L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು - Vistara News

ದೇಶ

L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

L K Advani: ಇಂದು ಮಧ್ಯಾಹ್ನದ ಹೊತ್ತಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

VISTARANEWS.COM


on

LK advani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ (L K Advani) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು ಎಲ್‌.ಕೆ.ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಮಾಜಿ ಉಪ ಪ್ರಧಾನಿಯ ಆರೋಗ್ಯವು ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನದ ಹೊತ್ತಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿತ್ತು.

ಜುಲೈನಲ್ಲೂ ಇದೇ ರೀತಿಯಾಗಿ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಗಲೂ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ವೈದ್ಯರ ನಿಗಾದಲ್ಲಿರಿಸಲಾಗಿತ್ತು.ಸದ್ಯ ಅವರಿಗೆ ನರವಿಜ್ಞಾನ ವಿಭಾಗದ ಡಾ.ವಿನೀತ್‌ ಸೂರಿ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

ಜೂನ್‌ ಆರಂಭದಲ್ಲಿ, ಸರ್ಕಾರ ರಚನೆಗೆ ಹಕ್ಕು ಸಾಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅಡ್ವಾಣಿಯವರನ್ನು ಭೇಟಿ ಮಾಡಿದ್ದರು. ಗಾಂಧಿನಗರದ ಮಾಜಿ ಸಂಸದರಾದ ಅಡ್ವಾಣಿ, ಮೋದಿಯವರ ರಾಜಕೀಯ ಮಾರ್ಗದರ್ಶಕರಾಗಿದ್ದಾರೆ.

ಅಡ್ವಾಣಿ ಅವರಿಗೆ ಈ ವರ್ಷದ ಮಾರ್ಚ್‌ನಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರ ನಿವಾಸದಲ್ಲಿಯೇ ಈ ಅತ್ಯುನ್ನತ ನಾಗರಿಕ ಗೌರವವನ್ನು ಸಲ್ಲಿಸಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಇದನ್ನು ಕೊಡಮಾಡಿದ್ದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಎಲ್‌ಕೆ ಅಡ್ವಾಣಿ ಅವರು ಜೂನ್ 2002ರಿಂದ ಮೇ 2004 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ, ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: LK Advani: ಬಿಜೆಪಿ ನಾಯಕ ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್‌ಚಾರ್ಜ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bangladesh Unrest: ಬಾಂಗ್ಲಾದಲ್ಲಿ 19,000 ಭಾರತೀಯರು ಸಿಲುಕಿದ್ದಾರೆ; ಸಚಿವ ಜೈ ಶಂಕರ್‌

Bangladesh Unrest: ಬಾಂಗ್ಲಾದೇಶದಲ್ಲಿರುವ ಭಾರತೀಯರ ಜೊತೆ ಕೇಂದ್ರ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಬಾಂಗ್ಲಾದೇಶದಲ್ಲಿ ಅಶಾಂತಿ ಹಿಂಸಾತ್ಮಕ ತಿರುವು ಪಡೆದಾಗ ನೆರೆಯ ದೇಶದಲ್ಲಿ ನೆಲೆಸಿರುವ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಜುಲೈನಲ್ಲಿ ಮನೆಗೆ ಮರಳಿದ್ದಾರೆ. ನಮ್ಮ ರಾಜತಾಂತ್ರಿಕ ಕಾರ್ಯಗಳ ಮೂಲಕ ಬಾಂಗ್ಲಾದೇಶದಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಾವು ನಿಕಟ ಮತ್ತು ನಿರಂತರ ಸಂಪರ್ಕದಲ್ಲಿದ್ದೇವೆ.

