Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​ - Vistara News

ಕ್ರಿಕೆಟ್

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Rashid Khan: ದಿ ಹಂಡ್ರೆಡ್​ ಕ್ರಿಕೆಟ್​ ಲೀಗ್​ನ ಪಂದ್ಯವೊಂದರಲ್ಲಿ ರಶೀದ್​ ಖಾನ್​ ಅವರು ಟೈಮಲ್‌ ಮಿಲ್ಸ್‌ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದಾರೆ.

VISTARANEWS.COM


on

Rashid Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್​: ಮಹೇಂದ್ರ ಸಿಂಗ್​ ಧೋನಿ(MS Dhoni) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿ ಹಲವು ವರ್ಷ ಕಳೆದಿದ್ದರೂ ಕೂಡ ಅವರು ಪರಿಚಯಿಸಿದ ‘ಹೆಲಿಕಾಪ್ಟರ್ ಶಾಟ್’(MS Dhoni Helicopter shot) ಮಾತ್ರ ಆಗಾಗ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುತ್ತದೆ. ಈ ಶಾಟ್​ ಹೊಡೆಯಲು ಅನೇಕರು ಪ್ರಯತ್ನಿಸಿದರೂ ಸಫಲರಾಗಿದ್ದು ಮಾತ್ರ ಕೆಲವರಷ್ಟೇ. ಇದೀಗ ಅಫಘಾನಿಸ್ತಾನ ತಂಡದ ಸ್ಪಿನ್​​ ಆಲ್​ರೌಂಡರ್​ ರಶೀದ್​ ಖಾನ್​(Rashid Khan) ಧೋನಿಯ ನೆಚ್ಚಿನ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್​ ಬಾರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ದಿ ಹಂಡ್ರೆಡ್​ ಕ್ರಿಕೆಟ್​ ಲೀಗ್​ನ ಪಂದ್ಯವೊಂದರಲ್ಲಿ ರಶೀದ್​ ಖಾನ್​ ಅವರು ಟೈಮಲ್‌ ಮಿಲ್ಸ್‌ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದಾರೆ. ರಶೀದ್​ ಸಿಕ್ಸರ್​ ಬಾರಿಸುತ್ತಿದ್ದಂತೆ ಕಾಮೆಂಟ್ರಿ ಮಾಡುತ್ತಿದ್ದವರು ಓ ಸೊಗಸಾದ ಹೆಲಿಕಾಪ್ಟರ್ ಶಾಟ್ ಎಂದು ವರ್ಣಿಸಿದ್ದಾರೆ. ಈ ಹೊಡೆತ ಧೋನಿಯಂತೆ ಪರಿಪೂರ್ಣವಾಗಿರದಿದ್ದತರೂ ಕೂಡ ಕೊಂಚ ಸಾಮ್ಯತೆ ಕಂಡುಬಂತು. ರಶೀದ್​ ಖಾನ್​ ಐಪಿಎಲ್​ನಲ್ಲಿಯೂ ಇದೇ ರೀತಿ ಹಲವು ಬಾರಿ ಹೆಲಿಕಾಪ್ಟರ್ ಶಾಟ್ ಬಾರಿಸಿದ್ದರು.

ಕೆಲ ದಿನಗಳ ಹಿಂದಷ್ಟೇ ರಶೀದ್ ಖಾನ್ ಅವರು ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದರು. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ದಿ ಹಂಡ್ರೆಡ್’ ಕ್ರಿಕೆಟ್​ ಲೀಗ್​ನಲ್ಲಿ 2 ವಿಕೆಟ್ ಕಬಳಿಸುವುದರೊಂದಿಗೆ ರಶೀದ್ ಖಾನ್ ಎಲ್ಲ ಮಾದರಿಯ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್(Rashid khan 600 wickets)​ ಪೂರ್ತಿಗೊಳಿಸಿದ ವಿಶ್ವದ ಮೊದಲ ಸ್ಪಿನ್ನರ್ ಹಾಗೂ 2ನೇ ಬೌಲರ್​​ ಎನಿಸಿಕೊಂಡಿದ್ದರು.

ಇದನ್ನೂ ಓದಿ Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ್ದ ವಿಶ್ವ ದಾಖಲೆಯನ್ನು ಮೊದಲ ನಿರ್ಮಿಸಿದ್ದು ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ಡ್ವೇನ್ ಬ್ರಾವೊ. ಇದೀಗ ರಶೀದ್​ ಖಾನ್​ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಅತೀ ವೇಗವಾಗಿ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್ ಕಬಳಿಸಿದ ದಾಖಲೆ ರಶೀದ್ ಹೆಸರಿಗೆ ದಾಖಲಾಗಿದೆ. ಬ್ರಾವೊ 545 ಟಿ20 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರೆ, ರಶೀದ್​ ಖಾನ್​ ಕೇವಲ 441 ಪಂದ್ಯಗಳನ್ನಾಡಿ ಈ ಮೈಲುಗಲ್ಲು ನಿರ್ಮಿಸಿದ್ದಾರೆ.

