UGCET 2024: ಇಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಅಣಕು ಸೀಟು ಹಂಚಿಕೆ ಪ್ರಕಟ ಸಾಧ್ಯತೆ - Vistara News

ಪ್ರಮುಖ ಸುದ್ದಿ

UGCET 2024: ಇಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಅಣಕು ಸೀಟು ಹಂಚಿಕೆ ಪ್ರಕಟ ಸಾಧ್ಯತೆ

UGCET 2024: ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಇಂದು (August 7) ಮಧ್ಯಾಹ್ನ 2 ಗಂಟೆಗೆ ಅಣಕು ಸೀಟು ಹಂಚಿಕೆ (Mock Seat Sharing) ಸಾಧ್ಯತೆ ಇದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಕುರಿತು ಅಪ್‌ಡೇಟ್‌ ನೀಡಲಿದೆ.

VISTARANEWS.COM


on

UGCET 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂಜಿನಿಯರಿಂಗ್ (Engineering) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET 2024) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಇಂದು (August 7) ಮಧ್ಯಾಹ್ನ 2 ಗಂಟೆಗೆ ಅಣಕು ಸೀಟು ಹಂಚಿಕೆ (Mock Seat Sharing) ಸಾಧ್ಯತೆ ಇದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಕುರಿತು ಅಪ್‌ಡೇಟ್‌ ನೀಡಲಿದೆ.

ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು. ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್‌ಗಳ ಆಯ್ಕೆ ಆಪ್ಷನ್‌ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

ಬೆಂಗಳೂರು: ಡಿಸಿಇಟಿ-24 (DCET 2024) ತೆಗೆದುಕೊಂಡು, ಮೊದಲ ಸುತ್ತಿನಲ್ಲಿ ಎಂಜಿನಿಯರಿಂಗ್ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ ಮಾಡಲು ಆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಮಳೆ ಕಾರಣಕ್ಕೆ ಶುಲ್ಕ ಪಾವತಿ ಇತ್ಯಾದಿ ಸಮಸ್ಯೆಗಳು ಎದುರಾಗಿವೆ ಎಂದು ಅಭ್ಯರ್ಥಿಗಳು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿದ್ದು, ಇಚ್ಛೆ ದಾಖಲಿಸಲು ಮತ್ತಷ್ಟು ದಿನ ಅವಕಾಶ ನೀಡಲಾಗುವುದು. ಸದ್ಯದಲ್ಲೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಮೊದಲ ಸುತ್ತಿನಲ್ಲಿ ಚಾಯ್ಸ್ – 1 ಮತ್ತು 2 ಅನ್ನು ಆಯ್ಕೆ ಮಾಡಿಕೊಂಡವರು ಆ.8ರೊಳಗೆ ಚಲನ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಶುಲ್ಕ ಪಾವತಿಗೆ ಆ.9ರವರೆಗೆ ಅವಕಾಶ ಇರುತ್ತದೆ. ಆ.10ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾಟಾಗೂ ಅವಕಾಶ

ಡಿಸಿಇಟಿ-24ಗೆ ಅರ್ಜಿ ಸಲ್ಲಿಸಿ, ದಾಖಲಾತಿ ಪೂರ್ಣಗೊಳಿಸಿರುವ ಆರ್ಕಿಟೆಕ್ಚರ್ ಅಭ್ಯರ್ಥಿಗಳು, ನಾಟಾ ಅಂಕಗಳನ್ನು ಪ್ರಾಧಿಕಾರಕ್ಕೆ ಸಲ್ಲಿಸದೇ ಇದ್ದಲ್ಲಿ ಆ.8ರಂದು ಖುದ್ದು ಕೆಇಎಗೆ ಬಂದು ಸಲ್ಲಿಸಿ, ರಾಂಕ್ ಪಡೆಯಬಹುದು. ನಂತರ 2ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Vinesh Phogat: 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹಗೊಳಿಸಲಗಿದೆ. ಇದಕ್ಕೆ ಭಾರತದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಪಿ.ಟಿ. ಉಷಾ ಅವರಿಗೆ ಕರೆ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂಬುದಾಗಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವೀಯ ತಿಳಿಸಿದ್ದಾರೆ.

