Bangladesh Protests: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ಮೃತರ ಸಂಖ್ಯೆ 98ಕ್ಕೆ ಏರಿಕೆ: ಭಾರತೀಯರಿಗೆ ಮುನ್ನೆಚ್ಚರಿಕೆ - Vistara News

ವಿದೇಶ

Bangladesh Protests: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ಮೃತರ ಸಂಖ್ಯೆ 98ಕ್ಕೆ ಏರಿಕೆ: ಭಾರತೀಯರಿಗೆ ಮುನ್ನೆಚ್ಚರಿಕೆ

Bangladesh Protests: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಲವು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ನೂರಾರು ಜನ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಹಿಂಸಾಚಾರ ಭುಗಿಲೆದ್ದಿದೆ. ಪ್ರಧಾನಿ ಶೇಖ್‌ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾರೂಪ ತಾಳಿದ್ದು, ಮೃತರ ಸಂಖ್ಯೆ 98ಕ್ಕೆ ತಲುಪಿದೆ.

VISTARANEWS.COM


on

Bangladesh Protests
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ (Bangladesh Protests) ಹಲವು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ನೂರಾರು ಜನ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಹಿಂಸಾಚಾರ ಭುಗಿಲೆದ್ದಿದೆ. ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾರೂಪ ತಾಳಿದ್ದು, ಮೃತರ ಸಂಖ್ಯೆ 98ಕ್ಕೆ ತಲುಪಿದೆ. ಈ ಪೈಕಿ 14 ಮಂದಿ ಪೊಲೀಸರು ಅಸುನೀಗಿದ್ದು, ಬಾಂಗ್ಲಾದೇಶಕ್ಕೆ ತೆರಳದಂತೆ ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಭಾನುವಾರ (ಆಗಸ್ಟ್‌ 4) ನಡೆದ ಭೀಕರ ಘರ್ಷಣೆಗಳಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಜುಲೈಯಲ್ಲಿ ಪ್ರತಿಭಟನೆಗಳು ಪ್ರಾರಂಭವಾದಾಗಿನಿಂದ ಮೃತರ ಸಂಖ್ಯೆ ಒಟ್ಟು 300ಕ್ಕೆ ಏರಿದೆ. ಬಾಂಗ್ಲಾದಲ್ಲಿ ಕೆಲ ದಿನಗಳ ಹಿಂದೆ ತೀವ್ರ ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಪ್ರತಿಪಕ್ಷಗಳ ಮುಖಂಡರು, ಸಾರ್ವಜನಿಕರು ಸೇರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಇಲ್ಲವೇ ಶೇಖ್‌ ಹಸೀನಾ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಭಾನುವಾರ ಸಾವಿರಾರು ಪ್ರತಿಭಟನಾಕಾರರು ದೇಶದ ಹಲವಾರು ಭಾಗಗಳಲ್ಲಿ ಜಮಾಯಿಸಿ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಪ್ರತಿಭಟನಾಕಾರರು ಈಶಾನ್ಯ ಪಟ್ಟಣ ಎನಾಯೆತ್ಪುರದ ಠಾಣೆಗೂ ಮುತ್ತಿಗೆ ಹಾಕಿದರು. ದೇಶಾದ್ಯಂತ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸೋಮವಾರ, ಮಂಗಳವಾರ ಮತ್ತು ಬುಧವಾರ ಮೂರು ದಿನಗಳ ಸಾರ್ವತ್ರಿಕ ರಜಾದಿನವನ್ನು ಘೋಷಿಸಲಾಗಿದೆ.

