ಮಾಜಿ ಸಚಿವ ರಾಯರಡ್ಡಿ ಆರೋಪ ದುಸ್ಸಾಹಸ ಮಾಡುವುದು ಬೇಡ ಎಂದ ಸಚಿವ ಅಶ್ವತ್ಥನಾರಾಯಣ - Vistara News

ರಾಜಕೀಯ

ಮಾಜಿ ಸಚಿವ ರಾಯರಡ್ಡಿ ಆರೋಪ ದುಸ್ಸಾಹಸ ಮಾಡುವುದು ಬೇಡ ಎಂದ ಸಚಿವ ಅಶ್ವತ್ಥನಾರಾಯಣ

ರಾಯರಡ್ಡಿ ಅವರ ಆರೋಪಗಳಿಗೆ ಬುಧವಾರ ಪ್ರತಿಕ್ರಿಯಿಸಿರುವ ಅವರು, ‘ಬಿಜೆಪಿ ಮೇಲೆ ಕೆಸರೆರಚುವ ಭರದಲ್ಲಿ ರಾಯರಡ್ಡಿ ತಮ್ಮ ಪಕ್ಷ ಎಸಗಿರಬಹುದಾದ ಅಕ್ರಮಗಳನ್ನೇ ಬಯಲು ಮಾಡಿದ್ದಾರೆ” ಎಂದಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್  ಸಮ್ಮಿಶ್ರ ಸರಕಾರದ ಅವಧಿಯಲ್ಲಿ  ಲ್ಯಾಪ್‌ಟಾಪ್ ಖರೀದಿಯ ನಡೆದಿರಬಹುದಾದ ಅಕ್ರಮಗಳನ್ನು ಬಿಜೆಪಿ ಸರಕಾರದ ತಲೆಗೆ ಕಟ್ಟಲು ಕಾಂಗ್ರೆಸ್ ಪಕ್ಷದ ನಾಯಕ ಬಸವರಾಜ ರಾಯರಡ್ಡಿ ಪ್ರಯತ್ನಿಸಿರುವುದು ದುಸ್ಸಾಹಸ. ಇಂದು ಆ ಪಕ್ಷ ಇಂಗು ತಿಂದ ಮಂಗನ ಸ್ಥಿತಿಯಲ್ಲಿ ಇರುವುದನ್ನು ಸೂಚಿಸುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಕುಟುಕಿದ್ದಾರೆ.

ರಾಯರಡ್ಡಿ ಅವರ ಆರೋಪಗಳಿಗೆ ಬುಧವಾರ ಪ್ರತಿಕ್ರಿಯಿಸಿರುವ ಅವರು, ‘ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಈ ವ್ಯಕ್ತಿ ಉನ್ನತ ಶಿಕ್ಷಣ ಸಚಿವರಾಗಿದ್ದರು. ನಂತರ ಕಾಂಗ್ರೆಸ್ ಪಕ್ಷವು ಜೆಡಿಎಸ್ ಜತೆಗೂಡಿ ಸರಕಾರ ರಚಿಸಿತು. ಆಗ ಒಂದು ಲ್ಯಾಪ್‌ಟಾಪ್‌ಗೆ ₹28,320 ನಿಗದಿ ಪಡಿಸಿ ಖರೀದಿಸಲು ಟೆಂಡರ್ ಮತ್ತು ಖರೀದಿ ಆದೇಶವನ್ನೆಲ್ಲ ಹೊರಡಿಸಲಾಯಿತು. ನಂತರ ಬಂದ ಬಿಜೆಪಿ ಸರಕಾರ ಆ ಲ್ಯಾಪ್‌ಟಾಪ್‌ಗಳನ್ನು ಸ್ವೀಕರಿಸುವ ಕೆಲಸವನ್ನು ಮಾತ್ರ ಮಾಡಿದೆ. ಇದು ಅವರಿಗೂ ಗೊತ್ತಿದೆ. ಆದರೂ ಅವರು, ಕೋತಿ ತಾನು ಮೊಸರು ತಿಂದು ಮೇಕೆಯ ಗಡ್ಡಕ್ಕೆ ಒರೆಸಿದಂತಹ ಕೆಲಸಕ್ಕೆ ಇಳಿದಿದ್ದಾರೆ ಎಂದು ಖಂಡಿಸಿದ್ದಾರೆ.

