BS Yediyurappa: ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ 150 ಸೀಟು ಖಚಿತ: ಬಿಎಸ್‌ ಯಡಿಯೂರಪ್ಪ - Vistara News

ಪ್ರಮುಖ ಸುದ್ದಿ

BS Yediyurappa: ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ 150 ಸೀಟು ಖಚಿತ: ಬಿಎಸ್‌ ಯಡಿಯೂರಪ್ಪ

ತೋಳ್ಬಲ, ಹೆಂಡದ ಬಲ, ಅಧಿಕಾರದ ಬಲದಿಂದ ಬಂದಿರುವ ಸಿಎಂ ಅನೇಕ ಭ್ರಷ್ಟಾಚಾರಗಳಲ್ಲಿ‌ ಸಿಲುಕಿ ನರಳುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ನಾಯಕತ್ವ ಇದ್ದರೆ ಕೂಡಲೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಬಿಎಸ್‌ ಯಡಿಯೂರಪ್ಪ (BS Yediyurappa) ಆಗ್ರಹಿಸಿದರು.

VISTARANEWS.COM


on

bs yediyurappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಬಿಜೆಪಿ- ಜೆಡಿಎಸ್‌ ಮೈತ್ರಿಕೂಟ ಸಂಬಂಧ ಶಾಶ್ವತ. ರಾಜ್ಯದ ಜನತೆ ಭ್ರಷ್ಟ ಕಾಂಗ್ರೆಸ್‌ (Congress) ಸರಕಾರದಿಂದ ಬೇಸತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿಕೂಟದಿಂದ (BJP-JDS Alliance) ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.

ʼಮೈಸೂರು ಚಲೋʼ ಪಾದಯಾತ್ರೆಯ (BJP-JDS Padayatra) ಮೂರನೇ ದಿನದ ನಡಿಗೆ ಹಾಗೂ ಚನ್ನಪಟ್ಟಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇಂದು ಈ ರಾಜ್ಯದ ಮುಖ್ಯಮಂತ್ರಿ ಅನೇಕ ಭ್ರಷ್ಟಾಚಾರಕ್ಕೆ ಸಿಲುಕಿದ್ದಾರೆ. ಉಸಿರುಗಟ್ಟುವ ವಾತಾವರಣದಲ್ಲಿ ಸಿಲುಕಿದ್ದಾರೆ. ಗೌರವಯುತವಾಗಿ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ತೋಳ್ಬಲ, ಹೆಂಡದ ಬಲ, ಅಧಿಕಾರದ ಬಲದಿಂದ ಬಂದಿರುವ ಸಿಎಂ ಅನೇಕ ಭ್ರಷ್ಟಾಚಾರಗಳಲ್ಲಿ‌ ಸಿಲುಕಿ ನರಳುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ನಾಯಕತ್ವ ಇದ್ದರೆ ಕೂಡಲೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬೇಕು. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಸಿದ್ದರಾಮಯ್ಯ ಅವರಂತೆ ಮುಡಾದಲ್ಲಿ 14 ಸೈಟು ಪಡೆದಿರೋದು ಯಾರೂ ಇಲ್ಲ. ಒಬ್ಬ ಮುಖ್ಯಮಂತ್ರಿ ತನ್ನ ಪತ್ನಿ ಹೆಸರಿಗೆ 14 ಸೈಟು ಪಡೆದಿದ್ದಾರೆ. ಅವರೇ ಅದನ್ನು ಒಪ್ಪಿಕೊಂಡಿದ್ದಾರೆ. 60 ಕೋಟಿ ಬೆಲೆ ಬಾಳಲಿದೆ ಅಂತಲೂ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಕೇಂದ್ರದ ನಾಯಕರಿಗೆ ಜವಾಬ್ದಾರಿ ಇದ್ದರೆ ಕೂಡಲೇ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ವಾಲ್ಮೀಕಿ ನಿಗಮದಂಥ ಬೃಹತ್ ಹಗರಣ ಹಿಂದೆಂದೂ ಆಗಿರಲಿಲ್ಲ.‌ ಇನ್ಸ್‌ಪೆಕ್ಟರ್‌ ವರ್ಗಾವಣೆಗೆ 30-40 ಲಕ್ಷ ತಗೋಳೋದು ನೋಡಿರಲಿಲ್ಲ. ಇದರಿಂದಾಗಿ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರೋದನ್ನ ನೀವು ನೋಡಿದ್ದೀರಿ. ಇದು ಅತ್ಯಂತ ಭ್ರಷ್ಟ ಸರಕಾರ ಎಂದು ಅವರು ಆಪಾದಿಸಿದರು.

