Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ - Vistara News

ಕರ್ನಾಟಕ

Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ

Muda Scam: ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಟಿ.ಜೆ. ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆ ಹಾಗೂ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡಿದ್ದಾರೆ.

VISTARANEWS.COM


on

MUDA scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಡಾ ಹಗರಣ (Muda Scam) ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಟಿ. ಜೆ. ಅಬ್ರಹಾಂ ಅವರು ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದಾರೆ. ಈಗಾಗಲೇ ಸಿಎಂ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆಗಳನ್ನು ನೀಡಿದ್ದಾರೆ.

ರಾಜಭವನಕ್ಕೆ ಬರುವಂತೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಸೂಚಿಸಿದ ಹಿನ್ನೆಲೆಯಲ್ಲಿ ಅಬ್ರಹಾಂ ಭೇಟಿಯಾಗಿದ್ದರು. ಮುಡಾ ಹಗರಣ ಕುರಿತು ಮತ್ತಷ್ಟು ದಾಖಲೆಗಳನ್ನು ರಾಜ್ಯಪಾಲರು ಕೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ರಾಜ್ಯಪಾಲರು ಅನುಮತಿ ಕೊಡುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ.

ಆರೋಪದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದ ಟಿ.ಜೆ. ಅಬ್ರಹಾಂ

ರಾಜ್ಯಪಾಲರ ಭೇಟಿ ಬಳಿಕ ಟಿ.ಜೆ. ಅಬ್ರಹಾಂ ಮಾತನಾಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನನ್ನ ಬೇಡಿಕೆ ಏನಿತ್ತೋ ಅದರ ಮೇರೆಗೆ ಸರ್ಕಾರಕ್ಕೆ ರಾಜ್ಯಪಾಲರು ಶೋಕಾಸ್ ನೊಟೀಸ್ ಕೊಟ್ಟಿದ್ದರು. ಆದರೆ ಸಚಿವ ಸಂಪುಟ ಸಿಎಂ ತಪ್ಪಿಲ್ಲ, ರಾಜ್ಯಪಾಲರು ನೋಟಿಸ್ ಕೊಟ್ಟಿರೋದೇ ತಪ್ಪು ಅಂತ ನಿರ್ಣಯ ಮಾಡಿದೆ. ಅಬ್ರಹಾಂ ಸರಿಯಿಲ್ಲ ಅಂತಲೂ ಸರ್ಕಾರ ಆಪಾದನೆ ಮಾಡಿದೆ. ಹೀಗಾಗಿ ಪ್ರಕರಣದ ಬಗ್ಗೆ ರಾಜ್ಯಪಾಲರಿಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ಸರ್ಕಾರ ನನ್ನ ಮೇಲೆ ಮಾಡಿರುವ ಆರೋಪ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ನನಗೆ ತಿಳಿದ ಮಟ್ಟಿಗೆ ರಾಜ್ಯಪಾಲರು ಸಿಎಂಗೆ ಎರಡನೇ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ ಎಂದರೆ ಅವರಿಗೆ ಪ್ರಕರಣವನ್ನು ಮುಂದುವರಿಸಲು ಆಸಕ್ತಿ ಇದೆ ಎಂದರ್ಥ. ಕಳೆದ ಗುರುವಾರ ರಾಜ್ಯಪಾಲರ ಸಮಯ ಕೇಳಿದ್ದೆ, ಇವತ್ತು ಬರಲು ಹೇಳಿದ್ದರು, ಬಂದು ಸ್ಪಷ್ಟೀಕರಣ ಕೊಟ್ಟಿದ್ದೇನೆ ಎಂದರು.

ನನ್ನ ವಿರುದ್ಧ ಯಾವ ದೂರೂ ಇಲ್ಲ. ಸರ್ಕಾರಕ್ಕೆ ನಾನು ನೇರ ಸವಾಲ್ ಹಾಕುತ್ತೇನೆ. ನನ್ನ ವಿರುದ್ಧ ಕೇಸ್ ಹುಡುಕಿ, ಹುಡುಕಲು ಆಗದಿದ್ದರೆ ಹೇಗೆ ಹುಡುಕಬೇಕು ಅಂತ ನನ್ನ ಕೇಳಿ ಎಂದು ಕಿಡಿಕಾರಿದ್ದಾರೆ.

ಏನಿದು ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿಟ್ಟಿದೆ. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ​

ಸಿಎಂಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಾರಾ? ಅಥವಾ ನೋಟಿಸ್ ವಾಪಸ್ ಪಡೆಯುತ್ತಾರಾ ಎಂಬುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ | L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.

ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

ಸಿಎಂಗೆ ಪ್ರಾಸಿಕ್ಯೂಷನ್‌ ಭಯ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

DK Shivakumar: ಮಂಡ್ಯದಲ್ಲಿ ಗೆಲುವು ಕಂಡಿದ್ದೀರಿ. ಇಲ್ಲಿಗೆ ಬಂದು ನಿಮ್ಮ ತಿರುವು-ಮುರುವು ಹೇಳಿಕೆಗಳ ಬಗ್ಗೆ ಉತ್ತರ ನೀಡಬೇಕು. ನಿಮ್ಮ ಅಮೃತದ ನುಡಿಮುತ್ತುಗಳನ್ನು ಈ ನೆಲದ ಮೇಲೆ ಉದುರಿಸಬೇಕು ಎಂದು ಎಚ್‌.ಡಿ. ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದ್ದಾರೆ.

VISTARANEWS.COM


on

DK Shivakumar
Koo

ಮಂಡ್ಯ: “ಕುಮಾರಸ್ವಾಮಿ ಅವರು ಈ ಹಿಂದೆ ಅವರೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಮಂಡ್ಯದ ಮೈಶುಗರ್ ಕಾರ್ಖಾನೆ ಮೈದಾನದಲ್ಲಿ ಮಂಗಳವಾರ ನಡೆದ ʼಜನಾಂದೋಲನ ಸಭೆʼ ಯಲ್ಲಿ ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಅಶ್ವತ್ಥನಾರಾಯಣ್, ಯೋಗೀಶ್ವರ್ ಅವರು ಪರಸ್ಪರ ಆರೋಪ, ಪ್ರತ್ಯಾರೋಪ, ಯೂ ಟರ್ನ್ ಹೊಡೆದಿದ್ದ ಹೇಳಿಕೆಗಳನ್ನು ವಿಡಿಯೋ ಮೂಲಕ ತೆರೆಯ ಮೇಲೆ ಪ್ರದರ್ಶಿಸಿದ ನಂತರ ಡಿಸಿಎಂ ಶಿವಕುಮಾರ್ ಮಾತನಾಡಿದರು.

“ಜನ ತೀರ್ಪು ನೀಡಿದ್ದಾರೆ. ಆದ ಕಾರಣಕ್ಕೆ ಗಂಡು ಭೂಮಿ ಮಂಡ್ಯದಲ್ಲಿ ಗೆಲುವು ಕಂಡಿದ್ದೀರಿ. ಇಲ್ಲಿಗೆ ಬಂದು ನಿಮ್ಮ ತಿರುವು-ಮುರುವು ಹೇಳಿಕೆಗಳ ಬಗ್ಗೆ ಉತ್ತರ ನೀಡಬೇಕು. ನಿಮ್ಮ ಅಮೃತದ ನುಡಿಮುತ್ತುಗಳನ್ನು ಈ ನೆಲದ ಮೇಲೆ ಉದುರಿಸಬೇಕು. “ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ” ಎಂದು ಶಿವಕುಮಾರ್ ಅವರು ಕುಮಾರಸ್ವಾಮಿ ಅವರನ್ನು ಛೇಡಿಸಿದರು.

ಇದನ್ನೂ ಓದಿ | Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

“ಮೋದಿ ಅವರ ಕೈ ಹಿಡಿದು ಕೇವಲ ಐದು ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಕುಮಾರಣ್ಣ ಹೇಳಿದ್ದರು. ಆದರೆ ಈಗ ನಾವು ಐದು ಜನ ಮಂತ್ರಿಗಳಿದ್ದೇವೆ, ನಾನು ಆ ರೀತಿ ಮಾತು ಕೊಡಲು ಮೂರ್ಖನೇ ಎಂದು ಹೇಳುತ್ತಿದ್ದಾರೆ. ಈ ಹೇಳಿಕೆಗಳಿಗೆ ಬಿಜೆಪಿ ಹಾಗೂ ಕುಮಾರಸ್ವಾಮಿ ಇಬ್ಬರೂ ಉತ್ತರ ಕೊಡಬೇಕು. 10 ನಿಮಿಷದಲ್ಲಿ ನಾನು ತೋರಿಸಿದ ಮೈತ್ರಿ ನಾಯಕರ ಮಾತುಗಳಿಗೆ ಉತ್ತರ ಕೊಡಲಿ” ಎಂದು ಆಗ್ರಹಿಸಿದರು.

