ಕಾರ್ಡ್​ಗಳು ವಿತರಣೆಗೆ ರೆಡಿ​; ಬೆಂಗಳೂರಿನಲ್ಲಿಯೂ ಲಭ್ಯವೇ?

karnataka Rain
ಮಳೆ26 mins ago

Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

Haris Rauf
ಕ್ರೀಡೆ27 mins ago

Haris Rauf: ʼದಿ ಹಂಡ್ರೆಡ್‌ʼ ಕ್ರಿಕೆಟ್‌ ಲೀಗ್‌ ಆಡುತ್ತಿದ್ದ ಪಾಕ್‌ ವೇಗಿ ರೌಫ್‌ಗೆ ಕೊಹ್ಲಿ ಬಾರಿಸಿದ ಸಿಕ್ಸರ್‌ ನೆನಪಿಸಿದ ಅಭಿಮಾನಿ; ವಿಡಿಯೊ ವೈರಲ್‌

Wayanad Tragedy
Latest29 mins ago

Wayanad Tragedy: ತಬ್ಬಲಿ ಶಿಶುಗಳಿಗೆ ಎದೆಹಾಲು ನೀಡಿ ಪೋಷಿಸಿದ ʼಮಹಾತಾಯಿʼಗೆ ವ್ಯಾಪಕ ಪ್ರಶಂಸೆ

Western Ghats
ಕರ್ನಾಟಕ50 mins ago

Western Ghats: ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ‌, ರೆಸಾರ್ಟ್ ತೆರವಿಗೆ ಸರ್ಕಾರ ಸೂಚನೆ

Parliament Session
ರಾಜಕೀಯ53 mins ago

Parliament Session: ಪೈರಸಿಯಿಂದ ಚಿತ್ರೋದ್ಯಮಕ್ಕೆ 20,000 ಕೋಟಿ ರೂ. ನಷ್ಟ; ಸಂಸತ್‌ನಲ್ಲಿ ಕಳವಳ

Rajeev Chandrasekhar
ದೇಶ57 mins ago

Rajeev Chandrasekhar: 10 ವರ್ಷಗಳಲ್ಲಿ 80 ಕೋಟಿ ಮಂದಿ ಬಡತನದಿಂದ ಹೊರಗೆ; ವಿಶ್ವಸಂಸ್ಥೆಯಲ್ಲೇ ಮೋದಿ ಆಡಳಿತಕ್ಕೆ ಪ್ರಶಂಸೆ

Teacher Transfer Counselling
ಬೆಂಗಳೂರು1 hour ago

Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