ಬಿಜೆಪಿ-ಜೆಡಿಎಸ್ ಸಂಬಂಧ ಶಾಶ್ವತ ಸಂಬಂಧ. ನಾವು ಜೊತೆಯಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದೇವೆ. ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ. ಮೈಸೂರಿನಲ್ಲಿ ಎರಡು ಲಕ್ಷ ಜನ ಸೇರಿಸಿ ಸಮಾರೋಪ ಮಾಡಲಿದ್ದೇವೆ. ನಿಮ್ಮ ಕೇಂದ್ರದ ನಾಯಕರಿಗೆ ಭ್ರಷ್ಟಾಚಾರದ ಮನವರಿಕೆ ಮಾಡುವ ಕೆಲಸ ಮಾಡ್ತಿದ್ದೇವೆ. ಈಗಲಾದ್ರೂ ಮುಖ್ಯಮಂತ್ರಿ ರಾಜೀನಾಮೆ ಪಡೆಯಬೇಕು. ಪಾದಯಾತ್ರೆ ಮೈಸೂರು ತಲುಪುವುದರ ಒಳಗೆ ಸಿಎಂ ರಾಜೀನಾಮೆ ಕೊಡದಿದ್ರೆ ನಮ್ಮ ಮುಂದಿನ ಹೋರಾಟ ರೂಪಿಸಲಿದ್ದೇವೆ ಎಂದು ಅವರು ಎಚ್ಚರಿಸಿದರು.

ʼನಮ್ಮ ಈ ಹೋರಾಟ ನಾವು ಅಧಿಕಾರಕ್ಕೆ ಬರಬೇಕು ಅಂತಲ್ಲ. ಈ ರಾಜ್ಯದಲ್ಲಿ ವಚನಭ್ರಷ್ಟ ಸರ್ಕಾರ ಅಧಿಕಾರದಲ್ಲಿದೆ. ವಾಲ್ಮೀಕಿ ನಿಗಮದ 187 ಕೋಟಿ ಲೂಟಿ ಮಾಡಿದೆ. ನಮ್ಮ ಹೋರಾಟದ ಪರಿಣಾಮವಾಗಿ ದೆಹಲಿಯಿಂದ ಕಾಂಗ್ರೆಸ್ ವರಿಷ್ಠರು ಬಂದಿದ್ದಾರೆ. ಸಿಎಂ ಪರವಾಗಿ ಗಟ್ಟಿಯಾಗಿ ನಿಲ್ಲುವಂತೆ ಆಡಳಿತ ಪಕ್ಷದ ಶಾಸಕರಿಗೆ ಸೂಚಿಸಲು ಬಂದಿದ್ದಾರೆ. ಆಡಳಿತ ಪಕ್ಷದ ಶಾಸಕರಿಗೆ ಅನುದಾನ ಕೊಡೋದಾಗಿ ಭರವಸೆ ಕೂಡ ನೀಡಿದ್ದಾರೆ. ಆದರೆ ಈ ಸರ್ಕಾರ ಎಷ್ಟು ಬೇಗ ತೊಲಗಲಿದೆಯೋ, ಅಷ್ಟು ಒಳ್ಳೆಯದುʼ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನುಡಿದರು.

ಚನ್ನಪಟ್ಟಣದಲ್ಲಿ ಪಾದಯಾತ್ರೆ ವೇಳೆ ಅಸ್ವಸ್ಥಗೊಂಡ ಬಿಜೆಪಿ ಮುಖಂಡ

ಚನ್ನಪಟ್ಟಣದಲ್ಲಿ ಪಾದಯಾತ್ರೆ ವೇಳೆ ಬಿಜೆಪಿ ಮುಖಂಡರೊಬ್ಬರು ಅಸ್ವಸ್ಥಗೊಂಡರು. ಕೂಡಲೇ ಆಂಬ್ಯುಲೆನ್ಸ್ ಮೂಲಕ ಅವರನ್ನು ರಾಮನಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬೆಂಗಳೂರಿನ ಬಿಜೆಪಿ ಜಯನಗರ ಮಂಡಲ ಉಪಾಧ್ಯಕ್ಷ ಶಂಕರ್ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಸಿ.ಕೆ. ರಾಮಮೂರ್ತಿ ಮತ್ತು ರವಿಸುಬ್ರಮಣ್ಯ ಆಸ್ಪತ್ರೆಗೆ ತೆರಳಿ ಶಂಕರ್ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: BJP-JDS Padayatra: ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗಲ್ಲ, ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ: ಕೆ.ಸಿ. ವೇಣುಗೋಪಾಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Sheikh Hasina: ಬಾಂಗ್ಲಾದಿಂದ ದೆಹಲಿಗೆ ಬಂದಿಳಿದ ಶೇಖ್‌ ಹಸೀನಾ; ಶೀಘ್ರದಲ್ಲೇ ಲಂಡನ್‌ಗೆ ಹಾರಾಟ?

