Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು - Vistara News

ಚಿತ್ರದುರ್ಗ

Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು

Road Accident: ಚಿತ್ರದರ್ಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿ ಪಾದಚಾರಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೇ ಸ್ಥಳದಲ್ಲಿ ಗಂಟೆಗಳ ಅಂತರದಲ್ಲಿ ಎರಡು ಅಪಘಾತಗಳು ಸಂಭವಿಸಿದೆ.

VISTARANEWS.COM


on

road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಹಿಂಬದಿಯಿಂದ ಬಂದ ಲಾರಿಯೊಂದು ಕಾರಿಗೆ (Road Accident) ಗುದ್ದಿದೆ. ಗುದ್ದಿದ ರಭಸಕ್ಕೆ ಓರ್ವ ವಿಧ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗೇಟ್ ಬಳಿ ಅಪಘಾತ‌ ನಡೆದಿದೆ.

ತೋರಣಗಲ್ಲು ಮೂಲದ ಪಲ್ಲವಿ (18) ಮೃತ ದುರ್ದೈವಿ. ಚಾಲಕ ಸುರೇಶ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಕಾರೊಂದು ಬೆಂಗಳೂರು ಕಡೆಯಿಂದ ಬಳ್ಳಾರಿ ಕಡೆ ತೆರಳುತ್ತಿತ್ತು. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದಲೇ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ರಾಂಪೂರ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಂಪೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದಾಖಲು ಮಾಡಲಾಗಿದೆ.

ರಸ್ತೆ ದಾಟುತ್ತಿದ್ದ ವಿಕಲಚೇತನನ ಪ್ರಾಣ ಕಸಿದ ಲಾರಿ

ಚಿತ್ರದುರ್ಗದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ರಸ್ತೆ ದಾಟುವ ವ್ಯಕ್ತಿ ಮೇಲೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದವನ ಮೇಲೆ ಹರಿದಿದ್ದು, ಕ್ಷಣಾರ್ಧದಲ್ಲಿ ವ್ಯಕ್ತಿಯ ಪ್ರಾಣಪಕ್ಷಿ ಹಾರಿಹೋಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗೇಟ್ ಬಳಿ ಘಟನೆ ನಡೆದಿದೆ.

Road Accident
Road Accident

ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಲ್ಲಿಕಾರ್ಜುನ್ (52) ಮೃತ ದುರ್ದೈವಿ. ತಿರುಮಲಾಪುರ ಗ್ರಾಮದ ನಿವಾಸಿಯಾದ ಮಲ್ಲಿಕಾರ್ಜುನ ವಿಕಲಚೇತನರಾಗಿದ್ದರು. ರಸ್ತೆ ದಾಟುವ ವೇಳೆ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಲಾರಿ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ಬಳಿಕ ನಾಪತ್ತೆಯಾಗಿದ್ದ ಲಾರಿ ಚಾಲನನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸ್ಥಳಕ್ಕೆ ಚಿತ್ರಹಳ್ಳಿ ಪಿಎಸ್‌ಐ ಕಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Ramakrishna Ashram : ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

ಒಂದು ಗಂಟೆ ಅಂತರದಲ್ಲಿ ಒಂದೇ ಕಡೆ ಎರಡು ಅಪಘಾತ!

ಒಂದೇ ಸ್ಥಳದಲ್ಲಿ ಒಂದೆರಡು ಗಂಟೆ ಅಂತರದಲ್ಲಿ ಎರಡು ಅಪಘಾತಗಳು ಸಂಭವಿಸಿದೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ವಿಂಡ್ಸರ್ ಮ್ಯಾನರ್ ಬ್ರಿಡ್ಜ್‌ ಎಡ್ಜ್‌ಗೆ ಒಂದೇ ಜಾಗದಲ್ಲಿ ಪ್ರತ್ಯೇಕವಾಗಿ ಎರಡು ಆಟೋಗಳು ಡಿಕ್ಕಿ ಹೊಡೆದಿವೆ.

ಶನಿವಾರ ಬೆಳಗ್ಗೆ 4 ಗಂಟೆಗೆ ಹಾಗೂ 6 ಗಂಟೆಯ ಸಂದರ್ಭದಲ್ಲಿ ಅಪಘಾತ ನಡೆದಿದೆ. ಒಂದೇ ಜಾಗದಲ್ಲಿ ಪ್ರತ್ಯೇಕ ಆಟೋಗಳ ಅಪಘಾತದಿಂದಾಗಿ ನಝೀರ್ ಎಂಬಾತನ ತಲೆಗೆ ಗಂಭೀರ ಗಾಯವಾಗಿದೆ. ಪ್ಯಾಸೆಂಜರ್ ಕರೆದೊಯ್ಯುವ ವೇಳೆ ಅಪಘಾತ ನಡೆದಿದೆ. ಪ್ಯಾಸೆಂಜರ್‌ಗೆ ತರಚಿದ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

