Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು - Vistara News

ಬೆಂಗಳೂರು

Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

Road Accident : ಬೊಮ್ಮಸಂದ್ರ ಫ್ಲೈ ಓವರ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವ್ಯಕ್ತಿ ಮೃತಪಟ್ಟರೆ, ಹಿಂಬದಿ ಕುಳಿತಿದ್ದ ಮಹಿಳೆಗೆ ಕಾಲುಗಳು ತುಂಡಾಗಿದ್ದು, ಮಗುವೊಂದು ಪವಾಡ ಸದೃಶವಾಗಿ ಪಾರಾಗಿದೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದೆ. ಬೊಮ್ಮಸಂದ್ರ ಫ್ಲೈ ಓವರ್ ಬಳಿ ಮುಂದೆ ಸಾಗುತ್ತಿದ್ದ ಬೈಕ್‌ಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆ, ಸವಾರನ ಪತ್ನಿಗೆ ಎರಡು‌ ಕಾಲು ಕಟ್ ಆಗಿವೆ. ಸಣ್ಣ ಪುಟ್ಟ ಗಾಯಗಳಿಂದ ಮಗು ಪ್ರಾಣಪಾಯದಿಂದ ಪಾರಾಗಿದ್ದಾರೆ.

ದಂಪತಿ ಬೈಕ್‌ನಲ್ಲಿ ಬೆಂಗಳೂರು ಕಡೆಯಿಂದ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದಿದ್ದಾರೆ. ಕೆಳಗೆ ಬಿದ್ದ ಸವಾರನ ಮೇಲೆ ಹರಿದು, ಕರುಳು ಹೊರಗೆ ಬಂದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಮಹಿಳೆಯ ಎರಡು ಕಾಲುಗಳ ಹರಿದಿದೆ. ರಸ್ತೆಯಲ್ಲಿ ಒದ್ದಾಡುತ್ತಿದ್ದ ಗಾಯಾಳು ಮಹಿಳೆಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

ಸ್ಟೇರಿಂಗ್ ರಾಡ್ ತುಂಡಾಗಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ

ಹಳ್ಳದ ಸೇತುವೆ ತಡೆಗೋಡೆಗೆ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಉಳಿದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಅಪಘಾತ ನಡೆದಿದೆ.

Drowned in Water
Drowned in Water

ಕಲ್ಯಾಣ ಸಾರಿಗೆ ಬಸ್ ಸ್ಟೇರಿಂಗ್ ರಾಡ್ ತುಂಡಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿದೆ. ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಗಾಯಾಳುಗಳು ಮಾನ್ವಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Western Ghats: ನಾಳೆಯಿಂದ ಪಶ್ಚಿಮ ಘಟ್ಟದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ

Western Ghats: ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಮ್‌ಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

VISTARANEWS.COM


on

Western Ghats
Koo

ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ರೆಸಾರ್ಟ್‌ ಹೋಮ್‌ ಸ್ಟೇ ಸೇರಿ ಎಲ್ಲ ರೀತಿಯ ಒತ್ತುವರಿಯನ್ನು ತೆರವು ಮಾಡಲು ʼಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆʼ ರಚಿಸಲಾಗಿದೆ. ಈ ಕಾರ್ಯಪಡೆ ನಾಳೆಯಿಂದಲೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ (Western Ghats) ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಿದ್ದಾರೆ.

ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್, ಹೋಮ್‌ಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಎಲ್ಲರೂ ಕಾನೂನಿನ ಮುಂದೆ ಸಮಾನರು, ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64 ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ. ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್‌ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಿರುವುದಾಗಿ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ | ‌MB Patil: ಕುಮಾರಸ್ವಾಮಿಯದು ಅವಕಾಶವಾದಿ ಮೈತ್ರಿ ಎಂದ ಎಂ.ಬಿ. ಪಾಟೀಲ್

ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧವೂ ಕ್ರಮ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆ ಕಾಮಗಾರಿ ವೇಳೆ ಅವೈಜ್ಞಾನಿಕವಾಗಿ 90 ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಗೂ ನೋಟಿಸ್‌ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ. ವಯನಾಡು ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಪಶ್ಚಿಮಘಟ್ಟದಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