Sheikh Hasina: ಬಾಂಗ್ಲಾದೇಶದ ಢಾಕಾದಲ್ಲಿರುವ ಶೇಖ್‌ ಹಸೀನಾ ನಿವಾಸದ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ ಬಳಿಕ ಪಲಾಯನಗೈದ ಶೇಖ್‌ ಹಸೀನಾ ಅವರು ಭಾರತಕ್ಕೆ ಆಗಮಿಸಿದ್ದಾರೆ. ಪ್ರಾಣ ಭಯದ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ಬಂದಿದ್ದಾರೆ. ಶೀಘ್ರದಲ್ಲೇ ಅವರು ಲಂಡನ್‌ಗೆ ಹಾರಾಟ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Sheikh Hasina
Koo

ನವದೆಹಲಿ: ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯು (Bangladesh Protest) ನಾಗರಿಕ ದಂಗೆಯಾಗಿ ಬದಲಾದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಶೇಖ್‌ ಹಸೀನಾ (Sheikh Hasina), ಭಾರತಕ್ಕೆ ಬಂದಿಳಿದಿದ್ದಾರೆ. ದೆಹಲಿಯಲ್ಲಿರುವ ಹಿಂಡನ್‌ ಏರ್‌ಫೋರ್ಸ್‌ ವಾಯುನೆಲೆಗೆ (Hindon Air Force Base) ಬಂದಿಳಿದಿದ್ದು, ವಾಯುಪಡೆ ಅಧಿಕಾರಿಗಳು ಶೇಖ್‌ ಹಸೀನಾ ಅವರನ್ನು ಸ್ವಾಗತಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಗಿ ಭದ್ರತೆಯಲ್ಲಿ ಶೇಖ್‌ ಹಸೀನಾ ಅವರು ದೆಹಲಿಗೆ ಬಂದಿಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಾಣಭಯದ ಹಿನ್ನೆಲೆಯಲ್ಲಿ ಭಾರತಕ್ಕೆ ಬಂದಿರುವ ಶೇಖ್‌ ಹಸೀನಾ, ಶೀಘ್ರದಲ್ಲಿಯೇ ಲಂಡನ್‌ಗೆ ಹಾರಲಿದ್ದಾರೆ ಎಂದು ತಿಳಿದುಬಂದಿದೆ. ತಾತ್ಕಾಲಿಕವಾಗಿ ಭಾರತದಲ್ಲಿ ಆಶ್ರಯ ಪಡೆಯುವ ಅವರು ಬಳಿಕ ಲಂಡನ್‌ಗೆ ತೆರಳಿ, ಅಲ್ಲಿಯೇ ಕೆಲ ಕಾಲ ನೆಲೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನ, ಶ್ರೀಲಂಕಾದಲ್ಲೂ ನಾಗರಿಕ ದಂಗೆಗಳು ಉಂಟಾದಾಗ, ಆ ದೇಶಗಳ ನಾಯಕರು ವಿದೇಶದಲ್ಲಿ ಆಶ್ರಯ ಪಡೆದಿದ್ದರು. ಈಗಲೂ ಕೆಲ ನಾಯಕರು ವಿದೇಶಗಳಲ್ಲಿಯೇ ನೆಲೆಸಿದ್ದಾರೆ.