Karnataka Rain : ಕಾರವಾರದಲ್ಲಿ ಬಿಣಗಾ ಕಾರವಾರ ಟನೆಲ್‌ ಬಳಿ ಕಲ್ಲು ಕುಸಿದಿದ್ದು, ರಸ್ತೆ ಬಂದ್‌ ಮಾಡಿದ್ದಾರೆ. ಬೆಳಗಾವಿಯಲ್ಲಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ವಿಜಯನಗರದಲ್ಲಿ ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ ಹಾಕಲಾಗಿದೆ.

VISTARANEWS.COM


on

By

karnataka rain
Koo

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ (Karnataka Rain) ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿದೆ. ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಕಲ್ಲು, ಮಣ್ಣು ಜಾರಿ ಬಿದ್ದಿದೆ. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದಾರೆ.

ಸ್ಥಳಕ್ಕೆ ಕಾರವಾರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿದ್ದಾರೆ. ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

karnataka rain
karnataka rain

ಕುಸಿದು ಬಿದ್ದ ದೇವಸ್ಥಾನದ ಗೋಪುರ

ಬೆಳಗಾವಿ: ನಿರಂತರ ಮಳೆಗೆ ಬೆಳಗಾವಿಯ ಕಿತ್ತೂರಿನ ಕೊಂಡವಾಡ ಚೌಕಿನಲ್ಲಿರುವ ಕರೆಮ್ಮ ದೇವಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ಕಳೆದ ಮೂರು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಗೋಪುರ ಸಂಪೂರ್ಣವಾಗಿ ಕುಸಿದು, ಪಕ್ಕದ ಮಳಿಗೆಯ ಮೇಲೆ ಗೋಪುರ ಬಿದ್ದಿದೆ. ಘಟನೆಯಲ್ಲಿ ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ನಿನ್ನೆ ಶುಕ್ರವಾರವಷ್ಟೇ ಕಿತ್ತೂರು ಕೋಟೆಯ ಆವರಣದಲ್ಲಿದ್ದ ಐತಿಹಾಸಿಕ ವಾಚ್ ಟವರ್ ಕುಸಿದು ಬಿದ್ದಿತ್ತು.

ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ

ಜಲಾಶಯದಿಂದ 1.80 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ ವಿಜಯನಗರದ ವಿಶ್ವ ವಿಖ್ಯಾತ ಹಂಪಿಯಲ್ಲಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ. ನದಿಯ ರೌದ್ರ ನರ್ತನ ಹೆಚ್ಚಾಗಿದ್ದರಿಂದ ಹಂಪಿಯ ಹಲವು ಸ್ಮಾರಕಗಳು ಮುಳುಗಿವೆ. ಅದರಲ್ಲೂ ಐತಿಹಾಸಿಕ ರಾಮ – ಲಕ್ಷ್ಮಣ ದೇಗುಲಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಪ್ರವಾಸಿಗರು ಉಳಿದುಕೊಳುತ್ತಿದ್ದ ಮೂರು ಕಲ್ಲಿನ ಮಂಟಪಗಳು ಮುಕ್ಕಾಲು ಭಾಗ ಮುಳುಗಡೆಯಾಗಿದೆ.

ತುಂಗಭದ್ರಾ ನದಿ ನೀರು ನುಗ್ಗಿದ್ದರಿಂದ ದೇಗುಲಕ್ಕೆ ಭಕ್ತರ ಸಂಖ್ಯೆಯಲ್ಲಿ ಭಾರೀ ವಿರಳವಾಗಿದೆ. ರಾಮ – ಲಕ್ಷ್ಮಣ, ಸೀತೆ ದೇಗುಲ 2011, 2017ರಲ್ಲಿ ಎರಡು ಬಾರಿ ಸಂಪೂರ್ಣ ಮುಳುಗಡೆ ಆಗಿತ್ತು. ವಾಲಿ ಎನ್ನುವ ರಾಜನನ್ನು ಸಂಹರಿಸಿ ಸುಗ್ರೀವ ಅನ್ನೋ ರಾಜನಿಗೆ ಪಟ್ಟಾಭಿಷೇಕ ಮಾಡಿದ ಜಾಗವೇ ರಾಮ-ಲಕ್ಷ್ಮಣ ದೇಗುಲವಾಗಿದೆ. ರಾಮ-ಲಕ್ಷ್ಮಣ, ಸೀತಾಮಾತೆ, ಆಂಜನೇಯ ಹಾಗೂ ಸುಗ್ರೀವ ರಾಜ ಸೇರಿ ಐದು ಜನರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

ವಿಧಿ, ವಿಧಾನ ಮಂಟಪ, ಸ್ನಾನ ಘಟ್ಟ, ಪುರಂದರ ದಾಸರ ಮಂಟಪ ಸೇರಿ ಹತ್ತಾರು ಸ್ಮಾರಕಗಳು ಈಗಾಗಲೇ ಮುಳುಗಡೆಯಾಗಿದೆ. ಸ್ಮಾರಕಗಳು ಎಲ್ಲಿವೆ ಎಂಬುದು ಗೊತ್ತಾಗದ ರೀತಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ.