“ಕುಮಾರಸ್ವಾಮಿ ಅವರನ್ನು ಕಾವೇರಿ ನೀರಿನ ವಿಚಾರದ ಸಭೆಗೆ ಕರೆದಿದ್ದೆವು. ಅದಕ್ಕೆ ಅವರು ದ್ರಾಕ್ಷಿ, ಗೋಡಂಬಿ ತಿನ್ನಲು ಬರಬೇಕೆ ಎಂದಿದ್ದರು. ಆದರೆ ಅದೇ ದಿನ ಪಾಂಡವಪುರದಲ್ಲಿ ಬಾಡೂಟದಲ್ಲಿ ಭಾಗವಹಿಸಿದ್ದರು. ಕಾವೇರಿ ನೀರು, ರೈತರು, ರಾಜ್ಯದ ಹಿತ ಅವರಿಗೆ ಮುಖ್ಯವಾಗಿರಲಿಲ್ಲ. ಕುಮಾರಣ್ಣ ಏನೂ ಬೇಕಾದರೂ ಮಾಡಿಕೊಳ್ಳಲಿ, ಆದರೆ ನಮಗೆ ಮಾತ್ರ ನಿಮ್ಮ ಹಿತ ಮುಖ್ಯ” ಎಂದರು.

“148 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಅಲ್ಲದೇ 64 ಟಿಎಂಸಿ ನೀರು ಸಮುದ್ರಕ್ಕೆ ಹರಿದು ಹೋಗಿದೆ. ಹೆಚ್ಚಾಗಿ ಸಮುದ್ರಕ್ಕೆ ಹರಿದು ಹೋದ ನೀರನ್ನು ಹಿಡಿದಿಡುವ ಸಲುವಾಗಿ ಮೇಕೆದಾಟು ಯೋಜನೆ ಸಾಕಾರಕ್ಕಾಗಿ ಪಾದಯಾತ್ರೆ ಮಾಡಿದೆವು” ಎಂದು ಹೇಳಿದರು.

“ಕುಮಾರಸ್ವಾಮಿ ನನ್ನ ಕುಟುಂಬದ ಬಗ್ಗೆ ಮಾತನಾಡಲಿ ಎಂದೇ ಅವರ ಕುಟುಂಬದ ಬಗ್ಗೆ ಮಾತನಾಡುತ್ತಾ ಬರುತ್ತಿದ್ದೇನೆ. ನಿಮ್ಮ ಅತ್ತೆಯ ಕೆಐಡಿಬಿ ಭೂಮಿ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಇದೇ ಬಿಜೆಪಿಯವರು ನಿನ್ನ ಕುಟುಂಬಕ್ಕೆ ಹಂಚಿಕೆಯಾಗಿರುವ ಮುಡಾ ಸೈಟುಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ” ಎಂದು ಸವಾಲು ಹಾಕಿದರು.

“ನನ್ನ ಅಧ್ಯಕ್ಷತೆಯಲ್ಲಿ, ಸಿದ್ದರಾಮಯ್ಯ ಅವರ ಮುಖಂಡತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ. ಬಿಜೆಪಿಗೆ 65, ಜೆಡಿಎಸ್‌ಗೆ 19 ಸ್ಥಾನಗಳು ಬಂದವು. ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರು ಎರಡನೇ ಬಾರಿ ಸಿಎಂ ಆಗಿದ್ದಾರೆ. ನಮ್ಮ ಸರ್ಕಾರವನ್ನು ಬೀಳಿಸಲು ಆಗುವುದಿಲ್ಲ. ಮುಂದಿನ 10 ವರ್ಷವೂ ಕಾಂಗ್ರೆಸ್ ಸರ್ಕಾರವಿರುತ್ತದೆ” ಎಂದರು.

ಕುಮಾರಸ್ವಾಮಿ ಮೇಲೆ ಮಾತ್ರ ನಂಬಿಕೆ

ಭಾಷದ ಮಧ್ಯೆ ವೇದಿಕೆಯ ಎಲ್ಇಡಿ ಮೂಲಕ ಮೈತ್ರಿ ನಾಯಕರ ಹೇಳಿಕೆಗಳ ವಿಡಿಯೋ ಪ್ರದರ್ಶಿಸಿದ ನಂತರ ಮಾತು ಮುಂದುವರಿಸಿದ ಡಿಸಿಎಂ ಅವರು “ಯಾರ ಮಾತನ್ನು ನಂಬಬೇಡಿ ಎಂದು ಶಾಸಕ ಪ್ರಿಯಾಕ್ ಖರ್ಗೆ ಅವರು ಹೇಳಿದರು. ಅವರ ಮಾತಿನಂತೆ ನನಗೆ ಮುನಿಯಪ್ಪ ಅವರು, ಚೆಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಯಾರ ಮೇಲೂ ನಂಬಿಕೆಯಿಲ್ಲ ನನಗೆ ಕುಮಾರಸ್ವಾಮಿ ಅವರ ಮೇಲೆ, ಬೂಕನಕೆರೆ ಯಡಿಯೂರಪ್ಪ, ಯೋಗೀಶ್ವರ್, ಯತ್ನಾಳ್ ಮೇಲೆ ಮಾತ್ರ ನನಗೆ ನಂಬಿಕೆ” ಎಂದು ವ್ಯಂಗ್ಯವಾಡಿದರು.

