Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ - Vistara News

ಬೆಂಗಳೂರು

Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

Education News : ಇಂದಿನಿಂದ (ಆ.2) ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರುವಾಗಿದ್ದು, ಸೂಕ್ತ ದಾಖಲೆಗಳೊಂದಿಗೆ ಶಿಕ್ಷಕರು ಕೌನ್ಸೆಲಿಂಗ್‌ ಪ್ರಕ್ರಿಯೆಯಲ್ಲಿ (Teachers Transfer) ಭಾಗಿಯಾಗಬಹುದು.

VISTARANEWS.COM


on

Teacher Transfer Counselling
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಶಿಕ್ಷಕರು ಹಾಗೂ ತತ್ಸಮಾನ ವೃಂದದ 2023-24ನೇ ಸಾಲಿನ ಜಿಲ್ಲೆಯೊಳಗಿನ ಕೋರಿಕೆ, ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ (Teachers Transfer) ಶುಕ್ರವಾರದಿಂದ ಆರಂಭವಾಗಿದೆ.

2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು (Teachers Transfer) ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರಿಗೆ ವರ್ಗಾವಣೆ (Education News) ಕೌನ್ಸೆಲಿಂಗ್‌ ಶುರುವಾಗಿದೆ. ಆಗಸ್ಟ್ 02 ರಿಂದ 12ರವರೆಗೆ ಮೈಸೂರು ವಿಭಾಗದೊಳಗಿನ ಅಂತರ್ ಜಿಲ್ಲಾ ಕೋರಿಕೆ/ ಪರಸ್ಪರ ವರ್ಗಾವಣೆಯ ಕೌನ್ಸೆಲಿಂಗ್ (Teacher Transfer Counselling) ನಡೆಯಲಿದೆ.

ಪ್ರಾಥಮಿಕ ಶಿಕ್ಷಕರಿಗೆ ಆಗಸ್ಟ್‌ 2ರಿಂದ 5ರವರೆಗೆ ಹಾಗೂ ಆಗಸ್ಟ್‌ 6ರಿಂದ 8ರವರೆಗೆ ಪ್ರೌಢ ಶಿಕ್ಷಕರ ಸಾಮಾನ್ಯ ಕೋರಿಕೆಯ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್‌ 12ರಂದು ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಕೌನ್ಸೆಲಿಂಗ್‌ ಸಂಬಂಧಿಸಿದ ವೇಳಾಪಟ್ಟಿಯನ್ವಯ ಶಿಕ್ಷಕರು ಸೂಕ್ತ ದಾಖಲೆಗಳೊಂದಿಗೆ ಆಯಾಯ ದಿನಾಂಕದಂದು ಹಾಜರಾಗಬೇಕು.

Teacher Transfer Counselling
Teacher Transfer Counselling

ಇನ್ನೂ ರಾಯಚೂರಿನಲ್ಲೂ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರ ಹಂತದ ವರ್ಗಾವಣೆಗೆ ಆಗಸ್ಟ್ 2ರಿಂದ 8ರವರೆಗೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕೌನ್ಸೆಲಿಂಗ್‌ ನಡೆಯಲಿದೆ.

ಇದನ್ನೂ ಓದಿ: KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

ನೇಮಕಾತಿ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ ಪರಿಷ್ಕೃತ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ‌ ಎಂಜಿನಿಯರ್ ಹುದ್ದೆಗಳ‌ ನೇಮಕಕ್ಕೆ ಆಗಸ್ಟ್ 11ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಜು.20ರಂದು ಪ್ರಾಧಿಕಾರ ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಗೆ ಗೈರಾದವರಿಗೆ ಈ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ.

ಬಿಎಂಟಿಸಿ (ನಾನ್ ಎಚ್ಕೆ) ಪರೀಕ್ಷೆ ಸೆ.1ರಂದು, ಪಿಎಸ್ಐ ಪರೀಕ್ಷೆ ಸೆ.22ರಂದು, ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಗೆ ಕಡ್ಡಾಯ ಕನ್ನಡ ಪರೀಕ್ಷೆ ಸೆ.29ರಂದು ನಡೆಯಲಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪ್ರಮುಖ ಪರೀಕ್ಷೆ ಅಕ್ಟೋಬರ್ 27ರಂದು ನಡೆಸಲಾಗುವುದು. ಅಭ್ಯರ್ಥಿಗಳು ಪರಿಷ್ಕೃತ ವೇಳಾ ಪಟ್ಟಿ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಮೇಲಿಂದ ಮೇಲೆ ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿ ಪಡೆಯಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kasturirangan Report: ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಎಂದ ಸಿಎಂ