ಎಚ್ಚರಿಕೆ ನೀಡಿದ ಭಾರತ

ಈ ಮಧ್ಯೆ ಭಾರತ ಬಾಂಗ್ಲಾದೇಶದಲ್ಲಿರುವ ತನ್ನ ಎಲ್ಲ ಪ್ರಜೆಗಳಿಗೆ ತೀವ್ರ ಎಚ್ಚರಿಕೆ ವಹಿಸಲು ಸೂಚನೆ ನೀಡಿದೆ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ತಿಳಿಸಿದೆ. ʼʼಸಿಲ್ಹೆಟ್‌ನ ಸಹಾಯಕ ಹೈಕಮಿಷನ್ ವ್ಯಾಪ್ತಿಯಲ್ಲಿ ವಾಸಿಸುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಭಾರತೀಯ ಪ್ರಜೆಗಳು ಈ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಕೋರಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಹಾಯವಾಣಿ ಸಂಖ್ಯೆ +88-01313076402 ಅನ್ನು ಸಂಪರ್ಕಿಸಿ” ಎಂದು ಸಹಾಯಕ ಹೈಕಮಿಷನ್ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಈ ಹಿಂಸಾಚಾರಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಇದು ಆದಷ್ಟು ಶೀಘ್ರ ಕೊನೆಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಪ್ರತಿಭಟನೆಗಳು ಬಾಂಗ್ಲಾದೇಶದಾದ್ಯಂತ ಸರ್ಕಾರಿ ವಿರೋಧಿ ಆಂದೋಲನವಾಗಿ ಬೆಳೆದಿವೆ. ಇದು ಚಲನಚಿತ್ರ ತಾರೆಯರು, ಸಂಗೀತಗಾರರು ಮತ್ತು ಗಾಯಕರು ಸೇರಿದಂತೆ ದೇಶದ ಎಲ್ಲ ವರ್ಗಗಳ ಜನರನ್ನು ಆಕರ್ಷಿಸಿದೆ. ಜನರ ಬೆಂಬಲಕ್ಕೆ ಕರೆ ನೀಡುವ ಹಾಡುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿವೆ. ಹೆಚ್ಚುತ್ತಿರುವ ಹಿಂಸಾಚಾರವನ್ನು ಹತ್ತಿಕ್ಕುವ ಉದ್ದೇಶದಿಂದ ಮಾತುಕತೆಗೆ ಹಸೀನಾ ಅವರ ಆಹ್ವಾನವನ್ನು ಪ್ರತಿಭಟನಾಕಾರರು ತಿರಸ್ಕರಿಸಿದ್ದಾರೆ.

ಇದನ್ನೂ ಓದಿ: Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Rahul Gandhi: ರಾಹುಲ್ ಗಾಂಧಿ ಅಲ್ಲ, ರಾಹುಲ್ ಖಾನ್! ಪಾಕಿಸ್ತಾನದ ಟಿವಿಯಲ್ಲಿ ಬಿಸಿಬಿಸಿ ಚರ್ಚೆ!

Rahul Gandhi: ಪಾಕಿಸ್ತಾನದ ಚಾನಲ್‌ ಒಂದರಲ್ಲಿ ಮಾತನಾಡುತ್ತ ಅತಿಥಿಯೊಬ್ಬರು ರಾಹುಲ್‌ ಗಾಂಧಿ ಅವರ ಜಾತಿಯನ್ನು ಪ್ರಶ್ನಿಸಿದ್ದಾರೆ. ʼʼರಾಹುಲ್ ಹೇಗೆ ಗಾಂಧಿಯಾದರು? ರಾಹುಲ್ ಅವರು ನೆಹರೂ ಕುಟುಂಬದ ಕುಡಿ. ಇದು ನೆಹರೂ ವಂಶ. ಇವರೊಂದಿಗೆ ಗಾಂಧಿಯ ಹೆಸರು ಹೇಗೆ ಥಳುಕು ಹಾಕಿಕೊಂಡಿದೆ?ʼʼ ಎಂದು ಅವರು ಕೇಳಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗುತ್ತಿದೆ

VISTARANEWS.COM


on

Rahul Gandhi
Koo

ನವದೆಹಲಿ: ಸಂಸತ್‌ನಲ್ಲಿ ಬಜೆಟ್‌ ಅಧಿವೇಶನ ನಡೆಯುತ್ತಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆ ಕಂಡು ಬರುತ್ತಿದೆ. ಜುಲೈ 29 ಸಂಸತ್‌ನಲ್ಲಿ ಜಾತಿಗಣತಿ (Caste Census) ಕುರಿತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಪ್ರಸ್ತಾಪಿಸಿದ್ದು, ಲೋಕಸಭೆಯಲ್ಲಿ ನಾವು ಜಾತಿಗಣತಿ ಮಂಡಿಸುತ್ತೇವೆ ಎಂದಿದ್ದರು. ಇದಕ್ಕೆ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ (Anurag Thakur) ತಿರುಗೇಟು ನೀಡಿ, “ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಹೇಳಿದ್ದರು. ಸದ್ಯ ಈ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಅಚ್ಚರಿ ಎಂದರೆ ಈ ವಿಚಾರ ದೇಶದ ಗಡಿ ದಾಟಿ ಪಾಕಿಸ್ತಾನದಲ್ಲಿಯೂ ಚರ್ಚೆಯಾಗುತ್ತಿದೆ. ಪಾಕಿಸ್ತಾನದ ಚಾನಲ್‌ ಒಂದರಲ್ಲಿ ಮಾತನಾಡುತ್ತ ಅತಿಥಿಯೊಬ್ಬರು ರಾಹುಲ್‌ ಗಾಂಧಿ ಅವರ ಜಾತಿಯನ್ನು ಪ್ರಶ್ನಿಸಿದ್ದಾರೆ. ಸದ್ಯ ಈ ವಿಡಿಯೊ ವೈರಲ್‌ ಆಗುತ್ತಿದೆ (Viral Video).

