Rameshwaram Cafe Blast: ಬಾಂಬ್‌ ಇರಿಸಿದ ಉಗ್ರನನ್ನು ರಾಮೇಶ್ವರಂ ಕೆಫೆಗೆ ಕರೆತಂದು ಸೀನ್‌ ರಿಕ್ರಿಯೇಟ್‌ ಮಾಡಿದ ಎನ್‌ಐಎ - Vistara News

ಕ್ರೈಂ

Rameshwaram Cafe Blast: ಬಾಂಬ್‌ ಇರಿಸಿದ ಉಗ್ರನನ್ನು ರಾಮೇಶ್ವರಂ ಕೆಫೆಗೆ ಕರೆತಂದು ಸೀನ್‌ ರಿಕ್ರಿಯೇಟ್‌ ಮಾಡಿದ ಎನ್‌ಐಎ

Rameshwaram Cafe Blast: ರಾಮೇಶ್ವರಂ ಕೆಫೆಯ ಸುತ್ತಮುತ್ತಲಿನ ಪ್ರದೇಶವನ್ನು ಇಂದು ಸಾರ್ವಜನಿಕರಿಗೆ ಬಂದ್‌ ಮಾಡಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿ ಬ್ಲಾಸ್ಟ್‌ ಸೀನ್ ರೀಕ್ರಿಯೇಟ್ ಮಾಡಿಸಲಾಯಿತು. ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ಕೃತ್ಯದ ದಿನ ಎಲ್ಲಿಂದ, ಹೇಗೆ ನಡೆದುಕೊಂಡು ಬಂದ, ಕೆಫೆಯ ಒಳಗಡೆ ಎಲ್ಲೆಲ್ಲಿ ಸುತ್ತಾಡಿದ್ದ, ಎಲ್ಲಿ ಬ್ಯಾಗ್‌ ಇಟ್ಟಿದ್ದ, ನಂತರ ತೆರಳಿದ್ದು ಹೇಗೆ, ಇದೆಲ್ಲವನ್ನೂ ಉಗ್ರನಿಂದಲೇ ರೀಕ್ರಿಯೆಟ್ ಮಾಡಿಸಿ ವಿಡಿಯೋ ಮಾಡಿಕೊಳ್ಳಲಾಯಿತು.

VISTARANEWS.COM


on

rameshwaram cafe blast scene
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ (Bangalore Bomb Blast) ವೈಟ್‌ಫೀಲ್ಡ್‌ನಲ್ಲಿರುವ (Whitfield) ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ (Rameshwaram Cafe Blast) ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ, ಬಾಂಬ್‌ ಇರಿಸಿದ ಉಗ್ರನನ್ನು (Terrorist) ಕರೆತಂದು ಇಡೀ ಘಟನೆಯನ್ನು ರಿಕ್ರಿಯೇಟ್‌ ಮಾಡಿ ದಾಖಲಿಸಿಕೊಳ್ಳಲಾಗುತ್ತಿದೆ. ಇಂದು ಬೆಳಗ್ಗೆ ಎನ್‌ಐಎ (NIA) ಟೀಮ್‌ ಬಂಧಿತ ಉಗ್ರನನ್ನು ಸ್ಥಳಕ್ಕೆ ಕರೆತಂದು ಹಲವು ಬಾರಿ ಈ ಡ್ರಿಲ್‌ ನಡೆಸಿತು.

ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌ ತನಿಖೆ ಭರದಿಂದ ಸಾಗಿದ್ದು, ಇಂದು ಮುಂಜಾನೆ ರಾಮೇಶ್ವರಂ ಕೆಫೆಗೆ ಎನ್ಐಎ ಅಧಿಕಾರಿಗಳು ಭೇಟಿ ನೀಡಿದರು. ಜೊತೆಗೆ ಬಾಂಬ್‌ ಇರಿಸಿದ ಭಯೋತ್ಪಾದಕ ಮುಜಾವೀರ್ ಹುಸೇನ್ ಶಾಜಿಬ್‌ನನ್ನೂ ಕರೆತರಲಾಗಿದೆ. ಕಳೆದ ಮಾರ್ಚ್ 1ರಂದು ನಡೆದಿದ್ದ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎನ್ಐಎ, ಪ್ರಮುಖ ಶಂಕಿತ ಉಗ್ರರನ್ನು ಈಗಾಗಲೇ ಬಂಧಿಸಿದೆ.