ಬಿಜೆಪಿ ಮೇಲೆ ಕೆಸರೆರಚುವ ಭರದಲ್ಲಿ ರಾಯರಡ್ಡಿ ತಮ್ಮ ಪಕ್ಷ ಎಸಗಿರಬಹುದಾದ ಅಕ್ರಮಗಳನ್ನೇ ಬಯಲು ಮಾಡಿದ್ದಾರೆ. ಬಿಜೆಪಿ ಸರಕಾರ ಬಂದ ಬಳಿಕ, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಿಂತ ಟ್ಯಾಬ್ ಬಳಕೆ ಸೂಕ್ತವೆಂದು ಪರಿಗಣಿಸಿ, ಸ್ಯಾಮ್‌ಸಂಗ್‌ ಬ್ರ್ಯಾಂಡ್‌ನ ಟ್ಯಾಬ್ಲೆಟ್‌ಗಳನ್ನೇ ಕೊಡುತ್ತಿದೆ. ಇದರಲ್ಲಿ ಗುಣಮಟ್ಟ ಇಲ್ಲ ಎಂದು ಅವರು ಆರೋಪಿಸಿರುವುದು ಉಡಾಫೆಯ ಪರಮಾವಧಿ ಎಂದು ಅಶ್ವತ್ಥನಾರಾಯಣ ಟೀಕಿಸಿದರು.

ರಾಯರಡ್ಡಿ ಅವರಿಗೆ ನೈತಿಕ ಪ್ರಜ್ಞೆ ಇಲ್ಲ. ಯಾಕೆಂದರೆ, ಅವರಿರುವ ಕಾಂಗ್ರೆಸ್ಸಿನ ನರನಾಡಿಗಳಲ್ಲೆಲ್ಲ ಭ್ರಷ್ಟಾಚಾರ ಹರಿಯುತ್ತಿದೆ. ಬಿಜೆಪಿ ಸರಕಾರ ಬಂದಮೇಲೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ, ಸ್ವಾಯತ್ತತೆ ಎಲ್ಲವನ್ನೂ ತರಲಾಗಿದೆ. ರಾಯರಡ್ಡಿ ಆತ್ಮಾವಲೋಕನ ಮಾಡಿಕೊಳ್ಳದೆ, ಬಿಜೆಪಿ ಸರಕಾರದ ಮೇಲೆ ಕೆಸರು ಎರಚಲು ಮುಂದಾಗಿರುವುದು ನಿರ್ಲಜ್ಜತೆಯ ಪರಮಾವಧಿ ಎಂದು ಅಶ್ವತ್ಥ ನಾರಾಯಣ ಟೀಕಿಸಿದ್ದಾರೆ.

ಇದನ್ನು ಓದಿ | ಅಶ್ವತ್ಥನಾರಾಯಣಗೆ ತಾಕತ್ ಇದ್ದರೆ ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ: H.D. ಕುಮಾರಸ್ವಾಮಿ ಸವಾಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Harish Poonja: ಅಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಆರೋಪದಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿದೆ.

VISTARANEWS.COM


on

Harish Poonja
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕನ ವಿರುದ್ಧ ಕೇಸ್‌ ದಾಖಲಾಗಿದೆ.

