Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ - Vistara News

ಬೆಂಗಳೂರು

Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ

Lalbagh Flower Show: ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಈ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

VISTARANEWS.COM


on

Lalbagh Flower Show
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ (Lalbagh Flower Show) ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನವನ್ನು ಗುರುವಾರ ಉದ್ಘಾಟಿಸಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: UPI Transaction Limit: ಯುಪಿಐ ಟ್ಯಾಕ್ಸ್ ಪೇಮೆಂಟ್ ಮಿತಿ 5 ಲಕ್ಷ ರೂ.ಗೆ ಏರಿಕೆ

ಯಾವುದೇ ಜಾತಿ, ಧರ್ಮ, ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ಅವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ ಎಂದು ಹೇಳಿದರು.

ಆಗಸ್ಟ್ 8ರಿಂದ 19ರವರೆಗೆ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8ರಿಂದ 19ರವರೆಗೆ ಏರ್ಪಡಿಸಲಾಗಿದೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ದೇಶಕ್ಕೆ ನೀಡದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಮಹತ್ವದ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

ಫಲಪುಷ್ಪ ಪ್ರದರ್ಶನಕ್ಕೆ 12 ಲಕ್ಷ ಜನ ಆಗಮಿಸುವ ನಿರೀಕ್ಷೆ

ತೋಟಗಾರಿಕೆ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ

Bengaluru News: ಶಿವಮೊಗ್ಗದಲ್ಲಿ ಎ ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರಿನ ಬಾಲ್ಡ್‌ವಿನ್‌ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ ಲಭಿಸಿದೆ.

VISTARANEWS.COM


on

Bengaluru News
Koo

ಬೆಂಗಳೂರು: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ ಲಭಿಸಿದೆ. ಶಿವಮೊಗ್ಗದಲ್ಲಿ ಎ ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾರತ, ನೇಪಾಳ, ಭೂತಾನ್, ದುಬೈ, ಶ್ರೀಲಂಕಾ ಮತ್ತು ಬಾಂಗ್ಲಾ ಸೇರಿದಂತೆ 6 ದೇಶದ ಸ್ಪರ್ಧಿಗಳು (Bengaluru News) ಭಾಗವಹಿಸಿದ್ದರು.

ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್‌ (ಎಕೆಎಸ್‌ಕೆಎ) ನ ಕರ್ನಾಟಕ ರಾಜ್ಯ ಕ್ರೀಡಾ ಆಯೋಗದ ಉಪಾಧ್ಯಕ್ಷ ಹಾಗೂ ರಾಷ್ಟ್ರೀಯ ತೀರ್ಪುಗಾರ ರೆನ್ಶಿ ಜೈನ್ ನೇತೃತ್ವದ ಸುಡೋಕನ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಪ್ರತಿನಿಧಿಸಿತ್ತು. ಈ ಚಾಂಪಿಯನ್‌ಶಿಪ್‌ನಲ್ಲಿ ಹಸನೈನ್ ಅದ್ವಿತೀಯ ಪ್ರದರ್ಶನ ನೀಡಿದರು.

ಇದನ್ನೂ ಓದಿ: Bengaluru Power Cut: ಆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹಸನೈನ್‌ ಬೆಂಗಳೂರಿನ ಬಾಲ್ಡ್‌ವಿನ್‌ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದು, ಏಳು ವರ್ಷದ ಕಟಾ ವಿಭಾಗದಲ್ಲಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಈತನ ಕರಾಟೆಯಲ್ಲಿನ ಸಾಧನೆ ಮತ್ತು ಅತ್ಯುತ್ತಮ ರ‍್ಯಾಂಕಿಂಗ್‌ಗಾಗಿ ರೂ. 25,000 ಚೆಕ್‌ ನೀಡಿ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಎರಡು ಬಾರಿ ರಾಜ್ಯ ಚಾಂಪಿಯನ್ ಹಾಗೂ ದಕ್ಷಿಣ ಭಾರತ ಚಾಂಪಿಯನ್ ಪಡೆದಿರುವ ಕರ್ನಾಟಕದ ಅತಿ ಕಿರಿಯ ಎಂಬ ದಾಖಲೆ ಹೊಂದಿರುವ ಹಸನೈನ್‌ಗೆ ಈ ಪುರಸ್ಕಾರ ಲಭಿಸಿದೆ.

ರೆನ್ಶಿ ಝೈನ್ ಅವರ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ತಂಡವು ಹಲವು ಪ್ರಶಸ್ತಿಗಳನ್ನು ಗೆದ್ದುಕೊಂಡರು. ಕಟಾ ವಿಭಾಗದಲ್ಲಿ 13 ಚಿನ್ನ, 5 ಬೆಳ್ಳಿ ಮತ್ತು 7 ಕಂಚಿನ ಪದಕಗಳು ಮತ್ತು ಕುಮಿಟೆ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚಿನ ಪದಕಗಳನ್ನು ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: Thangalaan Movie: ಬಹುನಿರೀಕ್ಷಿತ ʼತಂಗಲಾನ್‍ʼ ಚಿತ್ರಕ್ಕೆ ʼಕಾಂತಾರʼ ಸ್ಫೂರ್ತಿ ಎಂದ ಚಿಯಾನ್‌ ವಿಕ್ರಮ್‌!