ಬಾಂಗ್ಲಾ ರೈಲುಗಳ ಸೇವೆ ರದ್ದು

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ಬಾಂಗ್ಲಾ ಜತೆಗಿನ ಎಲ್ಲ ರೈಲು ಸೇವೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಹಾಗೆಯೇ, ಮುಂದಿನ ಸೂಚನೆವರೆಗೆ ಭಾರತೀಯರು ಬಾಂಗ್ಲಾದೇಶಕ್ಕೆ ಪ್ರಯಾಣ ಬೆಳೆಸಬಾರದು ಎಂದು ಕೂಡ ಸೂಚನೆ ನೀಡಲಾಗಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯರು, ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಕಾರಣ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಜಮಾತ್‌-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್‌ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್‌ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Continue Reading

ವಿದೇಶ

‘ಭೂತಯ್ಯ’ನ ಮನೆಯಂತಾದ ಶೇಖ್‌ ಹಸೀನಾ ನಿವಾಸ; ಬಿರಿಯಾನಿ ತಿಂದು, ವಸ್ತುಗಳನ್ನು ಕದ್ದ ಪ್ರತಿಭಟನಾಕಾರರು, Videoಗಳು ಇವೆ

Bangladesh Protest: ಪ್ರಧಾನಿ ರಾಜೀನಾಮೆ ಬಳಿಕ ಅವರ ಭವ್ಯವಾದ ನಿವಾಸಕ್ಕೆ ಲಗ್ಗೆ ಇಟ್ಟಿದ್ದಾರೆ. ಶೇಖ್‌ ಹಸೀನಾ ಮನೆಯಲ್ಲಿರುವ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಸಾಮೂಹಿಕವಾಗಿ ಈಜಾಡುವುದು, ಬೆಡ್‌ರೂಮ್‌ನಲ್ಲಿ ಮಲಗುವುದು, ಎಲ್ಲ ಐಷಾರಾಮಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು ಸೇರಿ ಹಲವು ಹುಚ್ಚಾಟ ಮಾಡಿದ್ದಾರೆ. ಈ ವಿಡಿಯೊಗಳು ಈಗ ಭಾರಿ ವೈರಲ್‌ ಆಗಿವೆ.

VISTARANEWS.COM


on

Bangladesh Protest
Koo

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರ ನಿವಾಸ ಈಗ ಕನ್ನಡದ ‘ಭೂತಯ್ಯನ ಮಗ ಅಯ್ಯು’ ಸಿನಿಮಾದ ಭೂತಯ್ಯನ ಮನೆಯಂತಾಗಿದೆ. ಹೌದು, ಶೇಖ್‌ ಹಸೀನಾ ರಾಜೀನಾಮೆ ನೀಡಿ, ಪಲಾಯನಗೈದ ಬಳಿಕ ಪ್ರತಿಭಟನಾಕಾರರು (Bangladesh Protest) ಅವರ ನಿವಾಸಕ್ಕೆ ನುಗ್ಗಿದ್ದಾರೆ. ಶೇಖ್‌ ಹಸೀನಾ ನಿವಾಸದಲ್ಲಿ ಪ್ರತಿಭಟನಾಕಾರರು ಬಿರಿಯಾನಿ ಸೇರಿ ಎಲ್ಲ ಆಹಾರವನ್ನು ಸೇವಿಸಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಕದ್ದಿದ್ದಾರೆ. ಶೇಖ್‌ ಹಸೀನಾ ಮನೆಯಲ್ಲಿ ಪ್ರತಿಭಟನಾಕಾರರ ಹುಚ್ಚಾಟದ ವಿಡಿಯೊಗಳು ಈಗ ವೈರಲ್‌ ಆಗಿವೆ.

ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಆರಂಭಿಸಿದ ಪ್ರತಿಭಟನಾಕಾರರು, ಪ್ರಧಾನಿ ರಾಜೀನಾಮೆ ಬಳಿಕ ಅವರ ಭವ್ಯವಾದ ನಿವಾಸಕ್ಕೆ ಲಗ್ಗೆ ಇಟ್ಟಿದ್ದಾರೆ. ಶೇಖ್‌ ಹಸೀನಾ ಮನೆಯಲ್ಲಿರುವ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಸಾಮೂಹಿಕವಾಗಿ ಈಜಾಡುವುದು, ಬೆಡ್‌ರೂಮ್‌ನಲ್ಲಿ ಮಲಗುವುದು, ಎಲ್ಲ ಐಷಾರಾಮಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು, ಭಕ್ಷ್ಯ ಭೋಜನ ಸವಿದು, ಕುಣಿದು ಕುಪ್ಪಳಿಸಿ ಮಜಾ ಉಡಾಯಿಸಿದ್ದಾರೆ. ಆ ಮೂಲಕ ಪ್ರಧಾನಿ ಮೇಲಿನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೊಗಳು ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ.