VISTARANEWS.COM


on

Vinesh Phogat
Koo

ದೆಹಲಿ/ಪ್ಯಾರಿಸ್:‌ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ಖ್ಯಾತ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat) ಅವರು ಅನರ್ಹಗೊಂಡಿರುವುದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವಿನೇಶ್‌ ಫೋಗಟ್‌ ಪರವಾಗಿ ದೇಶವೇ ಒಗ್ಗೂಡಿ ನಿಂತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ವಿನೇಶ್‌ ಫೋಗಟ್‌ ಪರವಾಗಿ ನಿಂತಿದ್ದಾರೆ. ಇದರ ಬೆನ್ನಲ್ಲೇ, ಭಾರತೀಯ ಒಲಿಂಪಿಕ್ಸ್‌ ಅಸೋಷಿಯೇಷನ್‌ (IOA) ಅಧ್ಯಕ್ಷೆ ಪಿ.ಟಿ.ಉಷಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ಮಾಡಿದ್ದು, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಪಿ.ಟಿ.ಉಷಾ ಅವರಿಗೆ ನರೇಂದ್ರ ಮೋದಿ ಅವರು ಕರೆ ಮಾಡಿರುವ ಕುರಿತು ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವಿಯ ಅವರು ಸಂಸತ್‌ನಲ್ಲಿ ಮಾಹಿತಿ ನೀಡಿದ್ದಾರೆ. “50 ಕೆಜಿಗಿಂತ 100 ಗ್ರಾಂ ತೂಕ ಹೆಚ್ಚಿದ್ದ ಕಾರಣ ನೀಡಿ ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಲಾಗಿದೆ. ಈಗಾಗಲೇ ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಪ್ರತಿಭಟನೆ ವ್ಯಕ್ತಪಡಿಸಿದೆ. ನರೇಂದ್ರ ಮೋದಿ ಅವರೂ ಪಿ.ಟಿ. ಉಷಾ ಅವರಿಗೆ ಕರೆ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ” ಎಂದು ಸಚಿವ ತಿಳಿಸಿದ್ದಾರೆ.

ಪ್ರತಿಯೊಂದು ಹೆಜ್ಜೆಯಲ್ಲೂ ವಿನೇಶ್‌ ಫೋಗಟ್‌ ಅವರಿಗೆ ಕೇಂದ್ರ ಸರ್ಕಾರ ಸಹಕಾರ ನೀಡಿದೆ. ಅವರಿಗೆ ವೈಯಕ್ತಿಕ ಸಿಬ್ಬಂದಿಯನ್ನೂ ಭಾರತ ಕಳುಹಿಸಿದೆ. ಸಹಾಯಕ ಸಿಬ್ಬಂದಿಯನ್ನೂ ಅವರಿಗೆ ಒದಗಿಸಲಾಗಿದೆ. ಇದಕ್ಕೂ ಮೊದಲು ಕೂಡ ವಿನೇಶ್‌ ಫೋಗಟ್‌ ಅವರ ಸಾಧನೆಗೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಿದೆ. ಮುಂದಿನ ದಿನಗಳಲ್ಲೂ ನೆರವು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ವಿನೇಶ್‌ ಫೋಗಟ್‌ಗೆ ಬಾಲಿವುಡ್‌ ತಾರೆಯರ ಬೆಂಬಲ

ವಿನೇಶ್‌ ಫೋಗಟ್‌ ಅವರ ಪರವಾಗಿ ಬಾಲಿವುಡ್‌ ಸೆಲೆಬ್ರಿಟಿಗಳು ನಿಂತಿದ್ದಾರೆ. ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೇ ಕಬ್ಬಿಣ ಮತ್ತು ನೀವೇ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼ ಎಂದು ಬರೆದುಕೊಂಡಿದ್ದಾರೆ.

