Self Harming: ಇನ್‍ಸ್ಟಾಗ್ರಾಂ ಪ್ರೇಯಸಿ ಕೈಕೊಟ್ಟಿದ್ದಕ್ಕೆ ನೇಣಿಗೆ ಶರಣಾದ ಯುವಕ - Vistara News

ಕರ್ನಾಟಕ

Self Harming: ಇನ್‍ಸ್ಟಾಗ್ರಾಂ ಪ್ರೇಯಸಿ ಕೈಕೊಟ್ಟಿದ್ದಕ್ಕೆ ನೇಣಿಗೆ ಶರಣಾದ ಯುವಕ

Self Harming: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಜನತಾ ಹೌಸ್‌ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಪ್ರೇಯಸಿಗೆ ಬೇರೊಬ್ಬರ ಜತೆ ವಿವಾಹ ನಿಶ್ಚಯವಾಗಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಪ್ರೇಯಸಿ ಕೈಕೊಟ್ಟಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ಜಿಲ್ಲೆಯ ಮಾನ್ವಿ ಪಟ್ಟಣದ ಜನತಾ ಹೌಸ್‌ನಲ್ಲಿ ನಡೆದಿದೆ. ಮಾನ್ವಿ ನಿವಾಸಿ ವರುಣ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾವನ ಜತೆ ಪ್ರೇಯಸಿಯ ಮದುವೆ ನಿಶ್ಚಯವಾಗಿದ್ದಕ್ಕೆ ಖಿನ್ನತೆಗೊಳಗಾಗಿದ್ದ ಯುವಕ, ಮನೆಯಲ್ಲಿ ಸೀರೆಯಿಂದ ನೇಣುಬಿಗಿದುಕೊಂಡಿದ್ದಾನೆ.

ಇನ್‌ಸ್ಟಾಗ್ರಾಂ ಮೂಲಕ ವರುಣ್‌ಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ದೇವಿಕಾ ಎಂಬ ಯುವತಿಯ ಪರಿಚಯವಾಗಿತ್ತು. 5 ವರ್ಷಗಳ ಹಿಂದೆಯೇ ಇನ್‌ಸ್ಟಾಗ್ರಾಂನಲ್ಲಿ ಪ್ರೀತಿ ಅರಳಿತ್ತು. ರಾಯಚೂರಿನಲ್ಲಿ 3 ವರ್ಷಗಳ ಕಾಲ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ದೇವಿಕಾಗೆ, ನಾಲ್ಕೈದು ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ವರುಣ್‌ನ ಯುವತಿ ದೂರ ಮಾಡಿದ್ದಳು.

ಪ್ರೇಯಸಿ ದೂರವಾಗಿದ್ದರಿಂದ ಮನನೊಂದು ಕೊನೆಯ ಬಾರಿ ಬಾರಿ ವಿಡಿಯೊ ಕಾಲ್ ಮಾಡಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವರುಣ್ ಶವ ಮಾನ್ವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Helicopter crashed: ನೇಪಾಳದಲ್ಲಿ ಹೆಲಿಕಾಪ್ಟರ್‌ ಪತನ; ನಾಲ್ವರ ದುರ್ಮರಣ

ಕೃಷ್ಣಾ ನದಿ ಹಿನ್ನೀರಿ‌ನಲ್ಲಿ ಮುಳಗಿ ವ್ಯಕ್ತಿ ಸಾವು

ಬಾಗಲಕೋಟೆ: ಕೃಷ್ಣಾ ನದಿ ಹಿನ್ನೀರಿ‌ನಲ್ಲಿ ಮುಳಗಿ ವ್ಯಕ್ತಿ ಮೃತಪಟ್ಟಿರುವುದು ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕಂಕನವಾಡಿಯಲ್ಲಿ ನಡೆದಿದೆ. ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳಿ ಮನೆಗೆ ವಾಪಸ್ಸಾಗುವ ವೇಳೆ ದುರ್ಘಟನೆ ನಡೆದಿದೆ.

