BBMPಯಿಂದ ಕಂದಾಯ ಇಲಾಖೆಗೆ ಜಾರಿದ ಚಾಮರಾಜಪೇಟೆ ಮೈದಾನ: DC ಅನುಮತಿ ಬೇಕು - Vistara News

ಪ್ರಮುಖ ಸುದ್ದಿ

BBMPಯಿಂದ ಕಂದಾಯ ಇಲಾಖೆಗೆ ಜಾರಿದ ಚಾಮರಾಜಪೇಟೆ ಮೈದಾನ: DC ಅನುಮತಿ ಬೇಕು

ಚಾಮರಾಜಪೇಟೆ ಮೈದಾನದಲ್ಲಿ ವರ್ಷಕ್ಕೆರಡು ಬಾರಿ ನಮಾಜ್‌ ಮಾಡಲು ಸುಪ್ರೀಂಕೋರ್ಟ್‌ ತಿಳಿಸಿತ್ತು. ಇದೀಗ ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದಂತೆ, ಎಲ್ಲ ಕಾರ್ಯಕ್ರಮಗಳಿಗೂ ಅನುಮತಿ ಪಡೆಯಬೇಕು.

VISTARANEWS.COM


on

R Ashok minister bjp
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಾಮರಾಜಪೇಟೆ ಮೈದಾನ ಯಾರಿಗೆ ಸೇರಿದ್ದು ಎಂಬ ಕುರಿತು ಕಳೆದ ಅನೇಕ ತಿಂಗಳುಗಳಿಂದ ನಡೆಯುತ್ತಿದ್ದ ವಿವಾದ ಇದೀಗ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ಕುರಿತು ಕಂದಾಯ ಸಚಿವ ಆರ್‌. ಅಶೋಕ್‌ ಮಾತನಾಡಿದ್ದಾರೆ. ಚಾಮರಾಜಪೇಟೆ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಆದೇಶ ಹೊರಡಿಸಿದ್ದು, ಅದರಂತೆ ಮುಂದೆ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಬೇಕಿದ್ದರೂ ಜಿಲ್ಲಾಧಿಕಾರಿ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ.

ಈ ಹಿಂದೆ ವಿವಾದ ಹೆಚ್ಚಳವಾದಾಗ, ಬಿಬಿಎಂಪಿ ವಲಯ ಆಯುಕ್ತರ ಅನುಮತಿ ಪಡೆಯಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದರು. ಇದೀಗ ಕಂದಾಯ ಸಚಿವ ಆರ್‌. ಅಶೊಕ್‌ ಅವರು ತಿಳಿಸಿದಂತೆ ಅನುಮತಿಯನ್ನು ಜಿಲ್ಲಾಧಿಕಾರಿಯಿಂದ ಪಡೆಯಬೇಕು.

ಮೈದಾನದ ಮಾಲೀಕತ್ವದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅಶೋಕ್‌, ಚಾಮರಾಜಪೇಟೆ ಮೈದಾನಕ್ಕೆ ನೀವು ಏನೇನೊ ಹೆಸರು ಕೊಟ್ಟಿದ್ದೀರ. ಅಲ್ಲಿ ಕುರಿ,ಎಮ್ಮೆ ಎಲ್ಲವನ್ನೂ ಮಾರಾಟ ಮಾಡುತ್ತಾರೆ. ಮೈದಾನ ತಮ್ಮದೆಂದು ಹೇಳಲು ದಾಖಲೆ ಕೊಡಿ ಎಂದು ವಕ್ಫ್‌ ಬೋರ್ಡ್‌ಗೆ ಬಿಬಿಎಂಪಿ ಕಮಿಷನರ್‌ ಹೇಳಿದ್ದರು. ಮೈದಾನ ತಮ್ಮದು ಎಂದು ಸುಪ್ರೀಂಕೋರ್ಟ್‌ನಲ್ಲಿ ಹೇಳುವ ವಕ್ಫ್‌ ಬೋರ್ಡ್‌, ಈ ಕುರಿತು ಯಾವುದೇ ದಾಖಲೆಯನ್ನು ಬಿಬಿಎಂಪಿಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಮೈದಾನವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಆದೇಶ ಹೊರಡಿಸಲಾಗಿದೆ.

