BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಬಾಕಿದಾರರಿಗೆ ಗುಡ್ ನ್ಯೂಸ್, ಬಾಕಿ ಪಾವತಿಗೆ ಸೆ.30ರವರೆಗೆ ಅವಧಿ ವಿಸ್ತರಣೆ - Vistara News

ಬೆಂಗಳೂರು

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಬಾಕಿದಾರರಿಗೆ ಗುಡ್ ನ್ಯೂಸ್, ಬಾಕಿ ಪಾವತಿಗೆ ಸೆ.30ರವರೆಗೆ ಅವಧಿ ವಿಸ್ತರಣೆ

BBMP Property Tax: ಇದೀಗ 2 ತಿಂಗಳವರೆಗೆ ಒಟಿಎಸ್ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಸೂಚನೆಯಂತೆ ವಿಸ್ತರಣೆ ಮಾಡಲಾಗಿದೆ.

VISTARANEWS.COM


on

BBMP Property Tax Hike postpone
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ಮಹಾನಗರಪಾಲಿಕೆಯ (BBMP) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಬಾಕಿ (BBMP Property Tax) ಉಳಿಸಿಕೊಂಡಿರುವವರಿಗೆ ಬಿಬಿಎಂಪಿ ಸಿಹಿ ಸುದ್ದಿ ನೀಡಿದೆ. ಒನ್ ಟೈಮ್ ಸೆಟಲ್ ಮೆಂಟ್‌ಗೆ (One time Settlement) ಕಾಲಾವಕಾಶವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.

ಒಟಿಎಸ್ ಮೂಲಕ ತೆರಿಗೆ ಪಾವತಿಗೆ ಸೆಪ್ಟೆಂಬರ್ 30ರ ತನಕ ಅವಕಾಶ ನೀಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಮಹಾನಗರಪಾಲಿಕೆ ಅಧಿಕೃತ ಆದೇಶ ಹೊರಡಿಸಿವೆ. ಈ ಹಿಂದೆ ಜುಲೈ 31ರ ತನಕ ಮಾತ್ರ ಡೆಡ್‌ಲೈನ್ ನೀಡಿದ್ದರು. ತೆರಿಗೆದಾರರಿಂದ ವಿಸ್ತರಣೆಗೆ ಮನವಿ ಹಿನ್ನೆಲೆಯಲ್ಲಿ ಒಂದು ತಿಂಗಳ ವಿಸ್ತರಣೆ ಚಿಂತನೆ ನಡೆದಿತ್ತು.

ಇದೀಗ 2 ತಿಂಗಳವರೆಗೆ ಒಟಿಎಸ್ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಸೂಚನೆಯಂತೆ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 30ರ ತನಕ ಆಸ್ತಿ ತೆರಿಗೆ ಬಾಕಿ ಪಾವತಿಗೆ ಅವಕಾಶ ಕೊಟ್ಟ ಪಾಲಿಕೆ, ತದನಂತರ ವಿಸ್ತರಣೆ ಇಲ್ಲ ಎಂದಿದೆ. ಒಟಿಎಸ್‌ ಅವಕಾಶದಲ್ಲಿ ತೆರಿಗೆ ಮೇಲಿನ ಸಂಪೂರ್ಣ ಬಡ್ಡಿ ಮನ್ನಾ, ಜೊತೆಗೆ ದಂಡದಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ಪಾಲಿಕೆ ನೀಡಿದೆ.

ಬೆಂಗಳೂರು ನಗರ ಅಭಿವೃದ್ಧಿಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾರ್ಚ್‌ನಲ್ಲಿ ತೆರಿಗೆ ಸಂಗ್ರಹವನ್ನು ಸುಗಮಗೊಳಿಸಲು ಮತ್ತು ಆದಾಯವನ್ನು ಹೆಚ್ಚಿಸಲು ಹೊಸ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸಿದ್ದರು. ಎಂದಿಗೂ ತೆರಿಗೆ ಪಾವತಿಸದ ಆಸ್ತಿ ಮಾಲೀಕರಿಗೆ ಒಂದು ಬಾರಿ ಪರಿಹಾರದ ಆಯ್ಕೆಯನ್ನು ಅವರು ಈ ಯೋಜನೆಯ ಅಡಿಯಲ್ಲಿ ಘೋಷಿಸಿದ್ದರು.

ಆಸ್ತಿ ಮಾಲೀಕರಿಗೆ ಪರಿಹಾರ ನೀಡಲು ಬೆಂಗಳೂರಿನಲ್ಲಿ ಬಾಕಿ ಉಳಿದಿರುವ ಆಸ್ತಿ ತೆರಿಗೆ ಪಾವತಿ ವಿಂಡೋವನ್ನು ಈ ವರ್ಷ ಏಪ್ರಿಲ್ 30ರಿಂದ ಜುಲೈ 31ರವರೆಗೆ ವಿಸ್ತರಿಸಲಾಗಿತ್ತು. ಜುಲೈ 31ರ ಗಡುವು ಮೀರಿದ ಬಳಿಕ ಅವಧಿ ವಿಸ್ತರಣೆಗೆ ತೆರಿಗೆ ಪಾವತಿ ಬಾಕಿದಾರರಿಂದ ಒತ್ತಾಯ ಬಂದಿತ್ತು.

