Karnataka Congress Office: ಬೆಂಗಳೂರು, ಮೈಸೂರಿನಲ್ಲಿ ಕಾಂಗ್ರೆಸ್‌ಗೆ ಹೊಸ ಕಚೇರಿ ಕಟ್ಟಡ; ನಿರ್ಮಾಣಕ್ಕೆ ಸಮಿತಿಗಳ ರಚನೆ - Vistara News

ರಾಜಕೀಯ

Karnataka Congress Office: ಬೆಂಗಳೂರು, ಮೈಸೂರಿನಲ್ಲಿ ಕಾಂಗ್ರೆಸ್‌ಗೆ ಹೊಸ ಕಚೇರಿ ಕಟ್ಟಡ; ನಿರ್ಮಾಣಕ್ಕೆ ಸಮಿತಿಗಳ ರಚನೆ

Karnataka Congress Office: ಬೆಂಗಳೂರಿನ ರೇಸ್ ಕೋರ್ಸ್ (Race course road) ರಸ್ತೆಯಲ್ಲಿರುವ ಕಾಂಗ್ರೆಸ್ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಸಮಿತಿ ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಸಚಿವ ಕೆಜೆ ಜಾರ್ಜ್ (KJ George) ಅವರನ್ನು ನೇಮಿಸಲಾಗಿದೆ.

VISTARANEWS.COM


on

karnataka congress office
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿ ಹಾಗೂ ಮೈಸೂರಿನಲ್ಲಿ ಕಾಂಗ್ರೆಸ್‌ ಪಕ್ಷದ (karnataka congress office) ಕಚೇರಿಗಾಗಿ ಎರಡು ಹೊಸ ಭವ್ಯ ಕಟ್ಟಡಗಳ ನಿರ್ಮಾಣಕ್ಕೆ ಕೆಪಿಸಿಸಿ (KPCC) ಉದ್ದೇಶಿಸಿದ್ದು, ಇದಕ್ಕಾಗಿ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದೆ. ಹಳೆಯ ಕಟ್ಟಡ ಕೆಡವಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಆದೇಶ ನೀಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸಮಿತಿ ರಚಿಸಿದ್ದಾರೆ.

ಬೆಂಗಳೂರಿನ ರೇಸ್ ಕೋರ್ಸ್ (Race course road) ರಸ್ತೆಯಲ್ಲಿರುವ ಕಾಂಗ್ರೆಸ್ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಸಮಿತಿ ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಸಚಿವ ಕೆಜೆ ಜಾರ್ಜ್ (KJ George) ಅವರನ್ನು ನೇಮಿಸಲಾಗಿದೆ. ಎಂಎಲ್ಸಿ ಗೋವಿಂದರಾಜ್ ಸಂಚಾಲಕರಾಗಿ, ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್, ಸಚಿವರಾದ ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಶಾಸಕ ಕೃಷ್ಣಪ್ಪ ಸೇರಿ ಒಟ್ಟು 9 ಮಂದಿ ಸಮಿತಿಯಲ್ಲಿದ್ದಾರೆ.

ಮೈಸೂರಿನಲ್ಲಿ ಕಾಂಗ್ರೆಸ್ ಕಟ್ಟಡ ನಿರ್ಮಾಣ ಜವಾಬ್ದಾರಿ ಸಚಿವ ಮಹದೇವಪ್ಪ ಹೆಗಲಿಗೆ ಹೊರಿಸಲಾಗಿದೆ. ಸಮಿತಿ ಸದಸ್ಯರಾಗಿ ಸಚಿವ ಕೆ. ವೆಂಕಟೇಶ್, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ, ಶಾಸಕ ತನ್ವೀರ್ ಸೇಠ್, ಹರೀಶ್ ಗೌಡ ನೇಮಕ ಮಾಡಲಾಗಿದೆ. ಮುಡಾ ಅಧ್ಯಕ್ಷ ಮರಿಗೌಡ ಕೂಡ ಸಮಿತಿಯಲ್ಲಿದ್ದಾರೆ.

ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

ಮಂಡ್ಯ: “ಕುಮಾರಸ್ವಾಮಿ ಅವರು ಈ ಹಿಂದೆ ಅವರೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಮಂಡ್ಯದ ಮೈಶುಗರ್ ಕಾರ್ಖಾನೆ ಮೈದಾನದಲ್ಲಿ ಮಂಗಳವಾರ ನಡೆದ ʼಜನಾಂದೋಲನ ಸಭೆʼ ಯಲ್ಲಿ ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಅಶ್ವತ್ಥನಾರಾಯಣ್, ಯೋಗೀಶ್ವರ್ ಅವರು ಪರಸ್ಪರ ಆರೋಪ, ಪ್ರತ್ಯಾರೋಪ, ಯೂ ಟರ್ನ್ ಹೊಡೆದಿದ್ದ ಹೇಳಿಕೆಗಳನ್ನು ವಿಡಿಯೋ ಮೂಲಕ ತೆರೆಯ ಮೇಲೆ ಪ್ರದರ್ಶಿಸಿದ ನಂತರ ಡಿಸಿಎಂ ಶಿವಕುಮಾರ್ ಮಾತನಾಡಿದರು.