ಎಕೆಎಸ್‌ಕೆಎ ಅಧ್ಯಕ್ಷ ಅರುಣ್ ಮಾಚಯ್ಯ, ಪ್ರಧಾನ ಕಾರ್ಯದರ್ಶಿ ಭಾರ್ಗವ್ ರೆಡ್ಡಿ, ಪಂದ್ಯಾವಳಿಯ ಆಯೋಜಕ ಡಾ. ಶಿಹಾನ್ ಎ ಝಡ್ ಮುಹೀಬ್ ಮತ್ತು ಅಧ್ಯಕ್ಷ ಮತ್ತು ಗ್ರ್ಯಾಂಡ್ ಮಾಸ್ಟರ್ ಡಾ. ಹಂಶಿ ಪ್ರವೀಣ್ ರಂಕಾ ಅವರ ಬೆಂಬಲದೊಂದಿಗೆ ಪಂದ್ಯಾವಳಿಗಳು ಜರುಗಿದವು. ಬಾಲ್ಡ್‌ವಿನ್ ಬಾಯ್ಸ್ ಹೈಸ್ಕೂಲ್ ಪ್ರಿನ್ಸಿಪಾಲ್ ಡಾ. ಲೀನಾ ಡೇನಿಯಲ್ ಅವರು ಯುವ ಕ್ರೀಡಾಪಟುಗಳಿಗೆ ಶುಭಾಶಯ ತಿಳಿಸಿದ್ದಾರೆ.

Continue Reading

ಕರ್ನಾಟಕ

Toyota: ಗ್ರಾಮೀಣ ಯುವ ಜನತೆಗೆ ಟೊಯೊಟಾದಿಂದ ಉತ್ತಮ ತರಬೇತಿ, ಶಿಕ್ಷಣ; ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ಲಾಘನೆ

Toyota: ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ 15ನೇ ಬ್ಯಾಚ್‌ನ ವಿದ್ಯಾರ್ಥಿಗಳ ಘಟಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ, ಮಾತನಾಡಿದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಟಿಟಿಟಿಐ ಸಂಸ್ಥೆಯು ಕರ್ನಾಟಕದ ಗ್ರಾಮೀಣ ಭಾಗದ ಯುವ ಜನತೆಗೆ ಉತ್ತಮ ತರಬೇತಿ ಮತ್ತು ಶಿಕ್ಷಣ ನೀಡಿ ಅವರನ್ನು ಸಬಲರನ್ನಾಗಿ ಮಾಡುತ್ತಿರುವುದು ಖುಷಿಯ ವಿಚಾರ ಎಂದು ತಿಳಿಸಿದ್ದಾರೆ.