ಈಶ್ವರ ಸಿದ್ದಣ್ಣವರ (65) ಮೃತ ದುರ್ದೈವಿ. ಹಿನ್ನೀರಿನಲ್ಲಿ ಈಜಿಕೊಂಡು ತಮ್ಮ ಮನೆಗೆ ಸೇರಲು ಯತ್ನಿಸಿದಾಗ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೋಟ್‌ನ ಸಹಾಯದಿಂದ ಈಶ್ವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಜಮಖಂಡಿ ತಹಸೀಲ್ದಾರ್‌ ಸದಾಶಿವ ಮಕ್ಕೋಜಿ, ಪಿಎಸ್‌ಐ ಗಂಗಾಧರ ಪೂಜಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೀದಿ ನಾಯಿ ದಾಳಿಯಿಂದ ಬಾಲಕಿಗೆ ಗಂಭೀರ ಗಾಯ

ಕಲಬುರಗಿ: ಬೀದಿ ನಾಯಿ ದಾಳಿಯಿಂದ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಹಾಬಾದ್ ಪಟ್ಟಣದಲ್ಲಿ ನಡೆದಿದೆ. ದೀಪಾಲಿ ಗಾಯಾಳು. ಮುಖ, ಕಣ್ಣು ಸೇರಿ ಹಲವು ಭಾಗಗಳಿಗೆ ನಾಯಿ ಕಚ್ಚಿದೆ. ಹೀಗಾಗಿ ಕಲಬುರಗಿ ನಗರದ ಸರ್ಕಾರಿ ಆಸ್ಪತ್ರೆಗೆ ಹೋಗಿದ್ದಾಗ ಚಿಕಿತ್ಸೆ ನೀಡಿಲ್ಲ. ಆದ್ದರಿಂದ ಬಾಲಕಿಗೆ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಶಹಾಬಾದ್‌ನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣ ಮಾಡಲು ಪುರಸಭೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ರಾಣೇಬೆನ್ನೂರಿನಲ್ಲಿ ವಿದ್ಯುತ್ ಶಾಕ್ ಹೊಡೆದು ತಂದೆ ಮಗ-ಸಾವು

Electric Shock
Electric Shock

ಹಾವೇರಿ: ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ನಡೆದಿದೆ. ಮೋಟಾರ್ ಪಂಪ್‌ಸೆಟ್ ರಿಪೇರಿ ಮಾಡುತ್ತಿದ್ದಾಗ ಅವಘಡ (Electric Shock) ನಡೆದಿದ್ದು, ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

ತಂದೆ ಕರಿಬಸಪ್ಪ (45), ಮಗ ದರ್ಶನ್‌ (25) ಮೃತರು. ತುಂಗಭದ್ರ ನದಿ ದಡದಲ್ಲಿ ಹಾಕಿದ್ದ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಪಟ್ಟಿದ್ದಾರೆ. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

Actor Darshan: ಆಗಸ್ಟ್ 20ಕ್ಕೆ ದರ್ಶನ್ ಮನೆಯೂಟ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಲಿದ್ದು, ಈ ನಡುವೆ ಅರ್ಜಿ ಬಗ್ಗೆ ಜೈಲಾಧಿಕಾರಿಗಳು ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಕೋರ್ಟ್‌ಗೆ ನೀಡಲು ಜೈಲಾಧಿಕಾರಿಗಳು ವರದಿ ಸಿದ್ಧಪಡಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ (Actor Darshan) ಮನೆಯೂಟ ನೀಡಲು ಜೈಲಾಧಿಕಾರಿಗಳು ನಿರಾಕರಿಸಿದ್ದಾರೆ. ಮನೆಯೂಟ ನೀಡುವ ಬಗ್ಗೆ 10 ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೈಕೋರ್ಟ್ ಸೂಚಿಸಿತ್ತು. ಆದರೆ, ಕೊಲೆ ಆರೋಪಿಗೆ ಕಾನೂನಿನಲ್ಲಿ ಮನೆಯೂಟಕ್ಕೆ ಅವಕಾಶ ಇಲ್ಲವೆಂದು ಅಧಿಕಾರಿಗಳು ನಿರಾಕರಣೆ ಮಾಡಿದ್ದಾರೆ.

ಆಗಸ್ಟ್ 20ಕ್ಕೆ ದರ್ಶನ್ ಮನೆಯೂಟ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಲಿದ್ದು, ಈ ನಡುವೆ ಅರ್ಜಿ ಬಗ್ಗೆ ಜೈಲಾಧಿಕಾರಿಗಳು ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಕೋರ್ಟ್‌ಗೆ ನೀಡಲು ಜೈಲಾಧಿಕಾರಿಗಳು ವರದಿ ಸಿದ್ಧಪಡಿಸಿದ್ದಾರೆ.

