Murder Case: ಜಮೀನು ವಿವಾದಕ್ಕೆ ಹರಿಯಿತು ನೆತ್ತರು: ತಂಗಿಯ ಗಂಡನಿಗೇ ಚಾಕು ಇರಿದು ಕೊಂದವನ ಅರೆಸ್ಟ್‌  - Vistara News

ಕ್ರೈಂ

Murder Case: ಜಮೀನು ವಿವಾದಕ್ಕೆ ಹರಿಯಿತು ನೆತ್ತರು: ತಂಗಿಯ ಗಂಡನಿಗೇ ಚಾಕು ಇರಿದು ಕೊಂದವನ ಅರೆಸ್ಟ್‌ 

Murder Case: ಜಮೀನು ವಿಚಾರಕ್ಕೆ ಸಂಬಂಧಿಸಿ ಸೋದರ ಸಂಬಂಧಿಯನ್ನೇ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರದ ವಿಜಿನಾಪುರದಲ್ಲಿ ನಡೆದಿದೆ. ಬಾಬುರೆಡ್ಡಿ ಕೊಲೆಯಾದ ವ್ಯಕ್ತಿ. ಸದ್ಯ ಆರೋಪಿಗಳಾದ ಬಾಬುರೆಡ್ಡಿ ಅವರ ಸಹೋದರಿಯ ಪತಿ ಗೋಪಾಲ್ ರೆಡ್ಡಿ, ಅಣ್ಣನ ಮಗ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಮೀನು ವಿಚಾರಕ್ಕೆ ಸಂಬಂಧಿಸಿ ಸೋದರ ಸಂಬಂಧಿಯನ್ನೇ ಕೊಲೆ ಮಾಡಿರುವ ಘಟನೆ ರಾಮಮೂರ್ತಿನಗರದ ವಿಜಿನಾಪುರದಲ್ಲಿ ನಡೆದಿದೆ. ಬಾಬುರೆಡ್ಡಿ ಕೊಲೆಯಾದ ವ್ಯಕ್ತಿ. ಸದ್ಯ ಆರೋಪಿಗಳಾದ ಬಾಬುರೆಡ್ಡಿ ಅವರ ಸಹೋದರಿಯ ಪತಿ ಗೋಪಾಲ್ ರೆಡ್ಡಿ, ಅಣ್ಣನ ಮಗ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ (Murder Case).

ಜಮೀನು ವ್ಯಾಜ್ಯ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆಯಿಂದ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಹಿನ್ನೆಲೆ

ಬಾಬುರೆಡ್ಡಿ ಮತ್ತು ಗೋಪಾಲ್ ರೆಡ್ಡಿ ಅವರಿಗೆ ಸಂಬಂಧಿಸಿದ ಜಮೀನು ಹಂಚಿಕೆಯ ವ್ಯಾಜ್ಯ ಕೋರ್ಟ್‌ನಲ್ಲಿತ್ತು. ಈ ಹಿನ್ನೆಲೆಯಲ್ಲಿ ಜಮೀನು ಭಾಗದ ವಿಚಾರವಾಗಿ ಮಾತುಕತೆ ಮಾಡಲು ಪಂಚಾಯಿತಿ ನಡೆಸಲಾಗಿತ್ತು. ಪಂಚಾಯಿತಿ ವೇಳೆ ಮಾತಿಗೆ ಮಾತು ಬೆಳೆದು ಬಾಬುರೆಡ್ಡಿ ಮತ್ತು ಸಂಬಂಧಿಕರ ನಡುವೆ ಗಲಾಟೆ ಆರಂಭವಾಗಿತ್ತು. ಈ ವೇಳೆ ಭರತ್ ಹಾಗೂ ಗೋಪಾಲ್ ರೆಡ್ಡಿ ಸಿಟ್ಟಿನಿಂದ ಬಾಬುರೆಡ್ಡಿಗೆ ಚಾಕುವಿನಿಂದ ಇರಿದು ಬಿಟ್ಟಿದ್ದರು.

ಚಾಕು ಇರಿತದಿಂದ ತೀವ್ರ ರಕ್ತಸ್ರಾವವಾಗಿ ಬಾಬುರೆಡ್ಡಿ ಮೃತಪಟ್ಟಿದ್ದರು. ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭರತ್ ಹಾಗೂ ಗೋಪಾಲ್ ರೆಡ್ಡಿಯನ್ನು ಬಂಧಿಸಲಾಗಿದೆ.

ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಪ್ರಕರಣ: ಮೃತನ ಗುರುತು ಪತ್ತೆ

ಬೆಂಗಳೂರು: ಶನಿವಾರ ನಗರದ ದೊಡ್ಡಕಲ್ಲಸಂದ್ರ ಬಳಿ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತನನ್ನು 35 ವರ್ಷದ  ನವೀನ್ ಕುಮಾರ್ ಅರೋರಾ ಎಂದು ಗುರುತಿಸಲಾಗಿದ್ದು, ಈತ ಮೂಲತಃ ಉತ್ತರಪ್ರದೇಶದ ಆಲಿಘಡ್‌ನವನು.

