Assault Case : ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌ - Vistara News

ಬೆಂಗಳೂರು

Assault Case : ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌

Assault Case : ಕ್ಷುಲ್ಲಕ ವಿಚಾರಕ್ಕೆ ಕಿರಿಕ್‌ ಮಾಡಿಕೊಂಡ ಆಟೋ ಡ್ರೈವರ್‌, ಕಾರು ಚಾಲಕನ ಮುಖಕ್ಕೆ ಉಗಿದು, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಮುಂದುವರಿದು ಕಾರಿನ ಮಿರರ್‌ ಕಿತ್ತು ಹಾಕಿದ್ದಾನೆ. ಸದ್ಯ ಈತನನ್ನು ಪತ್ತೆ ಮಾಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

VISTARANEWS.COM


on

Assault Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಗೂಂಡಾಗಿರಿ (Assault Case) ತೋರಿಸಿದ್ದಾನೆ. ಕಾರು ಚಾಲಕನ ಮುಖಕ್ಕೆ ಉಗಿದು ಬಳಿಕ ಕಾರಿನ ಮಿರರ್‌ ಹೊಡೆದು ಹಾಕಿದ್ದಾನೆ. ಬೆಂಗಳೂರಿನ ಮಾರತಹಳ್ಳಿಯ ಯಮಲೂರು ಸಿಗ್ನಲ್ ಬಳಿ ಆಗಸ್ಟ್ 5ರಂದು ಈ ಘಟನೆ ನಡೆದಿದೆ.

ಕ್ಷುಲ್ಲಕ ವಿಚಾರಕ್ಕೆ ಕಾರು ಚಾಲಕ ಹಾಗೂ ಆಟೋ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಕಾರು ಚಾಲಕ ವಿಡಿಯೊ ರೆಕಾರ್ಡ್‌ ಮಾಡುತ್ತಿರುವುದನ್ನು ನೋಡಿದ ಆತ ಆಟೋದಿಂದ ಇಳಿದು ಬಂದವನೇ ಅವಾಚ್ಯ ಶಬ್ಧಗಳಿಂದ ನಿಂದಿಸಲು ಶುರು ಮಾಡಿದ್ದಾನೆ. ಬಳಿಕ ಕಾರು ಚಾಲಕ ಮುಖಕ್ಕೆ ಉಗಿದು, ಕಾರಿಗೆ ಹೊಡೆದು, ಮಿರರ್‌ ಕಿತ್ತು ಹಾಕಿದ್ದಾನೆ.

ಕಾರು ಚಾಲಕ ಅಲೆಕ್ಸ್ ಬೋಬಿ ವೆಂಪಲ ಎಂಬಾತ ಈ ಸಂಬಂಧ ದೂರು ನೀಡಿದ್ದರು. ಆಟೋ ಚಾಲಕನ ಅನುಚಿತ ವರ್ತನೆ ಬಗ್ಗೆ ಎಚ್ಎಲ್‌ಎಲ್ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು. ಕಾರು ಚಾಲಕ‌ ದೂರಿನ ಮೇಲೆ ಆಟೋ ಚಾಲಕನ ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಚಾಲಕನ ವಿರುದ್ಧ ಬಿ.ಎನ್.ಎಸ್ ಸೆಕ್ಷನ್ 126(2), 324(4), 351(2), 352 ಅಡಿ ಎಫ್.ಐ.ಆರ್ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳದ ಕೃಷ್ಣಾ ನದಿ ಹಿನ್ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಹುಲುಗಬಾಳ ಗ್ರಾಮದ ಬಾಳು ಚೌಹಾಣ್ (49) ನಿನ್ನೆ ಬುಧವಾರ ಮಧ್ಯಾಹ್ನ ಕೃಷ್ಣ ನದಿಯಲ್ಲಿ ನಾಪತ್ತೆಯಾಗಿದ್ದರು. ಎನ್‌ಡಿಆರ್‌ಎಫ್‌ ತಂಡ ಹಾಗೂ ಅಥಣಿ ಪೊಲೀಸರು ಅಗ್ನಿಶಾಮಕ ದಳ ನಿನ್ನೆಯಿಂದಲೂ ಹುಡುಕಾಟ ನಡೆಸಿದ್ದರು.

