Government Job: ಅಂತಾರಾಷ್ಟ್ರೀಯ ಕ್ರೀಡಾಕೂಟ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ - Vistara News

ಕರ್ನಾಟಕ

Government Job: ಅಂತಾರಾಷ್ಟ್ರೀಯ ಕ್ರೀಡಾಕೂಟ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

Government Job: ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್‌ ಪದಕ ವಿಜೇತರನ್ನು ರಾಜ್ಯ ಸರ್ಕಾರದ ಇಲಾಖೆಗಳ ವಿವಿಧ ಹುದ್ದೆಗಳಿಗೆ ನೇಮಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ನೇಮಕಾತಿ ಪತ್ರ ವಿತರಿಸಿದ್ದಾರೆ.

VISTARANEWS.COM


on

Government Job
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್‌ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ (Government Job) ಲಭಿಸಿದೆ. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುವ 12 ಕ್ರೀಡಾಪಟುಗಳಿಗೆ ಗ್ರೂಪ್ ಎ, ಬಿ ಹುದ್ದೆಗಳ ನೇಮಕಾತಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ನೇಮಕಾತಿ ಪತ್ರವನ್ನು ವಿತರಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು.

ಸರ್ಕಾರಿ ಹುದ್ದೆ ಪಡೆದ ಕ್ರೀಡಾಪಟುಗಳು

ಗಿರೀಶ್ ಎಚ್.ಎನ್ – ಕ್ಲಾಸ್ ಒನ್ ಆಫೀಸರ್ ಹುದ್ದೆ
ದಿವ್ಯಾ.ಟಿ.ಎಸ್- ಗ್ರೂಪ್ ಬಿ ಹುದ್ದೆ
ಉಷಾರಾಣಿ ಎನ್- ಗ್ರೂಪ್ ಬಿ ಹುದ್ದೆ
ಸುಷ್ಮಿತ ಪವಾರ್ ಒ- ಗ್ರೂಪ್ ಬಿ ಹುದ್ದೆ
ನಿಕ್ಕಿನ್ ತಿಮ್ಮಯ್ಯ ಸಿ.ಎ- ಗ್ರೂಪ್ ಬಿ
ಎಸ್.ವಿ.ಸುನೀಲ್ -ಗ್ರೂಪ್ ಬಿ ಹುದ್ದೆ
ಕಿಶನ್ ಗಂಗೊಳ್ಳಿ- ಗ್ರೂಪ್ ಬಿ ಹುದ್ದೆ
ರಾಘವೇಂದ್ರ- ಗ್ರೂಪ್ ಬಿ ಹುದ್ದೆ
ರಾಧಾ ವಿ- ಗ್ರೂಪ್ ಬಿ ಹುದ್ದೆ
ಶರತ್ ಎಂ.ಎಸ್- ಗ್ರೂಪ್ ಬಿ ಹುದ್ದೆ
ಗುರುರಾಜ – ಗ್ರೂಪ್ ಬಿ ಹುದ್ದೆ
ಮಲಪ್ರಭಾ ಯಲ್ಲಪ್ಪ ಜಾಧವ- ಗ್ರೂಪ್ ಬಿ ಹುದ್ದೆ

ಸಿಎಂ ಅಭಿನಂದನೆ

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದವರಿಗೆ ಸಹಾಯ ಮಾಡಬೇಕು ಎಂದು ನಮ್ಮ ಸರ್ಕಾರ ಉದ್ಯೋಗ ನೀಡುತ್ತಿದೆ. ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದವರಿಗೆ ಕ್ಲಾಸ್-1 , ಏಷ್ಯಯನ್ ಗೇಮ್ಸ್ ವಿಜೇತರಿಗೆ ಕ್ಲಾಸ್ -2 ಹುದ್ದೆ ನೀಡಲಾಗುತ್ತಿದೆ. 12 ಮಂದಿ ಅರ್ಹ ಕ್ರೀಡಾಪಟುಗಳಿಗೆ ನೇರ ನೇಮಕಾತಿಯ ಉದ್ಯೋಗ ಪತ್ರ ನೀಡಲಾಗಿದೆ. ಅರಣ್ಯ ಹಾಗೂ ಪೋಸಿಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ‌ಶೇ.3ರಷ್ಟು ಮೀಸಲಾತಿ ನೀಡಲಾಗುತ್ತಿದೆ. 12 ಮಂದಿ ಪದಕ ವಿಜೇತ ಸಾಧಕರಿಗೆ 11 ಜನರಿಗೆ ಕ್ಲಾಸ್ -2 ಹುದ್ದೆ ಹಾಗೂ ಒಬ್ಬರಿಗೆ ಕ್ಲಾಸ್-1 ಹುದ್ದೆ ನೀಡಲಾಇದೆ. 45 ವರ್ಷಗಳ ಒಳಗೆ ಉದ್ಯೋಗಕ್ಕೆ ಸೇರಲು ಅವಕಾಶ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಭಾರತ ಜನಸಂಖ್ಯೆಯಲ್ಲಿ ನಂಬರ್ 1 ಸ್ಥಾನದಲ್ಲಿದೆ, ಸದ್ಯ 143 ಕೋಟಿ ಜನಸಂಖ್ಯೆ ಇದೆ. ಹೆಚ್ಚು ಜನರು ಕ್ರೀಡೆಗಳಲ್ಲಿ ಭಾಗವಹಿಸಬೇಕು, ಹೆಚ್ಚು ಪ್ರೋತ್ಸಾಹ ಕೊಡುವುದು ಸರ್ಕಾರದ ಜವಾಬ್ದಾರಿ. ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ. ನೌಕರಿ ಪಡೆದ ತಮಗೆಲ್ಲರಿಗೂ ಅಭಿನಂದನೆಗಳು ಎಂದು ತಿಳಿಸಿದರು.