ಇದನ್ನೂ ಓದಿ: Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

ಮುಳುಗಿದ ಸಂಗಮೇಶ್ವರ ದೇವಾಲಯ

ಮಲೆನಾಡಿನ ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಅಬ್ಬರಕ್ಕೆ ಮಲೆನಾಡಿನ ನದಿಗಳು ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ತುಂಗಾ, ಭದ್ರಾ ಹರಿಯುತ್ತಿದೆ‌. ತುಂಗಾ, ಭದ್ರಾ ನದಿ ಸಂಗಮ ಕ್ಷೇತ್ರ ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೂಡ್ಲಿ ತುಂಗಾ ಹಾಗೂ ಭದ್ರಾ ನದಿ ಬಂದು ಸಂಗಮ ಆಗುವ ಪುಣ್ಯಕ್ಷೇತ್ರವಾಗಿದ್ದು, ಸಂಗಮೇಶ್ವರ ದೇವಾಲಯ ಮುಳುಗಿದೆ.

ಏತ ನೀರಾವರಿ ಬ್ಯಾರೇಜ್‌ಗೆ ಪ್ರವಾಸಿಗರ ದಂಡು

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಬ್ಯಾರೇಜ್‌ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಮುಂಡರಗಿ ತಾಲೂಕಿನ ಹಮ್ಮಿಗಿ, ಗುಮ್ಮಗೋಳ, ವಿಠಲಾಪುರ ಸೇರಿದಂತೆ ಅನೇಕ ಗ್ರಾಮದ ರೈತರು ತತ್ತರಿಸಿದ್ದಾರೆ.

ಬ್ಯಾರೇಜ್‌ನ 26 ಗೇಟ್‌ಗಳಲ್ಲಿ 19 ಗೇಟ್‌ಗಳು ತೆರದು 2,90,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಬ್ಯಾರೇಜ್‌ನಿಂದ ರಭಸವಾಗಿ ಹರಿಯುತ್ತಿರುವ ನೀರು ನೋಡಲು ಕಿರು ಆಣೆಕಟ್ಟು ವೀಕ್ಷಿಸಲು ಪ್ರವಾಸಿಗರು ದೌಡಯಿಸಿದ್ದಾರೆ. ಬ್ಯಾರೇಜ್ ಎದುರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ.

ಜೋಗ ಜಲಪಾತಕ್ಕೆ ಪ್ರವಾಸಿಗರು ಫಿದಾ

ಲಿಂಗನಮಕ್ಕಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ವಿಶ್ವವಿಖ್ಯಾತ ಜೋಗ ಜಲಪಾತ ಕಣ್ಮನ ಸೆಳೆಯುತ್ತಿದೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Wayanad Landslide: ವಯನಾಡ್‌ನಲ್ಲಿ ಕರ್ತವ್ಯಪರತೆ ಮೆರೆದ ಕನ್ನಡತಿ ಜಿಲ್ಲಾಧಿಕಾರಿ, ಭೂಕುಸಿತ ಸ್ಥಳದಲ್ಲೇ ಮೊಕ್ಕಾಂ

Wayanad Landslide: ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಮೇಘಶ್ರೀ, ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕಾರ್ಯಾಚರಣೆಯ ಪ್ರತಿ ನಿಮಿಷವೂ ಅತ್ಯಂತ ಅಮೂಲ್ಯವಾದುದು ಎನ್ನುತ್ತಾರೆ. ದಣಿವರಿಯದೆ ಕೆಲಸ ಮಾಡುತ್ತಿರುವ ಅವರು ಭೂಕುಸಿತಕ್ಕೆ ಬಲಿಯಾದವರ ಶವಗಳನ್ನು ವಯನಾಡ್ ಸ್ಮಶಾನದಲ್ಲಿ ಸಾಮೂಹಿಕವಾಗಿ ಅಂತ್ಯಸಂಸ್ಕಾರ ಮಾಡುವಾಗಲೂ ಅಲ್ಲಿದ್ದರು.