VISTARANEWS.COM


on

Toyota
Koo

ಬೆಂಗಳೂರು: ಟಿಟಿಟಿಐ ಸಂಸ್ಥೆಯು (Toyota) ಕರ್ನಾಟಕದ ಗ್ರಾಮೀಣ ಭಾಗದ ಯುವ ಜನತೆಗೆ ಉತ್ತಮ ತರಬೇತಿ ಮತ್ತು ಶಿಕ್ಷಣ ನೀಡಿ ಅವರನ್ನು ಸಬಲರನ್ನಾಗಿ ಮಾಡುತ್ತಿರುವುದು ಖುಷಿಯ ವಿಚಾರ. ಇಂತಹ ಯೋಜನೆಗಳು ಸಮಾಜದ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಾಹಿಸುತ್ತವೆ ಮತ್ತು ಸಾಮೂಹಿಕ ಅಭಿವೃದ್ಧಿ ಉಂಟು ಮಾಡುವ ಮೂಲಕ ಧನಾತ್ಮಕ ಪರಿಣಾಮ ಉಂಟಾಗುತ್ತದೆ ಎಂದು ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ 15ನೇ ಬ್ಯಾಚ್‌ನ ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ, ಬಳಿಕ ಮಾತನಾಡಿದ ಶ್ರೀಗಳು, “ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆಯ ಘಟಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದು ಸಂತಸ ತಂದಿದೆ. ವಾಹನೋದ್ಯಮಕ್ಕೆ ಮತ್ತು ಅದಕ್ಕೆ ಸಂಬಂಧಿಸಿದ ವಿಭಾಗಗಳಲ್ಲಿ ಕೆಲಸ ಮಾಡಲು ಸೂಕ್ತವಾಗಿ ಸಿದ್ಧರಾಗಿರುವ ನುರಿತ ವೃತ್ತಿಪರರನ್ನು ಬೆಳೆಸುವ ಸಂಸ್ಥೆಯ ಬದ್ಧತೆಗೆ ಈ ಯುವ ಪದವೀಧರರು ಪುರಾವೆಯಾಗಿ ನಿಂತಿದ್ದಾರೆ. ಅವರು ವೃತ್ತಿ ಆರಂಭಿಸುತ್ತಿದ್ದಂತೆ ತಮ್ಮಲ್ಲಿ ಮೈಗೂಡಿಸಿಕೊಂಡಿರುವ ಕೌಶಲ್ಯ ಮತ್ತು ಮೌಲ್ಯಗಳ ಮೂಲಕ ಸಮಾಜ ಮತ್ತು ದೇಶದ ಬೆಳವಣಿಗೆಗೆ ಕೊಡುಗೆ ನೀಡಲಿದ್ದಾರೆ ಎಂಬ ನಂಬಿಕೆ ನಮಗಿದೆ. ಎಲ್ಲಾ ಪದವೀಧರರಿಗೂ ಶುಭವನ್ನು ಹಾರೈಸುತ್ತಿದ್ದೇವೆ ಮತ್ತು ನುರಿತ ಸಮರ್ಥ ಉದ್ಯೋಗಿಗಳನ್ನು ಬೆಳೆಸುವ ಟಿಟಿಟಿಐನ ಬದ್ಧತೆಯನ್ನು ಶ್ಲಾಘಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಿ.ಶಂಕರ ಮಾತನಾಡಿ, ಟೊಯೋಟಾದಲ್ಲಿ ನಾವು ಗ್ರಾಮೀಣ ಭಾಗದ ಯುವಜನತೆಯನ್ನು ಸಮಗ್ರ 360-ಡಿಗ್ರಿ ತರಬೇತಿಯ ಮೂಲಕ ವಿಶ್ವದರ್ಜೆಯ ತಂತ್ರಜ್ಞರನ್ನಾಗಿ ಬದಲಾಯಿಸಲು ಬದ್ಧರಾಗಿದ್ದಾರೆ. ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ 1,000ಕ್ಕೂ ಹೆಚ್ಚು ಗ್ರಾಮೀಣ ಯುವಕರ ಸಾಲಿಗೆ ಇವತ್ತು 214 ಪದವೀಧರರು ಸೇರಿದ್ದಾರೆ ಎಂದು ಘೋಷಿಸಲು ನಾವು ಹೆಮ್ಮೆಪಡುತ್ತೇವೆ.

ಕರ್ನಾಟಕದ ವಿವಿಧ ಜಿಲ್ಲೆಗಳ ಈ ಪದವೀಧರರು ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಸಂಸ್ಥೆಯಲ್ಲಿ ಮತ್ತು ಕತಾರ್, ಜೋರ್ಡಾನ್ ಮತ್ತು ಸ್ಲೋವಾಕಿಯಾದಂತಹ ಅಂತರಾಷ್ಟ್ರೀಯ ಮಟ್ಟದ ವಿಭಾಗಗಳಲ್ಲಿ ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ ಎಂದು ಹೇಳಿದರು.

ಜತೆಗೆ ನಾವು ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ 65 ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐಗಳು) ಮತ್ತು ಗವರ್ನ್‌ಮೆಂಟ್ ಟೂಲ್ ರೂಮ್ ಆಂಡ್ ಟ್ರೈನಿಂಗ್ ಸೆಂಟರ್ ಗಳನ್ನು (ಜಿಟಿಟಿಸಿಗಳು) ಸ್ಥಾಪಿಸುವ ಕೆಲಸ ಮಾಡುತ್ತಿದ್ದೇವೆ. ಅದಕ್ಕೆ ಪೂರಕವಾಗಿ ಪ್ರಾಂಶುಪಾಲರು ಮತ್ತು ಅಧ್ಯಾಪಕರಿಗೆ ತರಬೇತಿ, ಮೂಲಸೌಕರ್ಯ ನೆರವು ಮತ್ತು ಸಂಸ್ಕೃತಿ ನಿರ್ಮಾಣ ವಿಚಾರದಲ್ಲಿ ತರಬೇತಿ ಕಾರ್ಯಕ್ರಮಗಳ ಮೇಲೆ ಗಮನ ಹರಿಸುತ್ತಿದ್ದೇವೆ. ಇಲ್ಲಿಯವರೆಗೆ ಟೊಯೋಟಾ ಭಾರತದಲ್ಲಿ 110,000 ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿದ್ದು, ನಿರಂತರವಾಗಿ ಉದ್ಯೋಗಾವಕಾಶ ಒದಗಿಸಿ ಬೆಳೆಸುತ್ತಿದೆ. ಆ ಮೂಲಕ ಸಮಾಜಕ್ಕೆ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಮಹತ್ವದ ಕೊಡುಗೆ ನೀಡಿದೆ ಎಂದು ತಿಳಿಸಿದರು.