ಇದನ್ನೂ ಓದಿ | Paris Olympics: ಶೂಟೌಟ್​ನಲ್ಲಿ ಗೆದ್ದು ಸೆಮಿಗೆ ಲಗ್ಗೆಯಿಟ್ಟ ಭಾರತ; ಒಲಿಂಪಿಕ್ಸ್​ನಿಂದ ಗ್ರೇಟ್​ ಬ್ರಿಟನ್ ಕಿಕ್​ ಔಟ್​

ಕಾರ್ಯಕ್ರದಲ್ಲಿ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ, ಎಂಎಲ್‌ಸಿ ಗೋವಿಂದರಾಜು, ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್ ಪ್ರಸಾದ್, ಇಲಾಖೆ ಆಯುಕ್ತ ಆರ್.ಚೇತನ್ ಸೇರಿ ಹಲವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP-JDS Padayatra: ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗಲ್ಲ, ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ: ಕೆ.ಸಿ. ವೇಣುಗೋಪಾಲ್

BJP-JDS Padayatra: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಮಾತನಾಡಿದ್ದಾರೆ. ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಪಾದಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದ್ದಾರೆ.

VISTARANEWS.COM


on

BJP-JDS Padayatra
Koo

ಬೆಂಗಳೂರು: ಬಿಜೆಪಿ–ಜೆಡಿಎಸ್‌ ಪಕ್ಷಗಳ (BJP-JDS Padayatra) ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ ಎಂದು ತಿಳಿಸಿದರು.

2018ರಲ್ಲಿ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.
ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಲೇ ಇಡೀ ದೇಶ ಕಾಂಗ್ರೆಸ್‌ ಸರ್ಕಾರದ ವಿರುದ್ಧದ ಪಿತೂರಿಯನ್ನು ಗಮನಿಸಿದೆ. ಬಿಜೆಪಿ ಹಾಗೂ ಜೆಡಿಎಸ್‌ ನ ಮುಖಂಡರು ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು ನಮ್ಮ ಚುನಾಯಿತ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದರು.

ಇದನ್ನೂ ಓದಿ | MB Patil: ಕುಮಾರಸ್ವಾಮಿಯದು ಅವಕಾಶವಾದಿ ಮೈತ್ರಿ ಎಂದ ಎಂ.ಬಿ. ಪಾಟೀಲ್

ಸಿದ್ದರಾಮಯ್ಯ ಬೆಳೆದು ಬಂದ ಹಾದಿ ಎಲ್ಲರಿಗೂ ತಿಳಿದಿದೆ

ಎಲ್ಲರಿಗೂ ಸಿದ್ದರಾಮಯ್ಯನವರ ಪ್ರಾಮಾಣಿಕತೆಯ ಅರಿವಿದೆ. ಅವರು ಮುಖ್ಯಮಂತ್ರಿ ಪದವಿಗೆ ಹೊಸಬರಲ್ಲ. ಅವರ ರಾಜಕೀಯ ಬದುಕು, ತತ್ವ ಸಿದ್ಧಾಂತ, ಹಿನ್ನೆಲೆ ಅವರು ಹಿಂದೆ ಹೇಗಿದ್ದರು, ಈಗ ಹೇಗಿದ್ದಾರೆ ಎಂಬುದು ಕರ್ನಾಟಕದ ಜನತೆಗೆ ಚೆನ್ನಾಗಿ ತಿಳಿದಿದೆ ಎಂದರು.