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್​ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2025: ಮುಂಬೈ ತಂಡದಿಂದ ಪಾಂಡ್ಯಗೆ ಗೇಟ್​ಪಾಸ್​; ಸೂರ್ಯಕುಮಾರ್​ಗೆ ನಾಯಕತ್ವ?

IPL 2025: ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಾಯಕತ್ವದಿಂದ ಮಾತ್ರವಲ್ಲ ತಂಡದಿಂದಲೇ ಕೈಬಿಡಲು ಮುಂದಾಗಿದೆ ಎನ್ನುವ ಮಾತುಗಳು ಕೂಡ ಕೇಳಿಬಂದಿದೆ.

VISTARANEWS.COM


on

IPL 2025
Koo

ಮುಂಬಯಿ: ಮುಂದಿನ ಆವೃತ್ತಿಯ ಐಪಿಎಲ್(IPL 2025)​ ಟೂರ್ನಿ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್(Mumbai Indians)​ ತಂಡದಲ್ಲಿ ಮಹತ್ವದ ಬದಲಾವಣೆಯೊಂದು ಸಂಭವಿಸುವ ಸೂಚನೆ ಲಭಿಸಿದೆ. ನಾಯಕ ಹಾರ್ದಿಕ್​ ಪಾಂಡ್ಯರನ್ನು (Hardik Pandya) ಈ ಹುದ್ದೆಯಿಂದ ಮಾತ್ರವಲ್ಲದೆ, ತಂಡದಿಂದಲೇ ಕೈಬಿಡಲು ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಕಳೆದ 17ನೇ ಆವೃತ್ತಿಯಲ್ಲಿ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರನ್ನು ದಿಢೀರ್​ ಆಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕನನ್ನಾಗಿ ನೇಮಿಸಿ, 5 ಬಾರಿ ಕಪ್​ ಗೆಲ್ಲಿಸಿದ ರೋಹಿತ್​(rohit sharma) ಅವರನ್ನು ನಾಯಕನ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದು ರೋಹಿತ್‌ ಅಭಿಮಾನಿಗಳು ಸೇರಿ ತಂಡದ ಸಹ ಆಟಗಾರರಿಗೂ ತೀವ್ರ ನೋವುಂಟು ಮಾಡಿತ್ತು. ಇದೇ ವಿಚಾರವಾಗಿ ಮುಂಬೈ ಫ್ರಾಂಚೈಸಿ ವಿರುದ್ಧ ತಮ್ಮದೇ ಅಭಿಮಾನಿಗಳು ಆಕ್ರೋಶ ಕೂಡ ವ್ಯಕ್ತಪಡಿಸಿದ್ದರು. ಇದೀಗ ಸೂರ್ಯಕುಮಾರ್​ ಯಾದವ್(Suryakumar Yadav)​ ಅವರನ್ನು ಮುಂದಿನ ಆವೃತ್ತಿಗೆ ನಾಯಕನನ್ನಾಗಿ ಮಾಡಲು ಮುಂಬೈ ಫ್ರಾಂಚೈಸಿ ಸಿದ್ಧತೆ ನಡೆಸಿದೆ ಎಂದು ಮೂಲಗಳು ಮಾಹಿ ನೀಡಿದೆ.

ರೋಹಿತ್​ ಬಳಿಕ ಹಾರ್ದಿಕ್‌ ಪಾಂಡ್ಯ ಅವರನ್ನು ಭಾರತದ ಭವಿಷ್ಯದ ನಾಯಕ ಎಂದು ಪರಿಗಣಿಸಲಾಗಿತ್ತು. ಇದೇ ಕಾರಣದಿಂದ ಮುಂಬೈ ಫ್ರಾಂಚೈಸಿ ಅವರನ್ನು ಗುಜರಾತ್​ ತಂಡದಿಂದ ಕರೆತಂದು ನಾಉಕನ ಸ್ಥಾನ ನೀಡಿತ್ತು. ಆದರೆ, ಇದೀಗ ಭಾರತ ತಂಡಕ್ಕೆ ಸೂರ್ಯಕುಮಾರ್​ ನಾಯಕನಾಗಿದ್ದಾರೆ. ಹೀಗಾಗಿ ಇವರಿಗೆ ನಾಯಕತ್ವ ನೀಡಲು ಫ್ರಾಂಚೈಸಿ ಮುಂದಾಗಿದೆ ಎನ್ನಲಾಗಿದೆ.