ಇಂದಿನ ಮಾಹಿತಿ ಪ್ರಕಾರ ಮೈದಾನ‌ ಕಂದಾಯ ಇಲಾಖೆಗೆ ಸೇರಿದ್ದು. ಆ ಮೈದಾನದಲ್ಲಿ ಗಣೇಶ ಹಬ್ಬ ಮಾಡಬೇಕೇ, ನಮಾಜ್ ಮಾಡಬೇಕೇ, ಪ್ರೇಯರ್‌ ಮಾಡಬೇಕೇ ಎಂದು ಕಂದಾಯ ಇಲಾಖೆ ನಿರ್ಧಾರ ಮಾಡುತ್ತದೆ. ಕಾನೂನು ಪ್ರಕಾರ ಸೂಕ್ತ ಎನ್ನಿಸಿದ್ದಕ್ಕೆ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಕಂದಾಯ ಇಲಾಖೆಗೆ ಅವಕಾಶವಿದೆ. ಅದರಂತೆ ಅನುಮತಿ ನೀಡಲಾಗುತ್ತದೆ. ಜಿಲ್ಲಾಧಿಕಾರಿ ಮೂಲಕ ಅನುಮತಿ ಪಡೆಯಬೇಕಾಗುತ್ತದೆ. ಈ ಕುರಿತು ಯಾರೂ ಸಾರ್ವಭೌಮತ್ವ ಮಾಡಲು ಹೋಗಬಾರದು ಎಂದು ಎಚ್ಚರಿಕೆ ನೀಡಿದರು.

ಮೈದಾನ ವಿವಾದದಲ್ಲಿದ್ದದ್ದರಿಂದ ತ್ರಿವರ್ಣ ಧ್ವಜ ಹಾರಿಸಲೂ ಅನುಮತಿ ಪಡೆಯಬೇಕು. ಇನ್ನು ಮುಂದೆ ಸಾಮೂಹಿಕ ನಮಾಜ್ ಮಾಡಲು ಅನುಮತಿ ಪಡೆಯಬೇಕು ಎಂದು ತಿಳಿಸಿದರು.

ಕೋವಿಡ್‌ಗೆ ಮೊದಲಿನಂತೆ ಗಣೇಶೋತ್ಸವ

ಕೋವಿಡ್‌ ಸಂದರ್ಭದಲ್ಲಿ ವಾರ್ಡ್‌ಗೆ ಒಂದರಂತೆ ಗಣೇಶ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಈ ಬಾರಿ, ಕೋವಿಡ್‌ಗೂ ಮುನ್ನ ಯಾವ ರೀತಿ ಇತ್ತೋ ಆ ರೀತಿ ಅನುಮತಿ ನೀಡಲಾಗುತ್ತದೆ. ಆದಷ್ಟೂ ಎಲ್ಲರೂ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಪ್ಲಾಸ್ಟಿಕ್‌, ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಗಣೇಶ ಪೂಜಿಸಲು ಅವಕಾಶ ನೀಡುವುದಿಲ್ಲ ಎಂದರು.

ಇದನ್ನೂ ಓದಿ | ಚಾಮರಾಜಪೇಟೆ ಮೈದಾನದಲ್ಲಿ ಧ್ವಜ ಹಾರುವುದು ಶತಃಸಿದ್ಧ: ನಾಗರಿಕರ ಒಕ್ಕೂಟ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