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ | Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Prajwal Revanna Case
Devaraje Gowda’s Claim About DK Shivakumar’s Rs 100 Crore Is True: Says R Ashok

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ (Devarajegowda) ನೀಡಿದ ಹೇಳಿಕೆ ಸಂಚಲನ ಮೂಡಿಸಿದೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಅವರು 100 ಕೋಟಿ ರೂ. ಆಫರ್‌ ಮಾಡಿದ್ದರು ಎಂದು ದೇವರಾಜೇಗೌಡ ನೀಡಿದ ಹೇಳಿಕೆ ಕುರಿತು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಪ್ರತಿಕ್ರಿಯಿಸಿದ್ದು, “ಬೆಂಕಿ ಇಲ್ಲದೆ ಹೊಗೆಯಾಡಲ್ಲ” ಎಂದಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾದ ಬಳಿಕ ಆರ್‌.ಅಶೋಕ್‌ ಸುದ್ದಿಗಾರರೊಂದಿಗೆ ಮಾತನಾಡಿದರು. “ದೇವರಾಜೇಗೌಡ ಬಳಿ ಸಾಕ್ಷ್ಯ ಇದೆ ಎಂಬ ಕಾರಣಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ. ದೇವರಾಜೇಗೌಡ ಹೊರಗಿದ್ದರೆ ದಾಖಲೆ ಬಿಡುಗಡೆ ಮಾಡುತ್ತಾರೆ ಎಂಬ ಭಯದಿಂದ ಬಂಧಿಸಲಾಗಿದೆ. ದೇವರಾಜೇಗೌಡ ಮಾಡಿದ ಆರೋಪಗಳು ನಿಜವೇ ಇರಬೇಕು. ಅದಕ್ಕೆಲ್ಲ ಅವರ ಬಳಿ ಸಾಕ್ಷ್ಯ ಇದೆ ಎನಿಸುತ್ತದೆ. ಅವರು ಹೇಳಿದ್ದೆಲ್ಲ ನೂರಕ್ಕೆ ನೂರು ಸತ್ಯ. ಅಷ್ಟಕ್ಕೂ ಬೆಂಕಿಯೇ ಇಲ್ಲದೆ ಹೊಗೆಯಾಡಲ್ಲ” ಎಂದು ಹೇಳಿದರು.

“ದೇವರಾಜೇಗೌಡ ಅವರೇ ತಮಗೆ ಹಣದ ಆಫರ್ ಮಾಡಿದ ಬಗ್ಗೆ ಹೇಳಿದ್ದಾರೆ. ಈಗಾಗಲೇ ಡಿಕೆಶಿ ಮಾತಾಡಿದ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ. ಅವರನ್ನು ಬಿಟ್ಟರೆ ಸರಣಿ ದಾಖಲೆ ಬಿಡುಗಡೆ ಮಾಡುತ್ತಾರೆ. ಸರ್ಕಾರಕ್ಕೆ ಮುಜುಗರ ಆಗುತ್ತದೆ ಎಂದು ಬಂಧಿಸಿದ್ದಾರೆ. ಇದೆಲ್ಲ ಮಾಧ್ಯಮಗಳಲ್ಲಿ ಬರಬಾರದು ಎಂಬುದು ಡಿಕೆಶಿ ಉದ್ದೇಶವಾಗಿದೆ. ದೇವರಾಜೇಗೌಡ ಹೇಳಿದ್ದೆಲ್ಲ ಸತ್ಯ ಇರಬಹುದು. ರಣದೀಪ್ ಸುರ್ಜೇವಾಲಾ, ಸಿಎಂ‌ ಸಿದ್ದರಾಮಯ್ಯ, ಡಿಕೆಶಿ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ” ಎಂದು ಆರೋಪಿಸಿದರು.