ಇದನ್ನೂ ಓದಿ IPL 2025: ಇನ್ನು ಮುಂದೆ ಹೀಗೆ ಮಾಡಿದರೆ ವಿದೇಶಿ ಆಟಗಾರರಿಗೆ ಐಪಿಎಲ್​ನಿಂದ 2 ವರ್ಷ ನಿಷೇಧ?

ಸೂರ್ಯಕುಮಾರ್​ ಅವರಿಗೆ ನಾಯಕತ್ವ ನೀಡಿದರೆ ರೋಹಿತ್​ ಅಭಿಮಾನಿಗಳು ಕೂಡ ಅವರಿಗೆ ಬೆಂಬಲ ಸೂಚಿಸಲಿದ್ದಾರೆ. ರೋಹಿತ್​ ಅವರ ಆಪ್ತರೂ ಆಗಿರುವ ಸೂರ್ಯನಿಗೆ ನಾಯಕನ ಸ್ಥಾನ ನೀಡಿದರೆ ರೋಹಿತ್​ ಮುಂಬೈ ತಂಡ ತೊರೆಯಲ್ಲ ಎನ್ನುವ ಮಾತುಗಳು ಕೂಡ ಕೇಳಿಬಂದಿದೆ. ರೋಹಿತ್​ ಅವರನ್ನು ಅಂದು ನಾಯಕತ್ವದಿಂದ ಕೆಳಗಿಳಿಸಿದ ವೇಳೆ ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಒಡೆದು ಹೋದ ಹೃದಯದ ಎಮೊಜಿ ಹಾಕಿ ಅಸಮಾಧಾನ ಹೊರಹಾಕಿದ್ದರು.

ಪಾಂಡ್ಯ ಅವರನ್ನು ನಾಯಕತ್ವದಿಂದ ಮಾತ್ರವಲ್ಲ ತಂಡದಿಂದಲೇ ಕೈಬಿಡಲು ಮುಂದಾಗಿದೆ ಎನ್ನುವ ಮಾತುಗಳು ಕೂಡ ಕೇಳಿಬಂದಿದೆ. ಗುಜರಾತ್‌ ಟೈಟಾನ್ಸ್‌ ತಂಡವನ್ನು ಚೊಚ್ಚಲ ಪ್ರಯತ್ನದಲ್ಲೇ ಚಾಂಪಿಯನ್​ ಪಟ್ಟಕ್ಕೇರಿಸಿದ ಮತ್ತು ಒಮ್ಮೆ ಫೈನಲ್​ ತಲುಪಿಸಿದ ಸಾಧನೆ ಪಾಂಡ್ಯ ಅವರದ್ದಾಗಿತ್ತು. ಒಂದೊಮ್ಮೆ ಪಾಂಡ್ಯ ಅವರನ್ನು ಮುಂಬೈ ತಂಡದಿಂದ ಕೈ ಬಿಟ್ಟರೆ ಅವರು ಯಾವ ತಂಡ ಸೇರಲಿದ್ದಾರೆ ಎನ್ನುವುದು ಸದ್ಯದ ಕುತೂಹಲ.

ಪಾಂಡ್ಯ ಅವರಿಗೆ ಭಾರತ ಟಿ20 ತಂಡದ ನಾಯಕತ್ವ ನೀಡದಿರಲು ಪ್ರಮುಖ ಕಾರಣ ಅವರ ಫಿಟ್ನೆಸ್‌ ಸಮಸ್ಯೆ. ಪಾಂಡ್ಯ ತಮ್ಮ 8 ವರ್ಷಗಳ ಕ್ರಿಕೆಟ್​ ವೃತ್ತಿಬದುಕಿನಲ್ಲಿ ಹಲವು ಬಾರಿ ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಗುಳಿದಿದ್ದರು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಪದೇಪದೆ ಗಾಯಕ್ಕೆ ತುತ್ತಾಗುವ ಕಾರಣ ಪಾಂಡ್ಯ ನೇಮಕಕ್ಕೆ ಬಿಸಿಸಿಐನ ಕೆಲ ಪ್ರಮುಖ ಅಧಿಕಾರಿಗಳು ಹಾಗೂ ಆಯ್ಕೆ ಸಮಿತಿಯ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Continue Reading

ಕ್ರೀಡೆ

Ishan Kishan: ಮತ್ತೆ ದೇಶೀಯ ಕ್ರಿಕೆಟ್​ ಆಡಲು ಮುಂದಾದ ಇಶಾನ್​ ಕಿಶನ್​

Ishan Kishan: ಇಶಾನ್​ ಕಿಶನ್ ಮುಂದಿನ ಆವೃತ್ತಿಯ ರಣಜಿ ಮತ್ತು ಇತರ ಕ್ರಿಕೆಟ್​ ಟೂರ್ನಿಯಲ್ಲಿ ತಮ್ಮ ತವರಾದ ಜಾರ್ಖಂಡ್​ ಪರ ರಣಜಿ ಆಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Ishan Kishan
Koo