ಹೆಚ್ಚು ಬಾಕಿ ಯಾವ ವಲಯದ್ದು?

ಮಹದೇವಪುರ ವಲಯವು 60,000ಕ್ಕೂ ಹೆಚ್ಚು ಆಸ್ತಿಗಳೊಂದಿಗೆ ಮುಂಚೂಣಿಯಲ್ಲಿದ್ದು, ಒಟ್ಟು 124.23 ಕೋಟಿ ರೂ. ಬಾಕಿಯನ್ನು ಹೊಂದಿದೆ. ಬೊಮ್ಮನಹಳ್ಳಿ 45,381 ಆಸ್ತಿಗಳಿಂದ 71.10 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಕಿಅಂಶಗಳ ಪ್ರಕಾರ ಏಪ್ರಿಲ್ 1 ರಿಂದ ಜುಲೈ 29 ರ ನಡುವೆ 184.77 ಕೋಟಿ ರೂ. ಮೊತ್ತದ 1,07,344 ಆಸ್ತಿಗಳ ಆಸ್ತಿ ತೆರಿಗೆ ಪಾವತಿಸಲಾಗಿದೆ.

ಒಟ್ಟು 282.59 ಕೋಟಿ ರೂ. ಮೊತ್ತದ 16,904 ಆಸ್ತಿಗಳನ್ನು ಒಳಗೊಂಡ ಪರಿಷ್ಕರಣೆ ಪ್ರಕರಣಗಳು 2024ರ ಜುಲೈ 29ರವರೆಗೆ ಬಾಕಿ ಉಳಿದಿವೆ ಎಂದು ಅಂಕಿ ಅಂಶಗಳಿಂದ ಬಹಿರಂಗವಾಗಿದೆ. ಬಿನ್ನಿಪೇಟೆ, ಬಸವನಗುಡಿ, ಹನುಮಂತನಗರ ಮತ್ತು ಜಯನಗರದಂತಹ ಪ್ರದೇಶಗಳನ್ನು ಒಳಗೊಂಡಿರುವ ಪಶ್ಚಿಮ ವಲಯವು ಅತಿ ಹೆಚ್ಚು ಬಾಕಿ ಉಳಿಸಿಕೊಂಡಿದೆ. ಇವು ಒಟ್ಟು ಸೇರಿ 3,474 ಆಸ್ತಿ ಪ್ರಕರಣಗಳನ್ನು ಒಳಗೊಂಡಿವೆ.

“ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ವಜಾಗೊಳಿಸಲಾಗುವುದು. ಈ ವಿಚಾರದಲ್ಲಿ ಅನಗತ್ಯವಾಗಿ ಗಾಬರಿಯಾಗುವುದು ಬೇಡ” ಎಂದು ಡಿಕೆ ಶಿವಕುಮಾರ್ ಹೇಳಿ‌ದ್ದರು.

ಇದನ್ನೂ ಓದಿ: BBMP Property Tax: ಆಸ್ತಿ ತೆರಿಗೆ ಒನ್‌ ಟೈಮ್‌ ಸೆಟ್ಲ್‌ಮೆಂಟ್‌ಗೆ ಮತ್ತೆ 1 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಿದ ಬಿಬಿಎಂಪಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bangalore Traffic: ಬೆಂಗಳೂರಿನ ಟ್ರಾಫಿಕ್‌ ಸಿಗ್ನಲ್‌ನಲ್ಲಿ 15 ನಿಮಿಷ ನಿಲ್ಲೋ ಪರಿಸ್ಥಿತಿ ಬರಲಿದೆ, ಎಚ್ಚರ!

Bangalore Traffic: ಲೆಕ್ಕಾಚಾರ ಗಮನಿಸಿದರೆ 2025ರಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಮಿತಿ ಮೀರಲಿದೆ. ಬೆಂಗಳೂರಿನ 162 ಜಂಕ್ಷನ್‌ಗಳಲ್ಲಿ ಕನಿಷ್ಠ 10-11 ನಿಮಿಷ ಕಾಯುವ ಸಂಕಷ್ಟದ ಸ್ಥಿತಿ ತಲೆದೋರಲಿದೆ. ಕೆ.ಆರ್ ಸರ್ಕಲ್, ಸಿಲ್ಕ್ ಬೋರ್ಡ್, ಓಲ್ಡ್ ಏರ್‌ಪೋರ್ಟ್ ರಸ್ತೆ, ಚಾಲುಕ್ಯ, ಎಲೆಕ್ಟ್ರಾನಿಕ್ ಸಿಟಿ, ಟೌನ್‌ಹಾಲ್ ಸೇರಿದಂತೆ 162 ಜಂಕ್ಷನ್‌ಗಳು ಈ ಕಂಟಕ ಎದುರಿಸಲಿವೆ.