ರಾಮೇಶ್ವರಂ ಕೆಫೆಯ ಸುತ್ತಮುತ್ತಲಿನ ಪ್ರದೇಶವನ್ನು ಇಂದು ಸಾರ್ವಜನಿಕರಿಗೆ ಬಂದ್‌ ಮಾಡಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿ ಬ್ಲಾಸ್ಟ್‌ ಸೀನ್ ರೀಕ್ರಿಯೇಟ್ ಮಾಡಿಸಲಾಯಿತು. ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ಕೃತ್ಯದ ದಿನ ಎಲ್ಲಿಂದ, ಹೇಗೆ ನಡೆದುಕೊಂಡು ಬಂದ, ಕೆಫೆಯ ಒಳಗಡೆ ಎಲ್ಲೆಲ್ಲಿ ಸುತ್ತಾಡಿದ್ದ, ಎಲ್ಲಿ ಬ್ಯಾಗ್‌ ಇಟ್ಟಿದ್ದ, ನಂತರ ತೆರಳಿದ್ದು ಹೇಗೆ, ಇದೆಲ್ಲವನ್ನೂ ಉಗ್ರನಿಂದಲೇ ರೀಕ್ರಿಯೆಟ್ ಮಾಡಿಸಿ ವಿಡಿಯೋ ಮಾಡಿಕೊಳ್ಳಲಾಯಿತು.

ಕೃತ್ಯ ನಡೆಸಿದ ಸಂದರ್ಭದಲ್ಲಿ ಆತ ಧರಿಸಿದ್ದ ಬಟ್ಟೆ ಹಾಗೂ ಕ್ಯಾಪ್ ಅನ್ನು ಆತನಿಗೆ ತೊಡಿಸಲಾಗಿದೆ. ಅವತ್ತಿನ ರೀತಿ ಬ್ಲಾಕ್ ಬ್ಯಾಗ್ ಹೆಗಲಿಗೆ ಹಾಕಿಕೊಂಡು ವಿಡಿಯೋ ಮರುಸೃಷ್ಟಿ ಮಾಡಿಸಲಾಗಿದೆ. ಎಲ್ಲವನ್ನೂ ಎನ್ಐಎ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡರು. ಹಲವು ಬಾರಿ ಈ ದೃಶ್ಯವನ್ನು ಚಿತ್ರೀಕರಿಸಿಕೊಳ್ಳಲಾಯಿತು. ಕೆಫೆಗೆ ಸಮೀಪದ ಬಸ್‌ ನಿಲ್ದಾಣದಲ್ಲಿಯೂ ಈ ಚಿತ್ರಣವನ್ನು ಚಿತ್ರೀಕರಿಸಲಾಗಿದೆ. ಬಸ್ಸಿಗಾಗಿ ಎಷ್ಟು ಹೊತ್ತು, ಎಲ್ಲಿ ಕುಳಿತು ಕಾದಿದ್ದ ಎಂಬುದನ್ನು ವಿಡಿಯೋ ಮಾಡಿಕೊಳ್ಳಲಾಗಿದೆ.