Continue Reading

ಕರ್ನಾಟಕ

‌MB Patil: ಕುಮಾರಸ್ವಾಮಿಯದು ಅವಕಾಶವಾದಿ ಮೈತ್ರಿ ಎಂದ ಎಂ.ಬಿ. ಪಾಟೀಲ್

‌MB Patil: ‘ಕುಮಾರಸ್ವಾಮಿ ಮೊದಲು ಪಾದಯಾತ್ರೆಗೆ ತಮ್ಮ‌ ನೈತಿಕ ಬೆಂಬಲವೂ ಇಲ್ಲ ಎಂದಿದ್ದರು. ಆಮೇಲೆ ಯಾರದೋ ಒತ್ತಡಕ್ಕೆ ಮಣಿದು ಕಾಟಾಚಾರಕ್ಕೆ ಪಾದಯಾತ್ರೆಗೆ ಹೋಗಿದ್ದಾರಷ್ಟೆ ಎಂದು ಸಚಿವ ಎಂ.ಬಿ.ಪಾಟೀಲ್‌ ಟೀಕಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಹಿಂದೆ ಬಿಜೆಪಿ ಜತೆ, ಆಮೇಲೆ ಕಾಂಗ್ರೆಸ್ ಜತೆ ಸೇರಿಕೊಂಡು ಸರ್ಕಾರ ರಚಿಸಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು. ಈಗ ಪುನಃ ಬಿಜೆಪಿ ಜತೆ ಹೋಗಿದ್ದಾರೆ. ಅವರದು ಅವಕಾಶವಾದಿ ಮೈತ್ರಿ. ಅವರು ತಮ್ಮ ಸರ್ಕಾರವನ್ನೇ ಉಳಿಸಿಕೊಳ್ಳಲಿಲ್ಲ. ಈಗ ನಮ್ಮ ಸರ್ಕಾರವನ್ನು ಉರುಳಿಸುವ ಮಾತುಗಳನ್ನು ಆಡುತ್ತಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ್ (‌MB Patil) ಟೀಕಿಸಿದರು.

ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಮೊದಲು ಪಾದಯಾತ್ರೆಗೆ ತಮ್ಮ‌ ನೈತಿಕ ಬೆಂಬಲವೂ ಇಲ್ಲ ಎಂದರು. ಆಮೇಲೆ ಯಾರದೋ ಒತ್ತಡಕ್ಕೆ ಮಣಿದು ಕಾಟಾಚಾರಕ್ಕೆ ಪಾದಯಾತ್ರೆಗೆ ಹೋಗಿದ್ದಾರಷ್ಟೆ ಎಂದು ಕುಟುಕಿದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಯಾವ ತಪ್ಪೂ ಇಲ್ಲ. ಸ್ವತಃ ಮುಡಾ ತಪ್ಪು ಮಾಡಿ, ಅದನ್ನು ಒಪ್ಪಿಕೊಂಡಿದೆ. ನಿಯಮಗಳಂತೆಯೇ ಸಿಎಂ ಪತ್ನಿಗೆ ಬದಲಿ ನಿವೇಶನಗಳನ್ನು ಅದು ಕೊಟ್ಟಿದೆ. ಇದರಲ್ಲಿ ಸಿದ್ದರಾಮಯ್ಯ ಅವರ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ಸಚಿವರ ಸಭೆ ಕರೆದಿರುವುದರಲ್ಲಿ ತಪ್ಪೇನೂ ಇಲ್ಲ. ಪಕ್ಷದ ಹಿತದೃಷ್ಟಿಯಿಂದ ಅವರು ನಮಗೆ ಸಲಹೆ ಕೊಡಬಹುದಷ್ಟೆ. ಇದಕ್ಕಿಂತ ಹೆಚ್ಚು ಈ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು.

ಪೊಲೀಸ್ ಎಸ್ಐ ಒಬ್ಬರು ಸತ್ತಿರುವುದರ ಹಿಂದೆ ಅಲ್ಲಿನ ಕಾಂಗ್ರೆಸ್ ಶಾಸಕರ ಕೈವಾಡವೇನೂ‌ ಇಲ್ಲ. ಈಗ ಪ್ರತಿಯೊಂದಕ್ಕೂ ಶಾಸಕರು ಮತ್ತು ಮಂತ್ರಿಗಳನ್ನು ದೂರುವುದು ಒಂದು ಕಾಯಿಲೆಯಾಗಿದೆ ಎಂದು ಬೇಸರ ಹೊರಹಾಕಿದರು.