ಕೃಷ್ಣಾ ನದಿಯಲ್ಲಿ ಪ್ರವಾಹ ಕಡಿಮೆಯಾದ ಹಿನ್ನೆಲೆಯಲ್ಲಿ ನದಿಯ ಹಿನ್ನೀರನ್ನು ದಾಟಿ ನಿವಾಸಕ್ಕೆ ಹೋದಾಗ ದುರ್ಘಟನೆ ಸಂಭವಿಸಿತು. ಇಬ್ಬರು ಜತೆಯಾಗಿ ಹೋಗುವಾಗ ಬಾಳು ಚೌಹಾಣ್‌ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಇದೀಗ ಶವವಾಗಿ ಪತ್ತೆಯಾಗಿದ್ದಾರೆ. ಅಥಣಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Viral Video: ಹಿಂದೂ ಹುಡುಗನನ್ನು ಪ್ರೀತಿಸಿದ್ದಕ್ಕೆ ನಡುರಸ್ತೆಯಲ್ಲಿ ಎಲ್ಲರೆದುರೇ ತಂಗಿಯ ಕತ್ತು ಹಿಸುಕಿ ಕೊಂದ ಅಣ್ಣ!

ಮೊದಲ ರಾತ್ರಿಯೇ ಮಚ್ಚಿನಲ್ಲಿ ಹೊಡೆದಾಟ, ವಧುವಿನ ಜೊತೆಗೆ ವರನೂ ಸಾವು

ಕೋಲಾರ: ಮದುವೆಯ (Marriage) ಮೊದಲ ರಾತ್ರಿಯೇ ಜಗಳ (Quarrel) ತಾರಕಕ್ಕೇರಿ ಮಚ್ಚಿನಲ್ಲಿ ಪರಸ್ಪರ ಕೊಚ್ಚಿಕೊಂಡಿದ್ದ ವಧು- ವರ ಪ್ರಕರಣದಲ್ಲಿ, ವಧುವಿನ ಜೊತೆಗೆ ವರನೂ (Couple Death) ಮೃತಪಟ್ಟಿದ್ದಾನೆ. ನಿನ್ನೆ ಕೋಲಾರದ (Kolar news) ಕೆಜಿಎಫ್‌ನ ಚಂಬರಸನಹಳ್ಳಿ ಗ್ರಾಮದಲ್ಲಿ ಪ್ರಕರಣ ನಡೆದಿತ್ತು.

ನಿನ್ನೆ ಕೆಜಿಎಫ್ ಆಸ್ಪತ್ರೆಯಲ್ಲಿ ವಧು ಲಿಖಿತಶ್ರೀ (20) ಸಾವನ್ನಪ್ಪಿದ್ದಳು. ಆಸ್ಪತ್ರೆ ಸೇರಿದ್ದ ವರ ನವೀನ್ (28) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಕೋಲಾರದ ಅರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ನಿನ್ನೆ ದಾಖಲಾಗಿದ್ದ ನವೀನ್ ಕುಮಾರ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿತ್ತು.