ನವೀನ್ ಕುಮಾರ್ ಕುಟುಂಬ ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ‌ ನೆಲೆಸಿದೆ. ನವೀನ್‌ ಈ ಹಿಂದೆ ಬೆಂಗಳೂರಿನಲ್ಲಿ‌ ಹಾರ್ಡ್‌ವೇರ್‌ ಅಂಗಡಿ ನಡೆಸುತ್ತಿದ್ದ. ಐದಾರು ವರ್ಷದ ಹಿಂದೆ ಬ್ಯುಸಿನೆಸ್ ಲಾಸ್ ಆಗಿದ್ದ ಕಾರಣ ನವೀನ್ ಕುಮಾರ್ ಸಂಪೂರ್ಣ ಉದ್ಯೋಗ ಕೈ ಬಿಟ್ಟಿದ್ದ. ನಂತರ ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುತ್ತಿದ್ದ,

ಐದಾರು ವರ್ಷದಿಂದ ಕುಟುಂಬದಿಂದ ಬೇರೆಯಾಗಿ ಒಂಟಿ‌ ಬದುಕುತ್ತಿದ್ದ ನವೀನ್‌ ಉದ್ಯೋಗವೂ ಇಲ್ಲದೇ ನೊಂದಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಶನಿವಾರ ಸಂಜೆಯ ವೇಳೆಗೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ನವೀನ್ ನಂತರ ಬರುತ್ತಿರುವ ಮೆಟ್ರೋದ ಎದುರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಸದ್ಯ ನವೀನ್ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಮೆಟ್ರೋ ಅಧಿಕಾರಿಗಳ ವಿರುದ್ಧ ಆಕ್ರೋಶ

ನವೀನ್‌ ಆತ್ಮಹತ್ಯೆ ಮಾಡಿಕೊಂಡ ಬಳಿಕ ಪ್ರಯಾಣಿಕರನ್ನು ಮಧ್ಯದಲ್ಲೇ ಇಳಿಸಲಾಗಿದೆ ಎಂದು ಮೆಟ್ರೋ ಅಧಿಕಾರಿಗಳ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಟ್ರೋವನ್ನು ಅರ್ಧದಲ್ಲೇ ನಿಲ್ಲಿಸಿ ಇಳಿಯಲು ಸೂಚಿಸಿದ್ದರಿಂದ ಹಳಿಯ ಪಕ್ಕದಲ್ಲಿ ಪ್ರಯಾಣಿಕರು ಭಯದಲ್ಲಿಯೇ ಹೆಜ್ಜೆ ಹಾಕಿದ್ದಾರೆ. ಸಾಲು ಸಾಲು ಅವಘಡ ಸಂಭವಿಸಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎನ್ನುವ ದೂರು ಕೇಳಿ ಬಂದಿದೆ. ನವೀನ್‌ ಮೆಟ್ರೋ ಹಳಿಗೆ ಜಂಪ್ ಮಾಡುತ್ತಿದ್ದಂತೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಹೀಗಾಗಿ ಮೆಟ್ರೋ ಹಳಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಈ ವೇಳೆ ಮೆಟ್ರೋದಲ್ಲಿದ್ದ ಪ್ರಯಾಣಿಕರನ್ನು ಸಿಬ್ಬಂದಿ ಇಳಿಸಿದ್ದರು.

ʼʼಹಳಿಯಲ್ಲಿ ಮೃತದೇಹ ಇದ್ದಿದ್ದರಿಂದ ಅರ್ಧದಲ್ಲೇ ಪ್ರಯಾಣ ಮೊಟಕುಗೊಳಿಸಲಾಗಿತ್ತು. ಪರಿಣಾಮವಾಗಿ ಮೆಟ್ರೋ ಟ್ರ್ಯಾಕ್, ಬ್ರಿಡ್ಜ್ ಮೇಲೆಯೇ ಪ್ರಯಾಣಿಕರು ಓಡಾಡುವಂತಾಯ್ತುʼʼ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Drowned in water : ಕಟಿಂಗ್‌ ಮಾಡಿಸಲು ಬೈಕ್‌ನಲ್ಲಿ ಹೋಗುತ್ತಿದ್ದ ಸಹೋದರರಿಬ್ಬರು ನಿಯಂತ್ರಣ ತಪ್ಪಿ ಬೈಕ್‌ ಸಮೇತ ರಸ್ತೆಯ ಪಕ್ಕದ ನಾಲೆಗೆ ಬಿದ್ದಿದ್ದರು. ಒಬ್ಬ ಸಹೋದರ ಈಜಿ ದಡ ಸೇರಿದ್ದರೆ ಮತ್ತೊಬ್ಬ ನೀರುಪಾಲಾಗಿದ್ದ. ಇದೀಗ ಶೋಧ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು ಶವವನ್ನು ಮೇಲಿತ್ತಿದ್ದಾರೆ.

