Congress Protest: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ - Vistara News

ಕರ್ನಾಟಕ

Congress Protest: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ

Congress Protest: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

Congress Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ (Congress Protest) ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ ವೇಳೆ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಷಣ್ಮುಖ ಸಿರಸಗಿ ಎಂಬಾತ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು‌ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ ಹೋರಾಟಗಾರರು ಪೆಟ್ರೋಲ್ ಕ್ಯಾನ್‌ ಕಸಿದುಕೊಂಡು ಅತನನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಿಂದ ಕೆಲ‌ಕಾಲ ಜಿಲ್ಲಾಧಿಕಾರಿ‌ ಕಚೇರಿ ಬಳಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಇದನ್ನೂ ಓದಿ | Sheikh Hasina: ರಾಜೀನಾಮೆ ನೀಡಿ ಶೇಖ್‌ ಹಸೀನಾ ವಿದೇಶಕ್ಕೆ ಪಲಾಯನ; ಸುರಕ್ಷತೆಗಾಗಿ ಭಾರತಕ್ಕೆ ಆಗಮನ?

K M Shivalinge Gowda: ಭಾಷಣದ ಭರದಲ್ಲಿ ಕಾಂಗ್ರೆಸ್‌ಗೇ ಬೈದ ಶಾಸಕ ಶಿವಲಿಂಗೇಗೌಡ! ವಿಡಿಯೊ ಇದೆ

ರಾಮನಗರ: ಭಾಷಣದ ಭರದಲ್ಲಿ ಕಾಂಗ್ರೆಸ್ ವಿರುದ್ಧವೇ ಸ್ವಪಕ್ಷ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಿಡಿಕಾರಿರುವ ಪ್ರಸಂಗ ಕಾರ್ಯಕ್ರಮವೊಂದರಲ್ಲಿ ನಡೆದಿದೆ. ಚನ್ನಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ (K M Shivalinge Gowda) ಅವರು, ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಪಕ್ಷವನ್ನೇ ಬೈದ್ದಿದ್ದಾರೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

ಜೆಡಿಎಸ್- ಬಿಜೆಪಿ ಪಕ್ಷದವರಿಗೆ ತಿರುಗೇಟು ನೀಡಲು ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಜನಾಂದೋಲನ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ, ಬಿಜೆಪಿ ಹಾಗೂ ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ, ತಾಕತ್ತು ಇದ್ರೆ, ನಾವು ಕೇಳೋ ಪ್ರಶ್ನೆಗೆ ಉತ್ತರ ಕೊಡಿ ಎಂದರು. ಬಾಯ್ತಪ್ಪಿ ಕಾಂಗ್ರೆಸ್‌ಗೆ ಬೈದಿರುವುದು ಗೊತ್ತಾದ ಮೇಲೆ, ಕ್ಷಮಿಸಿ ಜೆಡಿಎಸ್ – ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ ಎಂದಿದ್ದಾರೆ.

ಪಾದಯಾತ್ರೆ ಮೂಲಕ ರಾಜ್ಯದ ಜನರಿಗೆ ಸುಳ್ಳು ಹೇಳಲು ಬಿಜೆಪಿಯವರು ಹೊರಟಿದ್ದಾರೆ‌. ಜೆಡಿಎಸ್- ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡು ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದ್ದಾರೆ. ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಮರೆತು ಕೋಮುವಾದಿ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಬಿಜೆಪಿ ಅವರ ಪಾದದಡಿಯಲ್ಲಿ ಜೆಡಿಎಸ್‌ನವರು ಸೇರಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | BJP-JDS Padayatra: ಪಾದಯಾತ್ರೆ ವೇಳೆ ಹೃದಯಾಘಾತದಿಂದ ಬಿಜೆಪಿ ಕಾರ್ಯಕರ್ತೆ ಸಾವು

ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರಿಗೆ ಕಳಂಕ ತರಬೇಕು ಅಂತ ಪಾದಯಾತ್ರೆ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಸ್ವಚ್ಛತೆ, ಪ್ರಾಮಾಣಿಕತೆ ಇಟ್ಟುಕೊಂಡು ಇಷ್ಟು ವರ್ಷ ಸಿದ್ದರಾಮಯ್ಯ ರಾಜಕೀಯ ಮಾಡಿದ್ದಾರೆ. ಮೈಸೂರಿಗೆ ಹೋಗೊ ವರೆಗೂ ಇದೇ ರೀತಿ ಸಮಾವೇಶ ಮಾಡುತ್ತೇವೆ ಎಂದರು. ಈ ವೇಳೇ ಬಾಯ್ತಪ್ಪಿ ಬಿಜೆಪಿ ಹಾಗೂ ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ, ತಾಕತ್ತು ಇದ್ರೆ, ನಾವು ಕೇಳೊ ಪ್ರಶ್ನೆಗೆ ಉತ್ತರ ಕೊಡಿ ಎಂದು ಆಗ್ರಹಿಸಿದರು. ನಂತರ ಕ್ಷಮಿಸಿ, ಜೆಡಿಎಸ್ – ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

CM Siddaramaiah: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಭಾಗಶಃ ಹಾನಿಗೀಡಾದ ಮನೆಗಳಿಗೆ 6500 ರೂ. ಪರಿಹಾರವನ್ನು ನೀಡಬೇಕಾಗಿದೆ. ಆದರೆ ರಾಜ್ಯ ಸರ್ಕಾರ 50 ಸಾವಿರ ರೂ. ಪರಿಹಾರ ನೀಡುತ್ತಿದೆ. ಮಳೆಯಿಂದ ಹಾನಿಗೀಡಾದವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 43,500 ರೂ. ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ನೀಡುತ್ತಿದೆ. ಈ ಹಿಂದೆ ಪರಿಹಾರದ ವಿಷಯದಲ್ಲಿ ವಿವಿಧ ಮಾನದಂಡಗಳನ್ನು ಅನುಸರಿಸಲಾಗುತ್ತಿತ್ತು. ಈಗ ಏಕರೂಪದಲ್ಲಿ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ 17 ಜನರಿಗೆ ಪರಿಹಾರ ಒದಗಿಸಲಾಗಿದ್ದು, ಮನೆ ಹಾನಿಗೀಡಾದ ಎಲ್ಲರಿಗೂ ಆದಷ್ಟು ಬೇಗನೆ ಪರಿಹಾರ ಒದಗಿಸಲಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

VISTARANEWS.COM


on

CM Siddaramaiah instructs to provide immediate relief to those affected by heavy rains
Koo

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6 ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. ಸಾವಿಗೀಡಾದ ಒಂದು ಜಾನುವಾರಿಗೆ 37,500 ರೂಪಾಯಿ ಪರಿಹಾರ ನೀಡಲಾಗುತ್ತಿದೆ.

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 48 ಮನೆಗಳು ಪೂರ್ಣ ಹಾನಿಗೀಡಾಗಿದ್ದು, 950 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಈ ಹಿಂದೆ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಹಾನಿಗೆ ನೀಡಲಾದ ಪರಿಹಾರ ದುರುಪಯೋಗವಾದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ದುರುಪಯೋಗ ತಪ್ಪಿಸಲು ಪೂರ್ಣ ಮನೆ ಹಾನಿಗೀಡಾದವರಿಗೆ ರೂ. 1.20 ಲಕ್ಷ ನಗದು ಪರಿಹಾರ ನೀಡಲಾಗುತ್ತಿದ್ದು, ಇದರೊಂದಿಗೆ ಮನೆಯನ್ನು ಸಹ ನಿರ್ಮಿಸಿ ಕೊಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Paris Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಆ.6ರಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು…

ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಭಾಗಶ: ಹಾನಿಗೀಡಾದ ಮನೆಗಳಿಗೆ 6500 ರೂ. ಪರಿಹಾರವನ್ನು ನೀಡಬೇಕಾಗಿದೆ. ಆದರೆ ರಾಜ್ಯ ಸರ್ಕಾರ 50 ಸಾವಿರ ರೂ. ಪರಿಹಾರ ನೀಡುತ್ತಿದೆ. ಮಳೆಯಿಂದ ಹಾನಿಗೀಡಾದವರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 43,500 ರೂ. ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ನೀಡುತ್ತಿದೆ. ಈ ಹಿಂದೆ ಪರಿಹಾರದ ವಿಷಯದಲ್ಲಿ ವಿವಿಧ ಮಾನದಂಡಗಳನ್ನು ಅನುಸರಿಸಲಾಗುತ್ತಿತ್ತು. ಈಗ ಏಕರೂಪದಲ್ಲಿ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ 17 ಜನರಿಗೆ ಪರಿಹಾರ ಒದಗಿಸಲಾಗಿದ್ದು, ಮನೆ ಹಾನಿಗೀಡಾದ ಎಲ್ಲರಿಗೂ ಆದಷ್ಟು ಬೇಗನೆ ಪರಿಹಾರ ಒದಗಿಸಲಿದ್ದೇವೆ ಎಂದರು.

ಜಿಲ್ಲೆಯಲ್ಲಿ 41706 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆಗಳಿಗೆ ಹಾನಿ, 372 ಹೆಕ್ಟೇರ್‌ ತೋಟಗಾರಿಕಾ ಬೆಳೆ ಗಳಿಗೆ ಹಾನಿ ಸಂಭವಿಸಿದೆ. ಬೆಳೆ ಹಾನಿ ಬಗ್ಗೆ ಸಮರ್ಪಕವಾಗಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚಿಸಲಾಗಿದೆ. ಮಳೆಯಿಂದಾಗಿ 2962 ವಿದ್ಯುತ್‌ ಕಂಬಗಳು ಹಾನಿಗೀಡಾಗಿದ್ದು, ಆದಷ್ಟು ಬೇಗನೆ ವಿದ್ಯುತ್‌ ಕಂಬಗಳು ಮತ್ತು ಪರಿವರ್ತಕಗಳನ್ನು ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ.

ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳು, ಸೇತುವೆಗಳ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಳೆಯಿಂದಾಗಿ ಮುಳುಗಡೆಯಾಗುವ ಸಣ್ಣ ಸೇತುವೆಗಳನ್ನು ಎತ್ತರಿಸುವ ಬಗ್ಗೆ ತಾಂತ್ರಿಕ ವರದಿಯನ್ನು ಪಡೆಯಲಾಗುವುದು ಎಂದರು.

ಇದನ್ನೂ ಓದಿ: KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಕೊರತೆಯಿರುವುದಿಲ್ಲ. ತುರ್ತು ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ 48 ಕೋಟಿ ರೂ. ಅನುದಾನ ಲಭ್ಯವಿದ್ದು, ತಹಸೀಲ್ದಾರ್‌ ಖಾತೆಗಳಲ್ಲೂ ಅನುದಾನ ಲಭ್ಯವಿದೆ. ಅಗತ್ಯ ಬಿದ್ದರೆ ಇನ್ನಷ್ಟು ಪರಿಹಾರವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನೆರೆ ಹಾವಳಿಗೆ ತುತ್ತಾಗುವ ಗ್ರಾಮಗಳ ಸ್ಥಳಾಂತರ ಕುರಿತು ಸೂಕ್ತ ತೀರ್ಮಾನ