ಮಾರ್ಚ್ 1, 2024ರ ಮಧ್ಯಾಹ್ನ 12:56ಕ್ಕೆ ಬಾಂಬ್ ಸ್ಫೋಟಿಸಲಾಗಿತ್ತು. ಮೂವರು ಹೋಟೆಲ್ ಸಿಬ್ಬಂದಿ ಸೇರಿ ಹತ್ತು ಜನರಿಗೆ ಗಾಯವಾಗಿತ್ತು. ಆರಂಭದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರಿಂದ‌ ತನಿಖೆ ನಡೆದಿದ್ದು, ಮಾರ್ಚ್ 3ರಂದು ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು. ಮಾರ್ಚ್ 5ರಂದು ಎನ್‌ಐಎನಿಂದ ಶಂಕಿತ ಆರೋಪಿಗಳ ಸುಳಿವು ನೀಡಿದರೆ 10 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು.

ಮಾರ್ಚ್ 15ರಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜ್ ಮುನೀರ್ ಆಹಮ್ಮದ್‌ನನ್ನು, ಮಾರ್ಚ್ 28ರಂದು ಚಿಕ್ಕಮಗಳೂರಿನಲ್ಲಿ ಮುಜಾಮಿಲ್ ಷರೀಪ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಮಾರ್ಚ್ 29ರಂದು ಪ್ರಮುಖ ಆರೋಪಿಗಳಾದ ಮುಸಾವೀರ್ ಹಾಗೂ ಅಬ್ದುಲ್ ಮತೀನ್ ತಾಹ ಇಬ್ಬರ ಫೋಟೋ ಬಿಡುಗಡೆ ಮಾಡಲಾಗಿತ್ತು. ಏಪ್ರಿಲ್ 12ರಂದು ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮತೀನ್ ತಾಹರನ್ನು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಬಂಧಿಸಿತ್ತು.

ಮೇ 21ರಂದು ಈ ಪ್ರಕರಣದ ಸಂಬಂಧಿಸಿ ದೇಶದ 11 ಕಡೆ ಎನ್ಐಎ ದಾಳಿ ನಡೆಸಿತ್ತು. ಮೇ 24ರಂದು ಪ್ರಕರಣದಲ್ಲಿ ಐದನೆ ಆರೋಪಿಯಾಗಿ ಶೋಯೆಬ್ ಅಹಮ್ಮದ್ ಮಿರ್ಜಾ ಎಂಬವನನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯಪುರ

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದ ಕಾಮುಕನಿಗೆ ಚಪ್ಪಲಿ ಏಟು ಕೊಟ್ಟಿದ್ದಾಳೆ. ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

VISTARANEWS.COM


on

By

Physical Abuse
Koo

ವಿಜಯಪುರ: ಕಣ್ಣು ಹೊಡೆದು ಚುಡಾಯಿಸಿದ ಯುವಕನಿಗೆ (Physical Abuse) ಮಹಿಳೆಯೊಬ್ಬರು ಚಪ್ಪಲಿ ಏಟು ನೀಡಿದ್ದಾರೆ. ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಬಸ್‌ಗಾಗಿ ಕಾದು ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಸನ್ನೆ ಮಾಡಿದ್ದಾನೆ. ಮೊದಮೊದಲು ಮಹಿಳೆ ಇದನ್ನೂ ನಿರ್ಲಕ್ಷ್ಯ ಮಾಡಿದ್ದಾರೆ. ಆದರೆ ಯಾವಾಗ ಅಸಭ್ಯವಾಗಿ ವರ್ತನೆ ಮಾಡಲು ಶುರು ಮಾಡಿದ್ದನ್ನೋ ಸಿಟ್ಟಿಗೆದ್ದ ಮಹಿಳೆ ಕೈಯಲ್ಲಿ ಚಪ್ಪಲಿ ಹಿಡಿದು, ಯುವಕನಿಗೆ ಹೊಡೆದಿದ್ದಾರೆ.