ಅನೇಕ ವಿಐಪಿ ವಿಚಾರಣಾಧೀನ ಬಂಧಿಗಳಿಗೆ ಮನೆಯೂಟ ನಿರಾಕರಣೆ ಮಾಡಲಾಗಿದೆ ಎಂದು ಕೋರ್ಟ್ ಆದೇಶ ನೀಡಿದರೂ ಜೈಲು ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ್ದರು. ಜೈಲಿನಲ್ಲಿ 4 ಸಾವಿರಕ್ಕೂ ಅಧಿಕ ಮಂದಿ ಬಂಧಿಗಳಿದ್ದಾರೆ. ಒಬ್ಬೊಬ್ಬರಿಗೂ ಮನೆಯೂಟಕ್ಕೆ ಅವಕಾಶ ನೀಡಿದರೆ, ಜೈಲಿನ ಊಟ ಮಾಡುವವರು ಇರುವುದಿಲ್ಲ. ಎಲ್ಲರೂ ಮನೆ ಊಟ ಕೇಳುವ ಸ್ಥಿತಿ ಉದ್ಭವ ಆಗಲಿದೆ. ಹೀಗಾಗಿ ಮನೆ ಊಟ ನೀಡುವ ವಿಚಾರದಲ್ಲಿ ಮರು ಪರಿಶೀಲಿಸಲು ಕೋರ್ಟ್‌ಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇತರರಂತೆ ನಟ ದರ್ಶನ್ ವಿಚಾರದಲ್ಲಿ ಯಥಾಸ್ಥಿತಿ ಮುಂದುವರಿಯುತ್ತದೆ. ನಟ ದರ್ಶನ್‌ಗೆ ಮನೆ ಊಟ ಅಗತ್ಯವಿಲ್ಲ, ಜೈಲಿನಲ್ಲಿ ಗುಣಮಟ್ಟದ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಂದ ಕೋರ್ಟ್‌ಗೆ ವರದಿ ಸಲ್ಲಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ | Viral Video: 11 ವರ್ಷಗಳ ಹಿಂದೆ ಸತ್ತಿದ್ದ ಗಂಡ ಕನಸಲ್ಲಿ ಬಂದು ʼಸೇರಿದʼ; ಹಾಗಾಗಿ ಮಗು ಹುಟ್ಟಿತು ಅಂತಿದ್ದಾಳೆ ಈ ಹೆಂಗಸು!

ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತಿ ದೊಡ್ಡ ರಹಸ್ಯ ರಿವೀಲ್ ಆಗಿದೆ. ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್‌ಗೆ (Actor Darshan) ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ ಸಿಕ್ಕಂತಾಗಿದೆ.

ಇದನ್ನೂ ಓದಿ | Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ

ಎಫ್‌ಎಸ್‌ಎಲ್ ವರದಿಯಲ್ಲಿ ಭಯಾನಕ ಸತ್ಯ ಹೊರಬಿದ್ದಿದೆ. ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ಅನ್ನು ಎಫ್‌ಎಸ್‌ಎಲ್‌ಗೆ ಪೊಲೀಸರು ಕಳುಹಿಸಿದ್ದರು. ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್‌ಎಸ್‌ಎಲ್ ವರದಿಯಲ್ಲಿ ಧೃಡವಾಗಿದೆ ಎನ್ನಲಾಗಿದೆ.

Continue Reading

ಕರ್ನಾಟಕ

Wayanad Landslide: ಭೂಕುಸಿತ ಸಂತ್ರಸ್ತರಿಗೆ ನೆರವು; ಯುವ ಕಾಂಗ್ರೆಸ್‌ ಮುಖಂಡ ಧ್ರುವ ಜತ್ತಿ ಭೇಟಿ

Wayanad Landslide: ಎನ್‌ಎಸ್‌ಯುಐ ರಾಷ್ಟೀಯ ಅಧ್ಯಕ್ಷ ವರುಣ್ ಚೌಧರಿ ಹಾಗೂ ಎನ್‌ಎಸ್‌ಯುಐ ಜನರಲ್ ಸೆಕ್ರೆಟರಿ, ರಾಜ್ಯ ಕಾಂಗ್ರೆಸ್ ಯುವ ಮುಖಂಡ ಧ್ರುವ ಜತ್ತಿ ಅವರು ಕೇರಳದ ವಯನಾಡಿನ ನಿರ್ಮಿತಿ ಕೇಂದ್ರಕ್ಕೆ ಭೇಟಿ ನೀಡಿ, ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಿ, ದಿನಬಳಕೆಗೆ ಬೇಕಾಗುವ ಅಗತ್ಯ ಸಾಮಗ್ರಿಗಳನ್ನು ವಿತರಿಸಿದರು.