ಒಕ್ಕಲಿಗರ ಮುಗಿಸಲು ತಂತ್ರ

“ರಾಜ್ಯದಲ್ಲಿ ಒಕ್ಕಲಿಗರನ್ನು ಮುಗಿಸಲು ಕಾಂಗ್ರೆಸ್‌ ತಂತ್ರ ಮಾಡುತ್ತಿದೆ. ಈಗಾಗಲೇ ಸಿದ್ದರಾಮಯ್ಯ ದಲಿತರನ್ನು ಮುಗಿಸಿದ್ದಾರೆ. ಪರಮೇಶ್ವರ್ ಅವರು ಸಿಎಂ ಅಗೋದನ್ನು ತಪ್ಪಿಸಿದ್ದಾರೆ. ಸಿಬಿಐ ತನಿಖೆಗೆ ಕೊಟ್ರೆ ಸತ್ಯ ಹೊರಗೆ ಬರುತ್ತದೆ ಎಂದು ತನಿಖೆಗೆ ಕೊಡತ್ತಿಲ್ಲ. ಕೆ.ಜೆ. ಜಾರ್ಜ್‌ ವಿಚಾರದಲ್ಲೂ ಸಿಬಿಐ ತನಿಖೆ ನಡೆಯಿತು. ತಪ್ಪಿದ್ದರೆ ತಪ್ಪಿದೆ ಎಂದು, ತಪ್ಪಿಲ್ಲದಿದ್ದರೆ ತಪ್ಪಿಲ್ಲ ಎಂದು ಸಿಬಿಐ ವರದಿ ನೀಡುತ್ತದೆ. ಎಸ್ಐಟಿಯಿಂದ ಸತ್ಯ ಹೊರಗೆ ಬರುತ್ತದೆ ಎಂಬ ನಂಬಿಕೆ ಯಾರಿಗೂ ಇಲ್ಲ. ಸರ್ಕಾರ ಹೇಳಿದಂತೆ ಎಸ್‌ಐಟಿ ಕೆಲಸ ಮಾಡುತ್ತದೆ. ಕಾರ್ತಿಕ್‌ಗೆ ಜಾಮೀನು ನಿರಾಕರಿಸಿದರೂ ಯಾಕೆ ಬಂಧಿಸಿಲ್ಲ? ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲಿ. ಇದು ಪ್ರಜ್ವಲ್‌ ರೇವಣ್ಣ ಅವರಿಗೂ ಅನ್ವಯವಾಗುತ್ತದೆ. ಆದರೆ, ಪೆನ್‌ಡ್ರೈವ್‌ ಹಂಚಿಕೆ ಮಾಡಿದವರಿಗೂ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ಕರೆತರೋಕೆ ಎಸ್‌ಐಟಿ ಮಾಸ್ಟರ್‌ ಸ್ಟ್ರೋಕ್!‌

ದೇವರಾಜೇಗೌಡ ಹೇಳಿದ್ದೇನು?

“ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದರು.

Continue Reading

ರಾಜಕೀಯ

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

R Ashok: ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದ್ದು, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

VISTARANEWS.COM


on

R Ashok
ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ವಿಪಕ್ಷ ನಾಯಕ ಆರ್‌.ಅಶೋಕ್‌ ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದರು.
Koo

ಬೆಂಗಳೂರು: ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ. ಇದರಿಂದ ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎನಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಆರೋಪಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್‌ ಅವರ ಆಡಿಯೊ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ ಎಂದರು.

ಇದನ್ನೂ ಓದಿ | BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯರನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದರು.

ಇದನ್ನೂ ಓದಿ | Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

ದೇವೇಗೌಡರ ಭೇಟಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದ್ದೇನೆ. ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಕೆಲವು ಮಾತನಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಅಶೋಕ್‌ ತಿಳಿಸಿದರು.