VISTARANEWS.COM


on

Bangladesh Unrest
Koo

ನವದೆಹಲಿ: ಬಾಂಗ್ಲಾದೇಶ(Bangladesh Unrest)ದಲ್ಲಿ ನಡೆಯುತ್ತಿರುವ ಅಶಾಂತಿ ಮತ್ತು ಭಾರತದ ಮೇಲೆ ಅದರ ಪರಿಣಾಮಗಳ ಕುರಿತು ವಿದೇಶಾಂಗ ಸಚಿವ(External affair minister) ಎಸ್ ಜೈಶಂಕರ್(Jai Shankar) ಮಂಗಳವಾರ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಜೈಶಂಕರ್ ಅವರು ತಮ್ಮ ಭಾಷಣದಲ್ಲಿ ಪ್ರಸ್ತುತ ಬಾಂಗ್ಲಾದೇಶದಲ್ಲಿ ಸುಮಾರು 19,000 ಭಾರತೀಯ ಪ್ರಜೆಗಳಿದ್ದಾರೆ, ಅವರಲ್ಲಿ 9,000 ವಿದ್ಯಾರ್ಥಿಗಳು ಇದ್ದಾರೆ ಎಂದು ಹೇಳಿದರು.

ಬಾಂಗ್ಲಾದೇಶದಲ್ಲಿರುವ ಭಾರತೀಯರ ಜೊತೆ ಕೇಂದ್ರ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಬಾಂಗ್ಲಾದೇಶದಲ್ಲಿ ಅಶಾಂತಿ ಹಿಂಸಾತ್ಮಕ ತಿರುವು ಪಡೆದಾಗ ನೆರೆಯ ದೇಶದಲ್ಲಿ ನೆಲೆಸಿರುವ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಜುಲೈನಲ್ಲಿ ಮನೆಗೆ ಮರಳಿದ್ದಾರೆ. ನಮ್ಮ ರಾಜತಾಂತ್ರಿಕ ಕಾರ್ಯಗಳ ಮೂಲಕ ಬಾಂಗ್ಲಾದೇಶದಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಾವು ನಿಕಟ ಮತ್ತು ನಿರಂತರ ಸಂಪರ್ಕದಲ್ಲಿದ್ದೇವೆ. ಅಂದಾಜು 19,000 ಭಾರತೀಯ ಪ್ರಜೆಗಳಿದ್ದಾರೆ ಅದರಲ್ಲಿ ಸುಮಾರು 9000 ವಿದ್ಯಾರ್ಥಿಗಳು ಇದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಜುಲೈನಲ್ಲಿ ಮರಳಿದ್ದಾರೆ ಎಂದು ಅವರು ಇಂದು ಸಂಸತ್ತಿನಲ್ಲಿ ಹೇಳಿದರು. .

ಬಾಂಗ್ಲಾದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ನಾವು ಅಲ್ಪಸಂಖ್ಯಾತರ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಅವರ ರಕ್ಷಣೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿ ಪ್ರಾಣಭಯದಿಂದ ಭಾರತಕ್ಕೆ ಆಗಮಿಸಿ ಆಶ್ರಯ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್, ಯಾವ ಮುಸ್ಲಿಂ ರಾಷ್ಟ್ರವೂ ಸುರಕ್ಷಿತವಲ್ಲ ಎಂದಿದ್ದಾರೆ.

ನೆರೆಯ ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಚರ್ಚಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಸರ್ವಪಕ್ಷ ಕರೆದು ಮಾತನಾಡಿದರು ಜೈಶಂಕರ್ ಅವರು ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದರು. ಸಭೆಯಲ್ಲಿ ಗೃಹ ಮಂತ್ರಿ ಅಮಿತ್ ಶಾ ಅವರೂ ಭಾಗಿಯಾಗಿದ್ದರು. ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರುದ್ಧದ ಪ್ರತಿಭಟನೆ ಹಿಂಸಾಚಾರದ ರೂಪ ತಾಳಿದ ಬಳಿಕ, ಅವರು ನಿನ್ನೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದರು. ಅವರು ಭಾರತದಲ್ಲಿ ಬಂದು ಇಳಿದಿದ್ದಾರೆ.

ಹಸೀನಾ ರಾಜೀನಾಮೆ ನೀಡಿದ ಸ್ವಲ್ಪ ಸಮಯದ ನಂತರ ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್ ಅವರು “ಮಧ್ಯಂತರ ಸರ್ಕಾರವನ್ನು” ರಚಿಸಲಿದ್ದೇವೆ ಎಂದು ಹೇಳಿದ್ದಾರೆ. ಪ್ರತಿಭಟನೆಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಶೇಖ್ ಹಸೀನಾ ಅವರು ದೆಹಲಿಯಿಂದ 30 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿರುವ ಹಿಂಡನ್ ವಾಯುಪಡೆಯ ನೆಲೆಗೆ ಹಸೀನಾ ನಿನ್ನೆ ಸಂಜೆ ಬಂದಿಳಿದಿದ್ದರು. ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸ್ವಾಗತಿಸಿದ್ದರು.