ಮುಂಬಯಿ: ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ನಾಣ್ಣುಡಿಯಂತೆ ರಣಜಿ ಆಡಲು ಅಸಡ್ಡೆ ತೋರಿ ಬಿಸಿಸಿಐ(BCCI) ಕೆಂಗಣ್ಣಿಗೆ ಗುರಿಯಾಗಿ ಭಾರತ ತಂಡದಲ್ಲಿ ಅವಕಾಶ ವಂಚಿತರಾಗಿರುವ ಇಶಾನ್​ ಕಿಶನ್​(Ishan Kishan) ತಮ್ಮ ತಪ್ಪನ್ನು ಅರಿತು ಇದೀಗ ಮತ್ತೆ ದೇಶೀಯ ಕ್ರಿಕೆಟ್​ ಆಡಲು ಮುಂದಾಗಿದ್ದಾರೆ.

ಕ್ರಿಕ್​ಬಝ್​ ವರದಿ ಮಾಡಿದ ಪ್ರಕಾರ 26 ವರ್ಷದ ಇಶಾನ್​ ಕಿಶನ್​ ಮತ್ತೆ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡುವ ನಿಟ್ಟಿನಲ್ಲಿ ಮುಂದಿನ ಆವೃತ್ತಿಯ ರಣಜಿ ಮತ್ತು ಇತರ ಕ್ರಿಕೆಟ್​ ಟೂರ್ನಿಯಲ್ಲಿ ತಮ್ಮ ತವರಾದ ಜಾರ್ಖಂಡ್​ ಪರ ರಣಜಿ ಆಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಇಶಾನ್​ ಅವರಂತೆಯೇ ದೇಶೀಯ ಕ್ರಿಕೆಟ್​ ಆಡದೆ ಬಿಸಿಸಿಐ ಕೇಂದ್ರೀಯ ಗುತ್ತಿಗೆಯಿಂದ ಹೊರಬಿದ್ದ ಶ್ರೇಯಸ್​ ಅಯ್ಯರ್​ ಮತ್ತೆ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಲಂಕಾ ವಿರುದ್ಧದ ಏಕದಿನ ಸರಣಿಯ್ನನಾಡುತ್ತಿದ್ದಾರೆ. ಆದರೆ ಇಶಾನ್​ಗೆ ಅವಕಾಶ ಲಭಿಸಲಿಲ್ಲ.

ಕಳೆದ ವರ್ಷ ನವೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ನಂತರದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ ಕೂಡ ಅಂತಿಮ ಹಂತದಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದರು. ಸ್ವಲ್ಪ ವಿರಾಮವನ್ನು ತೆಗೆದುಕೊಂಡ ಇಶಾನ್​ಗೆ ಅಂದಿನ ಕೋಚ್​ ದ್ರಾವಿಡ್​ ಮತ್ತು ಆಯ್ಕೆ ಸಮಿತಿ ರಣಜಿ ಟ್ರೋಫಿ ಪಂದ್ಯಗಳಲ್ಲಿ ಆಡುವಂತೆ ಸೂಚನೆ ನೀಡಿತ್ತು. ಆದರೆ ಇದನ್ನು ಇಶಾನ್​ ಕಡೆಗಣಿಸಿದ್ದರು. ಈ ಕಾರಣದಿಂದ ಬಿಸಿಸಿಐ ಅವರನ್ನು ಕೇಂದ್ರೀಯ ಗುತ್ತಿಗೆಯಿಂದಲೂ ಕೈಬಿಟ್ಟಿತ್ತು.

ಮಾನಸಿಕ ಒತ್ತಡದದಿಂದ ಬಳಲುತ್ತಿರುವುದಾಗಿ ಸುಳ್ಳು ಕಾರಣ ನೀಡಿ  ಮುಕೇಶ್‌ ಅಂಬಾನಿ(Mukesh Ambani) ಪುತ್ರ ಅನಂತ್‌ ಅಂಬಾನಿ(Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವಿವಾಹಪೂರ್ವ(Anant Ambani wedding) ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ದುಬೈನಲ್ಲಿಯೂ ಪಾರ್ಟಿ ಮಾಡಿ ಸಿಕ್ಕಿಬಿದ್ದಿದ್ದರು. ಇದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿತ್ತು.

ಇದನ್ನೂ ಓದಿ Ishan Kishan: ಟೀಮ್​ ಇಂಡಿಯಾದಲ್ಲಿ ಇಶಾನ್ ಕಿಶನ್​ಗೆ ಬಾಗಿಲು ಬಂದ್​?