ಜನಪ್ರಿಯತೆ ಸಹಿಸದೆ ಸರ್ಕಾರ ಅಸ್ತಿರಗೊಳಿಸುವ ಹುನ್ನಾರ

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಬಡವರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಬಿಜೆಪಿ ಮತ್ತು ಜೆಡಿಎಸ್‌ ನವರಿಗೆ ಇದು ರಾಜಕೀಯವಾಗಿ ನಷ್ಟ ಉಂಟು ಮಾಡುವುದು ಹಾಗೂ ವಿವಿಧ ಪ್ರಕರಣಗಳ ತನಿಖೆಯಿಂದ ವೈಯಕ್ತಿಕವಾಗಿಯೂ ಅವರಿಗೆ ತೊಂದರೆಯಾಗಲಿದೆ ಎಂಬುದು ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಕೆಲವು ಆರೋಪಗಳನ್ನು ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ ನಡೆಸಿದ್ದಾರೆ.

ರಾಜ್ಯಪಾಲರ ಬಳಕೆ ದುರದೃಷ್ಟಕರ

ದುರದೃಷ್ಟವಶಾತ್‌ ರಾಜ್ಯದ ರಾಜ್ಯಪಾಲರು ಬಿಜೆಪಿ ಪಿತೂರಿಯ ಸಾಧನವಾಗಿದ್ದಾರೆ. ಮುಖ್ಯಮಂತ್ರಿಯವರಿಗೆ ಕಾರಣ ಕೇಳಿ ನೋಟೀಸ್‌ ನೀಡುವ ಮೂಲಕ ಸರ್ಕಾರ ಅಸ್ಥಿರಗೊಳ್ಳಲಿದೆ ಎಂಬ ಭಾವನೆ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಪಕ್ಷವು ಈ ಪಿತೂರಿ ವಿರುದ್ಧ ಹೋರಾಡಲು ತೀರ್ಮಾನಿಸಿದ್ದು, ಕರ್ನಾಟಕದ ಜನತೆಗೆ ವಾಸ್ತವಾಂಶದ ಅರಿವು ಮೂಡಿಸಲು ನಿರ್ಧರಿಸಿದೆ. ಸಚಿವರು, ಶಾಸಕರು ಜಿಲ್ಲೆಗಳು, ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರಿಗೆ ಸರ್ಕಾರದ ಸಾಧನೆಗಳನ್ನು ವಿವರಿಸಿ, ಗ್ಯಾರಂಟಿ ಯೋಜನೆಗಳನ್ನು ಮುಗಿಸುವ ಬಿಜೆಪಿ-ಜೆಡಿಎಸ್‌ ನ ಹುನ್ನಾರವನ್ನು ಬಯಲಿಗೆಳೆಯಲಾಗುವುದು. ಇದಕ್ಕಾಗಿ ಇಂದು ಸಭೆ ನಡೆಸಿದ್ದು, ರಾಜ್ಯದ ಬಡ ಜನರ ಕುರಿತು ಕಾಂಗ್ರೆಸ್‌ ಸರ್ಕಾರಕ್ಕೆ ಅತೀವ ಕಾಳಜಿ ಇದ್ದು, ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಾಗುವುದು. ಈ ಯೋಜನೆಗಳ ಕುರಿತು ನಮಗೆ ಹೆಮ್ಮೆ ಇದೆ ಎಂದರು.

ಭ್ರಷ್ಟಾಚಾರ ಕುರಿತು ಬಿಜೆಪಿ ಮಾತಾಡುವುದು ಹಾಸ್ಯಾಸ್ಪದ

ಬಿಜೆಪಿ ಭ್ರಷ್ಟಾಚಾರದ ಕುರಿತು ಮಾತನಾಡುತ್ತಿರುವುದು ಅತ್ಯಂತ ಹಾಸ್ಯಾಸ್ಪದ. ವಿಜಯೇಂದ್ರ ಅವರ ಮೇಲೆ ಎಷ್ಟು ಆರೋಪಗಳಿವೆ?, ಪ್ರಜ್ವಲ್‌ ರೇವಣ್ಣ ವಿರುದ್ಧ ಎಷ್ಟು ಆರೋಪಗಳಿವೆ? ಅಂತವರು ತಾವೇ ಅತ್ಯಂತ ಸಭ್ಯರೆಂಬ ಸೋಗಿನಲ್ಲಿ ತಮ್ಮ ರಾಜಕೀಯ ಜೀವನದುದ್ದಕ್ಕೂ ಜನಪರ ಕಾಳಜಿ ಹೊಂದಿದ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಬಡ ಜನರ ಜೊತೆ ನಿಂತ ಮುಖ್ಯಮಂತ್ರಿಯವರನ್ನು ಮುಗಿಸಲು ಮುಂದಾಗಿದ್ದಾರೆ ಎಂದರು.