ಉದ್ಯೋಗ ಕೊಡಿಸಿದರೆ ಒಂದು ಕೋಟಿ ನಮಸ್ಕಾರ ಹೇಳುತ್ತೇನೆ

“ಎಸ್.ಎಂ.ಕೃಷ್ಣ ಅವರು ಮದ್ದೂರಿನ ಸೋಮನಹಳ್ಳಿ, ಮಂಡ್ಯದ ತೂಬಿನಕೆರೆಯಲ್ಲಿ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪನೆ ಮಾಡಿದರು. ಕುಮಾರಸ್ವಾಮಿ ಅವರೇ ಮೋದಿ ಅವರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೈಗಾರಿಕಾ ಮಂತ್ರಿ ಮಾಡಿದ್ದಾರೆ. ಮಂಡ್ಯ ಮತ್ತು ಹಾಸನ ಭಾಗದಲ್ಲಿ 10 ಸಾವಿರ ಉದ್ಯೋಗ ಸೃಷ್ಟಿ ಮಾಡುವ ಕೈಗಾರಿಕೆ ಮಾಡುತ್ತೇನೆ ಎಂದು ಹೇಳಿದ್ದೀರಾ. ನಮ್ಮ ಜನರಿಗೆ ಉದ್ಯೋಗ ಸಿಗುತ್ತದೆ ಎಂದರೆ ನಾವು ನಿಮಗೆ ಸಹಕಾರ ನೀಡುತ್ತೇವೆ. ನಮ್ಮ ಯುವಕರಿಗೆ ಕೆಲಸ ನೀಡಪ್ಪ ಒಂದು ಕೋಟಿ ನಮಸ್ಕಾರ ಹೇಳುತ್ತೇನೆ” ಎಂದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಧಮ್ ಇಲ್ಲ

“ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಧಮ್ ಇಲ್ಲ. ಹೀಗಾಗಿ ಮಾಧ್ಯಮಗಳಲ್ಲಿ ಕೇವಲ ನನ್ನ ಮತ್ತು ಕುಮಾರಸ್ವಾಮಿ ಅವರ ವಿಚಾರವನ್ನೇ ಮಾಧ್ಯಮಗಳು ತೆಗೆದುಕೊಳ್ಳುತ್ತಿವೆ” ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದರು.

ರಾಜ್ಯದ ಬಡವರ ವಿರುದ್ಧದ ಪಾದಯಾತ್ರೆ

“ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ. ಈ ರಾಜ್ಯದ ಜನ ಕಾಂಗ್ರೆಸ್‌ಗೆ ಶೇ. 43 ರಷ್ಟು ಮತ ನೀಡಿ 136 ಸ್ಥಾನ ನೀಡಿದ್ದಾರೆ. ಮಂಡ್ಯದಲ್ಲಿ 7 ಸ್ಥಾನ ಕೊಟ್ಟಿದ್ದಾರೆ. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಇದನ್ನು ನಿಲ್ಲಿಸಲು ಸರ್ಕಾರ ಬೀಳಿಸುವ ಹುನ್ನಾರ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ಯಡಿಯೂರಪ್ಪ ಅವರೇ ಸರ್ಕಾರ ಬೀಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಅಶೋಕಣ್ಣ ನಿನ್ನ ಕೈಯಲ್ಲಿ ಧಮ್ ಇಲ್ಲ. ವಿಜಯೇಂದ್ರಣ್ಣ ಕಾಂಗ್ರೆಸ್ ಪಕ್ಷದ ಭಿಕ್ಷೆಯಿಂದ ವಿಧಾನಸಭೆಗೆ ಬಂದಿದ್ದೀಯ. ನಾಗರಾಜ್ ಗೌಡನಿಗೆ ಟಿಕೆಟ್ ನೀಡಿದ್ದರೆ ನೀನು ಗೆಲ್ಲುತ್ತಿರಲಿಲ್ಲ. ಇದನ್ನು ಗಮನದಲ್ಲಿಟ್ಟುಕೋ” ಎಂದು ಹೇಳಿದರು.

ವಿಜಯೇಂದ್ರ ನಿಮ್ಮ ತಂದೆ ರಾಜೀನಾಮೆ ಕೊಟ್ಟಿದ್ದೇಕೆ?