ಎಚ್‌ಡಿಕೆ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ ಎಂದ ಜಮೀರ್‌

Zameer Ahmed Khan
Zameer Ahmed Khan

ರಾಮನಗರ: ಕುಮಾರಸ್ವಾಮಿ ಕೇವಲ 37 ಸೀಟ್ ಗೆದ್ದು ನಮ್ಮ ಜೊತೆ ಬಂದಿದ್ದರು. ಅವರದು ಮ್ಯಾಚ್ ಫಿಕ್ಸಿಂಗ್, ಅವರನ್ನು ನಂಬಬೇಡಿ ಅಂತ ಕಾಂಗ್ರೆಸ್‌ನವರಿಗೆ ಅಂದೇ ಹೇಳಿದ್ದೆ. ನಾನು ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಕುಮಾರಸ್ವಾಮಿ ಪ್ಯಾಂಟ್‌ನಲ್ಲಿ ಖಾಕಿ ಚೆಡ್ಡಿ ಇದೆ. ಬಿಜೆಪಿಗಿಂತ ಬಿಗಿಯಾದ ಖಾಕಿ ಚೆಡ್ಡಿ ಹಾಕಿದ್ದಾರೆ ಎಂದು ನಾನು ಹೇಳಿದಾಗ ಕೆಲವರು ಕೇಳಲಿಲ್ಲ ಎಂದು ಸಚಿವ ಜಮೀರ್ ಅಹ್ಮದ್‌ (Zameer Ahmed Khan) ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿ ಬಡವರಿಗೆ ಒಂದು‌ ಮನೆಯನ್ನೂ ಕೊಟ್ಟಿಲ್ಲ. ಯಾಕೆ ಬಿಜೆಪಿ-ಜೆಡಿಎಸ್‌ಗೆ ಬಡವರ ಬಗ್ಗೆ ಕಾಳಜಿ ಇಲ್ವಾ? ಕುಮಾರಸ್ವಾಮಿ ಅವರೇ ರಾಮನಗರದ ಜನ್ಮಕೊಟ್ಟ ಕ್ಷೇತ್ರ ಅಂತೀರಿ. ರಾಮನಗರದಲ್ಲಿ ಎಷ್ಟು ಮನೆ ಕೊಟ್ಟಿದ್ದೀರಿ? ನಿಮಗೆ ಓಪನ್ ಚಾಲೆಂಜ್ ಹಾಕುತ್ತೀನಿ, ಕೇವಲ 330 ಮನೆ ಕೊಟ್ಟಿದ್ದೀರಿ. ನಾವು ಎಷ್ಟು ಮನೆ ಕೊಟ್ಟಿದ್ದೀವಿ ಬನ್ನಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಚನ್ನಪಟ್ಟಣಕ್ಕೆ 5 ಸಾವಿರ ಮನೆ ಮಂಜೂರು ಮಾಡುತ್ತೇವೆ

ಡಿ.ಕೆ.ಸುರೇಶ್ ಸೋತಿದ್ದು ನನಗೆ ಹೊಟ್ಟೆ ಉರೀತಿದೆ. ಕ್ಷೇತ್ರದಲ್ಲಿ ಕ್ಲರ್ಕ್ ರೀತಿ ಕೆಲಸ ಮಾಡಿದ್ದಾರೆ. ಅವರು ಕ್ಷೇತ್ರಕ್ಕಾಗಿ ಹಲವು ರಾತ್ರಿ ಕೆಲಸ ಮಾಡಿದ್ದಾರೆ. ಅಂತವರು ಸೋತಿದ್ದರಿಂದ ಹೊಟ್ಟೆ ಉರೀತಿದೆ. ಡಿ.ಕೆ. ಸುರೇಶ್ ಅವರ 1 ಪರ್ಸೆಂಟ್ ಕೆಲಸ ಕುಮಾರಸ್ವಾಮಿ ಮಾಡಿಲ್ಲ. ಕೇವಲ ಡಂಗುರ ಹೊಡೆದುಕೊಂಡು ಬರುತ್ತಾರೆ. ಚನ್ನಪಟ್ಟಣಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಬೇಕು ಅಂತ ಡಿ.ಕೆ.ಸುರೇಶ್ ಕೇಳಿದ್ದರು. ಹೀಗಾಗಿ ಚನ್ನಪಟ್ಟಣಕ್ಕೆ ಐದು ಸಾವಿರ ಮನೆ ಮಂಜೂರು ಮಾಡುತ್ತೇವೆ, ಇನ್ನು 15 ದಿನಗಳಲ್ಲಿ 5 ಸಾವಿರ ಮನೆ ಮಂಜೂರು ಮಾಡುತ್ತೇವೆ. ಮೈನಾರಿಟಿ ಅಭಿವೃದ್ಧಿಗೆ 10ಕೋಟಿ ಹಣ ಕೊಡುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್‌ ಘೋಷಣೆ ಮಾಡಿದರು.

