MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು - Vistara News

ಕರ್ನಾಟಕ

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

MUDA scam: ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ.
ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

VISTARANEWS.COM


on

MUDA scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.

ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಸಿಎಂಗೆ ಪ್ರಾಸಿಕ್ಯೂಷನ್‌ ಭಯ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

thawar chand gehlot cm siddaramaiah Governor versus state
thawar chand gehlot cm siddaramaiah Governor versus state

ಬೆಂಗಳೂರು: ಬಹುಕೋಟಿ ಮುಡಾ ಹಗರಣ (MUDA Scam) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮೂರನೇ ನೋಟೀಸ್ (Notice) ಅನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thawar Chand Gehlot) ಜಾರಿ ಮಾಡಿದ್ದಾರೆ.

ಮೊದಲ ನೋಟೀಸ್ ಅನ್ನು ಜುಲೈ ಮೂರನೇ ವಾರದಲ್ಲಿ ಜಾರಿ ಮಾಡಿದ್ದ ರಾಜ್ಯಪಾಲರು, ಬಂದು ಮಾಹಿತಿ ಕೊಡುವಂತೆ ಸೂಚಿಸಿದ್ದರು. ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕವಾಗಿ ಚರ್ಚೆ ಆಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕೊಡುವಂತೆ ಸೂಚಿಸಿದ್ದರು.

ಜುಲೈ 26ನೇ ತಾರೀಕು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿದ ದೂರು ಆಧರಿಸಿ ಎರಡನೇ ನೋಟೀಸ್ ಕಳಿಸಲಾಗಿತ್ತು. ಅಬ್ರಹಾಂ ಸಲ್ಲಿಸಿದ್ದ ದೂರಿನಲ್ಲಿ, ಈ ಪ್ರಕರಣವನ್ನು ಪ್ರಾಸಿಕ್ಯೂಶನ್‌ಗೆ ಯಾಕೆ ಕೊಡಬಾರದು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್ ಶೋಕಾಸ್ ನೋಟೀಸ್ ನೀಡಿದ್ದರು.

ಆಗಸ್ಟ್ 5ನೇ ತಾರೀಕು ರಾಜ್ಯಪಾಲರು ಮೂರನೇ ನೋಟೀಸ್ ಜಾರಿ ಮಾಡಿದ್ದಾರೆ. ಕಳೆದ ವಾರ ಕ್ಯಾಬಿನೆಟ್‌ ಸಭೆಯಲ್ಲಿ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದ ಸಂಪುಟ, ನೋಟೀಸ್‌ ಹಿಂಪಡೆಯುವಂತೆ ಹೇಳಿತ್ತು. ಹೀಗಾಗಿ ಮತ್ತೆ ಕೇಸ್‌ನಲ್ಲಿ ಕ್ಲಾರಿಫಿಕೇಷನ್ ಕೊಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

ರಾಜ್ಯಪಾಲರು ಪದೇ ಪದೆ ನೋಟೀಸ್ ಕೊಡುತ್ತಿರುವುದೇಕೆ?