VISTARANEWS.COM


on

meghashree DC Wayanad landslide 2
Koo

ಬೆಂಗಳೂರು: ವಯನಾಡ್ ಜಿಲ್ಲಾಧಿಕಾರಿ (Wayanad District Commissioner) ಮೇಘಶ್ರೀ ಡಿ.ಆರ್ (Meghashree DR) ಭೂಕುಸಿತ (Wayanad Landslide, Kerala Landslide) ಸಂಭವಿಸಿದ ದಿನದಿಂದಲೂ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಾರ್ಯಾಚರಣೆಯ (Rescue Operation) ಸಂಪೂರ್ಣ ಉಸ್ತುವಾರಿ ವಹಿಸಿದ್ದು, ರಕ್ಷಣೆ ಹಾಗೂ ಕಾಳಜಿ ವ್ಯವಸ್ಥೆಗಳ ಮೇಲೆ ಇಡೀ ದಿನ ನಿಗಾ ಇಟ್ಟಿರುತ್ತಾರೆ. ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾದ ಅವರ ಕರ್ತವ್ಯ ನಡುರಾತ್ರಿಯವರೆಗೂ ಮುಂದುವರಿಯುತ್ತದೆ. ಸ್ಥಳೀಯ, ಕೇರಳಿಗರ ಮೆಚ್ಚುಗೆ ಪಡೆದಿರುವ ಈ ಜಿಲ್ಲಾಧಿಕಾರಿ ಕನ್ನಡತಿ, ಚಿತ್ರದುರ್ಗದವರು ಎಂಬುದು ವಿಶೇಷ.

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಮೇಘಶ್ರೀ, ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕಾರ್ಯಾಚರಣೆಯ ಪ್ರತಿ ನಿಮಿಷವೂ ಅತ್ಯಂತ ಅಮೂಲ್ಯವಾದುದು ಎನ್ನುತ್ತಾರೆ. ದಣಿವರಿಯದೆ ಕೆಲಸ ಮಾಡುತ್ತಿರುವ ಅವರು ಭೂಕುಸಿತಕ್ಕೆ ಬಲಿಯಾದವರ ಶವಗಳನ್ನು ವಯನಾಡ್ ಸ್ಮಶಾನದಲ್ಲಿ ಸಾಮೂಹಿಕವಾಗಿ ಅಂತ್ಯಸಂಸ್ಕಾರ ಮಾಡುವಾಗಲೂ ಅಲ್ಲಿದ್ದರು.

ಮೇಘಶ್ರೀ ಅವರ ತಂದೆ ರುದ್ರಮುನಿ ಎಸ್‌ಬಿಐನಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ನಿವೃತ್ತರಾದವರು. ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರು. “ಸೋಮವಾರದವರೆಗೂ ನಾನು ವಯನಾಡಿನಲ್ಲಿದ್ದೆ. ಆ ಮಧ್ಯಾಹ್ನ ವಯನಾಡನ್ನು ಬಿಟ್ಟು ಬೆಂಗಳೂರಿಗೆ ಬಂದಿದ್ದೆ. ಘಟನೆ ಮಧ್ಯರಾತ್ರಿ ನಡೆದಿದೆ. ಕೆಲವೇ ಗಂಟೆಗಳಲ್ಲಿ ಮೇಘಶ್ರೀ ಸ್ಥಳಕ್ಕೆ ಧಾವಿಸಿದ್ದಳು. ಈ ತುರ್ತು ಪರಿಸ್ಥಿತಿಯ ಸಮಯದಲ್ಲಿ, ನನ್ನ ಮಗಳು ವಯನಾಡಿನ ಜನರನ್ನು ರಕ್ಷಿಸುವ ಅತ್ಯಂತ ಕಷ್ಟಕರವಾದ ಕೆಲಸವನ್ನು ಮಾಡುತ್ತಿರುವುದು ನನಗೆ ಅತ್ಯಂತ ಹೆಮ್ಮೆ ತಂದಿದೆ” ಎಂದು ತಂದೆ ಹೇಳಿದ್ದಾರೆ.

“ವಯನಾಡಿನ ಪರಿಸ್ಥಿತಿ ಮತ್ತು ಒಬ್ಬ ತಂದೆಯಾಗಿ ನನ್ನ ಮಗಳ ಬಿಡುವಿಲ್ಲದ ಕೆಲಸದ ಬಗ್ಗೆ ನಾನು ಉದ್ವಿಗ್ನಗೊಂಡಿದ್ದೇನೆ. ಆದರೆ ನಾನು ಮೊದಲು ದೇಶದ ಪ್ರಜೆ; ತನ್ನ ಕರ್ತವ್ಯಕ್ಕೆ ಹಾಜರಾಗಲು ಮತ್ತು ಕಷ್ಟದಲ್ಲಿರುವ ಜನರಿಗೆ ಸೇವೆ ಸಲ್ಲಿಸಲು ಆಕೆಗೆ ಹೇಳಿದ್ದೇನೆ. ಏಕೆಂದರೆ ಜನರಿಗೆ ಸೇವೆ ಮಾಡುವುದು ಹೆಚ್ಚು ಮುಖ್ಯ” ಎಂದು ಅವರು ಹೇಳಿದ್ದಾರೆ.

