Parliament Session: ಸಂಸತ್‌ನಲ್ಲಿ ಇಂದು ಹಣಕಾಸು ಪ್ರಸ್ತಾವನೆಗಳ ಮಸೂದೆ ಮಂಡನೆ; ಕ್ಷಣ ಕ್ಷಣದ ಮಾಹಿತಿಗೆ ಅಧಿವೇಶನದ Live ಇಲ್ಲಿ ನೋಡಿ - Vistara News

ರಾಜಕೀಯ

Parliament Session: ಸಂಸತ್‌ನಲ್ಲಿ ಇಂದು ಹಣಕಾಸು ಪ್ರಸ್ತಾವನೆಗಳ ಮಸೂದೆ ಮಂಡನೆ; ಕ್ಷಣ ಕ್ಷಣದ ಮಾಹಿತಿಗೆ ಅಧಿವೇಶನದ Live ಇಲ್ಲಿ ನೋಡಿ

Parliament Session: ಸಂಸತ್‌ನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದಲ್ಲಿ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2024-25ನೇ ಸಾಲಿನ ಹಣಕಾಸು ಪ್ರಸ್ತಾವನೆಗಳ ಮಸೂದೆ ಮಂಡಿಸಲಿದ್ದಾರೆ. ಇದರ ಜತೆಗೆ ಬಾಂಗ್ಲಾದೇಶದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟು ಸೇರಿದಂತೆ ಹಲವು ವಿಚಾರಗಳ ಕುರಿತು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೇಂದ್ರ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ನೋಡಿ.

VISTARANEWS.COM


on

Parliament Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಂಸತ್‌ನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನ (Parliament Session)ದಲ್ಲಿ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು 2024-25ನೇ ಸಾಲಿನ ಹಣಕಾಸು ಪ್ರಸ್ತಾವನೆಗಳ ಮಸೂದೆ ಮಂಡಿಸಲಿದ್ದಾರೆ. ಇದರ ಜತೆಗೆ ಬಾಂಗ್ಲಾದೇಶದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟು ಸೇರಿದಂತೆ ಹಲವು ವಿಚಾರಗಳ ಕುರಿತು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೇಂದ್ರ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಅಧಿವೇಶನ ಆರಂಭಕ್ಕೂ ಮುನ್ನ ಸಂಯುಕ್ತ ಕಿಸಾನ್‌ ಮೋರ್ಚಾ (Sanyukt Kisan Morcha) ಸಂಘಟನೆಯ ಸದಸ್ಯರು ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕರು ರಾಹುಲ್‌ ಗಾಂಧಿ ಬಳಿ ಸಮಾಲೋಚನೆ ನಡೆಸಲಿದ್ದಾರೆ. ಇದನ್ನು ರಾಹುಲ್‌ ಗಾಂಧಿ ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಂದ ಸುಮಾರು 140 ಲಕ್ಷ ಕೋಟಿ ರೂ.ಗಳ ವೆಚ್ಚದ ಬೇಡಿಕೆಗಳಿಗೆ ಲೋಕಸಭೆ ಸೋಮವಾರ ಅನುಮೋದನೆ ನೀಡಿದ್ದು, ಇದು 2024-25ರ ಬಜೆಟ್‌ನ ಶಾಸಕಾಂಗ ಪ್ರಕ್ರಿಯೆಯಲ್ಲಿ ಮಹತ್ವದ ಮೈಲಿಗಲ್ಲು ಎನಿಸಿಕೊಂಡಿದೆ.