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ. ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್‌, ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

Continue Reading

ಕ್ರೀಡೆ

Vinesh Phogat: ವಿನೇಶ್ ಫೋಗಟ್‌ ಅನರ್ಹತೆಗೆ ಸಂಸತ್‌ನಲ್ಲಿ ಸಚಿವ ಮಂಡಾವಿಯ ಆಕ್ರೋಶ; ನೆರವಿನ ಅಭಯ

Vinesh Phogat: ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್‌ ಮಾಡಿದ್ದ ವಿನೇಶ್‌, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಆದರೆ, ಅವರನ್ನು ಅನರ್ಹಗೊಳಿಸಿರುವ ಕುರಿತು ಭಾರತದಾದ್ಯಂತ ಆಕ್ರೋಶ ವ್ಯಕ್ತಪಡಿಸಿದೆ.

VISTARANEWS.COM


on

Vinesh Phogat
Koo

ಪ್ಯಾರಿಸ್:‌ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (paris olympics) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ಖ್ಯಾತ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat) ಅವರನ್ನು ಹೆಚ್ಚಿನ ತೂಕದ ಹಿನ್ನೆಲೆಯಲ್ಲಿ ಅನರ್ಹತೆಗೊಳಿಸಿರುವುದಕ್ಕೆ ಕೇಂದ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. ವಿನೇಶ್‌ ಫೋಗಟ್‌ ಅನರ್ಹತೆ ಕುರಿತು ಸಂಸತ್‌ನಲ್ಲಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವಿಯ (Mansukh Mandaviya) ಅವರು ಪ್ರಸ್ತಾಪಿಸಿದ್ದು, ಅನರ್ಹತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

100 ಗ್ರಾಂ ಹೆಚ್ಚು ತೂಕವಿದ್ದ ಕಾರಣ ಅವರು ಒಲಿಂಪಿಕ್ಸ್‌ನಿಂದ ಅನರ್ಹತೆ ಪಡೆದಿದ್ದಾರೆ. ಒಲಿಂಪಿಕ್ಸ್‌ ನಿಯಮಗಳ ಅನುಸಾರ ಅವರನ್ನು ಅನರ್ಹಗೊಳಿಸಲಾಗಿದೆ. ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಈಗ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಅಧ್ಯಕ್ಷೆ ಪಿ.ಟಿ. ಉಷಾ ಅವರಿಗೆ ಕರೆ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಸೂಚಿಸಿದ್ದಾರೆ ಎಂದು ಮಂಡಾವಿಯ ಹೇಳಿದ್ದಾರೆ.

ಪ್ರತಿಯೊಂದು ಹೆಜ್ಜೆಯಲ್ಲೂ ವಿನೇಶ್‌ ಫೋಗಟ್‌ ಅವರಿಗೆ ಸಹಕಾರ ನೀಡಲಾಗಿದೆ. ಅವರಿಗೆ ವೈಯಕ್ತಿಕ ಸಿಬ್ಬಂದಿಯನ್ನೂ ಭಾರತ ಕಳುಹಿಸಿದೆ. ಸಹಾಯಕ ಸಿಬ್ಬಂದಿಯನ್ನೂ ಅವರಿಗೆ ಒದಗಿಸಲಾಗಿದೆ. ಇದಕ್ಕೂ ಮೊದಲು ಕೂಡ ವಿನೇಶ್‌ ಫೋಗಟ್‌ ಅವರ ಸಾಧನೆಗೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಿದೆ. ಮುಂದಿನ ದಿನಗಳಲ್ಲೂ ನೆರವು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ತೂಕ ಇಳಿಸಿದ್ದೇ ಸಮಸ್ಯೆಗೆ ಕಾರಣ?