“ವಿಜಯೇಂದ್ರ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎನ್ನುತ್ತೀಯಲ್ಲ. ನಿಮ್ಮ ತಂದೆ ಏತಕ್ಕೆ ರಾಜಿನಾಮೆ ನೀಡಿದರು. ಲಕ್ಷ್ಮೀವಿಲಾಸ್ ಬ್ಯಾಂಕ್‌ನಲ್ಲಿ ದುಬೈಯಲ್ಲಿ ಖಾತೆ ತೆರೆದು ಕೋಟ್ಯಂತರ ರೂಪಾಯಿ ವರ್ಗಾವಣೆಯಾಯಿತಲ್ಲ, ಇನ್ನೂ ಏಕೆ ನಿಮ್ಮ ಸರ್ಕಾರ ಇದರ ಬಗ್ಗೆ ತನಿಖೆ ಮಾಡಿಸಿಲ್ಲ. ನಿನ್ನಿಂದಾಗಿ ನಿಮ್ಮ ತಂದೆಯಿಂದ ಏಕೆ ರಾಜಿನಾಮೆ ಕೊಡಿಸಿದರು. ತಂಗಿ ಮಕ್ಕಳು, ನೆಂಟರು ಸೇರಿದಂತೆ ಇತರರ ಹೆಸರಿನಲ್ಲಿ ಅಕ್ರಮ ನಡೆಯಿತಲ್ಲ, ಅದರ ಬಗ್ಗೆ ಬಿಚ್ಚಿಡಲೇ? ಈ ವಿಚಾರಗಳೆಲ್ಲ ವಿಧಾನಸಭೆಯಲ್ಲಿ ಚರ್ಚೆಯಾಗಿ ದಾಖಲೆಗೆ ಹೋಗಬೇಕು. ಸರಿಯಾದ ಸಂದರ್ಭದಲ್ಲಿ ಇದರ ಬಗ್ಗೆ ಮಾತನಾಡುತ್ತೇನೆ” ಎಂದರು.

ಪಾಪ ವಿಮೋಚನಾ ಯಾತ್ರೆ

“ಬಿಜೆಪಿ, ಜೆಡಿಎಸ್ ಪಾದಯಾತ್ರೆಯು ಪಾಪ ವಿಮೋಚನೆಯ ಯಾತ್ರೆ. ನೀವು ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೀರಿ. ಕುಮಾರಸ್ವಾಮಿ ಅವರೇ ನಿಮ್ಮ ಸಹೋದರರ ಆಸ್ತಿ ಪಟ್ಟಿ ಬಿಚ್ಚಿಡಿ ಎಂದರೂ ಬಿಚ್ಚಿಡುತ್ತಿಲ್ಲ. ನೀವು ಎಲ್ಲಿಗೆ ಬೇಕಾದರೂ ಚರ್ಚೆಗೆ ಕರೆಯಿರಿ ನಾನು ಸಿದ್ಧನಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ | Bangladesh Unrest: ಬಾಂಗ್ಲಾದಲ್ಲಿ 19,000 ಭಾರತೀಯರು ಸಿಲುಕಿದ್ದಾರೆ; ಸಚಿವ ಜೈ ಶಂಕರ್‌

“ಮಂಡ್ಯದ ಜನರ ಬದುಕಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಎಸ್.ಎಂ. ಕೃಷ್ಣ ಅವರ ಬಗ್ಗೆ ಕುಮಾರಸ್ವಾಮಿ ಮಾತನಾಡುತ್ತಾರೆ. ನಿಮಗೆ ಮಂಡ್ಯದ ನಾಯಕರಾದ ಮಾದೇಗೌಡರು ಹಾಗೂ ಕೃಷ್ಣ ಅವರ ಬಗ್ಗೆ ಮಾತನಾಡುವ ಹಕ್ಕಿಲ್ಲ. ರೈತರ ಮಕ್ಕಳ, ಕಾವೇರಿ ತಾಯಿಯ ನಾಡಿನ ರಕ್ಷಣೆಗಾಗಿ ಜನರು ನಮಗೆ 136 ಸ್ಥಾನ ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುತ್ತೇವೆ. ನಿಮ್ಮ ಕುತಂತ್ರ, ಕೇಂದ್ರ ಸರ್ಕಾರದ ಕುತಂತ್ರ ಜನರ ತೀರ್ಪಿನ ಮುಂದೆ ನಡೆಯುವುದಿಲ್ಲ” ಎಂದು ವಾಗ್ದಾಳಿ ನಡೆಸಿದರು.

Continue Reading

ಕರ್ನಾಟಕ

Gruha Jyothi: ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ

Gruha Jyothi: ಮನೆ ಬದಲಾಯಿಸಿದ ನಂತರ ಮತ್ತೆ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Gruha Jyothi
Koo

ಬೆಂಗಳೂರು: ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ (Gruha Jyothi) ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.

ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್‌ ಮಾಡುವುದು ಹೇಗೆ?

ಗ್ರಾಹಕರು https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌.ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು.

ʼಗೃಹಜ್ಯೋತಿʼಗೆ ವರ್ಷದ ಸಂಭ್ರಮ

2024ರ ಜೂನ್‌ವರೆಗೆ ಒಟ್ಟು ನೋಂದಣಿ-1.67 ಕೋಟಿ, ಒಟ್ಟು ಫಲಾನುಭವಿಗಳು-1.56 ಕೋಟಿ. 2023 ಆಗಸ್ಟ್ ರಿಂದ 2024 ಜೂನ್‌ವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಒಟ್ಟು ಸಬ್ಸಿಡಿ-8239 ಕೋಟಿ ರೂ.