ಕಳೆದ ವಾರ ಬಜೆಟ್ ಬಗ್ಗೆ ಚರ್ಚಿಸಿದ್ದ ಲೋಕಸಭೆ ಅನುದಾನ ಮತ್ತು ಧನವಿನಿಯೋಗ (ಸಂಖ್ಯೆ 2) ಮಸೂದೆ 2024ರ ಬೇಡಿಕೆಗಳನ್ನು ಅಂಗೀಕರಿಸಿದೆ. ಈ ಮಸೂದೆಯು 2024-25ರ ಹಣಕಾಸು ವರ್ಷಕ್ಕೆ ಭಾರತದ ಸಂಚಿತ ನಿಧಿಯಿಂದ ಕೆಲವು ಮೊತ್ತಗಳನ್ನು ಹಿಂಪಡೆಯಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ರೈಲ್ವೆ, ಶಿಕ್ಷಣ, ಆರೋಗ್ಯ ಮತ್ತು ಮೀನುಗಾರಿಕೆ ಎಂಬ ನಾಲ್ಕು ಸಚಿವಾಲಯಗಳಿಗೆ ಅನುದಾನದ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಈ ಅನುಮೋದನೆ ಲಭಿಸಿದೆ.

ಪ್ರತಿಭಟನೆಗೆ ಸಿದ್ಧತೆ

ಈ ಮಧ್ಯೆ ಆರೋಗ್ಯ ವಿಮಾ ಪಾಲಿಸಿಗಳ ಮೇಲಿನ ಜಿಎಸ್‌ಟಿಯನ್ನು ಕಡಿಮೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿ ಪ್ರತಿಪಕ್ಷಗಳು ಇಂದು ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಲಿವೆ. ಸೋಮವಾರ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಡೆರೆಕ್ ಒ’ಬ್ರಿಯಾನ್ ಈ ವಿಷಯವನ್ನು ಪ್ರಸ್ತಾವಿಸಿದ್ದರು. ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಒಬ್ರಿಯಾನ್, ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಈ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದ ಪತ್ರವನ್ನು ಉಲ್ಲೇಖಿಸಿದ್ದರು.

ಇದನ್ನೂ ಓದಿ: Bangladesh Protest: ಬಾಂಗ್ಲಾದೇಶ ಹಿಂಸಾಚಾರ ಕುರಿತು ಮೋದಿ ಮಹತ್ವದ ಸಭೆ; ಚರ್ಚಿಸಿದ ವಿಷಯಗಳೇನು?

ಸರ್ವಪಕ್ಷ ಸಭೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಮುನ್ನ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಯನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ತಾಳಿದ ಹಿನ್ನೆಲೆಯಲ್ಲಿ ಅಲ್ಲಿನ ಪ್ರಧಾನಿ ಶೇಕ್‌ ಹಸೀನಾ ರಾಜೀನಾಮೆ ನೀಡಿ ಪ್ರಾಣಭಯದಿಂದ ಭಾರತಕ್ಕೆ ಬಂದು ಆಶ್ರಯ ಪಡೆದಿದ್ದಾರೆ. ಈ ಘಟನೆಯ ಬಳಿಕ ಭಾರತದ ಮೇಲೆ ಇದು ಬೀರುವ ಪರಿಣಾಮದ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಈ ಸಭೆ ಕರೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

MUDA scam: ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ.
ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

VISTARANEWS.COM


on

MUDA scam
Koo

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.

ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಸಿಎಂಗೆ ಪ್ರಾಸಿಕ್ಯೂಷನ್‌ ಭಯ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

thawar chand gehlot cm siddaramaiah Governor versus state
thawar chand gehlot cm siddaramaiah Governor versus state

ಬೆಂಗಳೂರು: ಬಹುಕೋಟಿ ಮುಡಾ ಹಗರಣ (MUDA Scam) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮೂರನೇ ನೋಟೀಸ್ (Notice) ಅನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thawar Chand Gehlot) ಜಾರಿ ಮಾಡಿದ್ದಾರೆ.

ಮೊದಲ ನೋಟೀಸ್ ಅನ್ನು ಜುಲೈ ಮೂರನೇ ವಾರದಲ್ಲಿ ಜಾರಿ ಮಾಡಿದ್ದ ರಾಜ್ಯಪಾಲರು, ಬಂದು ಮಾಹಿತಿ ಕೊಡುವಂತೆ ಸೂಚಿಸಿದ್ದರು. ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕವಾಗಿ ಚರ್ಚೆ ಆಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕೊಡುವಂತೆ ಸೂಚಿಸಿದ್ದರು.