ಸಮಸ್ಯೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಿ

ಆರೋಪಗಳ ಕುರಿತು ಕಾನೂನು ತನ್ನದೇ ಕ್ರಮ ವಹಿಸಲಿದೆ. ಈ ಬಗ್ಗೆ ನಮಗೆ ಯಾವುದೇ ಅಳುಕಿಲ್ಲ. ನಿಜವಾಗಿಯೂ ಸಮಸ್ಯೆ ಇದ್ದರೆ ಕಾನೂನಿನ ಮೊರೆ ಹೋಗಲಿ. ಅದರ ಬದಲಾಗಿ ಪ್ರತಿದಿನ ಸಿದ್ದರಾಮಯ್ಯ ಅವರ ವಿರುದ್ಧ ಪದೇ ಪದೇ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ. ಅವರು ಗ್ಯಾರಂಟಿ ಯೋಜನೆಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ | Western Ghats: ನಾಳೆಯಿಂದ ಪಶ್ಚಿಮ ಘಟ್ಟದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ

ಕಾಂಗ್ರೆಸ್‌ ಬಡವರ ಪರವಾಗಿದೆ ಎಂದು ಅವರಿಗೂ ಗೊತ್ತಿದೆ. ಹಿಂದಿನ ಚುನಾವಣೆ ಕರ್ನಾಟಕದಲ್ಲಿ ಬಡವರು-ಶ್ರೀಮಂತರ ನಡುವೆ ಇತ್ತು. ಆದ್ದರಿಂದಲೇ 135 ಸೀಟುಗಳೊಂದಿಗೆ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದೇವೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡಿರುವ ತಾರತಮ್ಯ ಕುರಿತು ಯಾರೂ ಮಾತನಾಡುತ್ತಿಲ್ಲ. ನಿರ್ಮಲಾ ಸೀತಾರಾಮನ್‌ ಅವರು ಇಲ್ಲಿಂದಲೇ ಆಯ್ಕೆಯಾಗಿದ್ದರೂ ಯಾವುದೇ ನೆರವು ಒದಗಿಸಿಲ್ಲ.ಸೀಮಿತ ಸಂಪನ್ಮೂಲದೊಂದಿಗೆ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಕೇಂದ್ರ ಸರ್ಕಾರ ಬೆಂಬಲ ನೀಡುವ ಬದಲಿಗೆ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ನಾವು ಇದರ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ಸುರ್ಜೇವಾಲ ಅವರು ಉಪಸ್ಥಿತರಿದ್ದರು.

Continue Reading

ಕ್ರೈಂ

PSI Parashuram Case: ಪಿಎಸ್‌ಐ ಪರಶುರಾಮ ಸಾವು ಪ್ರಕರಣದ ಕಡತ ನಾಳೆ ಸಿಐಡಿಗೆ ಹಸ್ತಾಂತರ: ಎಸ್‌ಪಿ ಜಿ.ಸಂಗೀತಾ

PSI Parashuram Case: ಪಿಎಸ್‌ಐ ಪರಶುರಾಮ ಸಾವು ಪ್ರಕರಣದ ಕಡತವನ್ನು ಮುಂದಿನ ತನಿಖೆಗಾಗಿ ಸಿ.ಐ.ಡಿ ಘಟಕಕ್ಕೆ ನೀಡಲು ಡಿ.ಜಿ ಮತ್ತು ಐ.ಜಿ.ಪಿ ಆದೇಶ ನೀಡಿದ್ದಾರೆ. ಹೀಗಾಗಿ ಕಡತವನ್ನು ಆ.5ರಂದು ಸಿ.ಐ.ಡಿ ಘಟಕಕ್ಕೆ ವರ್ಗಾಯಿಸಲಾಗುವುದು ಎಂದು ಎಸ್‌ಪಿ ಜಿ. ಸಂಗೀತಾ ತಿಳಿಸಿದ್ದಾರೆ.