ಈ ಹಿಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರಕರಣದಲ್ಲಿ ಆದುದೇ ರಾಜ್ಯಪಾಲರ ಈಗಿನ ನಡೆಗೆ ಕಾರಣ ಎನ್ನಲಾಗಿದೆ. ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಆದೇಶವನ್ನು ಯಡಿಯೂರಪ್ಪ ಪ್ರಶ್ನೆ ಮಾಡಿದ್ದರು. ರಾಜ್ಯಪಾಲರು ಅನುಮತಿ ಕೊಡುವಾಗ ಆರೋಪದ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆಯನ್ನು ಸರಿಯಾಗಿ ನಡೆಸಿಲ್ಲ. ಆತುರಾತುರವಾಗಿ ನಿರ್ಧಾರ ಮಾಡಿ ನೋಟೀಸ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವನ್ನು ಅಭದ್ರ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಹೀಗಾಗಿ ಪೊಲಿಟಿಕಲ್ ಮೈಲೇಜ್ ಪಡೆಯಲು ಈ ನಿರ್ಧಾರ ಮಾಡಿದ್ದರು ಎಂದು ಯಡಿಯೂರಪ್ಪ ವಾದ ಮಾಡಿದ್ದರು. ಯಡಿಯೂರಪ್ಪ ವಾದವನ್ನು ಹೈಕೋರ್ಟ್ ಒಪ್ಪಿತ್ತು. ಜನಪ್ರತಿನಿಧಿಗಳ ಸರ್ಕಾರದ ನೇತೃತ್ವ ವಹಿಸಿರುವವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಡುವಾಗ ಮೂರು ಬಾರಿ ನೋಟೀಸ್ ಹಾಗೂ ಮೂರು ಬಾರಿ ಲೀಗಲ್ ಓಪಿನಿಯನ್ ಪಡೆದು ಮುಂದುವರಿಯಬೇಕು ಎಂದು ಹೈಕೋರ್ಟ್ ಆದೇಶ ಮಾಡಿತ್ತು. ನಂತರ ಯಡಿಯೂರಪ್ಪ ಈ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದರು.

ಇದನ್ನೂ ಓದಿ: CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಆರೋಪ ಕೇಳಿ ಬಂದಿರುವುದರಿಂದ, ಕಾನೂನು ಪ್ರಕ್ರಿಯೆ ಮಾಡುವಾಗ ಯಾವುದೇ ಲೋಪ ಆಗದಂತೆ ರಾಜ್ಯಪಾಲರು ಪದೇ ಪದೆ ನೋಟೀಸ್ ನೀಡುತ್ತಿದ್ದಾರೆ. ನಿನ್ನೆ ದೆಹಲಿಯಿಂದ ರಾಜ್ಯಕ್ಕೆ ಮರಳಿರುವ ರಾಜ್ಯಪಾಲರು ಲೀಗಲ್‌ ಪ್ರಕ್ರಿಯೆ ಚುರುಕುಗೊಳಿಸಿದ್ದಾರೆ. ಇದಕ್ಕೆ ಕ್ಯಾಬಿನೆಟ್‌ ಹಾಗೂ ಮುಖ್ಯಮಂತ್ರಿಗಳ ಕಡೆಯಿಂದ ಪ್ರತಿಕ್ರಿಯೆ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ವಾರವಿಡೀ ಮುಖ್ಯಮಂತ್ರಿಗಳು ಕಾನೂನು ತಜ್ಞರು, ವಕೀಲರ ಜೊತೆಗೆ ಈ ವಿಚಾರವನ್ನು ಚರ್ಚಿಸಿದ್ದರು. ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ಗೆ ತೆರಳುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಮಗಳೂರು

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Wild Animals Attack : ಚಿಕ್ಕಮಗಳೂರು, ಮಂಡ್ಯದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾದರೆ, ಶಿವಮೊಗ್ಗ, ಕೊಪ್ಪಳ, ಚಿತ್ರದುರ್ಗದಲ್ಲಿ ಕರಡಿ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ.

VISTARANEWS.COM


on

By

Wild Animals Attack
Koo

ಚಿಕ್ಕಮಗಳೂರು/ಮಂಡ್ಯ: ಮಲೆನಾಡು ಭಾಗದಲ್ಲಿ ಮತ್ತೆ ಕಾಡಾನೆಗಳ ಹಾವಳಿ (Wild Animals Attack) ಹೆಚ್ಚಾಗಿದ್ದು, ಆತಂಕವನ್ನು ಸೃಷ್ಟಿಸಿದೆ. ಕಾಡಿನಿಂದ ನಾಡಿಗೆ ನುಗ್ಗಿರುವ ಕಾಡಾನೆಗಳು ನಡು ರಸ್ತೆಗೆ ಅಡ್ಡಹಾಕಿ ಭಯ ಹುಟ್ಟಿಸುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸಾಲ್ಮರ ಗ್ರಾಮದ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷಗೊಂಡಿದೆ.

ಸುಮಾರು 18 ಕಾಡಾನೆಗಳು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಸವಾರಿ ಮಾಡುತ್ತಿದೆ. ಕಾಡಾನೆಗಳು ರಸ್ತೆ ದಾಟುವಾಗ ಗ್ರಾಮಸ್ಥರು ಆನೆಗಳು ಎಷ್ಟಿವೆ ಎಂದು ಲೆಕ್ಕ ಹಾಕಿದ್ದಾರೆ. ಹೊಸಪುರ, ಕಸ್ಕೆ ಬೈಲು, ಜಿ ಹೊಸಳ್ಳಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ವಾಹನ ಸವಾರರು, ತೋಟಕ್ಕೆ ತರಳುವ ಕಾರ್ಮಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 20 ದಿನಗಳಿಂದ 18 ಆನೆಗಳು ನಿರಂತರ ದಾಳಿ ಮಾಡುತ್ತಿವೆ.

ಮಂಡ್ಯ ಸಿಟಿಗೂ ಎಂಟ್ರಿ ಕೊಟ್ಟ ಕಾಡಾನೆಗಳ ರೌಂಡ್ಸ್‌

ಮಂಡ್ಯ ಸಿಟಿಗೂ ಎರಡು ಕಾಡಾನೆಗಳು ಎಂಟ್ರಿ ಕೊಟ್ಟಿದ್ದು, ರಾತ್ರಿಯಿಡೀ ರೌಂಡ್ಸ್‌ ಹಾಕಿದೆ. ನಗರದ ಕಲ್ಲಹಳ್ಳಿ, ವಿವಿ ನಗರ ಭಾಗದಲ್ಲಿ ಆನೆಗಳು ಸಂಚಾರಿಸಿವೆ. ಮಧ್ಯರಾತ್ರಿ ನಾಯಿ ಬೊಗಳುತ್ತಿದ್ದನ್ನು ಕೇಳಿ ಹೊರ ಬಂದ ನಿವಾಸಿಗಳು ಶಾಕ್ ಆಗಿದ್ದರು. ಕಳೆದ ಎರಡ್ಮೂರು ದಿನದಿಂದ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಬೀಡು ಬಿಟ್ಟಿದ್ದ ಆನೆಗಳು, ಸದ್ಯ ಮಂಡ್ಯದ ಸದ್ವಿಧ್ಯ ಸ್ಕೂಲ್ ಬಳಿಯ ಕಬ್ಬಿನ ತೋಟದಲ್ಲಿವೆ.