ನೆರೆಯ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಸ್ ಜೈಶಂಕರ್ ಅವರೊಂದಿಗೆ ಮಾತನಾಡಿದ್ದಾರೆ. ಘಟನೆಯಲ್ಲಿ ಈವರೆಗೆ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೋದಿ ಅವರು ಹಸೀನಾ ಅವರನ್ನು ಭೇಟಿಯಾಗುತ್ತಾರೆಯೇ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ.

ಇದನ್ನೂ ಓದಿ: Bangladesh Unrest: ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌; ರಫಾ.. ರಫಾ.. ಎಂದು ಬೊಬ್ಬಿಡುತ್ತಿದ್ದ ಸೆಲೆಬ್ರಿಟಿಗಳು ಈಗೇಕೆ ಸೈಲೆಂಟ್‌?

Continue Reading

ವಿದೇಶ

Bangladesh Unrest: ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌; ರಫಾ.. ರಫಾ.. ಎಂದು ಬೊಬ್ಬಿಡುತ್ತಿದ್ದ ಸೆಲೆಬ್ರಿಟಿಗಳು ಈಗೇಕೆ ಸೈಲೆಂಟ್‌?

Bangladesh Unrest: ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಮೌನವಾಗಿರುವುದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟೀಕಿಸುತ್ತಿರುವ ಪರಿಕಲ್ಪನೆ ‘ಎಲ್ಲಾ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ’ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ. ಕೆಲವು ತಿಂಗಳುಗಳ ಹಿಂದೆ ಇಸ್ರೇಲ್ ದಾಳಿಯನ್ನು ಖಂಡಿಸಿ ಪ್ಯಾಲೆಸ್ಟೈನ್‌ ಗೆ ಬೆಂಬಲ ಸೂಚಿಸಿ ಅನೇಕರು ಇನ್ ಸ್ಟಾ ಗ್ರಾಮ್ ನಲ್ಲಿ ‘ಆಲ್ ಐಸ್ ಆನ್ ರಫಾ’ ಘೋಷಣೆಯೊಂದಿಗೆ ಹಂಚಿಕೊಂಡಿದ್ದಾರೆ.

VISTARANEWS.COM


on

Bangladesh Unrest
Koo

ಢಾಕಾ: ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ದಂಗೆ ಕ್ಷಣ ಕ್ಷಣಕ್ಕೂ ಭೀಕರವಾಗುತ್ತಿದೆ. ಅಲ್ಲಿನ ಜನರ ದುಸ್ಥಿತಿ ಕೇಳುವಂತಿಲ್ಲ. ಅದರಲ್ಲೂ ಬಾಂಗ್ಲಾದೇಶ(Bangladesh Unrest)ದಲ್ಲಿ ತಲೆದೋರಿರುವ ಅರಾಜಕತೆ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ. ಅದಕ್ಕೆ ಪೂರಕ ಎನ್ನುವಂತೆ ಅಲ್ಲಿನ ಹಿಂದೂಗಳು ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ನಡುವೆ ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌(All eyes on Bangladesh Hindus) ಎಂಬ ಪರಿಕಲ್ಪನೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ ಆಗುತ್ತಿದೆ.

ಏನಿದು ಹೊಸ ಟ್ರೆಂಡಿಂಗ್‌?

ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಮೌನವಾಗಿರುವುದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟೀಕಿಸುತ್ತಿರುವ ಪರಿಕಲ್ಪನೆ ‘ಎಲ್ಲಾ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ’ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ. ಕೆಲವು ತಿಂಗಳುಗಳ ಹಿಂದೆ ಇಸ್ರೇಲ್ ದಾಳಿಯನ್ನು ಖಂಡಿಸಿ ಪ್ಯಾಲೆಸ್ಟೈನ್‌ ಗೆ ಬೆಂಬಲ ಸೂಚಿಸಿ ಅನೇಕರು ಇನ್ ಸ್ಟಾ ಗ್ರಾಮ್ ನಲ್ಲಿ ‘ಆಲ್ ಐಸ್ ಆನ್ ರಫಾ’ ಘೋಷಣೆಯೊಂದಿಗೆ ಹಂಚಿಕೊಂಡಿದ್ದಾರೆ. ಇದನ್ನು ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡಿರುವವರ ಸಂಖ್ಯೆ 30 ಮಿಲಿಯನ್ ದಾಟಿತ್ತು. ಈ ಪೋಸ್ಟನ್ನು ಬಾಲಿವುಡ್‌ ತಾರೆಯರು ತಮ್ಮ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದರು.

ಇದೀಗ ಬಾಂಗ್ಲಾದಲ್ಲಿ ಹಿಂದೂಗಳ ಮನೆ ಮನೆಗೆ ನುಗ್ಗಿ ಕಿಡಿಗೇಡಿಗಳು ದಾಂಧಲೆ ಎಬ್ಬಿಸುತ್ತಿದ್ದರೂ, ಯಾರೋಬ್ಬರು ತುಟಿಕ್‌ ಪಿಟಿಕ್‌ ಅನ್ನದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಯಾಗುತ್ತಿದೆ. ಸಿನಿತಾರೆಯರ ಏಕಪಕ್ಷೀಯ ನಡೆಗೆ ಹಲವು ಟೀಕೆ ವ್ಯಕ್ತಪಡಿಸಿದ್ದಾರೆ.

ಭಾರತೀಯ ನಟರಾದ ಆಲಿಯಾ ಭಟ್, ಪ್ರಿಯಾಂಕಾ ಚೋಪ್ರಾ ಕರೀನಾ ಕಪೂರ್ ಖಾನ್ ಮತ್ತು ವರುಣ್ ಧವನ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮ ಸಲಹೆಗಾರ ಮ್ಯಾಟ್ ನವರ್ರಾ ಅವರು “‘ಆಲ್ ಐಸ್ ಆನ್ ರಾಫಾ’ ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: Bangladesh Protest : ಆಘಾತಕಾರಿ ಬೆಳವಣಿಗೆ; ಬಾಂಗ್ಲಾದಲ್ಲಿ ಹಿಂದೂಗಳಿಗೆ ಜೀವ ಬೆದರಿಕೆ; ಕಣ್ಣೀರಿಡುತ್ತಿದ್ದಾರೆ ಮಹಿಳೆಯರು…

Continue Reading

ಸಿನಿಮಾ

Komari Janaiah Naidu: ಟಾಲಿವುಡ್‌ ನಿರ್ದೇಶಕ ಕೊಮರಿ ಜನಯ್ಯ ನಾಯ್ಡು ಆತ್ಮಹತ್ಯೆ

Komari Janaiah Naidu: ವರದಿಗಳ ಪ್ರಕಾರ, ನಾಯ್ಡು ತಮ್ಮ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದನ್ನು ಗಮನಿಸಿದ ಹೋಟೆಲ್ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಹಲವಾರು ಚಲನಚಿತ್ರಗಳನ್ನು ನಿರ್ದೇಶಿಸಿದ ನಂತರ, ನಾಯ್ಡು ಅವರು ತೊಲುಬೊಮ್ಮಲ ಸಿತ್ರಾಲು ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದರು.

VISTARANEWS.COM


on

Komari Janaiah Naidu
Koo

ಹೈದರಾಬಾದ್: ತೆಲುಗು ಚಿತ್ರರಂಗದ ನಿರ್ಮಾಪಕ ಮತ್ತು ನಿರ್ದೇಶಕ ಕೊಮರಿ ಜನಯ್ಯ ನಾಯ್ಡು(Komari Janaiah Naidu) (44) ವಿಧಿವಶರಾಗಿದ್ದಾರೆ. ಮಂಗಳವಾರ ಕುಕಟ್ಪಲ್ಲಿಯ ಭಾಗ್ಯ ನಗರದ ಹೋಟೆಲ್ನಲ್ಲಿ ನೇಣುಬಿದಿಕೊಂಡ ಸ್ಥಿತಿಯಲ್ಲಿ ಜನಯ್ಯ ನಾಯ್ಡು ಅವರ ಶವವಾಗಿ ಪತ್ತೆಯಾಗಿದೆ.