ಸುಮಾರು 2.18 ನಿಮಿಷದ ವಿಡಿಯೊ ಇದಾಗಿದ್ದು, ಸಂವಾದದಲ್ಲಿ ಪಾಲ್ಗೊಂಡ ಅತಿಥಿ ರಾಹುಲ್‌ ಅವರು ಗಾಂಧಿ ಹೇಗಾದರು ಎಂದು ಪ್ರಶ್ನಿಸಿದ್ದಾರೆ. ʼʼರಾಹುಲ್ ಹೇಗೆ ಗಾಂಧಿಯಾದರು? ರಾಹುಲ್ ಅವರು ನೆಹರೂ ಕುಟುಂಬದ ಕುಡಿ. ಇದು ನೆಹರೂ ವಂಶ. ಇವರೊಂದಿಗೆ ಗಾಂಧಿಯ ಹೆಸರು ಹೇಗೆ ಥಳುಕು ಹಾಕಿಕೊಂಡಿದೆ?ʼʼ ಎಂದು ಅವರು ಕೇಳಿದ್ದಾರೆ.

ವಾದ ಹೀಗಿದೆ

ʼʼನೆಹರೂ ಅವರ ಮಗಳು ಇಂದಿರಾ ಫಿರೋಜ್ ಖಾನ್ ಅವರನ್ನು ವಿವಾಹವಾದರು. ಫಿರೋಜ್ ಖಾನ್ ನವಾಬ್ ಖಾನ್ ಅವರ ಮಗ. ಫಿರೋಜ್ ಖಾನ್ ಅವರ ಮಗ ರಾಜೀವ್ ಕ್ರಿಶ್ಚಿಯನ್ ಮಹಿಳೆ ಸೋನಿಯಾ ಅವರನ್ನು ವಿವಾಹವಾಗಿದ್ದಾರೆ. ನಂತರ ಸೋನಿಯಾ ಮತ್ತು ರಾಜೀವ್ ಅವರ ಮಗಳು ಪ್ರಿಯಾಂಕಾ ಕ್ರಿಶ್ಚಿಯನ್ ರಾಬರ್ಟ್ ವಾದ್ರಾ ಅವರನ್ನು ವಿವಾಹವಾದರು. ಅವರ ಮನೆಯಲ್ಲಿ ಮುಸ್ಲಿಂ-ಕ್ರಿಶ್ಚಿಯನ್-ಪಾರ್ಸಿ ಇದ್ದಾರೆʼʼ ಎಂದಿದ್ದಾರೆ. ಸದ್ಯ ಈ ವಿಡಿಯೊ ಅನೇಕರ ಗಮನ ಸೆಳೆದಿದ್ದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.

ಈಗಾಗಲೇ ಈ ವಿಡಿಯೊವನ್ನು 2 ಲಕ್ಷಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ʼʼರಾಹುಲ್‌ ಗಾಂಧಿ ಅಲ್ಲ, ರಾಹುಲ್‌ ಖಾನ್‌ ಎನ್ನುವುದು ನಿಮ್ಮ ವಾದ ತಾನೇ?ʼʼ ಎಂದು ಒಬ್ಬರು ಪ್ರಶ್ನಿಸಿದ್ದಾರೆ. ʼʼನೀವು ಗಾಂಧಿ ಕುಟುಂಬದ ಕಣ್ಣನ್ನು ತೆರೆಸಿದ್ದೀರಿʼʼ ಎಂದು ಇನ್ನೊಬ್ಬರು ತಮಾಷೆ ಮಾಡಿದ್ದಾರೆ. ʼʼಗಾಂಧಿ ಕುಟುಂಬದ ಸತ್ಯ ಹೊರ ಬಿತ್ತುʼʼ ಎಂದು ಮತ್ತೊಬ್ಬರು ಹೇಳಿದ್ದಾರೆ. ʼʼಪ್ರತಿಯೊಬ್ಬರಿಗೂ ರಾಹುಲ್‌ ಗಾಂಧಿ ಅವರ ಕುಟುಂಬದ ಬಗ್ಗೆ ಗೊತ್ತು. ಇದೀಗ ಪಾಕಿಸ್ತಾನದ ಮಾಧ್ಯಮಗಳೂ ಈ ಬಗ್ಗೆ ಚರ್ಚೆ ನಡೆಸುತ್ತಿವೆʼʼ ಎಂದು ನೆಟ್ಟಿಗರೊಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʼʼಜಾತಿ ಗಣತಿ ಯಾವಾಗ ಆರಂಭಿಸುತ್ತೀರಿ?ʼʼ ಎಂದು ನೇರವಾಗಿ ರಾಹುಲ್‌ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Viral Video: ಸೆಲ್ಫಿ ತೆಗೆಯಲು ಹೋಗಿ 100 ಅಡಿ ಆಳದ ಕಮರಿಗೆ ಬಿದ್ದ ಮಹಿಳೆ!