Kasturirangan Report: ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. 20 ಕಡೆ ಭೂ ಕುಸಿತ ಆಗಿದ್ದರೆ, ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿರುವುದು ಹೆಚ್ಚು ಕಡೆ ಆಗಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

VISTARANEWS.COM


on

Kasturirangan Report
Koo

ಮಡಿಕೇರಿ: ಕಸ್ತೂರಿ ರಂಗನ್ ವರದಿಯನ್ನು (Kasturirangan Report) ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ಹೇಳಿದರು.

ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. 20 ಕಡೆ ಭೂ ಕುಸಿತ ಆಗಿದ್ದರೆ, ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿರುವುದು ಹೆಚ್ಚು ಕಡೆ ಆಗಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Wayanad landslide: ವಯನಾಡು ಭೂ ಕುಸಿತ; ಮೃತ ಬಾಲಕ ರೋಹಿತ್ ತಾಯಿಗೆ ಸಾಂತ್ವನ ಹೇಳಿ ಪರಿಹಾರ ಘೋಷಿಸಿದ ಸಿಎಂ

67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಪೂರ್ಣ ಹಾನಿಯಾಗಿದ್ದರೆ 1 ಲಕ್ಷದ 20 ಸಾವಿರ ರೂಪಾಯಿ ಜತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ ಎಂದರು. ಈಗಾಗಲೇ ನೇರ ಸಂತ್ರಸ್ತರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂದು ತಿಳಿಸಿದರು.

16 ಜಾನುವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್‌ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್‌ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್‌ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದೇನೆ. 28 ಹೆಕ್ಟೇರ್‌ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್‌ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

344 ಕಿ.ಮೀ. ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆದ್ಯತೆ ಮೇಲೆ ಸರಿಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ.50 ರಷ್ಟು ಹೆಚ್ಚು ಮಳೆಯಾಗಿದೆ.‌ ನಾವು ಮುಂಜಾಗ್ರತಾ ಕ್ರಮಗಳ ಜತೆಗೆ ಅನಾಹುತ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿಯ ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಶಿರಾಡಿ ಘಾಟಿಗೆ ಭೇಟಿ ನೀಡಿ ಅನಾಹುತಗಳನ್ನು ಪರಿಶೀಲನೆ ನಡೆಸುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದ ಸಿಎಂ, ಭೂ‌ಕುಸಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕೆ ಜಿಎಸ್‌ಐ ವರದಿ ನೋಡಿ ನಂತರ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ | Western Ghats: ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ‌, ರೆಸಾರ್ಟ್ ತೆರವಿಗೆ ಸರ್ಕಾರ ಸೂಚನೆ

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಮಾಜಿ ಸಚಿವ ನಾಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾರಾಂತ್ಯದಲ್ಲಿ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಇನ್ನೂ ಜಲಾವೃತ ರಸ್ತೆಯಲ್ಲಿ‌ ಗ್ರಾಮಸ್ಥರು ಬೈಕ್‌ ಓಡಿಸಿ ಹುಚ್ಚಾಟ ಮೆರೆದಿದ್ದಾರೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ (Karnataka Weather Forecast) ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ (Rain News) ದುರ್ಬಲವಾಗಿತ್ತು. ಮಣಿ 19 ಸೆಂ.ಮೀ, ಪುತ್ತೂರು ಎಚ್‌ಎಂಎಸ್ 16 ಸೆಂ.ಮೀ, ಮಂಗಳೂರು, ಪಣಂಬೂರು ವೀಕ್ಷಣಾಲಯ 15 ಸೆಂ.ಮೀ ಮಳೆಯಾಗಿದೆ. ಕಾರ್ಕಳ, ಮಂಕಿ , ಆಗುಂಬೆ ಎಮೋ 14 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಕದ್ರ, ಉಪ್ಪಿನಂಗಡಿ13 ಸೆಂ.ಮೀ ಮಳೆಯಾಗಿದೆ. ಮಂಗಳೂರು ಎಪಿ ವೀಕ್ಷಣಾಲಯ , ಗೇರ್ಸೊಪ್ಪ, ಕುಂದಾಪುರ 12 ಸೆಂ.ಮೀ ಮಳೆಯಾಗಿದೆ.

ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ

ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

ಜಲಾವೃತ ರಸ್ತೆಯಲ್ಲಿ‌ ಗ್ರಾಮಸ್ಥರ ಹುಚ್ಚಾಟ

ತುಂಗಭದ್ರಾ ಜಲಾಶಯ‌ ಹಿನ್ನೀರು ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ವಿಜಯನಗರ ಜಿಲ್ಲೆಯ ಮಕರಬ್ಬಿ-ಬ್ಯಾಲಹುಣಸೆ ಗ್ರಾಮದ ಸಂಪರ್ಕ ರಸ್ತೆ ಜಲಾವೃತಗೊಂಡಿದೆ. ಸಂಪರ್ಕ ಕಡಿತದಿಂದಾಗಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ವ್ಯಾಪ್ತಿಗೆ ಒಳಪಡುವ ಮಕರಬ್ಬಿ ಗ್ರಾಮಸ್ಥರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ.

ಮಕರಬ್ಬಿ ಗ್ರಾಮದಿಂದ ಬ್ಯಾಲಹುಣಸೆ ಶಾಲೆಗೆ ತೆರಳಬೇಕಿದ್ದ ಶಾಲಾ ಮಕ್ಕಳಿಗೆ ಸಂಕಷ್ಟ ಎದುರಾಗಿದೆ. ರಸ್ತೆ ಸಂಪರ್ಕ ಕಡಿತವಾಗಿದ್ದರಿಂದ 2 ದಿನದಿಂದ‌ ಶಾಲೆಗೆ ತೆರಳದೇ ಮಕ್ಕಳು ಗೈರಾಗಿದ್ದಾರೆ. ಮಕ್ಕಳ ಪರದಾಟ ಒಂದೆಡೆಯಾದರೆ ವಯೋವೃದ್ಧರು, ಮಹಿಳೆಯರು ಬೇರೆ ಗ್ರಾಮಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ.

ಇವೆಲ್ಲದರ ಮಧ್ಯೆ ಬೈಕ್ ಸವಾರರು ಹುಚ್ಚಾಟ ಮೆರೆದಿದ್ದಾರೆ. ಜಲಾವೃತವಾದ ರಸ್ತೆ ಮಧ್ಯೆ ಸಾಲು ಸಾಲು ವಾಹನ ನಿಲ್ಲಿಸಿ ಕ್ಲೀನಿಂಗ್‌ನಲ್ಲಿ ತೊಡಗಿದ್ದರು. ಮೊಣಕಾಲುವರೆಗೆ ಜಲಾವೃತವಾದ ರಸ್ತೆಯಲ್ಲಿಯೇ ಬೈಕ್ ನಿಲ್ಲಿಸಿ ಸ್ವಚ್ಚಗೊಳಿಸುತ್ತಿದ್ದರು. ಜತೆಗೆ ಜಲಾವೃತ ರಸ್ತೆಯಲ್ಲಿ ‌ ಬೈಕ್‌ ಓಡಿಸಿದ್ದಾರೆ. ಸ್ವಲ್ಪ ಯಾಮಾರಿದ್ದರೂ ನೀರಿನ‌ ರಭಸಕ್ಕೆ ಬೈಕ್ ಸಮೇತ ಕೊಚ್ಚಿಕೊಂಡು ಹೋಗುವ ಸಾಧ್ಯತೆ ಇದೆ. ಟಿಬಿ ಡ್ಯಾಂ ಭರ್ತಿಯಾಗಿದ್ದರಿಂದ ಹಿನ್ನೀರು ಪ್ರದೇಶದ ಗ್ರಾಮಗಳಲ್ಲಿ ಇದೀಗ ಪ್ರವಾಹ ಭೀತಿ ಎದುರಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

NICE Road: ನೈಸ್ ರಸ್ತೆಯಲ್ಲಿ ವೇಗದ ಚಾಲನೆಗೆ ಬ್ರೇಕ್; ರಾತ್ರಿ ವೇಳೆ‌ ದ್ವಿಚಕ್ರ ವಾಹನ ಸಂಚಾರಕ್ಕೂ ನಿಷೇಧ!