“ರಾಜ್ಯದ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜತೆಗೆ, ಡಿಲಿಂಕ್‌ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ, ಜನತೆ ಈ ಸೌಲಭ್ಯ ಒದಗಿಸಲಾಗಿದೆ” ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

“ಗೃಹ ಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡುವಂತೆ ಗ್ರಾಹಕರು ಕೋರಿದ್ದರು, ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ತಿಳಿಸಿದ್ದಾರೆ.

Continue Reading

ಕೊಪ್ಪಳ

Koppala News: ಸಿದ್ದಾಪುರದಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಡಿಸಿ ನಲೀನ್ ಅತುಲ್ ಚಾಲನೆ

Koppala News: ಕೃಷಿ ಇಲಾಖೆ ವತಿಯಿಂದ ಕಾರಟಗಿಯ ಸಿದ್ದಾಪುರ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಯಾಂತ್ರೀಕೃತ ಭತ್ತದ ಸಸಿ ನಾಟಿ ಕಾರ್ಯಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ನಲೀನ್ ಅತುಲ್ ಚಾಲನೆ ನೀಡಿದರು.

VISTARANEWS.COM


on

Koppala News
Koo

ಗಂಗಾವತಿ/ಕಾರಟಗಿ: ಕೃಷಿ ಇಲಾಖೆ ವತಿಯಿಂದ ಕಾರಟಗಿಯ ಸಿದ್ದಾಪುರ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಯಾಂತ್ರೀಕೃತ ಭತ್ತದ ಸಸಿ ನಾಟಿ ಕಾರ್ಯಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ನಲೀನ್ ಅತುಲ್ ಚಾಲನೆ (Koppala News) ನೀಡಿದರು.

ಸಿದ್ದಾಪುರ ಗ್ರಾಮದ ರೈತ ನೀರಗಂಟಿ ಬಸವರಾಜ ಅವರ ಗದ್ದೆಯಲ್ಲಿ ನೀರು ತುಂಬಿದ್ದ ಮಡಿಗಳಲ್ಲಿ ತಾವೇ ಸ್ವತಃ ಟ್ರಾಕ್ಟರ್ ಚಲಾಯಿಸುವ ಮೂಲಕ ಯಾಂತ್ರೀಕೃತ ಭತ್ತದ ಸಸಿ ನಾಟಿಗೆ ಚಾಲನೆ ನೀಡಿ, ಬಳಿಕ ಮಾತನಾಡಿದ ಡಿಸಿ ನಲೀನ್ ಅತುಲ್, ಭತ್ತ ನಾಟಿಗೂ ಯಂತ್ರಗಳು ಬಂದಿವೆ. ಯಾಂತ್ರೀಕೃತ ನಾಟಿ ಪದ್ದತಿಯನ್ನು ಕೃಷಿ ಇಲಾಖೆ ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಲಹೆ ಪಡೆದು ಹೆಚ್ಚಿನ ರೈತರು ಈ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಕೂಲಿಕಾರರ ಸಮಸ್ಯೆ ನೀಗಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಡ್ರಮ್ ಸೀಡರ್‌ನಿಂದ ಭತ್ತ ಸಸಿ ನಾಟಿ ವಿಧಾನವನ್ನು ಸಣ್ಣ ಮತ್ತು ಅತಿ ಸಣ್ಣ ರೈತರು ಅಳವಡಿಸಿಕೊಳ್ಳಬೇಕು. ಇದರಿಂದ ಖರ್ಚು ತಗ್ಗುತ್ತದೆ ಅಲ್ಲದೇ, ಸಕಾಲಕ್ಕೆ ಭತ್ತದ ನಾಟಿ ಸಾಧ್ಯವಾಗುತ್ತದೆ ಎಂದರು.

ಇದನ್ನೂ ಓದಿ: Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮಾತನಾಡಿ, ಯಾಂತ್ರೀಕೃತ ನಾಟಿ ಪದ್ಧತಿಯಲ್ಲಿ ಚಾಪೆ ಮಡಿ ಪದ್ಧತಿಯಲ್ಲಿ ಬೆಳೆದ ಸಸಿಗಳನ್ನು ಈ ಯಂತ್ರದಿಂದ 8 ತಾಸುಗಳಲ್ಲಿ 7.5 ರಿಂದ 8.8 ಎಕರೆ ಪ್ರದೇಶವನ್ನು ಏಕಕಾಲಕ್ಕೆ ನಾಟಿ ಮಾಡಬಹುದು.