ಜುಲೈ 26ನೇ ತಾರೀಕು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿದ ದೂರು ಆಧರಿಸಿ ಎರಡನೇ ನೋಟೀಸ್ ಕಳಿಸಲಾಗಿತ್ತು. ಅಬ್ರಹಾಂ ಸಲ್ಲಿಸಿದ್ದ ದೂರಿನಲ್ಲಿ, ಈ ಪ್ರಕರಣವನ್ನು ಪ್ರಾಸಿಕ್ಯೂಶನ್‌ಗೆ ಯಾಕೆ ಕೊಡಬಾರದು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್ ಶೋಕಾಸ್ ನೋಟೀಸ್ ನೀಡಿದ್ದರು.

ಆಗಸ್ಟ್ 5ನೇ ತಾರೀಕು ರಾಜ್ಯಪಾಲರು ಮೂರನೇ ನೋಟೀಸ್ ಜಾರಿ ಮಾಡಿದ್ದಾರೆ. ಕಳೆದ ವಾರ ಕ್ಯಾಬಿನೆಟ್‌ ಸಭೆಯಲ್ಲಿ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದ ಸಂಪುಟ, ನೋಟೀಸ್‌ ಹಿಂಪಡೆಯುವಂತೆ ಹೇಳಿತ್ತು. ಹೀಗಾಗಿ ಮತ್ತೆ ಕೇಸ್‌ನಲ್ಲಿ ಕ್ಲಾರಿಫಿಕೇಷನ್ ಕೊಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

ರಾಜ್ಯಪಾಲರು ಪದೇ ಪದೆ ನೋಟೀಸ್ ಕೊಡುತ್ತಿರುವುದೇಕೆ?

ಈ ಹಿಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರಕರಣದಲ್ಲಿ ಆದುದೇ ರಾಜ್ಯಪಾಲರ ಈಗಿನ ನಡೆಗೆ ಕಾರಣ ಎನ್ನಲಾಗಿದೆ. ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಆದೇಶವನ್ನು ಯಡಿಯೂರಪ್ಪ ಪ್ರಶ್ನೆ ಮಾಡಿದ್ದರು. ರಾಜ್ಯಪಾಲರು ಅನುಮತಿ ಕೊಡುವಾಗ ಆರೋಪದ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆಯನ್ನು ಸರಿಯಾಗಿ ನಡೆಸಿಲ್ಲ. ಆತುರಾತುರವಾಗಿ ನಿರ್ಧಾರ ಮಾಡಿ ನೋಟೀಸ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವನ್ನು ಅಭದ್ರ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಹೀಗಾಗಿ ಪೊಲಿಟಿಕಲ್ ಮೈಲೇಜ್ ಪಡೆಯಲು ಈ ನಿರ್ಧಾರ ಮಾಡಿದ್ದರು ಎಂದು ಯಡಿಯೂರಪ್ಪ ವಾದ ಮಾಡಿದ್ದರು. ಯಡಿಯೂರಪ್ಪ ವಾದವನ್ನು ಹೈಕೋರ್ಟ್ ಒಪ್ಪಿತ್ತು. ಜನಪ್ರತಿನಿಧಿಗಳ ಸರ್ಕಾರದ ನೇತೃತ್ವ ವಹಿಸಿರುವವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಡುವಾಗ ಮೂರು ಬಾರಿ ನೋಟೀಸ್ ಹಾಗೂ ಮೂರು ಬಾರಿ ಲೀಗಲ್ ಓಪಿನಿಯನ್ ಪಡೆದು ಮುಂದುವರಿಯಬೇಕು ಎಂದು ಹೈಕೋರ್ಟ್ ಆದೇಶ ಮಾಡಿತ್ತು. ನಂತರ ಯಡಿಯೂರಪ್ಪ ಈ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದರು.