ಬೆಡ್‌ರೂಮ್‌ನಲ್ಲಿ ಮಜಾ

ಬಾಂಗ್ಲಾದೇಶದಲ್ಲಿ ಶೇಖ್‌ ಹಸೀನಾ ಫೋಟೊಗಳಿಗೆ ಮಸಿ ಬಳಿಯಲಾಗಿದೆ. ಶೇಖ್‌ ಹಸೀನಾ ಅವರ ತಂದೆಯ ಮೂರ್ತಿಗಳನ್ನು ಉದ್ರಿಕ್ತರು ಒಡೆದು ಹಾಕಿದ್ದಾರೆ. ಕೆಲ ಸರ್ಕಾರಿ ಕಚೇರಿಗಳನ್ನೂ ಧ್ವಂಸಗೊಳಿಸಿದ್ದಾರೆ. ಸುಮಾರು 4 ಲಕ್ಷ ಜನ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಭರ್ಜರಿ ಭೋಜನ ಸವಿದ ಪ್ರತಿಭಟನಾಕಾರರು

ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಕಾರಣ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಜಮಾತ್‌-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್‌ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್‌ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Continue Reading

ಪ್ರಮುಖ ಸುದ್ದಿ

Paris Olympics 2024 : ಪದಕದ ಸ್ಪರ್ಧೆಗೆ ಅರ್ಹತೆ ಗಿಟ್ಟಿಸಿದ ಭಾರತದ ಶೂಟಿಂಗ್​ ಸ್ಕೀಟ್ ಮಿಶ್ರ ತಂಡ

Paris Olympics 2024 : ಈ ಸ್ಪರ್ಧೆಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ನಂತರ ಇಟಲಿ ಮತ್ತು ಅಮೆರಿಕೆ ಚಿನ್ನದ ಪದಕಕ್ಕಾಗಿ ಸ್ಪರ್ಧಿಸಲಿವೆ. ಇಟಲಿ 149 ಅಂಕ ಪಡೆದು ಅಗ್ರಸ್ಥಾನ ಗಿಟ್ಟಿಸಿದರೆ ಅಮೆರಿಕ ಒಂದು ಅಂಕ ಹಿಂದಕ್ಕೆ ಉಳಿಯಿತು. ಭಾರತದ ಪರ ಮಹೇಶ್ವರಿ ಮತ್ತು ಅನಂತ್​ಜೀತ್​​ ಉತ್ತಮ ಫಾರ್ಮ್​ನಲ್ಲಿದ್ದು ಅವರು ಕಂಚಿನ ಪದಕದ ಹಣಾಹಣಿಗೆ ಅರ್ಹತೆ ಪಡೆದುಕೊಂಡರು.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics 2024) ಭಾರತದ ಶೂಟಿಂಗ್​ (Olympics Shooting) ಸ್ಕೀಟ್ ಮಿಶ್ರ ತಂಡದ ಸದಸ್ಯರಾದ ಮಹೇಶ್ವರಿ ಚೌಹಾಣ್ ಮತ್ತು ಅನಂತಜೀತ್ ಸಿಂಗ್ ಕಂಚಿನ ಪದಕದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಸೋಮವಾರ ನಡೆದ ಅರ್ಹತಾ ಸುತ್ತಿನಲ್ಲಿ ಭಾರತದ ಜೋಡಿ 4 ನೇ ಸ್ಥಾನ ಪಡೆಯಿತು. ಚೀನಾದೊಂದಿಗೆ ಅಂಕಗಳ ಸಮಬಲ ಸಾಧಿಸಿದ ಭಾರತ ಅರ್ಹತೆ ಪಡೆದುಕೊಂಡಿತು. ಎರಡೂ ತಂಡಗಳು 146 ಅಂಕಗಳನ್ನು ಗಳಿಸಿದ್ದವು.

ಈ ಸ್ಪರ್ಧೆಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ನಂತರ ಇಟಲಿ ಮತ್ತು ಅಮೆರಿಕೆ ಚಿನ್ನದ ಪದಕಕ್ಕಾಗಿ ಸ್ಪರ್ಧಿಸಲಿವೆ. ಇಟಲಿ 149 ಅಂಕ ಪಡೆದು ಅಗ್ರಸ್ಥಾನ ಗಿಟ್ಟಿಸಿದರೆ ಅಮೆರಿಕ ಒಂದು ಅಂಕ ಹಿಂದಕ್ಕೆ ಉಳಿಯಿತು. ಭಾರತದ ಪರ ಮಹೇಶ್ವರಿ ಮತ್ತು ಅನಂತ್​ಜೀತ್​​ ಉತ್ತಮ ಫಾರ್ಮ್​ನಲ್ಲಿದ್ದು ಅವರು ಕಂಚಿನ ಪದಕದ ಹಣಾಹಣಿಗೆ ಅರ್ಹತೆ ಪಡೆದುಕೊಂಡರು.