IPL 2024: ಪಂಜಾಬ್​​ನ ಗುರ್ನೂರ್ ಬ್ರಾರ್ ಕಳೆದ ಆವೃತ್ತಿಯ ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಐಪಿಎಲ್ 2024 ಹರಾಜಿನಲ್ಲಿ ಮಾರಾಟವಾಗಲಿಲ್ಲ. ಐಪಿಎಲ್ 2023 ರಲ್ಲಿ ಅವರು ಪಂಜಾಬ್ ಮೂಲದ ತಂಡದ ಪರವಾಗಿ ಒಂದು ಪಂದ್ಯವನ್ನು ಆಡಿದ್ದಾರೆ. ಬ್ರಾರ್ ಈವರೆಗೆ 5 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು ಒಂದು ಲಿಸ್ಟ್-ಎ ಪಂದ್ಯವನ್ನು ಆಡಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರ (IPL 2024) ಉಳಿದ ಭಾಗಕ್ಕೆ ಸುಶಾಂತ್ ಮಿಶ್ರಾ ಅಲಭ್ಯರಾಗಿರುವ ಕಾರಣ ಗುಜರಾತ್ ಟೈಟಾನ್ಸ್ ಗುರ್ನೂರ್ ಬ್ರಾರ್ ಅವರನ್ನು ಆಯ್ಕೆ ಮಾಡಿದೆ. ಐಪಿಎಲ್​ನ ಅಧಿಕೃತ ಪ್ರಕಟಣೆ ಶನಿವಾರ (ಮೇ 11) ಈ ಬೆಳವಣಿಗೆಯನ್ನು ದೃಢಪಡಿಸಿದೆ. ಆದಾಗ್ಯೂ, ಸುಶಾಂತ್ ಮಿಶ್ರಾ ಪ್ರಸ್ತುತ ನಡೆಯುತ್ತಿರುವ ಟೂರ್ನಿಯಿಂದ ಹೊರಗುಳಿಯುವ ಹಿಂದಿನ ಕಾರಣವನ್ನು ಬಿಡುಗಡೆ ಬಹಿರಂಗಪಡಿಸಿಲ್ಲ. ದೇಶೀಯ ಕ್ರಿಕೆಟ್​ನಲ್ಲಿ ಜಾರ್ಖಂಡ್ ಪರ ಆಡುವ ಎಡಗೈ ವೇಗಿ, ಐಪಿಎಲ್ 2024 ರಲ್ಲಿ ಒಂದೇ ಒಂದು ಪಂದ್ಯದಲ್ಲಿ ಆಡುವ ಅವಕಾಶ ಪಡೆದಿಲ್ಲ. ಅಂದ ಹಾಗೆ ಪ್ರಸ್ತುತ ಋತುವು ಅವರ ಮೊದಲ ಐಪಿಎಲ್ ಸೀಸನ್ ಆಗಿತ್ತು.

ಪಂಜಾಬ್​​ನ ಗುರ್ನೂರ್ ಬ್ರಾರ್ ಕಳೆದ ಆವೃತ್ತಿಯ ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಐಪಿಎಲ್ 2024 ಹರಾಜಿನಲ್ಲಿ ಮಾರಾಟವಾಗಲಿಲ್ಲ. ಐಪಿಎಲ್ 2023 ರಲ್ಲಿ ಅವರು ಪಂಜಾಬ್ ಮೂಲದ ತಂಡದ ಪರವಾಗಿ ಒಂದು ಪಂದ್ಯವನ್ನು ಆಡಿದ್ದಾರೆ. ಬ್ರಾರ್ ಈವರೆಗೆ 5 ಪ್ರಥಮ ದರ್ಜೆ ಪಂದ್ಯಗಳನ್ನು ಮತ್ತು ಒಂದು ಲಿಸ್ಟ್-ಎ ಪಂದ್ಯವನ್ನು ಆಡಿದ್ದಾರೆ.

ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಉಳಿದ ಭಾಗಕ್ಕೆ ಸುಶಾಂತ್ ಮಿಶ್ರಾ ಅವರ ಬದಲಿಯಾಗಿ ಗುಜರಾತ್ ಟೈಟಾನ್ಸ್ ವೇಗದ ಬೌಲರ್ ಗುರ್ನೂರ್ ಸಿಂಗ್ ಬ್ರಾರ್ ಅವರನ್ನು ಒಪ್ಪಂದ ಮಾಡಿಕೊಂಡಿದೆ ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: IPL 2024 : ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ತಂಡದ ನಾಯಕ ಬದಲು; ಮಾಹಿತಿ ಬಹಿರಂಗ

“ಗುರ್ನೂರ್ ದೇಶೀಯ ಕ್ರಿಕೆಟ್​​ನಲ್ಲಿ ಪಂಜಾಬ್ ತಂಡವನ್ನು ಐದು ಪ್ರಥಮ ದರ್ಜೆ ಮತ್ತು ಒಂದು ಲಿಸ್ಟ್ ಎ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. 2023ರಲ್ಲಿ ಟಾಟಾ ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಏಕೈಕ ಪಂದ್ಯವನ್ನಾಡಿದ್ದರು. ಅವರು ತಮ್ಮ ಮೀಸಲು ಬೆಲೆ 50 ಲಕ್ಷ ರೂ.ಗೆ ಸಹಿ ಹಾಕುತ್ತಾರೆ” ಎಂದು ಅದು ಹೇಳಿದೆ.

ಪ್ಲೇ ಆಫ್ ಹಂತದಿಂದ ಹೊರಗುಳಿಯುವ ಸಾಧ್ಯತೆ

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಗುಜರಾತ್ ಟೈಟಾನ್ಸ್ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ಅವರು ಈ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಗುಜರಾತ್ ಮೂಲದ ತಂಡ ಇದೇ ಮೊದಲ ಬಾರಿಗೆ ಪ್ಲೇ ಆಫ್ ಹಂತದಿಂದ ಹೊರಗುಳಿಯಲಿದೆ. ಅವರು 2022 ರಲ್ಲಿ ತಮ್ಮ ಚೊಚ್ಚಲ ಋತುವಿನಲ್ಲಿ ಐಪಿಎಲ್ ಪ್ರಶಸ್ತಿ ಗೆದ್ದಿದ್ದರು. 2023 ರಲ್ಲಿ ರನ್ನರ್ ಅಪ್ ಸ್ಥಾನ ಪಡೆದುಕೊಂಡಿತ್ತು.

ಹಾರ್ದಿಕ್ ಪಾಂಡ್ಯ ನಿರ್ಗಮನದ ನಂತರ ಅವರು ಶುಬ್ಮನ್ ಗಿಲ್ ಅವರನ್ನು ಹೊಸ ನಾಯಕನಾಗಿ ನೇಮಿಸಲಾಗಿದೆ. ಅವರು ಹೆಚ್ಚು ಪರಿಣಾಮ ಬೀರಿಲ್ಲ. ಟೈಟಾನ್ಸ್ ಇನ್ನೂ ಸ್ಪರ್ಧೆಯಲ್ಲಿ ಲೆಕ್ಕಾಚಾರದ ಪ್ರಕಾರ ಜೀವಂತವಾಗಿದ್ದರೂ, ಅವರ ಅವಕಾಶಗಳು ಬಹುತೇಕ ಶೂನ್ಯವಾಗಿದೆ.

ಸದ್ಯ ಆಡಿರುವ 12 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಅವರು ತಮ್ಮ ಉಳಿದ ಎರಡು ಲೀಗ್ ಪಂದ್ಯಗಳನ್ನು ಗೆದ್ದರೂ, ಸತತ ಮೂರನೇ ಬಾರಿಗೆ ಪ್ಲೇಆಫ್ಗೆ ಪ್ರವೇಶಿಸಲು ಅವರಿಗೆ ಹಲವಾರು ಫಲಿತಾಂಶಗಳು ಬೇಕಾಗುತ್ತವೆ.