VISTARANEWS.COM


on

Wayanad Landslide
Koo

ವಯನಾಡ್‌: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ (Wayanad Landslide) ಸಂತ್ರಸ್ತರಾದವರಿಗೆ, ಎನ್‌ಎಸ್‌ಯುಐ ರಾಷ್ಟೀಯ ಅಧ್ಯಕ್ಷ ವರುಣ್ ಚೌಧರಿ ಹಾಗೂ ಎನ್‌ಎಸ್‌ಯುಐ ಜನರಲ್ ಸೆಕ್ರೆಟರಿ, ರಾಜ್ಯ ಕಾಂಗ್ರೆಸ್ ಯುವ ಮುಖಂಡ ಧ್ರುವ ಜತ್ತಿ ಅವರು ದಿನಬಳಕೆಗೆ ಬೇಕಾಗುವ ಅಗತ್ಯ ಸಾಮಾಗ್ರಿಗಳನ್ನು ವಿತರಿಸಿದರು.

ಕೇರಳದ ವಯನಾಡಿನ ನಿರ್ಮಿತಿ ಕೇಂದ್ರಕ್ಕೆ ಭೇಟಿ ನೀಡಿದ ಎನ್‌ಎಸ್‌ಯುಐ ರಾಷ್ಟೀಯ ಅಧ್ಯಕ್ಷ ವರುಣ್ ಚೌಧರಿ ಹಾಗೂ ಎನ್‌ಎಸ್‌ಯುಐ ಜನರಲ್ ಸೆಕ್ರೆಟರಿ, ರಾಜ್ಯ ಕಾಂಗ್ರೆಸ್ ಯುವ ಮುಖಂಡ ಧ್ರುವ ಜತ್ತಿ ಅವರು, ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಿ, ದಿನಬಳಕೆಗೆ ಬೇಕಾಗುವ ಅಗತ್ಯ ಸಾಮಗ್ರಿಗಳನ್ನು ವಿತರಿಸಿದರು.

ಇದನ್ನೂ ಓದಿ: Rajya Sabha Election: 9 ರಾಜ್ಯಗಳ 12 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಘೋಷಣೆ; ಸೆ.3ಕ್ಕೆ ಮತದಾನ

ಕೇರಳದ ವಯನಾಡ್ ಕ್ಷೇತ್ರದಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ನೂರಾರು ಜನ ಮೃತಪಟ್ಟು ಹಲವಾರು ಕುಟುಂಬಗಳು ನಿರ್ಗತಿಕರಾಗಿರುವುದು ಬಹಳ ದುಃಖದ ಸಂಗತಿ. ನೆಲೆಯನ್ನು ಕಳೆದುಕೊಂಡ ಕುಟುಂಬಗಳಿಗೆ ಆದಷ್ಟು ಬೇಗ ಆಶ್ರಯ ದೊರೆಯುವಂತಾಗಲಿ. ನಿರ್ಗತಿಕ ಕುಟುಂಬಗಳು ಈ ನೋವಿನಿಂದ ಹೊರಬಂದು ಎಲ್ಲರಂತೆ ಸಹಜವಾಗಿ ಬದುಕುವಂತಾಗಲಿ ಎಂದು ಈ ವೇಳೆ ಅವರು ತಿಳಿಸಿದರು.

Continue Reading

ಕರ್ನಾಟಕ

Utthana Essay Competition 2024: ಉತ್ಥಾನ ಪ್ರಬಂಧ ಸ್ಪರ್ಧೆಗೆ ಬರಹ ಕಳುಹಿಸಿ; 10,000 ರೂ. ಬಹುಮಾನ ಪಡೆಯಿರಿ!

Utthana Essay Competition 2024: ಸದಭಿರುಚಿಯ ಮಾಸಪತ್ರಿಕೆ ʼಉತ್ಥಾನʼ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ “ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ಜಗತ್ತು” ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ʼಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2024ʼರ ಪೋಸ್ಟರ್ ಅನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ ಮತ್ತೂರು ಹಾಗೂ ಬೆಂಗಳೂರಿನ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್‌ನ ಪ್ರಾದೇಶಿಕ ನಿರ್ದೇಶಕ ಡಿ. ಮಹೇಂದ್ರ ಅವರು ಬಿಡುಗಡೆ ಮಾಡಿದರು. ಉತ್ಥಾನ ಮಾಸಪತ್ರಿಕೆಯ ಸಂಪಾದಕ ಅನಿಲ್‌ಕುಮಾರ್ ಮೊಳಹಳ್ಳಿ ಉಪಸ್ಥಿತರಿದ್ದರು.

VISTARANEWS.COM


on

Utthana Essay Competition 2024
Koo

ಬೆಂಗಳೂರು: ಸದಭಿರುಚಿಯ ಮಾಸಪತ್ರಿಕೆ ʼಉತ್ಥಾನʼ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ “ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ಜಗತ್ತು” ಎಂಬ ವಿಷಯದ ಕುರಿತು ರಾಜ್ಯಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು (Utthana Essay Competition 2024) ಆಯೋಜಿಸಲಾಗಿದೆ.

ʼಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2024ʼ ರ ಪೋಸ್ಟರ್ ಅನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ ಮತ್ತೂರು ಹಾಗೂ ಬೆಂಗಳೂರಿನ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್‌ನ ಪ್ರಾದೇಶಿಕ ನಿರ್ದೇಶಕ ಡಿ. ಮಹೇಂದ್ರ ಅವರು ಬಿಡುಗಡೆ ಮಾಡಿದರು. ಉತ್ಥಾನ ಮಾಸಪತ್ರಿಕೆಯ ಸಂಪಾದಕ ಅನಿಲ್‌ಕುಮಾರ್ ಮೊಳಹಳ್ಳಿ ಉಪಸ್ಥಿತರಿದ್ದರು.

ಇದನ್ನೂ ಓದಿ: Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಉತ್ಥಾನ ಮಾಸಪತ್ರಿಕೆಯು ಕಳೆದ ಹಲವು ವರ್ಷಗಳಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದ್ದು, ಈ ಬಾರಿಯ 2024ನೇ ಸಾಲಿನಲ್ಲಿ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಗೆ ಪ್ರಬಂಧಗಳನ್ನು ಆಹ್ವಾನಿಸಲಾಗಿದೆ.

ಸ್ಪರ್ಧೆಯ ನಿಯಮಗಳು

ಸ್ಪರ್ಧೆಯಲ್ಲಿ ಪದವಿ, ಯಾ ತತ್ಸಮಾನ ಮತ್ತು ಸ್ನಾತಕೋತ್ತರ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದು. ಪ್ರಬಂಧವು ಕನ್ನಡ ಭಾಷೆಯಲ್ಲಿರಬೇಕು. ಪ್ರಬಂಧವು 1500 ಪದಗಳು ಮೀರದಂತೆ ಇರಲಿ. ಪ್ರಬಂಧವನ್ನು ಪೋಸ್ಟ್ ಮೂಲಕ ಅಥವಾ ಇಮೇಲ್ ಮೂಲಕ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸುವ ಪ್ರಬಂಧ ವಿದ್ಯಾರ್ಥಿಯ ಸ್ವಂತ ರಚನೆಯಾಗಿರಬೇಕು. ಈವರೆಗೆ ಎಲ್ಲಿಯೂ ಯಾವ ರೀತಿಯಲ್ಲೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು. ಕಳುಹಿಸುವ ಪ್ರಬಂಧವನ್ನು ಕಾಲೇಜು/ವಿಭಾಗ ಮುಖ್ಯಸ್ಥರಿಂದ ದೃಢೀಕರಿಸಬೇಕು. ಪ್ರಬಂಧವನ್ನು ಹಾಳೆಯ ಒಂದೆ ಮಗ್ಗುಲಲ್ಲಿ ಸ್ಫುಟವಾಗಿ ಬರೆದಿರಬೇಕು. ಹಾಳೆಗಳನ್ನು ಚಿತ್ರಗಳಿಂದ, ಬಣ್ಣಗಳಿಂದ ಅಲಂಕರಿಸುವುದು ಬೇಡ. ಸ್ಪರ್ಧಿಗಳು ತಮ್ಮ ಹೆಸರು, ಪರಿಚಯ, ಮೊಬೈಲ್ ನಂಬರ್, ಕಾಲೇಜಿನ ಹೆಸರು, ವಿಳಾಸ ಇತ್ಯಾದಿಗಳನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದು ಲಗತ್ತಿಸಬೇಕು. ಜತೆಗೆ ಭಾವಚಿತ್ರವೂ ಇರಬೇಕು.

ಪ್ರಬಂಧವನ್ನು ನುಡಿ/ಯೂನಿಕೋಡ್ ತಂತ್ರಾಶದಲ್ಲಿ ಸಿದ್ಧಪಡಿಸಿ (ಪಿಡಿಎಫ್‌ ಮತ್ತು ವರ್ಡ್‌ ಫೈಲ್‌ ಎರಡನ್ನೂ) utthanacompetition@gmail.com ಈ ವಿಳಾಸಕ್ಕೆ ಇ-ಮೇಲ್ ಮೂಲಕವೂ ಕಳುಹಿಸಬಹುದು. ಜೆರಾಕ್ಸ್‌ /ಫೋಟೋ ಪಿಡಿಎಫ್‌ ಪ್ರತಿಗಳನ್ನು ಪರಿಶೀಲಿಸಲಾಗುವುದಿಲ್ಲ. ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ. ಪ್ರಬಂಧ ತಲುಪಲು ಅಕ್ಟೋಬರ್ 10 ಕೊನೆಯ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬಹುಮಾನಗಳ ವಿವರ

ಮೊದಲ ಬಹುಮಾನ: ರೂ. 10,000/-
ಎರಡನೆಯ ಬಹುಮಾನ: ರೂ. 7,000 /-
ಮೂರನೆಯ ಬಹುಮಾನ: ರೂ. 5,000/-
ಹತ್ತು ಮೆಚ್ಚುಗೆಯ ಬಹುಮಾನಗಳು: ತಲಾ ರೂ. 2,000/-

ಇದನ್ನೂ ಓದಿ: Kannada New Movie: ʼಆಪರೇಷನ್ ಕೊಂಬುಡಿಕ್ಕಿʼ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಅನುಪ್ ಹನುಮಂತೇಗೌಡ

ಪ್ರಬಂಧವನ್ನು ಕಳುಹಿಸಬೇಕಾದ ವಿಳಾಸ

ಸಂಪಾದಕರು, ‘ಉತ್ಥಾನ’ ವಾರ್ಷಿಕ ಪ್ರಬಂಧ ಸ್ಪರ್ಧೆ – 2024
‘ಕೇಶವ ಶಿಲ್ಪ’, ಕೆಂಪೇಗೌಡ ನಗರ ಬೆಂಗಳೂರು –04, ಇ-ಮೇಲ್: utthanacompetition@gmail.com ದೂರವಾಣಿ: 77954 41894

Continue Reading

ಕರ್ನಾಟಕ

Lalbagh Flower Show: ಲಾಲ್‌ಬಾಗ್ ಫ್ಲವರ್‌ ಶೋ; ನಾಳೆಯಿಂದ ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ

Lalbagh Flower Show: ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಲಾಲ್‌ಬಾಗ್‌ಗೆ ಲಕ್ಷಾಂತರ ಜನ ಭೇಟಿ ನೀಡುವ ಹಿನ್ನೆಲೆಯಲ್ಲಿ ಸುಗಮ‌ ಸಂಚಾರಕ್ಕೆ ಟ್ರಾಫಿಕ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ ಮಾಡಲಾಗಿದ್ದು, ಫ್ಲವರ್ ಶೋಗೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Lalbagh Flower Show
Koo

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಆ.8ರಿಂದ 19ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಆಯೋಜಿಸಿರುವ ಹಿನ್ನೆಲೆಯಲ್ಲಿ ಉದ್ಯಾನಕ್ಕೆ ಗಣ್ಯವ್ಯಕ್ತಿಗಳು, ಪ್ರವಾಸಿಗರು, ಸಾರ್ವಜನಿಕರು ಸೇರಿ ಸುಮಾರು 8 ರಿಂದ 10 ಲಕ್ಷ ಜನ ಆಗಮಿಸುವ ನಿರೀಕ್ಷೆ ಇರುವುದರಿಂದ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ. ಹೀಗಾಗಿ ಸಂಚಾರ ಪೊಲೀಸ್‌ ವಿಭಾಗದಿಂದ ಸುಗಮ ಸಂಚಾರಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದ್ದು, ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಒಟ್ಟು 12 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯುವ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಸುಗಮ ಸಂಚಾರಕ್ಕಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  1. ಡಾ. ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
  2. ಕೆ.ಎಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ
    ಮಾಡಬಹುದಾಗಿದೆ.
  3. ಡಾ. ಮರಿಗೌಡ ರಸ್ತೆ- ಹಾಪ್ ಕಾಮ್ಸ್‌ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
  4. ಜೆ.ಸಿ. ರಸ್ತೆ- ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

  1. ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
  2. ಕೆ.ಎಚ್.ರಸ್ತೆ, ಕೆ.ಎಚ್.ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ,
  3. ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ
  4. ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್‌ವರೆಗೆ
  5. ಬಿಟಿಎಸ್ ಬಸ್ ಸ್ಟಾಪ್ ಬಿಎಂಟಿಸಿ ಜಂಕ್ಷನ್‌ನಿಂದ ರಸ್ತೆಯ ಎರಡೂ ಬದಿಗಳಲ್ಲಿ.
  6. ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ.
  7. ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜ್‌ವರೆಗೆ.
  8. ಆರ್‌ವಿ ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲ‌ರ್‌ವರೆಗೆ
  9. ಅಶೋಕ ಪಿಲ್ಲರ್‌ನಿಂದ ಸಿದ್ದಾಮರ ಜಂಕ್ಷನ್ ವರೆಗೆ.