VISTARANEWS.COM


on

PSI Parashuram Case
Koo

ಯಾದಗಿರಿ: ಪಿಎಸ್‌ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ (PSI Parashuram Case) ಸಂಬಂಧಿಸಿದ ಕಡತವನ್ನು ಮುಂದಿನ ತನಿಖೆಗೆ ಆ.5ರಂದು ಸಿಐಡಿಗೆ ವರ್ಗಾಯಿಸಲಾಗುತ್ತದೆ ಎಂದು ಎಸ್‌ಪಿ ಜಿ. ಸಂಗೀತಾ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆ.3ರಂದು ಮೃತ ಪಿ.ಎಸ್.ಐ ಪರಶುರಾಮ ಅವರ ಪತ್ನಿ ಶ್ವೇತಾ ಎನ್.ವಿ ಅವರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತು ಅವರ ಪುತ್ರ ಪಂಪನಗೌಡ (ಸನ್ನಿಗೌಡ) ಅವರ ವಿರುದ್ಧ ಪೊಲೀಸ್‌ ಠಾಣೆ ಗುನ್ನೆ ನಂ. 105/2024, ಕಲಂ 352, 108 ಸಂಗಡ 3(5) ಬಿಎನ್‌ಎಸ್ 2023 ಮತ್ತು ಕಲಂ 3(1) (ಆರ್) (ಎಸ್) 3(2) (v), ಎಸ್‌ಸಿ, ಎಸ್‌ಟಿ ಕಾಯ್ದೆ ಅಡಿ ಪ್ರಕರಣದಾಗಿದೆ.

ಡಿ.ಜಿ ಮತ್ತು ಐ.ಜಿ.ಪಿ ಅವರು ಪ್ರಕರಣದ ಕಡತವನ್ನು ಮುಂದಿನ ತನಿಖೆಗಾಗಿ ಸಿ.ಐ.ಡಿ ಘಟಕಕ್ಕೆ ನೀಡಲು ಆದೇಶಿಸಿದ್ದಾರೆ. ಹೀಗಾಗಿ ಪ್ರಕರಣದ ಕಡತವನ್ನು ಬೆಂಗಳೂರಿನ ಸಿ.ಐ.ಡಿ ಘಟಕಕ್ಕೆ ಆ. 5ರಂದು ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | PSI Parashuram Case: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

ಆರೋಪಿ ಪಂಪನಗೌಡ ವಿರುದ್ಧ ಮತ್ತೊಂದು ಗಂಭೀರ ಆರೋಪ

PSI Parashuram Case
PSI Parashuram Case

ಯಾದಗಿರಿ: ಪಿಎಸ್ಐ ಪರಶುರಾಮ ಸಾವು ಪ್ರಕರಣದ (PSI Parashuram Case) ಎ2 ಆರೋಪಿ ಪಂಪನಗೌಡ (ಸನ್ನಿಗೌಡ) ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪಂಚಾಯತ್ ರಾಜ್‌ ಇಲಾಖೆ ಯೋಜನೆಯ 3 ಕೋಟಿ ಹಣ ಬಿಡುಗಡೆಗೂ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಪುತ್ರ ಕಮಿಷನ್ ಕೇಳಿದ್ದಾರೆ ಎನ್ನಲಾಗಿದ್ದು, ಈ ಪ್ರಕರಣದ ತನಿಖೆಗೆ ಒತ್ತಾಯಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಭಾಧ್ಯಕ್ಷರಿಗೆ ಸಾಮಾಜಿಕ ಹೋರಾಟಗಾರ ಮಾನಪ್ಪ ಹಡಪದ ಪತ್ರ ಬರೆದಿದ್ದಾರೆ.

ಜಿಲ್ಲೆಯ ಐದು ತಾಲೂಕಿನ ಪಂಚಾಯತ್‌ ರಾಜ್ ಯೋಜನೆ ಹಣ ಬಿಡುಗಡೆಯಾಗಿದೆ. ಆದರೆ ವಡಗೇರಾ ತಾಲೂಕಿನ ಪಂಚಾಯತಿ ರಾಜ್ ಹಣ ಬಿಡುಗಡೆ ಆಗಿಲ್ಲ. ಇದರಿಂದ ವಡಗೇರಾ ತಾಲೂಕಿನಲ್ಲಿ ಭ್ರಷ್ಟಾಚಾರದ ವಾಸನೆ ಕಂಡು ಬರುತ್ತಿದೆ. ಶಾಸಕರ ಪುತ್ರ ಸನ್ನಿಗೌಡ ಹಣ ಬಿಡುಗಡೆಗೆ ಕಮಿಷನ್ ಕೇಳಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೇ ಲಂಚಕ್ಕೆ ಬೇಡಿಕೆ ಇಟ್ಟು ಪಿಎಸ್‌ಐ ಪರಶುರಾಮ ಸಾವಿಗೆ ಕಾರಣವಾದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪನಗೌಡ ವಿರುದ್ಧ ಕ್ರಮಕ್ಕೆ ಸಾಮಾಜಿಕ ಹೋರಾಟಗಾರ ಒತ್ತಾಯಿಸಿದ್ದಾರೆ.