“ಜನ ತೀರ್ಪು ನೀಡಿದ್ದಾರೆ. ಆದ ಕಾರಣಕ್ಕೆ ಗಂಡು ಭೂಮಿ ಮಂಡ್ಯದಲ್ಲಿ ಗೆಲುವು ಕಂಡಿದ್ದೀರಿ. ಇಲ್ಲಿಗೆ ಬಂದು ನಿಮ್ಮ ತಿರುವು-ಮುರುವು ಹೇಳಿಕೆಗಳ ಬಗ್ಗೆ ಉತ್ತರ ನೀಡಬೇಕು. ನಿಮ್ಮ ಅಮೃತದ ನುಡಿಮುತ್ತುಗಳನ್ನು ಈ ನೆಲದ ಮೇಲೆ ಉದುರಿಸಬೇಕು. “ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ” ಎಂದು ಶಿವಕುಮಾರ್ ಅವರು ಕುಮಾರಸ್ವಾಮಿ ಅವರನ್ನು ಛೇಡಿಸಿದರು.

“ಮೋದಿ ಅವರ ಕೈ ಹಿಡಿದು ಕೇವಲ ಐದು ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಕುಮಾರಣ್ಣ ಹೇಳಿದ್ದರು. ಆದರೆ ಈಗ ನಾವು ಐದು ಜನ ಮಂತ್ರಿಗಳಿದ್ದೇವೆ, ನಾನು ಆ ರೀತಿ ಮಾತು ಕೊಡಲು ಮೂರ್ಖನೇ ಎಂದು ಹೇಳುತ್ತಿದ್ದಾರೆ. ಈ ಹೇಳಿಕೆಗಳಿಗೆ ಬಿಜೆಪಿ ಹಾಗೂ ಕುಮಾರಸ್ವಾಮಿ ಇಬ್ಬರೂ ಉತ್ತರ ಕೊಡಬೇಕು. 10 ನಿಮಿಷದಲ್ಲಿ ನಾನು ತೋರಿಸಿದ ಮೈತ್ರಿ ನಾಯಕರ ಮಾತುಗಳಿಗೆ ಉತ್ತರ ಕೊಡಲಿ” ಎಂದು ಆಗ್ರಹಿಸಿದರು.

ಇದನ್ನೂ ಓದಿ | Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

BJP-JDS Padayatra: ಬುಧವಾರ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆ ಸಂಚರಿಸಲಿದ್ದರೂ, ಮಂಡ್ಯದಲ್ಲಿ ಹಾಕಿರುವ ಫ್ಲೆಕ್ಸ್‌- ಬ್ಯಾನರ್‌ಗಳಿಂದಲೂ ಸುಮಲತಾ ಕಣ್ಮರೆಯಾಗಿದ್ದಾರೆ. ಯಾವ ನಾಯಕರೂ ತಮ್ಮ ಬ್ಯಾನರ್‌ಗಳಲ್ಲಿ ಸುಮಲತಾ ಅವರನ್ನು ಸ್ಮರಿಸಿಕೊಂಡಿಲ್ಲ.

VISTARANEWS.COM


on

bjp-jds padayatra Sumalatha ambareesh
Koo

ಮಂಡ್ಯ: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ರಾಜೀನಾಮೆಗೆ ಆಗ್ರಹಿಸಿ ನಡೆಸಲಾಗುತ್ತಿರುವ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ (BJP-JDS Padayatra) ಐದನೇ ದಿನ ಮಂಡ್ಯ ತಲುಪಿದ್ದು, ಉಭಯ ಪಕ್ಷಗಳ ನಾಯಕರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್‌ (Sumalatha Ambareesh) ಮಾತ್ರ ಎಲ್ಲೂ ಕಾಣಿಸಿಕೊಂಡಿಲ್ಲ.

ಕಳೆದ ಲೋಕಸಭೆ ಚುನಾವಣೆಗೂ (Loksabha Election 2024) ಮುನ್ನ ಬಿಜೆಪಿ ಸೇರ್ಪಡೆಯಾಗಿದ್ದ ಸುಮಲತಾ, ಬಿಜೆಪಿ ಸೇರಿದ್ದು ನನ್ನ ಜೀವನದಲ್ಲೇ ಸುದಿನ ಎಂದಿದ್ದರು. ಆದರೆ ಟಿಕೆಟ್‌ ಹಂಚಿಕೆ ಸಂದರ್ಭದಲ್ಲಿ ಮಂಡ್ಯ ಜೆಡಿಎಸ್‌ ಪಾಲಾಗಿ, ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಟಿಕೆಟ್‌ ಒಲಿದಿತ್ತು. ಮಂಡ್ಯದಲ್ಲಿ ಟಿಕೆಟ್‌ಗಾಗಿ ಪ್ರಯತ್ನಿಸಿದ್ದ ಸುಮಲತಾ, ಕುಮಾರಣ್ಣ ಪರ ಪ್ರಚಾರ ಕಣದಲ್ಲೆಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇದೀಗ ಪಾದಯಾತ್ರೆಯಲ್ಲಿಯೂ ಅವರು ಕಾಣಿಸಿಕೊಂಡಿಲ್ಲ. ಹೀಗಾಗಿ, ಮಂಡ್ಯದ ರಾಜಕಾರಣದಲ್ಲಿ ಮತ್ತೆ ಸುಮಲತಾ ಅಂಬರೀಷ್‌ ಸೈಡ್‌ಲೈನ್ ಆದ್ರಾ ಎಂಬ ಪ್ರಶ್ನೆ ಮೂಡಿದೆ.