NICE Road: ಬೆಂಗಳೂರು-ಮೈಸೂರು ನೈಸ್ ರಸ್ತೆಯಲ್ಲಿ ಪಥ ಶಿಸ್ತಿನೊಂದಿಗೆ ವೇಗದ ಮಿತಿಯನ್ನು ನಿಗಧಿಗೊಳಿಸಿ ಹಾಗೂ ರಾತ್ರಿ ವೇಳೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರು ಅಧಿಸೂಚನೆ ಹೊರಡಿಸಿದ್ದಾರೆ.

VISTARANEWS.COM


on

Nice road
Koo

ಬೆಂಗಳೂರು: ಅಜಾಗರೂಕತೆ, ನಿರ್ಲಕ್ಷ್ಯತೆಯ ಚಾಲನೆಯಿಂದ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ನೈಸ್ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ವೇಗದ ಮಿತಿ ನಿಗದಿಪಡಿಸಿ ಹಾಗೂ ಪ್ರತಿ ದಿನ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅಧಿಸೂಚನೆ ಹೊರಡಿಸಿದ್ದಾರೆ.

ನೈಸ್ ರಸ್ತೆಯಲ್ಲಿ ಉಂಟಾಗುತ್ತಿದ್ದ ಅಪಘಾತಗಳಿಗೆ ಈ ರಸ್ತೆಗಳಲ್ಲಿ ಚಲಿಸುವ ವಾಹನ ಸವಾರರು ಹಾಗೂ ಚಾಲಕರ ನಿರ್ಲಕ್ಷ್ಯತೆ, ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಕಾರಣವಾಗಿರುತ್ತದೆ. ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳಿಗೆ ವೇಗದ ಮಿತಿಯನ್ನು ನಿಗದಿಗೊಳಿಸಿ ಹಾಗೂ ಪ್ರತಿ ದಿನ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ವ್ಯವಸ್ಥೆಯನ್ನು ಆ.2 ರಿಂದ ಜಾರಿಗೆ ತರಲಾಗಿದ್ದು, ವಿವಿದ ಮಾದರಿಯ ವಾಹನಗಳಿಗೆ ನಿಗದಿಗೊಳಿಸಿರುವ ವೇಗದ ಮಿತಿಯ ವಿವರ ಈ ಕೆಳಕಂಡಂತಿದೆ.

ವಾಹನವಾರು ನಿಗದಿಗೊಳಿಸಿರುವ ವೇಗದ ಮಿತಿಯ ವಿವರ

1.ವಾಹನ ಚಾಲಕನೂ ಸೇರಿ 8ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳಿಗೆ (ಎಂ-1 ವರ್ಗದ ವಾಹನಗಳು)120 kmph
2.ವಾಹನ ಚಾಲಕನೂ ಸೇರಿ 9 ಕ್ಕಿಂತ ಹೆಚ್ಚು. ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳಿಗೆ (ಎಂ-2 & ಎಂ-3 ವರ್ಗದ ವಾಹನಗಳು)100 kmph
3.ಗೂಡ್ಸ್‌ ವಾಹನಗಳು (ಎನ್‌ ವರ್ಗದ ವಾಹನಗಳು)80 kmph
4.ದ್ವಿಚಕ್ರ ವಾಹನಗಳು80 kmph