ಬಸ್ ನಿಲ್ದಾಣದಲ್ಲಿದ್ದ ಸಹ ಪ್ರಯಾಣಿಕರು ಇದಕ್ಕೆ ಸಾಥ್‌ ನೀಡಿದ್ದಾರೆ. ಇತ್ತ ಚಪ್ಪಲಿ ಏಟು ತಿಂದ ಕಾಮುಕ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮಹಿಳೆ ಹಾಗೂ ಯುವಕನ ಹೆಸರು ತಿಳಿದುಬಂದಿಲ್ಲ. ಸದ್ಯ ಈ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

ವಾಕಿಂಗ್‌ ಮಾಡುತ್ತಿದ್ದ ಮಹಿಳೆಯನ್ನು ತಪ್ಪಿಕೊಂಡು ಮುತ್ತು ಕೊಟ್ಟ ಕಾಮುಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಹತ್ತಿರ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Sex Racket: ಹೋಟೆಲ್‍ನಲ್ಲಿ ಸೆಕ್ಸ್ ದಂಧೆ ಪತ್ತೆ; ನಗ್ನ ಸ್ಥಿತಿಯಲ್ಲಿದ್ದ 10 ಜೋಡಿಗಳು ಪೊಲೀಸ್‌ ಬಲೆಗೆ!

Sex Racket ವಾರಣಾಸಿ ಪೊಲೀಸ್ ತಂಡ ಹೋಟೆಲ್‌ನಲ್ಲಿ ಸೆಕ್ಸ್ ದಂಧೆಯನ್ನು ಪತ್ತೆಹಚ್ಚಿದ್ದು, ಅಲ್ಲಿದ್ದ 20 ಮಂದಿ ಹುಡುಗ-ಹುಡುಗಿಯರನ್ನು ಬಂಧಿಸಿದ್ದಾರೆ. ಮಾಹಿತಿದಾರರೊಬ್ಬರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಹೋಟೆಲ್‌ ಮೇಲೆ ದಾಳಿ ನಡೆಸಿ ಈ ದಂಧೆ ಪತ್ತೆ ಹಚ್ಚಿದರು. ಆಗ ಅಲ್ಲಿ ದಂಧೆಯಲ್ಲಿ ತೊಡಗಿದ್ದ 10 ಮಂದಿ ಹುಡುಗರು ಹಾಗೂ 10 ಮಂದಿ ಹುಡುಗಿಯರು ನಗ್ನ ಸ್ಥಿತಿಯಲ್ಲಿ ಕಂಡು ಬಂದರು. ತಕ್ಷಣ ಪೊಲೀಸರು ಅವರನ್ನು ಬಂಧಿಸಿ ಠಾಣೆಗೆ ಎಳೆದೊಯ್ದಿದ್ದಾರೆ.

VISTARANEWS.COM


on

Sex Racket
Koo


ವಾರಣಾಸಿ: ಅಲ್ಲಲ್ಲಿ ಸೆಕ್ಸ್ ದಂಧೆ ಪ್ರಕರಣಗಳು ನಡೆಯುತ್ತಿದ್ದು, ಹೋಟೆಲ್, ರೆಸ್ಟೋರೆಂಟ್‍ಗಳಲ್ಲಿ ಈ ದಂಧೆ ನಡೆಸುತ್ತಿದ್ದ ಹಲವರು ಸಿಕ್ಕಿಬಿದ್ದಿದ್ದಾರೆ. ಸುಲಭವಾಗಿ ಹಣ ಸಂಪಾದಿಸಲು ಹಲವರು ಈ ದಂಧೆಯಲ್ಲಿ ತೊಡಗುತ್ತಾರೆ. ಇದೀಗ ಅಂತಹದೊಂದು ಪ್ರಕರಣ ವಾರಣಾಸಿಯ ಹೋಟೆಲ್‍ವೊಂದರಲ್ಲಿ ಪತ್ತೆಯಾಗಿದೆ. ವಾರಣಾಸಿ ಪೊಲೀಸ್ ಕಮಿಷನರೇಟ್ ಆಗಸ್ಟ್ 4ರಂದು ರಂಜಿತ್ ಹೋಟೆಲ್‍ನಲ್ಲಿ ಸೆಕ್ಸ್ ದಂಧೆ(sex racket) ಯನ್ನು ಪತ್ತೆಹಚ್ಚಿದ್ದು, ಅಲ್ಲಿದ್ದ 20 ಮಂದಿ ಹುಡುಗ ಹುಡುಗಿಯರನ್ನು ಬಂಧಿಸಿದ್ದಾರೆ.