ಬುಧವಾರ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆ ಸಂಚರಿಸಲಿದ್ದರೂ, ಮಂಡ್ಯದಲ್ಲಿ ಹಾಕಿರುವ ಫ್ಲೆಕ್ಸ್‌- ಬ್ಯಾನರ್‌ಗಳಿಂದಲೂ ಸುಮಲತಾ ಕಣ್ಮರೆಯಾಗಿದ್ದಾರೆ. ಯಾವ ನಾಯಕರೂ ತಮ್ಮ ಬ್ಯಾನರ್‌ಗಳಲ್ಲಿ ಸುಮಲತಾ ಅವರನ್ನು ಸ್ಮರಿಸಿಕೊಂಡಿಲ್ಲ. ರಾಜ್ಯ ಬಿಜೆಪಿ, ಜೆಡಿಎಸ್ ವತಿಯಿಂದ ಹಾಕಿರುವ ಫ್ಲೆಕ್ಸ್‌ಗಳಲ್ಲಿ ಸುಮಲತಾ ಅವರಿಗೆ ಯಾವುದೇ ಸ್ಥಾನ ನೀಡಿಲ್ಲ. ಪಾದಯಾತ್ರೆ ಪ್ರಚಾರ ಮತ್ತು ಪಾದಯಾತ್ರಿಗಳ ಸ್ವಾಗತ ಕೋರುವ ಫ್ಲೆಕ್ಸ್, ಬ್ಯಾನರ್‌ಗಳಲ್ಲಿ ಅವರು ಕಾಣಿಸಿಕೊಂಡಿಲ್ಲ.

ಬೆಂಗಳೂರಿನಿಂದ ಮೈಸೂರಿನವರೆಗೂ ಹಾಕಿರುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್‌ಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನ ಪುಡಿ ನಾಯಕರು, ಕಾರ್ಯಕರ್ತರ ಫೋಟೋಗಳಿದ್ದರೂ ಸುಮಲತಾ ಮುಖ ಎಲ್ಲೂ ಕಾಣಿಸಿಕೊಂಡಿಲ್ಲ. ಬಿಜೆಪಿ ಇರಲಿ, ಸುಮಲತಾ ಅವರ ಆಪ್ತರು, ಬೆಂಬಲಿಗರಿಗೂ ಸುಮಲತಾ ಬೇಡವಾದರೇ ಎಂಬ ಪ್ರಶ್ನೆ ಎದ್ದಿದೆ. ಅಧಿಕಾರ ಇದ್ದಾಗ ಅವರನ್ನು ಮೆರೆಸುತ್ತಿದ್ದ ಆಪ್ತರು, ಬೆಂಬಲಿಗರು ಕೂಡ ಸುಮಲತಾರ ಫ್ಲೆಕ್ಸ್ ಹಾಕದೆ ನಿರ್ಲಕ್ಷ್ಯ ತೋರಿದಂತಿದೆ. ಪಾದಯಾತ್ರೆ ಕುರಿತು ನಡೆಸಲಾಗಿದ್ದ ಪೂರ್ವಭಾವಿ ಸಭೆಯಲ್ಲೂ ಸುಮಲತಾ ಪಾಲ್ಗೊಂಡಿರಲಿಲ್ಲ.

ಮುಡಾ ಹಗರಣದ ಇನ್ನಷ್ಟು ದಾಖಲೆ ಕೇಳಿದ ರಾಜ್ಯಪಾಲರು; ತನಿಖೆಗೆ ಅನುಮತಿ ಖಚಿತ

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲರು (Governor) ಅನುಮತಿ ನೀಡುವುದು ಬಹುತೇಕ ಖಚಿತವಾಗಿದ್ದು, ಮುಡಾ ಹಗರಣದ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನೀಡುವಂತೆ ಅರ್ಜಿದಾರ ಟಿಜೆ ಅಬ್ರಹಾಂ (TJ Abraham) ಅವರಿಗೆ ಸೂಚಿಸಿದ್ದಾರೆ.

ನಿನ್ನೆ ಈ ಕುರಿತು ಅಬ್ರಹಾಂ ಅವರನ್ನು ಕರೆದು ಮಾಹಿತಿ ಪಡೆದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಕ್ಯಾಬಿನೆಟ್ ನಿರ್ಣಯದ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ (Supreme Court) ತೀರ್ಪುಗಳ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ಪ್ರಕರಣವನ್ನು ಗಟ್ಟಿಗೊಳಿಸಲು ಅಗತ್ಯವಾದ ಮಾಹಿತಿಗಳನ್ನು ಪಡೆಯಲು ಮುಂದಾಗಿದ್ದಾರೆ.