VISTARANEWS.COM


on

bangalore traffic signal
Koo

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜನಗಳನ್ನು ಕಾಡುವ ಟ್ರಾಫಿಕ್ (Bangalore Traffic) ಸಂಕಟ ಈಗಾಗಲೇ ಕುಖ್ಯಾತವಾಗಿದೆ. ಇದು ಇನ್ನು ಮುಂದಿನ ಹಲವು ವರ್ಷಗಳಲ್ಲಿ ಇನ್ನಷ್ಟು ಬಿಗಡಾಯಿಸಲಿದೆಯಂತೆ. ಎಷ್ಟರ ಮಟ್ಟಿಗೆ ಎಂದರೆ, ಪ್ರತಿ ಸಿಗ್ನಲ್‌ನಲ್ಲಿಯೂ (Traffic Signal) 10-12 ನಿಮಿಷ ಕಾಯುವ ಸ್ಥಿತಿ ಶೀಘ್ರದಲ್ಲೇ ಬರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ!

ಬೆಂಗಳೂರಿನಲ್ಲಿ ಟ್ರಾಫಿಕ್ ನಿರ್ವಹಣೆ (Traffic management) ಭಾರೀ ಕಷ್ಟಕರವಾಗಲಿದೆ ಎಂದು ಬಿಬಿಎಂಪಿ (BBMP), ಸಾರಿಗೆ ಇಲಾಖೆ (Transport Department), ಟ್ರಾಫಿಕ್ ಪೊಲೀಸ್ (Traffic Police), ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ ನಡೆಸಿದ ಸಮೀಕ್ಷೆಯಿಂದ ಕಂಡುಬಂದಿದೆ.

ಹಾಲಿ ಬೆಂಗಳೂರಿನ ರಸ್ತೆಗಳು ಕೇವಲ 50 ಲಕ್ಷ ವಾಹನಗಳ ಓಡಾಟಕ್ಕೆ ಯೋಗ್ಯವಾಗಿವೆ. ಆದರೆ ರಾಜಧಾನಿಯಲ್ಲಿ ವಾಹನಗಳ ಸಂಖ್ಯೆ ಈ ಮಿತಿಯನ್ನು ಎಂದೋ ಮೀರಿದೆ. ಬೆಂಗಳೂರಿನ ರಸ್ತೆಗೆ ಪ್ರತಿ ದಿನ 2000 ಹೊಸ ವಾಹನಗಳು ಇಳಿಯುತ್ತಿವೆ. ಸದ್ಯ ರಾಜಧಾನಿಯಲ್ಲಿ ಸುಮಾರು 1.18 ಕೋಟಿ ವಾಹನಗಳು ಇವೆ.

ಮುಂದಿನ ನಾಲ್ಕು ತಿಂಗಳಲ್ಲಿ 2 ಲಕ್ಷ ಹೊಸ ವಾಹನಗಳು ನಗರಕ್ಕೆ ಸೇರ್ಪಡೆಯಾಗಲಿವೆ. 2024ರ ಅಂತ್ಯಕ್ಕೆ 1 ಕೋಟಿ 21 ಲಕ್ಷ ವಾಹನಗಳು ಬೆಂಗಳೂರಿನಲ್ಲಿ ನೋಂದಣಿಯಾಗಿರಲಿವೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಹೊಸದಾಗಿ ನೋಂದಣಿಯಾಗಿ ಬೆಂಗಳೂರಿಗೆ ಬರುವ ವಾಹನಗಳ ಸಂಖ್ಯೆ ನಿತ್ಯ ಸುಮಾರು 1000. ನಿತ್ಯ ಹೊರ ರಾಜ್ಯದಿಂದ, ಜಿಲ್ಲೆಯಿಂದ ಬೆಂಗಳೂರಿಗೆ ಬಂದು ಹೋಗುವ ವಾಹನಗಳ ಸಂಖ್ಯೆ 1 ಲಕ್ಷ ಮೀರಬಹುದು.