ಮಾಹಿತಿದಾರರೊಬ್ಬರು ನೀಡಿದ ಸುಳಿವಿನ ಮೇರೆಗೆ ಪೊಲೀಸರು ಹೋಟೆಲ್‍ನ ಮೇಲೆ ದಾಳಿ ನಡೆಸಿದರು. ಆಗ ಅಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 10 ಮಂದಿ ಹುಡುಗರು ಹಾಗೂ 10 ಮಂದಿ ಹುಡುಗಿಯರು ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಪೊಲೀಸರು ಅವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಹೆಚ್ಚುವರಿ ಉಪ ಪೊಲೀಸ್ ಆಯುಕ್ತರಾದ ಎಡಿಸಿಪಿ ನೀತು ಕುಮಾರಿ, “ರಂಜಿತ್ ಎಂಬ ಹೋಟೆಲ್‍ನಲ್ಲಿ ಯುವಕರು ಮತ್ತು ಹುಡುಗಿಯರು ಸೆಕ್ಸ್ ರಾಕೆಟ್‍ನಲ್ಲಿ ಭಾಗಿಯಾಗಿರಬಹುದು ಎಂದು ಮಾಹಿತಿದಾರರಿಂದ ನಮಗೆ ಮಾಹಿತಿ ಬಂದಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳಿಗೆ, ರೂಮ್‌ಗಳಲ್ಲಿ ಕನಿಷ್ಠ 10 ಹುಡುಗಿಯರು ಮತ್ತು ಅಷ್ಟೇ ಸಂಖ್ಯೆಯ ಹುಡುಗರು ಆಕ್ಷೇಪಾರ್ಹ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಲ್ಲಾ ಆರೋಪಿಗಳನ್ನು ಬಂಧಿಸಲಾಯಿತು. ಈ ದಂಧೆಯಲ್ಲಿ ಭಾಗಿಯಾಗಿರುವ ಎಲ್ಲಾ ಜಾಲಗಳನ್ನು ಗುರುತಿಸಲು ಅಧಿಕಾರಿಗಳು ಈಗ ಸಮಗ್ರ ತನಿಖೆ ನಡೆಸುತ್ತಿದ್ದಾರೆ” ಎಂಬುದಾಗಿ ಹೇಳಿದ್ದಾರೆ.

ಅಲ್ಲದೇ ಪೊಲೀಸರ ತಂಡವು ಪ್ರಾರಂಭಿಸಿದ ತ್ವರಿತ ಕ್ರಮದಿಂದ ಹೋಟೆಲ್ ಸಿಬ್ಬಂದಿಗೆ ರೂಂನಲ್ಲಿ ದಂಧೆಯಲ್ಲಿ ತೊಡಗಿದ್ದವರನ್ನು ಎಚ್ಚರಿಸಲು ಅವಕಾಶ ಸಿಗಲಿಲ್ಲ. ಆದರೆ ಹೋಟೆಲ್ ಸಿಬ್ಬಂದಿ ತಕ್ಷಣ ಎಲ್ಲಾ ರೂಂಗಳಿಗೆ ಬೀಗ ಹಾಕಿದ್ದರು. ಆದರೆ ಸಿಸಿಟಿವಿಯನ್ನು ಪರಿಶೀಲಿಸಿದ ನಂತರ ಪೊಲೀಸರು ಹೋಟೆಲ್ ಸಿಬ್ಬಂದಿಗೆ ಆ ರೂಮ್‌ಗಳನ್ನು ತೆರೆಯಲು ಹೇಳಿದರು. ಪೊಲೀಸರು ಸಿಸಿಟಿವಿ ನೆಟ್‍ವರ್ಕ್ ಡಿವಿಆರ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ. ದಂಧೆಯಲ್ಲಿ ಭಾಗಿಯಾಗಿರುವ ಇತರ ಸದಸ್ಯರನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಡಿಸಿಪಿ ತಿಳಿಸಿದ್ದಾರೆ.