ಅನುರಾಗ್‌ ಠಾಕೂರ್‌ ಹೇಳಿದ್ದೇನು?

ಸಂಸತ್‌ನಲ್ಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂದು ಟೀಕಿಸಿದ್ದರು. ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿ, “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದು ಸವಾಲು ಹಾಕಿದ್ದರು.

Continue Reading

ವೈರಲ್ ನ್ಯೂಸ್

Viral Video: ಇಸ್ರೇಲಿ ಅಪಹೃತನ ಮೃತ ದೇಹವನ್ನು ನಡುಬೀದಿಯಲ್ಲಿ ಒದ್ದ ಪ್ಯಾಲೆಸ್ತೀನ್‌ ಜನ!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ (Viral Video), ಹಮಾಸ್ ಅಪಹರಿಸಿ ಒತ್ತೆಯಾಳಾಗಿ ಇರಿಸಿಕೊಂಡಿದ್ದ ವ್ಯಕ್ತಿಯ ಮೃತ ದೇಹವನ್ನು ಲಗೇಜ್‌ನಂತೆ ವಾಹನದ ಹಿಂಭಾಗದಲ್ಲಿ ಹಾಕಿ ಗಾಜಾಕ್ಕೆ ಎಳೆದುಕೊಂಡು ಹೋಗುವುದು ಕಾಣಿಸುತ್ತದೆ. ಗಾಜಾದಲ್ಲಿ ನಾಗರಿಕರ ಗುಂಪು ಕಾರನ್ನು ಹಿಂಬಾಲಿಸಿ, ಆ ದೇಹವನ್ನು ರಸ್ತೆಗೆ ಎಳೆದು ಒದೆಯುತ್ತಿರುವ ದೃಶ್ಯ ಆಘಾತ ಮೂಡಿಸುತ್ತದೆ.

VISTARANEWS.COM


on

By

Viral Video
Koo

ಹತ್ಯೆಗೀಡಾದ ಹಮಾಸ್ ಒತ್ತೆಯಾಳುವಿನ (Hamas hostage) ದೇಹವನ್ನು ನಡು ರಸ್ತೆಯಲ್ಲಿ ಗಾಜಾ ನಾಗರಿಕರು (Gaza civilians) ಒದೆಯುವ, ನಿಂದಿಸುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಹತ್ಯೆಗೀಡಾದ ಹಮಾಸ್ ಒತ್ತೆಯಾಳು ಐಟಾನ್ ಲೆವಿಯ ಕುಟುಂಬವು ಇದನ್ನು ಹಂಚಿಕೊಂಡು ತೀವ್ರ ದುಃಖ ವ್ಯಕ್ತಪಡಿಸಿದೆ.

ಈ ವಿಡಿಯೋ ತುಣುಕನ್ನು ಯೋಸೆಫ್ ಹಡ್ಡಾಡ್ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಅಕ್ಟೋಬರ್ 7ರಂದು ಈಟಾನ್ ಲೆವಿಯ ಅಪಹರಣದ ಆಘಾತಕಾರಿ ವಿಡಿಯೋ ಇದಾಗಿದೆ. ಅವರನ್ನು ಗಾಜಾಕ್ಕೆ ಅಪಹರಿಸಿ ಅಲ್ಲಿ ಮಸೀದಿಯ ಪ್ಲಾಜಾದಲ್ಲಿ ಕ್ರೂರವಾಗಿ ಹತ್ಯೆ ಮಾಡಲಾಗಿದೆ.