ಕ್ಯಾಬಿನೆಟ್‌ ರಾಜ್ಯಪಾಲರಿಗೆ ತನ್ನ ನಿರ್ಣಯವನ್ನು ಕಳಿಸುವುದರ ಜೊತೆಗೆ, ದೂರುದಾರರ ಚಾರಿತ್ರ್ಯವನ್ನೂ ಪ್ರಶ್ನೆ ಮಾಡಿತ್ತು. ಸರ್ಕಾರಿ ಅಧಿಕಾರಿಯನ್ನು ಒಂದು ಕೋಟಿ ರೂಪಾಯಿಗೆ ಬ್ಲಾಕ್‌ಮೇಲ್‌ ಮಾಡಿದ ಆರೋಪ ಅಬ್ರಹಾಂ ಮೇಲಿದೆ ಎಂದಿತ್ತು. ಈ ಕುರಿತು ಸಿಡಿಯನ್ನು ಕೂಡ ರಾಜ್ಯಪಾಲರಿಗೆ ರವಾನೆ ಮಾಡಿತ್ತು. ಈ ಆರೋಪದ ಸತ್ಯಾಸತ್ಯತೆಯ ಬಗ್ಗೆ ಮಾಹಿತಿ ನೀಡಿ ಎಂದು ಕೂಡ ರಾಜ್ಯಪಾಲರು ಅಬ್ರಹಾಂಗೆ ಸೂಚಿಸಿದ್ದಾರೆ.

ಹೀಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆ ಕೊಡಲಿದ್ದೇನೆ ಎಂದು ದೂರುದಾರ ಅಬ್ರಹಾಂ ತಿಳಿಸಿದ್ದಾರೆ. ಸರ್ಕಾರದ ಆರೋಪಕ್ಕೆ ಪ್ರತಿಯಾಗಿ ದಾಖಲೆ ರೆಡಿ ಮಾಡಿಕೊಳ್ಳುತ್ತಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದ ಇನ್ನಷ್ಟು ದಾಖಲೆ ಪತ್ರಗಳನ್ನು ಸಜ್ಜುಗೊಳಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

Continue Reading

ಪ್ರಮುಖ ಸುದ್ದಿ

CM Siddaramaiah: ಮುಡಾ ಹಗರಣದ ಇನ್ನಷ್ಟು ದಾಖಲೆ ಕೇಳಿದ ರಾಜ್ಯಪಾಲರು; ತನಿಖೆಗೆ ಅನುಮತಿ ಖಚಿತ

CM Siddaramaiah: ನಿನ್ನೆ ಈ ಕುರಿತು ಅಬ್ರಹಾಂ ಅವರನ್ನು ಕರೆದು ಮಾಹಿತಿ ಪಡೆದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಕ್ಯಾಬಿನೆಟ್ ನಿರ್ಣಯದ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ (Supreme Court) ತೀರ್ಪುಗಳ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದಾರೆ.

VISTARANEWS.COM


on

cm siddaramaiah vs thawar chand gehlot
Koo

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲರು (Governor) ಅನುಮತಿ ನೀಡುವುದು ಬಹುತೇಕ ಖಚಿತವಾಗಿದ್ದು, ಮುಡಾ ಹಗರಣದ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನೀಡುವಂತೆ ಅರ್ಜಿದಾರ ಟಿಜೆ ಅಬ್ರಹಾಂ (TJ Abraham) ಅವರಿಗೆ ಸೂಚಿಸಿದ್ದಾರೆ.

ನಿನ್ನೆ ಈ ಕುರಿತು ಅಬ್ರಹಾಂ ಅವರನ್ನು ಕರೆದು ಮಾಹಿತಿ ಪಡೆದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಕ್ಯಾಬಿನೆಟ್ ನಿರ್ಣಯದ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ (Supreme Court) ತೀರ್ಪುಗಳ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ಪ್ರಕರಣವನ್ನು ಗಟ್ಟಿಗೊಳಿಸಲು ಅಗತ್ಯವಾದ ಮಾಹಿತಿಗಳನ್ನು ಪಡೆಯಲು ಮುಂದಾಗಿದ್ದಾರೆ.

ಕ್ಯಾಬಿನೆಟ್‌ ರಾಜ್ಯಪಾಲರಿಗೆ ತನ್ನ ನಿರ್ಣಯವನ್ನು ಕಳಿಸುವುದರ ಜೊತೆಗೆ, ದೂರುದಾರರ ಚಾರಿತ್ರ್ಯವನ್ನೂ ಪ್ರಶ್ನೆ ಮಾಡಿತ್ತು. ಸರ್ಕಾರಿ ಅಧಿಕಾರಿಯನ್ನು ಒಂದು ಕೋಟಿ ರೂಪಾಯಿಗೆ ಬ್ಲಾಕ್‌ಮೇಲ್‌ ಮಾಡಿದ ಆರೋಪ ಅಬ್ರಹಾಂ ಮೇಲಿದೆ ಎಂದಿತ್ತು. ಈ ಕುರಿತು ಸಿಡಿಯನ್ನು ಕೂಡ ರಾಜ್ಯಪಾಲರಿಗೆ ರವಾನೆ ಮಾಡಿತ್ತು. ಈ ಆರೋಪದ ಸತ್ಯಾಸತ್ಯತೆಯ ಬಗ್ಗೆ ಮಾಹಿತಿ ನೀಡಿ ಎಂದು ಕೂಡ ರಾಜ್ಯಪಾಲರು ಅಬ್ರಹಾಂಗೆ ಸೂಚಿಸಿದ್ದಾರೆ.

ಹೀಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆ ಕೊಡಲಿದ್ದೇನೆ ಎಂದು ದೂರುದಾರ ಅಬ್ರಹಾಂ ತಿಳಿಸಿದ್ದಾರೆ. ಸರ್ಕಾರದ ಆರೋಪಕ್ಕೆ ಪ್ರತಿಯಾಗಿ ದಾಖಲೆ ರೆಡಿ ಮಾಡಿಕೊಳ್ಳುತ್ತಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದ ಇನ್ನಷ್ಟು ದಾಖಲೆ ಪತ್ರಗಳನ್ನು ಸಜ್ಜುಗೊಳಿಸಿಕೊಳ್ಳುತ್ತಿದ್ದಾರೆ.

ರಾಜ್ಯಪಾಲರ ನೋಟೀಸ್‌ಗೆ ಒಂದು ಸಾಲಿನ ನಿರ್ಣಯ ಕಳಿಸಿದ ರಾಜ್ಯ ಸರ್ಕಾರ, ಅದಕ್ಕೆ ಸಂಬಂಧಿಸಿದಂತೆ 70 ದಾಖಲೆಗಳನ್ನು ರಾಜ್ಯಪಾಲರಿಗೆ ರವಾನಿಸಿತ್ತು. 1990ರ ದಶಕದಿಂದಲೂ ಇಲ್ಲಿಯವರೆಗೂ ದಾಖಲೆ ನೀಡಿರುವ ಸರ್ಕಾರ, ಸಿದ್ದರಾಮಯ್ಯ ಪತ್ನಿಗೆ ಆಸ್ತಿ ವರ್ಗಾವಣೆ ಹಾಗೂ ಗಿಫ್ಟ್ ಡೀಡ್ ಬಗ್ಗೆ ದಾಖಲೆ ಹಾಗೂ ಸಾಕ್ಷಿ ಸಮೇತ ವಿವರಣೆ ನೀಡಿದೆ. ಹಾಗೂ ದೂರುದಾರ ಅಬ್ರಹಾಂ ಬಗ್ಗೆಯೂ ಮಾಹಿತಿ ನೀಡಿದೆ. ಈ ದಾಖಲೆಗಳನ್ನು ರಾಜ್ಯಪಾಲರು ಪರಿಶೀಲನೆ ಮಾಡುತ್ತಿದ್ದಾರೆ.

ಇತ್ತ ಸಿಎಂ ಸಿದ್ದರಾಮಯ್ಯ ಅವರ 10 ಜನರ ಕಾನೂನು ಟೀಮ್ ಫುಲ್ ಆಕ್ಟೀವ್ ಆಗಿದೆ. ರಾಜ್ಯಪಾಲರ ನಡೆ ಪ್ರಶ್ನೆ ಮಾಡಿ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನಪ್ರತಿನಿಧಿಗಳ ಹಾಗೂ ಲೋಕಾಯುಕ್ತ ಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ವರೆಗೂ ಹೋಗಲು ವಕೀಲರ ಟೀಮ್ ರೆಡಿಯಾಗಿದೆ. ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರಿಂದಲೇ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಯುತ್ತಿದೆ.

ಒಂದೆಡೆ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿದ್ದರೆ, ಮತ್ತೊಂದೆಡೆ ರಾಜ್ಯಪಾಲರಿಂದ ಕಾನೂನಾತ್ಮಕ ಅಂಶಗಳ ಕುರಿತು ಮೀಟಿಂಗ್‌ ನಡೆಸಲಾಗುತ್ತಿದೆ. ಈ ನಡುವೆ ಪ್ರತಿಪಕ್ಷಗಳ ವಿರುದ್ಧ ಸಮರ ಸಾರಲು ಮೆಗಾ ತಯಾರಿ ಮಾಡಿಕೊಲ್ಳುತ್ತಿರುವ ಕಾಂಗ್ರೆಸ್‌, ಆಗಸ್ಟ್ 9ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶಕ್ಕೆ ತಯಾರಿ ಮಾಡಿಕೊಳ್ಳುತ್ತಿದೆ. ಇದಕ್ಕೆ ಸಚಿವರ ಹಾಜರಾತಿ ಕಡ್ಡಾಯ‌ ಎಂದು ಎಐಸಿಸಿ ನಾಯಕರು ಹಾಗೂ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಪ್ಲಾನ್ ನಡೆದಿದ್ದು, ಬಿಜೆಪಿ ಕಾಲದ ಹಗರಣಗಳ ಕುರಿತು ಹೆಚ್ಚಿನದಾಗಿ ಪ್ರಸ್ತಾಪಿಸಿ ಆ ಮೂಲಕ ಪ್ರತಿಪಕ್ಷಗಳ ವಿರುದ್ಧ ರಣಕಹಳೆ ಮೊಳಗಿಸಲು ಸರ್ಕಾರ ಸಜ್ಜಾಗುತ್ತಿದೆ.

ಇದನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

Continue Reading

ದೇಶ

Shehzad Poonawalla: ಬಾಂಗ್ಲಾದಂತೆ ಭಾರತದಲ್ಲಿಯೂ ಹಿಂಸಾಚಾರ; ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್ ಹೇಳಿಕೆಗೆ ಬಿಜೆಪಿ ಕಿಡಿ

Shehzad Poonawalla: ನೆರೆಯ ಬಾಂಗ್ಲಾದೇಶದಂತೆಯೇ ಭಾರತದಲ್ಲಿಯೂ ಅಶಾಂತಿ ಉಂಟಾಗುವ ಸಾಧ್ಯತೆ ಇದೆ ಎಂದಿರುವ ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಅವರ ಹೇಳಿಕೆ ಸದ್ಯ ವಿವಾದ ಸೃಷ್ಟಿಸಿದೆ. ಈ ಮೂಲಕ ಕಾಂಗ್ರೆಸ್ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ ಮತ್ತು ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಕಿಡಿ ಕಾರಿದ್ದಾರೆ.