VISTARANEWS.COM


on

By

Drowned in water
Koo

ಬೆಳಗಾವಿ: ಆಯತಪ್ಪಿ ಮಾರ್ಕಂಡೇಯ ನದಿಯ (Drowned in water) ನಾಲೆಗೆ ಸಹೋದರರು ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಬೆಳಗಾವಿ ತಾಲೂಕಿನ ಆಲತಗಾ ಬಳಿ ನಿನ್ನೆ ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿತ್ತು.

ಓಂಕಾರ ಪಾಟೀಲ್ ಹಾಗೂ ಜ್ಯೋತಿನಾಥ ಪಾಟೀಲ್ ಎಂಬ ಸಹೋದರರು ಬೈಕ್‌ನಲ್ಲಿ ಹೋಗುತ್ತಿದ್ದರು. ಶ್ರಾವಣ ಮಾಸ ಪ್ರಾರಂಭ ಹಿನ್ನೆಲೆಯಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ತೆರಳಿದ್ದರು.

ಈ ವೇಳೆ ಆಯತಪ್ಪಿ ಇಬ್ಬರು ನಾಲೆಗೆ ಬಿದ್ದಿದ್ದರು. ನಾಲೆಗೆ ಬೀಳುತ್ತಿದ್ದಂತೆ ಜ್ಯೋತಿನಾಥ ಪಾಟೀಲ್ ಹೇಗೋ ಈಜಿ ದಡ ಸೇರಿದ್ದರು. ಆದರೆ ಇತ್ತ ಓಂಕಾರ ಪಾಟೀಲ್ ಬೈಕ್‌ ಜತೆಗೆ ಕಣ್ಮರೆಯಾಗಿದ್ದರು.

ಬಳಿಕ ನಾಪತ್ತೆಯಾಗಿದ್ದ ಓಂಕಾರ ಪಾಟೀಲ್‌ಗಾಗಿ ಶೋಧ ನಡೆಸಲಾಗಿತ್ತು. ಇದೀಗ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿದ ಎಸ್‌ಡಿಆರ್‌ಎಫ್ ತಂಡ ಶವ ಹೊರತೆಗೆದಿದ್ದಾರೆ.

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಸ್ಟೇರಿಂಗ್ ರಾಡ್ ತುಂಡಾಗಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ

ಹಳ್ಳದ ಸೇತುವೆ ತಡೆಗೋಡೆಗೆ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಉಳಿದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಅಪಘಾತ ನಡೆದಿದೆ.

Drowned in Water
Drowned in Water

ಕಲ್ಯಾಣ ಸಾರಿಗೆ ಬಸ್ ಸ್ಟೇರಿಂಗ್ ರಾಡ್ ತುಂಡಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಗಾಯಾಳುಗಳು ಮಾನ್ವಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

PSI Parashuram Case: ಪಂಚಾಯತ್ ರಾಜ್‌ ಇಲಾಖೆ ಯೋಜನೆಯ 3 ಕೋಟಿ ಹಣ ಬಿಡುಗಡೆಗೂ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಪುತ್ರ ಕಮಿಷನ್ ಕೇಳಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಸಾಮಾಜಿಕ ಹೋರಾಟಗಾರರೊಬ್ಬರು ದೂರು ನೀಡಿದ್ದಾರೆ.

VISTARANEWS.COM


on

PSI Parashuram Case
ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಪುತ್ರ ಪಂಪನಗೌಡ
Koo

ಯಾದಗಿರಿ: ಪಿಎಸ್ಐ ಪರಶುರಾಮ ಸಾವು ಪ್ರಕರಣದ (PSI Parashuram Case) ಎ2 ಆರೋಪಿ ಪಂಪನಗೌಡ (ಸನ್ನಿಗೌಡ) ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪಂಚಾಯತ್ ರಾಜ್‌ ಇಲಾಖೆ ಯೋಜನೆಯ 3 ಕೋಟಿ ಹಣ ಬಿಡುಗಡೆಗೂ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಪುತ್ರ ಕಮಿಷನ್ ಕೇಳಿದ್ದಾರೆ ಎನ್ನಲಾಗಿದ್ದು, ಈ ಪ್ರಕರಣದ ತನಿಖೆಗೆ ಒತ್ತಾಯಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಭಾಧ್ಯಕ್ಷರಿಗೆ ಸಾಮಾಜಿಕ ಹೋರಾಟಗಾರ ಮಾನಪ್ಪ ಹಡಪದ ಪತ್ರ ಬರೆದಿದ್ದಾರೆ.