ವಿನೇಶ್​ 50 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಒಲಿಂಪಿಕ್ಸ್​ ಆರಂಭಕ್ಕೂ ಮುನ್ನ ನಡೆದಿದ್ದ ಸೀನಿಯರ್‌ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿಯೂ ವಿನೇಶ್​ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕ ಗೆದ್ದಿದ್ದರು. ಆದರೆ, 50 ಕೆಜಿ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಅವರು ಕಣಕ್ಕಿಳಿದ್ದರು. ಇದೀಗ ತೂಕ ಬದಲಿಸಿದ್ದೇ ಅವರ ಈ ಹಿನ್ನಡೆಗೆ ಕಾರಣ ಎಂದರೂ ತಪ್ಪಾಗಲಾರದು.

ಒಲಿಂಪಿಕ್ಸ್​ ಸ್ಪರ್ಧೆಗೂ ಮುನ್ನ ವಿನೇಶ್​ ಅವರ ತೂಕ 2 ಕೆಜಿ ಹೆಚ್ಚಳವಾಗಿತ್ತು. ಇದನ್ನು ಕಡಿಮೆ ಮಾಡಲೆಂದೆ ಅವರು ನಿದ್ದೆ, ಆಹಾರ ಬಿಟ್ಟು ಅತ್ಯಂತ ಕಠಿಣ ವ್ಯಾಯಾಮ ನಡೆಸಿ ಸುಮಾರು 1.90 ಕೆಜಿ ತೂಕ ಇಳಿಸಿಕೊಂಡಿದ್ದರು. ಆದರೆ 100 ಗ್ರಾಂ ಹೆಚ್ಚಳದಿಂದ ಇದೀಗ ಅವರ ಒಲಿಂಪಿಕ್ಸ್​ ಪದಕದ ಕನಸು ನುಚ್ಚುನೂರಾಗಿದೆ. ಒಂದೊಮ್ಮೆ ಅವರು ತಮ್ಮ ಈ ಹಿಂದಿನಂತೆ 53 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರೆ ಈ ಹಿನ್ನಡೆ ಉಂಟಾಗುತ್ತಿರಲಿಲ್ಲ.

ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ

ಅನರ್ಹವಾಗಿ ಆಘಾತದಲ್ಲಿರುವ ವಿನೇಶ್​ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ ಹೇಳಿದ್ದಾರೆ. “ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನಿಮಗೆ ಮಾತ್ರವಲ್ಲದೆ ಇಡೀ ದೇಶವಾಸಿಗಳಿಗೆ ನೋವು ತಂದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ” ಎಂದು ಮೋದಿ ಟ್ವೀಟ್​ ಮಾಡಿದ್ದಾರೆ. ಜತೆತೆ ಅಂತಾರಾಷ್ಟ್ರೀಯ ಒಲಿಂಪಿಕ್​ ಸಮಿತಿಗೆ ಮತ್ತೊಮ್ಮೆ ಈ ನಿರ್ಧಾರವನ್ನು ಪರಿಶೀಲಿಸುವಂತೆ ಮೋದಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Vinesh Phogat: ನೋ! ನೋ! ನೋ!; ವಿನೇಶ್​ ಫೋಗಟ್ ಅನರ್ಹತೆ ಕೆಟ್ಟ ಕನಸಾಗಿರಲಿ: ಆನಂದ್‌ ಮಹೀಂದ್ರಾ

Continue Reading

Latest

Job Vacancies: ಸಾವಿರ ಮಹಿಳಾ ಪೊಲೀಸ್ ಕಾನ್‌‌ಸ್ಟೇಬಲ್ ಹುದ್ದೆಗಳಿಗೆ ಲಕ್ಷಕ್ಕೂ ಹೆಚ್ಚು ಅರ್ಜಿ! ಫುಟ್‌‌ಪಾತ್‌‌ನಲ್ಲೇ ಮಲಗಿದ್ದ ಮಹಿಳಾ ಅಭ್ಯರ್ಥಿಗಳು