ಇವರು ಗಾಜಾದ ಮುಗ್ಧ ನಾಗರಿಕರು. 43 ವಾರಗಳು ಕಳೆದಿವೆ. ಆದರೆ ಇವರನ್ನು ನಾವು ಮರೆಯುವುದಿಲ್ಲ. ಎಲ್ಲಾ ಒತ್ತೆಯಾಳುಗಳನ್ನು ಹಿಂತಿರುಗಿಸಬೇಕು. ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನೂ ನಾಶಪಡಿಸಬೇಕು ಎಂದು ಹಡ್ಡಾಡ್ ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ವಿಡಿಯೋದಲ್ಲಿ ಲೆವಿಯ ದೇಹವನ್ನು ವಾಹನದ ಹಿಂಭಾಗದಲ್ಲಿ ಲಗೇಜ್‌ನಂತೆ ಅಮಾನುಷವಾಗಿ ಹಾಕಿ ಗಾಜಾಕ್ಕೆ ಎಳೆದುಕೊಂಡು ಹೋಗುವುದು ಕಾಣಿಸುತ್ತದೆ. ಗಾಜಾದಲ್ಲಿ ನಾಗರಿಕರ ಗುಂಪು ಕಾರನ್ನು ಹಿಂಬಾಲಿಸುವುದು ಕಂಡುಬರುತ್ತದೆ. ಲೆವಿಯ ನಿರ್ಜೀವ ದೇಹವನ್ನು ಜನ ಮುಗಿಬಿದ್ದು ತುಳಿಯುವುದನ್ನು ದೃಶ್ಯಗಳಲ್ಲಿ ಕಾಣಬಹುದು.

52 ವರ್ಷದ ಲೆವಿ ಅವರು ಬ್ಯಾಟ್ ಯಾಮ್‌ನ ಟ್ಯಾಕ್ಸಿ ಡ್ರೈವರ್ ಆಗಿದ್ದರು. ಕಳೆದ ವರ್ಷ ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಪ್ರಯಾಣಿಕರನ್ನು ಬಿಡಲು ಕಿಬ್ಬುಟ್ಜ್ ಬೀರಿಯಲ್ಲಿದ್ದರು. ಅವರಿಗೆ ನಿಖರವಾಗಿ ಏನಾಯಿತು ಎಂಬುದು ಅಸ್ಪಷ್ಟವಾಗಿದೆ. ಆದರೆ ಹಮಾಸ್ ಭಯೋತ್ಪಾದಕರು ಅವರನ್ನು ಹೊರಹೋಗದಂತೆ ತಡೆದಿದ್ದಾರೆ. ಅವರ ಕ್ಯಾಬ್‌ ಡ್ರೋನ್ ಅಥವಾ ಕ್ಷಿಪಣಿ ದಾಳಿಗೆ ತುತ್ತಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.


ಲೆವಿ ವಿಡಿಯೋ ನೋಡಿ ಅನೇಕರು ಆಘಾತ ವ್ಯಕ್ತಪಡಿಸಿದ್ದಾರೆ. ಮೃತ ದೇಹವನ್ನು ಒದೆಯುವುದು ಮನುಷ್ಯ ಮಾಡಬಹುದಾದ ಅತ್ಯಂತ ಹೇಡಿತನದ ಕೆಲಸ. ಇದು ತುಂಬಾ ಕೆಟ್ಟದು ಎಂದು ಇನ್ನೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

ಮತ್ತೊಬ್ಬರು ಭಯೋತ್ಪಾದನೆಯ ವಿರುದ್ಧದ ಅತ್ಯಂತ ನ್ಯಾಯಯುತವಾದ ಯುದ್ಧದಲ್ಲಿ ಇಸ್ರೇಲ್ ನೊಂದಿಗೆ ನಿಂತುಕೊಳ್ಳಿ ಎಂದು ಕರೆ ನೀಡಿದ್ದಾರೆ. ಈ ದುಷ್ಕರ್ಮಿಗಳು ತಮ್ಮ ಅಪರಾಧಗಳನ್ನು ಮಾಡುವಾಗ ಪ್ರದರ್ಶಿಸುವ ಉಲ್ಲಾಸ ನನಗೆ ಇನ್ನೂ ಅರ್ಥವಾಗುತ್ತಿಲ್ಲ. ಇದು ಯಾವುದೇ ರೀತಿಯ ಸಾಮಾನ್ಯ ಮಾನವೀಯತೆಯಲ್ಲ. ಕ್ರೂರತೆಯಿಂದ ಕೂಡಿದೆ ಎಂದು ಮತ್ತೊಬ್ಬ ಬಳಕೆದಾರರು ತಿಳಿಸಿದ್ದಾರೆ. ಭಯಾನಕ ಮತ್ತು ಕ್ಷಮಿಸಲಾಗದು ಎಂದು ಮತ್ತೊಬ್ಬರು ಹೇಳಿದ್ದು, ಗಾಜಾದ ಈ ʼಮುಗ್ಧ ನಾಗರಿಕರುʼ ಎಷ್ಟು ಕ್ರೂರರು, ಎಂತಹ ಅನಾಗರಿಕ ಸಂಸ್ಕೃತಿ ಹೊಂದಿರುವವರು ಎಂದು ಇನ್ನೊಬ್ಬರು ವ್ಯಂಗ್ಯವಾಗಿ ಹೇಳಿದ್ದಾರೆ.