ಮಹೇಶ್ವರಿ ಮತ್ತು ಅನಂತಜೀತ್ ತಮ್ಮ ಮೊದಲ ಸುತ್ತುಗಳಲ್ಲಿ ಮೊದಲ 4 ಸರಣಿಗಳಲ್ಲಿ ತಪ್ಪುಗಲೇ ಇಲ್ಲದೆ ಪ್ರದರ್ಶನ ನೀಡಿದರು. ಮೊದಲ ಸುತ್ತಿನ ಅಂತಿಮ ಸರಣಿಯಲ್ಲಿ ಮಹೇಶ್ವರಿ ಒಂದು ಶಾಟ್ ತಪ್ಪಿಸಿಕೊಂಡರು. ಆದರೆ ಅನಂತ್ಜೀತ್ ಆವೇಗವನ್ನು ಕಾಯ್ದುಕೊಂಡರು. ಅವರು ಪೂರ್ಣ 29 ಅಂಕಗಳನ್ನು ಗಳಿಸುವ ಮೂಲಕ ತಂಡಕ್ಕೆ 49 ಅಂಕಗಳನ್ನು ತಂದುಕೊಟ್ಟರು.

ಎರಡನೇ ಸುತ್ತಿನಲ್ಲಿ ಮಹೇಶ್ವರಿ ಪರಿಪೂರ್ಣ 25 ಅಂಕಗಳನ್ನು ಗಳಿಸಿದರು. ಅನಂತ್​ಜಿತ್​ ತಮ್ಮ 25 ಶಾಟ್​ಗಳಿಂದ ಕೇವಲ 23 ಅಂಕಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಈ ಸಮಯದಲ್ಲಿ, ಅವರು ಅಗ್ರ ತಂಡಗಳೊಂದಿಗೆ ಸ್ಪರ್ಧಿಸುತ್ತಿದ್ದರು. ಎರಡನೇ ಇಟಾಲಿಯನ್ ತಂಡವಾದ ಮಾರ್ಟಿನಾ ಬಾರ್ಟೊಲೊಮಿ ಮತ್ತು ತಮ್ಮರೊ ಕಸ್ಸಾಂಡ್ರೊ ಅವರ ಸವಾಲು ಎದುರಿಸಿದ್ದರು.

ಇದನ್ನೂ ಓದಿ: Manu Bhaker : ಪ್ಯಾರಿಸ್​ ಒಲಿಂಪಿಕ್ಸ್​​ ಸಮಾರೋಪದಲ್ಲಿ ಮನು ಭಾಕರ್​​ ತ್ರಿವರ್ಣ ಧ್ವಜಧಾರಿ

ಅಂತಿಮ ಸುತ್ತಿನಲ್ಲಿ ಮಹೇಶ್ವರಿ 25 ಅಂಕಗಳನ್ನು ಗಳಿಸಿ ಮೂರು ಸುತ್ತುಗಳನ್ನು ಮುಗಿಸಿದರು. ಅನಂತ್ಜೀತ್ ತಮ್ಮ ಒಂದು ಶಾಟ್ ತಪ್ಪಿಸಿಕೊಂಡರು. ಅವರು 24 ಅಂಕ ಗಳಿಸುವ ಮೂಲಕ ತಂಡ 49 ಅಂಕ ಗಳಿಸಿತು. ಬಾರ್ಟೊಲೊಮಿ ಮತ್ತು ಕಸ್ಸಾಂಡ್ರೊ 144 ಅಂಕಗಳನ್ನು ಗಳಿಸಿದರೆ ಭಾರತದ ಜೋಡಿ 146 ಅಂಕಗಳನ್ನು ಗಳಿಸಿತು.