ನಿನ್ನೆ ಬೆಳಗ್ಗೆ ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಕೆಲ‌ಗಂಟೆಗಳ ನಂತರ ರೂಮ್‌ಗೆ ಹೋಗಿದ್ದ ನವದಂಪತಿ ಅಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಇಬ್ಬರೂ ಮಚ್ಚು ಹಿಡಿದು ಕೊಚ್ಚಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ವಧು ನಿನ್ನೆಯೇ ಕೊನೆಯುಸಿರೆಳೆದಿದ್ದಳು. ಸ್ಥಳಕ್ಕೆ ಆ್ಯಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ಇಬ್ಬರ ನಡುವೆ ಜಗಳ ಹುಟ್ಟಿಕೊಂಡಿದೆ ಎಂಬುದು ಗೊತ್ತಾಗಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Karnataka Weather : ಮಳೆ ಬಂದರೂ ಕಷ್ಟ ಬಾರದೆ ಇದ್ದರೂ ನಷ್ಟ ಎಂಬಂತಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಮಳೆ ಇಲ್ಲದೇ ಅನಾವೃಷ್ಠಿಯಾಗಿದೆ. ಇತ್ತ ಭೀಮಾ ನದಿ ಅಬ್ಬರಕ್ಕೆ ಕೆಲವೆಡೆ ನೆರೆ ಸೃಷ್ಟಿಯಾಗಿದೆ. ಯಾದಗಿರಿಯಲ್ಲಿ ನದಿ ತೀರದ ದೇಗುಲಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka Weather Forecast
Koo

ವಿಜಯನಗರ: ಒಂದು ಕಡೆ ಭಾರಿ ಮಳೆಯಿಂದಾಗಿ (Karnataka Weather Forecast) ಅತಿ ವೃಷ್ಠಿ ಉಂಟಾದರೆ ಮೊತ್ತೊಂದು ಕಡೆ ಮಳೆ (No Rain) ಇಲ್ಲದೇ ಅನಾವೃಷ್ಠಿಯಾಗಿದೆ. ಮಳೆಯಿಂದ ಮನೆ-ಮಠ ಕಳೆದುಕೊಂಡು ನಷ್ಟ ಅನುಭವಿಸಿದ್ದರೆ, ಇತ್ತ ಕಡೆ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಸ್ವತಃ ರೈತರೇ ಬೆಳೆ ನಾಶ ಮಾಡಿದ್ದಾರೆ. ವಿಜಯನಗರದ ಗೊಲ್ಲರಹಳ್ಳಿ ಗ್ರಾಮದ ಗುಬ್ಬಿಕಾಳೇ ಶ್ರೀ ಪರಶುರಾಮ ಎಂಬ ರೈತ ಬೆಳೆ ನಾಶ ಮಾಡಿದ್ದಾರೆ.

ಪರಶುರಾಮ ಅವರು 8 ಎಕರೆಯಲ್ಲಿ ಸಾವಿರಾರು ರೂ. ಖರ್ಚು ಮಾಡಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಮುಂಗಾರಿನಲ್ಲಿ ಅಲ್ಪ ಸ್ವಲ್ಪ ಮಳೆ ಬಂದಿದ್ದರಿಂದ ರೈತರು ಬಿತ್ತನೆ ಮಾಡಿದ್ದರು. ಮುಂದಿನ ದಿನಗಳಲ್ಲಿ ಸಮರ್ಪಕ ಮಳೆ ಬಾರದಿದ್ದಕ್ಕೆ ಕಾಳು ಕಟ್ಟುವ ಮೊದಲೇ ಬೆಳೆ ಒಣಗಿ ಹೋಗಲಿದೆ. ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ 4,625 ಹಕ್ಟೇರ್‌ ಜೋಳ, ಮೆಕ್ಕೆಜೋಳ, ಸಜ್ಜೆ ಇನ್ನಿತರ ಬೆಳೆ ಬಿತ್ತನೆ ಕಾರ್ಯ ಆಗಿದೆ.