Job Vacancies: ಮಹಿಳಾ ಕಾನ್ಸ್ಟೇಬಲ್ ಮತ್ತು ಮಹಿಳಾ ಕಾನ್ಸ್ಟೇಬಲ್ ಡ್ರೈವರ್ ಸೇರಿದಂತೆ 1,257 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಮುಂಬೈ ಪೊಲೀಸರು ರಾಜ್ಯಾದ್ಯಂತ 1.11 ಲಕ್ಷ ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಅದರಂತೆ, ಸೋಮವಾರ ಮರೀನ್ ಡ್ರೈವ್ನಲ್ಲಿ ಡ್ರೈವರ್ ನೇಮಕಾತಿಗಾಗಿ ದೈಹಿಕ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಜಮಾಯಿಸಿದ್ದರು. ಅವರೆಲ್ಲಾ ಪುಟ್‌ಪಾತ್‌ನಲ್ಲಿ ಮಲಗಿದ್ದರು. ಈ ಘಟನೆ ಮಹಾರಾಷ್ಟ್ರದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Job Vacancies
Koo


ಮುಂಬೈ : ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಎಷ್ಟರ ಮಟ್ಟಿಗೆ ಇದೆ ಎಂದರೆ ಯಾವುದೇ ಸರ್ಕಾರಿ ಕೆಲಸಕ್ಕೆ ಅರ್ಜಿ ಆಹ್ವಾನಿಸಿದರೆ ಸಾಕು ಲಕ್ಷಾಂತರ ಜನರು ಆ ಕಚೇರಿಯ ಬಳಿ ಬರುತ್ತಾರೆ. ಅಷ್ಟೋ ಕಡೆ ನೂಕು ನುಗ್ಗುಲು ಕೂಡ ಉಂಟಾಗುತ್ತದೆ. ಇದೀಗ ಮಹಿಳಾ ಕಾನ್ಸ್ಟೇಬಲ್ ಮತ್ತು ಮಹಿಳಾ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳಿಗೆ 1,257 ಹುದ್ದೆ (Job vacancies)ಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಮುಂಬೈ ಪೊಲೀಸರು ರಾಜ್ಯಾದ್ಯಂತ 1.11 ಲಕ್ಷ ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಅದರಂತೆ, ಸೋಮವಾರ ಮರೀನ್ ಡ್ರೈವ್‍ನಲ್ಲಿ ಡ್ರೈವರ್ ನೇಮಕಾತಿಗಾಗಿ ದೈಹಿಕ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಜಮಾಯಿಸಿದರು. ಅವರೆಲ್ಲಾ ಪುಟ್ಪಾತ್‍ನಲ್ಲಿ ಮಲಗಿದ್ದರು.

ವಿರೋಧ ಪಕ್ಷದ ನಾಯಕ ವಿಜಯ್ ವಡ್ಡೇಟಿವಾರ್ ಮಂಗಳವಾರ ತಡರಾತ್ರಿ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಇದಕ್ಕೆ ಸಂಬಂಧಪಟ್ಟ ವಿಡಿಯೊ ಮತ್ತು ಸಂದೇಶವನ್ನು ಪೋಸ್ಟ್ ಮಾಡುವ ಮೂಲಕ ಸರ್ಕಾರದ ಪಾತ್ರದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಲಾದ ಸಂದೇಶದಲ್ಲಿ, “ಮುಂಬೈನಲ್ಲಿ ಪೊಲೀಸ್ ನೇಮಕಾತಿಗಾಗಿ ಬಂದ ಹುಡುಗಿಯರು ಇದರಲ್ಲಿ ಕಂಡುಬರುತ್ತಾರೆ.

ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಿಂದ ಮುಂಬೈನಂತಹ ದೊಡ್ಡ ನಗರಗಳಿಗೆ ಬರುವ ಹುಡುಗಿಯರಿಗೆ ರಾತ್ರಿ ತಂಗಲು ಸರ್ಕಾರ ಮತ್ತು ಪೊಲೀಸ್ ಆಡಳಿತಕ್ಕೆ ವಸತಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲವೇ? ಮಳೆ ಬಂದಾಗ ಈ ಹುಡುಗಿಯರು ಎಲ್ಲಿ ಮಲಗುತ್ತಾರೆ? ಅವರ ಸುರಕ್ಷತೆಯ ಬಗ್ಗೆ ಏನು? ವಾಶ್ ರೂಮ್ ವ್ಯವಸ್ಥೆ ಬಗ್ಗೆ ಏನು? ಇದು ಬೇಜವಾಬ್ದಾರಿಯುತ ಕೆಲಸ “ ಎಂದು ತಿಳಿಸಿದ್ದಾರೆ. ಅಲ್ಲದೇ ಆಕಾಂಕ್ಷಿಗಳಿಗೆ ವಸತಿ ಸೌಕರ್ಯಗಳನ್ನು ಒದಗಿಸುವಂತೆ ವಡ್ಡೇಟಿವಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ʼಮೇಡಂ ನನಗೆ ಪಿರಿಯಡ್ಸ್‌ʼ ಎಂದರೂ ಬಿಡದೆ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿದ ಶಿಕ್ಷಕಿ!

ನಿರುದ್ಯೋಗ ಸಮಸ್ಯೆ ದೇಶದಲ್ಲಿ ಎಷ್ಟು ಕಾಡುತ್ತಿದೆ ಎಂಬುದಕ್ಕೆ ಈ ಹಿಂದೆ ಮುಂಬೈನಲ್ಲಿ ನಡೆದ ಈ ಘಟನೆಯೂ ಕೂಡ ಸಾಕ್ಷಿಯಾಗಿದೆ. ಈ ಹಿಂದೆ ಏರ್ ಇಂಡಿಯಾ ಏರ್ಪೋರ್ಟ್ ಸರ್ವೀಸಸ್ ಲಿಮಿಟೆಡ್ (ಎಐಎಎಸ್ಎಲ್) ಮುಂಬೈ ವಿಮಾನ ನಿಲ್ದಾಣದಲ್ಲಿ ಕೇವಲ 600 ಖಾಲಿ ಹುದ್ದೆಗಳಿಗೆ ಸ್ಪರ್ಧಿಸಲು 25,000 ಕ್ಕೂ ಹೆಚ್ಚು ಆಕಾಂಕ್ಷಿಗಳು ಹಾಜರಾಗಿದ್ದರಿಂದ ಮುಂಬೈ ವಿಮಾನ ನಿಲ್ದಾಣದಲ್ಲಿ ಗೊಂದಲಕ್ಕೆ ಕಾರಣವಾಯಿತು. ಭಾರಿ ಜನಸಂದಣಿಯನ್ನು ನಿರ್ವಹಿಸಲು ಏರ್ ಇಂಡಿಯಾ ಸಿಬ್ಬಂದಿ ಹೆಣಗಾಡಬೇಕಾಯಿತು, ಇದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ಕೂಡ ಎದುರಾಗಿತ್ತು

Continue Reading

ಉದ್ಯೋಗ

Job Alert: CDACಯಲ್ಲಿದೆ 250 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Job Alert: ಸೆಂಟರ್‌ ಫಾರ್‌ ಡೆವಲಪ್‌ಮೆಂಟ್‌ ಆಫ್‌ ಅಡ್ವಾನ್ಸ್‌ಡ್‌ ಕಂಪ್ಯೂಟಿಂಗ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪ್ರಾಜೆಕ್ಟ್‌ ಎಂಜಿನಿಯರ್‌, ಪ್ರಾಜೆಕ್ಟ್‌ ಅಸೋಸಿಯೇಟ್‌, ಪ್ರಾಜೆಕ್ಟ್‌ ಮ್ಯಾನೇಜರ್‌ ಸೇರಿದಂತೆ ಒಟ್ಟು 250 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದವರಿಗೆ ಬೆಂಗಳೂರು, ಶಿಮ್ಲಾ, ದಿಲ್ಲಿ ಮತ್ತು ಪುಣೆಯಲ್ಲಿ ಪೋಸ್ಟಿಂಗ್‌ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 16.