Continue Reading

ವಿದೇಶ

Bangladesh: ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ; 91 ಜನ ಸಾವು

Bangladesh: ಕಳೆದ ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶೇಖ್‌ ಹಸೀನಾ ಅವರು ಸತತ ನಾಲ್ಕನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಆದರೆ, ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ಹಿಂಸಾರೂಪ ತಾಳಿದ ಕಾರಣ ಕರ್ಫ್ಯೂ ಜಾರಿಗೊಳಿಸಿ, ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದೆ.

VISTARANEWS.COM


on

Bangladesh
ಚಿತ್ರ ಕೃಪೆ: ಅಲ್‌ಜಜೀರಾ.
Koo

ಢಾಕಾ: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ (Bangladesh) ಹಲವು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ನೂರಾರು ಜನ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಹಿಂಸಾಚಾರ ಭುಗಿಲೆದ್ದಿದೆ. ದೇಶದ ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಭಾನುವಾರ (ಆಗಸ್ಟ್‌ 4) ನಡೆಸಿದ ಪ್ರತಿಭಟನೆಯು ಹಿಂಸಾರೂಪ ತಾಳಿದ್ದು, 91 ಜನ ಮೃತಪಟ್ಟಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಯ ವೇಳೆ ನೂರಾರು ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶದ ರಾಜಧಾನಿ ಢಾಕಾ ಸೇರಿ 13 ಜಿಲ್ಲೆಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಲಾಗುತ್ತಿದೆ. ಗುಂಪುಗಳನ್ನು ಚದುರಿಸಲು ಪೊಲೀಸರು ಅಶ್ರುವಾಯು, ಲಾಠಿ ಚಾರ್ಜ್‌ ಮಾಡಿದ್ದಾರೆ. ಇಷ್ಟಾದರೂ ಪ್ರತಿಭಟನೆಯು ಹಿಂಸಾರೂಪ ತಾಳಿದೆ. ಸರ್ಕಾರಿ ಕಚೇರಿಗಳ ಮೇಲೆ ದಾಳಿ, ಸರ್ಕಾರಿ ಆಸ್ತಿ-ಪಾಸ್ತಿ ಧ್ವಂಸ, ಪೊಲೀಸರು ಹಾಗೂ ಯೋಧರ ಮೇಲೆಯೇ ಕಲ್ಲುತೂರಾಟ ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆದಿದೆ. ಇನ್ನು, ಪೊಲೀಸರ ಗುಂಡಿಗೆ ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ.

ಮತ್ತೆ ಪ್ರತಿಭಟನೆ ಏಕೆ?

ಬಾಂಗ್ಲಾದಲ್ಲಿ ಕೆಲ ದಿನಗಳ ಹಿಂದೆ ತೀವ್ರ ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಪ್ರತಿಪಕ್ಷಗಳ ಮುಖಂಡರು, ಸಾರ್ವಜನಿಕರು ಸೇರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಇಲ್ಲವೇ ಶೇಖ್‌ ಹಸೀನಾ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಕಳೆದ ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶೇಖ್‌ ಹಸೀನಾ ಅವರು ಸತತ ನಾಲ್ಕನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಆದರೆ, ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಸಹಾಯವಾಣಿ ತೆರೆದ ಭಾರತ

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿರುವ ಕಾರಣ ಬಾಂಗ್ಲಾದಲ್ಲಿರುವ ರಾಯಭಾರ ಕಚೇರಿಯು ಹೊಸ ಸಹಾಯವಾಣಿ ತೆರೆದಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯರು, ವಿದ್ಯಾರ್ಥಿಗಳು ಅಲರ್ಟ್‌ ಆಗಿ ಇರಬೇಕು. ಯಾವುದೇ ಸಮಸ್ಯೆಯಾದರೆ +88-01313076402 ಸಂಖ್ಯೆಗೆ ಕರೆ ಮಾಡಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ: Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

Continue Reading

ದೇಶ

Moon: ಭೂಮಿಯಿಂದ ದೂರ ಹೊರಟ ಚಂದ್ರ, ಮುಂದೆ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

Moon: ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ.