Wild Animals Attack
Wild Animals Attack

ಇದನ್ನೂ ಓದಿ: Road Accident : ಅಂಗನವಾಡಿಗೆ ಹೊರಟಿದ್ದ ಬಾಲಕನ ಬಲಿ ಪಡೆದ ಖಾಸಗಿ ಶಾಲಾ ವಾಹನ

ಶಿವಮೊಗ್ಗ, ಕೊಪ್ಪಳ, ಚಿತ್ರದುರ್ಗದಲ್ಲಿ ಕರಡಿ ಕಾಟ

ಶಿವಮೊಗ್ಗದ ಭದ್ರಾವತಿ ತಾಲೂಕಿನ ತಿಮ್ಲಾಪುರ ಕ್ಯಾಂಪ್‌ನಲ್ಲಿ ಕರಡಿಯೊಂದು ಪ್ರತ್ಯಕ್ಷಗೊಂಡಿತ್ತು. ಬೆಳಗಿನ ಜಾವ ಕರಡಿ ಓಡಾಟವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆಹಾರ ಅರಸಿಕೊಂಡು ಕರಡಿ ಸುದ್ದಿ ಕೇಳಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಇತ್ತ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಹೊರವಲಯದಲ್ಲಿ ನಾಯಿಗಳು ಕರಡಿಗಳನ್ನು ಅಟ್ಟಾಡಿಸಿದೆ. ನಾಯಿಗಳನ್ನು ಕಂಡು ಕರಡಿಗಳು ಓಡಿ ಹೋಗಿದೆ. ನಿನ್ನೆ ಸೋಮವಾರವಷ್ಟೇ ಎರಡು ಕರಡಿಗಳು ಗ್ರಾಮದ ಹೊರವಲಯದ ದೇವಸ್ಥಾನವೊಂದಕ್ಕೆ ಬಂದಿದ್ದವು. ಇಂದು ಮತ್ತೇ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಜಮೀನಿನಲ್ಲಿ ಎರಡು ಕರಡಿಗಳು ಪ್ರತ್ಯಕ್ಷವಾಗಿವೆ.

ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ಹಿರೇಕೆರೆಹಳ್ಳಿ ಗ್ರಾಮದಲ್ಲಿ ಎರಡು ಕರಡಿಗಳು ಪ್ರತ್ಯಕ್ಷಗೊಂಡಿವೆ. ಊರಿನೊಳಗೆ ಬಂದ ಕರಡಿ ರಾತ್ರಿಯೆಲ್ಲ ಓಡಾಟ ನಡೆಸಿದೆ. ಗ್ರಾಮದ ಅಂಬೇಡ್ಕರ್ ವೃತ್ತದ ಮುಂಭಾಗದ ರಸ್ತೆಯಲ್ಲಿ ಕರಡಿ ಹಾದು ಹೋಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಹೆಬ್ಬಾವು ಸೆರೆ

ಭಾರೀ ಗಾತ್ರದ ಹೆಬ್ಬಾವು ಸೆರೆಯಾಗಿದೆ. ಹುಲ್ಲಿನ ಬಣವೆಯ ಬಿಲದ ಬಳಿ ಅವಿತುಕೊಂಡಿದ್ದ ಹೆಬ್ಬಾವನ್ನು ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಕುರುಬರ ಪಾಳ್ಯದ ಮನೆ ಹಿಂಭಾಗದಲ್ಲಿತ್ತು. ಏಳುವರೆ ಅಡಿ ಉದ್ದ ಹೆಬ್ಬಾವಿನ ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ. ಹಾವು ಕಂಡಾಗ ಸಾಯಿಸದೆ ನಮಗೆ ಮಾಹಿತಿ ನೀಡಿ ಎಂದು ಸ್ನೇಕ್ ಕಿರಣ್ ಮನವಿ ಮಾಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

Fortis Hospital: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Fortis Hospital
Koo

ಬೆಂಗಳೂರು: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ನರ ಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ರಘುರಾಮ್ ಜಿ., 19 ವರ್ಷದ ರಾಜ್ ಎಂಬುವವರು ಹುಳಿಮಾವು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಫುಟ್‌ಪಾತ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಇವರ ತಲೆ, ಕೈಗೆ ತೀವ್ರವಾಗಿ ಪೆಟ್ಟಾಗಿತ್ತು. ಅಪಘಾತದ ತೀವ್ರತೆಯಿಂದಾಗಿ ಇವರ ಬಲಗೈ ಮೂಳೆ ಮುರಿದು, ತಲೆಗೆ ತೀವ್ರವಾಗಿ ಗಾಯವಾಗಿ ಕಿವಿಯಿಂದ ರಕ್ತಸ್ತ್ರಾವವಾಗಿತ್ತು. ಇದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು. ಕೂಡಲೇ ಅವರನ್ನು ಫೋರ್ಟಿಸ್‌ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಕರೆತರಲಾಯಿತು.

ಕೂಡಲೇ ನಮ್ಮ ವೈದ್ಯರ ತಂಡ ಅವರನ್ನು ಎಂಆರ್‌ಐಗೆ ಒಳಪಡಿಸಲಾಯಿತು. ಅವರಿಗೆ ಮೆದುಳಿನ ಕೋಶಗಳ ನಡುವೆ ಸಂಪರ್ಕ ಕಲ್ಪಿಸುವ ನರಗಳಲ್ಲಿ ರಕ್ತಸ್ರಾವ ಆಗಿರುವುದು ಕಂಡು ಬಂತು. ಇದನ್ನು ಆಕ್ಸಾನಲ್‌ ಗಾಯ ಎನ್ನಲಾಗುತ್ತದೆ. ಈ ಗಾಯದಿಂದ ಅವರು ಮಾತನಾಡುವ ಹಾಗೂ ಚಲಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುವ ಸಂಭವವಿರುತ್ತದೆ. ಹೀಗಾಗಿ ಅವರಿಗೆ ಕೂಡಲೇ ತುರ್ತು ಚಿಕಿತ್ಸೆಯನ್ನು ನೀಡಲಾಯಿತು. ನ್ಯೂರೋ ತಂಡವು ಅವರ ಮಾತಿನ ತೊಂದರೆ, ಮೆಮೊರಿ ಸಮಸ್ಯೆಯನ್ನು ಪರಿಸರಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಿದರು. ಆರಂಭಿಕ ಚಿಕಿತ್ಸೆಯ ನಂತರ, ಫಿಸಿಯೋಥೆರಪಿ ಮತ್ತು ಸ್ಪೀಚ್ ಥೆರಪಿ ನೀಡಲಾಗುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: Janopakari Doddanna Shetty: ಗಾಣಿಗ ಸಮುದಾಯ ಶ್ರಮದಿಂದ ಬದುಕು ಕಟ್ಟಿಕೊಂಡಿದೆ; ಡಿ.ಕೆ. ಶಿವಕುಮಾರ್ ಶ್ಲಾಘನೆ

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ನಾರಾಯಣ್ ಹುಲ್ಸೆ ಮಾತನಾಡಿ, ಅಪಘಾತದಿಂದ ರಾಜ್‌ ಅವರ ಬಲಗೈ ಮೇಲ್ಭಾಗದ ಮೂಳೆ ಮುರಿದ ಕಾರಣ ಅವರಿಗೆ ತೆಳವಾದ ತಂತಿಯನ್ನು ಬಳಸಿಕೊಂಡು, ಪ್ಲೇಟ್‌ ಹಾಗೂ ಸ್ಕ್ರೂಗಳನ್ನು ಬಲಗೊಳಿಸಲಾಗಿದೆ. ಜತೆಗೆ ಮೊಣಕೈ ಕೀಲಿನ ಒಂದು ಭಾಗವನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Continue Reading

ಕರ್ನಾಟಕ

Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ

Muda Scam: ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಟಿ.ಜೆ. ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆ ಹಾಗೂ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡಿದ್ದಾರೆ.

VISTARANEWS.COM


on

MUDA scam
Koo

ಬೆಂಗಳೂರು: ಮುಡಾ ಹಗರಣ (Muda Scam) ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಟಿ. ಜೆ. ಅಬ್ರಹಾಂ ಅವರು ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದಾರೆ. ಈಗಾಗಲೇ ಸಿಎಂ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆಗಳನ್ನು ನೀಡಿದ್ದಾರೆ.

ರಾಜಭವನಕ್ಕೆ ಬರುವಂತೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಸೂಚಿಸಿದ ಹಿನ್ನೆಲೆಯಲ್ಲಿ ಅಬ್ರಹಾಂ ಭೇಟಿಯಾಗಿದ್ದರು. ಮುಡಾ ಹಗರಣ ಕುರಿತು ಮತ್ತಷ್ಟು ದಾಖಲೆಗಳನ್ನು ರಾಜ್ಯಪಾಲರು ಕೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ರಾಜ್ಯಪಾಲರು ಅನುಮತಿ ಕೊಡುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ.

ಆರೋಪದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದ ಟಿ.ಜೆ. ಅಬ್ರಹಾಂ

ರಾಜ್ಯಪಾಲರ ಭೇಟಿ ಬಳಿಕ ಟಿ.ಜೆ. ಅಬ್ರಹಾಂ ಮಾತನಾಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನನ್ನ ಬೇಡಿಕೆ ಏನಿತ್ತೋ ಅದರ ಮೇರೆಗೆ ಸರ್ಕಾರಕ್ಕೆ ರಾಜ್ಯಪಾಲರು ಶೋಕಾಸ್ ನೊಟೀಸ್ ಕೊಟ್ಟಿದ್ದರು. ಆದರೆ ಸಚಿವ ಸಂಪುಟ ಸಿಎಂ ತಪ್ಪಿಲ್ಲ, ರಾಜ್ಯಪಾಲರು ನೋಟಿಸ್ ಕೊಟ್ಟಿರೋದೇ ತಪ್ಪು ಅಂತ ನಿರ್ಣಯ ಮಾಡಿದೆ. ಅಬ್ರಹಾಂ ಸರಿಯಿಲ್ಲ ಅಂತಲೂ ಸರ್ಕಾರ ಆಪಾದನೆ ಮಾಡಿದೆ. ಹೀಗಾಗಿ ಪ್ರಕರಣದ ಬಗ್ಗೆ ರಾಜ್ಯಪಾಲರಿಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ಸರ್ಕಾರ ನನ್ನ ಮೇಲೆ ಮಾಡಿರುವ ಆರೋಪ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ನನಗೆ ತಿಳಿದ ಮಟ್ಟಿಗೆ ರಾಜ್ಯಪಾಲರು ಸಿಎಂಗೆ ಎರಡನೇ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ ಎಂದರೆ ಅವರಿಗೆ ಪ್ರಕರಣವನ್ನು ಮುಂದುವರಿಸಲು ಆಸಕ್ತಿ ಇದೆ ಎಂದರ್ಥ. ಕಳೆದ ಗುರುವಾರ ರಾಜ್ಯಪಾಲರ ಸಮಯ ಕೇಳಿದ್ದೆ, ಇವತ್ತು ಬರಲು ಹೇಳಿದ್ದರು, ಬಂದು ಸ್ಪಷ್ಟೀಕರಣ ಕೊಟ್ಟಿದ್ದೇನೆ ಎಂದರು.

ನನ್ನ ವಿರುದ್ಧ ಯಾವ ದೂರೂ ಇಲ್ಲ. ಸರ್ಕಾರಕ್ಕೆ ನಾನು ನೇರ ಸವಾಲ್ ಹಾಕುತ್ತೇನೆ. ನನ್ನ ವಿರುದ್ಧ ಕೇಸ್ ಹುಡುಕಿ, ಹುಡುಕಲು ಆಗದಿದ್ದರೆ ಹೇಗೆ ಹುಡುಕಬೇಕು ಅಂತ ನನ್ನ ಕೇಳಿ ಎಂದು ಕಿಡಿಕಾರಿದ್ದಾರೆ.

ಏನಿದು ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿಟ್ಟಿದೆ. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ​

ಸಿಎಂಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಾರಾ? ಅಥವಾ ನೋಟಿಸ್ ವಾಪಸ್ ಪಡೆಯುತ್ತಾರಾ ಎಂಬುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ | L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.

ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

ಸಿಎಂಗೆ ಪ್ರಾಸಿಕ್ಯೂಷನ್‌ ಭಯ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

Continue Reading

ಕರ್ನಾಟಕ

Janopakari Doddanna Shetty: ಗಾಣಿಗ ಸಮುದಾಯ ಶ್ರಮದಿಂದ ಬದುಕು ಕಟ್ಟಿಕೊಂಡಿದೆ; ಡಿ.ಕೆ. ಶಿವಕುಮಾರ್ ಶ್ಲಾಘನೆ