VISTARANEWS.COM


on

Job Alert
Koo

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸೆಂಟರ್‌ ಫಾರ್‌ ಡೆವಲಪ್‌ಮೆಂಟ್‌ ಆಫ್‌ ಅಡ್ವಾನ್ಸ್‌ಡ್‌ ಕಂಪ್ಯೂಟಿಂಗ್‌(Centre for Development of Advanced Computing) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (CDAC Recruitment 2024). ಪ್ರಾಜೆಕ್ಟ್‌ ಎಂಜಿನಿಯರ್‌, ಪ್ರಾಜೆಕ್ಟ್‌ ಅಸೋಸಿಯೇಟ್‌, ಪ್ರಾಜೆಕ್ಟ್‌ ಮ್ಯಾನೇಜರ್‌ ಸೇರಿದಂತೆ ಒಟ್ಟು 250 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದವರಿಗೆ ಬೆಂಗಳೂರು, ಶಿಮ್ಲಾ, ದಿಲ್ಲಿ ಮತ್ತು ಪುಣೆಯಲ್ಲಿ ಪೋಸ್ಟಿಂಗ್‌ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಪ್ರಾಜೆಕ್ಟ್ ಅಸೋಸಿಯೇಟ್- 43 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂಇ ಅಥವಾ ಎಂ.ಟೆಕ್‌, ಸ್ನಾತಕೋತ್ತರ ಪದವಿ
ಪ್ರಾಜೆಕ್ಟ್ ಎಂಜಿನಿಯರ್- 100 ಹುದ್ದೆ, ವಿದ್ಯಾರ್ಹತೆ:
ಪ್ರಾಜೆಕ್ಟ್ ಮ್ಯಾನೇಜರ್- 1 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂಇ ಅಥವಾ ಎಂ.ಟೆಕ್‌, ಸ್ನಾತಕೋತ್ತರ ಪದವಿ, ಪಿಎಚ್‌ಡಿ
ಪ್ರಾಜೆಕ್ಟ್ ಮ್ಯಾನೇಜರ್ / ಪ್ರೋಗ್ರಾಂ ಮ್ಯಾನೇಜರ್ / ಪ್ರೋಗ್ರಾಂ ಡೆಲಿವರಿ ಮ್ಯಾನೇಜರ್ / ನಾಲೆಡ್ಜ್‌ ಪಾರ್ಟನರ್‌- 19 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂಇ ಅಥವಾ ಎಂ.ಟೆಕ್‌, ಸ್ನಾತಕೋತ್ತರ ಪದವಿ, ಪಿಎಚ್‌ಡಿ
ಪ್ರಾಜೆಕ್ಟ್‌ ಆಫೀಸರ್‌- 3 ಹುದ್ದೆ, ವಿದ್ಯಾರ್ಹತೆ: ಸಿಎ, ಸ್ನಾತಕೋತ್ತರ ಪದವಿ, ಎಂಬಿಎ, ಎಂ.ಕಾಂ., ಸ್ನಾತಕೋತ್ತರ ಪದವಿ
ಪ್ರಾಜೆಕ್ಟ್ ಸಪೋರ್ಟ್‌ ಸ್ಟಾಫ್‌- 5 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ, ಎಂ.ಕಾಂ, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ
ಸೀನಿಯರ್ ಪ್ರಾಜೆಕ್ಟ್ ಎಂಜಿನಿಯರ್ / ಮಾಡ್ಯೂಲ್ ಲೀಡ್ / ಪ್ರಾಜೆಕ್ಟ್ ಲೀಡರ್- 41 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂಇ ಅಥವಾ ಎಂ.ಟೆಕ್‌, ಸ್ನಾತಕೋತ್ತರ ಪದವಿ, ಪಿಎಚ್.ಡಿ.
ಸೀನಿಯರ್ ಪ್ರಾಜೆಕ್ಟ್ ಎಂಜಿನಿಯರ್ / ಮಾಡ್ಯೂಲ್ ಲೀಡ್- 16 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂಇ ಅಥವಾ ಎಂ.ಟೆಕ್‌, ಸ್ನಾತಕೋತ್ತರ ಪದವಿ, ಪಿಎಚ್.ಡಿ.
ಸೀನಿಯರ್ ಪ್ರಾಜೆಕ್ಟ್ ಎಂಜಿನಿಯರ್- 22 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂಇ ಅಥವಾ ಎಂ.ಟೆಕ್‌, ಸ್ನಾತಕೋತ್ತರ ಪದವಿ, ಪಿಎಚ್.ಡಿ.