ಇದನ್ನೂ ಓದಿ | PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಬಿಜೆಪಿ-ಜೆಡಿಎಸ್ ಪಾದಯಾತ್ರೆಯಿಂದ ಏನೂ ಆಗಲ್ಲ. ನಾವೆಲ್ಲಾ ಇರೋವರೆಗೂ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಏನೂ‌ ಮಾಡೋಕಾಗಲ್ಲ. ಯಾರೋ ಅವರನ್ನು ಮುಟ್ಟೋಕೆ ಸಾಧ್ಯವಿಲ್ಲ. ನಾವೆಲ್ಲಾ ನಮ್ಮ ನಾಯಕರ ಜೊತೆ ಇದ್ದೀವಿ. ಡಿಕೆಶಿ ಆಸ್ತಿ ಬಗ್ಗೆ ಬಿಚ್ಚಿಡ್ತೀನಿ ಅಂತ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಕುಮಾರಸ್ವಾಮಿ ನಿಮ್ಮ ಕುಟುಂಬದ ಆಸ್ತಿ ತೆಗೆದರೆ ಕರ್ನಾಟಕದ 3 ಬಜೆಟ್ ಮಾಡಬಹುದು. ನಿಮ್ಮ ಅಣ್ಣ, ಅಕ್ಕ, ಬಾವ, ಅನುಸೂಯಕ್ಕ ಎಲ್ಲರ ಆಸ್ತಿ ತೆಗಿಯಿರಿ. ದಯಮಾಡಿ ಎರಡು ಬಜೆಟ್ ಗಾಗುವಷ್ಟಾದರೂ ಜನರಿಗೆ ಕೊಡಿ ಎಂದು ಕುಮಾರಸ್ವಾಮಿಗೆ ಒತ್ತಾಯ ಮಾಡಿದರು.

Continue Reading

ಮಳೆ

Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆಯ (Rain News) ಅಬ್ಬರ ತಗ್ಗಿದ್ದು, ಮುಂದಿನ ವಾರ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಒಳನಾಡಿನ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather Forecast
Koo

ಹಾವೇರಿ/ಬೆಂಗಳೂರು: ಹಾವೇರಿಯಲ್ಲಿ ನಿರಂತರ ಮಳೆಗೆ (Karnataka Weather Forecast) ಸರಕಾರಿ ಶಾಲೆ ಕಟ್ಟಡವೊಂದು ಸೋರುತ್ತಿದೆ. ಶತಮಾನ ಕಂಡಿರುವ ಹಾವೇರಿಯ ಕಳಸೂರಿನಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೀರು ಸೋರಿಕೆಯಿಂದಾಗಿ ಮಕ್ಕಳು ಪರದಾಟ ಅನುಭವಿಸುತ್ತಿದ್ದಾರೆ. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡದ ದುರಸ್ತಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮುಂದಿನ ವಾರ ಭಾರಿ ಮಳೆ

ಮುಂದಿನ ಒಂದು ವಾರ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಯ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ

ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದ್ದು, ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡ ನೈರುತ್ಯ

ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಹಾಗೂ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಮಂಕಿ 11, ಶಿವಮೊಗ್ಗದ ಆನವಟ್ಟಿ, ಆಗುಂಬೆಯಲ್ಲಿ ತಲಾ 10 ಸೆಂ.ಮೀ ಮಳೆಯಾಗಿದೆ. ಕ್ಯಾಸಲ್‌ ರಾಕ್‌, ಗೇರ್ಸೊಪ್ಪ, ಕದ್ರಾ, ಜಗಲಬೆಟ್‌ನಲ್ಲಿ 10ಸೆಂ.ಮೀ ಮಳೆಯಾಗಿದೆ. ಕೋಟ, ಕಮ್ಮರಡಿ,ಶೃಂಗೇರಿ, ಸಿದ್ದಾಪುರ, ಕುಮಟಾದಲ್ಲಿ 6 ಸೆಂ.ಮೀ, ಮೂಲ್ಕಿ, ಮಾಣಿ, ಕಾರವಾರ, ಯಲ್ಲಾಪುರ, ಪುತ್ತೂರು, ಹೊನ್ನಾವರ, ಕೊಪ್ಪ, ಜಯಪುರದಲ್ಲಿ 5 ಸೆಂ.ಮೀ ಮಳೆಯಾಗಿದೆ.

ಧರ್ಮಸ್ಥಳ, ಸಿದ್ದಾಪುರ, ಲಿಂಗನಮಕ್ಕಿ, ದಕ್ಷಿಣ ಕನ್ನಡ, ಜೋಯಿಡಾ, ಶಿರಾಲಿ, ಕುಂದಾಪುರ ಹಾಗೂ ಮಂಗಳೂರು, ಕಾರ್ಕಳ, ಬೆಳಗಾವಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಸುಳ್ಯ, ಗೋಕರ್ಣ, ಮಂಗಳೂರು, ಪಣಂಬೂರು, ಬೆಳ್ತಂಗಡಿ, ಹಳಿಯಾಳ, ಲೋಂಡಾ, ಎನ್‌ಆರ್‌ಪುರ, ಬಾಳೆಹೊನ್ನೂರು, ಮೂರ್ನಾಡು, ಭಾಗಮಂಡಲ, ಕಳಸ, ನಿಲ್ಕುಂದ, ಕಿರವತ್ತಿ, ಬೆಳಗಾವಿ, ತ್ಯಾಗರ್ತಿ ಸೇರಿದಂತೆ ಸೋಮವಾರಪೇಟೆ, ಹುಂಚದಕಟ್ಟೆ, ಹಿರಿಯೂರು, ಹಾಸನ, ಹಾರಂಗಿ, ತೊಂಡೇಬಾವಿ, ಬಿ ದುರ್ಗ, ದೊಡ್ಡಬಳ್ಳಾಪುರ, ಕೊಟ್ಟಿಗೆಹಾರ ಸುತ್ತಮುತ್ತ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Government Job: ಅಂತಾರಾಷ್ಟ್ರೀಯ ಕ್ರೀಡಾಕೂಟ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

Government Job: ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್‌ ಪದಕ ವಿಜೇತರನ್ನು ರಾಜ್ಯ ಸರ್ಕಾರದ ಇಲಾಖೆಗಳ ವಿವಿಧ ಹುದ್ದೆಗಳಿಗೆ ನೇಮಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ನೇಮಕಾತಿ ಪತ್ರ ವಿತರಿಸಿದ್ದಾರೆ.

VISTARANEWS.COM


on

Government Job
Koo

ಬೆಂಗಳೂರು: ರಾಜ್ಯದ ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್‌ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ (Government Job) ಲಭಿಸಿದೆ. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುವ 12 ಕ್ರೀಡಾಪಟುಗಳಿಗೆ ಗ್ರೂಪ್ ಎ, ಬಿ ಹುದ್ದೆಗಳ ನೇಮಕಾತಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ನೇಮಕಾತಿ ಪತ್ರವನ್ನು ವಿತರಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು.