ಆದರೆ ಮಳೆ ಇಲ್ಲದೇ ಒಣಗುತ್ತಿದೆ ಎಂದು ರೈತರು ಸಂಕಟದಿಂದ ಬೆಳೆ ನಾಶ ಮಾಡುತ್ತಿದ್ದಾರೆ. ಎಲ್ಲಾ ಕಡೆ ಬಿತ್ತನೆಯಾಗಿದ್ದು ತಂಪು ಇಲ್ಲದಿರುವುದು ಬೆಳೆ ಒಣಗಿ ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವನ್ನುಂಟು ಮಾಡಿದೆ. ಬಿತ್ತನೆ ಮಾಡಿದ್ದ ಖರ್ಚು ಕೂಡ ರೈತನಿಗೆ ಬಾರದೇ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಒಂದು ಎಕರೆ ಬಿತ್ತನೆಗೆ 20 ರಿಂದ 30 ಸಾವಿರ ರೂ ಖರ್ಚು ಮಾಡಲಾಗಿದೆ. ಈಗ ಬಿಡಿಗಾಸು ಸಿಗದೆ ರೈತರು ಕಂಗಾಲಾಗಿದ್ದಾರೆ. ದನಕರುಗಳಿಗೆ ಮೇವಾದರೂ ಸಿಗಲಿ ಎಂಬ ಉದ್ದೇಶದಿಂದ ಕಟಾವು ಮಾಡ್ತಿದ್ದೇವೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

ಮೈದುಂಬಿ ತುಂಬಿ ಹರಿಯುತ್ತಿರುವ ಭೀಮಾ

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಉಜನಿ ಜಲಾಶಯದಿಂದ ಮತ್ತೆ ಭೀಮಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಭೀಮಾ ನದಿ ಮೈದುಂಬಿ ತುಂಬಿ ಹರಿಯುತ್ತಿದ್ದು, ಕಲಬುರಗಿಯ ಅಫಜಲಪೂರ ಘತ್ತರಗಾ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಲಬುರಗಿ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಆಗಿದೆ. ದೇವಲಗಾಣಗಾಪುರ ಬಳಿಯ ಸೇತುವೆ ಸಹ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಸೇತುವೆ ಕಡೆ ಜನ ಹೋಗದಂತೆ ಪೊಲೀಸರ ನಿಯೋಜನೆ ಮಾಡಲಾಗಿದೆ.

ಮಹಾರಾಷ್ಟ್ರದ ಮಳೆಯಿಂದ ತತ್ತರಿಸಿದ ಗಡಿ ಜನತೆ

ಮಹಾರಾಷ್ಟ್ರದ ಮಳೆಯಿಂದ ಗಡಿ ಜನತೆ ತತ್ತರಿಸಿ ಹೋಗಿದ್ದಾರೆ. ಕಳೆದ ಒಂದು ವಾರದಿಂದ ಕೃಷ್ಣಾ ನದಿ ಒಳ ಹರಿವು ಯಥಾವತ್‌ ಕಾಯ್ದುಕೊಂಡಿದೆ. ಕೃಷ್ಣಾ ನದಿ ಒಳ ಹರಿವಿನಿಂದ ಕೃಷ್ಣಾ ನದಿ ತೀರದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ ನದಿ‌ ತೀರದ ಜನರಿಗೆ ತೊಂದರೆಯಾಗದಂತೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಸರ್ಕಾರದ ಆದೇಶಕ್ಕಿಲ್ಲ ಕವಡೆ ಕಾಸಿನ‌ ಕಿಮ್ಮತ್ತಿಲ್ಲ. ನೆರೆ ಬಂದರೂ ತಾಲೂಕಾಡಳಿತ ಗಂಜಿ‌ ಕೇಂದ್ರ ತೆಗೆದಿಲ್ಲ. ಕಲಬುರಗಿಯ ರಾಯಬಾಗ ತಾಲೂಕಿನ ಶಿರಗೂರ ಗ್ರಾಮದ ನೆರೆ ಸಂತ್ರಸ್ಥರು ಸಂಕಷ್ಟ ಪಡುತ್ತಿದ್ದಾರೆ. ದನಗಳಿಗೆ ಮೇವಿಲ್ಲ, ಇರಲು ಜಾಗ ಇಲ್ಲ ಹೀಗಾದರೆ ಹೇಗೆ ಎಂದು ನೆರೆ ಸಂತ್ರಸ್ಥರು ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ.