ಕೃಷ್ಣಾ ನದಿಯಲ್ಲಿ ಪ್ರವಾಹದಿಂದಾಗಿ ಪ್ರತಿ ಬಾರಿ ನೆರೆ ಹಾವಳಿಗೆ ತುತ್ತಾಗುವ ಗ್ರಾಮಗಳ ಜನರನ್ನು ಶಾಶ್ವತವಾಗಿ ಬೇರೆ ಕಡೆಗೆ ಸ್ಥಳಾಂತರಿಸುವ ಬೇಡಿಕೆ ಕುರಿತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ಕಾಗವಾಡ ತಾಲೂಕಿನ ಜೂಗಳ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಕೃಷ್ಣಾ ನದಿಯಲ್ಲಿ ಪ್ರವಾಹದಿಂದಾಗಿ ಕೆಲವು ಗ್ರಾಮಗಳು ನಿರಂತರವಾಗಿ ಸಮಸ್ಯೆ ಎದುರಿಸುತ್ತಿವೆ. ಶಹಾಪುರ, ಗಂಗಾವತಿ ಮತ್ತು ಜೂಗಳ ಗ್ರಾಮಗಳು ಪ್ರತಿ ಮಳೆಗಾಲದಲ್ಲಿ ಪ್ರವಾಹಕ್ಕೆ ತುತ್ತಾಗುತ್ತಿವೆ. ಈ ಗ್ರಾಮಗಳಲ್ಲಿ ಸುಮಾರು 3 ಸಾವಿರದಷ್ಟು ಕುಟುಂಬಗಳಿದ್ದು, ಇವರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ. ಈ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರಗೊಳಿಸುವ ಬಗ್ಗೆ ಒತ್ತಾಯವಿದೆ. ಆದರೆ ಒಮ್ಮೆ ಸ್ಥಳಾಂತರಗೊಂಡ ಬಳಿಕ ಮತ್ತೆ ಅಲ್ಲಿಗೆ ಬಂದು ನೆಲೆಸಬಾರದು. ಈ ಕುರಿತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲು ಆದಷ್ಟು ಬೇಗನೆ ಸಭೆ ಕರೆಯಲಾಗುವುದು ಎಂದು ಸಿಎಂ ಹೇಳಿದರು.

ಈ ಭಾಗದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಹಲವಾರು ಮಂದಿ ಸಂಕಷ್ಟ ಎದುರಿಸುತ್ತಿರುವುದನ್ನು ಗಮನಿಸಲಾಗಿದೆ. ಸಂಕಷ್ಟದಲ್ಲಿರುವವರಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ. ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: Beetroot Side Effects: ಬೀಟ್‌ರೂಟ್‌ ಎಲ್ಲರಿಗೂ ಒಳ್ಳೆಯದಲ್ಲ! ಯಾರು ಇದನ್ನು ತಿನ್ನಬಾರದು ಗೊತ್ತೇ?

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಇತರರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Urban local bodies: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ; ಇಲ್ಲಿದೆ ಪಟ್ಟಿ

Urban local bodies: ನಗರಸಭೆ, ಪುರಸಭೆ, ಪಟ್ಟಣಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಯಾವ ನಗರ ಸ್ಥಳೀಯ ಸಂಸ್ಥೆಯಲ್ಲಿ ಯಾರಿಗೆ ಮೀಸಲಾತಿ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Urban local bodies
Koo

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ನಗರ ಸ್ಥಳೀಯ ಸಂಸ್ಥೆಗಳಾದ (Urban local bodies) ನಗರಸಭೆ, ಪುರಸಭೆ, ಪಟ್ಟಣಸಭೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ (CMC, TMC, TP) ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ 2022ರ ಸೆ.12ರಂದು ರಾಜ್ಯ ಸರ್ಕಾರವು ಅಫಿಡವಿಟ್ ಮೂಲಕ ಸುಪ್ರೀಂ ಕೋರ್ಟ್‌ಗೆ ಮೀಸಲಾತಿ ಪಟ್ಟಿಯನ್ನು ಸಲ್ಲಿಸಿತ್ತು. ಈಗ, ಅದೇ ಪಟ್ಟಿಯ ಪ್ರಕಾರ ಮೀಸಲಾತಿಯನ್ನು ಸರ್ಕಾರವು ಹಂಚಿಕೆ ಮಾಡಿದೆ.