ಸರ್ಕಾರಿ ಹುದ್ದೆ ಪಡೆದ ಕ್ರೀಡಾಪಟುಗಳು

ಗಿರೀಶ್ ಎಚ್.ಎನ್ – ಕ್ಲಾಸ್ ಒನ್ ಆಫೀಸರ್ ಹುದ್ದೆ
ದಿವ್ಯಾ.ಟಿ.ಎಸ್- ಗ್ರೂಪ್ ಬಿ ಹುದ್ದೆ
ಉಷಾರಾಣಿ ಎನ್- ಗ್ರೂಪ್ ಬಿ ಹುದ್ದೆ
ಸುಷ್ಮಿತ ಪವಾರ್ ಒ- ಗ್ರೂಪ್ ಬಿ ಹುದ್ದೆ
ನಿಕ್ಕಿನ್ ತಿಮ್ಮಯ್ಯ ಸಿ.ಎ- ಗ್ರೂಪ್ ಬಿ
ಎಸ್.ವಿ.ಸುನೀಲ್ -ಗ್ರೂಪ್ ಬಿ ಹುದ್ದೆ
ಕಿಶನ್ ಗಂಗೊಳ್ಳಿ- ಗ್ರೂಪ್ ಬಿ ಹುದ್ದೆ
ರಾಘವೇಂದ್ರ- ಗ್ರೂಪ್ ಬಿ ಹುದ್ದೆ
ರಾಧಾ ವಿ- ಗ್ರೂಪ್ ಬಿ ಹುದ್ದೆ
ಶರತ್ ಎಂ.ಎಸ್- ಗ್ರೂಪ್ ಬಿ ಹುದ್ದೆ
ಗುರುರಾಜ – ಗ್ರೂಪ್ ಬಿ ಹುದ್ದೆ
ಮಲಪ್ರಭಾ ಯಲ್ಲಪ್ಪ ಜಾಧವ- ಗ್ರೂಪ್ ಬಿ ಹುದ್ದೆ

ಸಿಎಂ ಅಭಿನಂದನೆ

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದವರಿಗೆ ಸಹಾಯ ಮಾಡಬೇಕು ಎಂದು ನಮ್ಮ ಸರ್ಕಾರ ಉದ್ಯೋಗ ನೀಡುತ್ತಿದೆ. ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದವರಿಗೆ ಕ್ಲಾಸ್-1 , ಏಷ್ಯಯನ್ ಗೇಮ್ಸ್ ವಿಜೇತರಿಗೆ ಕ್ಲಾಸ್ -2 ಹುದ್ದೆ ನೀಡಲಾಗುತ್ತಿದೆ. 12 ಮಂದಿ ಅರ್ಹ ಕ್ರೀಡಾಪಟುಗಳಿಗೆ ನೇರ ನೇಮಕಾತಿಯ ಉದ್ಯೋಗ ಪತ್ರ ನೀಡಲಾಗಿದೆ. ಅರಣ್ಯ ಹಾಗೂ ಪೋಸಿಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ‌ಶೇ.3ರಷ್ಟು ಮೀಸಲಾತಿ ನೀಡಲಾಗುತ್ತಿದೆ. 12 ಮಂದಿ ಪದಕ ವಿಜೇತ ಸಾಧಕರಿಗೆ 11 ಜನರಿಗೆ ಕ್ಲಾಸ್ -2 ಹುದ್ದೆ ಹಾಗೂ ಒಬ್ಬರಿಗೆ ಕ್ಲಾಸ್-1 ಹುದ್ದೆ ನೀಡಲಾಇದೆ. 45 ವರ್ಷಗಳ ಒಳಗೆ ಉದ್ಯೋಗಕ್ಕೆ ಸೇರಲು ಅವಕಾಶ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಭಾರತ ಜನಸಂಖ್ಯೆಯಲ್ಲಿ ನಂಬರ್ 1 ಸ್ಥಾನದಲ್ಲಿದೆ, ಸದ್ಯ 143 ಕೋಟಿ ಜನಸಂಖ್ಯೆ ಇದೆ. ಹೆಚ್ಚು ಜನರು ಕ್ರೀಡೆಗಳಲ್ಲಿ ಭಾಗವಹಿಸಬೇಕು, ಹೆಚ್ಚು ಪ್ರೋತ್ಸಾಹ ಕೊಡುವುದು ಸರ್ಕಾರದ ಜವಾಬ್ದಾರಿ. ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ. ನೌಕರಿ ಪಡೆದ ತಮಗೆಲ್ಲರಿಗೂ ಅಭಿನಂದನೆಗಳು ಎಂದು ತಿಳಿಸಿದರು.