ಘಟಕೋತ್ಸವದಲ್ಲಿ ಕರ್ನಾಟಕದ ಗ್ರಾಮೀಣ ಹಿನ್ನೆಲೆಯ 58 ಟಿಟಿಟಿಐ ವಿದ್ಯಾರ್ಥಿಗಳು ಮತ್ತು 156 ಟೊಯೋಟಾ ಕೌಶಲ್ಯ ಕೋರ್ಸ್ ವಿದ್ಯಾರ್ಥಿಗಳು ಪ್ರಮಾಣ ಪತ್ರ ಪಡೆದುಕೊಂಡರು. ವಿದ್ಯಾರ್ಥಿಗಳು ಕೋರ್ಸು ಪೂರ್ಣಗೊಳಿಸಿಕೊಳ್ಳುವುದರ ಮೂಲಕ ಜ್ಞಾನ, ಕೌಶಲ್ಯ, ದೇಹ ಭಾಷೆ ಮತ್ತು ವ್ಯಕ್ತಿತ್ವ ಬೆಳೆಸಿಕೊಳ್ಳುವುದರ ಜೊತೆಗೆ ಉತ್ಪಾದನಾ ಕ್ಷೇತ್ರದ ಜಾಗತಿಕ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಸಮಗ್ರ ಕೌಶಲ್ಯ ತರಬೇತಿಯನ್ನು ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಟಿಕೆಎಂ ಆಡಳಿತ ಮಂಡಳಿ, ಟೊಯೋಟಾ ಸಮೂಹ ಕಂಪನಿಗಳ ಪ್ರತಿನಿಧಿಗಳು, ಪೂರೈಕೆದಾರರು, ಆಟೋಮೋಟಿವ್ ಸ್ಕಿಲ್ಸ್ ಡೆವಲಪ್‌ಮೆಂಟ್ ಕೌನ್ಸಿಲ್ (ಎಎಸ್‌ಡಿಸಿ) ಮತ್ತು ನ್ಯಾಷನಲ್ ಸ್ಕಿಲ್ ಡೆವಲಪ್‌ಮೆಂಟ್ ಕೌನ್ಸಿಲ್ (ಎನ್ಎಸ್‌ಡಿಸಿ) ಪ್ರತಿನಿಧಿಗಳು, ಟೊಯೋಟಾ ಟೆಕ್ನಿಕಲ್ ಸ್ಕಿಲ್ ಅಕಾಡೆಮಿ- ಜಪಾನ್, ಟೊಯೋಟಾ ಇಂಡೋನೇಷ್ಯಾ ಅಕಾಡೆಮಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Bengaluru Power Cut: ಆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಘಟಕೋತ್ಸವ ಕಾರ್ಯಕ್ರಮದಲ್ಲಿ ಪದವೀಧರರು ಎನ್ಎಸಿ (ನ್ಯಾಷನಲ್ ಅಪ್ರೆಂಟಿಸ್‌ಶಿಪ್ ಸರ್ಟಿಫಿಕೇಟ್), ಎಎಸ್‌ಡಿಸಿ ಸರ್ಟಿಫಿಕೇಟ್ ಮತ್ತು ಜೆಐಎಂ ಹಾಗೂ ಟೊಯೋಟಾ ಸರ್ಟಿಫಿಕೇಟ್ ಸೇರಿದಂತೆ ಹಲವು ಸರ್ಟಿಫಿಕೇಷನ್‌ಗಳನ್ನು ಸ್ವೀಕರಿಸಿದರು. ಇಲ್ಲಿಯವರೆಗೂ ಈ ಕಾರ್ಯಕ್ರಮದಲ್ಲಿ 1,020 ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ ಮತ್ತು 452 ಮಂದಿ ಟಿಕೆಎಂ ಸಂಸ್ಥೆಯನ್ನು ಸೇರಿಕೊಂಡಿದ್ದಾರೆ. ಉಳಿದ 568 ಮಂದಿ ಸಮೂಹ ಕಂಪನಿಗಳು, ಪೂರೈಕೆದಾರ ಕಂಪನಿಗಳು ಮತ್ತು ಸಾಗರೋತ್ತರ ಸಂಸ್ಥೆಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ಈ ಪದವೀಧರರು ಉದ್ಯಮದಲ್ಲಿನ ವಿವಿಧ ಕಂಪನಿಗಳಿಗೆ ಸೇರುವ ಅವಕಾಶ ಮತ್ತು ಅರ್ಹತೆ ಗಳಿಸಿದ್ದಾರೆ.

Continue Reading

ದೇಶ

Reliance Industries: ರಿಲಯನ್ಸ್ ಕಂಪನಿಯಿಂದ ಸರ್ಕಾರಕ್ಕೆ 1.86 ಲಕ್ಷ ಕೋಟಿ ರೂ. ತೆರಿಗೆ ಪಾವತಿ!