ಡಾ. ಮರೀಗೌಡ ರಸ್ತೆ, ಲಾಲ್‌ಬಾಗ್ ರಸ್ತೆ, ಕೆ.ಎಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಮಟ್ಟಿಗೆ ಸಮೂಹ ಸಾರಿಗೆ ವಾಹನಗಳಾದ ಬಿಎಂಟಿಸಿ ಬಸ್‌ಗಳು, ಮೆಟ್ರೋ, ಕ್ಯಾಬ್‌ಗಳನ್ನು ಬಳಸಲು ಹಾಗೂ ವಾಹನಗಳ ನಿಲುಗಡೆಗೆ ಮಾಡಲಾಗಿರುವ ವ್ಯವಸ್ಥೆಯನ್ನು ಅನುಸರಿಸಲು ಕೋರಲಾಗಿದೆ.

    ಆ.8ರಿಂದ 19ವರೆಗೆ ಲಾಲ್‌ಬಾಗ್‌ ಫ್ಲವರ್‌ ಶೋ; ಅನಾವರಣವಾಗಲಿದೆ ಭೀಮ ಸಂದೇಶ

    Lalbagh Flower Show 2024
    Lalbagh Flower Show 2024

    ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಲಾಲ್‌ಬಾಗ್‌ ಸಸ್ಯೋದ್ಯಾನದಲ್ಲಿ ಆ.8ರಿಂದ 19ವರೆಗೆ 216ನೇ ಫಲಪುಷ್ಪ ಪ್ರದರ್ಶನ (Lalbagh Flower Show) ನಡೆಯಲಿದೆ. ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ (Dr BR Ambedkar) ಅವರ ಜೀವನಗಾಥೆಯ ಥೀಮ್‌ ನೋಡುಗರನ್ನು ರಂಜಿಸಲಿದ್ದು, ಆಗಸ್ಟ್ 8 ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಫ್ಲವರ್‌ ಶೋಗೆ ಚಾಲನೆ ನೀಡಲಿದ್ದಾರೆ.

    ಈ ಬಗ್ಗೆ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಶಾಮಲಾ ಇಕ್ಬಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಆಗಸ್ಟ್ 8 ರಿಂದ 19ವರೆಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅಂಬೇಡ್ಕರ್ ಅವರ ಜೀವನ ಆಧಾರಿತ ಪುಷ್ಪ ಪ್ರದರ್ಶನ ಇರಲಿದ್ದು, ಆಗಸ್ಟ್ 8ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ಇನ್ನು ಮುಖ್ಯ ಅತಿಥಿಯಾಗಿ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ್ ಅವರು ಬರಲಿದ್ದಾರೆ ಎಂದ ತಿಳಿಸಿದ್ದಾರೆ.

    ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾತನಾಡಿ, ಈ ಬಾರಿ ಲಾಲ್‌ಬಾಗ್‌ ಪರಿಸರದಲ್ಲಿ ಭೀಮ ಸಂದೇಶ ಅನಾವರಣವಾಗಲಿದೆ. 12 ದಿನಗಳ ಕಾಲ 6 ಆಂಬ್ಯುಲೆನ್ಸ್ ಸೇರಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಡೆಂಗ್ಯೂ ಆತಂಕ ಇರುವುದರಿಂದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಆಗಿತ್ತು, ಈ ಬಾರಿ ಅಂತಹ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

    ಪ್ರವೇಶ ಶುಲ್ಕ ಎಷ್ಟು?

    168 ವಿವಿಧ ಪ್ರಭೇದದ ಸಸ್ಯಗಳನ್ನು ನಾವೇ ಬೆಳೆದಿದ್ದೇವೆ. ದ್ವಿ ಚಕ್ರ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ, ಸಂಚಾರ ದಟ್ಟಣೆ ಕಡಿಮೆ ಮಾಡಲು ಜನರು ಆದಷ್ಟು ಮೆಟ್ರೋ ಬಳಸಬೇಕು. ಆನ್‌ಲೈನ್‌ ಟಿಕೆಟ್ ಕೂಡ ಲಭ್ಯವಿರುತ್ತದೆ. ಪ್ರವೇಶ ಶುಲ್ಕ ಮಕ್ಕಳಿಗೆ 30 ರೂ., ಸಾಮಾನ್ಯರಿಗೆ 100 ರೂ. ಇರಲಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು.