ಜಿಲ್ಲೆಯ ಐದು ತಾಲೂಕಿನ ಪಂಚಾಯತ್‌ ರಾಜ್ ಯೋಜನೆ ಹಣ ಬಿಡುಗಡೆಯಾಗಿದೆ. ಆದರೆ ವಡಗೇರಾ ತಾಲೂಕಿನ ಪಂಚಾಯತಿ ರಾಜ್ ಹಣ ಬಿಡುಗಡೆ ಆಗಿಲ್ಲ. ಇದರಿಂದ ವಡಗೇರಾ ತಾಲೂಕಿನಲ್ಲಿ ಭ್ರಷ್ಟಾಚಾರದ ವಾಸನೆ ಕಂಡು ಬರುತ್ತಿದೆ. ಶಾಸಕರ ಪುತ್ರ ಸನ್ನಿಗೌಡ ಹಣ ಬಿಡುಗಡೆಗೆ ಕಮಿಷನ್ ಕೇಳಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೇ ಲಂಚಕ್ಕೆ ಬೇಡಿಕೆ ಇಟ್ಟು ಪಿಎಸ್‌ಐ ಪರಶುರಾಮ ಸಾವಿಗೆ ಕಾರಣವಾದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪನಗೌಡ ವಿರುದ್ಧ ಕ್ರಮಕ್ಕೆ ಸಾಮಾಜಿಕ ಹೋರಾಟಗಾರ ಒತ್ತಾಯಿಸಿದ್ದಾರೆ.

ಎರಡು ಪ್ರಕರಣ ಗಂಭೀರವಾಗಿ ಪರಿಗಣಿಸಿ ಶಾಸಕ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರ ವಿಧಾನಸಭಾ ಸದಸ್ಯತ್ವ ರದ್ದುಗೊಳಿಸುವಂತೆ ಸಾಮಾಜಿಕ ಹೋರಾಟಗಾರ ಮಾನಪ್ಪ ಹಡಪದ ಪತ್ರ ಬರೆದು ಮನವಿ ಮಾಡಿದ್ದಾರೆ.

ಯಾದಗಿರಿ ಡಿವೈಎಸ್ಪಿ ಕಚೇರಿಗೆ ಆಗಮಿಸಿದ ಸಿಐಡಿ ತಂಡ

ಪಿಎಸ್ಐ ಪರಶುರಾಮ ಸಾವು ಪ್ರಕರಣ ಸಂಬಂಧ ತನಿಖೆಗಾಗಿ ಯಾದಗಿರಿ ಡಿವೈಎಸ್ಪಿ ಕಚೇರಿಗೆ ಆಗಮಿಸಿದ ಸಿಐಡಿ ತಂಡ ಆಗಮಿಸಿದೆ. ಪ್ರಕರಣದ ಬಗ್ಗೆ ಯಾದಗಿರಿಯ ವಿವಿಧ ಠಾಣೆಗಳ ಪೊಲೀಸರಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಹೀಗಾಗಿ ಡಿವೈಎಸ್ಪಿ ಕಚೇರಿಯತ್ತ ಪೊಲೀಸ್ ಅಧಿಕಾರಿಗಳು ಆಗಮಿಸುತ್ತಿದ್ದಾರೆ. ಸಿಪಿಐ ಸುನಿಲ್ ಮೂಲಿಮನಿ‌, ಗ್ರಾಮೀಣ ಠಾಣೆ ಪಿಎಸ್ಐ ಹಣಮಂತ ಬಂಕಲಗಿ ಆಗಮಿಸಿದ್ದಾರೆ.

ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣವನ್ನು (PSI Parashuram Case) ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿ ಡಿಜಿಪಿಗೆ ಪತ್ರ ಬರೆದ ಗೃಹ ಇಲಾಖೆ, ಪ್ರಕರಣದ ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದೆ.

ಏನಿದು ಪ್ರಕರಣ?

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಶುಕ್ರವಾರ(ಆ.2) ನಿಧನರಾಗಿದ್ದರು. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಶುಕ್ರವಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.

ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪಿಎಸ್‌ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿ, ಸ್ಥಳೀಯ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ಶಾಸಕ, ಪುತ್ರನ ವಿರುದ್ಧ ದೂರು ನೀಡಿದ್ದರು.

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿ ಪತಿ ಪರಶುರಾಮ ಮೃತಪಟ್ಟಿದ್ದಾರೆ ಎಂದು ಶ್ವೇತಾ ಆರೋಪಿಸಿದ್ದರು. ಹೀಗಾಗಿ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Continue Reading

ಬೆಳಗಾವಿ

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

Assault case : ಬೇರೊಬ್ಬ ಯುವತಿ ಜತೆಗೆ ಅಕ್ರಮ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್‌ಐ ಪತ್ನಿಗೆ ಮನಸೋ ಇಚ್ಛೆ ಥಳಿಸಿದ್ದಾನೆ. ಹಲ್ಲೆಗೊಳಾದ ಮಹಿಳೆ ಆಸ್ಪತ್ರೆ ಪಾಲಾಗಿದ್ದು, ಪತಿಯಿಂದ ಮುಕ್ತಿಕೊಡಿಸಿ ಎಂದು ಗೋಳಾಡುತ್ತಿದ್ದಾರೆ.