ತಂಡಕ್ಕೆ ಆಯ್ಕೆ ಮಾಡದಿರುವುದರ ಕುರಿತು ಕೆಲ ದಿನಗಳ ಹಿಂದೆ ಪ್ರತಿಕ್ರಿಯೆ ನೀಡಿದ್ದ ಇಶಾನ್​, “ನಾನು ಬ್ರೇಕ್ ಪಡೆದಿದ್ದೆ, ನನ್ನ ಪ್ರಕಾರ ಇದು ಸಾಮಾನ್ಯ. ತಂಡಕ್ಕೆ ಕಮ್ ಬ್ಯಾಕ್ ಮಾಡಬೇಕಾದರೆ ದೇಶೀಯ ಕ್ರಿಕೆಟ್​ನಲ್ಲಿ ಪ್ರದರ್ಶನ ನೀಡಬೇಕು ಎಂಬ ನಿಯಮವಿದೆ ಎನ್ನುವುದು ನನಗೆ ತಿಳಿದಿದೆ. ಆದರೆ, ಅಂದು ನಾನು ಆಡುವ ಮನಸ್ಥಿತಿಯಲ್ಲಿ ಇರಲಿಲ್ಲ. ಹಿಗಾಗಿಯೇ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಬ್ರೇಕ್ ಪಡೆದಿದ್ದೆ. ಉತ್ತಮ ಫಾರ್ಮ್​ನಲ್ಲಿರುವಾಗ ಅಂತಾರಾಷ್ಟ್ರೀಯ ಕ್ರಿಕೆಟ್​ ಬಿಟ್ಟು ದೇಶೀಯ ಕ್ರಿಕೆಟ್​ನಲ್ಲಿ ಆಡಬೇಕು ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಇಂಡಿಯನ್ ಎಕ್ಸ್ ಪ್ರೆಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಪ್ರತಿಭಾನ್ವಿತ ಆಟಗಾರನಾಗಿರುವ ಇಶಾನ್​ ಭಾರತ ಪರ ದ್ವಿಶತಕ ಬಾರಿಸಿದ ಸಾಧನೆಯನ್ನೂ ಕೂಡ ಮಾಡಿದ್ದಾರೆ. ಸೊಕ್ಕಿನಿಂದಲೇ ಅವರು ತಮ್ಮ ಕ್ರಿಕೆಟ್​ ಕೆರಿಯರ್​ ಹಾಳುಮಾಡುತ್ತಿದ್ದಾರೆ. ಇನ್ನಾದರೂ ಮಾಡಿದ ತಪ್ಪಿನಿಂದ ಬುದ್ಧಿ ಕಲಿತು ಶಿಸ್ತಿನಿಂದ ಬಿಸಿಸಿಐ ಮತ್ತು ಕೋಚ್​ ಮಾತುಗಳನ್ನು ಕೇಳುವ ಮೂಲಕ ಆಡಿದರೆ ಭಾರತ ತಂಡದಲ್ಲಿ ಮುಂದುವರಿಯಬಹುದು. ಮತ್ತೆ ಇದೇ ತಪ್ಪು ಮರುಕಳಿಸಿದರೆ, ತಂಡಕ್ಕೆ ಸೇರ್ಪಡೆಗೊಳ್ಳುವುದು ಕಷ್ಟ ಸಾಧ್ಯ. ಏಕೆಂದರೆ ಈಗಾಗಲೇ ಹಲವು ಯುವ ಆಟಗಾರರು ತಂಡದ ಪರ ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ.

Continue Reading

ಕ್ರೀಡೆ

IND vs SL: ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನ ಲಂಕಾ ತಂಡಕ್ಕೆ ಆಘಾತ; ಸರಣಿಯಿಂದ ಹೊರಬಿದ್ದ ಸ್ಟಾರ್​ ಆಟಗಾರ

IND vs SL:ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಸರಂಗ ಭಾರತ ವಿರುದ್ಧದ ಇನ್ನುಳಿದ 2 ಏಕದಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್​ ಮಂಡಳಿ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

VISTARANEWS.COM


on

IND vs SL
Koo

ಕೊಲಂಬೊ: ಈಗಾಗಲೇ ಹಲವು ಸ್ಟಾರ್​ ಆಟಗಾರರನ್ನು ಗಾಯದಿಂದಾಗಿ ಕಳೆದುಕೊಂಡಿರುವ ಶ್ರೀಲಂಕಾ(IND vs SL) ತಂಡಕ್ಕೆ ಮತ್ತೆ ಗಾಯದ ಮೇಲೆ ಬರೆ ಬಿದ್ದಿದೆ. ಅನುಭವಿ ಹಾಗೂ ಸ್ಟಾರ್​ ಸ್ಪಿನ್ ಆಲ್​ರೌಂಡರ್​ ವನಿಂದು ಹಸರಂಗ(wanindu hasaranga) ಗಾಯದಿಂದಾಗಿ ಇಂದು ನಡೆಯುವ ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನವೇ ಸರಣಿಯಿಂದ ಹೊರಬಿದ್ದಿದ್ದಾರೆ.

ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಸರಂಗ ಭಾರತ ವಿರುದ್ಧದ ಇನ್ನುಳಿದ 2 ಏಕದಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್​ ಮಂಡಳಿ ತನ್ನ ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ. ಮೊದಲ ಪಂದ್ಯದಲ್ಲಿ ಹಸರಂಗ 24 ರನ್​ ಮತ್ತು 3 ವಿಕೆಟ್​ ಕಿತ್ತು ಪಂದ್ಯವನ್ನು ಸೋಲಿನ ಭೀತಿಯಿಂದ ಪಾರು ಮಾಡಿದವರಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಇದೀಗ ಗಾಯದಿಂದ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಇದಕ್ಕೂ ಮುನ್ನ ದಿಲ್ಶಾನ್ ಮಧುಶಂಕ, ಮಥೀಶ ಪತಿರಾಣ, ದುಷ್ಮಂತ ಚಮೀರ, ನುವಾನ್ ತುಷಾರ ಗಾಯದಿಂದಾಗಿ ಸರಣಿಗೆ ಅಲಭ್ಯರಾಗಿದ್ದರು. ಹಸರಂಗ ಸೇರಿ ಒಟ್ಟು 5 ಮಂದಿ ಸರಣಿಯಿಂದ ಹೊರಗುಳಿದರು.

ಪಂದ್ಯಕ್ಕೆ ಮಳೆ ಭೀತಿ


ಇಂದು ನಡೆಯುವ ಭಾರತ ಮತ್ತು ಶ್ರೀಲಂಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ಭಾರೀ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ(Colombo weather report) ಶನಿವಾರ ಸಂಜೆಯ ವೇಳೆ ಭಾರೀ ಮಳೆಯಾಗಿತ್ತು. ಹೀಗಾಗಿ ಭಾನುವಾರವೂ ಶೇ. 89 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಗಲು ರಾತ್ರಿಯ ಪಂದ್ಯವಾದ ಕಾರಣ ದ್ವಿತೀಯ ಇನಿಂಗ್ಸ್​ ವೇಳೆ ಮಳೆಯಾಗುವ ಸಾಧ್ಯತೆ ಅಧಿಕ.

ಪಿಚ್ ರಿಪೋರ್ಟ್

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಹೆಚ್ಚು ಬಾರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ಮಾಡಿದ ತಂಡ ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಹೀಗಾಗಿ ಎರಡನೇ ಏಕದಿನ ಪಂದ್ಯದಲ್ಲಿಯೂ ಸ್ಪಿನ್​ ಬೌಲರ್​ಗಳು ಪ್ರಾಬಲ್ಯ ತೋರುವ ನಿರೀಕ್ಷೆ ಇದೆ. ಪಂದ್ಯ ಸಾಗಿದಂತೆ ಈ ಪಿಚ್​ ಅತ್ಯಂತ ತಿರುವ ಪಡೆದುಕೊಳ್ಳಲಿದೆ. ಬ್ಯಾಟಿಂಗ್​ ನಡೆಸುವುದೇ ಒಂದು ಸವಾಲಾಗಿರಲಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ದುಕೊಳ್ಳಬಹುದು.

ಶ್ರೀಲಂಕಾ: ಅವಿಷ್ಕ ಫೆರ್ನಾಂಡೋ, ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕ (ನಾಯಕ), ಜನಿತ್ ಲಿಯಾನಗೆ, ದುನಿತ್ ವೆಲ್ಲಲಾಗೆ, ಜೆಫ್ರಿ ವಾಂಡರ್ಸೆ, ಅಕಿಲ ದನಂಜಯ, ಮೊಹಮ್ಮದ್ ಶಿರಾಜ್/ಮಹೀಶ್ ತೀಕ್ಷಣ, ಅಸಿತ ಫೆರ್ನಾಂಡೋ.