VISTARANEWS.COM


on

Moon
Koo

ನವದೆಹಲಿ: ಚಂದಿರನಿಗೂ ಮಾನವನಿಗೂ ಎಲ್ಲಿಲ್ಲದ ನಂಟು. ಚಂದಿರನನ್ನು ತೋರಿಸಿ ಅಮ್ಮ ಕೈತುತ್ತು ತಿನಿಸಿದ, ಚಂದ್ರನ ಬೆಳಕಿನಲ್ಲಿ ರಾತ್ರಿ ರೈತ ಜಮೀನಿನಲ್ಲಿ ಕೆಲಸ ಮಾಡಿದ, ಚಂದಿರನ ಬೆಳದಿಂಗಳಲ್ಲಿ ಊರೆಲ್ಲ ಸುತ್ತಾಡಿದ ನೆನಪುಗಳು ಕಾಡುತ್ತವೆ. ಇನ್ನು ದೇಶದ ಕವಿಗಳೂ ಅಷ್ಟೇ, ಚಂದಿರನ ಬಗ್ಗೆ ಬಗೆಬಗೆಯ ಕವಿತೆಗಳನ್ನು ಬರೆಯುವ ಮೂಲಕ ನಮಗೆ ಚಂದಿರ ಏಕೆ ಮುಖ್ಯ ಎಂಬುದನ್ನು ಸಾರಿದ್ದಾರೆ. ಚಂದಮಾಮ ಎಂದೂ ಕೂಡ ವರ್ಣಿಸಿದ್ದಾರೆ. ಇಂತಹ ಚಂದಮಾಮ ಈಗ ಭೂಮಿಯಿಂದ ದೂರವಾಗುತ್ತಿದ್ದಾನೆ. ಅಷ್ಟೇ ಅಲ್ಲ, ಮುಂದೆ ನಮಗೆ ದಿನದಲ್ಲಿ 24 ಗಂಟೆ ಬದಲು 25 ಗಂಟೆ ಇರಲಿವೆ ಎಂದು ಅಧ್ಯಯನವೊಂದು ಭೀಕರ ಮಾಹಿತಿಯನ್ನು ಬಿಚ್ಚಿಟ್ಟಿದೆ.

ಹೌದು, ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ. ಈ ಅಧ್ಯಯನ ವರದಿ ಈಗ ಜಗತ್ತಿನಾದ್ಯಂತ ಸುದ್ದಿಯಾಗಿದೆ.

ದಿನಕ್ಕೆ 25 ಗಂಟೆ ಹೇಗೆ?

ಪ್ರತಿ ವರ್ಷ ಚಂದ್ರನು ಭೂಮಿಯಿಂದ 3.8 ಸೆಂಟಿಮೀಟರ್‌ ದೂರವಾಗುತ್ತಿದ್ದಾನೆ. ಇದರಿಂದಾಗಿ ಭೂಮಿಯ ಒಂದು ದಿನದ ಅವಧಿಯು ಹೆಚ್ಚಾಗುತ್ತದೆ. ಅಂದರೆ, ಈಗ ದಿನಕ್ಕೆ 24 ಗಂಟೆ ಇದ್ದರೆ, ಮುಂಬರುವ ವರ್ಷಗಳಲ್ಲಿ ದಿನಕ್ಕೆ 25 ಗಂಟೆ ಇರಲಿವೆ. ಕಾಲಕಾಲಕ್ಕೆ ಭೂಮಿಯ ಮೇಲಿನ ಒಂದು ದಿನದಲ್ಲಿರುವ ಗಂಟೆಗಳ ಸಂಖ್ಯೆ ಹೆಚ್ಚಾಗುತ್ತದೆ. ಇದು ಸಹಜ ಪ್ರಕ್ರಿಯೆಯಾಗಿದೆ ಎಂಬುದಾಗಿ ವಿಜ್ಞಾನಿಗಳು ತಿಳಿಸಿದ್ದಾರೆ.