ಇದನ್ನೂ ಓದಿ: CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಆರೋಪ ಕೇಳಿ ಬಂದಿರುವುದರಿಂದ, ಕಾನೂನು ಪ್ರಕ್ರಿಯೆ ಮಾಡುವಾಗ ಯಾವುದೇ ಲೋಪ ಆಗದಂತೆ ರಾಜ್ಯಪಾಲರು ಪದೇ ಪದೆ ನೋಟೀಸ್ ನೀಡುತ್ತಿದ್ದಾರೆ. ನಿನ್ನೆ ದೆಹಲಿಯಿಂದ ರಾಜ್ಯಕ್ಕೆ ಮರಳಿರುವ ರಾಜ್ಯಪಾಲರು ಲೀಗಲ್‌ ಪ್ರಕ್ರಿಯೆ ಚುರುಕುಗೊಳಿಸಿದ್ದಾರೆ. ಇದಕ್ಕೆ ಕ್ಯಾಬಿನೆಟ್‌ ಹಾಗೂ ಮುಖ್ಯಮಂತ್ರಿಗಳ ಕಡೆಯಿಂದ ಪ್ರತಿಕ್ರಿಯೆ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ವಾರವಿಡೀ ಮುಖ್ಯಮಂತ್ರಿಗಳು ಕಾನೂನು ತಜ್ಞರು, ವಕೀಲರ ಜೊತೆಗೆ ಈ ವಿಚಾರವನ್ನು ಚರ್ಚಿಸಿದ್ದರು. ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ಗೆ ತೆರಳುವ ಸಾಧ್ಯತೆ ಇದೆ.

Continue Reading

ಪ್ರಮುಖ ಸುದ್ದಿ

CM Siddaramaiah: ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

CM Siddaramaiah: ಆಗಸ್ಟ್ 5ನೇ ತಾರೀಕು ರಾಜ್ಯಪಾಲರು ಮೂರನೇ ನೋಟೀಸ್ ಜಾರಿ ಮಾಡಿದ್ದಾರೆ. ಕಳೆದ ವಾರ ಕ್ಯಾಬಿನೆಟ್‌ ಸಭೆಯಲ್ಲಿ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದ ಸಂಪುಟ, ನೋಟೀಸ್‌ ಹಿಂಪಡೆಯುವಂತೆ ಹೇಳಿತ್ತು. ಹೀಗಾಗಿ ಮತ್ತೆ ಕೇಸ್‌ನಲ್ಲಿ ಕ್ಲಾರಿಫಿಕೇಷನ್ ಕೊಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

VISTARANEWS.COM


on

thawar chand gehlot cm siddaramaiah Governor versus state
Koo

ಬೆಂಗಳೂರು: ಬಹುಕೋಟಿ ಮುಡಾ ಹಗರಣ (MUDA Scam) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮೂರನೇ ನೋಟೀಸ್ (Notice) ಅನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thawar Chand Gehlot) ಜಾರಿ ಮಾಡಿದ್ದಾರೆ.

ಮೊದಲ ನೋಟೀಸ್ ಅನ್ನು ಜುಲೈ ಮೂರನೇ ವಾರದಲ್ಲಿ ಜಾರಿ ಮಾಡಿದ್ದ ರಾಜ್ಯಪಾಲರು, ಬಂದು ಮಾಹಿತಿ ಕೊಡುವಂತೆ ಸೂಚಿಸಿದ್ದರು. ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕವಾಗಿ ಚರ್ಚೆ ಆಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕೊಡುವಂತೆ ಸೂಚಿಸಿದ್ದರು.