ಯಾದಗಿರಿಯಲ್ಲಿ ನದಿ ತೀರದ ದೇಗುಲಗಳು ಜಲಾವೃತ

ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ ಆಗುತ್ತಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ ಭೀಮಾನದಿಗೆ 80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಬ್ಯಾರೇಜ್‌ನ 24 ಗೇಟ್‌ಗಳಲ್ಲಿ 20 ಗೇಟ್ ಓಪನ್ ಮಾಡಿ ನೀರು ಬಿಡುಗಡೆ ಮಾಡಲಾಗಿದ್ದು, ಅಪಾಯದ ಮಟ್ಟ ಮೀರಿ ಭೀಮಾನದಿ ಹರಿಯುತ್ತಿದೆ. ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಕಂಗಳೇಶ್ವರ ಹಾಗೂ ವಿರಾಂಜನೇಯ ದೇಗುಲಗಳು ಸಂಪೂರ್ಣ ಮುಳುಗಡೆಯಾಗಿದೆ. ಈಗಾಗಲೇ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕು

ನೈರುತ್ಯ ಮುಂಗಾರು ಉತ್ತರ ಒಳನಾಡಲ್ಲಿ ಚುರುಕುಗೊಂಡಿದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡಿತ್ತು. ಶುಕ್ರವಾರದಂದು (ಆ.9) ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಕೆಲವಡೆ ಹಗುರದಿಂದ ಕೂಡಿರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ

Lalbagh Flower Show: ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಈ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

VISTARANEWS.COM


on

Lalbagh Flower Show
Koo

ಬೆಂಗಳೂರು: ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ (Lalbagh Flower Show) ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನವನ್ನು ಗುರುವಾರ ಉದ್ಘಾಟಿಸಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: UPI Transaction Limit: ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿ 5 ಲಕ್ಷ ರೂ.ಗೆ ಏರಿಕೆ

ಯಾವುದೇ ಜಾತಿ, ಧರ್ಮ, ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ಅವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ ಎಂದು ಹೇಳಿದರು.

ಆಗಸ್ಟ್ 8ರಿಂದ 19ರವರೆಗೆ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8ರಿಂದ 19ರವರೆಗೆ ಏರ್ಪಡಿಸಲಾಗಿದೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ದೇಶಕ್ಕೆ ನೀಡದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

ಫಲಪುಷ್ಪ ಪ್ರದರ್ಶನಕ್ಕೆ 12 ಲಕ್ಷ ಜನ ಆಗಮಿಸುವ ನಿರೀಕ್ಷೆ

ತೋಟಗಾರಿಕೆ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ ಎಂದರು.

Continue Reading

ಬೆಂಗಳೂರು

Dog Bite : ಬೀದಿ ನಾಯಿಗಳ ಕಾಟಕ್ಕೆ ಮನೆ ಮಾರಾಟಕ್ಕೆ ಮುಂದಾದ ಜನ್ರು!

Dog Bite : ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ಓಎಂಬಿಆರ್‌ ಲೇಔಟ್‌ ಮಂದಿ ಮನೆ ಮಾರಾಟಕ್ಕೆ ಮುಂದಾಗಿದ್ದಾರೆ. ಸಂಜೆಯಾದರೆ ಮನೆಯಿಂದ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಜನರು ಕಂಗಲಾಗಿದ್ದಾರೆ.

VISTARANEWS.COM


on

By

Dog bite
Koo

ಬೆಂಗಳೂರು: ಬೆಂಗಳೂರಿನ ಆ ಏರಿಯಾ ನಿವಾಸಿಗಳು ಮನೆಯಿಂದ ಹೊರಬರಬೇಕಾದರೂ ಸಾವಿರ ಸಲ ಯೋಚನೆ ಮಾಡಬೇಕು. ಯಾಕೆಂದರೆ ರಸ್ತೆಯಲ್ಲಿ ಹೋಗುವಾಗ ಯಾವ ಬೀದಿ ನಾಯಿ (Dog Bite) ಎಲ್ಲಿಂದ ಬಂದು ಕಚ್ಚುತ್ತೋ ಅನ್ನೋ ಆತಂಕದಲ್ಲೇ ದಿನದೂಡುತ್ತಿದ್ದಾರೆ.