ಬೆಂಗಳೂರು ನಗರ ವ್ಯಾಪ್ತಿಯ ಸಂಚಾರ ಪಶ್ಚಿಮ ವಿಭಾಗದ ಕೆಂಗೇರಿ, ಕಾಮಾಕ್ಷಿಪಾಳ್ಯ, ಜ್ಞಾನಭಾರತಿ ಮತ್ತು ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗಳ ಒಟ್ಟು 23.5 ವ್ಯಾಪ್ತಿಯನ್ನು ಹಾಗೂ ಸಂಚಾರ ದಕ್ಷಿಣ ವಿಭಾಗದ ತಲಘಟಪುರ, 6. ಕೆ.ಎಸ್‌.ಲೇಔಟ್‌, ಹುಳಿಮಾವು ಹಾಗೂ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಒಟ್ಟು 21 ಕಿ.ಮೀಗಳನ್ನು ನೈಸ್‌ ರಸ್ತೆಯು ಒಳಗೊಂಡಿರುತ್ತದೆ. ಈ ರಸ್ತೆಗಳಲ್ಲಿ ವಾಹನ ಚಾಲಕರು, ಸವಾರರ ಮತ್ತು ನಿರ್ಲಕ್ಷ್ಯತೆಯ ಚಾಲನೆಯಿಂದ ಮಾರಣಾಂತಿಕ, ಮಾರಣಾಂತಿಕವಲ್ಲದ ರಸ್ತೆ ಅಪಘಾತ ಪ್ರಕರಣಗಳು ದಾಖಲಾಗುತ್ತಿದ್ದು, ಪ್ರತಿ ವರ್ಷವೂ ಅಪಘಾತದಲ್ಲಿ ಗಾಯಗೊಂಡು, ಮರಣಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನೈಸ್ ರಸ್ತೆಯಲ್ಲಿ ವೇಗ ಮಿತಿ ಎಚ್ಚರಿಕೆಯ ಬೋರ್ಡ್‌ಗಳು ಹಾಗೂ ಸೂಚಿಸುವ ಎಲ್.ಇ.ಡಿ. ಫಲಕಗಳು ಇರುತ್ತವೆ. ಈ ಎಲ್ಲಾ ಕ್ರಮಗಳನ್ನು ಅನುಸರಿಸಿಯೂ ರಸ್ತೆ ಅಪಘಾತಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಇದರಿಂದಾಗಿ, ಪ್ರಯಾಣಿಕರ ಹಾಗೂ ವಾಹನ ಸವಾರರ ಸಾವು-ನೋವು ಹೆಚ್ಚಾಗುತ್ತಿವೆ.

ಇದನ್ನೂ ಓದಿ | Bangalore–Mysore Expressway : ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

ನೈಸ್ ರಸ್ತೆಯಲ್ಲಿ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಅಪಘಾತ ಪ್ರಕರಣಗಳು ವರದಿಯಾಗುತ್ತಲೇ ಇದ್ದು, ಈ ಬಗ್ಗೆ ಇಲಾಖೆಯ ಮೇಲಧಿಕಾರಿಗಳೂ ಕೂಡ ತೀವ್ರ ಆಕ್ಷೇಪಣೆಯನ್ನು ವ್ಯಕ್ತ ಪಡಿಸಿರುತ್ತಾರೆ. ಹೀಗಾಗಿ ನೈಸ್‌ ರಸ್ತೆಯಲ್ಲಿ ಉಂಟಾಗುತ್ತಿರುವ ಮಾರಣಾಂತಿಕ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಂಟಾಗುತ್ತಿರುವ ಅಪಘಾತಗಳಿಗೆ ಕಾರೆಣಗಳನ್ನು ವಿಶ್ಲೇಷಿಸಲಾಗಿದ್ದು, ಹೆಚ್ಚಿನ ಅಪಘಾತಗಳು ವಾಹನೆಗಳ ಅತಿವೇಗ ಹಾಗೂ ಅಜಾರೂಕತೆಯ ಚಾಲನೆಯಿಂದ ಉಂಟಾಗಿರುವುದು ಕಂಡುಬಂದಿರುತ್ತದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಪಥ ಶಿಸ್ತಿನ ನಿಯಮವನ್ನು ಪಾಲಿಸದೇ ಇರುವುದೂ ಸಹ ಅಪಘಾತಗಳು ಸಂಭವಿಸಲು ಕಾರಣವಾಗಿದೆ. ಹೀಗಾಗಿ ರಸ್ತೆಯಲ್ಲಿ ವಾಹನಗಳಿಗೆ ವೇಗ ಮಿತಿ ಜಾರಿ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ನೈಸ್ ರಸ್ತೆಯಲ್ಲಿ ಉಂಟಾಗಿರುವ ಅಪಘಾತಗಳ ಅಂಕಿಅಂಶಗಳನ್ನು ಈ ಕೆಳಕಂಡಂತೆ ವಿವರಿಸಲಾಗಿದೆ.

ನೈಸ್ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ

2022:
ಮಾರಣಾಂತಿಕ ಅಫಘಾತಗಳ ಸಂಖ್ಯೆ: 42
ಮಾರಣಾಂತಿಕವಲ್ಲದ ಅಫಘಾತಗಳ: 69

2023:
ಮಾರಣಾಂತಿಕ ಅಫಘಾತಗಳ ಸಂಖ್ಯೆ: 37
ಮಾರಣಾಂತಿಕವಲ್ಲದ ಅಫಘಾತಗಳ: 83

2024ರ ಜೂನ್‌ವರೆಗೆ
ಮಾರಣಾಂತಿಕ ಅಫಘಾತಗಳ ಸಂಖ್ಯೆ:13
ಮಾರಣಾಂತಿಕವಲ್ಲದ ಅಫಘಾತಗಳ:52

ಇದನ್ನೂ ಓದಿ | Bangalore Mysore Expressway: ಬೆಂಗಳೂರು- ಮೈಸೂರು ಹೈವೇಯಲ್ಲಿ ಓವರ್‌ಸ್ಪೀಡ್‌ ಹೋದರೆ ಬೀಳಲಿದೆ ಪೊಲೀಸ್‌ ಕೇಸ್!‌

ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ

ನೈಸ್ ರಸ್ತೆಯಲ್ಲಿ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 05 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಸಂಚಾರ ವ್ಯವಸ್ಥೆ ಮಾರ್ಪಾಡುಗಳನ್ನು ಜಾರಿಗೊಳಿಸಲು ಬೇಕಾದ ಅಗತ್ಯ ಸೂಚನಾ ಫಲಕಗಳನ್ನು (ನಿಯಮಾನುಸಾರ) ಅಗತ್ಯ ಸ್ಥಳಗಳಲ್ಲಿ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಕಮಿಷನರ್‌ ಆದೇಶಿಸಿದ್ದಾರೆ.

Continue Reading

ಬೆಂಗಳೂರು

Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

Workshop: ʼಜಿ ಅಕಾಡೆಮಿʼ ವತಿಯಿಂದ ಕನ್ನಡ ಚಲನಚಿತ್ರ ಉದ್ಯಮದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲು, ಹೊಸದಾಗಿ ಕಲಾವಿದರು, ನಿರ್ದೇಶಕರು ಮತ್ತು ನಿರ್ಮಾಪಕರಾಗ ಬಯಸುವವರಿಗೆ ಆ.10 ರಂದು ಬೆಂಗಳೂರು ನಗರದ ನಾಗರಭಾವಿಯ ಡಿ-ಗ್ರೂಪ್ ಲೇಔಟ್‌ನಲ್ಲಿರುವ ಜಿ ಅಕಾಡೆಮಿಯಲ್ಲಿ ಬೆಳಿಗ್ಗೆ 9.40 ಕ್ಕೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

VISTARANEWS.COM


on

One day workshop on 10th August by G Academy in Bengaluru
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ʼಜಿ ಅಕಾಡೆಮಿʼ ವತಿಯಿಂದ ಕನ್ನಡ ಚಲನಚಿತ್ರ ಉದ್ಯಮದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲು, ಹೊಸದಾಗಿ ಕಲಾವಿದರು, ನಿರ್ದೇಶಕರು ಮತ್ತು ನಿರ್ಮಾಪಕರಾಗ ಬಯಸುವವರಿಗೆ ಆ.10 ರಂದು ಬೆಂಗಳೂರು ನಗರದ ನಾಗರಭಾವಿಯ ಡಿ-ಗ್ರೂಪ್ ಲೇಔಟ್‌ನಲ್ಲಿರುವ ಜಿ ಅಕಾಡೆಮಿಯಲ್ಲಿ ಬೆಳಗ್ಗೆ 9.40ಕ್ಕೆ ಒಂದು ದಿನದ ಕಾರ್ಯಾಗಾರವನ್ನು (Workshop) ಏರ್ಪಡಿಸಲಾಗಿದೆ.

ಇದನ್ನೂ ಓದಿ: Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

ಕಾರ್ಯಾಗಾರದಲ್ಲಿ ಚಲನಚಿತ್ರ ಉದ್ಯಮದ ನಿರ್ಮಾಪಕ-ನಿರ್ದೇಶಕ ಗುರು ದೇಶಪಾಂಡೆ, ನಿರ್ದೇಶಕರಾದ ಬಿ.ಎಂ. ಗಿರಿರಾಜ್ ಮತ್ತು ಆಕಾಶ್ ಶ್ರೀವತ್ಸ, ಪತ್ರಕರ್ತ ಎಸ್. ಶ್ಯಾಮ್ ಪ್ರಸಾದ್ ಪಾಲ್ಗೊಳ್ಳಲಿದ್ದಾರೆ. ಅತಿಥಿ ಭಾಷಣಕಾರರಾಗಿ ಎಂ.ಎಲ್.ಎಂ. ಶರತ್ ಪಾಲ್ಗೊಳ್ಳಲಿದ್ದು, ಚಿತ್ರರಂಗದ ಕಾರ್ಯವಿಧಾನಗಳ ಕುರಿತು ಅವರು ಆಳವಾದ ಮಾಹಿತಿ ನೀಡಲಿದ್ದಾರೆ.