ಕ್ವಾರ್ಟರ್​ ಫೈನಲ್​ಗೇರಿದ ಭಾರತ ಮಹಿಳೆಯರ ಟೇಬಲ್ ಟೆನಿಸ್​ ತಂಡ

ಪ್ಯಾರಿಸ್: ಭಾರತದ ಮಹಿಳೆಯರ ಟೇಬಲ್​ ಟೆನಿಸ್ ತಂಡ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics 2024) ಕ್ವಾರ್ಟರ್​ಫೈನಲ್​ಗೇರಿದೆ. ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರೊಮೇನಿಯಾ ವಿರುದ್ಧ 3-2 ಅಂತರದಲ್ಲಿ ಜಯ ಸಾಧಿಸುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮುನ್ನಡೆ ಸಾಧಿಸಿದೆ. ಅನುಭವಿ ಆಟಗಾರ್ತಿ ಮಣಿಕಾ ಭಾತ್ರಾ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು. ಶ್ರೀಜಾ ಅಕುಲಾ-ಅರ್ಚನಾ ಕಾಮತ್ ಮತ್ತು ಮಣಿಕಾ ಬಾತ್ರಾ ಅವರಿದ್ದ ತಂಡವು ಈ ಸಾಧನೆ ಮಾಡಿದೆ.

ಭಾರತ ತಂಡ ಎರಡು ಪಂದ್ಯಗಳನ್ನು ಗೆದ್ದು 2-0 ಮುನ್ನಡೆ ಸಾಧಿಸಿತು. ರೊಮೇನಿಯಾ ಮುಂದಿನ ಎರಡು ಪಂದ್ಯಗಳನ್ನು ಗೆದ್ದಿತು. ಐದನೇ ಪಂದ್ಯದಲ್ಲಿ ಬಾತ್ರಾ 11-5, 11-9, 11-9 ಸೆಟ್ ಗಳಿಂದ ಆದಿನಾ ಡಯಾಕೊನು ಅವರನ್ನು ಸೋಲಿಸಿದರು. ಮಹಿಳಾ ಟೇಬಲ್ ಟೆನಿಸ್ ಕ್ವಾರ್ಟರ್ ಫೈನಲ್​​ನಲ್ಲಿ ಭಾರತ ಯುಎಸ್ಎ ಅಥವಾ ಜರ್ಮನಿಯನ್ನು ಎದುರಿಸಲಿದೆ.

Continue Reading

ವಿದೇಶ

Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Bangladesh Protests: ಭಾರತದ ವಿರೋಧಿಯಾಗಿರುವ, ಉಗ್ರರನ್ನು ಛೂಬಿಟ್ಟು ಉಪಟಳ ಮಾಡುವ ಪಾಕಿಸ್ತಾನವು ಈಗ ಬಾಂಗ್ಲಾದೇಶದಲ್ಲಿ ಅಶಾಂತಿ ಸೃಷ್ಟಿಸಲು ಕುತಂತ್ರ ಮಾಡಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಸರ್ಕಾರ ರಚನೆಯಾಗಲಿ ಎಂಬುದು ಪಾಕಿಸ್ತಾನದ ಕುತುಂತ್ರವಾಗಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Bangladesh Protests
Koo

ಢಾಕಾ: ಭಾರತದ ಮಿತ್ರರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಹಿಂಸಾಚಾರ, ಗಲಭೆ (Bangladesh Protests) ಉಂಟಾಗಿವೆ. ಶೇಖ್‌ ಹಸೀನಾ (Sheikh Hasina) ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಮಧ್ಯೆಯೇ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಕುತಂತ್ರದಿಂದಾಗಿಯೇ ಬಾಂಗ್ಲಾದೇಶದಲ್ಲಿ ಅರಾಜಕತೆ ಉಂಟಾಗಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ಪಾಕಿಸ್ತಾನದ ಕೈವಾಡ ಏನು? ಏಕೆ? ಇದಕ್ಕೂ-ಭಾರತಕ್ಕೆ ಏನು ಸಂಬಂಧ ಎಂಬುದರ ವಿವರಣೆ ಇಲ್ಲಿದೆ.

ಪಾಕಿಸ್ತಾನದ ಕೈವಾಡ ಏನು?

ಬಾಂಗ್ಲಾದೇಶದಲ್ಲಿ ಜಮಾತ್‌-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್‌ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್‌ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ವಿರುದ್ಧ ಪಾಕ್‌ ಆಕ್ರೋಶವೇಕೆ?