ಇದೆಲ್ಲ ಲೆಕ್ಕಾಚಾರ ಗಮನಿಸಿದರೆ 2025ರಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಮಿತಿ ಮೀರಲಿದೆ. ಬೆಂಗಳೂರಿನ 162 ಜಂಕ್ಷನ್‌ಗಳಲ್ಲಿ ಕನಿಷ್ಠ 10-11 ನಿಮಿಷ ಕಾಯುವ ಸಂಕಷ್ಟದ ಸ್ಥಿತಿ ತಲೆದೋರಲಿದೆ. ಕೆ.ಆರ್ ಸರ್ಕಲ್, ಸಿಲ್ಕ್ ಬೋರ್ಡ್, ಓಲ್ಡ್ ಏರ್‌ಪೋರ್ಟ್ ರಸ್ತೆ, ಚಾಲುಕ್ಯ, ಎಲೆಕ್ಟ್ರಾನಿಕ್ ಸಿಟಿ, ಟೌನ್‌ಹಾಲ್ ಸೇರಿದಂತೆ 162 ಜಂಕ್ಷನ್‌ಗಳು ಈ ಕಂಟಕ ಎದುರಿಸಲಿವೆ. ಒಂದು ಜಂಕ್ಷನ್ ದಾಟಲು ಕನಿಷ್ಠ 10 ನಿಮಿಷವಾದರೂ ತೆಗೆದುಕೊಳ್ಳಬಹುದು. ಸಿಲ್ಕ್ ಬೋರ್ಡ್ ಸಿಗ್ನಲ್‌ನಲ್ಲಿ ಈಗಾಗಲೇ ಐದರಿಂದ ಎಂಟು ನಿಮಿಷ ಕಾಯಬೇಕಾಗಿ ಬರುತ್ತಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯದ ಸರ್ವೆಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ಆದರೆ ರಸ್ತೆ ಅಗಲೀಕರಣದ ಮೂಲಕ ವಾಹನ ಓಡಾಟಕ್ಕೆ ಅವಕಾಶ ಮಾಡಿಕೊಡೋಣ ಅಂದರೆ, ಅದಕ್ಕೆ ಅವಕಾಶವೇ ಇಲ್ಲದ ಸ್ಥಿತಿ ಇದೆ. ಬಿಬಿಎಂಪಿಯಿಂದ ರಸ್ತೆ ಅಗಲೀಕರಣದ ಬಗ್ಗೆ ಸರ್ವೆ ನಡೆಯುತ್ತಿದೆ. ಆದರೆ ಇದು ದೊಡ್ಡ ಮಟ್ಟದಲ್ಲಿ ಕಾನೂನಾತ್ಮಕ ಸಮರಕ್ಕೆ ಹಾದಿ ಮಾಡಿಕೊಡಲಿದೆ. ಇದಕ್ಕಾಗಿ ಸರ್ಕಾರ ಸುರಂಗ ಮಾರ್ಗ, ಫ್ಲೈಓವರ್‌, ಅಂಡರ್‌ಪಾಸ್‌, ಮ್ಯಾಜಿಕ್‌ ಬಾಕ್ಸ್ ಇತ್ಯಾದಿಗಳ ಮೊರೆ ಹೋಗುತ್ತಿದೆ.

ಇದರೊಂದಿಗೆ ಪಾರ್ಕಿಂಗ್‌ ಕೂಡ ದೊಡ್ಡ ಸಮಸ್ಯೆಯಾಗಿ ಕಾಡಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಕಿಂಗ್‌ ಈಗಾಗಲೇ ಇಕ್ಕಟ್ಟಿನ ಪ್ರಶ್ನೆಯಾಗಿದೆ. ಸಾಕಷ್ಟು ಸಾರ್ವಜನಿಕ ಪಾರ್ಕಿಂಗ್‌ ತಾಣಗಳಿಲ್ಲ. ಮನೆಗಳನ್ನು ಕಟ್ಟುತ್ತಿರುವವರು ಕೂಡ ಮನೆಯೊಳಗೆ ಪಾರ್ಕಿಂಗ್‌ ಸ್ಪೇಸ್‌ ಬಿಡುತ್ತಿಲ್ಲ. ಹೀಗಾಗಿ ರಸ್ತೆಯ ಪಕ್ಕದಲ್ಲೇ ವಾಹನಗಳನ್ನು ಪಾರ್ಕ್‌ ಮಾಡುತ್ತಿರುವುದರಿಂದ ರಸ್ತೆಗಳು ಕೂಡ ವಾಹನಗಳ ಓಡಾಟಕ್ಕೆ ಇಕ್ಕಟ್ಟಾಗುತ್ತಿವೆ. ಬಿಬಿಎಂಪಿ ಇದನ್ನು ಬಗೆಹರಿಸಲು ಕಠಿಣ ಎಚ್ಚರಿಕೆಗಳನ್ನು ನೀಡುತ್ತಿದ್ದರೂ ಅದು ಫಲ ನೀಡಿಲ್ಲ.

ಇದನ್ನೂ ಓದಿ: Bangalore Traffic: ಬೆಂಗಳೂರಿಗೆ ಪ್ರತಿ ತಿಂಗಳು 50 ಸಾವಿರ ಹೊಸ ವಾಹನ ಸೇರ್ಪಡೆ; ಟ್ರಾಫಿಕ್‌ ನರಕ ಆಗೋದು ಗ್ಯಾರಂಟಿ

Continue Reading

ಪ್ರಮುಖ ಸುದ್ದಿ

CM Siddaramaiah: ಮೈಸೂರು ಜನಾಂದೋಲನ ಸಮಾವೇಶ ಸ್ಥಳಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್‌ ಪಡೆ; ಲೈವ್‌ ಇಲ್ಲಿದೆ ವೀಕ್ಷಿಸಿ

CM Siddaramaiah: ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರದಿಂದ ಜನ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ, ಡಿಸಿಎಂ, ಸಚಿವರು ಶಾಸಕರು, ಎಂಎಲ್ಸಿಗಳು ಭಾಗವಹಿಸುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ಬಿಜೆಪಿ-ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆಗೆ (BJP-JDS Padayatra) ಟಕ್ಕರ್‌ ನೀಡಲು ಮೈಸೂರಿನಲ್ಲಿ ಇಂದು ಆಯೋಜಿಸಲಾಗಿರುವ ಬೃಹತ್‌ ಜನಾಂದೋಲನ (Janandolana samavesha) ಸಮಾವೇಶದ ಸ್ಥಳಕ್ಕೆ ಕಾಂಗ್ರೆಸ್‌ (Congress) ಪಡೆ ಆಗಮಿಸುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಮುಂತಾದವರು ಸಮಾವೇಶದ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.