VISTARANEWS.COM


on

By

assault case
Koo

ಬೆಳಗಾವಿ: ಪಿಎಸ್ಐನಿಂದ ಹೆಂಡತಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ (Assault Case) ಆರೋಪ ಕೇಳಿ ಬಂದಿದೆ. ತೀವ್ರ ಹಲ್ಲೆಗೊಳಗಾದ ಪತ್ನಿ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲಾಗಿದೆ.

ಪಿಎಸ್ಐ ಉದ್ದಪ್ಪ ಕಟ್ಟಿಕಾರ್ ಎಂಬಾತ ಪತ್ನಿಗೆ ಮನಬಂದಂತೆ ಥಳಿಸಿದ್ದಾನೆ. ಪ್ರತಿಮಾ ಉದ್ದಪ್ಪ ಕಟ್ಟಿಕಾರ್ ಹಲ್ಲೆಗೊಳಗಾದವರು. ಪತಿ ಉದ್ದಪ್ಪ ಬೇರೊಬ್ಬ ಯುವತಿಯ ಜತೆಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಹೀಗಾಗಿ ಪತ್ನಿ ಪ್ರತಿಮಾ ಬೇರೊಬ್ಬ ಯುವತಿಯ ಜತೆಗೆ ಅಕ್ರಮ ಸಂಬಂಧ ಇರುವುದನ್ನು ಪ್ರಶ್ನಿಸಿದ್ದಾರೆ.

ಮಕ್ಕಳ ಆಧಾರ ಕಾರ್ಡ್, ರೇಷನ್ ಕಾರ್ಡ್ ಕೇಳಿದ್ದಕ್ಕೆ ಮಕ್ಕಳೆದರೇ ಉದ್ದಪ್ಪ, ಪ್ರತಿಮಾ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದಂಪತಿ ರಾಮತೀರ್ಥ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪತ್ನಿ ಪ್ರತಿಮಾ ಕಣ್ಣು, ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಹಲ್ಲೆ ಆಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪತಿಯಿಂದ ನನಗೆ ಮುಕ್ತಿ ಕೊಡಿಸಿ ಎಂದು ಕೈ ಮುಗಿದು ಪತ್ನಿ ಪ್ರತಿಮಾ ಗೋಳಾಡುತ್ತಿದ್ದಾರೆ. ಈ ಹಿಂದೆಯೂ ಪತ್ನಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಪಿಎಸ್ಐ ವಿರುದ್ಧ ಅಂಕೋಲಾದಲ್ಲಿ ಕೇಸ್ ದಾಖಲಾಗಿತ್ತು. ಈಗ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪ್ರತಿಮಾ ಬೆಳಗಾವಿಗೆ ಬಂದಿದ್ದರು. ಅಂಕೋಲಾಕ್ಕೆ ಹೋಗಲು ನನಗೆ ಅನುಮತಿ ಕೊಡಿಸಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Theft Case : ರಾತ್ರಿಯಾದರೆ ಮನೆ ಬಾಗಿಲು ತಟ್ಟಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳನನ್ನು ಹಿಡಿದು ಕಟ್ಟಿ ಹಾಕಿದ ಜನ್ರು

ಹೆಲ್ಮೆಟ್‌ ಇಲ್ಲದೇ ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು ಎಳೆದ ಟ್ರಾಫಿಕ್‌ ಪೊಲೀಸ್‌!

ಚಿಕ್ಕಮಗಳೂರು: ಟ್ರಾಫಿಕ್‌ ಪೊಲೀಸ್‌ವೊಬ್ಬರು ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು (Assault Case) ಎಳೆದಿದ್ದಾರೆ. ಪರಿಣಾಮ ಸವಾರ ಬೈಕ್‌ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಚಿಕ್ಕಮಗಳೂರು ನಗರದ ಎಐಟಿ ವೃತ್ತದಲ್ಲಿ ಘಟನೆ ನಡೆದಿದೆ.