ಶೇಖ್‌ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನವು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಕುತಂತ್ರ ಮಾಡುತ್ತದೆ. ಬಾಂಗ್ಲಾದೇಶ ಭಾರತದ ಗಡಿ ಪ್ರದೇಶವಾಗಿರುವ ಕಾರಣ, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪಕ್ಷವು ಆಡಳಿತಕ್ಕೆ ಬಂದರೆ, ಬಾಂಗ್ಲಾ ಮೂಲಕವೂ ಭಾರತದಲ್ಲಿ ಉಗ್ರರನ್ನು ಛೂಬಿಟ್ಟು ಅಂಶಾತಿ ಸೃಷ್ಟಿಸಬಹುದು ಎಂಬುದು ಐಎಸ್‌ಐ ಲೆಕ್ಕಾಚಾರವಾಗಿದೆ. ಪಾಕಿಸ್ತಾನದ ಐಎಸ್‌ಐ ಜತೆಗೆ ವಿದೇಶಿ ಎನ್‌ಜಿಒಗಳು ಕೂಡ ಬಾಂಗ್ಲಾದೇಶದ ಗಲಭೆಯ ಹಿಂದಿವೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bangladesh Protests: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ಮೃತರ ಸಂಖ್ಯೆ 98ಕ್ಕೆ ಏರಿಕೆ: ಭಾರತೀಯರಿಗೆ ಮುನ್ನೆಚ್ಚರಿಕೆ

Continue Reading
Advertisement
Woman Harassed
ಕರ್ನಾಟಕ16 mins ago

Woman Harassed: ರಸ್ತೆಯಲ್ಲಿ ಮಹಿಳೆಯನ್ನು ಹಗ್ ಮಾಡಿ ಕಿಸ್ ಕೊಟ್ಟಿದ್ದ ಕಾಮುಕ ಅರೆಸ್ಟ್

Sexual Abuse
Latest16 mins ago

Sexual Abuse: ತನ್ನ ಸ್ನೇಹಿತನ ಜತೆ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಒತ್ತಡ; ಇವನೆಂಥ ಗಂಡ!

Choosing the Right Pillow
ಲೈಫ್‌ಸ್ಟೈಲ್16 mins ago

Choosing The Right Pillow: ಸರಿಯಾದ ದಿಂಬನ್ನು ಆಯ್ಕೆ ಮಾಡುವುದು ಹೇಗೆ?

Karnataka weather Forecast
ಕರ್ನಾಟಕ20 mins ago

Karnataka Weather : ಬೆಂಗಳೂರಲ್ಲಿ ಸಂಜೆಗೆ ದಿಢೀರ್‌ ಗುಡುಗು ಸಹಿತ ಮಳೆ; ನೇತ್ರಾವತಿ, ಪಲ್ಗುಣಿ ನದಿ ತೀರ ಪ್ರದೇಶದಲ್ಲಿ ನೆರೆ

Shravana shopping 2024
ಫ್ಯಾಷನ್31 mins ago

Shravana Shopping 2024: ಮಾರುಕಟ್ಟೆಯಲ್ಲೀಗ ಶ್ರಾವಣದ ಟ್ರೆಂಡ್‌; ಶುರುವಾಗಿದೆ ಶಾಪಿಂಗ್‌ ಭರಾಟೆ

Sheikh Hasina
ದೇಶ39 mins ago

Sheikh Hasina: ಬಾಂಗ್ಲಾದಿಂದ ದೆಹಲಿಗೆ ಬಂದಿಳಿದ ಶೇಖ್‌ ಹಸೀನಾ; ಶೀಘ್ರದಲ್ಲೇ ಲಂಡನ್‌ಗೆ ಹಾರಾಟ?

Paris Olympics 2024
ಕ್ರೀಡೆ46 mins ago

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಅವ್ಯವಸ್ಥೆ; ಬೀದಿ ಬದಿ ಮಲಗಿ ನಿದ್ದೆ ಮಾಡಿದ ಚಿನ್ನದ ಪದಕ ವಿಜೇತ ಈಜುಪಟು

Bangladesh Protest
ವಿದೇಶ49 mins ago

‘ಭೂತಯ್ಯ’ನ ಮನೆಯಂತಾದ ಶೇಖ್‌ ಹಸೀನಾ ನಿವಾಸ; ಬಿರಿಯಾನಿ ತಿಂದು, ವಸ್ತುಗಳನ್ನು ಕದ್ದ ಪ್ರತಿಭಟನಾಕಾರರು, Videoಗಳು ಇವೆ

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಪದಕದ ಸ್ಪರ್ಧೆಗೆ ಅರ್ಹತೆ ಗಿಟ್ಟಿಸಿದ ಭಾರತದ ಶೂಟಿಂಗ್​ ಸ್ಕೀಟ್ ಮಿಶ್ರ ತಂಡ

Congress Protest
ಕರ್ನಾಟಕ1 hour ago

Congress Protest: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