ಇದನ್ನೂ ಓದಿ:ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

ಇದೇರೀತಿಯ ಪ್ರಕರಣ ಥಾಣೆ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಸೆಕ್ಸ್ ರಾಕೆಟ್ ನಡೆಸುತ್ತಿದ್ದ ಆರೋಪದ ಮೇಲೆ 23 ವರ್ಷದ ಮಹಿಳೆಯನ್ನು ಬಂಧಿಸಿದ್ದಾರೆ. ಮಾನವ ಕಳ್ಳಸಾಗಣೆ ಮಾಡುತ್ತಿದ್ದ ಭಿವಾಂಡಿಯ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಶಂಕಿತನನ್ನು ಬಂಧಿಸಿದ್ದು, 22 ಮತ್ತು 28 ವರ್ಷದ ಇತರ ಇಬ್ಬರು ಮಹಿಳೆಯರನ್ನು ರಕ್ಷಿಸಿ ಅವರನ್ನು ರಕ್ಷಣಾ ಗೃಹಕ್ಕೆ ಕಳುಹಿಸಲಾಯಿತು. ಭಾರತೀಯ ನ್ಯಾಯ ಸಂಹಿತಾ ಮತ್ತು ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್‍ಗಳ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

Continue Reading

ಪ್ರಮುಖ ಸುದ್ದಿ

Valmiki Corporation scam: ವಾಲ್ಮೀಕಿ ನಿಗಮ ಹಗರಣ; ಕೋರ್ಟ್‌ಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ

Valmiki Corporation scam: 12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಸಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿ ಎಸ್‌ಐಟಿ ತಂಡದಿಂದ ಕೋರ್ಟ್‌ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. 12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ.

ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ. ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಪ್ರಕರಣದಲ್ಲಿ ಸುಮಾರು 50 ಕೋಟಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಸೀಜ್ ಮಾಡಿ ನ್ಯಾಯಾಲಯದ ಸುಪರ್ದಿಗೆ ನೀಡಲಾಗಿದೆ. ಪ್ರಕರಣದಲ್ಲಿ ಮೊದಲಿಗೆ ಬಂಧನವಾದ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ | Stock Market: ಷೇರುಪೇಟೆ ಮಹಾ ಪತನ; ಸೆನ್ಸೆಕ್ಸ್‌ 2,000 ಅಂಕ ಕುಸಿತ; 17 ಲಕ್ಷ ಕೋಟಿ ರೂ. ಲಾಸ್‌!

Inspector Death: ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ, ಎರಡು ತಿಂಗಳ ಹಿಂದೆ ಟ್ರಾನ್ಸ್‌ಫರ್‌ ಆಗಿದ್ದ ಸಿಸಿಬಿ ಎಸ್‌ಐ

police inspector death thimmegowda
police inspector death thimmegowda

ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್‌ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ (police inspector death) ಮಾಡಿಕೊಂಡಿದ್ದಾರೆ. ಎರಡು ತಿಂಗಳ ಹಿಂದೆ ಸಿಸಿಬಿಗೆ (CCB) ಟ್ರಾನ್ಸ್‌ಫರ್‌ (Tarnsfer) ಆಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ತಿಮ್ಮೇಗೌಡ (Thimmegowda) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಬಿಡದಿಯಲ್ಲಿ ಆತ್ಮಹತ್ಯೆಗೆ (Self harming) ಶರಣಾಗಿದ್ದಾರೆ.

ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಿಮ್ಮೇಗೌಡ ಸಾವಿಗೆ ಶರಣಾಗಿದ್ದಾರೆ. ಈ ಹಿಂದೆ ಕುಂಬಳಗೋಡಿನ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ತಮ್ಮ ತೋಟದ ಜಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ.