ಜನಾಂದೋಲನ ಸಮಾವೇಶದ ವೇದಿಕೆ ಮೇಲೆ ಸುಮಾರು 200 ಜನ ಕೂರಲು ವ್ಯವಸ್ಥೆ ಮಾಡಲಾಗಿದೆ. ಎಡ ಮತ್ತು ಬಲ ಭಾಗದಲ್ಲಿ ಮಾಜಿ ಶಾಸಕರು ಹಾಗೂ ಪರಿಷತ್ ಸದಸ್ಯರು ಕೂರಲು ವ್ಯವಸ್ಥೆ ಮಾಡಲಾಗಿದ್ದು, ಮಳೆ ಬಂದರೂ ಕಾರ್ಯಕ್ರಮ ಯಶಸ್ವಿಯಾಗಲು ಜರ್ಮನ್ ಪೆಂಡಾಲ್ ಅಳವಡಿಸಲಾಗಿದೆ. ʼಸಿದ್ದರಾಮೋತ್ಸವʼ ರೀತಿಯಲ್ಲಿಯೇ ಕಾರ್ಯಕ್ರಮ ಮಾಡಲಾಗುತ್ತಿದೆ.

ಜನಾಂದೋಲನ ಸಮಾವೇಶವನ್ನು ಸಿಎಂ ವೈಯಕ್ತಿಕ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಇಂದಿನ ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಜನ ಸೇರಿಸಲಿದ್ದಾರೆ ಎಂದು ಭಾವಿಸಲಾಗಿದೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರದಿಂದ ಹೆಚ್ಚು ಜನ ಬರುವ ಸಾಧ್ಯತೆ ಇದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ, ಡಿಸಿಎಂ, ಸಚಿವರು ಶಾಸಕರು, ಎಂಎಲ್ಸಿಗಳು ಭಾಗವಹಿಸಲಿದ್ದಾರೆ.

ವಿಪಕ್ಷಗಳ ವಿರುದ್ಧ ದಾಖಲೆ ಸಮೇತ ಮಾತನಾಡುವುದು, ಮುಡಾದಲ್ಲಿ ಮಾಜಿ ಸಿಎಂ ಎಚ್ ಡಿ ದೇವೇಗೌಡ ಫ್ಯಾಮಿಲಿ ಖರೀದಿಸಿದ ಆಸ್ತಿಗಳ ಬಗ್ಗೆ ಮಾಹಿತಿ ಕೊಡುವುದು, ಕುಮಾರಸ್ವಾಮಿ ಕಾಲದಲ್ಲಿ ಆದ ನಿವೇಶನ ಹಂಚಿಕೆ, ಕುಮಾರಸ್ವಾಮಿ ವಿರುದ್ಧ ಇರೋ ಪ್ರಕರಣಗಳ ಬಗ್ಗೆ ದಾಖಲೆ ಸಮೇತ ಮಾತನಾಡುವುದು, ಮುಡಾದಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ ಅನ್ನೋದನ್ನ ಹೇಳುವುದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸುವುದು, ರಾಜ್ಯಪಾಲರು ಈ ಹಿಂದೆ ಯಾವೆಲ್ಲ ಪ್ರಕರಣಗಳಲ್ಲಿ ಮೌನ ವಹಿಸಿದ್ದಾರೆ ಅನ್ನೋದನ್ನ ಹೇಳುವುದು, ವಿರೋಧ ಪಕ್ಷಗಳ ನಾಯಕರ ಹಗರಣಗಳ ಬಗ್ಗೆ ಕಿರು ಹೊತ್ತಿಗೆ ಬಿಡುಗಡೆ ಮಾಡುವುದು ಜನಾಂದೋಲನ ಸಮಾವೇಶದ ಅಜೆಂಡಾ ಆಗಿದೆ.

ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ವಿರುದ್ಧ ಕಿರುಹೊತ್ತಿಗೆ ಬಿಡುಗಡೆ ಮಾಡಲಾಗುತ್ತಿದೆ. ಎರಡೂ ಪಕ್ಷಗಳು ಕುಟಿಲ ರಾಜಕಾರಣ ನಡೆಸುತ್ತಿವೆ ಎಂದು ʼಸಂಚು’ ಹೆಸರಿನಲ್ಲಿ ಪುಸ್ತಕ ಬಿಡುಗಡೆ ಮಾಡಲಾಗುತ್ತಿದ್ದು, ಇದು ಮುಡಾ ಪ್ರಕರಣದ ಸಮಗ್ರ ವಿವರ ಮತ್ತು ದಾಖಲೆಗಳನ್ನೊಳಗೊಂಡಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಬ್ಬರನ್ನೂ ಒಂದೇ ಕಲ್ಲಲ್ಲಿ ಹೊಡೆಯಲು ಬಿಜೆಪಿ ಕುಟಿಲ ಕಾರಸ್ಥಾನ ನಡೆಸಿದೆ ಎಂದು ʼಸಂಚುʼ ಕೃತಿ ರೂಪಿಸಿರುವ ಸಿಎಂ‌ ಕಾನೂನು ಸಲಹೆಗಾರ ಪೊನ್ನಣ್ಣ ಬರೆದಿದ್ದಾರೆ ಎನ್ನಲಾಗಿದೆ.

ಕಿರುಹೊತ್ತಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬೊಮ್ಮಾಯಿ, ಹಾಲಿ ಕೇಂದ್ರ ಸಚಿವ ಹೆಚ್‌ಡಿಕೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಅಕ್ರಮದ ಆರೋಪಗಳ ಕುರಿತು ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.

ಸಮಾವೇಶದ ಉದ್ದೇಶವೇ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ಕುಟುಂಬ ಆಗಿದೆ. ದೇವೇಗೌಡರ ಕುಟುಂಬಸ್ಥರು ಮುಡಾ ಸೈಟ್ ಪಡೆದ ಬಗ್ಗೆ ಕಾಂಗ್ರೆಸಿಗರು ಫ್ಲೆಕ್ಸ್ ಹಾಕಿದ್ದಾರೆ. ನಗರದ ಹಲವು ಭಾಗದ ಸರ್ಕಲ್‌ಗಳಲ್ಲಿ ಫ್ಲೆಕ್ಸ್‌ಗಳ ಅಳವಡಿಕೆ ಮಾಡಲಾಗಿದೆ. 2023ರ ಫೆಬ್ರವರಿ ತಿಂಗಳಿನಲ್ಲಿ ಬಿಜೆಪಿ ನೀಡಿರುವ ಜಾಹೀರಾತನ್ನು ಕಾಂಗ್ರೆಸ್‌ ಬಳಸಿಕೊಂಡಿದೆ. ಕುಮಾರಸ್ವಾಮಿ ಅವರಿಗೆ ಮುಡಾದಿಂದ ಕೊಟ್ಟಿರುವ ಸೈಟ್ ಬಗ್ಗೆ, ಮಾಜಿ ಪ್ರಧಾನಿ ದೇವೇಗೌಡರ 20 ಹೆಸರು ಬರೆದು ಎಷ್ಟು ಅಳತೆಯ ನಿವೇಶನ ಮಂಜೂರಾಗಿದೆ ಎಂಬ ಮಾಹಿತಿ ಫ್ಲೆಕ್ಸ್‌ನಲ್ಲಿದೆ. ಎಚ್‌ಡಿಕೆಯವರೇ ನೀವು ಬೇರೆಯವರ ಬಗ್ಗೆ ಪ್ರಶ್ನಿಸುವ ನೈತಿಕ ಹಕ್ಕು ಉಳಿಸಿಕೊಂಡಿದ್ದೀರಾ ಎಂದು ಫ್ಲೆಕ್ಸ್‌ನಲ್ಲಿ ಪ್ರಶ್ನಿಸಲಾಗಿದೆ.

ಇದನ್ನೂ ಓದಿ: BJP-JDS Padayatra: ಅಸಮಾಧಾನಗೊಂಡ ಬಿಜೆಪಿ ಶಾಸಕರಿಂದ ಕಾಂಗ್ರೆಸ್ ಜನಾಂದೋಲನಕ್ಕೆ ಬೆಂಬಲ?

Continue Reading

ವಾಣಿಜ್ಯ

Gold Rate Today: ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಹೀಗಿದೆ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,425 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,009 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,400 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,250 ಮತ್ತು ₹ 6,42,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,072 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,090 ಮತ್ತು ₹ 7,00,900 ತಲುಪಿದೆ.

VISTARANEWS.COM


on

gold rate today
Koo

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 9) ಚಿನ್ನದ ದರ ಕೊಂಚ ಹೆಚ್ಚಾಗಿದೆ.(Gold Rate Today). ಮಂಗಳವಾರದಿಂದ ಬೆಲೆ ಸತತವಾಗಿ ಇಳಿಕೆಯಾಗುತ್ತಿರುವುದರಿಂದ ಗ್ರಾಹಕರ ಮೊಗದಲ್ಲಿ ನಗು ಮೂಡಿಸಿತ್ತು. ಆದರೆ ಇಂದು ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರಟ್‌ ಚಿನ್ನದ ದರದಲ್ಲಿ 75ರೂ. ಮತ್ತು 24 ಕ್ಯಾರಟ್‌ ಚಿನ್ನಕ್ಕೆ 82ರೂ. ಹೆಚ್ಚಾಗಿದೆ