Continue Reading

ಕರ್ನಾಟಕ

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Prajwal Revanna Case: ʼʼಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಪೆನ್​​ಡ್ರೈವ್ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ಯಾವುದೋ ವಿಚಾರದಲ್ಲಿ ನನ್ನನ್ನು ದೇವರಾಜೇಗೌಡ ಸಿಕ್ಕಿಸಿದ್ದಾನೆʼʼ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹೇಳಿದ್ದಾರೆ. ʼʼಪೆನ್​​ಡ್ರೈವ್​​​ ಹೊರಗೆ ಬಿಟ್ಟಿದ್ದು ದೇವರಾಜೇಗೌಡ ಮತ್ತು ಕಾರ್ತಿಕ್. ಹೀಗಾಗಿ ಈ ಇಬ್ಬರನ್ನೂ ​ವಿಚಾರಣೆ ನಡೆಸಬೇಕು. ಈ ಪ್ರಕರಣಕ್ಕೂ ಡಿ.ಕೆ.ಶಿವಕುಮಾರ್​ ಅವರಿಗಾಗಲಿ ಮತ್ತು ನನಗಾಗಲಿ ಯಾವುದೆ ಸಂಬಂಧವಿಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ʼʼಹಾಸನ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಪೆನ್​​ಡ್ರೈವ್ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ಯಾವುದೋ ವಿಚಾರದಲ್ಲಿ ನನ್ನನ್ನು ದೇವರಾಜೇಗೌಡ ಸಿಕ್ಕಿಸಿದ್ದಾನೆʼʼ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹೇಳಿದ್ದಾರೆ. ʼʼಪೆನ್​​ಡ್ರೈವ್​​​ ಹೊರಗೆ ಬಿಟ್ಟಿದ್ದು ದೇವರಾಜೇಗೌಡ ಮತ್ತು ಕಾರ್ತಿಕ್. ಹೀಗಾಗಿ ಈ ಇಬ್ಬರನ್ನೂ ​ವಿಚಾರಣೆ ನಡೆಸಬೇಕು. ಈ ಪ್ರಕರಣಕ್ಕೂ ಡಿ.ಕೆ.ಶಿವಕುಮಾರ್​ ಅವರಿಗಾಗಲಿ ಮತ್ತು ನನಗಾಗಲಿ ಯಾವುದೆ ಸಂಬಂಧವಿಲ್ಲʼʼ ಎಂದು ಸ್ಪಷ್ಟಪಡಿಸಿದ್ದಾರೆ.

ʼʼದೇವರಾಜೇಗೌಡ ನನಗೆ ಫೋನ್ ಮಾಡಿ, ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿ ಮಾಡಿಸುವಂತೆ ಹೇಳಿದ್ದ. ನಾನು ಆಗಲಿ ಎಂದು ಫೋನ್​ನಲ್ಲಿ ಹೇಳಿದ್ದೆ. ಬಳಿಕ ಡಿಕೆಶಿ ಅವರಿಗೆ ಕರೆ ಮಾಡಿ ಹಲೋ ದೇವರಾಜೇಗೌಡ ಎಂದಿದ್ದು ಬಿಟ್ಟು ಬೇರೇನೂ ಕೇಳಿಲ್ಲ. ಇದನ್ನೇ ಮುಂದಿಟ್ಟುಕೊಂಡು ದೇವರಾಜೇಗೌಡ ಸುಳ್ಳು ಮಾಹಿತಿ ನೀಡಿದ್ದಾನೆ. ದೇವರಾಜೇಗೌಡ ಏ. 29ರಂದು ಬೆಂಗಳೂರಿನ ಎಂ.ಜಿ.ರಸ್ತೆಯ ಬೌರಿಂಗ್​ ಕ್ಲಬ್​ನಲ್ಲಿ ನಮ್ಮನ್ನು ಭೇಟಿ ಮಾಡಿದ್ದೆ ಎಂದು ತಿಳಿಸಿದ್ದಾನೆ. ಮೋಸ್ಟ್ ಕ್ರಿಮಿನಲ್ ಮ್ಯಾನ್ ಇವನು. ಇವನ ಜತೆ ಯಾರೇ ವ್ಯವಹರಿಸುತ್ತಿದ್ದರೂ ಎಚ್ಚರಿಕೆಯಿಂದ ಇರಬೇಕು. ಬರೀ ಒಂದು ಫೋನ್‌ ಮಾತಾಡಿದ್ದಕ್ಕೆ ಸೀನ್ ಕ್ರಿಯೇಟ್ ಮಾಡಿದ್ದಾನೆʼʼ ಎಂದು ಶಿವರಾಮೇಗೌಡ ಹೇಳಿದ್ದಾರೆ.