ವರದಿಗಳ ಪ್ರಕಾರ, ನಾಯ್ಡು ತಮ್ಮ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದನ್ನು ಗಮನಿಸಿದ ಹೋಟೆಲ್ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಹಲವಾರು ಚಲನಚಿತ್ರಗಳನ್ನು ನಿರ್ದೇಶಿಸಿದ ನಂತರ, ನಾಯ್ಡು ಅವರು ತೊಲುಬೊಮ್ಮಲ ಸಿತ್ರಾಲು ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದರು. ಅದರಲ್ಲಿ ಅವರು ಕೆಲವು ವರ್ಷಗಳ ಹಿಂದೆ ‘ಜಿಎಸ್ಟಿ (ಗಾಡ್ ಸೈಥಾನ್ ಟೆಕ್ನಾಲಜಿ)’ ಎಂಬ ಸಣ್ಣ ಚಲನಚಿತ್ರವನ್ನು ಮಾಡಿದರು. ಈ ಚಿತ್ರವು ವಿಫಲವಾಗಿತ್ತು.

ಇನ್ನು ಜನಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಜನಯ್ಯನ ಸಾವಿಗೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಯಾವುದೇ ಹಣಕಾಸಿನ ಸಮಸ್ಯೆಗಳಿವೆಯೇ? ಅಥವಾ ಬೇರೆ ಕಾರಣಗಳಿಂದ ಸಾವನ್ನಪ್ಪಿದ್ದಾರೆಯೇ? ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗಷ್ಟೇ ಭೋಜ್‌ಪುರಿ ಚಿತ್ರರಂಗದ ಅತ್ಯಂತ ಜನಪ್ರಿಯ ನಟಿ ಅಮೃತಾ ಪಾಂಡೆ (Amrita Pandey) ಶನಿವಾರ ಬಿಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭಾಗಲ್ಪುರದ ಅಪಾರ್ಟ್‌ಮೆಂಟ್‌ನಲ್ಲಿ ಅವರ ಶವ ಪತ್ತೆಯಾಗಿದೆ. ಜೋಗ್ಸರ್ ಪೊಲೀಸ್ ಠಾಣೆ ವ್ಯಾಪ್ತಿಯ ದಿವ್ಯಧರ್ಮ ಅಪಾರ್ಟ್‌ಮೆಂಟ್‌ನಲ್ಲಿ ಸೀಲಿಂಗ್‌ ಫ್ಯಾನ್‌ಗೆ ಕಟ್ಟಿದ ಸೀರೆಯಲ್ಲಿ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಮೂಲಗಳು ಹೇಳಿವೆ. ಆದರೆ ಆತ್ಮಹತ್ಯೆಗೆ ಮುನ್ನ ಅವರು ವಾಟ್ಸಾಪ್‌ನ ಸ್ಟೇಟಸ್‌ನಲ್ಲಿ ಕೆಲವೊಂದು ವಿಚಾರಗಳನ್ನು ತಿಳಿಸಿದ್ದರು ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

ಅಮೃತಾ ಪಾಂಡೆ ಅವರು ತಮ್ಮ ಪತಿಯೊಂದಿಗೆ ಮುಂಬೈಯಲ್ಲಿ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ಸಂಬಂಧಿಕರೊಬ್ಬರು ವಿವಾಹ ಸಮಾರಂಭದಲ್ಲಿ ಭಾಗಿಯಾಗಲು ಅವರು ಬಿಹಾರದ ಭಾಗಲ್ಪುರಕ್ಕೆ ಆಗಮಿಸಿದ್ದರು. ಬಳಿಕ ಕೆಲವು ದಿನ ಇಲ್ಲಿಯೇ ಉಳಿಯಲು ನಿರ್ಧರಿಸಿದ್ದರು. ತಡರಾತ್ರಿಯವರೆಗೆ ಎಚ್ಚರವಾಗಿದ್ದ ಅವರು ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ರಹಸ್ಯ ಟಿಪ್ಪಣಿಯನ್ನು ಪೋಸ್ಟ್ ಮಾಡಿದ್ದರು.