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,425 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,009 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,400 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,250 ಮತ್ತು ₹ 6,42,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,072 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,090 ಮತ್ತು ₹ 7,00,900 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,440₹ 7,024
ಮುಂಬೈ₹ 6,425₹ 7,009
ಬೆಂಗಳೂರು₹ 6,425₹ 7,009
ಚೆನ್ನೈ₹ 6,425₹ 7,009

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 80.75 ಹಾಗೂ 8 ಗ್ರಾಂಗೆ ₹ 646 ಇದೆ. 10 ಗ್ರಾಂ ₹ 807.50 ಹಾಗೂ 1 ಕಿಲೋಗ್ರಾಂ ₹ 80,750 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: Actor Darshan:  ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಚಲನಚಿತ್ರ ವಾಣಿಜ್ಯ ಮಂಡಳಿ

Continue Reading

ಬೆಂಗಳೂರು

UGCET 2024: ಯುಜಿಸಿಇಟಿ ಮೊದಲ ಅಣಕು ಸೀಟು ಹಂಚಿಕೆ ಫಲಿತಾಂಶ ಇಂದು ಸಂಜೆ 6 ಗಂಟೆಗೆ ಪ್ರಕಟ

UGCET 2024: ಯುಜಿಸಿಇಟಿ ಮೊದಲ ಅಣಕು ಸೀಟು ಹಂಚಿಕೆ ಫಲಿತಾಂಶ ಶುಕ್ರವಾರ ಸಂಜೆ 6 ಗಂಟೆಗೆ ಪ್ರಕಟಗೊಳ್ಳಲಿದೆ. ಜತೆಗೆ ಯುಜಿಸಿಇಟಿ, ಯುಜಿನೀಟ್‌ ವಿವಿಧ ಕಂಡಿಕೆಗಳಡಿ ಕ್ಲೇಮ್ ಮಾಡಿದವರಿಗೆ ಆ.9ರವರೆಗೆ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳಬೇಕು.

VISTARANEWS.COM


on

By

UGCET 2024
Koo

ಬೆಂಗಳೂರು: ಯುಜಿಸಿಇಟಿ 2024ರ (UGCET 2024) ಮೊದಲ ಅಣಕು ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 9ರ ಸಂಜೆ 6ಗಂಟೆ‌ ನಂತರ ಕೆಇಎ (KEA) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಈ ಕುರಿತು ಕೆಇಎ ಟ್ವೀಟ್‌ (ಎಕ್ಸ್‌) ಮೂಲಕ ತಿಳಿಸಿದೆ.

ಇಂಜಿನಿಯರಿಂಗ್ (Engineering) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET 2024) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಇಂದು (August 9) ಸಂಜೆ 6 ಗಂಟೆಗೆ ಅಣಕು ಸೀಟು ಹಂಚಿಕೆ (Mock Seat Sharing) ಫಲಿತಾಂಶ ಪ್ರಕಟಗೊಳ್ಳಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಕುರಿತು ಅಪ್‌ಡೇಟ್‌ ನೀಡಲಿದೆ.

ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು. ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆ ಆಪ್ಷನ್‌ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಇದನ್ನೂ ಓದಿ: Karnataka Weather : ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

ವಿವಿಧ ಕಂಡಿಕೆಗಳಡಿ ಕ್ಲೇಮ್ ಮಾಡಿದವರಿಗೆ ಆ.9ರವರೆಗೆ ದಾಖಲೆ ಪರಿಶೀಲನೆ

ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಂ, ಎನ್- ಕ್ಲೇಮ್ ಮಾಡಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರು ನಿಗದಿತ ದಿನಾಂಕಗಳಂದು ದಾಖಲೆಗಳ ಪರಿಶೀಲನೆಗೆ ಹಾಜರಾಗದೇ ಇದ್ದರೆ ಅಂತಹವರು ಆಗಸ್ಟ್ 9ರವರೆಗೆ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳದೇ ಇದ್ದಲ್ಲಿ ಅಂತಹವರು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹರಾಗುವುದಿಲ್ಲ.