ʼʼಅವನು (ದೇವರಾಜೇಗೌಡ) ಒಳಗೆ ಹೋದ ಮೇಲೆ ಹುಚ್ಚು ನಾಯಿ ಒಳಗೆ ಹೋಯಿತಲ್ಲ ಎಂದು ಪ್ರಾರ್ಥನೆ ಮಾಡಿದ್ದೇನೆ. ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್​​ಡ್ರೈವ್ ಅನ್ನು ಮಾರಾಟಕ್ಕೆ ಇಟ್ಟಿದ್ದೇ ದೇವರಾಜೇಗೌಡ. ಪೊಲೀಸ್ ಬಾಷೆಯಲ್ಲಿ ವಿಚಾರಿಸಬೇಕು. ಆಗ ಸತ್ಯ ಬಾಯಿ ಬಿಡುತ್ತಾನೆʼʼ ಎಂದು ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.

ಇನ್ನು ದೇವರಾಜೇಗೌಡ ಭೇಟಿಯ ಕುರಿತು ಸ್ಪಷ್ಟನೆ ನೀಡಿದ ಶಿವರಾಮೇಗೌಡ ಅವರು, ʼʼನಾನು ದೇವರಾಜೇಗೌಡ ಜತೆ ಮೊದಲು ಮಾತನಾಡಿದ್ದೆ ಏಪ್ರಿಲ್ 29ರಂದು. ಅಂದು ಪೆನ್‌ಡ್ರೈವ್‌ ಕೇಸ್‌ ಅನ್ನು ಸಿಎಂ, ಡಿಸಿಎಂ ಎಲ್ಲ ಸೇರಿ ಮುಚ್ಚಿ ಹಾಕ್ತಾರೆ ಕಣಣ್ಣ ಎಂದು ದೇವರಾಜೆಗೌಡ ಹೇಳಿದ್ದ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಬಿಟ್ಟು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೆಸರನ್ನು ಮಾತ್ರ ಹೇಳುತ್ತಿದ್ದಾನೆ. ವಿಚಾರಣೆಯ ದಿಕ್ಕು ತಪ್ಪಿಸಲು ಕಾಣದ ಕೈಗಳು ಕೆಲಸ ಮಾಡುತ್ತಿವೆʼʼ ಎಂದು ಆರೋಪಿಸಿದ್ದಾರೆ.

ಮಾನನಷ್ಟ ಮೊಕದ್ದಮೆ ಹಾಕುತ್ತೇನೆ

ʼʼಕೇಸ್‌ನಲ್ಲಿ ಪದೇ ಪದೆ ನನ್ನ ಹೆಸರು ಪ್ರಸ್ತಾವಿಸುವ ಕಾರಣ ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಈ ಬಗ್ಗೆ ಈಗಾಗಲೇ ವಕೀಲರ ಜತೆ ಮಾತನಾಡಿದ್ದೇನೆ. ಶ್ರೀಘ್ರದಲ್ಲಿಯೇ ಲೀಗಲ್ ನೋಟಿಸ್‌ ಕೊಡಲಿದ್ದೇವೆ. ಅವನು ನನ್ನ ಬಗ್ಗೆ ಹೇಳಿರುವ ವಿಡಿಯೊವನ್ನು ಈಗಾಗಲೇ ವಕೀಲರಿಗೆ ಕೊಟ್ಟಿದ್ದೇನೆ. ದೇವೇಗೌಡರಿಗೆ ಈ ವಯಸ್ಸಿನಲ್ಲಿ ನೋವು ತಂದ್ರಲ್ಲ ಎಂಬ ನೋವು ನನಗೆ ಕಾಡುತ್ತಿದೆʼʼ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಸೇರ್ಪಡೆ?

