Pralhad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್‌‌ನಿಂದ ರಾಜಕೀಯ; ಪ್ರಲ್ಹಾದ್‌ ಜೋಶಿ - Vistara News

ಕರ್ನಾಟಕ

Pralhad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್‌‌ನಿಂದ ರಾಜಕೀಯ; ಪ್ರಲ್ಹಾದ್‌ ಜೋಶಿ

Pralhad Joshi: ಕೇರಳ ಸರ್ಕಾರಕ್ಕೆ ಜುಲೈ 23 ರಂದೇ ಮುನ್ನೆಚ್ಚರಿಕೆ, ಅಗತ್ಯ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿದೆ. ಹಾಗಿದ್ದರೂ ಸ್ಥಳೀಯ ಸರ್ಕಾರ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಿದೆ. ಕೇರಳ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಿಲ್ಲ. ಅದನ್ನು ಕೇಂದ್ರದ ಮೇಲೆ ಹೊರಿಸುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

VISTARANEWS.COM


on

Union Minister Pralhad Joshi latest statement in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎನ್‌ಡಿಎ ಮೈತ್ರಿಕೂಟ ನಡೆಸುತ್ತಿರುವ ಪಾದಯಾತ್ರೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಮತ್ತು ಜಾನ್ ಬ್ರಿಟಾಸ್ ಅವರು ಕೇರಳದ ವಯನಾಡ್ ದುರಂತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಜೋಶಿ ಆಕ್ಷೇಪಿಸಿದರು.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಕೇರಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅವಘಡಕ್ಕೂ ಮೊದಲೇ ಮುನ್ನೆಚ್ಚರಿಕೆ ನೀಡಿದೆ ಎಂದು ಸ್ಪಷ್ಟಪಡಿಸಿದರು. ನಾವು ನಿಜಕ್ಕೂ ಮೊದಲೇ ಎಚ್ಚರಿಕೆ ನೀಡಿದ್ದೇವೆ ಎಂದು ಕೇಂದ್ರ ಗೃಹ ಸಚಿವರು ಸ್ಪಷ್ಟಪಡಿಸಿದ ನಂತರವೂ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದು, ಇದು ರಾಜಕೀಯ ಕಾರಣಕ್ಕಲ್ಲದೆ ಮತ್ತೇನು ಅಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹರಿಹಾಯ್ದರು.

ಜುಲೈ 23 ರಂದೇ ಕೇರಳ ಸರ್ಕಾರಕ್ಕೆ ಮುನ್ನೆಚ್ಚರಿಕೆ, ಅಗತ್ಯ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿದೆ. ಹಾಗಿದ್ದರೂ ಸ್ಥಳೀಯ ಸರ್ಕಾರ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಿದೆ. ಕೇರಳ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಿಲ್ಲ. ಅದನ್ನು ಕೇಂದ್ರದ ಮೇಲೆ ಹೊರಿಸುವುದು ಸರಿಯಲ್ಲ ಎಂದು ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

ವಯನಾಡ್ ದುರಂತದ ಕುರಿತು ಕಾಂಗ್ರೆಸ್ ಆರೋಪ ಮಾಡಿದರೆ ಅದು ರಾಜಕೀಯವಲ್ಲ, ನಾವು ಸ್ಪಷ್ಟನೆ ನೀಡಿದರೆ ರಾಜಕೀಯ ಮಾಡಿದ ಹಾಗೆ ಆಗುತ್ತದೆಯೇ? ಎಂದು ಸಚಿವರು ಪ್ರಶ್ನಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

Namma Metro: ಬೆಂಗಳೂರು ನಗರದ ದೊಡ್ಡಕಲ್ಲಸಂದ್ರ ಬಳಿ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Namma Metro
Koo

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಪದೇಪದೆ ಅವಘಡಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು, ಸಿಬ್ಬಂದಿ ಎಚ್ಚರಗೊಂಡಂತೆ ಕಾಣುತ್ತಿಲ್ಲ. ಮೊನ್ನೆ ಮೆಟ್ರೋ ಟ್ರ್ಯಾಕ್‌ಗೆ 4 ವರ್ಷದ ಮಗು ಬಿದ್ದ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೊಡ್ಡಕಲ್ಲಸಂದ್ರ ಬಳಿ ಶನಿವಾರ ಸಂಜೆ ನಡೆದಿದೆ.