ಎರಡು ಪ್ರಕರಣ ಗಂಭೀರವಾಗಿ ಪರಿಗಣಿಸಿ ಶಾಸಕ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರ ವಿಧಾನಸಭಾ ಸದಸ್ಯತ್ವ ರದ್ದುಗೊಳಿಸುವಂತೆ ಸಾಮಾಜಿಕ ಹೋರಾಟಗಾರ ಮಾನಪ್ಪ ಹಡಪದ ಪತ್ರ ಬರೆದು ಮನವಿ ಮಾಡಿದ್ದಾರೆ.

Continue Reading

ಸಿನಿಮಾ

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾದ 4ನೇ ಹಾಡು ಔಟ್;‌ ರೊಮ್ಯಾಂಟಿಕ್‌ ಸಾಂಗ್ ಇಲ್ಲಿ ಕೇಳಿ!

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾ ತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. “ಮೈ ಮ್ಯಾರೇಜ್ ಈಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ”ದ್ವಾಪರ ದಾಟುತ” ಹಾಡುಗಳು ಹಿಟ್‌ ಆಗಿವೆ. ಆಗಸ್ಟ್‌ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

VISTARANEWS.COM


on

Krishnam Pranaya Sakhi
Koo

ಬೆಂಗಳೂರು: ಗೋಲ್ಡನ್‌ ಸ್ಟಾರ್‌ ಗಣೇಶ್‌ (Golden Star Ganesh) ಹಾಗೂ ಮಾಳವಿಕಾ ನಾಯರ್‌ ನಟಿಸಿರುವ ಕೃಷ್ಣಂ ಪ್ರಣಯ ಸಖಿ (Krishnam Pranaya Sakhi) ಸಿನಿಮಾದ ದ್ವಾಪರ ದಾಟುತ ಸೇರಿ ಮೂರು ಹಾಡುಗಳು ಹಿಟ್‌ ಆಗಿವೆ. ಇದರ ಬೆನ್ನಲ್ಲೇ, ಚಿತ್ರತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. ಸೋನು ನಿಗಮ್‌ ಹಾಡಿರುವ ಹೇ ಗಗನ ಎಂಬ ರೊಮ್ಯಾಂಟಿಕ್‌ ಹಾಡನ್ನು ಭಾನುವಾರ (ಆಗಸ್ಟ್‌ 4) ಬಿಡುಗಡೆ ಮಾಡಲಾಗಿದೆ. ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದೆ.

“ಮೈ ಮ್ಯಾರೇಜ್ ಈಸ್ ಫಿಕ್ಸ್ಡ್” ಹಾಗೂ “ಚಿನ್ನಮ್ಮ” ಹಾಡುಗಳು ಹಿಟ್‌ ಆದ ಬಳಿಕ ಬಿಡುಗಡೆಯಾದ, ಪಂಜಾಬಿ ಗಾಯಕ ಜಸ್‌ಕರಣ್‌ ಸಿಂಗ್‌ ಹಾಡಿರುವ ದ್ವಾಪರ ದಾಟುತ ಹಾಡಂತೂ ಯುಟ್ಯೂಬ್‌ ಸೇರಿ ಎಲ್ಲ ಜಾಲತಾಣಗಳಲ್ಲಿ ದಾಖಲೆ ಬರೆದಿದೆ. ಇದರ ಬೆನ್ನಲ್ಲೇ ಸಿನಿಮಾ ತಂಡವು ನಾಲ್ಕನೇ ಹಾಡನ್ನು ಕೂಡ ಬಿಡುಗಡೆ ಮಾಡಿದೆ. ಆಗಸ್ಟ್‌ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

ಇಲ್ಲಿದೆ ರೊಮ್ಯಾಂಟಿಕ್‌ ಸಾಂಗ್‌

ನಾಲ್ಕನೇ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಜಸ್‌ಕರಣ್‌ ಸಿಂಗ್‌ ಅವರು ಕನ್ನಡತಿಯನ್ನೇ ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. “ನಾನು ಗಣೇಶ್‌ ಅವರ ಅಭಿಮಾನಿಯಾಗಿದ್ದೇನೆ. ಅನಿಸುತಿದೆ ಯಾಕೋ ಇಂದು ಹಾಡು ನನಗೆ ಫೇವರಿಟ್ ಆಗಿದೆ. ಈಗ ಕನ್ನಡ ಸಿನಿಮಾದ ಹಾಡು ಹಾಡಿರುವುದು ಖುಷಿ ತಂದಿದೆ. ಕನ್ನಡಿಗರು ನೀಡಿದ ಪ್ರೀತಿಯನ್ನು ನಾನು ಮರೆಯಲು ಸಾಧ್ಯವಿಲ್ಲ. ಮುಂದೊಂದು ದಿನ ಸಾಧ್ಯವಾದರೆ ನಾನು ಕನ್ನಡತಿಯನ್ನೇ ಮದುವೆಯಾಗುವೆ” ಎಂದಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಹಾಗೂ ನಟಿ ಮಾಳವಿಕಾ ನಾಯರ್‌ ಅವರು ಹೆಜ್ಜೆ ಹಾಕಿರುವ ದ್ವಾಪರ ದಾಟುತ ಹಾಡು ಯುಟ್ಯೂಬ್‌ನಲ್ಲಿ 1.3 ಕೋಟಿ (13 ದಶಲಕ್ಷ) ವ್ಯೂಸ್‌ ಪಡೆದುಕೊಂಡಿದೆ. ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿಯೂ ಹಾಡು ದಾಖಲೆ ಬರೆದಿದೆ. ‌