ಕುಟುಂಬದ ಮೂಲಗಳ ಪ್ರಕಾರ ಅಮೃತಾ ತಮ್ಮ ವೃತ್ತಿ ಜೀವನದ ಬಗ್ಗೆ ಚಿಂತಿತರಾಗಿದ್ದರು ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಈ ಕಾರಣಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಆಪ್ತ ಮೂಲಗಳು ತಿಳಿಸಿವೆ. ಅಮೃತಾ ಅವರು 2022ರಲ್ಲಿ ಛತ್ತೀಸ್‌ಗಢದ ಬಿಲಾಸ್‌ಪುರ ಮೂಲದ ಪ್ರಸ್ತುತ ಮುಂಬೈಯಲ್ಲಿ ವಾಸವಾಗಿರುವ ಚಂದ್ರಮಣಿ ಜಂಗದ್ ಅವರನ್ನು ವಿವಾಹವಾಗಿದ್ದರು. ಚಂದ್ರಮಣಿ ಮುಂಬೈಯಲ್ಲಿ ಅನಿಮೇಷನ್ ಎಂಜಿನಿಯರ್ ಆಗಿದ್ದಾರೆ. ಈ ದಂಪತಿಗೆ ಇನ್ನೂ ಮಕ್ಕಳಾಗಿರಲಿಲ್ಲ.

ಇದನ್ನೂ ಓದಿ: Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

Continue Reading

ಪ್ರಮುಖ ಸುದ್ದಿ

Viral News: ಸರ್ಕಾರಿ ಶಾಲಾ ಮಕ್ಕಳಿಗೆ ಸಾಂಬಾರ್‌ ಇಲ್ಲವೆಂದು ಅನ್ನದ ಜತೆ ಮೆಣಸಿನ ಪುಡಿ ಕೊಟ್ಟರು!

Viral News: ತೆಲಂಗಾಣದ ಕೊಥಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವಾಗಿ ವಿದ್ಯಾರ್ಥಿಗಳಿಗೆ ಅನ್ನದ ಜೊತೆ ಸಾರನ್ನು ನೀಡುವ ಬದಲು ಮೆಣಸಿನ ಪುಡಿ ನೀಡಿದ ಘಟನೆ ವ್ಯಾಪಕ ಟೀಕೆಗೆ ಕಾರಣವಾಗಿದೆ. ಈ ಘಟನೆಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. “ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುವ ಸಿಎಂ ಉಪಾಹಾರ ಯೋಜನೆಯನ್ನು ರದ್ದುಗೊಳಿಸಿದ ಸರ್ಕಾರವು ಈಗ ಮಧ್ಯಾಹ್ನದ ಊಟವನ್ನು ಒದಗಿಸುವಲ್ಲಿ ವಿಫಲವಾಗಿದೆ. ಇದು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿಯಾಗಿದೆʼʼ ಎಂದು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಮುಖಂಡ ಹರೀಶ್ ರಾವ್ ಕಿಡಿಕಾರಿದ್ದಾರೆ.

VISTARANEWS.COM


on

Viral News
Koo


ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟದ ಯೋಜನೆ ಜಾರಿ ಮಾಡಿದ ಸರ್ಕಾರ ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಸರಿಯಾಗಿ ಪೂರೈಸುತ್ತಿಲ್ಲ. ಇದರಿಂದ ಶಾಲಾ ಮಕ್ಕಳು ಸಂಕಷ್ಟಕ್ಕೀಡಾಗಿದ್ದಾರೆ. ಸರಿಯಾಗಿ ಊಟ ಸಿಗದೆ ಪರದಾಡುವಂತಾಗಿದೆ. ದೇಶದ ಹಲವು ಕಡೆಯಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಇದೇ ಕಥೆಯಾಗಿದೆ. ಇದೀಗ ಅಂತದೊಂದು ಘಟನೆ ತೆಲಂಗಾಣದ ಕೊಥಪಲ್ಲಿ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದ್ದು, ಈ ಸರ್ಕಾರಿ ಶಾಲೆಯ ಅವ್ಯವಸ್ಥೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral News) ಆಗಿ ಬಯಲಿಗೆ ಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದಾರೆ.