ಸಂಜೆ 5:45 ಸುಮಾರಿಗೆ ದೊಡ್ಡಕಲ್ಲಸಂದ್ರ ಬಳಿ ಘಟನೆ‌ ನಡೆದಿದೆ. ಇದರಿಂದ ಯಲಚೇನಹಳ್ಳಿ- ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಕೊಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟ ವ್ಯಕ್ತಿ ಯಾರು?, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.

Self Harming

ಆ. 1ರಂದು ರಾತ್ರಿ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ 2ರಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕ, ಆಕಸ್ಮಿಕವಾಗಿ ಹಳಿ ಮೇಲೆ ಬಿದ್ದಿದ್ದ ಘಟನೆ ನಡೆದಿತ್ತು. ತಕ್ಷಣ ಭದ್ರತಾ ಸಿಬ್ಬಂದಿ ತುರ್ತು ರೈಲು ನಿಲುಗಡೆ ವ್ಯವಸ್ಥೆಯನ್ನು ಬಳಸುವ ಮೂಲಕ ರೈಲು ಸಂಚಾರವನ್ನು ನಿಲ್ಲಿಸಿದ್ದರು. ಬಳಿಕ ಬಾಲಕನನ್ನು ರಕ್ಷಣೆ ಮಾಡಲಾಗಿತ್ತು.

ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

Self Harming
Self Harming

ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯದ ಸೇತುವೆ ಬಳಿ ಆತ್ಮಹತ್ಯೆ (Krishna River) ಮಾಡಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ಅಂಕಲಿ ಪೋಲಿಸರು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

ಕರ್ನಾಟಕ

PSI Parashuram Case: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

PSI Parashuram Case: ಪಿಎಸ್ಐ ಪರಶುರಾಮ್ ಸಾವು ಪ್ರಕರಣಹೆಚ್ಚಿನ ತನಿಖೆ ಸಲುವಾಗಿ ಸಿಐಡಿ ಡಿಜಿಪಿಗೆ ಪತ್ರ ಬರೆದ ಗೃಹ ಇಲಾಖೆ, ಪ್ರಕರಣದ ಕೂಲಂಕಷ ತನಿಖೆ ನಡೆಸುವಂತೆ ಸೂಚನೆ ನೀಡಿದೆ.

VISTARANEWS.COM


on

PSI Parshuram Death Case
Koo

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣವನ್ನು (PSI Parashuram Case) ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿ ಡಿಜಿಪಿಗೆ ಪತ್ರ ಬರೆದ ಗೃಹ ಇಲಾಖೆ, ಪ್ರಕರಣದ ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದೆ.

ಯಾದಗಿರಿ ಕೈ ಶಾಸಕ, ಪುತ್ರನ ವಿರುದ್ಧ ಎಫ್‌ಐಆರ್‌

ಪಿಎಸ್ಐ ಪರಶುರಾಮ ಸಾವು ಪ್ರಕರಣಕ್ಕೆ (PSI Parshuram Death Case) ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಶನಿವಾರ ಮಧ್ಯಾಹ್ನ ಕೇಸ್‌ ದಾಖಲಾಗಿತ್ತು. ಮೃತ ಪಿಎಸ್ಐ ಪತ್ನಿ ಶ್ವೇತಾ ಕೊಟ್ಟ ದೂರಿನನ್ವಯ ಯಾದಗಿರಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪಣ್ಣಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು

ಬಿಎನ್ಎಸ್ ಸೆಕ್ಷನ್ 108 ಅಡಿ ಪ್ರಕರಣ ದಾಖಲಾಗಿದ್ದು, ಕೇಸ್‌ನಲ್ಲಿ ಎ1 ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ಎ2 ಪುತ್ರ ಪಂಪನಗೌಡ ಹೆಸರು ಉಲ್ಲೇಖಿಸಲಾಗಿದೆ. ಸತತ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ, ಕೊನೆಗೂ ಎಫ್ಐಆರ್ ದಾಖಲಿಸಿಕೊಂಡಿದೆ.