ಇದನ್ನೂ ಓದಿ: Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

1998ರ ರೂರಲ್ ಬ್ಯಾಚ್ ಇನ್ಸ್‌ಪೆಕ್ಟರ್ ತಿಮ್ಮೇಗೌಡ, ಚನ್ನಪಟ್ಟಣದ ಹಳ್ಳಿಯೊಂದರ ನಿವಾಸಿ. ಗ್ರಾಮೀಣ ಕೃಪಾಂಕದಲ್ಲಿ ಆಯ್ಕೆಯಾಗಿದ್ದ ತಿಮ್ಮೇಗೌಡ ವಿಧಾನಸಭೆ ಚುನಾವಣೆ ವೇಳೆಗೆ ಬಿಡದಿಯಿಂದ ಅತ್ತಿಬೆಲೆಗೆ ವರ್ಗಾವಣೆಯಾಗಿದ್ದರು. 2023ರ ಸೆಪ್ಟೆಂಬರ್‌ನಲ್ಲಿ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಬಳಿಕ ಆ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದರು. ನಂತರ ಕುಂಬಳಗೋಡು ಠಾಣೆಗೆ ವರ್ಗಾವಣೆಯಾಗಿದ್ದು, ಇತ್ತೀಚೆಗೆ ಸಿಸಿಬಿಗೆ ವರ್ಗಾವಣೆಯಾಗಿತ್ತು.

ಯಾದಗಿರಿಯಲ್ಲಿ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ರಾಜ್ಯ ಸರ್ಕಾರಕ್ಕೆ ಮುಜುಗರ ಸೃಷ್ಟಿಸುವ ಬೆನ್ನಲ್ಲೇ ಇನ್ನೊಬ್ಬ ಎಸ್‌ಐ ಆತ್ಮಹತ್ಯೆ ಪ್ರಕರಣ ನಡೆದಿದೆ. ಪಿಎಸ್‌ಐ ಪರಶುರಾಮ್ ಅವರ ಟ್ರಾನ್ಸ್‌ಫರ್‌ಗಾಗಿ ಲಂಚ ಕೇಳಿದ ಸ್ಥಳೀಯ ಶಾಸಕ ಹಾಗೂ ಆತನ ಪುತ್ರನ ಮೇಲೆ ದೂರು ದಾಖಲಾಗಿದೆ.

Continue Reading

ಕರ್ನಾಟಕ

Nursing Student Dies: 6ನೇ ಮಹಡಿಯಿಂದ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಸಾವು

Nursing Student Dies: ಬೆಂಗಳೂರು ಹೊರವಲಯದ ಧನ್ವಂತರಿ ಕಾಲೇಜಿನ ವಿದ್ಯಾರ್ಥಿನಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾಳೆ. ಈ ಸಂಬಂಧ ಸೋಲದೇವಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

Nursing student dies
Koo

ಬೆಂಗಳೂರು: 6ನೇ ಮಹಡಿಯಿಂದ ಆಯತಪ್ಪಿ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ (Nursing Student Dies) ನಗರದ ಹೊರವಲಯದ ಸೋಲದೇವಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅತುಲ್ಯ ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿನಿ.

ಧನ್ವಂತರಿ ಕಾಲೇಜಿನಲ್ಲಿ ಯುವತಿ ನರ್ಸಿಂಗ್ ಓದುತ್ತಿದ್ದಳು. ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ನರ್ಸಿಂಗ್ ಕೋರ್ಸ್‌ಗೆ ಸೇರಿಕೊಂಡಿದ್ದಳು. ಆರನೇ ಮಹಡಿಯಲ್ಲಿ ಇರುವಾಗ ಯುವತಿ ಕಾಲು ಜಾರಿ ಕೆಳಗಡೆ ಬಿದ್ದು ಮೃತಪಟ್ಟಿದ್ದಾಳೆ. ಭಾನುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸೋಲದೇವಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