ಜುಲೈ 26ನೇ ತಾರೀಕು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿದ ದೂರು ಆಧರಿಸಿ ಎರಡನೇ ನೋಟೀಸ್ ಕಳಿಸಲಾಗಿತ್ತು. ಅಬ್ರಹಾಂ ಸಲ್ಲಿಸಿದ್ದ ದೂರಿನಲ್ಲಿ, ಈ ಪ್ರಕರಣವನ್ನು ಪ್ರಾಸಿಕ್ಯೂಶನ್‌ಗೆ ಯಾಕೆ ಕೊಡಬಾರದು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್ ಶೋಕಾಸ್ ನೋಟೀಸ್ ನೀಡಿದ್ದರು.

ಆಗಸ್ಟ್ 5ನೇ ತಾರೀಕು ರಾಜ್ಯಪಾಲರು ಮೂರನೇ ನೋಟೀಸ್ ಜಾರಿ ಮಾಡಿದ್ದಾರೆ. ಕಳೆದ ವಾರ ಕ್ಯಾಬಿನೆಟ್‌ ಸಭೆಯಲ್ಲಿ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದ ಸಂಪುಟ, ನೋಟೀಸ್‌ ಹಿಂಪಡೆಯುವಂತೆ ಹೇಳಿತ್ತು. ಹೀಗಾಗಿ ಮತ್ತೆ ಕೇಸ್‌ನಲ್ಲಿ ಕ್ಲಾರಿಫಿಕೇಷನ್ ಕೊಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

ರಾಜ್ಯಪಾಲರು ಪದೇ ಪದೆ ನೋಟೀಸ್ ಕೊಡುತ್ತಿರುವುದೇಕೆ?

ಈ ಹಿಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರಕರಣದಲ್ಲಿ ಆದುದೇ ರಾಜ್ಯಪಾಲರ ಈಗಿನ ನಡೆಗೆ ಕಾರಣ ಎನ್ನಲಾಗಿದೆ. ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಆದೇಶವನ್ನು ಯಡಿಯೂರಪ್ಪ ಪ್ರಶ್ನೆ ಮಾಡಿದ್ದರು. ರಾಜ್ಯಪಾಲರು ಅನುಮತಿ ಕೊಡುವಾಗ ಆರೋಪದ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆಯನ್ನು ಸರಿಯಾಗಿ ನಡೆಸಿಲ್ಲ. ಆತುರಾತುರವಾಗಿ ನಿರ್ಧಾರ ಮಾಡಿ ನೋಟೀಸ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವನ್ನು ಅಭದ್ರ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಹೀಗಾಗಿ ಪೊಲಿಟಿಕಲ್ ಮೈಲೇಜ್ ಪಡೆಯಲು ಈ ನಿರ್ಧಾರ ಮಾಡಿದ್ದರು ಎಂದು ಯಡಿಯೂರಪ್ಪ ವಾದ ಮಾಡಿದ್ದರು. ಯಡಿಯೂರಪ್ಪ ವಾದವನ್ನು ಹೈಕೋರ್ಟ್ ಒಪ್ಪಿತ್ತು. ಜನಪ್ರತಿನಿಧಿಗಳ ಸರ್ಕಾರದ ನೇತೃತ್ವ ವಹಿಸಿರುವವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಡುವಾಗ ಮೂರು ಬಾರಿ ನೋಟೀಸ್ ಹಾಗೂ ಮೂರು ಬಾರಿ ಲೀಗಲ್ ಓಪಿನಿಯನ್ ಪಡೆದು ಮುಂದುವರಿಯಬೇಕು ಎಂದು ಹೈಕೋರ್ಟ್ ಆದೇಶ ಮಾಡಿತ್ತು. ನಂತರ ಯಡಿಯೂರಪ್ಪ ಈ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದರು.

ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಆರೋಪ ಕೇಳಿ ಬಂದಿರುವುದರಿಂದ, ಕಾನೂನು ಪ್ರಕ್ರಿಯೆ ಮಾಡುವಾಗ ಯಾವುದೇ ಲೋಪ ಆಗದಂತೆ ರಾಜ್ಯಪಾಲರು ಪದೇ ಪದೆ ನೋಟೀಸ್ ನೀಡುತ್ತಿದ್ದಾರೆ. ನಿನ್ನೆ ದೆಹಲಿಯಿಂದ ರಾಜ್ಯಕ್ಕೆ ಮರಳಿರುವ ರಾಜ್ಯಪಾಲರು ಲೀಗಲ್‌ ಪ್ರಕ್ರಿಯೆ ಚುರುಕುಗೊಳಿಸಿದ್ದಾರೆ. ಇದಕ್ಕೆ ಕ್ಯಾಬಿನೆಟ್‌ ಹಾಗೂ ಮುಖ್ಯಮಂತ್ರಿಗಳ ಕಡೆಯಿಂದ ಪ್ರತಿಕ್ರಿಯೆ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ವಾರವಿಡೀ ಮುಖ್ಯಮಂತ್ರಿಗಳು ಕಾನೂನು ತಜ್ಞರು, ವಕೀಲರ ಜೊತೆಗೆ ಈ ವಿಚಾರವನ್ನು ಚರ್ಚಿಸಿದ್ದರು. ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ಗೆ ತೆರಳುವ ಸಾಧ್ಯತೆ ಇದೆ.

ಇದನ್ನೂ ಓದಿ: CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

Continue Reading

ಪ್ರಮುಖ ಸುದ್ದಿ

Urban local bodies: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ; ಇಲ್ಲಿದೆ ಪಟ್ಟಿ

Urban local bodies: ನಗರಸಭೆ, ಪುರಸಭೆ, ಪಟ್ಟಣಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಯಾವ ನಗರ ಸ್ಥಳೀಯ ಸಂಸ್ಥೆಯಲ್ಲಿ ಯಾರಿಗೆ ಮೀಸಲಾತಿ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Urban local bodies
Koo

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ನಗರ ಸ್ಥಳೀಯ ಸಂಸ್ಥೆಗಳಾದ (Urban local bodies) ನಗರಸಭೆ, ಪುರಸಭೆ, ಪಟ್ಟಣಸಭೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ (CMC, TMC, TP) ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ 2022ರ ಸೆ.12ರಂದು ರಾಜ್ಯ ಸರ್ಕಾರವು ಅಫಿಡವಿಟ್ ಮೂಲಕ ಸುಪ್ರೀಂ ಕೋರ್ಟ್‌ಗೆ ಮೀಸಲಾತಿ ಪಟ್ಟಿಯನ್ನು ಸಲ್ಲಿಸಿತ್ತು. ಈಗ, ಅದೇ ಪಟ್ಟಿಯ ಪ್ರಕಾರ ಮೀಸಲಾತಿಯನ್ನು ಸರ್ಕಾರವು ಹಂಚಿಕೆ ಮಾಡಿದೆ.

ನಗರಸಭೆ, ಪುರಸಭೆ, ಪಟ್ಟಣಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ. 61 ನಗರಸಭೆ, 123 ಪುರಸಭೆ, 117 ಪಟ್ಟಣ ಪಂಚಾಯಿತಿಗಳಿಗೆ ಮೀಸಲಾತಿ ಪ್ರಕಟಿಸಿದ್ದು, ಯಾವ ನಗರ ಸ್ಥಳೀಯ ಸಂಸ್ಥೆಯಲ್ಲಿ ಯಾರಿಗೆ ಮೀಸಲಾತಿ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

ನಗರಸಭೆ ಮೀಸಲಾತಿ ಪಟ್ಟಿ

ಪುರಸಭೆ ಮೀಸಲಾತಿ ಪಟ್ಟಿ

ಪಟ್ಟಣ ಪಂಚಾಯಿತಿ ಮೀಸಲಾತಿ ಪಟ್ಟಿ

ಇದನ್ನೂ ಓದಿ | Bangla Protest Explainer: ಬಾಂಗ್ಲಾದಲ್ಲಿ ಹಿಂಸೆ ಭುಗಿಲೆದ್ದಿದ್ದೇಕೆ? ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? ಮುಂದೇನು?