ʼʼನಾನು ಈಗ ಬಿಜೆಪಿಗೆ ರಾಜೀನಾಮೆ ಕೊಟ್ಟಿದ್ದೇನೆ. ಮುಂದೆ ಯಾವ ಪಕ್ಷಕ್ಕೆ ಸೇರುತ್ತೇನೆ ಅಂತ ಹೇಳುತ್ತೇನೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಕಳಿಸಿದ್ದೇನೆ. ಅವರು ಇನ್ನೂ ಏನು ಹೇಳಿಲ್ಲʼʼ ಎಂದು ಶಿವರಾಮೇಗೌಡ ತಿಳಿಸಿದ್ದಾರೆ. ʼʼಈ ಹಿಂದೆ ಅಧಿಕಾರ ಕೊಡುತ್ತಾರೆ ಅಂತ ಜೆಡಿಎಸ್​ಗೆ ಸೇರಿದೆ. ಆಮೇಲೆ ರುಬ್ಬಿ ಹೊರಗಡೆಯೂ ಕಳುಹಿಸಿದ್ದಾರೆ. ನಾನು ಮೂಲತಃ ಕಾಂಗ್ರೆಸ್ ವ್ಯಕ್ತಿ. ಯೂತ್‌ ಕಾಂಗ್ರೆಸ್​ನಲ್ಲೂ ಇದ್ದೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

Continue Reading

ಕರ್ನಾಟಕ

MLC Election: ವಿಧಾನ ಪರಿಷತ್‌ ಚುನಾವಣೆ; ನೈಋತ್ಯ ಶಿಕ್ಷಕರ ಕ್ಷೇತ್ರದ 1 ನಾಮಪತ್ರ ತಿರಸ್ಕೃತ

MLC Election: ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿ ನಾಮಪತ್ರ ಪರಿಶೀಲನೆ ನಡೆಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

VISTARANEWS.COM


on

MLC Election
Koo

ಮೈಸೂರು: ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿ ನಾಮಪತ್ರ ಪರಿಶೀಲನೆ ನಡೆಸಲಾಗಿದೆ (MLC Election). ಈ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಚುನಾವಣೆ ಅಧಿಕಾರಿ ಡಾ. ಪ್ರಕಾಶ್ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು. ಈ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್‌ ಕಾರಂತ್‌ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ನಮೂನೆ-26 ನೋಟರಿ ಅಫಿಡವಿತ್‌ ಮತ್ತು ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಎಲ್ಲ 13 ನಾಮಪತ್ರವೂ ಅಂಗೀಕಾರಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ಅಭ್ಯರ್ಥಿಗಳ ನಾಮಪತ್ರವೂ ಸ್ವೀಕೃತಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಈ ಪೈಕಿ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ವಿಧಾನ ಪರಿಷತ್‌ ಚುನಾವಣೆಗೆ ಮೇ 9ರಂದು ಅದಧಿಸೂಚನೆ ಹೊರಡಿಸಲಾಗಿತ್ತು. ಮೇ 17ರ ತನಕ ನಾಮಪತ್ರ ಪರಿಶೀಲನೆ ನಡೆಸಲಾಯಿತು. ಮೇ 20ರ ಅಪರಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

ಬೆಂಗಳೂರು: ʼʼವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆʼʼ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆʼʼ ಎಂದು ತಿಳಿಸಿದ್ದಾರೆ. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದ್ದಾರೆ. ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ʼʼನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆʼʼ ಎಂದು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Continue Reading
Advertisement
IPL 2024 Eliminato
ಕ್ರೀಡೆ4 mins ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ16 mins ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ33 mins ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ44 mins ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ52 mins ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ2 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ2 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Drowned in Lake
ಕರ್ನಾಟಕ2 hours ago

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Bengaluru Rain
ಕರ್ನಾಟಕ2 hours ago

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Kantara Movie
ಸಿನಿಮಾ3 hours ago

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ8 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ10 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