ಮುಂದಿನ 200 ದಶಲಕ್ಷ ವರ್ಷಗಳ ಬಳಿಕ ದಿನದಲ್ಲಿ 25 ಗಂಟೆ ಇರಲಿವೆ ಎಂದು ವಿಜ್ಞಾನಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಸುಮಾರು 1.4 ಶತಕೋಟಿ ವರ್ಷಗಳ ಹಿಂದೆ, ಭೂಮಿಯ ಅವಧಿಯು ದಿನಕ್ಕೆ ಕೇವಲ 18 ಗಂಟೆಯಾಗಿತ್ತು. ಕಾಲಕಾಲಕ್ಕೆ ಅದು ಹೆಚ್ಚಾಗುತ್ತ 24 ಗಂಟೆಗೆ ಏರಿಕೆಯಾಗಿದೆ. “ಭೂಮಿಯಿಂದ ಸೂರ್ಯನು ದೂರವಾಗುತ್ತ ಹೋದರೆ, ಭೂಮಿಯ ಮೇಲಿನ ಒಂದು ದಿನದ ಅವಧಿಯು ವಿಸ್ತರಣೆಯಾಗುತ್ತದೆ” ಎಂದು ವಿವಿ ಪ್ರೊಫೆಸರ್‌ ಸ್ಟೀಫನ್‌ ಮೇಯರ್ಸ್‌ ಹೇಳಿದ್ದಾರೆ.

ಇದನ್ನೂ ಓದಿ: DMK leader Controversy: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ: ಡಿಎಂಕೆ ನಾಯಕನ ವಿಡಿಯೋ ಫುಲ್‌ ವೈರಲ್‌

Continue Reading
Advertisement
Stock Market
ವಾಣಿಜ್ಯ13 mins ago

Stock Market: ಷೇರುಪೇಟೆಯಲ್ಲಿ ಮಹಾ ಪತನ; ಸೆನ್ಸೆಕ್ಸ್‌ 2,000 ಅಂಕಗಳಷ್ಟು ಕುಸಿತ

murder case
ಹಾಸನ19 mins ago

Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

ಪ್ರಮುಖ ಸುದ್ದಿ38 mins ago

AAP VS Delhi LG: ಆಪ್‌ಗೆ ಹಿನ್ನಡೆ; ದಿಲ್ಲಿ ನಗರಸಭೆಗೆ ಸದಸ್ಯರನ್ನು ನೇಮಿಸುವ ಎಲ್‌ಜಿ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

Drowned in water
ಚಿಕ್ಕೋಡಿ50 mins ago

Drowned in water : ಆಟವಾಡುತ್ತಾ ಕಾಲುವೆಗೆ ಕಾಲು ಜಾರಿ ಬಿದ್ದು 4 ವರ್ಷದ ಬಾಲಕ ಸಾವು

Gold Rate Today
ಚಿನ್ನದ ದರ1 hour ago

Gold Rate Today: ಸತತ ಎರಡನೆ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Actor Darshan wife Vijayalakshmi darshan temple run
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ ಬಿಡುಗಡೆಗಾಗಿ ವಿಜಯಲಕ್ಷ್ಮಿ ಹಾಗೂ ಅಳಿಯ ಟೆಂಪಲ್ ರನ್‌

Road Accident
ಬೆಂಗಳೂರು1 hour ago

Road Accident: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು; ಬೈಕ್‌ ಅಪಘಾತದಲ್ಲಿ ಸವಾರರಿಬ್ಬರು ಮೃತ್ಯು

Rahul Gandhi
ವೈರಲ್ ನ್ಯೂಸ್1 hour ago

Rahul Gandhi: ರಾಹುಲ್ ಗಾಂಧಿ ಅಲ್ಲ, ರಾಹುಲ್ ಖಾನ್! ಪಾಕಿಸ್ತಾನದ ಟಿವಿಯಲ್ಲಿ ಬಿಸಿಬಿಸಿ ಚರ್ಚೆ!

police inspector death thimmegowda
ಬೆಂಗಳೂರು2 hours ago

Inspector Death: ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ, ಎರಡು ತಿಂಗಳ ಹಿಂದೆ ಟ್ರಾನ್ಸ್‌ಫರ್‌ ಆಗಿದ್ದ ಸಿಸಿಬಿ ಎಸ್‌ಐ

Road Accident
ತುಮಕೂರು2 hours ago

Road Accident : ಬಲ ತಿರುವು ಪಡೆಯುವಾಗ ಬೈಕ್‌ ಸವಾರನ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್‌; ಸಿಸಿ ಕ್ಯಾಮೆರಾದಲ್ಲಿ ಅಪಘಾತ ಸೆರೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ23 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