Continue Reading

ಕರ್ನಾಟಕ

Congress Protest: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ

Congress Protest: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

Congress Protest
Koo

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ (Congress Protest) ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ ವೇಳೆ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಷಣ್ಮುಖ ಸಿರಸಗಿ ಎಂಬಾತ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು‌ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ ಹೋರಾಟಗಾರರು ಪೆಟ್ರೋಲ್ ಕ್ಯಾನ್‌ ಕಸಿದುಕೊಂಡು ಅತನನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಿಂದ ಕೆಲ‌ಕಾಲ ಜಿಲ್ಲಾಧಿಕಾರಿ‌ ಕಚೇರಿ ಬಳಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಇದನ್ನೂ ಓದಿ | Sheikh Hasina: ರಾಜೀನಾಮೆ ನೀಡಿ ಶೇಖ್‌ ಹಸೀನಾ ವಿದೇಶಕ್ಕೆ ಪಲಾಯನ; ಸುರಕ್ಷತೆಗಾಗಿ ಭಾರತಕ್ಕೆ ಆಗಮನ?

K M Shivalinge Gowda: ಭಾಷಣದ ಭರದಲ್ಲಿ ಕಾಂಗ್ರೆಸ್‌ಗೇ ಬೈದ ಶಾಸಕ ಶಿವಲಿಂಗೇಗೌಡ! ವಿಡಿಯೊ ಇದೆ

ರಾಮನಗರ: ಭಾಷಣದ ಭರದಲ್ಲಿ ಕಾಂಗ್ರೆಸ್ ವಿರುದ್ಧವೇ ಸ್ವಪಕ್ಷ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಿಡಿಕಾರಿರುವ ಪ್ರಸಂಗ ಕಾರ್ಯಕ್ರಮವೊಂದರಲ್ಲಿ ನಡೆದಿದೆ. ಚನ್ನಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ (K M Shivalinge Gowda) ಅವರು, ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಪಕ್ಷವನ್ನೇ ಬೈದ್ದಿದ್ದಾರೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

ಜೆಡಿಎಸ್- ಬಿಜೆಪಿ ಪಕ್ಷದವರಿಗೆ ತಿರುಗೇಟು ನೀಡಲು ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಜನಾಂದೋಲನ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ, ಬಿಜೆಪಿ ಹಾಗೂ ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ, ತಾಕತ್ತು ಇದ್ರೆ, ನಾವು ಕೇಳೋ ಪ್ರಶ್ನೆಗೆ ಉತ್ತರ ಕೊಡಿ ಎಂದರು. ಬಾಯ್ತಪ್ಪಿ ಕಾಂಗ್ರೆಸ್‌ಗೆ ಬೈದಿರುವುದು ಗೊತ್ತಾದ ಮೇಲೆ, ಕ್ಷಮಿಸಿ ಜೆಡಿಎಸ್ – ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ ಎಂದಿದ್ದಾರೆ.

ಪಾದಯಾತ್ರೆ ಮೂಲಕ ರಾಜ್ಯದ ಜನರಿಗೆ ಸುಳ್ಳು ಹೇಳಲು ಬಿಜೆಪಿಯವರು ಹೊರಟಿದ್ದಾರೆ‌. ಜೆಡಿಎಸ್- ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡು ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದ್ದಾರೆ. ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಮರೆತು ಕೋಮುವಾದಿ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಬಿಜೆಪಿ ಅವರ ಪಾದದಡಿಯಲ್ಲಿ ಜೆಡಿಎಸ್‌ನವರು ಸೇರಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | BJP-JDS Padayatra: ಪಾದಯಾತ್ರೆ ವೇಳೆ ಹೃದಯಾಘಾತದಿಂದ ಬಿಜೆಪಿ ಕಾರ್ಯಕರ್ತೆ ಸಾವು

ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರಿಗೆ ಕಳಂಕ ತರಬೇಕು ಅಂತ ಪಾದಯಾತ್ರೆ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಸ್ವಚ್ಛತೆ, ಪ್ರಾಮಾಣಿಕತೆ ಇಟ್ಟುಕೊಂಡು ಇಷ್ಟು ವರ್ಷ ಸಿದ್ದರಾಮಯ್ಯ ರಾಜಕೀಯ ಮಾಡಿದ್ದಾರೆ. ಮೈಸೂರಿಗೆ ಹೋಗೊ ವರೆಗೂ ಇದೇ ರೀತಿ ಸಮಾವೇಶ ಮಾಡುತ್ತೇವೆ ಎಂದರು. ಈ ವೇಳೇ ಬಾಯ್ತಪ್ಪಿ ಬಿಜೆಪಿ ಹಾಗೂ ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ, ತಾಕತ್ತು ಇದ್ರೆ, ನಾವು ಕೇಳೊ ಪ್ರಶ್ನೆಗೆ ಉತ್ತರ ಕೊಡಿ ಎಂದು ಆಗ್ರಹಿಸಿದರು. ನಂತರ ಕ್ಷಮಿಸಿ, ಜೆಡಿಎಸ್ – ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ ಎಂದು ಆಕ್ರೋಶ ಹೊರಹಾಕಿದ್ದಾರೆ.

Continue Reading
Advertisement
Hasin Jahan
ಕ್ರೀಡೆ7 mins ago

Hasin Jahan: ಮೊಹಮ್ಮದ್​ ಶಮಿ ಕುಟುಂಬದ ವಿರುದ್ಧ ವ್ಯಂಗ್ಯವಾಡಿದ ವಿಚ್ಛೇದಿತ ಪತ್ನಿ

Unique Village
Latest16 mins ago

Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ!

C Kannada movie release on August 23
ಕರ್ನಾಟಕ38 mins ago

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Bangladesh Protest
ಪ್ರಮುಖ ಸುದ್ದಿ39 mins ago

Bangladesh Protest : ಆಘಾತಕಾರಿ ಬೆಳವಣಿಗೆ; ಬಾಂಗ್ಲಾದಲ್ಲಿ ಹಿಂದೂಗಳಿಗೆ ಜೀವ ಬೆದರಿಕೆ; ಕಣ್ಣೀರಿಡುತ್ತಿದ್ದಾರೆ ಮಹಿಳೆಯರು…

Gruha Lakshmi Scheme
ಪ್ರಮುಖ ಸುದ್ದಿ41 mins ago

Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

Murder Case
Latest44 mins ago

Murder Case: ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದು ಕೊಳಕ್ಕೆ ಎಸೆದ ಮಗಳು!

Bangladesh Protest
ದೇಶ46 mins ago

Bangladesh Protest: ಬಾಂಗ್ಲಾದೇಶದಲ್ಲಿನ ಹಿಂಸಾಚಾರದ ಹಿಂದೆ ಬೇರೆ ದೇಶಗಳ ಕೈವಾಡವಿದೆಯೇ?; ರಾಹುಲ್‌ ಗಾಂಧಿ ಪ್ರಶ್ನೆ

Self Harming
ಚಿತ್ರದುರ್ಗ48 mins ago

Self Harming: ಹೊಸದುರ್ಗದಲ್ಲಿ ಬ್ಯಾಂಕ್‌ ಆಫೀಸರ್‌ ಸೂಸೈಡ್‌; ರೈಲಿಗೆ ಸಿಲುಕಿ ಮತ್ತಿಬ್ಬರು ಸಾವು

Karnataka Trains
Latest53 mins ago

Konkan Railway: ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ಆ. 8ರವರೆಗೆ ರದ್ದು

Sharan Prakash Patil
ಬೆಂಗಳೂರು1 hour ago

Sharan Prakash Patil: ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ : ಸಚಿವ ಶರಣಪ್ರಕಾಶ್‌ ಪಾಟೀಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