ನಗರಸಭೆ, ಪುರಸಭೆ, ಪಟ್ಟಣಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ. 61 ನಗರಸಭೆ, 123 ಪುರಸಭೆ, 117 ಪಟ್ಟಣ ಪಂಚಾಯಿತಿಗಳಿಗೆ ಮೀಸಲಾತಿ ಪ್ರಕಟಿಸಿದ್ದು, ಯಾವ ನಗರ ಸ್ಥಳೀಯ ಸಂಸ್ಥೆಯಲ್ಲಿ ಯಾರಿಗೆ ಮೀಸಲಾತಿ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

ನಗರಸಭೆ ಮೀಸಲಾತಿ ಪಟ್ಟಿ

ಪುರಸಭೆ ಮೀಸಲಾತಿ ಪಟ್ಟಿ

ಪಟ್ಟಣ ಪಂಚಾಯಿತಿ ಮೀಸಲಾತಿ ಪಟ್ಟಿ

ಇದನ್ನೂ ಓದಿ | Bangla Protest Explainer: ಬಾಂಗ್ಲಾದಲ್ಲಿ ಹಿಂಸೆ ಭುಗಿಲೆದ್ದಿದ್ದೇಕೆ? ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? ಮುಂದೇನು?

Continue Reading

ಕರ್ನಾಟಕ

Devara Movie: ಬಂದಿದೆ ʼದೇವರʼ ಸೆಕೆಂಡ್‌ ಸಾಂಗ್‌; ಕನ್ನಡದಲ್ಲೂ ಇದೆ ʼಸ್ವಾತಿಮುತ್ತೇ ಸಿಕ್ಕಂಗೈತೆʼ ರೊಮ್ಯಾಂಟಿಕ್‌ ಹಾಡು!

Devara Movie: ಟಾಲಿವುಡ್ ನಟ ಜೂನಿಯರ್‌ ಎನ್‌ಟಿಆರ್‌ ನಟನೆಯ ʼದೇವರʼ ಸಿನಿಮಾದ ಎರಡನೇ ಹಾಡು ಬಿಡುಗಡೆ ಆಗಿದೆ. ಅನಿರುದ್ಧ ರವಿಚಂದರ್‌ ಸಂಗೀತ ನೀಡಿರುವ, ಶಿಲ್ಪಾ ರಾವ್ ಕಂಠಸಿರಿಯಲ್ಲಿ ಸ್ವಾತಿಮುತ್ತೇ ಸಿಕ್ಕಂಗೈತೆ.. ಸಾಹಿತ್ಯವುಳ್ಳ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದ್ಧೂರಿ ಬಜೆಟ್‌ನ ಈ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಯುವಸುಧಾ ಆರ್ಟ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಲಾಗಿದೆ. ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ಕೆ. ಈ ಚಿತ್ರದ ನಿರ್ಮಾಪಕರು.

VISTARANEWS.COM


on

Tollywood actor Junior NTR starrer Devara movie second song release
Koo

ಬೆಂಗಳೂರು: ಟಾಲಿವುಡ್ ನಟ ಜೂನಿಯರ್‌ ಎನ್‌ಟಿಆರ್‌ ನಟನೆಯ ʼದೇವರʼ ಸಿನಿಮಾ (Devara Movie) ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಇದೀಗ ಇದೇ ಚಿತ್ರದ ಎರಡನೇ ಹಾಡು ಬಿಡುಗಡೆ ಆಗಿದೆ. ಅನಿರುದ್ಧ ರವಿಚಂದರ್‌ ಸಂಗೀತ ನೀಡಿರುವ, ಶಿಲ್ಪಾ ರಾವ್ ಕಂಠಸಿರಿಯಲ್ಲಿ ಸ್ವಾತಿಮುತ್ತೇ ಸಿಕ್ಕಂಗೈತೆ.. ಸಾಹಿತ್ಯವುಳ್ಳ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ.

ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದ್ಧೂರಿ ಬಜೆಟ್‌ನ ಈ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಯುವಸುಧಾ ಆರ್ಟ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಲಾಗಿದೆ. ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ಕೆ. ಈ ಚಿತ್ರದ ನಿರ್ಮಾಪಕರು. ದೇವರ ಸಿನಿಮಾ ಮೂಲಕ, ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌ ಸೌತ್‌ಗೆ ಎಂಟ್ರಿಕೊಟ್ಟಿದ್ದಾರೆ. ಖಳ ನಟನಾಗಿ ಸೈಫ್‌ ಅಲಿಖಾನ್‌ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Paris Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಆ.6ರಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು…