VISTARANEWS.COM


on

Shehzad Poonawalla
Koo

ನವದೆಹಲಿ: ನೆರೆಯ ಬಾಂಗ್ಲಾದೇಶದಂತೆಯೇ ಭಾರತದಲ್ಲಿಯೂ ಅಶಾಂತಿ ಉಂಟಾಗುವ ಸಾಧ್ಯತೆ ಇದೆ ಎಂದಿರುವ ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ (Salman Khurshid) ಅವರ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ (Shehzad Poonawalla) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ ಮತ್ತು ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿ ಭಾರತದಲ್ಲಿಯೂ ಸಂಭವಿಸಬಹುದು ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಮಂಗಳವಾರ ವಿವಾದವನ್ನು ಹುಟ್ಟು ಹಾಕಿದ್ದಾರೆ. ಶಿಕ್ಷಣ ತಜ್ಞ ಮುಜಿಬುರ್ ರೆಹಮಾನ್ ಅವರ ‘ಶಿಕ್ವಾ-ಎ-ಹಿಂದ್: ದಿ ಪೊಲಿಟಿಕಲ್ ಫ್ಯೂಚರ್ ಆಫ್ ಇಂಡಿಯನ್ ಮುಸ್ಲಿಮ್ಸ್’ (Shikwa-e-Hind: The Political Future of Indian Muslims) ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದರು.

ʼʼಮೇಲ್ನೋಟಕ್ಕೆ ಕಾಶ್ಮೀರದಲ್ಲಿ ಎಲ್ಲವೂ ಸಹಜವಾಗಿದೆ ಎಂದು ಕಾಣಿಸಬಹುದು. ಇಲ್ಲಿ ಎಲ್ಲವೂ ಸರಿ ಇದೆ ಎಂದು ಎಲ್ಲರೂ ಭಾವಿಸಬಹುದು. 2024ರ ಗೆಲುವು ಅತ್ಯಲ್ಪ ಎಂದು ನಂಬುವವರಿದ್ದಾರೆ. ಇನ್ನೂ ಹೆಚ್ಚಿನದು ಆಗಬೇಕಿದೆ. ಆದರೆ ವಾಸ್ತವ ಬೇರೆಯದೇ ಇದೆ. ಬಾಂಗ್ಲಾದೇಶದಲ್ಲಿ ಸಂಭವಿಸಿದ್ದು, ನಮ್ಮ ದೇಶದಲ್ಲಿಯೂ ನಡೆಯಬಹುದುʼʼ ಎಂದು ಹೇಳಿ ವಿವಾದದ ಕಿಡಿ ಹೊತ್ತಿಸಿದದ್ದರು.

ದಾಳಿ ನಡೆಯಬೇಕೆಂದು ಅವರು ಬಯಸುತ್ತಾರೆಯೆ?

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಕಿಡಿಕಾರಿರುವ ಶೆಹಜಾದ್ ಪೂನಾವಾಲಾ ಅವರು, “ಮೋದಿ ಮೇಲಿನ ದ್ವೇಷದ ಕಾರಣಕ್ಕೆ ಅವರು ಭಾರತವನ್ನೇ ವಿರೋಧಿಸುತ್ತಿದ್ದಾರೆ. ಸಲ್ಮಾನ್ ಖುರ್ಷಿದ್ / ಕಾಂಗ್ರೆಸ್ ನಾಯಕರು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ ಭಾರತದಲ್ಲಿಯೂ ನಡೆಯುವಂತೆ ಪ್ರಚೋದಿಸುತ್ತಿದ್ದಾರೆಯೇ? ಭಾರತದಲ್ಲಿ ಹಿಂದೂಗಳ ಮೇಲೆ ದಾಳಿ ನಡೆಯಬೇಕೆಂದು ಅವರು ಬಯಸುತ್ತಾರೆಯೇ? ಅವರು ಯಾರಿಗೆ ಸಂಕೇತ ನೀಡುತ್ತಿದ್ದಾರೆ? ಸಲ್ಮಾನ್ ಖುರ್ಷಿದ್ ಕುಟುಂಬ ಈಗಾಗಲೇ ಒಮ್ಮೆ ವೋಟ್ ಜಿಹಾದ್ ಎಂದು ಹೇಳಿದೆ. ಇದು ಭಾರತದ ಪ್ರಜಾಪ್ರಭುತ್ವವನ್ನೇ ದುರ್ಬಲಗೊಳಿಸುವುದಿಲ್ಲವೇ? ಕಾಂಗ್ರೆಸ್ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ?ʼʼ ಎಂದು ಬರೆದುಕೊಂಡಿದ್ದಾರೆ.