ಹೆಲ್ಮೆಟ್ ಹಾಕದಿದ್ದಕ್ಕೆ ಫೈನ್ ಹಾಕುವ ಬದಲು ಟ್ರಾಫಿಕ್ ಪೊಲೀಸ್ ದೌರ್ಜನ್ಯ ಮೆರೆದಿದ್ದಾರೆ ಅಂತ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟ್ರಾಫಿಕ್ ಸಬ್ ಇನ್‌ಸ್ಪೆಕ್ಟರ್‌ ಧನಂಜಯ್ ವರ್ತನೆಗೆ ಕಿಡಿಕಾರಿದ್ದಾರೆ. ಘಟನೆಯ ದೃಶ್ಯ ರಸ್ತೆ ಬದಿಯ‌ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾಲರ್ ಪಟ್ಟಿ ಹಿಡಿದು ಎಳೆದಾಕ್ಷಣ ಬೈಕ್‌ ಸವಾರ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಯುವಕನ ಕೈ-ಕಾಲುಗಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟ್ರಾಫಿಕ್ ಪಿಎಸ್ಐ ಧನಂಜಯ್ ವರ್ತನೆಗೆ ‌ಸ್ಥಳದಲ್ಲೇ ಹಲವರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಆಟೋ ಚಾಲಕರ ಹೊಡಿಬಡಿ

ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರತಾಪ್ ಚಂದ್ರ ಎಂಬಾತ ಆಟೋ ಚಾಲಕರಿಂದಲೇ ಹಲ್ಲೆಗೊಳಗಾದವರು. ಉಡುಪಿ ನಗರದ ಸಿಟಿ ಬಸ್ ಸ್ಟಾಂಡ್ ಬಳಿ ಘಟನೆ ನಡೆದಿದೆ.

ನಗರ ವ್ಯಾಪ್ತಿಯಲ್ಲಿ ರಿಕ್ಷಾ ಬಾಡಿಗೆ ಮಾಡುತ್ತಿರುವಾಗ ಒಂದು ತಂಡದಿಂದ ಹಲ್ಲೆ ನಡೆದಿದೆ. ಬಾಡಿಗೆ ಮಾಡಲು ನನಗೆ ಅನುಮತಿ ಇದೆ ಎಂದಾಗ ಕೋಪಗೊಂಡ ನಗರದ ರಿಕ್ಷಾ ಚಾಲಕರು ಪ್ರತಾಪ್ ಚಂದ್ರ ಅವರಿಗೆ ಹಲ್ಲೆ ನಡೆಸಿದ್ದಾರೆ. ಉಡುಪಿ ನಗರದ ವ್ಯಾಪ್ತಿಯಲ್ಲಿರುವ ರಿಕ್ಷಾ ಸ್ಟ್ಯಾಂಡ್‌ಗಳಲ್ಲಿ ಎಲ್ಲಿಯೂ ರಿಕ್ಷಾ ನಿಲ್ಲಿಸದಂತೆ ತಾಕೀತು ಮಾಡಿದ್ದಾರೆ. ಸದ್ಯ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಆಟೋ ಚಾಲಕ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Theft Case : ರಾತ್ರಿಯಾದರೆ ಮನೆ ಬಾಗಿಲು ತಟ್ಟಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳನನ್ನು ಹಿಡಿದು ಕಟ್ಟಿ ಹಾಕಿದ ಜನ್ರು

Theft Case : ಕಲಬುರಗಿಯಲ್ಲಿ ಮನೆಗಳ್ಳರ ಹಾವಳಿ ಹೆಚ್ಚಾಗಿದ್ದು, ಕಳ್ಳನನ್ನು ಹಿಡಿದು ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಐನಾತಿ ಮನೆಗಳ್ಳರನ್ನು ಹೊಸಪೇಟೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮತ್ತೊಂದು ಕಡೆ ಜತೆಯಲ್ಲಿದ್ದ ಆಪ್ತನೇ ಸೆಕೆಂಡ್ ಕಾರ್ ಶೋರೂಂನಲ್ಲಿ ಕಳ್ಳತನ ಮಾಡಿ ಪೊಲೀಸರಿಗೆ ಲಾಕ್‌ ಆಗಿದ್ದಾನೆ.

VISTARANEWS.COM


on

By

Theft Case
ಇಬ್ಬರು ಬಂಧಿತ ಕಳ್ಳರು
Koo

ಕಲಬುರಗಿ: ಕಲಬುರಗಿಯಲ್ಲಿ ‌ಮನೆಗಳ್ಳರ (Theft Case) ಹಾವಳಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಚಿಂಚೋಳಿ ತಾಲೂಕಿನ ನಿಡಗುಂದಾ ಗ್ರಾಮದಲ್ಲಿ ರಾತ್ರಿಯಾದರೆ ಸಾಕು ಕಳ್ಳರ‌ ಹಾವಳಿ ಹೆಚ್ಚಾಗಿತ್ತು. ನಿಡಗುಂದಾ ಗ್ರಾಮದ ಹಲವು ಮನೆಗಳ ‌ಕಳ್ಳತನಕ್ಕೆ ಯತ್ನಿಸಿದ್ದಾರೆ.