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Continue Reading

ಕರ್ನಾಟಕ

Murder Case: 300 ರೂಪಾಯಿಗಾಗಿ ಹೆತ್ತಮ್ಮನನ್ನೇ ಕೊಂದ ಪಾಪಿ ಮಗ!

Murder Case: 300 ರೂ. ಕೇಳಿದ್ದಕ್ಕೆ ಕೊಡಲ್ಲ ಎಂದು ತಾಯಿ ಹೇಳಿದ್ದಕ್ಕೆ ಮಗ ಹಲ್ಲೆ ಮಾಡಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ತಾಯಿ ಮೃತಪಟ್ಟಿದ್ದಾರೆ.

VISTARANEWS.COM


on

Murder Case
Koo

ಬೆಳಗಾವಿ: 300 ರೂಪಾಯಿಗಾಗಿ ಪಾಪಿ ಮಗನೊಬ್ಬ ಹೆತ್ತಮ್ಮನನ್ನೇ ಕೊಂದಿರುವ ಘಟನೆ ಜಿಲ್ಲೆಯ ಬೈಲಹೊಂಗಲ‌ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆಸದಿದೆ. ಮಹಾದೇವಿ ಗುರೇಪ್ಪ ತೊಲಗಿ (70) ಕೊಲೆಯಾದ ದುರ್ದೈವಿ. ಈರಪ್ಪ ಗುರೇಪ್ಪ ತೊಲಗಿ(34) ತಾಯಿಯನ್ನೇ ಕೊಲೆ ಮಾಡಿದ ಮಗ.

300 ರೂ. ಕೇಳಿದ್ದಕ್ಕೆ ಕೊಡಲ್ಲ ಎಂದು ತಾಯಿ ಹೇಳಿದ್ದಾರೆ. ಇದೇ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ಶುರುವಾಗಿದ್ದು, ನಂತರ ಜಗಳ ವಿಕೋಪಕ್ಕೆ ತಿರುಗಿ ಕಟ್ಟಿಗೆಯಿಂದ ಮಹಾದೇವಿ ತಲೆಗೆ ಮಗ ಹಲ್ಲೆ ಮಾಡಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ತಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಆರೋಪಿ ಈರಪ್ಪನನ್ನು ದೊಡವಾಡ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆ ಸಿಂದಗಿ ತಾಲೂಕಿನ ಯರಗಲ್ ಕೆ.ಡಿ. ಗ್ರಾಮದ ಬಳಿ ನಡೆದಿದೆ. ಹನುಮಂತ ಹಿರೇಕುರುಬರ (43) ಮೃತ ಸವಾರ. ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ನಿವಾಸಿಯಾದ ಹನುಮಂತ, ಅಮಾವಾಸ್ಯೆ ಹಿನ್ನಲೆ ಯಾತನೂರು ಗ್ರಾಮದ ದೇವಸ್ಥಾನಕ್ಕೆ ತೆರಳುತ್ತಿದ್ದ. ಈ ವೇಳೆ ದುರಂತ ನಡೆದಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುರಿ ಮೇಯಿಸಲು ಹೋದ ಮಹಿಳೆ‌ ಮೇಲೆ ಕಾಡಾನೆ ದಾಳಿ

ಕೋಲಾರ: ಜಿಲ್ಲೆಯ ಗಡಿ ಗ್ರಾಮದಲ್ಲಿ ಕುರಿ ಮೇಯಿಸಲು ಹೋಗಿದ್ದ ಮಹಿಳೆ‌ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆಯ ಕೈ, ತಲೆಗೆ ಗಂಭೀರ ಗಾಯಗಳಾಗಿವೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಚಿತ್ತಗುಟ್ಟಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಗ್ರಾಮದ ರಾಧಮ್ಮ (70) ಗಾಯಾಳು. ಇವರನ್ನು ಚಿಕಿತ್ಸೆಗಾಗಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

Road Accident
Road Accident

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ (Road Accident) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಕೆ ಡಿ ಗ್ರಾಮದ ಎನ್ 50 ರಲ್ಲಿ ಘಟನೆ ನಡೆದಿದೆ. ಬೈಕ್ ಸವಾರ ಹನುಮಂತ ಹಿರೇಕುರುಬರ (43) ಸ್ಥಳದಲ್ಲೇ ಮೃತಪಟ್ಟವರು.

ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ವಾಸಿ ಹನುಮಂತ ಅವರು ಭಾನುವಾರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆ ಜೀವರ್ಗಿ ತಾಲೂಕಿನ ಯಾತನೂರು ಗ್ರಾಮದ ದೇವಸ್ಥಾನಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ ಕಾರಿಗೆ ಗುದ್ದಿದೆ. ಗುದ್ದ ರಭಸಕ್ಕೆ ಕೆಳಗೆ ಬಿದ್ದ ಹನುಮಂತ ಅವರಿಗೆ ಗಂಭೀರ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading
Advertisement
Bengal Minister
ದೇಶ29 mins ago

Bengal Minister: ಮಹಿಳಾ ಅಧಿಕಾರಿಗೆ ಬಂಗಾಳ ಸಚಿವ ಜೀವ ಬೆದರಿಕೆ; ದೀದಿ ಆದೇಶದ ಬಳಿಕ ರಾಜೀನಾಮೆ!

BJP-JDS Padayatra
ಕರ್ನಾಟಕ36 mins ago

BJP-JDS Padayatra: ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗಲ್ಲ, ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ: ಕೆ.ಸಿ. ವೇಣುಗೋಪಾಲ್

Novak Djokovic
ಪ್ರಮುಖ ಸುದ್ದಿ43 mins ago

Novak Djokovic : ಅಲ್ಕರಾಜ್ ಮಣಿಸಿ ಚೊಚ್ಚಲ ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದ ನೊವಾಕ್ ಜೊಕೊವಿಕ್

PSI Parashuram Case
ಕ್ರೈಂ54 mins ago

PSI Parashuram Case: ಪಿಎಸ್‌ಐ ಪರಶುರಾಮ ಸಾವು ಪ್ರಕರಣದ ಕಡತ ನಾಳೆ ಸಿಐಡಿಗೆ ಹಸ್ತಾಂತರ: ಎಸ್‌ಪಿ ಜಿ.ಸಂಗೀತಾ

Health Tips
ಆರೋಗ್ಯ55 mins ago

Health Tips: ಪಾದಗಳ ಊತ, ನೋವನ್ನು ಕಡಿಮೆ ಮಾಡಲು ಇಲ್ಲಿದೆ ಸರಳ ಉಪಾಯ

Viral Video
ವೈರಲ್ ನ್ಯೂಸ್1 hour ago

Viral Video: ಇಸ್ರೇಲಿ ಅಪಹೃತನ ಮೃತ ದೇಹವನ್ನು ನಡುಬೀದಿಯಲ್ಲಿ ಒದ್ದ ಪ್ಯಾಲೆಸ್ತೀನ್‌ ಜನ!

Krishnam Pranaya Sakhi
ಸಿನಿಮಾ2 hours ago

Krishnam Pranaya Sakhi: ಕೃಷ್ಣಂ ಪ್ರಣಯ ಸಖಿ ಸಿನಿಮಾದ 4ನೇ ಹಾಡು ಔಟ್;‌ ರೊಮ್ಯಾಂಟಿಕ್‌ ಸಾಂಗ್ ಇಲ್ಲಿ ಕೇಳಿ!

Mohammed Siraj
ಕ್ರೀಡೆ2 hours ago

Mohammed Siraj : ಲಂಕಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಮೊಹಮ್ಮದ್​ ಸಿರಾಜ್​

Murder Case
ಕರ್ನಾಟಕ2 hours ago

Murder Case: 300 ರೂಪಾಯಿಗಾಗಿ ಹೆತ್ತಮ್ಮನನ್ನೇ ಕೊಂದ ಪಾಪಿ ಮಗ!

Amitabh Bachchan
ಸಿನಿಮಾ2 hours ago

Amitabh Bachchan: ʼಕೌನ್‌ ಬನೇಗಾ ಕರೋಡ್‌ಪತಿʼ ಸ್ಪರ್ಧಿಗಳ ಎದುರು ನಾನು ಅಸಹಾಯಕ; ಅಮಿತಾಭ್‌ ಹೀಗೆ ಹೇಳಿದ್ದೇಕೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ8 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