ತೆಲಂಗಾಣದ ಕೊಥಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವಾಗಿ ವಿದ್ಯಾರ್ಥಿಗಳಿಗೆ ಅನ್ನದ ಜೊತೆ ಸಾರನ್ನು ನೀಡುವ ಬದಲು ಮೆಣಸಿನ ಪುಡಿ ಮತ್ತು ಎಣ್ಣೆಯನ್ನು ನೀಡಿದ ಘಟನೆಯ ನಡೆದಿದೆ. ಆಗಸ್ಟ್ 3 ರ ಶನಿವಾರದಂದು ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದು ವಿವಾದಕ್ಕೆ ಕಾರಣವಾಗಿತ್ತು. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಮುಖಂಡ ಹರೀಶ್ ರಾವ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದರು. “ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುವ ಸಿಎಂ ಉಪಾಹಾರ ಯೋಜನೆಯನ್ನು ರದ್ದುಗೊಳಿಸಿದ ಸರ್ಕಾರವು ಈಗ ಮಧ್ಯಾಹ್ನದ ಊಟವನ್ನು ಒದಗಿಸುವಲ್ಲಿ ವಿಫಲವಾಗಿದೆ.

ಇದು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿಯಾಗಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಂಬಂಧಿಸಿದ ಅಡುಗೆ ಸಹಾಯಕರ ವೇತನ ಬಾಕಿ ಇರುವುದರಿಂದ ವಿದ್ಯಾರ್ಥಿಗಳಿಗೆ ಸರಿಯಾದ ಊಟ ಸಿಗುತ್ತಿಲ್ಲ. ಹಾಗಾಗಿ ಉಪ ಮುಖ್ಯಮಂತ್ರಿ ಕೂಡಲೇ ಸ್ಪಂದಿಸಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಬಾಕಿ ಬಿಲ್ ಪಾವತಿಸಿ, ಕಾರ್ಮಿಕರ ವೇತನ ಪಾವತಿಸಿ, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಹೊಟ್ಟೆ ತುಂಬಿಸಿ ಎಂದು ಮನವಿ ಮಾಡುತ್ತೇನೆ “ ಎಂದು ಟ್ವೀಟ್ ಮಾಡಿದ್ದಾರೆ.

ಇದರಿಂದಾಗಿ ಸರ್ವ ಶಿಕ್ಷಣ ಅಕಾಡೆಮಿಕ್ ಮಾನಿಟರಿಂಗ್ ಸೆಲ್ ಅಧಿಕಾರಿಗಳು ಸೋಮವಾರ ಶಾಲೆಗೆ ಭೇಟಿ ನೀಡಿದ್ದಾರೆ. ಈ ಘಟನೆಗೆ ಪ್ರತಿಕ್ರಿಯಿಸಿದ, ಜಿಲ್ಲಾ ಅಧಿಕಾರಿಗಳು ಮಂಡಲ ಶಿಕ್ಷಣ ಅಧಿಕಾರಿಗಳು (ಎಂಇಒಗಳು), ಮುಖ್ಯ ಶಿಕ್ಷಕರು (ಎಚ್ಎಂ) ಮತ್ತು ಶಿಕ್ಷಕರನ್ನು ಎಚ್ಚರಿಸಿ, ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಸರಿಯಾಗಿ ನೋಡಿಕೊಳ್ಳುವಂತೆ ಕೇಳಿಕೊಂಡರು.‌