Continue Reading

ಕರ್ನಾಟಕ

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

VISTARANEWS.COM


on

Devarajegowda
Koo

ಹಾಸನ: ಮಹಿಳೆಗೆ ಲೈಂಗಿಕ ಕಿರುಕುಳ, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡ (Devaraje Gowda) ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಹೊಳೆನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಇದರೊಂದಿಗೆ, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ನಲ್ಲಿ (Prajwal Revanna Case) ಸುದ್ದಿಯಾಗಿದ್ದ ದೇವರಾಜೇಗೌಡ ಅವರೂ ಜೈಲುಪಾಲಾದಂತಾಗಿದೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಮೇ 10ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು. ಹಾಗಾಗಿ, ಅವರನ್ನು ವಶಕ್ಕೆ ಪಡೆಯಲಾಗಿತ್ತು.

Prajwal Revanna Case

ಆಡಿಯೊ ವೈರಲ್‌

ಪೊಲೀಸರು ವಶಕ್ಕೆ ಪಡೆಯುವ ಮುನ್ನ ವಿಡಿಯೊದಲ್ಲಿ ಮಾತನಾಡಿದ್ದ ವಕೀಲ ದೇವರಾಜೇಗೌಡ, ನಾನು ಎಲ್ಲೂ ಕಾಣೆ ಆಗಿಲ್ಲ. ಮೂರು ದಿನ ರಜೆ ಇರುವುದರಿಂದ ದೇವಾಲಯಕ್ಕೆ ಹೊಗುತ್ತಿದ್ದೇನೆ. ಕಾಣೆ ಆಗುವ ಪರಿಸ್ಥಿತಿ ನನಗೆ ಬಂದಿಲ್ಲ. ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದೇನೆ. ಆಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಇನ್ನು ಇದೇ ವೇಳೆ ಹಾಸನ ಅಶ್ಲೀಲ‌ ವಿಡಿಯೋ ಪ್ರಕರಣದ ಸಂಬಂಧ ಅಜ್ಞಾತ ಸ್ಥಳದಿಂದ ದೇವರಾಜೇಗೌಡ ಮೂರು ಆಡಿಯೊ ಕ್ಲಿಪ್ ಬಿಡುಗಡೆ ಮಾಡಿದ್ದರು. ಮಾಜಿ ಸಂಸದ ಶಿವರಾಮೇಗೌಡ ಜತೆ ಮಾತನಾಡಿರುವ ಎನ್ನಲಾದ ಎರಡು ಆಡಿಯೊ ತುಣುಕು ವೈರಲ್‌ ಆಗಿದ್ದವು. ಹನಿಟ್ರ್ಯಾಪ್ ಸಂಬಂಧ ಮಹಿಳೆ ಗಂಡನ ಜತೆ ಮಾತನಾಡಿದ ಒಂದು ಆಡಿಯೊ ಇದೆ. ಇನ್ನು ಡಿಕೆಶಿ ವಿಚಾರ ಶಿವರಾಮೇಗೌಡ ಜತೆ ದೇವರಾಜೇಗೌಡ ಮಾತನಾಡುತ್ತಿರುವ ಆಡಿಯೊ ಕೂಡ ಇದ್ದು, ಎಸ್‌ಐಟಿ ವಿಚಾರಣೆಯಲ್ಲಿ ಡಿಕೆಶಿ ಹೆಸರೇಳದಂತೆ ಶಿವರಾಮೇಗೌಡ ಸೂಚಿಸಿದ್ದರು.