ಮೇಘಶ್ರೀ ಅವರು ಎರಡೂವರೆ ವರ್ಷ ಪ್ರಾಯದ ವಿಸ್ಮಯಾ ಮತ್ತು 6 ತಿಂಗಳ ಹಸುಳೆ ಧೃತಿ ಎಂಬ ಎರಡು ಮಕ್ಕಳ ತಾಯಿ. ಮೇಘಶ್ರೀ ಅವರ ಪತಿ ಡಾ.ವಿಕ್ರಂ ಸಿಂಹ ಅವರು ಕರ್ನಾಟಕ ಕೃಷಿ ವಿವಿಯ ಸಹಾಯಕ ಪ್ರಾಚಾರ್ಯರಾಗಿದ್ದಾರೆ. ತಮ್ಮ ಕುಟುಂಬದ ಪೂರ್ಣ ಬೆಂಬಲವೇ ತಮ್ಮ ಯಶಸ್ಸಿಗೆ ಪ್ರಧಾನ ಕಾರಣ ಎನ್ನುತ್ತಾರೆ ಮೇಘಶ್ರೀ.

ಅವಿಭಕ್ತ ಕುಟುಂಬದಲ್ಲಿ ಹುಟ್ಟಿ ಬೆಳೆದ ಮೇಘಶ್ರೀ ಶಾಲೆ ಹಾಗೂ ಕಾಲೇಜು ಹಂತಗಳನ್ನು ಉತ್ತಮ ಅಂಕಗಳೊಂದಿಗೆ ಪೂರೈಸಿದ್ದಾರೆ. ಕಂಪ್ಯೂಟರ್ ಸೈನ್ಸ್‌ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದ ಇವರು, ಕ್ಯಾಂಪಸ್ ಸಂದರ್ಶನದಲ್ಲಿ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯೊಂದರ ಉದ್ಯೋಗಿಯಾದರು. ಬಾಲ್ಯದಲ್ಲೇ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದ ಮೇಘಶ್ರೀ, ಇಂಜಿನಿಯರಿಂಗ್‌ ಪದವಿಗೆ ತಮ್ಮ ಸಾಧನೆಯನ್ನು ಸೀಮಿತಗೊಳಿಸದೆ, ಕಠಿಣ ಪರಿಶ್ರಮದ ಮೂಲಕ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾದವರು.

ತಂದೆ ರುದ್ರಮುನಿ, ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾದಲ್ಲಿ ಚೀಫ್ ಮ್ಯಾನೇಜರ್ ಆಗಿದ್ದರು. ತಾಯಿ ರುಕ್ಮಿಣಿದೇವಿ ಪ್ರಾಥಮಿಕ ಶಾಲಾ ಶಿಕ್ಷಕಿ. ಚಿತ್ರದುರ್ಗದ ಸೇಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣವನ್ನು ಪೂರೈಸಿದರು. ಎಸ್‌ಎಸ್‌ಎಲ್‌ಸಿ ಬಳಿಕ ತಂದೆಯವರಿಗೆ ವರ್ಗಾವಣೆಯಾಗಿದ್ದರಿಂದ ನಂತರದ ಶಿಕ್ಷಣವನ್ನು ಬೆಂಗಳೂರಿನಲ್ಲಿ ಪೂರೈಸಿದರು. ಎಂಇಎಸ್ ಕಿಶೋರ್ ಕೇಂದ್ರದಲ್ಲಿ ಪಿಯುಸಿ ಹಾಗೂ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಬಿಇ ಶಿಕ್ಷಣ ಪಡೆದರು.

ಮೂರು ವರ್ಷ ಸಾಫ್ಟ್‌ವೇರ್‌ ಕೆಲಸ ಮಾಡಿದ ಮೇಘಶ್ರೀ, 2014ರಲ್ಲಿ ಉದ್ಯೋಗ ತೊರೆದು ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸಲು ಪ್ರಾರಂಭಿಸಿದರು. ಒಂದು ವರ್ಷದ ಸಿದ್ಧತೆಯ ಬಳಿಕ 2015ರಲ್ಲಿ ಯುಪಿಎಸ್‌ಸಿ ಜತೆಗೆ ಕೆಎಎಸ್ ಪರೀಕ್ಷೆಯನ್ನೂ ಬರೆದರು. ಕೇವಲ 1.6 ಅಂಕಗಳಿಂದ ಬ್ಯಾಂಕ್ ಪಟ್ಟಿಯಿಂದ ವಂಚಿತರಾಗಿದ್ದರಿಂದ, ಪೂರ್ಣ ಪ್ರಮಾಣದಲ್ಲಿ ಯುಪಿಎಸ್‌ಸಿ ಮೇಲೆಯೇ ಗಮನ ಕೇಂದ್ರೀಕರಿಸಿದರು. ಸತತ ಅಧ್ಯಯನದೊಂದಿಗೆ 2016ರಲ್ಲಿ 2ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಎದುರಿಸಿ ಐಎಎಸ್‌ಗೆ ಆಯ್ಕೆಯಾಗಿದ್ದರು.