ಒಂದು ತಿಂಗಳಲ್ಲಿ 40ಕ್ಕೂ ಅಧಿಕ ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದೆ. ನಿತ್ಯ ನಾಯಿ ದಾಳಿಯಿಂದಾಗಿ ಜನರು ಆಸ್ಪತ್ರೆಪಾಲಾಗಿದ್ದಾರೆ. ಬೆಂಗಳೂರಿನ ಬಾಣಸವಾಡಿಯ ಓಎಂಬಿಆರ್ ಲೇಔಟ್ ಬರೋಬ್ಬರಿ 40 ಬೀದಿ ನಾಯಿಗಳು ಇವೆ. ಸ್ಥಳೀಯರು ಬೀದಿ ನಾಯಿಗಳಿಗೆ ಹೆದರಿ ಏರಿಯಾಗೆ ಹೋಗಲು ಭಯ ಪಡುವಂತಾಗಿದೆ.

ಬೀದಿ ನಾಯಿಗಳ ಹಾವಳಿಗೆ ಬೇಸತ್ತು ಮನೆ ಖಾಲಿ ಮಾಡಲು ಮುಂದಾಗಿದ್ದಾರೆ. ಸಂಜೆ 7 ಗಂಟೆ ಮೇಲೆ ಮನೆಯಿಂದ ಹೊರಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. ಮನೆಗೆ ಸಂಬಂಧಿಕರು ಬರುತ್ತಿಲ್ಲ, ಮಕ್ಕಳು ಸ್ಕೂಲ್‌ಗೆ ಹೋಗುತ್ತಿಲ್ಲ. ವೃದ್ಧ ಹೊರಗೆ ಕಾಲಿಡುವಂತಿಲ್ಲ ಎಂದು ಗೋಳಾಡುತ್ತಿದ್ದಾರೆ. ದಿನಕ್ಕೆ‌ ಕನಿಷ್ಠ ಇಬ್ಬರ ಮೇಲೆ ನಾಯಿಗಳು ದಾಳಿ ನಡೆಸುತ್ತಿವೆ. ಬಿಬಿಎಂಪಿ ಅಧಿಕಾರಿಗಳಿಗೆ ದೂರು ಕೊಟ್ಟು ಕೊಟ್ಟು ಸುಸ್ತಾದ ಏರಿಯಾದ ಜನರು ಸ್ವಂತ ಮನೆಗಳನ್ನೇ ಮಾರಾಟಕ್ಕಿಟ್ಟಿದ್ದಾರೆ.

ಇದನ್ನೂ ಓದಿ: Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

ಬೈಕ್‌ ಸವಾರ ಪ್ರಾಣ ಕಸಿದ ಕಾರು

ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಗಾಂವಗೇರಿ ಬಳಿ ಕಾರು -ಬೈಕ್ ನಡುವೆ (Road Accident) ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರವಾರದ ಕಾಜುಭಾಗದ ನಿವಾಸಿ ವಿನೋದ ನಾಯ್ಕ (30) ಮೃತ ದುರ್ದೈವಿ.

ಸ್ಥಳಕ್ಕೆ ಚಿತ್ತಾಕುಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಚಿತ್ತಾಕುಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆಜಿಎಫ್‌ನಲ್ಲಿ ಏರ್ ಬ್ಲಾಸ್ಟ್‌