Drowned in water : ಆಟವಾಡುತ್ತಾ ಕಾಲುವೆಗೆ ಕಾಲು ಜಾರಿ ಬಿದ್ದು 4 ವರ್ಷದ ಬಾಲಕ ಸಾವು

Drowned in water
Drowned in water

ಚಿಕ್ಕೋಡಿ: ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ದಾರುಣ (Drowned in water) ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅರುಣ ಖದ್ದಿ (4) ಮೃತ ದುರ್ದೈವಿ. ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಆಟವಾಡಲು ಹೋದ ಅರುಣ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಡಲಾಗಿತ್ತು. ಕಾಲುವೆಗೆ ಬಿದ್ದಾಗ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು; ಬೈಕ್‌ ಅಪಘಾತದಲ್ಲಿ ಸವಾರರಿಬ್ಬರು ಮೃತ್ಯು

ದಾವಣಗೆರೆಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿ ಸಾವು

ವಿದ್ಯುತ್‌ ತಗುಲಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಡರನಾಯಕನಹಳ್ಳಿಯ ಡಿ ಎಸ್ ಸುರೇಶ್ (40) ಮೃತ ದುರ್ದೈವಿ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯಕನಹಳ್ಳಿಯಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಪಂಪ್ ಸೆಟ್ ಚಾಲನೆ ಮಾಡುವಾಗ ಈ ಘಟನೆ ನಡೆದಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

Continue Reading
Advertisement
Viral Video
Latest5 mins ago

Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

Physical Abuse
ವಿಜಯಪುರ17 mins ago

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

Sex Racket
Latest20 mins ago

Sex Racket: ಹೋಟೆಲ್‍ನಲ್ಲಿ ಸೆಕ್ಸ್ ದಂಧೆ ಪತ್ತೆ; ನಗ್ನ ಸ್ಥಿತಿಯಲ್ಲಿದ್ದ 10 ಜೋಡಿಗಳು ಪೊಲೀಸ್‌ ಬಲೆಗೆ!

Duniya Vijay- Ganesh To Combined together make Movie in future
ಸ್ಯಾಂಡಲ್ ವುಡ್22 mins ago

Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

Cloudburst
ದೇಶ23 mins ago

Cloudburst: ಮೇಘಸ್ಫೋಟದಿಂದ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

Viral Video
Latest28 mins ago

Viral Video: ಅಳುತ್ತಿರುವ ಹುಡುಗನನ್ನು ಸಮಾಧಾನಪಡಿಸಿದ ನಾಯಿ ಮರಿ! ಆನಂದ್‌ ಮಹೀಂದ್ರಾ ಹಂಚಿಕೊಂಡ ವಿಡಿಯೊ ಇದು

Valmiki Corporation Scam
ಪ್ರಮುಖ ಸುದ್ದಿ37 mins ago

Valmiki Corporation scam: ವಾಲ್ಮೀಕಿ ನಿಗಮ ಹಗರಣ; ಕೋರ್ಟ್‌ಗೆ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ

Indian stock market
ಪ್ರಮುಖ ಸುದ್ದಿ38 mins ago

Stock Market News: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ, ರೂ.17.03 ಲಕ್ಷ ಕೋಟಿ ನಷ್ಟ

Kannada New Movie idu enta lokavayya movie Kannada ananth nag
ಸಿನಿಮಾ57 mins ago

Kannada New Movie: ʻಇದು ಎಂಥಾ ಲೋಕವಯ್ಯʼ ಸಿನಿಮಾ ಬಿಡುಗಡೆಗೆ ಸಜ್ಜು; ತಂಡಕ್ಕೆ ನಟ ಅನಂತ್ ನಾಗ್ ಸಾಥ್‌!

Nursing student dies
ಕರ್ನಾಟಕ1 hour ago

Nursing Student Dies: 6ನೇ ಮಹಡಿಯಿಂದ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