ಇದನ್ನೂ ಓದಿ: Wayanad Landslide: ಇಲ್ಲಿಗೇಕೆ ಬಂದ್ರಿ? ಕಾರ್ಯಾಚರಣೆಗೆ ಅಡ್ಡಿ ಮಾಡೋಕಾ?- ರಾಹುಲ್‌ ಗಾಂಧಿ ಮೇಲೆ ಕೂಗಾಡಿದ ವ್ಯಕ್ತಿ-ವಿಡಿಯೋ ಇದೆ

Continue Reading

ಮಳೆ

Karnataka Weather : 7 ಜಿಲ್ಲೆಗಳಲ್ಲಿ ವ್ಯಾಪಿಸಲಿದೆ ಭರ್ಜರಿ ಮಳೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವಡೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain News) ಅಬ್ಬರ ಕಡಿಮೆ ಆಗುತ್ತಿದ್ದು, ಕೆಲವಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather forecast) ನೀಡಿದೆ. 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು,ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿತ

ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿದು ಬಿದ್ದಿದೆ. 15ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದ ವಾಚ್ ಟವರ್ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕುಸಿದಿದೆ.

ಹಾವೇರಿಯಲ್ಲಿ ಬಾಲಕನ ಮೇಲೆ ಕುಸಿದ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರಂತರ ಮಳೆಗೆ ಶಾಲೆಯ ಚಾವಣಿ ಕುಸಿದು ಬಾಲಕನಿಗೆ ಗಾಯವಾಗಿದೆ. ಹಾವೇರಿಯ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. 25 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 5 ನೇ ತರಗತಿಯಲ್ಲಿ ಓದುತ್ತಿದ್ದ ವಿನಾಯಕ್ ಮೋರೆ ಗಾಯಗೊಂಡವನು. ಬಾಲಕನ ಕಾಲಿನ ಮೇಲೆ ಚಾವಣಿ ಕಂಬ ಬಿದ್ದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಗ್ರಾಮದಲ್ಲೂ ಮನೆ ಕುಸಿದಿದೆ. ಕುಮಾರ ಮಳೆಪ್ಪನವರ ಮನೆಯು ಕುಸಿದು ಬಿದ್ದಿದೆ. ಬೆಳಗಿನ ಜಾವದಲ್ಲಿ ಮಣ್ಣು ಕುಸಿದಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪಾರಾಗಿದ್ದಾರೆ.

ಇದನ್ನೂ ಓದಿ: Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಸತತ ಮೂರನೇ ಬಾರಿಗೆ ನೆರೆ ಹಾವಳಿಯಿಂದಾಗಿ ಬೈಂದೂರು ತಾಲೂಕಿನ ನಾವುಂದ ಕುದ್ರು ವಿನಲ್ಲಿ ವಾಸವಾಗಿರುವ ಏಳು ಮನೆಗಳಿಗೆ ಜಲದಿಗ್ಬಂದನ ಹಾಕಲಾಗಿದೆ. ದೋಣಿಯ ಮೂಲಕವೇ ದೈನಂದಿನ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮನೆ ಮುಂಭಾಗವೇ ಭೂಮಿ ಛಿದ್ರ

ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಭಾರಿ ಮಳೆಗೆ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕೊಪ್ಪ ತಾಲೂಕಿನ ಬಸರಿ ಕಟ್ಟೆ ಚೆನ್ನಕಲ್ಲು ಗ್ರಾಮದಲ್ಲಿ ನಾಗರಾಜ್ ಎಂಬುವವರ ಮನೆ ಮುಂದೆ ಭೂಮಿ ಛಿದ್ರ ಛಿದ್ರಗೊಂಡಿದೆ. 300 ಅಡಿಯಷ್ಟು ದೂರಕ್ಕೆ ಭೂಮಿ ಜಾರಿ ಹೋಗಿದೆ. ಭೂಮಿ ಕುಸಿತದ ರಭಸಕ್ಕೆ ಮನೆಯ ಅಡಿಪಾಯ, ಗೋಡೆಗಳಲ್ಲಿ ಬಿರುಕು ಉಂಟಾಗಿದೆ. ಮಳೆ ಹೆಚ್ಚಾದಂತೆ ಮನೆಯ ಮುಂಭಾಗ ಮತ್ತಷ್ಟು ಧರೆ ಕುಸಿತ ಉಂಟಾಗುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ 4-5 ಎಕರೆ, ಅಡಿಕೆ ತೋಟವು ನಾಶವಾಗಿದೆ.