ಇದನ್ನೂ ಓದಿ: Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಕಾರ್ಯಾಗಾರವು ಅಂದು ಬೆಳಗ್ಗೆ 9:40 ರಿಂದ ಮಧ್ಯಾಹ್ನ 3:00 ರವರೆಗೆ ನಡೆಯಲಿದ್ದು, ನೋಂದಾಯಿಸಿಕೊಳ್ಳಲು ಮೊ.ಸಂ: 99007 77222 / 99001 95195 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading
Advertisement
Paris Olympics 2024
ಕ್ರೀಡೆ2 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ 8ನೇ ದಿನವಾದ ಶನಿವಾರ ಭಾರತದ ಸ್ಪರ್ಧೆಗಳ ವಿವರ ಇಲ್ಲಿದೆ

Kasturirangan Report
ಕರ್ನಾಟಕ7 mins ago

Kasturirangan Report: ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಎಂದ ಸಿಎಂ

Paris Olympics 2024
ಪ್ರಮುಖ ಸುದ್ದಿ23 mins ago

Paris Olympics 2024 : ಭಾರತಕ್ಕೆ ಒಂದು ಪದಕ ಜಸ್ಟ್​​ ಮಿಸ್​; ಆರ್ಚರಿ ಕಂಚಿನ ಪದಕದ ಪಂದ್ಯದಲ್ಲಿ ಸೋತ ಅಂಕಿತಾ, ಧೀರಜ್ ಜೋಡಿ​

Income Tax Returns
ವಾಣಿಜ್ಯ32 mins ago

Income Tax Returns: ಜುಲೈ 31ರೊಳಗೆ 7.28 ಕೋಟಿ ಐಟಿಆರ್ ಸಲ್ಲಿಕೆ! ಇದು ಹೊಸ ದಾಖಲೆ

Kodagu News
ಪ್ರಮುಖ ಸುದ್ದಿ56 mins ago

Wayanad landslide: ವಯನಾಡು ಭೂ ಕುಸಿತ; ಮೃತ ಬಾಲಕ ರೋಹಿತ್ ತಾಯಿಗೆ ಸಾಂತ್ವನ ಹೇಳಿ ಪರಿಹಾರ ಘೋಷಿಸಿದ ಸಿಎಂ

Paris Olympics 2024
ಪ್ರಮುಖ ಸುದ್ದಿ59 mins ago

Paris Olympics 2024 : ಪ್ಯಾರಿಸ್​​ನಲ್ಲಿ ಸಿಕ್ಕಾಪಟ್ಟೆ ಸೆಖೆ; ಅಥ್ಲೀಟ್​ಗಳಿಗಾಗಿ 40 ಎಸಿ ಕಳುಹಿಸಿದ ಕ್ರೀಡಾ ಸಚಿವಾಲಯ

Kriti Sanon
Latest1 hour ago

Kriti Sanon: ನಟಿ ಕೃತಿ ಸನೋನ್‌ ಡೇಟಿಂಗ್‌ ಮಾಡುತ್ತಿರುವ ಈ ಕಬೀರ್ ಬಹಿಯಾ ಯಾರು?

Viral Video
Latest1 hour ago

Reels in Railway Station: ರೈಲ್ವೆ ನಿಲ್ದಾಣದಲ್ಲಿ ರೀಲ್ಸ್‌ ಮಾಡುತ್ತ ಯುವತಿಯ ಅಸಭ್ಯ ವರ್ತನೆ; ಕಿಡಿಕಾರಿದ ನೆಟ್ಟಿಗರು!

Dog attack
ಕ್ರೈಂ1 hour ago

Dog Attack: ವೃದ್ಧ ತಾಯಿಯನ್ನು ಮನೆಯ ಹೊರಗೆ ಮಲಗಿಸಿದ್ದ ಪುತ್ರರು; ಜೀವಂತವಾಗಿ ತಿಂದು ಹಾಕಿದ ಬೀದಿ ನಾಯಿಗಳು!

karnataka Weather Forecast
ಮಳೆ2 hours ago

Karnataka Weather : ವಾರಾಂತ್ಯದಲ್ಲಿ ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