ಕೇಸ್ ದಾಖಲಾಗುತ್ತಿದ್ದಂತೆ ಶಾಸಕನ ಮೊಬೈಲ್ ಸ್ವಿಚ್ ಆಫ್

ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಕೇಸ್ ದಾಖಲಾಗುತ್ತಿದ್ದಂತೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಕೇಸ್ ದಾಖಲಾಗಿದ್ದರಿಂದ ಅಪ್ಪ-ಮಗ ತಲೆ ಮರೆಸಿಕೊಂಡಿದ್ದು, ಬೆಂಗಳೂರಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

ಏನಿದು ಪ್ರಕರಣ?

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಶುಕ್ರವಾರ(ಆ.2) ನಿಧನರಾಗಿದ್ದರು. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಶುಕ್ರವಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.

ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪಿಎಸ್‌ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿ, ಸ್ಥಳೀಯ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ಶಾಸಕ, ಪುತ್ರನ ವಿರುದ್ಧ ದೂರು ನೀಡಿದ್ದರು.

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿ ಪತಿ ಪರಶುರಾಮ ಮೃತಪಟ್ಟಿದ್ದಾರೆ ಎಂದು ಶ್ವೇತಾ ಆರೋಪಿಸಿದ್ದರು. ಹೀಗಾಗಿ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಶಾಸಕ, ಪುತ್ರನ ಬಂಧನಕ್ಕೆ ಆಗ್ರಹ

ಪಿಎಸ್ಐ ಪರಶುರಾಮ್ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಪುತ್ರನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮೃತ ಪಿಎಸ್ಐ ಪತ್ನಿ ಸೇರಿ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಯಿಮ್ಸ್‌ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಕ್ಷೇತ್ರದ ಪಕ್ಷೇತರ ಪರಾಜಿತ ಅಭ್ಯರ್ಥಿ ಹಣಮೇಗೌಡ ಬೀರನಕಲ್ ಮಾತನಾಡಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಕಂಡಲ್ಲಿ ಕಲ್ಲು ಹೊಡೆಯಬೇಕು. ವೋಟ್ ಹಾಕಿ ಗೆಲ್ಲಿಸಿದ್ದೀರಿ, ಈಗ ಕಂಡರೇ ಕಲ್ಲು ತೆಗೆದುಕೊಂಡು ಹೊಡೆಯಿರಿ. ಶಾಸಕ ಭೃಷ್ಟಚಾರದಲ್ಲಿ ಭಾಗಿಯಾಗಿದ್ದು, ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಾರೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

Continue Reading

ಮಳೆ

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

Karnataka Weather Forecast : ಮಳೆಗೆ (Rain News) ಹೊನ್ನಾವರದಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು, ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸಕ್ಕೆ ಮುಂದಾದ ಘಟನೆಯೂ ನಡೆದಿದೆ. ಭಾನುವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ
Koo

ಉತ್ತರಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಭಾರಿ ಮಳೆಗೆ (Karnataka weather Forecast) ಶರಾವತಿ ನದಿ ಉಕ್ಕಿ ಹರಿದು ಹೊನ್ನಾವರ ಹಲವೆಡೆ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ತಾಲೂಕಿನ ಸರಳಗಿ, ಮಾವಿನಹೊಳೆ, ಅಳ್ಳಂಕಿ ಸೇರಿ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ. ನೆರೆ ಆತಂಕದ ಸುಮಾರು 169ಕ್ಕೂ ಅಧಿಕ‌ ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದೆ. ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಸಾಧ್ಯತೆ ಇದ್ದು, ನದಿ ಪಾತ್ರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಚೌಡಯ್ಯನ ಐಕ್ಯ ಮಂಟಪ ಮುಳುಗಡೆ

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚೌಡಯ್ಯಧಾನಪುರದ ನಿಜಶರಣ ಅಂಬಿಗರ ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಇತ್ತ ಮಲೆನಾಡಿನ ಶಿವಮೊಗ್ಗದಲ್ಲೂ ಮಳೆ ಅಬ್ಬರ ಮುಂದುವರಿದಿದೆ. ಮಳೆಯ ಅಬ್ಬರಕ್ಕೆ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 11 ಕ್ರಸ್ಟ್ ಗೇಟ್ ಮೂಲಕ 42,705 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸ

ಗದಗ ಜಿಲ್ಲೆಯಲ್ಲಿ ತುಂಗಭದ್ರಾ ನದಿಯು ಉಕ್ಕಿ ಹರಿಯುತ್ತಿದೆ. ಮುಂಡರಗಿ ತಾಲೂಕಿನ ಸಿಂಗಟಾಲೂರು ಬ್ಯಾರೇಜ್ ಭರ್ತಿಯಾಗಿದ್ದು, ಕೆಲವರು ಜೀವ ಭಯವಿಲ್ಲದೆ ಮೀನು ಹಿಡಿಯುವ ದುಸ್ಸಾಹಸಕ್ಕೆ ಇಳಿದಿದ್ದರು. ನದಿ ತಟಗಳಿಗೆ ಗದಗ ಜಿಲ್ಲಾಡಳಿತ ಹೋಗದಂತೆ ಸೂಚನೆ ನೀಡಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಮೀನುಗಾರರು ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ನಾಳೆ ಕರಾವಳಿಗೆ ಭಾರಿ ಮಳೆ ಎಚ್ಚರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ನೈರುತ್ಯ ದುರ್ಬಲ

ನೈರುತ್ಯ ಮಾನ್ಸೂನ್ ಕರಾವಳಿಯ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಆಗುಂಬೆಯಲ್ಲಿ 18, ಕ್ಯಾಸಲ್ ರಾಕ್ 12 ಸೆಂ.ಮೀ ಮಳೆಯಾಗಿದೆ.

ಸಿದ್ದಾಪುರ 11, ಲೋಂಡಾ 10, ಕಾರ್ಕಳ, ಕೋಟ, ಕಾರವಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಗೇರ್ಸೊಪ್ಪ, ಹೊನ್ನಾವರ, ಉತ್ತರ ಕನ್ನಡ, ಕೊಲ್ಲೂರು, ಗೋಕರ್ಣ, ಶೃಂಗೇರಿ ಎಚ್‌ಎಂಎಸ್ 8 ಸೆಂ.ಮೀ ಮಳೆಯಾಗಿದೆ. ಮೂಲ್ಕಿ , ಶಿರಾಲಿ ಪಿಟಿಒ , ಸಿದ್ದಾಪುರ, ಮಂಕಿ, ಕುಂದಾಪುರ , ಕದ್ರಾ, ಲಿಂಗನಮಕ್ಕಿ ಎಚ್‌ಎಂಎಸ್ , ಕಮ್ಮರಡಿ,ಚಿಕ್ಕಮಗಳೂರು, ಭಾಗಮಂಡಲ, ಜಯಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2, 3ರಲ್ಲಿ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು ಪಾಸ್; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2 ಮತ್ತು 3ಗಳ ಕ್ರೋಡೀಕೃತ ಫಲಿತಾಂಶದ ಅಂಕಿ-ಅಂಶಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶವನ್ನು ವಿದ್ಯಾರ್ಥಿಗಳು hups://kseeb.karnataka.gov.in/ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

VISTARANEWS.COM


on

2nd PUC Exam Result 2024
Koo

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1, 2 ಮತ್ತು 3ಗಳ ಕ್ರೋಡೀಕೃತ ಫಲಿತಾಂಶದ ಅಂಕಿ-ಅಂಶಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದ್ದು, ಮೂರೂ ಪರೀಕ್ಷೆಗಳಲ್ಲೂ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು (2nd PUC Exam Result 2024) ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಒಟ್ಟು 7,20,593 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಈ ಪೈಕಿ 7,04,920 ಮಂದಿ ಹಾಜರಾಗಿದ್ದರು. ಇವರಲ್ಲಿ 5,98,283 ವಿದ್ಯಾರ್ಥಿಗಳು ಪಾಸ್‌ ಆಗಿದ್ದು, ಶೇ. 84.87 ಫಲಿತಾಂಶ ಬಂದಿದೆ. ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶವನ್ನು ವಿದ್ಯಾರ್ಥಿಗಳು hups://kseeb.karnataka.gov.in/ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