Reliance Industries: 2023-24ರ ಹಣಕಾಸು ವರ್ಷದಲ್ಲಿ 20 ಲಕ್ಷ ಕೋಟಿ ರೂಪಾಯಿಗಳ ಮಾರುಕಟ್ಟೆ ಬಂಡವಾಳವನ್ನು ದಾಟಿದ ಭಾರತದ ಮೊದಲ ಕಂಪನಿ ಎಂದೆನಿಸಿಕೊಂಡಿದೆ ರಿಲಯನ್ಸ್. ಈ ಅಂಕಿ- ಅಂಶವನ್ನು ಇಲ್ಲಿಯವರೆಗೆ ಯಾವುದೇ ಕಂಪನಿ ತಲುಪುವುದಕ್ಕೆ ಸಾಧ್ಯವಾಗಿಲ್ಲ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಇದು ಶೇ. 27ರಷ್ಟು ಜಿಗಿತ ಕಂಡಿದೆ. ಮಾರುಕಟ್ಟೆ ಬಂಡವಾಳ ಮೌಲ್ಯದ ವಿಚಾರಕ್ಕೆ ಬಂದಲ್ಲಿ ರಿಲಯನ್ಸ್ ವಿಶ್ವದ 48ನೇ ಕಂಪನಿಯಾಗಿದ್ದು, ಕಂಪನಿಯ ಏಕೀಕೃತ ಆದಾಯ 10 ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Reliance Industries
Koo

ನವದೆಹಲಿ: ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರ ನೇತೃತ್ವದ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) 2023-24ನೇ ಸಾಲಿನ ಹಣಕಾಸು ವರ್ಷದಲ್ಲಿ ಸರ್ಕಾರಕ್ಕೆ ಒಟ್ಟು 1,86,440 ಕೋಟಿ (1.86 ಲಕ್ಷ ಕೋಟಿ) ರೂಪಾಯಿಗಳನ್ನು ತೆರಿಗೆಯಾಗಿ ಠೇವಣಿ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು 9 ಸಾವಿರ ಕೋಟಿ ರೂಪಾಯಿ ಅಧಿಕವಾಗಿದೆ ಎಂಬುದು ಕಂಪನಿಯ ವಾರ್ಷಿಕ ವರದಿಯಲ್ಲಿ ತಿಳಿದುಬಂದಿದೆ. ಇದು ಒಂದು ರಾಜ್ಯದ ಇಡೀ ವರ್ಷದ ಬಜೆಟ್‌ ಮೊತ್ತದಷ್ಟು!

ದೇಶದ ಆರ್ಥಿಕತೆಗೆ ರಿಲಯನ್ಸ್ ಕೊಡುಗೆ ಮಹತ್ವದ್ದಾಗಿದೆ. 2023-24 ರ ಹಣಕಾಸು ವರ್ಷದಲ್ಲಿ 20 ಲಕ್ಷ ಕೋಟಿ ರೂಪಾಯಿಗಳ ಮಾರುಕಟ್ಟೆ ಬಂಡವಾಳವನ್ನು ದಾಟಿದ ಭಾರತದ ಮೊದಲ ಕಂಪನಿ ಎಂದೆನಿಸಿಕೊಂಡಿದೆ ರಿಲಯನ್ಸ್. ಈ ಅಂಕಿ- ಅಂಶವನ್ನು ಇಲ್ಲಿಯವರೆಗೆ ಯಾವುದೇ ಕಂಪನಿ ತಲುಪುವುದಕ್ಕೆ ಸಾಧ್ಯವಾಗಿಲ್ಲ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಇದು ಶೇ. 27ರಷ್ಟು ಜಿಗಿತ ಕಂಡಿದೆ. ಮಾರುಕಟ್ಟೆ ಬಂಡವಾಳ ಮೌಲ್ಯದ ವಿಚಾರಕ್ಕೆ ಬಂದಲ್ಲಿ ರಿಲಯನ್ಸ್ ವಿಶ್ವದ 48ನೇ ಕಂಪನಿಯಾಗಿದ್ದು, ಕಂಪನಿಯ ಏಕೀಕೃತ ಆದಾಯ 10 ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟಿದೆ.

ಇದನ್ನೂ ಓದಿ: Thangalaan Movie: ಬಹುನಿರೀಕ್ಷಿತ ʼತಂಗಲಾನ್‍ʼ ಚಿತ್ರಕ್ಕೆ ʼಕಾಂತಾರʼ ಸ್ಫೂರ್ತಿ ಎಂದ ಚಿಯಾನ್‌ ವಿಕ್ರಮ್‌!