ಈಗಾಗಲೇ ಇದೇ ದೇವರ ಸಿನಿಮಾದಿಂದ ಫಿಯರ್‌ ಹಾಡು ಬಿಡುಗಡೆಯಾಗಿದೆ. ಆ ಹಾಡಿನ ಮೂಲಕ ಪ್ರಚಾರ ಕೆಲಸ ಆರಂಭಿಸಿದ್ದ ಚಿತ್ರತಂಡಕ್ಕೆ ಮೊದಲ ಹಾಡೇ ದೊಡ್ಡ ಆಹ್ವಾನ ನೀಡಿತ್ತು. ಇದೀಗ ಇದೇ ಸಿನಿಮಾದ ಅನಿರುದ್ಧ ರವಿಚಂದರ್‌ ಸಂಗೀತ ನೀಡಿರುವ ಎರಡನೇ ಹಾಡು ಬಿಡುಗಡೆಯಾಗಿದೆ. ಶಿಲ್ಪಾ ರಾವ್ ಕಂಠಸಿರಿಯಲ್ಲಿ ಸ್ವಾತಿಮುತ್ತೇ ಸಿಕ್ಕಂಗೈತೆ.. ಸಾಹಿತ್ಯವುಳ್ಳ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ.

ಈ ಹಾಡಿನಲ್ಲಿ ಜಾಹ್ನವಿ ಕಪೂರ್‌ ಗ್ಲಾಮರಸ್‌ ಅವತಾರದಲ್ಲಿ ಕಣ್ಮನ ಸೆಳೆದಿದ್ದಾರೆ. ಎನ್‌ಟಿಆರ್ ಮತ್ತು ಜಾಹ್ನವಿ ಜೋಡಿಯ ಕೆಮಿಸ್ಟ್ರಿಯೂ ನೋಡುಗರ ಕಣ್ಣರಳಿಸುವಂತಿದೆ. ವರದರಾಜ್‌ ಚಿಕ್ಕಬಳ್ಳಾಪುರ ಈ ಹಾಡಿಗೆ ಬಾಸ್ಕೋ ಮಾರ್ಟಿಸ್ ಅವರ ನೃತ್ಯ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ.

ಇದನ್ನೂ ಓದಿ: KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

ಈ ಹೈ-ಆಕ್ಟೇನ್ ದೇವರ ಸಿನಿಮಾ ಎರಡು ಭಾಗಗಳ ರಿಲೀಸ್‌ ಆಗಲಿದೆ, ಮೊದಲ ಭಾಗ ಸೆಪ್ಟೆಂಬರ್ 27 ರಂದು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂನಲ್ಲಿ ರಿಲೀಸ್‌ ಆಗಲಿದೆ. ಇನ್ನು ಸಿನಿಮಾದಲ್ಲಿ ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ ಮತ್ತು ನರೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶ್ರೀಕರ್ ಪ್ರಸಾದ್ ಸಂಕಲನ, ಆರ್.ರತ್ನವೇಲು ಛಾಯಾಗ್ರಹಣ, ಸಾಬು ಸಿರಿಲ್ ಪ್ರೊಡಕ್ಷನ್‌ ಡಿಸೈನ್‌ ಮಾಡಿದ್ದಾರೆ.

Continue Reading

ಸಿನಿಮಾ

Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

Martin Trailer: ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಇದೀಗ ಹಲವು ಭಾಷೆಗಳಲ್ಲಿ, ಮಾರ್ಟಿನ್‌ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಇನ್ನು ಧ್ರುವ ಸರ್ಜಾ ಆ್ಯಕ್ಷನ್‌ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