Janopakari Doddanna Shetty: ಜನೋಪಕಾರಿ ದೊಡ್ಡಣ್ಣ ಶೆಟ್ಟರು ಬ್ರಿಟಿಷರ ಆಡಳಿತ ಅವಧಿಯಲ್ಲಿಯೇ ಬೆಂಗಳೂರು ಹೃದಯ ಭಾಗದಲ್ಲಿ ಧರ್ಮಾತ್ಮ ಸಂಸ್ಥೆ ಕಟ್ಟಿ ಸಮಾಜದ ಎಲ್ಲಾ ಸಮುದಾಯಗಳ ನೆರವಿಗೆ ನಿಂತ ಮಹಾನುಭಾವ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಖಚಿತ. ಇದರ ನಡುವೆ ಏನನ್ನು ಗಳಿಸುತ್ತೇವೆ, ಸಾಧಿಸುತ್ತೇವೆ ಎನ್ನುವುದು ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

VISTARANEWS.COM


on

Janopakari Doddanna Shetty
Koo

ಬೆಂಗಳೂರು: ದೀಪ ಉರಿಯುವಾಗ (Janopakari Doddanna Shetty) ಎಣ್ಣೆ, ಬತ್ತಿ ಏನೂ ಕಾಣುವುದಿಲ್ಲ. ಕಾಣುವುದು ಬೆಳಕು ಮಾತ್ರ. ಗಾಣಿಗ ಸಮುದಾಯ ತಯಾರಿಸುವ ಎಣ್ಣೆಯು ದೀಪ ಹಾಗೂ ಮನುಷ್ಯನನ್ನು ತಂಪಾಗಿಸಲು ತಲೆಗೂ ಬೇಕು. ಗಾಣಿಗ ಸಮುದಾಯ ಶ್ರಮದ ಮೂಲಕ ಬದುಕು ಕಟ್ಟಿಕೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (Bengaluru News) ಅಭಿಪ್ರಾಯಪಟ್ಟರು.

ಯಜಮಾನ್ ಜನೋಪಕಾರಿ ದೊಡ್ಡಣ್ಣ ಶೆಟ್ಟಿ ಅವರ 103ನೇ ವಾರ್ಷಿಕ ಆರಾಧನಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಮನುಷ್ಯ ಇದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಹರಕೆ ಹೊತ್ತಿರುವುದಿಲ್ಲ. ಹುಟ್ಟಿದ ನಂತರ ಜಾತ್ಯತೀತವಾಗಿ ಬದುಕಬೇಕು. ದೊಡ್ಡಣ್ಣ ಶೆಟ್ಟರು ಭೇದ ಭಾವ ಮಾಡದೆ ಬದುಕಿದ ಕಾರಣಕ್ಕೆ ಅವರನ್ನು ನೆನಪಿಸುತ್ತಿದ್ದೇವೆ. ನಿಮ್ಮ ವೃತ್ತಿ, ಸಮುದಾಯವನ್ನು ಉಳಿಸಿಕೊಳ್ಳಲು ಸಂಘಟಿತರಾಗಿ ಎಂದು ತಿಳಿಸಿದರು.

ದೊಡ್ಡಣ್ಣ ಶೆಟ್ಟರು ಬ್ರಿಟಿಷರ ಆಡಳಿತ ಅವಧಿಯಲ್ಲಿಯೇ ಬೆಂಗಳೂರು ಹೃದಯ ಭಾಗದಲ್ಲಿ ಧರ್ಮಾತ್ಮ ಸಂಸ್ಥೆ ಕಟ್ಟಿ ಸಮಾಜದ ಎಲ್ಲಾ ಸಮುದಾಯಗಳ ನೆರವಿಗೆ ನಿಂತ ಮಹಾನುಭಾವ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಖಚಿತ ಇದರ ನಡುವೆ ಏನನ್ನು ಗಳಿಸುತ್ತೇವೆ, ಸಾಧಿಸುತ್ತೇವೆ ಎನ್ನುವುದು ಮುಖ್ಯ. ದೊಡ್ಡಣ್ಣ ಶೆಟ್ಟರು ಗತಿಸಿಹೋಗಿ ನೂರು ವರ್ಷಗಳಾದರೂ ಅವರ ನೆನಪು ನಮ್ಮ ನಡುವೆಯಿದೆ ಎಂದರು.