ಕಾರ್ತಿಕ್‌, ದೇವರಾಜೇಗೌಡ ಪೆನ್‌ಡ್ರೈವ್‌ ರೂವಾರಿಗಳು

ದೇವರಾಜೇಗೌಡ ಬಂಧನದ ಬಳಿಕ ಮಾತನಾಡಿದ್ದ ಮಾಜಿ ಸಂಸದ ಶಿವರಾಮೇಗೌಡ, ಹಲವು ಆರೋಪ ಮಾಡಿದ್ದಾರೆ. “ಪೆನ್‌ಡ್ರೈವ್‌ ರಿಲೀಸ್‌ ಮಾಡಿರುವುದರ ಹಿಂದೆ ಕಾರು ಚಾಲಕ ಕಾರ್ತಿಕ್‌ ಹಾಗೂ ದೇವರಾಜೇಗೌಡ ಇದ್ದಾರೆ. ಏಟ್ರಿಯಾ ಹೋಟೆಲ್‌ನಲ್ಲಿ ಮಾತನಾಡುವಾಗ ನನ್ನ ವಿರುದ್ಧ ತನಿಖೆ ಮಾಡಬೇಕು ಅಂತಿದ್ದಾರೆ ಎಂದ. ಡಿ.ಕೆ.ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಬಗ್ಗೆ ಪದೇಪದೆ ಮಾತನಾಡಬೇಡ ಎಂದೆ. ನಿನ್ನದು ನೀನು ಸರಿಮಾಡಿಕೊ. ಉಳಿದ ಉಸಾಬರಿ ನಿನಗೆ ಬೇಡ ಎಂಬುದಾಗಿ ಹೇಳಿದ್ದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Continue Reading

ಕರ್ನಾಟಕ

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಐದು ಹಾಗೂ ಜೆಡಿಎಸ್‌ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ.

VISTARANEWS.COM


on

Legislative Council Election
Koo

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲೂ (Legislative Council Election) ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳನ್ನು ಬಿಜೆಪಿ (BJP) ಇಟ್ಟುಕೊಂಡರೆ, ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ (JDS) ಬಿಟ್ಟುಕೊಟ್ಟಿದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ಈಗ ವಿಧಾನ ಪರಿಷತ್‌ ಚುನಾವಣೆಯಲ್ಲೂ ಒಗ್ಗೂಡಿ ಸ್ಪರ್ಧಿಸಲು ತೀರ್ಮಾನಿಸಿವೆ. ಜೂನ್‌ 3ರಂದು ಮೇಲ್ಮನೆಗೆ ಚುನಾವಣೆ ನಡೆಯಲಿದೆ.

ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಕಣಕ್ಕಿಳಿದಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಬಿಜೆಪಿಗೆ ನಾಲ್ಕು ಕ್ಷೇತ್ರ ಎಂದಿದ್ದ ಬಿಎಸ್‌ವೈ

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದರು. ಬಿಜೆಪಿ ನಾಲ್ಕು ಹಾಗೂ ಜೆಡಿಎಸ್‌ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಎಂದಿದ್ದರು. ಮೈಸೂರಿನಲ್ಲಿ ಮಾತನಾಡಿದ್ದ ಅವರು, “ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ” ಎಂದಿದ್ದರು.

ಇದಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆಯೂ ನಡೆದಿತ್ತು. ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಯಕರ ಜತೆ ವಿಜಯೇಂದ್ರ ಚರ್ಚೆ ಮಾಡಿದ್ದರು. ಈಗ ಬಿಜೆಪಿಯು ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: BS Yediyurappa: ಪ್ರಜ್ವಲ್‌ ಕೇಸ್‌ನಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆ? ಯಡಿಯೂರಪ್ಪ ಹೇಳಿದ್ದಿಷ್ಟು

Continue Reading

ಮಳೆ

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

Rain News: ಪ್ರತ್ಯೇಕ ಮಳೆ ಅವಘಡಗಳಲ್ಲಿ ಇಬ್ಬರು ಮೃತಪಟ್ಟು, ಮತ್ತಿಬ್ಬರಿಗೆ ಗಾಯಗಳಾಗಿದ್ದು, ಹಲವೆಡೆ ಬೆಳೆಗಳು ಹಾನಿಯಾಗಿವೆ. ಹಲವೆಡೆ ಧಾರಕಾರವಾಗಿ ಸುರಿದ ಮಳೆಯು ಅವಾಂತರ ಸೃಷ್ಟಿಸಿದೆ.