ಶಿರಾಡಿಘಾಟ್ ಭೂ ಕುಸಿತ; ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಟೀಂ ಭೇಟಿ

ಹಾಸನದ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಸಮೀಪದ ಗುಡ್ಡಕುಸಿತ ಸ್ಥಳಕ್ಕೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ತಿಳಿಯಲು ಸ್ಥಳ ಪರಿಶೀಲನೆ ನಡೆಸಿದ್ದರು. ಒಂದೇ ಸ್ಥಳದಲ್ಲಿ ನಿರಂತರವಾಗಿ ಭೂಮಿ ಕುಸಿಯುತ್ತಿದೆ. ಸಕಲೇಶಪುರ ತಾಲೂಕಿನ ಹಾರ್ಲೇ ಕೂಡಿಗೆ ಗ್ರಾಮದ ಸಮೀಪ ಭೂಮಿ ಕುಸಿದಿತ್ತು. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಕುಸಿತವಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾರಾಂತ್ಯದಲ್ಲಿ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಇನ್ನೂ ಜಲಾವೃತ ರಸ್ತೆಯಲ್ಲಿ‌ ಗ್ರಾಮಸ್ಥರು ಬೈಕ್‌ ಓಡಿಸಿ ಹುಚ್ಚಾಟ ಮೆರೆದಿದ್ದಾರೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ (Karnataka Weather Forecast) ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ (Rain News) ದುರ್ಬಲವಾಗಿತ್ತು. ಮಣಿ 19 ಸೆಂ.ಮೀ, ಪುತ್ತೂರು ಎಚ್‌ಎಂಎಸ್ 16 ಸೆಂ.ಮೀ, ಮಂಗಳೂರು, ಪಣಂಬೂರು ವೀಕ್ಷಣಾಲಯ 15 ಸೆಂ.ಮೀ ಮಳೆಯಾಗಿದೆ. ಕಾರ್ಕಳ, ಮಂಕಿ , ಆಗುಂಬೆ ಎಮೋ 14 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಕದ್ರ, ಉಪ್ಪಿನಂಗಡಿ13 ಸೆಂ.ಮೀ ಮಳೆಯಾಗಿದೆ. ಮಂಗಳೂರು ಎಪಿ ವೀಕ್ಷಣಾಲಯ , ಗೇರ್ಸೊಪ್ಪ, ಕುಂದಾಪುರ 12 ಸೆಂ.ಮೀ ಮಳೆಯಾಗಿದೆ.

ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ

ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

ಜಲಾವೃತ ರಸ್ತೆಯಲ್ಲಿ‌ ಗ್ರಾಮಸ್ಥರ ಹುಚ್ಚಾಟ

ತುಂಗಭದ್ರಾ ಜಲಾಶಯ‌ ಹಿನ್ನೀರು ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ವಿಜಯನಗರ ಜಿಲ್ಲೆಯ ಮಕರಬ್ಬಿ-ಬ್ಯಾಲಹುಣಸೆ ಗ್ರಾಮದ ಸಂಪರ್ಕ ರಸ್ತೆ ಜಲಾವೃತಗೊಂಡಿದೆ. ಸಂಪರ್ಕ ಕಡಿತದಿಂದಾಗಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ವ್ಯಾಪ್ತಿಗೆ ಒಳಪಡುವ ಮಕರಬ್ಬಿ ಗ್ರಾಮಸ್ಥರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ.

ಮಕರಬ್ಬಿ ಗ್ರಾಮದಿಂದ ಬ್ಯಾಲಹುಣಸೆ ಶಾಲೆಗೆ ತೆರಳಬೇಕಿದ್ದ ಶಾಲಾ ಮಕ್ಕಳಿಗೆ ಸಂಕಷ್ಟ ಎದುರಾಗಿದೆ. ರಸ್ತೆ ಸಂಪರ್ಕ ಕಡಿತವಾಗಿದ್ದರಿಂದ 2 ದಿನದಿಂದ‌ ಶಾಲೆಗೆ ತೆರಳದೇ ಮಕ್ಕಳು ಗೈರಾಗಿದ್ದಾರೆ. ಮಕ್ಕಳ ಪರದಾಟ ಒಂದೆಡೆಯಾದರೆ ವಯೋವೃದ್ಧರು, ಮಹಿಳೆಯರು ಬೇರೆ ಗ್ರಾಮಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ.