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೀ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

Continue Reading

ಕ್ರೀಡೆ

IND vs SL 2nd ODI: ಇಂದು ಭಾರತ-ಲಂಕಾ ದ್ವಿತೀಯ ಏಕದಿನ ಮುಖಾಮುಖಿ; ಪಂದ್ಯಕ್ಕೆ ಮಳೆ ಭೀತಿ

IND vs SL 2nd ODI: ಕೊಲಂಬೊದಲ್ಲಿ(Colombo weather report) ಶನಿವಾರ ಸಂಜೆಯ ವೇಳೆ ಭಾರೀ ಮಳೆಯಾಗಿತ್ತು. ಹೀಗಾಗಿ ಭಾನುವಾರವೂ ಶೇ. 89 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

VISTARANEWS.COM


on

IND vs SL 2nd ODI:
Koo

ಕೊಲಂಬೊ: ಅಪಾಯಕಾರಿ ಶ್ರೀಲಂಕಾ(Sri Lanka vs India) ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನಂಚಿನವರೆಗೂ ಬಂದು ಪಂದ್ಯವನ್ನು ಟೈ ಮಾಡಿಕೊಂಡು ಸೋಲಿನಿಂದ ಪಾರಾದ ಭಾರತ ತಂಡ ಇದೀಗ ಮತ್ತೊಂದು ಪಂದ್ಯವನ್ನಾಡಲು ಸಜ್ಜಾಗಿದೆ. ಇಂದು ನಡೆಯುವ ದ್ವಿತೀಯ ಏಕದಿನಲ್ಲಿIND vs SL 2nd ODI) ಕಣಕ್ಕಿಳಿಯಲಿದೆ. ಆದರೆ ಪಂದ್ಯಕ್ಕೆ ಮಳೆ ಭೀತಿಯೂ ಎದುರಾಗಿದೆ.

ಹವಾಮಾನ ವರದಿ


ಕೊಲಂಬೊದಲ್ಲಿ(Colombo weather report) ಶನಿವಾರ ಸಂಜೆಯ ವೇಳೆ ಭಾರೀ ಮಳೆಯಾಗಿತ್ತು. ಹೀಗಾಗಿ ಭಾನುವಾರವೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಹಗಲು ರಾತ್ರಿಯ ಪಂದ್ಯವಾದ ಕಾರಣ ದ್ವಿತೀಯ ಇನಿಂಗ್ಸ್​ವೇಳೆ ಮಳೆಯಾಗುವ ಸಾಧ್ಯತೆ ಅಧಿಕ. ಶೇ. 89 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸ್ಪಿನ್​ ಟ್ರ್ಯಾಕ್​ನಲ್ಲಿ ಪರದಾಡಿದ ಭಾರತೀಯ ಬ್ಯಾಟರ್​ಗಳು ಈ ಪಂದ್ಯದಲ್ಲಿ ಮೈ ಚಳಿ ಬಿಟ್ಟು ಬ್ಯಾಟ್​ ಬೀಸಬೇಕಿದೆ. ನಾಯಕ ರೋಹಿತ್​ ಶರ್ಮ ಹೊರತುಪಡಿಸಿ ತಂಡದಲ್ಲಿರುವ ಉಳಿದ ಸ್ಟಾರ್​ ಆಟಗಾರರು ಕಳೆದ ಪಂದ್ಯದಲ್ಲಿ ಕ್ರಿಕೆಟ್ ಜೋಶ್​ ತೋರುವಲ್ಲಿ ವಿಫಲರಾಗಿದ್ದರು. ಶ್ರೀಲಂಕಾ ತಂಡದಲ್ಲಿ ಅನುಭವಿ ಆಟಗಾರರು ಇರದೇ ಇದ್ದರೂ ಕೂಡ ಯುವ ಆಟಗಾರರು ಯಾರು ಊಹಿಸದ ರೀತಿಯಲ್ಲಿ ಪ್ರದರ್ಶನ ತೋರುವ ಮೂಲಕ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಇವರ ಸವಾಲನ್ನು ಭಾರತ ಕಡೆಗಣಿಸಬಾರದು.

ಆರ್ ಪ್ರೇಮದಾಸ ಕ್ರೀಡಾಂಗಣದ ಪಿಚ್ ವರದಿ

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಈ ಸ್ಥಳದಲ್ಲಿ ಮೊದಲು ಬ್ಯಾಟಿಂಗ್ ಮಾಡುವುದು ಹೆಚ್ಚು ಅನುಕೂಲಕರ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡಗಳು ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ ಹೆಚ್ಚಿನದನ್ನು ನಿರೀಕ್ಷಿಸಲಾಗಿದೆ. ಪಂದ್ಯ ಮುಂದುವರಿದಂತೆ ಬ್ಯಾಟಿಂಗ್ ಕಠಿಣವಾಗುತ್ತದೆ. ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮಾಡಲು ಒಲವು ತೋರುತ್ತಾನೆ.

ಸಂಭಾವ್ಯ ತಂಡಗಳು


ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕ (ನಾಯಕ), ಜನಿತ್ ಲಿಯಾನಗೆ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಅಸಿತ ಫೆರ್ನಾಂಡೋ, ಮೊಹಮ್ಮದ್ ಶಿರಾಜ್.