VISTARANEWS.COM


on

Rain News
Koo

ಬೆಂಗಳೂರು: ರಾಜ್ಯದ ದಕ್ಷಿಣ ಕನ್ನಡ, ಚಾಮರಾಜನಗರ, ಬೆಳಗಾವಿ, ಧಾರವಾಡ ಸೇರಿ ವಿವಿಧೆಡೆ ಶನಿವಾರವೂ ಭಾರಿ ಮಳೆ (Rain News) ಸುರಿಯಿತು. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸಿಡಿಲು ಬಡಿದು ಕಾರ್ಮಿಕ ಮೃತಪಟ್ಟು, ಇಬ್ಬರಿಗೆ ಗಾಯಗಳಾಗಿದೆ. ಅದೇ ರೀತಿ ಕೊಪ್ಪಳದಲ್ಲಿ ಸಿಡಿಲಿಗೆ ರೈತ ಬಲಿಯಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬಾಳೆ ತೋಟ ನೆಲಕಚ್ಚಿದೆ. ಇನ್ನು ಹಲವೆಡೆ ಧಾರಕಾರವಾಗಿ ಸುರಿದ ಮಳೆಯು ಅವಾಂತರ ಸೃಷ್ಟಿಸಿದ್ದು, ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಸಿಡಿಲು ಬಡಿದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಮಂಗಳೂರು: ಸಿಡಿಲು ಬಡಿದು ಕಾರ್ಮಿಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ನದಿ ಬದಿಯ ಶೆಡ್‌ನಲ್ಲಿದ್ದ ವೇಳೆ ಅವಘಡ ನಡೆದಿದೆ. ಮರಳು ತೆಗೆಯುವ ಬಿಹಾರ ಮೂಲದ ಕಾರ್ಮಿಕ ಮೃತಪಟ್ಟಿದ್ದು, ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಡಿಲು ಬಡಿದು ರೈತ ಸ್ಥಳದಲ್ಲೇ ಸಾವು

ಕೊಪ್ಪಳ: ಸಿಡಿಲು ಬಡಿದು ರೈತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಐ ಕುಷ್ಟಗಿ ತಾಲೂಕಿನ ಹಿರೇಮುಕರ್ತಿನಾಳ ಬಳಿ ನಡೆದಿದೆ. ಕನಕರಾಯಪ್ಪ ಕಾಟಾಪುರ (28) ಮೃತ ರೈತ. ತಾವರಗೇರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Heavy Rain: ಧಾರಾಕಾರ ಮಳೆಯಿಂದ ಮನೆಗೆ ನುಗ್ಗಿದ ನೀರು; ಮರ ಉರುಳಿ ವಾಹನಗಳು ಜಖಂ

ಕುಂದಾನಗರಿಯಲ್ಲಿ ‌ಮನೆ, ಮಳಿಗೆಗಳಿಗೆ ನುಗ್ಗಿದ ನೀರು

ಬೆಳಗಾವಿ: ಕುಂದಾನಗರಿಯಲ್ಲಿ ‌ಧಾರಾಕಾರವಾಗಿ ಸುರಿದ ಮೊದಲ‌‌ ಮಳೆ ಭಾರಿ ಅವಾಂತರ ಸೃಷ್ಟಿ ಮಾಡಿದೆ. ಧಾರಾಕಾರ ಮಳೆಯಿಂದ ರಸ್ತೆಗಳು ನದಿಯಂತಾಗಿದ್ದು, ಹಲವೆಡೆ ಮರಗಳು ಧರೆಗುರಳಿವೆ. ಇನ್ನು ಅನೇಕ ಮನೆ, ಮಳಿಗೆಗಳಿಗೆ ನೀರು ನುಗ್ಗಿದ್ದರಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಬೆಳಗಾವಿ ನಗರದ ಪಾಂಗೋಲ್‌ ಗಲ್ಲಿ, ಬೆಂಡಿ ಬಜಾರ್‌ ಏರಿಯಾದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಚರಂಡಿ ನೀರು‌ ರಸ್ತೆಗೆ ಬಂದು ಸಂಚಾರಕ್ಕೆ ಅಡಚಣೆಯಾಯಿತು. ಒಂದು ಗಂಟೆಗಳ ಕಾಲ ಸುರಿದ ಭಾರೀ ಮಳೆಯಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹಣ್ಣಿನ ಮಾರುಕಟ್ಟೆಗೂ ನೀರು ನುಗ್ಗಿ ವ್ಯಾಪಾರಿಗಳು ತೊಂದರೆ ಅನುಭವಿಸುವಂತಾಯಿತು. ‌

