Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು - Vistara News

ವಿಜಯಪುರ

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದ ಕಾಮುಕನಿಗೆ ಚಪ್ಪಲಿ ಏಟು ಕೊಟ್ಟಿದ್ದಾಳೆ. ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

VISTARANEWS.COM


on

Physical Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಕಣ್ಣು ಹೊಡೆದು ಚುಡಾಯಿಸಿದ ಯುವಕನಿಗೆ (Physical Abuse) ಮಹಿಳೆಯೊಬ್ಬರು ಚಪ್ಪಲಿ ಏಟು ನೀಡಿದ್ದಾರೆ. ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಬಸ್‌ಗಾಗಿ ಕಾದು ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಸನ್ನೆ ಮಾಡಿದ್ದಾನೆ. ಮೊದಮೊದಲು ಮಹಿಳೆ ಇದನ್ನೂ ನಿರ್ಲಕ್ಷ್ಯ ಮಾಡಿದ್ದಾರೆ. ಆದರೆ ಯಾವಾಗ ಅಸಭ್ಯವಾಗಿ ವರ್ತನೆ ಮಾಡಲು ಶುರು ಮಾಡಿದ್ದನ್ನೋ ಸಿಟ್ಟಿಗೆದ್ದ ಮಹಿಳೆ ಕೈಯಲ್ಲಿ ಚಪ್ಪಲಿ ಹಿಡಿದು, ಯುವಕನಿಗೆ ಹೊಡೆದಿದ್ದಾರೆ.

ಬಸ್ ನಿಲ್ದಾಣದಲ್ಲಿದ್ದ ಸಹ ಪ್ರಯಾಣಿಕರು ಇದಕ್ಕೆ ಸಾಥ್‌ ನೀಡಿದ್ದಾರೆ. ಇತ್ತ ಚಪ್ಪಲಿ ಏಟು ತಿಂದ ಕಾಮುಕ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಮಹಿಳೆ ಹಾಗೂ ಯುವಕನ ಹೆಸರು ತಿಳಿದುಬಂದಿಲ್ಲ. ಸದ್ಯ ಈ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

ವಾಕಿಂಗ್‌ ಮಾಡುತ್ತಿದ್ದ ಮಹಿಳೆಯನ್ನು ತಪ್ಪಿಕೊಂಡು ಮುತ್ತು ಕೊಟ್ಟ ಕಾಮುಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಹತ್ತಿರ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather : ಬೆಂಗಳೂರಿನಲ್ಲಿ ಚದುರಿದಂತೆ, ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ

Karnataka weather Forecast : ರಾಜ್ಯದ ಹಲವೆಡೆ ಮಳೆ (Rain News) ಪ್ರಮಾಣ ತಗ್ಗಿದೆ. ಕರಾವಳಿಯ ಕೆಲವೆಡೆ ಭಾರಿ ಮಳೆಯಾದರೆ, ಒಳನಾಡಿನಲ್ಲಿ ಒಣ ವಾತಾವರಣ ಇರಲಿದೆ. ಕೆಲವೊಮ್ಮೆ ಮೇಲ್ಮೇ ಗಾಳಿ ಬೀಸಲಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಲವಾದ ಮೇಲ್ಮೈ ಮಾರುತಗಳು (Karnataka Weather Forecast) ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿರಲಿದೆ. ಮಲೆನಾಡಿನ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Karnataka Weather Forecast
Karnataka Weather Forecast

ಇದನ್ನೂ ಓದಿ: Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

ಬೆಂಗಳೂರಿನಲ್ಲಿ ಚದುರಿದ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯಪುರ

Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

Road Accident : ಕಾರು-ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ಅಮಾವಾಸ್ಯೆ ಹಿನ್ನೆಲೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

VISTARANEWS.COM


on

By

Road Accident
Koo

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ (Road Accident) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಕೆ ಡಿ ಗ್ರಾಮದ ಎನ್ 50 ರಲ್ಲಿ ಘಟನೆ ನಡೆದಿದೆ. ಬೈಕ್ ಸವಾರ ಹನುಮಂತ ಹಿರೇಕುರುಬರ (43) ಸ್ಥಳದಲ್ಲೇ ಮೃತಪಟ್ಟವರು.

ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ವಾಸಿ ಹನುಮಂತ ಅವರು ಭಾನುವಾರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆ ಜೀವರ್ಗಿ ತಾಲೂಕಿನ ಯಾತನೂರು ಗ್ರಾಮದ ದೇವಸ್ಥಾನಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ ಕಾರಿಗೆ ಗುದ್ದಿದೆ. ಗುದ್ದ ರಭಸಕ್ಕೆ ಕೆಳಗೆ ಬಿದ್ದ ಹನುಮಂತ ಅವರಿಗೆ ಗಂಭೀರ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ತಡರಾತ್ರಿ ಭೀಕರ ಅಪಘಾತ (Road Accident) ಸಂಭವಿಸಿದೆ. ಅಪಘಾತದಲ್ಲಿ ಎಲಿವೇಟೆಡ್ ಫ್ಲೈ ಓವರ್ ಸಿಬ್ಬಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಎಲಿವೇಟೆಡ್ ಫ್ಲೈ ಓವರ್ ಸಿಬ್ಬಂದಿ ಮಂಜುನಾಥ್ (42) ಮೃತ ದುರ್ದೈವಿ.

ಕಾರೊಂದು ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕೆಟ್ಟು ನಿಂತಿತ್ತು. ಹಿಗಾಗಿ ಫ್ಲೈ ಓವರ್ ಸಿಬ್ಬಂದಿ ಟೋಯಿಂಗ್ ವೆಹಿಕಲ್ ಕರೆಸಿ ತೆರವು ಮಾಡಿಸುತ್ತಿದ್ದರು. ಈ ವೇಳೆ ಮಂಜುನಾಥ್‌ ಅವರು ಫ್ಲೈಓವರ್ ಟ್ರಾಫಿಕ್ ನಿಯಂತ್ರಣ ಮಾಡುತ್ತಿದ್ದರು.

ಇನ್ನೇನು ಕಾರು ಟೋಯಿಂಗ್ ಮಾಡಬೇಕು ಎನ್ನುವ ವೇಳೆ ಅತಿವೇಗವಾಗಿ ಬಂದ ಗೂಡ್ಸ್‌ ವಾಹನದಿಂದ ಸರಣಿ ಅಪಘಾತ ಸಂಭವಿಸಿದೆ. ಗೂಡ್ಸ್‌ ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಫ್ಲೈ ಓವರ್ ಟೋಲ್ ಸಿಬ್ಬಂದಿ ವಾಹನ ಮತ್ತು ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ಬಳಿಕ ಪಲ್ಟಿ ಹೊಡೆದಿದೆ.

ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜುನಾಥ್ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರಿಗೆ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Road Accident
Road Accident

ಮಗಳ ಮದುವೆ ಸಿದ್ಧತೆಯಲ್ಲಿದ್ದ ಮಂಜುನಾಥ್‌

ಇದೇ ತಿಂಗಳ 10ರಂದು ಮಗಳ ಮದುವೆ ಇತ್ತು. ಹೀಗಾಗಿ ಮಂಜುನಾಥ್‌ ಅವರು ಮದುವೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ನಿನ್ನೆ ಶನಿವಾರ ಬೆಳಗ್ಗೆಯೂ ಸಹ ಮದುವೆಯ ಆಮಂತ್ರಣ ಪತ್ರಿಕೆ ಹಂಚಿ ಬಂದಿದ್ದರು. ನೈಟ್ ಶಿಫ್ಟ್ ಕೆಲಸಕ್ಕೆ ಹಾಜರಾಗಿದ್ದ ಮಂಜುನಾಥ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಗಳ ಮದುವೆ ಸಂಭ್ರಮದಲ್ಲಿ ಇರಬೇಕಾದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆಯ (Rain News) ಅಬ್ಬರ ತಗ್ಗಿದ್ದು, ಮುಂದಿನ ವಾರ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಒಳನಾಡಿನ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather Forecast
Koo