VISTARANEWS.COM


on

Martin Trailer
Koo

ಮುಂಬೈ: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ, ಪ್ಯಾನ್‌ ವರ್ಲ್ಡ್‌ ಸಿನಿಮಾ ಎಂದೇ ಖ್ಯಾತಿಯಾಗಿರುವ ಮಾರ್ಟಿನ್‌ ಸಿನಿಮಾದ ಟ್ರೈಲರ್‌ (Martin Trailer) ಮುಂಬೈನಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ಮುಂಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಸುದ್ದಿಗೋಷ್ಠಿಯಲ್ಲಿ, ದೇಶ-ವಿದೇಶಗಳ ಪತ್ರಕರ್ತರ ಸಮ್ಮುಖದಲ್ಲಿ ಮಾರ್ಟಿನ್‌ ಟ್ರೈಲರ್‌ ಔಟ್‌ ಆಗಿದೆ. ಪಾಕಿಸ್ತಾನದ ನೆಲದಲ್ಲಿ ಧ್ರುವ ಸರ್ಜಾ ಪ್ರದರ್ಶಿಸುವ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿ ಭಾರತದ ಹಲವು ರಾಜ್ಯಗಳು ಹಾಗೂ ಜಗತ್ತಿನ 22 ದೇಶಗಳ ಪತ್ರಕರ್ತರು, ಗಣ್ಯರ ಸಮ್ಮುಖದಲ್ಲಿ ಟ್ರೈಲರ್‌ಅನ್ನು ಲಾಂಚ್‌ ಮಾಡಲಾಗಿದೆ. ನಿರ್ದೇಶಕ ಎ.ಪಿ.ಅರ್ಜುನ್‌, ನಟ ಅರ್ಜುನ್‌ ಸರ್ಜಾ, ನಿರ್ಮಾಪಕ ಉದಯ್‌ ಮೆಹ್ತಾ ಸೇರಿ ಚಿತ್ರತಂಡದ ಹಲವರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕನ್ನಡ, ಹಿಂದಿ, ಮಲಯಾಳಂ, ತಮಿಳು ಸೇರಿ ಒಟ್ಟು 13 ಭಾಷೆಗಳಲ್ಲಿ ಮಾರ್ಟಿನ್‌ ಟ್ರೈಲರ್‌ ರಿಲೀಸ್‌ ಆಗಿದೆ. ಟ್ರೈಲರ್‌ ವೀಕ್ಷಿಸಿದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಭರಪೂರ ಆ್ಯಕ್ಷನ್‌ ದೃಶ್ಯಗಳು, ಭರ್ಜರಿ ಡೈಲಾಗ್‌, ಅಬ್ಬರದ ಫೈಟಿಂಗ್‌ಅನ್ನು ಸಿನಿಮಾ ಹೊಂದಿದೆ ಎಂಬ ದೊಡ್ಡ ಸಂದೇಶವನ್ನು ಸಿನಿಮಾ ತಂಡವು ಟ್ರೈಲರ್‌ ಮೂಲಕ ರವಾನಿಸಿದೆ. ಅಭಿಮಾನಿಗಳ ಆಸೆಯಂತೆ ಪೋಲಿಂಗ್ ಮೂಲಕ ಟ್ರೈಲರ್ ಆಯ್ಕೆ ಮಾಡಲಾಯಿತು. ಮುಂಬೈನ ಅಂಧೇರಿಯ ಪಿವಿಆರ್ ಸಿಟಿ‌ ಮಾಲ್‌ನಲ್ಲಿ ಮಾರ್ಟಿನ್ ಇಂಟರ್ ನ್ಯಾಷನಲ್ ಪ್ರೆಸ್‌ ಮೀಟ್‌ ನಡೆಯಿತು. ಜಪಾನ್‌, ಚೀನಾ, ಅಮೆರಿಕ, ದುಬೈ, ರಷ್ಯಾ, ಬ್ರಿಟನ್‌ ಸೇರಿ ಹಲವು ದೇಶಗಳ ಪತ್ರಕರ್ತರು ಭಾಗವಹಿಸಿದ್ದರು. ಅಕ್ಟೋಬರ್‌ 11ರಂದು ಸಿನಿಮಾ ಬಿಡುಗಡೆಯಾಗಲಿದೆ.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಈಗ ಹಲವು ಭಾಷೆಗಳಲ್ಲಿ, ಮಾರ್ಟಿನ್‌ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Dhruva Sarja:  ಧ್ರುವ ಸರ್ಜಾ ಕಂಡು ʻಡಿ ಬಾಸ್’ ಎಂದು ಕೂಗಿದ ದರ್ಶನ್ ಫ್ಯಾನ್ಸ್; ಭರದಿಂದ ಸಾಗಿದೆ ‘ಮಾರ್ಟಿನ್’ ಪ್ರಚಾರ!