ರಫ್ತಿನಲ್ಲೂ ರಿಲಯನ್ಸ್ ದೇಶದ ಸಾಮರ್ಥ್ಯಕ್ಕೆ ಬಲ ತುಂಬಿದೆ. ಕಳೆದ ಹಣಕಾಸು ವರ್ಷದಲ್ಲಿ ರಿಲಯನ್ಸ್ ಸುಮಾರು 3 ಲಕ್ಷ ಕೋಟಿ ರೂಪಾಯಿ ಮೌಲ್ಯದಷ್ಟು ರಫ್ತು ಮಾಡಿದೆ. ಅಷ್ಟೇ ಅಲ್ಲ, ಕಂಪನಿಯು ದೇಶದಲ್ಲಿ ಬಂಡವಾಳ ಆಸ್ತಿಗಳ ಸೃಷ್ಟಿಯಲ್ಲಿಯೂ ಖಾಸಗಿ ವಲಯದ ಅತಿದೊಡ್ಡ ಕೊಡುಗೆದಾರರಲ್ಲಿ ಒಂದಾಗಿದೆ. ವಾರ್ಷಿಕ ವರದಿಯ ಪ್ರಕಾರ, 2023-24ರ ಹಣಕಾಸು ವರ್ಷದಲ್ಲಿ ರಿಲಯನ್ಸ್ 1 ಲಕ್ಷ 35 ಸಾವಿರ ಕೋಟಿ ರೂಪಾಯಿ ಕೊಡುಗೆ ನೀಡಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಅವರು ವಾರ್ಷಿಕ ವರದಿ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿ, ಕಳೆದ ದಶಕದಲ್ಲಿ ಜಾಗತಿಕ ಆರ್ಥಿಕ ಸನ್ನಿವೇಶದಲ್ಲಿ ಭಾರತದ ಪ್ರಾಮುಖ್ಯತೆ ಹಲವು ಪಟ್ಟು ಹೆಚ್ಚಾಗಿದೆ. ಅಸ್ಥಿರತೆ ಮತ್ತು ಅನಿಶ್ಚಿತತೆಯ ಈ ಜಗತ್ತಿನಲ್ಲಿ ಭಾರತವು ಸ್ಥಿರತೆ ಮತ್ತು ಸಮೃದ್ಧಿಯ ಸಂಕೇತವಾಗಿ ಕಾಣುತ್ತಿದೆ. 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದ ಫಲವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಬಲವಾದ ಬೆಳವಣಿಗೆ ಆಗಿದೆ. ಭಾರತ ಮತ್ತು ಭಾರತೀಯತೆಯ ಈ ಚೈತನ್ಯವೇ ರಿಲಯನ್ಸ್ ಅನ್ನು ನಿರಂತರವಾಗಿ ಹೊಸತನ್ನು ಕಂಡುಕೊಳ್ಳಲು ಮತ್ತು ಪ್ರತಿ ಪ್ರಯತ್ನದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಪ್ರೇರೇಪಿಸುತ್ತದೆ. ರಿಲಯನ್ಸ್ ಕುಟುಂಬವು ಭಾರತದ ಬೆಳವಣಿಗೆಯ ಯಶೋಗಾಥೆ ಭಾಗವಾಗುವುದು ಮತ್ತು ಅದರ ಅದ್ಭುತ ಬೆಳವಣಿಗೆಗೆ ಕೊಡುಗೆ ನೀಡುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Bengaluru Power Cut: ಆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಂಪನಿಯು ಸಾಮಾಜಿಕ ಜವಾಬ್ದಾರಿಗಾಗಿ (ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ) ಒಟ್ಟು 1,592 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಇದು ಹಿಂದಿನ ಹಣಕಾಸು ವರ್ಷಕ್ಕಿಂತ 300 ಕೋಟಿ ರೂಪಾಯಿ ಹೆಚ್ಚಾಗಿದೆ. ಲಾಭ ಗಳಿಸುವಲ್ಲಿಯೂ ಕಂಪನಿ ಮೊದಲ ಸ್ಥಾನದಲ್ಲಿದ್ದು, 2023-24ನೇ ಹಣಕಾಸು ವರ್ಷದಲ್ಲಿ ತೆರಿಗೆ ನಂತರದ ಲಾಭ 79 ಸಾವಿರ ಕೋಟಿ ರೂಪಾಯಿ ಗಳಿಸಿದೆ. ಇದು ಕಳೆದ ಹಣಕಾಸು ವರ್ಷದಲ್ಲಿ ಗಳಿಸಿದ್ದ 73 ಸಾವಿರದ 670 ಕೋಟಿ ರೂಪಾಯಿಗಿಂತ ಶೇ 7.3ರಷ್ಟು ಹೆಚ್ಚಾಗಿದೆ.

Continue Reading

ಬೆಂಗಳೂರು

BMTC Conductor: 5 ರೂ. ಚಿಲ್ಲರೆ ಕೊಡದೆ ಪ್ರಯಾಣಿಕನ ಮೇಲೆ ಹಲ್ಲೆ; ಬಿಎಂಟಿಸಿ ಕಂಡಕ್ಟರ್‌ ಸಸ್ಪೆಂಡ್!