ಕೋಲಾರ ಕೆಜಿಎಫ್ ನಗರದಲ್ಲಿ ಭಯಾನಕ ಜೋರು ಶಬ್ಧ ಕೇಳಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಏರ್ ಬ್ಲಾಸ್ಟ್ ಆಗಿದೆ. ಜೋರು ಶಬ್ದದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೆಜಿಎಫ್ ನಗರದ ಮಾರಿಕುಪ್ಪಂ ಹಾಗೂ ಅಂಡರ್ ಸನ್ ಪೇಟೆ ನಿವಾಸಿಗಳು ಮನೆಯಿಂದ ಹೊರ ಬಂದಿದ್ದರು. ಈ ಬಗ್ಗೆ ಬಿಜಿಎಂಎಲ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಮಾರಿಕುಪ್ಪಂನಲ್ಲಿರುವ ಮೈಸೂರ್ ಮಿಲ್ಸ್‌ನಲ್ಲಿ ಏರ್ ಬ್ಲಾಸ್ಟ್‌ನಿಂದಾಗಿ ಭಾರಿ ಭಯಾನಕ‌ ಶಬ್ಧ ಬಂದಿದೆ ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Rave Party: ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ 85 ಜನರ ಮೇಲೆ ಚಾರ್ಜ್‌ಶೀಟ್, ಸುಳ್ಳು ಹೇಳಿದ ನಟಿ ಹೇಮಾ ಮೇಲೂ ಚಾರ್ಜ್

Rave Party: ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ್ದ ತೆಲುಗು ನಟಿ ಹೇಮಾ (Actress Hema) ಸೇರಿ ಒಟ್ಟು 85ಕ್ಕೂ ಹೆಚ್ಚು ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಹೇಮಾ ವಿರುದ್ಧವೂ ಸಾಕ್ಷಿಗಳಿದ್ದು, ಸಿಸಿಬಿ ಚಾರ್ಜ್ ಫ್ರೇಮ್ ಮಾಡಿದೆ. ಈಕೆ ಡ್ರಗ್ಸ್ ಸೇವನೆ ಮಾಡಿದ್ದಕ್ಕೆ ಸಾಕ್ಷಿ ಲಭ್ಯವಾಗಿದೆ.

VISTARANEWS.COM


on

rave party telugu actress hema
Koo

ಬೆಂಗಳೂರು: ರಾಜಧಾನಿಯ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿ ರೇವ್ ಪಾರ್ಟಿ (Rave Party) ನಡೆಸಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರ (CCB Police) ತನಿಖೆ ಪೂರ್ಣಗೊಂಡಿದ್ದು, ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ್ದ ತೆಲುಗು ನಟಿ ಹೇಮಾ (Actress Hema) ಸೇರಿ ಒಟ್ಟು 85ಕ್ಕೂ ಹೆಚ್ಚು ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಹೇಮಾ ವಿರುದ್ಧವೂ ಸಾಕ್ಷಿಗಳಿದ್ದು, ಸಿಸಿಬಿ ಚಾರ್ಜ್ ಫ್ರೇಮ್ ಮಾಡಿದೆ. ಈಕೆ ಡ್ರಗ್ಸ್ ಸೇವನೆ ಮಾಡಿದ್ದಕ್ಕೆ ಸಾಕ್ಷಿ ಲಭ್ಯವಾಗಿದೆ.

ಡ್ರಗ್ಸ್ ಸೇವನೆ ಮಾಡಿದ್ದೂ ಅಲ್ಲದೇ ಪೊಲೀಸರ ತನಿಖೆ ವೇಳೆ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾಳೆ. ಪೊಲೀಸರಿಗೆ ತನಿಖೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾಳೆ. ಪ್ರಭಾವ ಬಳಸಿ ತನಿಖೆಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿರುವ ಬಗ್ಗೆಯೂ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ತಾನು ರೇವ್‌ ಪಾರ್ಟಿಯಲ್ಲಿ ಭಾಗವಹಿಸಿಯೇ ಇಲ್ಲ ಎಂದು ಈಕೆ ಪಾರ್ಟಿಯ ಸ್ಥಳದಿಂದಲೇ ಮಾಧ್ಯಮಗಳಿಗೆ ವಿಡಿಯೋ ಕಳಿಸಿ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದಳು.