Continue Reading
Advertisement
CM Siddaramaiah instructs to provide immediate relief to those affected by heavy rains
ಕರ್ನಾಟಕ29 mins ago

CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

ಪ್ರಮುಖ ಸುದ್ದಿ35 mins ago

Vinod Kambli : ಹದಗೆಟ್ಟಿದೆ ಮಾಜಿ ಕ್ರಿಕೆಟರ್​ ವಿನೋದ್ ಕಾಂಬ್ಳಿ ಆರೋಗ್ಯ ; ಸಚಿನ್ ಜತೆಗಾರನಿಗೆ ಈಗ ಕೈ ಹಿಡಿದುಕೊಂಡು ನಡೆಯುವ ಪರಿಸ್ಥಿತಿ!

Urban local bodies
ಪ್ರಮುಖ ಸುದ್ದಿ41 mins ago

Urban local bodies: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ; ಇಲ್ಲಿದೆ ಪಟ್ಟಿ

ವಿಸ್ತಾರ ಗ್ರಾಮ ದನಿ
ಪರಿಸರ46 mins ago

ವಿಸ್ತಾರ ಗ್ರಾಮ ದನಿ: ಪರಿಸರ ಸೂಕ್ಷ್ಮ ಪ್ರದೇಶದ ಅಧಿಸೂಚನೆ; ನಮ್ಮ ಶಾಸಕರು, ಸಂಸದರು, ಸಚಿವರು, ಅಧಿಕಾರಿಗಳು ಕೃಷಿಕರಿಗಾಗಿ ಏನು ಮಾಡಬಹುದು?

Taslima Nasrin
ವಿದೇಶ49 mins ago

Taslima Nasrin: ಇಸ್ಲಾಮಿಸ್ಟ್‌ಗಳನ್ನು ಬೆಳೆಯಲು ಬಿಟ್ಟಿದ್ದೇ ಬಾಂಗ್ಲಾ ದುಸ್ಥಿತಿಗೆ ಕಾರಣ; ತಸ್ಲೀಮಾ ನಸ್ರಿನ್‌ ಆಕ್ರೋಶ

Tollywood actor Junior NTR starrer Devara movie second song release
ಕರ್ನಾಟಕ55 mins ago

Devara Movie: ಬಂದಿದೆ ʼದೇವರʼ ಸೆಕೆಂಡ್‌ ಸಾಂಗ್‌; ಕನ್ನಡದಲ್ಲೂ ಇದೆ ʼಸ್ವಾತಿಮುತ್ತೇ ಸಿಕ್ಕಂಗೈತೆʼ ರೊಮ್ಯಾಂಟಿಕ್‌ ಹಾಡು!

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಕಂಚು ಕಳೆದುಕೊಂಡ ಲಕ್ಷ್ಯ ಸೇನ್​​; 2008ರ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಬ್ಯಾಡ್ಮಿಂಟನ್​ನಲ್ಲಿ ಪದಕವಿಲ್ಲ

shravan 2024
Latest2 hours ago

Shravan 2024: ಶ್ರಾವಣ ಮಾಸದಲ್ಲೇಕೆ ಮಾಂಸಾಹಾರ ಮಾಡಬಾರದು? ಇದಕ್ಕಿದೆ ವೈಜ್ಞಾನಿಕ ಕಾರಣ!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಆ.6ರಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು…

Viral Video
Latest2 hours ago

Viral Video: ಮಗನನ್ನೇ ಹೊಡೆದು ಕೊಂದು, ಸುಟ್ಟು ಹಾಕಿ ಕೊಳಕ್ಕೆ ಎಸೆದ ತಂದೆ-ತಾಯಿ; ಹೃದಯ ತಲ್ಲಣಿಸುವ ವಿಡಿಯೊ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