BMTC Conductor: ಆಗಸ್ಟ್‌ 6ರಂದು ಘಟನೆ ನಡೆದಿದ್ದು, ಕ್ಷಿಪ್ರವಾಗಿ ಬಸ್‌ ಕಂಡಕ್ಟರ್‌ ವಿರುದ್ಧ ಬಿಎಂಟಿಸಿ ಕ್ರಮ ತೆಗೆದುಕೊಂಡಿದೆ. ಬಿಎಂಟಿಸಿ ಬಸ್‌ನಲ್ಲಿ ಅಭಿನವ್‌ ರಾಜ್‌ ಎಂಬ ಯುವಕ ಪ್ರಯಾಣಿಸುತ್ತಿದ್ದರು. ಅವರು 15 ರೂ. ಟಿಕೆಟ್‌ಗೆ 20 ರೂ. ನೀಡಿದ್ದರು. 5 ರೂ. ಚಿಲ್ಲರೆ ವಾಪಸ್‌ ಕೇಳಿದಾಗ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಅವರನ್ನು ಅಮಾನತುಗೊಳಿಸಲಾಗಿದೆ.

VISTARANEWS.COM


on

BMTC Conductor
Koo

ಬೆಂಗಳೂರು: ಅವು ಬಿಎಂಟಿಸಿ ಬಸ್ ಇರಲಿ, ಕೆಎಸ್‌ಆರ್‌ಟಿಸಿ ಬಸ್‌ಗಳೇ ಇರಲಿ, ಸಂಚರಿಸುವಾಗ ಪ್ರಯಾಣಿಕರು ಹಾಗೂ ಬಸ್‌ ಕಂಡಕ್ಟರ್‌ ಮಧ್ಯೆ ಸಣ್ಣದೊಂದು ಗಲಾಟೆ, ವಾಗ್ವಾದ ಆಗುವುದು ಸಹಜ. ಆದರೆ, ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರಿಗೆ 5 ರೂ. ಚಿಲ್ಲರೆ ಕೊಡದೆ, ಅವರ ಮೇಲೆಯೇ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಬಿಎಂಟಿಸಿ ಬಸ್‌ ಕಂಡಕ್ಟರ್‌ನನ್ನು (BMTC Conductor) ಅಮಾನತುಗೊಳಿಸಿದೆ. ಈ ಕುರಿತು ಬಿಎಂಟಿಸಿ ಆದೇಶ ಹೊರಡಿಸಿ ಪ್ರಕಟಣೆ ತಿಳಿಸಿದೆ.

ಆಗಸ್ಟ್‌ 6ರಂದು ಘಟನೆ ನಡೆದಿದ್ದು, ಕ್ಷಿಪ್ರವಾಗಿ ಬಸ್‌ ಕಂಡಕ್ಟರ್‌ ವಿರುದ್ಧ ಬಿಎಂಟಿಸಿ ಕ್ರಮ ತೆಗೆದುಕೊಂಡಿದೆ. ಬಿಎಂಟಿಸಿ ಬಸ್‌ನಲ್ಲಿ ಅಭಿನವ್‌ ರಾಜ್‌ ಎಂಬ ಯುವಕ ಪ್ರಯಾಣಿಸುತ್ತಿದ್ದರು. ಅವರು 15 ರೂ. ಟಿಕೆಟ್‌ಗೆ 20 ರೂ. ನೀಡಿದ್ದರು. 5 ರೂ. ಚಿಲ್ಲರೆ ವಾಪಸ್‌ ಕೇಳಿದಾಗ ಪ್ರಯಾಣಿಕನ ಮೇಲೆ ಕಂಡಕ್ಟರ್‌ ರೇಗಾಡಿದ್ದಾರೆ. ಆಗ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಇದೇ ಕೋಪದಲ್ಲಿ ಕಂಡಕ್ಟರ್‌ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೊ ಮಾಡಿಕೊಂಡಿದ್ದ ಅಭಿನವ್‌ ರಾಜ್‌, ಬಿಎಂಟಿಸಿಗೆ ದೂರು ನೀಡಿದ್ದರು. ಅದರಂತೆ, ಅಮಾನತು ಮಾಡಲಾಗಿದೆ.