ಸದ್ಯ ಕಾಂಗ್ರೆಸ್‌ ಸಲ್ಮಾನ್ ಖುರ್ಷಿದ್ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ʼʼಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲʼʼ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ: Bangladesh Unrest: ಭಾರತದಲ್ಲೂ ಬಾಂಗ್ಲಾ ಮಾದರಿ ಗಲಭೆಗೆ ಸಂಚು; ಪಾಕ್‌ ಮಾಜಿ ಕ್ರಿಕೆಟಿಗನ ಸ್ಫೋಟಕ ಮಾಹಿತಿ

ಬಾಂಗ್ಲಾದೇಶದಲ್ಲಿ ಏನಾಗುತ್ತಿದೆ?

ತೀವ್ರ ಪ್ರತಿಭಟನೆ ಹಿನ್ನಲೆಯಲ್ಲಿ ದೀರ್ಘಕಾಲದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ ಪಲಾಯನ ಮಾಡಿದ್ದು, ಬಾಂಗ್ಲಾದೇಶವು ಪ್ರಕ್ಷುಬ್ಧವಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಆರಂಭವಾದ ಪ್ರತಿಭಟನೆ ಹಿಂಸಾರೂಪ ತಾಳಿದೆ. ಈಗಾಗಲೇ 500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸದ್ಯ ಶೇಖ್ ಹಸೀನಾ ಅವರು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಭಾರತ ಬಾಂಗ್ಲಾದೇಶದಲ್ಲಿರುವ ತನ್ನ ಎಲ್ಲ ಪ್ರಜೆಗಳಿಗೆ ತೀವ್ರ ಎಚ್ಚರಿಕೆ ವಹಿಸಲು ಸೂಚನೆ ನೀಡಿದೆ. ಈ ಮಧ್ಯೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್ (Muhammad Yunus) ಅವರನ್ನು ನೇಮಕ ಮಾಡಲಾಗಿದೆ.

Continue Reading

ರಾಜಕೀಯ

Parliament Session: ಇಂದು ಸಂಸತ್‌ನಲ್ಲಿ ಮಂಡನೆಯಾಗುತ್ತಾ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ?; ಅಧಿವೇಶನದ Live ಇಲ್ಲಿ ನೋಡಿ

Parliament Session: ಸಂಸತ್‌ನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಇಂದು ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನನ್ನು ತಿದ್ದುಪಡಿ ಮಾಡುವ ವಕ್ಫ್ (ತಿದ್ದುಪಡಿ) ಮಸೂದೆ ಪರಿಚಯಿಸುವ ಸಾಧ್ಯತೆಯಿದೆ. 11 ಗಂಟೆಗೆ ಉಭಯ ಸದನಗಳ ಕಲಾಪ ಆರಂಭವಾಗಲಿದ್ದು, ಈ ವೇಳೆ ಗಂಭೀರ ಚರ್ಚೆ ನಡೆಯಲಿದೆ. ಅಧಿವೇಶದ ಲೈವ್‌ ಅನ್ನು ಇಲ್ಲಿ ನೋಡಿ.

VISTARANEWS.COM


on

Parliament Session
Koo

ನವದೆಹಲಿ: ಸಂಸತ್‌ನಲ್ಲಿ ನಡೆಯುತ್ತಿರುವ ಅಧಿವೇಶನ (Parliament Session)ದಲ್ಲಿ ಇಂದು ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನನ್ನು ತಿದ್ದುಪಡಿ ಮಾಡುವ ವಕ್ಫ್ (ತಿದ್ದುಪಡಿ) ಮಸೂದೆ ಪರಿಚಯಿಸುವ ಸಾಧ್ಯತೆಯಿದೆ. ಈ ಮಸೂದೆಯು 1995ರ ವಕ್ಫ್ ಕಾಯ್ದೆಯನ್ನು ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ 1995 ಎಂದು ಮರುನಾಮಕರಣ ಮಾಡುವ ಗುರಿಯನ್ನು ಹೊಂದಿದೆ. 11 ಗಂಟೆಗೆ ಉಭಯ ಸದನಗಳ ಕಲಾಪ ಆರಂಭವಾಗಲಿದ್ದು, ಈ ವೇಳೆ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದೆ.

ಚರ್ಚೆ ಹುಟ್ಟು ಹಾಕಿದ ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಸ್ತಾವ

ಸದ್ಯ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರದ ನಿರ್ಧಾರ ವ್ಯಾಪಕ ಚರ್ಚೆ ಹುಟ್ಟು ಹಾಕಿದೆ. ʼʼಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಕಾನೂನನ್ನು ತಿದ್ದುಪಡಿ ಮಾಡಬೇಕೆಂದು ಮುಸ್ಲಿಂ ಸಮುದಾಯದಿಂದ ಬೇಡಿಕೆಗಳು ಬಂದಿವೆ. ಪ್ರಸ್ತುತ ವಕ್ಫ್ ಮಂಡಳಿಗಳು ತೆಗೆದುಕೊಂಡ ನಿರ್ಧಾರವನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ ಎನ್ನುವ ನಿಯಮವಿದೆ. ಈಗ ತಿದ್ದುಪಡಿ ಮಸೂದೆಯು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಾಂಗ್ಲಾದೇಶ ಗಲಭೆ ಬಗ್ಗೆ ಕಳವಳ

ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿ ಗಲಭೆ ಹೆಚ್ಚಾಗಿದ್ದು, ಈ ಬಗ್ಗೆ ಮಂಗಳವಾರ ಅಧಿವೇಶನದಲ್ಲಿ ಚರ್ಚೆ ನಡೆಸಲಾಯಿತು. ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿ ಭಾರತದಲ್ಲಿ ಆಶ್ರಯ ಪಡೆದ ಒಂದು ದಿನದ ನಂತರ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು.