ಹಾವೇರಿ/ಬೆಂಗಳೂರು: ಹಾವೇರಿಯಲ್ಲಿ ನಿರಂತರ ಮಳೆಗೆ (Karnataka Weather Forecast) ಸರಕಾರಿ ಶಾಲೆ ಕಟ್ಟಡವೊಂದು ಸೋರುತ್ತಿದೆ. ಶತಮಾನ ಕಂಡಿರುವ ಹಾವೇರಿಯ ಕಳಸೂರಿನಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೀರು ಸೋರಿಕೆಯಿಂದಾಗಿ ಮಕ್ಕಳು ಪರದಾಟ ಅನುಭವಿಸುತ್ತಿದ್ದಾರೆ. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡದ ದುರಸ್ತಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮುಂದಿನ ವಾರ ಭಾರಿ ಮಳೆ

ಮುಂದಿನ ಒಂದು ವಾರ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಯ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ

ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದ್ದು, ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡ ನೈರುತ್ಯ

ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಹಾಗೂ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಮಂಕಿ 11, ಶಿವಮೊಗ್ಗದ ಆನವಟ್ಟಿ, ಆಗುಂಬೆಯಲ್ಲಿ ತಲಾ 10 ಸೆಂ.ಮೀ ಮಳೆಯಾಗಿದೆ. ಕ್ಯಾಸಲ್‌ ರಾಕ್‌, ಗೇರ್ಸೊಪ್ಪ, ಕದ್ರಾ, ಜಗಲಬೆಟ್‌ನಲ್ಲಿ 10ಸೆಂ.ಮೀ ಮಳೆಯಾಗಿದೆ. ಕೋಟ, ಕಮ್ಮರಡಿ,ಶೃಂಗೇರಿ, ಸಿದ್ದಾಪುರ, ಕುಮಟಾದಲ್ಲಿ 6 ಸೆಂ.ಮೀ, ಮೂಲ್ಕಿ, ಮಾಣಿ, ಕಾರವಾರ, ಯಲ್ಲಾಪುರ, ಪುತ್ತೂರು, ಹೊನ್ನಾವರ, ಕೊಪ್ಪ, ಜಯಪುರದಲ್ಲಿ 5 ಸೆಂ.ಮೀ ಮಳೆಯಾಗಿದೆ.

ಧರ್ಮಸ್ಥಳ, ಸಿದ್ದಾಪುರ, ಲಿಂಗನಮಕ್ಕಿ, ದಕ್ಷಿಣ ಕನ್ನಡ, ಜೋಯಿಡಾ, ಶಿರಾಲಿ, ಕುಂದಾಪುರ ಹಾಗೂ ಮಂಗಳೂರು, ಕಾರ್ಕಳ, ಬೆಳಗಾವಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಸುಳ್ಯ, ಗೋಕರ್ಣ, ಮಂಗಳೂರು, ಪಣಂಬೂರು, ಬೆಳ್ತಂಗಡಿ, ಹಳಿಯಾಳ, ಲೋಂಡಾ, ಎನ್‌ಆರ್‌ಪುರ, ಬಾಳೆಹೊನ್ನೂರು, ಮೂರ್ನಾಡು, ಭಾಗಮಂಡಲ, ಕಳಸ, ನಿಲ್ಕುಂದ, ಕಿರವತ್ತಿ, ಬೆಳಗಾವಿ, ತ್ಯಾಗರ್ತಿ ಸೇರಿದಂತೆ ಸೋಮವಾರಪೇಟೆ, ಹುಂಚದಕಟ್ಟೆ, ಹಿರಿಯೂರು, ಹಾಸನ, ಹಾರಂಗಿ, ತೊಂಡೇಬಾವಿ, ಬಿ ದುರ್ಗ, ದೊಡ್ಡಬಳ್ಳಾಪುರ, ಕೊಟ್ಟಿಗೆಹಾರ ಸುತ್ತಮುತ್ತ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂದುವರಿಯಲಿದೆ ವಿಪರೀತ ಮಳೆ; ಕರಾವಳಿಗೆ ಆರೆಂಜ್‌, ಮಲೆನಾಡಿಗೆ ಯೆಲ್ಲೋ ಅಲರ್ಟ್‌