ಮಣ್ಣಿನ ಗುಣಧರ್ಮಕ್ಕೆ ಅನುಗುಣವಾಗಿ ಸಸಿಗಳ ನಡುವಿನ ಅಂತರ ಮತ್ತು ನಾಟಿ ಮಾಡುವ ಆಳವನ್ನು ಹೋದಾಣಿಕೆ ಮಾಡಲು ಅವಕಾಶವಿದೆ. 16-18 ದಿನದ ವಯಸ್ಸಿನ ಸಸಿಗಳು ನಾಟಿಗೆ ಸೂಕ್ತ ಮತ್ತು ಶೇ. 15-20 ರಷ್ಟು ಇಳುವರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎಂದು ಮಾಹಿತಿ ನೀಡಿದರು.

2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸಿದ್ದಾಪುರ ಹೋಬಳಿಯಲ್ಲಿ 15 ಸಾವಿರ ಹೆಕ್ಟೇರು ಪ್ರದೇಶಲ್ಲಿ ಭತ್ತದ ನಾಟಿ ಕಾರ್ಯ ಪ್ರಾರಂಭವಾಗಿದೆ. ಯಾಂತ್ರೀಕೃತ ನಾಟಿ ಪದ್ಧತಿ ಉತ್ತೇಜಿಸಲು ಕೃಷಿ ಇಲಾಖೆ ವಿವಿಧ ರೈತರ ಗದ್ದೆಗಳಲ್ಲಿ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳುತ್ತಿದೆ. ಈ ಸಾಲಿನಲ್ಲಿ ಒಟ್ಟು 5 ಸಾವಿರ ಎಕರೆ ಪ್ರದೇಶದಲ್ಲಿ ಯಾಂತ್ರೀಕೃತ ಭತ್ತದ ನಾಟಿ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಉಕ್ಕುಂದ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ರಾಘವೇಂದ್ರ ಎಲಿಗಾರ, ತಹಸೀಲ್ದಾರ ಕುಮಾರಸ್ವಾಮಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್, ಸಿಬ್ಬಂದಿಗಳಾದ ನಿಂಗಪ್ಪ, ಮಾರುತಿ, ನಾಗರಾಜ, ಮೇಘಶ್ರೀ ಹಾಗೂ ಇತರರಿದ್ದರು.

Continue Reading

ಕರ್ನಾಟಕ

DCET 2024: ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

DCET 2024: ಡಿಸಿಇಟಿ-24 ತೆಗೆದುಕೊಂಡು ಮೊದಲ ಸುತ್ತಿನಲ್ಲಿ ಎಂಜಿನಿಯರಿಂಗ್ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ ಮಾಡಲು ಆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕೆಇಎ ತಿಳಿಸಿದೆ.

VISTARANEWS.COM


on

DCET 2024
Koo

ಬೆಂಗಳೂರು: ಡಿಸಿಇಟಿ-24 (DCET 2024) ತೆಗೆದುಕೊಂಡು, ಮೊದಲ ಸುತ್ತಿನಲ್ಲಿ ಎಂಜಿನಿಯರಿಂಗ್ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ ಮಾಡಲು ಆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಮಳೆ ಕಾರಣಕ್ಕೆ ಶುಲ್ಕ ಪಾವತಿ ಇತ್ಯಾದಿ ಸಮಸ್ಯೆಗಳು ಎದುರಾಗಿವೆ ಎಂದು ಅಭ್ಯರ್ಥಿಗಳು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿದ್ದು, ಇಚ್ಛೆ ದಾಖಲಿಸಲು ಮತ್ತಷ್ಟು ದಿನ ಅವಕಾಶ ನೀಡಲಾಗುವುದು. ಸದ್ಯದಲ್ಲೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಮೊದಲ ಸುತ್ತಿನಲ್ಲಿ ಚಾಯ್ಸ್ – 1 ಮತ್ತು 2 ಅನ್ನು ಆಯ್ಕೆ ಮಾಡಿಕೊಂಡವರು ಆ.8ರೊಳಗೆ ಚಲನ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಶುಲ್ಕ ಪಾವತಿಗೆ ಆ.9ರವರೆಗೆ ಅವಕಾಶ ಇರುತ್ತದೆ. ಆ.10ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾಟಾಗೂ ಅವಕಾಶ

ಡಿಸಿಇಟಿ-24ಗೆ ಅರ್ಜಿ ಸಲ್ಲಿಸಿ, ದಾಖಲಾತಿ ಪೂರ್ಣಗೊಳಿಸಿರುವ ಆರ್ಕಿಟೆಕ್ಚರ್ ಅಭ್ಯರ್ಥಿಗಳು, ನಾಟಾ ಅಂಕಗಳನ್ನು ಪ್ರಾಧಿಕಾರಕ್ಕೆ ಸಲ್ಲಿಸದೇ ಇದ್ದಲ್ಲಿ ಆ.8ರಂದು ಖುದ್ದು ಕೆಇಎಗೆ ಬಂದು ಸಲ್ಲಿಸಿ, ರಾಂಕ್ ಪಡೆಯಬಹುದು. ನಂತರ 2ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ | Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