ಇದನ್ನೂ ಓದಿ:Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

ಮಧ್ಯಾಹ್ನದ ಊಟವನ್ನು ಪೂರೈಸುವ ಏಜೆನ್ಸಿಯು ವಿದ್ಯಾರ್ಥಿಗಳಿಗೆ ಅನ್ನದೊಂದಿಗೆ ದಾಲ್ ಮತ್ತು ತರಕಾರಿಗಳನ್ನು ಮಾತ್ರ ನೀಡುತ್ತದೆ. ಆದರೆ ಮೊಟ್ಟೆಗಳನ್ನು ನೀಡುತ್ತಿಲ್ಲ. ಇದಕ್ಕೆ ಕಾರಣ ಮೊಟ್ಟೆಗಳ ಪೂರೈಕೆಯಲ್ಲಿನ ಕೊರತೆ ಎನ್ನಲಾಗಿದೆ. ಹಾಗಾಗಿ ಮಧ್ಯಾಹ್ನದ ಊಟದ ಬಜೆಟ್ ಅನ್ನು ಹೆಚ್ಚಿಸಬೇಕು ಎಂದು ಏಜೆನ್ಸಿ ಒತ್ತಾಯಿಸಿದೆ. ಪ್ರಾಥಮಿಕ ತರಗತಿ ಮಕ್ಕಳಿಗೆ 5 ರೂ., ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 8 ರೂ. ಮೊತ್ತವನ್ನು ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದರು ಮತ್ತು ನಿಗದಿಪಡಿಸಿದ ಸ್ಥಳದಲ್ಲಿ ಸಮಸ್ಯೆ ಇರುವುದರಿಂದ ಮೊಟ್ಟೆಗಳನ್ನು ಪೂರೈಸಲು ಮತ್ತು ಅಡುಗೆಮನೆಯನ್ನು ನಿರ್ಮಿಸಿಕೊಡಬೇಕೆಂದು ಇಲಾಖೆಗೆ ವಿನಂತಿಸಿದರು ಎಂಬುದಾಗಿ ತಿಳಿದುಬಂದಿದೆ.

Continue Reading
Advertisement
Handwork Saree Blouse
ಫ್ಯಾಷನ್20 mins ago

Handwork Saree Blouse: ಫೆಸ್ಟಿವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಹ್ಯಾಂಡ್‌ ವರ್ಕ್‌ ಡಿಸೈನರ್‌ ಬ್ಲೌಸ್‌!

Bangladesh Unrest
ದೇಶ33 mins ago

Bangladesh Unrest: ಬಾಂಗ್ಲಾದಲ್ಲಿ 19,000 ಭಾರತೀಯರು ಸಿಲುಕಿದ್ದಾರೆ; ಸಚಿವ ಜೈ ಶಂಕರ್‌

Bangalore Hotels
ಕರ್ನಾಟಕ43 mins ago

Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Rohit Sharma
ಕ್ರೀಡೆ44 mins ago

Rohit Sharma: ಯುಪಿಎಸ್ಸಿ ಕೋಚಿಂಗ್​ನಲ್ಲಿಯೂ ರೋಹಿತ್​ ಶರ್ಮ ಹವಾ; ವೈರಲ್​ ವಿಡಿಯೊ ಇಲ್ಲಿದೆ

Almonds
ಆರೋಗ್ಯ1 hour ago

Almonds For Health: ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?

Devara Part 1
ಸಿನಿಮಾ1 hour ago

Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್!

Bangladesh Unrest
ವಿದೇಶ1 hour ago

Bangladesh Unrest: ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌; ರಫಾ.. ರಫಾ.. ಎಂದು ಬೊಬ್ಬಿಡುತ್ತಿದ್ದ ಸೆಲೆಬ್ರಿಟಿಗಳು ಈಗೇಕೆ ಸೈಲೆಂಟ್‌?

National Handloom Day
ಫ್ಯಾಷನ್1 hour ago

National Handloom Day: ಮಾಡರ್ನ್‌ ಯುವತಿಯರ ಮನವನ್ನೂ ಗೆಲ್ಲುತ್ತಿರುವ ಹ್ಯಾಂಡ್‌ ಲೂಮ್‌ ಸೀರೆ

Mangalore Homestay case
ಕರ್ನಾಟಕ2 hours ago

Mangalore Homestay case: ಮಂಗಳೂರು ಹೋಮ್‌ ಸ್ಟೇ ದಾಳಿ ಪ್ರಕರಣದ ಎಲ್ಲಾ 40 ಆರೋಪಿಗಳು ಖುಲಾಸೆ

shravan foods
ಆರೋಗ್ಯ2 hours ago

Shravan Recipes: ಶ್ರಾವಣ ಮಾಸದಲ್ಲಿ ಸಾಬುದಾನದ ಈ 5 ಖಾದ್ಯಗಳನ್ನು ಮಾಡಿ ನೋಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