    ಇದನ್ನೂ ಓದಿ | Rajya Sabha Election: 9 ರಾಜ್ಯಗಳ 12 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಘೋಷಣೆ; ಸೆ.3ಕ್ಕೆ ಮತದಾನ

    ಕಳೆದ ಬಾರಿ 60-70 ಲಕ್ಷ ಲಾಭ ಆಗಿದೆ.. ಈ ಬಾರಿ ಕೂಡ ಸಾಕಷ್ಟು ಆದಾಯ ಬರುವ ನಿರೀಕ್ಷೆ ಇದೆ. ವಾಕಿಂಗ್ ಬರುವವರು ಕೂಡ ಟಿಕೆಟ್ ತೆಗೆದುಕೊಂಡು ಬರಬೇಕು. ಪಾರ್ಕ್‌ನಲ್ಲಿ ಜೇನು ಹುಳುಗಳು ಇಲ್ಲ, ಎರಡು ವರ್ಷಗಳ ಹಿಂದೆ ಇತ್ತು, ಈಗ ಇಲ್ಲ. ಬಹುತೇಕ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

    Continue Reading
    Advertisement
    World Breastfeeding Week 2024
    ಆರೋಗ್ಯ17 mins ago

    World Breastfeeding Week 2024: ಹಾಲುಣಿಸುವುದು ನಿಲ್ಲಿಸಿದ ಮೇಲೆ ತಾಯಿಯ ತೂಕ ಹೆಚ್ಚುವುದೇಕೆ? ಆಗೇನು ಮಾಡಬೇಕು?

    Actor Darshan
    ಕ್ರೈಂ19 mins ago

    Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

    IND vs SL 3rd ODI
    ಕ್ರೀಡೆ23 mins ago

    IND vs SL 3rd ODI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು; ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

    Paris Olympics
    ಕ್ರೀಡೆ51 mins ago

    Paris Olympics: ನಾಳೆ ನೀರಜ್​ ಚೋಪ್ರಾ ಫೈನಲ್​ ಸ್ಪರ್ಧೆ; ಕಂಚಿನ ಪದಕಕ್ಕೆ ಹಾಕಿ ತಂಡ ಹೋರಾಟ

    Electric Vehicles
    ಆಟೋಮೊಬೈಲ್1 hour ago

    Electric Vehicles: ಎಲೆಕ್ಟ್ರಿಕ್‌ ಕಾರು ಖರೀದಿಸಿದವರಿಗೆ ಪೆಟ್ರೋಲ್, ಡೀಸೆಲ್‌ ಕಾರಿಗೆ ಮರಳುವ ಇಚ್ಛೆ; ಕಾರಣ ಏನು?

    Wayanad Landslide
    ಕರ್ನಾಟಕ1 hour ago

    Wayanad Landslide: ಭೂಕುಸಿತ ಸಂತ್ರಸ್ತರಿಗೆ ನೆರವು; ಯುವ ಕಾಂಗ್ರೆಸ್‌ ಮುಖಂಡ ಧ್ರುವ ಜತ್ತಿ ಭೇಟಿ

    Blazer Saree Fashion
    ಫ್ಯಾಷನ್1 hour ago

    Blazer Saree Fashion: ಮಾನ್ಸೂನ್‌ ಸೀಸನ್‌ ಬ್ಲೇಜರ್‌ ಸೀರೆಯಲ್ಲಿ ಶ್ವೇತಾ ಚಂಗಪ್ಪ ಕಮಾಲ್‌

    Waqf Act
    ದೇಶ2 hours ago

    Waqf Act: ನಾಳೆ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡನೆ; ಪರಮಾಧಿಕಾರ ರದ್ದು ಸೇರಿ ಏನೆಲ್ಲ ಬದಲು?

    Headphone Side Effect
    ಆರೋಗ್ಯ2 hours ago

    Headphone Side Effect: ಹೆಡ್ ಫೋನ್ ಬಳಕೆಯಿಂದ ಮೆದುಳು, ಹೃದಯದ ಮೇಲೆ ಭೀಕರ ಪರಿಣಾಮ!

    Utthana Essay Competition 2024
    ಕರ್ನಾಟಕ2 hours ago

    Utthana Essay Competition 2024: ಉತ್ಥಾನ ಪ್ರಬಂಧ ಸ್ಪರ್ಧೆಗೆ ಬರಹ ಕಳುಹಿಸಿ; 10,000 ರೂ. ಬಹುಮಾನ ಪಡೆಯಿರಿ!

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Wild Animals Attack
    ಚಿಕ್ಕಮಗಳೂರು1 day ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ1 day ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ3 days ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ4 days ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ6 days ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ6 days ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ6 days ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    karnataka Rain
    ಮಳೆ1 week ago

    Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

    Karnataka Rain
    ಮಳೆ1 week ago

    Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

    Bharachukki falls
    ಚಾಮರಾಜನಗರ1 week ago

    Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

    ಟ್ರೆಂಡಿಂಗ್‌