ನೀಟ್‌ ರೋಲ್‌ ನಂಬರ್‌ ದಾಖಲಿಸಲು ಅವಕಾಶ, ಲಿಂಕ್‌ ಪಡೆಯಲು ಹೀಗೆ ಮಾಡಿ

ಬೆಂಗಳೂರು: ಈಗಾಗಲೇ ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ (NEET 2024) ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್‌ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ಲಿಂಕ್ ಬಿಡುಗಡೆ ಮಾಡಲಿದೆ. ಆಗಸ್ಟ್ 5ರ ಬೆಳಗ್ಗೆ 11ಕ್ಕೆ ಕೆಇಎ ವೆಬ್‌ಸೈಟ್‌ನಲ್ಲಿ (KEA Website) ಯುಜಿ ನೀಟ್-2024 ಲಿಂಕ್ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 7 ರಂದು ಬೆಳಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್‌ಅನ್ನು ಎನ್‌ಟಿಎ ಡೇಟಾದೊಂದಿಗೆ ತಾಳೆ ಮಾಡಿ ಯುಜಿ ನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೇರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಆ.7ರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವವರು ಇನ್ನೂ ಅರ್ಜಿ ಸಲ್ಲಿಸದೇ ಇದ್ದಲ್ಲಿ ಅಂತಹವರು ಆ.7ರಿಂದ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್‌ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜುಲೈ 26ರಂದು ನೀಟ್‌ ಯುಜಿ 2024 ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು.

Continue Reading
Advertisement
Bajrang Punia
ಕ್ರೀಡೆ27 mins ago

Bajrang Punia: ‘ದೇಶದಲ್ಲಿ’ ಸೋತು ಒಲಿಂಪಿಕ್ಸ್​ನಲ್ಲಿ ಗೆಲುವಿನ ಹೆಜ್ಜೆಯಿಟ್ಟ​ ವಿನೇಶ್​​; ಬಜರಂಗ್‌ ಪೂನಿಯ ಟಾಂಗ್​

Viral News
ವೈರಲ್ ನ್ಯೂಸ್34 mins ago

Viral News: ಗುಪ್ತಾಂಗ ಭಾಗದಲ್ಲಿ ಪತ್ತೆಯಾಯ್ತು ಮೊಬೈಲ್‌; ಪರೀಕ್ಷೆಯಲ್ಲಿ ಕಾಪಿ ಹೊಡಿಯೋಕೆ ಅಭ್ಯರ್ಥಿಗಳ ಹೊಸ ಟೆಕ್ನಿಕ್‌!

DK Shivakumar
ಕರ್ನಾಟಕ39 mins ago

DK Shivakumar: ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

Gruha Jyothi
ಕರ್ನಾಟಕ50 mins ago

Gruha Jyothi: ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ

Mukesh Ambani Mobile
ವಾಣಿಜ್ಯ57 mins ago

Mukesh Ambani Mobile: ಮುಕೇಶ್ ಅಂಬಾನಿ, ನೀತಾ ಅಂಬಾನಿ ಯಾವ ಮೊಬೈಲ್‌ ಬಳಸುತ್ತಾರೆ? ಅವುಗಳ ವೈಶಿಷ್ಟ್ಯ ಏನೇನು?

walking
ಆರೋಗ್ಯ1 hour ago

Walking for Weight Loss: ಇಲ್ಲಿವೆ ಬಗೆಬಗೆಯ ವಾಕಿಂಗ್‌; ತೂಕ ಇಳಿಸಲು ಇವುಗಳಿಂದಲೂ ಸಾಧ್ಯ! ಟ್ರೈ ಮಾಡಿ ನೋಡಿ

Koppala News
ಕೊಪ್ಪಳ1 hour ago

Koppala News: ಸಿದ್ದಾಪುರದಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಡಿಸಿ ನಲೀನ್ ಅತುಲ್ ಚಾಲನೆ

DCET 2024
ಕರ್ನಾಟಕ2 hours ago

DCET 2024: ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

Paris Olympics
ಕ್ರೀಡೆ2 hours ago

Paris Olympics: ನಾಳೆ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧೆಗಳ ವಿವರ ಹೀಗಿದೆ

Handwork Saree Blouse
ಫ್ಯಾಷನ್2 hours ago

Handwork Saree Blouse: ಫೆಸ್ಟಿವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಹ್ಯಾಂಡ್‌ ವರ್ಕ್‌ ಡಿಸೈನರ್‌ ಬ್ಲೌಸ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು4 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