ಇದನ್ನೂ ಓದಿ | Paris Olympics: ಶೂಟೌಟ್​ನಲ್ಲಿ ಗೆದ್ದು ಸೆಮಿಗೆ ಲಗ್ಗೆಯಿಟ್ಟ ಭಾರತ; ಒಲಿಂಪಿಕ್ಸ್​ನಿಂದ ಗ್ರೇಟ್​ ಬ್ರಿಟನ್ ಕಿಕ್​ ಔಟ್​

ಕಾರ್ಯಕ್ರದಲ್ಲಿ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ, ಎಂಎಲ್‌ಸಿ ಗೋವಿಂದರಾಜು, ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್ ಪ್ರಸಾದ್, ಇಲಾಖೆ ಆಯುಕ್ತ ಆರ್.ಚೇತನ್ ಸೇರಿ ಹಲವರು ಉಪಸ್ಥಿತರಿದ್ದರು.

Continue Reading
Advertisement
Viral Video
ವೈರಲ್ ನ್ಯೂಸ್3 mins ago

Viral Video: ಇಸ್ರೇಲಿ ಅಪಹೃತನ ಮೃತ ದೇಹವನ್ನು ನಡುಬೀದಿಯಲ್ಲಿ ಒದ್ದ ಪ್ಯಾಲೆಸ್ತೀನ್‌ ಜನ!

Krishnam Pranaya Sakhi
ಸಿನಿಮಾ33 mins ago

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾದ 4ನೇ ಹಾಡು ಔಟ್;‌ ರೊಮ್ಯಾಂಟಿಕ್‌ ಸಾಂಗ್ ಇಲ್ಲಿ ಕೇಳಿ!

Mohammed Siraj
ಕ್ರೀಡೆ33 mins ago

Mohammed Siraj : ಲಂಕಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಮೊಹಮ್ಮದ್​ ಸಿರಾಜ್​

Murder Case
ಕರ್ನಾಟಕ33 mins ago

Murder Case: 300 ರೂಪಾಯಿಗಾಗಿ ಹೆತ್ತಮ್ಮನನ್ನೇ ಕೊಂದ ಪಾಪಿ ಮಗ!

Amitabh Bachchan
ಸಿನಿಮಾ34 mins ago

Amitabh Bachchan: ʼಕೌನ್‌ ಬನೇಗಾ ಕರೋಡ್‌ಪತಿʼ ಸ್ಪರ್ಧಿಗಳ ಎದುರು ನಾನು ಅಸಹಾಯಕ; ಅಮಿತಾಭ್‌ ಹೀಗೆ ಹೇಳಿದ್ದೇಕೆ?

Paris Olympics 2024
ಕ್ರೀಡೆ45 mins ago

Paris Olympics 2024 : ಆ.​​​ 5ರಂದು ಭಾರತದ ಅಥ್ಲೀಟ್​ಗಳು ಒಲಿಂಪಿಕ್ಸ್​ನ ಯಾವ ಸ್ಪರ್ಧೆಗಳಲ್ಲಿ ಕಣಕ್ಕಿಳಿಯಲಿದ್ದಾರೆ? ಇಲ್ಲಿದೆ ಎಲ್ಲ ಮಾಹಿತಿ

Jaskaran Singh
ಸ್ಯಾಂಡಲ್ ವುಡ್55 mins ago

Jaskaran Singh: ಕನ್ನಡತಿಯನ್ನೇ ಮದುವೆ ಆಗುವೆ ಎಂದ ‘ದ್ವಾಪರ’ ಹಾಡಿನ ಗಾಯಕ ಜಸ್‌ಕರಣ್‌ ಸಿಂಗ್!

Viral Video
ವೈರಲ್ ನ್ಯೂಸ್60 mins ago

Viral Video: ಸೆಲ್ಫಿ ತೆಗೆಯಲು ಹೋಗಿ 100 ಅಡಿ ಆಳದ ಕಮರಿಗೆ ಬಿದ್ದ ಮಹಿಳೆ!

Western Ghats
ಕರ್ನಾಟಕ1 hour ago

Western Ghats: ನಾಳೆಯಿಂದ ಪಶ್ಚಿಮ ಘಟ್ಟದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ

Viral Video
ವೈರಲ್ ನ್ಯೂಸ್1 hour ago

Viral Video: ವಧುವಿಗೆ ಮಾಲೆ ಹಾಕಬೇಕು ಎನ್ನುವಷ್ಟರಲ್ಲಿ ಮೂರ್ಛೆ ಹೋದ ವರ! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ7 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