ಇವೆಲ್ಲದರ ಮಧ್ಯೆ ಬೈಕ್ ಸವಾರರು ಹುಚ್ಚಾಟ ಮೆರೆದಿದ್ದಾರೆ. ಜಲಾವೃತವಾದ ರಸ್ತೆ ಮಧ್ಯೆ ಸಾಲು ಸಾಲು ವಾಹನ ನಿಲ್ಲಿಸಿ ಕ್ಲೀನಿಂಗ್‌ನಲ್ಲಿ ತೊಡಗಿದ್ದರು. ಮೊಣಕಾಲುವರೆಗೆ ಜಲಾವೃತವಾದ ರಸ್ತೆಯಲ್ಲಿಯೇ ಬೈಕ್ ನಿಲ್ಲಿಸಿ ಸ್ವಚ್ಚಗೊಳಿಸುತ್ತಿದ್ದರು. ಜತೆಗೆ ಜಲಾವೃತ ರಸ್ತೆಯಲ್ಲಿ ‌ ಬೈಕ್‌ ಓಡಿಸಿದ್ದಾರೆ. ಸ್ವಲ್ಪ ಯಾಮಾರಿದ್ದರೂ ನೀರಿನ‌ ರಭಸಕ್ಕೆ ಬೈಕ್ ಸಮೇತ ಕೊಚ್ಚಿಕೊಂಡು ಹೋಗುವ ಸಾಧ್ಯತೆ ಇದೆ. ಟಿಬಿ ಡ್ಯಾಂ ಭರ್ತಿಯಾಗಿದ್ದರಿಂದ ಹಿನ್ನೀರು ಪ್ರದೇಶದ ಗ್ರಾಮಗಳಲ್ಲಿ ಇದೀಗ ಪ್ರವಾಹ ಭೀತಿ ಎದುರಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಕ್ರೀಡೆ1 min ago

Paris Olympics: ಬಿಸಿ ಗಾಳಿಗೆ ಕಂಗೆಟ್ಟಿದ್ದ ಭಾರತೀಯ ಕ್ರೀಡಾಪಟುಗಳಿಗೆ 40 ಎ.ಸಿ. ರವಾನಿಸಿದ ಕ್ರೀಡಾ ಸಚಿವಾಲಯ

Post Office GDS Recruitment 2024
ಉದ್ಯೋಗ2 mins ago

Post Office GDS Recruitment 2024: ಪೋಸ್ಟ್‌ ಆಫೀಸ್‌ನ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ. 5 ಕೊನೆಯ ದಿನ

Anchor Shalini reveals her paycheck per day for paapa pandu tv serial
ಕಿರುತೆರೆ16 mins ago

Anchor Shalini: ಅವತ್ತಿನ ಕಾಲಕ್ಕೆ ‘ಪಾಪ ಪಾಂಡು’ ಖ್ಯಾತಿಯ ಶಾಲಿನಿ ಪಡೆಯುತ್ತಿದ್ದ ಸಂಭಾವನೆ ಏಷ್ಟು?

Ayodhya Rape Case
ದೇಶ18 mins ago

ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಎಸ್‌ಪಿ ನಾಯಕ ಮೊಯೀದ್‌ ಖಾನ್‌ ಬೇಕರಿ ಧ್ವಂಸ! Video ಇದೆ

poison food bellary news
ಬಳ್ಳಾರಿ38 mins ago

Poison Food: ವಿಷಕಾರಿ ಬೀಜ ತಿಂದು 8 ಮಕ್ಕಳು ಅಸ್ವಸ್ಥ

Wayanad Landslide
ದೇಶ39 mins ago

Wayanad Landslide: ವಯನಾಡು ಭೂಕುಸಿತ: ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Paris Olympics
ಕ್ರೀಡೆ54 mins ago

Paris Olympics Archery: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ದೀಪಿಕಾ; ಭಜನ್ ಕೌರ್​ಗೆ ಸೋಲು

Viral Video
Latest58 mins ago

Viral Video: ಮೈಗೆ ಟವೆಲ್ ಸುತ್ತಿಕೊಂಡು ಬೀದಿ ತುಂಬಾ ಓಡಾಡಿದ ಯುವತಿ; ನೋಡಿದ ಜನ ಸುಸ್ತು!

Wayanad Tragedy
Latest1 hour ago

Wayanad Tragedy : ವಯನಾಡ್ ಭೂಕುಸಿತ; ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

DMK Leader Controversy
ದೇಶ1 hour ago

DMK leader Controversy: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ: ಡಿಎಂಕೆ ನಾಯಕನ ವಿಡಿಯೋ ಫುಲ್‌ ವೈರಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ3 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