ಚಿಕ್ಕೋಡಿ ತಾಲೂಕಿನ ವಿವಿಧೆಡೆ ಭಾರಿ ಮಳೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಭಾರಿ ಮಳೆ ಸುರಿದಿದೆ. ಭಾರಿ‌ ಮಳೆಯಿಂದ ರಸ್ತೆಗಳ ಮೇಲೆ ದೊಡ್ಡ ಪ್ರಮಾಣದ ನೀರು ಹರಿಯಿತು. ಅಕಾಲಿಕ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಗಾಳಿ ಮಳೆಗೆ ನೆಲಕಚ್ಚಿದ ಬಾಳೆ ತೋಟ

ಚಾಮರಾಜನಗರ: ಗಾಳಿ ಮಳೆಗೆ ಬಾಳೆ ತೋಟ ನೆಲಕಚ್ಚಿದ ಘಟನೆ ತಾಲೂಕಿನ ಉತ್ತುಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರವಿ ಎಂಬುವವರ ಬಾಳೆ ತೋಟದಲ್ಲಿ ಸಂಜೆ ಸುರಿದ ಗಾಳಿ ಮಳೆಗೆ ಸುಮಾರು 3 ಸಾವಿರ ಬಾಳೆ ಗಿಡ ನಾಶವಾಗಿವೆ. ಇದರಿಂದ ಸುಮಾರು 6 ತಿಂಗಳ ಶ್ರಮ 6 ನಿಮಿಷದಲ್ಲಿ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ತೆಂಗಿನ ಮರಕ್ಕೆ ಬಡಿದ ಸಿಡಿಲು

ಧಾರವಾಡ: ಧಾರಾಕಾರ ಮಳೆ ಹಿನ್ನೆಲೆ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡಿದ ಘಟನೆ ನಗರದ ಎನ್‌ಟಿಟಿಎಫ್ ಬಳಿ ಕಂಡುಬಂತು. ಮತ್ತೊಂದೆಡೆ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡ ಘಟನೆ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಇನ್ನು ಜಿಲ್ಲೆಯ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ.

ಧಾರವಾಡದಲ್ಲಿ ರಸ್ತೆ ಜಲಾವೃತವಾಗಿರುವುದು.

ಸಿಡಿಲುಗೆ ಮೇಕೆ ಬಲಿ, ವ್ಯಕ್ತಿಗೆ ಗಂಭೀರ ಗಾಯ

ರಾಯಚೂರು: ಸಿಡಿಲು ಬಡಿದು ಮೇಕೆ ಮೃತಪಟ್ಟು, ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಲಿಂಗಸುಗೂರು ತಾಲೂಕಿನ ಜಂಗಿರಾಂಪೂರ ತಾಂಡಾದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಗೆ ಲಿಂಗಸುಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ‌ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಮೇಕೆಗೆ ಪರಿಹಾರ ಹಾಗೂ ಗಾಯಗೊಂಡ ವ್ಯಕ್ತಿ ಚಿಕಿತ್ಸೆಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Continue Reading
Advertisement
ಬೆಂಗಳೂರು6 mins ago

LuLu Fashion Week 2024: ಲುಲು ಪ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್8 mins ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ2 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ2 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ2 hours ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ2 hours ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Rain News
ಮಳೆ3 hours ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

ICMR Dietary Guidelines
ಆರೋಗ್ಯ3 hours ago

ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

Dwarka Tour
ಪ್ರವಾಸ3 hours ago

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

Narendra Modi
ದೇಶ3 hours ago

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು7 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ18 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