ದ್ವಿತೀಯ ಪಿಯುಸಿ ಕ್ರೋಡೀಕೃತ ಫಲಿತಾಂಶದ ಅಂಕಿ-ಅಂಶ

  • ಪರೀಕ್ಷೆಗೆ ನೋಂದಣಿಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ : 7,20,593
  • ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ: 7,04,920
  • ಎಲ್ಲಾ ವಿಷಯಗಳಿಗೆ ಗೈರುಹಾಜರಾದ ವಿದ್ಯಾರ್ಥಿಗಳ ಸಂಖ್ಯೆ : 15,673
  • ತೇರ್ಗಡೆಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ : 5,98,283
  • ಶೇಕಡವಾರು ಉತ್ತೀರ್ಣ : ಶೇ. 84.87

ವಿದ್ಯಾರ್ಥಿವಾರು ಒಟ್ಟಾರೆ ಫಲಿತಾಂಶ

ವಿದ್ಯಾರ್ಥಿಗಳ ವಿಧನೋಂದಣಿಯಾದವರುಹಾಜರಾದವರುತೇರ್ಗಡೆಯಾದವರುಶೇ. ಉತ್ತೀರ್ಣ
ಹೊಸಬರು6,38,6766,24,4215,61,82489.98
ಪುನರಾವರ್ತಿತ58,50258,00323,30540.18
ಖಾಸಗಿ 23,41522,49613,15458.47
ಒಟ್ಟು7,20,5937,04,9205,98,28384.87

ಸಂಯೋಜನೆವಾರು ಫಲಿತಾಂಶ

ಸಂಯೋಜನೆನೋಂದಣಿಯಾದವರುಉತ್ತೀರ್ಣರಾದವರುಉತ್ತೀರ್ಣರಾದವರುಶೇ.ಉತ್ತೀರ್ಣ
ಕಲಾ2,09,1151,99,4981,46,16973.27
ವಾಣಿಜ್ಯ2,27,7362,23,5101,88,15384.18
ವಿಜ್ಞಾನ2,83,7422,81,9122,63,96193.63
ಒಟ್ಟು7,20,5937,04,9205,98,28384.87

ಲಿಂಗವಾರು ಫಲಿತಾಂಶ

ಪರೀಕ್ಷೆಗೆ 3,35,212 ಬಾಲಕರು ಹಾಜರಾಗಿದ್ದು, ಈ ಪೈಕಿ 2,71,360 ಮಂದಿ ಅಂದರೆ ಶೇ. 80.95 ಉತ್ತೀರ್ಣರಾಗಿದ್ದಾರೆ. ಇನ್ನು 3,69,708 ಬಾಲಕಿಯರು ಹಾಜರಾಗಿದ್ದು, ಈ ಪೈಕಿ 3,26,923 ಮಂದಿ ಅಂದರೆ ಶೇ. 88.43 ಬಾಲಕಿಯರು ಉತ್ತೀರ್ಣರಾಗಿದ್ದಾರೆ.

ಜಿಲ್ಲೆಗಳ ಶೇ. ಫಲಿತಾಂಶ(ಹೊಸಬರು ಮಾತ್ರ)

ಜಿಲ್ಲಾವಾರು ಫಲಿತಾಂಶ ನೋಡುವುದಾದರೆ ದಕ್ಷಿಣ ಕನ್ನಡ ಜಿಲ್ಲೆ ಶೇ.98.59 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನದಲ್ಲಿ ಉಡುಪಿ (ಶೇ.98.45), ಮೂರನೇ ಸ್ಥಾನದಲ್ಲಿ ಉತ್ತರ ಕನ್ನಡ ಜಿಲ್ಲೆ (ಶೇ.94.64) ಪಡೆದಿದ್ದು, ಕೊನೆಯ ಸ್ಥಾನದಲ್ಲಿ ರಾಯಚೂರು ಜಿಲ್ಲೆ (ಶೇ.78.12) ಇದೆ.