ನೆರೆಯ ದೇಶದಲ್ಲಿನ ಹಿಂಸಾಚಾರ ಮತ್ತು ರಾಜಕೀಯ ಬೆಳವಣಿಗೆಗಳ ಮಧ್ಯೆ ಭಾರತವು ಅಲ್ಲಿನ ಅಧಿಕಾರಿಗಳು ಮತ್ತು ಅಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಎಂದು ತಿಳಿಸಿದರು. “ಜುಲೈ ಉದ್ದಕ್ಕೂ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದರಿಂದ ನಾವು ಪದೇ ಪದೆ ಸಂಯಮ ಪಾಲಿಸುವಂತೆ ಪ್ರತಿಭನಾಕಾರರಿಗೆ ಸೂಚಿಸಿದ್ದೇವೆ ಮತ್ತು ಮಾತುಕತೆಯ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸುವಂತೆ ಸಲಹೆ ನೀಡಿದ್ದೇವೆʼʼ ಎಂದು ಹೇಳಿದರು.

“ನಮ್ಮ ರಾಜತಾಂತ್ರಿಕ ಕಾರ್ಯಾಚರಣೆಗಳ ಮೂಲಕ ನಾವು ಬಾಂಗ್ಲಾದೇಶದಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಿಕಟ ಮತ್ತು ನಿರಂತರ ಸಂಪರ್ಕದಲ್ಲಿದ್ದೇವೆ. ಬಾಂಗ್ಲಾದೇಶದಲ್ಲಿ ಸುಮಾರು 20 ಸಾವಿರ ಭಾರತೀಯರಿದ್ದು, ಈ ಪೈಕಿ ಸುಮಾರು 8 ಸಾವಿರ ಮಂದಿ ಮರಳಿದ್ದಾರೆʼʼ ಎಂದೂ ಅವರು ತಿಳಿಸಿದರು.

ಇದನ್ನೂ ಓದಿ: Waqf Act: ವಕ್ಫ್‌ ಮಂಡಳಿ ಪರಮಾಧಿಕಾರಕ್ಕೆ ಮೋದಿ ಮೂಗುದಾರ; ಏನೆಲ್ಲ ತಿದ್ದುಪಡಿ? 9.4 ಲಕ್ಷ ಎಕರೆ ಯಾರ ಪಾಲು?

Continue Reading
Advertisement
bjp-jds padayatra Sumalatha ambareesh
ಪ್ರಮುಖ ಸುದ್ದಿ6 mins ago

BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

Actor Darshan
ಕರ್ನಾಟಕ10 mins ago

Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

Actor Dhanush Raayan set for OTT release
ಕಾಲಿವುಡ್11 mins ago

Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

Crop Over Festival
Latest33 mins ago

Rihanna Crop Over: ʼಊರ ಹಬ್ಬʼದಲ್ಲಿ ʼನಗ್ನ ಉಡುಗೆʼ ಧರಿಸಿ ಸಂಚಲನ ಮೂಡಿಸಿದ ರಿಹಾನ್ನಾ!

Viral Video
Latest45 mins ago

Viral Video: ರಸ್ತೆಯಲ್ಲಿ ಚುಡಾಯಿಸಿದ ಪುಂಡನಿಗೆ ಬುದ್ಧಿ ಕಲಿಸಿದ ವಿದ್ಯಾರ್ಥಿನಿ; ವಿಡಿಯೊ ನೋಡಿ

Bangladesh Unrest
ವಿದೇಶ56 mins ago

Bangladesh Unrest: ಶೇಖ್‌ ಹಸೀನಾ ಅವರ ಪಕ್ಷದ ಮುಖಂಡರು, ಕಾರ್ಯಕರ್ತರೇ ಟಾರ್ಗೆಟ್‌; ಒಂದೇ ದಿನ 29 ಜನ ಬಲಿ

Student Abuse
Latest57 mins ago

Student Abuse: ʼಮೇಡಂ ನನಗೆ ಪಿರಿಯಡ್ಸ್‌ʼ ಎಂದರೂ ಬಿಡದೆ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿದ ಶಿಕ್ಷಕಿ!

Vinesh Phogat Disqualified
ಕ್ರೀಡೆ58 mins ago

Vinesh Phogat Disqualified: ತೂಕ ವಿಭಾಗ ಬದಲಿಸಿದ್ದೇ ವಿನೇಶ್​ ಹಿನ್ನಡೆಗೆ ಕಾರಣವಾಯಿತೇ?

Namma Metro
ಕರ್ನಾಟಕ58 mins ago

Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

Vinesh Phogat
ದೇಶ59 mins ago

Vinesh Phogat: ನೋ! ನೋ! ನೋ!; ವಿನೇಶ್​ ಫೋಗಟ್ ಅನರ್ಹತೆ ಕೆಟ್ಟ ಕನಸಾಗಿರಲಿ: ಆನಂದ್‌ ಮಹೀಂದ್ರಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು21 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ22 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