ರಾತ್ರಿ ಹೊತ್ತಲ್ಲಿ ಮನೆಯ ಬಾಗಿಲು ತಟ್ಟಿ ಕಳ್ಳತನಕ್ಕೆ ಯತ್ನಿಸುತ್ತಿದ್ದರು. ಕಳೆದ ಮೂರ್ನಾಲ್ಕು ದಿನಗಳಿಂದ ಕಳ್ಳರ‌ ಹಾವಳಿಗೆ ಗ್ರಾಮಸ್ಥರು ಬೇಸತ್ತಿದ್ದರು. ನಿನ್ನೆ ಶನಿವಾರ ಕೂಡ ಕಳ್ಳತನಕ್ಕೆ ಆಗಮಿಸಿದ್ದ ಕಳ್ಳನೊಬ್ಬನನ್ನು ಹಿಡಿದು ಕಟ್ಟಿ ಹಾಕಿದ್ದರು. ಈರಣ್ಣ ಎಂಬಾತನನ್ನ ಹಿಡಿದು ಕಟ್ಟಿ ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು. ಈರಣ್ಣನ ಜತೆಗಿದ್ದಇತರರು ಎಸ್ಕೇಪ್ ಆಗಿದ್ದಾರೆ. ಸುಲೇಪೆಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಐನಾತಿ ಮನೆಗಳ್ಳರನ್ನು ಹೆಡೆಮುರಿ ಕಟ್ಟಿದ ಹೊಸಪೇಟೆ ಪೊಲೀಸರು

ವಿಜಯನಗರ: ವಿಜಯನಗರದ ಹೊಸಪೇಟೆಯ ಎಂ.ಜೆ ನಗರದಲ್ಲಿ ಹಾಡಹಗಲೇ ಮನೆಗೆ ಕನ್ನ ಹಾಕಿದ್ದ ಐನಾತಿ ಮನೆಗಳ್ಳರನ್ನು ಹೊಸಪೇಟೆ ಬಡಾವಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಖದೀಮರು ತ್ರಿವೇಣಿ ಎಂಬುವವರ ಮನೆಯಲ್ಲಿ ಬಂಗಾರ ಕದ್ದಿದ್ದರು. ಸುಮಾರು 7.5 ಲಕ್ಷ ಮೌಲ್ಯದ 110 ಗ್ರಾಂ ಬಂಗಾರದ ಆಭರಣ ಕದ್ದು ಎಸ್ಕೇಪ್ ಆಗಿದ್ದರು. 15 ದಿನಗಳಲ್ಲಿ ಪ್ರಕರಣ ಬೇಧಿಸಿದ ಪೊಲೀಸರು ಇಬ್ಬರು ಮನೆಗಳ್ಳರನ್ನು ಬಂಧಿಸಿದ್ದಾರೆ.

ಹೊಸಪೇಟೆ ನಿವಾಸಿಗಳಾದ ಕಾರ್ತಿಕ್, ಸಣ್ಣಕ್ಕೆಪ್ಪ ಬಂಧಿತ ಮನೆಗಳ್ಳರಾಗಿದ್ದಾರೆ. ಬಂಧಿತರಿಂದ 7.5 ಲಕ್ಷ ಮೌಲ್ಯದ ಬಂಗಾರದ ಆಭರಣ ವಶಕ್ಕೆ ಪಡೆದಿದ್ದಾರೆ. ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ತಂಡಕ್ಕೆ ಎಸ್‌ಪಿ ಶ್ರೀಹರಿಬಾಬು ಬಹುಮಾನ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: Leopard Attack : ಮೈಸೂರಲ್ಲಿ ರೈತನ ಮೇಲೆ ಚಿರತೆ ದಾಳಿ; ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಚಿರತೆ

ಜತೆಯಲ್ಲಿದ್ದ ಆಪ್ತನಿಂದಲೇ ಸೆಕೆಂಡ್ ಕಾರ್ ಶೋರೂಂನಲ್ಲಿ ಕಳ್ಳತನ

ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜತೆಯಲ್ಲಿದ್ದ ಆಪ್ತನೇ ಕಳ್ಳತನಕ್ಕೆ ಇಳಿದಿರುವ ಘಟನೆ ನಡೆದಿದೆ. ಭಾವನ ಕಾರ್ಸ್ ಎಂಬ ಸೆಕೆಂಡ್ ಶೋ ರೂಂನಲ್ಲಿ ಲಿತಿನ್ ಎಂಬಾತ ಹಣ ಕದ್ದಿದ್ದ.