ಇದನ್ನೂ ಓದಿ: Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

ದೇವರು ಯಾರಿಗೆ ವರ, ಶಾಪ ಏನನ್ನೂ ಕೊಡುವುದಿಲ್ಲ. ಸಿಗುವ ಅವಕಾಶದಲ್ಲಿ ಉಪಕಾರ ಮಾಡಿ. ಅನ್ಯ ಕಾರ್ಯಗಳು ಇರುವ ಕಾರಣ ನಿಮಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ತುಳಿತಕ್ಕೆ ಒಳಗಾಗಿರುವ ಸಮಾಜವು ಹಿಂದುಳಿದಿದ್ದೇವೆ ಎನ್ನುವ ಚಿಂತೆ ಮಾಡಬಾರದು. ನಿಮ್ಮ ಸಮಸ್ಯೆಗಳನ್ನು ನಮಗೆ ತಿಳಿಸಿ ನಾವು ಬಗೆಹರಿಸುತ್ತೇವೆ ಎಂದು ತಿಳಿಸಿದರು.

Continue Reading
Advertisement
Wild Animals Attack
ಚಿಕ್ಕಮಗಳೂರು7 mins ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Fortis Hospital
ಬೆಂಗಳೂರು11 mins ago

Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

Viral Video
Latest16 mins ago

Viral Video: ಪಿಕ್‌ನಿಕ್‌ಗೆಂದು ಬಂದವನು ರೀಲ್ಸ್‌ ಮಾಡಲು ಹೋದ; ಜಲಪಾತದಿಂದ ಬಿದ್ದು ಸತ್ತ

Komari Janaiah Naidu
ಸಿನಿಮಾ18 mins ago

Komari Janaiah Naidu: ಟಾಲಿವುಡ್‌ ನಿರ್ದೇಶಕ ಕೊಮರಿ ಜನಯ್ಯ ನಾಯ್ಡು ಆತ್ಮಹತ್ಯೆ

Viral video
ವೈರಲ್ ನ್ಯೂಸ್22 mins ago

Viral Video: ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲವೆಂದು ನ್ಯಾಯಾಧೀಶರಿಗೇ ಬಾರಿಸಿದ ವಕೀಲೆ!

Viral Video
Latest30 mins ago

Viral Video: ಇದ್ದಕ್ಕಿದ್ದಂತೆ ಚಲಿಸಿದ ಟ್ರಕ್; ಯುವತಿಯ ಸಾಹಸ ಹೇಗಿತ್ತು ನೋಡಿ!

MUDA scam
ಕರ್ನಾಟಕ33 mins ago

Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ

ಕ್ರೀಡೆ36 mins ago

Rohit Sharma: ಕ್ರಿಸ್​ ಗೇಲ್​ ಸಿಕ್ಸರ್​ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​

Viral News
ಪ್ರಮುಖ ಸುದ್ದಿ36 mins ago

Viral News: ಸರ್ಕಾರಿ ಶಾಲಾ ಮಕ್ಕಳಿಗೆ ಸಾಂಬಾರ್‌ ಇಲ್ಲವೆಂದು ಅನ್ನದ ಜತೆ ಮೆಣಸಿನ ಪುಡಿ ಕೊಟ್ಟರು!

Janopakari Doddanna Shetty
ಕರ್ನಾಟಕ44 mins ago

Janopakari Doddanna Shetty: ಗಾಣಿಗ ಸಮುದಾಯ ಶ್ರಮದಿಂದ ಬದುಕು ಕಟ್ಟಿಕೊಂಡಿದೆ; ಡಿ.ಕೆ. ಶಿವಕುಮಾರ್ ಶ್ಲಾಘನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು7 mins ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ57 mins ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