Rain News : ಭಾನುವಾರದಂದು ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್‌ ಹಾಗೂ ಯೆಲ್ಲೋ ಎಚ್ಚರಿಕೆಯನ್ನು (Karnataka Weather Forecast) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಮತ್ತೆ ಸಕ್ರಿಯವಾಗಿದೆ. ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Paris Olympics 2024
ಪ್ರಮುಖ ಸುದ್ದಿ13 mins ago

Paris Olympics 2024 : ಪದಕದ ಸ್ಪರ್ಧೆಗೆ ಅರ್ಹತೆ ಗಿಟ್ಟಿಸಿದ ಭಾರತದ ಶೂಟಿಂಗ್​ ಸ್ಕೀಟ್ ಮಿಶ್ರ ತಂಡ

Congress Protest
ಕರ್ನಾಟಕ32 mins ago

Congress Protest: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ

Paris Olympics 2024
ಕ್ರಿಕೆಟ್33 mins ago

Manu Bhaker : ಪ್ಯಾರಿಸ್​ ಒಲಿಂಪಿಕ್ಸ್​​ ಸಮಾರೋಪದಲ್ಲಿ ಮನು ಭಾಕರ್​​ ತ್ರಿವರ್ಣ ಧ್ವಜಧಾರಿ

Bangladesh Protests
ವಿದೇಶ41 mins ago

Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Bangla Protest Explainer
ವಿದೇಶ47 mins ago

Bangla Protest Explainer: ಬಾಂಗ್ಲಾದಲ್ಲಿ ಹಿಂಸೆ ಭುಗಿಲೆದ್ದಿದ್ದೇಕೆ? ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? ಮುಂದೇನು?

Paris Olympics 2024
ಕ್ರೀಡೆ55 mins ago

Paris Olympics 2024 : ಒಲಿಂಪಿಕ್ಸ್​ನ ಕ್ವಾರ್ಟರ್​ ಫೈನಲ್​ಗೇರಿದ ಭಾರತ ಮಹಿಳೆಯರ ಟೇಬಲ್ ಟೆನಿಸ್​ ತಂಡ

Road Accident
ವಿಜಯನಗರ57 mins ago

Road Accident : ಶಾಲಾ ಶಿಕ್ಷಕನ ಬಲಿ ಪಡೆದ ಸ್ಕೂಲ್‌ ವ್ಯಾನ್‌; ಒಂಟಿ ಸಲಗ ದಾಳಿಗೆ ವೃದ್ಧೆ ಸಾವು

Chiyaan Vikram danie caltagirone kissed hand on stage
ಕಾಲಿವುಡ್58 mins ago

Chiyaan Vikram: ವೇದಿಕೆಯಲ್ಲೇ ನಿರೂಪಕಿ ಸುಮಾಗೆ ಕಿಸ್ ಕೊಟ್ಟ ಖ್ಯಾತ ನಟ!

Viral Video
Latest1 hour ago

Viral Video: ಮಳೆಯಲಿ ಜೊತೆಯಲಿ… ಆನೆ-ಮಾವುತ ನಡುವಿನ ಮಾಂತ್ರಿಕ ಕ್ಷಣ! ಹೃದಯ ತಟ್ಟುವ ವಿಡಿಯೊ

Rohit Sharma
ಪ್ರಮುಖ ಸುದ್ದಿ1 hour ago

Rohit Sharma : ಸಿಕ್ಸರ್​ಗಳನ್ನು ಬಾರಿಸುವಲ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದ ರೋಹಿತ್ ಶರ್ಮಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