ಸಿಇಟಿ ಪರಿಶೀಲನಾ ಅರ್ಜಿಯೇ ಸಾಕು

ಈ ಮೇಲ್ಕಂಡ ಕಂಡಿಕೆಗಳಲ್ಲಿ ದಾಖಲೆಗಳ ಪರಿಶೀಲನೆ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಆಯಾ ದಿನವೇ ಪರಿಶೀಲನಾ ಪತ್ರ (ವೆರಿಫಿಕೇಷನ್ ಸ್ಲಿಪ್) ನೀಡಿದ್ದು, ಅದನ್ನೇ ಯುಜಿನೀಟ್ ಪ್ರವೇಶಕ್ಕೂ ಬಳಸಬಹುದು. ಯುಜಿಸಿಇಟಿ ಅರ್ಜಿಗೆ ಯುಜಿನೀಟ್ ರೋಲ್ ಸಂಖ್ಯೆಯನ್ನು ಲಿಂಕ್ ಮಾಡಬೇಕು ಮತ್ತು ಅರ್ಜಿ ಪ್ರತಿಯನ್ನು ಮುದ್ರಣ ಮಾಡಿಕೊಳ್ಳಬೇಕು. ಅಂತಹವರು ಯುಜಿನೀಟ್ ವೆರಿಫಿಕೇಷನ್ ಸ್ಲಿಪ್ ಡೌನ್ ಲೋಡ್ ಮಾಡಿಕೊಳ್ಳುವ ಅಗತ್ಯ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯುಜಿಸಿಇಟಿ ವೆರಿಫಿಕೇಷನ್ ಸ್ಲಿಪ್ ನಲ್ಲಿ ಮುದ್ರಿತವಾಗಿರುವ ಸೀಕ್ರೆಟ್ ಕೀ ಮತ್ತು ಅರ್ಜಿ ಸಂಖ್ಯೆಯನ್ನೇ ನಮೂದಿಸಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಇಚ್ಛೆಗಳನ್ನು (ಆಪ್ಷನ್) ದಾಖಲಿಸಬಹುದು. ಇದಕ್ಕೆ ಸದ್ಯದಲ್ಲೇ ಪೋರ್ಟಲ್ ಅನ್ನು ತೆರೆಯಲಾಗುವುದು. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Yash called the actor that if you grow beyond all of us dance karnataka dance
ಸ್ಯಾಂಡಲ್ ವುಡ್4 mins ago

Actor Yash: ನಮ್ಮನ್ನೆಲ್ಲ ಮೀರಿಸಿ ನೀವು ಬೆಳೆದರೆ ಅದೇ ನಮಗೆ ನೀವು ಕೊಡುವ ಗೌರವ ಎಂದು ನಟನಿಗೆ ಕರೆ ಮಾಡಿದ ‘ರಾಕಿಂಗ್ ಸ್ಟಾರ್’ ಯಶ್!

bangalore traffic signal
ಪ್ರಮುಖ ಸುದ್ದಿ5 mins ago

Bangalore Traffic: ಬೆಂಗಳೂರಿನ ಟ್ರಾಫಿಕ್‌ ಸಿಗ್ನಲ್‌ನಲ್ಲಿ 15 ನಿಮಿಷ ನಿಲ್ಲೋ ಪರಿಸ್ಥಿತಿ ಬರಲಿದೆ, ಎಚ್ಚರ!

Vinesh Phogat
ಕ್ರೀಡೆ24 mins ago

Vinesh Phogat: ಕೆಲವೇ ಗಂಟೆಗಳಲ್ಲಿ ವಿನೇಶ್ ಫೋಗಟ್​ ಬೆಳ್ಳಿ ಪದಕದ ತೀರ್ಪು ಪ್ರಕಟ

Manish Sisodia
ದೇಶ33 mins ago

Manish Sisodia: ದೆಹಲಿ ಅಬಕಾರಿ ನೀತಿ ಅಕ್ರಮ: ಮನೀಶ್‌ ಸಿಸೋಡಿಯಾಗೆ ಜಾಮೀನು

Antim Panghal
ಕ್ರೀಡೆ59 mins ago

Antim Panghal: 3 ವರ್ಷ ನಿಷೇಧ ಶಿಕ್ಷೆಯಿಂದ ಪಾರಾದ ಕುಸ್ತಿಪಟು ಅಂತಿಮ್‌ ಪಂಘಲ್‌

train service
ಹಾಸನ59 mins ago

Train services: ಎಡಕುಮೇರಿಯಲ್ಲಿ ದುರಸ್ಥಿ ಪೂರ್ಣ; ರೈಲುಗಳ ಪುನರ್‌ ಆರಂಭವಾದರೂ ವೇಗದ ಮಿತಿಗೆ ನಿರ್ಬಂಧ

ದೇಶ60 mins ago

Kangana v/s Rahul Gandhi: ರಾಹುಲ್‌ ಗಾಂಧಿಯ ತಿರುಚಿದ ಫೊಟೋ ಶೇರ್‌; ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ

ಪ್ರಮುಖ ಸುದ್ದಿ2 hours ago

CM Siddaramaiah: ಮೈಸೂರು ಜನಾಂದೋಲನ ಸಮಾವೇಶ ಸ್ಥಳಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್‌ ಪಡೆ; ಲೈವ್‌ ಇಲ್ಲಿದೆ ವೀಕ್ಷಿಸಿ

Laapataa Ladies to be screened in Supreme Court
ಬಾಲಿವುಡ್2 hours ago

Laapataa Ladies: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ ‘ಲಾಪತಾ ಲೇಡೀಸ್’!

Vinesh Phogat
ಕ್ರೀಡೆ2 hours ago

Vinesh Phogat: ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಪಿತೂರಿಯ ಬಗ್ಗೆ ಗಂಭೀರ ಆರೋಪ ಮಾಡಿದ್ದ ವಿನೇಶ್​; ವೈರಲ್​ ಟ್ವೀಟ್​ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ19 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ21 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ22 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