ಇದನ್ನೂ ಓದಿ IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೀ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಂದ್ಯದ ವಿವರಗಳು

  • ಭಾರತ-ಶ್ರೀಲಂಕಾ 2ನೇ ಏಕದಿನ ಪಂದ್ಯ
  • ಸ್ಥಳ: ಆರ್ ಪ್ರೇಮದಾಸ ಕ್ರೀಡಾಂಗಣ, ಕೊಲಂಬೊ
  • ದಿನಾಂಕ ಮತ್ತು ಸಮಯ ಭಾನುವಾರ, ಆಗಸ್ಟ್ 4, ಮಧ್ಯಾಹ್ನ 2:30

ಮುಖಾಮುಖಿ ದಾಖಲೆಗಳು

  • ಪಂದ್ಯಗಳು- 169
  • ಶ್ರೀಲಂಕಾ ಗೆಲುವು- 57
  • ಭಾರತ ಗೆಲುವು- 99
  • ಸಮಬಲ 02
  • ಫಲಿತಾಂಶ ಇಲ್ಲ 11
  • ಮೊದಲ ಪಂದ್ಯ: ಜೂನ್ 16, 1979
  • ಇತ್ತೀಚಿನ ಪಂದ್ಯ- ಆಗಸ್ಟ್ 2, 2024

Continue Reading
Advertisement
Wayanad Landslide
ದೇಶ2 mins ago

Wayanad Landslide: ವಯನಾಡಿಗಾಗಿ ಮಿಡಿಯಿತು ವಿದೇಶಿಗರ ಮನ; ಸಂತ್ರಸ್ತರ ನೆರವಿಗೆ ಧಾವಿಸಿದ ಇಂಗ್ಲೆಂಡ್‌ನ ವಿದ್ಯಾರ್ಥಿನಿಯರು

Vastu Tips
ಧಾರ್ಮಿಕ11 mins ago

Vastu Tips: ಮನೆ ಸಂತೋಷದ ತಾಣವಾಗಬೇಕೆಂದರೆ ಮಲಗುವ ಕೋಣೆ ಹೀಗಿರಲಿ

Filmfare South 2024 Daredevil Mustafa is the best film, Rakshit Shetty is the best actor
ಸ್ಯಾಂಡಲ್ ವುಡ್14 mins ago

Filmfare South 2024: ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್; `ಡೇರ್​ಡೆವಿಲ್ ಮುಸ್ತಫಾ’ ಬೆಸ್ಟ್‌ ಫಿಲ್ಮ್‌, ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ!

assault case
ಬೆಳಗಾವಿ24 mins ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

IPL 2025
ಕ್ರೀಡೆ26 mins ago

IPL 2025: ಮುಂಬೈ ತಂಡದಿಂದ ಪಾಂಡ್ಯಗೆ ಗೇಟ್​ಪಾಸ್​; ಸೂರ್ಯಕುಮಾರ್​ಗೆ ನಾಯಕತ್ವ?

Megha Shetty operation london cafe bigg surprise
ಸ್ಯಾಂಡಲ್ ವುಡ್35 mins ago

Megha Shetty: ಮೇಘಾ ಶೆಟ್ಟಿ ಬರ್ತ್‌ಡೇಗೆ ಸರ್‌ಪ್ರೈಸ್‌ ಕೊಟ್ಟ `ಆಪರೇಷನ್ ಲಂಡನ್ ಕೆಫೆ’ ತಂಡ!

Theft Case
ಕ್ರೈಂ39 mins ago

Theft Case : ರಾತ್ರಿಯಾದರೆ ಮನೆ ಬಾಗಿಲು ತಟ್ಟಿ ಕಳ್ಳತನಕ್ಕೆ ಇಳಿಯುತ್ತಿದ್ದ ಕಳ್ಳನನ್ನು ಹಿಡಿದು ಕಟ್ಟಿ ಹಾಕಿದ ಜನ್ರು

Kalaburagi News
ಕರ್ನಾಟಕ49 mins ago

Kalaburagi News: ಜಾತಿ ನಿಂದನೆ ಆರೋಪ; ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ, ಕುಲಸಚಿವರ ವಿರುದ್ಧ ಕೇಸ್‌

Kannada New Movie powder cinema trailer release date announce
ಸ್ಯಾಂಡಲ್ ವುಡ್1 hour ago

Kannada New Movie: ದಿಗಂತ್ ನಟನೆಯ `ಪೌಡರ್’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Ishan Kishan
ಕ್ರೀಡೆ1 hour ago

Ishan Kishan: ಮತ್ತೆ ದೇಶೀಯ ಕ್ರಿಕೆಟ್​ ಆಡಲು ಮುಂದಾದ ಇಶಾನ್​ ಕಿಶನ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