ಲಿತಿನ್‌ ಹಲವು ದಿನಗಳಿಂದ ಭಾವನಾ ಕಾರ್ಸ್ ಮಾಲೀಕ ಕೆಂಪೆಗೌಡ ಜತೆಯಲ್ಲೆ ಇದ್ದ. ಕಳೆದ ತಿಂಗಳು 20ರಂದು ಮಾಲೀಕ ಕೆಂಪೆಗೌಡಗೆ ತಿಳಿಯದ ಹಾಗೆ ಕಛೇರಿಯ ಕೀ ಪಡೆದುಕೊಂಡಿದ್ದ. ನಂತರ ಮಧ್ಯರಾತ್ರಿ1.30 ಸುಮಾರಿಗೆ ಕ್ಯಾಪ್ ಮಾಸ್ಕ್ ಹಾಕಿ ಕಛೇರಿಗೆ ಎಂಟ್ರಿ ಕೊಟ್ಟಿದ್ದ. ಆಫೀಸ್ ಡ್ರಾನಲ್ಲಿದ್ದ ಒಂದು ಲಕ್ಷ ನಗದು ಹಣ ಕಳ್ಳತನ ಮಾಡಿದ್ದ. ನಂತರ ಆಫೀಸ್ ಮುಂಭಾಗದಲ್ಲಿದ್ದ ಕಾರನ್ನು ಕದ್ದು ರೌಂಡ್ಸ್ ಹಾಕಿ ಮತ್ತೆ ವಾಪಸ್ ಬಂದಿದ್ದ.

ಆಫೀಸ್ ಮುಂದೆ ಕಾರ್ ಬಿಟ್ಟು ಹೋಗುವಾಗ ಕಾರಿನ ಕೀ ಗೇಟ್ ಬಳಿ ಎಸೆದು ಎಸ್ಕೇಪ್ ಆಗಿದ್ದ. ಮಾಲೀಕ ಕೆಂಪೇಗೌಡ ಸಿಸಿಟಿವಿ ಪರಿಶೀಲಿಸಿ ಗಿರಿನಗರ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಲಿತಿನ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dhruva Sarja martin trailer Out
ಸ್ಯಾಂಡಲ್ ವುಡ್56 seconds ago

Dhruva Sarja : ʻಮಾರ್ಟಿನ್’ ಟ್ರೈಲರ್ ಬಿಡುಗಡೆ: ಧ್ರುವ ಸರ್ಜಾ ಅಭಿಮಾನಿಗಳ ಅಬ್ಬರ ಬಲು ಜೋರು!

Drowned in water
ಬೆಳಗಾವಿ6 mins ago

Drowned in water : ಮಾರ್ಕಂಡೇಯ ನದಿಗೆ ಆಯತಪ್ಪಿ ಬಿದ್ದು ಕಣ್ಮರೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

PSI Parashuram Case
ಕರ್ನಾಟಕ47 mins ago

PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

Wayanad Landslide
ದೇಶ1 hour ago

Wayanad Landslide: ವಯನಾಡಿಗಾಗಿ ಮಿಡಿಯಿತು ವಿದೇಶಿಗರ ಮನ; ಸಂತ್ರಸ್ತರ ನೆರವಿಗೆ ಧಾವಿಸಿದ ಇಂಗ್ಲೆಂಡ್‌ನ ವಿದ್ಯಾರ್ಥಿನಿಯರು

Vastu Tips
ಧಾರ್ಮಿಕ1 hour ago

Vastu Tips: ಮನೆ ಸಂತೋಷದ ತಾಣವಾಗಬೇಕೆಂದರೆ ಮಲಗುವ ಕೋಣೆ ಹೀಗಿರಲಿ

Filmfare South 2024 Daredevil Mustafa is the best film, Rakshit Shetty is the best actor
ಸ್ಯಾಂಡಲ್ ವುಡ್1 hour ago

Filmfare South 2024: ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್; `ಡೇರ್​ಡೆವಿಲ್ ಮುಸ್ತಫಾ’ ಬೆಸ್ಟ್‌ ಫಿಲ್ಮ್‌, ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ!

assault case
ಬೆಳಗಾವಿ1 hour ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

IPL 2025
ಕ್ರೀಡೆ1 hour ago

IPL 2025: ಮುಂಬೈ ತಂಡದಿಂದ ಪಾಂಡ್ಯಗೆ ಗೇಟ್​ಪಾಸ್​; ಸೂರ್ಯಕುಮಾರ್​ಗೆ ನಾಯಕತ್ವ?

Megha Shetty operation london cafe bigg surprise
ಸ್ಯಾಂಡಲ್ ವುಡ್2 hours ago

Megha Shetty: ಮೇಘಾ ಶೆಟ್ಟಿ ಬರ್ತ್‌ಡೇಗೆ ಸರ್‌ಪ್ರೈಸ್‌ ಕೊಟ್ಟ `ಆಪರೇಷನ್ ಲಂಡನ್ ಕೆಫೆ’ ತಂಡ!

Theft Case
ಕ್ರೈಂ2 hours ago

Theft Case : ರಾತ್ರಿಯಾದರೆ ಮನೆ ಬಾಗಿಲು ತಟ್ಟಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳನನ್ನು ಹಿಡಿದು ಕಟ್ಟಿ ಹಾಕಿದ ಜನ್ರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 hour ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