ಕಂಡಕ್ಟರ್‌ ವರ್ತನೆಯ ವಿಡಿಯೊ

“ಬೆಂಗಳೂರು ಮಹಾನಗರ ಸಾರಿಗೆ ಘಟಕ-32ರ ಬಸ್‌ನ ನಿರ್ವಾಹಕರು ಆಗಸ್ಟ್‌ 6ರಂದು ರಾತ್ರಿ ಸುಮಾರು 9..40 ಸುಮಾರಿಗೆ ಕರ್ತವ್ಯ ನಿರ್ವಹಿಸುವಾಗ ಅಭಿನವ್‌ ರಾಜ್‌ ಎಂಬ ಪ್ರಯಾಣಿಕರು 5 ರೂ. ಚಿಲ್ಲರೆ ವಾಪಸ್‌ ಕೊಡಿ ಎಂಬುದಾಗಿ ಕೇಳಿದ್ದಾರೆ. ಇದಕ್ಕೆ ನಿರ್ವಾಹಕರು ಪ್ರಯಾಣಿಕರ ಎದುರು ಅನುಚಿತವಾಗಿ ವರ್ತನೆ ತೋರಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕೂಡಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

“ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವುದಲ್ಲದೆ, ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುವುದು ಸುರಕ್ಷಿತ ಎನ್ನುವ ಭಾವನೆ ಉಂಟಾಗಲು ಅಗತ್ಯವಿರುವ ಕ್ರಮಗಳನ್ನು ಸಹ ಕೈಗೊಳ್ಳಲಾಗಿರುತ್ತದೆ. ಪ್ರಯಾಣಿಕರ ಮೇಲೆ ಯಾವುದೇ ತರಹದ ದೌರ್ಜನ್ಯ ಅಸಭ್ಯ ವರ್ತನೆ ಮತ್ತು ಅಹಿತಕರ ಘಟನೆಗಳು ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುತ್ತದೆ” ಎಂದು ಕೂಡ ಬಿಎಂಟಿಸಿ ಮಾಹಿತಿ ನೀಡಿದೆ.

ಇದನ್ನೂ ಓದಿ: Yogi Adityanath: ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌; ಇಡೀ ಪೊಲೀಸ್‌ ಚೌಕಿಯೇ ಅಮಾನತು; ಇನ್ಮುಂದೆ ʼಬುಲೆಟ್‌ ರೈಲ್‌ʼ ಓಡಿಸಲಾಗುತ್ತೆ ಎಂದು ವಾರ್ನಿಂಗ್‌

Continue Reading
Advertisement
Muhammad Yunus
ದೇಶ17 mins ago

Muhammad Yunus: ಹಿಂದುಗಳನ್ನು ಮೊದಲು ರಕ್ಷಿಸಿ; ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ಗೆ ಮೋದಿ ಆಗ್ರಹ

Bengaluru News
ಕರ್ನಾಟಕ29 mins ago

Bengaluru News: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ

chess player
ಕ್ರೀಡೆ29 mins ago

Chess Player : ಪ್ರತಿಸ್ಪರ್ಧಿಗೆ ವಿಷ ಹಾಕಿ ಕೊಲ್ಲಲು ಯತ್ನಿಸಿದ ರಷ್ಯಾದ ಚೆಸ್ ಆಟಗಾರ್ತಿ; ಇಲ್ಲಿದೆ ವಿಡಿಯೊ

Toyota
ಕರ್ನಾಟಕ31 mins ago

Toyota: ಗ್ರಾಮೀಣ ಯುವ ಜನತೆಗೆ ಟೊಯೊಟಾದಿಂದ ಉತ್ತಮ ತರಬೇತಿ, ಶಿಕ್ಷಣ; ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ಲಾಘನೆ

Channapatna News
ಕರ್ನಾಟಕ34 mins ago

Channapatna News: ಚನ್ನಪಟ್ಟಣ ಕ್ಷೇತ್ರದ ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ.ಕೆ. ಶಿವಕುಮಾರ್

ಲೈಫ್‌ಸ್ಟೈಲ್36 mins ago

Tips For Parents: ಮಗುವಿಗೆ ಕನ್ನಡಕ ಬೇಕೆಂಬುದು ಪಾಲಕರಿಗೆ ತಿಳಿಯುವುದು ಹೇಗೆ?

Muhammad Yunus
ಪ್ರಮುಖ ಸುದ್ದಿ37 mins ago

Muhammad Yunus: ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮೊಹಮ್ಮದ್‌ ಯೂನಸ್‌ ಪದಗ್ರಹಣ!

Monsoon Fashion Do’s & Don’ts
ಫ್ಯಾಷನ್46 mins ago

Monsoon Fashion Do’s & Don’ts: ಹುಡುಗಿಯರ ಮಾನ್ಸೂನ್‌ ಡ್ರೆಸ್‌ ಹೇಗಿರಬೇಕು? ಹೇಗಿರಬಾರದು?

Paris Olympics 2024
ಕ್ರೀಡೆ51 mins ago

Paris Olympics 2024 : ಕಂಚಿನ ಪದಕ ಗೆದ್ದ ಹಾಕಿ ತಂಡದ ಆಟಗಾರರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Weight Loss Tips kannada
ಆರೋಗ್ಯ59 mins ago

Foods For Weight Loss: ಈ ಆಹಾರಗಳನ್ನು ಸೇವಿಸಿ; ಸಲೀಸಾಗಿ ತೂಕ ಇಳಿಸಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