ಪಾರ್ಟಿ ಆಯೋಜನೆ ಮಾಡಿದ್ದ ಐವರು ಸೇರಿ ಒಟ್ಟು 85ಕ್ಕೂ ಹೆಚ್ಚು ಜನರ ವಿರುದ್ಧ ಚಾರ್ಜ್‌ಶೀಟ್ ಮಂಡಿಸಲಾಗುತ್ತಿದೆ. ಇನ್ನೂ ಕೆಲವೇ ದಿನದಲ್ಲಿ ನ್ಯಾಯಾಲಯಕ್ಕೆ ಇದನ್ನು ಸಿಸಿಬಿ ಸಲ್ಲಿಕೆ ಮಾಡಲಿದೆ ಎಂದು ತಿಳಿದುಬಂದಿದೆ. ಪಾರ್ಟಿಯಲ್ಲಿ 85ಕ್ಕೂ ಹೆಚ್ಚು ಜನರು ಭಾಗವಹಿಸಿರುವುದು ಪತ್ತೆಯಾಗಿತ್ತು. ಪಕ್ಕದ ಆಂಧ್ರಪ್ರದೇಶದ ಅನೇಕ ಪ್ರಭಾವಿಗಳು, ಶ್ರೀಮಂತ ಉದ್ಯಮಿಗಳು ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.

ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ  ಅವರನ್ನು ಬಂಧಿಸಲಾಗಿತ್ತು. 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ಕೋರ್ಟ್‌ ಆಕೆಗೆ ವಿಧಿಸಿತ್ತು. ನಂತರ ಜಾಮೀನು ಮಂಜೂರಾಗಿತ್ತು. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌, ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಟಿ ಹೇಮಾಳಿಂದ ಯಾವುದೇ ಮಾದಕ ವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಅಲಿಯಾಸ್ ಕೊಲ್ಲ ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಹೀಗಾಗಿ ನಟಿ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ವಿಚಾರಣೆಗೆ ಆಗಮಿಸಿದ್ದ ತೆಲುಗು ನಟಿ ಹೇಮಾ ಅವರನ್ನು ಜೂನ್‌ 3ರಂದು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದರು.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದಾಗ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ಇದನ್ನೂ ಓದಿ | Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Continue Reading
Advertisement
karnataka Weather Forecast
ಮಳೆ6 mins ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Manu Bhaker
ಕ್ರೀಡೆ7 mins ago

Manu Bhaker : ಮನು ಭಾಕರ್​ಗೆ ಕ್ರೀಡಾ ಇಲಾಖೆಯಿಂದ ವಿಶೇಷ ಸನ್ಮಾನ; 30 ಲಕ್ಷ ರೂಪಾಯಿ ವಿತರಣೆ

Lalbagh Flower Show
ಬೆಂಗಳೂರು8 mins ago

Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ

Cattle Smuggling
ದೇಶ21 mins ago

Cattle Smuggling: ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆ ಶೌರ್ಯ; ಗೋವುಗಳ ಸಾಗಣೆ ತಡೆದ ದಿಟ್ಟೆ

Paris Olympics 2024
ಪ್ರಮುಖ ಸುದ್ದಿ54 mins ago

Paris Olympics 2024 : ರೇಸಿಂಗ್​ ಟ್ರ್ಯಾಕ್​ ಬಳಿಯೇ ಯುವಕನೊಬ್ಬನಿಗೆ ಪ್ರಪೋಸ್ ಮಾಡಿದ ಫ್ರಾನ್ಸ್​ನ ಮಹಿಳಾ ಅಥ್ಲೀಟ್​, ವಿಡಿಯೊ ಇದೆ

Naga Chaitanya deleated ex samantha
ಸಿನಿಮಾ56 mins ago

Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ!

Road Accident
ಉಡುಪಿ1 hour ago

Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

Aman Sehrawat
ಕ್ರೀಡೆ1 hour ago

Aman Sehrawat: ಕುಸ್ತಿಯಲ್ಲಿ ಪದಕ ಭರವಸೆ ಮೂಡಿಸಿದ ಅಮನ್ ಸೆಹ್ರಾವತ್; ಸೆಮಿಗೆ ಲಗ್ಗೆ

Sunita Williams
ವಿದೇಶ1 hour ago

Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Neeraj Chopra
ಕ್ರೀಡೆ1 hour ago

Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 mins ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