ಜಿಲ್ಲೆವಾರು ಫಲಿತಾಂಶ

  1. ದಕ್ಷಿಣ ಕನ್ನಡ- 98.59
  2. ಉಡುಪಿ- 98.45
  3. ಉತ್ತರ ಕನ್ನಡ- 94.64
  4. ಕೊಡಗು-93.76
  5. ಬೆಂಗಳೂರು ದಕ್ಷಿಣ- 93.13
  6. ವಿಜಯಪುರ- 92.95
  7. ಬೆಂಗಳೂರು ಉತ್ತರ- 92.25
  8. ಶಿವಮೊಗ್ಗ- 91.9
  9. ಬಾಗಲಕೋಟೆ- 91.08
  10. ಚಿಕ್ಕಮಗಳೂರು- 90.64
  11. ಬೆಂಗಳೂರು ಗ್ರಾಮಾಂತರ- 89.79
  12. ಚಿಕ್ಕೋಡಿ- 89.72
  13. ಚಾಮರಾಜನಗರ- 88.8
  14. ಹಾಸನ-88.6
  15. ಕೋಲಾರ- 88.04
  16. ಮೈಸೂರು- 88.04
  17. ಧಾರವಾಡ- 86.97
  18. ಚಿಕ್ಕಬಳ್ಳಾಪುರ- 85.75
  19. ರಾಮನಗರ- 84.75
  20. ಮಂಡ್ಯ-84.5
  21. ಕೊಪ್ಪಳ- 84.41
  22. ದಾವಣಗೆರೆ- 84.09
  23. ತುಮಕೂರು-83.48
  24. ಹಾವೇರಿ- 82.86
  25. ಬಳ್ಳಾರಿ- 82.86
  26. ಬೆಳಗಾವಿ -82.81
  27. ಬೀದರ್- 82.47
  28. ಗದಗ-79.46
  29. ಯಾದಗಿರಿ-78.71
  30. ಕಲಬುರಗಿ- 78.36
  31. ಚಿತ್ರದುರ್ಗ- 78.29
  32. ರಾಯಚೂರು- 78.12
    ಒಟ್ಟಾರೆ ರಾಜ್ಯ 89.98

    ಇದನ್ನೂ ಓದಿ | Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

    Continue Reading
    Advertisement
    Yamini Krishnamurthy
    ದೇಶ16 mins ago

    Yamini Krishnamurthy: ಪದ್ಮವಿಭೂಷಣ ಪುರಸ್ಕೃತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಇನ್ನಿಲ್ಲ

    Namma Metro
    ಪ್ರಮುಖ ಸುದ್ದಿ18 mins ago

    Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

    New National Cricket Academy
    ಪ್ರಮುಖ ಸುದ್ದಿ37 mins ago

    National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

    UPSC Aspirant
    ದೇಶ42 mins ago

    UPSC Aspirant: ‘ನಾನು ಸತ್ರೆ ಬ್ರೇಕಿಂಗ್‌ ನ್ಯೂಸ್‌ ಆಗತ್ತೆ’ ಎಂದು ಬರೆದಿಟ್ಟು ಯುಪಿಎಸ್‌ಸಿ ಅಭ್ಯರ್ಥಿ ಆತ್ಮಹತ್ಯೆ!

    PSI Parshuram Death Case
    ಕರ್ನಾಟಕ49 mins ago

    PSI Parashuram Case: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

    Deepika Kumari
    ಪ್ರಮುಖ ಸುದ್ದಿ56 mins ago

    Deepika Kumari : ಪದಕದ ಭರವಸೆ ಮೂಡಿಸಿ ಬರಿಗೈಯಲ್ಲಿ ವಾಪಸಾದ ಆರ್ಚರ್​ ದೀಪಿಕಾ ಕುಮಾರಿ

    Chandigarh Court
    ದೇಶ2 hours ago

    ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

    karnataka weather forecast
    ಮಳೆ2 hours ago

    Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

    2nd PUC Exam Result 2024
    ಕರ್ನಾಟಕ2 hours ago

    2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2, 3ರಲ್ಲಿ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು ಪಾಸ್; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

    Moon
    ದೇಶ3 hours ago

    Moon: ಭೂಮಿಯಿಂದ ದೂರ ಹೊರಟ ಚಂದ್ರ, ಮುಂದೆ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka rain
    ಮಳೆ8 hours ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ2 days ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ2 days ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ2 days ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    karnataka Rain
    ಮಳೆ4 days ago

    Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

    Karnataka Rain
    ಮಳೆ4 days ago

    Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

    Bharachukki falls
    ಚಾಮರಾಜನಗರ4 days ago

    Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

    karnataka Rain
    ಮಳೆ5 days ago

    Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

    Elephant combing Makna elephant captured near Bannerghatta
    ಬೆಂಗಳೂರು ಗ್ರಾಮಾಂತರ5 days ago

    Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

    karnataka rain
    ಮಳೆ5 days ago

    Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

    ಟ್ರೆಂಡಿಂಗ್‌