ವಯೋಮಿತಿ, ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 30-50 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://careers.cdac.in/advt-details/PN-1972024-TYT1X).
  • ಮೊಬೈಲ್‌ ನಂಬರ್‌, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading
Advertisement
Kannada New Movie
ಕರ್ನಾಟಕ6 mins ago

Kannada New Movie: ʼಆಪರೇಷನ್ ಕೊಂಬುಡಿಕ್ಕಿʼ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಅನುಪ್ ಹನುಮಂತೇಗೌಡ

CM Siddaramaiah
ಕರ್ನಾಟಕ10 mins ago

Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

Bigg Boss Kannada host by rishab shetty sudeep Out
ಬಿಗ್ ಬಾಸ್12 mins ago

Bigg Boss Kannada: ಈ ಬಾರಿ ʻಬಿಗ್‌ ಬಾಸ್‌ ಕನ್ನಡʼ ಹೋಸ್ಟ್‌ ಮಾಡ್ತಿದ್ದಾರಂತೆ ರಿಷಬ್‌ ಶೆಟ್ಟಿ; ಕಿಚ್ಚ ಸುದೀಪ್ ಔಟ್‌?

Metro City
ಬೆಂಗಳೂರು17 mins ago

Metro City: ಬೆಂಗಳೂರಿಗೆ ‘ಮೆಟ್ರೊ ಸಿಟಿ’ ಸ್ಥಾನಮಾನ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ!

Vinesh Phogat
ಪ್ರಮುಖ ಸುದ್ದಿ24 mins ago

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Vinesh Phogat
ಕ್ರೀಡೆ29 mins ago

Vinesh Phogat: ಫೈನಲ್​ಗೆ ಅನರ್ಹ; ವಿನೇಶ್ ಫೋಗಟ್​ ಕಡು ವೈರಿ ಬ್ರಿಜ್ ಭೂಷಣ್ ಮಗನ ಪ್ರತಿಕ್ರಿಯೆ ಏನು?

Bhoomige Banda Bhagavantha came to end
ಕಿರುತೆರೆ32 mins ago

Bhoomige Banda Bhagavantha: ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಮುಕ್ತಾಯ: ಅಂಕಿತಾ ಜಯರಾಮ್‌  ಭಾವುಕ ಪೋಸ್ಟ್‌!

Helicopter crashed
ವಿದೇಶ44 mins ago

Helicopter crashed: ನೇಪಾಳದಲ್ಲಿ ಹೆಲಿಕಾಪ್ಟರ್‌ ಪತನ; ನಾಲ್ವರ ದುರ್ಮರಣ

Electric Shock
ಕ್ರೈಂ55 mins ago

Electric Shock: ರಾಣೇಬೆನ್ನೂರಿನಲ್ಲಿ ವಿದ್ಯುತ್ ಶಾಕ್ ಹೊಡೆದು ತಂದೆ ಮಗ-ಸಾವು

Vinesh Phogat support by Alia Bhatt Vicky Kaushal Olympics disqualification
ಕ್ರೀಡೆ1 hour ago

Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು23 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ24 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